Tag: ಕಾಂತರಾಜು

  • ಮುಡಾಸ್ತ್ರಕ್ಕೆ ಜಾತಿ ಜನಗಣತಿ ಪ್ರತ್ಯಾಸ್ತ್ರ ಬಿಟ್ಟ ಸಿಎಂ – ಕಾಂಗ್ರೆಸ್‌ನಲ್ಲಿ ಮತ್ತೆ ಪರ-ವಿರೋಧಕ್ಕೆ ವೇದಿಕೆ ಸಜ್ಜು

    ಮುಡಾಸ್ತ್ರಕ್ಕೆ ಜಾತಿ ಜನಗಣತಿ ಪ್ರತ್ಯಾಸ್ತ್ರ ಬಿಟ್ಟ ಸಿಎಂ – ಕಾಂಗ್ರೆಸ್‌ನಲ್ಲಿ ಮತ್ತೆ ಪರ-ವಿರೋಧಕ್ಕೆ ವೇದಿಕೆ ಸಜ್ಜು

    – ಮುಡಾ ತನಿಖೆ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ ಮುನ್ನೆಲೆಗೆ ಬಂದ ಜಾತಿಗಣತಿ ವರದಿ
    – ಮುಂದಿನ ವಾರ ನಡೆಯಲಿರುವ ಕ್ಯಾಬಿನೆಟ್‌ ಸಭೆಯಲ್ಲಿ ಚರ್ಚೆ ಸಾಧ್ಯತೆ

    ಬೆಂಗಳೂರು: ಮುಡಾ (MUDA) ಬಿಕ್ಕಟ್ಟಿನ ನಡುವೆಯೇ ಜಾತಿ ಜನಗಣತಿ (Caste Census) ವರದಿಯನ್ನು ಜಾರಿ ಮಾಡಲು ಒತ್ತಡ ಹೆಚ್ಚಾಗಿದ್ದು ಮತ್ತೆ ಕಾಂಗ್ರೆಸ್‌ನಲ್ಲಿ (Congress) ಪರ-ವಿರೋಧಕ್ಕೆ ವೇದಿಕೆ ಸಜ್ಜಾಗಿದೆ.

    ಸೋಮವಾರದಿಂದ ಜಾತಿ ಜನಗಣತಿ ಅಭಿಯಾನಕ್ಕೆ ಕಾಂಗ್ರೆಸ್‌ನ ಕೆಲ ಶಾಸಕರಿಂದಲೇ ಅಧಿಕೃತ ಚಾಲನೆ ಸಿಗುವ ಸಾಧ್ಯತೆಯಿದೆ. ಜಾತಿ ಜನಗಣತಿಗೆ ಬೇರೆ ಸಮುದಾಯದ ಸ್ವಪಕ್ಷೀಯ ನಾಯಕರ ವಿರೋಧ ವ್ಯಕ್ತವಾದರೂ ಹೈಕಮಾಂಡ್ ಮಧ್ಯಸ್ಥಿಕೆ ಮೂಲಕ ಸಮಾಧಾನ ಪಡಿಸುವ ಲೆಕ್ಕಾಚಾರವನ್ನು ಸಿಎಂ ಹಾಕಿದ್ದಾರೆ. ಅಷ್ಟೇ ಅಲ್ಲದೇ ಡಿಸೆಂಬರ್ ಅಧಿವೇಶನದಲ್ಲಿ ಮಾಸ್ಟರ್ ಸ್ಟ್ರೋಕ್‌ ನೀಡಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ.

    ಅಕ್ಟೋಬರ್ 10 ರಂದು ರಾಜ್ಯ ಸಚಿವ ಸಂಪುಟ ಸಭೆ ನಡೆಯುವ ಸಾಧ್ಯತೆಯಿದ್ದು, ಈ ಸಭೆಯಲ್ಲಿ ಕಾಂತರಾಜು ವರದಿ (Kantharaju Report) ಬಗ್ಗೆ ಚರ್ಚೆಗೆ ಸಿಎಂ ಸಿದ್ದರಾಮಯ್ಯ (CM Siddaramaiah) ಮುಂದಾಗಿದ್ದಾರೆ ಎನ್ನಲಾಗಿದೆ.

    ಕಳೆದ ಫೆಬ್ರವರಿಯಲ್ಲಿ ಮಾಜಿ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರು ಸರ್ಕಾರಕ್ಕೆ ಅಂತಿಮ ವರದಿಯನ್ನು ಸಲ್ಲಿಕೆ ಮಾಡಿದ್ದರು. ಆದರೆ ಈವರೆಗೂ ಸಂಪುಟದಲ್ಲಿ ವರದಿ ಕುರಿತು ಸರ್ಕಾರ ಚರ್ಚೆ ನಡೆಸಿರಲಿಲ್ಲ. ಈಗ ಮುಡಾ ಕಾನೂನು ಕಂಟಕ ವೇಳೆ ಜಾತಿ ಜನಗಣತಿ ವರದಿ ಮೇಲೆ ಸಿಎಂ ಕಣ್ಣಿಟ್ಟಿದ್ದಾರೆ.

    ವರದಿ ಜಾರಿ ಕುರಿತು ಸಿಎಂ ಹೇಳಿಕೆ ಬಳಿಕ ಪಕ್ಷದೊಳಗೆ ಮತ್ತು ಹೊರಗೆ ಪರ ವಿರೋಧ ಚರ್ಚೆ ಆರಂಭವಾಗಿದೆ. ಅಹಿಂದ ವರ್ಗಗಳ ಕೈ ನಾಯಕರು ಆದಷ್ಟು ಬೇಗ ವರದಿ ಜಾತಿಗೆ ಒತ್ತಾಯಿಸುತ್ತಿದ್ದಾರೆ. ಆದರೆ ಸಿಎಂ ಮತ್ತು ಅಹಿಂದ ನಾಯಕರ ಆತುರಕ್ಕೆ ಮೇಲ್ವರ್ಗದ ನಾಯಕರ ಬೇಸರ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಸಂಪುಟ ಸಭೆಯಲ್ಲಿ ವರದಿ ಜಾರಿಯ ಬಗ್ಗೆ ಸಚಿವರ ಅಭಿಪ್ರಾಯವನ್ನು ಸಿಎಂ ಪಡೆಯಲಿದ್ದಾರೆ.

    ಜಾತಿ ಜನಗಣತಿ ವರದಿ ಜಾರಿ ಸಂಬಂಧ ಸಿಎಂ ಸಂಪುಟ ಉಪಸಮಿತಿ ರಚನೆ ಮಾಡುವ ಸಾಧ್ಯತೆಯಿದೆ. ವರದಿ ಜಾರಿಯ ಸಾಧಕ ಬಾಧಕ ಬಗ್ಗೆ ಗಡುವಿನೊಳಗೆ ಸಂಪುಟ ಉಪಸಮಿತಿ ವರದಿ ಪಡೆಯಲು ಚಿಂತನೆ ನಡೆದಿದೆ ಎನ್ನಲಾಗುತ್ತಿದೆ.

    ಈಗಾಗಲೇ ಜಾತಿ ಗಣತಿ ವಿಚಾರದಲ್ಲಿ ಎಚ್ಚರಿಕೆ ಹೆಜ್ಜೆ ಇಡುವಂತೆ ಈಗಾಗಲೇ ಮಾಜಿ ಸಂಸದ ಡಿಕೆ ಸುರೇಶ್‌ ಅಪಸ್ವರ ಎತ್ತಿದ್ದಾರೆ. ಅಗತ್ಯ ಮಾನದಂಡ ಬಳಸಿ ಸಮೀಕ್ಷೆ ಮಾಡಿದರೆ ಯಾವುದೇ ಗೊಂದಲ ಇರುವುದಿಲ್ಲ. ಹೀಗಾಗಿ ಕೇಂದ್ರದ ಜನಗಣತಿವರೆಗೂ ಕಾಯುವುದು ಉತ್ತಮ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ಈಗಾಗಲೇ ಜಾತಿ ಜನಗಣತಿ ಜಾರಿ ಮಾಡಬೇಕೆಂದು ಹಲವು ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆದಿದೆ. ಹೀಗಾಗಿ ಸಂಪುಟ ಸಭೆ ನಂತರ ಕಾಂಗ್ರೆಸ್ ಒಳಗಡೆಯೇ ಜಾತಿ ಜನಗಣತಿ ಕಿಚ್ಚು ಹೆಚ್ಚಾಗುವ ನಿರೀಕ್ಷೆಯಿದೆ.

    ಏನಿದು ಕಾಂತರಾಜು ವರದಿ?
    2013-18ರ ಐದು ವರ್ಷದ ಅವಧಿಯಲ್ಲಿ ಅಧಿಕಾರದಲ್ಲಿದ್ದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯದ ಎಲ್ಲ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಯನ್ನು ಅರಿಯಲು 158.47 ಕೋಟಿ ರೂ. ವೆಚ್ಚದಲ್ಲಿ ಹೆಚ್‌. ಕಾಂತರಾಜ (Kantharaju) ನೇತೃತ್ವದ ಹಿಂದುಳಿದ ವರ್ಗಗಳ ಆಯೋಗ ರಚಿಸಿತ್ತು. ಈ ಆಯೋಗ 2015ರಲ್ಲಿ ಸಮೀಕ್ಷೆ (Socio-Economic Survey) ನಡೆಸಿತ್ತು. ಈ ಆಯೋಗದ ಅವಧಿ ಮುಕ್ತಾಯದ ಸಂದರ್ಭದಲ್ಲಿ ವರದಿಯನ್ನು ಅಧಿಕೃತವಾಗಿ ಸರ್ಕಾರಕ್ಕೆ ಸಲ್ಲಿಸಿರಲಿಲ್ಲ.

    ಈ ಫೆಬ್ರವರಿಯಲ್ಲಿ ಜಯಪ್ರಕಾಶ್‌ ಹೆಗ್ಡೆ (Jayaprakash Hegde) ಅಧ್ಯಕ್ಷತೆಯ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ವಿವಿಧ ವಿಷಯಕ್ಕೆ ಸಂಬಂಧಿಸಿದ ಟಿಪ್ಪಣಿಗಳೊಂದಿಗೆ 2015ರ ಸಮೀಕ್ಷಾ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಲ್ಲಿಸಿತ್ತು.

     

    ಜಾತಿ ಗಣತಿ ಉದ್ದೇಶ ಏನಿತ್ತು?
    1931ರ ಜನಗಣತಿಯ ನಂತರ ಯಾವುದೇ ಜನಗಣತಿ ದಾಖಲೆಗಳಿಂದ ಜಾತಿ / ಸಮುದಾಯವಾರು ಜನಸಂಖ್ಯೆಯ ಅಂಕಿ-ಅಂಶಗಳು ಖಚಿತವಾಗಿ ದೊರೆಯುತ್ತಿಲ್ಲ. ಜಾತಿವಾರು ಜನಗಣತಿ ಅಂಕಿ-ಅಂಶಗಳು ಲಭ್ಯವಿಲ್ಲದೇ ಇರುವುದರಿಂದ ಕಾರ್ಯಕ್ರಮಗಳ ಮುಖಾಂತರ ಸೌಲಭ್ಯಗಳನ್ನು ಸಾಮಾಜಿಕ ನ್ಯಾಯ ತತ್ವದ ಆಧಾರದ ಮೇಲೆ ಒದಗಿಸುವುದು ಸರ್ಕಾರಕ್ಕೆ ಕಷ್ಟವಾಗುತ್ತಿತ್ತು.

    ಸಮುದಾಯಗಳ ಈಗಿರುವ ಸ್ಥಿತಿಗಳಿಗೆ ಸಂಬಂಧಿಸಿದಂತೆ ವೈಜ್ಞಾನಿಕವಾದ ವಿಶ್ಲೇಷಣೆ ನಡೆಸುವುದು, ಜನಸಂಖ್ಯೆಯ ಪ್ರಮಾಣವನ್ನು ತಿಳಿಯುವುದು ಅಗತ್ಯವಾಗಿದೆ ಎಂಬ ಉದ್ದೇಶಕ್ಕಾಗಿ ಆಗಿನ ಸಿದ್ದರಾಮಯ್ಯ ಸರ್ಕಾರ ಸಮೀಕ್ಷೆಗೆ ಆದೇಶಿಸಿತ್ತು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ಜಾತಿಗಳು ಹಾಗೂ ಇತರ ಜಾತಿಗಳನ್ನೊಳಗೊಂಡಂತೆ ರಾಜ್ಯದ ಪ್ರತಿಯೊಂದು ಕುಟುಂಬದ ಸಮಗ್ರ ಸಮೀಕ್ಷೆಯನ್ನು ಕೈಗೊಂಡು ವಿವಿಧ ಜಾತಿಗಳ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸ್ಥಿತಿಗತಿಗಳ ಬಗ್ಗೆ ವಿಶ್ಲೇಷಣೆ ಮಾಡಿ, ಹಿಂದುಳಿದ ವರ್ಗಗಳ ಪಟ್ಟಿಯನ್ನು ಪರಿಷ್ಕರಿಸುವ ಕುರಿತು ಸರ್ಕಾರಕ್ಕೆ ಶಿಫಾರಸ್ಸು ಮಾಡುವ ಜವಾಬ್ದಾರಿಯನ್ನು ಆಯೋಗಕ್ಕೆ ‌ನೀಡಲಾಗಿತ್ತು. ರಾಜ್ಯದ ಎಲ್ಲ ವರ್ಗಗಳ / ಜಾತಿಗಳ ಸಾಮಾಜಿಕ, ಶೈಕ್ಷಣಿಕ ಮತ್ತು ಔದ್ಯೋಗಿಕ ಸ್ಥಿತಿಗತಿಗಳ ಕುರಿತು ಸಮೀಕ್ಷೆ ಮುಖಾಂತರ ಸಮಗ್ರ ಅಂಕಿ-ಅಂಶಗಳನ್ನು ಸಂಗ್ರಹಣೆಗೆ ಸೂಚಿಸಲಾಗಿತ್ತು.

     

  • ನಮ್ಮ ವರದಿ ನೈಜವಾಗಿ, ವೈಜ್ಞಾನಿಕವಾಗಿದೆ: ಕಾಂತರಾಜು

    ನಮ್ಮ ವರದಿ ನೈಜವಾಗಿ, ವೈಜ್ಞಾನಿಕವಾಗಿದೆ: ಕಾಂತರಾಜು

    ಬೆಂಗಳೂರು: ನಾನು ಕೊಟ್ಟಿರೋ ವರದಿ ನೈಜವಾಗಿದೆ ಮತ್ತು ವೈಜ್ಞಾನಿಕವಾಗಿದೆ ಎಂದು ಜಾತಿಗಣತಿ ಸಿದ್ಧ ಮಾಡಿದ್ದ ಆಯೋಗದ ಅಧ್ಯಕ್ಷ ಕಾಂತರಾಜು ಸ್ಪಷ್ಟಪಡಿಸಿದ್ದಾರೆ.

    ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾನು ಕೊಟ್ಟ ವರದಿ ನೈಜವಾಗಿ ಇದೆ. ವೈಜ್ಞಾನಿಕವಾಗಿ ಇದೆ. ವರದಿ ನೋಡದೇ ವರದಿ ಅವೈಜ್ಞಾನಿಕ ಅನ್ನೋದು ಸರಿಯಲ್ಲ ಎಂದು ವಿರೋಧಿಗಳಿಗೆ ತಿರುಗೇಟು ಕೊಟ್ಟಿದ್ದಾರೆ.

    40 ದಿನ ಮನೆ ಮನೆಗೆ ಹೋಗಿ ಸಮೀಕ್ಷೆ ಮಾಡಲಾಗಿದೆ. ಪ್ರತಿಯೊಬ್ಬರಿಗೂ ಜಾತಿ, ಲಿಂಗ, ಧರ್ಮ, ಅಸ್ತಿ-ಪಾಸ್ತಿ ಎಲ್ಲವೂ ಸೇರಿ ‌ಗಣತಿ ವೇಳೆ 55 ಪ್ರಶ್ನೆ ಕೇಳಿದ್ದೇವೆ. 40 ದಿನ ಸಮೀಕ್ಷೆ ಆದ ಮೇಲೆ ಕೂಲಂಕಷವಾಗಿ ಅಂಕಿಅಂಶಗಳ ಸಮೇತ ವರದಿ ಸಿದ್ಧ ಮಾಡಲಾಗಿದೆ. ವರದಿ ಈಗ ಸರ್ಕಾರದ ಆಸ್ತಿ. ಸರ್ಕಾರ ವರದಿ ನೋಡಿದ ಬಳಿಕ ಮುಂದಿನ ತೀರ್ಮಾನ ಮಾಡಲಿ ಎಂದಿದ್ದಾರೆ.

    ವರದಿಗೆ ಒಕ್ಕಲಿಗರು, ಲಿಂಗಾಯತರು ವಿರೋಧ ವಿಚಾರಕ್ಕೆ ಮಾತನಾಡಿದ ಅವರು, ಎರಡು ಸಮುದಾಯಗಳು ವಿರೋಧ ಮಾಡಬಹುದು‌. ಆದರೆ ವರದಿ ಮೊದಲು ನೋಡಲಿ. ಆಮೇಲೆ ಅದು ಸರಿಯಿಲ್ಲ ಎಂದರೆ ವಿರೋಧ ಮಾಡಲಿ. ವರದಿ ನೋಡಿ ಅದರಲ್ಲಿ ಏನಾದರು ತಪ್ಪು ಇದ್ದರೆ ನಾನು ಒಪ್ಪಿಕೊಳ್ತೀನಿ. ಆಯೋಗದಲ್ಲಿ ಕಷ್ಟ ಪಟ್ಟು ವರದಿ ಮಾಡೋ ಕೆಲಸ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.

    ವರದಿಗೆ ಕಾರ್ಯದರ್ಶಿ ಸಹಿ ಇಲ್ಲ ಅನ್ನೋ ಆರೋಪಕ್ಕೆ ‌ಪ್ರತಿಕ್ರಿಯೆ ನೀಡಿದ ಅವರು, ವರದಿಗೆ ಕಾರ್ಯದರ್ಶಿ ಸಹಿ ಇಲ್ಲ ಅನ್ನೋದು ಸರಿಯಲ್ಲ. ವರದಿಯಲ್ಲಿ ತುಂಬಾ ವಾಲ್ಯೂಮ್‌ಗಳು ಇವೆ. ಆದರೆ ಒಂದು ವಾಲ್ಯೂಮ್‌ಗೆ ಕಾರ್ಯದರ್ಶಿ ಸಹಿ ಹಾಕಿಲ್ಲ ಅಷ್ಟೆ ಎಂದು ಸ್ಪಷ್ಟನೆ ನೀಡಿದ್ದಾರೆ.

    ಮೂಲ ಪ್ರತಿ ಕಾಣೆ ಆಗಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಮೂಲ ಪ್ರತಿ ಕಾಣೆಯಾಗಿದೆ ಅನ್ನೋದು ನನಗೆ ಗೊತ್ತಿಲ್ಲ. ನಾನು ವರದಿ ಕೊಟ್ಟಿದ್ದು 2019ರಲ್ಲಿ. ನಾನು ಇದ್ದಾಗ ಮೂಲ ಪ್ರತಿ ಇತ್ತು. ಈಗ ಇಲ್ಲ ಅನ್ನೋದು ನನಗೆ ಗೊತ್ತಿಲ್ಲ. ಈಗ ನಾನು ಹೊರಗೆ ಇದ್ದು ಮಾತಾಡೋದು‌ ಸರಿಯಲ್ಲ ಎಂದಿದ್ದಾರೆ.

    ಇದು ಜಾತಿಗಣತಿ ಅಲ್ಲ. ಇದು ಸಾಮಾಜಿಕ ಮತ್ತು ಶೈಕ್ಷಣಿಕ ವರದಿ ಅಂತ ಸ್ಪಷ್ಟಪಡಿಸಿದರು. ಹಲವು ಸಚಿವರು ವರದಿ ರಿಜೆಕ್ಟ್ ಮಾಡಬೇಕು ಎಂಬ ಪತ್ರ ಸಹಿ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಾನು ವರದಿ ಕೊಟ್ಟಿದ್ದೇನೆ. ಯಾರು ಬೇಕಾದ್ರು ಅಭಿಪ್ರಾಯ ಹೇಳಬಹುದು. ರಿಜೆಕ್ಟ್ ಮಾಡಿ ಅಂತ ಹೇಳಬಹುದು. ಆದರೆ ಮೊದಲು ವರದಿ ನೋಡಲಿ, ಆಮೇಲೆ ಯಾರು ಏನು ಬೇಕಾದ್ರು ಹೇಳಲಿ. ವರದಿ ನೋಡದೇ ಸರಿಯಿಲ್ಲ ಅನ್ನೋದು‌ ಸರಿಯಲ್ಲ ಎಂದು ತಿರುಗೇಟು ನೀಡಿದ್ದಾರೆ.

    ಕುಮಾರಸ್ವಾಮಿ ಅವಧಿಯಲ್ಲಿ ವರದಿ ಸ್ವೀಕಾರ ಮಾಡಲಿಲ್ಲವಾ ಎಂಬ ವಿಚಾರಕ್ಕೆ, ಕುಮಾರಸ್ವಾಮಿಗೆ ಅಪಾಯಿಂಟ್‌ಮೆಂಟ್ ಕೇಳಿದ್ವಿ. ಆದರೆ ಅವರು ಸಮಯ ಕೊಡಲಿಲ್ಲ ಅಂತ ತಿಳಿಸಿದರು. ಹಿಂದುಳಿದ ವರ್ಗಗಳ ಗಮನದಲ್ಲಿಟ್ಟುಕೊಂಡು ಈ ಸಮೀಕ್ಷೆ ನಡೆಸಲಾಗಿದೆ. ಇದು ಕಾಂತರಾಜು ವರದಿನಾ? ಜಯಪ್ರಕಾಶ್ ಹೆಗ್ಡೆ ವರದಿನಾ ಎಂಬ ಪ್ರಶ್ನೆಗೆ ವರದಿ ಕೊಟ್ಟಿದ್ದು, ಸಮೀಕ್ಷೆ ಮಾಡಿದ್ದು ನಾವು. ಈಗ ಸರ್ಕಾರ ಏನಾದ್ರು ತೀರ್ಮಾನ ಮಾಡಬಹುದು. ಆದರೆ ನಾವು ಮಾಡಿದ ಕೆಲಸಕ್ಕೆ ಅವರ ವರದಿ ಅಂತ‌ ಹೇಳೋಕೆ ಹೇಗೆ ಸಾಧ್ಯ. ಜನರು ಕೇಳೋ ಅನುಮಾನಗಳಿಗೆ ಈಗಿನ ಅಧ್ಯಕ್ಷರು ಹೇಗೆ ಉತ್ತರ ಕೊಡೋಕೆ ಸಾಧ್ಯ. ಈಗ ವರದಿ ಅವರು ರೆಡಿ ಮಾಡಿದ್ರೆ ನಾವು ಹೇಗೆ ಉತ್ತರ ಕೊಡೋಕೆ ಸಾಧ್ಯ. ಪರೋಕ್ಷವಾಗಿ ಕಾಂತರಾಜು ವರದಿ ಹೆಸರಿನಲ್ಲಿ ಇರಬೇಕು ಅಂತ ತಿಳಿಸಿದ್ದಾರೆ.

  • ಕಾಂತರಾಜು ವರದಿ ಸರ್ಕಾರ ಸ್ವೀಕಾರ ಮಾಡುತ್ತದೆ: ಶಿವರಾಜ್ ತಂಗಡಗಿ

    ಕಾಂತರಾಜು ವರದಿ ಸರ್ಕಾರ ಸ್ವೀಕಾರ ಮಾಡುತ್ತದೆ: ಶಿವರಾಜ್ ತಂಗಡಗಿ

    ಬೆಂಗಳೂರು: ಸಿಎಂ ಸಿದ್ದರಾಮಯ್ಯ ಹೇಳಿದಂತೆ ಕಾಂತರಾಜು ವರದಿಯನ್ನು (Kantharaju Report) ಸರ್ಕಾರ ಸ್ವೀಕಾರ ಮಾಡಲಿದೆ ಎಂದು ಹಿಂದುಳಿದ ವರ್ಗಗಳ ಸಚಿವ ಶಿವರಾಜ್ ತಂಗಡಗಿ (Shivaraj Tangadagi) ತಿಳಿಸಿದ್ದಾರೆ.

    ವಿಕಾಸಸೌಧದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ (Siddaramaiah) ಅವರು ಈಗಾಗಲೇ ವರದಿ ಸ್ವೀಕಾರ ಮಾಡುತ್ತೇವೆ ಎಂದು ಹೇಳಿದ್ದಾರೆ. ಅವರು ಹೇಳಿದ ಮೇಲೆ ನಾನು ಹೇಳುವುದು ಏನು ಇಲ್ಲ. ಇಲಾಖೆ ಸಚಿವನಾಗಿ ವರದಿ ಸ್ವೀಕಾರ ಮಾಡುತ್ತೇನೆ ಎಂದರು.

     

    ಕಾಂತರಾಜು ವರದಿಯನ್ನು ಸ್ವೀಕಾರ ಮಾಡದಂತೆ ಡಿಸಿಎಂ ಡಿಕೆ ಶಿವಕುಮಾರ್ (DCM DK Shivakumar) ಪತ್ರ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ‌ ಅವರು, ಇಲ್ಲಿವರೆಗೂ ಯಾವುದೇ ಪತ್ರ ಬಂದಿಲ್ಲ. ಶಿವಕುಮಾರ್ ಅವರು ಬರೆದಿದ್ದರೂ ನನಗೆ ಅ ಪತ್ರ ತಲುಪಿಲ್ಲ. ಪತ್ರ ಬಂದ ಮೇಲೆ ಸಿಎಂ, ಡಿಸಿಎಂ ಜೊತೆ ಮಾತನಾಡಿ ಮುಂದಿನ ತೀರ್ಮಾನ ಮಾಡುತ್ತೇನೆ. ಅಧಿಕೃತವಾಗಿ ಪತ್ರ ನನಗೆ ಬಂದಿಲ್ಲ.ಪತ್ರ ಬಂದ ಮೇಲೆ ಡಿಸಿಎಂ ಜೊತೆಗೂ ಮಾತನಾಡಿ ಅವರ ಬಳಿ ಮಾಹಿತಿ ಪಡೆಯುತ್ತೇನೆ ಎಂದರು.

    ಕಾಂತರಾಜು ವರದಿ ಇನ್ನು‌ ಸ್ವೀಕಾರ ಆಗಿಲ್ಲ. ಅದರಲ್ಲಿ ಏನಿದೆಯೋ ನನಗೂ‌ ಗೊತ್ತಿಲ್ಲ. ಸಿದ್ದರಾಮಯ್ಯ ಸರ್ಕಾರ ಜನಗಣತಿ ಮಾಡಿತ್ತು. ಆರ್ಥಿಕವಾಗಿ,ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಮಾಹಿತಿ ಅರಿಯಲು ಸಮೀಕ್ಷೆ ಮಾಡಲಾಗಿತ್ತು. ಸಿದ್ದರಾಮಯ್ಯ ಅವರು ಈಗಾಗಲೇ ವರದಿ ಸ್ವೀಕಾರ ಮಾಡುತ್ತೇವೆ ಅಂತ ಹೇಳಿದ್ದಾರೆ. ಅದನ್ನು ಸ್ವೀಕಾರ ಮಾಡಿ ಅಧ್ಯಯನ ಮಾಡಿದ ಮೇಲೆ ಅದರ ವಾಸ್ತವ ತಿಳಿಯುತ್ತದೆ. ನಾನು ಇಲಾಖೆ ಮಂತ್ರಿ ಮಾತ್ರ. ಅಂತಿಮವಾಗಿ ಸಿಎಂ, ಡಿಸಿಎಂ ನಿರ್ಧಾರ ಮಾಡುತ್ತಾರೆ ಎಂದು ಹೇಳಿದರು. ಇದನ್ನೂ ಓದಿ: ಅಂದು ಗರ್ಭಿಣಿ, ಇದೀಗ ಮದುವೆ: ಸಾಯಿ ಪಲ್ಲವಿ ಫೋಟೋ ವೈರಲ್ 

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]