Tag: ಕಲ್ಲು

  • ಒಪ್ಪಂದ ಕೊನೆಗೊಳಿಸಲು ಮುಂದಾದ ಸಿಟ್ಟಲ್ಲಿ ಕಂಪನಿಗೆ ಬ್ಯಾಂಡೇಜ್‌, ಕಾಂಡೋಮ್‌ ತುಂಬಿ ಸಮೋಸಾ ಪೂರೈಕೆ!

    ಒಪ್ಪಂದ ಕೊನೆಗೊಳಿಸಲು ಮುಂದಾದ ಸಿಟ್ಟಲ್ಲಿ ಕಂಪನಿಗೆ ಬ್ಯಾಂಡೇಜ್‌, ಕಾಂಡೋಮ್‌ ತುಂಬಿ ಸಮೋಸಾ ಪೂರೈಕೆ!

    – ಓರ್ವನ ಬಂಧನ, ಐವರ ವಿರುದ್ಧ ಎಫ್‌ಐಆರ್‌

    ಮುಂಬೈ: ಮಹಾರಾಷ್ಟ್ರದ ಪುಣೆಯಲ್ಲಿರುವ ಕಂಪನಿಯ (Pune Company) ಕ್ಯಾಂಟೀನ್‌ನಲ್ಲಿ ಸಮೋಸಾದೊಳಗೆ (Samosa) ಬ್ಯಾಂಡೇಜ್‌, ಕಾಂಡೋಮ್, ಕಲ್ಲುಗಳು ಮತ್ತು ತಂಬಾಕು ಮುಂತಾದ ವಸ್ತುಗಳು ಪತ್ತೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಪ್ರಕರಣದಲ್ಲಿ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದು, ಐವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

    ಆರೋಪಿಗಳನ್ನು ರಹೀಮ್ ಶೇಖ್, ಅಜರ್ ಶೇಖ್, ಮಜರ್ ಶೇಖ್, ಅಜರ್ ಶೇಖ್ ಮತ್ತು ವಿಕ್ಕಿ ಶೇಖ್ ಎಂದು ಗುರುತಿಸಲಾಗಿದೆ. ಕಂಪನಿಯು ತಮ್ಮ ಒಪ್ಪಂದವನ್ನು ರದ್ದುಪಡಿಸಿದ ಕೋಪದಿಂದ ಆರೋಪಿಗಳೆಲ್ಲರೂ ಈ ಕ್ರಮಕ್ಕೆ ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: 3 ದಿನದಲ್ಲಿ ಸತತ 36 ಗಂಟೆ ವೀಡಿಯೋ ಕಾಲ್‌ – ಸೈಬರ್‌ ವಂಚನೆಗೆ ಸಿಕ್ಕಿ 15 ಲಕ್ಷ ರೂ. ಕಳೆದುಕೊಂಡ ಮಹಿಳೆ

    ಮಾಧ್ಯಮ ವರದಿಗಳ ಪ್ರಕಾರ, ಪುಣೆಯ ಪಿಂಪ್ರಿ ಚಿಂಚ್ವಾಡ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಇಲ್ಲಿನ ಚಿಖಾಲಿ ಮೂಲದ ಕಂಪನಿಯೊಂದರ ಅಧಿಕಾರಿ ಕೀರ್ತಿಕುಮಾರ್ ಶಂಕರರಾವ್ ದೇಸಾಯಿ ಅವರು ಏ.7 ರಂದು ಪೊಲೀಸರಿಗೆ ದೂರು ನೀಡಿದ್ದಾರೆ. ಚಿಖಾಲಿ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನಲ್ಲಿ, ತಮ್ಮ ಕಂಪನಿಯು ಚಿಖಾಲಿಯ ಮತ್ತೊಂದು ದೊಡ್ಡ ಕಂಪನಿಯಿಂದ ಆಹಾರ ಪೂರೈಕೆಗಾಗಿ ಆದೇಶವನ್ನು ಪಡೆದಿದೆ. ಅದರಂತೆ ಕೀರ್ತಿಕುಮಾರ್ ಅವರು ರಹೀಮ್ ಖಾನ್ ಮಾಲೀಕತ್ವದ SRS ಎಂಟರ್ ಪ್ರೈಸಸ್ ಹೆಸರಿನ ಕಂಪನಿಯೊಂದಿಗೆ ಸಮೋಸಾ ಪೂರೈಕೆಗೆ ಒಪ್ಪಂದ ಮಾಡಿಕೊಂಡಿರುವುದಾಗಿ ತಿಳಿಸಿದ್ದಾರೆ.

    ಆಗಿದ್ದೇನು..?: ಕೀರ್ತಿಕುಮಾರ್ ಪ್ರಕಾರ , ಒಂದು ದಿನ SRS ಕಂಪನಿಯಿಂದ ಸರಬರಾಜಾಗುತ್ತಿದ್ದ ಸಮೋಸದಲ್ಲಿ ಗಾಯಗಳಿಗೆ ಹಾಕುವ ಬ್ಯಾಂಡೇಜ್ (Bandage) ಪತ್ತೆಯಾಗಿದೆ. ಸಿಬ್ಬಂದಿಯಿಂದ ಈ ಕುರಿತು ದೂರು ಸ್ವೀಕರಿಸಿದ ಕೀರ್ತಿಕುಮಾರ್ ಅವರ ಕಂಪನಿಯು ಎಸ್‌ಆರ್‌ಎಸ್‌ನೊಂದಿಗಿನ ಒಪ್ಪಂದವನ್ನು ಮುರಿದುಕೊಳ್ಳಲಾಯಿತು. ಬಳಿಕ ಪುಣೆ ಮೂಲದ ಮತ್ತೊಂದು ಕಂಪನಿಯಾದ ಮನೋಹರ್ ಎಂಟರ್‌ಪ್ರೈಸಸ್‌ಗೆ ಸಮೋಸಾಗಳನ್ನು ಪೂರೈಸಲು ಸೂಚನೆ ನೀಡಿತು. ಇದರಿಂದ ಸಿಟ್ಟಿಗೆದ್ದ SRS ಮಾಲೀಕ ರಹೀಮ್ ಖಾನ್ ತನ್ನ ಸಹಚರರಾದ ಅಜರ್ ಶೇಖ್ ಮತ್ತು ಮಜರ್ ಶೇಖ್ ಜೊತೆ ಸೇರಿ ದೊಡ್ಡ ಸಂಚು ರೂಪಿಸಿದ್ದ.

    ಅದರಂತೆ ಮಾರ್ಚ್ 27 ರಂದು ರಹೀಮ್ ಖಾನ್, ತನ್ನ ಕೆಲಸಗಾರರಿಗೆ ಕಾಂಡೋಮ್‌ಗಳು (Condoms), ಗುಟ್ಕಾ (Gutkha) ಮತ್ತು ಕಲ್ಲುಗಳನ್ನು ಸಮೋಸಾಳ ಒಳಗೆ ತುಂಬಲು ಸೂಚಿಸಿದ್ದಾನೆ. ಬಳಿಕ ಒಪ್ಪದ ಕೊನೆಗೊಳಿಸಲು ಮುಂದಾದ ಕಂಪನಿಗೆ ಬೆಳಗ್ಗೆ 7:30 ರಿಂದ 9 ರ ನಡುವೆ ಈ ಸಮೋಸಗಳನ್ನು ವಿತರಿಸಿದರು. ಈ ವೇಳೆ ಕಾಂಡೋಮ್‌, ಗುಟ್ಕಾ ಮೊದಲಾದ ವಸ್ತುಗಳು ಸಿಕ್ಕಿವೆ. ಈ ಕುರಿತು ಸಿಬ್ಬಂದಿಯು ಕೀರ್ತಿಕುಮಾರ್ ಅವರಿಗೆ ದೂರು ನೀಡಿದ್ದಾರೆ. ಕೂಡಲೇ ಕೀರ್ತಿ ಕುಮಾರ್‌ ಅವರು, ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

    ದೂರು ಸ್ವೀಕರಿಸಿದ ಪೊಲೀಸರು ರಹೀಮ್ ಶೇಖ್, ಫಿರೋಜ್ ಶೇಖ್, ವಿಕ್ಕಿ ಶೇಖ್, ಅಜರ್ ಶೇಖ್ ಮತ್ತು ಮಜರ್ ಶೇಖ್ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಅಲ್ಲದೇ ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 328 (ವಿಷದ ಮೂಲಕ ನೋವುಂಟುಮಾಡುವುದು), 120-ಬಿ (ಕ್ರಿಮಿನಲ್‌ ಪಿತೂರಿ) ಮತ್ತು 34 (ಸಾಮಾನ್ಯ ಉದ್ದೇಶದ ಮುಂದುವರಿಕೆಗಾಗಿ ಹಲವಾರು ವ್ಯಕ್ತಿಗಳು ಮಾಡಿದ ಕೃತ್ಯಗಳು) ಅಡಿಯಲ್ಲಿ ಕ್ರಮ ಕೈಗೊಳ್ಳಲಾಗಿದೆ. ಪ್ರಕರಣ ಸಂಬಂಧ ಈಗಾಗಲೇ ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಈ ಕುರಿತು ತನಿಖೆ ಮುಂದುವರಿದಿದೆ.

  • ಕಲ್ಲಾಗಿ ಬದಲಾದ ಏಡಿ – ಅಘನಾಶಿನಿ ನದಿಯಲ್ಲಿ ವಿಸ್ಮಯ

    ಕಲ್ಲಾಗಿ ಬದಲಾದ ಏಡಿ – ಅಘನಾಶಿನಿ ನದಿಯಲ್ಲಿ ವಿಸ್ಮಯ

    ಕಾರವಾರ: ಕಲ್ಲಿನಲ್ಲಿ ಏಡಿ ಸಿಗೋದು ನೋಡಿರಬಹುದು. ಆದರೆ ಏಡಿಯೇ ಕಲ್ಲಾಗಿ ಸಿಕ್ಕರೆ ಇದು ಪ್ರಕೃತಿ ವಿಸ್ಮಯವಲ್ಲವೇ? ಹೌದು ಉತ್ತರ ಕನ್ನಡ (Uttara Kannada) ಜಿಲ್ಲೆಯ ಕುಮಟಾ ತಾಲೂಕಿನ ನುಸಿಕೋಟೆ ಬಳಿ ಮೀನುಗಾರರೊಬ್ಬರಿಗೆ ಕಲ್ಲಾಗಿ ರೂಪುಗೊಂಡ ಏಡಿಯ ದೇಹ ಸಿಕ್ಕಿದೆ. ಈ ಕಲ್ಲಾದ ಏಡಿ ನೂರಾರು ವರ್ಷಗಳ ಹಳೆಯ ಪಳೆಯುಳಿಕೆ ಇರಬಹುದು ಎಂದು ತಜ್ಞರು ಅಂದಾಜಿಸಿದ್ದಾರೆ.

    ಅಘನಾಶಿನಿ ನದಿಯಲ್ಲಿ (Aghanashini River) ಮೀನುಗಾರಿಕೆ ನಡೆಸುತಿದ್ದ ವೇಳೆ ಮೀನುಗಾರ ಈಶ್ವರ ಹರಿಕಂತ್ರ ಅವರಿಗೆ ಏಡಿ ಕಲ್ಲು (Crab Stone) ಸಿಕ್ಕಿದೆ. ಮೊದಲು ಇದು ಏಡಿ ಎಂದು ಕೈಯಲ್ಲಿ ಹಿಡಿದಾಗ ಸಾಮಾನ್ಯ ಏಡಿಯಂತೆ ಇರದೇ ಕಲ್ಲಿನಂತೆ ಸ್ಪರ್ಷ ಅನುಭವ ಆಗಿದೆ. ಹೀಗಾಗಿ ಈ ಏಡಿಯಲ್ಲಿ ವಿಶೇಷ ಏನೋ ಇದೆ ಎಂದು ಕಾರವಾರದ ಮೀನುಗಾರ ವಿನಾಯಕ ಹರಿಕಂತ್ರ ಎಂಬವರಿಗೆ ಅದನ್ನು ಕಳುಹಿಸಿ ಕೊಟ್ಟಿದ್ದಾರೆ. ಅವರು ಕಾರವಾರದ ಕಡಲ ಜೀವಶಾಸ್ತ್ರಜ್ಞರ ಗಮನಕ್ಕೆ ತಂದು ಹಸ್ತಾಂತರಿಸಿದ್ದಾರೆ. ಆಗಲೇ ತಿಳಿದಿದ್ದು ಈ ಏಡಿ ನದಿಯಲ್ಲಿ ನೂರಾರು ವರ್ಷಗಳು ಸವೆಸಿ ಕಲ್ಲಿನ ರೂಪ ಪಡೆದಿದೆ ಎಂದು.

    ಏಡಿ ಕಲ್ಲುಗಳು ಸಮಾನ್ಯವಾಗಿ ಬಂಡೆಕಲ್ಲುಗಳಿರುವ ಕಡಲ ತೀರದಲ್ಲಿ ಪತ್ತೆಯಾಗುತ್ತವೆ. ಆದರೆ ಸಿಹಿ ನೀರಿನ ಅಘನಾಶಿನಿ ನದಿಯಲ್ಲಿ ಕಾಣಸಿಕ್ಕಿದ್ದು ಅಪರೂಪವೆನ್ನುತ್ತಾರೆ ಕಡಲ ಜೀವಶಾಸ್ತ್ರಜ್ಞ ವಿಎನ್ ನಾಯಕ್. ಇದನ್ನೂ ಓದಿ: ಭಾರತವನ್ನು ಕಟ್ಟಲು ಯುವಜನರು ವಾರಕ್ಕೆ 70 ಗಂಟೆ ದುಡಿಯಬೇಕು: ನಾರಾಯಣ ಮೂರ್ತಿ

    ಏಡಿ ಕಲ್ಲು ಏಡಿಯ ಪಳಿಯುಳಿಕೆಯಾಗಿದೆ. ಇದು ನೂರು ವರ್ಷಗಳದ್ದು ಇರಬಹುದು. ಆದರೆ ಕಾರ್ಬನ್ ಡೇಟಿಂಗ್‌ಗೆ ಒಳಪಡಿಸದೇ, ಅದರ ನಿಖರ ಆಯಸ್ಸು ಎಷ್ಟು ಎಂದು ಹೇಳಲು ಆಗುವುದಿಲ್ಲ. ಹೀಗಾಗಿ ಕಡಲ ಜೀವಶಾಸ್ತ್ರಜ್ಞರ ಜೊತೆ ಇದೀಗ ಪುರಾತತ್ವ ಸಂಶೋಧಕರು ಸಹ ಈ ಏಡಿ ಹಿಂದೆ ಬಿದ್ದಿದ್ದು ಇದರ ನಿಜವಾದ ಆಯುಷ್ಯವನ್ನು ಹುಡುಕುವತ್ತ ಗಮನ ಹರಿಸಿದ್ದಾರೆ.


    ಒಟ್ಟಿನಲ್ಲಿ ಅಪರೂಪದ ಕಲ್ಲಾಗಿ ಪರಿವರ್ತನೆಗೊಂಡ ಏಡಿ ಪಳಯುಳಿಕೆ ಇದೀಗ ಸಂಶೋಧಕರಿಗೆ ಸಂಶೋಧನೆಯ ವಸ್ತುವಾಗಿದೆ. ಇದನ್ನೂ ಓದಿ: PublicTV Explainer: ಉಗುರಿಗೆ ಹೆದರಿದ ‘ಹೀರೋಸ್‌’; ವನ್ಯಜೀವಿ ಸಂರಕ್ಷಣಾ ಕಾಯ್ದೆ ಏನು ಹೇಳುತ್ತೆ? – ಅಪರಾಧಕ್ಕೆ ಶಿಕ್ಷೆ ಏನು?

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಓವೈಸಿ ಮನೆ ಮೇಲೆ ದುಷ್ಕರ್ಮಿಗಳಿಂದ ಕಲ್ಲು ತೂರಾಟ

    ಓವೈಸಿ ಮನೆ ಮೇಲೆ ದುಷ್ಕರ್ಮಿಗಳಿಂದ ಕಲ್ಲು ತೂರಾಟ

    ನವದೆಹಲಿ: ಎಐಎಂಐಎಂ (AIMIM) ಮುಖ್ಯಸ್ಥ ಅಸಾದುದ್ದೀನ್ ಓವೈಸಿ (Asaduddin Owaisi) ಅವರ ದೆಹಲಿಯಲ್ಲಿರುವ ನಿವಾಸದ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ಘಟನೆ ನಡೆದಿದೆ.

    ಘಟನೆ ನಡೆದಾಗ ಓವೈಸಿ ದೆಹಲಿಯ (Delhi) ನಿವಾಸದಲ್ಲಿರಲಿಲ್ಲ. ಬದಲಿಗೆ ಜೈಪುರಕ್ಕೆ ಕಾರ್ಯನಿಮಿತ್ತ ತೆರಳಿದ್ದರು. ಈ ಬಗ್ಗೆ ಅಸಾದುದ್ದೀನ್ ಓವೈಸಿ ಸರಣಿ ಟ್ವೀಟ್ ಮಾಡಿದ್ದಾರೆ.

    ಟ್ವೀಟ್‍ನಲ್ಲಿ ಏನಿದೆ?: ನನ್ನ ದೆಹಲಿ ನಿವಾಸದ ಮೇಲೆ ಮತ್ತೆ ದಾಳಿ ನಡೆದಿದೆ. 2014ರಿಂದ ಇದು ನಾಲ್ಕನೇ ಘಟನೆ ಎಂದು ಕಿಡಿಕಾರಿದರು.

    ದುಷ್ಕರ್ಮಿಗಳ ಗುಂಪೊಂದು ಕಲ್ಲು ತೂರಾಟ ನಡೆಸಿದ್ದರಿಂದ ಕಿಟಕಿಗಳು ಮುರಿದು ಬಿದ್ದಿವೆ. ಈ ಬಗ್ಗೆ ಮನೆಯಲ್ಲಿದ್ದ ಸಿಬ್ಬಂದಿ ಮಾಹಿತಿ ನೀಡಿದ್ದಾರೆ. ಅಷ್ಟೇ ಅಲ್ಲದೇ ಸಿಬ್ಬಂದಿ ಘಟನೆಗೆ ಸಂಬಂಧಿಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

    ದೂರಿನ ಹಿನ್ನೆಲೆಯಲ್ಲಿ ಹೆಚ್ಚುವರಿ ಡಿಸಿಪಿ ನೇತೃತ್ವದ ದೆಹಲಿ ಪೊಲೀಸರ ತಂಡ ಓವೈಸಿ ನಿವಾಸಕ್ಕೆ ಭೇಟಿ ನೀಡಿದ್ದು, ಸ್ಥಳದಿಂದ ಸಾಕ್ಷ್ಯ ಸಂಗ್ರಹಿಸಿದೆ. ಇದನ್ನೂ ಓದಿ: ಬಿಜೆಪಿ ಸೋಲಿಸಲು ಮತ್ತೊಮ್ಮೆ ಮಹಾಮೈತ್ರಿಗೆ ಮುಂದಾದ ಕಾಂಗ್ರೆಸ್‌

    ಹೈಸೆಕ್ಯುರಿಟಿ ವಲಯದಲ್ಲಿ ಕಲ್ಲು ತೂರಾಟ ನಡೆದಿರುವುದು ಕಳವಳಕಾರಿ ಎಂದಿರುವ ಓವೈಸಿ, ಕೂಡಲೇ ಆರೋಪಿಗಳನ್ನು ಬಂಧಿಸುವಂತೆ ಪೊಲೀಸರನ್ನು ಒತ್ತಾಯಿಸಿದ್ದಾರೆ. ಇದನ್ನೂ ಓದಿ: 9 ಪ್ರಶ್ನೆಗಳಿಗೆ ಉತ್ತರ ಕೊಡಿ: ರೂಪಾಗೆ ರೋಹಿಣಿ ಅಭಿಮಾನಿಗಳ ಪ್ರಶ್ನೆ

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ವಂದೇ ಭಾರತ್ ಎಕ್ಸ್‌ಪ್ರೆಸ್‌ ಉದ್ಘಾಟನೆಗೊಂಡ 4ನೇ ದಿನಕ್ಕೆ ಕಲ್ಲು ತೂರಾಟ- ಕಿಟಕಿ ಗಾಜು ಪುಡಿ ಪುಡಿ

    ವಂದೇ ಭಾರತ್ ಎಕ್ಸ್‌ಪ್ರೆಸ್‌ ಉದ್ಘಾಟನೆಗೊಂಡ 4ನೇ ದಿನಕ್ಕೆ ಕಲ್ಲು ತೂರಾಟ- ಕಿಟಕಿ ಗಾಜು ಪುಡಿ ಪುಡಿ

    ಕೋಲ್ಕತ್ತಾ: 4 ದಿನದ ಹಿಂದಷ್ಟೇ ಪ್ರಾರಂಭವಾದ ವಂದೇ ಭಾರತ ಎಕ್ಸ್‌ಪ್ರೆಸ್ (Vande Bharat Express) ರೈಲಿಗೆ ಕೆಲವು ದುಷ್ಕರ್ಮಿಗಳು ಕಲ್ಲು (Stone) ತೂರಾಟ ನಡೆಸಿದ ಘಟನೆ ಪಶ್ಚಿಮ ಬಂಗಾಳದ (West Bengal) ಮಾಲ್ಡಾದ ಕುಮಾರ್‌ಗಂಜ್ ನಿಲ್ದಾಣದ ಬಳಿ ನಡೆದಿದೆ.

    ಶುಕ್ರವಾರವಷ್ಟೇ ಆನ್‍ಲೈನ್‍ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹೌರಾದಿಂದ ನ್ಯೂ ಜಲ್ಪೈಗುರಿ ಜಂಕ್ಷನ್‍ಗೆ ಹೋಗುವ ಭಾರತದ 7ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಚಾಲನೆ ನೀಡಿದ್ದರು. ಇದಾದ 4 ದಿನದ ನಂತರ ಈ ಘಟನೆ ನಡೆದಿದ್ದು, ಕಲ್ಲು ತೂರಾಟದ ಪರಿಣಾಮವಾಗಿ ರೈಲಿನ ಕಿಟಕಿಯ ಗಾಜುಗಳು ಪುಡಿ ಪುಡಿಯಾಗಿವೆ.

    ದಕ್ಷಿಣ ಬಂಗಾಳದಿಂದ ಉತ್ತರ ಬಂಗಾಳಕ್ಕೆ ಸಂಪರ್ಕ ಕಲ್ಪಿಸುವ ಎಕ್ಸ್‌ಪ್ರೆಸ್ ರೈಲನ್ನು 2022ರ ಡಿಸೆಂಬರ್ 30ರಂದು ಹೌರಾದಿಂದ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸಮ್ಮುಖದಲ್ಲಿ ಔಪಚಾರಿಕವಾಗಿ ಪ್ರಾರಂಭಿಸಲಾಯಿತು. ಇದನ್ನೂ ಓದಿ: ಒಡಿಶಾದಲ್ಲಿ ಮತ್ತೊಬ್ಬ ರಷ್ಯಾ ವ್ಯಕ್ತಿಯ ಶವ ಪತ್ತೆ – 15 ದಿನದಲ್ಲಿ 3ನೇ ಘಟನೆ

    ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ಪೂರ್ವ ರೈಲ್ವೇಸ್, ಮಂಗಳವಾರ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಚಲಿಸುತ್ತಿದ್ದ ವೇಳೆ ಕಲ್ಲು ತೂರಾಟ ನಡೆದಿದೆ. ಇದರ ಪರಿಣಾಮವಾಗಿ ಬಾಗಿಲಿನ ಗಾಜು ಬಿರುಕು ಬಿಟ್ಟಿತ್ತು. ಈ ವೇಳೆ ರೈಲಿನ ಬೆಂಗಾವಲು ಪಡೆ ಓರ್ವ ಎಎಸ್‍ಐ ಮತ್ತು 4 ಸಿಬ್ಬಂದಿ ಇದ್ದರು. ಘಟನೆಯಲ್ಲಿ ಯಾವುದೇ ಪ್ರಯಾಣಿಕರಿಗೆ ಹಾಗೂ ಸಿಬ್ಬಂದಿಗೆ ತೊಂದರೆ ಆಗಲಿಲ್ಲ ಎಂದರು.

    ಕತ್ತಲಲ್ಲಿ ಯಾರು ಕಲ್ಲು ಎಸೆದಿದ್ದಾರೆ. ಯಾವ ಉದ್ದೇಶಕ್ಕಾಗಿ ಕಲ್ಲು ಎಸೆದಿದ್ದಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಇಡೀ ಘಟನೆಯ ಬಗ್ಗೆ ಸಂಪೂರ್ಣ ತನಿಖೆ ನಡೆಸುವುದಾಗಿ ರೈಲ್ವೆ ಅಧಿಕಾರಿಗಳು ತಿಳಿಸಿದರು. ಇದನ್ನೂ ಓದಿ: ಜ.31ಕ್ಕೆ ಸಂಸತ್ ಅಧಿವೇಶನ; ಫೆ.1ಕ್ಕೆ ಕೇಂದ್ರ ಬಜೆಟ್ ಮಂಡನೆ

    Live Tv
    [brid partner=56869869 player=32851 video=960834 autoplay=true]

  • ಸ್ಟೋನ್ ತೆಗೆಯುವ ನೆಪದಲ್ಲಿ ರೋಗಿಯ ಕಿಡ್ನಿಯನ್ನೇ ಎಗರಿಸಿದ್ರು

    ಸ್ಟೋನ್ ತೆಗೆಯುವ ನೆಪದಲ್ಲಿ ರೋಗಿಯ ಕಿಡ್ನಿಯನ್ನೇ ಎಗರಿಸಿದ್ರು

    ಲಕ್ನೋ: ಕಿಡ್ನಿ ಸ್ಟೋನ್ (Stone) ಆಗಿದೆ ಎಂದು ವ್ಯಕ್ತಿಯೊಬ್ಬನಿಗೆ ಶಸ್ತ್ರಚಿಕಿತ್ಸೆ ಮಾಡಿದ್ದ ಖಾಸಗಿ ಆಸ್ಪತ್ರೆಯ (Hospital) ವೈದ್ಯರು ಒಂದು ಕಿಡ್ನಿಯನ್ನೇ (Kidney) ತೆಗೆದ ಆಘಾತಕಾರಿ ಘಟನೆ ಉತ್ತರಪ್ರದೇಶದ ಅಲಿಗಢದಲ್ಲಿ ನಡೆದಿದೆ.

    ಕಸ್ಗಂಜ್ ಜಿಲ್ಲೆಯ ನಾಗ್ಲಾ ತಾಲ್ ಗ್ರಾಮದ ನಿವಾಸಿ ಸುರೇಶ್ ಚಂದ್ರ(53) ಎಂಬಾತ ಹೋಮ್ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ. ಈತ ಏ.14ರಂದು ಅಲ್ಟ್ರಾಸೌಂಡ್ ಮಾಡಿಸಿಕೊಂಡಿದ್ದ. ಈ ವೇಳೆ ಮೂತ್ರಪಿಂಡದಲ್ಲಿ ಕಲ್ಲುಗಳಿರುವುದು ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಯ ಸಿಬ್ಬಂದಿ ಆಪರೇಷನ್ (Surgery) ಮಾಡಿಸಿಕೊಳ್ಳಲು ತಿಳಿಸಿದ್ದಾರೆ.

    ವೈದ್ಯರ ಸೂಚನೆ ಮೇರೆಗೆ ಏ.14ರಂದು ಆತ ಖಾಸಗಿ ಆಸ್ಪತ್ರೆಯೊಂದರಲ್ಲಿ ದಾಖಲಾಗಿ ಶಸ್ತ್ರ ಚಿಕಿತ್ಸೆ ಮಾಡಿಸಿಕೊಡಿದ್ದ. ಅದಾದ ಬಳಿಕ ವೈದ್ಯರು ಕಲ್ಲುಗಳನ್ನು ತೆಗೆಯಲಾಗಿದೆ ಎಂದು ಕೆಲವು ಔಷಧಿಗಳನ್ನು ನೀಡಿದರು. ಸುರೇಶ್ ಏ.17ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದ.

    ಆದರೆ ಅದಾದ ಕೆಲ ತಿಂಗಳ ಬಳಿಕ ಸುರೇಶ್‍ಗೆ ಹೊಟ್ಟೆಯ ಕೆಳಭಾಗದಲ್ಲಿ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಮತ್ತೊಮ್ಮೆ ಅಲ್ಟ್ರಾಸೌಂಡ್ ಮಾಡಿಸಿಕೊಂಡಿದ್ದಾನೆ. ಆ ವೇಳೆ ಒಂದು ಕಿಡ್ನಿಯೇ ನಾಪತ್ತೆ ಆಗಿರುವುದು ಬೆಳಕಿಗೆ ಬಂದಿದೆ. ಇದನ್ನೂ ಓದಿ: ಡೇರ್ ಡೆವಿಲ್ ಸ್ಟಂಟ್ ಮಾಡಿದ ನಟ ಪವನ್ – ಕೇಸ್ ದಾಖಲಿಸಿದ ಪೊಲೀಸರು

    ಘಟನೆಯ ಕುರಿತು ಸಿಎಂಒಗೆ ದೂರು ನೀಡಿದ್ದು, ತನಿಖೆ ಆರಂಭಿಸಿದೆ. ಆದರೆ ಈ ಬಗ್ಗೆ ಆಸ್ಪತ್ರೆಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಇದನ್ನೂ ಓದಿ: ಟಿಪ್ಪು ಪ್ರತಿಮೆ ಪ್ರತಿಷ್ಠಾಪಿಸಿ ಊದುಬತ್ತಿ ಹಚ್ಚಿ, ಆರತಿ ಬೆಳಗ್ತಾರಾ ನೋಡೋಣ – ಪ್ರಹ್ಲಾದ್‌ ಜೋಶಿ ಟಾಂಗ್‌

    Live Tv
    [brid partner=56869869 player=32851 video=960834 autoplay=true]

  • ಮಕ್ಕಳ ಎದುರೇ ತಂದೆ ತಲೆ ಮೇಲೆ ಕಲ್ಲು ಎತ್ತಿ ಹಾಕಿ, ಮಚ್ಚಿನಿಂದ ಕೊಚ್ಚಿದ ಪಾಪಿಗಳು

    ಮಕ್ಕಳ ಎದುರೇ ತಂದೆ ತಲೆ ಮೇಲೆ ಕಲ್ಲು ಎತ್ತಿ ಹಾಕಿ, ಮಚ್ಚಿನಿಂದ ಕೊಚ್ಚಿದ ಪಾಪಿಗಳು

    ರಾಯಚೂರು: ಕ್ಷುಲ್ಲಕ ಕಾರಣಕ್ಕೆ ಹಾಡುಹಗಲೇ ಮಕ್ಕಳ ಮುಂದೆ ತಂದೆಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ಅಮಾನುಷ ಘಟನೆ ನಗರದ ಬೇರೂನ್ ಕಿಲ್ಲಾದಲ್ಲಿ ನಡೆದಿದೆ.

    ನಗರದ ಪರಕೋಟ ಪ್ರದೇಶದ 30 ವರ್ಷದ ಮಹಿಬೂಬ್ ಅಲಿ ಕೊಲೆಯಾದ ವ್ಯಕ್ತಿ. ನಗರದ ಡಿಡಿಪಿಐ ಕಚೇರಿ ಹಿಂಭಾಗದ ಟೆಲಿಫೋನ್ ಎಕ್ಸಜೆಂಜ್ ಕಚೇರಿ ಬಳಿ ಘಟನೆ ನಡೆದಿದೆ. ಮಕ್ಕಳನ್ನ ಶಾಲೆಯಿಂದ ಕರೆದುಕೊಂಡು ಬರುತ್ತಿದ್ದ ವೇಳೆ ಮಕ್ಕಳ ಮುಂದೆಯೇ ತಂದೆಯನ್ನ ಕೊಲೆ ಮಾಡಲಾಗಿದೆ. ಇದನ್ನೂ ಓದಿ: ಯಾರಿಗೂ ಭಯಪಡದೆ ಸಂವಿಧಾನದ ಪಾಲಕರಾಗಬೇಕು: ದ್ರೌಪದಿ ಮುರ್ಮುಗೆ ಅಭಿನಂದಿಸಿದ ಯಶವಂತ್ ಸಿನ್ಹಾ 

    ಕೊಲೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಇಬ್ಬರು ಯುವಕರು ಮಹಿಬೂಬ್ ಅಲಿಯನ್ನು ನಡುರಸ್ತೆಯಲ್ಲೇ ಕೊಲೆ ಮಾಡಿ ಪರಾರಿಯಾಗಿದ್ದಾರೆ. ವಿಷಯ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಬಂದಿದ್ದು, ಪರಿಶೀಲನೆ ನಡೆಸಿದ್ದಾರೆ.

    POLICE

    ಸದರ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಇದನ್ನೂ ಓದಿ: ಮಿಸೆಸ್ ಇಂಡಿಯಾ ಆದ ಚಂದನ್ ರಾಣಿ ನಿವೇದಿತಾ ಗೌಡ 

    Live Tv
    [brid partner=56869869 player=32851 video=960834 autoplay=true]

  • ಕಿಡ್ನಿ ಸ್ಟೋನ್‍ನಿಂದ ಬಳಲುತ್ತಿದ್ದೀರಾ..?- ಹಾಗಾದರೆ ಇಲ್ಲಿದೆ ಮನೆ ಮದ್ದು

    ಕಿಡ್ನಿ ಸ್ಟೋನ್‍ನಿಂದ ಬಳಲುತ್ತಿದ್ದೀರಾ..?- ಹಾಗಾದರೆ ಇಲ್ಲಿದೆ ಮನೆ ಮದ್ದು

    ಧುನಿಕ ಜೀವನ ಶೈಲಿ ಹಾಗೂ ಪ್ರತಿನಿತ್ಯ ಸೇವಿಸುವ ಆಹಾರದಿಂದಾಗಿ ಯುವ ಜನಾಂಗದವರಲ್ಲೂ ಕಿಡ್ನಿ ಸ್ಟೋನ್ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ. ಈ ಕಿಡ್ನಿ ಸ್ಟೋನ್ ಎಂದರೆ ಯಾವಾಗ ಮೂತ್ರದಲ್ಲಿ ಅಧಿಕವಾಗಿ ಲವಣಾಂಶಗಳು ಶೇಖರಣೆ ಆಗುತ್ತದೆಯೋ ಅದು ಸ್ಫಟಿಕ ರೂಪಕ್ಕೆ ಮಾರ್ಪಟ್ಟು ಘನ ವಸ್ತುವಾಗಿ ರೂಪಗೊಳ್ಳುವುದಾಗಿದೆ.

    ಮೂತ್ರದಲ್ಲಿನ ಅಂಶಗಳಿಂದ ರೂಪುಗೊಳ್ಳುವ ಈ ಕಲ್ಲು ಒಂದು ಮರಳಿನ ಕಣದಿಂದ ಹರಳುಗಳ ಗಾತ್ರದವರೆಗೂ ಬೆಳೆಯುತ್ತವೆ. ಈ ಕಲ್ಲುಗಳು ಮೂತ್ರನಾಳದಲ್ಲಿ ಸೇರಿಕೊಂಡು ಮೂತ್ರ ಹರಿವನ್ನು ನಿರ್ಬಂಧಿಸಿದರೆ ಆಗ ನೋವು ಕಾಣಿಸಿಕೊಳ್ಳುತ್ತದೆ. ಇದನ್ನು ಹೋಗಲಾಡಿಸಲು ವೈದ್ಯರ ಸಲಹೆ ಜೊತೆಗೆ ಕೆಲವು ಮನೆ ಮದ್ದನ್ನು ಅನುಸರಿಸಿ.

    ತುಳಸಿ: ತುಳಸಿಯಲ್ಲಿರುವ ಮೂತ್ರವರ್ಧಕ ಗುಣ ಮತ್ತು ಕಲ್ಮಶ ನಿವಾರಕಗಳ ಗುಣಗಳು ಮೂತ್ರಪಿಂಡದಲ್ಲಿನ ಕಲ್ಲುಗಳನ್ನು ಹೊರಹಾಕಲು ನೆರವಾಗುತ್ತದೆ. ಅಷ್ಟೇ ಅಲ್ಲದೇ ತುಳಸಿ ಎಲೆಗಳ ರಸದಲ್ಲಿ ಅಸೆಟಿಕ್ ಆಮ್ಲವಿದ್ದು, ಈ ಆಮ್ಲದಿಂದಾಗಿ ಮೂತ್ರಪಿಂಡದ ಕಲ್ಲುಗಳು ಕರಗುತ್ತವೆ.

    ಕಲ್ಲಂಗಡಿ ಬೀಜ: ನಿಮ್ಮ ಕಿಡ್ನಿ ಸ್ಟೋನ್ ಅನ್ನು ಹೊರಹಾಕಲು ಕಲ್ಲಂಗಡಿ ಮತ್ತು ಅದರ ಬೀಜ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುತ್ತದೆ. ಒಂದು ಲೀಟರ್‍ನಷ್ಟು ನೀರನ್ನು ಕುದಿಸಿಕೊಳ್ಳಿ ಹಾಗೂ ಬೀಜವನ್ನು ಪೇಸ್ಟ್ ರೂಪದಲ್ಲಿ ತಯಾರಿಸಿಕೊಂಡು ಈ ನೀರಿಗೆ ಮಿಶ್ರ ಮಾಡಿ. ಅರ್ಧ ಗಂಟೆಗಳ ಕಾಲ ಈ ನೀರನ್ನು ಕುದಿಸಿ ನಂತರ ತಣಿಸಿ ಕುಡಿಯುವರಿಂದ ಕಿಡ್ನಿ ಸ್ಟೋನ್ ನಿವಾರಣೆಯಾಗಿ ನೋವಿನಿಂದಲೂ ಮುಕ್ತಿ ಪಡೆಯುತ್ತಿರಿ.

    ಬಾಳೆ ದಿಂಡು ಜ್ಯೂಸ್: ಕಿಡ್ನಿ ಸ್ಟೋನ್ ಸಮಸ್ಯೆಯಿಂದ ಬಳಲುತ್ತಿರುವವರು ನಿತ್ಯವೂ ಬಾಳೆ ದಿಂಡು ಜ್ಯೂಸ್ ಅನ್ನು ಕುಡಿಯಿರಿ. ಹಾಗೂ ಇದರ ಜೊತೆಗೆ ದೇಹಕ್ಕೆ ನಿಯಮಿತಕ್ಕಿಂತಲೂ ಅಧಿಕವಾಗಿ ನೀರನ್ನು ಕುಡಿಯಿರಿ. ಇದರಿಂದಾಗಿ ಕಿಡ್ನಿ ಸ್ಟೋನ್ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು. ಇದನ್ನೂ ಓದಿ: ಬೇಸಿಗೆಯಲ್ಲಿ ಕಾಮಕಸ್ತೂರಿ ಬೀಜ ಬಲು ಆರೋಗ್ಯಕಾರಿ

    ಆ್ಯಪಲ್ ಸಿಡರ್ ವಿನೆಗರ್: ಒಂದು ಅಥವಾ ಎರಡು ಟೇಬಲ್ ಸ್ಪೂನ್‍ಗಳಷ್ಟು ಆ್ಯಪಲ್ ಸಿಡರ್ ವಿನೆಗರ್‍ಗೆ ಒಂದಿಷ್ಟು ನೀರನ್ನು ಬೆರೆಸಿ ಅದನ್ನು ಪ್ರತಿನಿತ್ಯ ಕುಡಿಯಿರಿ. ಇದರಿಂದಾಗಿ ಮೂತ್ರಪಿಂಡದಲ್ಲಿ ಆಗಿರುವ ಕಲ್ಲನ್ನು ಕರಗಿಸಲು ಸಹಾಯವಾಗುತ್ತದೆ. ಇದನ್ನೂ ಓದಿ: ನೋಡಲು ಪುಟ್ಟದಾಗಿರುವ ನೆಲನೆಲ್ಲಿಯಿಂದ ಬೆಟ್ಟದಷ್ಟು ಪ್ರಯೋಜನ

    Live Tv

  • ಸಂಗೊಳ್ಳಿ ರಾಯಣ್ಣ ಮೂರ್ತಿಗೆ ಕಲ್ಲೆಸೆದ ಕಿಡಿಗೇಡಿಗಳು

    ಸಂಗೊಳ್ಳಿ ರಾಯಣ್ಣ ಮೂರ್ತಿಗೆ ಕಲ್ಲೆಸೆದ ಕಿಡಿಗೇಡಿಗಳು

    ಬೆಳಗಾವಿ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿಗೆ ಕಿಡಿಗೇಡಿಗಳು ಕಲ್ಲು ತೂರಿರುವ ಘಟನೆ ಬೆಳಗಾವಿ ತಾಲೂಕಿನ ಬೆಂಡಿಗೇರಿ ಗ್ರಾಮದಲ್ಲಿ ನಡೆದಿದೆ.

    ತಾಲೂಕಿನ ಬೆಂಡಿಗೇರಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ರಾಯಣ್ಣನ ಮೂರ್ತಿಗೆ ಕಲ್ಲು ತೂರಿ, ಸ್ಥಳದಿಂದ ಕಿಡಿಗೇಡಿಗಳು ಪರಾರಿಯಾಗಿದ್ದಾರೆ. ಘಟನೆಯಲ್ಲಿ ರಾಯಣ್ಣನ ಮೂರ್ತಿಯ ಕಾಲಿನ ಭಾಗದಲ್ಲಿ ಹಾನಿಯಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ಜಮಾಯಿಸಿದ ರಾಯಣ್ಣ ಅಭಿಮಾನಿಗಳು ತೀವ್ರ ಆಕ್ರೋಶವನ್ನು ಹೊರ ಹಾಕಿದ್ದಾರೆ. ಇದನ್ನೂ ಓದಿ: ಪಾಪದ ಕೊಡ ನಮ್ಮದಾ ನಿಮ್ಮದಾ?: ಅಶೋಕ್‍ಗೆ ತಿರುಗೇಟು ಕೊಟ್ಟ ಸಿದ್ದು

    ಬೆಂಡಿಗೇರಿ ಗ್ರಾಮಕ್ಕೆ ಹಿರೇಬಾಗೇವಾಡಿ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ರಾಯಣ್ಣನ ಮೂರ್ತಿಗೆ ಕಲ್ಲು ತೂರಿರುವ ದುಷ್ಕರ್ಮಿಗಳನ್ನು ತಕ್ಷಣವೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಈ ಘಟನೆಯಿಂದ ಬೆಂಡಿಗೇರಿ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಗ್ರಾಮದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ನಿಯೋಜಿಸಲಾಗಿದೆ. ಇದನ್ನೂ ಓದಿ: ಆಜಾನ್‌ಗೆ ವಿರೋಧ ರಾಜ್ಯಾದ್ಯಂತ ಜೂ. 1ರಿಂದ ಎರಡನೇ ಸುತ್ತಿನ ಹೋರಾಟ: ಪ್ರಮೋದ್ ಮುತಾಲಿಕ್

  • 56 ವರ್ಷದ ವ್ಯಕ್ತಿಯ ಮೂತ್ರಪಿಂಡದಿಂದ 206 ಕಲ್ಲುಗಳನ್ನು ಹೊರ ತೆಗೆದ ವೈದ್ಯರು

    56 ವರ್ಷದ ವ್ಯಕ್ತಿಯ ಮೂತ್ರಪಿಂಡದಿಂದ 206 ಕಲ್ಲುಗಳನ್ನು ಹೊರ ತೆಗೆದ ವೈದ್ಯರು

    ಹೈದರಾಬಾದ್: ಶಸ್ತ್ರ ಚಿಕಿತ್ಸೆ ಮೂಲಕ ರೋಗಿಯೊಬ್ಬರ ಮೂತ್ರಪಿಂಡದಲ್ಲಿದ್ದ 206 ಕಲ್ಲುಗಳನ್ನು ಒಂದು ಗಂಟೆಯಲ್ಲಿಯೇ ತೆಲಂಗಾಣದ ಹೈದರಾಬಾದ್‍ನಲ್ಲಿರುವ ಅವೇರ್ ಗ್ಲೆನಿಗಲ್ಸ್ ಗ್ಲೋಬಲ್ ಆಸ್ಪತ್ರೆಯ ವೈದ್ಯರು ತೆಗೆದು ಹಾಕಿದ್ದಾರೆ.

    ಕಳೆದ ಆರು ತಿಂಗಳಿನಿಂದ ಎಡ ಭಾಗದ ಸೊಂಟದ ನೋವಿನಿಂದ ಬಳಲುತ್ತಿದ್ದ ನಲ್ಗೊಂಡ ನಿವಾಸಿ 56 ವರ್ಷದ ವೀರಮಲ್ಲ ರಾಮಲಕ್ಷ್ಮಯ್ಯ ಅವರಿಗೆ ಬೇಸಿಗೆಯಲ್ಲಿ ತೀವ್ರ ನೋವು ಕಾಣಿಸಿಕೊಂಡಿತ್ತು. ಇದರಿಂದ ಏಪ್ರಿಲ್ 22 ರಂದು ವೀರಮಲ್ಲ ಅವರು ಅವೇರ್ ಗ್ಲೆನೆಗಲ್ಸ್ ಗ್ಲೋಬಲ್ ಆಸ್ಪತ್ರೆಯ ವೈದ್ಯರನ್ನು ಸಂಪರ್ಕಿಸಿದ್ದಾರೆ. ನಂತರ ಕೆಲವು ಔಷಧಿಗಳನ್ನು ತೆಗೆದುಕೊಳ್ಳುವಂತೆ ವೈದ್ಯರು ಸಲಹೆ ನೀಡಿದರು. ಅದರಿಂದ ಅಲ್ಪಾವಧಿಯ ಪರಿಹಾರ ಮಾತ್ರ ದೊರೆಯಿತು. ಆದರೆ ದಿನದಿಂದ ದಿನೇ ನೋವು ವಿಪರೀತಗೊಂಡಿತು. ಇದನ್ನೂ ಓದಿ: ಚಾರ್ ಧಾಮ್ ಯಾತ್ರೆ – ಇಲ್ಲಿ ವರೆಗೆ 46 ಯಾತ್ರಿಕರು ಹೃದಯಾಘಾತದಿಂದ ಸಾವು

    ನಂತರ ಅವೇರ್ ಗ್ಲೆನೆಗಲ್ಸ್ ಗ್ಲೋಬಲ್ ಆಸ್ಪತ್ರೆಯ ಹಿರಿಯ ಸಮಾಲೋಚಕ ಮೂತ್ರಶಾಸ್ತ್ರಜ್ಞ ಡಾ.ಪೂಲಾ ನವೀನ್ ಕುಮಾರ್ ಅವರು, ಅಲ್ಟ್ರಾಸೌಂಡ್ ಸ್ಕ್ಯಾನ್ ಮಾಡಿದಾಗ ರೋಗಿಯ ಎಡ ಮೂತ್ರಪಿಂಡದಲ್ಲಿ ಕಲ್ಲುಗಳಿರುವುದು ಕಂಡು ಬಂದಿದೆ. ಕೊನೆಗೆ ಶಸ್ತ್ರಚಿಕಿತ್ಸೆ ಮಾಡಲು ನಿರ್ಧರಿಸಿದರು.

    ಬಳಿಕ ಒಂದು ಗಂಟೆಯ ಕಾಲ ಶಸ್ತ್ರ ಚಿಕಿತ್ಸೆ ನಡೆಸಿ 206 ಕಲ್ಲುಗಳನ್ನು ಹೊರಗೆ ತೆಗೆದುಹಾಕಿದ್ದಾರೆ. ನಂತರ ರೋಗಿಯ ಆರೋಗ್ಯದಲ್ಲಿ ಚೇತರಿಕೆ ಕಂಡ ಹಿನ್ನೆಲೆ ಎರಡೇ ದಿನಕ್ಕೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಇದನ್ನೂ ಓದಿ: ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿರುವುದು ಹೆಮ್ಮೆ ಎನಿಸಿತು: ನಿಖತ್ ಜರೀನ್

    ಬೇಸಿಗೆಯಲ್ಲಿ ಹೆಚ್ಚು ಬಿಸಿಲಿರೋ ಕಾರಣ ಅನೇಕ ಬಹುತೇಕರು ನಿರ್ಜಲೀಕರಣದಿಂದ ಬಳಲುತ್ತಿರುತ್ತಾರೆ. ಇದರಿಂದ ಮೂತ್ರಪಿಂಡದಲ್ಲಿ ಕಲ್ಲು ಸೇರಿಕೊಳ್ಳುವ ಸಾಧ್ಯತೆಯಿರುತ್ತದೆ. ಹೀಗಾಗಿ ಮುನ್ನೆಚ್ಚರಿಕೆಯಿಂದ ಸಾಧ್ಯವಾದಷ್ಟು ಹೆಚ್ಚು ನೀರು ಕುಡಿಯುವುದು ಮತ್ತು ಎಳನೀರು ಕುಡಿಯುವುದು ಉತ್ತಮ ಎಂದು ವೈದ್ಯರು ಸಲಹೆ ನೀಡಿದ್ದಾರೆ.

  • ಮಸೀದಿ ಹೊರಗೆ ನಿಂತಿದ್ದ ಭದ್ರತಾ ಪಡೆಗಳ ಮೇಲೆ ದುಷ್ಕರ್ಮಿಗಳಿಂದ ಕಲ್ಲು ತೂರಾಟ

    ಮಸೀದಿ ಹೊರಗೆ ನಿಂತಿದ್ದ ಭದ್ರತಾ ಪಡೆಗಳ ಮೇಲೆ ದುಷ್ಕರ್ಮಿಗಳಿಂದ ಕಲ್ಲು ತೂರಾಟ

    ಶ್ರೀನಗರ: ಇಂದು ದೇಶದೆಲ್ಲೆಡೆ ಮುಸ್ಲಿಮರು ರಂಜಾನ್ ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಎಲ್ಲ ಮಸೀದಿಗಳಲ್ಲಿ ಜನರು ತುಂಬಿತುಳುಕುತ್ತಿದ್ದಾರೆ. ಈ ನಡುವೆ ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಮಸೀದಿ ಬಳಿ ಇದ್ದ ಭದ್ರತಾ ಪಡೆಗಳ ಮೇಲೆ ಕಿಡಿಗೇಡಿಗಳು ಕಲ್ಲುತೂರಾಟ ನಡೆಸಿದ್ದಾರೆ.

    ಮುಂಜಾನೆ ಈದ್-ಉಲ್-ಫಿತರ್ ಪ್ರಾರ್ಥನೆಯ ಸಮಯದಲ್ಲಿ ಕೆಲವು ಕಿಡಿಗೇಡಿಗಳು ಕಾಶ್ಮೀರವನ್ನು ಮುಕ್ತಗೊಳಿಸುವಂತೆ ಒತ್ತಾಯಿಸಿ ಘೋಷಣೆ ಕೂಗಿದ್ದಾರೆ. ಈ ವೇಳೆ ಮಧ್ಯಪ್ರವೇಶಿಸಿದ ಭದ್ರತಾ ಪಡೆಗಳ ಮೇಲೂ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಇದೀಗ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಇದನ್ನೂ ಓದಿ: ಅಮಿತ್ ಶಾ ಭೇಟಿ – ಶೀಘ್ರವೇ ಹೊರಟ್ಟಿ ಬಿಜೆಪಿಗೆ ಸೇರ್ಪಡೆ

    ಇದೀಗ ಪರಿಸ್ಥಿತಿ ಹತೋಟಿಗೆ ಬಂದಿದ್ದು, ಮುಂಜಾಗ್ರತವಾಗಿ ಸುತ್ತಮುತ್ತಲಿನ ಪ್ರದೇಶದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಘಟನೆ ಬಗ್ಗೆ ಕೆಲವರು ತಪ್ಪು ತಿಳಿದುಕೊಂಡಿದ್ದರು. ಆದರೆ ಇದೊಂದು ಸಣ್ಣ ಘರ್ಷಣೆಯಷ್ಟೇ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: 2024 ಮೋದಿ ಒನ್ಸ್‌ಮೋರ್‌ – ಜರ್ಮನಿ ಭಾರತೀಯರಿಂದ ಘೋಷಣೆ