Tag: ಕಾಂಬಿನೇಷನ್

  • ವಿಜಯ್ ಅಭಿಮಾನಿಗಳಿಗೆ ಶಾಕ್ ಕೊಟ್ಟ ನಿರ್ದೇಶಕ ವೆಟ್ರಿಮಾರನ್

    ವಿಜಯ್ ಅಭಿಮಾನಿಗಳಿಗೆ ಶಾಕ್ ಕೊಟ್ಟ ನಿರ್ದೇಶಕ ವೆಟ್ರಿಮಾರನ್

    ರಾಜಕೀಯ ಕಾರಣಕ್ಕಾಗಿ ತಮಿಳಿನ ಹೆಸರಾಂತ ನಟ ದಳಪತಿ ವಿಜಯ್ (Dalpati Vijay) ಶೀಘ್ರದಲ್ಲೇ ಚಿತ್ರರಂಗ ತೊರೆಯಲಿದ್ದಾರೆ ಎನ್ನುವ ಗುಸುಗುಸು ಕೇಳಿ ಬರುತ್ತಿದೆ. ಕೈಯಲ್ಲಿರೋ ಪ್ರಾಜೆಕ್ಟ್ ಮುಗಿದ ತಕ್ಷಣವೇ ಅವರು ರಾಜಕಾರಣದಲ್ಲಿ ಸಕ್ರೀಯರಾಗಿ, ಮುಂದಿನ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಲಿದ್ದಾರೆ ಎನ್ನುವುದು ಅವರ ಆಪ್ತರ ಮಾಹಿತಿ.

    ವಿಜಯ್ ಒಪ್ಪಿಕೊಂಡಂತೆ ಅವರ 69ನೇ ಸಿನಿಮಾವೇ ಕೊನೆಯ ಚಿತ್ರ ಎಂದು ಹೇಳಲಾಗುತ್ತಿದೆ. ಈ ಸಿನಿಮಾವನ್ನು ವೆಟ್ರಿ ಮಾರನ್ (Vetrimaran) ನಿರ್ದೇಶನ ಮಾಡಲಿದ್ದಾರೆ ಎಂದು ಘೋಷಣೆಯೂ ಆಗಿದೆ. ಆದರೆ, ಈ ವಿಚಾರದಲ್ಲಿ ವೆಟ್ರಿ ಮಾರನ್ ಶಾಕಿಂಗ್ ಸಂಗತಿಯೊಂದನ್ನು ಹೇಳಿಕೊಂಡಿದ್ದಾರೆ. ಈ ಮಾತು ವಿಜಯ್ ಅಭಿಮಾನಿಗಳಿಗೆ ಶಾಕ್ ನೀಡಿದೆ.

    ವೆಟ್ರಿಮಾರನ್ ಮತ್ತು ವಿಜಯ್ ಕಾಂಬಿನೇಷನ್ (Combination) ಚಿತ್ರವೆಂದರೆ ಕಾಯುವಿಕೆ ಸಹಜ. ಮತ್ತೊಂದು ಅದ್ಭುತ ಸಿನಿಮಾ ತೆರೆಯ ಮೇಲೆ ಬರಲಿದೆ ಎಂದೇ ಅಭಿಮಾನಿಗಳ ಆಸೆ ಆಗಿತ್ತು. ಆದರೆ, ಈ ಸಿನಿಮಾ ತೆರೆ ಕಾಣೋದು ಅನುಮಾನ ಎಂದು ವೆಟ್ರಿ ಹೇಳಿಕೊಂಡಿದ್ದಾರೆ. ಈ ಮಾತು ಅಭಿಮಾನಿಗಳಲ್ಲಿ ನಿರಾಸೆ ತಂದಿದ್ದು ಸುಳ್ಳಲ್ಲ. ಯಾಕೆ ಅವರು ಹಾಗೆ ಹೇಳಿದರು ಎನ್ನುವುದನ್ನು ಮುಂದಿನ ದಿನಗಳಲ್ಲಿ ಅವರೇ ಸ್ಪಷ್ಟನೆ ನೀಡಬಹುದು.

    ವಿಜಯ್ 69ನೇ ಚಿತ್ರಕ್ಕೆ ಸಮಂತಾ (Samantha) ನಾಯಕಿಯಾಗಿ ನಟಿಸುತ್ತಾರೆ ಎಂದು ಹೇಳಲಾಗಿತ್ತು. ಈ ಚಿತ್ರಕ್ಕೆ ಖ್ಯಾತ ನಿರ್ಮಾಣ ಸಂಸ್ಥೆಯೊಂದು ನಿರ್ಮಾಣದ ಹೊಣೆ ಹೊತ್ತಿದೆ ಎನ್ನುವ ಸುದ್ದಿಯೂ ಇತ್ತು. ಆದರೆ, ಸಿನಿಮಾನೇ ಬರೋದಿಲ್ಲ ಎನ್ನುವ ಸುದ್ದಿ ಆಘಾತ ಮೂಡಿಸಿದೆ.

  • ಕೊನೆಗೂ ನಿಜವಾಯ್ತು ರಜನಿ-ಅಮಿತಾಭ್ ಕಾಂಬಿನೇಷನ್ ಸಿನಿಮಾ

    ಕೊನೆಗೂ ನಿಜವಾಯ್ತು ರಜನಿ-ಅಮಿತಾಭ್ ಕಾಂಬಿನೇಷನ್ ಸಿನಿಮಾ

    ರೋಬ್ಬರಿ 32 ವರ್ಷಗಳ ಬಳಿಕ ಭಾರತೀಯ ಸಿನಿಮಾ ರಂಗದ ಇಬ್ಬರು ದಿಗ್ಗಜರು ಒಂದಾಗಲಿದ್ದಾರೆ ಎನ್ನುವ ಸುದ್ದಿ ಹಲವು ತಿಂಗಳಿಂದ ಹರಿದಾಡುತ್ತಿತ್ತು. ಇದು ನಿಜನಾ ಎನ್ನುವ ಪ್ರಶ್ನೆ ಅವರ ಅಭಿಮಾನಿಗಳಲ್ಲಿ ಮೂಡಿತ್ತು. ಕೊನೆಗೂ ಅದು ನಿಜವಾಗಿದೆ ಮೂರು ದಶಕದ ಬಳಿಕ ರಜನಿಕಾಂತ್ ಮತ್ತು ಅಮಿತಾಭ್ ಬಚ್ಚನ್ ಒಟ್ಟಾಗಿ ನಟಿಸುತ್ತಿದ್ದಾರೆ.

    ಚಿತ್ರರಂಗದ ದಂತಕಥೆ ಎಂದರೆ ಒಬ್ಬರು ರಜನಿಕಾಂತ್(Rajanikanth), ಮತ್ತೊಬ್ಬರು ಅಮಿತಾಭ್ ಬಚ್ಚನ್. ಈ ಜೋಡಿ ಒಟ್ಟಾಗಿ ಕೆಲವು ಸಿನಿಮಾಗಳಲ್ಲಿ ನಟಿಸಿದ್ದರು.ಬಳಿಕ ತಲೈವಾ- ಬಿಗ್ ಬಿ ಜೋಡಿ ತೆರೆಯ ಮೇಲೆ ಕಾಣಿಸಿಕೊಳ್ಳಲೇಯಿಲ್ಲ. ಈ ಸ್ಟಾರ್ ಕಿಲಾಡಿ ಜೋಡಿ, ಇದೀಗ ತಮ್ಮ ಫ್ಯಾನ್ಸ್‌ಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ತಲೈವಾ-ಬಿಗ್ ಬಿ (Bigg B) ಇಬ್ಬರು ಒಟ್ಟಾಗಿ ಕಾಣಿಸಿಕೊಳ್ಳಲು ಕೌಂಟ್‌ಡೌನ್ ಶುರುವಾಗಿದೆ.

    ಭಾರತೀಯ ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಲೈಕಾ(Lyca Productions) ಮತ್ತೊಂದು ಸಾಹಸಕ್ಕೆ ಕೈ ಹಾಕಿದೆ. ಇಂಡಿಯನ್, ಖೈದಿ ನಂಬರ್ 150, 2.0, ದರ್ಬಾರ್ ಇತ್ತೀಚೆಗೆ ಪೊನ್ನಿಯಿನ್ ಸೆಲ್ವನ್ ನಂತಹ ಹಿಟ್ ಸಿನಿಮಾಗಳನ್ನು ನಿರ್ಮಿಸಿರುವ ಲೈಕಾ, ಸೂಪರ್ ಸ್ಟಾರ್ ರಜನಿಕಾಂತ್ ಜೊತೆ ಮತ್ತೆ ಕೈ ಜೋಡಿಸಿದೆ. ರಜನಿಯ 170ನೇ ಚಿತ್ರಕ್ಕೆ ಹಣ ಸುರಿಯುತ್ತಿದೆ. ವಿಶೇಷ ಅಂದರೆ ರಜನಿ ಜೊತೆ ಬಾಲಿವುಡ್ ದಂತಕಥೆ ಅಮಿತಾಭ್ ಬಚ್ಚನ್ (Amitabh Bacchan) ಕೂಡ ನಟಿಸುತ್ತಿದ್ದಾರೆ.

    ರಜನಿಕಾಂತ್- ಅಮಿತಾಭ್ ಬಚ್ಚನ್ ಭಾರತೀಯ ಚಿತ್ರರಂಗದ ಘಟಾನುಘಟಿ ನಾಯಕರು. ಈ ಇಬ್ಬರು ತಾರೆಯರು ಅಂದಾ ಕಾನೂನ್, ಗೆರಾಫ್ತಾರ್ ಮತ್ತು ಹಮ್ ಸಿನಿಮಾಗಳಲ್ಲಿ ನಟಿಸಿದ್ದರು. ಈ ಚಿತ್ರಗಳು ಪ್ರೇಕ್ಷಕರ ಮೆಚ್ಚುಗೆ ಪಡೆದುಕೊಂಡಿದ್ದವು. ರಜನಿ- ಅಮಿತಾಭ್ ಬಚ್ಚನ್ ಅಭಿನಯಕ್ಕೂ ಮೆಚ್ಚುಗೆಯ ಮಹಾಪೂರ ಹರಿದು ಬಂದಿತ್ತು. ಈ ಸಿನಿಮಾಗಳ ಯಶಸ್ಸಿನ ನಂತರ ಇದೀಗ 32 ವರ್ಷದ ಬಳಿಕ ಒಟ್ಟಿಗೆ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾಗೆ ಲೈಕಾ ಪ್ರೊಡಕ್ಷನ್ ಹಣ ಹಾಕುತ್ತಿದೆ.ಬಹಳ ಅದ್ಧೂರಿಯಾಗಿ ಮೂಡಿ ಬರಲಿರುವ ಈ ಪ್ರಾಜೆಕ್ಟ್ ಮುಂದಿನ ತಿಂಗಳ ಅಂತ್ಯಕ್ಕೆ ಟೇಕಾಫ್ ಆಗಲಿದೆ.

     

    ರಜನಿ-ಅಮಿತಾಭ್ ಬಚ್ಚನ್ ನಟಿಸಲಿರುವ, ಲೈಕಾ ನಿರ್ಮಾಣ ಮಾಡುತ್ತಿರುವ ಈ ಸಿನಿಮಾವನ್ನು ‘ಜೈ ಭೀಮ್’ ಖ್ಯಾತಿಯ ಟಿಜೆ ಜ್ಞಾನವೇಲ್ (TJ Gnanavel) ನಿರ್ದೇಶಿಸಲಿದ್ದಾರೆ. ಜೈ ಭೀಮ್ ಮೂಲಕ ಇಂಡಿಯನ್ ಸಿನಿಲೋಕದಲ್ಲಿ ಸಂಚಲನ ಸೃಷ್ಟಿಸಿದ್ದ ಜ್ಞಾನವೇಲ್ ರಜನಿ- ಅಮಿತಾಭ್ ಬಚ್ಚನ್ ನಂತಹ ಸೂಪರ್ ಸ್ಟಾರ್ಸ್ ಗೆ ಸಿನಿಮಾ ಆಕ್ಷನ್ ಕಟ್ ಹೇಳುತ್ತಿದ್ದು, ಈ ಪ್ರಾಜೆಕ್ಟ್ ಮೇಲೆ ನಿರೀಕ್ಷೆ ಹೆಚ್ಚಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]