Tag: ಕಲ್ಕಿ 2898 ಎಡಿ ಸಿನಿಮಾ

  • ಪ್ರಭಾಸ್‌ ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌- ‌’ಕಲ್ಕಿ2898 ಎಡಿ’ ಸೀಕ್ವೆಲ್‌ ಬಗ್ಗೆ ಹೊರಬಿತ್ತು ಬಿಗ್‌ ಅಪ್‌ಡೇಟ್

    ಪ್ರಭಾಸ್‌ ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌- ‌’ಕಲ್ಕಿ2898 ಎಡಿ’ ಸೀಕ್ವೆಲ್‌ ಬಗ್ಗೆ ಹೊರಬಿತ್ತು ಬಿಗ್‌ ಅಪ್‌ಡೇಟ್

    ಟಾಲಿವುಡ್‌ ನಟ ಪ್ರಭಾಸ್‌ (Prabhas) ತೆಲುಗಿನ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ‘ಕಲ್ಕಿ 2898 ಎಡಿ’ (Kalki 2898 AD) ಸಿನಿಮಾದ ಬಗ್ಗೆ ಬಿಗ್ ಅಪ್‌ಡೇಟ್‌ವೊಂದು ಸಿಕ್ಕಿದೆ. ಈ ವರ್ಷದ ಅಂತ್ಯದಲ್ಲಿ ‘ಕಲ್ಕಿ ಪಾರ್ಟ್ 2’ ಶುರು ಆಗುವ ಬಗ್ಗೆ ಬಿಗ್‌ ಅಪ್‌ಡೇಟ್‌ ಸಿಕ್ಕಿದೆ. ಇದನ್ನೂ ಓದಿ:ಹೊಕ್ಕಳಿಗೆ 2.7 ಕೋಟಿ ಮೌಲ್ಯದ ಡೈಮಂಡ್ ರಿಂಗ್ ಧರಿಸಿದ ಪ್ರಿಯಾಂಕಾ ಚೋಪ್ರಾ- ಬೆಲೆ ಕೇಳಿ ಫ್ಯಾನ್ಸ್‌ ಶಾಕ್

    ಈಗಾಗಲೇ ಪ್ರಭಾಸ್, ದೀಪಿಕಾ, ಬಿಗ್ ಬಿ ನಟನೆಯ ‘ಕಲ್ಕಿ 2898 ಎಡಿ’ ಸಿನಿಮಾ ಸಕ್ಸಸ್ ಕಂಡಿದೆ. ಇದರ ಸೀಕ್ವೆಲ್ ಯಾವಾಗ ಶುರುವಾಗಲಿದೆ ಎಂಬುದಕ್ಕೆ ಚಿತ್ರದ ನಿರ್ದೇಶಕ ನಾಗ್ ಅಶ್ವೀನ್ ಮಾಹಿತಿ ಹಂಚಿಕೊಂಡಿದ್ದಾರೆ. ಇದೇ ಡಿಸೆಂಬರ್‌ನಲ್ಲಿ ‘ಕಲ್ಕಿ 2898 ಎಡಿ’ ಸಿನಿಮಾ ಶೂಟಿಂಗ್ ಆರಂಭ ಆಗಲಿದೆ ಎಂದು ಅವರು ತಿಳಿಸಿದ್ದಾರೆ. ಪ್ರಭಾಸ್, ಅಮಿತಾಭ್, ಕಮಲ್ ಪಾತ್ರಗಳನ್ನು ಮತ್ತೆ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾಯ್ತಿದ್ದಾರೆ.‌

    ಕಳೆದ ವರ್ಷ ಜೂನ್‌ನಲ್ಲಿ ‘ಕಲ್ಕಿ 2898 ಎಡಿ’ ಸಿನಿಮಾ ರಿಲೀಸ್ ಆಗಿ ಸಕ್ಸಸ್ ಕಂಡಿತ್ತು. ಪ್ರಭಾಸ್‌, ಬಿಗ್‌ ಬಿ, ಕಮಲ್‌ ಹಾಸನ್‌, ದೀಪಿಕಾ ಕಾಂಬಿನೇಷನ್‌ ಅನ್ನು ಜನ ಮೆಚ್ಚಿಕೊಂಡಿದ್ದರು. ಈಗ ಮತ್ತೆ ಇದರ ಸೀಕ್ವೆಲ್‌ಗೆ ಸಿದ್ಧತೆ ನಡೆಯುತ್ತಿದೆ. ಈ ವಿಚಾರ ಕೇಳಿಯೇ ಪ್ರಭಾಸ್‌ ಅಭಿಮಾನಿಗಳು ಥ್ರಿಲ್‌ ಆಗಿದ್ದಾರೆ.

  • ತಮಿಳುನಾಡಿನ ಡೆಂಕಣಿಕೋಟೆಯಲ್ಲಿ ‘ಕಲ್ಕಿ’ ಥೀಮ್‌ನಲ್ಲಿ ಗಣೇಶ ಪ್ರತಿಷ್ಠಾಪನೆ

    ತಮಿಳುನಾಡಿನ ಡೆಂಕಣಿಕೋಟೆಯಲ್ಲಿ ‘ಕಲ್ಕಿ’ ಥೀಮ್‌ನಲ್ಲಿ ಗಣೇಶ ಪ್ರತಿಷ್ಠಾಪನೆ

    ಮಿಳುನಾಡಿನ ಡೆಂಕಣಿಕೋಟೆಯಲ್ಲಿ ‘ಕಲ್ಕಿ’ ಥೀಮ್‌ನಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡಲಾಗಿದೆ. ಇದೀಗ ಪ್ರಭಾಸ್ (Prabhas) ನಟನೆಯ ‘ಕಲ್ಕಿ 2898 ಎಡಿ’ (Kalki 2898 AD) ಸಿನಿಮಾದ ಲೋಕವನ್ನು ಮರುಸೃಷ್ಟಿಸಲಾಗಿದೆ. ‘ಕಲ್ಕಿ’ ಇಲ್ಲಿ ಗಣಪತಿ ಅವತಾರವೆತ್ತಿದ್ದಾರೆ.

    ಬಾಹುಬಲಿ, ಕೆಜಿಎಫ್, ಕಾಂತಾರ ಬಳಿಕ ‘ಕಲ್ಕಿ’ ಸಿನಿಮಾ ಸೆಟ್ ನಿರ್ಮಾಣ ಮಾಡಲಾಗಿದೆ. 30 ಲಕ್ಷ ರೂ. ವೆಚ್ಚದಲ್ಲಿ ಅದ್ಧೂರಿಯಾಗಿ ಸೆಟ್ ನಿರ್ಮಿಸಿದ್ದಾರೆ. 2 ತಿಂಗಳಿಂದ ಇದಕ್ಕಾಗಿಯೇ ಸಿದ್ಧತೆ ಮಾಡಲಾಗಿದೆ. ಸೆಟ್‌ಗೆ ಎಂಟ್ರಿಯಾಗುತ್ತಿದ್ದಂತೆ ಪಿಲ್ಲರ್‌ಗಳು, ಬುಜ್ಜಿ ಕಾರು, ಕಾಂಪ್ಲೆಕ್ಸ್, ಯಾಸ್ಕೀನ್ ಪಾತ್ರ ಇಲ್ಲಿ ಹೈಲೆಟ್ಸ್ ಆಗಿವೆ. ಕಲ್ಕಿ ಅವತಾರದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದಾರೆ. ಇದನ್ನೂ ಓದಿ:ರೇಣುಕಾಸ್ವಾಮಿ ಕೊಲೆಯಾಗಿ ಇಂದಿಗೆ 3 ತಿಂಗಳು – ಪ್ರಕರಣ ಭೇದಿಸಿದ ಪೊಲೀಸರಿಗೆ ಹಿರಿಯ ಅಧಿಕಾರಿಗಳ ಮೆಚ್ಚುಗೆ

    ಆರ್ಟ್ ಡೈರೆಕ್ಟರ್ ಚಿತ್ತಾ ಜಿನೇಂದ್ರ ಅವರು ‘ಕಲ್ಕಿ’ ಸೆಟ್ ನಿರ್ಮಾಣ ಮಾಡಿ ಸೈ ಎನಿಸಿಕೊಂಡಿದ್ದಾರೆ. ಬೆಂಗಳೂರು, ತಮಿಳುನಾಡು, ಆಂಧ್ರಪ್ರದೇಶ ಭಾಗದಿಂದ ಭಕ್ತರು ಆಗಮಿಸುತ್ತಿದ್ದಾರೆ. ಇನ್ನೂ ‘ಕಲ್ಕಿ’ ಸೆಟ್‌ಗೆ ಪ್ರಭಾಸ್ ಸಿನಿಮಾತಂಡ ಮೆಚ್ಚುಗೆ ಸೂಚಿಸಿದೆ.

  • ಬೊಕ್ಕೆ ಹಿಡಿದು ಲವರ್ ಬಾಯ್ ಗೆಟಪ್‌ನಲ್ಲಿ ಬಂದ ಪ್ರಭಾಸ್

    ಬೊಕ್ಕೆ ಹಿಡಿದು ಲವರ್ ಬಾಯ್ ಗೆಟಪ್‌ನಲ್ಲಿ ಬಂದ ಪ್ರಭಾಸ್

    ಡಾರ್ಲಿಂಗ್ ಪ್ರಭಾಸ್ (Actor Prabhas) ಇದೀಗ ಬೊಕ್ಕೆ ಹಿಡಿದು ಲವರ್ ಬಾಯ್ ಆಗಿ ಕಾಣಿಸಿಕೊಂಡಿದ್ದಾರೆ. ರೊಮ್ಯಾಂಟಿಕ್‌ ಹುಡುಗನ ಅವತಾರದಲ್ಲಿ ಪ್ರಭಾಸ್‌ ಮಿಂಚಿದ್ದಾರೆ. ‘ದಿ ರಾಜಾ ಸಾಬ್’ ಸಿನಿಮಾದ ಪ್ರಭಾಸ್ ಪಾತ್ರದ ಗ್ಲಿಂಪ್ಸ್ ಇದೀಗ ರಿವೀಲ್ ಆಗಿದೆ. ಇದನ್ನೂ ಓದಿ:ಕಾರ್ತಿ ನಟನೆಯ ‘ಸರ್ದಾರ್ 2’ ಸಿನಿಮಾ ರಿಜೆಕ್ಟ್ ಮಾಡಿದ ಶ್ರೀಲೀಲಾ

    ಪ್ಯಾನ್ ಇಂಡಿಯಾ ಚಿತ್ರ ‘ಕಲ್ಕಿ’ (Kalki 2898 AD) ಯಶಸ್ಸಿನ ನಂತರ ‘ದಿ ರಾಜಾ ಸಾಬ್’ (The Raja Saab) ಚಿತ್ರದ ಮೂಲಕ ಪ್ರಭಾಸ್ ಸದ್ದು ಮಾಡುತ್ತಿದ್ದಾರೆ. ಮತ್ತೆ ಲವರ್ ಬಾಯ್ ಗೆಟಪ್‌ನಲ್ಲಿ ನಟ ಮಿಂಚಿದ್ದಾರೆ. ಬೈಕ್ ರೈಡ್ ಮಾಡುತ್ತಾ ಬೊಕ್ಕೆ ಹಿಡಿದು ನಟ ಮಸ್ತ್ ಆಗಿ ಎಂಟ್ರಿ ಕೊಟ್ಟಿದ್ದಾರೆ. ಸಖತ್ ಸ್ಟೈಲೀಶ್ ಆಗಿರುವ ಪ್ರಭಾಸ್ ಪಾತ್ರದ ಮೊದಲ ಲುಕ್‌ಗೆ ಅಭಿಮಾನಿಗಳಿಂದ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ.

    ಈ ಚಿತ್ರವನ್ನು ಮಾರುತಿ ಎಂಬುವವರು ನಿರ್ದೇಶನ ಮಾಡಿದ್ದು, ಪ್ರಭಾಸ್‌ಗೆ ನಿಧಿ ಅಗರ್‌ವಾಲ್ ಜೋಡಿಯಾಗಿ ನಟಿಸಿದ್ದಾರೆ. ಮತ್ತೋರ್ವ ನಟಿಯಾಗಿ ಪಾಕಿಸ್ತಾನಿ ಬೆಡಗಿ ಸಜಲ್ ಅಲಿ ಕೂಡ ಇರಲಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ:ಪರಿಸರ ಸ್ನೇಹಿ ಇನ್ವಿಟೇಷನ್ ಮೂಲಕ ಮಾದರಿಯಾದ ನಟಿ ಸೋನಲ್, ತರುಣ್ ಸುಧೀರ್

    ಇನ್ನೂ ಸಿನಿಮಾದಲ್ಲಿನ ಪ್ರಭಾಸ್ ಪಾತ್ರದ ಗ್ಲಿಂಪ್ಸ್ ನೋಡಿ ಫ್ಯಾನ್ಸ್ ಫಿದಾ ಆಗಿದ್ದಾರೆ. ಮುಂದಿನ ವರ್ಷ ಏ.10ರಂದು ಬಹುಭಾಷೆಗಳಲ್ಲಿ ರಿಲೀಸ್ ಆಗುತ್ತಿರೋ ಈ ಚಿತ್ರದ ಮೇಲೆ ಅಭಿಮಾನಿಗಳಿಗೆ ಭಾರೀ ನಿರೀಕ್ಷೆಯಿದೆ.

  • ಶ್ರೀಲಂಕಾದಲ್ಲಿ ವಿಜಯ್ ದೇವರಕೊಂಡ- ಅಭಿಮಾನಿಗಳಿಂದ ಸರ್ಪ್ರೈಸ್

    ಶ್ರೀಲಂಕಾದಲ್ಲಿ ವಿಜಯ್ ದೇವರಕೊಂಡ- ಅಭಿಮಾನಿಗಳಿಂದ ಸರ್ಪ್ರೈಸ್

    ಮೃಣಾಲ್‌ ಠಾಕೂರ್‌ ಜೊತೆಗಿನ ‘ಫ್ಯಾಮಿಲಿ ಸ್ಟಾರ್’ (Family Star) ಸಿನಿಮಾದ ನಂತರ ವಿಜಯ್ ದೇವರಕೊಂಡ (Vijay Devarakonda) ಹೊಸ ಸಿನಿಮಾದ ಶೂಟಿಂಗ್‌ಗಾಗಿ ಶ್ರೀಲಂಕಾಗೆ ಬಂದಿಳಿದಿದ್ದಾರೆ. ಅದ್ಧೂರಿಯಾಗಿ ಸ್ವಾಗತಿಸಿ ಫ್ಯಾನ್ಸ್‌ ವಿಜಯ್‌ಗೆ ಸರ್ಪ್ರೈಸ್ ನೀಡಿದ್ದಾರೆ. ಇದನ್ನೂ ಓದಿ:ರಜನಿಕಾಂತ್ ಹೊಸ ಸಿನಿಮಾದಲ್ಲಿ ಕರ್ನಾಟಕದ ಹುಡುಗ‌

    ತಮ್ಮ 12ನೇ ಸಿನಿಮಾಗಾಗಿ ಶ್ರೀಲಂಕಾಗೆ ವಿಜಯ್ ಎಂಟ್ರಿ ಕೊಟ್ಟಿದ್ದು, ಅಲ್ಲಿನ ಅಭಿಮಾನಿಗಳು ಹೂವಿನ ಹಾರ ಹಾಕಿ ಊರಿನ ಪದ್ಧತಿಯಂತೆ ಕ್ಯಾಂಡಿಯನ್‌ ನೃತ್ಯ ಮಾಡಿ ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ. ಇನ್ನೂ ಹೊಸ ಚಿತ್ರಕ್ಕಾಗಿ ತಂಡದ ಜೊತೆ ಶ್ರೀಲಂಕಾ ಬೀಡು ಬಿಟ್ಟಿದ್ದಾರೆ.

    ‘ಜೆರ್ಸಿ’ ನಿರ್ದೇಶಕ ಗೌತಮ್ ಜೊತೆ ಕೈಜೋಡಿಸಿರುವ ವಿಜಯ್ ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಳ್ತಿದ್ದಾರೆ. ಎಂದೂ ಕಾಣಿಸಿಕೊಂಡಿರದ ಪಾತ್ರದಲ್ಲಿ ನಟ ಕಾಣಿಸಿಕೊಳ್ತಿದ್ದಾರೆ.

    ಅಂದಹಾಗೆ, ಇತ್ತೀಚೆಗೆ ತೆರೆಕಂಡ ‘ಕಲ್ಕಿ 2898 ಎಡಿ’ (Kalki 2898 AD) ಸಿನಿಮಾದಲ್ಲಿ ವಿಜಯ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಪಾತ್ರ ಮತ್ತು ನಟನೆಗೆ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ.

  • ಬರಲಿದೆ ಪ್ರಭಾಸ್ ನಟನೆಯ ‘ಕಲ್ಕಿ 2898 ಎಡಿ’ ಪಾರ್ಟ್ 2

    ಬರಲಿದೆ ಪ್ರಭಾಸ್ ನಟನೆಯ ‘ಕಲ್ಕಿ 2898 ಎಡಿ’ ಪಾರ್ಟ್ 2

    ಪ್ರಭಾಸ್, ದೀಪಿಕಾ ಪಡುಕೋಣೆ (Deepika Padukone), ಬಿಗ್ ಬಿ ನಟನೆಯ ‘ಕಲ್ಕಿ 2898 ಎಡಿ’ (Kalki 2898 AD) ಸಿನಿಮಾ ಜೂನ್ 27ರಂದು ರಿಲೀಸ್ ಆಗಿ ಪ್ರೇಕ್ಷಕರಿಂದ ಮೆಚ್ಚುಗೆ ಪಡೆದಿದೆ. ಈ ಬೆನ್ನಲ್ಲೇ ಕಲ್ಕಿ ಪಾರ್ಟ್ 2 ಬರುವ ಬಗ್ಗೆ ಕೂಡ ಸಿಹಿಸುದ್ದಿ ಸಿಕ್ಕಿದೆ. ಇದನ್ನೂ ಓದಿ:ಯಾರೂ ಜೈಲಿನ ಬಳಿ ಬರಬೇಡಿ: ಅಭಿಮಾನಿಗಳಿಗೆ ನಟ ದರ್ಶನ್‌ ಮನವಿ

    ಈ ಸಿನಿಮಾದ ಕತೆ ನಡೆಯುವುದು ಕಲಿಯುಗದ ಅಂತ್ಯದಲ್ಲಿ ಎಂದು ನಿರ್ದೇಶಕ ತೋರಿಸಿ ಕೊಟ್ಟಿದ್ದಾರೆ. 6000 ಸಾವಿರ ವರ್ಷಗಳ ನಡುವೆ ನಡೆವ ಕತೆಯಿದು. 3 ಗಂಟೆಯಲ್ಲಿ ಹೇಳಲು ಸಾಧ್ಯವಿಲ್ಲ. ಎರಡನೇ ಭಾಗದಲ್ಲಿ ಕಲ್ಕಿ ಚಿತ್ರ ಹಲವು ಟ್ವಿಸ್ಟ್‌ಗಳೊಂದಿಗೆ ಬರಲಿದೆ.

    ಸಿನಿಮಾ ರಿಲೀಸ್‌ಗೂ ಮುನ್ನ 2 ಭಾಗಗಳಲ್ಲಿ ಬರಲಿದೆ ಎಂದು ಚಿತ್ರತಂಡ ಘೋಷಿಸಿರಲಿಲ್ಲ. ಈಗ ಸಿನಿಮಾ ನೋಡಿದವರಿಗೆ ಇದು ಖಾತ್ರಿಯಾಗಿದೆ. ಚಿತ್ರದ ಬಗ್ಗೆ ಇನ್ನೂ ಕಥೆ ಹೊರಬರೋದು ಬಾಕಿಯಿದೆ. ಇದು ಆರಂಭವಷ್ಟೇ, ಕಲ್ಕಿ ಭಾಗ 2ರಲ್ಲಿ ಮತ್ತಷ್ಟು ಮಾಹಿತಿ ಸಿಗಲಿದೆ.

    ವೈಜಯಂತಿ ಮೂವೀಸ್ ನಿರ್ಮಾಣದ ಈ ಚಿತ್ರದಲ್ಲಿ ಪ್ರಭಾಸ್ (Prabhas), ದೀಪಿಕಾ ಪಡುಕೋಣೆ, ಬಿಗ್ ಬಿ, ಕಮಲ್ ಹಾಸನ್, ದಿಶಾ ಪಟಾನಿ ಸೇರಿದಂತೆ ಹಲವರು ನಟಿಸಿದ್ದಾರೆ. ಮೃಣಾಲ್ ಠಾಕೂರ್, ವಿಜಯ್ ದೇವರಕೊಂಡ, ರಾಜಮೌಳಿ, ರಾಮ್ ಗೋಪಾಲ್ ವರ್ಮಾ,ದುಲ್ಕರ್ ಸಲ್ಮಾನ್ ಗೆಸ್ಟ್ ರೋಲ್‌ನಲ್ಲಿ ನಟಿಸಿದ್ದಾರೆ.

  • ಬೆಂಗಳೂರಿನಲ್ಲಿ ಪ್ರಭಾಸ್ ಚಿತ್ರಕ್ಕೆ ಬೇಡಿಕೆ- ಟಿಕೆಟ್ ರೇಟ್ ಡಬಲ್

    ಬೆಂಗಳೂರಿನಲ್ಲಿ ಪ್ರಭಾಸ್ ಚಿತ್ರಕ್ಕೆ ಬೇಡಿಕೆ- ಟಿಕೆಟ್ ರೇಟ್ ಡಬಲ್

    ಪ್ರಭಾಸ್, ದೀಪಿಕಾ ಪಡುಕೋಣೆ (Deepika Padukone) ನಟನೆಯ ‘ಕಲ್ಕಿ 2898 ಎಡಿ’ (Kalki 2898 AD) ಸಿನಿಮಾ ಇದೇ ಜೂನ್ 27ಕ್ಕೆ ರಿಲೀಸ್ ಆಗಲಿದೆ. ಕನ್ನಡ, ತೆಲುಗು ಸೇರಿದಂತೆ ಬಹುಭಾಷೆಗಳಲ್ಲಿ ಸಿನಿಮಾ ಮೂಡಿ ಬರಲಿದೆ. ಈಗಾಗಲೇ ಅಡ್ವಾನ್ಸ್ ಬುಕ್ಕಿಂಗ್ ಕೂಡ ಶುರುವಾಗಿದೆ. ಇದನ್ನೂ ಓದಿ:250 ಕೋಟಿ ಸಾಲದ ಸುಳಿಯಲ್ಲಿ ರಕುಲ್ ಪ್ರೀತ್ ಸಿಂಗ್ ಪತಿ

    ಮಲ್ಟಿಸ್ಟಾರ್ ಸಿನಿಮಾ ಆಗಿರುವ ‘ಕಲ್ಕಿ’ ಚಿತ್ರದ ಬಗ್ಗೆ ಫ್ಯಾನ್ಸ್ ಭಾರೀ ಕ್ರೇಜ್ ಇದೆ. ಇನ್ನೂ ಬೆಳ್ಳಂಬೆಳಗ್ಗೆ ಸಾಕಷ್ಟು ಕಡೆ ಸಿನಿಮಾದ ಮೊದಲ ಪ್ರದರ್ಶನ ಆರಂಭವಾಗಿದೆ. ಚಿತ್ರಕ್ಕೆ ಭಾರೀ ಕ್ರೇಜ್ ಇದೆ ಎಂಬ ಕಾರಣಕ್ಕೆ ಟಿಕೆಟ್ ದರ ಕೂಡ ಹೆಚ್ಚಿಸಲಾಗಿದೆ. ಇದನ್ನೂ ಓದಿ:ಸರಳವಾಗಿ ಜರುಗಿತು ಝಹೀರ್ ಇಕ್ಬಾಲ್ ಜೊತೆ ಸೋನಾಕ್ಷಿ ಸಿನ್ಹಾ ಮದುವೆ

    ಇದೀಗ ಟಿಕೆಟ್ ದರವನ್ನು 400 ರೂ.ಯಿಂದ 700 ರೂ.ವರೆಗೆ ಹೆಚ್ಚಿಸಲಾಗಿದೆ. ಇನ್ನೂ ಟಿಕೆಟ್ ದರ ಹೆಚ್ಚಿಸಲಿದ್ದಾರೆ ಎನ್ನಲಾಗಿದೆ. ಬಾಹುಬಲಿ ಸಿನಿಮಾ ಬಳಿಕ ಮತ್ತೆ ಅದೇ ರೀತಿ ಕಲ್ಕಿ ಚಿತ್ರದ ಬಗ್ಗೆ ಫ್ಯಾನ್ಸ್‌ಗೆ ನಿರೀಕ್ಷೆ ಹೆಚ್ಚಿಸಿದೆ.

    ಇನ್ನೂ ಚಿತ್ರದಲ್ಲಿ ಭೂತ, ವರ್ತಮಾನ ಹಾಗೂ ಭವಿಷ್ಯದ ಕಥೆಯನ್ನು ಡೈರೆಕ್ಟರ್ ನಾಗ್ ಅಶ್ವೀನ್ ಕಟ್ಟಿಕೊಟ್ಟಿದ್ದಾರೆ. ಚಿತ್ರದ ಟ್ರೈಲರ್‌ ಝಲಕ್‌ನಲ್ಲೇ ಆ ಸುಳಿವು ಬಿಟ್ಟು ಕೊಟ್ಟಿದ್ದಾರೆ. ಜಗತ್ತಿನ ಮೊದಲ ಪ್ರದೇಶ ಮತ್ತು ಕೊನೆಯ ಪ್ರದೇಶ ಕಾಶಿ ಎನ್ನುಮ ಮೂಲಕ ಕಲ್ಕಿ ಟ್ರೈಲರ್ ಶುರುವಾಗುತ್ತೆ. ಜಗತ್ತಿನಿಂದ ಎಲ್ಲವನ್ನೂ ಕಿತ್ತುಕೊಂಡರೆ ಎಲ್ಲವೂ ಇರುತ್ತದೆ ಎನ್ನುವ ಕುತೂಹಲಕರ ಸಂಭಾಷೆಯಣೆಯಿದೆ. 6000 ಹಿಂದಿನ ಶಕ್ತಿ ಮತ್ತೆ ಬಂದಿದೆ. ಅಳಿವು- ಉಳಿವಿಗಾಗಿ ಹೋರಾಡುವವರ ದೃಶ್ಯ ತೋರಿಸಲಾಗಿದೆ. ಭೈರವನಾಗಿ ಯುದ್ಧಕ್ಕೆ ಪ್ರಭಾಸ್ ಸಜ್ಜಾಗಿದ್ದಾರೆ. 2 ಜಗತ್ತಿನ ಹೋರಾಟವನ್ನು ಸೈನ್ಸ್ ಫಿಕ್ಷನ್ ಮೂಲಕ ಅದ್ಭುತವಾಗಿ ತೋರಿಸಿದ್ದಾರೆ.

    ಯುದ್ಧದಲ್ಲಿ ಇದುವರೆಗೂ ನಾನು ಸೋತಿಲ್ಲ, ಇದನ್ನೂ ಸಹ ನಾನು ಸೋಲಲ್ಲ ಎಂದು ಖಡಕ್ ಆಗಿ ಡೈಲಾಗ್ ಹೊಡೆದಿದ್ದಾರೆ. ಪ್ರಭಾಸ್ (Prabhas) ಜೊತೆ ದೀಪಿಕಾ, ದಿಶಾ ಪಟಾನಿ ಮಿಂಚಿದ್ದಾರೆ. ಅಮಿತಾಭ್, ಕಮಲ್ ಹಾಸನ್ ಕೂಡ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಟ್ರೈಲರ್ ವಿಎಫ್‌ಎಕ್ಸ್ ದೃಶ್ಯಕ್ಕೆ ಫ್ಯಾನ್ಸ್ ಮನಸೋತಿದ್ದಾರೆ. ಸದ್ಯ ಜೂನ್‌ 27ಕ್ಕೆ ಕಲ್ಕಿ ಸಿನಿಮಾ ಥಿಯೇಟರ್‌ನಲ್ಲಿ ಅಬ್ಬರಿಸಲು ಸಿದ್ಧವಾಗಿದೆ.

  • ಮತ್ತೆ ಒಂದೇ ಸಿನಿಮಾದಲ್ಲಿ ನಟಿಸಲಿದ್ದಾರೆ ‘ಸೀತಾರಾಮಂ’ ಜೋಡಿ

    ಮತ್ತೆ ಒಂದೇ ಸಿನಿಮಾದಲ್ಲಿ ನಟಿಸಲಿದ್ದಾರೆ ‘ಸೀತಾರಾಮಂ’ ಜೋಡಿ

    ‘ಸೀತಾರಾಮಂ’ (Seetha Ramam) ಸಿನಿಮಾ ಮೂಲಕ ಅಪಾರ ಅಭಿಮಾನಿಗಳ ಮನಗೆದ್ದ ಜೋಡಿ ದುಲ್ಕರ್ ಸಲ್ಮಾನ್ (Dulquer Salmaan) ಮತ್ತು ಮೃಣಾಲ್ ಠಾಕೂರ್ ಈಗ ಗುಡ್ ನ್ಯೂಸ್ ಕೊಟ್ಟಿದ್ದಾರೆ. 2 ವರ್ಷಗಳ ನಂತರ ಮತ್ತೆ ಒಂದೇ ಸಿನಿಮಾದಲ್ಲಿ ಸೀತಾ ಮತ್ತು ರಾಮ್ ಕಾಣಿಸಿಕೊಳ್ಳಲಿದ್ದಾರೆ.

    2022ರಲ್ಲಿ ಸೀತಾರಾಮಂ ಸಿನಿಮಾ ರಿಲೀಸ್ ಆಗಿ ಸೂಪರ್ ಡೂಪರ್ ಹಿಟ್ ಆಗಿತ್ತು. ಸೀತಾ ಮತ್ತು ರಾಮ್ ಲವ್ ಸ್ಟೋರಿ ನೋಡಿ ಪ್ರೇಕ್ಷಕರ ಕಣ್ಣಂಚಿನಲ್ಲಿ ನೀರು ಬಂದಿತ್ತು. ಈ ಜೋಡಿ ಮತ್ತೆ ಒಂದಾದ್ರೆ ಚೆನ್ನಾಗಿರುತ್ತೆ ಎಂದು ಅನೇಕರು ಆಸೆಪಟ್ಟಿದ್ದರು. ಇದೀಗ ಅದೇ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

    ‘ಕಲ್ಕಿ 2898 ಎಡಿ’ (Kalki 2898 AD) ಸಿನಿಮಾದಲ್ಲಿ ಮೃಣಾಲ್ (Mrunal Thakur) ನಟಿಸುವ ಬಗ್ಗೆ ಈ ಹಿಂದೆಯೇ ವರದಿಯಾಗಿತ್ತು. ಆದರೆ ಈಗ ದುಲ್ಕರ್ ಸಲ್ಮಾನ್ ಕೂಡ ನಟಿಸಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಇಬ್ಬರೂ ಅತಿಥಿ ಪಾತ್ರವಾಗಿದ್ರೂ ಚಿತ್ರದಲ್ಲಿ ತಿರುವು ಕೊಡಲಿರುವ ಪಾತ್ರಕ್ಕೆ ಜೀವತುಂಬಲಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ:ಬ್ರೇಕ್ ಬಳಿಕ ಮತ್ತೆ ಸಿನಿಮಾಗಳಲ್ಲಿ ಶ್ರೀಲೀಲಾ ಬ್ಯುಸಿ

    ಪ್ರಭಾಸ್ (Prabhas) ಸಿನಿಮಾದಲ್ಲಿ ಜೊತೆಯಾಗುತ್ತಿರುವ ಸುದ್ದಿ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ಯಾವದಕ್ಕೂ ಚಿತ್ರತಂಡದಿಂದ ಅಧಿಕೃತ ಮಾಹಿತಿ ಹೊರಬೀಳಲಿದೆ ಎಂದು ಎದುರು ನೋಡ್ತಿದ್ದಾರೆ.

    ಅಂದಹಾಗೆ, ‘ಕಲ್ಕಿ 2898 ಎಡಿ’ (Kalki 2898 AD) ಸಿನಿಮಾ ಇದೇ ಜೂನ್ 27ಕ್ಕೆ ಬಹುಭಾಷೆಗಳಲ್ಲಿ ರಿಲೀಸ್ ಆಗ್ತಿದೆ. ಬೆಂಗಳೂರಿನ ಬೆಡಗಿ ದೀಪಿಕಾ ಪಡುಕೋಣೆ (Deepika Padukone) ಮೊದಲ ಬಾರಿಗೆ ಮಾತೃಭಾಷೆ ಕನ್ನಡದಲ್ಲಿ ಡಬ್ ಮಾಡಿರೋದು ವಿಶೇಷ.

  • ಸಿನಿಮಾಗಾಗಿ ಹೊಸ ತಂತ್ರ- ಕೊನೆಗೂ ಅಸಲಿ ವಿಚಾರ ರಿವೀಲ್ ಮಾಡಿದ ಪ್ರಭಾಸ್

    ಸಿನಿಮಾಗಾಗಿ ಹೊಸ ತಂತ್ರ- ಕೊನೆಗೂ ಅಸಲಿ ವಿಚಾರ ರಿವೀಲ್ ಮಾಡಿದ ಪ್ರಭಾಸ್

    ಟಾಲಿವುಡ್ ನಟ ಪ್ರಭಾಸ್ (Prabhas) ಅಭಿಮಾನಿಗಳ ತಲೆಗೆ ಹುಳ ಬಿಟ್ಟಿದ್ದರು. ವಿಶೇಷ ವ್ಯಕ್ತಿಯ ಆಗಮನವಾಗುತ್ತಿದೆ ಎಂದು ಇನ್ಸ್ಟಾಗ್ರಾಂನಲ್ಲಿ ಸ್ಟೋರಿ ಹಂಚಿಕೊಂಡಿದ್ದರು. ಎಲ್ಲರೂ ನಟನ ಮದುವೆ ಮ್ಯಾಟರ್ ಎಂದೇ ಭಾವಿಸಿದ್ದರು. ಈಗ ಅಸಲಿ ವಿಚಾರ ಏನು ಎಂಬುದನ್ನು ಪ್ರಭಾಸ್ ರಿವೀಲ್ ಮಾಡಿದ್ದಾರೆ. ಇದನ್ನೂ ಓದಿ:ಬುಲೆಟ್‌ ರೈಲು ಎಲ್ಲಿ- ಅಟಲ್‌ ಸೇತುವನ್ನು ಹೊಗಳಿದ್ದ ರಶ್ಮಿಕಾಗೆ ಅಂಜಲಿ ನಿಂಬಾಳ್ಕರ್‌ ಪ್ರಶ್ನೆ

    ‘ಡಾರ್ಲಿಂಗ್ಸ್.. ಕೊನೆಗೂ ನಮ್ಮ ಜೀವನಕ್ಕೆ ವಿಶೇಷವಾದ ವ್ಯಕ್ತಿಯೊಬ್ಬರು ಪ್ರವೇಶಿಸಲಿದ್ದಾರೆ. ಕಾಯುತ್ತಾ ಇರಿ ಎಂದು ಪ್ರಭಾಸ್ ಇನ್ಸ್ಟಾಗ್ರಾಂನಲ್ಲಿ ಸ್ಟೋರಿಯಲ್ಲಿ ಬರೆದುಕೊಂಡಿದ್ದರು. ಎಲ್ಲರೂ ಮದುವೆ ಬಗ್ಗೆ ಸಿಹಿಸುದ್ದಿ ಕೊಡಲು ಪ್ರಭಾಸ್ ರೆಡಿಯಾಗಿದ್ದಾರೆ ಎಂದು ಭಾವಿಸಿದ್ದರು. ಆದರೆ ಈಗ ನಟ ನೀಡಿರುವ ಮಾಹಿತಿನೇ ಬೇರೆ.

    ‘ಡಾರ್ಲಿಂಗ್ಸ್.. ನಿಮಗೆಲ್ಲಾ ನನ್ನ ‘ಬುಜ್ಜಿ’ಯನ್ನು ತೋರಿಸಲು ಕಾತರದಿಂದ ಕಾಯುತ್ತಿದ್ದೇನೆ’ ಎಂದು ಪ್ರಭಾಸ್ ಬರೆದುಕೊಂಡಿದ್ದಾರೆ.  ‘ಕಲ್ಕಿ 2898 ಎಡಿ’ (Kalki 2898 AD) ಸಿನಿಮಾದ ಪ್ರಚಾರಕ್ಕಾಗಿ ‘ಬುಜ್ಜಿ’ ಎಂಬ ಹೊಸ ಕಾರನ್ನು ವಿನ್ಯಾಸಗೊಳಿಸಲಾಗಿದೆ. ಇದೇ ಮೇ 18ರಂದು ಸಂಜೆ 5ಕ್ಕೆ ಘೋಷಿಸಲಿದ್ದಾರೆ. ಸಿನಿಮಾ ಪ್ರಚಾರಕಾಗಿ ಚಿತ್ರತಂಡ ಈ ತಂತ್ರ ರೂಪಿಸಿದೆ. ವಿಶೇಷ ವ್ಯಕ್ತಿ ಎಂದು ಹೇಳಿ ಸಿನಿಮಾಗಾಗಿ ಹೊಸ ರೀತಿಯ ಪ್ರಚಾರ ಮಾಡಿದ್ದಾರೆ.

    ಕಲ್ಕಿ 2898 ಎಡಿ ಸಿನಿಮಾದಲ್ಲಿ ಪ್ರಭಾಸ್‌, ದೀಪಿಕಾ ಪಡುಕೋಣೆ (Deepika Padukone) ಜೊತೆ ಅಮಿತಾಭ್‌ ಬಚ್ಚನ್‌, ಕಮಲ್‌ ಹಾಸನ್‌ ನಟಿಸಿದ್ದಾರೆ.  ಕಲ್ಕಿ ಸಿನಿಮಾಗಾಗಿ ಕನ್ನಡದಲ್ಲೂ ದೀಪಿಕಾ ಡಬ್ಬಿಂಗ್‌ ಮಾಡಿದ್ದಾರೆ. ಇದೇ ಜೂನ್‌ 27ಕ್ಕೆ ಸಿನಿಮಾ ಬಹುಭಾಷೆಗಳಲ್ಲಿ ರಿಲೀಸ್‌ ಆಗಲಿದೆ.