Tag: ಕಾಗಿನೆಲೆ

  • ಕಾಗಿನೆಲೆ ಅಭಿವೃದ್ಧಿಗಾಗಿ 34 ಕೋಟಿ ಮೊತ್ತದ ಕ್ರಿಯಾ ಯೋಜನೆಗೆ ಮಂಜೂರಾತಿ

    ಕಾಗಿನೆಲೆ ಅಭಿವೃದ್ಧಿಗಾಗಿ 34 ಕೋಟಿ ಮೊತ್ತದ ಕ್ರಿಯಾ ಯೋಜನೆಗೆ ಮಂಜೂರಾತಿ

    ಬೆಂಗಳೂರು/ಹಾವೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಅಧ್ಯಕ್ಷತೆಯಲ್ಲಿ ಬುಧವಾರ (ಅ.29) ನಡೆದ ಕಾಗಿನೆಲೆ (Kaginele) ಅಭಿವೃದ್ಧಿ ಪ್ರಾಧಿಕಾರದ 13ನೇ ಸಭೆಯಲ್ಲಿ ಒಟ್ಟು 34 ಕೋಟಿ ರೂ. ಮೊತ್ತದ ಕ್ರಿಯಾ ಯೋಜನೆಗೆ ಮಂಜೂರಾತಿ ನೀಡಲಾಯಿತು.

    ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿ, ಹಾವೇರಿ (Haveri) ಜಿಲ್ಲೆಯ ಬ್ಯಾಡಗಿ ತಾಲೂಕಿನ ಕನಕದಾಸರ ಕರ್ಮಭೂಮಿ ಕಾಗಿನೆಲೆ ಮತ್ತು ಜನ್ಮಭೂಮಿ ಸ್ಥಳವಾದ ಬಾಡ ಗ್ರಾಮ ಹಾಗೂ ಸುತ್ತಮುತ್ತಲಿನ ಪರಂಪರೆಯ ತಾಣಗಳನ್ನು ಪ್ರವಾಸಿ ಕೇಂದ್ರವಾಗಿ ಅಭಿವೃದ್ಧಿಗೊಳಿಸುವ 34 ಕೋಟಿ ರೂ. ಮೊತ್ತದ ವಿವಿಧ ಯೋಜನೆಗಳ ಕ್ರಿಯಾ ಯೋಜನೆಗೆ ಮಂಜೂರಾತಿ ನೀಡಲಾಯಿತು. ಕಾಗಿನೆಲೆಯಲ್ಲಿ ಪ್ರತಿ ವರ್ಷ ಕನಕ ಉತ್ಸವವನ್ನು ಆಚರಿಸಲು ಕ್ರಮ ಕೈಗೊಳ್ಳಲಾಗುವುದು. ಉತ್ಸವ ಸಂದರ್ಭದಲ್ಲಿ ಜಿಲ್ಲೆಯ ದಾರ್ಶನಿಕರ ಜೀವನಾದರ್ಶಗಳನ್ನು ಪ್ರತಿಬಿಂಬಿಸುವ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ ಹಾಗೂ ಕನಕ ಅಧ್ಯಯನ ಪೀಠ ಸಮನ್ವಯದಿಂದ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಬೇಕು ಎಂದರು.ಇದನ್ನೂ ಓದಿ: ನಾವು ಮಾತಾಡಿದಷ್ಟು ಪಕ್ಷಕ್ಕೆ ಡ್ಯಾಮೇಜ್, ಸೈಲೆಂಟ್ ಆಗಿ ಇರದಿದ್ರೆ ವಿಪಕ್ಷಗಳಿಗೆ ಆಹಾರ ಆಗ್ತೀವಿ: ರಾಮಲಿಂಗಾ ರೆಡ್ಡಿ

    ಪ್ರಾಧಿಕಾರದಲ್ಲಿ ಸಂಚಿತ ನಿಧಿಯನ್ನು ಸ್ಥಾಪಿಸಿ ಕಾರ್ಯಕ್ರಮಗಳನ್ನು ನಿರಂತರವಾಗಿ ಕೈಗೊಳ್ಳಲು ಕ್ರಮಕೈಗೊಳ್ಳಬೇಕು. ಪ್ರಾಧಿಕಾರದ ಆದಾಯ ಹೆಚ್ಚಳಕ್ಕೆ ಯೋಜನೆಗಳನ್ನು ರೂಪಿಸಬೇಕು. ಪ್ರಾಧಿಕಾರದ ವ್ಯಾಪ್ತಿಯಲ್ಲಿ ಕಲಾಭವನ ನಿರ್ಮಾಣ, ಕನಕ ವಸ್ತು ಸಂಗ್ರಹಾಲಯದಲ್ಲಿ ಒಳವಸ್ತು ಶಿಲ್ಪ ಸಂಗ್ರಹಾಲಯ ನಿರ್ಮಾಣ, ಚೆನ್ನಕೇಶವ ದೇವಾಲಯ, ಮೆಟ್ಟಿಲು, ಗೋಪುರ, ಕಮಾನುಗಳ ನಿರ್ಮಾಣ, ಕದರಮಂಡಲಗಿ ವೆಂಕಟೇಶ್ವರ ದೇವಸ್ಥಾನ, ಸಮುದಾಯ ಭವನ ನಿರ್ಮಾಣ ಮಾಡಲು ತೀರ್ಮಾನಿಸಲಾಗಿದೆ. ಪ್ರಾಧಿಕಾರದ ವ್ಯಾಪ್ತಿಯ ಉದ್ಯಾನಗಳ ವಾರ್ಷಿಕ ನಿರ್ವಹಣೆ ಗುತ್ತಿಗೆ ನೀಡುವ ಕುರಿತು ಹಾಗೂ ಕನಕ ಪರಿಸರ ಉದ್ಯಾನದಲ್ಲಿ ಖಾಲಿಯಿರುವ ಜಾಗದಲ್ಲಿ ಬಟಾನಿಕಲ್ ಗಾರ್ಡನ್ ನಿರ್ಮಿಸಲು ನಿರ್ಧರಿಸಲಾಯಿತು. ಕಾಗಿನೆಲೆ ಗ್ರಾಮದ ವ್ಯಾಪ್ತಿಯಲ್ಲಿ ಇತರ ಅಭಿವೃದ್ಧಿ ಕಾಮಗಾರಿಗಳನ್ನು ಶೀಘ್ರ ಕೈಗೊಳ್ಳಲು ಚರ್ಚಿಸಲಾಯಿತು ಎಂದು ತಿಳಿಸಿದರು.

    ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಸಲೀಂ ಅಹ್ಮದ್, ಸಚಿವರಾದ ಶಿವಾನಂದ ಪಾಟೀಲ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ಎಂ ರೇವಣ್ಣ, ಪ್ರಾಧಿಕಾರದ ಅಧಿಕಾರಿಗಳು ಉಪಸ್ಥಿತರಿದ್ದರು.ಇದನ್ನೂ ಓದಿ: ಕಾರಿಲ್ಲ ಅಂದ್ರೆ ಹೆಣ್ಣು ಕೊಡಲ್ಲ ಅಂತ ಟನಲ್ ರಸ್ತೆ ಮಾಡೋಕೆ ಡಿಕೆಶಿ ಹೊರಟಿದ್ದಾರೆ: ತೇಜಸ್ವಿ ಸೂರ್ಯ ವಾಗ್ದಾಳಿ

  • ದುರಹಂಕಾರಿ ಅಂದ್ರೂ ಐ ಡೋಂಟ್ ಕೇರ್, ನಾನು ಸ್ವಾಭಿಮಾನಿ: ಸಿದ್ದರಾಮಯ್ಯ

    ದುರಹಂಕಾರಿ ಅಂದ್ರೂ ಐ ಡೋಂಟ್ ಕೇರ್, ನಾನು ಸ್ವಾಭಿಮಾನಿ: ಸಿದ್ದರಾಮಯ್ಯ

    – ಮುಂದುವರಿದ ಜಾತಿ ಹೆಸರಿನಲ್ಲಿ ಸಮಾವೇಶ ಮಾಡಿದರೆ ಅದು ಜಾತೀಯತೆ
    – ಹಿಂದುಳಿದ ವರ್ಗದವರು ಸಮಾವೇಶ ಮಾಡಿದರೆ ಅದು ಜಾತೀಯತೆ ಆಗಲ್ಲ

    ಬೆಂಗಳೂರು: ನನ್ನನ್ನು ದುರಹಂಕಾರಿ ಎನ್ನುತ್ತಾರೆ. ಐ ಡೋಂಟ್ ಕೇರ್, ನಾನು ಸ್ವಾಭಿಮಾನಿ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಿದ್ದಾರೆ.

    ಶ್ರೀ ಕಾಗಿನೆಲೆ (Kaginele Mutt) ಮಹಾಸಂಸ್ಥಾನ ಕನಕಗುರುಪೀಠ, ಶಾಖಾಮಠ, ಕೇತೋಹಳ್ಳಿ ಬೆಂಗಳೂರಿನ ಭಕ್ತ ಭಂಡಾರದ ಕುಟೀರವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ನಮ್ಮ ಸಮುದಾಯದವರು ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಬೇಕು. ವಿದ್ಯಾವಂತರಾದರೆ ಸ್ವಾಭಿಮಾನ ಬೆಳೆಯುತ್ತದೆ ಎಂದು ಅಭಿಪ್ರಾಯಪಟ್ಟರು.

    ಮೇಲ್ವರ್ಗದ ಬಡವ ಬಂದರೆ ಏನು ಸ್ವಾಮಿ ಎನ್ನುತ್ತಾರೆ. ದಲಿತನೊಬ್ಬ (Dalits) ವಿದ್ಯಾವಂತ ಶ್ರೀಮಂತ ಬಂದರೆ ಏಕವಚನದಲ್ಲಿ ಮಾತನಾಡಿಸುತ್ತಾರೆ. ನನ್ನನ್ನು ನೋಡಿದಾಗ ಕೆಲವರು ಸಿದ್ದರಾಮಯ್ಯಗೆ ದುರಹಂಕಾರ ಎನ್ನುತ್ತಾರೆ. ಆದರೆ ನಾನು ಸ್ವಾಭಿಮಾನಿಯೇ ಹೊರತು ದುರಹಂಕಾರಿ ಅಲ್ಲ. ನನ್ನನ್ನ ದುರಹಂಕಾರಿ ಅಂದರೆ ಕೇರ್ ಮಾಡುವುದಿಲ್ಲ ಎಂದು ಹೇಳಿದರು. ಇದನ್ನೂ ಓದಿ: Heart Attack | ರಾಜ್ಯದಲ್ಲಿಂದು ಐವರು ಬಲಿ – ವಿದ್ಯಾರ್ಥಿಗಳ ಹೃದಯ ತಪಾಸಣೆಗೆ ರಾಜಣ್ಣ ಸೂಚನೆ

    ಪ್ರಜಾಪ್ರಭುತ್ವದಲ್ಲಿ ಮಾತನಾಡುವ ಹಕ್ಕಿದೆ. ಅವರು ದುರಹಂಕಾರಿ ಅಂದರು ಐ ಡೋಂಟ್ ಕೇರ್. ನಿಮ್ಮನ್ನು ದುರಹಂಕಾರಿ ಅಂದರೂ ಸ್ವಾಭಿಮಾನಿಗಳಾಗಿ ಬದುಕಿ ಎಂದು ಸಲಹೆ ನೀಡಿದರು.

    ಬಂಗಾರಪ್ಪ ಅವರನ್ನು ಆಹ್ವಾನಿಸಲು ಹೋದಾಗ 25 ಲಕ್ಷ ರೂ. ದುಡ್ಡು ಕೊಡಲು ಬಂದರು. ಆಗ ಕುರುಬರು (Kurubas) ಅಷ್ಟು ಬಡವರಿಲ್ಲ ಅಂತ ವಾಪಸ್‌ ನೀಡಿದೆ. ಹರಿ‌ಕೋಡೆ ಅವರು ನಾನು ಊಟ ಹಾಕಿಸುತ್ತೇನೆ ಎಂದಿದ್ದರು. ಅವರಿಗೂ ಬೇಡ ಎಂದೆವು. 5-6 ಲಕ್ಷ ಜನ ಸೇರಿದ ಕಾರ್ಯಕ್ರಮದಲ್ಲಿ ಯಾರಿಗೆ ಮಠ ಇಲ್ವೋ ಅವರಿಗೆಲ್ಲ ಈ ಮಠ ಅಂತ ಘೋಷಣೆ ಮಾಡಿದೆವು ಎಂದು ಹಳೆಯ ನೆನಪು ಹಂಚಿಕೊಂಡರು. ಇದನ್ನೂ ಓದಿ: ಮಲಗಿದ್ದಲ್ಲೇ ಹೃದಯಾಘಾತದಿಂದ ಯೋಧ ಸಾವು ಹುಟ್ಟೂರಲ್ಲಿ ಸೇನಾ ಗೌರವಗಳೊಂದಿಗೆ ಅಂತ್ಯಕ್ರಿಯೆ

    ಮಠಗಳು ಜನರಲ್ಲಿ ಜಾಗೃತಿ ಮೂಡಿಸಬೇಕು. ಮಠಗಳು ಆಗದಿದ್ದರೆ ಶಿಕ್ಷಣ, ಆರೋಗ್ಯ ಸಂಘಟನೆ ಆಗುವುದಿಲ್ಲ. ಸಮಾಜದಲ್ಲಿ ಜಾತಿ ವ್ಯವಸ್ಥೆ ಇದೆ. ಜಾತಿಯನ್ನ ಗುರುತಿಸಬೇಕು, ಜಾತಿಯನ್ನ ನಾಶ ಮಾಡಬೇಕು ಎಂದು ಕುವೆಂಪು ಹೇಳಿದರು. ಎಲ್ಲರ ಸರ್ವೋದಯ ಆಗಬೇಕು ಎಂದು ಮಹಾತ್ಮ ಗಾಂಧೀಜಿ ಕರೆ ನೀಡಿದ್ದರು. ಕುವೆಂಪು ಅವರು ಸಮಪಾಲು, ಸಮಬಾಳು ಆಗ್ಬೇಕು ಎಂದರು. ದೇಶದ ಸಂಪತ್ತು, ಅಧಿಕಾರ ಎಲ್ಲರಿಗೂ ಹಂಚಿಕೆ ಆಗಬೇಕು ಎಂದು ತಿಳಿಸಿದರು.

     

    ಜಾತಿಗೊಂದು ಮಠ ಬೇಡ ಎಂದು ನಾನು ಹೇಳುವುದಿಲ್ಲ. ಜಾತಿ ಎಂಬುದು ವಾಸ್ತವಿಕ, ಮುಂದುವರಿದ ಜಾತಿ (Caste) ಹೆಸರಿನಲ್ಲಿ ಸಮಾವೇಶ ಮಾಡಿದರೆ ಅದು ಜಾತೀಯತೆ ಆಗುತ್ತದೆ. ಹಿಂದುಳಿದ ವರ್ಗದವರು ಜಾತಿ ಸಮಾವೇಶ ಮಾಡಿದರೆ ಅದು ಜಾತೀಯತೆ ಆಗುವುದಿಲ್ಲ. ಎಲ್ಲರೂ ವಿದ್ಯಾವಂತರಾಗಿ, ಸಂಘಟಿತರಾಗಿ ಎಂದು ಅಂಬೇಡ್ಕರ್ ಹೇಳಿದ್ದಾರೆ. ಶೋಷಿತ ವರ್ಗದ ಜನ ಇದನ್ನು ಪಾಲನೆ ಮಾಡಬೇಕು. ಇಲ್ಲವಾದರೆ ಸಮ ಸಮಾಜ ಆಗುವುದು ಕಷ್ಟ. ನಾವು ಕುರುಬರನ್ನೇ ಅಭಿವೃದ್ಧಿ ಪಡಿಸಲು ಈ ಮಠ ಕಟ್ಟಿಲ್ಲ. ಅನ್ಯಾಯವಾಗಿರುವವರಿಗೆ ಈ ಮಠ ಕಟ್ಟಿದ್ದೇವೆ. ಎಲ್ಲರೂ ಮುಖ್ಯ ವಾಹಿನಿಗೆ ಬರಬೇಕು ಆಗ ಮಾತ್ರ ಸಮ ಸಮಾಜ ನಿರ್ಮಾಣ ಆಗುತ್ತದೆ ಎಂದು ಅಭಿಪ್ರಾಯ ಪಟ್ಟರು.

    ಬೇರೆಯವರು ಮಾಡಿರುವ ಮಠ ತಪ್ಪು ಎಂದು ನಾನು ಹೇಳುವುದಿಲ್ಲ. ಸಿದ್ದರಾಮಯ್ಯ ಸಮುದಾಯಕ್ಕೆ ಏನು ಮಾಡಿದ್ದಾನೆ ಎಂದು ಕೆಲವರು ಕೇಳುತ್ತಾರೆ. ಕೇಳುವುದು ಒಳ್ಳೆಯದು ಯಾವತ್ತು ಪ್ರಶ್ನೆ ಮಾಡಿ ಒಪ್ಪಿಕೊಳ್ಳಬೇಕು ಎಂದು ಸಮಾಜಕ್ಕಾಗಿ ನಾನು ಏನೇನು ಮಾಡಿದ್ದೇನೆ ಎಂಬುದನ್ನು ಸಿದ್ದರಾಮಯ್ಯ ಈ ಕಾರ್ಯಕ್ರಮದಲ್ಲಿ ವಿವರಿಸಿದರು.

  • ಜಾತಿಗಣತಿ ವರದಿಯನ್ನು ಸ್ವೀಕರಿಸುತ್ತೇವೆ, ಎಷ್ಟೇ ಕಷ್ಟ ಬಂದರೂ ಐದು ಗ್ಯಾರಂಟಿಗಳನ್ನು ಜಾರಿ ಮಾಡುತ್ತೇನೆ: ಸಿಎಂ

    ಜಾತಿಗಣತಿ ವರದಿಯನ್ನು ಸ್ವೀಕರಿಸುತ್ತೇವೆ, ಎಷ್ಟೇ ಕಷ್ಟ ಬಂದರೂ ಐದು ಗ್ಯಾರಂಟಿಗಳನ್ನು ಜಾರಿ ಮಾಡುತ್ತೇನೆ: ಸಿಎಂ

    ಬೆಂಗಳೂರು: ಜಾತಿಗಣತಿಯನ್ನು ಪಡೆಯಬೇಡ ಎಂದು ಆಗ ಪುಟ್ಟರಂಗಶೆಟ್ಟಿಯವರಿಗೆ ಹೇಳಿದ್ದೇ ಆಗಿನ ಮುಖ್ಯಮಂತ್ರಿ ಕುಮಾರಸ್ವಾಮಿಯವರು (H.D.Kumaraswamy). ಆದರೆ ನಾವು ಜಾತಿಗಣತಿ ವರದಿಯನ್ನು ಸ್ವೀಕರಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.

    ಶ್ರೀ ಕಾಗಿನೆಲೆ (Kaginelli) ಮಹಾಸಂಸ್ಥಾನ ಕನಕ ಗುರುಪೀಠ ಶಾಖಾ ಮಠದ ಭೂಮಿ ಪೂಜೆಯನ್ನು ನೆರವೇರಿಸಿ ಅವರು ಮಾತನಾಡಿದರು. ಎಲ್ಲಾ ಶೋಷಿತ ಸಮುದಾಯಗಳಿಗೂ ಮಹಾಸಂಸ್ಥಾನ ಆಗಬೇಕು ಎಂಬ ಉದ್ದೇಶದಿಂದ ಕಾಗಿನೆಲೆ ಮಹಾಸಂಸ್ಥಾನವನ್ನು ಸ್ಥಾಪಿಸಲಾಗಿದೆ. ಆದ್ದರಿಂದ ಇದು ಕೇವಲ ಒಂದು ಜಾತಿ ಅಥವಾ ಸಮಾಜದ ಮಠವಲ್ಲ, ಎಲ್ಲಾ ಶೋಷಿತ ಸಮಾಜಗಳಿಗೆ ಸೇರಿದ ಮಹಾ ಸಂಸ್ಥಾನ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇದನ್ನೂ ಓದಿ: ಡಬಲ್ ಅಲ್ಲ ನಮ್ಮದು ತ್ರಿಪಲ್ ಎಂಜಿನ್ ಸರ್ಕಾರ: ಮಹಾರಾಷ್ಟ್ರ ಸಿಎಂ ಏಕನಾಥ್‌ ಶಿಂಧೆ

    ಶೋಷಿತ ಸಮುದಾಯಗಳಿಗೆ ಧ್ವನಿ ಆಗುವ ಉದ್ದೇಶದಿಂದ ರಾಜ್ಯಾದ್ಯಂತ ಪ್ರವಾಸ ಮಾಡಿ ಸಮುದಾಯವನ್ನು ಒಟ್ಟಾಗಿಸಿ ಮಹಾಸಂಸ್ಥಾನಕ್ಕೆ ನಾಂದಿ ಹಾಡಲಾಯಿತು. ಮೊದಲ ಸ್ವಾಮೀಜಿ ತಾರಕಾನಂದಪುರಿ ಶ್ರೀಗಳ ಸಾನ್ನಿಧ್ಯದಲ್ಲಿ ಸಾಮಾಜಿಕ ಚಟುವಟಿಕೆ ಮಾಡಿಕೊಂಡು ಬರುತ್ತಿತ್ತು. ಈಗ ನಿರಂಜನಾನಂದಪುರಿ ಶ್ರೀಗಳ ಸಾನ್ನಿಧ್ಯದಲ್ಲಿ ಸಮಾಜಮುಖಿ ಕಾರ್ಯಗಳು ನಡೆಯುತ್ತಿವೆ ಎಂದಿದ್ದಾರೆ.

    ನಾವು ಚುನಾವಣೆ ವೇಳೆ ನೀಡಿರುವ 5 ಗ್ಯಾರಂಟಿಗಳನ್ನು ಎಷ್ಟೇ ಕಷ್ಟ ಬಂದರೂ ಜಾರಿ ಮಾಡುತ್ತೇವೆ. ಯಾರೇ ಆಡಿಕೊಂಡರೂ ಈ ವರ್ಷದ ಬಜೆಟ್‍ನಲ್ಲೇ 5 ಘೋಷಣೆಗಳಿಗೂ ಹಣ ಕೊಡುತ್ತೇವೆ. ನಮ್ಮ ಘೋಷಣೆಗಳು ಜಾತಿ-ಧರ್ಮ ಮೀರಿರುವಂತಹ ಘೋಷಣೆಗಳಾಗಿದೆ. ಎಲ್ಲಾ ಜನಾಂಗದ ಬಡವರು ಮತ್ತು ಮಧ್ಯಮ ವರ್ಗದವರು ಬಹಳ ಸಂಕಷ್ಟದಲ್ಲಿದ್ದಾರೆ. ಇವರ ಸಂಕಷ್ಟ ನಿವಾರಣೆಗಾಗಿ ಈ ಘೋಷಣೆಗಳನ್ನು ಈಡೇರಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

    ನಾನು ಅಧಿಕಾರದಲ್ಲಿ ಇರುವವರೆಗೂ ಶೋಷಿತ ಜಾತಿಗಳಿಗೆ, ದಲಿತ ಸಮುದಾಯಗಳಿಗೆ, ಅಲ್ಪ ಸಂಖ್ಯಾತ ಸಮುದಾಯಗಳು ಹಾಗೂ ಎಲ್ಲಾ ಜಾತಿಯ ಬಡವರ ಏಳಿಗೆಗೆ ಶ್ರಮಿಸುತ್ತೇನೆ. ನಾನು ಮತ್ತೆ ಚುನಾವಣೆಗೆ ನಿಲ್ಲುವುದಿಲ್ಲ. ಆದರೆ ಕೊನೆಯವರೆಗೂ ರಾಜಕಾರಣದಲ್ಲಿ ಕ್ರಿಯಾಶೀಲವಾಗಿರುತ್ತೇನೆ. ಬಡವರ ಪರ ರಾಜಕಾರಣ, ಹೋರಾಟ ಮುಂದುವರೆಸುತ್ತೇನೆ. ಈ ಸಲುವಾಗಿ ಹೋರಾಡುತ್ತೇನೆ ಎಂದು ಭರವಸೆ ಎಂದಿದ್ದಾರೆ.

    ಸರ್ಕಾರದ ಅನುದಾನ ಬೇಡ ಸಮಾಜದ ಬೆವರು ಸಾಕು
    ಕಾರ್ಯಕ್ರಮದಲ್ಲಿ ಮಾತನಾಡಿದ ಜಗದ್ಗುರು ಶ್ರೀ ನಿರಂಜನಾನಂದಪುರಿ ಮಹಾಸ್ವಾಮಿಗಳು ಶಾಖಾ ಮಠದ ನಿರ್ಮಾಣಕ್ಕೆ ನಾವು ಸರ್ಕಾರದ ಅನುದಾನ ಕೇಳುವುದಿಲ್ಲ. ಮಠ ನಿರ್ಮಾಣಕ್ಕೆ ಸಮಾಜದ ಬೆವರು ಮತ್ತು ಶ್ರಮ ಸಾಕು ಎಂದರು.

    ಈ ಸಂದರ್ಭದಲ್ಲಿ ಸಚಿವರಾದ ಭೈರತಿ ಸುರೇಶ್ ಅವರು ಶ್ರೀಮಠದ ನಿರ್ಮಾಣಕ್ಕೆ ವೈಯುಕ್ತಿಕವಾಗಿ 50 ಲಕ್ಷ ರೂ. ಅನುದಾನ ನೀಡುವುದಾಗಿ ಘೋಷಿಸಿದರು. ಬಳಿಕ ಹಲವರು ತಮ್ಮ ತಮ್ಮ ಶಕ್ತಿಯನುಸಾರ 50 ಸಾವಿರ ರೂ.ನಿಂದ 25 ಲಕ್ಷ ರೂ.ವರೆಗೂ ನೆರವನ್ನು ಘೋಷಿಸಿದರು.

    ಶಾಸಕ ಎಸ್.ಟಿ.ಸೋಮಶೇಖರ್ ಮಾತನಾಡಿ, 2013-18 ರ ಅವಧಿಯ ಸಿದ್ದರಾಮಯ್ಯ ಸರ್ಕಾರ ಕೊಟ್ಟ ಅನುದಾನ ಮತ್ತು ಅಭಿವೃದ್ಧಿ ಕಾರ್ಯಕ್ರಮಗಳಿಂದ ನಾನು ಎರಡನೇ ಬಾರಿ ಶಾಸಕನಾಗಿ ಆಯ್ಕೆಯಾದೆ. ಯಾವತ್ತೂ ದ್ವೇಷ ರಾಜಕಾರಣ ಮಾಡದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶಿಷ್ಯನಾಗಿ, ಅಭಿಮಾನಿಯಾಗಿ ಶಾಖಾಮಠದ ನಿರ್ಮಾಣಕ್ಕೆ ಅಗತ್ಯ ಇರುವ ಎಲ್ಲಾ ನೆರವನ್ನೂ ನೀಡುತ್ತೇನೆ ಎಂದರು.

    ಕಾರ್ಯಕ್ರಮದಲ್ಲಿ ಮಹಾಸಂಸ್ಥಾನದ ಶ್ರೀ ನಿರಂಜನಾನಂದಪುರಿ ಮಹಾಸ್ವಾಮಿಗಳಯ, ಶಾಖಾ ಮಠದ ಈಶ್ವರಾನಂದಪುರಿ ಮಹಾಸ್ವಾಮೀಜಿ, ಸಿದ್ದರಾಮಾನಂದಪುರಿ ಮಹಾಸ್ವಾಮೀಜಿ, ಶಿವಾನಂದಪುರಿ ಮಹಾಸ್ವಾಮೀಜಿ, ತ್ರಿದಂಡಿ ವೆಂಕಟರಾಮಾನುಜ ಮಹಾಸ್ವಾಮೀಜಿ, ಸಮಾಜದ ಮುಖಂಡರಾದ ಹೆಚ್. ವಿಶ್ವನಾಥ್, ಸಚಿವರಾದ ಭೈರತಿ ಸುರೇಶ್, ಶಾಸಕರಾದ ಎಸ್.ಟಿ ಸೋಮಶೇಖರ್, ಮಾಜಿ ಸಚಿವರಾದ ಹೆಚ್.ಎಂ ರೇವಣ್ಣ, ಕೆ.ಎಸ್ ಈಶ್ವರಪ್ಪ, ಬಂಡೆಪ್ಪ ಕಾಶಂಪುರ್, ಕೊಪ್ಪಳ ವಿವಿ ಕುಪಪತಿಗಳಾದ ಬಿ.ಕೆ ರವಿ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು. ಇದನ್ನೂ ಓದಿ: ಕಾಂಗ್ರೆಸ್ ಸೇರುವ ದುಃಸ್ಥಿತಿ ನನಗೆ ಬಂದಿಲ್ಲ: ಮಾಧುಸ್ವಾಮಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಾಗಿನೆಲೆ ಈಶ್ವರಾನಂದ ಸ್ವಾಮೀಜಿ ಮೇಲೆ ಸಿಡಿಮಿಡಿಗೊಂಡ ಸಿಎಂ

    ಕಾಗಿನೆಲೆ ಈಶ್ವರಾನಂದ ಸ್ವಾಮೀಜಿ ಮೇಲೆ ಸಿಡಿಮಿಡಿಗೊಂಡ ಸಿಎಂ

    ಬೆಂಗಳೂರು: ದೇವಸ್ಥಾನ (Temple) ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಸ್ವಾಮೀಜಿಯ ಮೇಲೆ ಸಿಎಂ ಬಸವರಾಜ ಬೊಮ್ಮಾಯಿ (CM Basavaraj Bommai) ಸಿಡಿಮಿಡಿಗೊಂಡ ಘಟನೆ ನಡೆದಿದೆ.

    ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿನ ಗರುಡಾಚಾರ್ ಪಾಳ್ಯದಲ್ಲಿ ಸಚಿವ ಎಂ.ಟಿ.ಬಿ. ನಾಗರಾಜ್‌ (MTB Nagaraj) ಅವರ ಮನೆ ದೇವರಾದ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನ  ಜೀರ್ಣೋದ್ಧಾರವಾಗಿದ್ದು  ಗುರುವಾರ ಲೋಕಾರ್ಪಣೆ ಮಾಡಲಾಯಿತು.

    ಕಾಗಿನೆಲೆ ಈಶ್ವರಾನಂದ ಸ್ವಾಮೀಜಿ (Kaginele Eshwarananda Swamiji) ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾರ್ಯಕ್ರಮದ ವೇದಿಕೆಯಲ್ಲಿದ್ದರು. ಇದನ್ನೂ ಓದಿ: ಟಿಕೆಟ್ ಘೋಷಣೆ ವೇಳೆ ಸಮಸ್ಯೆ, ಸವಾಲು ನಿರ್ವಹಣೆಗೆ ಬಿಜೆಪಿ ಹೈಕಮಾಂಡ್ ಪ್ರೀಪ್ಲಾನ್

     

    ಈಶ್ವರಾನಂದಪುರಿ ಸ್ವಾಮೀಜಿಗಳು ಮಾತಾನಾಡುತ್ತಾ, ಮುಖ್ಯಮಂತ್ರಿಗಳು ಕೇವಲ ಆಶ್ವಾಸನೆಯನ್ನು ಕೊಡುವ ಮುಖ್ಯಮಂತ್ರಿಗಳಾಗಬಾರದು. ಬೆಂಗಳೂರು (Bengaluru) ನಗರದಲ್ಲಿ ಮಳೆ ಬಂದ ಪ್ರವಾಹ ಸೃಷ್ಟಿಯಾಗಿತ್ತು ಅಧಿಕಾರಿಗಳಿಗೆ ಮತ್ತು ಮುಖ್ಯಮಂತ್ರಿಗಳಿಗೆ ಮನವರಿಕೆ ಆಗುತ್ತಿಲ್ಲ ಎನ್ನುತ್ತಿದ್ದಾಗ ಸಿಡಿಮಿಡಿಗೊಂಡ ಸಿಎಂ ಸ್ವಾಮೀಜಿ ಕೈಯಿಂದ ಮೈಕ್ ಕಸಿದುಕೊಂಡು ಉತ್ತರ ನೀಡಲು ಆರಂಭಿಸಿದರು.

    ಈಗಾಗಲೇ ಕೆಲಸ ಪ್ರಾರಂಭ ಮಾಡಿದ್ದಾರೆ. ಒತ್ತುವರಿ ತೆರವು ಮಾಡುವ ಮೂಲಕ ಆದಷ್ಟು ಬೇಗ ರಾಜಕಾಲುವೆಗಳ ಕೆಲಸ ಪೂರ್ಣ ಮಾಡುತ್ತೇವೆ. ಅದಕ್ಕೆ ಬೇಕಾದ ಎಲ್ಲಾ ಅನುದಾನವನ್ನು ಸಹ ಸರ್ಕಾರದಿಂದ ಕೊಡಲಾಗಿದೆ ಎಂದು ಸಿಎಂ ವೇದಿಕೆಯಲ್ಲೇ ಸ್ವಾಮೀಜಿಗಳಿಗೆ ಪ್ರತ್ಯುತ್ತರ ನೀಡಿದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಟಗರು ಹೆಜ್ಜೆ ಹಿಂದಕ್ಕೆ ಇಟ್ಟಿದೆ ಅಂದ್ರೆ ಮುಂದೆ ಹೆಜ್ಜೆ ಇಡಲು ಸಿದ್ಧವಾಗುತ್ತಿದೆ ಎಂದರ್ಥ: ಸಿದ್ದು ಪರ ಕಾಗಿನೆಲೆ ಶ್ರೀ ಬ್ಯಾಟಿಂಗ್

    ಟಗರು ಹೆಜ್ಜೆ ಹಿಂದಕ್ಕೆ ಇಟ್ಟಿದೆ ಅಂದ್ರೆ ಮುಂದೆ ಹೆಜ್ಜೆ ಇಡಲು ಸಿದ್ಧವಾಗುತ್ತಿದೆ ಎಂದರ್ಥ: ಸಿದ್ದು ಪರ ಕಾಗಿನೆಲೆ ಶ್ರೀ ಬ್ಯಾಟಿಂಗ್

    ದಾವಣಗೆರೆ: ಟಗರು ಕಾಳಗದಲ್ಲಿ ಹೆಜ್ಜೆ ಹಿಂದಕ್ಕೆ ಇಟ್ಟಿದೆ ಎಂದರೆ ಅದು ಹೆದರಿ ಅಂತಾ ಅಲ್ಲ. ಮುಂದೆ ಹೆಜ್ಜೆ ಇಡಲು ಸಿದ್ಧವಾಗುತ್ತಿದೆ ಎಂದು ಸಿನಿಮೀಯ ಸ್ಟೈಲ್ ನಲ್ಲಿ ಹರಿಹರ ತಾಲ್ಲೂಕಿನ ಕಾಗಿನೆಲೆ ಮಠದ ನಿರಂಜನಾನಂದ ಪುರಿ ಸ್ವಾಮೀಜಿ ಹೇಳಿದ್ದಾರೆ.

    ಬೆಳ್ಳೂಡಿಯ ಕಾಗಿನೆಲೆ ಕನಕ ಗುರು ಪೀಠದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸ್ವಾಮೀಜಿ, ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮೌನವಾಗಿರುವುದನ್ನು ಶ್ರೀಗಳು, ಟಗರು ಕಾಳಗಕ್ಕೆ ಹೋಲಿಸಿದ್ದು, ಟಗರು ಕಾಲು ಕೆದರಿ ಮುನ್ನುಗ್ಗಿ ಹೊಡೆದರೆ ಎಲ್ಲಾ ಛಿದ್ರ ಛಿದ್ರವಾಗುತ್ತದೆ ಎಂದು ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದರು.

     

    ಸಮ್ಮಿಶ್ರ ಸರ್ಕಾರ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಸಂಪೂರ್ಣವಾಗಿ ಕಡೆಗಣಿಸಿದೆ. ಇದೇ ಪರಿಸ್ಥಿತಿ ಮುಂದುವರಿದರೆ ಕಾಂಗ್ರೆಸ್ ಪಕ್ಷಕ್ಕೆ ನಷ್ಟವಾಗುತ್ತದೆ. ಅಲ್ಲದೇ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 15 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವುದು ಕಷ್ಟವಾಗುತ್ತದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಅವರಿಗೆ ಶ್ರೀಗಳು ಎಚ್ಚರಿಕೆ ನೀಡಿದರು.

    ಸಾಕಷ್ಟು ಅಧಿಕಾರಿಗಳು ನನ್ನ ಬಳಿ ಬಂದು ವರ್ಗಾವಣೆ ಮಾಡುತ್ತಿರುವ ಕುರಿತು ಅಳಲು ತೊಡಿಕೊಂಡಿದ್ದಾರೆ. ಆದರೆ ಅಧಿಕಾರಿಗಳ ಹೆಸರನ್ನು ಬಹಿರಂಗ ಪಡಿಸುವುದಿಲ್ಲ. ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಆರ್.ಶಂಕರ್ ಅವರಿಗೆ ಮಂತ್ರಿಗಿರಿ ನೀಡಿದ್ದು, ಪಕ್ಷೇತರ ಎಂಬ ಉದ್ದೇಶಕ್ಕೆ ಹೊರತು ಕುರುಬರ ಸಮಾಜದವರು ಅಂತಾ ಅಲ್ಲ. ನಮ್ಮ ಸಮಾಜಕ್ಕೆ ಎರಡು ಸಚಿವ ಸ್ಥಾನ ಕೊಡಬೇಕಾಗಿತ್ತು. ಸಮ್ಮಿಶ್ರ ಸರ್ಕಾರದಲ್ಲಿ ಗೌಡರು, ಲಿಂಗಾಯತರ ಪ್ರಾಬಲ್ಯ ಹೆಚ್ಚಾಗಿದೆ. ಕುರುಬ ಸಮುದಾಯಕ್ಕೆ ಉತ್ತಮ ಸ್ಥಾನ ಮಾನ ಒದಗಿಸಿಕೊಡಬೇಕು ಇಲ್ಲದಿದ್ದರೇ ಉಗ್ರ ಹೋರಾಟ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಶ್ರೀಗಳು ಎಚ್ಚರಿಕೆ ನೀಡಿದರು.

  • ಸಿಎಂ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ ಕಾಗಿನೆಲೆ ಶ್ರೀ

    ಸಿಎಂ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ ಕಾಗಿನೆಲೆ ಶ್ರೀ

    ಬೆಂಗಳೂರು: ಸಮ್ಮಿಶ್ರ ಸರ್ಕಾರದ ಪರ ಹಾಗೂ ವಿರೋಧ ಹೇಳಿಕೆ ನೀಡುವ ಮೂಲಕ ಸ್ವಾಮೀಜಿಗಳು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗುತ್ತಿದ್ದಾರೆ. ನಂಜಾವಧೂತ ಸ್ವಾಮೀಜಿ ಎಚ್‍ಡಿಕೆಯನ್ನು ಬೆಂಬಲಿಸಿದ ಬೆನ್ನಲ್ಲೇ ಕಾಗಿನೆಲೆ ಪೀಠಾಧ್ಯಕ್ಷ ನಿರಂಜನಾನಂದಪುರಿ ಸ್ವಾಮೀಜಿ ವಿರೋಧ ವ್ಯಕ್ತಪಡಿಸಿದ್ದಾರೆ.

    ಮಾಧ್ಯಮದೊಂದಿಗೆ ಮಾತನಾಡಿದ ನಿರಂಜನಾನಂದಪುರಿ ಸ್ವಾಮೀಜಿ, ಸಮ್ಮಿಶ್ರ ಸರ್ಕಾರ ಸಂಪುಟದಲ್ಲಿ ಕುರುಬ ಸಮುದಾಯಕ್ಕೆ ಹೆಚ್ಚಿನ ಸ್ಥಾನಮಾನ ನೀಡಿಲ್ಲ. ಅಷ್ಟೇ ಅಲ್ಲದೇ ಈಗ ಕುರುಬ ಸಮುದಾಯದ ಅಧಿಕಾರಿಗಳನ್ನು ಹತ್ತಿಕ್ಕಲು ಮುಖ್ಯಮಂತ್ರಿ ಸಮ್ಮಿಶ್ರ ಸರ್ಕಾರ ಮಾಡುತ್ತಿದೆ ಎಂದು ಅವರು ಕಿಡಿಕಾರಿದರು.

    ಸಮ್ಮಿಶ್ರ ಸರ್ಕಾರವು ಒಂದು ಜಾತಿ, ಸಮುದಾಯದ ಅಧಿಕಾರಿಗಳ ವಿರುದ್ಧ ದ್ವೇಷ ಸಾಧಿಸುತ್ತಿದೆ. ಇಂತಹ ಬೆಳವಣಿಗೆಯನ್ನು ಕೂಡಲೇ ಕುಮಾರಸ್ವಾಮಿಯವರು ನಿಲ್ಲಿಸಬೇಕು. ಇಲ್ಲವೇ ಪರಿಣಾಮ ಎದುರಿಸಲು ಸಜ್ಜಾಗಬೇಕು ಎಂದು ಎಚ್ಚರಿಕೆ ನೀಡಿದರು.

    ಸರ್ಕಾರ ಸಮುದಾಯದ ದ್ವೇಷ ಸಾಧನೆ ಮಾಡುತ್ತಿದೆಯೇ ಹೊರತು, ರೈತರ ಆತ್ಮಹತ್ಯೆ ತಡೆಯುವ ಯಾವುದೇ ಕ್ರಮಕ್ಕೆ ಮುಂದಾಗುತ್ತಿಲ್ಲ ಎಂದು ಶ್ರೀಗಳು ಸಮ್ಮಿಶ್ರ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದರು.

    ಸರ್ಕಾರಕ್ಕೆ ಎಚ್ಚರಿಕೆ: ಆರಂಭದಲ್ಲಿ ಕುರುಬ ಸಮಾಜದ ಮುಖಂಡರಾದ ಸಿದ್ದರಾಮಯ್ಯರನ್ನು ಸರ್ಕಾರ ಕಡೆಗಣಿಸಿದ್ದ ಸರ್ಕಾರ ಈಗ ಕುರುಬ ಜನಾಂಗದ ಅಧಿಕಾರಿಗಳನ್ನು ವರ್ಗಾವಣೆ ಮಾಡುತ್ತಿದೆ. ಈ ಸರ್ಕಾರ ಅಸ್ತಿತ್ವಕ್ಕೆ ಬರಲು ಕುರುಬ ಸಮಾಜ ಬಹಳ ಮಹತ್ವದ ಪಾತ್ರ ವಹಿಸಿದೆ. ನಮ್ಮ ಸಮಾಜ ಕಡೆಗಣಿಸಿದರೆ ಹೋರಾಟ ಮಾಡಬೇಕಾದೀತು ಎಂದು ಕುರುಬ ಸಮಾಜದ ಮುಖಂಡ ಸಣ್ಣಕ್ಕಿ ಮೈತ್ರಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

    ಬೆಂಗಳೂರಿನಲ್ಲಿ ಬುಧವಾರ ನಡೆದಿದ್ದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಶ್ರೀ ಗುರುಗುಂಡಾ ಬ್ರಹ್ಮೇಶ್ವರ ಸ್ವಾಮಿ ಮಹಾ ಸಂಸ್ಥಾನದ ಪೀಠಾಧ್ಯಕ್ಷ ನಂಜಾವಧೂತ ಸ್ವಾಮೀಜಿ ಅವರು ಸಮ್ಮಿಶ್ರ ಸರ್ಕಾರದ ಪರವಾಗಿ ಮಾತನಾಡಿದ್ದರು. ಅಲ್ಲದೇ ಸರ್ಕಾರ ಉಳಿಸಿಕೊಂಡು ಹೋಗುವಂತೆ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಸಲಹೆ ನೀಡಿರುವುದಾಗಿ ಹೇಳಿಕೆ ನೀಡಿದ್ದರು. ಆದರೆ ಈಗ ಸಮ್ಮಿಶ್ರ ಸರ್ಕಾರ ಎರಡು ಸಮುದಾಯಗಳ ನಡುವೆ ದ್ವೇಷಕ್ಕೆ ಕಾರಣವಾಯಿತೇ ಎನ್ನುವ ಪ್ರಶ್ನೆ ರಾಜಕೀಯ ವಲಯದಲ್ಲಿ ಸದ್ದು ಮಾಡುತ್ತಿದೆ.

  • ಕಪ್ಪೆಯನ್ನು ನುಂಗಲು ಹೋಗಿ ಗಾಳದಲ್ಲಿ ಸಿಲುಕಿ ಒದ್ದಾಡಿದ ನಾಗರಾಜ!

    ಕಪ್ಪೆಯನ್ನು ನುಂಗಲು ಹೋಗಿ ಗಾಳದಲ್ಲಿ ಸಿಲುಕಿ ಒದ್ದಾಡಿದ ನಾಗರಾಜ!

    ಹಾವೇರಿ: ಮೀನಿನ ಗಾಳಕ್ಕೆ ಸಿಕ್ಕಿ ನಾಗರಹಾವು ವಿಲವಿಲ ಒದ್ದಾಡಿದ ಘಟನೆ ಜಿಲ್ಲೆಯ ಕಾಗಿನೆಲೆ ಗ್ರಾಮದಲ್ಲಿ ನಡೆದಿದೆ.

    ಗ್ರಾಮದ ಮೇವಿನ ಬಣವೆ ಬಳಿ ಮೀನಿನ ಗಾಳವೊಂದನ್ನು ಯಾರೋ ಎಸೆದು ಹೋಗಿದ್ದರು. ಈ ಮೀನಿನ ಗಾಳದಲ್ಲಿ ಕಪ್ಪೆಯೊಂದು ಸಿಲುಕಿ ಒದ್ದಾಡುತ್ತಿತ್ತು. ಕಪ್ಪೆಯನ್ನು ನೋಡಿದ ಹಾವು ಕಪ್ಪೆಯನ್ನು ನುಂಗಲು ಬಂದು ಗಾಳಕ್ಕೆ ಸಿಕ್ಕಿಹಾಕಿಕೊಂಡಿದೆ. ಪರಿಣಾಮ ಹಾವು ಸಾವು ಬದುಕಿನ ಮಧ್ಯೆ ಹೋರಾಡುತ್ತಿತ್ತು.

    ಹಾವು ಮೀನಿನ ಗಾಳದಲ್ಲಿ ಸಿಲುಕಿದ್ದನ್ನು ಕಂಡ ಸ್ಥಳೀಯರು ಉರಗ ತಜ್ಞ ಮಣಿ ಎಂಬವರಿಗೆ ವಿಷಯ ತಿಳಿಸಿದ್ದಾರೆ. ಸ್ಥಳಕ್ಕಾಗಮಿಸಿದ ಮಣಿ ಸುಮಾರು ಒಂದು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಗಾಳದಿಂದ ನಾಗರಹಾವನ್ನು ರಕ್ಷಿಸಿದ್ದಾರೆ.

    https://youtu.be/usl_5aKr5sI