Tag: ಕಾಂಕ್ರೀಟ್ ಲಾರಿ

  • ಕಾರಿನ ಮೇಲ್ ಪಲ್ಟಿಯಾದ ಕಾಂಕ್ರೀಟ್ ಮಿಕ್ಸರ್ ಲಾರಿ – ತಾಯಿ, ಮಗಳು ದುರ್ಮರಣ

    ಕಾರಿನ ಮೇಲ್ ಪಲ್ಟಿಯಾದ ಕಾಂಕ್ರೀಟ್ ಮಿಕ್ಸರ್ ಲಾರಿ – ತಾಯಿ, ಮಗಳು ದುರ್ಮರಣ

    ಬೆಂಗಳೂರು: ಕಾಂಕ್ರೀಟ್ ಮಿಕ್ಸರ್ ಲಾರಿ (Concrete Mixer Truck) ಕಾರಿನ ಮೇಲೆ ಪಲ್ಟಿ ಹೊಡೆದು (Car) ತಾಯಿ (Mother) ಹಾಗೂ ಮಗಳು (Daughter) ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಬನ್ನೇರುಘಟ್ಟ (Bannerghatta) ಸಮೀಪದ ಬ್ಯಾಲಮರದ ದೊಡ್ಡಿ ಬಳಿ ನಡೆದಿದೆ.

    ತಿರುವಿನಲ್ಲಿ ವೇಗವಾಗಿ ಬಂದ ಲಾರಿ ನಿಯಂತ್ರಣ ತಪ್ಪಿ ಪಕ್ಕದಲ್ಲಿ ಬರುತ್ತಿದ್ದ ಕಾರಿನ ಮೇಲೆ ಪಲ್ಟಿ ಹೊಡೆದಿದೆ. ಪರಿಣಾಮ ಕಾರಿನಲ್ಲಿ ಸಂಚರಿಸುತ್ತಿದ್ದ ಶಾಲಾ ವಿದ್ಯಾರ್ಥಿ ಹಾಗೂ ಅಕೆಯ ತಾಯಿ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್‍ನಲ್ಲಿ ಬಂಪರ್ – ಏನಿದು ಯೋಜನೆ? ಯಾರಿಗೆಲ್ಲ ಲಾಭ?

    ತರಲು ಗ್ರಾಮ ಮೂಲದ ಖಾಸಗಿ ಶಾಲೆ ವಿದ್ಯಾರ್ಥಿನಿ ಶ್ಯಾಮಲಾ ಹಾಗೂ ಅವರ ತಾಯಿ ಗಾಯತ್ರಿ ಸ್ಥಳದಲ್ಲೇ ಸಾವನ್ನಪ್ಪಿದ ದುರ್ದೈವಿಗಳು. ಘಟನೆ ಬಳಿಕ ಬನ್ನೇರುಘಟ್ಟ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು, ಕಾರ್‌ನಲ್ಲಿ ಸಿಲುಕಿಕೊಂಡಿದ್ದ ಮೃತ ದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಇದನ್ನೂ ಓದಿ: ಕೆಳಮನೆ ಆಂಟಿ ಜೊತೆ ಎಸ್ಕೇಪ್ ಆಗಿದ್ದ ಲವರ್‌ಬಾಯ್ ಅಂಕಲ್ ತಡರಾತ್ರಿ ದಿಢೀರ್ ಪ್ರತ್ಯಕ್ಷ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಪ್ಲೈ ಓವರ್ ಮೇಲೆ ಹೊತ್ತಿ ಉರಿತು ಕಾಂಕ್ರೀಟ್ ಮಿಕ್ಸರ್ ಲಾರಿ

    ಪ್ಲೈ ಓವರ್ ಮೇಲೆ ಹೊತ್ತಿ ಉರಿತು ಕಾಂಕ್ರೀಟ್ ಮಿಕ್ಸರ್ ಲಾರಿ

    ಬೆಂಗಳೂರು: ಚಲಿಸುತ್ತಿದ್ದ ಕಾಂಕ್ರೀಟ್ ಮಿಕ್ಸರ್ ಲಾರಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ನಡು ರಸ್ತೆಯಲ್ಲೆ ಧಗಧಗನೇ ಹೊತ್ತಿ ಉರಿದ ಘಟನೆ ಬೆಂಗಳೂರಿನ ಹೊಸೂರು ಮುಖ್ಯರಸ್ತೆಯ ಫ್ಲೈ ಓವರ್ ಮೇಲೆ ನಡೆದಿದೆ.

    ಸಿಲ್ಕ್ ಬೋರ್ಡ್ ಪ್ಲೈ ಓವರ್ ಮೇಲೆ ಬೆಂಕಿ ಅವಘಡ ಸಂಭವಿಸಿದ್ದು, ಕಾಂಕ್ರೀಟ್ ಮಿಕ್ಸರ್ ಲಾರಿಯಲ್ಲಿ ಶಾರ್ಟ್ ಸರ್ಕ್ಯೂಟ್‍ನಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗುತ್ತಿದೆ. ಲಾರಿಯಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಎಚ್ಚೆತ್ತ ಚಾಲಕ ಲಾರಿಯನ್ನು ಫ್ಲೈ ಓವರ್ ಮೇಲೆ ಬಿಟ್ಟು ವಾಹನದಿಂದ ಕೆಳಗಿಳಿದು ಓಡಿ ನೋಡ ನೋಡುತ್ತಿದ್ದಂತೆ ಬೆಂಕಿ ಪ್ರಮಾಣ ಹೆಚ್ಚಾಗಿ ಲಾರಿ ತುಂಬಾ ಬೆಂಕಿ ಆವರಿಸಿಕೊಂಡಿದೆ.

    ಕೂಡಲೇ ಸ್ಥಳದಲ್ಲಿದ್ದವರು ಬಕೆಟ್‍ನಲ್ಲಿ ನೀರು ಹಿಡಿದು ಬೆಂಕಿಯನ್ನು ನಂದಿಸಲು ಮುಂದಾಗಿದ್ದಾರೆ. ಆದರೆ ಬೆಂಕಿಯ ಕೆನ್ನಾಲಿಗೆ ಜಾಸ್ತಿಯಾಗಿದೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಕ್ಕೆ ಮುಂದಾಗಿದ್ದರು. ಸಮಯಪ್ರಜ್ಞೆಯಿಂದ ಚಾಲಕ ಜೀವಾಪಾಯದಿಂದ ಪಾರಾಗಿದ್ದು, ಯಾವುದೇ ಅನಾಹುತ ಸಂಭವಿಸಿಲ್ಲ. ಘಟನೆಯಿಂದಾಗಿ ಹೊಸೂರು ಮುಖ್ಯರಸ್ತೆಯಲ್ಲಿ ಕಿಲೋಮೀಟರ್ ಗಟ್ಟಲೇ ಟ್ರಾಪಿಕ್ ಜಾಮ್ ಉಂಟಾಗಿದ್ದು, ಕೆಲ ಗಂಟೆಗಳ ಕಾಲ ವಾಹನ ಸವಾರರು ಪರದಾಡುವಂತಹ ಸ್ಥಿತಿ ಉಂಟಾಗಿತ್ತು.

    https://www.youtube.com/watch?v=ns1_yMiHH-Q