Tag: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

  • ಸರ್ಕಾರ ತನ್ನ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸಿದ್ದರೆ, ಈ ಸ್ಥಿತಿ ಬರುತ್ತಿರಲಿಲ್ಲ: ರಾಹುಲ್ ಗಾಂಧಿ

    ಸರ್ಕಾರ ತನ್ನ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸಿದ್ದರೆ, ಈ ಸ್ಥಿತಿ ಬರುತ್ತಿರಲಿಲ್ಲ: ರಾಹುಲ್ ಗಾಂಧಿ

    ನವದೆಹಲಿ: ಕೊರೊನಾ ನಿರ್ವಹಣೆಯಲ್ಲಿ ಸರ್ಕಾರ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಆಡಳಿತ ಸರ್ಕಾರವನ್ನು ದೋಷಿಸಿ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

    ಕೊರೊನಾ ನಿರ್ವಹಣೆಯಲ್ಲಿ ಸರ್ಕಾರ ತನ್ನ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸಿದ್ದರೆ, ಇಂದು ಕೊರೊನಾ ಬಿಕ್ಕಟ್ಟು ನಿಯಂತ್ರಣಕ್ಕಾಗಿ ಪದೇ ಪದೇ ಎದೆ ಬಡಿದುಕೊಂಡು ವಿದೇಶಗಳಿಂದ ನೆರವು ಪಡೆಯವ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಕೇಂದ್ರ ಸರ್ಕಾರ ಈಗ ಎದೆ ಬಡಿದುಕೊಂಡು ವಿದೇಶಗಳಿಂದ ಪರಿಹಾರ ಸಾಮಗ್ರಿಗಳನ್ನು ಪಡೆದುಕೊಳ್ಳುತ್ತಿರುವುದನ್ನು ನೋಡಿದರೆ, ಪರಿಸ್ಥಿತಿ ಬಹಳ ಕರುಣಾಜನಕವಾಗಿದೆ ಎನ್ನಿಸುತ್ತದೆ.ನಗರಗಳ ಬಳಿಕ, ಹಳ್ಳಿಗಳೂ ಸೋಂಕು ಹಬ್ಬುತ್ತಿದೆ. ನಗರಗಳ ಬಳಿಕ ಈಗ ಹಳ್ಳಿಗಳೂ ಭಗವಂತನ ಕೈಯಲ್ಲಿದೆ. ಕೊರೊನಾ ಸೋಂಕು ನಿಯಂತ್ರಣದಲ್ಲಿ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ಮೋದಿ ಕೈಗೊಂಡಿರುವ ಕ್ರಮಗಳನ್ನು ಸತತವಾಗಿ ವಿರೋಧಿಸುತ್ತಾ ಬಂದಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೀಗೆ ಟ್ವೀಟ್ ಮಾಡಿ ಬೇಸರ ವ್ಯಕ್ತಪಡಿಸಿದ್ದಾರೆ

    ಕೊರೊನಾ ನಿರ್ವಹಣೆ ಸಂಬಂಧ ಪಾರದರ್ಶಕತೆ ಕಾಯ್ದುಕೊಳ್ಳಲು ಹಾಗೂ ಭಾರತ ವಿದೇಶಗಳಿಂದ ಪಡೆದ ಎಲ್ಲ ಪರಿಹಾರ ಸಾಮಗ್ರಿಗಳ ಬಗ್ಗೆ ಸಾರ್ವಜನಿಕವಾಗಿ ಮಾಹಿತಿ ನೀಡುವಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಕಳೆದವಾರ ಕಾಂಗ್ರೆಸ್ ಒತ್ತಾಯಿಸಿತ್ತು.

  • ಚಿಕಿತ್ಸೆ ಕೊರತೆಯಿಂದಾಗಿ ಪ್ರೀತಿ ಪಾತ್ರರನ್ನು ಕಳೆದುಕೊಳ್ಳುತ್ತಿರುವ ನಾಗರೀಕರಿಗೆ ಸಂತಾಪ- ರಾಹುಲ್ ಗಾಂಧಿ

    ಚಿಕಿತ್ಸೆ ಕೊರತೆಯಿಂದಾಗಿ ಪ್ರೀತಿ ಪಾತ್ರರನ್ನು ಕಳೆದುಕೊಳ್ಳುತ್ತಿರುವ ನಾಗರೀಕರಿಗೆ ಸಂತಾಪ- ರಾಹುಲ್ ಗಾಂಧಿ

    ನವದೆಹಲಿ: ಕೊರೊನಾ ಸೋಂಕಿಗೊಳಗಾದವರು ಚಿಕಿತ್ಸೆ ಕೊರತೆಯಿಂದಾಗಿ ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಳ್ಳುತ್ತಿರುವ ನಾಗರೀಕರಿಗೆ ಸಂತಾಪ ಸೂಚಿಸುತ್ತೇನೆಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿ ಬೇಸರ ವ್ಯಕ್ತಪಡಿಸಿದ್ದಾರೆ.

    ದೇಶದ ಪ್ರತಿಯೊಂದು ರಾಜ್ಯದ ಪ್ರಾರ್ಥನೆಗಳು ಮತ್ತು ಅನುಕಂಪ ಈ ಕಠಿಮ ಸಂದರ್ಭದಲ್ಲಿ ನಿಮ್ಮೊಂದಿಗಿದೆ. ಚಿಕಿತ್ಸೆಯ ಕೊರತೆಯಿಂದಾಗಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಳ್ಳುತ್ತಿರುವ ದೇಶದ ನಾಗರೀಕರಿಗೆ ಸಂತಾಪ ಸೂಚಿಸುತ್ತಿದ್ದೇನೆ. ಈ ದುರಂತದಲ್ಲಿ ನೀವು ಒಬ್ಬಂಟಿಯಾಗಿಲ್ಲ. ದೇಶದ ಪ್ರತಿಯೊಂದು ರಾಜ್ಯಗಳ ಪ್ರಾರ್ಥನೆ ಮತ್ತು ಅನುಕಂಪ ನಿಮ್ಮೊಂದಿಗಿದೆ ಎಂದು ಟ್ವೀಟ್ ಮಾಡಿದ್ದಾರೆ.

    ಭಾರತದಲ್ಲಿ ಮಹಾಮಾರಿ ಕೊರೊನಾ ಆರ್ಭಟಿಸುತ್ತಿದ್ದು, ದೇಶದಲ್ಲಿಂದು 3,86,452 ಮಂದಿಯಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ. ಅಲ್ಲದೆ, 3498 ಮಂದಿ ಸಾವನ್ನಪ್ಪಿದ್ದಾರೆ. ಕೊರೊನಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಹೋಗುತ್ತಿದೆ. ಕೊರೊನಾ ಕುರಿತಾದ ಎಲ್ಲಾ ಮುಂಜಾಗೃತ ಕ್ರಮಗಳನ್ನು ಪಾಲಿಸುವುದು ಅಗತ್ಯವಾಗಿದೆ.