Tag: ಕಾಂಗ್ರೆಸ್ ಪಕ್ಷ

  • ಕೊರೊನಾ ಹರಡಿದ್ದು, ಟ್ರಾಫಿಕ್ ಜಾಮ್ ಮಾಡಿದ್ದು ಪಾದಯಾತ್ರೆ ಸಾಧನೆ: ಕಾರಜೋಳ ವ್ಯಂಗ್ಯ

    ಕೊರೊನಾ ಹರಡಿದ್ದು, ಟ್ರಾಫಿಕ್ ಜಾಮ್ ಮಾಡಿದ್ದು ಪಾದಯಾತ್ರೆ ಸಾಧನೆ: ಕಾರಜೋಳ ವ್ಯಂಗ್ಯ

    ಬೆಂಗಳೂರು: ಕೊರೊನಾ ಹರಡಿದ್ದು, ಟ್ರಾಫಿಕ್ ಜಾಮ್ ಮಾಡಿದ್ದು ಪಾದಯಾತ್ರೆ ಮಾಡಿದ ಸಾಧನೆ ಎಂದು ಕಾಂಗ್ರೆಸ್ ಪಕ್ಷದ ಮೇಕೆದಾಟು ಯೋಜನೆ ವಿರುದ್ಧ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಕಿಡಿಕಾಡಿದರು.

    ಕಾಂಗ್ರೆಸ್ ಪಕ್ಷದವರು ಮೇಕೆದಾಟು ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಯೋಜನೆಯ ಹೆಸರಿನಲ್ಲಿ ನಡೆಸಿದ ಪಾದಯಾತ್ರೆ ಕೇವಲ ಪ್ರಚಾರ ಯಾತ್ರೆ. ಅದೊಂದು ಜನರನ್ನು ಮೋಸಗೊಳಿಸುವ ವಿಫಲ ತಂತ್ರ. ಕಾಂಗ್ರೆಸ್ ಅವರ ಮೊದಲ ಹಂತದ ಪಾದಯಾತ್ರೆ ಕೇವಲ ಕೊರೊನಾ ಸೋಂಕು ಹರಡುವಿಕೆಯಲ್ಲಿ ಯಶಸ್ವಿಯಾದರೆ, ಎರಡನೇ ಹಂತದ ಪಾದಯಾತ್ರೆ ಬೆಂಗಳೂರು ನಗರದಾದ್ಯಂತ ಮತ್ತು ಮೈಸೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಕಿರಿಕಿರಿಗೆ ಮಾತ್ರ ಸಾಕ್ಷಿಯಾಯಿತು ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ಉಕ್ರೇನ್‍ನಲ್ಲಿ ಭಾರತೀಯರು ಸಿಲುಕಿರುವಾಗ, ಮೋದಿ ಯುಪಿ ಚುನಾವಣಾ ಸಭೆಗಳಲ್ಲಿ ನಿರತರಾಗಿದ್ದಾರೆ: ಮಮತಾ ಬ್ಯಾನರ್ಜಿ ಕಿಡಿ

    ಮೇಕೆದಾಟು ಯೋಜನೆ ಸಂಕಲ್ಪದಿಂದ ಸಾಕಾರಗೊಳ್ಳಬೇಕಾದರೆ ಹಾಗೂ ಈ ಯೋಜನೆಯ ಪರಿಣಾಮಕಾರಿ ಅನುಷ್ಠಾನ ಆಗುವುದು ಕೇವಲ ಭಾರತೀಯ ಜನತಾ ಪಕ್ಷ ಮತ್ತು ಅದರ ಸರ್ಕಾರದಿಂದ ಮಾತ್ರ ಸಾಧ್ಯ. ಕರ್ನಾಟಕದ ಜನತೆಗೆ ಅದರಲ್ಲೂ ವಿಶೇಷವಾಗಿ ಕಾವೇರಿ ಕೊಳ್ಳದ ಜನತೆಗೆ ಈ ವಿಷಯದ ಸತ್ಯ ದರ್ಶನವಾಗಿದೆ ಎಂದು ವಿವರಿಸಿದರು.

    ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ಯಾವುದೇ ಪರಿಣಾಮಕಾರಿ ಕ್ರಮಕ್ಕೆ ಮುಂದಾಗದೇ ಕಾಲಹರಣ ಮಾಡಿತ್ತು. ಇದೀಗ ಮತ್ತೆ ಮತ್ತೆ ಪಾದಯಾತ್ರೆ ಮಾಡುವ ಮೂಲಕ ಜನದ್ರೋಹ ಎಸಗುತ್ತಿದೆ. ಕಾಂಗ್ರೆಸಿಗರ ಗಿಮಿಕ್ ಗೆ ನಾಡಿನ ಜನತೆ ಮೋಸ ಹೋಗುವುದಿಲ್ಲ ಎಂಬ ಸತ್ಯದ ಅರಿವು ಕಾಂಗ್ರೆಸ್ ಸಾಕ್ಷಾತ್ಕಾರವಾಗಬೇಕಿದೆ ಎಂದು ಕುಟುಕಿದರು. ಇದನ್ನೂ ಓದಿ: ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ವೈಭವಕ್ಕೆ ಇಂದು ಚಾಲನೆ

  • ಕೃಷ್ಣ ಮಠದ ಸ್ವಾಧೀನಕ್ಕೆ ಕಾಂಗ್ರೆಸ್ ಸರ್ಕಾರ ಮುಂದಾಗಿತ್ತು: ಪ್ರಮೋದ್ ಮಧ್ವರಾಜ್

    ಕೃಷ್ಣ ಮಠದ ಸ್ವಾಧೀನಕ್ಕೆ ಕಾಂಗ್ರೆಸ್ ಸರ್ಕಾರ ಮುಂದಾಗಿತ್ತು: ಪ್ರಮೋದ್ ಮಧ್ವರಾಜ್

    ಉಡುಪಿ: ಶ್ರೀಕೃಷ್ಣ ಮಠವನ್ನು ಸರ್ಕಾರದ ಅಧೀನಕ್ಕೆ ತೆಗೆದುಕೊಳ್ಳಬೇಕೆಂದು ಕಾಂಗ್ರೆಸ್ ಆಲೋಚಿಸಿತ್ತು. ಆದರೆ ಶ್ರೀ ಕೃಷ್ಣ ಮಠಕ್ಕೆ ತೊಂದರೆಯಾದರೆ ಮೊದಲು ನಾನೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಅಂತ ಹೇಳಿದ್ದೆ ಎಂದು ಕಾಂಗ್ರೆಸ್ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.

    ಉಡುಪಿ ಕೃಷ್ಣಮಠದ ರಾಜಾಂಗಣದಲ್ಲಿ ಅದಮಾರು ಪರ್ಯಾಯ ಸಮಾಪನ ಪ್ರಯುಕ್ತ ನಡೆಯುತ್ತಿರುವ ವಿಶ್ವಾರ್ಪಣಂ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾಂಗ್ರೆಸ್ ಮಾತನಾಡಿದರು. ಈ ಸ್ಫೋಟಕ ಹೇಳಿಕೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಮತ್ತು ನಾಯಕರಿಗೆ ಮತ್ತೊಮ್ಮೆ ಇರಿಸುಮುರಿಸು ಆಗಿದೆ. ಇದನ್ನೂ ಓದಿ: ಪಕ್ಷ ಬೇರೆಯಾದ್ರೂ ಗುಣಕ್ಕೆ ಮತ್ಸರವಿಲ್ಲ- ಮೋದಿಯನ್ನು ಹೊಗಳಿದ ಪ್ರಮೋದ್ ಮಧ್ವರಾಜ್

    ಮಧ್ವಾಚಾರ್ಯರು ಪ್ರತಿಷ್ಠಾಪಿಸಿದ ಮಠಕ್ಕೆ ಎಂಟುನೂರು ವರ್ಷಗಳ ಇತಿಹಾಸ ಇದೆ. ದೇಶವಿದೇಶಗಳಲ್ಲಿ ಭಕ್ತರನ್ನು ಹೊಂದಿರುವ ಮಠ, ಉಡುಪಿ ಜನರಿಗೊಂದು ಭಾಗ್ಯ. ನಮ್ಮದೇ ಸರ್ಕಾರ ಇದನ್ನು ವಶಪಡಿಸಲು ಮುಂದಾಗಿತ್ತು. ಆಗ ನಾನು ಮಠವನ್ನು ಮುಟ್ಟಿದರೆ ರಾಜೀನಾಮೆ ನೀಡುತ್ತೇನೆ ಎಂದು ಸಿದ್ದರಾಮಯ್ಯನವರಿಗೆ ಹೇಳಿ ಈ ವಿಚಾರಕ್ಕೆ ಫುಲ್ ಸ್ಟಾಪ್ ಹಾಕುವ ಮೂಲಕ ಶಾಸಕನಾಗಿ ಸಣ್ಣ ಸೇವೆ ಮಾಡಿದ್ದೇನೆ ಎಂಬ ತೃಪ್ತಿ ಇದೆ ಎಂದು ಹೇಳಿ ನೆನಪಿಸಿಕೊಂಡಿದ್ದಾರೆ.  ಇದನ್ನೂ ಓದಿ: ಬೂಸ್ಟರ್ ಡೋಸ್ ಅಗತ್ಯತೆ ಬಗ್ಗೆ ಅಧ್ಯಯನ ನಡೆಸಲು ಮೋದಿ ಸೂಚನೆ

    ಈ ವಿಷಯ ನನ್ನ ಒಳಗೇ ಇತ್ತು. ಇದನ್ನು ಹೇಳುವುದಿಲ್ಲ ಎಂದುಕೊಂಡಿದ್ದೆ. ಆದರೆ ಇವತ್ತು ಹೇಳಬೇಕಾಯಿತು ಎಂದು ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದ ಜೊತೆ ಅಂತರ ಕಾಯ್ದುಕೊಂಡಿರುವ ಪ್ರಮೋದ್ ಮಧ್ವರಾಜ್, ಪದ್ಮ ಪ್ರಶಸ್ತಿ ನೀಡುವ ಸಂದರ್ಭ ಪ್ರಧಾನಿ ಮೋದಿಯನ್ನು ಹಾಡಿ ಹೊಗಳಿದ್ದರು. ಆಗಲೂ ರಾಜಕೀಯ ವಲಯದಲ್ಲಿ ಚರ್ಚೆಗೆ ಈಡಾಗಿದ್ದರು. ಈಗ ಮತ್ತೆ ತಮ್ಮ ಕಾಂಗ್ರೆಸ್ ಸರ್ಕಾರದ ನಡೆಯನ್ನು ಕೆದಕುವ ಮೂಲಕ ಸುದ್ದಿಯಾಗಿದ್ದಾರೆ. ಇದನ್ನೂ ಓದಿ: ಟೋಕನೈಸೇಶನ್ ಜಾರಿ 6 ತಿಂಗಳು ವಿಳಂಬ: RBI

  • ಯಾರು ಯಾರನ್ನು ಸೋಲಿಸಿದರು ಅಂತಾ ಬೊಮ್ಮಾಯಿ ಹೇಳಬೇಕು – ಜಾರಕಿಹೊಳಿಗೆ ಡಿಕೆಶಿ ಟಾಂಗ್

    ಯಾರು ಯಾರನ್ನು ಸೋಲಿಸಿದರು ಅಂತಾ ಬೊಮ್ಮಾಯಿ ಹೇಳಬೇಕು – ಜಾರಕಿಹೊಳಿಗೆ ಡಿಕೆಶಿ ಟಾಂಗ್

    ಬೆಳಗಾವಿ: ಸಿಡಿ ಪ್ರಕರಣ ಮುಂದಿಟ್ಟುಕೊಂಡು ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಟಾಂಗ್ ಕೊಟ್ಟಿದ್ದಾರೆ.

    ಚುನಾವಣೆ ಫಲಿತಾಂಶ ಬಳಿಕ ಡಿಕೆಶಿ ಜೊತೆಗೆ ಓಪನ್ ವಾರ್ ಆಗಲಿ ಎಂದಿದ್ದ ರಮೇಶ ಜಾರಕಿಹೊಳಿ ಹೇಳಿಕೆ ವಿಚಾರವಾಗಿ ನಗರದ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಾರು ಯಾರನ್ನು ಸೋಲಿಸಿದರು ಅಂತಾ ಬೊಮ್ಮಾಯಿ ಹೇಳಬೇಕು ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ‘ಸುಶಾಂತ್ ಸ್ಟಾರ್ ಅಲ್ಲ’ ಎಂದು ಸಿನಿಮಾ ಮಾಡಲು ನಿರ್ಮಾಪಕರು ಮುಂದೆ ಬಂದಿರಲಿಲ್ಲ: ಅಭಿಷೇಕ್ ಕಪೂರ್

    ಸ್ವಯಂಕೃತ ಅಪರಾಧವನ್ನು ಬಿಜೆಪಿಯವರು ಮಾಡಿಕೊಂಡಿದ್ದಾರೆ. ಬೇಕಾಗಿತ್ತು ಮಾಡಿಕೊಂಡಿದ್ದಾರೆ, ಒಳ್ಳೆಯದಾಗಲಿ ಬಹಿರಂಗ ವಾರ್ ಅಥವಾ ಯಾವ ವಾರ್ ಅವರನ್ನೇ ಕೇಳಿ. ಸಿಡಿ ಪ್ರಕರಣದಲ್ಲಿ ಬಿಚ್ಚಿದ್ದು ಮಾಡಿದ್ದು ನಾವೆಲ್ಲ ನೋಡಿದ್ದೇವೆ. ಕಾಂಗ್ರೆಸ್ ಪಕ್ಷದ ಪರ ಬಿಜೆಪಿ ಸೇರಿದಂತೆ ಎಲ್ಲ ಪಕ್ಷದವರು ಮತ ಚಲಾಯಿಸಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕುರಿಗಳಂತೆ ಕರೆತಂದು ಮತ ಹಾಕಿಸಿಕೊಂಡು ಗೆಲುವು ಸಾಧಿಸಿದ್ದಾರೆ: ಮಂಥರ್ ಗೌಡ ವಾಗ್ದಾಳಿ

    ಕಾಂಗ್ರೆಸ್ ಪಕ್ಷದ ಮುಖಂಡರ ಒಗ್ಗಟ್ಟು ಈ ಗೆಲುವಿಗೆ ಕಾರಣ. ಸಾಮೂಹಿಕ ನಾಯಕತ್ವದಲ್ಲಿ ವಿಧಾನಸಭೆ ಚುನಾವಣೆಗೆ ಹೋಗುತ್ತೇವೆ. ರಾಜ್ಯದ ಎಲ್ಲ ಜನ ಬದಲಾವಣೆ ಬಯಸುತ್ತಿದ್ದಾರೆ. ಕಾಂಗ್ರೆಸ್ ಇನ್ನೂ ಎರಡು ಮೂರು ಸ್ಥಾನಗಳಲ್ಲಿ ಗೆಲ್ಲಬೇಕಿತ್ತು ಎಂದು ಹೇಳಿದ್ದಾರೆ.

  • ಬೆಳಗಾವಿಯಲ್ಲಿ ನಾವು ಗೆದ್ದೇ ಗೆಲ್ತೇವೆ, ಬಹುಮತವನ್ನೂ ತರ್ತೇವೆ: ಫಿರೋಜ್ ಸೇಠ್

    ಬೆಳಗಾವಿಯಲ್ಲಿ ನಾವು ಗೆದ್ದೇ ಗೆಲ್ತೇವೆ, ಬಹುಮತವನ್ನೂ ತರ್ತೇವೆ: ಫಿರೋಜ್ ಸೇಠ್

    ಬೆಳಗಾವಿ: ನಾವು ಗೆದ್ದೇ ಗೆಲ್ತೇವೆ ಮತ್ತೇ ಮೆಜಾರಿಟಿ ತಂದೇ ತರ್ತೇವೆ ಅಂತಾ ಬೆಳಗಾವಿ ಉತ್ತರ ಮಾಜಿ ಶಾಸಕ ಫಿರೋಜ್ ಸೇಠ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನವನಕ್ಕೆ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಹೆಸರಿಡಿ: ಪ್ರತಾಪ್ ಸಿಂಹ

    ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆದ್ದೇ ಗೆಲ್ಲುತ್ತೇವೆ ಮತ್ತು ಮೆಜಾರಿಟಿ ಪಡೆದು ಪಾಲಿಕೆ ಚುಕ್ಕಾಣಿ ಹಿಯುತ್ತೇವೆ ಎಂದು ಫಿರೋಜ್ ಸೇಠ್ ಹೇಳಿದ್ದಾರೆ. ನಾವು ಜನರಲ್ಲಿ ನಮ್ಮ ಅಭ್ಯರ್ಥಿಗಳಿಗೆ ಮತ ಹಾಕುವಂತೆ ಮನವರಿಕೆ ಮಾಡುತ್ತೇವೆ. ಈ ಹಿಂದೆ ನಮ್ಮ 10 ವರ್ಷಗಳ ಅಧಿಕಾರಾವಧಿಯಲ್ಲಿ ಮಾಡಿದಂತೆ ಈ ಬಾರಿಯೂ ಅಭಿವೃದ್ಧಿ ಕಾರ್ಯ ಮಾಡುತ್ತೇವೆ ಎಂದಿದ್ದಾರೆ.

    feroz sait

    ಎಂಐಎಂ ಸ್ಪರ್ಧೆಯಿಂದ ಬಿಜೆಪಿಗೆ ಲಾಭವಾಗುತ್ತೆ ಎನ್ನುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ ಇದು ಪಶ್ಚಿಮ ಬಂಗಾಳದಲ್ಲಿ ಈಗಾಗಲೇ ನಡೆದಿದೆ. ಮತ್ತು ಅಲ್ಲಿ ಏನಾಯಿತು ಎಂಬುದು ನಿಮ್ಮೆಲ್ಲರಿಗೂ ಗೊತ್ತು. ಅಷ್ಟೇ ಇಲ್ಲಿಯೂ ಆಗುತ್ತೆ. ಕರ್ನಾಟಕ ಜನತೆ ಬುದ್ಧಿವಂತರಾಗಿದ್ದು, ಯೋಚನೆ ಮಾಡಿ ಮತ ಹಾಕುತ್ತಾರೆ ಎಂದು ನುಡಿದಿದ್ದಾರೆ. ಇದನ್ನೂ ಓದಿ:ಬೇಗ ಪಯಣ ಮುಗಿಸಿದೆ – ಸಿದ್ಧಾರ್ಥ್ ನಿಧನಕ್ಕೆ ಸಲ್ಮಾನ್ ಕಂಬನಿ

    ಸೇಠ್ ಕೇವಲ ಹಿಂದೂ ಮುಸ್ಲಿಂ ಎಂದು ಚುನಾವಣೆ ಮಾಡದೇ ಭಾರತೀಯರು ಎನ್ನುವ ಅಜಂಡಾ ಮೇಲೆ ಚುನಾವಣೆ ಮಾಡಲು ನಿರ್ಧರಿಸಿದ್ದು, ಜನ ನಮ್ಮನ್ನು ಆಶೀರ್ವದಿಸುತ್ತಾರೆ ಎಂದು ಹೇಳಿದ್ದಾರೆ. ಆದರೆ ಜನರ ಚಿತ್ತ ಯಾರತ್ತ? ಎನ್ನುವುದನ್ನು ಮಾತ್ರ ಕಾದು ನೋಡಬೇಕಿದೆ.

  • ಈಶ್ವರಪ್ಪ ಮಾನಸಿಕ ಸ್ಥಿಮಿತತೆ ಕಳೆದುಕೊಂಡಿದ್ದಾರೆ: ಧ್ರುವನಾರಾಯಣ

    ಈಶ್ವರಪ್ಪ ಮಾನಸಿಕ ಸ್ಥಿಮಿತತೆ ಕಳೆದುಕೊಂಡಿದ್ದಾರೆ: ಧ್ರುವನಾರಾಯಣ

    ರಾಯಚೂರು: ಪದೇ ಪದೇ ಬೇಜವಾಬ್ದಾರಿ ಹೇಳಿಕೆ ನೀಡುವ ಈಶ್ವರಪ್ಪರನ್ನು ಸಚಿವ ಸಂಪುಟದಿಂದ ಉಚ್ಛಾಟನೆ ಮಾಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್ ಧ್ರುವನಾರಾಯಣ ಹೇಳಿದ್ದಾರೆ.

    ಜಿಲ್ಲೆಯ ಸಿಂಧನೂರಿನಲ್ಲಿ ಮಾತನಾಡಿದ ಧ್ರುವನಾರಾಯಣ, ಈಶ್ವರಪ್ಪ ಕಾಂಗ್ರೆಸ್ ಬಗ್ಗೆ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಮೊದಲಿನಿಂದಲೂ ಇಂತಹ ಹೇಳಿಕೆ ನೀಡುವಲ್ಲಿ ಈಶ್ವರಪ್ಪ ನಿಸ್ಸೀಮರು. ನಾಲಿಗೆಗೆ ಎಲುಬಿಲ್ಲ, ಈಶ್ವರಪ್ಪಗೆ ಮೆದುಳು ಸಹ ಇದೆಯೋ, ಇಲ್ಲವೋ ಗೊತ್ತಿಲ್ಲಾ. ಮಾನಸಿಕ ಸ್ಥಿಮಿತತೆಯನ್ನು ಈಶ್ವರಪ್ಪ ಕಳೆದುಕೊಂಡಿದ್ದಾರೆ. ಇಂತಹ ಹೇಳಿಕೆಗಳನ್ನು ನೀಡುವುದನ್ನು ಮುಂದೆಯಾದರೂ ಬಿಡಬೇಕು ಎಂದಿದ್ದಾರೆ.

    ಇತ್ತೀಚೆಗೆ ತಲೆಗಳನ್ನು ತೆಗೆಯುವ ಬಗ್ಗೆ ಮಾತನಾಡಿದ್ದರು. ರಾಗ ದ್ವೇಷಗಳಿಲ್ಲದೆ ಆಡಳಿತ ನಡೆಸುವುದಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ದ್ವೇಷ ದಳ್ಳೂರಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಇಂತಹ ಹೇಳಿಕೆಗಳನ್ನು ಪದೇ ಪದೇ ನೀಡುವುದರಿಂದ ಜನರಲ್ಲಿ ಗೊಂದಲ ಉಂಟಾಗುತ್ತಿದೆ. ಮುಖ್ಯಮಂತ್ರಿಗಳು ಇವರನ್ನು ಕೂಡಲೇ ಸಂಪುಟದಿಂದ ಉಚ್ಛಾಟಿಸಬೇಕು ಎಂದು ಧ್ರುವನಾರಾಯಣ ಹೇಳಿದ್ದಾರೆ.   ಇದನ್ನೂ ಓದಿ:ಈಶ್ವರಪ್ಪಗೆ ಮಂಡೆ ಸರಿ ಇಲ್ಲ, ಬಿಜೆಪಿ ಶೀಘ್ರ ಚಿಕಿತ್ಸೆ ಕೊಡಿಸಲಿ: ವಿನಯ್ ಕುಮಾರ್ ಸೊರಕೆ ಸಲಹೆ

  • ಕಾಂಗ್ರೆಸ್ ಪಕ್ಷವನ್ನು ಯಾಕೆ ಸೋಲಿಸಿದ್ವಿಯೆಂದು ಜನ ಪರಿತಪಿಸುತ್ತಿದ್ದಾರೆ: ಸಿದ್ದರಾಮಯ್ಯ

    ಕಾಂಗ್ರೆಸ್ ಪಕ್ಷವನ್ನು ಯಾಕೆ ಸೋಲಿಸಿದ್ವಿಯೆಂದು ಜನ ಪರಿತಪಿಸುತ್ತಿದ್ದಾರೆ: ಸಿದ್ದರಾಮಯ್ಯ

    ಬೆಂಗಳೂರು: ಕಾಂಗ್ರೆಸ್ ಪಕ್ಷವನ್ನು ಯಾಕೆ ಸೋಲಿಸಿದ್ವಿ ಎಂದು ಜನರು ಪರಿತಪಿಸುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

    ಇಂದು ಆರಮನೆ ಮೈದಾನದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವನ್ನು ಯಾಕೆ ಸೋಲಿಸಿದ್ವಿ ಎಂದು ಜನ ಪರಿತಪಿಸುತ್ತಿದ್ದಾರೆ. ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ಮತ್ತೆ ತರಬೇಕು ಎಂದು ಚರ್ಚೆ ಶುರು ಆಗಿದೆ ಎಂದು ತಿಳಿಸಿದ್ದಾರೆ.

    ನಾವು 2018ರಲ್ಲಿ ಜೆಡಿಎಸ್‍ಗೆ ಬೆಂಬಲ ನೀಡಿ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂತು. ಸಮ್ಮಿಶ್ರ ಸರ್ಕಾರ ಐದು ವರ್ಷಗಳ ಕಾಲ ಪೂರೈಸಲಿಲ್ಲ. ನಮ್ಮ ಮತ್ತು ಜೆಡಿಎಸ್ ಶಾಸಕರನ್ನು ಹಣದ ಆಸೆ ತೋರಿಸಿ ರಾಜೀನಾಮೆ ಕೊಡಿಸಿ ಆಪರೇಷನ್ ಕಮಲ ಮಾಡಿ ಕೋಟ್ಯಂತರ ರೂ. ಖರ್ಚು ಮಾಡಿದರು. ಒಬ್ಬ ಎಂಎಲ್‍ಎಗೆ 20 ರಿಂದ 25 ಕೋಟಿ ಖರ್ಚು ಮಾಡಿದರು. ಇದರಿಂದ ನಾವು ಆಪರೇಷನ್ ಕಮಲವನ್ನು ತಡೆಯಲು ಆಗಲಿಲ್ಲ ಎಂದಿದ್ದಾರೆ.

    ಶ್ರೀಮಾನ್ ಯಡಿಯೂರಪ್ಪ ಅವರಿಂದ ಆಪರೇಷನ್ ಕಮಲ ಅಂತ ಹೆಸರು ಬಂದಿದೆ. ಅದು 2008ರಲ್ಲಿ, ಆಗ ಅವರಿಗೆ ಬಹುಮತ ಇರಲಿಲ್ಲ ಆ ನಂತರ ಎಲೆಕ್ಷನ್‍ಗೆ ಹೋಗಿ ಅಲ್ಲಿ ಕೋಟಿ ಹಣ ಖರ್ಚು ಮಾಡಿ ಅಧಿಕಾರಕ್ಕೆ ಬಂದರು ಎಂದು ಸಿಎಂ ವಿರುದ್ಧ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

  • ಕಾಂಗ್ರೆಸ್ಸಿನವರು ತಮ್ಮ ಬೇಳೆ ಬೇಯಿಸಿಕೊಳ್ಳಲು ನನ್ನನ್ನು ಪೆದ್ದು ಮಾಡಲು ಮುಂದಾದಿರಿ: ಎಚ್‍ಡಿಕೆ

    ಕಾಂಗ್ರೆಸ್ಸಿನವರು ತಮ್ಮ ಬೇಳೆ ಬೇಯಿಸಿಕೊಳ್ಳಲು ನನ್ನನ್ನು ಪೆದ್ದು ಮಾಡಲು ಮುಂದಾದಿರಿ: ಎಚ್‍ಡಿಕೆ

    – ಕಾಂಗ್ರೆಸ್ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ವಾಗ್ದಾಳಿ

    ಬೆಂಗಳೂರು: ಕಾಂಗ್ರೆಸ್ಸಿನವರು ತಮ್ಮ ಬೇಳೆ ಬೇಯಿಸಿಕೊಳ್ಳಲು ನನ್ನನ್ನು ಪೆದ್ದು ಮಾಡಲು ಮುಂದಾದಿರಿ. ಆದರೆ ನಾಡಿನ ರೈತರ ಹಿತ ಕಾಯಲು ನಾನು ಜಾಣತನ ಪ್ರದರ್ಶಿಸಿದೆ ಎಂಬುದು ನೆನಪಿರಲಿ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

    ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಸಿಎಂ ಆದಾಗ ಕಾಂಗ್ರೆಸ್ ನೈತಿಕತೆ ಚೆನ್ನಾಗಿತ್ತೆ? ಎಂದು ಕಾಂಗ್ರೆಸ್ ಟ್ವೀಟ್ ಮಾಡಿತ್ತು. ಈ ಟ್ವೀಟ್‍ಗೆ ಕುಮಾರಸ್ವಾಮಿ ಕೆಂಡಾಮಂಡಲವಾಗಿದ್ದು, ಸರಣಿ ಟ್ವೀಟ್ ಮಾಡುವ ಮೂಲಕ ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಮೊದಲಿಗೆ “ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಸಿಎಂ ಆದಾಗ ಕಾಂಗ್ರೆಸ್ ನೈತಿಕತೆ ಚೆನ್ನಾಗಿತ್ತೆ? ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ. ನನ್ನನ್ನು ನೇರವಾಗಿ ಪ್ರಶ್ನಿಸಲಾಗದ ಕಾಂಗ್ರೆಸ್ಸಿನ ಅತಿರಥ ಮಹಾರಥರು ಪಕ್ಷದ ಟ್ವಿಟ್ಟರ್ ಖಾತೆ ಮೂಲಕ ದಾಳಿ ಮಾಡಿ ಓಡಿ ಹೋಗಿದ್ದಾರೆ. ಆಯ್ತು, ಚರ್ಚೆ ಆರಂಭವಾಗಿದೆ. ಅದನ್ನು ನಾನು ಪೂರ್ತಿಗೊಳಿಸುತ್ತೇನೆ” ಎಂದಿದ್ದಾರೆ.

    ಕಾಂಗ್ರೆಸ್ ಹೈಕಮಾಂಡ್ ಮತ್ತು ರಾಜ್ಯದ ನಾಯಕರು ಜೆಡಿಎಸ್ ಎದುರು ನಡು ಬಗ್ಗಿಸಿ ನಾವು ಬೇಡವೆಂದರೂ ಮುಖ್ಯಮಂತ್ರಿ ಕುರ್ಚಿಯಲ್ಲಿ ಕೂರಿಸಿದಿರಿ. ಆನಂತರ ಒತ್ತಡಗಳನ್ನು ಹೇರಿ ಬ್ಯಾಕ್ ಸೀಟ್ ಡ್ರೈವಿಂಗ್ ಮಾಡಿದಾಗ ಕಾಂಗ್ರೆಸ್ಸಿ ನೈತಿಕತೆ ಎಲ್ಲಿತ್ತು? ಎಂದು ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

    “ರೈತರ ಸಾಲ ಮನ್ನಾ ಮಾಡಿ ರಾಜಧರ್ಮ ಪಾಲಿಸಬೇಕಿತ್ತು. ನಿಮ್ಮೆಲ್ಲಾ ಆಟಗಳು ಗೊತ್ತಿದ್ದು ಕೂಡ ರಾಜ್ಯದ ಜನತೆಯ ಹಿತಕ್ಕಾಗಿ ನಾನು ಕೂಡ ಚಾಣಕ್ಯ ನೀತಿಯನ್ನು ಪ್ರದರ್ಶಿಸಿ ರೈತರ ಹಿತ ರಕ್ಷಿಸಿದೆ. ಇದರಲ್ಲಿ ನನ್ನ ವೈಯಕ್ತಿಕ ಲಾಭವೇನಿಲ್ಲ. ಬೇಡವೆಂದರೂ ನಮ್ಮ ಮನೆ ಬಾಗಿಲಿಗೆ ಬಂದವರು ನೀವು. ನಾನು ಅಮಾಯಕನಾಗಿರಲಿಲ್ಲ. ಕಾಂಗ್ರೆಸ್ಸಿನವರು ತಮ್ಮ ಬೇಳೆ ಬೇಯಿಸಿಕೊಳ್ಳಲು ನನ್ನನ್ನು ಪೆದ್ದು ಮಾಡಲು ಮುಂದಾದಿರಿ. ಆದರೆ ನಾಡಿನ ರೈತರ ಹಿತ ಕಾಯಲು ನಾನು ಜಾಣತನ ಪ್ರದರ್ಶಿಸಿದೆ ಎಂಬುದು ನೆನಪಿರಲಿ” ಎಂದಿದ್ದಾರೆ.

    ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅತಂತ್ರ ಫಲಿತಾಂಶ ಬಂದಾಗ ಕಾಂಗ್ರೆಸ್ಸಿನ ರಾಷ್ಟ್ರ, ರಾಜ್ಯ ನಾಯಕರು ಇದ್ದ ಸಭೆಯಲ್ಲಿ ದೇವೇಗೌಡರು ಕಾಂಗ್ರೆಸ್ಸಿಗೆ ಸಲಹೆ ನೀಡಿ ಖರ್ಗೆ ಆಗಲಿ ಎಂದರು. ಖರ್ಗೆ ಸಿಎಂ ಆಗುವುದನ್ನು ಕಾಂಗ್ರೆಸ್ ಒಳಗಿನ ನಾಯಕರೇ ತಡೆದರು. ಆ ನಾಯಕರುಗಳು ಯಾರ್ಯಾರೆಂದು ಕಾಂಗ್ರೆಸ್ ಹುಡುಕಿಕೊಳ್ಳಲಿ. ಆಗ ಅವರ ನೈತಿಕತೆ ಪ್ರಶ್ನೆಗೆ ಅವರದೇ ನಾಯಕರಿಂದ ಉತ್ತರ ಸಿಗಬಹುದು” ಎಂದು ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

    ಕುಮಾರಸ್ವಾಮಿ ಅಜ್ಞಾತ, ಅಪ್ರಸ್ತುತರಾಗಿದ್ದಾರೆ ಎಂದೂ ಕಾಂಗ್ರೆಸ್ಸಿನ ನಾಯಕರು ಪಕ್ಷದ ಟ್ವಿಟ್ವರ್ ಮೂಲಕ ದಾಳಿ ಮಾಡಿದ್ದಾರೆ. ದೇಶದ ಎಷ್ಟು ರಾಜ್ಯಗಳಲ್ಲಿ ಕಾಂಗ್ರೆಸ್ ಪ್ರಸ್ತುತವಾಗಿದೆ? ಪ್ರತ್ಯಕ್ಷವಾಗಿ ರಾಜಕಾರಣ ಮಾಡುತ್ತಿದೆ? ಅನಾಥವಾಗಿದೆ? ಇದಕ್ಕೆ ಉತ್ತರಿಸಲು ನಾಯಕರ್ಯಾರಾದರೂ ಇದ್ದಾರೋ? ಇಲ್ಲ ಕಾಂಗ್ರೆಸ್ಸಿನ ಟ್ವಿಟರ್ ಖಾತೆಗೆ ಸೀಮಿತವೋ? ಎಂದು ಸಾಲು ಸಾಲು ಪ್ರಶ್ನೆ ಮಾಡಿದರು.

    “ಬೇರೆ ಪಕ್ಷದ ಶಾಸಕರಿಗೆ ಸ್ವಯಂ ಸೇರ್ಪಡೆಯ ‘ಮಾರುವೇಶ’ ಹಾಕಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವುದಕ್ಕೂ, ಬಿಜೆಪಿ ಅವರು ಆಪರೇಷನ್ ಅಸ್ತ್ರ ಬಳಸಿ ಸರ್ಕಾರವೊಂದನ್ನು ಬುಡಮೇಲು ಮಾಡುವುದಕ್ಕೂ ಅಂತಹ ವ್ಯತ್ಯಾಸವೇನಿಲ್ಲ. ಒಂದು ತೆಳುಗೆರೆಯಷ್ಟೇ ಅಂತರ. ಕಾಂಗ್ರೆಸ್ ಇದರ ಅರ್ಥ ತಿಳಿಯದಷ್ಟು ಕುಬ್ಜ ಸ್ಥಿತಿ ತಲುಪಿರುವುದು ಚೋದ್ಯವೆನಿಸಿದೆ. ಟೀಕೆಗಾಗಿ ಟೀಕೆ ಮಾಡುವ ಇಂತಹ ಮನಸ್ಥಿತಿಯಿಂದಾಗಿಯೇ ಕಾಂಗ್ರೆಸ್ ಇಂದು ಇಂತಹ ದುಃಸ್ಥಿತಿಗೆ ತಲುಪಿದೆ. ಕಪಟ ರಾಜಕಾರಣವನ್ನು ಯಾವ ಬಾಗಿಲಿನಿಂದ ಮಾಡಿದರೂ ಅದು ಅನೀತಿಯೇ ಆಗಿದೆ” ಎಂದರು.

    “ತನ್ನರಿದೆ ಅರಿವೆಂತುಂಟೊ?, ತನ್ನ ಮರೆದ ಮರೆಹೆಂತಂಟೊ?, ಅರೆದು ಮರೆದವರು, ನಿಮ್ಮ ಪ್ರತಿಬಿಂಬದಂತಿಪ್ಪರು ಕಾಣಾ, ಗುಹೇಶ್ವರಾ” ಎಂದು ಕುಮಾರಸ್ವಾಮಿ ಟ್ವೀಟ್‍ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದೇ ಬರುತ್ತೆ: ಸತೀಶ್ ಜಾರಕಿಹೊಳಿ

    ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದೇ ಬರುತ್ತೆ: ಸತೀಶ್ ಜಾರಕಿಹೊಳಿ

    ಬೆಳಗಾವಿ/ಚಿಕ್ಕೋಡಿ: ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದೇ ಬರುತ್ತೆ ಎಂದು ಕಾಂಗ್ರೆಸ್ ಪಕ್ಷದ ನೂತನ ಕಾರ್ಯಾಧ್ಯಕ್ಷ ಯಮಕನಮರಡಿ ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.

    ಕಾಂಗ್ರೆಸ್ ಪಕ್ಷದ ನೂತನ ಕಾರ್ಯಾಧ್ಯಕ್ಷರಾಗಿ ಆಯ್ಕೆಯಾದ ಯಮಕನಮರಡಿ ಶಾಸಕ ಸತೀಶ್ ಜಾರಕಿಹೊಳಿ ಮೊದಲ ಬಾರಿಗೆ ಶೈಕ್ಷಣಿಕ ಜಿಲ್ಲೆ ಚಿಕ್ಕೋಡಿಗೆ ಆಗಮಿಸಿದ್ದರು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ನೂತನ ಕಾರ್ಯದ್ಯಕ್ಷರನ್ನ ಅದ್ಧೂರಿಯಾಗಿ ಸ್ವಾಗತಿಸಿದರು. ಚಿಕ್ಕೋಡಿ ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ಕೆಪಿಸಿಸಿ ಕಾರ್ಯದ್ಯಕ್ಷ ಸತೀಶ್ ಜಾರಕಿಹೊಳಿ ಆಗಮಿಸುತ್ತಿದ್ದಂತೆ ಕಾರ್ಯಕರ್ತರು ಪಟಾಕಿ ಸಿಡಿಸಿ ಹೂ ನೀಡಿ ಸ್ವಾಗತ ಮಾಡಿಕೊಂಡರು.

    ಡಿ.ಕೆ.ಶಿವಕುಮಾರ್ ಜೈಲಿಗೆ ಹೋಗಿ ಬಂದವರು. ಅವರಿಂದ ಹೇಗೆ ಪಕ್ಷ ಕಟ್ಟಲಾಗುತ್ತದೆ ಎಂದು ಸಚಿವ ರಾಮುಲು ಟೀಕೆ ಮಾಡಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ ಸತೀಶ್ ಜಾರಕಿಹೊಳಿ, ಡಿ.ಕೆ.ಶಿವಕುಮಾರ್ ಹೋಗಿ ಬಂದಿದ್ದು ಒಂದು ಅಪ್ರಸ್ತುತ. ಡಿ.ಕೆ.ಶಿವಕುಮಾರ್ ಉತ್ಸಾಹಿ ಇದ್ದಾರೆ. ಪಕ್ಷ ಕಟ್ಟುವ ಛಲ ಅವರಲ್ಲಿದೆ. ನಾವೆಲ್ಲರೂ ಅವರ ಜೊತೆಗೆ ಕೆಲಸ ಮಾಡುತ್ತೇವೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದೇ ಬರುತ್ತೆ ಎಂದರು.

    ಡಿಕೆಶಿ ಅವರ ಸಾಮರ್ಥ್ಯ ಹಾಗೂ ಪಕ್ಷ ಸೇವೆ ನೋಡಿ ಪಕ್ಷ ಅವರಿಗೆ ಜವಾಬ್ದಾರಿ ನೀಡಿದೆ. ಹಿಂದೆ ಇದ್ದ ಕಾಂಗ್ರೆಸ್ ಬೇರೆ, ಇಂದಿನ ಕಾಂಗ್ರೆಸ್ ಬೇರೆ. ಎಲ್ಲರೂ ಒಗ್ಗಟ್ಟಾಗಿ ಪಕ್ಷ ಕಟ್ಟುವ ಕೆಲಸ ಮಾಡುತ್ತೇವೆ ಎಂದು ಸತೀಶ್ ಜಾರಕಿಹೊಳಿ ಹೇಳಿದರು.

    ಕಾರ್ಯಾಧ್ಯಕ್ಷರ ಸತ್ಕಾರದ ವೇಳೆ ಹೆಚ್ವಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಜಮಾಯಿಸಿದ್ದರು. ಹೀಗಾಗಿ ಯಾರೂ ಕೂಡ ಸಾಮಾಜಿಕ ಅಂತರವನ್ನು ಕಾಪಾಡಲಿಲ್ಲ.