Tag: ಕಾಂಗ್ರೆಸ್ ಬಿಜೆಪಿ

  • ಮುಡಾ ಹಗರಣದಲ್ಲಿ ಸಿಎಂ ಪುತ್ರ ಯತೀಂದ್ರ ಪಾತ್ರ ಇದೆಯಾ? – ಸಚಿವ ಬೈರತಿ ಸುರೇಶ್ ಹೇಳಿದ್ದೇನು?

    ಮುಡಾ ಹಗರಣದಲ್ಲಿ ಸಿಎಂ ಪುತ್ರ ಯತೀಂದ್ರ ಪಾತ್ರ ಇದೆಯಾ? – ಸಚಿವ ಬೈರತಿ ಸುರೇಶ್ ಹೇಳಿದ್ದೇನು?

    ಮೈಸೂರು: ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) (MUDA) ಹಗರಣದಲ್ಲಿ ಯತೀಂದ್ರ ಸಿದ್ದರಾಮಯ್ಯ ಪಾತ್ರ ಈ ಕ್ಷಣಕ್ಕೆ ಕಂಡುಬಂದಿಲ್ಲ ಎಂದು ಸಚಿವ ಬೈರತಿ ಸುರೇಶ್ (Byrathi Suresh) ಹೇಳಿದ್ದಾರೆ.

    ಮೈಸೂರಿನಲ್ಲಿ (Mysuru) ಮುಡಾ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, `ಮುಡಾ ಹಗರಣದಲ್ಲಿ ಯತೀಂದ್ರ ಸಿದ್ದರಾಮಯ್ಯ ಪಾತ್ರ ಇದೆ’ ಎಂಬ ಮಾಜಿ ಸಚಿವ ಹೆಚ್. ವಿಶ್ವನಾಥ್ (H Vishwanath) ಅವರ ಆರೋಪಕ್ಕೆ ಸ್ಪಷ್ಟನೆ ನೀಡಿದ್ದಾರೆ. ಯತೀಂದ್ರ ಅವರ ಪಾತ್ರ ಈ ಕ್ಷಣಕ್ಕೆ ಕಂಡುಬಂದಿಲ್ಲ. ಯತೀಂದ್ರ (Yathindra Siddaramaiah) ಈಗ ಎಂಎಲ್‌ಸಿ ಆಗಿದ್ದಾರೆ. ಈ ಹಿಂದೆ ಶಾಸಕರಾಗಿದ್ದರು ಇದಕ್ಕೂ ಅವರಿಗೂ ಸಂಬಂಧವಿಲ್ಲ. ಹೆಚ್. ವಿಶ್ವನಾಥ್ ಅವರು ನಮಗಿಂತ ಹಿರಿಯರು. ಯತೀಂದ್ರ ಬಗ್ಗೆ ಹೇಳೋದಕ್ಕೆ ಏನು ಸಾಕ್ಷಿಯಿದೆ? ಅವರ ಹೇಳಿಕೆಯನ್ನ ಆ ದೇವರೇ ಮೆಚ್ಚಬೇಕು. ವಿಶ್ವನಾಥ್ ಅವರ ಬಳಿ ಸಾಕ್ಷಿ ಇದ್ದರೆ ತಂದು ಕೊಡಲಿ ಎಂದು ಸವಾಲು ಹಾಕಿದ್ದಾರೆ.

    ಇನ್ನೂ ಮುಡಾ ದಾಖಲಾತಿಗಳನ್ನ ಪೆನ್‌ಡ್ರೈವ್‌ನಲ್ಲಿ ಹಾಕಿ ಕೊಡುವಂತೆ ಕೇಳಿದ್ದ ವಿಶ್ವನಾಥ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ನಮ್ಮಲ್ಲಿ ಪೆನ್‌ಡ್ರೈವ್‌ ಸಂಸ್ಕೃತಿ ಇಲ್ಲ. ಈ ಬಗ್ಗೆ ನನಗೆ ಗೊತ್ತಿಲ್ಲ, ವಿಶ್ವನಾಥ್ ಈಗ ಮಾತನಾಡುತ್ತಿದ್ದಾರೆ. ನನ್ನ ಬಳಿ ಸೈಟ್ ಕೊಡಿಸುವಂತೆ ವಿಶ್ವನಾಥ್ ಬಂದಿದ್ದರು. ಅದನ್ನ ನೆನಪು ಮಾಡಿಕೊಳ್ಳಲಿ. ಸುಮ್ಮನೆ ಆರೋಪಗಳನ್ನ ಮಾಡುವುದನ್ನ ನಿಲ್ಲಿಸಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಮೋದಿ ಅಂದ್ರೆ ಪೂರ್ಣ ಹಿಂದೂ ಸಮಾಜ ಅಲ್ಲ, ಹಿಂದೂ ಅಂತ ಕರೆಸಿಕೊಳ್ಳೋರು ಹಿಂಸೆ, ದ್ವೇಷ ಹರಡುತ್ತಿದ್ದಾರೆ: ರಾಗಾ ವಾಗ್ದಾಳಿ

    ಬಿಜೆಪಿ ಸರ್ಕಾರ ಅವಧಿಯ ಆದೇಶ ರದ್ದು:
    ಮುಡಾ ಸಭೆಯಲ್ಲಿ ಹಲವು ವಿಚಾರಗಳು ಚರ್ಚೆಯಾಗಿವೆ. 7 ತಿಂಗಳ ಹಿಂದೆ ನಾನೇ ಆದೇಶ ಮಾಡಿದ್ದೇನೆ. ತುಂಡು ಭೂಮಿ ಹಂಚಿಕೆ ಮಾಡದಂತೆ ಆದೇಶ ಮಾಡಿದ್ದೇನೆ. ಜೊತೆಗೆ ಬಿಜೆಪಿ ಸರ್ಕಾರ ಇದ್ದಾಗ ಮಾಡಿದ್ದ ಆದೇಶಗಳನ್ನ ರದ್ದು ಮಾಡಲು ಸೂಚನೆ ನೀಡಿದ್ದೇನೆ ಎಂದು ಸಚಿವ ಬೈರತಿ ಸುರೇಶ್ ಹೇಳಿದ್ದಾರೆ. ಇದನ್ನೂ ಓದಿ: ಮೈಸೂರು ಮುಡಾದಲ್ಲಿ ಹಗರಣ ಆರೋಪ – ಆಯುಕ್ತ ದಿನೇಶ್ ಕುಮಾರ್‌ ತಲೆದಂಡ!

  • ಮೈಸೂರು ಮುಡಾದಲ್ಲಿ ಹಗರಣ ಆರೋಪ – ಆಯುಕ್ತ ದಿನೇಶ್ ಕುಮಾರ್‌ ತಲೆದಂಡ!

    ಮೈಸೂರು ಮುಡಾದಲ್ಲಿ ಹಗರಣ ಆರೋಪ – ಆಯುಕ್ತ ದಿನೇಶ್ ಕುಮಾರ್‌ ತಲೆದಂಡ!

    – ಐಎಎಸ್ ಅಧಿಕಾರಿಗಳ ಹೆಗಲಿಗೆ ತನಿಖೆ ಹೊಣೆ

    ಮೈಸೂರು: ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) (MUDA) 50:50 ಸೈಟು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮುಡಾ ಆಯುಕ್ತ ದಿನೇಶ್ ಕುಮಾರ್ ಅವರ ತಲೆದಂಡವಾಗಿದೆ.

    ಮುಡಾದಲ್ಲಿ ಹಗರಣ ನಡೆದಿದೆ ಎಂಬ ಬಿಜೆಪಿ ನಾಯಕರ ಆರೋಪ ಕೇಳಿಬಂದ ಬೆನ್ನಲ್ಲೇ ಸೋಮವಾರ ಸಚಿವ ಬೈರತಿ ಸುರೇಶ್ (Byrathi Suresh) ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. ಬಿಗಿ ಪೊಲೀಸ್‌ ಭದ್ರತೆಯಲ್ಲಿ ಸಭೆ ನಡೆಸಿದ್ದಾರೆ. ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಡಾ ಆಯುಕ್ತರ (MUDA Commissioner) ವರ್ಗಾವಣೆಗೊಳಿಸಿ ಮೌಖಿಕ ಆದೇಶ ಮಾಡಿರುವುದಾಗಿ ತಿಳಿಸಿದ್ದಾರೆ. ಮುಡಾ ಆಯುಕ್ತ, ಕಾರ್ಯದರ್ಶಿ, ಎಇಇ ಕೂಡ ವರ್ಗಾವಣೆಣೆ ಮಾಡಲಾಗಿದೆ. ಇದು ಕ್ರಮ ಅಲ್ಲ, ನಿಷ್ಪಕ್ಷಪಾತ ತನಿಖೆ ಹಿನ್ನೆಲೆ ಅಧಿಕಾರಿಗಳ ವರ್ಗಾವಣೆ ಮಾಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

    50:50 ನಿವೇಶನ ಹಂಚಿಕೆ ಸಂಬಂಧ ತನಿಖೆ ನಡೆಸಲು ಇಬ್ಬರು ಐಎಎಸ್‌ ಅಧಿಕಾರಿಗಳು (IAS Officer) ಹಾಗೂ ನಾಲ್ಕು ಹೆಚ್ಚುವರಿ ಸಿಬ್ಬಂದಿಯನ್ನ ನೇಮಿಸಲಾಗಿದೆ. ಐಎಎಸ್ ಅಧಿಕಾರಿ ವೆಂಕಟಾಚಲಪತಿ, ಕವಳಗಿ ಅವರನ್ನು ತನಿಖೆಗೆ ನೇಮಿಸಲಾಗಿದ್ದು, 4 ವಾರಗಳಲ್ಲಿ ವರದಿ ನೀಡುವಂತೆ ಸೂಚಿಸಲಾಗಿದೆ. ಜೊತೆಗೆ ಮುಂದಿನ 1 ತಿಂಗಳು ಯಾವುದೇ ಸೈಟು ಹಂಚಿಕೆ ಮಾಡದಂತೆ, ಮುಡಾದಲ್ಲಿ ಸಭೆ ನಡೆಸದಂತೆ ಆದೇಶಿಸಿದ್ದಾರೆ. ಜೊತೆಗೆ ಈ ಹಿಂದೆ ಹಂಚಿಕೆಯಾಗಿರುವ ಎಲ್ಲಾ ಸೈಟುಗಳನ್ನು ಕೂಡ ತಡೆಹಿಡಿಯಲಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ.

    ಬಿಜೆಪಿ ಸರ್ಕಾರ ಅವಧಿಯ ಆದೇಶ ರದ್ದು:
    ಮುಡಾ ಸಭೆಯಲ್ಲಿ ಹಲವು ವಿಚಾರಗಳು ಚರ್ಚೆಯಾಗಿವೆ. 7 ತಿಂಗಳ ಹಿಂದೆ ನಾನೇ ಆದೇಶ ಮಾಡಿದ್ದೇನೆ. ತುಂಡು ಭೂಮಿ ಹಂಚಿಕೆ ಮಾಡದಂತೆ ಆದೇಶ ಮಾಡಿದ್ದೇನೆ. ಜೊತೆಗೆ ಬಿಜೆಪಿ ಸರ್ಕಾರ ಇದ್ದಾಗ ಮಾಡಿದ್ದ ಆದೇಶಗಳನ್ನ ರದ್ದು ಮಾಡಲು ಸೂಚನೆ ನೀಡಿದ್ದೇನೆ ಎಂದು ಸಚಿವ ಬೈರತಿ ಸುರೇಶ್ ಹೇಳಿದ್ದಾರೆ.

  • ಸಂತೋಷ್ ಹೆಸರು ತಂದಿದ್ದು ಶೆಟ್ಟರ್‌ಗೆ ಶೋಭೆ ತರಲ್ಲ – ಇನ್ನು ಅವ್ರ ದಾರಿ ಅವರಿಗೆ ನಮ್ಮ ದಾರಿ ನಮಗೆ: ಬಿಎಸ್‌ವೈ

    ಸಂತೋಷ್ ಹೆಸರು ತಂದಿದ್ದು ಶೆಟ್ಟರ್‌ಗೆ ಶೋಭೆ ತರಲ್ಲ – ಇನ್ನು ಅವ್ರ ದಾರಿ ಅವರಿಗೆ ನಮ್ಮ ದಾರಿ ನಮಗೆ: ಬಿಎಸ್‌ವೈ

    ಬೆಂಗಳೂರು: ಬಿಎಲ್ ಸಂತೋಷ್ (BL Santosh) ಹೆಸರನ್ನು ನಡುವೆ ತಂದಿರುವುದು ಜಗದೀಶ್ ಶೆಟ್ಟರ್‌ಗೆ (Jagadish Shettar) ಶೋಭೆ ತರಲ್ಲ. ಅವರಿಗೆ ಸಂತೋಷ್‌ರಿಂದ ಟಿಕೆಟ್ ತಪ್ಪಿದ್ದು ಎಂಬ ಮಾತು ಸುಳ್ಳು ಎಂದು ಮಾಜಿ ಸಿಎಂ ಯಡಿಯೂರಪ್ಪ (BS Yediyurappa) ಶೆಟ್ಟರ್ ವಿರುದ್ಧ ಕಿಡಿಕಾರಿದ್ದಾರೆ.

    ಜಗದೀಶ್ ಶೆಟ್ಟರ್‌ಗೆ ಎಲ್ಲಾ ರೀತಿಯಿಂದಲೂ ಮನವೊಲಿಸುವ ಪ್ರಯತ್ನ ಆಗಿದೆ. ಆದರೆ ಅವರು ಅಂತಿಮವಾಗಿ ಪಕ್ಷ ಬಿಟ್ಟು ಹೋದರು. ಅವರು ಪಕ್ಷ ಬಿಟ್ಟಿರುವುದರಿಂದ ಬಿಜೆಪಿಗೆ (BJP) ಏನೂ ನಷ್ಟ ಆಗಲ್ಲ. ಏಕೆಂದರೆ ಜಗದೀಶ್ ಶೆಟ್ಟರ್ ನಂಬಿ ಅವರ ಜೊತೆಗೆ ಯಾವ ಕಾರ್ಯಕರ್ತರೂ ಹೋಗಿಲ್ಲ. ಅವರಿಗೆ ಟಿಕೆಟ್ ಸಿಗದಿರುವುದಕ್ಕೆ ಯಾರೂ ಕಾರಣರಲ್ಲ. ಸುಮ್ಮನೆ ಸಂತೋಷ್ ಹೆಸರು ತಂದಿದ್ದು ಕೂಡಾ ಶೆಟ್ಟರ್‌ಗೆ ಶೋಭೆ ತರುವುದಿಲ್ಲ ಎಂದು ತಿರುಗೇಟು ನೀಡಿದರು.

    ಶೆಟ್ಟರ್ ಈ ರೀತಿಯ ತೀರ್ಮಾನ ತೆಗೆದುಕೊಳ್ಳಬಾರದಾಗಿತ್ತು. ನಾವು ಎಷ್ಟೇ ಮನವಿ ಮಾಡಿದರೂ ಅವರು ಒಪ್ಪಲಿಲ್ಲ. ಅವರನ್ನು ರಾಜ್ಯಸಭೆ ಸದಸ್ಯರಾಗಿ ಮಾಡುತ್ತೇವೆ ಎಂದು ಹೇಳಿದ್ದೆವು. ಈಗ ಅವರು ಹೋಗಿರುವುದರಿಂದ ನಮಗೇನೂ ನಷ್ಟವಿಲ್ಲ. ಇನ್ಮೇಲೆ ಅವರ ದಾರಿ ಅವರಿಗೆ ನಮ್ಮ ದಾರಿ ನಮಗೆ. ಬಿಜೆಪಿ ಬಹುಮತ ಪಡೆದುಕೊಂಡು ಅಧಿಕಾರಕ್ಕೆ ಬರುತ್ತದೆ ಎಂದರು. ಇದನ್ನೂ ಓದಿ: ನನ್ನ ಎದುರಾಳಿ ಪ್ರಬಲ ಅಭ್ಯರ್ಥಿ: ರಮೇಶ್ ಜಾರಕಿಹೊಳಿ

    ಶಿವಮೊಗ್ಗ ಟಿಕೆಟ್ ಘೋಷಣೆ ಬಾಕಿ ಇರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಶಿವಮೊಗ್ಗದ ಟಿಕೆಟ್ ಅನ್ನು ಇಂದು ಘೋಷಣೆ ಮಾಡುತ್ತೇವೆ. ಬುಧವಾರ ಶಿಕಾರಿಪುರದಿಂದ ವಿಜಯೇಂದ್ರ ನಾಮಪತ್ರ ಸಲ್ಲಿಕೆ ಮಾಡುತ್ತಿದ್ದಾರೆ. ಅದಕ್ಕಾಗಿ ನಾನು ಇಂದು ಶಿವಮೊಗ್ಗ ಹೋಗುತ್ತಿದ್ದೇನೆ. ನಾಮಪತ್ರ ಸಲ್ಲಿಕೆ ಬಳಿಕ ಒಂದೆರಡು ದಿನಗಳಲ್ಲಿ ಪ್ರಚಾರ ಆರಂಭಿಸುತ್ತೇವೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದರು. ಇದನ್ನೂ ಓದಿ: ನಾಳೆಯಿಂದ ಸಿಎಂ ಬೊಮ್ಮಾಯಿ ಪರ ಅಖಾಡಕ್ಕೆ ಇಳಿವ ಸುದೀಪ್

  • ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಕೃಷ್ಣಾ ನದಿ ಕಾಮಗಾರಿಗೆ ಪ್ರತಿ ವರ್ಷ 40 ಸಾವಿರ ಕೋಟಿ ಕೊಡ್ತೇವೆ – ಸುರ್ಜೆವಾಲ

    ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಕೃಷ್ಣಾ ನದಿ ಕಾಮಗಾರಿಗೆ ಪ್ರತಿ ವರ್ಷ 40 ಸಾವಿರ ಕೋಟಿ ಕೊಡ್ತೇವೆ – ಸುರ್ಜೆವಾಲ

    ಹುಬ್ಬಳ್ಳಿ: ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಕೃಷ್ಣಾ ನದಿ 3ನೇ ಹಂತದ ಕಾಮಗಾರಿಗೆ ಪ್ರತಿ ವರ್ಷ 40 ಸಾವಿರ ಕೋಟಿ ರೂಪಾಯಿ ಕೊಡುತ್ತೇವೆ ಎಂದು ಕಾಂಗ್ರೆಸ್ (Congress) ರಾಜ್ಯ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೆವಾಲ (Randeep Surjewala) ಭರವಸೆ ನೀಡಿದ್ದಾರೆ.

    ಹುಬ್ಬಳ್ಳಿಯಲ್ಲಿಂದು (Hubballi) ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಕೃಷ್ಣಾ ನದಿ (Krishna River Project) ನೀರು ಹಂಚಿಕೆ ವಿಚಾರದಲ್ಲಿ ಬಿಜೆಪಿಯವರು (BJP) ಜನರಿಗೆ ದ್ರೋಹ ಮಾಡುತ್ತಾ ಬಂದಿದ್ದಾರೆ. ಪರಿಣಾಮ ಉತ್ತರ ಕರ್ನಾಟಕ ಭಾಗದ ಜನರಿಗೆ ಸಂಘರ್ಷ ಮತ್ತು ಸವಾಲಿನ ಸಮಯ ಎದುರಾಗಿದೆ. ಇನ್ನೂ ಮೂರು ತಿಂಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ಅದಾದ ಮೇಲೆ ಕೃಷ್ಣಾ ನದಿ 3ನೇ ಹಂತದ ಕಾಮಗಾರಿಗೆ ಪ್ರತಿ ವರ್ಷ 40 ಸಾವಿರ ಕೋಟಿ ರೂಪಾಯಿ ಕೊಡುತ್ತೇವೆ ಎಂದು ಘೋಷಣೆ ಮಾಡಿದ್ದಾರೆ. ಇದನ್ನೂ ಓದಿ: ನನ್ನ ಮೂರ್ತಿ ಬಿಟ್ಟು ನನ್ನ ಕುತ್ತಿಗೆಗೆ ಬೇರೆ ಯಾರೂ ತಾಳಿ ಕಟ್ಟಬಾರದು- ಯುವತಿಯ ಹರಕೆ

    ಅಮಿತ್ ಶಾ ರಾಜ್ಯಕ್ಕೆ ಬಂದಿದ್ದರೂ ಕೃಷ್ಣಾ ಮತ್ತು ಮಹದಾಯಿ ನೀರು ಹಂಚಿಕೆ (Kalasa Banduri Yojana) ವಿಚಾರವಾಗಿ ಮಾತನಾಡಿಲ್ಲ. ಏಕೆಂದರೆ ಅವರ ಮನಸ್ಸಿನಲ್ಲಿ ಕಳ್ಳನಿದ್ದಾನೆ. ಇಂದಿಗೂ ಶಾ ಮತ್ತು ಮೋದಿ ಅವರು ಕೃಷ್ಣಾ ಮತ್ತು ಮಹದಾಯಿ ನೀರಿನ ಹಕ್ಕಿನಿಂದ ಉತ್ತರ ಕರ್ನಾಟಕದ ಜನರನ್ನು ದೂರ ಇಟ್ಟಿದ್ದಾರೆ. ಅರಣ್ಯ ಇಲಾಖೆ ಕ್ಲಿಯರೆನ್ಸ್, ಹಸಿರು ನ್ಯಾಯಾಧಿಕರಣದ ಕ್ಲಿಯರೆನ್ಸ್, ಕಾಮಗಾರಿ ಟೆಂಡರ್ ಎಲ್ಲಿದೆ ತೋರಿಸಲಿ? ಮೋಸಗಾರ ಬಿಜೆಪಿ ಒಂಟೆಯ ಬಾಯಲ್ಲಿ ಜೀರಿಗೆ ಹಾಕುವ ಕೆಲಸ ಮಾಡುತ್ತಿದೆ. ಈಗ ಇಲ್ಲಸಲ್ಲದ ಮಾತನಾಡಿ ದಿಕ್ಕುತಪ್ಪಿಸುತ್ತಿದೆ. ಈ ಬಗ್ಗೆ ಜನರು ಎಚ್ಚೆತ್ತುಕೊಳ್ಳಬೇಕು ಎಂದು ಕರೆ ನೀಡಿದ್ದಾರೆ. ಇದನ್ನೂ ಓದಿ: ರಾಜ್ಯಕ್ಕೆ ಅಮಿತ್ ಶಾ ಏನಾದರೂ ನ್ಯಾಯ ಒದಗಿಸಿದ್ದಾರಾ – ಡಿಕೆಶಿ ಪ್ರಶ್ನೆ

    ಡಿ.ಕೆ.ಶಿವಕುಮಾರ್ (DK Shivakumar) ಮತ್ತು ಸಿದ್ದರಾಮಯ್ಯ (Siddaramaiah) ತಮ್ಮ ಯಾತ್ರೆಯ ಮೂಲಕ ಹೊಸ ಇತಿಹಾಸ ಬರೆಯಲು ಹೊರಟಿದ್ದಾರೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ಬಳಿಕ ಮುಂದಿನ ಕಾಂಗ್ರೆಸ್ ಸರ್ಕಾರ ಮಹದಾಯಿ ಯೋಜನೆಗೆ 3 ಸಾವಿರ ಕೋಟಿ ರೂ. ಅನುದಾನ ಕೊಡಲಿದೆ. ಮೊದಲ ಕ್ಯಾಬಿನೆಟ್‌ನಲ್ಲಿ ಐದು ನೂರು ಕೋಟಿ ರೂಪಾಯಿ ಬಿಡುಗಡೆ ಮಾಡಲಿದೆ. ಇದು ಕಾಂಗ್ರೆಸ್ ಪಕ್ಷದ ಬದ್ಧತೆ, ದ್ರೋಹಿಗಳ ಬಗ್ಗೆ ಜನರು ಎಚ್ಚರಿಕೆಯಿಂದ ಇರಬೇಕು ಎಂದು ಕಿವಿಮಾತು ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಹುಬ್ಬಳ್ಳಿಯಲ್ಲಿ ಮತ್ತೆ ಮೊಳಗಿದ `ಮುಂದಿನ ಸಿಎಂ ಸಿದ್ದರಾಮಯ್ಯ’ ಘೋಷಣೆ

    ಹುಬ್ಬಳ್ಳಿಯಲ್ಲಿ ಮತ್ತೆ ಮೊಳಗಿದ `ಮುಂದಿನ ಸಿಎಂ ಸಿದ್ದರಾಮಯ್ಯ’ ಘೋಷಣೆ

    ಹುಬ್ಬಳ್ಳಿ: ನಗರಕ್ಕೆ ಭೇಟಿ ನೀಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಹುಬ್ಬಳ್ಳಿಯ (Hubballi) ಖಾಸಗಿ ಹೋಟೆಲ್‌ನಿಂದ ಹೊರಬರುತ್ತಿದ್ದಂತೆ `ಮುಂದಿನ ಸಿಎಂ ಸಿದ್ದರಾಮಯ್ಯ’ (Next CM Siddaramaiah) ಘೋಷಣೆಗಳು ಮೊಳಗಿದವು.

    ಸಿದ್ದರಾಮಯ್ಯ ಅಭಿಮಾನಿ ಸಂಘದ ಗಿರೀಶ್ ಗದಿಗೆಪ್ಪಗೌಡ `ಮುಂದಿನ ಸಿಎಂ ಸಿದ್ದರಾಮಯ್ಯ, ಹೌದೋ ಹುಲಿಯಾ.. ಮುಂದಿನ ಸಿಎಂ ಸಿದ್ದರಾಮಯ್ಯ’ ಎಂದು ಘೋಷಣೆ ಕೂಗಿದ್ದಾರೆ. ಈ ವೇಳೆ ಸಿದ್ದರಾಮಯ್ಯ ಅವರು ಗದರಿಸಿ ಸುಮ್ಮನಿರುವಂತೆ ಸೂಚಿಸಿದರು. ಇದನ್ನೂ ಓದಿ: ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಅಶೋಕ್ ಕಶ್ಯಪ್

    ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ರು. ಬಿಜೆಪಿ (BJP) ಸಂಕಲ್ಪ ಯಾತ್ರೆ ವಿಫಲವಾಗಿದೆ. ಜನರು ಬಿಜೆಪಿಯನ್ನು ಕಿತ್ತೊಗೆದು ಕಾಂಗ್ರೆಸ್‌ಗೆ (Congress) ಅಧಿಕಾರ ಕೊಡಲು ಸಂಕಲ್ಪ ಮಾಡಿದ್ದಾರೆ. ಅದಕ್ಕಾಗಿ ಬಿಜೆಪಿ ಜನಸಂಕಲ್ಪ ಯಾತ್ರೆಗೆ ಜನ ಸೇರುತ್ತಿಲ್ಲ. ಆದರೆ ಜನರನ್ನು ಹಿಡಿದಿಡಲು ಕಾರ್ಯಕ್ರಮದ ಮುಂಭಾಗದ ಗೇಟ್ ಗಳನ್ನಿಟ್ಟು ಬೀಗ ಹಾಕಿ ಕಟ್ಟಿಹಾಕುತ್ತಿದ್ದಾರೆ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಓವೈಸಿ ಪ್ರಯಾಣಿಸುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ

    ಮೀಸಲಾತಿ ವಿಚಾರವಾಗಿ ಮಾತನಾಡಿದ ಸಿದ್ದು, ನನಗೆ ಗೊತ್ತಿರುವಂತೆ ಸಂವಿಧಾನದ (Constitution of India) ಆರ್ಟಿಕಲ್ 15 ಮತ್ತು 16ರ ಅಡಿಯಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ (EWS) ಮೀಸಲಾತಿ (Reservation) ಕಲ್ಪಿಸಲು ಅವಕಾಶವಿಲ್ಲ. ಸಾಮಾಜಿಕವಾಗಿ ಹಿಂದುಳಿದ ಮತ್ತು ಅಸ್ಪೃಶ್ಯತೆ ಹಾಗೂ ಅಸಮಾನತೆ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ಸಮೂದಾಯಗಳಿಗೆ ಮಾತ್ರ ಮೀಸಲು ನೀಡಬಹುದು ಎಂದು ತಿಳಿಸಿದ್ದಾರೆ.

    ಸತೀಶ್ ಜಾರಕಿಹೊಳಿ (Satish Jarkiholi) ನೀಡಿದ `ಹಿಂದೂ’ ಭಾರತೀಯ ಪದವೇ ಅಲ್ಲ ಎಂಬ ಹೇಳಿಕೆಗೆ, ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸುರ್ಜೇವಾಲಾ ಅವರು ಪ್ರತಿಕ್ರಿಯೆ ನೀಡಿದ್ದಾರೆ ಅದೇ ನಮ್ಮ ನಿಲುವು ಎಂದು ಹೇಳಿದ ಸಿದ್ದರಾಮಯ್ಯ, ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಮಾಡೋದು ತಪ್ಪಲ್ಲ, ಆದರೆ ಸರ್ಕಾರ ಜಯಂತಿಯನ್ನು ನಿಷೇಧ ಮಾಡಿದೆ. ನಗರಪಾಲಿಕೆ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆ ನೋಡೋಣ ಎಂದು ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಬಸವರಾಜ ಬೊಮ್ಮಾಯಿ RSS ಕೈಗೊಂಬೆ- ಸಿದ್ದರಾಮಯ್ಯ ವಾಗ್ದಾಳಿ

    ಬಸವರಾಜ ಬೊಮ್ಮಾಯಿ RSS ಕೈಗೊಂಬೆ- ಸಿದ್ದರಾಮಯ್ಯ ವಾಗ್ದಾಳಿ

    ರಾಯಚೂರು: ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಆರ್‌ಎಸ್‌ಎಸ್‌ನ (RSS) ಕೈಗೊಂಬೆಯಾಗಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ವಾಗ್ದಾಳಿ ನಡೆಸಿದ್ದಾರೆ.

    ರಾಯಚೂರಿನಲ್ಲಿ ಕಾಂಗ್ರೆಸ್ (Congress) ಪಕ್ಷದ ಮುಖಂಡರ ಸಭೆಯಲ್ಲಿ ಮಾತನಾಡಿರುವ ಅವರು, ಬಿಜೆಪಿ (BJP) ಅವರು ಮಾತೆತ್ತಿದ್ರೆ ಸಿದ್ದರಾಮಯ್ಯನನ್ನ ಬೈತಾರೆ. ಚಿಕ್ಕಬಳ್ಳಾಪುರದಲ್ಲಿ ನನ್ನ ಬೈಯೋದಕ್ಕೇ ಕಾರ್ಯಕ್ರಮ ಮಾಡಿದ್ರು. ನೋಡಿ ನನ್ನ ಕಂಡ್ರೆ ಎಷ್ಟು ಭಯ. ಬಿಜೆಪಿಯವರು ನನ್ನೊಬ್ಬನನ್ನೇ ಟೀಕೆ ಮಾಡೋದು. ಏಕೆಂದರೆ ನಾನೊಬ್ಬನೇ ಆರ್‌ಎಸ್‌ಎಸ್ ಹಾಗೂ ಮೋದಿಯವರ (Narendra Modi) ಬಗ್ಗೆ ಮಾತಾಡೋದು ಎಂದು ಕುಟುಕಿದ್ದಾರೆ. ಇದನ್ನೂ ಓದಿ: ಪ್ರಯಾಣಿಕ ಖರೀದಿಸಿದ್ದ ಸಮೋಸಾದಲ್ಲಿ ಯೆಲ್ಲೋ ಕಲರ್ ಪೇಪರ್ – IRCTC ಹೇಳೋದೇನು?

    ರಾಜ್ಯ ಹಾಗೂ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ, ಭ್ರಷ್ಟಾಚಾರ ಮುಗಿಲು ಮುಟ್ಟಿದೆ. ಗುತ್ತಿಗೆದಾರರ ಸಂಘದವರು ಪ್ರಧಾನಿಗೆ (Prime Minister) ಪತ್ರಬರೆದು ವರ್ಷವಾಯಿತು. `ನಾಕಾನೆಂಗಾ ಕಾನೆದೂಂಗಾ’ ಅನ್ನೋ ಮೋದಿ ತನಿಖೆ ಮಾಡಿಸಬಹುದಿತ್ತು. 40 ಪರ್ಸೆಂಟ್ ಕಮಿಷನ್ ಕೊಡಬೇಕು ಅಂತ ಈ ಮೊದಲು ಕೇಳಿರಲಿಲ್ಲ. ನನ್ನ ಕೇಳಿದ್ದರೆ ಸಿಬಿಐಗೆ (CBI) ರೆಫರ್ ಮಾಡುತ್ತಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಯುವಜನರ ಜೀವನ ನಾಶಮಾಡಲು ಬಿಡಲ್ಲ: ಮೋದಿ ಎಚ್ಚರಿಕೆ

    ಬಿಜೆಪಿ ಅವರು ನನ್ನ ಆಡಳಿತಾವಧಿಯಲ್ಲಿ ಸಿಬಿಐ ಅನ್ನ ಚೋರ್ ಬಚಾವ್ ಸಂಸ್ಥೆ, ಕಾಂಗ್ರೆಸ್ ಇನ್ವೆಷ್ಟಿಗೇಷನ್ ಇನಸ್ಟಿಟ್ಯೂಟ್ ಅಂತಿದ್ರು. ಈಗ ಅವರ ಕೈಯಲ್ಲೇ ಸಿಬಿಐ ಇದೆ ಏನೂ ಮಾಡುತ್ತಿದ್ದಾರೆ? ಡಿಕೆ ರವಿ, ಮೇಸ್ತಾ ಕೇಸ್‌ಗಳಲ್ಲಿ ಏನು ಹೇಳಿದ್ದಾರೆ? ಸುಳ್ಳು ಆರೋಪಗಳನ್ನೇ ಮಾಡಿ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

    mosque-loudspeakers

    ಮುಸ್ಲಿಂ (Muslims) ಪರ ಸಿದ್ದು ಬ್ಯಾಟಿಂಗ್: ಹಿಜಬ್ (Hijab) ಒಂದು ವಿಷಯವೇ ಅಲ್ಲಾ, ಆಜಾನ್ ಎಷ್ಟೋ ವರ್ಷಗಳಿಂದ ಪ್ರಾರ್ಥನೆ ಮಾಡುತ್ತಾರೆ. ಹಲಾಲ್ ಅವರ ಸಂಪ್ರದಾಯ. ಈ ದೇಶ ಒಂದು ಧರ್ಮದ ಒಂದು ಸಂಪ್ರದಾಯದ ದೇಶವಲ್ಲ. ಅನೇಕ ಜಾತಿ, ಧರ್ಮ ಇವೆಲ್ಲವನ್ನೂ ಒಟ್ಟಿಗೇ ತೆಗೆದುಕೊಂಡು ಹೋಗಬೇಕು. ಅಂಬೇಡ್ಕರ್ ಸಂವಿಧಾನದಲ್ಲಿ ಧರ್ಮನಿರಪೇಕ್ಷತೆ ಬಗ್ಗೆ ಸ್ಪಷ್ಟವಾಗಿ ಹೇಳಿದ್ದಾರೆ. ಹಾಗಾಗಿ ಯಾರೇ ಅಧಿಕಾರಕ್ಕೆ ಬಂದರೂ ಸಂವಿಧಾನಕ್ಕೆ (Constitution) ವಿರುದ್ದ ಆಡಳಿತ ಮಾಡಬಾರದು ಎಂದು ಮನವರಿಕೆ ಮಾಡಿದ್ದಾರೆ.

    ಬಿಜೆಪಿಗೆ ದೇಶದ ಸಂವಿಧಾನದ ಬಗ್ಗೆ ಕಿಂಚಿತ್ತು ಗೌರವವಿಲ್ಲ. ಸಂವಿಧಾನ ಜಾರಿಗೆ ಬಂದಾಗಿನಿಂದ ಬದಲಾಯಿಸಲು ಪ್ರಯತ್ನ ಮಾಡುತ್ತಲೇ ಬಂದಿದ್ದಾರೆ ಎಂದು ಕಿಡಿ ಕಾರಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ನಾವು ಹಿಂದುಳಿಯಲು ಕಾಂಗ್ರೆಸ್, 370 ವಿಧಿ ಕಾರಣ – ವೈರಲ್ ಆಗ್ತಿದೆ ಲಡಾಖ್ ಯುವ ಸಂಸದನ ಭಾಷಣ

    ನಾವು ಹಿಂದುಳಿಯಲು ಕಾಂಗ್ರೆಸ್, 370 ವಿಧಿ ಕಾರಣ – ವೈರಲ್ ಆಗ್ತಿದೆ ಲಡಾಖ್ ಯುವ ಸಂಸದನ ಭಾಷಣ

    ನವದೆಹಲಿ: ನಮ್ಮ ಪ್ರದೇಶ ಭಾರತದಲ್ಲಿ ಹಿಂದುಳಿಯಲು ಕಾಂಗ್ರೆಸ್ ಮತ್ತು ಸಂವಿಧಾನದ 370ನೇ ವಿಧಿ ಕಾರಣ ಎಂದು ಲಡಾಖ್ ಬಿಜೆಪಿ ತ್ಸೆರಿಂಗ್ ನಮ್‍ಗ್ಯಾಲ್ ಅಭಿಪ್ರಾಯ ಪಟ್ಟಿದ್ದಾರೆ.

    370ನೇ ವಿಧಿಯ ರದ್ದು ಚರ್ಚೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಹಾಗೂ ಹಿಂದಿನ ರಾಜ್ಯ ಸರ್ಕಾರಗಳು ಸರ್ಕಾರಿ ಕೆಲಸಗಳನ್ನು ನೀಡುವ ವಿಚಾರದಲ್ಲಿಯೂ ಸಹ ಲಡಾಕ್ ಜನರಿಗೆ ತಾರತಮ್ಯ ಮಾಡಿವೆ. ಇಷ್ಟು ವರ್ಷ ಕಳೆದರೂ ಲಡಾಖ್‍ನಲ್ಲಿ ಯಾವುದೊಂದೂ ಉನ್ನತ ಶಿಕ್ಷಣ ಸಂಸ್ಥೆಯನ್ನು ಸ್ಥಾಪಿಸಲಿಲ್ಲ. ಇದು ಸಮಾನತೆಯೇ ಎಂದು ಪ್ರಶ್ನಿಸಿದ ಅವರು ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರದಡಿ ಒಂದು ವಿಶ್ವವಿದ್ಯಾಲಯವನ್ನು ಲಡಾಖ್ ಪಡೆದುಕೊಂಡಿದೆ ಎಂದು ತಿಳಿಸಿದರು.

    ಕಾಶ್ಮೀರ ರಾಜಕೀಯ ಪಕ್ಷಗಳ ನಿಲುವು ತುಂಬಾ ವಿಪರ್ಯಾಸವಾಗಿದ್ದು, ಒಂದೆಡೆ ಪಂಚಾಯತ್ ಚುನಾವಣೆಗಳನ್ನು ಬಹಿಷ್ಕರಿಸುತ್ತಾರೆ. ಇನ್ನೊಂದೆಡೆ ಅವರಿಗೆ ಅನುಕೂಲವಾಗುವ ಚುನಾವಣೆಗಳಲ್ಲಿ ಭಾಗವಹಿಸುತ್ತಾರೆ. ಕಾಶ್ಮೀರ ಕೇಂದ್ರಿತ ನ್ಯಾಷನಲ್ ಕಾನ್ಫರೆನ್ಸ್ ಮತ್ತು ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ ವಿರುದ್ಧ ವಾಗ್ದಾಳಿ ನಡೆಸಿದ ತ್ಸೆರಿಂಗ್ ನಮ್‍ಗ್ಯಾಲ್, ಎರಡು ಕುಟುಂಬದ ಸದಸ್ಯರು ಇನ್ನೂ ಮಾದಕ ವ್ಯಸನಿಗಳಾಗಿದ್ದಾರೆ. ಅಲ್ಲದೆ, ಕಾಶ್ಮೀರ ತಮ್ಮ ತಂದೆಯ ಆಸ್ತಿ ಎಂದು ಭಾವಿಸಿದ್ದಾರೆ ಎಂದು ಕಿಡಿಕಾರಿದರು.

    ಇಲ್ಲಿರುವ ಮುಫ್ತಿ ಮತ್ತು ಅಬ್ದುಲ್ಲಾ ಈ ಎರಡು ಕುಟುಂಬಗಳ ಸದಸ್ಯರು ಮಾತ್ರ ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿಗಳಾಗಿದ್ದಾರೆ. ನಿನ್ನೆ ಕೇಂದ್ರ ಸರ್ಕಾರ 370ನೇ ವಿಧಿ ರದ್ದುಗೊಳಿಸಿದ ನಂತರ ಈಗ ಸಮಾನತೆಯ ಮಾತುಗಳನ್ನಾಡುತ್ತಿದ್ದಾರೆ. ಈ ಹಿಂದೆ ಜಮ್ಮು ಮತ್ತು ಕಾಶ್ಮೀರದ ಅಭಿವೃದ್ಧಿಗೆ ಹಣ ಸಂಗ್ರಹಿಸಿದಾಗ, ಲಡಾಖ್ ಅಭಿವೃದ್ಧಿಗೆಂದು ಮೀಸಲಿರಿಸಿದ್ದ ಹಣವನ್ನು ಕಾಶ್ಮೀರಕ್ಕೆ ವರ್ಗಾಯಿಸಿಕೊಂಡಿರಿ. ಇದು ನಿಮ್ಮ ಸಮಾನತೆಯೇ ಎಂದು ಖಾರವಾಗಿ ಪ್ರಶ್ನಿಸಿದರು.

    ಲೋಕಸಭಾ ಚುನಾವಣೆಯಲ್ಲಿ ಲೇಹ್, ಲಡಾಖ್ ಮತ್ತು ಕಾರ್ಗಿಲ್ ಜನರು ಕೇಂದ್ರಾಡಳಿತ ಪ್ರದೇಶಕ್ಕಾಗಿಯೇ ಮತ ಹಾಕಿದ್ದರು. ಅಂದಿನ ಗೃಹ ಸಚಿವ ರಾಜನಾಥ್ ಸಿಂಗ್ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದ ವೇಳೆ ಹೆಚ್ಚಿನ ಜನರು ಲಡಾಕ್‍ನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಬೇಕೆಂದು ಅಭಿಪ್ರಾಯಪಟ್ಟಿದ್ದರು ಎಂದು ತ್ಸೆರಿಂಗ್ ನಮ್‍ಗ್ಯಾಲ್ ಇದೇ ವೇಳೆ ತಿಳಿಸಿದರು.

    ನಿನ್ನೆ ರಾಜ್ಯಸಭೆಯ ಕಾಂಗ್ರೆಸ್ ಮುಖಂಡರು ಲಡಾಕ್‍ಗೆ ಏನಾಗಬಹುದು ಎಂದು ಬೊಬ್ಬೆ ಹೊಡೆಯುತ್ತಿದ್ದರು. 2008ರಲ್ಲಿ ಕಾಂಗ್ರೆಸ್ ಸರ್ಕಾರ ಜಮ್ಮು ಮತ್ತು ಕಾಶ್ಮೀರದಲ್ಲಿ 8 ಹೊಸ ಜಿಲ್ಲೆಗಳನ್ನು ರಚಿಸಿತು. ಆಗ ನಾಲ್ಕು ಜಮ್ಮುವಿಗೆ ಉಳಿದ ನಾಲ್ಕು ಕಾಶ್ಮೀರಕ್ಕೆ ನೀಡಿ ಎಂದು ಜಮ್ಮುವಿನ ಜನರು ಹೋರಾಡಿದರು. ಆದರೆ, ಲಡಾಖ್‍ಗೆ ಏನೂ ಸಿಗಲಿಲ್ಲ. ಇದು ನಿಮ್ಮ ಸಮಾನತೆಯೇ ಎಂದು ನಮ್‍ಗ್ಯಾಲ್ ಪ್ರಶ್ನಿಸಿದರು.

    ನಿಮ್ಮಂತೆ ಜಮ್ಮು ಮತ್ತು ಕಾಶ್ಮೀರದ ಕುರಿತು ಪುಸ್ತಕದಲ್ಲಿ ಓದಿ ನಾನು ಇಲ್ಲಿಗೆ ಬಂದಿಲ್ಲ. ಲಡಾಖ್ ನೆಲದ ವಾಸ್ತವತೆಯನ್ನು ಅರ್ಥ ಮಾಡಿಕೊಂಡು ಇಲ್ಲಿಗೆ ಬಂದಿದ್ದೇನೆ. ನೀವು ಕಾಶ್ಮೀರಿ ಮತ್ತು ಡೋಗ್ರಿಗಳನ್ನು ನಿಗದಿತ ಭಾಷೆ ಎಂದು ಗುರುತಿಸುತ್ತೀರಿ. ಆದರೆ, ಲಡಾಖಿ ಜನರ ಭಾಷೆಯ ಗತಿ ಏನು ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

    ಲೋಕಸಭೆಯಲ್ಲಿ ತ್ಸೆರಿಂಗ್ ನಮ್‍ಗ್ಯಾಲ್ ಒಂದೊಂದೆ ಅಂಶವನ್ನು ಪ್ರಸ್ತಾಪ ಮಾಡುತ್ತಿದ್ದಂತೆ ಅಮಿತ್ ಶಾ ಸೇರಿದಂತೆ ಬಿಜೆಪಿ ಸಂಸದರು ಮೇಜು ಕುಟ್ಟಿ ಸ್ವಾಗತಿಸುತ್ತಿದ್ದರು. ಅಮಿತ್ ಶಾ ಟ್ವಿಟ್ಟರ್ ನಲ್ಲಿ ವಿಡಿಯೋವನ್ನು ಹಾಕಿ ಮೆಚ್ಚುಗೆ ಸೂಚಿಸಿದ್ದಾರೆ.

    ನಮ್‍ಗ್ಯಾಲ್ ಅವರು ಲೋಕಸಭೆಯಲ್ಲಿ ಮಾಡಿದ ಭಾಷಣದ ವಿಡಿಯೋವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಭಾಷಣದ ಕೊನೆಯಲ್ಲಿ ಲೋಕಸಭೆಯ ಸಭಾಧ್ಯಕ್ಷರಾದ ಓಂ ಬಿರ್ಲಾ ಸಹ ನಮ್‍ಗ್ಯಾಲ್ ಅವರ ಭಾಷಣ ಮತ್ತು ಉತ್ಸಾಹವನ್ನು ಶ್ಲಾಘಿಸಿದರು. ಸದನವು ನಮ್‍ಗ್ಯಾಲ್ ಅವರಂತಹ ಯುವ ಸದಸ್ಯರನ್ನು ಪ್ರೋತ್ಸಾಹಿಸಬೇಕು ಮೆಚ್ಚುಗೆ ವ್ಯಕ್ತಪಡಿಸಿದರು.

  • ಈಗ ಚುನಾವಣೆ ನಡೆದರೆ ಎನ್‍ಡಿಎ ಮತ್ತೊಮ್ಮೆ ಅಧಿಕಾರಕ್ಕೆ!

    ಈಗ ಚುನಾವಣೆ ನಡೆದರೆ ಎನ್‍ಡಿಎ ಮತ್ತೊಮ್ಮೆ ಅಧಿಕಾರಕ್ಕೆ!

    ನವದೆಹಲಿ: ದೇಶದಲ್ಲಿ ಈಗ ಚುನಾವಣೆ ನಡೆದರೆ ಮೋದಿ ನೇತೃತ್ವದ ಎನ್‍ಡಿಎ ಅಧಿಕಾರ ಉಳಿಸಿಕೊಳ್ಳಲಿದೆ ಎಂದು ಲೋಕನೀತಿ- ಸಿಎಸ್‍ಡಿಎಸ್- ಎಬಿಪಿ ನ್ಯೂಸ್ ನಡೆಸಿದ “ಮೂಡ್ ಆಫ್ ದ ನೇಶನ್” ಮತ್ತು ಟೈಮ್ಸ್ ನೌ ಸಮೀಕ್ಷೆ ಹೇಳಿದೆ.

    ಎಬಿಪಿ ನ್ಯೂಸ್ ಸಮೀಕ್ಷೆ
    2018ರ ಜನವರಿಯಿಂದ ದೇಶದ 19 ರಾಜ್ಯಗಳ 15,859 ಜನರನ್ನು ಸಂಪರ್ಕಿಸಿ ಈ ಸಮೀಕ್ಷೆ ನಡೆಸಲಾಗಿದೆ. ಎನ್‍ಡಿಎಗೆ ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದರೂ 2014ಕ್ಕೆ ಹೋಲಿಸಿದರೆ ಕಡಿಮೆ ಸ್ಥಾನಗಳನ್ನು ಗೆಲ್ಲಲಿದೆ ಎಂದು ಹೇಳಿದೆ. ಒಟ್ಟು 543 ಸ್ಥಾನಗಳ ಪೈಕಿ ಬಿಜೆಪಿ ನೇತೃತ್ವದ ಎನ್‍ಡಿಎ 274, ಕಾಂಗ್ರೆಸ್ ನೇತೃತ್ವದ ಯುಪಿಎ 164, ಇತರರು 105 ಸ್ಥಾನಗಳನ್ನು ಗೆಲ್ಲಲಿದೆ ಎಂದು ತಿಳಿಸಿದೆ. 2014ರ ಚುನಾವಣೆಯಲ್ಲಿ ಬಿಜೆಪಿ 282 ಸ್ಥಾನಗಳನ್ನು ಗೆದ್ದರೆ ಎನ್‍ಡಿಎ ಒಟ್ಟು 336 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಸಮೀಕ್ಷೆಯಲ್ಲಿ 34% ಜನ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ಸೂಕ್ತ ಎಂದಿದ್ದರೆ 24% ಮಂದಿ ರಾಹುಲ್ ಪರ ಒಲವು ವ್ಯಕ್ತಪಡಿಸಿದ್ದಾರೆ.

    ಜಿಎಸ್‍ಟಿ ಅಡ್ಡ ಪರಿಣಾಮ, ನಿರುದ್ಯೋಗ, ದಲಿತರ ಮೇಲಿನ ಹಲ್ಲೆ ಪ್ರಕರಣಗಳಿಂದಾಗಿ ಎನ್‍ಡಿಎ ಸ್ಥಾನ ಸ್ವಲ್ಪ ಕಡಿಮೆಯಾಗಲಿದೆ. ಮಧ್ಯ ಪ್ರದೇಶದಲ್ಲಿ ಕಾಂಗ್ರೆಸ್‍ಗೆ 49% ಮತ ಬಿದ್ದರೆ ಬಿಜೆಪಿಗೆ 34% ಮತ ಬೀಳಲಿದೆ. ರಾಜಸ್ಥಾನದಲ್ಲಿ ಕಾಂಗ್ರೆಸ್ 44% ಮತ ಪಡೆದರೆ ಬಿಜೆಪಿಗೆ 39% ಮತ ಬೀಳಲಿದೆ. ಈ ವರ್ಷದ ಕೊನೆಯಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಈ ಪ್ರಮಾಣದ ಮತ ಬಿದ್ದರೆ ಬಿದ್ದರೆ ಬಿಜೆಪಿ ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಅಧಿಕಾರವನ್ನು ಕಳೆದುಕೊಳ್ಳಲಿದೆ. ಅಷ್ಟೇ ಅಲ್ಲದೇ ದಕ್ಷಿಣ ಭಾರತದಲ್ಲೂ ಎನ್‍ಡಿಎಗೆ ಹೊಡೆತ ಬೀಳಲಿದೆ ಎಂದು ಸಮೀಕ್ಷೆ ಹೇಳಿದೆ.

    ಟೈಮ್ಸ್ ನೌ ಸಮೀಕ್ಷೆ
    4 ವರ್ಷಗಳ ಮೋದಿ ನೇತೃತ್ವದ ಸರಕಾರದ ಸಾಧನೆ ಬಗ್ಗೆ ಮೆ 9ರಿಂದ 22ರ ವರೆಗೆ ಎಲ್ಲ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದ ಒಟ್ಟು 13,575 ಮಂದಿಯನ್ನು ಸಂದರ್ಶಿಸಿ ಸಮೀಕ್ಷೆ ನಡೆಸಿದೆ. ಇದರಲ್ಲಿ 49% ಮಂದಿ ಉತ್ತಮ ಸರ್ಕಾರ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ಮುಂದಿನ ಚುನಾವಣೆಯಲ್ಲಿ ಮೋದಿಯೇ ಮುಂದುವರಿಯಬೇಕು ಎಂದು 53% ಮಂದಿ ಹೇಳಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ರಾಹುಲ್‍ಗೆ 23%ರಷ್ಟು ಬೆಂಬಲ ಸಿಕ್ಕಿದೆ. 2014ರಲ್ಲಿ ಬಿಜೆಪಿ 282 ಸ್ಥಾನ ಗೆದ್ದರೆ 2018ರಲ್ಲಿ 318 ಸ್ಥಾನಗಳನ್ನು ಗೆಲ್ಲಲಿದೆ ಎಂದು ತಿಳಿಸಿದೆ. 55% ಮಂದಿ ಎನ್‍ಡಿಎ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕು ಎಂದು ತಿಳಿಸಿದರೆ 45% ಜನ ಅಧಿಕಾರಕ್ಕೆ ಬರುವುದು ಬೇಡ ಎಂದಿದ್ದಾರೆ.

     

  • ಕನ್ನಡಿಗರ ಸಂಪತ್ತನ್ನು ಲೂಟಿ ಹೊಡೆದವರನ್ನ ಕ್ಷಮಿಸಿದ್ದೀರಾ: ಬಿಎಸ್‍ವೈಗೆ ಸಿಎಂ ಪ್ರಶ್ನೆ

    ಕನ್ನಡಿಗರ ಸಂಪತ್ತನ್ನು ಲೂಟಿ ಹೊಡೆದವರನ್ನ ಕ್ಷಮಿಸಿದ್ದೀರಾ: ಬಿಎಸ್‍ವೈಗೆ ಸಿಎಂ ಪ್ರಶ್ನೆ

    ಬೆಂಗಳೂರು: ಕರ್ನಾಟಕ ರಾಜ್ಯದ ಹಿತಕ್ಕಾಗಿ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರನ್ನು ಕ್ಷಮಿಸಿದ್ದೇನೆ ಎಂದು ಮಾಜಿ ಸಿಎಂ ಸಿಎಂ ಬಿ.ಎಸ್.ಯಡಿಯೂರಪ್ಪ ಸಂದರ್ಶನದಲ್ಲಿ ಹೇಳಿದ್ದನ್ನು ಸಿಎ ಸಿದ್ದರಾಮಯ್ಯ ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡಿದ್ದಾರೆ.

    ಇಂಗ್ಲಿಷ್ ಪತ್ರಿಕೆಗೆ ನೀಡಿದ್ದ ಸಂದರ್ಶದನಲ್ಲಿ ಯಡಿಯೂರಪ್ಪ, ನಾನು ಸಿಎಂ ಆಗಿದ್ದಾಗ ರೆಡ್ಡಿ ಸಂಕಷ್ಟದಲ್ಲಿದ್ದರು. ಈಗ ರಾಜ್ಯದ ಹಿತಕ್ಕಾಗಿ ಎಲ್ಲವನ್ನು ಮರೆತು ಕ್ಷಮಿಸಿದ್ದೇವೆ. ರೆಡ್ಡಿ ಒಬ್ಬರೇ ಅಲ್ಲ, ಬಹಳ ಜನರು ಸಂಕಷ್ಟದಲ್ಲಿದ್ದರು. ಎಲ್ಲರನ್ನು ಕ್ಷಮಿಸಿದ್ದೇವೆ. ಇನ್ನೂ ಸಂಸದ ಶ್ರೀ ರಾಮುಲು ಒಬ್ಬ ಎಸ್‍ಟಿ ಸಮುದಾಯದ ಪ್ರಬಲ ನಾಯಕರಾಗಿ ಕೆಲಸ ಮಾಡುತ್ತಿದ್ದಾರೆ. ಶ್ರೀರಾಮುಲುರನ್ನು ಡಿಸಿಎಂ ಮಾಡೋ ಸುದ್ದಿ ಕೇವಲ ಊಹಾಪೋಹ ಎಂದು ತಿಳಿಸಿದ್ದರು.

    ಬಿಎಸ್‍ವೈ ನೀಡಿದ ಸಂದರ್ಶನವನ್ನೇ ಟಾರ್ಗೆಟ್ ಮಾಡಿಕೊಂಡ ಸಿಎಂ ಸಿದ್ದರಾಮಯ್ಯ, ಯಾವ ಕಾರಣಕ್ಕೆ ರೆಡ್ಡಿಯನ್ನ ಕ್ಷಮಿಸಿದ್ದೀರಿ? ಕನ್ನಡಿಗರ ಸಂಪತ್ತನ್ನು ಲೂಟಿ ಹೊಡೆದವರನ್ನ ಕ್ಷಮಿಸಿದ್ದೀರಾ? ಪ್ರಧಾನಿ ನರೇಂದ್ರ ಮೋದಿ ಕೂಡ ಸಿಬಿಐಗೆ ನಿರ್ದೇಶನ ನೀಡಿ ರೆಡ್ಡಿಯನ್ನ ಕ್ಷಮಿಸಿದ್ದಾರಾ ಎಂದು ಪ್ರಶ್ನೆಯನ್ನು ಟ್ವಿಟ್ಟರ್ ನಲ್ಲಿ ಕೇಳಿ ತರಾಟೆಗೆ ತೆಗೆದುಕೊಂಡಿದ್ದಾರೆ.