ಡಾ.ರಾಜ್ ಕುಮಾರ್ (Raj Kumar) ಅವರು ಕನ್ನಡ ಸಂಸ್ಕೃತಿಯ ಪ್ರತೀಕದಂತಿದ್ದರು. ಕನ್ನಡಕ್ಕೊಬ್ಬನೇ ರಾಜ್ ಕುಮಾರ್ ಎನ್ನಿಸಿದ ಅವರು ತಮ್ಮ ಅಭಿನಯ ಮತ್ತು ಬದುಕಿನ ರೀತಿಯಿಂದ ಮಾದರಿ ಎನ್ನಿಸಿ ಕೊಂಡಿದ್ದರು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿಯವರು ವಿಶ್ಲೇಷಿಸಿದರು. ಅವರು ಇಂದು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಏರ್ಪಾಟಾಗಿದ್ದ ಡಾ.ರಾಜ್ ಕುಮಾರ್ ಅವರ 95ನೆಯ ಹುಟ್ಟು ಹಬ್ಬದ ಆಚರಣೆಯ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. ಮಂತ್ರಾಲಯ ಮಹತ್ಮೆ’ಯಲ್ಲಿನ ರಾಘವೇಂದ್ರ ಸ್ವಾಮಿಗಳ ಪಾತ್ರವನ್ನು ರಾಯರೇ ಮಾಡಿಸಿದ್ದರು ಎನ್ನುವ ರಾಜ್ ಕುಮಾರ್ ಅವರ ನಂಬಿಕೆಯನ್ನು ಪ್ರಸ್ತಾಪಿಸಿದ ನಾಡೋಜ ಡಾ.ಮಹೇಶ ಜೋಶಿಯವರು ವಿಜ್ಞಾನ ಕೊನೆಗೊಳ್ಳುವಲ್ಲಿ ಅಧ್ಯಾತ್ಮ ಆರಂಭವಾಗುತ್ತದೆ ಎಂದರು. ಸಂತ ಶ್ರೇಷ್ಟರಾದ ಕನಕದಾಸ, ಪುರಂದರ ದಾಸ, ಸರ್ವಜ್ಞ, ತುಕಾರಂ, ಕಬೀರ ಮೊದಲಾದವರ ಪಾತ್ರಗಳಿಗೆ ಜೀವ ತುಂಬಿದ ಹಾಗೆ ಇಮ್ಮಡಿ ಪುಲಕೇಶಿ, ಮಯೂರ, ಶ್ರೀಕೃಷ್ಣದೇವರಾಯ ಮೊದಲಾದ ಕನ್ನಡ ನಾಡಿನ ವೀರರನ್ನು ಬೆಳ್ಳಿತೆರೆಯ ಮೂಲಕ ಜೀವಂತವಾಗಿಸಿದರು, ರಾಮ, ಕೃಷ್ಣ, ನಾರದ ಮೊದಲಾದ ಪುರಾಣ ಪಾತ್ರಗಳನ್ನೂ ಅಭಿನಯಿಸಿದರು, ಬಾಂಡ್ ನಿಂದ ಭಕ್ತನವರೆಗೆ, ಚಮ್ಮಾರನಿಂದ ಚಕ್ರವರ್ತಿಯವರೆಗೆ ಎಲ್ಲಾ ಮಾದರಿಯ ಪಾತ್ರಗಳನ್ನು ಮಾಡಿ ರಾಜ್ ಕುಮಾರ್ ಕನ್ನಡ ಸಾಂಸ್ಕೃತಿಕ ಲೋಕವನ್ನು ಶ್ರೀಮಂತಗೊಳಿಸಿದ್ದಾರೆ ಎಂದು ನಾಡೋಜ ಡಾ.ಮಹೇಶ ಜೋಶಿ (Mahesh Joshi) ವಿವರಿಸಿದರು.
ಐವತ್ತಕ್ಕೂ ಹೆಚ್ಚು ಸಂದರ್ಭಗಳಲ್ಲಿ ರಾಜ್ ಕುಮಾರ್ ಅವರ ಒಡನಾಟ ತಮಗೆ ದೊರಕಿದ್ದನ್ನ ಸ್ಮರಿಸಿ ಕೊಂಡ ಅವರು ದಾದಾ ಸಾಹೇಬ್ ಫಾಲ್ಕೆ ಪುರಸ್ಕಾರ ಸ್ವೀಕಾರ ಸಂದರ್ಭದಲ್ಲಿ ನಾಲ್ಕು ದಿನ ದೊರಕಿದ ನಿಕಟ ಒಡನಾಟದ ಅನುಭವವನ್ನು ನೆನಪು ಮಾಡಿ ಕೊಂಡು ರಾಜ್ ಕುಮಾರ್ ಅವರಿಗೆ ಅಧ್ಯಾತ್ಮದಲ್ಲಿ ಆಸಕ್ತಿ ಇತ್ತು. ಹಠ ಯೋಗವನ್ನೂ ಅವರು ಸಾಧಿಸಿದ್ದರು. ಅವರ ಯೋಗ ಗುರುಗಳಾದ ನಾಯ್ಕರ್ ಅವರ ಗುರುಗಳ ಮೇಲೆ ಶಿಶುನಾಳ ಶರೀಫರ ಪ್ರಭಾವವಿತ್ತು ಎಂದು ನಾಡೋಜ ಡಾ.ಮಹೇಶ ಜೋಶಿಯವರು ನೆನಪು ಮಾಡಿಕೊಂಡರು.
ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಕಟಣಾ ವಿಭಾಗದ ಸಂಚಾಲಕರಾದ ಎನ್.ಎಸ್.ಶ್ರೀಧರ ಮೂರ್ತಿಯವರು ಮಾತನಾಡಿ ಸರಳತೆಯನ್ನು ಮೌಲ್ಯವಾಗಿ ಮಾಡಿದ ರಾಜ್ ಕುಮಾರ್ ಚಲನಚಿತ್ರಕ್ಕೆ ಸೀಮಿತವಾಗದೆ ನಮ್ಮ ಕಾಲದ ಸಾಂಸ್ಕೃತಿಕ ರೂಪಕವಾಗಿ ಬೆಳೆದಿದ್ದು ದೊಡ್ಡ ಕೌತಕವೇ ಸರಿ, ಎಲ್ಲಾ ತಲೆಮಾರಿನವರೂ ತಮ್ಮ ಪಾಲಿನ ಆದರ್ಶವನ್ನು ರಾಜ್ ಕುಮಾರ್ ಎನ್ನುವ ಕನ್ನಡಿಯಲ್ಲಿ ಕಂಡರು. ಅವರ ಶೈಲಿಯಲ್ಲಿ ‘ಅಮ್ಮ’ ಎಂದು ಕರೆಸಿ ಕೊಳ್ಳಲು ಎಷ್ಟೋ ಮಹಿಳೆಯರು ಇಂದಿಗೂ ಹಂಬಲಿಸುತ್ತಾರೆ. ಅಣ್ಣ-ತಮ್ಮಂದಿರು ಹೇಗಿರ ಬೇಕು? ಗಂಡ-ಹೆಂಡತಿ ಒಡನಾಟ ಹೇಗಿರ ಬೇಕು? ತಂದೆ-ಮಕ್ಕಳ ಸಂಬಂಧದ ಸ್ವರೂಪ ಯಾವುದೂ ಎಲ್ಲಾ ಪ್ರಶ್ನೆಗಳಿಗೂ ಅವರ ಚಿತ್ರದಲ್ಲಿ ಉತ್ತರವಿದೆ. ‘ಕನ್ನಡದ ಜನ ನನ್ನನ್ನು ರಾಜನನ್ನಾಗಿ ನೋಡಿದ್ದಾರೆ, ಮಂತ್ರಿ ಸ್ಥಾನ ಏಕೆ ಬೇಕು’ ಎಂದು ರಾಜಕೀಯದಿಂದ ದೂರವಿದ್ದ ರಾಜ್ ಕುಮಾರ್ ತಮ್ಮ ಚಿತ್ರಗಳಲ್ಲಿ ಇಂದಿಗೂ ರಾಜಕಾರಣಿ ಪಾತ್ರವಿರಲಿ ಜಮೀನ್ದಾರ, ಊರ ಗೌಡರ ಪಾತ್ರಗಳನ್ನು ಮಾಡಲಿಲ್ಲ ಮೇಯರ್ ಮುತ್ತಣ್ಣ ಚಿತ್ರದಲ್ಲಿ ಅವರು ಮೇಯರ್ ಆದರೂ ಅದಕ್ಕೆ ಸಂಬಂಧಿಸಿದ ಸನ್ನಿವೇಶಗಳಿಲ್ಲ ಎಂದು ವಿಶ್ಲೇಷಿಸಿದರು. ತಾವೊಮ್ಮೆ ಅವರನ್ನು ‘ನೀವು ನಿರ್ವಹಿಸಲು ಬಯಸಿ ಸಿಕ್ಕದೆ ಹೋದ ಪಾತ್ರ ಯಾವುದು?’ ಎಂದಾಗ ‘ಬಸ್ ಕಂಡೆಕ್ಟರ್’ಎಂದು ಹೇಳಿದ್ದನ್ನು ನೆನಪು ಮಾಡಿಕೊಂಡ ಶ್ರೀಧರ ಮೂರ್ತಿ ರಾಜ್ ಕುಮಾರ್ ಎಲ್ಲಾ ವೃತ್ತಿಗಳಿಗೂ ಘನತೆ ತಂದು ಕೊಟ್ಟ ಮಹಾನ್ ಕಲಾವಿದರು ಎಂದು ಹೇಳಿ ಅವರ ಜೊತೆಗಿನ ಒಡನಾಟದ ಅನೇಕ ಘಟನೆಗಳನ್ನು ನೆನಪು ಮಾಡಿಕೊಂಡರು.
ಕನ್ನಡ ಹೋರಾಟ ಗಾರ ರಾ.ನಂ.ಚಂದ್ರಶೇಖರ್ ಮಾತನಾಡಿ ಗೋಕಾಕ್ ಚಳುವಳಿ ಸಂದರ್ಭದಲ್ಲಿ ಕನ್ನಡಿಗರಿಗೆ ದೊಡ್ಡ ಭರವಸೆಯಾಗಿ ಬಂದವರು ಡಾ.ರಾಜ್ ಕುಮಾರ್, ಅವರು ಯಾವತ್ತೇ ಹೋರಾಟಕ್ಕೆ ಇಳಿದರೂ ಸರ್ಕಾರ ನಡುಗುತ್ತಿತ್ತು ಎಂದು ಹೇಳಿ ಎಂ.ವಿ.ಸೀಯವರ ಅಂತಿಮ ದರ್ಶನ ಪಡೆಯಲು ನಾರು ಮಡಿ ಉಟ್ಟು ಬಂದಿದ್ದ ರಾಜ್ ಕುಮಾರ್ ನಮ್ಮ ನಡುವಿನ ಸಂತ.. ಲೌಕಿಕದಲ್ಲಿ ಇದ್ದೂ ಅವರು ಅಲೌಕಿಕದ ನಡೆಯನ್ನು ಸಾಧಿಸಿದ್ದರು ಎಂದರು. ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ನೇ.ಭ.ರಾಮಲಿಂಗ ಶೆಟ್ಟಿ,ಡಾ.ಪದ್ಮಿನಿ ನಾಗರಾಜು, ಕೋಶಾಧ್ಯಕ್ಷರಾದ ಪಟೇಲ್ ಪಾಂಡು, ಹಿರಿಯ ಪತ್ರಕರ್ತ ಪ್ರಶಾಂತ್ ಹೆಬ್ಬಾರ್ ಮತ್ತು ಕನ್ನಡ ಸಾಹಿತ್ಯ ಪರಿಷತ್ತಿನ ಸಿಬ್ಬಂದಿಗಳು ಭಾಗವಹಿಸಿದ್ದರು.
ಹಾವೇರಿ : ಸಮಗ್ರ ಭಾಷಾ ಅಭಿವೃದ್ಧಿಗೆ ಕಾನೂನಿನ ಸ್ವರೂಪ ನೀಡಿ, ಕನ್ನಡಿಗರಿಗೆ ಕೈಗಾರಿಕೆಗಳ ಉದ್ಯೋಗದಲ್ಲಿ ಶೇ.80 ರಷ್ಟು(80% jobs quota for Kannadigas) ಪ್ರಾಶಸ್ತ್ಯ ನೀಡಲಾಗುವುದು. ಗಡಿ ಭಾಗದ ಹಾಗೂ ಗಡಿ ಆಚೆಗಿನ ಕನ್ನಡಿಗರ ಹಿತ ಕಾಯಲು ಸರ್ಕಾರ ಬದ್ಧವಾಗಿದೆ. ಗಡಿ ಅಭಿವೃದ್ಧಿಗೆ ವಿಶೇಷ ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಹೇಳಿದರು.
ಕೈಗಾರಿಕೆಯಲ್ಲಿ ಕನ್ನಡಿಗರಿಗೆ ಹೆಚ್ಚಿನ ಉದ್ಯೋಗ ನೀಡುವ ಸಲುವಾಗಿ ನೂತನ ಉದ್ಯೋಗ ನೀತಿಯನ್ನು ಜಾರಿಗೆ ತಂದಿದ್ದೇವೆ. ಶೇ.80 ರಷ್ಟು ಕನ್ನಡಿಗರಿಗೆ ಉದ್ಯೋಗ ದೊರೆಯಬೇಕೆಂಬುದು ನಮ್ಮ ಸರ್ಕಾರದ ಸಂಕಲ್ಪವಾಗಿದೆ.ಕನ್ನಡ ನಾಡಿನ ಸಮಗ್ರ ಅಭಿವೃದ್ಧಿ ಜೊತೆಗೆ ಗಡಿನಾಡಿನ ಅಭಿವೃದ್ಧಿ ಹಾಗೂ ಸಂರಕ್ಷಣೆಗೂ ನಮ್ಮ ಸರ್ಕಾರ ಆದ್ಯತೆ ನೀಡುತ್ತಿದೆ. pic.twitter.com/cijw4iRrkj
86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ (Kannada Sahitya Sammelana) ಉದ್ಘಾಟಿಸಿ ಮಾತನಾಡಿದ ಅವರು, ಕನ್ನಡ ಅತ್ಯಂತ ಪ್ರಾಚೀನ ಭಾಷೆ. ಕನ್ನಡಿಗರ ಬದುಕು. ಪುರಾತನ, ಶ್ರೇಷ್ಠವಾದುದು. ಇಡೀ ಜಗತ್ತಿನಲ್ಲಿ ಕನ್ನಡದ ಸಂಸ್ಕೃತಿ ಅತ್ಯಂತ ಶ್ರೇಷ್ಠ ಮತ್ತು ಪರಂಪರೆ ಹಾಗೂ ಚರಿತ್ರೆ ಇರುವಂಥದ್ದು. ಕನ್ನಡದ ಸಂಸ್ಕೃತಿಗೆ ದೊಡ್ಡ ಶಕ್ತಿ, ಅರ್ಥ, ಭಾವನೆಗಳನ್ನು ತುಂಬಿ ಹಾಗೂ ಬದುಕನ್ನು ಕೊಟ್ಟಿರುವುದು ಕನ್ನಡದ ಸಾಹಿತ್ಯ ಲೋಕ. ಕನ್ನಡದ ಸಂಸ್ಕೃತಿಯಲ್ಲಿ ಸಾಹಿತ್ಯದ ಪಾತ್ರ ದೊಡ್ಡದಿದ್ದು ಇದನ್ನು ಗುರುತಿಸಿ ಬೆಳೆಸಿಕೊಂಡು ಹೋಗಬೇಕಾದ್ದು ಈ ಸಮ್ಮೇಳನಗಳ ಉದ್ದೇಶ. ಕನ್ನಡದ ಕಿಚ್ಚನ್ನು ಮತ್ತೊಮ್ಮೆ ಹಚ್ಚಿ, ಕನ್ನಡ ಕಂಪನ್ನು ಎಲ್ಲೆಡೆ ಪಸರಿಸಬೇಕು. ಕನ್ನಡವನ್ನು ಆಳವಾಗಿ ಭಾರತದಲ್ಲಿ ಬಿತ್ತಬೇಕು. ಅದು ಬೆಳೆದು ಹೆಮ್ಮರವಾಗಿ ಬೆಳೆಯಬೇಕು. ಈ ಉದ್ದೇಶಗಳಿಂದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದೆ ಎಂದರು.
ದೊಡ್ಡ ಸಾಧನೆ
ತಮ್ಮ ಹೆಸರಿನಂತೆಯೇ ಸಾಹಿತ್ಯ, ಸಾಂಸ್ಕೃತಿಕ ರಂಗಗಳಲ್ಲಿ ದೊಡ್ಡ ಸಾಧನೆ ಮಾಡಿರುವ ಪ್ರೊ.ದೊಡ್ಡರಂಗೇಗೌಡರು (Doddarangegowda) ತಮ್ಮ ಹೆಸರಿಗೆ ಅನ್ವರ್ಥವಾಗುವಂತಹ ವ್ಯಕ್ತಿತ್ವ ಹೊಂದಿದ್ದಾರೆ. ಅವರೊಬ್ಬ ಪರಿಪೂರ್ಣ ಸಾಹಿತಿ. ಮಾನವೀಯತೆಯ ಸೂಕ್ಷ್ಮತೆಗಳನ್ನು ಅರ್ಥ ಮಾಡಿಕೊಂಡು ಜನಸಾಮಾನ್ಯರಿಗೆ ಅರ್ಥವಾಗುವ ಭಾಷೆಯಲ್ಲಿ ಮಾರ್ಮಿಕವಾಗಿ ತಿಳಿಸುವ ಕೆಲಸವನ್ನು ಅವರ ಸಾಹಿತ್ಯ, ಕವಿತೆಗಳಲ್ಲಿ, ಹಾಡುಗಳಲ್ಲಿ ಕಂಡುಬರುತ್ತದೆ. ಸಾಹಿತ್ಯ, ಸಿನಿಮಾ ಮತ್ತು ಇತರ ರಂಗದಲ್ಲಿಯೂ ಖ್ಯಾತಿ ಪಡೆದು ದೊಡ್ಡ ಹೃದಯ ಹೊಂದಿದವರು ಎಂದು ಬಣ್ಣಿಸಿದರು.
ಕನ್ನಡದ ತೇರು
ನಿಕಟಪೂರ್ವ ಸಮ್ಮೇಳನಾಧ್ಯಕ್ಷರಾಗಿರುವ ಡಾ.ಹೆಚ್.ಎಸ್.ವೆಂಕಟೇಶಮೂರ್ತಿಯವರೂ ಕೂಡ ಸಂವೇದನಾಶೀಲ ಕಾವ್ಯದ ಕರ್ತೃವಾಗಿದ್ದಾರೆ. ಕನ್ನಡ ಸಾಹಿತ್ಯ ಲೋಕಕ್ಕೆ ಅಪಾರವಾದ ಕೊಡುಗೆಯನ್ನು ನೀಡಿದ್ದಾರೆ. ಕನ್ನಡ ತೇರನ್ನು ಎಳೆದು ಹಾವೇರಿಗೆ ಕೊಟ್ಟು, ಹಾವೇರಿಯಿಂದ ದೊಡ್ಡರಂಗೇಗೌಡರು ರಾಜ್ಯದಲ್ಲಿ ಈ ತೇರನ್ನು ಕೊಂಡೊಯ್ಯಲಿದ್ದಾರೆ ಎಂದು ಹೇಳಿದರು.
ಕನ್ನಡವನ್ನು ಕಟ್ಟಲು ಆತ್ಮಸಂಕಲ್ಪ
ಒಂದು ಭಾಷೆ , ಸಂಸ್ಕೃತಿ ಬೆಳೆಯಬೇಕಾದರೆ ನಡೆದು ಬಂದ ದಾರಿಯನ್ನು ಸಿಂಹಾವಲೋಕನ ಮಾಡಬೇಕು. ಇದರಲ್ಲಿ ನಮ್ಮ ಪಾತ್ರದ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು ಮತ್ತು ಮುಂದಿನ ಭವಿಷ್ಯವನ್ನು ನಿರ್ಮಿಸಲಬೇಕು. ಕನ್ನಡದ ಪರಂಪರೆ ಅತ್ಯಂತ ಶ್ರೀಮಂತ ಪರಂಪರೆ. ಹಾಗೂ ಕನ್ನಡ ಭಾಷೆ ಎಂದಿಗೂ ಬಡವಾಗಿಲ್ಲ. ಶತ ಶತ ಮಾನಗಳವರೆಗೆ, ಸೂರ್ಯ ಚಂದ್ರರು ಇರುವವರೆಗೂ ಕನ್ನಡ ಶ್ರೀಮಂತವಾಗಿ ಬೆಳೆಯುತ್ತಲೇ ಸಾಗುತ್ತದೆ. ಕನ್ನಡಕ್ಕೆ ಆಪತ್ತು ತರುವ ಯಾವುದೇ ಶಕ್ತಿ ಹುಟ್ಟಿಲ್ಲ. ಹುಟ್ಟುವುದೂ ಇಲ್ಲ. ಆದ್ದರಿಂದ ಆತ್ಮವಿಶ್ವಾದಿಂದ, ಆತ್ಮಸಂಕಲ್ಪದಿಂದ ಕನ್ನಡವನ್ನು ಕಟ್ಟಿ ಬೆಳೆಸೋಣ. ಬೆಳವಣಿಗೆಯಲ್ಲಿ ನಮ್ಮದೂ ಕೊಡುಗೆ ಇರಲಿ ಎಂಬ ಭಾವನೆಯಿಂದ ಸಮ್ಮೇಳನವನ್ನು ಪ್ರಾರಂಭ ಮಾಡಬೇಕಿದೆ. ಆದಿ ಕವಿ ರನ್ನ ಪಂಪರಿಂದ ಹಿಡಿದು ಎಂಟು ಜ್ಞಾನಪೀಠ ಪ್ರಶಸ್ತಿಗಳನ್ನು ಪಡೆದವರು ಕನ್ನಡಿಗರು. ದೇಶದ ಯಾವುದೇ ರಾಜ್ಯದಲ್ಲಿ ಎಂಟು ಜನ ಜ್ಞಾನಪೀಠ ಪ್ರಶ್ತಸ್ತಿ ಪಡೆದ ಉದಾಹರಣೆ ಇಲ್ಲ. ಇದು ಕನ್ನಡದ ಸಾಹಿತ್ಯದ ಆತ್ಮಶಕ್ತಿಯನ್ನು ತೋರಿಸುತ್ತದೆ. ಎರಡು ಸರಸ್ವತಿ ಸಮ್ಮಾನ್ ಪ್ರಶಸ್ತಿಗಳು ಕನ್ನಡಕ್ಕೆ ಲಭ್ಯವಾಗಿದೆ ಎಂದರು.
ವಿಭಿನ್ನತೆಯಲ್ಲಿ ಏಕತೆ
ಕನ್ನಡದ ಶ್ರೀಮಂತ ಲೋಕಕ್ಕೆ ಅಂತ:ಸತ್ವ ಮತ್ತು ಆಧ್ಯಾತ್ಮಿಕ ಬದುಕಿನ ದಾರಿಯನ್ನು ಹಾಗೂ ಕನ್ನಡದವನ್ನೂ ಶ್ರೀಮಂತ ಮಾಡಿರುವುದು ವಚನ ಮತ್ತು ದಾಸ ಸಾಹಿತ್ಯ ಪ್ರಕಾರಗಳು. ಇವೆರಡೂ ಕನ್ನಡದ ಅಂತಃಸತ್ವ ಗಟ್ಟಿಗೊಳಿಸಿವೆ. ಇವೆಲ್ಲವನ್ನೂ ನಮ್ಮ ದಿನನಿತ್ಯದ ಬದುಕಿನಲ್ಲ ಅನುಭವಿಸುತ್ತಿದ್ದೇವೆ. ಕನ್ನಡಿಗರ ಭಾಷೆ ವಿಭಿನ್ನತೆಯಲ್ಲಿ ಏಕತೆ ಇದೆ. ನಡುನಾಡ ಕನ್ನಡ, ಗಡಿನಾಡು ಕನ್ನಡ, ತ್ತರ, ದಕ್ಷಿಣ ಕರ್ನಾಟಕ, ಕರಾವಳಿ, ಕಲ್ಯಾಣ ಕರ್ನಾಟಕದ ಕನ್ನಡ ಎಲ್ಲದರಲ್ಲಿಯೂ ಭಾಷೆಯ ಸೊಗಡು ಅಲ್ಲಿನ ಬದುಕಿನ ಜೊತೆಗೆ ಹಾಸುಹೊಕ್ಕಾಗಿ ಬೆಳೆಯುತ್ತಿದೆ. ಕನ್ನಡದ ವಿಭಿನ್ನ ಆಯಾಮಗಳೂ ಮೂಲ ಕನ್ನಡದ ಜೊತೆಗೆ ಬೆಳೆಯುತ್ತಿರುವುದು ಹೆಮ್ಮೆಯ ವಿಚಾರ. ಕನ್ನಡ ಭಾಷೆಗೆ ದೊಡ್ಡ ಪರಂಪರೆಯಿದೆ. ಕನ್ನಡದ ಹೃದಯಗಳು ಒಂದಾಗಲು ಅವಕಾಶ ದೊರೆತಿದ್ದು ಕರ್ನಾಟಕ ಏಕೀಕರಣದ ಹೋರಾಟದ ಮೂಲಕ ಕರ್ನಾಟಕ ರಾಜ್ಯ ಸ್ಥಾಪನೆಯಾದಾಗ ನಮ್ಮದೇ ನಾಡು, ರಾಜ್ಯ ದೊರಕಿಸಿಕೊಳ್ಳಲು ಸಾಧ್ಯವಾಯಿತು. ಕರ್ನಾಟಕ ಏಕೀಕರಣ ಚಳುವಳಿಗೆ ಹಳೆಯ ಮೈಸೂರು ಭಾಗದ ಜನರೂ ಕೈಜೋಡಿಸಿದ ಪರಿಣಾಮವಾಗಿ ಕನ್ನಡ ಭಾಷಿಕರೆಲ್ಲ ಒಂದು ಆಡಳಿತದ ತೆಕ್ಕೆಗೆ ಒಳಪಡಲು ಸಾಧ್ಯವಾಯಿತು ಎಂದು ತಿಳಿಸಿದರು.
ಏಕೀಕರಣ ಹೋರಾಟ
ಉತ್ತರ ಕರ್ನಾಟಕ ಎಲ್ಲಾ ಮುಖಂಡರು ಹೋರಾಟ ಮಾಡಿದಾಗ, ಕುವೆಂಪು ಮತ್ತೆಲ್ಲರೂ ಸೇರಿ ಕನ್ನಡವನ್ನು ಒಂದು ಮಾಡಿದ್ದಾರೆ. ಹಾವೇರಿಯ ಸಿದ್ದಪ್ಪ ಹೊಸಮನಿ, ಅಂಗಾರಪ್ಪ ದೊಡ್ಡಮೇಟಿ, ಗುದ್ಲೆಪ್ಪ ಹಳ್ಲಿಕೇರಿ, ಮಾಜಿ ಮುಖ್ಯಮಂತ್ರಿ ಎಸ್.ನಿಜಲಿಂಗಪ್ಪ, ಇವರೆಲ್ಲರೂ ಏಕೀಕರಣ ಹೋರಾಟದ ಮುಂಚೂಣಿಯಲ್ಲಿದ್ದವರು. ಇವರೆಲ್ಲರ ಹೋರಾಟದ ಪರಿಣಾಮವಾಗಿ ಇಂದು ಕನ್ನಡ ಭಾಷೆ, ಕನ್ನಡ ಒಂದಾಗಿದೆ. ಈ ಹೋರಾಟ ಸ್ವತಂತ್ರ ಹೋರಾಟದಿಂದ ಬಂದದ್ದು. ಹಾವೇರಿಯ ಮೈಲಾರ ಮಹದೇವಪ್ಪನವರ ಹೋರಾಟ, ತ್ಯಾಗ, ಬಲಿದಾನ ಎಂದೂ ಮರೆಯಲು ಸಾಧ್ಯವಿಲ್ಲ. ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರು ಕರ್ನಾಟಕ ಎಂದು ನಾಮಕರಣ ಮಾಡಿ ಕನ್ನಡಿಗರ ಭಾವನೆಯನ್ನು ಒಗ್ಗೂಡಿಸಿದ್ದಾರೆ. ಎಲ್ಲಾ ಭಾವನೆಗಳಲ್ಲೂ ನಮ್ಮ ಒಡಲಾಳದಲ್ಲಿ ಇರಿಸಿಕೊಂಡು ಮುಂದುವರೆಯುತ್ತಿದ್ದೇವೆ ಎಂದರು.
ಆದಿ ಕವಿ ಅಮೋಘವರ್ಷ ನೃಪತುಂಗರಿಂದ ಆರಂಭವಾಗಿ, ರನ್ನ,ಪಂಪರಿಂದ ಹಿಡಿದು, 8 ಜನ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರನ್ನು ಹೊಂದಿರುವ ದೇಶದ ಏಕೈಕ ಭಾಷೆ ನಮ್ಮ ಕನ್ನಡ ಎಂಬುದು ನಮಗೆ ಹೆಮ್ಮೆಯ ವಿಷಯವಾಗಿದೆ. ಇದು ಕನ್ನಡ ಸಾಹಿತ್ಯದ ಆತ್ಮಶಕ್ತಿಯನ್ನು ತೋರಿಸುತ್ತದೆ. 1/2 pic.twitter.com/HySqegKhFr
ನೀರಾವರಿ ದಶಕ
ಕನ್ನಡ ನಾಡು ಸಂಪದ್ಭರಿತವಾಗಿದೆ. 10 ಕೃಷಿ ವಲಯಗಳು ನಮ್ಮ ನಾಡಿನಲ್ಲಿವೆ, ವರ್ಷದ ಎಲ್ಲಾ ದಿನಗಳಲ್ಲಿಯೂ ಈ ನಾಡಿನಲ್ಲಿ ಒಂದಲ್ಲ ಒಂದು ಬೆಳೆ, ಫಸಲು ಸದಾ ಹಸಿರು ಉಕ್ಕಿಸುತ್ತಿರುತ್ತದೆ. ದುಡಿಯುವ ವರ್ಗ , ರೈತರು, ಕೂಲಿಕಾರರು ಈ ನಾಡನ್ನು ಕಟ್ಟಿದ್ದಾರೆ. ಕಳೆದ ಐದು ವರ್ಷಗಳಲ್ಲಿ 1.5 ಲಕ್ಷ ಎಕರೆ ಭೂಮಿಗೆ ನೀರಾವರಿ ಸೌಲಭ್ಯ ಕಲ್ಪಿಸಲಾಗಿದೆ. ಮುಂದಿನ ಒಂದು ದಶಕ ನೀರಾವರಿ ದಶಕವಾಗಿರುತ್ತದೆ. ಎಲ್ಲಾ ಯೋಜನೆಗಳನ್ನು ಪೂರ್ಣಗೊಳಿಸುವ ಬದ್ಧತೆ ನಮ್ಮದಾಗಿದೆ. ಆಹಾರ ಉತ್ಪಾದನೆ ನಮ್ಮ ಸ್ವಾಭಿಮಾನದ ಸಂಪತ್ತು. ದುಡಿಯುವ ವರ್ಗ ರಾಜ್ಯವನ್ನು ಕಟ್ಟುತ್ತಿದೆ. ನಾಡು ಕಟ್ಟುವ ರೈತರಿಗೆ, ಕೂಲಿಕಾರ್ಮಿಕರಿಗೆ, ಕುಶಲಕರ್ಮಿಗಳಿಗೆ ಅಭಿನಂದನೆಗಳನ್ನು ತಿಳಿಸಿದರು.
ದಾರಿದೀಪವಾಗಿರುವ ದಾರ್ಶನಿಕರ ವಚನಗಳು :
ಹಾವೇರಿ ಜಿಲ್ಲೆಯ ದಾರ್ಶನಿಕರಾದ ಸರ್ವಜ್ಞನ ವಚನಗಳು ಇಂದಿಗೂ ದಾರಿದೀಪವಾಗಿದೆ. ಕನಕದಾಸರು, ಸಂತಶಿ ಶುನಾಳ ಶರೀಫರು ಧರ್ಮದ ಚೌಕಟ್ಟನ್ನು ಮೀರಿ ಬದುಕಿಗೆ ಅಧ್ಯಾತ್ಮವನ್ನು ತಂದಿರುವ ಸಂತ. ಪಂಚಾಕ್ಷರಿ ಗವಾಯಿಗಳು, ಹಾನಗಲ್ ಕುಮಾರಸ್ವಾಮಿ, ಗಳಗನಾಥರು, ವಿ.ಕೃ.ಗೋಕಾರರು ಕರ್ನಾಟಕಕ್ಕೆ ಮಹತ್ತರ ಕೊಡುಗೆ ನೀಡಿದ್ದಾರೆ. ಪಾಟೀಲ ಪುಟ್ಟಪ್ಪನವರು, ಚಂದ್ರಶೇಖರ ಪಾಟೀಲರ ಕೊಡುಗೆ ಅಪಾರ ಎಂದು ನೆನಪು ಮಾಡಿಕೊಂಡರು.
ವಿಭಿನ್ನತೆಯಲ್ಲಿ ಅನೇಕತೆಯನ್ನು ಹೊಂದಿರುವ ಏಕೈಕ ಭಾಷೆ ನಮ್ಮ ಕನ್ನಡ ಭಾಷೆ. ಕರಾವಳಿ ಶೈಲಿಯ ಕನ್ನಡ, ಮೈಸೂರು ಕನ್ನಡ, ಉತ್ತರ ಕರ್ನಾಟಕ ಶೈಲಿಯ ಕನ್ನಡ, ಗಡಿ ನಾಡು ಕನ್ನಡ ಹೀಗೆ ಹತ್ತು ಹಲವು ಆಯಾಮಗಳಲ್ಲಿ ನಮ್ಮ ಕನ್ನಡ ಭಾಷೆ ಬೆಳೆಯುತ್ತಿದೆ ಎಂಬುದು ಹೆಮ್ಮೆಯ ವಿಷಯವಾಗಿದೆ. pic.twitter.com/W6DRQ7uQjj
ಕನ್ನಡಿಗರ ಕೈಗಳಿಗೆ ಕೆಲಸ ನೀಡುವ ಉದ್ಯೋಗ ನೀತಿ
ಕನ್ನಡ ಭಾಷೆಗೆ ಹತ್ತು ಎಲ್ಲ ಕ್ಷೇತ್ರಗಳಲ್ಲಿ ಕನ್ನಡವನ್ನು ಉಳಿಸಬೇಕು, ಬೆಳೆಸಬೇಕು ಎಂಬ ಆಶಯದಿಂದ ಸಮಗ್ರವಾದ ಕಾನೂನನ್ನು ರೂಪಿಸಲಾಗುತ್ತಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಆದೇಶದಂತೆ ಈಗಲೇ ರಾಜ್ಯದ ಕಾನೂನು ಆಯೋಗವು ಕರಡು ಸಿದ್ಧಪಡಿಸಿದೆ. ಇನ್ನಷ್ಟು ವಿಸ್ತೃತ ಮತ್ತು ವ್ಯಾಪಕ ಚರ್ಚೆಗಳಾದ ಕೂಡಲೇ ಈ ಕಾನೂನು ಜಾರಿಗೊಳ್ಳುತ್ತದೆ. ಕೈಗಾರಿಕೆಗಳ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಶೇ.80 ರಷ್ಟು ಪ್ರಾಶಸ್ತ್ಯ ದೊರೆತು ಎಲ್ಲ ಕನ್ನಡಿಗರ ಕೈಗಳಿಗೆ ಕೆಲಸ ನೀಡುವ ಉದ್ಯೋಗ ನೀತಿಯ ತೀರ್ಮಾನವನ್ನು ರಾಜ್ಯದ ಸಚಿವ ಸಂಪುಟದಲ್ಲಿ ಕೈಗೊಳ್ಳಲಾಗುವುದು ಎಂದರು.
ಗಡಿಭಾಗದ ಹಾಗೂ ಗಡಿಯಾಚೆಗಿನ ಕನ್ನಡಿಗರ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಅದಕ್ಕಾಗಿ ವಿಶೇಷ ಅನುದಾನ ನೀಡಲಾಗುವುದು. ಮೂಲಭೂತಸೌಕರ್ಯ ಸೇರಿದಂತೆ ಗಡಿಭಾಗಗಳ ಸಂಪೂರ್ಣ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಗಡಿಭಾಗದ ಕನ್ನಡಿಗರ ಸಮಸ್ಯೆಗಳನ್ನು ನಿವಾರಿಸುವಂತಹ, ಶಾಲೆಗಳನ್ನು ಉಳಿಸುವಂತಹ ಕೆಲಸವನ್ನು ಮಾಡಲಾಗುತ್ತದೆ ಹೇಳಿದರು.
ಸಾಹಿತ್ಯ ಸಮ್ಮೇಳನ ಎಂದರೇ ಕೇವಲ ಉದ್ಘಾಟನೆ ಹಾಗೂ ಸಮಾರೋಪ ಸಮಾರಂಭವಲ್ಲ. ಸಾಹಿತ್ಯ ಸಮ್ಮೇಳನದ ನಿಜವಾದ ಸ್ವಾದ ಅಡಗಿರುವುದು ಗೋಷ್ಠಿಗಳಲ್ಲಿ. ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಗೋಷ್ಠಿಗಳಲ್ಲಿ ಭಾಗವಹಿಸುವ ಮೂಲಕ ಈ ಸಮ್ಮೇಳನವನ್ನು ಯಶಸ್ವಿಗೊಳಿಸೋಣ. 1/2 pic.twitter.com/JZEX8pVvzd
ಕನ್ನಡಿಗರ ಬದುಕನ್ನು ಕಟ್ಟಿಕೊಡುವಂತಹ ವೇದಿಕೆ :
ಸಾಹಿತ್ಯ ಸಮ್ಮೇಳನದಲ್ಲಿ ಕೈಗೊಳ್ಳಲಾಗುವ ನಿರ್ಣಯ ಹಾಗೂ ನಿಲುವುಗಳನ್ನು ಸರ್ಕಾರ ಚಾಚೂ ತಪ್ಪದೇ ಪಾಲಿಸುತ್ತದೆ. ಕನ್ನಡ ಸಾಹಿತ್ಯ ಮತ್ತು ಭಾಷೆಯ ಭವಿಷ್ಯವನ್ನು ಬರೆಯುವಂತಹ , ಕನ್ನಡಿಗರ ಬದುಕನ್ನು ಕಟ್ಟಿಕೊಡುವಂತಹ ವೇದಿಕೆಯಾಗಲಿ. ನವಕರ್ನಾಟಕ ನಿರ್ಮಾಣಕ್ಕೆ ಸಾಹಿತ್ಯ ಸಮ್ಮೇಳನ ಕೊಡುಗೆಯನ್ನು ನೀಡಲಿ. ತಾವೊಬ್ಬ ಕನ್ನಡದ ನಿಯತ್ತಿನ ಸೇವಕ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಅವರು ಹೆಮ್ಮೆಯಿಂದ ತಿಳಿಸಿದರು.
ಸಮ್ಮೇಳನಾಧ್ಯಕ್ಷ ಡಾ.ದೊಡ್ಡರಂಗೇಗೌಡ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ,ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ವಿ.ಸುನೀಲ್ ಕುಮಾರ್, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಅರೆಬೈಲ್ ಶಿವರಾಮ ಹೆಬ್ಬಾರ್, ಸಂಸದ ಶಿವಕುಮಾರ ಉದಾಸಿ, ಶಾಸಕರಾದ ಅರುಣ ಪೂಜಾರ, ವಿರೂಪಾಕ್ಷಪ್ಪ ಬಳ್ಳಾರಿ, ಶ್ರೀನಿವಾಸ ಮಾನೆ, ವಿಧಾನ ಪರಿಷತ್ ಸದಸ್ಯರಾದ ಎಸ್.ವಿ.ಸಂಕನೂರ, ಸಲೀಂ ಅಹ್ಮದ್, ಆರ್.ಶಂಕರ್, ಪ್ರದೀಪ ಶೆಟ್ಟರ್, ನಗರಸಭೆ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ವಾಕರಸಾಸಂ ಉಪಾಧ್ಯಕ್ಷ ಬಸವರಾಜ ಕೆಲಗಾರ, ಮಾಜಿ ಸಚಿವರಾದ ಬಸವರಾಜ ಶಿವಣ್ಣವರ, ಮನೋಹರ ತಹಸೀಲ್ದಾರ್, ರುದ್ರಪ್ಪ ಲಮಾಣಿ ಮತ್ತಿತರರು ವೇದಿಕೆಯಲ್ಲಿದ್ದರು.
ಸ್ವಾಗತ ಸಮಿತಿ ಅಧ್ಯಕ್ಷ ,ಶಾಸಕ ನೆಹರು ಓಲೇಕಾರ ಸ್ವಾಗತಿಸಿದರು, ಕಸಾಪ ಅಧ್ಯಕ್ಷ ಡಾ.ಮಹೇಶ ಜೋಶಿ ಆಶಯ ಮಾತುಗಳನ್ನಾಡಿದರು.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಪಂಪ ಮಹಾಕವಿ (Pampa Mahakavi) ರಸ್ತೆಯ ಹೆಸರು ಬದಲಾವಣೆಗೆ ಮುಂದಾಗಿಲ್ಲ. ಕೆಲವು ಪೂರ್ವಾಗ್ರಹ ಪೀಡಿತರು, ಕನ್ನಡ ಸಾಹಿತ್ಯ ಪರಿಷತ್ತಿನ ಏಳಿಗೆಯನ್ನು ಸಹಿಸಲಾಗದೆ, ಇಂತಹ ವಿವಾದಾತ್ಮಕ ಹೇಳಿಕೆಯನ್ನು ನೀಡುತ್ತಿದ್ದಾರೆ ಎಂದು ಅಧ್ಯಕ್ಷ ನಾಡೋಜ ಡಾ. ಮಹೇಶ್ ಜೋಶಿ(Mahesh Joshi) ಕಿಡಿಕಾರಿದ್ದಾರೆ.
ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಎದುರಿನ ಪಂಪ ಮಹಾಕವಿ ಮಾರ್ಗವನ್ನು ಕನ್ನಡಮಯ ಮಾಡಬೇಕು ಹಾಗೂ ಆಕರ್ಷಣೀಯವನ್ನಾಗಿಸಲು, ಈ ರಸ್ತೆಯನ್ನು ಅಭಿವೃದ್ಧಿ ಪಡಿಸಬೇಕೆಂಬ ಮನವಿಯನ್ನು ಮಾತ್ರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಕನ್ನಡ ಸಾಹಿತ್ಯ ಪರಿಷತ್ ನೀಡಿದೆ ಎಂದು ಮಹೇಶ್ ಜೋಶಿ ಸ್ಪಷ್ಟನೆ ನೀಡಿದ್ದಾರೆ
ಈ ವಿಚಾರಕ್ಕೆ ಎದ್ದ ಗೊಂದಲಕ್ಕೆ ಕನ್ನಡ ಸಾಹಿತ್ಯ ಪರಿಷತ್ತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಸ್ಪಷ್ಟನೆ ನೀಡಿದೆ.
ಹೇಳಿಕೆಯಲ್ಲಿ ಏನಿದೆ?
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಕನ್ನಡ ಸಾಹಿತ್ಯ ಪರಿಷತ್ತು ನೀಡಿರುವ ಮನವಿಯ ಕುರಿತು ಸ್ಪಷ್ಟ ಮಾಹಿತಿಯಿಲ್ಲದೆ, ಕೆಲವು ಮಾಧ್ಯಮಗಳಲ್ಲಿ ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ತಿನ ಎದುರಿಗೆ ಇರುವ ಪಂಪ ಮಹಾಕವಿ ರಸ್ತೆಯ ಹೆಸರು ಬದಲಾವಣೆ ಮಾಡಲು ಕನ್ನಡ ಸಾಹಿತ್ಯ ಪರಿಷತ್ತು ಮುಂದಾಗಿದೆ ಎನ್ನುವ ವರದಿಗಳು ಬಿತ್ತರವಾಗುತ್ತಿವೆ. ವಾಸ್ತವದಲ್ಲಿ ಈ ವಿಷಯದ ಕುರಿತು ಕನ್ನಡ ಸಾಹಿತ್ಯ ಪರಿಷತ್ತು ಯಾವುದೇ ಪ್ರಕಟಣೆಯಾಗಲಿ, ಮಾಧ್ಯಮ ಹೇಳಿಕೆಗಳನ್ನಾಗಲಿ ಬಿಡುಗಡೆ ಮಾಡಿರುವುದಿಲ್ಲ. ಕೆಲವರು ದುರುದ್ದೇಶದಿಂದ ಹಾಗೂ ಉದ್ಧೇಶಪೂರ್ವಕವಾಗಿಯೇ ತಪ್ಪು ಗ್ರಹಿಕೆಯಿಂದ ಇಂತಹ ವರದಿಗಳು ಬಿತ್ತರಿಸುತ್ತಿದ್ದಾರೆ.
ಪಂಪ ಮಹಾಕವಿಯ ಬಗ್ಗೆ ಕನ್ನಡ ಸಾಹಿತ್ಯ ಪರಿಷತ್ತು ಅಪಾರವಾದ ಗೌರವ ಹೊಂದಿದ್ದು, ಪರಿಷತ್ತಿನ ಕೇಂದ್ರ ಕಚೇರಿ ಇದೇ ರಸ್ತೆಯಲ್ಲಿ ಇರುವುದರಿಂದ, ಕನ್ನಡ ಸಾಹಿತ್ಯ ಪರಿಷತ್ತು ಹೆಮ್ಮೆಪಡುತ್ತೇವೆ. ಕಳೆದ ಕೆಲವು ದಿನಗಳ ಹಿಂದೆ, ಮಿಂಟೋ ಆಸ್ಪತ್ರೆ ವೃತ್ತದಿಂದ ಮಕ್ಕಳಕೂಟ ವೃತ್ತದವರೆಗಿನ ರಸ್ತೆಯನ್ನು ʻಕನ್ನಡಮಯʼಗೊಳಿಸಬೇಕು, ಕನ್ನಡ ಸಾಹಿತ್ಯ ಪರಂಪರೆ ಬಿಂಬಿಸುವ ಭೂದೃಶ್ಯ(ಲ್ಯಾಂಡ್ಸ್ಕೇಪ್) ಸಿದ್ಧಪಡಿಸಬೇಕು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಈ ಮಾರ್ಗವನ್ನು ಅಭಿವೃದ್ಧಿಪಡಿಸಿ ʻಕನ್ನಡಮಯ ವಾತಾವರಣʼ ನಿರ್ಮಾಣ ಮಾಡಬೇಕೆಂಬ ವಿನಂತಿಯನ್ನು, ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು ಮಹಾನಗರ ಪಾಲಿಕೆಗೆ ಪತ್ರ ಸಲ್ಲಿಸಲಾಗಿತ್ತು.
ಇದೇ ಸಂದರ್ಭದಲ್ಲಿ ಕೆಲವು ಪರಿಷತ್ತಿನ ಅಭಿಮಾನಿಗಳು ಹಾಗೂ ಕನ್ನಡ ಪ್ರೇಮಿಗಳು, ಪಂಪ ಮಹಾಕವಿ ಹೆಸರಿನೊಂದಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ಹೆಸರನ್ನು ಸೇರಿಸಿ ʻಪಂಪ ಮಹಾಕವಿ – ಕನ್ನಡ ಸಾಹಿತ್ಯ ಪರಿಷತ್ತು ರಸ್ತೆʼ ಎಂದು ಅಥವಾ ಆದಿಕವಿ ಪಂಪನಿಗೆ ನಾಡಿನ ಮೊದಲ ಗುರು ʻನಾಡೋಜʼಎಂಬ ಹೆಗ್ಗಳಿಕೆ ಇರುವುದರಿಂದ, ʻನಾಡೋಜ ಪಂಪ ಮಹಾಕವಿ-ಕನ್ನಡ ಸಾಹಿತ್ಯ ಪರಿಷತ್ತು ರಸ್ತೆʼ ಎಂದು ನಾಮಕರಣಕ್ಕೆ ಸಲಹೆ ಕೊಟ್ಟಿರುತ್ತಾರೆ. ಆದರೆ ಕನ್ನಡ ಸಾಹಿತ್ಯ ಪರಿಷತ್ತು ಇದರ ಬಗ್ಗೆ ಕೇವಲ ಸಲಹೆ, ಸೂಚನೆಗಳನ್ನು ಆಲಿಸಲಾಗಿದೆಯೇ ಹೊರತು, ಯಾವುದೇ ನಿರ್ಧಾರವನ್ನು ಕೈಗೊಂಡಿಲ್ಲ ಎಂದು ನಾಡೋಜ ಡಾ. ಮಹೇಶ ಜೋಶಿ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಟಿ20 ವಿಶ್ವಕಪ್ ಟೀಂ ಪ್ರಕಟ – ಬುಮ್ರಾ ಇನ್, ಜಡೇಜಾ ಔಟ್
ಕೇಂದ್ರದ ವ್ಯಾಪ್ತಿಯಲ್ಲಿ ಬರುವ ದೂರದರ್ಶನವನ್ನು ಕನ್ನಡಮಯ ಮಾಡುವುದರೊಂದಿಗೆ ʻಸಮೀಪ ದರ್ಶನʼವನ್ನಾಗಿಸಿದ್ದು, ಜನರು ನೆನೆಸಿಕೊಳ್ಳುತ್ತಿದ್ದಾರೆ. ಅದೇ ರೀತಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಸಹ ʻಜನಸಾಮಾನ್ಯರ ಪರಿಷತ್ತುʼ ಮಾಡುವುದಕ್ಕಾಗಿ ನಾಡು ನುಡಿ, ಸಂಸ್ಕೃತಿ ವಿಚಾರದಲ್ಲಿ ಅಪಾರವಾದ ಕಾಳಜಿಯೊಂದಿಗೆ ಕೆಲಸ ಮಾಡುವಲ್ಲಿ ಹೊಸತನವನ್ನು ತರುತ್ತಿರುವ ಹಿನ್ನೆಲೆಯಲ್ಲಿ, ಕೆಲವು ಪೂರ್ವಾಗ್ರಹ ಪೀಡಿತರು, ಕನ್ನಡ ಸಾಹಿತ್ಯ ಪರಿಷತ್ತಿನ ಏಳಿಗೆಯನ್ನು ಸಹಿಸಲಾಗದೆ, ಇಂತಹ ವಿವಾದಾತ್ಮಕ ಹೇಳಿಕೆಯನ್ನು ನೀಡುತ್ತಿದ್ದಾರೆ. ವಿಕೃತ ಮನಸ್ಸನ್ನು ಹೊಂದಿ, ವಿವಾದ ಸೃಷ್ಟಿಸುವ ಮೂಲಕವೇ, ಪ್ರಚಾರದಲ್ಲಿ ಇರಬೇಕೆಂದು, ದುರದ್ದೇಶ ಹೊಂದಿದವರು ಯಾವಾಗಲೂ ಸಕ್ರಿಯವಾಗಿರುವುದು ದುರಂತ ಎಂದು ವಿಷಾದ ವ್ಯಕ್ತ ಪಡಿಸಿದ್ದಾರೆ.
ಕನ್ನಡ-ಕನ್ನಡಿಗ-ಕರ್ನಾಟಕಕ್ಕಾಗಿ ದುಡಿಯುವ ಕನ್ನಡ ಸಾಹಿತ್ಯ ಪರಿಷತ್ತಿಗೆ ಸಹಕರಿಸುವ ಬದಲು, ವಾಸ್ತವವನ್ನು ಅರಿಯದೆ ತಮ್ಮ ಬುದ್ಧಿಗೆ ತಕ್ಕ ವಿಚಾರವನ್ನು ರೂಪಿಸಿಕೊಂಡು, ರಾಜಕೀಯ ಲೇಪ ಮಾಡಿ ಕೊಡುತ್ತಿರುವ ಹೇಳಿಕೆಗಳು ಆಕ್ಷೇಪಾರ್ಹವಾಗಿದೆ. ಕನ್ನಡ ಕಟ್ಟಿ ಬೆಳೆಸುವ ನಿಟ್ಟಿನಲ್ಲಿ ಹತ್ತಾರು ಕನಸುಗಳನ್ನು ಹೊತ್ತಿರುವ ಕನ್ನಡ ಸಾಹಿತ್ಯ ಪರಿಷತ್ತಿಗೆ ಯಾರೇ ಸೂಕ್ತ ಸಲಹೆಗಳನ್ನು ನೀಡಿದರೂ ಮುಕ್ತವಾಗಿ, ಸ್ವೀಕರಿಸುವುದು ಕನ್ನಡ ಸಾಹಿತ್ಯ ಪರಿಷತ್ತಿನ ಪರಂಪರೆಯಾಗಿದೆ. ಯಾವುದೇ ಪರಿಣಾಮಕಾರಿಯಾದ ನಿರ್ಣಯಗಳನ್ನು ತೆಗೆದುಕೊಳ್ಳುಲು ಪರಿಷತ್ತಿಗೆ ಒಂದು ಕಾನೂನು ಚೌಕಟ್ಟು ಇರುತ್ತದೆ. ʻಕಾರ್ಯಕಾರಿ ಸಮಿತಿʼ ಎನ್ನುವ ಮಹತ್ವದ ವ್ಯವಸ್ಥೆ ಇರುತ್ತದೆ. ಅದರಲ್ಲಿಯೇ ಎಲ್ಲಾ ನಿರ್ಣಯಗಳು ಕೈಗೊಳ್ಳಲಾಗುತ್ತದೆಯೇ ಹೊರತು, ವೈಯಕ್ತಿಕವಾಗಿ ತೀರ್ಮಾನ ತೆಗೆದುಕೊಳ್ಳುವುದು ಸಾಧ್ಯವೇ ಇಲ್ಲ, ಎನ್ನುವ ಕಾನೂನಾತ್ಮಕ ತಿಳುವಳಿಕೆಯನ್ನು ಸುಳ್ಳು ಸುದ್ಧಿ ಹಬ್ಬಿಸುತ್ತಿರುವುದನ್ನು ಮೊದಲು ಅರಿತುಕೊಳ್ಳಬೇಕು. ಯಾವುದೇ ಕಾರ್ಯಯೋಜನೆಯನ್ನು ಅನುಷ್ಠಾನಗೊಳಿಸುವಾಗ, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು, ಸೂಕ್ತ ಚರ್ಚೆಯ ನಂತರವೇ, ನಿರ್ಣಯ ಕೈಗೊಳ್ಳಲಾಗುವುದು. ಕನ್ನಡ ಸಾಹಿತ್ಯ ಪರಿಷತ್ತಿನ ನಿಬಂಧನೆ ತಿದ್ದುಪಡಿ ತರುವಾಗ, ವಿದ್ಯಾರ್ಹತೆ ಬಗ್ಗೆ ಸುದೀರ್ಘವಾಗಿ ಚರ್ಚೆ ನಡೆದು, ಎಲ್ಲರ ಒಪ್ಪಿಗೆಯ ಮೇರೆಗೆ ನಿಬಂಧನೆ ತಿದ್ದುಪಡಿ ಮಾಡಿರುವುದನ್ನು, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿಯವರು ಜ್ಞಾಪಿಸುತ್ತಾ, ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ದ ಕನ್ನಡಿಗರು ಕಿವಿಗೊಡಬಾರದು ಎಂದು ಮನವಿ ಮಾಡಿದ್ದಾರೆ.
Live Tv
[brid partner=56869869 player=32851 video=960834 autoplay=true]
ಚಿಕ್ಕೋಡಿ: ನಾಡೋಜ ಡಾ.ಮಹೇಶ್ ಜೋಶಿ ಅವರು ಕಸಾಪ ರಾಜ್ಯಾಧ್ಯಕ್ಷರಾಗಿರುವುದು ಹರ್ಷ ತಂದಿದೆ. ಅವರು ಕನ್ನಡದ ನಿಷ್ಠಾವಂತ ಸೇವಕ ಎಂದು ಆರ್‍ಎಸ್‍ಎಸ್ ಮುಖಂಡ ಹಾಗೂ ಶಿಕ್ಷಣ ಪ್ರೇಮಿ ಅರವಿಂದರಾವ್ ದೇಶಪಾಂಡೆ ಹೇಳಿದರು.
ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ದಿನಾಂಕ 21ರಂದು ನಡೆದ ಕಸಾಪ ಚುನಾವಣೆಯಲ್ಲಿ ಜೋಶಿ ಅವರು 69,431 ಮತಗಳನ್ನು ಪಡೆಯುವ ಮೂಲಕ ದಾಖಲೆಯ ಗೆಲುವು ಸಾಧಿಸಿದ್ದಾರೆ. ಕಸಾಪ ನೂತನ ಸಾರಥಿಯಾಗಿ ಜೋಶಿ ಅವರು ಕನ್ನಡಾಂಬೆಯ ಸೇವೆಯನ್ನು ವಿನೂತನ ಮಾದರಿಯಲ್ಲಿ ಮಾಡುತ್ತಾರೆ ಎಂಬ ವಿಶ್ವಾಸದಿಂದ ಕನ್ನಡಿಗರು ಮತ ನೀಡಿದ್ದಾರೆ ಎಂದು ಸಂತೋಷ ವ್ಯಕ್ತಪಡಿಸಿದರು. ಇದನ್ನೂ ಓದಿ: ಸಿದ್ಧಾರೂಢ ಮಠದಲ್ಲಿ ಪೂಜೆಸಲ್ಲಿಸಲು ಹೋದ ಯುವಕ ಕೆರೆ ಪಾಲು
ಈ ಸಂದರ್ಭದಲ್ಲಿ, ನನ್ನ ಗೆಲುವಿಗಾಗಿ ದುಡಿದು, ಚುನಾವಣೆಯ ಮಧ್ಯದಲ್ಲಿಯೇ ಮಡಿದ, ಧಾರವಾಡದ, “ಕರ್ನಾಟಕ ವಿದ್ಯಾವರ್ಧಕ ಸಂಘದ” ಕೋಶಾಧ್ಯಕ್ಷರಾಗಿ, ಸೇವೆ ಸಲ್ಲಿಸುತ್ತಿದ್ದ , ನನ್ನ ಅಣ್ಣ ಕೃಷ್ಣ ಜೋಶಿಯವರನ್ನು ಕಣ್ಣೀರಿನ ಮಧ್ಯೆ ಸ್ಮರಿಸಿಕೊಳ್ಳುತ್ತಿದ್ದೇನೆ. pic.twitter.com/GxyzLSpM3y
— Nadoja Dr. Mahesh Joshi – ನಾಡೋಜ ಡಾ. ಮಹೇಶ ಜೋಶಿ (@nadojamj) November 28, 2021
ಅದೇ ರೀತಿ ಬೆಳಗಾವಿ ಜಿಲ್ಲೆಯ ಅಧ್ಯಕ್ಷರಾಗಿ ಮಂಗಲಾ ಮೆಟಗುಡ್ಡ ಅವರು ಮರು ಆಯ್ಕೆಯಾಗಿದ್ದಾರೆ. ನೂತನ ಅಧ್ಯಕ್ಷರು ಗಡಿಭಾಗದ ಕನ್ನಡಿಗರ ಆಶೋತ್ತರಗಳಿಗೆ ಸ್ಪಂದಿಸಿ ಕೆಲಸವನ್ನು ಮಾಡಲಿ ಎಂದು ಶುಭ ಹಾರೈಸಿದ ಅವರು ಬಹುಮತ ನೀಡಿ ಆಯ್ಕೆ ಮಾಡಿದ ಮತದಾರರಿಗೆ ಅಭಿನಂದಿಸಿದರು.
ಅಥಣಿ ತಾಲೂಕಿನ ಕನ್ನಡ ಸಾಹಿತ್ಯ ಮತ್ತು ಸಾಂಸ್ಕøತಿಕ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ್ ಕನಶೆಟ್ಟಿ ಮಾತನಾಡಿದ್ದು, ನಾಡೋಜ ಡಾ.ಮಹೇಶ್ ಜೋಶಿ ಅವರು ತಮ್ಮ ಪ್ರತಿಸ್ಪರ್ಧಿ ಶೇಖರ್‍ಗೌಡ ಮಾಲಿ ಪಾಟೀಲ್ ಅವರ ವಿರುದ್ಧ 46,236 ಮತಗಳ ಅಂತರದಿಂದ ಗೆಲುವು ಸಾಧಿಸುವ ಮೂಲಕ ಹಿಂದಿನ ಅಧ್ಯಕ್ಷರಾದ ಮನು ಬಳಿಗಾರ್ ಅವರ 38 ಸಾವಿರ ಮತಗಳ ದಾಖಲೆಯನ್ನು ಮುರಿದು ಹಾಕಿದ್ದಾರೆ ಎಂದು ತಿಳಿಸಿದರು.
ಸಮಸ್ತ ಕನ್ನಡಿಗರಿಗೆ ಚಿರಪರಿಚಿತರಾಗಿರುವ ಜೋಶಿ ಅವರು ಚುನಾವಣೆಯ ಪೂರ್ವದಲ್ಲಿ ಅನೇಕ ಸುಧಾರಣೆಗಳು ಪ್ರಣಾಳಿಕೆ ನೀಡಿದ್ದಾರೆ. ಆ ನಿಟ್ಟಿನಲ್ಲಿ ಕನ್ನಡಪರ ಕೆಲಸ ಮಾಡುವುದರ ಜೊತೆಗೆ ನಮ್ಮ ಗಡಿಭಾಗದಲ್ಲಿಯೂ ಕೂಡ ಕನ್ನಡ ಅಸ್ಮಿತೆಯನ್ನು ಕಾಪಾಡುವ ಕೆಲಸ ಮಾಡಲಿದ್ದಾರೆ ಎಂದರು. ಇದನ್ನೂ ಓದಿ: ಯಾರೂ ತಿರುಕನ ಕನಸು ಕಾಣೋದು ಬೇಡ: ಆರ್. ಅಶೋಕ್
— Nadoja Dr. Mahesh Joshi – ನಾಡೋಜ ಡಾ. ಮಹೇಶ ಜೋಶಿ (@nadojamj) November 28, 2021
ಈ ವೇಳೆ ಆನಂದ್ ಟೋಣಪಿ, ಅನಿಲ್ ಶಾಸ್ತ್ರಿ, ವೆಂಕಟೇಶ್ ದೇಶಪಾಂಡೆ ಇನ್ನಿತರರು ಉಪಸ್ಥಿತರಿದ್ದರು.
ಕನ್ನಡ ಸಾಹಿತ್ಯ ಪರಿಷತ್ತಿಗೆ 26ನೇಯ ಅಧ್ಯಕ್ಷರಾಗಿ ಆಯ್ಕೆಯಾಗಿರುವ ನಾಡೋಜ ಡಾ.ಮಹೇಶ್ ಜೋಶಿ ಹೆಸರು ಸಮಸ್ತ ಕನ್ನಡಿಗರಿಗೂ ಚಿರಪರಿಚಿತವಾಗಿದೆ. ಸಂತ ಶಿಶುನಾಳ ಶರೀಫರ ಗುರುಗಳಾದ ಗುರು ಗೋವಿಂದ ಭಟ್ಟರ ಮರಿಮೊಮ್ಮಗನಾಗಿರುವ ಜೋಶಿ ಅವರು ದೂರದರ್ಶನ ಚಂದನ ವಾಹಿನಿಯ ಮೂಲಕ ಮಧುರ ಮಧುರವೀ ಮಂಜುಳಗಾನ ಮತ್ತು ಥಟ್ಟಂತ ಹೇಳಿ ಕಾರ್ಯಕ್ರಮಗಳ ಮೂಲಕ ಮನೆಮಾತಾಗಿದ್ದರು.