Tag: ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ

  • ಪಾದಯಾತ್ರೆ ಮೂಲಕ ಕಾಂಗ್ರೆಸ್ ಪಕ್ಷದಿಂದ ಭಂಡ ರಾಜಕಾರಣ: ಜಗದೀಶ್ ಶೆಟ್ಟರ್

    ಪಾದಯಾತ್ರೆ ಮೂಲಕ ಕಾಂಗ್ರೆಸ್ ಪಕ್ಷದಿಂದ ಭಂಡ ರಾಜಕಾರಣ: ಜಗದೀಶ್ ಶೆಟ್ಟರ್

    ಧಾರವಾಡ: ಮೇಕೆದಾಟು ಪಾದಯಾತ್ರೆ ಮೂಲಕ ಕಾಂಗ್ರೆಸ್ ಪಕ್ಷದಿಂದ ಭಂಡ ರಾಜಕಾರಣ ಮಾಡುತ್ತಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಪ್ರಮಾಣದ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.

    ಕಾಂಗ್ರೆಸ್ ಮೇಕೆದಾಟು ಯೋಜನೆ ಪಾದಯಾತ್ರೆ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಾದಯಾತ್ರೆ ಮೂಲಕ ಕಾಂಗ್ರೆಸ್ ಭಂಡ ರಾಜಕಾರಣ ಮಾಡುತ್ತಿದೆ. ಮುಂಬರುವ ವಿಧಾನಸಭೆ ಚುನಾವಣೆ ದೃಷ್ಟಿ ಇಟ್ಟುಕೊಂಡು ಈ ಪಾದಯಾತ್ರೆ ಮಾಡುತ್ತಿದ್ದಾರೆ. ಅಂತಾರಾಜ್ಯ ಜಲ ವಿವಾದಗಳನ್ನು ಸೂಕ್ಷ್ಮವಾಗಿ ಬಗೆಹರಿಸಬೇಕಾಗುತ್ತದೆ. ಹೋರಾಟದ ಮೂಲಕ ಇದನ್ನು ಪರಿಹರಿಸೋಕೆ ಆಗಲ್ಲ. ವಿಧಾನಸಭೆ ಚುನಾವಣೆ ಇನ್ನೂ ಒಂದೂವರೆ ವರ್ಷವಿದ್ದು, ಅದನ್ನು ದೃಷ್ಟಿಯಲ್ಲಿಟ್ಟುಕೊಂಡು ಕಾಂಗ್ರೆಸ್ ಈಗಿನಿಂದಲೇ ರಾಜಕಾರಣ ಆರಂಭಿಸಿದೆ ಎಂದರು.

    ನೀರಾವರಿ ಮತ್ತು ಕುಡಿಯುವ ನೀರಿನ ಯೋಜನೆಯನ್ನು ಚುನಾವಣಾ ಅಸ್ತ್ರವಾಗಿ ಬಳಸುತ್ತಿದೆ. ಪಾದಯಾತ್ರೆ ಮಾಡುವ ಮೂಲಕ ಪರಿಸ್ಥಿತಿಯನ್ನು ಮತ್ತಷ್ಟು ಜಟಿಲಗೊಳ್ಳುವಂತೆ ಕಾಂಗ್ರೆಸ್ ಮಾಡುತ್ತಿದೆ. ನೀರಾವರಿ ಇರಲಿ ಯಾವುದೇ ಯೋಜನೆ ಇರಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಅದರ ಬಗ್ಗೆ ಚಕಾರ ಎತ್ತಲ್ಲ. ಬಿಜೆಪಿ ಅಧಿಕಾರಕ್ಕೆ ಬಂದಾಗಲೇ ಇದಕ್ಕೊಂದು ಪರಿಹಾರ ಕೊಡುವ ಪ್ರಯತ್ನ ನಡೆದಿದೆ. ಇಷ್ಟು ವರ್ಷ ಸುಮ್ಮನೆ ಕುಳಿತು ಈಗ ಏಕೆ? ಕಾಂಗ್ರೆಸ್ ನವರು ಹೋರಾಟ ಮಾಡುತ್ತಿದ್ದಾರೆ. ವಿಪಕ್ಷ ನಾಯಕರಾದ ಸಿದ್ದರಾಮಯ್ಯನವರು ಸಿಎಂ ಆಗಿದ್ದಾಗಲೇ ಮೇಕೆದಾಟು ಯೋಜನೆ ಆರಂಭಿಸ ಬಹುದಿತ್ತಲ್ಲವೇ. ಅಧಿವೇಶನದ ಸಂದರ್ಭದಲ್ಲಿ ಮೇಕೆದಾಟು ಯೋಜನೆ ಬಗ್ಗೆ ಕಾಂಗ್ರೆಸ್‍ನವರು ಗಂಭೀರ ಚರ್ಚೆ ಮಾಡುವ ಪ್ರಯತ್ನ ಮಾಡಲಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಬಿಜೆಪಿ, ಕಾಂಗ್ರೆಸ್, ಹೆಣ್ಣು-ಗಂಡೆಂಬ ಭೇದ ಕೊರೊನಾಗೆ ಇಲ್ಲ: ಆನಂದ್ ಸಿಂಗ್

    ಚುನಾವಣೆ ಮತಬ್ಯಾಂಕ್ ರಾಜಕಾರಣಕ್ಕಾಗಿ ಈ ಪಾದಯಾತ್ರೆ ಮಾಡುತ್ತಿದ್ದಾರೆ. ಕೋವಿಡ್ ನಿಯಮಗಳಿದ್ದರೂ ಅದನ್ನು ಉಲ್ಲಂಘಿಸಿ ಹೋಗುತ್ತಿದ್ದಾರೆ ಎಂದರೆ ನಾಚಿಕೆಗೇಡಿನ ವಿಷಯ ಇದು, ಇಡೀ ದೇಶದಲ್ಲಿ ಕೋವಿಡ್ ಮೂರನೇ ಅಲೆ ಏಳುತ್ತಿದೆ. ಕಫ್ರ್ಯೂ ವಿಧಿಸಿದ ಸಂದರ್ಭದಲ್ಲಿಯೂ ಇವರು ಪಾದಯಾತ್ರೆ ಮಾಡುತ್ತಿದ್ದಾರೆ. ಇವರಿಗೆ ರಾಜಕೀಯ ಹಿತಾಸಕ್ತಿಯೇ ಮುಖ್ಯ ಹೊರತು ರಾಜ್ಯದ ಹಿತಾಸಕ್ತಿ ಅಲ್ಲ ಎಂದು ಸಿಡಿದರು.ಇದನ್ನೂ ಓದಿ: ವಾಮಾಚಾರ ನಡೆಸಿ ಮನೆಯ ಬೆಡ್ ರೂಂನ ಮಣ್ಣಿನಡಿಯಲ್ಲಿ ನಿಧಿಗಾಗಿ ಶೋಧ – ಇಬ್ಬರ ಬಂಧ

    ಕೈ ಪಕ್ಷವು ಇಲ್ಲಿಯವರೆಗೂ ಬರೀ ರಾಜಕಾರಣ, ದೇಶ ಮತ್ತು ರಾಜ್ಯವನ್ನು ಲೂಟಿ ಮಾಡಿಕೊಂಡು ಬಂದಿದ್ದಾರೆ. ಮೇಕೆದಾಟು ಪಾದಯಾತ್ರೆ ಕೇವಲ ರಾಜಕೀಯ ಪ್ರಹಸನ ಕಾನೂನು ಉಲ್ಲಂಘಿಸಿದರೆ ನಮಗೆ ಹೆಚ್ಚು ಮತ ಸಿಗುತ್ತೆ ಅಂತ ಕಾಂಗ್ರೆಸ್‍ನವರು ಅಂದುಕೊಂಡಿದ್ದಾರೆ. ಆದರೆ ಇದಕ್ಕೆ ಜನತೆಯೇ ತಕ್ಕ ಪಾಠ ಕಲಿಸುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

  • ಬಿಜೆಪಿಯವರಿಗೆ ಮೆದುಳಿಗೆ ನಾಲಿಗೆಗೆ ಕನೆಕ್ಷನ್ ಇಲ್ಲ: ಶಿವರಾಜ್ ತಂಗಡಗಿ

    ಬಿಜೆಪಿಯವರಿಗೆ ಮೆದುಳಿಗೆ ನಾಲಿಗೆಗೆ ಕನೆಕ್ಷನ್ ಇಲ್ಲ: ಶಿವರಾಜ್ ತಂಗಡಗಿ

    ಕೊಪ್ಪಳ: ಬಿಜೆಪಿಯವರಿಗೆ ಮೆದುಳಿಗೆ ನಾಲಿಗೆಗೆ ಕನೆಕ್ಷನ್ ಇಲ್ಲ ಎಂದು ಕಾಂಗ್ರೆಸ್ ಮಾಜಿ ಸಚಿವ ಶಿವರಾಜ್ ತಂಗಡಗಿ ಕಿಡಿಕಾರಿದ್ದಾರೆ.

    ಮಹಿಳಾ ಅಧಿಕಾರಿ ಮತ್ತು ಕನಕಗಿರಿ ಶಾಸಕರ ಆಡಿಯೋ ವಿಚಾರವಾಗಿ ಮಾಧ್ಯಗಳೊಂದಿಗೆ ಮಾತನಾಡಿದ ಅವರು, ನಾನು ಈ ಪ್ರಕರಣದ ಬಗ್ಗೆ ಏನೂ ಮಾತನಾಡುವುದಿಲ್ಲ. ಯಾರಿಗೆ ಅನ್ಯಾಯವಾಗಿದೆ ಅವರು ನಮ್ಮ ಸಹಾಯ ಕೇಳಿದರೆ ಅದರ ಬಗ್ಗೆ ನಾನು ಮಾತನಾಡುತ್ತೇನೆ. ಶಾಸಕರ ಬಗ್ಗೆ ನಾನು ಮಾತನಾಡುವ ಅವಶ್ಯಕತೆ ಇಲ್ಲ. ಅದು ಹಿಟ್ ವಿಕೆಟ್, ತನ್ನಷ್ಟಕ್ಕೆ ತಾನೇ ಔಟ್ ಆಗುವ ಕ್ಯಾಂಡಿಡೇಟ್. ಅನ್ಯಾಯವಾದವರು ನಮ್ಮನ್ನು ಸಂಪರ್ಕ ಮಾಡಿದರೆ, ಕಾಂಗ್ರೆಸ್ ಪಕ್ಷ, ವೈಯ್ಯಕ್ತಿಕವಾಗಿ ನಿಂತು ನ್ಯಾಯ ಕೊಡಿಸುವ ಕೆಲಸ ಮಾಡುತ್ತೇವೆ ಎಂದರು. ಇದನ್ನೂ ಓದಿ: ದಿನದಲ್ಲಿ 50 ಸಾವಿರಕ್ಕೂ ಹೆಚ್ಚು ಕೋವಿಡ್-19 ಕೇಸ್!

    ಬಿಜೆಪಿಯವರಿಗೆ ಮೆದುಳಿಗೆ ನಾಲಿಗೆಗೆ ಕನೆಕ್ಷನ್ ಇಲ್ಲ. ಈ ವಿಷಯದ ಬಗ್ಗೆ ರಾಜ್ಯಾಧ್ಯಕ್ಷರು ಸ್ಪಷ್ಟನೆ ಕೇಳಬೇಕಿತ್ತು. ಈ ಪ್ರಕರಣ ಕನಕಗಿರಿ ಕ್ಷೇತ್ರಕ್ಕೆ ಒಂದು ಕಪ್ಪುಚುಕ್ಕೆ ಇದ್ದಂತೆ. ಈ ಪ್ರಕರಣದ ಬಗ್ಗೆ ಬಿಜೆಪಿ ಶಾಸಕ ಬಸವರಾಜ ದಡೇಸೂಗುರ್ ಅವರನ್ನು ಕೇಳಬೇಕು. ಪೊಲೀಸ್ ಸ್ಟೇಶನ್‍ಗಳು ಬಿಜೆಪಿಯ ಸೆಟ್ಲ್‍ಮೆಂಟ್ ಸ್ಟೇಶನ್‍ಗಳಾಗಿವೆ ಎಂದು ಟಾಂಗ್ ನೀಡಿದರು.

    ಅಯೋಧ್ಯೆ ಮಾದರಿ ಅಂಜನಾದ್ರಿ ಬೆಟ್ಟದ ಅಭಿವೃದ್ಧಿ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಅಂಜನಾದ್ರಿ ಅಂತರಾಷ್ಟ್ರೀಯ ಮಟ್ಟದಲ್ಲಿ ಅಭಿವೃದ್ಧಿ ಮಾಡಲಿ. ನಾವು ಅದನ್ನು ಸ್ವಾಗತ ಮಾಡುತ್ತೇವೆ. ಅದರ ಹೆಸರಿನಲ್ಲಿ ರಾಜಕಾರಣ ಮಾಡಲು ಹೋದರೆ ನಮ್ಮಲ್ಲಿ ನಡೆಯುವದಿಲ್ಲ. ಕರ್ನಾಟಕದ ಜನರು ಜಾಣರಿದ್ದಾರೆ. ಬಿಜೆಪಿಗೆ ಸಹಾಯ ಮಾಡುವರನ್ನು ಕೊಲ್ಲುವುದೇ ಬಿಜೆಪಿ ಅವರ ಕೆಲಸ ಎಂದರು. ಇದನ್ನೂ ಓದಿ: ಭಾರೀ ಭದ್ರತಾ ಲೋಪ – ಪಂಜಾಬ್ ಫ್ಲೈ ಓವರ್‌ನಲ್ಲಿ 20 ನಿಮಿಷ ಸಿಲುಕಿದ ಮೋದಿ

    ಮೇಕೆದಾಟು ಯೋಜನೆ ಕಾಂಗ್ರೆಸ್ ಪಾದಯಾತ್ರೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಈ ಪಾದಯಾತ್ರೆಯಿಂದ ಬಿಜೆಪಿ ಯವರಿಗೆ ಒಂದು ನಡುಕ ಆರಂಭವಾಗಿದೆ. ರಾಜ್ಯದ ಜನತೆ ಕಾಂಗ್ರೆಸ್ ಪಕ್ಷದೆಡೆಗೆ ವಾಲಿದ್ದಾರೆ ಎನ್ನುವ ನಡುಕ ಆರಂಭವಾಗಿದೆ. ಕೊರೊನಾ ಬಂದಾಗ ಚುನಾವಣೆ, ಜನಾಶೀರ್ವಾದ ಯಾತ್ರೆ ಮಾಡುತ್ತಾರೆ. ಬಿಜೆಪಿ ಅವರು ಯಾತ್ರೆ ಮಾಡಿದರೆ ಕೊರೊನಾ ಬರೋಲ್ಲ. ಕಾಂಗ್ರೆಸ್‍ನವರು ಪಾದಯಾತ್ರೆ ಮಾಡಿದರೆ ಕೊರೊನಾ ಬರುತ್ತದೆ. ಕೊವೀಡ್ ನಿಯಮಗಳನ್ನು ಪಾಲನೆ ಮಾಡಿ ಪಾದಯಾತ್ರೆ ಮಾಡುತ್ತೇವೆ. ಯಾರು ಏನೇ ಹೇಳಿದರೂ ಪಾದಯಾತ್ರೆ ನಿಲ್ಲುವುದಿಲ್ಲ. ನಾನೂ ಸಹ ಪಾದಯಾತ್ರೆಯಲ್ಲಿ ಪಾಲ್ಗೋಳ್ಳುತ್ತೇನೆ ಎಂದು ನುಡಿದರು.