Tag: ಕಾಂತಾರ ಸಿನಿಮಾ

  • ಕಾಂತಾರ ಸಕ್ಸಸ್‌ – ದೈವಾರಾಧನೆಯಲ್ಲಿ ಎಲ್ಲೂ ತಪ್ಪಾಗಿಲ್ಲ, ನಾನೇನು ಹೊಸಬನಲ್ಲ: ರಿಷಬ್‌ ಶೆಟ್ಟಿ

    ಕಾಂತಾರ ಸಕ್ಸಸ್‌ – ದೈವಾರಾಧನೆಯಲ್ಲಿ ಎಲ್ಲೂ ತಪ್ಪಾಗಿಲ್ಲ, ನಾನೇನು ಹೊಸಬನಲ್ಲ: ರಿಷಬ್‌ ಶೆಟ್ಟಿ

    – ಕಾಂತಾರ ನೆಕ್ಸ್ಟ್‌ ಚಾಪ್ಟರ್ ಬಗ್ಗೆ ರಿಷಭ್‌ ಹೇಳಿದ್ದೇನು?; ಮುಂದಿನ ಸಿನಿಮಾ ಯಾವುದು?

    ಕಾಂತಾರ ಚಾಪ್ಟರ್‌-1 (Kantara Chapter 1) ಸಕ್ಸಸ್‌ ಬೆನ್ನಲ್ಲೇ ನಟ ರಿಷಬ್‌ ಶೆಟ್ಟಿ (Rishab Shetty) ಅವರಿಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದರು. ತಾಯಿ ಚಾಮುಂಡಿ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು.

    ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಲವು ಪ್ರಶ್ನೆಗಳಿಗೆ ಉತ್ತರ ನೀಡಿದರು. ನಾನು ದೈವವನ್ನ ನಂಬುವಂತವನು. ದೈವದ ಅನುಮತಿ ಪಡೆದೇ ಸಿನಿಮಾ ಮಾಡಿದ್ದೇನೆ. ನಾಡಿನ ಜನತೆಯಿಂದ ಅದ್ಭುತ ಯಶಸ್ಸು ಸಿಕ್ಕಿದೆ ಎಂದರಲ್ಲದೇ ಗಳಿಕೆಯ ಬಗ್ಗೆ ನಾನು ಮಾತನಾಡುವುದಿಲ್ಲ. ಕನ್ನಡಿಗರಿಗೆ ಧನ್ಯವಾದಗಳನ್ನ ತಿಳಿಸುತ್ತೇನೆ. ನಾನು ಸಿನಿಮಾ ಡೈರೆಕ್ಟರ್ ಅಷ್ಟೇ. ಲೆಕ್ಕದ ವಿಚಾರದಲ್ಲಿ ನಾನಿಲ್ಲ. ವಿಜಯ ಕಿರಗಂದೂರು ಅವರಿಗೆ ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಹೇಳಿದರು.

    ದೈವಾರಾಧಕರ ವಿರೋಧಕ್ಕೆ ರಿಷಬ್‌ ಖಡಕ್‌ ಉತ್ತರ
    ಇನ್ನೂ ದೈವರಾದಕರು (Daivaradhakas) ಸಿನಿಮಾ ಬಗ್ಗೆ ವಿರೋಧ ಎತ್ತಿರುವ ಕುರಿತ ಪ್ರಶ್ನೆಗೆ, ತಾಯಿ ಚಾಮುಂಡೇಶ್ವರಿ ಆಶೀರ್ವಾದ ಪಡೆದುಕೊಂಡಿದ್ದೇನೆ. ದೈವ ದೇವರ ವಿಚಾರಗಳನ್ನ ಸಿನಿಮಾದಲ್ಲಿ ಮಾತ್ರ ಮಾತನಾಡುತ್ತೇನೆ. ಯಾರು ಏನು ಬೇಕಾದರೂ ಮಾತನಾಡಲಿ. ಅದರ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಇಡೀ ತಂಡದ ಮೇಲೆ ದೈವದ ಆಶೀರ್ವಾದ ಇದೆ. ನಾನು ದೈವವನ್ನ ನಂಬುತ್ತೇನೆ ಆರಾಧನೆ ಮಾಡುತ್ತೇನೆ. ಎಲ್ಲಿಯೂ ತಪ್ಪುಗಳು ಆಗದಂತೆ ಹಿರಿಯರ ಮಾರ್ಗದರ್ಶನ ಪಡೆದು ಸಿನಿಮಾ ಮಾಡಿದ್ದೇನೆ. ನಾನು ಹೊಸಬನಲ್ಲ, ದೈವದ ಸಿನಿಮಾ ಮಾಡುವವರು ಸರಿಯಾದ ರೀತಿಯಲ್ಲಿ ಸಿನಿಮಾ ಮಾಡಬೇಕು. ಕುಂದಾಪುರದ ಕೆರಾಡಿ ಗ್ರಾಮದಿಂದ‌ ಬಂದು ಜನರಿಗೆ ರೀಚ್ ಆಗುವ ರೀತಿ ಸಿನಿಮಾ ಮಾಡುತ್ತಿದ್ದೇನೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಕನ್ನಡ ಸಿನಿಮಾಗೆ ಒಳ್ಳೆಯ ಹೆಸರು ಬಂದಿದೆ. ಇದರಿಂದ ತುಂಬಾ ಖುಷಿಯಾಗಿದೆ ಎಂದ ರಿಷಬ್, ಕಾಂತಾರ ನೆಕ್ಸ್ಟ್‌ ಚಾಪ್ಟರ್ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ ಎಂದರು.

    ನನ್ನ ಮುಂದಿನ ಚಿತ್ರ ʻಜೈ ಹನುಮಾನ್‌ʼ. ಇದಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದೇನೆ ಎಂದರು. ಇನ್ನೂ ಅಮಿತಾಬಚ್ಚನ್ ಭೇಟಿಯಾದ ಬಗ್ಗೆ ಮಾತನಾಡಿದ ರಿಷಬ್, ಕನ್ನಡದಲ್ಲಿ ಅಣ್ಣಾವ್ರು ಹೇಗೊ ಅದೇ ರೀತಿ ಬಾಲಿವುಡ್‌ನಲ್ಲಿ ಅಮಿತಾಬಚ್ಚನ್. ಅಣ್ಣಾವ್ರು ಯಾವ ರೀತಿ ನೋಡುತ್ತೇವೆ. ಅದೇ ರೀತಿ ಅಮಿತಾಬಚ್ಚನ್ ಅವರನ್ನು ಅಲ್ಲಿಯ ಜನ ನೋಡುತ್ತಾರೆ. ಅವರು ವಿಶೇಷ ವ್ಯಕ್ವಿತ್ವ ಹಂಚಿಕೊಂಡಿದ್ದಾರೆ. ಕಾಂತಾರಕ್ಕೆ ನಾನು ಚಿರ ಖುಣಿಯಾಗಿದ್ದೇನೆ ಎಂತ ಹೇಳಿದ್ದಾರೆ ಎಂದರು.

    ಫ್ಯಾನ್ಸ್‌ ವಾರ್‌ ಬಗ್ಗೆ ರಿಷಬ್‌ ಹೇಳಿದ್ದೇನು?
    ಸಲಹೆ ಕೊಡುವಷ್ಟು ದೊಡ್ಡವನು ನಾನಲ್ಲ. ಎಲ್ಲ ನಟರನ್ನು ಅಭಿಮಾನಿಯಾಗಿ ನೋಡುತ್ತೇನೆ. ಕನ್ನಡ ಚಿತ್ರರಂಗದ ಬಗ್ಗೆ ಎಲ್ಲರೂ ಹೆಮ್ಮೆ ಪಡುವ ಕಾಲ ಬಂದಿದೆ ಎಂದು ಹೇಳಿದರು. ದೈವದ ರೀತಿ ಚಿತ್ರ ಮಂದಿರದ ಮುಂದೆ ನಟನೆ ಮಾಡುತ್ತಿರುವ ವಿಚಾರ ಬಗ್ಗೆಯೂ ಪ್ರತಿಕ್ರಿಯಿಸಿ, ಯಾರು ಕೂಡ ದೈವದ ಅನುಕರಣೆ ಮಾಡಬಾರದು ಎಂದರು.

    ದೈವದ ಅನುಕರಣೆ ಮಾಡಬೇಡಿ
    ಏಕೆಂದ್ರೆ ನಾವು ಕೇವಲ ಸಿನಿಮಾ ಮಾತ್ರ ಮಾಡಿಲ್ಲ, ನಿಜವಾದ ಶ್ತದ್ಧೆ ಭಕ್ತಿಯಿಂದ ಮಾಡಿರುತ್ತೇವೆ. ಜನ ಥಿಯೇಟರ್‌ ಹೊರಗೆ ಈ ರೀತಿ ಕೂಗೋದು ನೋಡಿದ್ರೆ, ಇದರಿಂದ ನನಗೂ ಸಹ ಬೇಜಾರಾಗಿದೆ. ಯಾರೂ ಕೂಡ ಈ ರೀತಿ ದೈವದ ಅನುಕರಣೆ ಮಾಡಬೇಡಿ. ಇದರಿಂದ ಬೇಸರವಾಗುತ್ತೆ ಎಂದು ಹೇಳಿದರು. ಲೆಕ್ಕಚಾರದ ವಿಚಾರವಾಗಿ ನಾನು ಮಾತನಾಡುವುದಿಲ್ಲ ಎಂದು ತಿಳಿಸಿದರು.

  • `ಕಾಂತಾರ’ ಮೆಚ್ಚಿದ ಅಟ್ಲಿ – ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ನೆನೆದ ಖ್ಯಾತ ನಿರ್ದೇಶಕ

    `ಕಾಂತಾರ’ ಮೆಚ್ಚಿದ ಅಟ್ಲಿ – ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ನೆನೆದ ಖ್ಯಾತ ನಿರ್ದೇಶಕ

    `ಪಿಕಲ್ಬಾಲ್ ಲೀಗ್ ಬೆಂಗಳೂರು ಒಪನ್ 2025’ನಲ್ಲಿ ಅಟ್ಲಿ (Filmmaker Atlee) ಮಾಲಿಕತ್ವದ ಬೆಂಗಳೂರು ಜವಾನ್ಸ್ ತಂಡ ಆಡುತ್ತಿದೆ. ಈ ಕಾರ್ಯಕ್ರಮವನ್ನ ಇಂದು ಬೆಂಗಳೂರಿನ ಪಿಕಲ್ ಬಾಲ್ ಕ್ಲಬ್ ನಲ್ಲಿ ಚಾಲನೆ ನೀಡಲಾಯಿತು. ಕಳೆದ ಬಾರಿ ಭಾರತದ ಮೊಟ್ಟ ಮೊದಲ ಪಿಕಲ್ ಬಾಲ್ ಲೀಗ್ ಅನ್ನು (World Pickleball League) ಕರ್ನಾಟಕ ಸ್ಟೇಟ್ ಪಿಕಲ್ ಬಾಲ್ ಅಸೋಸಿಯೇಷನ್ ಸಾರಥ್ಯದಲ್ಲಿ ಯಶಸ್ವಿಯಾಗಿ ಮಾಡಲಾಗಿತ್ತು. ಇದೀಗ ಎರಡನೇ ಪಿಕಲ್ ಬಾಲ್ ಲೀಗ್ ಆವೃತ್ತಿಗೆ ಚಾಲನೆ ನೀಡಲಾಗಿದೆ. ಅದ್ರಂತೆ ಅಕ್ಟೋಬರ್ 10ರಿಂದ 12ರ ವರೆಗೆ ರೋಚಕ ಪಂದ್ಯಾವಳಿ ನಡೆಯಲಿವೆ.

    ಈ ವಿಚಾರವಾಗಿ ಬೆಂಗಳೂರಿಗೆ ಆಗಮಿಸಿದ ತಮಿಳು ಸಿನಿಮಾರಂಗದ (Tamil Cinema) ಹೆಸರಾಂತ ನಿರ್ದೇಶಕ ಜವಾನ್ ಮೂಲಕ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡಿದ ಅಟ್ಲಿ ಕುಮಾರ್ ಬೆಂಗಳೂರು ಜವಾನ್ಸ್ ಹೆಸರಿನ ತಂಡವನ್ನು ಖರೀದಿ ಮಾಡಿದ್ದಾರೆ. ಕಳೆದ ವರ್ಷ ಐಪಿಎಲ್‌ನಲ್ಲಿ ಆರ್‌ಸಿಬಿ ತಂಡ ಐಪಿಎಲ್ ಟ್ರೋಫಿ ಗೆದ್ದಿತ್ತು. ಬೆಂಗಳೂರು ಜವಾನ್ಸ್ ಕೂಡ ಪಿಕಲ್‌ಬಾಲ್‌ನಲ್ಲಿ ಚಾಂಪಿಯನ್ಸ್ ಆಗಿತ್ತು.

    ಬೆಂಗಳೂರು ಓಪನ್‌ 2025 ವರ್ಲ್ಡ್ ಪಿಕಲ್ ಬಾಲ್ ಲೀಗ ಉದ್ಘಾಟಿಸಿ, ಸ್ಫರ್ಧಾಳುಗಳ ಜತೆ ಸ್ನೇಹಪೂರ್ವಕ ಮ್ಯಾಚ್ ಆಡಿದ ಅಟ್ಲಿ ಕುಮಾರ್, ನಾನು ಆರ್‌ಸಿಬಿ ಫ್ಯಾನ್‌, ಕಳೆದ ಬಾರಿ ಐಪಿಎಲ್‌ ಚಾಂಪಿಯನ್‌ ಆದಂತೆ ನಮ್ಮ ತಂಡ ಬೆಂಗಳೂರು ಜವಾನ್ಸ್ ತಂಡ ಕೂಡ ಗೆದ್ದಿತ್ತು. ಬೆಂಗಳೂರು ಸಿಟಿ ಅಂದ್ರೆ ನಂಗೆ ತುಂಬಾ ಇಷ್ಟ. ಇಲ್ಲಿನ ಸಿನಿಮಾ ನಟರಾದ ಯಶ್, ರಿಷಬ್ ಶೆಟ್ಟಿ ಮುಂತಾದವರ ಜೊತೆಗೆ ನನಗೆ ಉತ್ತಮ ಸ್ನೇಹವಿದೆ. ಎಲ್ಲರೂ ಅದ್ಭುತವಾಗಿ ಕೆಲಸ ಮಾಡ್ತಾ ಇದ್ದಾರೆ.

    ಕಾಂತಾರ ಚಾಪ್ಟರ್‌-01ರ ಬಗ್ಗೆ ಮಾತನಾಡಿದ ಅಟ್ಲಿ ʻಕಾಂತಾರ ನಿಜಕ್ಕೂ ಅದ್ಭುತ ಸಿನಿಮಾʼನಾನು ನೋಡಿ ಬೆರಗಾಗಿದ್ದೇನೆ ಎಂದು ಮೆಚ್ಚಿಗೆ ವ್ಯಕ್ತ ಪಡಿಸಿದ್ದಾರೆ. ಮೂಲತಃ ತಮಿಳು ನಾಡಿನವರಾಗಿದ್ದರು ಅಟ್ಲಿಗೆ ಕುಕ್ಕೆ ಸುಬ್ರಮಣ್ಯ ದೇವಸ್ಥಾನ ಅಂದ್ರೆ ಸಖತ್ ಭಕ್ತಿ ಅಂತೆ. ಆಗಾಗ ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ದರ್ಶನ ಪಡೆಯುತ್ತೀನಿ ಎಂದರು. ʻಜವಾನ್ʼ ಸಿನಿಮಾ ಸೂಪರ್ ಹಿಟ್ ಆದ ಕಾರಣ ನಾನು ಖರೀದಿ ಮಾಡಿರುವ ಪಿಕಲ್ ಬಾಲ್ ತಂಡಕ್ಕೆ ಬೆಂಗಳೂರು ಜವಾನ್ಸ್ ಎಂದು ಹೆಸರಿಟ್ಟಿರುವೆ ಎಂದಿದ್ದಾರೆ.

  • ಉಡುಪಿ | ಕಾಂತಾರ ಚಿತ್ರದ ಕಂಬಳದ ದೃಶ್ಯದಲ್ಲಿ ಕಾಣಿಸಿಕೊಂಡಿದ್ದ ಅಪ್ಪು ಕೋಣ ಇನ್ನಿಲ್ಲ

    ಉಡುಪಿ | ಕಾಂತಾರ ಚಿತ್ರದ ಕಂಬಳದ ದೃಶ್ಯದಲ್ಲಿ ಕಾಣಿಸಿಕೊಂಡಿದ್ದ ಅಪ್ಪು ಕೋಣ ಇನ್ನಿಲ್ಲ

    ಉಡುಪಿ: ಕಾಂತಾರ (Kantara) ಚಿತ್ರದ ಕಂಬಳದ ದೃಶ್ಯದಲ್ಲಿ ರಿಷಬ್ ಶೆಟ್ಟಿ (Rishab Shetty) ಜೊತೆ ಕಾಣಿಸಿಕೊಂಡಿದ್ದ ಅಪ್ಪು ಕೋಣ (Appu Buffalo) ಸಾವನ್ನಪ್ಪಿದೆ.

    ಅಪ್ಪು ಕೋಣವು ಕಾಂತಾರ ಚಿತ್ರದಲ್ಲಿ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಜೊತೆ ತೆರೆಯಲ್ಲಿ ಮಿಂಚಿತ್ತು. ಬೈಂದೂರು ಬೊಳಂಬಳ್ಳಿಯ ಕಂಬಳ ಪ್ರೇಮಿ ಪರಮೇಶ್ವರ ಭಟ್ ಅವರು ಅಪ್ಪು ಕೋಣವನ್ನು ಸಾಕಿದ್ದರು. ಚಿತ್ರೀಕರಣಕ್ಕೆ ಅಪ್ಪು ಮತ್ತು ಕಾಳ ಎನ್ನುವ ಕೋಣಗಳ ಮೂಲಕ ತರಬೇತಿ ನೀಡಲಾಗಿತ್ತು. ಇದನ್ನೂ ಓದಿ: 3.15 ಕೋಟಿ ವಂಚನೆ ಆರೋಪ; ನಟ ಧೃವ ಸರ್ಜಾ ವಿರುದ್ಧ ಎಫ್‌ಐಆರ್

    ಪರಮೇಶ್ವರ ಭಟ್‌ರ ಮಗಳಾದ ಚೈತ್ರಾ ಪರಮೇಶ್ವರ ಭಟ್ ಅವರ ಆರೈಕೆಯಲ್ಲಿ ಅಪ್ಪು ಮತ್ತು ಕಾಳ ಎನ್ನುವ ಕೋಣಗಳು ಬೆಳೆದಿದ್ದವು. ಕರಾವಳಿಯ ಬಹುತೇಕ ಕಂಬಳಗಳಲ್ಲಿ ಭಾಗಿಯಾಗಿ, ಬಹುಮಾನ ಸಂಪಾದಿಸಿದ್ದ ಕೋಣ ಅಪ್ಪು ಇನ್ನಿಲ್ಲ.

  • ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ತುಳು ನಾಡಿದ ದೈವ ನರ್ತನ – ಕಾನೂನು ಸಮರಕ್ಕೆ ಮುಂದಾಗಿರುವ ಕೊಡಗು ದೈವ ನರ್ತಕರ ಸಂಘ

    ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ತುಳು ನಾಡಿದ ದೈವ ನರ್ತನ – ಕಾನೂನು ಸಮರಕ್ಕೆ ಮುಂದಾಗಿರುವ ಕೊಡಗು ದೈವ ನರ್ತಕರ ಸಂಘ

    ಮಡಿಕೇರಿ: ಇಡೀ ಭಾರತೀಯ ಚಿತ್ರರಂಗವೇ ಕನ್ನಡ ಚಿತ್ರರಂಗದತ್ತ ನೋಡುವಂತೆ ಮಾಡಿರುವ ಸಿನಿಮಾ ಅಂದರೆ ಅದು ಕಾಂತಾರ. ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಕಾಂತಾರ ಸಿನಿಮಾ ಕನ್ನಡ ಒಂದೇ ಅಲ್ಲದೇ ಬೇರೆ ಬೇರೆ ಭಾಷೆಗಳಲ್ಲೂ ಬಾಕ್ಸ್‌ ಆಫೀಸ್ ಕೊಳ್ಳೆ ಹೊಡಿದಿದೆ. ಈ ಸಿನಿಮಾ ಮೂಡಿಸಿದ ಜಾಗೃತೆಯಿಂದಾಗಿಯೇ ಕರಾವಳಿ ಭಾಗದ ದೈವ ನರ್ತಕರನ್ನು ಪೂಜ್ಯ ಭಾವನೆಯಿಂದ ಕಾಣುವಂತೆ ಅಗಿದೆ. ಅದ್ರೆ ಇತ್ತೀಚಿನ ದಿನಗಳಲ್ಲಿ ತುಳು ನಾಡಿದ ದೈವ ನರ್ತಕರ ಹಾಗೆ ಕೆಲವರು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ನರ್ತನ ಮಾಡುತ್ತಿರುವುದರಿಂದ ಇದೀಗ ತುಳು ನಾಡಿದ ದೈವ ನರ್ತಕರು ಅಂತವರ ವಿರುದ್ಧ ಕಾನೂನು ಸಮರಕ್ಕೆ ಮುಂದಾಗಿದ್ದಾರೆ.

    ನೂರಾರು ವರ್ಷಗಳ ಸಂಸ್ಕೃತಿ ಪರಂಪರೆಯನ್ನು ಹೊಂದಿರುವ ತುಳು ನಾಡಿನ ದೈವಗಳನ್ನು ತುಳು ನಾಡಿನ‌ ಜನರು ಅತ್ಯಂತ ಭಕ್ತಿ ಭಾವದಿಂದ ಪೂಜೆ ಮಾಡುತ್ತಿದ್ರು. ಅಲ್ಲದೇ ಈ ದೈವಗಳದ ಬಗ್ಗೆ ನಟ-ನಿರ್ದೇಶಕ ರಿಷಬ್ ಶೆಟ್ಟಿ ಕಾಂತರ ಅನ್ನೋ ಸಿನಿಮಾ ಮಾಡಿ ಇಡೀ ಭಾರತೀಯ ಚಿತ್ರರಂಗವೇ ಕನ್ನಡ ಚಿತ್ರರಂಗದತ್ತ ನೋಡುವಂತೆ ಮಾಡಿದ್ರು.‌ ಅಷ್ಟೇ ಅಲ್ಲದೇ ರಾಜ್ಯ ಸರ್ಕಾರದಿಂದ ದೈವ ನರ್ತಕರಿಗೆ ಮಾಸಾಶನ ಕೋಡುವಂತೆ ನಿರ್ಧಾರವು ಮಾಡಿತ್ತು. ಹೀಗಾಗಿ ದೈವ ನರ್ತಕರು ಖುಷಿಯಿಂದಲ್ಲೇ ಇದ್ರು. ಅದ್ರೆ ಇತ್ತೀಚಿನ ದಿನಗಳಲ್ಲಿ ಕಾರಂತ ಸಿನಿಮಾದ ಹಾಡುಗಳನ್ನು ಬಳಸಿಕೊಂಡು ಮಕ್ಕಳು ಯುವಕ ಯುವತಿಯರು ಸಾಂಸ್ಕೃತಿಕ ವೇದಿಕೆಗಳಲ್ಲಿ ದೈವ ನರ್ತನೆ ಮಾಡುತ್ತಿರುವುದು ದೈವ ನರ್ತನ ಮಾಡುವು ಅರಾಧಾಕರಿಗೆ ಸಾಕಷ್ಟು ನೋವು ಉಂಟು ಮಾಡುತ್ತಿದೆ ಎನ್ನಲಾಗಿದೆ.

    ಅಷ್ಟೇ ಅಲ್ಲದೇ ಇದೀಗಾ ದಸರಾ ಹಬ್ಬದ ಸಂಭ್ರಮ ಹೀಗಾಗಿ ಮಂಜಿನ ನಗರಿ ಮಡಿಕೇರಿಯಲ್ಲಿ ದಸರಾ ವೇದಿಕೆಯಲ್ಲಿ ದೈವ ನರ್ತನೆಯನ್ನು ಮಹಿಳೆಯರು ಮಾಡಿದ್ದಾರೆ. ಹೀಗಾಗಿ ತಮ್ಮ ದೇವರಿಗೆ ನಮ್ಮ ನಂಬಿಕೆಗೆ ಅವಮಾನ ಮಾಡಲಾಗುತ್ತಿದೆ ಎಂದು ಕೊಡಗು ಜಿಲ್ಲೆಯ ದೈವ ನರ್ತಕರ ಸಂಘದಿಂದ ಕಾನೂನು ಸಮರಕ್ಕೆ ಮುಂದಾಗುತ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: Punjab | ಕಾರು ಅಡ್ಡಗಟ್ಟಿ ಆಪ್‌ ಕಾರ್ಯಕರ್ತನನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

    ಇತ್ತೀಚಿನ ದಿನಗಳಲ್ಲಿ ಶಾಲಾ ಕಾಲೇಜುಗಳಲ್ಲಿ ಕಾರಂತರ ಸಿನಿಮಾ ಹಾಡು ಹಾಕಿಕೊಂಡು ದೈವ ನರ್ತನೆ ಮಾಡಬರದು ಎಂದು ಶಿಕ್ಷಣ ಇಲಾಖೆ ಹಾಗೂ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಸಾಕಷ್ಟು ಶಾಲೆ ಕಾಲೇಜುಗಳಲ್ಲಿ ದೈವ ನರ್ತನೆ ಮಾಡುವುದು ನಿಲ್ಲಿಸಲಾಗಿತ್ತು. ಆದರೀಗ ಮಡಿಕೇರಿ ಹಾಗೂ ಗೋಣಿಕೋಪ್ಪದಲ್ಲಿ ದಸರಾ ಕಾರ್ಯಕ್ರಮ ಅಗುತ್ತಿದೆ. ಈ ಕಾರ್ಯಕ್ರಮಗಳಲ್ಲಿ ಮಹಿಳೆಯರೇ ದೈವ ವೇಷಗಳನ್ನು ಹಾಕಿಕೊಂಡು ದೈವ ನರ್ತನೆ ಮಾಡುತ್ತಿದ್ದಾರೆ. ದೈವ ನರ್ತನೆ ಮಾಡಬೇಕಾದರೆ ಗಂಡಸರು ಮಾಡಬೇಕು ಅದರದ್ದೇ ಆದ ರೀತಿ ನೀತಿಗಳ ನಿಯಮಗಳು ಇದೆ. ಆದ್ರೆ ಕೆಲವರು ಜನರಿಗೆ ಮನರಂಜನೆ ಕೋಡುವ ದೃಷ್ಟಿಯಿಂದ ಈ ರೀತಿಯಲ್ಲಿ ತುಳು ನಾಡಿನ ದೈವಗಳಿಗೆ ಅವಮಾನ ಮಾಡುತ್ತಿದ್ದಾರೆ. ಇದರ ಬಗ್ಗೆ ದೈವಗಳೇ ಅವರಿಗೆ ಶಿಕ್ಷೆ ನೀಡುತ್ತದೆ. ಹಾಗೂ ತುಳು ನಾಡಿದ ಎಲ್ಲಾ ದೈವ ಅರಾಧಾಕರನ್ನು ಕರೆದುಕೊಂಡು ಬೃಹತ್ ಹೋರಾಟ ನಡೆಸಲಾಗುತ್ತದೆ ಎಂದು ದೈವ ನರ್ತಕರು ಎಚ್ಚರಿಕೆ ನೀಡಿದ್ದಾರೆ.

    ಒಟ್ಟಿನಲ್ಲಿ ಇತ್ತೀಚಿನ ದಿನಗಳಲ್ಲಿ ಸಿನಿಮಾಗಳಲ್ಲಿ ನಾಟಕಗಳಲ್ಲಿ ವೇದಿಕೆಯ ವಿವಿಧ ಕಾರ್ಯಕ್ರಮಗಳಲ್ಲಿ ದೈವ ನರ್ತಕರನ್ನೂ ಅವಮಾನ ಮಾಡುವಂತಹ ಕೆಲಸ ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ಕಾನೂನು ರೀತಿಯ ಕ್ರಮಗಳನ್ನು ತೆಗೆದುಕೊಳ್ಳುವ ಅನಿವಾರ್ಯತೆ ಇದೆ ಎಂದು ಸಂಘಟನೆಯ ಪ್ರಮುಖರು ತಿಳಿಸಿದ್ದಾರೆ. ಇದನ್ನೂ ಓದಿ: ಕೋವಿಡ್ ಕಾಲದಲ್ಲಿ ಪಿಪಿಇ ಕಿಟ್ ಖರೀದಿ ಅಕ್ರಮ – ಕಿದ್ವಾಯಿ ಆಸ್ಪತ್ರೆಯ ಆರ್ಥಿಕ ಸಲಹೆಗಾರ ಅಮಾನತು

  • ಕನ್ನಡ ಚಿತ್ರರಂಗ ರಾಷ್ಟ್ರಮಟ್ಟದಲ್ಲಿ ಮಿಂಚಿದ ಕ್ಷಣ- ನ್ಯಾಷನಲ್‌ ಅವಾರ್ಡ್‌ ಬಂದಿದ್ದಕ್ಕೆ ಯಶ್‌ ಸಂತಸ

    ಕನ್ನಡ ಚಿತ್ರರಂಗ ರಾಷ್ಟ್ರಮಟ್ಟದಲ್ಲಿ ಮಿಂಚಿದ ಕ್ಷಣ- ನ್ಯಾಷನಲ್‌ ಅವಾರ್ಡ್‌ ಬಂದಿದ್ದಕ್ಕೆ ಯಶ್‌ ಸಂತಸ

    ನ್ಯಾಷನಲ್‌ ಸ್ಟಾರ್‌ ಯಶ್‌ ಅವರು ‘ಕೆಜಿಎಫ್ 2’ (KGF 2) ಚಿತ್ರಕ್ಕೆ ಎರಡು ರಾಷ್ಟ್ರೀಯ ಪ್ರಶಸ್ತಿ ಬಂದಿದ್ದಕ್ಕೆ, ಇದು ನಿಜಕ್ಕೂ ಕನ್ನಡ ಚಿತ್ರರಂಗ ರಾಷ್ಟ್ರಮಟ್ಟದಲ್ಲಿ ಮಿಂಚಿದ ಕ್ಷಣ ಎಂದು ಸಂಭ್ರಮಿಸಿದ್ದಾರೆ. ಈ ಕುರಿತು ಸೋಷಿಯಲ್‌ ಮೀಡಿಯಾದಲ್ಲಿ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.


    ‘ಕೆಜಿಎಫ್ 2’ (KGF 2) ಸಿನಿಮಾಗೆ ಎರಡು ನ್ಯಾಷನಲ್ ಅವಾರ್ಡ್ ಸಿಕ್ಕ ಹಿನ್ನೆಲೆ ಯಶ್ ಸೋಷಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯಿಸಿ, ಇದು ನಿಜಕ್ಕೂ ಕನ್ನಡ ಚಿತ್ರರಂಗ ರಾಷ್ಟ್ರಮಟ್ಟದಲ್ಲಿ ಮಿಂಚಿದ ಕ್ಷಣ ಎಂದಿದ್ದಾರೆ. ನಟ ರಿಷಬ್ ಶೆಟ್ಟಿ, ಚಿತ್ರದ ನಿರ್ಮಾಪಕ ವಿಜಯ್ ಕಿರಗಂದೂರ್ ಮತ್ತು ಪ್ರಶಾಂತ್ ನೀಲ್‌ಗೆ ಅಭಿನಂದನೆಗಳು. ‘ಕಾಂತಾರ’ (Kantara) ಹಾಗೂ ‘ಕೆಜಿಎಫ್ 2’ಗೆ ಪ್ರಶಸ್ತಿ ಬಂದಿರುವುದು ಅರ್ಹವಾದ ಮನ್ನಣೆಯಾಗಿದೆ ಎಂದು ಯಶ್ ಸಂತಸ ವ್ಯಕ್ತಪಡಿಸಿದ್ದಾರೆ.

    ಇನ್ನೂ ಹೊಂಬಾಳೆ ಸಂಸ್ಥೆ ನಿರ್ಮಾಣದ ಅತ್ಯುತ್ತಮ ಮನರಂಜನಾ ಚಿತ್ರ ‘ಕಾಂತಾರ’, ಮತ್ತು ‘ಕಾಂತಾರ’ (Kantara) ಚಿತ್ರದ ನಟನೆಗಾಗಿ ಅತ್ಯುತ್ತಮ ನಟ ಪ್ರಶಸ್ತಿ ರಿಷಬ್ ಶೆಟ್ಟಿಗೆ ಸಿಕ್ಕಿದೆ. ಜೊತೆಗೆ ಅತ್ಯುತ್ತಮ ಪ್ರಾದೇಶಿಕ ಸಿನಿಮಾ, ಅತ್ಯುತ್ತಮ ಸಾಹಸ ನಿರ್ದೇಶನ ‘ಕೆಜಿಎಫ್ 2’ಗೆ ಸಿಕ್ಕಿದೆ.

  • 70th National Award 2024: ‘ಕಾಂತಾರ’ ಮುಡಿಗೆ ಎರಡು ರಾಷ್ಟ್ರೀಯ ಪ್ರಶಸ್ತಿ

    70th National Award 2024: ‘ಕಾಂತಾರ’ ಮುಡಿಗೆ ಎರಡು ರಾಷ್ಟ್ರೀಯ ಪ್ರಶಸ್ತಿ

    ರಿಷಭ್‌ ಶೆಟ್ಟಿ ಅಭಿನಯದ, ಹೊಂಬಾಳೆ ಫಿಲ್ಮ್‌ ನಿರ್ಮಿಸಿದ ಕಾಂತಾರಕ್ಕೆ ಎರಡು ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ.

    ದೆಹಲಿಯಲ್ಲಿ ಕೇಂದ್ರ ಮಾಹಿತಿ ಹಾಗೂ ಪ್ರಸಾರ ಇಲಾಖೆ 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು (70th National Award 2024) ಇಂದು ಪ್ರಕಟಿಸಿತು.

    ಹೊಂಬಾಳೆ ಸಂಸ್ಥೆ ನಿರ್ಮಾಣದ ಅತ್ಯುತ್ತಮ ಮನರಂಜನಾ ಚಿತ್ರ ‘ಕಾಂತಾರ’, ಮತ್ತು  ‘ಕಾಂತಾರ’ ಚಿತ್ರದ ನಟನೆಗಾಗಿ ಅತ್ಯುತ್ತಮ ನಟ ಪ್ರಶಸ್ತಿ ರಿಷಬ್ ಶೆಟ್ಟಿಗೆ (Rishab Shetty)  ಸಿಕ್ಕಿದೆ.

    ಅಂದಹಾಗೆ, 2020ನೇ ವರ್ಷದಲ್ಲಿ ಸೆನ್ಸಾರ್ ಆದ ಸಿನಿಮಾಗಳಿಗೆ ಇಂದು (ಆ.16) ರಾಷ್ಟ್ರೀಯ ಪ್ರಶಸ್ತಿ ಘೋಷಣೆ ಆಗಿದ್ದು, ಅತ್ಯುತ್ತಮ ಪ್ರಾದೇಶಿಕ ಸಿನಿಮಾ, ಅತ್ಯುತ್ತಮ ಸಾಹಸ ನಿರ್ದೇಶನ ‘ಕೆಜಿಎಫ್ 2’ಗೆ ಸಿಕ್ಕಿದೆ.

    ಇನ್ನೂ ‘ಮಧ್ಯಂತರ’ ಸಿನಿಮಾಗಾಗಿ ಬೆಸ್ಟ್ ಡೆಬ್ಯೂ ನಿರ್ದೇಶಕ ಬಸ್ತಿ ದಿನೇಶ್ ಶೆಣೈ ಸಿಕ್ಕಿದೆ. ಅತ್ಯುತ್ತಮ ಸಂಕಲನಕ್ಕಾಗಿ ಸುರೇಶ್ ಅರಸ್‌ಗೆ ರಾಷ್ಟ್ರೀಯ ಪ್ರಶಸ್ತಿ ಸಿಕ್ಕಿದೆ. ಒಟ್ಟು ಕನ್ನಡಕ್ಕೆ 7 ಪ್ರಶಸ್ತಿಗಳು ಸಿಕ್ಕಿದೆ.

  • ನನ್ನ ಜೀವನದ ಆಧಾರಸ್ತಂಭ- ರಿಷಬ್ ಶೆಟ್ಟಿ ಹುಟ್ಟುಹಬ್ಬಕ್ಕೆ ಪತ್ನಿ ಲವ್ಲಿ ವಿಶ್

    ನನ್ನ ಜೀವನದ ಆಧಾರಸ್ತಂಭ- ರಿಷಬ್ ಶೆಟ್ಟಿ ಹುಟ್ಟುಹಬ್ಬಕ್ಕೆ ಪತ್ನಿ ಲವ್ಲಿ ವಿಶ್

    ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ (Rishab Shetty) ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಈ ದಿನದಂದು ಪತಿಗೆ, ನನ್ನ ಜೀವನ ಆಧಾರಸ್ತಂಭ, ನೀವು ಅದ್ಭುತ ವ್ಯಕ್ತಿ ಎಂದು ಪತ್ನಿ ಪ್ರಗತಿ (Pragathi Shetty) ಪ್ರೀತಿಯಿಂದ ಶುಭಕೋರಿದ್ದಾರೆ. ಈ ಪೋಸ್ಟ್ ನೆಟ್ಟಿಗರ ಗಮನ ಸೆಳೆದಿದೆ. ಜೊತೆಗೆ ನಟನಿಗೆ ಅಭಿಮಾನಿಗಳಿಂದ ಹುಟ್ಟುಹಬ್ಬದ (Birthday) ಶುಭಾಶಯಗಳ ಸುರಿಮಳೆ ಹರಿದು ಬರುತ್ತಿದೆ.

    ನಟನೆ, ನಿರ್ದೇಶನ, ನಿರ್ಮಾಣದಲ್ಲಿಯೂ ಸೈ ಎನಿಸಿಕೊಂಡಿರುವ ರಿಷಬ್ ಶೆಟ್ಟಿ ಇದೀಗ 41ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಕಾಂತಾರ ಪ್ರೀಕ್ವೆಲ್ ಚಿತ್ರಕ್ಕಾಗಿ ಹುಟ್ಟೂರಿನಲ್ಲಿ ಸದ್ಯ ರಿಷಬ್ ಬೀಡು ಬಿಟ್ಟಿದ್ದಾರೆ. ಸಿನಿಮಾ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ಪ್ರಗತಿ ಶೆಟ್ಟಿ ಲವ್ಲಿ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಇದನ್ನೂ ಓದಿ:ಶಿವಣ್ಣ ಹುಟ್ಟುಹಬ್ಬದಂದು ಫ್ಯಾನ್ಸ್‌ಗೆ ಭರ್ಜರಿ ಗಿಫ್ಟ್

    “ನನ್ನ ಜೀವನದ ಆಧಾರಸ್ತಂಭಕ್ಕೆ ಜನ್ಮದಿನದ ಶುಭಾಶಯಗಳು. ನೀವು ಎಂತಹ ಅದ್ಭುತ ವ್ಯಕ್ತಿ ಎಂದು ನಾನು ಜಗತ್ತಿಗೆ ಹೇಳಲು ಬಯಸುತ್ತೇನೆ. ನಿಮ್ಮನ್ನು ನಿಜವಾಗಿಯೂ ತಿಳಿದಿರುವವರು ಅದೃಷ್ಟವಂತರು. ನಿಮ್ಮ ಶಕ್ತಿ, ಬುದ್ಧಿವಂತಿಕೆ ಮತ್ತು ಪ್ರೀತಿ ಪ್ರತಿದಿನ ನಮಗೆಲ್ಲರಿಗೂ ಸ್ಫೂರ್ತಿ ನೀಡುತ್ತದೆ ಎಂದು ಪ್ರಗತಿ ಶೆಟ್ಟಿ ಬಣ್ಣಿಸಿದ್ದಾರೆ. ನಾವು ಒಟ್ಟಿಗೆ ಇರುವುದಕ್ಕಾಗಿ ನಾನು ಪ್ರತಿದಿನ ದೇವರಿಗೆ ಕೃತಜ್ಞನಾಗಿದ್ದೇನೆ. ನಿಮಗೆ ಸಂತೋಷ, ಯಶಸ್ಸು ಮತ್ತು ಪ್ರಪಂಚದ ಎಲ್ಲಾ ಸಂತೋಷದಿಂದ ತುಂಬಿದ ವರ್ಷವಾಗಲಿ” ಎಂದು ಹಾರೈಸುತ್ತೇನೆ ಎಂದು ಪತ್ನಿ ಶುಭಕೋರಿದ್ದಾರೆ. ಈ ಪೋಸ್ಟ್ ನೋಡಿದ ಫ್ಯಾನ್ಸ್, ಜೋಡಿ ಅಂದರೆ ಹೀಗಿರಬೇಕು ಎಂದು ಹಾಡಿಹೊಗಳಿದ್ದಾರೆ.

    ಇನ್ನೂ ಪ್ರಗತಿ ಶೆಟ್ಟಿ ಮತ್ತು ರಿಷಬ್ ಪ್ರೀತಿಸಿ ಗುರುಹಿರಿಯರ ಒಪ್ಪಿಗೆ ಪಡೆದು 2017ರ ಫೆ.9ರಂದು ಕುಂದಾಪುರದಲ್ಲಿ ಮದುವೆಯಾದರು. ಪತಿ ರಿಷಬ್ ಯಶಸ್ಸಿಗೆ ಪ್ರಗತಿ ಶಕ್ತಿಯಾಗಿ ನಿಂತರು. ಅವರ ಕೆಲಸಗಳಿಗೆ ಸಾಥ್ ನೀಡುತ್ತಲೇ ಬಂದಿದ್ದಾರೆ.

    ಅಂದಹಾಗೆ, ರಿಕ್ಕಿ, ಕಿರಿಕ್ ಪಾರ್ಟಿ, ಸೇರಿದಂತೆ ಸಿನಿಮಾಗಳಿಗೆ ನಿರ್ದೇಶನ ಮಾಡಿದ್ದಾರೆ. ‘ಬೆಲ್ ಬಾಟಂ’ ಚಿತ್ರದ ನಾಯಕ ನಟನಾಗಿ ಗೆದ್ದು ಬೀಗಿದ್ದರು. ಆದರೆ ‘ಕಾಂತಾರ’ (Kantara) ಸಿನಿಮಾದಲ್ಲಿ ನಟಸಿ, ನಿರ್ದೇಶನ ಮಾಡಿ ಸೆನ್ಸೇಷನ್ ಕ್ರಿಯೆಟ್ ಮಾಡಿದರು. ಪ್ಯಾನ್ ಇಂಡಿಯಾ ಸ್ಟಾರ್ ಆಗಿ ರಿಷಬ್ ಗುರುತಿಸಿಕೊಂಡರು.  ಇದೀಗ ಕಾಂತಾರ ಪ್ರೀಕ್ವೆಲ್‌ ಸಿನಿಮಾ ನೋಡಲು ಫ್ಯಾನ್ಸ್‌ ಕಾಯ್ತಿದ್ದಾರೆ.

  • ‘ಕಾಂತಾರ’ ಪ್ರೀಕ್ವೆಲ್‌ ಶೂಟಿಂಗ್‌ ಬಗ್ಗೆ ಅಪ್‌ಡೇಟ್‌ ಕೊಟ್ಟ ರಿಷಬ್‌ ಶೆಟ್ಟಿ

    ‘ಕಾಂತಾರ’ ಪ್ರೀಕ್ವೆಲ್‌ ಶೂಟಿಂಗ್‌ ಬಗ್ಗೆ ಅಪ್‌ಡೇಟ್‌ ಕೊಟ್ಟ ರಿಷಬ್‌ ಶೆಟ್ಟಿ

    ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ (Rishab Shetty) ಸದ್ಯ ‘ಕಾಂತಾರ’ (Kantara 1) ಪ್ರೀಕ್ವೆಲ್ ಚಿತ್ರದ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ಇಂದು (ಮೇ.7) ಬೈಂದೂರಿನ ಕೆರಾಡಿಯಲ್ಲಿ ರಿಷಬ್ ಮತದಾನ ಮಾಡಿದ್ದಾರೆ. ಈ ವೇಳೆ, ಕಾಂತಾರ ಪಾರ್ಟ್ 1 ಬಗ್ಗೆ ರಿಷಬ್ ಮಾಹಿತಿ ನೀಡಿದ್ದಾರೆ.

    ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ರಿಷಬ್, ಜನ ಸಿನಿಮಾವನ್ನು ಚಿತ್ರಮಂದಿರದಲ್ಲಿ ನೋಡಿದ್ರೆ ಒಳ್ಳೆಯದು. ಕಾಂತಾರ ಚಿತ್ರದ ಕುರಿತು ಅಧಿಕೃತವಾಗಿ ಹೊಂಬಾಳೆ ಸಂಸ್ಥೆ ಎಲ್ಲವನ್ನೂ ಘೋಷಣೆ ಮಾಡುತ್ತದೆ. ಈಗಾಗಲೇ ‘ಕಾಂತಾರ’ ಪ್ರೀಕ್ವೆಲ್ ಚಿತ್ರೀಕರಣ ಆರಂಭವಾಗಿದೆ. ಸಿನಿಮಾದ ಕೆಲಸ ಬಹಳ ಚೆನ್ನಾಗಿ ನಡೆಯುತ್ತಿದೆ ಎಂದು ರಿಷಬ್ ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:‘ದಿ ಫ್ಯಾಮಿಲಿ ಮ್ಯಾನ್ 3’ ಸಿರೀಸ್ ಬಗ್ಗೆ ಸಿಹಿಸುದ್ದಿ ಕೊಟ್ಟ ಮನೋಜ್ ಬಾಜಪೇಯಿ

    ‘ಕಾಂತಾರ’ ಸಕ್ಸಸ್ ನಂತರ ಮೊದಲಿಗಿಂತ ಜವಾಬ್ದಾರಿ ಹೆಚ್ಚಾಗಿದೆ. ನಮ್ಮ ಸಿನಿಮಾಗಾಗಿ ದೊಡ್ಡ ತಂಡ ಕೆಲಸ ಮಾಡುತ್ತಿದೆ ಎಂದಿದ್ದಾರೆ. ಹೊಂಬಾಳೆ ಸಂಸ್ಥೆ ಸಿಕ್ಕಿರುವುದು ಫಿಲ್ಮ್ ಮೇಕರ್‌ಗೆ ಒಂದು ಪುಣ್ಯ ಎಂದು ರಿಷಬ್‌ ಖುಷಿಯಿಂದ ಮಾತನಾಡಿದ್ದಾರೆ. ಕಾಂತಾರಗಾಗಿ ಅದ್ಭುತವಾದ ಟೆಕ್ನಿಷಿಯನ್ಸ್‌ಗಳು ಕೆಲಸ ಮಾಡುತ್ತಿದ್ದಾರೆ. ನಿರಂತರವಾಗಿ ಪಾರ್ಟ್ ಬೈ ಪಾರ್ಟ್ ಚಿತ್ರೀಕರಣ ನಡೆಯುತ್ತದೆ ಎಂದು ರಿಷಬ್ ಹೇಳಿದ್ದಾರೆ.

    ಜನ ‘ಕಾಂತಾರ’ ಚಿತ್ರವನ್ನು ಗೆಲ್ಲಿಸಿದ್ದಾರೆ ಬಾಯಲ್ಲಿ ಏನು ಹೇಳಲ್ಲ. ಕೆಲಸದ ಮೂಲಕ ಮಾಡಿ ತೋರಿಸಬೇಕು ಎಂದು ಅಂದುಕೊಂಡಿದ್ದೇನೆ. ನನಗೆ ಯಾವ ಒತ್ತಡವು ಇಲ್ಲ. ಆಗ ನನಗೆ ಬಹಳ ದೊಡ್ಡ ಚಿತ್ರವಾಗಿತ್ತು. ಸಿನಿಮಾ ಯಾವಾಗಲೂ ಕಲಿಯುವ ಪ್ರೊಸೆಸ್ ಅದನ್ನು ಮಾಡುತ್ತಿದ್ದೇನೆ ಎಂದಿದ್ದಾರೆ ರಿಷಬ್.‌

    ಈ ವೇಳೆ, ಸಿನಿಮಾಗೋಸ್ಕರ ಒಂದು ವರ್ಷದಿಂದ ಗಡ್ಡ ಕೂದಲು ಬಿಟ್ಟಿರೋದಾಗಿ ತಿಳಿಸಿದ್ದಾರೆ. ಇನ್ನೂ ‘ಕಾಂತಾರ 1’ ಚಿತ್ರೀಕರಣ ಪೂರ್ತಿ ಮುಗಿದ ಮೇಲೆ ಅಭಿಮಾನಿಗಳಿಗೆ, ಮಾಧ್ಯಮದವರಿಗೆ ಚಿತ್ರೀಕರಣ ಸ್ಥಳಕ್ಕೆ ಕರೆಯುತ್ತೇವೆ ಎಂದು ರಿಷಬ್ ತಿಳಿಸಿದ್ದಾರೆ. ಚಿತ್ರೀಕರಣ ಮುಗಿಯುವವರೆಗೆ ಬಹಳ ಗೌಪ್ಯತೆಯನ್ನು ಕಾಪಾಡಬೇಕಾಗುತ್ತದೆ ಎಂದು ಹೇಳಿದ್ದಾರೆ. ನಮ್ಮ ಸಿನಿಮಾ ಪೂರ್ತಿ ಕರಾವಳಿ ಭಾಗದಲ್ಲಿ ಚಿತ್ರೀಕರಣ ಮಾಡುತ್ತೇವೆ ಎಂದು ರಿಷಬ್ ಮಾತನಾಡಿದ್ದಾರೆ.

    ಅಂದಹಾಗೆ, ರಿಷಬ್ ಶೆಟ್ಟಿ ಮತ್ತು ಸಪ್ತಮಿ ಗೌಡ (Sapthami Gowda) ನಟನೆಯ ‘ಕಾಂತಾರ’ (Kantara) ಸಿನಿಮಾ 2022ರಲ್ಲಿ ಸೆ.30ರಂದು ರಿಲೀಸ್ ಆಗಿತ್ತು. ಸಿನಿಮಾ ಸಕ್ಸಸ್‌ ಕಂಡಿತ್ತು.

  • ವೋಟ್‌ ಮಾಡುವುದು ನಮ್ಮ ಹಕ್ಕು, ನಮ್ಮ ಜವಾಬ್ದಾರಿ- ರಿಷಬ್‌ ಶೆಟ್ಟಿ

    ವೋಟ್‌ ಮಾಡುವುದು ನಮ್ಮ ಹಕ್ಕು, ನಮ್ಮ ಜವಾಬ್ದಾರಿ- ರಿಷಬ್‌ ಶೆಟ್ಟಿ

    ‘ಕಾಂತಾರ’ ಸೂಪರ್ ಸ್ಟಾರ್ ರಿಷಬ್ ಶೆಟ್ಟಿ (Rishab Shetty) ‘ಕಾಂತಾರ’ ಪಾರ್ಟ್‌ 1 (Kantara 1) ಚಿತ್ರದ ಶೂಟಿಂಗ್‌ಗೆ ಬ್ರೇಕ್ ನೀಡಿ ಇಂದು (ಮೇ.7) ಮತದಾನ ಮಾಡಿದ್ದಾರೆ. ರಿಷಬ್ ಹುಟ್ಟುರಾದ ಬೈಂದೂರಿನ ಕೆರಾಡಿಯಲ್ಲಿ ಸರದಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ್ದಾರೆ. ಇದನ್ನೂ ಓದಿ:ಮತ ಚಲಾಯಿಸಿದ ರಿತೇಶ್ ದೇಶ್‌ಮುಖ್, ಜೆನಿಲಿಯಾ ದಂಪತಿ

    ಲೋಕಸಭಾ ಚುನಾವಣೆ ನಡೆಯುವುದು ದೇಶಕ್ಕೆ, ವೋಟ್ ಮಾಡುವುದು ನಮ್ಮ ಹಕ್ಕು. ಅದು ಪ್ರತಿಯೊಬ್ಬರ ಜವಾಬ್ದಾರಿ. ಇದೀಗ ನಾನು ಮತ ಚಲಾಯಿಸಿದ್ದೇನೆ ಎಂದು ರಿಷಬ್ ಮಾತನಾಡಿದ್ದಾರೆ. ಎಲ್ಲರೂ ಮತ ಚಲಾಯಿಸುವಂತೆ ರಿಷಬ್‌ ಮನವಿ ಮಾಡಿದ್ದಾರೆ. ಮತ ಚಲಾಯಿಸಿದ ನಂತರ ರಿಷಬ್ ಜೊತೆ ಸೆಲ್ಫಿಗಾಗಿ ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಎಲ್ಲರೊಂದಿಗೆ ಬೆರತು ಮಾತನಾಡಿ ಸೆಲ್ಫಿ ನೀಡಿ ನಟ ರಿಷಬ್ ತೆರಳಿದ್ದಾರೆ.

    ಈ ವೇಳೆ, ಶಾಲೆಯನ್ನು ದತ್ತು ಸ್ವೀಕಾರ ಮಾಡಿ ಅಭಿವೃದ್ಧಿ ಮಾಡುತ್ತಿರುವ ಬಗ್ಗೆ ರಿಷಬ್ ಮಾತನಾಡಿ, ಚುನಾವಣೆ ಇರುವುದರಿಂದ ಪೂರ್ತಿ ಕೆಲಸ ಮಾಡಲು ಆಗಿಲ್ಲ. ಶಾಲೆಯ ಗ್ರೌಂಡನ್ನು ಮಕ್ಕಳಿಗೆ ಆಟ ಆಡಲು ದೊಡ್ಡ ಮಾಡಿದ್ದೇವೆ. ಕಟ್ಟಡದ ಕೆಲಸ ಮತ್ತು ಪೀಠೋಪಕರಣ ಕೆಲಸ ಇನ್ನು ಆಗಬೇಕಾಗಿದೆ ಎಂದು ಮಾಹಿತಿ ನೀಡಿದ್ದಾರೆ.

  • ಮಾಲಿವುಡ್ ನಟ ಮೋಹನ್‌ಲಾಲ್‌ರನ್ನು ಭೇಟಿಯಾದ ರಿಷಬ್ ಶೆಟ್ಟಿ

    ಮಾಲಿವುಡ್ ನಟ ಮೋಹನ್‌ಲಾಲ್‌ರನ್ನು ಭೇಟಿಯಾದ ರಿಷಬ್ ಶೆಟ್ಟಿ

    ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ (Rishab Shetty) ಇದೀಗ ಮಾಲಿವುಡ್ (Mollywood) ಸೂಪರ್ ಸ್ಟಾರ್ ಮೋಹನ್‌ಲಾಲ್ (Mohanlal) ಅವರನ್ನು ಭೇಟಿಯಾಗಿದ್ದಾರೆ. ಲೆಜೆಂಡರಿ ನಟನನ್ನು ಭೇಟಿಯಾಗಿದಕ್ಕೆ ರಿಷಬ್ ಸೋಷಿಯಲ್ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡು ಸಂಭ್ರಮಿಸಿದ್ದಾರೆ. ಇದನ್ನೂ ಓದಿ:‘ಹನುಮಾನ್’ ಹೀರೋ ತೇಜ್ ಸಜ್ಜಾ ನಟನೆಯ ಹೊಸ ಸಿನಿಮಾ ಅನೌನ್ಸ್

    ‘ಕಾಂತಾರ’ ಪಾರ್ಟ್ 1 (Kantara Chapter 1) ಸಿನಿಮಾ ಕೆಲಸದಲ್ಲಿ ರಿಷಬ್ ಬ್ಯುಸಿಯಾಗಿದ್ದಾರೆ. ಇದರ ನಡುವೆ ಖ್ಯಾತ ನಟ ಮೋಹನ್‌ಲಾಲ್ ಅವರನ್ನು ರಿಷಬ್ ಶೆಟ್ಟಿ ಮತ್ತು ಪತ್ನಿ ಪ್ರಗತಿ ಶೆಟ್ಟಿ ಭೇಟಿಯಾಗಿದ್ದು, ನೆಚ್ಚಿನ ನಟನ ಜೊತೆ ಕೆಲ ಕಾಲ ಸಮಯ ಕಳೆದಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ನಟ ಸಂತಸ ವ್ಯಕ್ತಪಡಿಸಿದ್ದಾರೆ.

    ಅಂದಹಾಗೆ, ನಿನ್ನೆಯಷ್ಟೇ (ಏ.17) ಮೋಹನ್‌ಲಾಲ್ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಮುಂಜಾನೆ ಮಹಾಮಂಗಳಾರತಿಯಲ್ಲಿ ನಟ ಪಾಲ್ಗೊಂಡಿದ್ದರು. ಈ ವೇಳೆ, ಅಭಿಮಾನಿಗಳು ಮೋಹನ್‌ಲಾಲ್ ಜೊತೆಗೆ ಸೆಲ್ಫಿ ತೆಗೆಯಿಸಿಕೊಳ್ಳಲು ಮುಗಿಬಿದ್ದಿದ್ದರು.

    ಬರೋಜ್, ಕಣ್ಣಪ್ಪ ಸೇರಿದಂತೆ ಕನ್ನಡದ ಕೆಲವು ಪ್ರಾಜೆಕ್ಟ್ಗಳಲ್ಲಿ ಮೋಹನ್‌ಲಾಲ್ ಕಾಣಿಸಿಕೊಳ್ಳಲಿದ್ದಾರೆ. ಈ ಹಿಂದೆ ಪುನೀತ್ ರಾಜ್‌ಕುಮಾರ್ ನಟನೆಯ ‘ಮೈತ್ರಿ’ (Mytri Film) ಸಿನಿಮಾದಲ್ಲಿ ಮೋಹನ್‌ಲಾಲ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು.