Tag: ಕಾಂಗ್ರೆಸ್ ನಾಯಕಿ

  • ಉಚಿತ ವಿದ್ಯುತ್ ಕೊಟ್ಟರೂ ಕರೆಂಟ್ ಕದ್ದ ಕಾಂಗ್ರೆಸ್ ನಾಯಕಿ – ಬಿತ್ತು 1 ಲಕ್ಷ ದಂಡ!

    ಉಚಿತ ವಿದ್ಯುತ್ ಕೊಟ್ಟರೂ ಕರೆಂಟ್ ಕದ್ದ ಕಾಂಗ್ರೆಸ್ ನಾಯಕಿ – ಬಿತ್ತು 1 ಲಕ್ಷ ದಂಡ!

    ಚಿಕ್ಕಮಗಳೂರು: ತಮ್ಮದೇ ಸರ್ಕಾರ ವಿದ್ಯುತ್ ಫ್ರೀ (Free Electricity) ಕೊಟ್ಟರೂ ಗ್ರಾಮ ಪಂಚಾಯಿತಿ ಸದಸ್ಯೆ ಕರೆಂಟ್ ಕದ್ದು ಸಿಕ್ಕಿಬಿದ್ದಿದ್ದಾರೆ.

    ಚಿಕ್ಕಮಗಳೂರು (Chikkamagaluru) ಜಿಲ್ಲೆ ಎನ್.ಆರ್.ಪುರ ತಾಲೂಕಿನ ಕಡಬಗೆರೆಯ ತಮ್ಮ ಮೂರು ಮನೆಗಳಿಗೆ ಪಂಚಾಯ್ತಿ ಸದಸ್ಯೆ ಆಶಾ ನಾರಾಯಣ್ ಅಕ್ರಮ ವಿದ್ಯುತ್ ಸಂಪರ್ಕ ಪಡೆದಿದ್ದರು. ವಿಷಯ ತಿಳಿದು ದಾಳಿ ನಡೆಸಿದ ಮೆಸ್ಕಾಂ ಅಧಿಕಾರಿಗಳು 1 ಲಕ್ಷಕ್ಕೂ ಹೆಚ್ಚು ದಂಡ ವಿಧಿಸಿದ್ದಾರೆ. ಇದನ್ನೂ ಓದಿ: ರಾಜ್ಯಪಾಲರಿಗೆ ನಿಂದನೆ; ಕಾಂಗ್ರೆಸ್ ನಾಯಕರ ವಿರುದ್ಧ ಡಿಜಿಪಿಗೆ ಬಿಜೆಪಿ ದೂರು

    ಎನ್.ಆರ್.ಪುರ ತಾಲೂಕಿನ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆಯೂ ಆಗಿರುವ ಆಶಾ ನಾರಾಯಣ್, ಕಡಬಗೆರೆಯಲ್ಲಿ ಮೂರು ಮನೆಗಳಿಗೆ ಅಕ್ರಮ ವಿದ್ಯುತ್ ಸಂಪರ್ಕ ಪಡೆದಿದ್ದರು. ವಿಷಯ ತಿಳಿದು ಚಿಕ್ಕಮಗಳೂರು ತಾಲೂಕಿನ ಕಡಬಗೆರೆ ಮನೆ ಮೇಲೆ ಮೆಸ್ಕಾಂ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದರು.

    ಮೆಸ್ಕಾಂ ಅಧಿಕಾರಿಗಳ ತಂಡ ಮಂಗಳೂರಿನಿಂದ ಆಗಮಿಸಿತ್ತು. ಕಾಂಗ್ರೆಸ್ ನಾಯಕಿಗೆ 1 ಲಕ್ಷಕ್ಕೂ ಹೆಚ್ಚು ದಂಡ ವಿಧಿಸಿದೆ ಎಂದು ತಿಳಿದುಬಂದಿದೆ. ಅಕ್ರಮ ಗೊತ್ತಿದ್ದರೂ ಪ್ರಭಾವಿ ಎನ್ನುವ ಕಾರಣಕ್ಕೆ ಸ್ಥಳೀಯ ಅಧಿಕಾರಿಗಳು ಸುಮ್ಮನಾಗಿದ್ದರು ಎಂಬ ಆರೋಪ ಕೇಳಿಬಂದಿದೆ. ಇದನ್ನೂ ಓದಿ: ಕವರ್‌ಗೆ ಹೀಲಿಯಂ ಗ್ಯಾಸ್ ತುಂಬಿಸಿಕೊಂಡು ಟೆಕ್ಕಿ ಆತ್ಮಹತ್ಯೆ

    ಇದೀಗ ಮಂಗಳೂರು ಅಧಿಕಾರಿಗಳಿಂದಲೇ ವಂಚನೆ ಬೆಳಕಿಗೆ ಬಂದಿದೆ. ಆಶಾ ನಾರಾಯಣ್ ಅವರು ದೇವದಾನ ಗ್ರಾಮ ಪಂಚಾಯಿತಿ ಸದಸ್ಯೆಯೂ ಆಗಿದ್ದಾರೆ.

  • ಬಿಗ್ ಬಾಸ್‌ಗೆ ಯಾಕೆ ಹೋಗಬಾರದು? ನವ್ಯಶ್ರೀ ರಾವ್ ಪ್ರಶ್ನೆ

    ಬಿಗ್ ಬಾಸ್‌ಗೆ ಯಾಕೆ ಹೋಗಬಾರದು? ನವ್ಯಶ್ರೀ ರಾವ್ ಪ್ರಶ್ನೆ

    ಕಿರುತೆರೆಯ ದೊಡ್ಮನೆ ಶೋ ಬಿಗ್ ಬಾಸ್ ಕಾರ್ಯಕ್ರಮ ಸಿಕ್ಕಾಪಟ್ಟೆ ಚರ್ಚೆಯಾಗುತ್ತಿದೆ. ಸಾಕಷ್ಟು ನಟ-ನಟಿಯರ, ಸೋಷಿಯಲ್ ಮೀಡಿಯಾ ಸ್ಟಾರ್‌ಗಳ ಹೆಸರು ಚರ್ಚೆಯಲ್ಲಿದೆ. ಹೀಗಿರುವಾಗ ಕಾಂಗ್ರೆಸ್ ನಾಯಕಿ ನವ್ಯಶ್ರೀ ಹೆಸರು ಕೂಡ ಹರಿದಾಡುತ್ತಿದೆ. ಈ ವೇಳೆ ನವ್ಯಶ್ರೀ ಬಿಗ್ ಬಾಸ್ ಕಾರ್ಯಕ್ರಮ ಕುರಿತು ಕೇಳಲಾಗಿದೆ.

    ಟಿವಿ ಲೋಕದ ಬಿಗ್ ಶೋ ಅಂದ್ರೆ ಬಿಗ್ ಬಾಸ್ ಕಾರ್ಯಕ್ರಮವನ್ನ ಇಡೀ ಕರುನಾಡೆ ಕಾಯುತ್ತಿದೆ. ಬಿಗ್ ಬಾಸ್ ಕಾರ್ಯಕ್ರಮ ನೋಡಲು ಟಿವಿ ಫ್ಯಾನ್ಸ್ ಕಾತರದಿಂದ ಕಾಯ್ತಿದ್ದಾರೆ. ಈ ಬೆನ್ನಲ್ಲೇ ಕಾಂಗ್ರೆಸ್ ನಾಯಕಿ ನವ್ಯಶ್ರೀ ರಾವ್ ಹೆಸರು ಕೂಡ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಚರ್ಚೆಯಾಗುತ್ತಿದೆ. ಈ ಬಗ್ಗೆ ನವ್ಯ ಅವರನ್ನ ಕೇಳಲಾಗಿದೆ. ಇದನ್ನೂ ಓದಿ:ಕರೀನಾ ಬರೆದ ಪ್ರೆಗ್ನೆನ್ಸಿ ಬೈಬಲ್ ಪುಸ್ತಕ ಕೇಸು: ಸರ್ಕಾರದ ಮೂಲಕ ದೂರು ದಾಖಲಿಸಿ ಎಂದ ಹೈಕೋರ್ಟ್

    ಬಿಗ್ ಬಾಸ್ ಶೋನಿಂದ ಕರೆ ಬಂದರೆ ನಾನು ಯಾಕೆ ಬಿಗ್ ಬಾಸ್‌ಗೆ ಹೋಗಬಾರದು ಎಂದು ನವ್ಯಶ್ರೀ ಪ್ರಶ್ನಿಸಿದ್ದಾರೆ. ಕಾಂಟ್ರವರ್ಸಿಯಿಂದ ಗುರುತಿಸಿಕೊಂಡಿರುವ ಅದೆಷ್ಟೋ ಜನ ಬಿಗ್ ಬಾಸ್‌ಗೆ ಹೋಗಿದ್ದಾರೆ. ತಾವು ಎನೆಂಬುದು ಪ್ರೂವ್ ಕೂಡ ಮಾಡಿದ್ದಾರೆ. ನವ್ಯಶ್ರೀಯಲ್ಲಿರುವ ಮತ್ತೊಂದು ಪ್ರತಿಭೆ, ನಿಜವಾದ ವ್ಯಕ್ತಿತ್ವ ಎನು ಎಂಬುದು ತಿಳಿಯಲಿದೆ. ಬಿಗ್ ಬಾಸ್ ಅವಕಾಶ ಕೊಟ್ಟಾಗ ಯಾಕೆ ಹೋಗಬಾರದು ಎಂದು ನವ್ಯಶ್ರೀ ಪ್ರಶ್ನಿಸಿದ್ದಾರೆ. ನನಗೆ ಸಂಬಂಧಿಸಿದ ದಾಖಲೆ ಆ ವಾಹಿನಿಯ ಕಛೇರಿಗೆ ಹೋಗಿವೆ. ಕೆಲವು ಚರ್ಚೆ ಆಗಿದೆ ಎಂದು ತಿಳಿಸಿದ್ದಾರೆ. ನವ್ಯಶ್ರೀ ನಿಜಕ್ಕೂ ಬಿಗ್ ಬಾಸ್ ಕಾರ್ಯಕ್ರಮಕ್ಕೆ ಹೋಗುತ್ತಾರಾ ಎಂಬುದು ಮುಂದಿನ ದಿನಗಳವರೆಗೆ ಕಾದುನೋಡಬೇಕಿದೆ.

    Live Tv
    [brid partner=56869869 player=32851 video=960834 autoplay=true]

  • ಕಾಂಗ್ರೆಸ್ ನಾಯಕಿ ಕುಸುಮಾ ಹನುಮಂತರಾಯಪ್ಪಗೆ ಕೊರೊನಾ ಸೋಂಕು

    ಕಾಂಗ್ರೆಸ್ ನಾಯಕಿ ಕುಸುಮಾ ಹನುಮಂತರಾಯಪ್ಪಗೆ ಕೊರೊನಾ ಸೋಂಕು

    ಬೆಂಗಳೂರು: ಕಾಂಗ್ರೆಸ್ ನಾಯಕಿ ಹಾಗೂ ಐಎಎಸ್ ಅಧಿಕಾರಿ ದಿವಂಗತ ಡಿ.ಕೆ ರವಿ ಅವರ ಪತ್ನಿ ಕುಸುಮಾ ಹನುಮಂತರಾಯಪ್ಪ ಅವರಿಗೆ ವೈದ್ಯಕೀಯ ಪರೀಕ್ಷೆಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.

    ಈ ಬಗ್ಗೆ ಕುಸುಮಾ ಅವರು ತಮ್ಮ ಫೇಸ್‍ಬುಕ್ ಖಾತೆಯಲ್ಲಿ ‘ನನ್ನ ಕೋವಿಡ್ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿರುವ ಕಾರಣ ಮನೆಯಲ್ಲಿಯೇ ಐಸೋಲೇಟ್ ಆಗಿದ್ದು, ಕಳೆದ ಕೆಲವು ದಿನಗಳಿಂದ ನನ್ನ ಸಂಪರ್ಕಕಕೆ ಬಂದಿರುವವರು ಕೂಡಲೇ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ವಿನಂತಿಸಿಕೊಳ್ಳುತ್ತೇನೆ.

    ಮಹಾಮಾರಿ ಕೊರೊನಾ ಎರಡನೇ ಅಲೆಯು ತೀವ್ರ ತರವಾಗಿದ್ದು ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ತಮ್ಮ ಆರೋಗ್ಯದ ಕಡೆ ಹೆಚ್ಚು ಗಮನ ಹರಿಸಬೇಕೆಂದು ಮನವಿ ಮಾಡಿಕೊಳ್ಳುತ್ತೇನೆ ಎಂದು ಕ್ಯಾಪ್ಷನ್ ಹಾಕಿಕೊಳ್ಳುವ ಮೂಲಕ ಹಂಚಿಕೊಂಡಿದ್ದಾರೆ.

    ಈ ಹಿಂದೆ ರಾಜರಾಜೇಶ್ವರಿ ನಗರದ ವಿಧಾನಸಭೆ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ಕುಸುಮಾ ಸ್ಪರ್ಧಿಸಿದ್ದರು.

  • ಕಾಂಗ್ರೆಸ್ ನಾಯಕಿಯಿಂದ ರಾಮಮಂದಿರ ನಿರ್ಮಾಣಕ್ಕೆ 51 ಲಕ್ಷ ದೇಣಿಗೆ!

    ಕಾಂಗ್ರೆಸ್ ನಾಯಕಿಯಿಂದ ರಾಮಮಂದಿರ ನಿರ್ಮಾಣಕ್ಕೆ 51 ಲಕ್ಷ ದೇಣಿಗೆ!

    ಲಕ್ನೋ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಜನ ದೇಣಿಗೆ ನೀಡುತ್ತಿದ್ದಾರೆ. ಅಂತೆಯೇ ಇದೀಗ ಕಾಂಗ್ರೆಸ್ ನಾಯಕಿಯೊಬ್ಬರು ಭಾರೀ ಮೊತ್ತದ ದೇಣಿಗೆ ನೀಡಿ ಸುದ್ದಿಯಾಗಿದ್ದಾರೆ.

    ಹೌದು. ಉತ್ತರ ಪ್ರದೇಶದ ರಾಯ್ ಬರೇಲಿ ಕಾಂಗ್ರೆಸ್ ಶಾಸಕಿ ಆದಿತಿ ಸಿಂಗ್ ಅವರು ರಾಮ ಮಂದಿರ ನಿರ್ಮಾಣಕ್ಕೆ 51 ಲಕ್ಷ ಹಣವನ್ನು ದೇಣಿಗೆಯಾಗಿ ನೀಡಿದ್ದಾರೆ. ಈ ಹಣವನ್ನು ಶ್ರೀ ರಾಮ್ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಚಂಪತ್ ರಾಜ್ ಅವರಿಗೆ ರಾಮ ಮಂದಿರ ನಿರ್ಮಾಣ ಕಾರ್ಯಕ್ಕೆ ದೇಣಿಗೆಯಾಗಿ ನೀಡುವುದಾಗಿ ಅವರು ತಿಳಿಸಿದ್ದಾರೆ.

    ಶಾಸಕಿ ಆದಿತಿ ಸಿಂಗ್ ಅವರು ಹಲವು ಸನ್ನಿವೇಶಗಳಲ್ಲಿ ಕಾಂಗ್ರೆಸ್ ವಿರುದ್ಧವೇ ಗುಡುಗಿದ್ದರು. ಈ ಹಿಂದೆ ಸೋನಿಯಾ ಗಾಂಧಿಯವರನ್ನೇ ಅದಿತಿ ಅವರು ತರಾಟೆಗೆ ತೆಗೆದುಕೊಂಡಿದ್ದರು. ರಾಯ್ ಬರೇಲಿಗೆಯಿಂದ ಈ ಹಿಂದೆ ಗೆದ್ದಿದ್ದ ಸೋನಿಯಾ ಗಾಂಧಿ ಐದು ವರ್ಷಗಳ ಅವಧಿಯಲ್ಲಿ ಕೇವಲ ಎರಡು ಬಾರಿ ಮಾತ್ರ ರಾಯಬರೇಲಿಗೆ ಆಗಮಿಸಿದ್ದರು ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.

    ಗೋರಕ್ಷ್ ಪೀಠದ ಪೀಠಾಧೀಶ್ವರಾಗಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಾಮ ದೇವಾಲಯ ನಿರ್ಮಾಣಕ್ಕಾಗಿ 1.01 ಕೋಟಿ ರೂ. ಚೆಕ್ ಅನ್ನು ಚಂಪತ್ ರಾಯ್ ಅವರಿಗೆ ಹಸ್ತಾಂತರಿಸಿದ್ದರು. ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ದೇಣಿಗೆ ಅಭಿಯಾನ ಆರಂಭಿಸಿದ ಬೆನ್ನಲ್ಲೇ ಕೋವಿಂದ್ ಅವರು 5 ಲಕ್ಷ ರೂ. ನೀಡುವುದಾಗಿ ಘೋಷಿಸಿದ್ದರು. ಅವರು ದೇಶದ ಮೊದಲ ಪ್ರಜೆ. ಹೀಗಾಗಿ ನಾವು ಈ ಅಭಿಯಾನವನ್ನು ಆರಂಭಿಸುವ ಮೊದಲು ಅವರ ಬಳಿಯೇ ತೆರಳಿದ್ದೆವು. ಈ ವೇಳೆ ಅವರು 5,01,000 ರೂ.ಗಳನ್ನು ನೀಡಿದ್ದಾರೆ ಎಂದು ವಿಎಚ್‍ಪಿಯ ಅಲೋಕ್ ಕುಮಾರ್ ತಿಳಿಸಿದ್ದರು. ಈ ಬೃಹತ್ ಅಭಿಯಾನ ಫೆಬ್ರವರಿ 27ರ ವರೆಗೆ ನಡೆಯಲಿದೆ.