Tag: ಕಾಂಗ್ರೆಸ್ ಕಾರ್ಯಕರ್ತರು

  • ಡಿಕೆಶಿ ಮನೆ ಮುಂದೆ ಕಾಂಗ್ರೆಸ್ ಕಾರ್ಯಕರ್ತರಿಂದ ಭಾರೀ ಹೈಡ್ರಾಮಾ

    ಡಿಕೆಶಿ ಮನೆ ಮುಂದೆ ಕಾಂಗ್ರೆಸ್ ಕಾರ್ಯಕರ್ತರಿಂದ ಭಾರೀ ಹೈಡ್ರಾಮಾ

    ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನೆ ಮೇಲಿನ ಸಿಬಿಐ ದಾಳಿಯನ್ನು ವಿರೋಧಿ ಕಾಂಗ್ರೆಸ್ ಕಾರ್ಯಕರ್ತರು ಡಿಕೆಶಿ ಮನೆಯ ಮುಂದೆ ಪ್ರತಿಭಟನೆ ಮಾಡುತ್ತಿದ್ದಾರೆ.

    ಡಿ.ಕೆ.ಶಿವಕುಮಾರ್ ಮನೆ ಮೇಲೆ ಸಿಬಿಐ ದಾಳಿ ಮಾಡಿದ ಹಿನ್ನೆಲೆಯಲ್ಲಿ ಅಭಿಮಾನಿಗಳು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಡಿಕೆಶಿ ಮನೆಯ ಮುಂದೆ ಹೈಡ್ರಾಮಾ ಮಾಡಿದ್ದಾರೆ. ಬಿಜೆಪಿ ಸರ್ಕಾರ ರಾಜಕೀಯವಾಗಿ ಸಿಬಿಐ ದಾಳಿ ಮಾಡಿಸುತ್ತಿದೆ. ಇದನ್ನು ನೀವು ನಿಲ್ಲಿಸಬೇಕು. ಬಿಜೆಪಿ ಈ ರೀತಿ ಪದೇ ಪದೇ ರಾಜಕೀಯ ಪ್ರೇರಿತ ದಾಳಿಯನ್ನು ಮಾಡಿಸುತ್ತಿದೆ ಎಂದು ಆಕ್ರೋಶಗೊಂಡ ಕಾರ್ಯಕರ್ತರು ಡಿಕೆಶಿ ಮನೆಯ ಮುಂದೆ ಪೊಲೀಸರನ್ನು ತಳ್ಳುವ ಪ್ರಯತ್ನ ಮಾಡಿದ್ದಾರೆ. ಇದನ್ನೂ ಓದಿ: ಡಿಕೆಶಿ ಮನೆಯಲ್ಲಿದ್ದ 50 ಲಕ್ಷ ಹಣ ಸೀಜ್?

    ಈ ವೇಳೆ ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರನ್ನು ತಡೆಯುವ ಪ್ರಯತ್ನವನ್ನು ಮಾಡಿದ್ದಾರೆ. ಕೊನೆಗೆ ಪೊಲೀಸರು ಪ್ರತಿಭಟನೆ ಮಾಡುತ್ತಿದ್ದವರನ್ನು ವಶಕ್ಕೆ ಪಡೆದುಕೊಳ್ಳಲು ಮುಂದಾಗಿದ್ದಾರೆ. ಇತ್ತ ಇಂದು ವಿವಿಧ ಕಾಯ್ದೆಗಳ ಜಾರಿ ಖಂಡಿಸಿ ಮತ್ತು ಹತ್ರಾಸ್ ಘಟನೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ಇತ್ತು. ಆದರೆ ಇದೀಗ ಕಾಂಗ್ರೆಸ್ ಭವನದಲ್ಲಿ ಡಿಕೆಶಿ ಮನೆ ಮೇಲಿನ ಸಿಬಿಐ ದಾಳಿ ಖಂಡಿಸಿ ಪ್ರತಿಭಟನೆ ಮಾಡುತ್ತಿದ್ದಾರೆ. ಡಿಕೆಶಿ ಅಭಿಮಾನಿಗಳು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.

    ಡಿಕೆಶಿ ಮೇಲೆ ಸಿಬಿಐ ದಾಳಿ ಖಂಡಿಸಿ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಮೌರ್ಯ ಸರ್ಕಲ್ ಬಳಿಯ ಯೂತ್ ಕಾಂಗ್ರೆಸ್ ಬಿಲ್ಡಿಂಗ್ ಕಚೇರಿ ಬಳಿ ಪ್ರತಿಭಟನೆ ಮಾಡುತ್ತಿದ್ದಾರೆ. ಬಿಜೆಪಿ ಹಠಾವೊ ಎಂದು ಘೋಷಣೆ ಕೂಗುತ್ತಾ ಸಿಬಿಐ ದಾಳಿಯನ್ನು ಖಂಡಿಸುತ್ತಿದ್ದಾರೆ. ಸೇಡಿನ ರಾಜಕಾರಣ ಮಾಡುತ್ತಿರುವ ಪ್ರಧಾನಿ ಮತ್ತು ರಾಜ್ಯ ಸರ್ಕಾರಕ್ಕೆ ಧಿಕ್ಕಾರ ಎಂದು ಯೂತ್ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸುತ್ತಿದ್ದರೆ. ಪ್ರತಿಭಟನಾ ಸ್ಥಳಕ್ಕೆ ಮಾಜಿ ಸಚಿವ ರಾಮಲಿಂಗಾರೆಡ್ಡಿ, ಹರಿಪ್ರಸಾದ್, ಎಚ್.ಎಂ.ರೇವಣ್ಣ, ಉಗ್ರಪ್ಪ ಮತ್ತು ಚಂದ್ರಪ್ಪ ಆಗಮಿಸಿದ್ದಾರೆ.

    ಇತ್ತ ಕಾಂಗ್ರೆಸ್ ಭವನದಲ್ಲಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಘೋಷಣೆಗಳನ್ನು ಕೂಗುವ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಡಿಕೆಶಿ ಬೆಳವಣಿಗೆ ಸಹಿಸದೇ ಇರೋರು ಈ ರೀತಿ ಮಾಡುತ್ತಿದ್ದಾರೆ. ಎಲ್ಲರ ಬಳಿಯೂ ಆಸ್ತಿ ಇದ್ದೇ ಇರುತ್ತೆ. ಆದರೆ ವಿರೋಧ ಪಕ್ಷದವರು ಹೀಗೆ ಮಾಡಿಸುತ್ತಿದ್ದಾರೆ. ನಾವು ಡಿಕೆಶಿಗೆ ಧೈರ್ಯ ತುಂಬಲು ಬಂದಿದ್ದೇವೆ ಎಂದು ಡಿಕೆಶಿ ಅಭಿಮಾನಿಗಳು ಹೇಳಿದ್ದಾರೆ.

  • ಪೆಟ್ರೋಲ್, ಡೀಸೆಲ್ ದರ ಹೆಚ್ಚಳ- ಬೈಕ್ ಹೊತ್ತು ಸಾಗಿದ ಕೈ ಕಾರ್ಯಕರ್ತರು

    ಪೆಟ್ರೋಲ್, ಡೀಸೆಲ್ ದರ ಹೆಚ್ಚಳ- ಬೈಕ್ ಹೊತ್ತು ಸಾಗಿದ ಕೈ ಕಾರ್ಯಕರ್ತರು

    ಧಾರವಾಡ: ದಿನೇ ದಿನೇ ಪೆಟ್ರೋಲ್, ಡೀಸೆಲ್ ದರ ಹೆಚ್ಚಳವಾಗುತ್ತಿರುವುದನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಹೆಗಲ ಮೇಲೆ ಬೈಕ್ ಹೊತ್ತುಕೊಂಡು ಬರುವ ಮೂಲಕ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.

    ಧಾರವಾಡ ಜಿಲ್ಲಾಧಿಕಾರಿ ಕಚೇರಿಗೆ ಬೈಕ್ ಹೊತ್ತು ತಂದ ಕೈ ಕಾರ್ಯಕರ್ತರು, ಕೇಂದ್ರ ಸರ್ಕಾರ ಸತತ 19 ದಿನಗಳಿಂದ ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ಹೆಚ್ಚಳ ಮಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನ ವಿರೋಧಿ ಆಡಳಿತ ನಡೆಸುತ್ತಿವೆ. ಬೆಲೆ ಹೆಚ್ಚಳ ಮಾಡುವ ಮುಖಾಂತರ ಕೇಂದ್ರ ಸರ್ಕಾರ ಬಡವರ ಹಾಗೂ ಮಧ್ಯಮ ವರ್ಗದ ಜನರ ರಕ್ತ ಹೀರುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು. ಇದನ್ನು ಓದಿ: 19ನೇ ದಿನವೂ ಪೆಟ್ರೋಲ್, ಡೀಸೆಲ್ ದರ ಏರಿಕೆ!

    ಜಿಲ್ಲಾಧಿಕಾರಿ ಕಚೇರಿಗೆ ಬೈಕ್ ಗಳನ್ನು ಹೊತ್ತುಕೊಂಡು ಬರುವ ಮೂಲಕ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದ ಕಾರ್ಯಕರ್ತರು, ಕೂಡಲೇ ತೈಲ ಬೆಲೆ ಇಳಿಕೆ ಮಾಡುವಂತೆ ಜಿಲ್ಲಾಧಿಕಾರಿ ಮುಖಾಂತರ ಸರ್ಕಾರಗಳಿಗೆ ಮನವಿ ಸಲ್ಲಿಸಿದರು.

  • ಡಿಕೆಶಿ ಪಕ್ಷ ನಡೆಸಲಿ, ನಾವು ಅವರೊಂದಿಗೆ ಇರುತ್ತೇವೆ – ಯತೀಂದ್ರ ಸಿದ್ದರಾಮಯ್ಯ

    ಡಿಕೆಶಿ ಪಕ್ಷ ನಡೆಸಲಿ, ನಾವು ಅವರೊಂದಿಗೆ ಇರುತ್ತೇವೆ – ಯತೀಂದ್ರ ಸಿದ್ದರಾಮಯ್ಯ

    ಮೈಸೂರು: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸಲಿ. ನಾವು ಅವರ ಜೊತೆಗೆ ಇರುತ್ತೇವೆ ಎಂದು ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

    ಡಿಕೆಶಿ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದವರು ಅವರ ಜೊತೆಗೆ ನಿಲ್ಲಬೇಕು, ಅವರಿಗೆ ನೈತಿಕ ಸ್ಥೈರ್ಯ ತುಂಬಬೇಕು. ಈ ನಿಟ್ಟಿನಲ್ಲಿ ಅವರಿಗೆ ನಮ್ಮ ಸಂಪೂರ್ಣ ಬೆಂಬಲ ಇದೆ. ಅವರು ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸಲಿ. ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಅವರು ಪ್ರಯತ್ನಿಸಲಿ ಎಂದು ಅಭಿಪ್ರಾಯಪಟ್ಟರು.

    ಡಿ.ಕೆ.ಶಿವಕುಮಾರ್ ಹಿಂದೆ ನಾವೆಲ್ಲ ಇದ್ದೇವೆ. ಅವರಿಗೆ ನನ್ನ ಬೆಂಬಲವನ್ನು ವ್ಯಕ್ತಪಡಿಸುತ್ತೇನೆ ಎಂದು ತಿಳಿಸಿದರು.

    ಕಾಂಗ್ರೆಸ್ ಪಕ್ಷದ ನಾಯಕರನ್ನು ಬೇಕಂತಲೇ ಟಾರ್ಗೆಟ್ ಮಾಡಲಾಗಿದೆ. ಕೆಲ ಸಂಸ್ಥೆಗಳನ್ನು ಬಿಜೆಪಿ ರಾಜಕೀಯ ಲಾಭಕ್ಕೆ ದುರ್ಬಳಕೆ ಮಾಡಿಕೊಂಡಿದೆ. ಇಡಿ, ಸಿಬಿಐಯನ್ನು ಛೂ ಬಿಟ್ಟು ಪಕ್ಷದ ಮುಖಂಡರನ್ನು ಟಾರ್ಗೆಟ್ ಮಾಡಿದೆ. ಶಿವಕುಮಾರ್ ಅವರಿಗೂ ಇದೇ ರೀತಿ ಮಾಡಲಾಯಿತು. ಅವರು ತನಿಖೆಗೆ ಸಹಕರಿಸಿದರೂ ಬಿಡಲಿಲ್ಲ. ಬಿಜೆಪಿಯವರು ಹಬ್ಬ ಮಾಡಲು ಬಿಡದೆ ಅಮಾನವೀಯವಾಗಿ ವರ್ತಿಸಿದರು ಎಂದು ಹರಿಹಾಯ್ದರು.

    ಸಿದ್ದರಾಮಯ್ಯ ತವರಲ್ಲಿ ಡಿಕೆಶಿ ಪವರ್ ತೋರಿಸಿದ್ದು, ಮೈಸೂರಿನಲ್ಲಿ ಡಿಕೆಶಿಗೆ ಅದ್ಧೂರಿಯಾಗಿ ಸ್ವಾಗತ ಮಾಡಲಾಯಿತು. ಮೆರವಣಿಗೆಯಲ್ಲಿ ಡಿಕೆಶಿ ಕರೆತಂದ ಕೈ ಕಾರ್ಯಕರ್ತರು ಬೃಹತ್ ಸೇಬಿನ ಹಾರ ಹಾಕಿ ಸ್ವಾಗತಿಸಿದರು. ಇದೇ ವೇಳೆ ಹಾರದಿಂದ ಸೇಬು ಕಿತ್ತುಕೊಂಡು ಡಿ.ಕೆ.ಶಿವಕುಮಾರ್ ತಿಂದರು.

  • ಡಿಕೆಶಿ ಇಡಿ ಬಂಧನದಿಂದ ಮುಕ್ತವಾಗಲೆಂದು ಶಿವಮೊಗ್ಗದಲ್ಲಿ ವಿಶೇಷ ಹೋಮ

    ಡಿಕೆಶಿ ಇಡಿ ಬಂಧನದಿಂದ ಮುಕ್ತವಾಗಲೆಂದು ಶಿವಮೊಗ್ಗದಲ್ಲಿ ವಿಶೇಷ ಹೋಮ

    ಶಿವಮೊಗ್ಗ: ಇಡಿ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಶೀಘ್ರ ಆರೋಪ ಮುಕ್ತರಾಗಿ ಹಾಗೂ ಆರೋಗ್ಯವಂತರಾಗಿ ಹೊರ ಬರಲೆಂದು ಕಾಂಗ್ರೆಸ್ ಕಾರ್ಯಕರ್ತರು ಶಿವಮೊಗ್ಗದಲ್ಲಿ ಇಂದು ವಿಶೇಷ ಪೂಜೆ, ಹೋಮ ನಡೆಸಿ ಬೇಡಿಕೊಂಡಿದ್ದಾರೆ.

    ನಗರದ ಮೈಲಾರಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಕಾರ್ಯಕರ್ತರು, ಗಣ ಹೋಮ, ನವಗ್ರಹ ಹೋಮ, ಮೃತ್ಯುಂಜಯ ಹೋಮ ನಡೆಸಿದರು. ಕೇಂದ್ರದ ಬಿಜೆಪಿ ಸರ್ಕಾರ ವಿನಾಕಾರಣ ಡಿ.ಕೆ.ಶಿವಕುಮಾರ್ ಅವರಿಗೆ ಕಿರುಕುಳ ನೀಡುತ್ತಿದ್ದು, ಡಿಕೆಶಿಯವರ ಆತ್ಮಸ್ಥೈರ್ಯ ಕುಗ್ಗಿಸುವ ಕೆಲಸ ಮಾಡುತ್ತಿದೆ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಭಗವಂತನ ಆಶೀರ್ವಾದ ಡಿಕೆಶಿಯವರ ಮೇಲಿದ್ದು, ಶೀಘ್ರ ಆರೋಪ ಮುಕ್ತರಾಗಿ ಹೊರ ಬರಲಿ ಎಂದು ಕಾರ್ಯಕರ್ತರು ಪ್ರಾರ್ಥಿಸಿದರು. ಡಿ.ಕೆ.ಶಿವಕುಮಾರ್ ಆರೋಪ ಮುಕ್ತರಾಗಿ ಹೊರ ಬಂದ ತಕ್ಷಣ ಹಾವೇರಿ ಜಿಲ್ಲೆಯಲ್ಲಿರುವ ಮೈಲಾರಲಿಂಗ ದೇವಸ್ಥಾನಕ್ಕೆ ಶಿವಮೊಗ್ಗದಿಂದ ಪಾದಯಾತ್ರೆ ಮೂಲಕ ತೆರಳಿ ಹರಕೆ ಸಲ್ಲಿಸುವುದಾಗಿ ಡಿಕೆಶಿ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಹರಕೆ ಹೊತ್ತಿದ್ದಾರೆ.

    ಹೈ ಬಿಪಿ, ಶುಗರ್ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ದೆಹಲಿಯ ಆರ್‍ಎಂಎಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಇಡಿ ಬಂಧನದಲ್ಲಿರುವ ಡಿ.ಕೆ.ಶಿವಕುಮಾರ್ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದ್ದರಿಂದ ಅಧಿಕಾರಿಗಳು ಆಸ್ಪತ್ರೆಗೆ ದಾಖಲಿಸಿದ್ದರು. ಭಾನುವಾರ ಇಸಿಜಿ ಬಳಿಕ ಹೃದ್ರೋಗ ನಿಗಾ ಘಟಕಕ್ಕೆ ಡಿಕೆಶಿವಕುಮಾರ್ ಅವರನ್ನು ಸ್ಥಳಾಂತರ ಮಾಡಲಾಗಿತ್ತು.

    ಇಡಿ ಅಧಿಕಾರಿಗಳ ಮಾನಸಿಕ ಕಿರುಕುಳದಿಂದ ಡಿಕಶಿಯವರ ಆರೋಗ್ಯದಲ್ಲಿ ವ್ಯತ್ಯಾಸ ಕಾಣಿಸಿಕೊಂಡಿದೆ. ಡಿ.ಕೆ.ಶಿವಕುಮಾರ್ ನಿದ್ದೆಗೆ ಅವಕಾಶ ಕಲ್ಪಿಸುವಂತೆ ಮನವಿ ಮಾಡಿಕೊಂಡರು ಅಧಿಕಾರಿಗಳು ನಿರಂತರ ವಿಚಾರಣೆಗೆ ಒಳಪಡಿಸುತ್ತಿದ್ದಾರೆ. ನಿದ್ದೆ ಕೊರತೆ, ವಿಚಾರಣೆಯ ಒತ್ತಡದಿಂದ ಆರೋಗ್ಯದಲ್ಲಿ ಏರಿಳಿತ ಆಗುತ್ತಿದೆ ಎಂದು ಡಿ.ಕೆ.ಶಿವಕುಮಾರ್ ಆಪ್ತರು ಆರೋಪಿಸುತ್ತಿದ್ದಾರೆ.

    ಮಂಗಳವಾರ ಡಿ.ಕೆ.ಶಿವಕುಮಾರ್ ಕಸ್ಟಡಿ ಅಂತ್ಯವಾಗಲಿದೆ. ಇತ್ತ ನ್ಯಾಯಾಲಯ ಜಾಮೀನು ಅರ್ಜಿಗೆ ಸೋಮವಾರ ಆಕ್ಷೇಪ ಸಲ್ಲಿಸುವಂತೆ ಸೂಚಿಸಿದೆ. ಇತ್ತ ಆನಾರೋಗ್ಯದ ಕಾರಣಗಳನ್ನು ನೀಡಿ ಡಿಕೆಶಿ ಪರ ವಕೀಲರು ಜಾಮೀನು ನೀಡುವಂತೆ ನ್ಯಾಯಾಲಯದಲ್ಲಿ ಮನವಿ ಮಾಡಿಕೊಳ್ಳುವ ಸಾಧ್ಯತೆಗಳಿವೆ. ಇತ್ತ ಇಡಿ ಪರ ವಕೀಲರು ಅನಾರೋಗ್ಯದ ಹಿನ್ನೆಲೆಯಲ್ಲಿ ವಿಚಾರಣೆ ಪೂರ್ಣವಾಗಿಲ್ಲ, ಮತ್ತೆ ಡಿಕೆಶಿಯವರನ್ನು ನಮ್ಮ ವಶಕ್ಕೆ ನೀಡಬೇಕೆಂದು ಮನವಿ ಸಲ್ಲಿಸಿ, ಜಾಮೀನು ಅರ್ಜಿಗೆ ಆಕ್ಷೇಪ ಸಲ್ಲಿಸುವ ಸಾಧ್ಯತೆಗಳಿವೆ.

  • ಪ್ರವಾಹ ಪೀಡಿತ ಸಂತ್ರಸ್ತರಿಗೆ ನೆರವಾಗುವಂತೆ ಕೈ ಕಾರ್ಯಕರ್ತರಿಗೆ ಕರೆಕೊಟ್ಟ ರಾಹುಲ್

    ಪ್ರವಾಹ ಪೀಡಿತ ಸಂತ್ರಸ್ತರಿಗೆ ನೆರವಾಗುವಂತೆ ಕೈ ಕಾರ್ಯಕರ್ತರಿಗೆ ಕರೆಕೊಟ್ಟ ರಾಹುಲ್

    ಬೆಂಗಳೂರು: ಪ್ರವಾಹ ಪೀಡಿತ ಸಂತ್ರಸ್ತರಿಗೆ ನೆರವಾಗುವಂತೆ ಕಾಂಗ್ರೆಸ್ ಕಾರ್ಯಕರ್ತರಿಗೆ ಟ್ವಿಟ್ಟರ್ ಮೂಲಕ ರಾಹುಲ್ ಗಾಂಧಿ ಅವರು ಕರೆಕೊಟ್ಟಿದ್ದಾರೆ.

    ದೇಶಾದ್ಯಂತ ರಣ ಭೀಕರ ಮಳೆಯಾಗುತ್ತಿದ್ದು, ಕರ್ನಾಟಕ, ಮಹಾರಾಷ್ಟ್ರ, ಒಡಿಶಾ, ಅಸ್ಸಾಂ ಮತ್ತು ಬಿಹಾರ ರಾಜ್ಯಗಳಲ್ಲಿ ಪ್ರವಾಹ ಉಂಟಾಗಿ ಜನ ಜೀವನ ಅಸ್ತವ್ಯಸ್ತವಾಗಿದೆ. ಅದ್ದರಿಂದ ಸಂತ್ರಸ್ತರಿಗೆ ಅಗತ್ಯವಾದ ಸಹಾಯ ಮಾಡಿ ಎಂದು ರಾಹುಲ್ ಗಾಂಧಿ ಕಾಂಗ್ರೆಸ್ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ.

    ಈ ನಿಟ್ಟಿನಲ್ಲಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ ಅವರು ಕೇರಳ, ಕರ್ನಾಟಕ, ಮಹಾರಾಷ್ಟ್ರ, ಗುಜರಾತ್, ಒಡಿಶಾ, ಅಸ್ಸಾಂ ಮತ್ತು ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಭೀಕರವಾಗಿದ್ದು, ಲಕ್ಷಾಂತರ ನಾಗರಿಕರು ಸಿಕ್ಕಿಬಿದ್ದಿದ್ದಾರೆ ಅಥವಾ ಸ್ಥಳಾಂತರಗೊಂಡಿದ್ದಾರೆ. ನೆರೆ ಪೀಡಿತ ರಾಜ್ಯಗಳಲ್ಲಿನ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಅಗತ್ಯವಿರುವವರಿಗೆ ಸಹಾಯ ಮಾಡಲು ನಾನು ವಿನಂತಿಸುತ್ತೇನೆ ಮತ್ತು ಪ್ರವಾಹ ಶೀಘ್ರದಲ್ಲೇ ಕಡಿಮೆಯಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

  • ಮತ ಚಲಾವಣೆಗೆ ಹೊರಟ ಹಾಸ್ಟೆಲ್ ವಿದ್ಯಾರ್ಥಿಯರನ್ನು ತಡೆದ ಕೈ ಕಾರ್ಯಕರ್ತರು

    ಮತ ಚಲಾವಣೆಗೆ ಹೊರಟ ಹಾಸ್ಟೆಲ್ ವಿದ್ಯಾರ್ಥಿಯರನ್ನು ತಡೆದ ಕೈ ಕಾರ್ಯಕರ್ತರು

    ಬಾಗಲಕೋಟೆ: ಮತ ಚಲಾವಣೆಗೆ ಹೊರಟ ಹಾಸ್ಟೆಲ್ ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿನಿಯರನ್ನು ಬಾಗಲಕೋಟೆಯ ಕಾಂಗ್ರೆಸ್ ಕಾರ್ಯಕರ್ತರು ತಡೆ ಹಿಡಿದಿದ್ದಾರೆ.

    ಹಾಸ್ಟೆಲ್ ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿನಿಯರನ್ನು 124 ಹಾಗೂ 125 ಮತಗಟ್ಟೆಯಲ್ಲಿ ಮತ ಚಲಾಯಿಸಲು ಹೊರಟಿದ್ದರು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ವಿದ್ಯಾರ್ಥಿಗಳನ್ನು ತಡೆದಿದ್ದಾರೆ.

    ಕಾಂಗ್ರೆಸ್ ಕಾರ್ಯಕರ್ತರು ಬಸವೇಶ್ವರ ವಿದ್ಯಾವರ್ಧಕ ಸಂಘದ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಯಾವ ಊರಿನವರು ಇಲ್ಯಾಕೆ ವೋಟ್ ಹಾಕುತ್ತಿದ್ದೀರಿ ಎಂದು ಆವಾಜ್ ಹಾಕಿದ್ದಾರೆ. ವೋಟರ್ ಐಡಿ ಇದೆ ಎಂದರೂ ಕೈ ಕಾರ್ಯಕರ್ತರು ಮತ ಚಲಾಯಿಸಲು ಆಕ್ಷೇಪ ಎತ್ತಿದ್ದಾರೆ.

    ಇದೇ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಅಡ್ರೆಸ್ ಹೇಳಿ, ಯಾವ ಊರು ಎಂದು ಆವಾಜ್ ಹಾಕಿದ್ದಾರೆ. ಸ್ಥಳದಲ್ಲಿ ಮಾತಿನ ಚಕಮಕಿ ಕೂಡ ನಡೆದಿದೆ. ಬಿಜೆಪಿಯವರು ಪರ ಊರಿನ ವಿದ್ಯಾರ್ಥಿಗಳಿಗೆ ವೋಟರ್ ಐಡಿ ರಚಿಸಿ ಕೊಟ್ಟು ಇಲ್ಲಿ ವೋಟ್ ಹಾಕಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿದ್ದಾರೆ.

  • ಸುಮಲತಾ ಬಗ್ಗೆ ಹೇಳಿಕೆ ಕೊಟ್ಟಿದ್ದ ಕೆ.ಟಿ. ಶ್ರೀಕಂಠೇಗೌಡ ಮನೆ ಬಳಿ ಪೊಲೀಸ್ ಬಂದೋಬಸ್ತ್

    ಸುಮಲತಾ ಬಗ್ಗೆ ಹೇಳಿಕೆ ಕೊಟ್ಟಿದ್ದ ಕೆ.ಟಿ. ಶ್ರೀಕಂಠೇಗೌಡ ಮನೆ ಬಳಿ ಪೊಲೀಸ್ ಬಂದೋಬಸ್ತ್

    ಮಂಡ್ಯ: ‘ಸುಮಲತಾ ಮಂಡ್ಯ ಗೌಡ್ತಿ ಅಲ್ಲ’ ಎಂಬ ಹೇಳಿಕೆ ನೀಡಿದ್ದ ವಿಧಾನ ಪರಿಷತ್ ಸದಸ್ಯ ಕೆ.ಟಿ. ಶ್ರೀಕಂಠೇಗೌಡ ಮನೆ ಬಳಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ.

    ಹಿರಿಯ ನಟನ ಅಂಬರೀಶ್ ಅಭಿಮಾನಿಗಳು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಹೇಳಿಕೆ ಖಂಡಿಸಿ ಕೆ.ಟಿ.ಶ್ರೀಕಂಠೇಗೌಡ ವಿರುದ್ಧ ಹರಿಹಾಯ್ದಿದಿದ್ದು, ಸಾಮಾಜಿಕ ಜಾಲತಾಣದಲ್ಲೂ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಅಷ್ಟೇ ಅಲ್ಲದೇ ಶ್ರೀಕಂಠೇಗೌಡ ಮನೆಗೆ ಮುತ್ತಿಗೆ ಹಾಕುವ ಬೆದರಿಕೆ ಕೂಡ ಹಾಕಲಾಗಿತ್ತು. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಮಂಡ್ಯದಲ್ಲಿರುವ ಕೆ.ಟಿ.ಶ್ರೀಕಂಠೇಗೌಡ ನಿವಾಸಕ್ಕೆ ಪೊಲೀಸ್ ಭದ್ರತೆ ನೀಡಲಾಗಿದೆ. ಇದನ್ನೂ ಓದಿ: ಸುಮಲತಾ ಎಂದೂ ಕೂಡ ಮಂಡ್ಯದ ಗೌಡ್ತಿ ಅಲ್ಲ: ಕೆ.ಟಿ.ಶ್ರೀಕಂಠೇಗೌಡ

    ಶ್ರೀಕಂಠೇಗೌಡ ಮನೆ ಬಳಿ ಬ್ಯಾರಿಕೇಡ್ ಹಾಕಿ ಪೊಲೀಸರ ಬಂದೋಬಸ್ತ್ ನೀಡಲಾಗಿದೆ. ಮಂಡ್ಯ ಎಸ್‍ಪಿ ಶಿವಪ್ರಕಾಶ್ ದೇವರಾಜ್ ಕೆ.ಟಿ.ಶ್ರೀಕಂಠೇಗೌಡ ಮನೆಗೆ ಭೇಟಿ ನೀಡಿ ಭದ್ರತೆಯನ್ನು ಪರಿಶೀಲನೆ ಮಾಡಿದ್ದಾರೆ. ಇತ್ತ ಶ್ರೀಕಂಠೇಗೌಡ ಅವರ ಭಾವಚಿತ್ರಕ್ಕೆ ಚಪ್ಪಲಿಯಲ್ಲಿ ಹೊಡೆದು, ಕಾಲಲ್ಲಿ ತುಳಿದು, ಚಿತ್ರಕ್ಕೆ ಬೆಂಕಿ ಹಾಕಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅಂಬಿ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

    ನಟಿ ಸುಮಲತಾ ಅವರು ಚುನಾವಣೆಯಲ್ಲಿ ಸ್ಪರ್ಧಿಸುವ ವಿಚಾರವಾಗಿ ಪ್ರತಿಕ್ರಿಯಿಸಿದ್ದ ಜೆಡಿಎಸ್ ಎಂಎಲ್‍ಸಿ ಕೆ.ಟಿ.ಶ್ರೀಕಂಠೇಗೌಡ, ಸುಮಲತಾ ಎಂದೂ ಕೂಡ ಮಂಡ್ಯದ ಗೌಡ್ತಿ ಅಲ್ಲ. ಮೂಲತಃ ಆಂಧ್ರದವರಾದ ಅವರು ಮಂಡ್ಯದಿಂದ ಹೇಗೆ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯ. ರೆಬೆಲ್ ಸ್ಟಾರ್ ಅಂಬರೀಶ್ ಅವರು ಬದುಕಿದ್ದಾಗ ರಾಜಕಾರಣ ನನಗೆ ಸಾಕು. ನನ್ನ ಮನೆಗೆ ರಾಜಕಾರಣ ಬೇಡ ಅಂತ ಸ್ಪಷ್ಟವಾಗಿ ಹೇಳಿದ್ದರು. ಈ ಹಿಂದೆ ಮಂಡ್ಯ ಕ್ಷೇತ್ರದಿಂದ ನಟಿ ರಮ್ಯಾರನ್ನು ಕಣಕ್ಕಿಳಿಸಿ ಅವರ ಕೆಲಸ ನೋಡಿ ಆಗಿದೆ. ಎಷ್ಟರ ಮಟ್ಟಕ್ಕೆ ನಮ್ಮ ಕೆಲಸ ಮಾಡಿಕೊಟ್ಟರು ಅಂತ ಗೊತ್ತು ಎಂದು ವ್ಯಂಗ್ಯವಾಡಿದ್ದರು. ನಟಿ ಸುಮಲತಾ ಎಂದೂ ಕೂಡ ಮಂಡ್ಯದ ಗೌಡ್ತಿ ಅಲ್ಲ, ಅವರ ಮೂಲ ಆಂಧ್ರಪ್ರದೇಶ ಎಂದು ವ್ಯಂಗ್ಯವಾಡಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಸುಮಲತಾರನ್ನು ಚುನಾವಣಾ ಕಣಕ್ಕಿಳಿಸಲು ಪಟ್ಟು ಹಿಡಿದ ಅಂಬಿ ಅಭಿಮಾನಿ ಬಳಗ

    ಸುಮಲತಾರನ್ನು ಚುನಾವಣಾ ಕಣಕ್ಕಿಳಿಸಲು ಪಟ್ಟು ಹಿಡಿದ ಅಂಬಿ ಅಭಿಮಾನಿ ಬಳಗ

    ಮಂಡ್ಯ: ಈ ಬಾರಿ ಮಂಡ್ಯ ಲೋಕಸಭೆ ಚುನಾವಣಾ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಸ್ಪರ್ಧೆ ಮಾಡಲೇ ಬೇಕು ಅಂತ ಅಭಿಮಾನಿಗಳು ಪಟ್ಟು ಹಿಡಿದಿದ್ದಾರೆ. ಹೀಗಾಗಿ ಇಂದು ಮಂಡ್ಯದಿಂದ ಸಾವಿರಾರು ಅಂಬಿ ಅಭಿಮಾನಿಗಳು ಬೆಂಗಳೂರಿನತ್ತ ಪ್ರಯಾಣ ಬೆಳೆಸಲಿದ್ದಾರೆ.

    ಸ್ಯಾಂಡಲ್‍ವುಡ್ ಕಲಾವಿದರು ಒತ್ತಾಯ ಮಾಡಿದ್ದು ಆಯ್ತು, ಈಗ ಅಂಬರೀಶ್ ಅಭಿಮಾನಿಗಳ ಒತ್ತಾಯ ಶುರುವಾಗಿದೆ. ಹೌದು ಬರುವ ಲೋಕಸಭೆ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಅವರನ್ನು ಕಣಕ್ಕಿಳಿಸುವಂತೆ ರೆಬೆಲ್ ಸ್ಟಾರ್ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ. ಈ ಕುರಿತು ಮನವಿ ಮಾಡಿಕೊಳ್ಳಲು ಇಂದು ಮಂಡ್ಯದಿಂದ ಬೆಂಗಳೂರಿನ ಅಂಬರೀಶ್ ಅವರ ನಿವಾಸಕ್ಕೆ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಬರಲಿದ್ದಾರೆ.

    ಲೋಕಸಭೆ ಚುನಾವಣೆ ಹತ್ತಿರವಾಗ್ತಿದ್ದಂತೆ ಸಕ್ಕರೆನಾಡಿನಲ್ಲಿ ರಾಜಕೀಯ ಗರಿಗೆದರಿದೆ. ಈ ಬಾರಿ ಲೋಕಸಭಾ ಚುನಾವಣೆಗೆ ಸುಮಲತಾ ಅಂಬರೀಶ್ ಸ್ಪರ್ಧೆ ಮಾಡಲೇ ಬೇಕು ಅನ್ನೋ ಒತ್ತಾಯ ತೀವ್ರವಾಗಿ ಕೇಳಿಬರ್ತಿದೆ. ಈ ಬಗ್ಗೆ ಕೆಲ ದಿನಗಳ ಹಿಂದೆ ಸ್ಯಾಂಡಲ್‍ವುಡ್‍ನ ಪ್ರಮುಖರು ಕೂಡ ಸುಮಲತಾ ಅವರನ್ನು ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಮನವಿ ಮಾಡಿಕೊಂಡಿದ್ದರು. ಈಗ ಮತ್ತೆ ಮಂಡ್ಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಂಬಿ ಅಭಿಮಾನಿಗಳಿಂದ ಸುಮಲತಾ ಸ್ಪರ್ಧೆಗೆ ಒತ್ತಾಯ ಕೇಳಿ ಬಂದಿದೆ. ಇಷ್ಟೇ ಅಲ್ಲದೆ ಈಗಾಗಲೇ ಮೈತ್ರಿ ಪಕ್ಷದಿಂದ ಸುಮಲತಾರನ್ನು ಕಣಕ್ಕಿಳಿಸುವ ಉದ್ದೇಶದಿಂದ ಜೆಡಿಎಸ್ ವರಿಷ್ಠ ಹೆಚ್‍ಡಿ ದೇವೇಗೌಡರನ್ನ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಂಪರ್ಕಿಸಿದ್ದಾರೆ. ಹಾಗೆಯೇ ಅಂಬಿ ಅಭಿಮಾನಿಗಳು ಸುಮಲತಾ ಅವರನ್ನೇ ಅಭ್ಯರ್ಥಿಯನ್ನಾಗಿ ಮಾಡುವಂತೆ ಒತ್ತಾಯ ಮಾಡಲಾಗಿದೆ ಅಂತ ಮಾಹಿತಿ ಮೂಲಗಳು ತಿಳಿಸಿವೆ.

    ಇಂದು ಬೆಳಗ್ಗೆ ಮಂಡ್ಯದಿಂದ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಅಂಬರೀಶ್ ರವರ ಮನೆಗೆ ತೆರಳಲು ಸಿದ್ಧತೆ ಮಾಡಿಕೊಂಡಿದ್ದಾರೆ. ಇಂದು ಶತಾಯಾ-ಗತಾಯ ಸುಮಲತಾ ಅಂಬರೀಶ್ ರವರ ಮನವೊಲಿಸಿ ಈ ಬಾರಿ ಮಂಡ್ಯದಿಂದ ಸ್ಪರ್ಧೆ ಮಾಡುವಂತೆ ಒತ್ತಾಯ ಮಾಡಲಿದ್ದಾರೆ. ಬೆಳಗ್ಗೆ ಮಂಡ್ಯ ನಗರದಿಂದ ಎರಡು ಬಸ್ಸುಗಳನ್ನು ಮಾಡಲಾಗಿದ್ದು, ಜಿಲ್ಲಾದ್ಯಂತ ಹಲವಾರು ಬಸ್ ಮೂಲಕ ತೆರಳಲು ಅಭಿಮಾನಿಗಳು ತಯಾರಿ ನಡೆಸಿದ್ದಾರೆ.

    ಮತ್ತೊಂದು ಕಡೆ ಮಂಡ್ಯದಿಂದ ನಿಖಿಲ್ ಕುಮಾರಸ್ವಾಮಿಯವರನ್ನು ಕಣಕ್ಕಿಳಿಸಲು ಜೆಡಿಎಸ್ ಕೂಡ ತಯಾರಿ ನಡೆಸಿದೆ. ಈ ಹಿನ್ನೆಲೆಯಲ್ಲಿ ನಿಖಿಲ್ ಮಂಡ್ಯದ ಕಾರ್ಯಕ್ರಮಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ತಿದ್ದಾರೆ. ಇದಕ್ಕೆ ಪುಷ್ಟಿ ನೀಡುವಂತೆ ಈ ಹಿಂದೆ ಕುಮಾರಸ್ವಾಮಿಯವರು ಕೂಡ ಅಭಿಮಾನಿಗಳ ಒತ್ತಾಯ ಇದೆ. ಹೀಗಾಗಿ ನಿಖಿಲ್ ಮಂಡ್ಯದಿಂದ ಸ್ಪರ್ಧೆ ಮಾಡುವ ಸಾಧ್ಯತೆ ಇದೆ ಎಂದು ತಿಳಿಸಿದ್ದರು. ಸದ್ಯ ಮಂಡ್ಯದಲ್ಲಿ ಈ ಬಾರಿ ಯಾರು ಅಭ್ಯರ್ಥಿ ಆಗ್ತಾರೆ ಅನ್ನೋ ಗೊಂದಲ ಶುರುವಾಗಿದ್ದು, ಮೈತ್ರಿ ಪಕ್ಷ ಯಾವ ರೀತಿ ಇದನ್ನ ಸರಿಪಡಿಸಿಕೊಂಡು ಅಭ್ಯರ್ಥಿಯನ್ನ ಕಣಕ್ಕಿಳಿಸುತ್ತೆ ಅಂತ ಕಾದು ನೋಡಬೇಕಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಬಿಎಸ್‍ವೈ ಮನೆಗೆ ಮೊಟ್ಟೆ ತೂರಲು ಕಾಂಗ್ರೆಸ್ ಕಾರ್ಯಕರ್ತರಿಂದ ವಿಫಲ ಯತ್ನ

    ಬಿಎಸ್‍ವೈ ಮನೆಗೆ ಮೊಟ್ಟೆ ತೂರಲು ಕಾಂಗ್ರೆಸ್ ಕಾರ್ಯಕರ್ತರಿಂದ ವಿಫಲ ಯತ್ನ

    ಶಿವಮೊಗ್ಗ: ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಅವರ ಶಿವಮೊಗ್ಗದಲ್ಲಿರೋ ಮನೆಗೆ ಮೊಟ್ಟೆ ತೂರಲು ಯತ್ನಿಸಿದ್ದನ್ನು ಪೊಲೀಸರು ವಿಫಲಗೊಳಿಸಿದ್ದಾರೆ.

    ಯುವ ಕಾಂಗ್ರೆಸ್ ಕಾರ್ಯಕರ್ತರು ಬೆಲೆ ಏರಿಕೆ, ನಿರುದ್ಯೋಗ, ಮಹದಾಯಿ ಇನ್ನಿತರ ಸಮಸ್ಯೆ ಬಗೆಹರಿಸಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಹಮ್ಮಿಕೊಂಡಿದ್ದರು. ಈ ಪ್ರತಿಭಟನೆ ಅಂಗವಾಗಿ ಸಂಸದ ಬಿ ಎಸ್ ವೈ ಮನೆಗೆ ಮುತ್ತಿಗೆ ಹಾಕಲು ಮುಂದಾಗಿದ್ದರು. ಮುತ್ತಿಗೆ ಸಂದರ್ಭದಲ್ಲಿ ಕಾರ್ಯಕರ್ತರು ಮನೆಗೆ ಮೊಟ್ಟೆ ತೂರಲು ಸಿದ್ಧವಾಗಿದ್ದರು. ಈ ವೇಳೆ ಮಧ್ಯಪ್ರವೇಶಿಸಿದ ಪೊಲೀಸರು ಪ್ರತಿಭಟನಾಕಾರರನ್ನು ತಡೆದು ಬಂಧಿಸಿದ್ದಾರೆ.

    ರಂಗನಾಥ, ಪ್ರವೀಣ್, ಕಿರಣ್ ಸೇರಿ 35ಕ್ಕೂ ಹೆಚ್ಚು ಜನರನ್ನು ಪೊಲೀಸರು ಬಂಧಿಸಿದ್ದು, ಈ ಸಂಬಂಧ ವಿನೋಬಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.