Tag: ಕಳ್ಳಾಭಟ್ಟಿ ದುರಂತ

  • 73 ಜನರ ಬಲಿ ತೆಗೆದುಕೊಂಡ ಬಿಹಾರ ಕಳ್ಳಭಟ್ಟಿ ಪ್ರಕರಣದ ಮಾಸ್ಟರ್ ಮೈಂಡ್ ಕೊನೆಗೂ ಪೊಲೀಸ್ ಬಲೆಗೆ

    73 ಜನರ ಬಲಿ ತೆಗೆದುಕೊಂಡ ಬಿಹಾರ ಕಳ್ಳಭಟ್ಟಿ ಪ್ರಕರಣದ ಮಾಸ್ಟರ್ ಮೈಂಡ್ ಕೊನೆಗೂ ಪೊಲೀಸ್ ಬಲೆಗೆ

    ಪಾಟ್ನಾ: ಬಿಹಾರದ (Bihar) ಸರನ್ (Saran) ಜಿಲ್ಲೆಯಲ್ಲಿ 73 ಜನರ ಸಾವಿಗೆ ಕಾರಣವಾದ ಕಳ್ಳಭಟ್ಟಿ ದುರಂತ (Bihar Hooch Tragedy) ಪ್ರಕರಣದ ಮಾಸ್ಟರ್ ಮೈಂಡ್ (Mastermind) ಮೋಸ್ಟ್ ವಾಂಟೆಡ್ ವ್ಯಕ್ತಿಯನ್ನು ದೆಹಲಿ ಪೊಲೀಸರ (Delhi Police) ತಂಡ ಕೊನೆಗೂ ಬಂಧಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

    ಆರೋಪಿಯನ್ನು ಸರನ್ ಜಿಲ್ಲೆಯ ದೋಯಿಲಾ ಗ್ರಾಮದ ನಿವಾಸಿ ರಾಮ್ ಬಾಬು ಮಹತೋ ಎಂದು ಗುರುತಿಸಲಾಗಿದೆ. ಆತ ದೆಹಲಿಯಲ್ಲಿ ಅಡಗಿರುವ ಶಂಕೆಯ ಮೇರೆಗೆ ಅಪರಾಧ ವಿಭಾಗ ಅಂತರ್ ರಾಜ್ಯ ಸೆಲ್‌ಗೆ ಮಾಹಿತಿ ನೀಡಿತ್ತು ಎಂದು ವಿಶೇಷ ಪೊಲೀಸ್ ಕಮಿಷನರ್ ರವೀಂದ್ರ ಸಿಂಗ್ ಯಾದವ್ ತಿಳಿಸಿದ್ದಾರೆ.

    ತಾಂತ್ರಿಕ ಕಣ್ಗಾವಲು ಮತ್ತು ನಿರ್ದಿಷ್ಟ ಒಳಹರಿವಿನ ಆಧಾರದ ಮೇಲೆ ಬಿಹಾರ ಕಳ್ಳಭಟ್ಟಿ ದುರಂತ ಪ್ರಕರಣದ ಮಾಸ್ಟರ್ ಮೈಂಡ್‌ನನ್ನು ದ್ವಾರಕಾದಲ್ಲಿ ಬಂಧಿಸಲಾಗಿದೆ. ಆರೋಪಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ. ಆರೋಪಿಯ ಬಂಧನದ ಬಗ್ಗೆ ಮುಂದಿನ ಕ್ರಮಕ್ಕಾಗಿ ಬಿಹಾರ ಪೊಲೀಸರಿಗೆ ಮಾಹಿತಿಯನ್ನು ನೀಡಲಾಗಿದೆ ಎಂದು ಯಾದವ್ ಹೇಳಿದ್ದಾರೆ. ಇದನ್ನೂ ಓದಿ: ಮದುವೆಯಾಗಲು ಹೆಣ್ಣು ಸಿಗಲ್ಲವೆಂದು ಸ್ಮಶಾನದಲ್ಲೇ ಬೆಂಕಿ ಹಚ್ಚಿಕೊಂಡ ಯುವಕ!

    spurious_liquor

    ಬಿಹಾರದಲ್ಲಿ ಮದ್ಯ ನಿಷೇಧವಿರುವ ಕಾರಣ ಆರೋಪಿಗಳು ಬೇಗನೆ ಹಾಗೂ ಸುಲಭವಾಗಿ ಹಣ ಗಳಿಸುವ ಆಸೆಯಿಂದ ಕಳ್ಳಭಟ್ಟಿ ತಯಾರಿಸಿ ಮಾರಾಟ ಮಾಡಲು ಪ್ರಾರಂಭಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಅಮೆರಿಕಗೆ ಹೋಗಬೇಕಿದ್ದ ಕೊರಿಯರ್‌ನಲ್ಲಿತ್ತು 4 ಮಾನವನ ತಲೆಬುರುಡೆ

    Live Tv
    [brid partner=56869869 player=32851 video=960834 autoplay=true]

  • ಬಿಹಾರದ ಕಳ್ಳಾಭಟ್ಟಿ ದುರಂತ – 70ಕ್ಕೇರಿದ ಸಾವಿನ ಸಂಖ್ಯೆ, ಕಳ್ಳಸಾಗಾಟ ಮಾಡುತ್ತಿದ್ದವನ ಬಂಧನ

    ಬಿಹಾರದ ಕಳ್ಳಾಭಟ್ಟಿ ದುರಂತ – 70ಕ್ಕೇರಿದ ಸಾವಿನ ಸಂಖ್ಯೆ, ಕಳ್ಳಸಾಗಾಟ ಮಾಡುತ್ತಿದ್ದವನ ಬಂಧನ

    ಪಾಟ್ನಾ: ಬಿಹಾರದಲ್ಲಿ (Bihar) ಕಳೆದೊಂದು ವಾರದಿಂದ ಮದ್ಯ (Liquor) ಸೇವಿಸಿ ಸಾವನ್ನಪ್ಪಿದವರ ಸಂಖ್ಯೆ 70ಕ್ಕೇರಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ವಿಶೇಷ ತನಿಖಾ ತಂಡ (SIT) ಸರನ್ ಜಿಲ್ಲೆಯಲ್ಲಿ (Saran) ಕಳ್ಳಾಭಟ್ಟಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದೆ. ಆತನಿಂದ 2.17 ಲಕ್ಷ ರೂ. ನಗದು ವಶಪಡಿಸಿಕೊಳ್ಳಲಾಗಿದೆ.

    ಆರೋಪಿಯನ್ನು ಅಖಿಲೇಶ್ ಕುಮಾರ್ ಯಾದವ್ ಅಲಿಯಾಸ್ ಅಖಿಲೇಶ್ ರೈ ಎಂದು ಗುರುತಿಸಲಾಗಿದೆ. ಕಳ್ಳಾಭಟ್ಟಿ ಸೇವಿಸಿ ಜನರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಶ್ರಖ್ ಹಾಗೂ ಇಶುಪುರ್ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ 2 ಎಫ್‌ಐಆರ್‌ಗಳಲ್ಲಿ ಆರೋಪಿಗಳ ಹೆಸರು ಇಲ್ಲವಾದರೂ ಎಸ್‌ಐಟಿ ತನಿಖೆಯ ವೇಳೆ ಅಖಿಲೇಶ್ ಭಾಗಿಯಾಗಿರುವುದು ಖಚಿತವಾಗಿದೆ. ಇದನ್ನೂ ಓದಿ: 16ರ ಬಾಲಕಿ ಮೇಲೆ 8 ಕಾಮುಕರಿಂದ ಸತತ 12 ಗಂಟೆ ಗ್ಯಾಂಗ್ ರೇಪ್

    ಆರೋಪಿಯ ವಿರುದ್ಧ ಈ ಹಿಂದೆಯೂ ಅಬಕಾರಿ ಕಾಯ್ದೆಯಡಿ 4 ಪ್ರಕರಣಗಳು ದಾಖಲಾಗಿವೆ. ಬಿಹಾರದ ಸರನ್‌ನಲ್ಲಿ ಕಳೆದ ಬುಧವಾರದಿಂದ ಇಲ್ಲಿಯವರೆಗೆ ಮದ್ಯ ಸೇವಿಸಿ 70 ಜನರು ಸಾವನ್ನಪ್ಪಿದ್ದಾರೆ.

    ಸರನ್‌ನಲ್ಲಿ ನಡೆದ ಕಳ್ಳಾಭಟ್ಟಿ ದುರಂತ (Bihar Hooch Tragedy) ರಾಷ್ಟ್ರೀಯ ಮಟ್ಟದಲ್ಲಿ ಬೆಳಕಿಗೆ ಬಂದಿದ್ದು, ಸರನ್ ಪೊಲೀಸರು ಅಕ್ರಮ ಮದ್ಯ ವ್ಯಾಪಾರ, ಸಾಗಣೆ, ಕಳ್ಳಸಾಗಣೆ ಹಾಗೂ ಅಕ್ರಮ ಮದ್ಯ ತಯಾರಿಕೆಯಲ್ಲಿ ತೊಡಗಿರುವ ಶಂಕಿತರನ್ನು ಪತ್ತೆ ಹಚ್ಚಲು ಹಾಗೂ ಬಂಧಿಸಲು ಕಾರ್ಯಾಚರಣೆ ಪ್ರಾರಂಭಿಸಿದ್ದಾರೆ. ಇದನ್ನೂ ಓದಿ: ದಟ್ಟ ಮಂಜಿನಿಂದ ಕಾಣದಂತಾದ ರಸ್ತೆ – ಸರಣಿ ಅಪಘಾತದಿಂದಾಗಿ 22 ವಾಹನಗಳು ಜಖಂ

    Live Tv
    [brid partner=56869869 player=32851 video=960834 autoplay=true]