Tag: ಕಾಂಗ್ರೆಸ್ ಅಧ್ಯಕ್ಷ

  • ಕರ್ನಾಟಕದಲ್ಲಿ ಭಾರತ್ ಜೋಡೋ ಯಾತ್ರೆಯಲ್ಲಿ ಸೋನಿಯಾ, ಪ್ರಿಯಾಂಕಾ ಭಾಗಿ – ಡಿಕೆಶಿ

    ಕರ್ನಾಟಕದಲ್ಲಿ ಭಾರತ್ ಜೋಡೋ ಯಾತ್ರೆಯಲ್ಲಿ ಸೋನಿಯಾ, ಪ್ರಿಯಾಂಕಾ ಭಾಗಿ – ಡಿಕೆಶಿ

    ಬೆಂಗಳೂರು: ಕಾಂಗ್ರೆಸ್ (Congress) ನಾಯಕ ರಾಹುಲ್‌ಗಾಂಧಿ (Rahul Gandhi) ನೇತೃತ್ವದಲ್ಲಿ ನಡೆಯಲಿರುವ ಭಾರತ್ ಜೋಡೋ (Bharath Jodo Yatra) ಪಾದಯಾತ್ರೆಯಲ್ಲಿ ಕಾಂಗ್ರೆಸ್ ಮಹಾ ನಾಯಕಿಯರಾದ ಸೋನಿಯಾ ಗಾಂಧಿ (Sonia Gandhi) ಹಾಗೂ ಪ್ರಿಯಾಂಕಾ ಗಾಂಧಿ (Priyanka Gandhi) ಅವರು ಭಾಗವಹಿಸಲಿದ್ದಾರೆ ಎಂದು ಕೆಪಿಸಿಸಿ (KPCC) ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

    ಖಾಸಗಿ ಹೋಟೆಲ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಕೆಶಿ (DK Shivakumar), ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ರಾಜ್ಯದಲ್ಲಿ ನಡೆಯಲಿರುವ ಭಾರತ ಜೋಡೋ ಯಾತ್ರೆಯಲ್ಲಿ ಎಐಸಿಸಿ (AICC) ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರು ಭಾಗವಹಿಸಲಿದ್ದಾರೆ. ಅವರು ಭಾಗವಹಿಸಲಿರುವ ದಿನಾಂಕ ಶೀಘ್ರದಲ್ಲೇ ತಿಳಿಸುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬಿಜೆಪಿಯವರು ನೆಪ ಹೇಳೋ ಬದಲು PFIಯನ್ನು ನಿಷೇಧಿಸಲಿ: ದಿನೇಶ್ ಗುಂಡೂರಾವ್

    ಇಂದು ಪಕ್ಷದ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್ (KC Venugopal) ಹಾಗೂ ಪಕ್ಷದ ರಾಜ್ಯ ಉಸ್ತುವಾರಿ ಹೊತ್ತಿರುವ ರಣದೀಪ್ ಸುರ್ಜೇವಾಲ ಅವರು ಭಾರತ ಜೋಡೋ ಯಾತ್ರೆಯ ಸಿದ್ಧತೆಗಳ ಪರಿಶೀಲನೆ ಮಾಡುತ್ತಿದ್ದಾರೆ. ಈ ಯಾತ್ರೆ ಪ್ರಮುಖ 5 ವಿಚಾರಗಳನ್ನು ಒಳಗೊಂಡಿದೆ. ಈ ಯಾತ್ರೆಯಲ್ಲಿ ಎಲ್ಲಾ ಪ್ರಮುಖ ನಾಯಕರಿಗೆ ಜವಾಬ್ದಾರಿ ನೀಡಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

    ಹೇಗಿರಲಿದೆ ರೂಪುರೇಷೆ?
    ರಾಜ್ಯದಲ್ಲಿ ಸೆ.30 ರಂದು ಬೆಳಗ್ಗೆ 9 ಗಂಟೆಗೆ ಚಾಮರಾಜನಗರ (Chamarajanagar) ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಿಂದ ಭಾರತ ಐಕ್ಯತಾ ಯಾತ್ರೆ ಆರಂಭವಾಗಲಿದೆ. ಅ.2 ರಂದು ಬದನವಾಳು ಗ್ರಾಮದಲ್ಲಿ ಗಾಂಧಿ ಜಯಂತಿ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ನಂತರ ದಸರಾ (Mysuru Dasara) ಹಬ್ಬದ ಪ್ರಯುಕ್ತ 2 ದಿನಗಳ ಕಾಲ ಯಾತ್ರೆಗೆ ಬಿಡುವು ನೀಡಲಾಗುವುದು. ಆಮೇಲೆ ಬಳ್ಳಾರಿಯಲ್ಲಿ (Bellary) ಬೃಹತ್ ಸಾರ್ವಜನಿಕ ಸಮಾವೇಶ ನಡೆಯಲಿದೆ ಎಂದು ವಿವರಿಸಿದ್ದಾರೆ. ಇದನ್ನೂ ಓದಿ: ಫಿಸಿಕಲ್ ಟ್ರೈನರ್‌ಗೆ ಉಂಗುರ ತೊಡಿಸಿ ಎಂಗೇಜ್ಡ್ ಆದ ಆಮೀರ್ ಖಾನ್ ಪುತ್ರಿ

    ಯಾತ್ರೆಯ ಭಾಗವಾಗಿ ರಾಹುಲ್ ಗಾಂಧಿ ಅವರು ಯುವಕರು, ಮಹಿಳೆಯರು, ರೈತರು, ನಾಗರಿಕ ಸಮುದಾಯಗಳು, ವಿದ್ಯಾರ್ಥಿಗಳು, ಬುಡಕಟ್ಟು ಜನರ ಜೊತೆ ಒಂದೊಂದು ದಿನ ಮಾತುಕತೆ ನಡೆಸಲಿದ್ದಾರೆ. ಪ್ರತಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿ, ಪಕ್ಷದ ಘಟಕಗಳು, ಪರಾಜಿತ ಅಭ್ಯರ್ಥಿಗಳು ಜನರನ್ನು ಕರೆ ತಂದ ದಿನ ರಾಹುಲ್ ಗಾಂಧಿ ಅವರ ಜತೆ ಹೆಜ್ಜೆ ಹಾಕಲು ಅವಕಾಶ ಮಾಡಿಕೊಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

    ನಾಗರಿಕ ಸಮಾಜದ ಗಣ್ಯರು, ಕಲಾವಿದರು, ಕೈಗಾರಿಕೋದ್ಯಮಿಗಳು, ಚಿಂತಕರು ಸೇರಿದಂತೆ ಪ್ರಮುಖರಿಗೆ ಅವಕಾಶ ಮಾಡಿಕೊಡಲಾಗುವುದು. ಈ ಯಾತ್ರೆ ಮಾರ್ಗದಲ್ಲಿ ಬರುವ ಅತಿ ದೊಡ್ಡ ನಗರ ಮೈಸೂರು ಆಗಿದ್ದು, ಮೈಸೂರು ಜನರು ಬೆಳಗ್ಗೆ 7 ಗಂಟೆಗೆ ರಾಹುಲ್ ಗಾಂಧಿ ಜತೆಗೆ ನಡಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು ಎಂದು ಹೇಳಿದ್ದಾರೆ.

    ಪಕ್ಷದ ಅಧ್ಯಕ್ಷ ಸ್ಥಾನದ ಚುನಾವಣೆ (Congress Presidential Election) ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ, ರಾಹುಲ್ ಗಾಂಧಿಯವರು ಪಕ್ಷದ ಮುಂದಾಳತ್ವ ವಹಿಸಬೇಕು ಎಂದು ನಮ್ಮ ರಾಜ್ಯದ ಎಲ್ಲಾ ನಾಯಕರ ಒತ್ತಾಸೆಯಾಗಿದೆ. ಆದರೆ ಅವರು ಯಾವ ತೀರ್ಮಾನ ಕೈಗೊಳ್ಳುತ್ತಾರೆ ಎಂದು ಕಾದು ನೋಡಬೇಕು ಎಂದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಗಾಂಧಿ ಕುಟುಂಬದ ಯಾರೊಬ್ಬರೂ AICC ಅಧ್ಯಕ್ಷರಾಗಬಾರದೆಂದು ರಾಹುಲ್ ನಿರ್ಧರಿಸಿದ್ದಾರೆ – ಅಶೋಕ್ ಗೆಹ್ಲೋಟ್

    ಗಾಂಧಿ ಕುಟುಂಬದ ಯಾರೊಬ್ಬರೂ AICC ಅಧ್ಯಕ್ಷರಾಗಬಾರದೆಂದು ರಾಹುಲ್ ನಿರ್ಧರಿಸಿದ್ದಾರೆ – ಅಶೋಕ್ ಗೆಹ್ಲೋಟ್

    ನವದೆಹಲಿ/ತಿರುವನಂತಪುರಂ: ಗಾಂಧಿ ಕುಟುಂಬದ (Gandhi Family) ಯಾರೊಬ್ಬರೋ ಕಾಂಗ್ರೆಸ್ (Congress) ಮುಖ್ಯಸ್ಥರಾಗಬಾರದೆಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಸ್ಪಷ್ಟಪಡಿರುವುದಾಗಿ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ (Ashok Gehlot) ತಿಳಿಸಿದ್ದಾರೆ.

    ಭಾರತ್ ಜೋಡೋ ಯಾತ್ರೆ (Bharat Jodo Yatra) ಯಲ್ಲಿ ಪಾಲ್ಗೊಂಡಿರುವ ಸಿಎಂ (Rajasthan Chief Minister), ಕೇರಳದಲ್ಲಿ ರಾಹುಲ್ ಗಾಂಧಿ ಅವರನ್ನ ಭೇಟಿಯಾಗಿ ಈ ಬಗ್ಗೆ ಮಾತುಕತೆ ನಡೆಸಿದ್ದಾರೆ. ಎಲ್ಲರ ಆಶಯದಂತೆ ಕಾಂಗ್ರೆಸ್ (Congress) ಅಧ್ಯಕ್ಷರಾಗಿ ಮರಳಲು ಸಾಕಷ್ಟು ಬಾರಿ ಅವರಲ್ಲಿ ವಿನಂತಿಸಿದೆ. ಆದರೆ ರಾಹುಲ್ ಜೀ ಅವರು, ನಾನು ಎಲ್ಲರ ಆಶಯವನ್ನು ಗೌರವಿಸುತ್ತೇನೆ. ಆದರೆ ಒಂದೇ ಒಂದು ಕಾರಣಕ್ಕಾಗಿ ಗಾಂಧಿ ಕುಟುಂಬೇತರರು ಕಾಂಗ್ರೆಸ್ ಅಧ್ಯಕ್ಷರಾಗಬೇಕೆಂದು ನಿರ್ಧರಿಸಿದ್ದೇನೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು.

    ಬಿಜೆಪಿಯ (BJP) ಸ್ವಜನ ಪಕ್ಷಪಾತದ ಆರೋಪವೇ ರಾಹುಲ್ ಗಾಂಧಿ ಈ ನಿರ್ಧಾರಕ್ಕೆ ಕಾರಣ ಎಂದು ಪ್ರಶ್ನಿಸಿದ ಮಾಧ್ಯಮಗಳಿಗೆ ಉತ್ತರಿಸಿದ ಅವರು, 2019 ರಲ್ಲಿ ಯಾವುದೇ ಹುದ್ದೆಗಳಿಲ್ಲದೇ ಕೆಲಸ ಮಾಡುವುದಾಗಿ ಕಾರ್ಯಕಾರಿ ಸಮಿತಿ ಸಭೆಯಲ್ಲಿ ರಾಹುಲ್ ಗಾಂಧಿ ತಿಳಿಸಿದ್ದರು. ಅದರಂತೆ ಅವರು ನಡೆದುಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪತ್ರಕರ್ತೆ ಹಿಜಬ್ ಧರಿಸದ್ದಕ್ಕೆ ಸಂದರ್ಶನವನ್ನೇ ರದ್ದುಗೊಳಿಸಿದ ಇರಾನ್ ಅಧ್ಯಕ್ಷ

    ಈ ಹಿಂದೆ ಉದಯಪುರದಲ್ಲಿ ನಡೆದಿದ್ದ ಕಾಂಗ್ರೆಸ್‌ನ ಚಿಂತನಾ ಶಿಬಿರದಲ್ಲಿ `ಒಬ್ಬ ವ್ಯಕ್ತಿ – ಒಂದು ಹುದ್ದೆ’ ನಿಯಮವನ್ನೂ ಅಳವಡಿಸಿಕೊಂಡಿದೆ. ಇದನ್ನೂ ಓದಿ: ಬೆಂಗಳೂರು ಬಳಿಕ ಈಗ ಜಿಲ್ಲೆಗಳಿಗೂ ನುಗ್ಗಿದ ಬುಲ್ಡೋಜರ್‌ – ವಿಜಯನಗರದಲ್ಲಿ 40ಕ್ಕೂ ಹೆಚ್ಚು ಮನೆಗಳಿಗೆ ನೋಟಿಸ್‌

    ಅಶೋಕ್ ಗೆಹ್ಲೋಟ್ ಸಹ ನಿನ್ನೆಯಷ್ಟೇ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವುದಾಗಿ ಘೋಷಿಸಿದ್ದು, ಸೋಮವಾರ ನಾಮಪತ್ರ ಸಲ್ಲಿಸುವ ಸಾಧ್ಯತೆಯಿದೆ.

    ಕಾಂಗ್ರೆಸ್ ಅಧ್ಯಕ್ಷರ ಚುನಾವಣೆಗೆ (Congress Presidential Election) ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಸೆಪ್ಟೆಂಬರ್ 24 ರಿಂದ 30 ರವರೆಗೆ ನಡೆಯಲಿದೆ. ಅಕ್ಟೋಬರ್ 1 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ನಾಮಪತ್ರ ಹಿಂಪಡೆಯಲು ಅಕ್ಟೋಬರ್ 8 ಕೊನೆಯ ದಿನಾಂಕವಾಗಿದೆ. ಒಂದಕ್ಕಿಂತ ಹೆಚ್ಚು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಲ್ಲಿ, ಅಕ್ಟೋಬರ್ 17 ರಂದು ಚುನಾವಣೆ ನಡೆಯಲಿದೆ. ಅಕ್ಟೋಬರ್ 19 ರಂದು ಮತ ಎಣಿಕೆ ಮತ್ತು ಫಲಿತಾಂಶ ಘೋಷಣೆಯಾಗಲಿದೆ.

    Live Tv
    [brid partner=56869869 player=32851 video=960834 autoplay=true]

  • ರಾಹುಲ್‌ ಗಾಂಧಿಯನ್ನು ಬಲವಂತವಾಗಿ ಕಾಂಗ್ರೆಸ್‌ ಅಧ್ಯಕ್ಷರನ್ನಾಗಿ ಮಾಡಲು ಸಾಧ್ಯವಿಲ್ಲ: ದಿಗ್ವಿಜಯ ಸಿಂಗ್‌

    ರಾಹುಲ್‌ ಗಾಂಧಿಯನ್ನು ಬಲವಂತವಾಗಿ ಕಾಂಗ್ರೆಸ್‌ ಅಧ್ಯಕ್ಷರನ್ನಾಗಿ ಮಾಡಲು ಸಾಧ್ಯವಿಲ್ಲ: ದಿಗ್ವಿಜಯ ಸಿಂಗ್‌

    ನವದೆಹಲಿ: ರಾಹುಲ್‌ ಗಾಂಧಿ ಅವರನ್ನು ಬಲವಂತವಾಗಿ ಕಾಂಗ್ರೆಸ್‌ ಅಧ್ಯಕ್ಷರನ್ನಾಗಿ ಮಾಡಲು ಸಾಧ್ಯವಿಲ್ಲ ಎಂದು ಪಕ್ಷದ ನಾಯಕ ದಿಗ್ವಿಜಯ ಸಿಂಗ್‌ ತಿಳಿಸಿದ್ದಾರೆ.

    ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಮನಸ್ಸನ್ನು ಬದಲಾಯಿಸುವಂತೆ ರಾಹುಲ್‌ ಗಾಂಧಿ ಅವರಿಗೆ ಮನವಿ ಮಾಡಿದ್ದರು. ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್‌ ನಾಯಕರು, ರಾಹುಲ್ ಗಾಂಧಿ ಇನ್ನು ಮುಂದೆ ಪಕ್ಷವನ್ನು ಮುನ್ನಡೆಸಲು ಬಯಸುವುದಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪ್ರವಾದಿ ಅವಹೇಳನ – BJPಯಿಂದ ಶಾಸಕ ರಾಜಾ ಸಿಂಗ್‌ ಅಮಾನತು

    ಸಾರ್ವತ್ರಿಕ ಚುನಾವಣೆಯಲ್ಲಿ ಪಕ್ಷದ ಹೀನಾಯ ಸೋಲಿನಿಂದಾಗಿ 2019ರಲ್ಲಿ ತ್ಯಜಿಸಿದ ಹುದ್ದೆಗೆ ಮರಳಲು ರಾಹುಲ್ ಗಾಂಧಿ ನಿರಾಕರಿಸಿದ್ದಾರೆ. ಸೆಪ್ಟೆಂಬರ್ 20 ರೊಳಗೆ ಕಾಂಗ್ರೆಸ್ ಹೊಸ ಮುಖ್ಯಸ್ಥರನ್ನು ಆಯ್ಕೆ ಮಾಡಬೇಕಾಗಿದೆ. ಈ ವಾರದ ನಂತರ ವೇಳಾಪಟ್ಟಿಯನ್ನು ಪ್ರಕಟಿಸಬಹುದು.

    ಗೆಹ್ಲೋಟ್‌ ಅವರು ಮಾಡಿದ ಮನವಿ ಎಲ್ಲರಿಗೂ ತಿಳಿದಿದೆ. ಅದು ರಾಹುಲ್ ಗಾಂಧಿಯ ಮೇಲೆ ಅವಲಂಬಿತವಾಗಿದೆ. ಅವರನ್ನು ಹೇಗೆ ಬಲವಂತ ಮಾಡುತ್ತೀರಿ? ನಾವು ಎಲ್ಲರನ್ನೂ ಮಂಡಳಿಗೆ ಸೇರಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ದಿಗ್ವಿಜಯ್‌ ಸಿಂಗ್‌ ತಿಳಿಸಿದ್ದಾರೆ. ಇದನ್ನೂ ಓದಿ: ಚಿಕ್ಕಪೇಟೆಯಲ್ಲಿ ಆರ್.ವಿ ದೇವರಾಜ್ ಕುಟುಂಬ ಮಾತ್ರ ಸ್ಪರ್ಧಿಸಬೇಕಾ..?- ಕೆಜಿಎಫ್ ಬಾಬು

    ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಕಾರ್ಯಕರ್ತರ ಭಾವನೆಗಳನ್ನು ಗೌರವಿಸಬೇಕು. ಜವಾಬ್ದಾರಿ ವಹಿಸಿಕೊಳ್ಳಲು ಒಪ್ಪಬೇಕು ಎಂದು ಗೆಹ್ಲೋಟ್‌ ಮನವಿ ಮಾಡಿದ್ದರು.

    Live Tv
    [brid partner=56869869 player=32851 video=960834 autoplay=true]

  • ಪಿಎಸ್‍ಐ ಹಗರಣ: ಸಿಐಡಿ ವಶಕ್ಕೆ ಕಾಂಗ್ರೆಸ್ ಮುಖಂಡ

    ಪಿಎಸ್‍ಐ ಹಗರಣ: ಸಿಐಡಿ ವಶಕ್ಕೆ ಕಾಂಗ್ರೆಸ್ ಮುಖಂಡ

    ಮಂಡ್ಯ: ಪಿಎಸ್‍ಐ ಪರೀಕ್ಷೆಗೆ ಹಗರಣ ವಿಚಾರವಾಗಿ ಸಿಐಡಿ ನಿರತರ ತನಿಖೆ ನಡೆಸುತ್ತಿದೆ. ಈ ಹಿನ್ನೆಲೆ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡನನ್ನು ಮಂಡ್ಯದಲ್ಲಿ ಸಿಐಡಿ ವಶಕ್ಕೆ ಪಡೆದುಕೊಂಡಿದೆ.

    ಮಂಡ್ಯದ ನಾಗಮಂಗಲ ಯೂತ್ ಕಾಂಗ್ರೆಸ್ ತಾಲೂಕು ಅಧ್ಯಕ್ಷ ಶರತ್ ರಾಮಣ್ಣ ವಶ. ಶ್ರವಣಬೆಳಗೊಳ ಪಿಎಸ್‍ಐ ಪರವಾಗಿ ಅಕ್ರಮವೆಸಗಿರುವ ಆರೋಪ ಶರತ್ ರಾಮಣ್ಣ ಅವರ ಮೇಲೆ ಇದೆ. ಅಲ್ಲದೇ ಇವರು ಪಿಎಸ್‍ಐ ಕೆಲಸದ ವಿಚಾರದಲ್ಲಿ ಮಧ್ಯವರ್ತಿಯಾಗಿದ್ದರು ಎಂಬ ಆರೋಪ ಸಹ ಇದೆ. ಈ ಆರೋಪಗಳ ಮೇಲೆ ಶರತ್ ರಾಮಯ್ಯ ಅವರನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಸ್ತುತ ವಿಚಾರಣೆ ಮಾಡುತ್ತಿದ್ದಾರೆ. ಇದನ್ನೂ ಓದಿ:  ಪೊಲೀಸರನ್ನ ಯಾಮಾರಿಸಿ ವಿದೇಶಕ್ಕೆ ಹಾರಿದ ಅಲ್ಲಾಹು ಅಕ್ಬರ್ ಕೂಗಿದ ವಿದ್ಯಾರ್ಥಿನಿ 

    ಮಾಜಿ ಸಚಿವ ಚೆಲುವರಾಯಸ್ವಾಮಿ ಆಪ್ತ ವಲಯದಲ್ಲಿ ಶರತ್ ಗುರುತಿಸಿಕೊಂಡಿದ್ದರು. ಇವರು ಹಲವು ಕಾಂಗ್ರೆಸ್ ನಾಯಕರೊಂದಿಗೆ ಫೋಟೋ ತೆಗೆಸಿಕೊಂಡಿದ್ದು, ಇದರಿಂದ ಕಾಂಗ್ರೆಸ್ ನಾಯಕರು ಮತ್ತಷ್ಟು ಮುಚುಗರಕ್ಕೆ ಒಳಗಾಗಿದ್ದಾರೆ.

  • ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನ ಮನೆ ಮೇಲೆ ಬಿಜೆಪಿಯವ್ರೇ ದಾಳಿ ಮಾಡಿದ್ದಾರೆ- ಡಿಕೆಶಿ ಆರೋಪ

    ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನ ಮನೆ ಮೇಲೆ ಬಿಜೆಪಿಯವ್ರೇ ದಾಳಿ ಮಾಡಿದ್ದಾರೆ- ಡಿಕೆಶಿ ಆರೋಪ

    ಬಳ್ಳಾರಿ: ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರ್ಷದ್ ಮನೆ ಮೇಲೆ ಬಿಜೆಪಿಯವರೇ ದಾಳಿ ಮಾಡಿದ್ದಾರೆ. ಈ ಬಗ್ಗೆ ಎಲ್ಲಾ ಆಯಾಮದಲ್ಲಿ ತನಿಖೆ ನಡೆಸಲು ಪೊಲೀಸರಿಗೆ ಸೂಚಿಸಿದ್ದೇನೆ ಅಂತ ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ.

    ಹರ್ಷದ್ ಮನೆಗೆ ಭೇಟಿ ನೀಡಿದ ಬಳಿಕ ಮಾತನಾಡಿದ ಸಚಿವರು, ನಮ್ಮ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನ ಮನೆ ಮೇಲೆ ಬಿಜೆಪಿಯವರು ದಾಳಿ ಮಾಡಿದ್ದಾರೆ. ಈ ಬಗ್ಗೆ ಪೊಲೀಸರಿಗೆ ನಿಷ್ಪಕ್ಷಪಾತ ತನಿಖೆಗೆ ಆದೇಶ ನೀಡಿದ್ದೆನೆ. ಈ ಬಾರಿ ಶಾಂತಿಯುತ ಚುನಾವಣೆ ಮಾಡುತ್ತಿದ್ದೇವೆ. ನಾವು ಶಾಂತಿ ಪ್ರಿಯರು. ಕಾರ್ಯಕರ್ತರಿಗೆ ಶಾಂತಿಯಿಂದ ಇರಲು ಸೂಚಿಸಿದ್ದೇವೆ ಅಂದ್ರು. ಇದನ್ನೂ ಓದಿ: Exclusive: ಬೈ ಎಲೆಕ್ಷನ್ ವೇಳೆಯಲ್ಲೇ ಕಾಂಗ್ರೆಸ್ ಅಧ್ಯಕ್ಷನ ಮನೆ ಮೇಲೆ ಅಟ್ಯಾಕ್

    ಬಿಜೆಪಿಯವರಿಗೆ ಸೋಲ್ತೀವಿ ಅನ್ನೋ ಭಯ ಇದೆ. ಆ ಕಾರಣಕ್ಕೆ ಗಲಾಟೆ ಮಾಡಿದ್ದಾರೆ. ಈಗಾಗಲೇ ಹರ್ಷದ್ ಅವರ ಮನೆ ಮೇಲೆ ಬಿಜೆಪಿಯವರು ದಾಳಿ ಮಾಡಿದ್ದಾರೆ. ಬ್ಯುಸಿನೆಸ್ ಏನೇ ಇದ್ರೂ ಚುನಾವಣೆ ಸಮಯದಲ್ಲಿ ಇದು ಸರಿಯಲ್ಲ. ಎಲ್ಲಾ ಆಯಾಮದಲ್ಲಿ ತನಿಖೆ ನಡೆಸುವಂತೆ ಪೊಲೀಸರಿಗೆ ಸೂಚಿಸಿದ್ದೇನೆ. ಬಿಜೆಪಿಯವರು ಹತಾಶರಾಗಿ ಈ ದಾಳಿ ಮಾಡಿದ್ದಾರೆ ಅಂತ ಕಿಡಿಕಾರಿದ್ರು.

    ಬಳ್ಳಾರಿಯಲ್ಲಿ ಈ ಹಿಂದೆ ಶಾಂತವಾಗಿ ಚುನಾವಣೆ ನಡೆದಿದೆ. ಯಾವುದೇ ಅಹಿತಕರ ಘಟನೆಗಳು ನಡೆಯೋಕೆ ಅವಕಾಶ ಕೊಟ್ಟಿಲ್ಲ. ಈ ಸರಕಾರ, ಹಿಂದಿನ ಸರಕಾರ ಬೀಗಿ ಬಂದೋಬಸ್ತ್ ಮಾಡಿದೆ. ಮೈನಾರಿಟಿ ಸೀಟ್ ಹೆಚ್ಚು ಬಂದಿದೆ ಅಂತ ಅವರು ಹೇಳಿದ್ರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ರಾಹುಲ್ ಮಾತು ಕೇಳಿ ರಾಜ್ಯದಲ್ಲಿ ಸೆಸ್ ಇಳಿಸ್ತಾರಾ ಸಿಎಂ ಕುಮಾರಸ್ವಾಮಿ?

    ರಾಹುಲ್ ಮಾತು ಕೇಳಿ ರಾಜ್ಯದಲ್ಲಿ ಸೆಸ್ ಇಳಿಸ್ತಾರಾ ಸಿಎಂ ಕುಮಾರಸ್ವಾಮಿ?

    ಬೆಂಗಳೂರು: ಲೋಕಸಭೆಯಲ್ಲಿ `ಪೆಟ್ರೋಲ್ ದರ ಹೆಚ್ಚಿಸಿದ್ದೀರಿ’ ಎಂದು ಟೀಕಿಸಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರ ಮಾತನ್ನು ಮುಖ್ಯಮಂತ್ರಿ ಕುಮಾರಸ್ವಾಮಿಯವರು ಕೇಳುತ್ತಾರಾ ಎನ್ನು ಪ್ರಶ್ನೆಯೊಂದು ಇದೀಗ ಹುಟ್ಟಿಕೊಂಡಿದೆ.

    ಯಾಕಂದ್ರೆ ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಸರ್ಕಾರ ಪೆಟ್ರೋಲ್, ಡೀಸೆಲ್ ಮೇಲಿನ ಸೆಸ್ ವಿಧಿಸಿ ಬೆಲೆ ಏರಿಕೆ ಮಾಡಿತ್ತು. ಆದ್ರೆ ಅದನ್ನು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅದನ್ನ ಮರೆತಂತಿದ್ದು, ನಿನ್ನೆ ಲೋಕಸಭೆಯಲ್ಲಿ ಭಾಷಣದ ವೇಳೆ ರಾಹುಲ್ ಅವರು ಪೆಟ್ರೋಲ್ ಬೆಲೆ ಏರಿಕೆ ಬಗ್ಗೆ ಮಾತಾಡಿದ್ದರು. ಕೇಂದ್ರ ಸರ್ಕಾರ ಕೇವಲ 15 ಉದ್ಯಮಿಗಳ ಪರವಾಗಿ ಕೆಲಸ ಮಾಡುತ್ತಿದೆ. ಬೇರೆ ದೇಶಗಳಲ್ಲಿ ಪೆಟ್ರೋಲ್ ದರ ಇಳಿಮುಖವಾಗುತ್ತಿದೆ. ಆದ್ರೆ ಭಾರತದಲ್ಲಿ ಮಾತ್ರ ಭಾರತ ದರ ಏರಿಕೆಯಾಗುತ್ತಿದೆ. ಆದ್ರೆ ಮೋದಿ ತಮ್ಮ ಆಪ್ತ ಉದ್ಯಮಿಗಳ ಜೇಬು ತುಂಬಿಸಲು ಬೆಲೆ ಏರಿಕೆ ಮಾಡ್ತಿದ್ದಾರೆಂದು ನೇರ ಆರೋಪ ಮಾಡಿದ್ದರು. ಇದನ್ನೂ ಓದಿ: ಪ್ರಧಾನಿ ಮೋದಿ ದೊಡ್ಡ ಸುಳ್ಳುಗಾರ- ರಾಹುಲ್ ಆರೋಪಕ್ಕೆ ಸಿಡಿದೆದ್ದ ಬಿಜೆಪಿ-ರಾಹುಲ್ ಗಾಂಧಿ ಮಾತಿಗೆ ನಕ್ಕ ಚೌಕಿದಾರ

    ನಮ್ಮ ರಾಜ್ಯದಲ್ಲಿ ಸೆಸ್ ಹೆಚ್ಚಳದಿಂದ ಪೆಟ್ರೋಲ್ 1.14 ರೂ., ಡೀಸೆಲ್ 1.12 ರೂ. ದುಬಾರಿಯಾಗಿದೆ. ಈ ಮೂಲಕ ಲೋಕಸಭೆಯಲ್ಲೊಂದು, ವಿಧಾನಸಭೆಯಲ್ಲೊಂದು ವಾದ ಮಾಡುವ ಮೂಲಕ ಎಡವಟ್ಟಿಗೆ ಸಿಲುಕಿದೆ. ಒಟ್ಟಿನಲ್ಲಿ ಸೆಸ್ ಇಳಿಸುವಂತೆ ರಾಹುಲ್ ಗಾಂಧಿಯವರು ಸಮ್ಮಿಶ್ರ ಸರ್ಕಾರದ ಸಿಎಂ ಕುಮಾರಸ್ವಾಮಿಗೆ ಆಗ್ರಹಿಸ್ತಾರಾ ಎನ್ನುವುದನ್ನು ಕಾದು ನೋಡಬೇಕಾಗಿದೆ.  ಇದನ್ನೂ ಓದಿ: ಲೋಕ ಸಮರ ಗೆಲ್ಲಲು ರಾಹುಲ್ ಹೊಸ ಫಾರ್ಮುಲಾ- ಮೋದಿನಾ ತಬ್ಬಿಕೊಂಡು ಕೊಟ್ರಾ ಪಂಥಾಹ್ವಾನ?

    ಈ ಹಿಂದೆ ರಾಜ್ಯ ಬಜೆಟ್‍ನಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದಾಗಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಭಾರೀ ಟೀಕೆಗೆ ಗುರಿಯಾಗಿದ್ದರು. ಆ ಬೆನ್ನಲ್ಲೇ ಈಗ ತೈಲದ ಮೇಲಿನ ಸೆಸ್ ವಾಪಸ್ ಪಡೆಯುವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಕಾಂಗ್ರೆಸ್ ನಾಯಕರು ಒತ್ತಾಯಿಸಿದ್ದರು. ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಿದ್ದಕ್ಕೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿತ್ತು. ಅಷ್ಟೇ ಅಲ್ಲದೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಸೈಕಲ್ ಏರಿ ಪ್ರತಿಭಟನೆ ಮಾಡಿದ್ದರು. ಆದರೆ ಬಜೆಟ್ ನಲ್ಲಿ ರಾಜ್ಯದ ದೋಸ್ತಿ ಸರ್ಕಾರವೇ ತೈಲ ದರ ಏರಿಕೆ ಮಾಡಿರುವುದು ಸಾಮಾಜಿಕ ಜಾಲತಾಣಿಗರ ಟೀಕೆಗೆ ಕಾರಣವಾಗಿತ್ತು.