Tag: ಕಾಕಲವಾರ

  • ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಬಾಲಕನಿಗೆ ಚಾಕಲೇಟ್ ಕೊಡಿಸಿ ಕೊಲೆ!

    ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಬಾಲಕನಿಗೆ ಚಾಕಲೇಟ್ ಕೊಡಿಸಿ ಕೊಲೆ!

    ಯಾದಗಿರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪ್ರೇಯಸಿಯ ಪುತ್ರನಿಗೆ ಚಾಕಲೇಟ್ ಕೊಡಿಸಿ ಪ್ರಿಯಕರ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಗುರುಮಠಕಲ್ (Gurumatkal) ತಾಲೂಕಿನ ಕಾಕಲವಾರ (Kakalwar) ಗ್ರಾಮದಲ್ಲಿ ನಡೆದಿದೆ.

    ಮೃತ ಬಾಲಕನನ್ನು 11 ವರ್ಷದ ನರೇಂದ್ರ ಎಂದು ಗುರುತಿಸಲಾಗಿದೆ.ಇದನ್ನೂ ಓದಿ:ಟೆಸ್ಟ್‌ ಕ್ರಿಕೆಟ್‌ನಲ್ಲಿ ಐತಿಹಾಸಿಕ ದಾಖಲೆ ಬರೆದ ಜೋ ರೂಟ್‌

    ಹಲವು ವರ್ಷಗಳಿಂದ ನರೇಂದ್ರನ ತಾಯಿ ಗೋವಿಂದಮ್ಮಳ ಜೊತೆ ಅಬ್ದುಲ್ ಎಂಬಾತ ಅಕ್ರಮ ಸಂಬಂಧ ಹೊಂದಿದ್ದ. ಆರೋಪಿ ಅಬ್ದುಲ್ ಗೋವಿಂದಮ್ಮಳನ್ನು ಓಡಿ ಹೋಗಿ ಮದುವೆಯಾಗೋಣ ಎಂದು ಕರೆದಿದ್ದ. ಆದರೆ ಗೋವಿಂದಮ್ಮ ಮಗನಿಗಾಗಿ ಓಡಿ ಹೋಗಿ ಮದುವೆಯಾಗುವುದನ್ನು ನಿರಾಕರಿಸಿದ್ದಳು. ಆಕೆಯ ಮಗನನ್ನು ಕಿರಾಣಿ ಅಂಗಡಿಗೆ ಕರೆದುಕೊಂಡು ಹೋಗಿ ಚಾಕಲೇಟ್ ಕೊಡಿಸಿದ್ದ. ಬಳಿಕ ಅಲ್ಲಿಂದ ಬಾಲಕನನ್ನು ಕರೆದೊಯ್ದು ಕತ್ತು ಹಿಸುಕಿ ಕೊಲೆ ಮಾಡಿದ್ದ. ಆಕೆಯನ್ನು ವರಿಸಿಕೊಳ್ಳಲು ಈ ಕೃತ್ಯವನ್ನು ಎಸಗಿದ್ದ.

    ಸೆ.30ರಂದು ಅಬ್ದುಲ್ ಬಾಲಕನನ್ನು ಕೊಲೆ ಮಾಡಿದ್ದು, ಅನುಮಾನಾಸ್ಪದವಾಗಿ ಕಂಡಿದೆ. ತನಿಖೆ ನಡೆಸಿದಾಗ ಕಿರಾಣಿ ಅಂಗಡಿಯಲ್ಲಿ ಚಾಕಲೇಟ್ ಕೊಡಿಸಿ ಬಾಲಕನನ್ನು ಕರೆದೊಯ್ಯುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಬಾಲಕನ ಸಾವು ನಡೆದ 9 ದಿನಗಳ ಬಳಿಕ ಪ್ರಕರಣ ಬೇಧಿಸಿ ಆರೋಪಿಯನ್ನು ಪೊಲೀಸರು ಜೈಲಿಗಟ್ಟಿದ್ದಾರೆ.

    ಸದ್ಯ ಗುರುಮಠಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: ಸಂಜು ವೆಡ್ಸ್ ಗೀತಾ 2 : ಮಂಗ್ಲಿ ಹಾಡಿಗೆ ಸೊಂಟ ಬಳುಕಿಸಿದ ರಾಗಿಣಿ

  • ಯಾದಗಿರಿಯಲ್ಲಿ ಕಲುಷಿತ ನೀರು ಸೇವಿಸಿ 9 ಮಂದಿ ಅಸ್ವಸ್ಥ – ಕಾಕಲವಾರ ಗ್ರಾಪಂ ಪಿಡಿಒ ಅಮಾನತು

    ಯಾದಗಿರಿಯಲ್ಲಿ ಕಲುಷಿತ ನೀರು ಸೇವಿಸಿ 9 ಮಂದಿ ಅಸ್ವಸ್ಥ – ಕಾಕಲವಾರ ಗ್ರಾಪಂ ಪಿಡಿಒ ಅಮಾನತು

    ಯಾದಗಿರಿ: ಜಿಲ್ಲೆಯ ಕಾಕಲವಾರ (Kakalwar) ಗ್ರಾಮದಲ್ಲಿ ಕಲುಷಿತ ನೀರು (Contaminated Water) ಸೇವಿಸಿ 9 ಮಂದಿ ಅಸ್ವಸ್ಥ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಹಿನ್ನೆಲೆ ಪಿಡಿಒ (PDO) ಅಮಾನತು (Suspension) ಮಾಡಿ ಸಿಇಓ ಗರೀಮಾ ಪನ್ವಾರ್ ಆದೇಶಿಸಿದ್ದಾರೆ.

    ಜಿಲ್ಲೆಯ ಗುರುಮಠಕಲ್ ತಾಲೂಕಿನ ಕಾಕಲವಾರ ಗ್ರಾಮ ಪಂಚಾಯತ್ ಪಿಡಿಒ ಮಲ್ಲರೆಡ್ಡಿಯನ್ನು ಅಮಾನತು ಮಾಡಲಾಗಿದೆ. ಕುಡಿಯಲು ಯೋಗ್ಯವಲ್ಲದ ನೀರು ಎಂದು ವರದಿ ಬಂದರೂ ನೀರು ಪೂರೈಕೆ ಮಾಡಿದ್ದು, ಕಲುಷಿತ ನೀರನ್ನು ಸೇವಿಸಿದ 9 ಮಂದಿ ಅಸ್ವಸ್ಥರಾಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಗ್ರಾಮದ ಮೂರು ಬೋರ್‌ವೆಲ್‌ಗಳ ನೀರು ಕುಡಿಯಲು ಯೋಗ್ಯವಲ್ಲ ಎಂದು ವರದಿ ಬಂದಿತ್ತು. ಆದರೂ ಪಿಡಿಒ ಮಲ್ಲರೆಡ್ಡಿ ಯೋಗ್ಯವಲ್ಲದ ನೀರನ್ನೇ ಗ್ರಾಮಸ್ಥರಿಗೆ ಕುಡಿಯಲು ಪೂರೈಸಿದ್ದರು. ಈ ಹಿನ್ನೆಲೆ ಕರ್ತವ್ಯಲೋಪ ಆಧಾರದ ಮೇಲೆ ಸಸ್ಪೆಂಡ್ ಮಾಡಿ ಸಿಇಒ ಆದೇಶ ನೀಡಿದ್ದಾರೆ. ಇದನ್ನೂ ಓದಿ: ನನ್ನ ಸ್ನೇಹಿತ ಟ್ರಂಪ್‌ ಮೇಲಿನ ದಾಳಿಯಿಂದ ಕಳವಳಗೊಂಡಿದ್ದೇನೆ: ದಾಳಿಗೆ ಪ್ರಧಾನಿ ಮೋದಿ ಖಂಡನೆ

    ಘಟನೆ ಆದ ಕೂಡಲೇ ಸಿಇಒ ಗರೀಮಾ ಪನ್ವಾರ್ ಆಸ್ಪತ್ರೆಗೆ ಭೇಟಿ ನೀಡಿ ಅಸ್ವಸ್ಥರ ಆರೋಗ್ಯ ವಿಚಾರಿಸಿದ್ದಾರೆ. ನಂತರ ಗ್ರಾಮಕ್ಕೆ ಭೇಟಿ ನೀಡಿ ಮಾಹಿತಿ ಪಡೆದಿದ್ದರು. ಪಿಡಿಒ ನಿರ್ಲಕ್ಷ್ಯವೇ ಪ್ರಕರಣಕ್ಕೆ ಕಾರಣ ಎಂಬುದನ್ನು ಅರಿತು ಅಮಾನತು ಮಾಡಿದ್ದಾರೆ. ಇದನ್ನೂ ಓದಿ: ಚಿತ್ರದುರ್ಗದಲ್ಲಿ ಬೈಕ್‌ಗೆ ಕಾರು ಡಿಕ್ಕಿ – ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವು