ಒಂದಿಲ್ಲೊಂದು ಕಾರಣಕ್ಕಾಗಿ ಸಮಂತಾ ಸದಾ ಸುದ್ದಿಯಲ್ಲಿರುತ್ತಾರೆ. ತಾವು ಮಾಡಿದ ತಪ್ಪಿಗೆ ಸುದ್ದಿ ಆಗೋದು ಸಹಜ. ಮಾಡದೇ ಇರೋ ತಪ್ಪಿಗೂ ಬಲಿಯಾಗುತ್ತಾರೆ. ಅಂಥದ್ದೇ ಒಂದು ಬಲಿಪಶು ಸ್ಟೋರಿ ಬೆತ್ತಲೇ ಫೋಟೋದ್ದು. ಸಮಂತಾ (Samantha) ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಬೆತ್ತಲೆ ಫೋಟೋ ಹಾಕಿದ್ದಾರೆ ಎನ್ನುವ ವಿಚಾರ ನಿನ್ನೆಯಿಂದ ಭರ್ಜರಿ ಸೇಲ್ ಆಗಿತ್ತು.
ಡಿವೋರ್ಸ್ ನಂತರ ಸಮಂತಾ ಯಾಕೆ ಹೀಗೆ ಆದರು ಎನ್ನುವ ಪ್ರಶ್ನೆಯನ್ನೂ ಹಲವರು ಮಾಡಿದ್ದರು. ಬೆತ್ತಲೇ ಫೋಟೋ ಹಾಕಿ, ಯಾಕೆ ಡಿಲಿಟ್ ಮಾಡಿದರು ಎನ್ನುವ ಕುತೂಹಲ ಕೂಡ ಹಲವರದ್ದಾಗಿತ್ತು. ಅದು ಅವರೇ ಮಾಡಿದ್ದಾರಾ? ಅಥವಾ ಬೇರೆ ಯಾರಾದರೂ ಸುಳ್ಳು ಸುದ್ದಿ ಹಬ್ಬಿಸಿದ್ದಾರೆ ಎನ್ನುವ ಚರ್ಚೆ ಕೂಡ ಮಾಡಲಾಯಿತು.
ಈಗ ಸಮಂತಾ ಈ ಕುರಿತಂತೆ ಪರೋಕ್ಷವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ನಮ್ಮದಲ್ಲದ ತಪ್ಪಿಗೆ ಅಥವಾ ಪ್ರತಿಕ್ರಿಯೆ ನೀಡಲು ಯೋಗ್ಯವಲ್ಲದಕ್ಕೆ ಪ್ರತಿಕ್ರಿಯೆ ನೀಡಬಾರದು ಎಂದು ಬರೆದುಕೊಂಡಿದ್ದಾರೆ. ಅಂದರೆ, ಅದು ತಮ್ಮಿಂದ ಆಗಿರುವ ತಪ್ಪಲ್ಲ. ಹಾಗಾಗಿ ಪ್ರತಿಕ್ರಿಯೆ ಅನಗತ್ಯ ಎಂದಿದ್ದಾರೆ.
ಬಾಲಿವುಡ್ ನಟಿಯರಾದ ಕಂಗನಾ ರಣಾವತ್ (Kangana Ranaut) ಮತ್ತು ಸ್ವರಾ ಭಾಸ್ಕರ್ ಒಟ್ಟೊಟ್ಟಿಗೆ ದುಡಿದವರು. ಒಂದೇ ಸಿನಿಮಾದಲ್ಲಿ ನಟಿಸಿದವರು. ಒಬ್ಬರೊನ್ನೊಬ್ಬರು ಆತುಕೊಂಡು ಕೂತವರು. ಆದರೆ, ನಂತರದ ದಿನಗಳಲ್ಲಿ ಹಾವು ಮುಂಗಸಿಯಂತೆ ಕಿತ್ತಾಡಿದವರು. ಆ ಕಿತ್ತಾಟ ಈಗಲೂ ಮುಂದುವರೆದಿದೆ. ಕಂಗನಾ ಈಗ ಲೋಕಸಭಾ ಕಣದಲ್ಲಿ ಇದ್ದಾರೆ. ಅದಕ್ಕೂ ಮುನ್ನ ಆಡಳಿತ ಪಕ್ಷದ ಪರವಾಗಿ ಸಾಕಷ್ಟು ಮಾತನಾಡಿದ್ದಾರೆ. ಈ ಕುರಿತಂತೆ ಸ್ವರಾ ಅಪಸ್ವರ ಎತ್ತಿದ್ದಾರೆ.
ಸಂದರ್ಶನವೊಂದರಲ್ಲಿ ಅವರಿಗೂ ಮತ್ತು ಕಂಗನಾಗೂ ಇರುವ ವ್ಯತ್ಯಾಸವನ್ನು ಹೇಳಿಕೊಂಡಿದ್ದು, ಕಂಗನಾ ಎಂದಿಗೂ ಆಡಳಿತ ಸರಕಾರದ ವಿರೋಧವಾಗಿ ಮಾತನಾಡಲ್ಲ. ಅವರು ಯಾವಾಗಲೂ ಪರವಾಗಿಯೇ ಇರುತ್ತಾರೆ. ನಾನು ಹಾಗಲ್ಲ, ಜನರ ಪರವಾಗಿ ನಿಂತುಕೊಳ್ಳುತ್ತೇನೆ ಎಂದು ಹೇಳಿಕೊಂಡಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಸ್ವರಾ ರೆಬೆಲ್ ನಟಿಯಾಗಿ ಮಾರ್ಪಾಡಾಗಿದ್ದಾರೆ. ಅಪರಾಧಿ ಮುಸ್ಲಿಂ ಆಗಿದ್ದರೆ ಮಾತ್ರ ಮಹಿಳಾ ರಕ್ಷಣೆ ಬಗ್ಗೆ ಜನರು ಮಾತನಾಡುತ್ತಾರೆ ಎಂದು ಹೇಳುವ ಮೂಲಕ ಪ್ರಜ್ವಲ್ ರೇವಣ್ಣ ಪ್ರಕರಣದ ವಿಶ್ಲೇಷಣೆ ಮಾಡಿದ್ದಾರೆ ಸ್ವರಾ ಭಾಸ್ಕರ್ (Swara Bhaskar). ತಪ್ಪು ಮಾಡಿರುವ ವ್ಯಕ್ತಿ ಯಾವ ಧರ್ಮದವನು ಎನ್ನುವುದರ ಮೇಲೆ ಹೋರಾಟಗಳು ಆಗುತ್ತವೆ ಎಂದು ಮಾತನಾಡಿದ್ದಾರೆ. ಪ್ರಜ್ವಲ್ ಜಾಗದಲ್ಲಿ ಮುಸ್ಲಿಂ ವ್ಯಕ್ತಿ ಇದ್ದಿದ್ದರೆ ಹೋರಾಟ ಬೇರೆಯ ಸ್ವರೂಪವನ್ನೇ ಪಡೆದುಕೊಳ್ಳುತ್ತಿತ್ತು ಎಂದಿದ್ದಾರೆ ಸ್ವರಾ.
ಶಿವರಾಜ್ ಕುಮಾರ್ ನಟನೆಯ ಬಂಧು ಬಳಗ ಸಿನಿಮಾ ಸೇರಿದಂತೆ ನಾನಾ ಭಾಷೆಗಳ ಚಿತ್ರಗಳಲ್ಲಿ ನಟಿಸಿರುವ ಪೂನಂ ಕೌರ್ (Poonam Kaur) ಸಿಡಿದೆದ್ದಿದ್ದಾರೆ. ಪ್ರಜ್ವಲ್ ರೇವಣ್ಣರಂಥ ನೀಚ ವ್ಯಕ್ತಿಗಳನ್ನು ಗೆಲ್ಲಿಸಬೇಕಾ ಎಂದು ಅವರು ಪ್ರಶ್ನೆ ಮಾಡಿದ್ದಾರೆ. ದೇಶದಾದ್ಯಂತ ಪ್ರಜ್ವಲ್ ಅವರ ವಿಡಿಯೋ ಎನ್ನಲಾದ ವಿಡಿಯೋಗಳು ಹರಿದಾಡುತ್ತಿವೆ. ಈ ಸಂದರ್ಭದಲ್ಲಿ ಪೂನಂ ಹೇಳಿಕೆ ಮಹತ್ವ ಪಡೆದುಕೊಂಡಿದೆ.
ಮಹಿಳೆಯರಿಗೆ ಬೆದರಿಕೆ ಹಾಕಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಸಾವಿರಾರು ವಿಡಿಯೋಗಳು (Video) ಹರಿದಾಡುತ್ತಿವೆ. ಹಣ ಮತ್ತು ರಾಜಕೀಯ ಕಾರಣದಿಂದಾಗಿ ಅವರು ತಪ್ಪಿಸಿಕೊಂಡು ಹೋಗಿದ್ದಾರೆ. ಜರ್ಮನಿಯಲ್ಲಿ ಪ್ರಜ್ವಲ್ ನೆಮ್ಮದಿಯಾಗಿದ್ದಾರೆ. ಇವರಿಗೆ ಶಿಕ್ಷೆ ಆಗಬೇಕು ಎಂದರೆ ಜನರು ತಿರುಗಿ ಬೀಳಬೇಕು ಎಂದು ಅವರು ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ.
ತಮ್ಮ ಸಿನಿಮಾವನ್ನು ತಪ್ಪದೇ ನೋಡಿ, ಮರೆಯಬೇಡಿ, ಮರೆತು ನಿರಾಸೆಯಾಗಬೇಡಿ ಎಂದು ಹೇಳುವುದರ ಜೊತೆಗೆ ಥಿಯೇಟರ್ ಗೆ ಜನರನ್ನು ಕರೆತರಲು ನಾನಾ ಕಸರತ್ತುಗಳನ್ನು ಮಾಡುತ್ತಾರೆ ಸಿನಿಮಾ ಮಂದಿ. ಅದರಲ್ಲೂ ನಟರು ತಮ್ಮ ಪಾತ್ರ, ಕಥೆ, ಸನ್ನಿವೇಶ ಹೀಗೆ ಸಾಕಷ್ಟು ವಿಷಯಗಳನ್ನು ಪ್ರಚಾರ ಮಾಡಿ, ಜನರಿಗೆ ಸಿನಿಮಾ ನೋಡಿ ಎಂದು ಹೇಳುತ್ತಾರೆ.
ಆದರೆ, ದಕ್ಷಿಣದ ಹೆಸರಾಂತ ನಟ ಫಹಾದ್ ಫಾಸಿಲ್ (Fahad Faasil), ‘ಸಿನಿಮಾ ನೋಡುವುದೇ ಜನರ (Audience) ಉದ್ಯೋಗವಲ್ಲ. ಅವರಿಗೆ ಅವರದ್ದೇ ಆದ ಕೆಲಸವಿರುತ್ತದೆ’ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಫಾಸಿಲ್ ಆಡಿದ ಈ ಮಾತು ಪರ ವಿರೋಧದ ಚರ್ಚೆಗೆ ಕಾರಣವಾಗಿದೆ. ಫಹಾದ್ ಈ ರೀತಿ ಹೇಳಬಾರದಿತ್ತು ಎಂದು ಇಂಡಸ್ಟ್ರಿಯವರು ಪ್ರತಿಕ್ರಿಯಿಸಿದ್ದಾರೆ.
ಫಹಾದ್ ಹೀಗೆ ಮಾತನಾಡುವುದಕ್ಕೆ ಕಾರಣವಿದೆ. ಸಿನಿಮಾ ನೋಡಿದ ಮೇಲೆ, ಅದನ್ನು ಮನೆವರೆಗೂ ತಗೆದುಕೊಂಡು ಹೋಗಬಾರದು. ನಿಮಗೆ ನಿಮ್ಮದೇ ಆದ ಖಾಸಗಿ ಬದುಕಿದೆ. ಸಿನಿಮಾ ನೋಡಿದ ತಕ್ಷಣ ಅದರಿಂದ ಆಚೆ ಬಂದು ಬಿಡಬೇಕು. ಅಷ್ಟಕ್ಕೂ ಸಿನಿಮಾ ನೋಡೋದೇ ನಿಮ್ಮ ಉದ್ಯೋಗವಲ್ಲ ಎಂದಿದ್ದಾರೆ. ಈ ಮಾತನ್ನು ಬೇರೆ ರೀತಿಯಲ್ಲಿ ತಿರುಗಿಸಲಾಗುತ್ತಿದೆ.
ತಮಿಳು ನಟಿ ನಿವೇತಾ ಪೇತುರಾಜ್ ಮೊನ್ನೆಯಷ್ಟೇ ಗಾಸಿಪ್ ಕುರಿತಾಗಿ ಗರಂ ಆಗಿದ್ದರು. ತಮ್ಮನ್ನು ರಾಜಕಾರಣಿ ಉದಯನಿಧಿ ಸ್ಟಾಲಿನ್ (Udayanidhi) ಜೊತೆ ಕೆಟ್ಟದ್ದಾಗಿ ಬಿಂಬಿಸುತ್ತಿರುವುದಕ್ಕೆ ತರಾಟೆಗೆ ತಗೆದುಕೊಂಡಿದ್ದರು. ಇದೀಗ ಸಮಾಧಾನದಿಂದ ಗಾಸಿಪ್ ಕುರಿತಾಗಿ ಸ್ಪಷ್ಟನೆ ನೀಡಿದ್ದಾರೆ. ತಮ್ಮ ಕಷ್ಟದ ದಿನಗಳನ್ನೂ ಅವರು ಹಂಚಿಕೊಂಡಿದ್ದಾರೆ.
ತಮ್ಮ ಸಿನಿಮಾದಲ್ಲಿ ನಟಿಸಿದ್ದ ನಟಿಯೊಬ್ಬರಿಗೆ ರಾಜಕಾರಣಿಯೊಬ್ಬರು ಕೋಟ್ಯಂತರ ಮೌಲ್ಯದ ಫ್ಲ್ಯಾಟ್ ಕೊಡಿಸಿ, ದುಬೈನಲ್ಲಿ ಇಟ್ಟಿದ್ದಾರೆ ಎನ್ನುವ ವಿಚಾರ ತಮಿಳು ಚಿತ್ರರಂಗದಲ್ಲಿ ಭಾರೀ ಸದ್ದು ಮಾಡಿತ್ತು. ನಟಿ ನಿವೇತಾ ಪೇತುರಾಜ್, ಆ ರಾಜಕಾರಣಿಯಿಂದ (Politician) ಸಾಕಷ್ಟು ದುಬಾರಿ ಗಿಫ್ಟ್ ಗಳನ್ನು ಪಡೆದುಕೊಂಡಿದ್ದಾರೆ ಎಂದೂ ಹೇಳಲಾಗಿತ್ತು. ಆ ರಾಜಕಾರಣಿ ಬೇರೆ ಯಾರೂ ಅಲ್ಲ, ಉದಯನಿಧಿ ಸ್ಟಾಲಿನ್ ಎಂದೂ ತಳುಕು ಹಾಕಲಾಗಿತ್ತು.
ಸೋಷಿಯಲ್ ಮೀಡಿಯಾದಲ್ಲಿ ಈ ಸುದ್ದಿ ಸಾಕಷ್ಟು ಹರಿದಾಡಿದ್ದರಿಂದ ನಿವೇತಾ ಪೇತುರಾಜ್ (Nivetha Pethuraj) ಗರಂ ಆಗಿದ್ದರು. ಈ ಸುದ್ದಿಯನ್ನು ಹರಡುತ್ತಿರುವವರಿಗೆ ವಾರ್ನ್ ಕೂಡ ನೀಡಿದ್ದರು. ನಾನು 16ನೇ ವಯಸ್ಸಿನಲ್ಲೇ ದುಡಿಯಲು ಪ್ರಾರಂಭಿಸಿದವಳು. ಅತ್ಯಂತ ಸುಂಸ್ಕೃತ ಮನೆತನದಿಂದ ಬಂದವಳು. ದುಡ್ಡು ಮಾಡಲು ಅಡ್ಡ ದಾರಿ ಹಿಡಿಯುವವಳು ಅಲ್ಲ. ಈ ಸುದ್ದಿಯನ್ನು ಹಬ್ಬಿಸುವಾಗ ಎಚ್ಚರವಿರಲಿ ಎಂದಿದ್ದರು ನಿವೇತಾ.
ತಮ್ಮ ಕುಟುಂಬ ಹತ್ತಾರು ವರ್ಷಗಳಿಂದ ದುಬೈನಲ್ಲಿ (Dubai) ನೆಲೆಸಿದೆ. ನಾನೂ ಕೂಡ ಸಂಪಾದನೆ ಮಾಡಿಕೊಂಡು ಬಂದಿದ್ದೇನೆ. ಅದಕ್ಕಾಗಿ ಈವರೆಗೂ ಯಾವುದೇ ಅಡ್ಡದಾರಿ ತುಳಿದಿಲ್ಲ. ಅದರ ಅವಶ್ಯಕತೆಯೂ ತಮಗಿಲ್ಲ. ನಾನು ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಹಾಗಾಗಿ ಇಂತಹ ವಿಷಯಗಳು ಬಂದಾಗ ನೋವಾಗತ್ತೆ ಎನ್ನುವುದು ನಿವೇತಾ ಮಾತು. ತಮಗೆ ಯಾವುದೇ ರಾಜಕಾರಣಿಯ ಜೊತೆ ನಂಟಿಲ್ಲ. ಅವರೊಂದಿಗೆ ಕೆಲಸ ಮಾಡಿದ್ದೇನೆ. ಅದು ಆಯಾ ಸಿನಿಮಾಗೆ ಮಾತ್ರ ಸಿಮೀತ. ಅದರಾಚೆ ಯಾವ ಸ್ನೇಹವೂ ಇಲ್ಲ ಎನ್ನುವುದನ್ನು ಅವರು ಸ್ಪಷ್ಟ ಪಡಿಸಿದ್ದಾರೆ.
ಯಾರಿದು ನಿವೇತಾ?
ತೆಲುಗು ಮತ್ತು ತಮಿಳು ನಟಿ ನಿವೇತಾ ಪೇತುರಾಜ್. ತಮಿಳಿನ ಒರು ನಾಲ್ ಕೂತು ಸಿನಿಮಾದ ಮೂಲಕ 2016ರಲ್ಲಿ ಸಿನಿಮಾ ರಂಗಕ್ಕೆ ಪ್ರವೇಶ ಮಾಡಿದರು. ಮೆಂಟಲ್ ಮದಿಲೋ ಚಿತ್ರದಿಂದ ತೆಲುಗು ಸಿನಿಮಾ ರಂಗದಲ್ಲೂ ತಮ್ಮನ್ನು ತಾವು ಗುರುತಿಸಿಕೊಂಡರು.
ತಮಿಳು ನಾಡಿನ ಮಧುರೈನಲ್ಲಿ ಜನಿಸಿದರೂ, ನಂತರದ ದಿನಗಳಲ್ಲಿ ಕುಟುಂಬ ಸಮೇತ ಅವರು ದುಬೈನಲ್ಲಿ ವಾಸವಿದ್ದಾರೆ. ಹದಿನೆಂಟಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ ನಿವೇತಾ, ಚಿತ್ರಲಹರಿ, ಕೆಂಪು, ಪಾಮಗ್, ಬ್ಲಡಿ ಮೇರಿ ಸೇರಿದಂತೆ ಅನೇಕ ಚಿತ್ರಗಳಲ್ಲಿ ಇವರು ನಾಯಕಿಯಾಗಿ ನಟಿಸಿದ್ದಾರೆ. ಹಿಂದಿಯಲ್ಲಿ ಕಾಲಾ ಧಾರಾವಾಹಿಯಲ್ಲೂ ಇವರು ಕಾಣಿಸಿಕೊಂಡಿದ್ದಾರೆ.
ಜನವರಿ 22ರಂದು ಅಯೋಧ್ಯೆಯಲ್ಲಿ ನಡೆದ ರಾಮಲಲ್ಲಾನ (Ram Mandir) ಪ್ರಾಣ ಪ್ರತಿಷ್ಠಾಪನೆಗೆ ತಮಿಳಿನ ಹೆಸರಾಂತ ನಟ ರಜನಿಕಾಂತ್ (Rajinikanth) ಸೇರಿದಂತೆ ಭಾರತೀಯ ಸಿನಿಮಾ ರಂಗದ ಸಾಕಷ್ಟು ಕಲಾವಿದರು ಮತ್ತು ತಂತ್ರಜ್ಞರು ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ರಜನಿಕಾಂತ್ ಆಡಿದ ಮಾತಿಗೆ ಅವರದ್ದೇ ಸಿನಿಮಾಗಳ ನಿರ್ದೇಶಕ ಪಾ.ರಂಜಿತ್ (Pa. Ranjith) ಆಕ್ಷೇಪ ವ್ಯಕ್ತ ಪಡಿಸಿದ್ದರು. ಪಾ.ರಂಜಿತ್ ಮತ್ತು ರಜನಿಯ ಪರ ವಿರೋಧದ ಮಾತುಗಳು ಸಾಕಷ್ಟು ಚರ್ಚೆಯನ್ನು ಹುಟ್ಟು ಹಾಕಿದ್ದವು.
ರಜನಿ ಕುರಿತಂತೆ ಮಾತನಾಡಿದ್ದ ಪಾ.ರಂಜಿತ್, ‘ರಜನಿಕಾಂತ್ ಅಯೋಧ್ಯೆಗೆ ಹೋಗಿದ್ದು, ರಾಮನ ದರ್ಶನ ಪಡೆದದ್ದು ತಪ್ಪಲ್ಲ. ಆದರೆ, 500 ವರ್ಷಗಳ ಸಮಸ್ಯೆಗೆ ಪರಿಹಾರ ಸಿಕ್ಕಿದೆ ಎಂದು ಹೇಳದ್ದನ್ನು ನಾನು ಒಪ್ಪಲಾರೆ. ಇದರ ಹಿಂದಿನ ರಾಜಕಾರಣವನ್ನು ಪ್ರಶ್ನೆ ಮಾಡಬೇಕು. ಸಮಸ್ಯೆ ಮತ್ತು ಪರಿಹಾರ ಎನ್ನುವುದನ್ನು ನಾನು ಟೀಕಿಸುತ್ತೇನೆ’ ಎಂದಿದ್ದರು.
ಪಾ.ರಂಜಿತ್ ಆಡಿದ ಮಾತುಗಳು ರಜನಿಕಾಂತ್ ಮತ್ತು ರಾಮನ ಭಕ್ತರನ್ನು ಕೆರಳಿಸಿದ್ದವು. ಪಾ.ರಂಜಿತ್ ವಿರುದ್ಧ ಟೀಕೆಗಳು ಕೇಳಿ ಬಂದಿದ್ದವು. ಹಾಗಾಗಿ ಇದಕ್ಕೆ ರಜನಿಕಾಂತ್ ಹೇಗೆ ಪ್ರತಿಕ್ರಿಯಿಸುತ್ತಾರೆ ಎನ್ನುವು ಕುತೂಹಲ ಸಹಜವಾಗಿಯೇ ಇತ್ತು. ಅಯೋಧ್ಯೆಯಿಂದ ಬಂದ ರಜನಿಯನ್ನೂ ಕೊನೆಗೂ ಪ್ರಶ್ನೆ ಮಾಡಿದ್ದಾರೆ ಮಾಧ್ಯಮಗಳು.
ರಾಮಮಂದಿರ ಓಪನ್ ಆದ ತಕ್ಷಣ ರಾಮನ ದರ್ಶನ ಪಡೆದ ಮೊದಲ 150 ಜನರಲ್ಲಿ ನಾನೂ ಒಬ್ಬ. ನನಗೆ ರಾಮನ ಒಳ್ಳೆಯ ದರ್ಶನ ಸಿಕ್ಕಿದೆ. ನನಗೆ ಇದು ಆಧ್ಯಾತ್ಮ. ರಾಜಕೀವಲ್ಲ ಎಂದು ಹೇಳುವ ಮೂಲಕ ಪಾ.ರಂಜಿತ್ ಆಡಿದ ಮಾತಿಗೆ ರಜನಿ ಹೀಗೆ ಉತ್ತರಿಸಿದ್ದಾರೆ. ಅಲ್ಲದೇ, ತಾವು ಇದರಲ್ಲಿ ರಾಜಕೀಯ ಹುಡುಕುವುದಕ್ಕೆ ಹೋಗುದಿಲ್ಲವೆಂದು ತಿರುಗೇಟು ನೀಡಿದ್ದಾರೆ.
ಬಿಗ್ ಬಾಸ್ (Bigg Boss Kannada) ಮೂಲಕ ನಾಡಿಗೆ ಪರಿಚಯವಾದ ವರ್ತೂರು ಸಂತೋಷ್ (Varthur Santhosh) ನಾನಾ ಕಾರಣಗಳಿಂದಾಗಿ ಸುದ್ದಿ ಆಗ್ತಿದ್ದಾರೆ. ಈ ಹಿಂದೆ ಹುಲಿ ಉಗುರು ಕಾರಣಕ್ಕಾಗಿ ಅವರು ಸಂಚಲನ ಸೃಷ್ಟಿ ಮಾಡಿದ್ದರು. ಜೈಲಿಗೂ ಹೋಗಿ ಬಂದರು. ಜೈಲಿನಿಂದ ಹೋಗಿ ಬಂದ ನಂತರ ಮತ್ತೆ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟರು. ಕಳೆದ ಎರಡು ದಿನಗಳಿಂದ ಮತ್ತೆ ಮನೆಯಿಂದ ಆಚೆ ಹೋಗುವುದಾಗಿ ರಚ್ಚೆ ಹಿಡಿದಿದ್ದಾರೆ.
ಒಂದು ಕಡೆ ಬಿಗ್ ಬಾಸ್ ಕಾರಣದಿಂದ ವರ್ತೂರು ಸುದ್ದಿ ಆಗುತ್ತಿದ್ದರೆ, ಮತ್ತೊಂದು ಕಡೆ ಅವರು ಮದುವೆ (Marriage) ಆಗಿದ್ದಾರೆ ಎನ್ನಲಾದ ವಿಡಿಯೋ ಮತ್ತು ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಜಯಶ್ರೀ ಅನ್ನುವವರ ಜೊತೆ ಸಂತೋಷ್ ಈ ಹಿಂದೆ ಮದುವೆ ಆಗಿದ್ದಾರೆ ಎಂದೂ ಹೇಳಲಾಗುತ್ತಿದೆ. ಆದರೆ, ಈ ಕುರಿತು ಬಿಗ್ ಬಾಸ್ ಮನೆಯಲ್ಲಿ ಯಾವತ್ತೂ ಸಂತೋಷ್ ಹೇಳಿಕೊಂಡಿಲ್ಲ. ಆದರೆ, ತನಿಷಾ ಜೊತೆ ಲವ್ವಿಡವ್ವಿ ಶುರು ಮಾಡಿದ್ದಾರೆ ಎನ್ನುವುದೂ ಸುಳ್ಳಲ್ಲ.
ಬಿಗ್ ಬಾಸ್ ಮನೆಯ ಬಹುತೇಕ ಕಂಟೆಸ್ಟೆಂಟ್ ಗಳು ತಮ್ಮ ಸಂಬಂಧಗಳ ಕುರಿತು ಮಾತನಾಡಿದ್ದಾರೆ. ಮದುವೆ, ಲವ್, ಬ್ರೇಕ್ ಅಪ್, ಕ್ರಶ್, ಡಿವೋರ್ಸ್ ಎಲ್ಲದರ ಬಗ್ಗೆಯೂ ಮಾತನಾಡಿದ್ದಾರೆ. ಹಳೆ ಲವರ್, ಹೊಸ ಲವ್ ಸ್ಟೋರಿ ಬಗ್ಗೆಯೂ ಹಂಚಿಕೊಂಡಿದ್ದಾರೆ. ಆದರೆ, ವರ್ತೂರು ಸಂತೋಷ್ ಮಾತ್ರ ಈವರೆಗೂ ತಮ್ಮ ಮದುವೆ ಬಗ್ಗೆ ಮಾತನಾಡಿಲ್ಲ. ಬಿಗ್ ಬಾಸ್ ಮನೆಗೆ ಹೋಗುವ ಮುನ್ನವೂ ಅವರು ತಮ್ಮ ತಾಯಿಯನ್ನು ಮಾತ್ರ ಕರೆದುಕೊಂಡು ಬಂದಿದ್ದರು. ಹೆಂಡತಿ ಬಂದಿರಲಿಲ್ಲ.
ಮೊನ್ನೆಯಷ್ಟೇ ಬಿಗ್ ಬಾಸ್ ಮನೆಯಿಂದ ಆಚೆ ಬಂದಿರುವ, ವರ್ತೂರು ಸಂತೋಷ್ ಅವರ ಕುಚಿಕು ಗೆಳೆಯನಂತಿದ್ದ ಬುಲೆಟ್ ರಕ್ಷಕ್ , ಈ ಹಿಂದೆ ಸಂತೋಷ್ ಬಗ್ಗೆ ಮಾತನಾಡಿದ್ದರು. ಅವರು ಮನೆಯಿಂದ ಆಚೆ ಬಂದ ತಕ್ಷಣವೇ ಎಂಗೇಜ್ ಮೆಂಟ್ ಆಗಲಿದ್ದಾರೆ ಎಂದು ಹೇಳಿದ್ದರು. ಹಾಗಾಗಿ ವರ್ತೂರು ಮದುವೆ ಬಗ್ಗೆ ಅನೇಕ ಗೊಂದಲಗಳು ಎದ್ದಿವೆ. ಆದರೆ, ವರ್ತೂರು ಸಂತೋಷ್ ಅವರದ್ದೇ ಎನ್ನಲಾದ ಮದುವೆ ಫೋಟೋ ಮತ್ತು ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ.
ಜೊತೆಗೆ ವರ್ತೂರು ಸಂತೋಷ್ ಮದುವೆ ಮಾಡಿಕೊಂಡ ಹುಡುಗಿಯ ತಂದೆಯದ್ದು ಎನ್ನಲಾದ ವಿಡಿಯೋ ಕೂಡ ಸಾಕಷ್ಟು ಸದ್ದು ಮಾಡಿದೆ. ವರ್ತೂರು ಒಬ್ಬ ಪತ್ನಿ ಪೀಡಕ, ಡ್ರಗ್ಸ್ ಸೇವನೆ ಮಾಡುತ್ತಿದ್ದ ಎಂದೆಲ್ಲ ವಿಡಿಯೋದಲ್ಲಿ ಇರುವ ವ್ಯಕ್ತಿಯೊಬ್ಬರು ಹೇಳಿದ್ದಾರೆ. ಅವರ ಸಂತೋಷ್ ಗೆ ಹೆಣ್ಣು ಕೊಟ್ಟ ತಂದೆ ಎಂದು ಹೇಳಿಕೊಂಡಿದ್ದಾರೆ. ಈ ಎಲ್ಲದಕ್ಕೂ ಸಂತೋಷ್ ಮನೆಯವರು ಏನು ಉತ್ತರ ಕೊಡುತ್ತಾರೆ ಎನ್ನುವುದನ್ನು ಕಾದು ನೋಡಬೇಕು.
ಜೈಲರ್ ಸಿನಿಮಾದ ‘ಕಾ ಕಾವಾಲಯ್ಯ’ (Kavalaiah) ಗೀತೆ ಸೂಪರ್ ಹಿಟ್ ಆಗಿತ್ತು. ತಮನ್ನಾ (Tamannaah) ಈ ಹಾಡಿಗೆ ಮಾದಕ ರೀತಿಯಲ್ಲಿ ಡಾನ್ಸ್ ಮಾಡಿದ್ದರು. ಸಖತ್ ಹಾಟ್ ಹಾಟ್ ಆಗಿಯೇ ಕಂಡಿದ್ದರು. ಹಾಡು ವೈರಲ್ ಆಗುತ್ತಿದ್ದಂತೆಯೇ ಅನೇಕರು ಈ ಹಾಡಿಗೆ ರೀಲ್ಸ್ ಮಾಡಿದ್ದರು. ಈ ಹಾಡಿನ ಬಗ್ಗೆ ತಮಿಳಿನ ಹೆಸರಾಂತ ಹಿರಿಯ ನಟ ಮನ್ಸೂರ್ ಅಲಿ ಖಾನ್ (Mansoor Ali Khan) ಟೀಕಿಸಿದ್ದಾರೆ. ಇದು ಅತ್ಯಂತ ಕೆಟ್ಟ ಡಾನ್ಸ್ ಎಂದು ಹೇಳಿದ್ದಾರೆ.
ಮನ್ಸೂರ್ ಆಡಿದ ಈ ಮಾತು ವಿವಾದಕ್ಕೆ ಕಾರಣವಾಗಿದೆ. ತಮನ್ನಾ ಈ ಹಾಡಿನ ಅರ್ಥವನ್ನು ತಮ್ಮ ನೃತ್ಯದ ಮೂಲಕ ಹಾಳು ಮಾಡಿದ್ದಾರೆ ಎನ್ನುವ ಖಾನ್ ಅವರ ಮಾತು ವೈರಲ್ ಆಗಿದೆ. ಕೆಲವರು ಖಾನ್ ಪರವಾಗಿ ಕಾಮೆಂಟ್ ಮಾಡುತ್ತಿದ್ದರೆ, ಇನ್ನೂ ಕೆಲವರು ಖಾನ್ ವಿರೋಧಿಸಿಯೂ ತಮ್ಮ ಅಭಿಪ್ರಾಯವನ್ನು ದಾಖಲಿಸುತ್ತಿದ್ದಾರೆ.
ಜೈಲರ್ ಭರ್ಜರಿ ಸಕ್ಸಸ್
ಜೈಲರ್ ಸಿನಿಮಾ ಭರ್ಜರಿ ಗೆಲುವು (Success) ಸಾಧಿಸಿದೆ. ಬಾಕ್ಸ್ ಆಫೀಸಿನಲ್ಲಿ ಭಾರೀ ಕಲೆಕ್ಷನ್ ಮಾಡಿದೆ. ಹೀಗಾಗಿ ನಿರ್ಮಾಪಕ ಕಲಾನಿಧಿ ಮಾರನ್, ಭರ್ಜರಿ ಉಡುಗೊರೆಗಳನ್ನು ಚಿತ್ರತಂಡಕ್ಕೆ ನೀಡುತ್ತಿದ್ದಾರೆ. ಚಿತ್ರದ ನಾಯಕ, ನಿರ್ದೇಶಕ, ಸಂಗೀತ ನಿರ್ದೇಶಕರಿಗೆ ಈಗಾಗಲೇ ಕಾರುಗಳ ಉಡುಗೊರೆ (Gift) ನೀಡಿರುವ ನಿರ್ಮಾಪಕರು, ಇದೀಗ ಚಿತ್ರತಂಡದಲ್ಲಿ ಕೆಲಸ ಮಾಡಿದ ಮುನ್ನೂರಕ್ಕೂ ಹೆಚ್ಚು ಜನರಿಗೆ ಬಂಗಾರದ ಉಡುಗೊರೆ ನೀಡಿದೆ. ಸಕ್ಸಸ್ ಪಾರ್ಟಿಯಲ್ಲಿ ಚಿನ್ನವನ್ನು ಗಿಫ್ಟ್ ಆಗಿ ನೀಡಿದ್ದಾರೆ.
ಈ ಹಿಂದೆ ನಿರ್ಮಾಪಕ ಕಲಾನಿಧಿ ಮಾರನ್ (Kalanidhi Maran), ನಟ ರಜನಿಕಾಂತ್ (Rajinikanth) ಅವರಿಗೆ ದುಬಾರಿ ಉಡುಗೊರೆಯನ್ನೇ ನೀಡಿದ್ದರು. ಈ ಸಿನಿಮಾಗಾಗಿ ರಜನಿ 250 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎಂದು ಹೇಳಲಾಗುತ್ತಿದ್ದು, ಮೊದಲ ಕಂತಾಗಿ 150 ಕೋಟಿ ರೂಪಾಯಿ ಸಂದಾಯವಾಗಿತ್ತು. ಎರಡನೇ ಕಂತು ನೂರು ಕೋಟಿ ರೂಪಾಯಿ ಮತ್ತು ಬಿಎಂಡಬ್ಲೂ ಎಕ್ಸ್ 7 ದುಬಾರಿ ಕಾರನ್ನು (Car) ಉಡುಗೊರೆಯಾಗಿ ನೀಡಲಾಗಿದೆ. ಈ ಕಾರಿನ ಬೆಲೆ 1.50 ಕೋಟಿಗೂ ಹೆಚ್ಚು ಎಂದು ಅಂದಾಜಿಸಲಾಗಿದೆ.
ಜೈಲರ್ (Jailer) ಸಿನಿಮಾ ಈಗಲೂ ಬಾಕ್ಸ್ ಆಫೀಸಿನಲ್ಲಿ ಈಗಲೂ ಸದ್ದು ಮಾಡುತ್ತಿದೆ. ಹಲವು ವರ್ಷಗಳ ನಂತರ ರಜನಿ ಇಂಥದ್ದೊಂದು ಗೆಲುವನ್ನು (Success) ತಮ್ಮದಾಗಿಸಿಕೊಂಡಿದ್ದಾರೆ. ಹಾಗಾಗಿ ಸಹಜವಾಗಿಯೇ ಅವರ ಅಭಿಮಾನಿಗಳಲ್ಲಿ ಸಂಭ್ರಮ ತಂದಿದೆ. ಈ ಖುಷಿಯನ್ನು ಅವರು ಚಿತ್ರತಂಡದ ಜೊತೆಗೆ ಹಂಚಿಕೊಂಡಿದ್ದರು. ಜೈಲರ್ ಸಿನಿಮಾದ ಚಿತ್ರತಂಡದ ಜೊತೆಗೆ ಕೇಕ್ ಕತ್ತರಿಸಿ ಸಂಭ್ರಮಸಿರುವ ರಜನಿಕಾಂತ್, ಸಿನಿಮಾಗಾಗಿ ದುಡಿದ ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸಿದ್ದರು. ಅಲ್ಲದೇ ಸಿನಿಮಾ ನೋಡಿದ ಪ್ರತಿಯೊಬ್ಬರಿಗೂ ಧನ್ಯವಾದಗಳನ್ನು ಈ ಸಂದರ್ಭದಲ್ಲಿ ಅವರು ಹೇಳಿದ್ದರು. ಸ್ವತಃ ತಾವೇ ಎಲ್ಲರಿಗೂ ಕೇಕ್ (Cake)ತಿನ್ನಿಸಿದ್ದರು.
ರಜನಿಕಾಂತ್ ಮೇನಿಯಾ ನಿಲ್ಲುತ್ತಿಲ್ಲ. ಒಂದಲ್ಲ ಎರಡಲ್ಲ. ಭರ್ತಿ ಹದಿನಾರು ದಿನಗಳು ಮುಗಿದಿದೆ. ಆದರೂ ಜನರು ಚಿತ್ರಮಂದಿರಕ್ಕೆ ನುಗ್ಗುತ್ತಿದ್ದಾರೆ. ನೋಡಿದವರೇ ಮತ್ತೆ ಮತ್ತೆ ನೋಡುತ್ತಿದ್ದಾರೆ. ರಜನಿ ಯುಗ ಮುಗಿಯಿತು ಎಂದವರಿಗೆ ಕಪಾಳಕ್ಕೆ ಬಾರಿಸುವಂಥ ಉತ್ತರ ಕೊಟ್ಟಿದೆ ಜೈಲರ್. ವಿಶ್ವದಾದ್ಯಂತ ಇಲ್ಲಿವರೆಗೆ 600 ಕೋಟಿ ರೂಪಾಯಿಗೂ ಹೆಚ್ಚು ಗಳಿಸಿದೆ.
ಮೊದಲ ದಿನ ಒಟ್ಟು 500 ಪ್ರದರ್ಶನ ಕಂಡಿತ್ತು ಜೈಲರ್. ಮೊದಲ ವಾರದ ನಂತರ ಪ್ರದರ್ಶನ ಸಂಖ್ಯೆ ಕಮ್ಮಿ ಆಗಬಹುದು. ಹೀಗಂತ ಲೆಕ್ಕಾಚಾರ ಹಾಕಲಾಗಿತ್ತು. ಆದರೆ ಐದು ನೂರರಲ್ಲಿ ಒಂದೇ ಒಂದು ಪ್ರದರ್ಶನ ಕಮ್ಮಿಯಾಗಿಲ್ಲ. ಜನರು ಸಿನಿಮಾ ನೋಡುವುದನ್ನು ನಿಲ್ಲಿಸುತ್ತಿಲ್ಲ. ರಜನಿ ಅಷ್ಟೊಂದು ಮೋಡಿ ಮಾಡಿದ್ದಾರೆ. ಏನಾದರಾಗಲಿ ಹಳೇ ರಜನಿಕಾಂತ್ ಮತ್ತೆ ಸಿಕ್ಕಿದ್ದಾರೆ. ಫ್ಯಾನ್ಸ್ ಕೇಕೆ ಹಾಕುತ್ತಿದ್ದಾರೆ. ನಿರ್ದೇಶಕ ನೆಲ್ಸನ್ ನಿರ್ದೇಶನಕ್ಕೆ ಭೇಷ್ ಎಂದಿದ್ದಾರೆ.
ದೊಡ್ಮನೆಗೆ ಶಾಸಕ ಪ್ರದೀಪ್ ಈಶ್ವರ್ ಎಂಟ್ರಿ ಕೊಟ್ಟಾಗ ದೊಡ್ಡ ಮಟ್ಟದಲ್ಲೇ ಸುದ್ದಿ ಆಯಿತು. ಇವರು ಅತಿಥಿಯಾಗಿ ಪ್ರವೇಶ ಮಾಡುತ್ತಿದ್ದಾರಾ? ಅಥವಾ ಸ್ಪರ್ಧಿಯಾಗಿ ಮನೆಯೊಳಗೆ ಕಾಲಿಟ್ಟಿದ್ದಾರಾ ಎನ್ನುವ ಪ್ರಶ್ನೆ ಕೂಡ ಮೂಡಿತ್ತು. ಈಗ ಅವರೇ ಈ ಕುರಿತು ಸ್ಪಷ್ಟನೆ ನೀಡಿದ್ದಾರೆ. ವಾಹಿನಿ ಮತ್ತು ತಮ್ಮ ಮಧ್ಯ ಒಪ್ಪಂದ ಆಗಿದ್ದು ಹಲವು ಗಂಟೆಗಳು ಮಾತ್ರ. ನಾನು ಬಿಗ್ ಬಾಸ್ ಮನೆಯಲ್ಲಿ ಇದ್ದದ್ದೇ ಎರಡ್ಮೂರು ಗಂಟೆಗಳು ಮಾತ್ರ ಎಂದಿದ್ದಾರೆ ಪ್ರದೀಪ್ ಈಶ್ವರ್.
ವಾಹಿನಿಗಳ ಕಾರ್ಯಕ್ರಮಗಳಲ್ಲಿ ಭಾಗಿ ಆಗುವುದು ತಪ್ಪೇನೂ ಇಲ್ಲ. ನಾನು ಬಿಗ್ ಬಾಸ್ ಮನೆಗೆ ಹೋಗಿದ್ದು ಕೇವಲ ಎರಡ್ಮೂರು ತಾಸು ಮಾತ್ರ. ಅಲ್ಲಿನ ಸ್ಪರ್ಧಿಗಳಿಗೆ ಉತ್ತೇಜಿಸಲು ಹೋಗಿದ್ದೆ. ಸ್ಫೂರ್ತಿದಾಯಕ ಮಾತುಗಳನ್ನು ಆಡಿದ್ದೇನೆ. ಬಿಗ್ ಬಾಸ್ ಮನೆಯಲ್ಲಿ ಇರುವವರಿಗೆ ಧೈರ್ಯ ತುಂಬಿದ್ದೇನೆ. ಇದನ್ನು ಯಾಕೆ ವಿವಾದ ಮಾಡಲಾಗುತ್ತಿದೆ ಗೊತ್ತಿಲ್ಲ. ನೂರು ದಿನ ಹೋಗಿದ್ದರೆ ಮಾತನಾಡಬಹುದಿತ್ತು. ಹೋಗಿದ್ದೆ ಮೂರು ತಾಸು ಎಂದು ಪ್ರದೀಪ್ ಈಶ್ವರ್ ಬಿಗ್ ಬಾಸ್ ಗೆ ಹೋಗಿದ್ದನ್ನು ಸಮರ್ಥಿಸಿಕೊಂಡರು.
ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಶಾಸಕ ಪ್ರದೀಪ್ ಈಶ್ವರ್, ‘ನಾನು ಡಾ.ರಾಜ್ ಕುಮಾರ್ ಅವರ ಅಭಿಮಾನಿ. ಅವರ ‘ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಹಾಡಿಗೆ ನೃತ್ಯ ಮಾಡಿದ್ದೇನೆ. ಡಾನ್ಸ್ ಮಾಡಿದ್ದರಲ್ಲಿ ತಪ್ಪಿಲ್ಲ ಅಂತ ನನಗೆ ಅನಿಸುತ್ತದೆ. ನನ್ನ ಬಗ್ಗೆ ನೆಗೆಟಿವ್ ಮಾತನಾಡುವವರ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದಿದ್ದಾರೆ.
ನಿನ್ನೆಯಷ್ಟೇ ಬಿಗ್ ಬಾಸ್ ಮನೆ ಪ್ರವೇಶ ಮಾಡಿದ್ದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ದೊಡ್ಮನೆಯಿಂದ ಹೊರ ಬಂದಿದ್ದಾರೆ. ಮನೆಗೆ ಹೋದ ಮೊದಲ ದಿನವೇ ಸಾಕಷ್ಟು ಸುದ್ದಿ ಮಾಡಿದ್ದರು ಪ್ರದೀಪ್ ಈಶ್ವರ್. ಹಲವು ದಿನಗಳ ಕಾಲ ಸ್ಪರ್ಧಿಯಾಗಿಯೇ ಅವರು ಮನೆಯಲ್ಲಿ ಉಳಿಯಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಅವರು ಹೋದದ್ದು ಅತಿಥಿಯಾಗಿ ಎನ್ನುವುದು ಈಗ ಗೊತ್ತಾಗಿದೆ.
ವಾಹಿನಿಗಳ ಕಾರ್ಯಕ್ರಮಗಳಲ್ಲಿ ಭಾಗಿ ಆಗುವುದು ತಪ್ಪೇನೂ ಇಲ್ಲ. ನಾನು ಬಿಗ್ ಬಾಸ್ ಮನೆಗೆ ಹೋಗಿದ್ದು ಕೇವಲ ಎರಡ್ಮೂರು ತಾಸು ಮಾತ್ರ. ಅಲ್ಲಿನ ಸ್ಪರ್ಧಿಗಳಿಗೆ ಉತ್ತೇಜಿಸಲು ಹೋಗಿದ್ದೆ. ಸ್ಫೂರ್ತಿದಾಯಕ ಮಾತುಗಳನ್ನು ಆಡಿದ್ದೇನೆ. ಬಿಗ್ ಬಾಸ್ ಮನೆಯಲ್ಲಿ ಇರುವವರಿಗೆ ಧೈರ್ಯ ತುಂಬಿದ್ದೇನೆ. ಇದನ್ನು ಯಾಕೆ ವಿವಾದ ಮಾಡಲಾಗುತ್ತಿದೆ ಗೊತ್ತಿಲ್ಲ. ನೂರು ದಿನ ಹೋಗಿದ್ದರೆ ಮಾತನಾಡಬಹುದಿತ್ತು. ಹೋಗಿದ್ದೆ ಮೂರು ತಾಸು ಎಂದು ಪ್ರದೀಪ್ ಈಶ್ವರ್ ಬಿಗ್ ಬಾಸ್ ಗೆ ಹೋಗಿದ್ದನ್ನು ಸಮರ್ಥಿಸಿಕೊಂಡರು.
ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಶಾಸಕ ಪ್ರದೀಪ್ ಈಶ್ವರ್, ನಾನು ಡಾ.ರಾಜ್ ಕುಮಾರ್ ಅವರ ಅಭಿಮಾನಿ. ಅವರ ‘ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಹಾಡಿಗೆ ನೃತ್ಯ ಮಾಡಿದ್ದೇನೆ. ಡಾನ್ಸ್ ಮಾಡಿದ್ದರಲ್ಲಿ ತಪ್ಪಿಲ್ಲ ಅಂತ ನನಗೆ ಅನಿಸುತ್ತದೆ. ನನ್ನ ಬಗ್ಗೆ ನೆಗೆಟಿವ್ ಮಾತನಾಡುವವರ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದಿದ್ದಾರೆ.
ನಿನ್ನೆಯಷ್ಟೇ ಬಿಗ್ ಬಾಸ್ ಮನೆ ಪ್ರವೇಶ ಮಾಡಿದ್ದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ದೊಡ್ಮನೆಯಿಂದ ಹೊರ ಬಂದಿದ್ದಾರೆ. ಮನೆಗೆ ಹೋದ ಮೊದಲ ದಿನವೇ ಸಾಕಷ್ಟು ಸುದ್ದಿ ಮಾಡಿದ್ದರು ಪ್ರದೀಪ್ ಈಶ್ವರ್. ಹಲವು ದಿನಗಳ ಕಾಲ ಸ್ಪರ್ಧಿಯಾಗಿಯೇ ಅವರು ಮನೆಯಲ್ಲಿ ಉಳಿಯಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಅವರು ಹೋದದ್ದು ಅತಿಥಿಯಾಗಿ ಎನ್ನುವುದು ಈಗ ಗೊತ್ತಾಗಿದೆ.
ಸರ್ಕಾರಕ್ಕೆ ಪ್ರಶ್ನೆಗಳ ಸುರಿಮಳೆ: ಚಿಕ್ಕಬಳ್ಳಾಪುರ ಜನಪ್ರಿಯ ಮಾತನಾಡುವ ಶಾಸಕ ಎಂದೇ ಖ್ಯಾತರಾಗಿರುವ ಪ್ರದೀಪ್ ಈಶ್ವರ್ ಅಚ್ಚರಿ (Pradeep Eshwar) ಎನ್ನುವಂತೆ ಬಿಗ್ ಬಾಸ್ (Bigg Boss Kannada) ಮನೆ ಪ್ರವೇಶ ಮಾಡಿದ್ದಾರೆ. ಎರಡು ದಿನಗಳ ಹಿಂದೆಯಷ್ಟೇ ಇವರು ದೊಡ್ಮನೆಗೆ ಕಾಲಿಡಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿತ್ತು. ಎರಡು ದಿನ ಕಾಯಿರಿ ನೋಡೋಣ ಎಂದಷ್ಟೇ ಅವರು ಹೇಳಿ ಅಚ್ಚರಿ ಮೂಡಿಸಿದ್ದರು. ಕೊನೆಗೂ ಬಿಗ್ ಬಾಸ್ ಮನೆ ಪ್ರವೇಶ ಮಾಡಿದ್ದಾರೆ ಶಾಸಕರು.
ಅನಾಥ ಮಕ್ಕಳಿಗಾಗಿ ಬಿಗ್ ಬಾಸ್ ಮನೆಗೆ ಪ್ರವೇಶ ಮಾಡಿರುವುದಾಗಿ ಹೇಳಿದ್ದಾರೆ. ಬಿಗ್ ಬಾಸ್ ನಿಂದ ಬಂದ ಹಣವನ್ನ ಅಪ್ಪಅಮ್ಮನಿಲ್ಲದ ಮಕ್ಕಳಿಗೆ ನೀಡಲು ನಿರ್ಧಾರ ಮಾಡಿರುವುದಾಗಿ ಅವರು ಹೇಳಿಕೊಂಡಿದ್ದಾರೆ. ಆದರೆ, ಪ್ರದೀಪ್ ಈಶ್ವರ್ ಬಿಗ್ ಬಾಸ್ ಗೆ ಹೋಗಿರೋ ವಿಚಾರವನ್ನು ಹಲವರು ಪ್ರಶ್ನೆ ಮಾಡಿದ್ದಾರೆ. ಸರ್ಕಾರಕ್ಕೆ ಸಾಮಾನ್ಯರು ಪ್ರಶ್ನೆಗಳ ಸುರಿಮಳೆಗೈದಿದ್ದಾರೆ. ಜನಪ್ರತಿನಿಧಿಯಾಗಿ ಇಂತಹ ವೇಳೆಯಲ್ಲಿ ರಿಯಾಲಿಟಿ ಶೋಗೆ ಹೋಗಬಹುದಾ ಎಂದು ಹಲವರು ಸೋಷಿಯಲ್ ಮೀಡಿಯಾ ಮೂಲಕ ಪ್ರಶ್ನೆ ಮಾಡಿದ್ದಾರೆ.
ಹಾಲಿವುಡ್ ನ ಆಪನ್ ಹೈಮರ್ ಚಿತ್ರಕ್ಕೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಈ ಚಿತ್ರದಲ್ಲಿ ಸೆಕ್ಸ್ (Sex) ಮಾಡುವಾಗ ಕಥಾನಾಯಕ ಭಗವದ್ಗೀತೆಯ ಸಾಲುಗಳನ್ನು ಓದುವ ದೃಶ್ಯವಿದೆ. ಈ ದೃಶ್ಯವು ಭಾರತೀಯರ ಕೆಂಗಣ್ಣಿಗೆ ಗುರಿಯಾಗಿದೆ. ಈ ಕುರಿತಂತೆ ಕೇಂದ್ರ ಸಚಿವ ಅನುರಾಗ್ ಠಾಕೂರ್ (Anurag Thakur) ಕೂಡ ಪ್ರತಿಕ್ರಿಯೆ ನೀಡಿದ್ದು, ‘ಈ ದೃಶ್ಯವನ್ನು ಸಿನಿಮಾದಲ್ಲಿ ಹೇಗೆ ಬಿಡಲಾಯಿತು ಎಂದು ಸೆನ್ಸಾರ್ ಮಂಡಳಿಯ ಅಧಿಕಾರಿಯನ್ನು ಕೇಳಲಾಗುವುದು. ತಪ್ಪಿತಸ್ಥ ಅಧಿಕಾರಿಯ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ.
ಹಾಲಿವುಡ್‌ನ ‘ಆಪನ್‌ಹೈಮರ್’ (Oppenheimer) ಸಿನಿಮಾದ ರಿಲೀಸ್‌ಗೂ ಮುನ್ನವೇ ಭರ್ಜರಿ ಡಿಮ್ಯಾಂಡ್ ಶುರುವಾಗಿತ್ತು. ಜುಲೈ 21ರಂದು ರಿಲೀಸ್ ಆಗಿರೋ ಹಾಲಿವುಡ್‌ನ ಈ ಚಿತ್ರಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಹೌಸ್‌ಫುಲ್ ಪ್ರದರ್ಶನ ಕೂಡ ಕಾಣುತ್ತಿದೆ. ಆದರೆ ಈ ಸಿನಿಮಾದಲ್ಲಿನ ಆ ಒಂದು ದೃಶ್ಯಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ.
ರಿಲೀಸ್ ಆಗುವ ಮುನ್ನವೇ ಕ್ರಿಸ್ಟೋಫರ್ ನೋಲನ್ ನಿರ್ದೇಶನದ ‘ಆಪನ್‌ಹೈಮರ್’ ಸಿನಿಮಾ, 2 ಸಾವಿರ ರೂಪಾಯಿಗೆ ಟಿಕೆಟ್ ಸೇಲ್ ಆಗಿತ್ತು. ರಿಲೀಸ್ ಬಳಿಕ ಈ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್ ಸಿಕ್ತಿದೆ. ಈ ಬೆನ್ನಲ್ಲೇ ಸಿನಿಮಾದಲ್ಲಿ ಹಿಂದೂ ಧರ್ಮಕ್ಕೆ ಅವಮಾನವಾಗಿದೆ ಎಂದು ಚಿತ್ರತಂಡದ ವಿರುದ್ಧ ಭಾರತೀಯರು ಗರಂ ಆಗಿದ್ದಾರೆ. ಹೀರೋ ಸೆಕ್ಸ್ ಮಾಡುವಾಗ ಭಗವದ್ಗೀತೆ ಹೇಳುವ ಸಂಭಾಷಣೆ ಬಗ್ಗೆ ಕೇಂದ್ರ ಸರ್ಕಾರದ ಮಾಹಿತಿ ಆಯುಕ್ತ ಉದಯ್ ಮಹುರ್ಕರ್ ತಕರಾರು ತೆಗೆದಿದ್ದಾರೆ. ಸೋಶಿಯಲ್ ಮೀಡಿಯಾ ಮೂಲಕ ಅವರು ‘ಆಪನ್‌ಹೈಮರ್’ ಚಿತ್ರತಂಡಕ್ಕೆ ಪ್ರಶ್ನೆ ಮಾಡಿದ್ದಾರೆ. ಈ ದೃಶ್ಯಕ್ಕೆ ಕತ್ತರಿ ಬೀಳುವ ಸಾಧ್ಯತೆ ಇದೆ. ಇದನ್ನೂ ಓದಿ:ಉಪ್ಪಿ ಅಭಿಮಾನಿಗಳಿಗೆ ಗುಡ್ ನ್ಯೂಸ್- ’ಬುದ್ಧಿವಂತ 2′ ಬಿಗ್ ಅಪ್‌ಡೇಟ್
ಅಣುಬಾಂಬ್ ಕಂಡು ಹಿಡಿದ ಅಮೆರಿಕದ ವಿಜ್ಞಾನಿ ಜೆ. ರಾಬರ್ಟ್ ಆಪನ್‌ಹೈಮರ್ ಅವರ ಜೀವನದ ಕಥೆ ಬಗ್ಗೆ ಈ ಸಿನಿಮಾದಲ್ಲಿ ತೋರಿಸಲಾಗಿದೆ. ಆಪನ್‌ಹೈಮರ್ ಪಾತ್ರವನ್ನು ಕಿಲಿಯನ್ ಮರ್ಫಿ ಮಾಡಿದ್ದಾರೆ. ರಿಯಲ್ ಲೈಫ್‌ನಲ್ಲಿ ಆಪನ್‌ಹೈಮರ್ ಅವರಿಗೆ ಹಿಂದೂ ಪುರಾಣಗಳ ಬಗ್ಗೆ ಆಸಕ್ತಿ ಇತ್ತು. ಅವರು ಸಂಸ್ಕೃತ ಕಲಿತಿದ್ದರು ಮತ್ತು ಭಗವದ್ಗೀತೆ (Bhagavad Gita) ಓದಿಕೊಂಡಿದ್ದರು. ಅದಕ್ಕೆ ಸಂಬಂಧಿಸಿದಂತೆ ಈ ಸಿನಿಮಾದಲ್ಲಿ ಒಂದು ದೃಶ್ಯ ಇದೆ. ಆ ದೃಶ್ಯವೇ ಈಗ ಕಾಂಟ್ರವರ್ಸಿ ಸೃಷ್ಟಿ ಮಾಡಿದೆ.
ಆಪನ್‌ಹೈಮರ್ ಜೊತೆ ಲೈಂಗಿಕ ಕ್ರಿಯೆ ನಡೆಸುತ್ತಿರುವ ಅವರ ಪ್ರೇಯಸಿಗೆ ಅನೇಕ ಪುಸ್ತಕಗಳು ಕಾಣಿಸುತ್ತವೆ. ಆ ಪೈಕಿ ಒಂದು ಪುಸ್ತಕವನ್ನು ಕೈಗೆತ್ತಿಕೊಂಡು ಇದು ಏನು ಅಂತ ಆಕೆ ಪ್ರಶ್ನಿಸುತ್ತಾಳೆ. ಇದು ಭಗವದ್ಗೀತೆ ಎಂದು ಆಪನ್‌ಹೈಮರ್ ಹೇಳುತ್ತಾರೆ ಮತ್ತು ಅದರಲ್ಲಿನ ಒಂದೆರಡು ಸಾಲುಗಳನ್ನು ವಿವರಿಸುತ್ತಾರೆ. ಇಂಥ ದೃಶ್ಯಕ್ಕೆ ಭಾರತದಲ್ಲಿ ಸೆನ್ಸಾರ್ ಮಂಡಳಿಯವರು ಹೇಗೆ ಅನುಮತಿ ನೀಡಿದರು. ಇದು ಹಿಂದೂ ಧರ್ಮದ ಮೇಲೆ ಮಾಡಲಾಗಿರುವ ದಾಳಿ ಎಂದು ಅಸಮಾಧಾನ ಹೊರ ಹಾಕಿದ್ದಾರೆ. ‘ಸೇವ್ ಕಲ್ಚರ್ ಸೇವ್ ಇಂಡಿಯಾ ಪ್ರತಿಷ್ಠಾನ’ದ ಕಡೆಯಿಂದ ಉದಯ್ ಮಹುರ್ಕರ್ ನಿರ್ದೇಶಕ ಕ್ರಿಸ್ಟೋಫರ್‌ಗೆ ಪತ್ರ ಬರೆದಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. ಸಿನಿಮಾದಿಂದ ಆ ದೃಶ್ಯ ತೆಗೆಯುವಂತೆ ಹೇಳಿದ್ದಾರೆ. ಈ ಬಗ್ಗೆ ಚಿತ್ರತಂಡದ ಕಡೆಯಿಂದ ಇನ್ನೂ ರೆಸ್ಪಾನ್ಸ್ ಬಂದಿಲ್ಲ. ಮುಂದೆ ಏನೆಲ್ಲಾ ಬೆಳವಣಿಗೆ ಆಗಬಹುದು ಕಾಯಬೇಕಿದೆ.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]