Tag: ಕಸದ ಲಾರಿ

  • ಬೆಂಗಳೂರು | ಮಹಿಳೆಯ ಭಯಾನಕ ಹತ್ಯೆ ಕೇಸ್‌ – ಅಸ್ಸಾಂ ಮೂಲದ ಲಿವ್‌ ಇನ್‌ ಗೆಳೆಯ ತಮ್ಸುದ್ದಿನ್ ಅರೆಸ್ಟ್‌

    ಬೆಂಗಳೂರು | ಮಹಿಳೆಯ ಭಯಾನಕ ಹತ್ಯೆ ಕೇಸ್‌ – ಅಸ್ಸಾಂ ಮೂಲದ ಲಿವ್‌ ಇನ್‌ ಗೆಳೆಯ ತಮ್ಸುದ್ದಿನ್ ಅರೆಸ್ಟ್‌

    – ಕೇಸ್‌ ದಾಖಲಾದ 20 ಗಂಟೆಯಲ್ಲೇ ಹಂತಕನ ಬಂಧನ

    ಬೆಂಗಳೂರು: ಮಹಿಳೆಯೊಬ್ಬರನ್ನ ಬರ್ಬರವಾಗಿ ಹತ್ಯೆಗೈದಿದ್ದ ಆರೋಪಿಯನ್ನ ಸಿ.ಕೆ ಅಚ್ಚುಕಟ್ಟು ಠಾಣೆ ಪೊಲೀಸರು (Chennamanakere Police Station) ಬಂಧಿಸಿದ್ದಾರೆ.

    ಅಸ್ಸಾಂ (Assam) ಮೂಲದ ತಮ್ಸುದ್ದಿನ್ ಬಂಧಿತ ಆರೋಪಿ. ಕೊಲೆಯಾದ ಮಹಿಳೆ ನಿವಾಸಿ ಪುಷ್ಪಾ @ ಆಶಾ ಮತ್ತು ತಮ್ಸುದ್ದೀನ್‌ ಲಿವ್‌ ಇನ್‌ ರಿಲೇಷನ್‌ನಲ್ಲಿದ್ದರು. ಇಬ್ಬರ ಭಿನ್ನಾಭಿಪ್ರಾಯ ಉಂಟಾಗಿತ್ತು, ಇದೇ ಕೊಲೆಗೆ ಕಾರಣ ಅನ್ನೋದು ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

    ಪ್ರಕರಣ ದಾಖಲಾದ 20 ಗಂಟೆ ಒಳಗಾಗಿಯೇ ಹಂತಕನನ್ನು ಇನ್ಸ್‌ಪೆಕ್ಟರ್‌ ಗಿರೀಶ್ ನಾಯ್ಕ್ ನೇತೃತ್ವದ ತಂಡ ಬಂಧಿಸಿದೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಹಂತಕನನ್ನ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಏನಿದು ಘಟನೆ?
    ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣಾ ವಾಪ್ತಿಯಲ್ಲಿ ಮಹಿಳೆಯೋಬ್ಬರನ್ನ ಬರ್ಬರವಾಗಿ ಹತ್ಯೆ ಮಾಡಿ, ಮೃತದೇಹವನ್ನ ಮೂಟೆ ಕಟ್ಟಿ ಕಸದ ಲಾರಿಯಲ್ಲಿಡಲಾಗಿತ್ತು. ತಡರಾತ್ರಿ ಆಟೋದಲ್ಲಿ ಬಂದ ಹಂತಕ ಬಿಬಿಎಂಪಿ ಲಾರಿಯಲ್ಲಿ ಶವದ ಮೂಟೆ ಎಸೆದು ಎಸ್ಕೇಪ್ ಆಗಿದ್ದ.

    ರಾತ್ರಿ 1.40ಕ್ಕೆ ಕಸ ಹಾಕಲು ಬಂದಿದ್ದ ಸ್ಥಳೀಯ ವ್ಯಕ್ತಿ ಚೀಲ ಬಿಚ್ಚಿದಾಗ ಮೊದಲಿಗೆ ಕೂದಲು ಕಂಡಿತ್ತು. ಬಳಿಕ ಮೃತದೇಹ ಇರೋದು ಗೊತ್ತಾಗಿ ತಕ್ಷಣ ಆ ವ್ಯಕ್ತಿ ಪೊಲೀಸರಿಗೆ ಮಾಹಿತಿ ನೀಡಿದ್ದ. ಪೊಲೀಸರು ಬಂದಾಗ ಮಹಿಳೆ ಕೊಲೆ ವಿಚಾರ ಬಯಲಾಗಿತ್ತು.

    ಇನ್ನು ಸ್ಥಳಕ್ಕೆ ಆಗಮಿಸಿದ ಸಿಕೆ ಅಚ್ಚುಕಟ್ಟು ಪೊಲೀಸರು ಸ್ಥಳೀಯ ನೀಡಿದ ದೂರಿನ ಆಧಾರದಲ್ಲಿ ಎಫ್‌ಐಆರ್ ದಾಖಲಿಸಿಕೊಂಡಿದ್ದರು. ಸಿಸಿಟಿವಿ ಆಧಾರದ ಮೇಲೆ ಕೊಲೆ ಹಂತಕರಿಗಾಗಿ 2 ತಂಡಗಳ ರಚಿಸಿ ಶೋಧ ನಡೆಸುತ್ತಿದ್ದರು. ಬಳಿಕ ಮಹಿಳೆಯ ಗುರುತು ಪತ್ತೆ ಮಾಡಿದ್ದರು. ಕೊಲೆಯಾದ ಮಹಿಳೆ ಹುಳಿಮಾವು ನಿವಾಸಿ ಪುಷ್ಪಾ @ ಆಶಾ ಎಂದು ಗುರುತಿಸಲಾಗಿತ್ತು. ಅಲ್ಲದೇ, ಶವ ಸಾಗಾಟಕ್ಕೆ ದ್ವಿಚಕ್ರ ವಾಹನ ಬಳಕೆ ಮಾಡಿರೋದು ಗೊತ್ತಾಗಿತ್ತು. ಈ ಹಿನ್ನೆಲೆಯಲ್ಲಿ ಆರೋಪಿಗೆ ಪತ್ತೆಗೆ ಪೊಲೀಸರು ಬಲೆ ಬೀಸಿದ್ದರು.

  • ಅನ್ಯಕೋಮಿನ ವ್ಯಕ್ತಿಯನ್ನ ಪ್ರೀತಿಸಿ ಮದ್ವೆಯಾಗಿದ್ದ ಮಹಿಳೆ – ಗಂಡನೇ ಕೊಲೆ ಮಾಡಿ ಹೆಣ ತಂದು ಬಿಸಾಡಿರುವ ಶಂಕೆ

    ಅನ್ಯಕೋಮಿನ ವ್ಯಕ್ತಿಯನ್ನ ಪ್ರೀತಿಸಿ ಮದ್ವೆಯಾಗಿದ್ದ ಮಹಿಳೆ – ಗಂಡನೇ ಕೊಲೆ ಮಾಡಿ ಹೆಣ ತಂದು ಬಿಸಾಡಿರುವ ಶಂಕೆ

    – ಬೆಂಗಳೂರಿನಲ್ಲಿ ಮಹಿಳೆಯ ಬರ್ಬರ ಹತ್ಯೆ ಕೇಸ್‌ಗೆ ಟ್ವಿಸ್ಟ್‌

    ಬೆಂಗಳೂರು: ಸಿಲಿಕಾನ್ ಸಿಟಿ ಮಂದಿ ಮತ್ತೆ ಬೆಚ್ಚಿ ಬಿದ್ದಿದ್ದಾರೆ. ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್‌ ಠಾಣಾ (Chennamanakere Police Station) ವಾಪ್ತಿಯಲ್ಲಿ ಮಹಿಳೆಯೋಬ್ಬರನ್ನ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಮಹಿಳೆಯನ್ನು ಕೊಲೆ ಮಾಡಿದ ಮೂಟೆ ಕಟ್ಟಿ ಕಸದ ಲಾರಿಯಲ್ಲಿಡಲಾಗಿದೆ. ತಡರಾತ್ರಿ ಆಟೋದಲ್ಲಿ ಬಂದ ಹಂತಕರು ಬಿಬಿಎಂಪಿ ಲಾರಿಯಲ್ಲಿ (BBMP garbage truck) ಶವದ ಮೂಟೆ ಎಸೆದು ಎಸ್ಕೇಪ್ ಆಗಿದ್ದಾರೆ. ಸುಮಾರು 30-40 ವಯಸ್ಸಿನ ಮಹಿಳೆಯ ಮೃತದೇಹ ಇದಾಗಿದ್ದು. ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

    ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದು, ಮಹಿಳೆಯ ಗುರುತು ಪತ್ತೆ ಮಾಡಿದ್ದಾರೆ. ಕೊಲೆಯಾದ ಮಹಿಳೆ ಹುಳಿಮಾವು ನಿವಾಸಿ ಪುಷ್ಪಾ @ ಆಶಾ ಎಂದು ಗುರುತಿಸಲಾಗಿದೆ. ಈಕೆ ಅನ್ಯಕೋಮಿನ ವ್ಯಕ್ತಿಯನ್ನ ಪ್ರೀತಿಸಿ ಮದ್ವೆಯಾಗಿದ್ದರು. ಇದೀಗ ಗಂಡನೇ ಕೊಲೆ ಮಾಡಿ, ಬಳಿಕ ಸಿ.ಕೆ ಅಚ್ಚುಕಟ್ಟು ಪ್ರದೇಶದಲ್ಲಿ ಮೃತದೇಹವನ್ನ ತಂದು ಬಿಸಾಡಿರುವ ಶಂಕೆ ವ್ಯಕ್ತವಾಗಿದೆ. ಅಲ್ಲದೇ, ಶವ ಸಾಗಾಟಕ್ಕೆ ದ್ವಿಚಕ್ರ ವಾಹನ ಬಳಕೆ ಮಾಡಿರೋದು ಗೊತ್ತಾಗಿದೆ. ಈ ಹಿನ್ನೆಲೆಯಲ್ಲಿ ಆರೋಪಿಗೆ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಇದನ್ನೂ ಓದಿ: ಬೆಂಗಳೂರಲ್ಲಿ ಭಯಾನಕ ಹತ್ಯೆ – ಮಹಿಳೆಯ ಕೊಲೆ ಮಾಡಿ ಮೂಟೆಕಟ್ಟಿ ಕಸದ ಲಾರಿಯಲ್ಲಿಟ್ಟು ಎಸ್ಕೇಪ್!

    ಬಿಬಿಎಂಪಿ ಕಸದ ಲಾರಿಯಲ್ಲಿತ್ತು ಮೃತದೇಹ
    ರಾತ್ರಿ 1.40ಕ್ಕೆ ಕಸ ಹಾಕಲು ಬಂದಿದ್ದ ಸ್ಥಳೀಯ ವ್ಯಕ್ತಿ ಚೀಲ ಬಿಚ್ಚಿದಾಗ ಮೊದಲಿಗೆ ಕೂದಲು ಕಂಡಿದೆ. ಬಳಿಕ ಮೃತದೇಹ ಇರೋದು ಗೊತ್ತಾಗಿದೆ. ತಕ್ಷಣ ಆ ವ್ಯಕ್ತಿ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಪೊಲೀಸರು ಬಂದಾಗ ಮಹಿಳೆ ಕೊಲೆ ವಿಚಾರ ಬಯಲಾಗಿದೆ. ಇದನ್ನೂ ಓದಿ: ಆಸ್ತಿ ಇದ್ರೂ ಮದುವೆಯಾಗಿಲ್ಲ ಎಂದ ವಿಡಿಯೋ ವೈರಲ್‌ – 18 ಎಕರೆ ಆಸ್ತಿಗಾಗಿ ಎಂಟ್ರಿ ಕೊಟ್ಟ ಕಿಲ್ಲರ್‌ ಬ್ಯೂಟಿ!

    ಇನ್ನು ಸ್ಥಳಕ್ಕೆ ಆಗಮಿಸಿದ ಸಿಕೆ ಅಚ್ಚುಕಟ್ಟು ಪೊಲೀಸರು ಸ್ಥಳೀಯ ನೀಡಿದ ದೂರಿನ ಆಧಾರದಲ್ಲಿ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಸಿಸಿಟಿವಿ ಆಧಾರದ ಮೇಲೆ ಕೊಲೆ ಹಂತಕರಿಗಾಗಿ 2 ತಂಡಗಳ ರಚಿಸಿ ಶೋಧ ನಡೆಸುತ್ತಿದ್ದಾರೆ. ಸದ್ಯ ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

    ಒಟ್ಟಾರೆ.. ಮಹಿಳೆಯನ್ನು ಬೇರೆಡೆ ಹತ್ಯೆ ಮಾಡಿ ಇಲ್ಲಿಗೆ ಮೃತದೇಹ ಎಸೆಯಲಾಯ್ತಾ ಅಥವಾ ಅತ್ಯಾಚಾರ ಎಸಗಿ ಹತ್ಯೆ ಮಾಡಲಾಯ್ತಾ ಎಂಬ ಬಗ್ಗೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಇದನ್ನೂ ಓದಿ: Chikkamagaluru | ವಸತಿ ಶಾಲೆಯ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು

  • ಬೆಂಗಳೂರಲ್ಲಿ ಭಯಾನಕ ಹತ್ಯೆ – ಮಹಿಳೆಯ ಕೊಲೆ ಮಾಡಿ ಮೂಟೆಕಟ್ಟಿ ಕಸದ ಲಾರಿಯಲ್ಲಿಟ್ಟು ಎಸ್ಕೇಪ್!

    ಬೆಂಗಳೂರಲ್ಲಿ ಭಯಾನಕ ಹತ್ಯೆ – ಮಹಿಳೆಯ ಕೊಲೆ ಮಾಡಿ ಮೂಟೆಕಟ್ಟಿ ಕಸದ ಲಾರಿಯಲ್ಲಿಟ್ಟು ಎಸ್ಕೇಪ್!

    – ಅತ್ಯಾಚಾರ ಶಂಕೆ, ಹಂತಕರಿಗಾಗಿ ಹುಡುಕಾಟ

    ಬೆಂಗಳೂರು: ನಗರದಲ್ಲಿ ಮಹಿಳೆಯ (woman) ಭಯಾನಕ ಹತ್ಯೆ ನಡೆದಿದ್ದು, ಜನರನ್ನು ಬೆಚ್ಚಿ ಬೀಳುವಂತೆ ಮಾಡಿದೆ. ಮಹಿಳೆಯನ್ನ ಕೊಲೆಗೈದು ಮೂಟೆಕಟ್ಟಿ ಕಸದ ಲಾರಿಯಲ್ಲಿಟ್ಟು ದುಷ್ಕರ್ಮಿಗಳು ಎಸ್ಕೇಪ್​ ಆಗಿರುವಂತಹ ಘಟನೆ ಚನ್ನಮ್ಮನಕೆರೆ ಠಾಣಾ (Chennamanakere Police Station) ವ್ಯಾಪ್ತಿಯ ಸ್ಕೇಟಿಂಗ್ ಗ್ರೌಂಡ್ ಬಳಿ ನಡೆದಿದೆ. ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಶಂಕೆಯೂ ವ್ಯಕ್ತವಾಗಿದ್ದು, ಪ್ರಕರಣ ದಾಖಲಾಗಿದೆ.

    ನಿನ್ನೆ‌ ತಡರಾತ್ರಿ ಆಟೋದಲ್ಲಿ ಮಹಿಳೆ ಶವ ತಂದಿದ್ದ ದುಷ್ಕರ್ಮಿ, ಮೈದಾನದ ಬಳಿ ನಿಲ್ಲಿಸಿದ್ದ ಕಸದ ಲಾರಿಯಲ್ಲಿಟ್ಟು ಪರಾರಿ ಆಗಿದ್ದಾನೆ. ಆಟೋದಲ್ಲಿ ಒಬ್ಬನೇ ವ್ಯಕ್ತಿ ಬಂದಿದ್ದ ಎಂದು ಹೇಳಲಾಗುತ್ತಿದೆ. 30 ರಿಂದ 35 ವರ್ಷದ ಮಹಿಳೆ ಗುರುತು ಪತ್ತೆಗಾಗಿ ಪೊಲೀಸರಿಂದ ತನಿಖೆ ನಡೆದಿದ್ದು, ಅಪರಿಚಿತ ಮಹಿಳೆ ಶವ (Women Dead Body) ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಇದನ್ನೂ ಓದಿ: ನಕಲಿ ಬ್ರಾಂಡೆಡ್ ಜೀನ್ಸ್ ತಯಾರಿಕಾ ಅಡ್ಡೆ ಮೇಲೆ ಪೊಲೀಸ್ ದಾಳಿ – 30 ಲಕ್ಷಕ್ಕೂ ಅಧಿಕ ಮೌಲ್ಯದ ಜೀನ್ಸ್ ಸೀಜ್

    ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಚನ್ನಮ್ಮನಕರೆ ಅಚ್ಚುಕಟ್ಟು ಠಾಣೆಯ ಪೊಲೀಸರು (Chennamanakere Achukattu Police Station) ಕೊಲೆ ಹಂತಕರಿಗಾಗಿ ಹುಡುಕಾಟ ನಡೆಸುತ್ತಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ. ಇದನ್ನೂ ಓದಿ: Tumakuru | ಟೈಯರ್ ಬ್ಲಾಸ್ಟ್ ಆಗಿ ಮನೆಗೆ ನುಗ್ಗಿದ KSRTC ಬಸ್

    ಪ್ರಕರಣ ಬೆಳಕಿಗೆ ಬಂದಿದ್ದು ಹೇಗೆ?
    ನಿನ್ನೆ (ಶನಿವಾರ) ತಡರಾತ್ರಿ 1:40ರ ವೇಳೆಗೆ ವ್ಯಕ್ತಿಯೊಬ್ಬರು ಕಸ ಹಾಕಲು ಸ್ಕೇಟಿಂಗ್ ಗ್ರೌಂಡ್ (Skating Ground) ಬಳಿ ಬಂದಿದ್ದರು. ಈ ವೇಳೆ ಕಸದ ಗುಡ್ಡೆಯಲ್ಲಿದ್ದ ಚೀಲವೊಂದರಲ್ಲಿ ತಲೆಕೂದಲು ಕಾಣಿಸಿದೆ. ಚೀಲ ಬಿಚ್ಚಿ ನೋಡಿದಾಗ ಯುವತಿಯ ದೇಹ ಚೀಲದಲ್ಲಿರುವುದು ಗೊತ್ತಾಗಿದೆ. ತಕ್ಷಣವೇ ಮಾಹಿತಿ ನೀಡಿದ್ದು, ಪೊಲೀಸರು ಘಟನಾ ಸ್ಥಳಕ್ಕೆ ಬಂದು ಪರಿಶೀಲಿಸಿದ್ದಾರೆ. ರಸ್ತೆಯ ಇಕ್ಕೆಲಗಳಲ್ಲಿದ್ದ ಸಿಸಿಟಿವಿ ದೃಶ್ಯಗಳನ್ನ ಪರಿಶೀಲಿಸಿದ್ದಾರೆ. ಈ ವೇಳೆ ಒಬ್ಬನೇ ವ್ಯಕ್ತಿ ಆಟೋದಲ್ಲಿ ಮೂಟೆ ಸಮೇತ ತಂದು ಬಿಸಾಡಿ ಹೋಗಿರುವುದು ಗೊತ್ತಾಗಿದೆ. ಸದ್ಯ ಪೊಲೀಸರು ಮೃತಪಟ್ಟಿರೋದು 25-30ನೇ ವಯಸ್ಸಿನ ಯುವತಿ ಅಂತ ಅಂದಾಜಿಸಿದ್ದಾರೆ.

    ಮೃತ ಯುವತಿ ಅರ್ಬನ್ ಕಂಪನಿ ಟಿ ಶರ್ಟ್ ಪ್ಯಾಂಟ್ ಧರಿಸಿರುವುದು ಕಂಡುಬಂದಿದೆ. ಯುವತಿ ದೇಹದ ಮೇಲೆ ಒಳ ಉಡುಪುಗಳು ಇರಲಿಲ್ಲವಾದ್ದರಿಂದ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಹಂತಕನಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಇದನ್ನೂ ಓದಿ: 5 ಹುಲಿಕೊಂದ ಹಂತಕರು ಲಾಕ್ – ಕೊನೆಗೂ ಹೊರಬಂತು ರಹಸ್ಯ, 3 ಆರೋಪಿಗಳಿಗೆ ನ್ಯಾಯಾಂಗ ಬಂಧನ

  • ಕಸದ ಲಾರಿಗೆ ಇಬ್ಬರು ಬಲಿ- ಬಿಬಿಎಂಪಿಯಿಂದ ತಲಾ 25 ಲಕ್ಷ ಪರಿಹಾರ

    ಕಸದ ಲಾರಿಗೆ ಇಬ್ಬರು ಬಲಿ- ಬಿಬಿಎಂಪಿಯಿಂದ ತಲಾ 25 ಲಕ್ಷ ಪರಿಹಾರ

    ಬೆಂಗಳೂರು: ಬಿಬಿಎಂಪಿ ಕಸದ ಲಾರಿ ಡಿಕ್ಕಿ (Lorry Accident) ಹೊಡೆದು ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹುಲಿಕುಂಟೆ ಗ್ರಾಮದ ಬಳಿ ನಡೆದಿದೆ.

    ತ್ಯಾಜ್ಯ ಸುರಿಯಲು ಹೋಗ್ತಿದ್ದ ವೇಳೆ ಬೈಕ್‍ಗೆ ಬಿಬಿಎಂಪಿ (BBMP) ಲಾರಿ ಡಿಕ್ಕಿ ಹೊಡೆದಿದೆ. ಘಟನೆ ಬಳಿಕ ಪರಾರಿ ಆಗಲು ಯತ್ನಿಸಿದ ಚಾಲಕನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ರು. ನಂತರ ಕಸದ ಲಾರಿಗಳ ವಿರುದ್ಧ ಸ್ಥಳೀಯ ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿ, ರಸ್ತೆಯಲ್ಲಿ ಇರುವ ಮೃತದೇಹಗಳನ್ನು ಎತ್ತಲು ಬಿಡದೆ ಪ್ರತಿಭಟನೆ ನಡೆಸಿದರು.

    ಬಿಬಿಎಂಪಿ ಅಧಿಕಾರಿಗಳು ಸ್ಥಳಕ್ಕೆ ಬರುವಂತೆ ಒತ್ತಾಯಿಸಿದರು. ಸ್ಥಳಕ್ಕೆ ಬಂದ ಬಿಬಿಎಂಪಿ ಸೂಪರಿಂಡೆಂಟ್ ಇಂಜಿನಿಯರ್ ಪ್ರವೀಣ್ ಸೂದ್, ಮೃತರಿಗೆ ತಲಾ 25 ಲಕ್ಷ ಪರಿಹಾರ ವಿತರಿಸುವುದಾಗಿ ಹೇಳಿದರು. ಆದರೆ ಮೃತರಿಗೆ ತಲಾ 50 ಲಕ್ಷ ಕೊಡುವಂತೆ ಸ್ಥಳೀಯರು ಆಗ್ರಹಿಸಿದರು. ಇದನ್ನೂ ಓದಿ: ದೇಹವನ್ನು 10 ತುಂಡುಗಳಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿ ಸ್ಟೋರ್ – ಪತಿಯನ್ನು ಹತ್ಯೆ ಮಾಡಿದ್ದು ಯಾಕೆ?

    Live Tv
    [brid partner=56869869 player=32851 video=960834 autoplay=true]

  • ಬಿಬಿಎಂಪಿ ಕಸದ ಲಾರಿ- ಬೈಕ್ ನಡುವೆ ಡಿಕ್ಕಿ ; ಇಬ್ಬರು ಬೈಕ್ ಸವಾರರು ಸಾವು

    ಬಿಬಿಎಂಪಿ ಕಸದ ಲಾರಿ- ಬೈಕ್ ನಡುವೆ ಡಿಕ್ಕಿ ; ಇಬ್ಬರು ಬೈಕ್ ಸವಾರರು ಸಾವು

    ಚಿಕ್ಕಬಳ್ಳಾಪುರ: ಬಿಬಿಎಂಪಿ (BBMP) ಕಸದ ಲಾರಿ ಹಾಗೂ ಬೈಕ್ (Bike) ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಧಾರುಣ ಘಟನೆ ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಹುಲಿಕುಂಟೆ ಗ್ರಾಮದ ಬಳಿ ನಡೆದಿದೆ.

    ಮೃತರು ನೆಲಮಂಗಲ ತಾಲೂಕಿನ ಮರಳುಕುಂಟೆ ಗ್ರಾಮದ ಮಹೇಶ್ (27), ಮಾರುತಿ (24) ಎಂದು ಗುರುತಿಸಲಾಗಿದೆ. ತಾಲೂಕಿನ ಮಧುರೆ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಹಿಂತಿರುಗಿ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ದೊಡ್ಡಬಳ್ಳಾಪುರದ ಬಳಿಯ ಎಂಎಸ್ ಜಿಪಿ ಘಟಕಕ್ಕೆ ಕಸ ಸುರಿಯಲು ಬೆಂಗಳೂರಿಂದ ಬಂದ ಬಿಬಿಎಂಪಿ ಕಸದ ಲಾರಿಗೆ ಬೈಕ್ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್‍ನಲ್ಲಿದ್ದ ಇಬ್ಬರು ರಸ್ತೆಯಲ್ಲಿ ಬಿದ್ದು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಘಟನೆ ನಂತರ ಚಾಲಕ ಸ್ಥಳದಿಂದ ಪರಾರಿಯಾಗುತ್ತಿದ್ದು, ಹಿಂಬದಿಯಲ್ಲಿ ಬರುತ್ತಿದ್ದ ಕಾರಿನ ಚಾಲಕ ಬೆನ್ನತ್ತಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ‌ಂದು ತಿಳಿದುಬಂದಿದೆ. ಇದನ್ನೂ ಓದಿ: ಹಿಂದೂ ಸಂಕೇತ ಬಳಸಿ, ಹಿಂದೂ ಸಮಾಜದ ಮೇಲೆ ದುಷ್ಕೃತ್ಯ – ಪೇಜಾವರ ಶ್ರೀ ಬೇಸರ

    ಈ ವೇಳೆ ಲಾರಿಯ ಚಾಲಕ ಪಾನಮತ್ತನಾಗಿದ್ದು, ತಡೆಯಲು ಹೋದ ಕಾರಿಗೂ ಡಿಕ್ಕಿ ಹೊಡೆಯಲು ಯತ್ನಿಸಿದ್ದಾನೆಂದು ಸ್ಥಳೀಯರು ಆರೋಪಿಸಿದ್ದಾರೆ. ಘಟನಾ ಸ್ಥಳದಲ್ಲಿ ಮೃತ ಯುವಕರ ಶವವನ್ನು ತೆರವು ಮಾಡಲು ಬಿಡದೆ, ಗ್ರಾಮಸ್ಥರು ಪ್ರತಿಭಟನೆಗೆ ಮುಂದಾಗಿದ್ದಾರೆ. ಸ್ಥಳಕ್ಕೆ ಶಾಸಕ ಟಿ.ವೆಂಕಟರಮಣಯ್ಯ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಸರ್ಕಲ್ ಇನ್ಸ್‌ಪೆಕ್ಟರ್ ಹರೀಶ್ ಮತ್ತಿತರರು ಭೇಟಿ ನೀಡಿದ್ದು, ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ.

    ಕಳೆದ ಎರಡು ತಿಂಗಳ ಹಿಂದೆ ಸಹ ಓರ್ವ ಬೈಕ್ ಸವಾರ ಬಿಬಿಎಂಪಿ ಕಸದ ಲಾರಿ ಡಿಕ್ಕಿಯಾಗಿ ಸಾವನ್ನಪ್ಪಿದ್ದ. ಈಗ ಇಬ್ಬರು ಸಾವನ್ನಪ್ಪಿದ್ದು ಬಿಬಿಎಂಪಿ ಕಸದ ಲಾರಿಗಳ ವಿರುದ್ಧ ಸ್ಥಳೀಯರು ತಿರುಗಿಬಿದ್ದು ಆಕ್ರೋಶ ಹೊರಹಾಕಿದ್ದಾರೆ. ಘಟನಾ ಸ್ಥಳಕ್ಕೆ ದೊಡ್ಡಬೆಳವಂಗಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಈಗಿರುವ ಆರ್‌ಎಸ್‌ಎಸ್ ಕಳ್ಳರ ಆರ್‌ಎಸ್‌ಎಸ್ : ಪರಿಷತ್ ಸದಸ್ಯ ರಾಜೇಂದ್ರ ಕಿಡಿ

    Live Tv
    [brid partner=56869869 player=32851 video=960834 autoplay=true]

  • BBMP ಯಮ ಸ್ವರೂಪಿ ಕಸದ ಲಾರಿಗೆ ಮತ್ತೊಂದು ಬಲಿ – ಅಪಘಾತದಲ್ಲಿ ಮಹಿಳೆ ಸಾವು

    BBMP ಯಮ ಸ್ವರೂಪಿ ಕಸದ ಲಾರಿಗೆ ಮತ್ತೊಂದು ಬಲಿ – ಅಪಘಾತದಲ್ಲಿ ಮಹಿಳೆ ಸಾವು

    ಬೆಂಗಳೂರು: ಬಿಬಿಎಂಪಿ ಯಮ ಸ್ವರೂಪಿ ಕಸದ ಲಾರಿಗೆ ಇಂದು ಮತ್ತೊಂದು ಜೀವ ಬಲಿಯಾಗಿದೆ. ಮುಂದೆ ಚಲಿಸುತ್ತಿದ್ದ ಬೈಕ್‌ಗೆ ಹಿಂದಿನಿಂದ ವೇಗವಾಗಿ ಬಂದು ಕಸದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.

    ವಿಜಯ ಕಲಾ (37) ಅಪಘಾತದಲ್ಲಿ ಮೃತಪಟ್ಟ ಮಹಿಳೆ. ನಾಗರಭಾವಿ ರಿಂಗ್‌ ರಸ್ತೆಯಲ್ಲಿ ಬೆಳಗ್ಗೆ 9:50ರ ಸುಮಾರಿಗೆ ಈ ದುರ್ಘಟನೆ ನಡೆದಿದೆ. ಬೈಕ್‌ ಚಲಾಯಿಸುತ್ತಿದ್ದ ವಿಜಯ ಕಲಾ ಅವರ ಪತಿ ಯೋಗೇಂದ್ರ ಗಂಭೀರವಾಗಿ ಗಾಯಗೊಂಡಿದ್ದಾರೆ. ಇದನ್ನೂ ಓದಿ: BBMP ಕಸದ ಲಾರಿಗೆ ಮತ್ತೊಂದು ಬಲಿ – ಫುಡ್ ಡೆಲಿವರಿ ಬಾಯ್ ಸ್ಥಳದಲ್ಲೇ ಸಾವು

    ಯೋಗೇಂದ್ರ ಅವರು ಪತ್ನಿ ವಿಜಯ ಕಲಾ ಜೊತೆ ಬೈಕ್‌ನಲ್ಲಿ ಹೋಗುತ್ತಿದ್ದಾಗ, ಹಿಂದೆಯಿಂದ ವೇಗವಾಗಿ ಬಂದ ಬಿಬಿಎಂಪಿ ಕಸದ ಲಾರಿ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ವಿಜಯ ಕಲಾ ಮೃತಪಟ್ಟಿದ್ದಾರೆ. ಅವರ ಪತಿ ಯೋಗೇಂದ್ರ ಸ್ಥಿತಿ ಗಂಭೀರವಾಗಿದೆ. ಘಟನೆ ಸಂಬಂಧ ಬ್ಯಾಟರಾಯನಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

    ಬಿಬಿಎಂಪಿ ಕಸದ ಲಾರಿಗೆ ಜೀವಗಳು ಬಲಿಯಾಗುತ್ತಿವೆ. ಆದರೆ ಬಿಬಿಎಂಪಿ ಇದನ್ನು ಇನ್ನೂ ಗಂಭೀರವಾಗಿ ಪರಿಗಣಿಸಿದಂತೆ ಕಾಣುತ್ತಿಲ್ಲ. ಈ ಹಿಂದೆಯೂ ಕಸದ ಲಾರಿಗೆ ನಾಲ್ಕು ಜೀವಗಳು ಬಲಿಯಾಗಿದ್ದವು. ಲಾರಿ ಚಾಲಕರ ಅತಿಯಾದ ವೇಗ ಹಾಗೂ ಮದ್ಯ ಸೇವನೆ ಮಾಡಿ ವಾಹನ ಚಾಲಾಯಿಸಿದ್ದೆ ಘಟನೆಗೆ ಕಾರಣ ಎಂದು ಪೊಲೀಸ್ ತನಿಖೆ ವೇಳೆ ದೃಢಪಟ್ಟಿದೆ. ಆದರೆ ಬಿಬಿಎಂಪಿ ಮಾತ್ರ ಅದಕ್ಕೂ ನನಗೂ ಸಂಬಂಧವೇ ಇಲ್ಲವೆಂಬಂತೆ ನಡೆದುಕೊಳ್ಳುತ್ತಿದೆ. ಇದನ್ನೂ ಓದಿ: ಸಿದ್ದರಾಮಯ್ಯ ಒಂದು ಕಾಲದಲ್ಲಿ ಗುರು, ಈಗ ಬೇರೆ ಗುರು ಬಂದಿದ್ದಾರೆ: ಎಂಟಿಬಿ

    Live Tv
    [brid partner=56869869 player=32851 video=960834 autoplay=true]

  • ಬಿಬಿಎಂಪಿಯ ಡೆಡ್ಲಿ ಕಸದ ಲಾರಿಗಳಿಗೆ ಶೀಘ್ರವೇ ಸ್ಪೀಡ್ ಗವರ್ನರ್ ಅಳವಡಿಕೆ

    ಬಿಬಿಎಂಪಿಯ ಡೆಡ್ಲಿ ಕಸದ ಲಾರಿಗಳಿಗೆ ಶೀಘ್ರವೇ ಸ್ಪೀಡ್ ಗವರ್ನರ್ ಅಳವಡಿಕೆ

    ಬೆಂಗಳೂರು: ಬಿಬಿಎಂಪಿ ಕಸದ ಲಾರಿಗಳಿಂದ ಅಪಘಾತ ಹಿನ್ನಲೆ ಸ್ಪೀಡ್ ಗವರ್ನರ್ ಅಳವಡಿಕೆಗೆ ಸೂಚನೆ ನೀಡಲಾಗಿದೆ ಎಂದು ಸಂಚಾರಿ ಪೊಲೀಸ್ ಆಯುಕ್ತ ರವಿಕಾಂತೆಗೌಡ ಹೇಳಿದ್ದಾರೆ.

    ಲಾರಿಗಳು 40 ಕಿಮೀ.ಗಿಂತ ವೇಗವಾಗಿ ಚಲಿಸದಂತೆ ವ್ಯವಸ್ಥೆಗೊಳಿಸಬೇಕು. ಸ್ಪೀಡ್ ಗವರ್ನರ್ ಅಳವಡಿಕೆಗೆ ಸೂಚನೆ ನೀಡಲಾಗಿದೆ. ಆಲ್ಕೋ ಮೀಟರ್ ಮೂಲಕ ಚಾಲಕರ ತಪಾಸಣೆಗೆ ಸೂಚಿಸಲಾಗಿದೆ. ಈಗಾಗಲೇ ಬಿಬಿಎಂಪಿ ಕೆಲವು ಕಠಿಣ ಕ್ರಮಗಳನ್ನು ಜಾರಿಗೊಳಿಸಲು ಮುಂದಾಗಿದೆ ಎಂದಿದ್ದಾರೆ. ಇದನ್ನೂ ಓದಿ: ಶಾಲೆ ಆವರಣದಲ್ಲೇ ಭಜರಂಗದಳ ಕಾರ್ಯಕರ್ತರಿಗೆ ತ್ರಿಶೂಲ ದೀಕ್ಷೆ, ಶಸ್ತ್ರಾಸ್ತ್ರ ತರಬೇತಿ

    ಈಗಾಗಲೇ ಸುಮಾರು ಚಾಲಕರಿಗೆ ಟ್ರಾಫಿಕ್ ಪೊಲೀಸರು ಹಂತ ಹಂತವಾಗಿ ತರಬೇತಿ ನೀಡುತ್ತಿದ್ದಾರೆ. ಪ್ರತಿ ಬಾರಿ 40 ಜನರಿಗೆ ತರಬೇತಿ ಕೊಟ್ಟು, ಒಂದು ರೀತಿ ಸಕಾರಾತ್ಮಕ ಬೆಳವಣಿಗೆ ಚಾಲಕರಲ್ಲಿ ಕಾಣಿಸುತ್ತಿದೆ. ಅಲ್ಲದೇ ಕಸದ ಲಾರಿಗಳ ಮೇಲೆ ಸಂಚಾರಿ ಪೊಲೀಸರು ಸ್ಪೆಷಲ್ ಡ್ರೈವ್ ಮಾಡಿದ್ದಾರೆ. ಈ ವೇಳೆ ಓರ್ವ ಚಾಲಕ ಮಾತ್ರ ಮದ್ಯಪಾನ ಮಾಡಿದ್ದು ಕಂಡು ಬಂದಿದೆ ಎಂದು ತಿಳಿಸಿದ್ದಾರೆ.

    BBMP DEATH

    ಯಾವ ರೀತಿ ವಾಹನ ಚಾಲನೆ ಮಾಡಬೇಕು. ಎಲ್ಲಿ ವಾಹನ ನಿಲ್ಲಿಸಬೇಕು. ರಸ್ತೆಯ ಎಡಬದಿಯಲ್ಲಿ ಮಾತ್ರ ಕಸದ ಲಾರಿ ಚಲಾಯಿಸಬೇಕು. ಸ್ಕೂಲ್ ಜೋನ್, ಆಕ್ಸಿಡೆಂಟ್ ಜೋನ್, ಹೀಗೆ ಎಲ್ಲಿ ಹೇಗೆ ವಾಹನ ಚಾಲನೆ ಮಾಡಬೇಕು ಎಂದು ಟ್ರೈನಿಂಗ್ ನೀಡುತ್ತಿದ್ದೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಇಂದಿನಿಂದ ಶಾಲೆ ಆರಂಭ – ಈ ವರ್ಷವೂ ಮಕ್ಕಳಿಗಿಲ್ಲ ಸೈಕಲ್ ಭಾಗ್ಯ

    ಇದೇ ವೇಳೆ ಮೊನ್ನೆ ನಡೆದ ಅಪಘಾತದಲ್ಲಿ ಲಾರಿ ಚಾಲಕನಿಗೆ ಸೂಕ್ತ ಡ್ರೈವಿಂಗ್ ಲೈಸೆನ್ಸ್ ಇಲ್ಲದ ವಿಚಾರವಾಗಿ ಮಾತನಾಡಿದ ಅವರು, ಈ ಬಗ್ಗೆ ಅಧಿಕಾರಿಗಳಿಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳಲು ಸೂಚಿಸಿರುವುದಾಗಿ ತಿಳಿಸಿದ್ದಾರೆ.

  • ಕಸದ ಲಾರಿಗೆ ಮತ್ತೊಂದು ಬಲಿ – 39 ವರ್ಷದ ಮಹಿಳೆ ಸಾವು

    ಕಸದ ಲಾರಿಗೆ ಮತ್ತೊಂದು ಬಲಿ – 39 ವರ್ಷದ ಮಹಿಳೆ ಸಾವು

    ಬೆಂಗಳೂರು: ಸಿಲಿಕಾನ್ ಸಿಟಿಯಾಗಿರುವ ಬೆಂಗಳೂರಿನಲ್ಲಿ ರಸ್ತೆ ಅಪಘಾತ ಹೆಚ್ಚು. ಅದರಲ್ಲಿಯೂ ಇತ್ತೀಚೆಗೆ ಕಸದ ಲಾರಿ ಡಿಕ್ಕಿಯಿಂದ ಸಾರ್ವಜನಿಕರು ಮೃತರಾಗುತ್ತಿದ್ದಾರೆ. ಸೋಮವಾರ 39 ವರ್ಷದ ಮಹಿಳೆ ಸಾವನ್ನಪ್ಪಿದ್ದು, ಕಸದ ಲಾರಿ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

    39 ವರ್ಷದ ಪದ್ಮಿನಿ ಕಸದ ಲಾರಿಗೆ ಬಲಿಯಾದ ದುರ್ದೈವಿ. ಬೆಂಗಳೂರಿನ ನಾಯಂಡಹಳ್ಳಿ ಜಂಕ್ಷನ್ ಬಳಿ ಘಟನೆ ನಡೆದಿದೆ. ಪದ್ಮಿನಿ ಅವರು ಬೈಕ್‍ನಲ್ಲಿ ಹೋಗುತ್ತಿದ್ದರು. ಈ ವೇಳೆ ಕಸದ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಪದ್ಮಿನಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಇದನ್ನೂ ಓದಿ: ರಜೆಗೆ ಬಂದಿದ್ದ ಯೋಧ ಸಾವು – ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ 

    ಘಟನೆ ಸ್ಥಳಕ್ಕೆ ಬ್ಯಾಟರಾಯನಪುರ ಸಂಚಾರಿ ಪೊಲೀಸರು ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ. ತನಿಖೆ ವೇಳೆ ಪದ್ಮಿನಿ ಅವರು ಸೆಂಟ್ ಮಾಕ್ರ್ಸ್ ರೋಡ್‍ನಲ್ಲಿರುವ ಸ್ಟೇಟ್ ಬ್ಯಾಂಕ್ ಇಂಡಿಯಾ ಬ್ರಾಂಚ್‍ನಲ್ಲಿ ಡೆಪ್ಟಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದರು ಎಂಬುದು ತಿಳಿದುಬಂದಿದೆ.

    ಈ ಹಿಂದೆ ಹೆಬ್ಬಾಳದಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಕಸದ ಲಾರಿ ಹರಿದು ವಿದ್ಯಾರ್ಥಿನಿ ಅಕ್ಷಯಾ ಸ್ಥಳದಲ್ಲೇ ಸಾವನ್ನಪ್ಪಿದ್ದಳು. ಬಾಗಲೂರು-ಥಣಿಸಂದ್ರ ರಸ್ತೆಯಲ್ಲಿ ಬಿಬಿಎಂಪಿಯ ಕಸದ ಲಾರಿ 76 ವರ್ಷದ ವೃದ್ಧ ರಾಮಯ್ಯ ಅವರ ಬೈಕ್‍ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ರಾಮಯ್ಯ ಅವರು ನೆಲಕ್ಕೆ ಬಿದ್ದದ್ದು ಲಾರಿ ಅವರ ಮೇಲೆಯೇ ಹರಿದಿತ್ತು. ಇದರಿಂದ ಅವರ ಪ್ರಾಣಪಕ್ಷಿ ಹಾರಿಹೋಗಿತ್ತು. ಇದನ್ನೂ ಓದಿ: ರಜೆಗೆ ಬಂದಿದ್ದ ಯೋಧ ಸಾವು – ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

  • ಸಿಲಿಕಾನ್ ಸಿಟಿ ಮತ್ತೆ ಗಾರ್ಬೇಜ್ ಸಿಟಿ- ರಾಜಧಾನಿಯಲ್ಲಿ 3 ದಿನಗಳಿಂದ ವಿಲೇವಾರಿ ಆಗಿಲ್ಲ ಕಸ

    ಸಿಲಿಕಾನ್ ಸಿಟಿ ಮತ್ತೆ ಗಾರ್ಬೇಜ್ ಸಿಟಿ- ರಾಜಧಾನಿಯಲ್ಲಿ 3 ದಿನಗಳಿಂದ ವಿಲೇವಾರಿ ಆಗಿಲ್ಲ ಕಸ

    ಬೆಂಗಳೂರು: ಬೆಳ್ಳಳ್ಳಿ ಕ್ವಾರಿಯಲ್ಲಿ ಕಸ ಹಾಕಲು ಸ್ಥಳೀಯರ ವಿರೋಧ ವ್ಯಕ್ತಪಡಿಸುತ್ತಿರುವ ಪರಿಣಾಮ ಕಳೆದ 3 ದಿನಗಳಿಂದ ರಾಜಧಾನಿಯಲ್ಲಿ ಕಸ ವಿಲೇವಾರಿ ಸ್ಥಗಿತಗೊಂಡಿದೆ. ಕಸ ಹಾಕಲು ಜಾಗ ಇಲ್ಲದ ಕಾರಣ ಕಸದ ಲಾರಿಗಳನ್ನು ರಸ್ತೆಯ ಬದಿಗಳಲ್ಲಿ ನಿಲ್ಲಿಸಲಾಗಿದೆ.

    ನಗರದ ಶಿವಾನಂದ ಸರ್ಕಲ್, ಮಲ್ಲೇಶ್ವರಂ, ಗಾಂಧಿನಗರ ಹಲೆವೆಡೆ ಮನೆಗಳಿಂದ ತಂದ ಕಸ ರಸ್ತೆಗಳ ಮಧ್ಯೆಯೇ ನಿಂತಿದೆ. ಇದರಿಂದ ಗಲ್ಲಿ ಗಲ್ಲಿಗಳು ಗಬ್ಬು ನಾರುತ್ತಿದೆ. ಈ ಮೂಲಕ ಮತ್ತೆ ನಗರದಲ್ಲಿ ಕಸದ ಕಾಟ ಶುರುವಾಗಿದೆ.

    ಸದ್ಯ ಕಸ ವಿಲೇವಾರಿಯನ್ನು ಬೇರೆ ಕಡೆ ಮಾಡಲು ಪಾಲಿಕೆ ಬಳಿ ಸೂಕ್ತ ಪ್ಲಾನ್‍ನ ಕೊರತೆಯಿದ್ದು, ಬೆಂಗಳೂರಿನ ಜನರು ಮೂಗು ಮುಚ್ಚಿಕೊಂಡು ಓಡಾಡಲು ಸಿದ್ಧವಾಗಬೇಕಾಗಿದೆ.

    198 ವಾರ್ಡ್‍ಗಳಲ್ಲೂ ಕಸದ ಲಾರಿ ರಸ್ತೆ ಬದಿಯೇ ನಿಂತಿಕೊಂಡಿದೆ. ಕನಿಷ್ಠ 2 ಕ್ಯಾಂಪ್ಯಾಕ್ಟ್ ಕಸ ಶೇಖರಣೆಯಾಗಿದ್ದು, ಕಸದ ವಾಸನೆಯಿಂದ ಸುತ್ತಮುತ್ತಲಿನ ನಿವಾಸಿಗಳಿಗೆ ತೊಂದರೆ ಉಂಟಾಗುತ್ತಿದೆ. ಕಸ ಹಾಕಬಾರದೆಂದು ಸ್ಥಳೀಯರು ವಿರೋಧಿಸಿದ್ದರಿಂಧ ಜನವರಿ ಅಂತ್ಯದ ವೇಳೆಗೆ ಕಸದ ಹಾಕುವ ಬೆಳ್ಳಳ್ಳಿ ಕ್ವಾರಿಯೂ ಕಸದಿಂದ ಮುಚ್ಚಲಿದೆ. ಬೆರಳೆಣಿಕೆಯ ದಿನಗಳಲ್ಲಿ ಪಾಲಿಕೆ ಬೇರೆ ಕಡೆ ಕಸ ಹಾಕಲು ಸ್ಥಳವನ್ನು ಹುಡುಕಬೇಕಾಗಿದೆ.

    ಬೆಳ್ಳಳ್ಳಿ ಸ್ಥಳೀಯರು ಈ ಹಿಂದೆ ಕಸ ವಿಲೇವಾರಿ ಮಾಡಲು ವ್ಯವಸ್ಥಿತವಾಗಿ ಕ್ರಮ ತೆಗೆದುಕೊಳ್ಳಿ. ಕ್ವಾರಿ ಸುತ್ತಮುತ್ತ ದುರ್ವಾಸನೆ ತಡೆಯುವಂತೆ ಕ್ರಮ ತೆಗೆದುಕೊಳ್ಳಿ ಅಂತ ಪಾಲಿಕೆ ಅಧಿಕಾರಿ ಬಳಿ ಮನವಿ ಮಾಡಿದ್ದರು. ಆದರೂ ಕೂಡ ಪಾಲಿಕೆ ಅಧಿಕಾರಿಗಳು ನಿರ್ಲಕ್ಷಿಸಿದ್ದರಿಂದ ಸಮಸ್ಯೆ ಈಗ ಉಲ್ಬಣಗೊಂಡಿದೆ. ಸ್ಥಳೀಯರ ಪ್ರತಿಭಟನೆಯಿಂದ ಕ್ವಾರಿ ಬಳಿ 250 ಟ್ರಕ್‍ಗಳು ನಿಂತಲ್ಲೇ ನಿಂತಿವೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬಿಬಿಎಂಪಿ ಕಸದ ಲಾರಿ ಡಿಕ್ಕಿ – ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು

    ಬಿಬಿಎಂಪಿ ಕಸದ ಲಾರಿ ಡಿಕ್ಕಿ – ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು

    ಬೆಂಗಳೂರು: ಬಿಬಿಎಂಪಿ ಕಸದ ಲಾರಿ ಸ್ಕೂಟರ್ ಗೆ ಡಿಕ್ಕಿಯಾದ ಪರಿಣಾಮ ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ನಗರದ ರೇಸ್ ಕೋರ್ಸ್ ರಸ್ತೆಯಲ್ಲಿ ನಡೆದಿದೆ.

    ರಾಜಾಜಿನಗರ ನಿವಾಸಿಯಾದ ಸಾಹಿತ್ಯ(24) ಸಾವನ್ನಪಿದ್ದ ಯುವತಿ. ರಾಜಾಜಿನಗರದ ನಿವಾಸಿಯಾದ ಅವರು ಪ್ರಿಂಟಿಂಗ್ ಪ್ರೆಸ್ ಮಾಲೀಕ ನರಸರಾಜ್ ಮಗಳಾದ ಸಾಹಿತ್ಯ ಹೆಸರುಘಟ್ಟ ಬಳಿಯ ಕಾಲೇಜಿನಲ್ಲಿ ಅಂತಿಮ ವರ್ಷದ ಎಂಜಿನಿಯರಿಂಗ್ ಪದವಿ ಓದುತ್ತಿದ್ದರು.

    ಕನ್ನಿಂಗ್‍ಹ್ಯಾಮ್ ರಸ್ತೆಯ ಖಾಸಗಿ ಕಂಪನಿಯಲ್ಲಿ ತರಬೇತಿಗೆಂದು ಹೋಗುತ್ತಿದ್ದ ವೇಳೆ ಬಿಬಿಎಂಪಿ ಲಾರಿ ಚಾಲಕ ಅಡ್ಡಾದಿಡ್ಡಿ ವಾಹನ ಚಲಿಸಿದ್ದೆ ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಸೋಮವಾರದಂದು ಈ ಘಟನೆ ನಡೆದಿದ್ದು, ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

    ಈ ಬಗ್ಗೆ ಹೈಗೌಂಡ್ಸ್ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.