Tag: ಕಲ್ಲಡ್ಕ ಪ್ರಭಾಕರ್

  • ಹೆಣ್ಣು ಹೆತ್ತ ಪೋಷಕರಿಗೆ The Kerala Story ಚಿತ್ರ ನೋಡುವಂತೆ ಕಲ್ಲಡ್ಕ ಪ್ರಭಾಕರ್ ಸಲಹೆ

    ಹೆಣ್ಣು ಹೆತ್ತ ಪೋಷಕರಿಗೆ The Kerala Story ಚಿತ್ರ ನೋಡುವಂತೆ ಕಲ್ಲಡ್ಕ ಪ್ರಭಾಕರ್ ಸಲಹೆ

    ಮೇ 5ರಂದು ತೆರೆಕಂಡ ‘ದಿ ಕೇರಳ ಸ್ಟೋರಿ’ (The Kerala Story) ಸಿನಿಮಾ ಇದೀಗ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ. ದಿನದಿಂದ ದಿನಕ್ಕೆ ಕಲೆಕ್ಷನ್ ಕೂಡ ಹೆಚ್ಚಾಗುತ್ತಿದೆ. ಮಂಗಳೂರಿನಲ್ಲಿ ಈ ಸಿನಿಮಾ ವೀಕ್ಷಿಸಿ, ಮಾಧ್ಯಮಗಳ ಜೊತೆ ಡಾ.ಕಲ್ಲಡ್ಕ ಪ್ರಭಾಕರ್ ಭಟ್ (Kalladka Prabhakar) ಮಾತನಾಡಿದ್ದಾರೆ. ಹೆಣ್ಣು ಹೆತ್ತ ಪೋಷಕರಿಗೆ ಈ ಸಿನಿಮಾ ನೋಡುವಂತೆ ಸಲಹೆ ನೀಡಿದ್ದಾರೆ.

    ಈ ಸಿನಿಮಾವನ್ನು ಪ್ರತಿಯೊಬ್ಬ ಹಿಂದೂ ಹೆಣ್ಣು ಮಗಳು ಕುಟುಂಬದ ಜೊತೆಗೆ ನೋಡಬೇಕು. ಅವರ ಅತೀ ಮತೀಯವಾದ ಮತ್ತು ನಮ್ಮ ಮಕ್ಕಳಿಗೆ ಧರ್ಮದ ತಿಳುವಳಿಕೆ ಇಲ್ಲದಿರೋದನ್ನು ಚಿತ್ರದಲ್ಲಿ ತೋರಿಸಲಾಗಿದೆ. ಈ ರೀತಿಯ ಅನ್ಯಾಯವನ್ನು ಜಗತ್ತು ಒಪ್ಪಬಾರದು. ಹೆಣ್ಣು ಮಗಳ ಮೇಲೆ ಅನ್ಯಾಯ ಆದಾಗ ಸಮಾಜ ಸುಮ್ಮನೆ ಕೂರಬಾರದು. ಕಾಂಗ್ರೆಸ್, ಕಮ್ಯುನಿಸ್ಟ್, ಜನತಾದಳ ಈ ಅನ್ಯಾಯಕ್ಕೆ ಪ್ರೇರಣೆ ನೀಡುತ್ತಾರೆ ಎಂದು ಈ ವೇಳೆ ಡಾ.ಕಲ್ಲಡ್ಕ ಪ್ರಭಾಕರ್ ಕಿಡಿಕಾರಿದರು. ಇದನ್ನೂ ಓದಿ:ಡಿವೋರ್ಸ್ ಸುದ್ದಿ ಬೆನ್ನಲ್ಲೇ ‘ಪುಷ್ಪ 2’ ಸಿನಿಮಾದಲ್ಲಿ ನಿಹಾರಿಕಾ ಕೊನಿಡೆಲಾ

    ಕೇರಳದಲ್ಲಿ ಮೂವತ್ತು ಸಾವಿರಕ್ಕೂ ಅಧಿಕ ಹೆಣ್ಣುಮಕ್ಕಳ ಮತಾಂತರ ಆಗಿದೆ. ಮತಾಂತರ ಆದ ಬಳಿಕ ಕ್ರೂರ ರೀತಿಯಲ್ಲಿ ಅತ್ಯಾಚಾರ ಮಾಡಲಾಗಿದೆ. ಈ ಚಿತ್ರ ನೋಡಿ ಹೆಣ್ಣು ಮಕ್ಕಳು ಯೋಚನೆ ಮಾಡಬೇಕು. ತಂದೆ-ತಾಯಿ ಮಕ್ಕಳನ್ನು ಎಚ್ಚರಿಕೆಯಿಂದ ನೋಡಬೇಕು ಎಂದು ಪೋಷಕರಿಗೆ ಸಲಹೆ ನೀಡಿದರು. ಪೋಷಕರು ಮಕ್ಕಳನ್ನು ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಬೇರೆ ಊರಿಗೆ ಕಳುಹಿಸೋವಾಗ ಎಚ್ಚರಿಕೆಯಿಂದ ಇರಬೇಕು. ಮತಾಂತರ ನಿಷೇಧ ಕಾಯಿದೆಯನ್ನು ಬಿಜೆಪಿ ತಂದಿದೆ. ಲವ್ ಜಿಹಾದ್‌ನಲ್ಲಿ ಏನಾಗುತ್ತದೆ ಎಂಬುವುದನ್ನು ಚಿತ್ರದಲ್ಲಿ ತೋರಿಸಲಾಗಿದೆ. ಹೆಣ್ಣು ಮಕ್ಕಳು ನಮಗೆ ದೇವಿ -ತಾಯಿಯ ರೀತಿ ಎಂದು ಡಾ.ಕಲ್ಲಡ್ಕ ಪ್ರಭಾಕರ್ ಭಟ್ ಮಾತನಾಡಿದರು. ಈ ಸಿನಿಮಾ ನೋಡಿ ಪೋಷಕರಿಗೆ ಸಲಹೆ ನೀಡಿದರು.

    ‘ದಿ ಕೇರಳ ಸ್ಟೋರಿ’ ಸಿನಿಮಾದಲ್ಲಿ ‘ರಣವಿಕ್ರಮ’ ನಟಿ ಆದಾ ಶರ್ಮಾ (Adah Sharma), ಯೋಗಿತಾ, ಸಿದ್ಧಿ, ಸೋನಿಯಾ ಕನ್ನಡದ ನಟ ವಿಜಯ್ ಕೃಷ್ಣ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಮೇ 5ರಂದು ತೆರೆಕಂಡ ಈ ಸಿನಿಮಾ 2 ದಿನಗಳಲ್ಲಿ 20 ಕೋಟಿ ಕಲೆಕ್ಷನ್ ಮಾಡಿ ಪ್ರೇಕ್ಷಕರ ಗಮನ ಸೆಳೆದಿದೆ.

  • ಹಿಂದೂಗಳನ್ನ ನಾಶ ಮಾಡುವ ಪ್ರಯತ್ನ ನಡೆಯುತ್ತಿದೆ: ಕಲ್ಲಡ್ಕ ಪ್ರಭಾಕರ್

    ಹಿಂದೂಗಳನ್ನ ನಾಶ ಮಾಡುವ ಪ್ರಯತ್ನ ನಡೆಯುತ್ತಿದೆ: ಕಲ್ಲಡ್ಕ ಪ್ರಭಾಕರ್

    ರಾಮನಗರ: ಹಿಂದೂಗಳನ್ನು ನಾಶ ಮಾಡುವ ಪ್ರಯತ್ನ ದೊಡ್ಡ ಮಟ್ಟದಲ್ಲಿ ನಡೆಯುತ್ತಿದೆ ಎಂದು ಆರ್‌ಎಸ್ಎಸ್ (RSS) ಮುಖಂಡ ಕಲ್ಲಡ್ಕ ಪ್ರಭಾಕರ್ (Kalladka Prabhakar Bhat) ಕಳವಳ ವ್ಯಕ್ತಪಡಿಸಿದರು.

    ಮಂಗಳೂರಿನಲ್ಲಿ (Mangaluru) ನಡೆದ ಕುಕ್ಕರ್ ಬ್ಲ್ಯಾಸ್ಟ್ (Cooker Blast) ವಿಚಾರ ಕುರಿತು ಮಾತನಾಡಿದ ಅವರು, ಇಂತಹ ಕೃತ್ಯಗಳನ್ನ ತಡೆಯದಿದ್ದರೆ ಸಮಾಜದಲ್ಲಿ ಬದುಕು ಕಷ್ಟವಾಗಲಿದೆ‌. ಎಲ್ಲಾ ಮುಸ್ಲಿಮರು ಭಯೋತ್ಪಾದಕರಲ್ಲ. ಆದರೆ ಭಯೋತ್ಪಾದಕರೆಲ್ಲರೂ ಮುಸ್ಲಿಮರಾಗಿದ್ದಾರೆ. ಅಬ್ದುಲ್ ಕಲಾಂ ನಂತವರನ್ನು ಇವರು ಆದರ್ಶವಾಗಿಟ್ಟುಕೊಂಡಿಲ್ಲ. ಸಮಾಜದಲ್ಲಿ ಒಳ್ಳೆಯ ಮುಸ್ಲಿಂಮರು ಸಹ ಇದ್ದಾರೆ. ಇಂತಹ ಕೃತ್ಯಗಳ ಬಗ್ಗೆ ಅವರು ಜಾಗೃತಿ ಮೂಡಿಸಬೇಕು. ಆಗ ದೇಶ, ಈ ಸಮಾಜ‌ ಉಳಿಯುತ್ತದೆ ಎಂದರು. ಇದನ್ನೂ ಓದಿ: ಕುಕ್ಕರ್‌ ಬಾಂಬರ್‌ ಶಾರೀಕ್‌ ಗುಣಮುಖನಾಗಲು 25 ದಿನ ಬೇಕು

    ಹಿಂದೂ ಸಮಾಜ ಕೂಡಾ ಎಚ್ಚರಿಕೆಯಿಂದ ಇರಬೇಕು. ಪೊಲೀಸ್ ಇಲಾಖೆ ಇಂತಹ ಪ್ರಕರಣಗಳ ಗಂಭೀರತೆ ಅರಿತು ಕೆಲಸ ಮಾಡಬೇಕು. ಇದಕ್ಕಾಗಿಯೇ ಒಂದು ಸೆಕ್ಷನ್ ಕೆಲಸ ಮಾಡಬೇಕು. ದೇಶಾದ್ಯಂತ ಇಂತಹ ಹಲವು ಭಯೋತ್ಪಾದಕ ಜಾಲಗಳಿವೆ. ಪ್ರವೀಣ್ ನೆಟ್ಟಾರು, ಹರ್ಷ ಸೇರಿ ಹಲವರ ಸರಣಿ ಹತ್ಯೆಯಾಗಿದೆ. ಹಾಗಾಗಿ ಮಂಗಳೂರಿನಲ್ಲಿ ಎನ್ಐಎ ಕಚೇರಿ ತೆರೆಯಬೇಕಿದೆ. ಇನ್ನು ಮುಂದೆ ಇಂತಹ ಘಟನೆಗಳಿಗೆ ಕುಮ್ಮಕ್ಕು ನೀಡುವ ಎಸ್‌ಡಿಪಿಐ ಸಂಘಟನೆ ಬ್ಯಾನ್ ಮಾಡುವ ಕುರಿತು ರಾಜಕೀಯ ಪಕ್ಷಗಳು ತೀರ್ಮಾನ ಮಾಡಬೇಕು. ರಾಜಕೀಯ ಕಾರಣದಿಂದ ಇಂತಹ ಸಂಘಟನೆಗೆ ಪ್ರೋತ್ಸಾಹ ನೀಡೋದು ತಪ್ಪು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಕುಕ್ಕರ್ ಬಾಂಬ್ ಬ್ಲಾಸ್ಟ್‌ – ತಮಿಳುನಾಡು, ಕೇರಳದಲ್ಲೂ ತನಿಖೆ ಚುರುಕು : ಪ್ರವೀಣ್ ಸೂದ್

    Live Tv
    [brid partner=56869869 player=32851 video=960834 autoplay=true]

  • ಟಿಪ್ಪು ಹೆಸರಿನಲ್ಲಿ ಪೂಜೆ ಮಾಡಿದ್ರೆ ದೇವರ ಶಕ್ತಿ ಕಡಿಮೆಯಾಗುತ್ತದೆ: ಕಲ್ಲಡ್ಕ ಕಿಡಿ

    ಟಿಪ್ಪು ಹೆಸರಿನಲ್ಲಿ ಪೂಜೆ ಮಾಡಿದ್ರೆ ದೇವರ ಶಕ್ತಿ ಕಡಿಮೆಯಾಗುತ್ತದೆ: ಕಲ್ಲಡ್ಕ ಕಿಡಿ

    ಉಡುಪಿ: ಟಿಪ್ಪು ಹೆಸರಿನಲ್ಲಿ ದೇವರಿಗೆ ಪೂಜೆ ಮಾಡುವುದು ಸರಿಯಲ್ಲ. ಅದು ದೇವರಿಗೆ ಮಾಡುವ ಅಪಮಾನ. ಇದರಿಂದ ದೇವರ ಶಕ್ತಿ ಕಡಿಮೆಯಾಗುತ್ತದೆ ಎಂದು ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದ್ದಾರೆ.

    ಶೃಂಗೇರಿಯ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನದಲ್ಲಿ ನಡೆಯುವ ಸಲಾಂ ಆರತಿ ಪೂಜೆಗೆ ಸಂಬಂಧಿಸಿದಂತೆ ಉಡುಪಿಯ ಬೈಂದೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಸಲಾಂ ತೆಗೆದು ದೇವರ ಹೆಸರಿನಲ್ಲಿ ಪೂಜೆ ಮಾಡಿ ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಟಿಪ್ಪು ಹಿಂದೂ ವಿರೋಧಿ ಎಂಬುದಕ್ಕೆ ಆಧಾರವೇನಿದೆ..?: ಪ್ರೊ.ಟಿ ಮುರುಗೇಶಿ

    tippu

    ಟಿಪ್ಪು ನಮ್ಮ ಹಿಂದೂ ದೇವರನ್ನು ಅವಹೇಳನ ಮಾಡಿದ್ದಾನೆ. ಹಿಂದೂ ಸಮಾಜವನ್ನು ನಾಶ ಮಾಡಿದ್ದಾನೆ. ಇಂತಹ ಒಬ್ಬ ವ್ಯಕ್ತಿಯ ಹೆಸರಿನಲ್ಲಿ ದೇವರಿಗೆ ಪೂಜೆ ಮಾಡುವುದು ಸರಿಯಲ್ಲ. ಅದು ದೇವರಿಗೆ ಮಾಡುವಂತಹ ಅಪಮಾನ. ಸಲಾಂ ಹೆಸರನ್ನು ಎಷ್ಟು ಬೇಗ ತೆಗೆದು ಹಾಕುತ್ತಾರೋ ಅಷ್ಟು ಶ್ರೇಯಸ್ಸು. ಇಲ್ಲದಿದ್ದರೆ ದೇವರ ಶಕ್ತಿ ಕಡಿಮೆಯಾಗುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಟಿಪ್ಪು ಹೆಸರಿನಲ್ಲಿ ನಿತ್ಯ ಸಲಾಂ ಮಂಗಳಾರತಿ ಬೇಡ – ಹೆಸರು ಬದಲಾಯಿಸುವಂತೆ ಕೊಲ್ಲೂರು ದೇವಾಲಯಕ್ಕೆ ಮನವಿ

    ಶೀಘ್ರವಾಗಿ ಸಲಾಂ ತೆಗೆದು, ದೇವರ ಹೆಸರಿನಲ್ಲಿ ಪೂಜೆ ಮಾಡಲಿ. ಸಲಾಂ ಇನ್ನೂ ಸ್ವಲ್ಪ ವರ್ಷ ಕಳೆದರೆ, ಅಲ್ಲಾಹು ಸಲಾಂ ಎಂದು ಬರುವ ಸಾಧ್ಯತೆ ಇದೆ. ಅವರಲ್ಲಿ ಬೇಕಾದರೆ ಮಾಡಲಿ, ನಮ್ಮಲ್ಲಿ ಬೇಡ. ನಮ್ಮ ದೇವಸ್ಥಾನದಲ್ಲಿ ನಮ್ಮ ನಮ್ಮತನ ಇರಬೇಕು. ಹಿಂದೂ ದೇವರಿಗೆ ಇಂತಹ ಸಲಾಂ ಪೂಜೆ ನಡೆಯಬಾರದು ಎಂದು ಕಿಡಿ ಕಾರಿದ್ದಾರೆ.

     

  • ನಮ್ಮ ಶಾಲೆಗೆ ಬಿಸಿಯೂಟ ನೀಡಿ: ಸರ್ಕಾರಕ್ಕೆ ಕಲ್ಲಡ್ಕ ಭಟ್ ಮನವಿ

    ನಮ್ಮ ಶಾಲೆಗೆ ಬಿಸಿಯೂಟ ನೀಡಿ: ಸರ್ಕಾರಕ್ಕೆ ಕಲ್ಲಡ್ಕ ಭಟ್ ಮನವಿ

    ಮಂಗಳೂರು: ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ತನ್ನ ನೇತೃತ್ವದ ಎರಡು ಶಾಲೆಗಳಿಗೆ ಬಿಸಿಯೂಟವನ್ನು ನೀಡಬೇಕೆಂದು ಕೊನೆಗೂ ಸರ್ಕಾರದ ಮೊರೆ ಹೋಗಿದ್ದಾರೆ. ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರ ಹಾಗೂ ಪುಣಚದ ಶ್ರೀದೇವಿ ವಿದ್ಯಾಸಂಸ್ಥೆಗಳು ತಮಗೆ ಬಿಸಿಯೂಟ ನೀಡಿ ಎಂದು ಸರ್ಕಾರದಲ್ಲಿ ಮನವಿ ಮಾಡಿದ್ದಾರೆ.

    ಬಿಜೆಪಿ ಸರ್ಕಾರ ಇದ್ದಾಗ ಮುಜರಾಯಿ ಇಲಾಖೆಯ ಅಧೀನದಲ್ಲಿರುವ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಿಂದ ಬಿಸಿಯೂಟಕ್ಕಾಗಿ ಹಣದ ಮೂಲಕ ದೇಣಿಗೆ ಪಡೆಯುತ್ತಿದ್ದರು. ಆದರೆ ಕಳೆದ ವರ್ಷ ಸಚಿವ ರಮಾನಾಥ ರೈ ದೇವಸ್ಥಾನದಿಂದ ಹಣದ ಮೂಲಕ ಅನುದಾನ ನೀಡುವುದು ಸರಿಯಲ್ಲ ಎಂದು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದ ಪರಿಣಾಮ ಸರ್ಕಾರ ಅನುದಾನವನ್ನು ಕಡಿತಗೊಳಿಸಿತ್ತು.

    ಆ ಸಂದರ್ಭದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಶಾಲಾ ಮಕ್ಕಳನ್ನು ಸರ್ಕಾರದ ವಿರುದ್ಧ ರಸ್ತೆಗಿಳಿದು ಪ್ರತಿಭಟನೆ ನಡೆಸಿದ್ದು, ಸರ್ಕಾರ ನೀಡದಿದ್ದರೂ ಭಿಕ್ಷೆಯೆತ್ತಿಯಾದ್ದರೂ ಮಕ್ಕಳಿಗೆ ಅನ್ನ ಹಾಕುತ್ತೇನೆ. ಮಕ್ಕಳ ಹೊಟ್ಟೆಗೆ ಸರ್ಕಾರ ಕಲ್ಲು ಹಾಕಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

    ಬಳಿಕ ಮಾಜಿ ಸಚಿವ ಜನಾರ್ದರೆಡ್ಡಿ 25 ಲಕ್ಷ ಸೇರಿದಂತೆ ಇತರ ಸಂಘ ಸಂಸ್ಥೆಗಳಿಂದ ಲಕ್ಷಾಂತರ ರೂಪಾಯಿ ಶಾಲಾ ಮಕ್ಕಳ ಬಿಸಿಯೂಟಕ್ಕಾಗಿ ದೇಣಿಗೆ ಹರಿದು ಬಂದಿದ್ದು. ಜೊತೆಗೆ ಸಂಸದೆ ಶೋಭಾ ಕರಂದ್ಲಾಜೆ ಭಿಕ್ಷಾಂದೇಹಿ ಎನ್ನುವ ಕಾರ್ಯಕ್ರಮದ ಮೂಲಕ ಮನೆ ಮನೆಗೆ ತೆರಳಿ ಅಕ್ಕಿಯನ್ನು ಭಿಕ್ಷೆ ಪಡೆದು ಶಾಲೆಗೆ ನೀಡಿದ್ದರು.

    ಶಿಕ್ಷಣ ಇಲಾಖೆ ಎರಡೂ ಶಾಲೆಗಳಿಗೂ ನೋಟೀಸ್ ನೀಡಿ ಬಿಸಿಯೂಟಕ್ಕೆ ಅರ್ಜಿ ಸಲ್ಲಿಸಿ ಎಂದು ಹೇಳಿತ್ತು. ಆದರೆ ಯಾವುದೇ ಕಾರಣಕ್ಕೂ ಬಿಸಿಯೂಟಕ್ಕಾಗಿ ಅರ್ಜಿ ಸಲ್ಲಿಸಲ್ಲ ಎಂದು ಕಲ್ಲಡ್ಕ ಪ್ರಭಾಕರ ಭಟ್ ಹೇಳಿಕೊಳ್ಳುತ್ತಿದ್ದರು. ಆದರೆ ಇದೀಗ ನೂತನ ಸಮ್ಮಿಶ್ರ ಸರ್ಕಾರಕ್ಕೆ ಈ ಎರಡೂ ಶಾಲೆಗಳೂ ಮನವಿ ಮಾಡಿದ್ದು, ಬಿಸಿಯೂಟ ನೀಡುವಂತೆ ಮನವಿ ಮಾಡಿದೆ.

    ಆ ದಿನಗಳಲ್ಲಿ ಸರ್ಕಾರದ ಅನುದಾನ ಬೇಡ ಎಂದಿದ್ದ ಕಲ್ಲಡ್ಕ ಪ್ರಭಾಕರ ಭಟ್ ಅವರೇ ಈಗ ಬಿಸಿಯೂಟ ನೀಡಿ ಎಂದು ಸರ್ಕಾರಕ್ಕೆ ಮನವಿ ಮಾಡಿದ್ದು ವಿಶೇಷವಾಗಿದೆ.

  • ರಮಾನಾಥ ರೈಗೆ ಗೃಹ ಖಾತೆ: ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದ್ದು ಹೀಗೆ

    ರಮಾನಾಥ ರೈಗೆ ಗೃಹ ಖಾತೆ: ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದ್ದು ಹೀಗೆ

    ಚಿಕ್ಕಮಗಳೂರು: ರಮಾನಾಥ ರೈ ಗೃಹ ಸಚಿವ ಆಗುವುದು ನನಗೆ ಸಂತೋಷ ತಂದಿದೆ ಎಂದು ಆರ್‍ಎಸ್‍ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಹೇಳಿದರು.

    ಮೂಡಿಗೆರೆಯ ಸಾರ್ವಜನಿಕ ಗಣಪತಿ ಸೇವಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಮಾನಾಥ ರೈ ಅವರು ಸಿಟ್ಟಿನಿಂದ, ದ್ವೇಷದಿಂದ, ಆವೇಷದಿಂದ ಧರ್ಮವಿರೋಧಿ ಕೆಲಸ ಮಾಡಬಾರದು. ಏಕೆಂದರೆ ಗೃಹ ಅಂದರ ಮನೆ, ಮನೆ ಆನಂದ, ಸಂತೋಷ ನೀಡುವಂತಹ ಜಾಗ. ರೈ ಅವರಿಗೆ ಇಡೀ ರಾಜ್ಯವೇ ಮನೆ ಇದ್ದ ಹಾಗೆ. ಎಲ್ಲರಿಗೂ ಸುಖ, ಶಾಂತಿ, ನೆಮ್ಮದಿ ನೀಡಿ ರಾಜಕೀಯ ವೈರತ್ವ ಮರೆತು ಕೆಲಸ ಮಾಡಲಿ ಎಂದು ರೈ ಅವರಿಗೆ ಸಲಹೆ ನೀಡಿದರು.

    ಕೊಲ್ಲೂರು ದೇವಾಲಯದಿಂದ ಕಲ್ಲಡ್ಕ ಶ್ರೀರಾಮ ಶಾಲೆಗೆ ಅನುದಾನ ನಿಲ್ಲಿಸಿದ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ನಾನು ಕಾನೂನು ಸಮರ ನಿಲ್ಲಿಸೋದು ಇಲ್ಲ, ಅವರ ಕಾಲಿಗೂ ಬೀಳೋದಿಲ್ಲ. ಸರ್ಕಾರ ಮಕ್ಕಳಿಗೆ ಮೋಸ ಮಾಡುತ್ತಿದೆ ಎಂದು ಹೇಳಿದರು.

    ಸಿದ್ದರಾಮಯ್ಯ ನಾನು ಅಹಿಂದ ಸಿಎಂ ಎಂದು ಹೇಳುತ್ತಾರೆ. ಆದರೆ ಕಲ್ಲಡ್ಕ ಶಾಲೆಯಲ್ಲಿ ಶೇ.94 ರಷ್ಟು ಅಹಿಂದ ಮಕ್ಕಳಿದ್ದಾರೆ. ಈ ಸರ್ಕಾರ ಮಕ್ಕಳ ಹೊಟ್ಟೆ ಮೇಲೆ ಹೊಡೆದಿದೆ. ಇದು ಅಧರ್ಮದಲ್ಲಿ ನಡೆಯುತ್ತಿರೋ ಸರ್ಕಾರ. ಇವರಿಗೆ ರಾಜಕೀಯ ದ್ವೇಷವಿದ್ದರೆ ಅಖಾಡಕ್ಕೆ ಬರಲಿ ಹೋರಾಡೋಣ. ಅದನ್ನು ಬಿಟ್ಟು ಮಕ್ಕಳ ಜೊತೆ ಹೋರಾಡಬಾರದು ಯಾರೇ ಆಗಲಿ ಯಾವ ಪಕ್ಷದವರೇ ಆಗಲಿ, ಮಕ್ಕಳ ಅನ್ನಕ್ಕೆ ಕನ್ನ, ಕಲ್ಲು ಹಾಕಬಾರದು ಎಂದು ಸರ್ಕಾರದ ವಿರುದ್ಧ ಕಿಡಿ ಕಾರಿದರು.

    ಮೂಡಿಗೆರೆಯ ಹ್ಯಾಂಡ್ ಪೋಸ್ಟ್‍ನಿಂದ ಬೈಕ್ ಜಾಥಾ ಮಾಡುವ ಮೂಲಕ ಪ್ರಭಾಕರ್ ಭಟ್ ಅವರನ್ನು ಸ್ವಾಗತಿಸಿಕೊಂಡರು. ಕಲ್ಲಡ್ಕ ಪ್ರಭಾಕರ್ ಭಟ್ ಮೆರವಣಿಗೆಗಾಗಿ ಸ್ಥಳೀಯರು ತೆರೆದ ಜೀಪ್ ಸಿದ್ಧಪಡಿಸಿಕೊಂಡಿದ್ದರು. ಆದರೆ ಪ್ರಭಾಕರ್ ಭಟ್ ಮೆರವಣಿಗೆಯಲ್ಲಿ ಪಾಲ್ಗೊಳ್ಳದೆ ತಮ್ಮ ಕಾರಿನಲ್ಲಿ ನೇರವಾಗಿ ರಂಗಮಂದಿರದ ಬಳಿ ಬಂದು ಗಣಪತಿಯ ಹೋಮ-ಹವನ ಪೂಜೆಯಲ್ಲಿ ಪಾಲ್ಗೊಂಡು ಧಾರ್ಮಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದರು.

    ನಗರದಾದ್ಯಂತ 800 ಕ್ಕೂ ಹೆಚ್ಚು ಪೊಲೀಸರಿಂದ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಅನೇಕ ಷರತ್ತು ವಿಧಿಸಿ ಕಲ್ಲಡ್ಕ ಪ್ರಭಾಕರ್ ಭಟ್ ಆಗಮನಕ್ಕೆ ಪೊಲೀಸರು ಅನುವು ಮಾಡಿಕೊಟ್ಟಿದ್ದರು.

  • ಕಲ್ಲಡ್ಕ ಪ್ರಭಾಕರ್ ಶಾಲೆಗೆ ಬರುತ್ತಿದ್ದ ಅನುದಾನ ಕಡಿತಗೊಳಿಸಿದ ಸರ್ಕಾರ

    ಕಲ್ಲಡ್ಕ ಪ್ರಭಾಕರ್ ಶಾಲೆಗೆ ಬರುತ್ತಿದ್ದ ಅನುದಾನ ಕಡಿತಗೊಳಿಸಿದ ಸರ್ಕಾರ

    ಮಂಗಳೂರು: ಕಲ್ಲಡ್ಕ ಪ್ರಭಾಕರ್ ನೇತೃತ್ವದ ಎರಡು ಶಾಲೆಗಳಿಗೆ ಬರುತ್ತಿದ್ದ ಅನುದಾನವನ್ನು ಸಿಎಂ ಸಿದ್ದರಾಮಯ್ಯ ಸರ್ಕಾರ ಕಡಿತಗೊಳಿಸಿದೆ.

    ಬಂಟ್ವಾಳದಲ್ಲಿ ನಡೆದ ಕೋಮುಗಲಭೆ ವೇಳೆ ಸರ್ಕಾರ ಹಾಗೂ ಕಲ್ಲಡ್ಕ ಪ್ರಭಾಕರ್ ನಡುವೆ ದೊಡ್ಡ ಸಂಘರ್ಷವೇ ನಡೆದಿತ್ತು. ಇದೀಗ ಸಿಎಂ ಸಿದ್ದರಾಮಯ್ಯ ಆರ್‍ಎಸ್‍ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ನಡೆಸುತ್ತಿದ್ದ ಶ್ರೀರಾಮ ವಿದ್ಯಾ ಹಾಗೂ ಶ್ರೀದೇವಿ ವಿದ್ಯಾ ಕೇಂದ್ರಕ್ಕೆ ಬರುತ್ತಿದ್ದ ಅನುದಾನವನ್ನು ಕಡಿತಗೊಳಿಸಿದ್ದಾರೆ.

    ಕಳೆದ ಹತ್ತು ವರ್ಷಗಳಿಂದ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಿಂದ ಈ ಶಾಲೆಗಳಿಗೆ ಅನುದಾನ ನೀಡಲಾಗ್ತಿತ್ತು. ಈ ಎರಡು ಶಾಲೆಗಳನ್ನು ಕೊಲ್ಲೂರು ಮೂಕಾಂಬಿಕಾ ದೇವಾಲಯ ದತ್ತು ಪಡೆದುಕೊಂಡಿತ್ತು. ಕಳೆದ ಹತ್ತು ವರ್ಷಗಳಲ್ಲಿ ಕೊಲ್ಲೂರು ದೇಗುಲದಿಂದ 2.83 ಕೋಟಿ ಅನುದಾನ ನೀಡಲಾಗಿತ್ತು. ಕಲ್ಲಡ್ಕ ವಿದ್ಯಾಕೇಂದ್ರಕ್ಕೆ 2.32 ಕೋಟಿ ರೂ. ನೆರವು ಲಭಿಸಿತ್ತು. ಹಾಗೆ ಬಂಟ್ವಾಳದ ಪುಣಚ ಶ್ರೀದೇವಿ ವಿದ್ಯಾಕೇಂದ್ರಕ್ಕೆ 50.72 ಲಕ್ಷ ನೆರವು ಲಭಿಸಿತ್ತು.

    ಇದೀಗ ಕೊಲ್ಲೂರು ದೇಗುಲ ದತ್ತು ತೆಗೆದುಕೊಂಡಿದ್ದ ಆದೇಶ ಹಿಂದಕ್ಕೆ ಪಡೆಯಲಾಗಿದ್ದು, ದೇವಸ್ಥಾನದ ದುಡ್ಡು ಶಾಲೆಗೆ ನೀಡಬಾರದೆಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.