Tag: ಕಶ್ಯಪ್

  • ಬಹುದಿನದ ಗೆಳೆಯನ ಕೈ ಹಿಡಿದ ಸೈನಾ ನೆಹ್ವಾಲ್

    ಬಹುದಿನದ ಗೆಳೆಯನ ಕೈ ಹಿಡಿದ ಸೈನಾ ನೆಹ್ವಾಲ್

    ಮುಂಬೈ: ಭಾರತದ ಸ್ಟಾರ್ ಬ್ಯಾಡ್ಮಿಂಟನ್ ತಾರೆಯರಾದ ಸೈನಾ ನೆಹ್ವಾಲ್ ಹಾಗೂ ಪರುಪಳ್ಳಿ ಕಶ್ಯಪ್ ವಿವಾಹ ಮುಂಬೈನಲ್ಲಿ ಶುಕ್ರವಾರ ನೆರವೇರಿದೆ. ಬಹುದಿನಗಳ ಗೆಳೆಯ ಕಶ್ಯಪ್ ರನ್ನು ಕೈ ಹಿಡಿದ ಸೈನಾ ತಮ್ಮ ಮದುವೆ ಫೋಟೋ ಟ್ವೀಟ್ ಮಾಡಿದ್ದಾರೆ.

    ಕೆಲ ದಿನಗಳ ಹಿಂದೆಯಷ್ಟೇ ತಮ್ಮ ಮದುವೆಯ ಬಗ್ಗೆ ಮಾಹಿತಿ ನೀಡಿದ್ದ ಸೈನಾ ಅವರು ತಮ್ಮ ಟ್ವೀಟ್ ನಲ್ಲಿ ‘ನನ್ನ ಜೀವನದ ಅತ್ಯುತ್ತಮ ಜೋಡಿ’ ಎಂದು ಬರೆದುಕೊಂಡು ಫೋಟೋ ಹಂಚಿಕೊಂಡಿದ್ದಾರೆ.

    ಈ ಹಿಂದೆ ಸೈನಾ, ಕಶ್ಯಪ್ ಮದುವೆ ಹೈದರಾಬಾದ್‍ನಲ್ಲಿ ನಡೆಯಲಿದೆ ಎಂದು ವರದಿಯಾಗಿತ್ತು. ಆದರೆ ಮುಂಬೈನಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ಸೈನಾ, ಕಶ್ಯಪ್ ಕೈಹಿಡಿದಿದ್ದು, ಸಮಾರಂಭದಲ್ಲಿ ಆಪ್ತ ವಲಯದ ಸ್ನೇಹಿತರು ಸೇರಿದಂತೆ ಕುಟುಂಬ ಸದಸ್ಯರು ಮಾತ್ರ ಭಾಗವಹಿಸಿದ್ದರು.

    ಕಳೆದ ಮೂರ್ನಾಲ್ಕು ತಿಂಗಳಿಂದ ಬಾಲಿವುಡ್ ಸೇರಿದಂತೆ ಹಲವು ಕ್ಷೇತ್ರಗಳ ಸೆಲೆಬ್ರಿಟಿಗಳ ಅದ್ಧೂರಿ ಮದುವೆಗಳು ನಡೆಯುತ್ತಿದ್ದು, ಸದ್ಯ ಸೈನಾ ಕಶ್ಯಪ್ ಮದುವೆಯೂ ಇದೇ ಸಾಲಿಗೆ ಸೇರ್ಪಡೆಯಾಗಿದೆ. ಬಾಲಿವುಡ್ ದೀಪಿಕಾ ಪಡುಕೋಣೆ, ರಣವೀರ್ ಸಿಂಗ್ ಹಾಗೂ ಪ್ರಿಯಾಂಕಾ ಚೋಪ್ರಾ, ನಿಕ್ ಮತ್ತು ಹಾಸ್ಯ ನಟ ಕಪಿಲ್ ಶರ್ಮ ಸೇರಿದಂತೆ ಹಲವರ ಮದುವೆ ಸಮಾರಂಭಗಳು ಕೆಲ ದಿನಗಳ ಅಂತರದಲ್ಲೇ ನಡೆದಿದೆ.

    ಉಳಿದಂತೆ ಏಷ್ಯಾದ ಶ್ರೀಮಂತ ಉದ್ಯಮಿ ಮುಕೇಶ್ ಅಂಬಾನಿ ಅವರ ಪುತ್ರಿ ಇಶಾ ಅಂಬಾನಿ ಮದುವೆಯೂ ಅದ್ಧೂರಿಯಾಗಿ ನಡೆಯಿತು. ಅಲ್ಲದೇ ಸ್ಯಾಂಡಲ್‍ವುಡ್ ನಟ ದಿಗಂತ್ ಹಾಗೂ ಐಂದ್ರಿತಾ ರೇ ಕೂಡ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv