ಹಾಸನ: ಅರಣ್ಯ ಪ್ರದೇಶದಲ್ಲಿ ಕಾಂತಾರ 2 (Kantara 2) ಚಿತ್ರ ತಂಡ ಮರಗಳನ್ನು ಕಡಿದಿದೆ ಎಂಬ ಆರೋಪಕ್ಕೆ ಕ್ಲೀನ್ ಚಿಟ್ ಸಿಕ್ಕಿದೆ.
ಆರೋಪಕ್ಕೆ ಸಂಬಂಧಿಸಿದಂತೆ ಸಕಲೇಶಪುರ ಎಸಿಎಫ್ ಹಾಗೂ ಯಸಳೂರು ಆರ್‍ಎಫ್‍ಓ ಚಿತ್ರೀಕರಣದ ಸ್ಥಳ ಪರಿಶೀಲನೆ ನಡೆಸಿ ವರದಿ ನೀಡಿದೆ. ಚಿತ್ರೀಕರಣದ ವೇಳೆ ಯಾವುದೇ ನಿಯಮ ಉಲ್ಲಂಘನೆ ಆಗಿಲ್ಲ. ಯಾವುದೇ ಸ್ಫೋಟ ಮಾಡಿಲ್ಲ, ಡೀಮ್ಡ್ ಅರಣ್ಯ ಪ್ರದೇಶದಲ್ಲಿ ಮರಗಳನ್ನು ಕಡಿದಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಚಿತ್ರೀಕರಣದ ವೇಳೆ ಸ್ಫೋಟ ಮಾಡಲಾಗಿದೆ. ಮರ ಕಡಿಯಲಾಗಿದೆ ಎಂದು ಕೆಲ ಸ್ಥಳೀಯರು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ (Forest Department) ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ವರದಿ ಸಲ್ಲಿಸಿದ್ದರು.
ಮರದ ಬಣ್ಣ ಬಳಿದ ಕೃತಕ ಮರಗಳನ್ನು ಚಿತ್ರೀಕರಣಕ್ಕೆ ಬಳಕೆ ಮಾಡಲಾಗಿದೆ. ಚಿತ್ರೀಕರಣದಿಂದ ಅರಣ್ಯ ಹಾಗೂ ಮರಗಳಿಗೆ ಯಾವುದೇ ಹಾನಿ ಆಗಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಕಾಂತಾರಾ-2 ಶೂಟಿಂಗ್ (Kantara 2) ವಿವಾದಕ್ಕೆ ಸಂಬಂಧಿಸಿದಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ (Eshwara Khandre) ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಅರಣ್ಯ ಭೂಮಿಯಲ್ಲಿ ನಿಯಮ ಉಲ್ಲಂಘನೆಯಾಗಿಲ್ಲ ಎಂಬುದು ಪ್ರಾಥಮಿಕ ವರದಿ ಎಂದು ಸಚಿವರು ತಿಳಿಸಿದ್ದಾರೆ.
ಸಿನಿಮಾ ಚಿತ್ರೀಕರಣಕ್ಕೆ ನಿಯಮಾವಳಿ ಪ್ರಕಾರ ಅನುಮತಿ ನೀಡಲಾಗಿದೆ. ನಮ್ಮ ಅರಣ್ಯ ಭೂಮಿಯಲ್ಲಿ ಚಿತ್ರೀಕರಣ ಮಾಡಿಲ್ಲ, ಕಂದಾಯ ಜಮೀನಿನಲ್ಲಿ ಮಾಡಿದ್ದಾರೆ ಎಂದು ಪ್ರಾಥಮಿಕ ವರದಿ ಬಂದಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: BBK 11: ಫಿನಾಲೆ ವಾರಕ್ಕೆ ಘಟಾನುಘಟಿ ಸ್ಪರ್ಧಿಗಳು ಎಂಟ್ರಿ
ಅರಣ್ಯ ಭೂಮಿಯಲ್ಲಿ ನಿಯಮ ಉಲ್ಲಂಘನೆ ಆಗಿಲ್ಲ ಎಂಬುದು ಪ್ರಾಥಮಿಕ ವರದಿ. ಆದರೂ ಸಂಪೂರ್ಣ ವರದಿ ಸಲ್ಲಿಸುವಂತೆ ಹಿರಿಯ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಮಾಧ್ಯಮಗಳಲ್ಲಿ ಬಂದ ವರದಿಯ ಅನ್ವಯ ಸೂಚನೆ ಕೊಟ್ಟಿದ್ದೇನೆ. ನಿಯಮಗಳ ಪ್ರಕಾರ ಅನುಮತಿ ಕೊಡಲಾಗಿತ್ತು. ಆದರೆ, ಅದು ಕಂದಾಯ ಭೂಮಿ, ಗೋಮಾಳ ಎನ್ನಲಾಗಿದೆ. ಅರಣ್ಯ ಭೂಮಿಯಲ್ಲಿ ಉಲ್ಲಂಘನೆ ಆಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಕಾಂತಾರ-2 ಚಿತ್ರತಂಡ ಷರತ್ತುಗಳನ್ನು ಉಲ್ಲಂಘಿಸಿ ವನ್ಯಜೀವಿಗಳಿಗೆ ಅಥವಾ ಸಸ್ಯಸಂಕುಲಕ್ಕೆ ಹಾನಿ ಮಾಡಿದ್ರೇ ಚಿತ್ರೀಕರಣ ಸ್ಥಗಿತಗೊಳಿಸಲು ಕ್ರಮ ವಹಿಸುವಂತೆ ಅಪರ ಮುಖ್ಯ ಕಾರ್ಯದರ್ಶಿ ಅರಣ್ಯ ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ ನಿರ್ದೇಶಕರಿಗೆ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ನಾನು ಸ್ವಲ್ಪ ಕೋಪಿಷ್ಠ ಅದೇ ಸಮಸ್ಯೆ – ನಟ ದುನಿಯಾ ವಿಜಯ್
ಹಾಸನ ಜಿಲ್ಲೆಯ ಸಕಲೇಶಪುರ ಯಸಳೂರು ಭಾಗದಲ್ಲಿ ತಾತ್ಕಾಲಿಕವಾಗಿ ಸೆಟ್ ನಿರ್ಮಾಣ ಮಾಡಲು ಜ.3 ರಿಂದ ಜ.15 ರವರೆಗೆ ಅವಕಾಶ ನೀಡಲಾಗಿತ್ತು. ಜೊತೆಗೆ ಜ.15 ರಿಂದ ಜ.25 ರ ವರೆಗೆ 23 ದಿನ ಶೂಟಿಂಗ್‌ಗೆ ಅವಕಾಶ ನೀಡಲಾಗಿದೆ. ಆದರೆ, ಕಾಂತಾರ ಚಿತ್ರತಂಡ ಕಾಡಿನಂಚಿನ ಅರಣ್ಯ ಪ್ರದೇಶದ ಬಳಿ ನಡೆಸುತ್ತಿರುವ ಚಿತ್ರೀಕರಣದ ವೇಳೆ ಸ್ಫೋಟಕ ಬಳಕೆಯ ಬಗ್ಗೆ ಆರೋಪ ಕೇಳಿಬಂದಿತ್ತು.
‘ಕಾಂತಾರ’ ಚಾಪ್ಟರ್ 1 (Kantara) ಸಿನಿಮಾದ ಮುಹೂರ್ತ ಬೆನ್ನಲ್ಲೇ ಅಭಿಮಾನಿಗಳಿಗೆ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದೆ. ಹೊಂಬಾಳೆ ಮುಕುಟಕ್ಕೆ ಮತ್ತೊಂದು ಗರಿ. ದೇಶದ ಪ್ರತಿಷ್ಠಿತ ಪ್ರೊಡಕ್ಷನ್ ಹೌಸ್ ಎಂಬ ಖ್ಯಾತಿ ಪಡೆದಿರುವ ಹೊಂಬಾಳೆ. ದೇಶದ ಚಿತ್ರರಂಗವೇ ಕನ್ನಡ ಚಿತ್ರೋದ್ಯಮದೆಡೆ ತಿರುಗಿ ನೋಡುವಂತೆ ಮಾಡಿದ್ದ ಹೊಂಬಾಳೆ ಸಂಸ್ಥೆ ನಿರ್ಮಾಣದ ‘ಕಾಂತಾರ’ ಚಿತ್ರ ಗೋವಾ ಇಂಟರ್‌ನ್ಯಾಷನಲ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಬೆಸ್ಟ್ ಸಿನಿಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ಹೊಂಬಾಳೆ ಸಂಸ್ಥೆ ನಿರ್ಮಾಣದ ರಿಷಬ್ ಶೆಟ್ಟಿ (Rishab Shetty) ನಿರ್ದೇಶನದ ಕಾಂತಾರ ಸಿನಿಮಾ ಇದೀಗ ಗೋವಾದಲ್ಲಿ ನಡೆಯುತ್ತಿರುವ 54ನೇ ಇಂಟರ್‌ನ್ಯಾಷನಲ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಪ್ರತಿಷ್ಠಿತ ಸಿಲ್ವರ್ ಪಿಕಾಕ್ ಪ್ರಶಸ್ತಿಯನ್ನು(Silver Peacock Award) ಪಡೆದುಕೊಂಡಿದೆ. ಈ ಮೂಲಕ ಕನ್ನಡದಲ್ಲಿ ಪ್ರಪ್ರಥಮ ಬಾರಿಗೆ ಈ ಪ್ರಶಸ್ತಿ ಪಡೆದ ಮೊದಲ ಚಿತ್ರ ಎಂಬ ದಾಖಲೆಯನ್ನು ಕಾಂತಾರ ನಿರ್ಮಿಸಿದೆ.
70ರ ದಶಕದಲ್ಲಿ ಪ್ರಪ್ರಥಮ ಬಾರಿಗೆ ‘ಒಂದಾನೊಂದು ಕಾಲದಲ್ಲಿ’ ಚಿತ್ರದ ಅಭಿನಯಕ್ಕೆ ನಟ ಶಂಕರ್‌ನಾಗ್ ಅವರಿಗೆ ಈ ಪ್ರಶಸ್ತಿ ಸಿಕ್ಕಿತ್ತು. ಆದರೆ ಸಿನಿಮಾ ವಿಭಾಗದಲ್ಲಿ ಕನ್ನಡ ಸಿನಿಮಾಕ್ಕೆ ಈ ಪ್ರಶಸ್ತಿ ಲಭಿಸುತ್ತಿರುವುದು ಇದೇ ಮೊದಲು. ಇದನ್ನೂ ಓದಿ:ಮಹೇಶ್ ಬಾಬುಗೆ ಸಂದೀಪ್ ರೆಡ್ಡಿ ವಂಗಾ ಡೈರೆಕ್ಷನ್
ಸದ್ಯ ‘ಕಾಂತಾರ’ ಚಾಪ್ಟರ್ 1 ಫಸ್ಟ್ ಲುಕ್ ಬಿಡಗಡೆಯಾಗಿದ್ದು, ನಿರೀಕ್ಷೆಗೂ ಮೀರಿ ಅಭಿಮಾನಿಗಳಿಂದ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ. ಮುಂದಿನ ತಿಂಗಳಿಂದ ಚಿತ್ರದ ಶೂಟಿಂಗ್ ಶುರುವಾಗಲಿದೆ.
ರಿಷಬ್ ಶೆಟ್ಟಿ (Rishabh Shetty) ನಿರ್ದೇಶಿಸಿ, ನಟಿಸುತ್ತಿರುವ ಕಾಂತಾರ 2 ಸಿನಿಮಾದ ಬಗ್ಗೆ ದಿನಕ್ಕೊಂದು ಮಾಹಿತಿ ಹೊರ ಬೀಳುತ್ತಿವೆ. ಸಿನಿಮಾ ಮಹೂರ್ತದ (Muhurta) ಕುರಿತಂತೆ ಪಂಜುರ್ಲಿ (Panjurl) ಮತ್ತು ಗುಳಿಗ ದೈವಕ್ಕೆ ಚಿತ್ರತಂಡ ಮೊರೆ ಹೋಗಿದ್ದು, ದೈವಗಳು ಅಸ್ತು ಎಂದಿವೆ ಎನ್ನುವ ಮಾಹಿತಿ ಸಿಕ್ಕಿದೆ. ಹೀಗಾಗಿ ಸಿನಿಮಾ ತಂಡ ಮುಹೂರ್ತಕ್ಕೆ ಸರ್ವ ಸಿದ್ಧತೆ ಮಾಡಿಕೊಂಡಿದೆ.
ಮತ್ತೊಂದು ಸಮಾಚಾರವೆಂದರೆ, ಈ ಸಿನಿಮಾದಲ್ಲಿ 14ನೇ ಶತಮಾನದಿಂದ ಶುರುವಾಗುವ ಕಥೆ ಕೂಡ ಇರಲಿದೆಯಂತೆ. ಈ ಕುರಿತು ಚಿತ್ರತಂಡ ಮಾಹಿತಿ ನೀಡದೇ ಇದ್ದರೂ, ಗಾಂಧಿ ನಗರದ ಗಲ್ಲಿ ಗಲ್ಲಿಗಳಲ್ಲಿ ಕಾಂತರ ಕಥೆ ಹಾಟ್ ಕೇಕ್ ತರಹ ಮಾರಾಟವಾಗುತ್ತಿದೆ.
‘ಕಾಂತಾರ’ ಸಿನಿಮಾ ವರ್ಲ್ಡ್ ವೈಡ್ ರೀಚ್ ಸಕ್ಸಸ್‌ಫುಲ್ ಪ್ರದರ್ಶನ ಕಂಡಿತ್ತು. ‘ಕಾಂತಾರ’ ಪಾರ್ಟ್ 2 ಯಾವಾಗ ಎಂದು ಕಾದು ಕುಳಿತ ಫ್ಯಾನ್ಸ್‌ಗೆ ಸಿಹಿಸುದ್ದಿ ಸಿಕ್ಕಿದೆ. ಇದೇ ನವೆಂಬರ್‌ಗೆ ಮುಹೂರ್ತ ಫಿಕ್ಸ್ ಆಗಿದೆ. ಹೊಂಬಾಳೆ ಸಂಸ್ಥೆ ನಿರ್ಮಾಣದ, ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸುತ್ತಿರುವ ‘ಕಾಂತಾರ 2’ ಚಿತ್ರದ ಮುಹೂರ್ತ ಇದೇ ನವೆಂಬರ್ 27ರಂದು ಸೋಮವಾರ ಸರಳವಾಗಿ ಜರುಗಲಿದೆ.
ಕಾಂತಾರ (Kantara) ಸೂಪರ್ ಡೂಪರ್ ಹಿಟ್ ಆದಂತೆಯೇ ‘ಕಾಂತಾರ 2’ ಅದಕ್ಕಿಂತ ಹೆಚ್ಚಿನ ಯಶಸ್ಸು ಪಡೆದು ಗೆದ್ದು ಬೀಗಲೇಬೇಕೆಂದು ರಿಷಬ್ ಶೆಟ್ಟಿ ಕೂಡ ತೆರೆಮರೆಯಲ್ಲಿ ಸಿಕ್ಕಾಪಟ್ಟೆ ತಯಾರಿ ಮಾಡಿಕೊಂಡೆ ಅಖಾಡಕ್ಕೆ ಕಾಲಿಡುತ್ತಿದ್ದಾರೆ.
ಅದಕ್ಕಾಗಿ ತಮ್ಮ ಲುಕ್ ಕೂಡ ಜೇಂಜ್ ಮಾಡಿ, ಸಿನಿಮಾ ಕಥೆಯಲ್ಲಿ ಸಾಕಷ್ಟು ಕೆಲಸ ಮಾಡಿಯೇ ಕಾಂತಾರ 2ಗೆ ಮುಹೂರ್ತ ಫಿಕ್ಸ್ ಮಾಡಿದ್ದಾರೆ. ಸದ್ಯದಲ್ಲೇ ಸಿನಿಮಾ ಶೂಟಿಂಗ್ ಕೂಡ ಶುರುವಾಗಲಿದೆ. ಈ ಬಗ್ಗೆ ಹೆಚ್ಚಿನ ಅಪ್‌ಡೇಟ್ ಸಿನಿಮಾ ಮುಹೂರ್ತ ಸಮಾರಂಭದ ದಿನ ಸಿಗಲಿದೆ.
ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ (Rishab Shetty) ಅವರು ನಟಿಸಿದ ‘ಕಾಂತಾರ’ ಸಿನಿಮಾ ವರ್ಲ್ಡ್ ವೈಡ್ ರೀಚ್ ಸಕ್ಸಸ್‌ಫುಲ್ ಪ್ರದರ್ಶನ ಕಂಡಿತ್ತು. ‘ಕಾಂತಾರ’ ಪಾರ್ಟ್ 2 ಯಾವಾಗ ಎಂದು ಕಾದು ಕುಳಿತ ಫ್ಯಾನ್ಸ್‌ಗೆ ಸಿಹಿಸುದ್ದಿ ಸಿಕ್ಕಿದೆ. ಇದೇ ನವೆಂಬರ್‌ಗೆ ಮುಹೂರ್ತ ಫಿಕ್ಸ್ ಆಗಿದೆ.
ಕಾಂತಾರ (Kantara) ಸೂಪರ್ ಡೂಪರ್ ಹಿಟ್ ಆದಂತೆಯೇ ‘ಕಾಂತಾರ 2’ ಅದಕ್ಕಿಂತ ಹೆಚ್ಚಿನ ಯಶಸ್ಸು ಪಡೆದು ಗೆದ್ದು ಬೀಗಲೇಬೇಕೆಂದು ರಿಷಬ್ ಶೆಟ್ಟಿ ಕೂಡ ತೆರೆಮರೆಯಲ್ಲಿ ಸಿಕ್ಕಾಪಟ್ಟೆ ತಯಾರಿ ಮಾಡಿಕೊಂಡೆ ಅಖಾಡಕ್ಕೆ ಕಾಲಿಡುತ್ತಿದ್ದಾರೆ.
ಅದಕ್ಕಾಗಿ ತಮ್ಮ ಲುಕ್ ಕೂಡ ಜೇಂಜ್ ಮಾಡಿ, ಸಿನಿಮಾ ಕಥೆಯಲ್ಲಿ ಸಾಕಷ್ಟು ಕೆಲಸ ಮಾಡಿಯೇ ಕಾಂತಾರ 2ಗೆ ಮುಹೂರ್ತ ಫಿಕ್ಸ್ ಮಾಡಿದ್ದಾರೆ. ಸದ್ಯದಲ್ಲೇ ಸಿನಿಮಾ ಶೂಟಿಂಗ್ ಕೂಡ ಶುರುವಾಗಲಿದೆ. ಈ ಬಗ್ಗೆ ಹೆಚ್ಚಿನ ಅಪ್‌ಡೇಟ್ ಸಿನಿಮಾ ಮುಹೂರ್ತ ಸಮಾರಂಭದ ದಿನ ಸಿಗಲಿದೆ.
ನಟ ರಕ್ಷಿತ್ ಶೆಟ್ಟಿ (Rakshit Shetty) ಇದೀಗ ತಮ್ಮ ಹೊಸ ಸಿನಿಮಾದ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಈ ಸಂದರ್ಭದಲ್ಲಿ ಅವರು ಸಾಕಷ್ಟು ಸಂದರ್ಶನಗಳನ್ನು ನೀಡುತ್ತಿದ್ದಾರೆ. ಈ ಸಮಯದಲ್ಲಿ ಕಾಂತಾರ 2 ಚಿತ್ರದ ಬಗ್ಗೆಯೂ ಅವರು ಮಾತನಾಡಿದ್ದಾರೆ. ಕಾಂತಾರ 2 ಸಿನಿಮಾದಲ್ಲಿ ನೀವು ನಟಿಸುತ್ತೀರಾ? ಎಂದು ಕೇಳಲಾದ ಪ್ರಶ್ನೆಗೆ, ರಿಷಬ್ ಶೆಟ್ಟಿ ಅವಕಾಶ ಕೊಟ್ಟರೆ ಖಂಡಿತಾ ನಟಿಸ್ತೀನಿ ಎಂದು ಹೇಳುವ ಮೂಲಕ ತಮ್ಮ ಗೆಳೆತನದ ಕುರುಹುವನ್ನು ಸಾಬೀತು ಪಡಿಸಿದ್ದಾರೆ.
ಸರ್ವ ತಯಾರಿಯಲ್ಲಿ ರಿಷಬ್
ರಿಷಬ್ ಶೆಟ್ಟಿ (Rishabh Shetty), ಮೊನ್ನೆಯಷ್ಟೇ ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿ, ‘ಇನ್ಮುಂದೆ ನನ್ನನ್ನು ಯಾವುದೇ ಕಾರ್ಯಕ್ರಮಕ್ಕೆ ಕರೆಯಬೇಡಿ. ನಾನು ಬರೋದಿಲ್ಲ. ಕಾಂತಾರ ಸಿನಿಮಾದ ಕೆಲಸದಲ್ಲಿ ಬ್ಯುಸಿಯಾಗಿರುತ್ತೇನೆ’ ಎಂದಿದ್ದರು. ಅಲ್ಲಿಗೆ ಅತೀ ಶೀಘ್ರದಲ್ಲೇ ಸಿನಿಮಾ ಟೀಮ್ ಚಿತ್ರೀಕರಣಕ್ಕೆ ಹೊರಡಲಿದೆ ಎನ್ನುವ ಸೂಚನೆ ಸಿಕ್ಕಿತ್ತು. ಇದೀಗ ಮತ್ತೊಂದ ಮಾಹಿತಿ ಹೊರ ಬಿದ್ದಿದ್ದು, ರಿಷಬ್ ಈ ಸಿನಿಮಾಗಾಗಿ ತಮ್ಮ ಲುಕ್ ಅನ್ನೇ ಬದಲಾಯಿಸಿಕೊಂಡಿದ್ದಾರೆ.
ದೀಪಾವಳಿ ದಿನದಂದು ಫ್ಯಾಮಿಲಿ ಜೊತೆಗಿನ ಫೋಟೋ ಹಂಚಿಕೊಂಡಿರುವ ರಿಷಬ್, ಆ ಫೋಟೋಗಳಲ್ಲಿ ಅವರು ಲುಕ್ ಬದಲಾಗಿದೆ. ಇದು ಚಿತ್ರಕ್ಕಾಗಿ ಮಾಡಿಕೊಂಡ ಸಿದ್ಧತೆ ಎಂದು ಹೇಳಲಾಗುತ್ತಿದೆ. ತಲೆಗೂದಲು ಮತ್ತು ಗಡ್ಡವನ್ನು ಅಪಾರ ಪ್ರಮಾಣದಲ್ಲಿ ರಿಷಬ್ ಬೆಳೆಸಿದ್ದಾರೆ. ಈ ಮೂಲಕ ಪಾತ್ರ ಇನ್ನೂ ಮಜವಾಗಿ ಇರಲಿದೆ ಎನ್ನುವ ಸಂದೇಶ ಸಾರಿದ್ದಾರೆ.
‘ಕಾಂತಾರ 2’ ಸಿನಿಮಾದ ಶೂಟಿಂಗ್ (Shooting) ಯಾವಾಗಿಂದ ಶುರುವಾಗಬಹುದು ಎನ್ನುವ ಕುತೂಹಲ ಅವರ ಅಭಿಮಾನಿಗಳಲ್ಲಿತ್ತು. ಅದಕ್ಕೀಗ ಉತ್ತರ ಸಿಕ್ಕಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ನವೆಂಬರ್ ಅಥವಾ ಡಿಸೆಂಬರ್ ನಲ್ಲಿ ಚಿತ್ರೀಕರಣಕ್ಕೆ ಹೋಗುವುದಾಗಿ ರಿಷಬ್ ತಿಳಿಸಿದ್ದಾರೆ. ಸ್ಕ್ರಿಪ್ಟ್ ಮತ್ತು ಪ್ರಿಪ್ರೊಡಕ್ಷನ್ ಕೆಲಸದಲ್ಲಿ ರಿಷಬ್ ಸದ್ಯ ಬ್ಯುಸಿಯಾಗಿದ್ದಾರೆ.
ಸಿನಿಮಾ ಶೂಟಿಂಗ್ ಗಾಗಿ ಈ ಬಾರಿ ಹಲವು ಬದಲಾವಣೆಗಳನ್ನು ಮಾಡಿಕೊಂಡಿದ್ದಾರಂತೆ ರಿಷಬ್. ಕಾಂತಾರ ಸಿನಿಮಾ ಕೇವಲ ಅವರ ಊರಿನಲ್ಲಿ ಮಾತ್ರ ಚಿತ್ರೀಕರಣವಾಗಿತ್ತು. ಈ ಬಾರಿ ಅವರ ಊರಿನ ಜೊತೆಗೆ ನಾನಾ ಸ್ಥಳಗಳಲ್ಲಿ ಶೂಟಿಂಗ್ ಮಾಡುವ ಪ್ಲ್ಯಾನ್ ಕೂಡ ಮಾಡಿಕೊಂಡಿದ್ದಾರೆ. ಈಗಾಗಲೇ ಆ ಸ್ಥಳಗಳನ್ನು ಅವರು ನೋಡಿಕೊಂಡೂ ಬಂದಿದ್ದಾರೆ ಎನ್ನುವುದು ಸದ್ಯದ ವರ್ತಮಾನ. ಕಥೆಗೆ ತಕ್ಕಂತೆ ಬಜೆಟ್ ಖರ್ಚು ಮಾಡುವ ಕುರಿತಾಗಿಯೂ ಅವರು ಮಾತನಾಡಿದ್ದಾರೆ.
‘ಕಾಂತಾರ 2’ (Kantara 2) ಸಿನಿಮಾದ ಬಜೆಟ್ (Budget) ಬಗ್ಗೆ ಹಲವು ದಿನಗಳಿಂದ ಚರ್ಚೆ ನಡೆಯುತ್ತಲೇ ಇದೆ. ಕಾಂತಾರ ಸಿನಿಮಾದ ಬಜೆಟ್ ಗಿಂತ ಎರಡ್ಮೂರು ಪಟ್ಟು ಹೆಚ್ಚಿನ ಬಜೆಟ್ ಬೇಡುವಂತಹ ಚಿತ್ರ ಇದಾಗಲಿದೆ ಎಂದು ಹೇಳಲಾಗಿತ್ತು. ಆದರೆ, ನಿಜವಾದ ಬಜೆಟ್ ಅನ್ನು ರಾಜ್ ಬಿ ಶೆಟ್ಟಿ (Raj B Shetty) ಬಾಯ್ಬಿಟ್ಟಿದ್ದಾರೆ.
ನಟ, ನಿರ್ದೇಶಕ ರಿಷಬ್ ಶೆಟ್ಟಿ (Rishabh Shetty), ಮೊನ್ನೆಯಷ್ಟೇ ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿ, ‘ಇನ್ಮುಂದೆ ನನ್ನನ್ನು ಯಾವುದೇ ಕಾರ್ಯಕ್ರಮಕ್ಕೆ ಕರೆಯಬೇಡಿ. ನಾನು ಬರೋದಿಲ್ಲ. ಕಾಂತಾರ ಸಿನಿಮಾದ ಕೆಲಸದಲ್ಲಿ ಬ್ಯುಸಿಯಾಗಿರುತ್ತೇನೆ’ ಎಂದಿದ್ದರು. ಅಲ್ಲಿಗೆ ಅತೀ ಶೀಘ್ರದಲ್ಲೇ ಸಿನಿಮಾ ಟೀಮ್ ಚಿತ್ರೀಕರಣಕ್ಕೆ ಹೊರಡಲಿದೆ ಎನ್ನುವ ಸೂಚನೆ ಸಿಕ್ಕಿತ್ತು. ಇದೀಗ ಮತ್ತೊಂದ ಮಾಹಿತಿ ಹೊರ ಬಿದ್ದಿದ್ದು, ರಿಷಬ್ ಈ ಸಿನಿಮಾಗಾಗಿ ತಮ್ಮ ಲುಕ್ ಅನ್ನೇ ಬದಲಾಯಿಸಿಕೊಂಡಿದ್ದಾರೆ.
ದೀಪಾವಳಿ ದಿನದಂದು ಫ್ಯಾಮಿಲಿ ಜೊತೆಗಿನ ಫೋಟೋ ಹಂಚಿಕೊಂಡಿರುವ ರಿಷಬ್, ಆ ಫೋಟೋಗಳಲ್ಲಿ ಅವರು ಲುಕ್ ಬದಲಾಗಿದೆ. ಇದು ಚಿತ್ರಕ್ಕಾಗಿ ಮಾಡಿಕೊಂಡ ಸಿದ್ಧತೆ ಎಂದು ಹೇಳಲಾಗುತ್ತಿದೆ. ತಲೆಗೂದಲು ಮತ್ತು ಗಡ್ಡವನ್ನು ಅಪಾರ ಪ್ರಮಾಣದಲ್ಲಿ ರಿಷಬ್ ಬೆಳೆಸಿದ್ದಾರೆ. ಈ ಮೂಲಕ ಪಾತ್ರ ಇನ್ನೂ ಮಜವಾಗಿ ಇರಲಿದೆ ಎನ್ನುವ ಸಂದೇಶ ಸಾರಿದ್ದಾರೆ.
‘ಕಾಂತಾರ 2’ ಸಿನಿಮಾದ ಶೂಟಿಂಗ್ (Shooting) ಯಾವಾಗಿಂದ ಶುರುವಾಗಬಹುದು ಎನ್ನುವ ಕುತೂಹಲ ಅವರ ಅಭಿಮಾನಿಗಳಲ್ಲಿತ್ತು. ಅದಕ್ಕೀಗ ಉತ್ತರ ಸಿಕ್ಕಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ನವೆಂಬರ್ ಅಥವಾ ಡಿಸೆಂಬರ್ ನಲ್ಲಿ ಚಿತ್ರೀಕರಣಕ್ಕೆ ಹೋಗುವುದಾಗಿ ರಿಷಬ್ ತಿಳಿಸಿದ್ದಾರೆ. ಸ್ಕ್ರಿಪ್ಟ್ ಮತ್ತು ಪ್ರಿಪ್ರೊಡಕ್ಷನ್ ಕೆಲಸದಲ್ಲಿ ರಿಷಬ್ ಸದ್ಯ ಬ್ಯುಸಿಯಾಗಿದ್ದಾರೆ.
ಸಿನಿಮಾ ಶೂಟಿಂಗ್ ಗಾಗಿ ಈ ಬಾರಿ ಹಲವು ಬದಲಾವಣೆಗಳನ್ನು ಮಾಡಿಕೊಂಡಿದ್ದಾರಂತೆ ರಿಷಬ್. ಕಾಂತಾರ ಸಿನಿಮಾ ಕೇವಲ ಅವರ ಊರಿನಲ್ಲಿ ಮಾತ್ರ ಚಿತ್ರೀಕರಣವಾಗಿತ್ತು. ಈ ಬಾರಿ ಅವರ ಊರಿನ ಜೊತೆಗೆ ನಾನಾ ಸ್ಥಳಗಳಲ್ಲಿ ಶೂಟಿಂಗ್ ಮಾಡುವ ಪ್ಲ್ಯಾನ್ ಕೂಡ ಮಾಡಿಕೊಂಡಿದ್ದಾರೆ. ಈಗಾಗಲೇ ಆ ಸ್ಥಳಗಳನ್ನು ಅವರು ನೋಡಿಕೊಂಡೂ ಬಂದಿದ್ದಾರೆ ಎನ್ನುವುದು ಸದ್ಯದ ವರ್ತಮಾನ. ಕಥೆಗೆ ತಕ್ಕಂತೆ ಬಜೆಟ್ ಖರ್ಚು ಮಾಡುವ ಕುರಿತಾಗಿಯೂ ಅವರು ಮಾತನಾಡಿದ್ದಾರೆ.
‘ಕಾಂತಾರ 2’ (Kantara 2) ಸಿನಿಮಾದ ಬಜೆಟ್ (Budget) ಬಗ್ಗೆ ಹಲವು ದಿನಗಳಿಂದ ಚರ್ಚೆ ನಡೆಯುತ್ತಲೇ ಇದೆ. ಕಾಂತಾರ ಸಿನಿಮಾದ ಬಜೆಟ್ ಗಿಂತ ಎರಡ್ಮೂರು ಪಟ್ಟು ಹೆಚ್ಚಿನ ಬಜೆಟ್ ಬೇಡುವಂತಹ ಚಿತ್ರ ಇದಾಗಲಿದೆ ಎಂದು ಹೇಳಲಾಗಿತ್ತು. ಆದರೆ, ನಿಜವಾದ ಬಜೆಟ್ ಅನ್ನು ರಾಜ್ ಬಿ ಶೆಟ್ಟಿ (Raj B Shetty) ಬಾಯ್ಬಿಟ್ಟಿದ್ದಾರೆ.
ಸದ್ಯ ರಾಜ್ ಬಿ ಶೆಟ್ಟಿ ಅವರ ಟೋಬಿ ಸಿನಿಮಾ ಮಲಯಾಳಂನಲ್ಲಿ ಬಿಡುಗಡೆ ಆಗುತ್ತಿದೆ. ಹೀಗಾಗಿ ಕೇರಳದಲ್ಲಿ ಅವರು ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಈ ಸಂದರ್ಭದಲ್ಲಿ ಅಲ್ಲಿನ ಮಾಧ್ಯಮವೊಂದರ ಜೊತೆ ಮಾತನಾಡಿರುವ ರಾಜ್ ಬಿ ಶೆಟ್ಟಿ ಕಾಂತಾರ 2 ಸಿನಿಮಾದ ಅಂದಾಜು ಬಜೆಟ್ ಅನ್ನು ಹೇಳಿಕೊಂಡಿದ್ದಾರೆ. ಇದು ನೂರು ಕೋಟಿ ಬೇಡುವಂತಹ ಚಿತ್ರ ಎಂದು ಮಾತನಾಡಿದ್ದಾರೆ.
ಕಾಂತಾರ 2 ಸಿನಿಮಾ ಸ್ಕ್ರಿಪ್ಟ್ ಹಂತದಲ್ಲಿದೆ. ಇದು ನೂರಾರು ಕೋಟಿ ಬಜೆಟ್ ನಲ್ಲಿ ತಯಾರಾಗುವಂತಹ ಬಿಗ್ ಬಜೆಟ್ ಸಿನಿಮಾ ಎಂದು ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ. ಅಲ್ಲಿಗೆ ಕಾಂತಾರ 2 ಸಿನಿಮಾದ ಬಜೆಟ್ ಬಹಿರಂಗವಾಗಿದೆ. ಇದರ ಜೊತೆಗೆ ಚಾರ್ಲಿ ಸಿನಿಮಾದ ಬಗ್ಗೆಯೂ ಮಾಹಿತಿ ಹಂಚಿಕೊಂಡಿದ್ದು, ಚಾರ್ಲಿ 2 ಸಿನಿಮಾ ಬರುವುದಕ್ಕೆ ಸಾಧ್ಯವೆ ಇಲ್ಲ. ನಿರ್ದೇಶಕರು ಬೇರೆ ಕಥೆಯಲ್ಲಿ ಮಗ್ನರಾಗಿದ್ದಾರೆ ಎಂದಿದ್ದಾರೆ.
ಚಿತ್ರರಂಗದಲ್ಲಿ ಇತಿಹಾಸ ಸೃಷ್ಟಿಸಿದ ‘ಕಾಂತಾರ’ (Kantara) ಚಿತ್ರವು ಇದೀಗ 1 ವರ್ಷ ಪೂರೈಸಿದೆ. ಇದೇ ಖುಷಿಯಲ್ಲಿ ನಟ ಕಮ್ ನಿರ್ದೇಶಕ ರಿಷಬ್ ಶೆಟ್ಟಿ, ಸಕ್ಸಸ್‌ಗೆ ಕಾರಣವಾದ ಎಲ್ಲರಿಗೂ ವಿಶೇಷವಾಗಿ ಧನ್ಯವಾದ ತಿಳಿಸಿದ್ದಾರೆ. ಈ ಕುರಿತು ಸೋಶಿಯಲ್ ಮೀಡಿಯಾದಲ್ಲಿ ನಟ ಪೋಸ್ಟ್ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ಸಂಯುಕ್ತಾ ಬಟ್ಟೆಗೆ ನೆಗೆಟಿವ್ ಕಾಮೆಂಟ್ಸ್, ತಿರುಗೇಟು ನೀಡಿದ ಕಿಶನ್ ಬಿಳಗಲಿ
ರಿಷಬ್ ಶೆಟ್ಟಿ (Rishab Shetty) ನಟನೆ ಮತ್ತು ನಿರ್ದೇಶನದ ‘ಕಾಂತಾರ’ (Kantara) ಸಿನಿಮಾ ರಿಲೀಸ್ ಆಗಿ 1 ವರ್ಷ ಪೂರೈಸಿದೆ. ಕಳೆದ ವರ್ಷ 30ಕ್ಕೆ ಕಾಂತಾರ ಸಿನಿಮಾ ರಿಲೀಸ್ ಆಗಿತ್ತು. ದೈವದ ಪಂಜುರ್ಲಿ ಕಥೆಯನ್ನ ಅಭಿಮಾನಿಗಳು ಮೆಚ್ಚಿ ಗೆಲ್ಲಿಸಿದ್ದರು. ಈ ಅಭೂತಪೂರ್ವ ಯಶಸ್ಸಿಗೆ ಕಾರಣವಾದ ಎಲ್ಲರಿಗೂ ನಾನು- ನನ್ನ ತಂಡ ಸದಾ ಚಿರಋಣಿ ಎಂದು ರಿಷಬ್ ಶೆಟ್ಟಿ ಟ್ವೀಟ್ ಮಾಡಿದ್ದಾರೆ.
ಕಾಂತಾರಕ್ಕೆ ಒಂದು ವರ್ಷದ ಸಂಭ್ರಮ. ಈ ಅಭೂತಪೂರ್ವ ಯಶಸ್ಸಿಗೆ ಕಾರಣವಾದ ಎಲ್ಲರಿಗೂ ನಾನು ನನ್ನ ತಂಡ ಸದಾ ಚಿರಋಣಿ ????.
‘ಕಾಂತಾರ’ ಚಿತ್ರ ರಿಲೀಸ್ ಬಳಿಕ ಕೋಟಿ ಕೋಟಿ ಕಲೆಕ್ಷನ್ ಮಾಡುವ ಮೂಲಕ ರಿಷಬ್ ಸಿನಿಮಾ ಜನಪ್ರಿಯತೆ ಗಳಿಸಿತ್ತು. ಕರಾವಳಿ ಸೊಗಡಿನ ದೈವದ ಕಥೆಗೆ ಅಭಿಮಾನಿಗಳು ಫಿದಾ ಆಗಿದ್ದರು. ಬಹುಭಾಷೆಗಳಲ್ಲಿ ಚಿತ್ರ ಸಕ್ಸಸ್ ಕಂಡಿತ್ತು. ಕಾಂತಾರ ಸಿನಿಮಾವನ್ನ ಹೊಂಬಾಳೆ ಸಂಸ್ಥೆ ನಿರ್ಮಾಣ ಮಾಡಿತ್ತು. ಕಾಂತಾರ ಸಕ್ಸಸ್ ಬಳಿಕ ಕಾಂತಾರ 2 ಮಾಡಲು ಸಿದ್ಧತೆ ನಡೆದಿದ್ದು, ಸದ್ಯದಲ್ಲೇ ಚಿತ್ರೀಕರಣ ಶುರುವಾಗಲಿದೆ.
ರಿಷಬ್ ಶೆಟ್ಟಿ ಜೋಡಿಯಾಗಿ ಮೂಗುತಿ ಸುಂದರಿ ಸಪ್ತಮಿ ಗೌಡ (Saptami Gowda) ಸಾಥ್ ನೀಡಿದ್ದರು. ಪ್ರಮೋದ್ ಶೆಟ್ಟಿ, ಅಚ್ಯುತ್ ಕುಮಾರ್, ಕಿಶೋರ್ ಸೇರಿದಂತೆ ಹಲವರು ನಟಿಸಿದ್ದರು.
ಭಾರತೀಯ ಸಿನಿಮಾ ರಂಗದ ಹೆಮ್ಮೆಯ ನಿರ್ಮಾಣ ಸಂಸ್ಥೆಯಾದ ಹೊಂಬಾಳೆ ಫಿಲ್ಮ್ಸ್ (Hombale Films) ಐದು ವರ್ಷದಲ್ಲಿ ಬರೋಬ್ಬರಿ ಮೂರು ಸಾವಿರ ಕೋಟಿ ರೂಪಾಯಿ ಬಂಡವಾಳ ಹೂಡುವುದಾಗಿ ಈ ಹಿಂದೆಯೇ ತಿಳಿಸಿದೆ. ಕೇವಲ ಕನ್ನಡದಲ್ಲಿ ಮಾತ್ರವಲ್ಲ ಅದು ಭಾರತೀಯ ನಾನಾ ಭಾಷೆಗಳ ಚಿತ್ರಗಳನ್ನು ನಿರ್ಮಾಣ ಮಾಡಲು ಮುಂದಾಗಿದೆ. ಕಾಂತಾರ, ಕೆಜಿಎಫ್ ರೀತಿಯ ಹಿಟ್ ಚಿತ್ರಗಳನ್ನು ನೀಡಿರುವ ಈ ಸಂಸ್ಥೆ ಹಲವಾರು ಚಿತ್ರಗಳಿಗೆ ಈಗಾಗಲೇ ಹಣ ಹೂಡಿದೆ.
ಕನ್ನಡ, ಮಲಯಾಳಂ, ತೆಲುಗು, ತಮಿಳು ಮತ್ತು ಹಿಂದಿಯಲ್ಲಿ ಚಿತ್ರವನ್ನು ನಿರ್ಮಾಣ ಮಾಡಲು ಹೊಂಬಾಳೆ ಫಿಲ್ಮ್ಸ್ ಸಿದ್ಧತೆ ಮಾಡಿಕೊಂಡಿದೆ. ಈಗಾಗಲೇ ಕನ್ನಡದ ಕಾಂತಾರ ಮತ್ತು ಕೆಜಿಎಫ್ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡಿವೆ. ಈ ಸಂಸ್ಥೆಯ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ ಸಲಾರ್ (Salar) ಸದ್ಯದಲ್ಲೇ ಬಿಡುಗಡೆ ಆಗಲಿದೆ.
ಪ್ರಭಾಸ್ ಅಭಿನಯದ ‘ಸಲಾರ್’ ಚಿತ್ರದ ಬಿಡುಗಡೆ ಯಾವಾಗ ಎಂಬ ಅಭಿಮಾನಿಗಳ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಹೊಂಬಾಳೆ ಫಿಲಂಸ್ ನಿರ್ಮಾಣದ, ಪ್ರಶಾಂತ್ ನೀಲ್ ನಿರ್ದೇಶನದ ಅತ್ಯಂತ ಮಹತ್ವಾಕಾಂಕ್ಷೆಯ ಚಿತ್ರವಾದ ‘ಸಲಾರ್ ಪಾರ್ಟ್ 1 – ಸೀಸ್‍ಫೈರ್’, ಡಿ. 22 ರಂದು ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ.
ಪ್ರೇಕ್ಷಕರಿಗೆ ಗುಣಮಟ್ಟದ ಚಿತ್ರಗಳನ್ನು ನೀಡಬೇಕೆನ್ನುವ ಹೆಬ್ಬಯಕೆಯೊಂದಿಗೆ ಹಲವು ಚಿತ್ರಗಳ ನಿರ್ಮಾಣದಲ್ಲಿ ಹೊಂಬಾಳೆ ಫಿಲಂಸ್ ತೊಡಗಿಸಿಕೊಂಡಿದ್ದು, ಮುಂದಿನ ದಿನಗಳಲ್ಲಿ ‘ಯುವ’, ‘ಕಾಂತಾರ 2’ (Kantara 2), ‘ರಘು ತಥಾ’, ‘ಬಘೀರ’, ‘ಸಲಾರ್ ಪಾರ್ಟ್ 2’, ‘ಕೆಜಿಎಫ್ 3’ (KGF 3), ‘ರಿಚರ್ಡ್ ಆಂಟೋನಿ’, ‘ಟೈಸನ್’ ಮುಂತಾದ ಚಿತ್ರಗಳನ್ನು ನಿರ್ಮಿಸುತ್ತಿದೆ. ಈಗ ‘ಸಲಾರ್ 1’ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗುವ ಮೂಲಕ ಈ ಸಂಭ್ರಮ ಇನ್ನಷ್ಟು ಹೆಚ್ಚಾಗಿದೆ.
‘ಸಲಾರ್ ಪಾರ್ಟ್ 1 – ಸೀಸ್‍ಫೈರ್’ ಚಿತ್ರದ ಬಿಡುಗಡೆ ದಿನಾಂಕದ ಜೊತೆಗೆ ಚಿತ್ರದ ಪೋಸ್ಟರ್ ಸಹ ಬಿಡುಗಡೆಯಾಗಿದೆ. ಈ ಚಿತ್ರದ ಮೂಲಕ ‘ಬಾಹುಬಲಿ’ ಖ್ಯಾತಿಯ ಪ್ರಭಾಸ್, ‘ಕೆಜಿಎಫ್ 1’ ಮತ್ತು ‘ಕೆಜಿಎಫ್ 2’ ಚಿತ್ರದ ನಿರ್ಮಾಪಕ ವಿಜಯ್ ಕಿರಗಂದೂರು ಮತ್ತು ನಿರ್ದೇಶಕ ಪ್ರಶಾಂತ್ ನೀಲ್ ಮೊದಲ ಬಾರಿಗೆ ಜೊತೆಯಾಗಿ ಕೆಲಸ ಮಾಡಿದ್ದು, ಆಕ್ಷನ್ ಚಿತ್ರಗಳಲ್ಲಿ ನಟನೆ, ನಿರ್ಮಾಣ ಮತ್ತು ನಿರ್ದೇಶನದಲ್ಲಿ ಜನಪ್ರಿಯವಾದ ಮೂವರು ಒಟ್ಟಿಗೆ ಕೆಲಸ ಮಾಡುತ್ತಿರುವುದು ವಿಶೇಷ. ಭಾರತದ ಅತೀ ದೊಡ್ಡ ಆಕ್ಷನ್ ಚಿತ್ರ ಎಂಬ ಹೆಗ್ಗಳಿಕೆಗೆ ಈ ಚಿತ್ರ ಪಾತ್ರವಾಗಿದ್ದು, ಇದುವರೆಗೂ ಕಂಡು ಕೇಳರಿಯದ ಬೃಹತ್ ಆಕ್ಷನ್ ದೃಶ್ಯಗಳು ಈ ಚಿತ್ರದ ಹೈಲೈಟ್ ಆಗಲಿದೆ ಎಂದು ಹೇಳಲಾಗಿದೆ.
ಈ ಚಿತ್ರದಲ್ಲಿ ಪ್ರಭಾಸ್ ಜೊತೆಗೆ ಪೃಥ್ವಿರಾಜ್ ಸುಕುಮಾರನ್, ಶ್ರುತಿ ಹಾಸನ್, ಜಗಪತಿ ಬಾಬು ಮುಂತಾದವರು ನಟಿಸುತ್ತಿದ್ದು, ಕ್ರಿಸ್ಮಸ್ ಅಂಗವಾಗಿ ಡಿಸೆಂಬರ್ 22ರಂದು ಹಲವು ರಾಷ್ಟ್ರಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ.