Tag: ಕಾಡುಗೋಡಿ

  • ಹೆಣ್ಣು ಕೊಟ್ಟ ಮಾವನನ್ನೇ ಕೊಂದ ಅಳಿಯ – ಶವ ಸುಟ್ಟುಹಾಕಲು ಮಗಳು, ಪತ್ನಿ ಸಾಥ್

    ಹೆಣ್ಣು ಕೊಟ್ಟ ಮಾವನನ್ನೇ ಕೊಂದ ಅಳಿಯ – ಶವ ಸುಟ್ಟುಹಾಕಲು ಮಗಳು, ಪತ್ನಿ ಸಾಥ್

    – ಅಳಿಯ ಹೊಡೆದ ಏಟಿಗೆ ಸ್ಥಳದಲ್ಲೇ ಮೃತಪಟ್ಟಿದ್ದ ಬಾಬು

    ಬೆಂಗಳೂರು: ಅಳಿಯನ ಜೊತೆ ಹೆಂಡತಿ ಮತ್ತು ಮಗಳು ಸೇರಿಕೊಂಡು ತಂದೆಯನ್ನು ಕೊಲೆ ಮಾಡಿ, ಬಳಿಕ ಅಂಬ್ಯುಲೆನ್ಸ್‌ನಲ್ಲಿ ಕೊಂಡೊಯ್ದು ಕೋಲಾರ (Kolar) ಬಳಿ ಶವ ಸುಟ್ಟುಹಾಕಿರುವ ಘಟನೆ ನಗರದ ಕಾಡುಗೋಡಿಯಲ್ಲಿ (Kadugodi) ನಡೆದಿದೆ.

    ಗೋಡೌನ್‌ನಲ್ಲಿ ಕೆಲಸ ಮಾಡ್ತಿದ್ದ ದೇವನಹಳ್ಳಿ (Devanahalli) ಮೂಲದ ಬಾಬು (48) ಕೊಲೆಯಾದ ವ್ಯಕ್ತಿ. ಪತ್ನಿ ಮುನಿರತ್ನ, ಅಳಿಯ ರಾಮಕೃಷ್ಣ ಮತ್ತು ಮಗಳು ಸೇರಿಕೊಂಡು ಕೃತ್ಯ ಎಸಗಿದ್ದಾರೆ.ಇದನ್ನೂ ಓದಿ: ವಾರಣಾಸಿ | 2,200 ಕೋಟಿ ಮೊತ್ತದ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ

    ಮೂರು ತಿಂಗಳ ಹಿಂದೆ ಮೃತ ಬಾಬು ಮಗಳು ಹಾಗೂ ರಾಮಕೃಷ್ಟ ಪ್ರೀತಿಸಿ ಮದುವೆಯಾಗಿದ್ದರು. ಇದು ಬಾಬುಗೆ ಇಷ್ಟವಿರಲಿಲ್ಲ. ಆದರೆ ಮಗಳು ತಂದೆಯ ವಿರೋಧದ ನಡುವೆಯೂ ಮದುವೆಯಾಗಿದ್ದಳು. ಜು.26ರಂದು ಅಳಿಯ ಹಾಗೂ ಮಗಳು ಮನೆಗೆ ಬಂದಿದ್ದರು. ಆಗ ಬಾಬು ಇಬ್ಬರಿಗೂ ಬಾಯಿಗೆ ಬಂದಂತೆ ಬೈಯ್ದಿದ್ದ. ಜೊತೆಗೆ ಸಿಟ್ಟಿನಲ್ಲಿ ತನ್ನ ಹೆಂಡತಿ ಮುನಿರತ್ನಳಿಗೂ ಕಪಾಳ ಮೋಕ್ಷ ಮಾಡಿದ್ದ.

    ಆಗ ಅಳಿಯ ರಾಮಕೃಷ್ಟ ನನ್ನ ಅತ್ತೆಗೆ ಹೊಡೆಯುತ್ತೀರಾ ಎಂದು ಬಾಬು ಕಪಾಳಕ್ಕೆ ಹೊಡೆದಿದ್ದ. ಹೊಡೆದ ಏಟಿಗೆ ಬಾಬು ಅಲ್ಲೇ ಬಿದ್ದು ಮೃತಪಟ್ಟಿದ್ದ. ಈ ವೇಳೆ ಮೂವರು ಸೇರಿಕೊಂಡು ಪ್ಲ್ಯಾನ್‌ ಮಾಡಿ, ಸಂಬಂಧಿಯೊಬ್ಬನ ಅಂಬ್ಯುಲೆನ್ಸ್‌ನ್ನು ಕರೆಸಿದ್ದರು. ಬೆಳಗಿನ ಜಾವ 3ರ ಸುಮಾರಿಗೆ ಶವವನ್ನು ಅಂಬ್ಯುಲೆನ್ಸ್‌ನಲ್ಲಿ ಕೊಂಡೊಯ್ದು ಕೋಲಾರದ ಬಳಿ ಶವವನ್ನು ಸುಟ್ಟು ಹಾಕಿದ್ದರು. ಇದೆಲ್ಲವನ್ನು ನೋಡಿದ್ದ ಬಾಬು ಕಿರಿಮಗಳು ನಾಲ್ಕು ದಿನದ ಬಳಿಕ ಸಂಬಂಧಿಕರಿಗೆ ತಿಳಿಸಿದ್ದಳು. ಬಳಿಕ ಬಾಬು ಸಹೋದರ ಕಾಡುಗೋಡಿ ಪೊಲೀಸ್ (Kadugodi Police) ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

    ದೂರಿನ ಆಧಾರದ ಮೇಲೆ ಎಫ್‌ಐಆರ್ (FIR) ದಾಖಲಿಸಿದ ಪೊಲೀಸರು ಅಳಿಯ, ಮಗಳು ಹಾಗೂ ಹೆಂಡತಿ ಮೂವರ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಅಳಿಯ ಹಾಗೂ ಪತ್ನಿ ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ. ಸದ್ಯ ಪೊಲೀಸರು ಅಳಿಯ ಹಾಗೂ ಪತ್ನಿಯನ್ನು ಬಂಧಿಸಿದ್ದಾರೆ.ಇದನ್ನೂ ಓದಿ: ಜಿಮ್‌ನಲ್ಲಿ ವರ್ಕ್ಔಟ್ ವೇಳೆ ಹೃದಯಾಘಾತ – ಪ್ರತ್ಯೇಕ ಕಡೆ ಇಬ್ಬರು ಸಾವು

  • Bengaluru | ಮಚ್ಚಿನಿಂದ ಕೊಚ್ಚಿ ರೌಡಿಶೀಟರ್ ಭೀಕರ ಹತ್ಯೆ

    Bengaluru | ಮಚ್ಚಿನಿಂದ ಕೊಚ್ಚಿ ರೌಡಿಶೀಟರ್ ಭೀಕರ ಹತ್ಯೆ

    ಬೆಂಗಳೂರು: ರೌಡಿಶೀಟರ್‌ನನ್ನು (Rowdysheetar) ನಡು ರಸ್ತೆಯಲ್ಲಿ ಮಚ್ಚಿನಿಂದ ಮನಸೋ ಇಚ್ಛೆ ಕೊಚ್ಚಿ ದುಷ್ಕರ್ಮಿಗಳು ಕೊಲೆ ಮಾಡಿ ತಲೆಮರಿಸಿಕೊಂಡಿರುವ ಘಟನೆ ಬೆಂಗಳೂರು (Bengaluru) ಹೊರವಲಯದ ಕಾಡುಗೋಡಿಯಲ್ಲಿ (Kadugodi) ನಡೆದಿದೆ.

    ಪುನೀತ್ @ ನೇಪಾಳಿ ಪುನೀತ್ ಕೊಲೆಯಾದ ರೌಡಿಶೀಟರ್. ಕೊಲೆಯಾಗಿರುವ ಪುನೀತ್ ಕಾಡುಗೋಡಿ ಪೊಲೀಸ್ ಠಾಣೆಯ ರೌಡಿಶೀಟರ್ ಆಗಿದ್ದಾನೆ. ಕಾಡುಗೋಡಿ ಠಾಣೆ ರೌಡಿಶೀಟರ್ ಶ್ರೀಕಾಂತ್&ಟೀಂನಿಂದ ಹತ್ಯೆ ನಡೆದಿರುವ ಶಂಕೆ ವ್ಯಕ್ತವಾಗಿದೆ.

    ಶ್ರೀಕಾಂತ್ ಹಾಗೂ ರೌಡಿಶೀಟರ್ ಪುನೀತ್ ನಡುವೆ ಆಗಾಗ ಸಣ್ಣಪುಟ್ಟ ವಿಚಾರಕ್ಕೆ ಗಲಾಟೆ ಆಗುತ್ತಿರುತ್ತಿತ್ತು. ಪುನೀತ್, ಶ್ರೀಕಾಂತ್‌ನನ್ನು ಕೊಲೆ ಮಾಡುವುದಾಗಿ ಎಲ್ಲರ ಮುಂದೆ ಹೇಳಿಕೊಂಡು ಓಡಾಡುತ್ತಿದ್ದ. ಅದನ್ನೇ ಶ್ರೀಕಾಂತ್ ಮನಸ್ಸಿನಲ್ಲಿ ಇಟ್ಟುಕೊಂಡಿದ್ದ. ಮಂಗಳವಾರ ರಾತ್ರಿ ಕಾಡುಗೋಡಿಯ ವಿಜಲಕ್ಷ್ಮೀ ಲೇಔಟ್ ಬಳಿ ಪುನೀತ್ ಇರುವಾಗ ಬೈಕ್‌ನಲ್ಲಿ ಬಂದ ನಾಲ್ವರು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿ ಎಸ್ಕೇಪ್ ಆಗಿದ್ದಾರೆ.

    ಘಟನೆ ಸಂಬಂದ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

  • ಕಾರಿಗೆ ಹತ್ತಿಸಿಕೊಂಡು ಅಪ್ರಾಪ್ತೆಗೆ ಲೈಂಗಿಕ ಕಿರುಕುಳ – ಡ್ಯಾನ್ಸ್ ಮಾಸ್ಟರ್ ಅರೆಸ್ಟ್

    ಕಾರಿಗೆ ಹತ್ತಿಸಿಕೊಂಡು ಅಪ್ರಾಪ್ತೆಗೆ ಲೈಂಗಿಕ ಕಿರುಕುಳ – ಡ್ಯಾನ್ಸ್ ಮಾಸ್ಟರ್ ಅರೆಸ್ಟ್

    ಬೆಂಗಳೂರು: ಡ್ಯಾನ್ಸ್ ಕ್ಲಾಸ್ ಬಗ್ಗೆ ಮಾಹಿತಿ ನೀಡುವುದಾಗಿ ಹೇಳಿ ಅಪ್ರಾಪ್ತೆಯನ್ನು ಕಾರು ಹತ್ತಿಸಿಕೊಂಡು ಡ್ಯಾನ್ಸ್ ಮಾಸ್ಟರ್ ಲೈಂಗಿಕ ಕಿರುಕುಳ ನೀಡಿರುವ ಘಟನೆ ನಗರದ ಕಾಡುಗೋಡಿಯಲ್ಲಿ (Kadugodi) ನಡೆದಿದೆ.

    ಭಾರತಿ ಕಣ್ಣನ್ (28) ಬಂಧಿತ ಆರೋಪಿ. ಅಪ್ರಾಪ್ತ ಬಾಲಕಿ ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ಆರೋಪಿ ಕಾರು ನಿಲ್ಲಿಸಿ, ತಾನು ಡ್ಯಾನ್ಸ್ ಮಾಸ್ಟರ್ ಎಂದು ಪರಿಚಯ ಮಾಡಿಕೊಂಡಿದ್ದಾನೆ. ಜೊತೆಗೆ ಡ್ಯಾನ್ಸ್ ಕ್ಲಾಸ್ ಬಗ್ಗೆ ಮಾಹಿತಿ ನೀಡುವುದಾಗಿ ಹೇಳಿ ಆಕೆಯನ್ನು ನಂಬಿಸಿ, ಕಾರು ಹತ್ತಿಸಿಕೊಂಡಿದ್ದಾನೆ.ಇದನ್ನೂ ಓದಿ: ಕಾಂಗ್ರೆಸ್‌ ಹುದ್ದೆಗಳಿಗೆ ರಾಜೀನಾಮೆ – ಸಿಡಿದ ದಕ್ಷಿಣ ಕನ್ನಡ ಮುಸ್ಲಿಮರು

    ಒಳಗೆ ಕುಳಿತ ಬಳಿಕ ಕಾರ್ ಲಾಕ್ ಮಾಡಿಕೊಂಡಿದ್ದಾನೆ. ಸ್ವಲ್ಪ ದೂರ ಹೋಗುತ್ತಲೇ ಕಾರು ನಿಲ್ಲಿಸಿ, ಲೈಂಗಿಕ ಕಿರುಕುಳ ನೀಡಿದ್ದಾನೆ. ಬಳಿಕ ಆಕೆಯನ್ನು ಹತ್ತಿಸಿಕೊಂಡಿದ್ದ ಸ್ಥಳಕ್ಕೆ ಬಿಟ್ಟು ಹೋಗಿದ್ದಾನೆ.

    ಘಟನೆ ಬಗ್ಗೆ ಅಪ್ರಾಪ್ತೆ ತನ್ನ ಪೋಷಕರಿಗೆ ತಿಳಿಸಿದ್ದು, ತಕ್ಷಣ ಕಾಡುಗೋಡಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.ಇದನ್ನೂ ಓದಿ: ಬೆಳಗಾವಿಯಲ್ಲಿ ಕೊರಾನಾಗೆ ಮೊದಲ ಬಲಿ

  • ಪರೀಕ್ಷೆಗೆ ಓದಿಕೊಳ್ಳುವಂತೆ ತಾಯಿ ಗದರಿಸಿದ್ದಕ್ಕೆ 20ನೇ ಮಹಡಿಯಿಂದ ಜಿಗಿದು ಬಾಲಕಿ ಆತ್ಮಹತ್ಯೆ

    ಪರೀಕ್ಷೆಗೆ ಓದಿಕೊಳ್ಳುವಂತೆ ತಾಯಿ ಗದರಿಸಿದ್ದಕ್ಕೆ 20ನೇ ಮಹಡಿಯಿಂದ ಜಿಗಿದು ಬಾಲಕಿ ಆತ್ಮಹತ್ಯೆ

    ಬೆಂಗಳೂರು: ಪರೀಕ್ಷೆಗೆ ಓದಿಕೊಳ್ಳುವಂತೆ ತಾಯಿ ಗದರಿಸಿದ್ದಕ್ಕೆ 20ನೇ ಮಹಡಿಯಿಂದ ಜಿಗಿದು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಡುಗೋಡಿಯ (Kadugodi) ಅಪಾರ್ಟ್ಮೆಂಟ್‌ನಲ್ಲಿ ನಡೆದಿದೆ.

    ಈ ಕುರಿತು ಪೊಲೀಸರು ಮಾಹಿತಿ ನೀಡಿದ್ದು, ಮೃತ ಬಾಲಕಿಯನ್ನು ಅವಂತಿಕಾ ಚೌರಾಸಿಯಾ (15) ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ರಾಜ್ಯ ಸರ್ಕಾರ ಪತ್ರ ಬರೆದರೆ ಮಾತ್ರ ಮೆಟ್ರೋ ದರ ಇಳಿಕೆ: ತೇಜಸ್ವಿ ಸೂರ್ಯ

    ಕಾಡುಗೋಡಿಯ ಅಪಾರ್ಟ್ಮೆಂಟ್‌ನಲ್ಲಿದ್ದ ಬಾಲಕಿ ಎಸ್‌ಎಸ್‌ಎಲ್‌ಸಿ ಓದುತ್ತಿದ್ದಳು. ಎಸ್‌ಎಸ್‌ಎಲ್‌ಸಿಯ ಪರೀಕ್ಷೆ ಹತ್ತಿರ ಬರುತ್ತಿದ್ದ ಕಾರಣ ಓದುವಂತೆ ತಾಯಿ ಗದರಿಸಿದ್ದಾರೆ. ಇದರಿಂದ ಕೋಪಗೊಂಡ ಬಾಲಕಿ ವಾಸಿಸುತ್ತಿದ್ದ ಅಪಾರ್ಟ್ಮೆಂಟ್‌ನ 20ನೇ ಮಹಡಿ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

    ಸ್ಥಳಕ್ಕೆ ಕಾಡುಗೋಡಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.ಇದನ್ನೂ ಓದಿ: ಆಸೀಸ್‌ಗೆ ಬಹುದೊಡ್ಡ ಆಘಾತ – ಚಾಂಪಿಯನ್ಸ್‌ ಟ್ರೋಫಿಯಿಂದ ಹೊರಗುಳಿದ ಸ್ಟಾರ್ಕ್‌

  • ಬೆಂಗಳೂರು| ಲಿಫ್ಟ್ ಕಾಮಗಾರಿಗೆ ತೋಡಿದ್ದ ಗುಂಡಿಗೆ ಬಿದ್ದು 5 ವರ್ಷದ ಬಾಲಕ ಸಾವು

    ಬೆಂಗಳೂರು| ಲಿಫ್ಟ್ ಕಾಮಗಾರಿಗೆ ತೋಡಿದ್ದ ಗುಂಡಿಗೆ ಬಿದ್ದು 5 ವರ್ಷದ ಬಾಲಕ ಸಾವು

    ಬೆಂಗಳೂರು: ಲಿಫ್ಟ್ (Lift) ಕಾಮಗಾರಿಗೆಂದು ತೋಡಿದ್ದ ಗುಂಡಿಗೆ ಬಿದ್ದು 5 ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಕಾಡುಗೋಡಿ (Kadugodi) ಪೊಲೀಸ್ ಠಾಣಾ ವ್ಯಾಪ್ತಿಯ ಕನ್ನಮಂಗಲದಲ್ಲಿ ನಡೆದಿದೆ.

    ಸುಹಾಸ್ ಗೌಡ (5) ಮೃತ ಬಾಲಕ. ಅಕ್ಟೋಬರ್ 23ರಂದು ಬೆಳಗ್ಗೆ 9 ಗಂಟೆಯ ವೇಳೆಗೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕನ್ನಮಂಗಲದ ಮಿಲ್ಕ್ ಡೈರಿ (Milk Dairy) ಕಟ್ಟಡ ಕಾಮಗಾರಿ ನಡೆಸಲಾಗುತ್ತಿತ್ತು. ಈ ಹಿನ್ನೆಲೆ ಕಟ್ಟಡದಲ್ಲಿ ಲಿಫ್ಟ್‌ಗೆಂದು 5 ಅಡಿ ಗುಂಡಿ ತೋಡಲಾಗಿತ್ತು. ಭಾರೀ ಮಳೆಯ ಪರಿಣಾಮ ಗುಂಡಿಯಲ್ಲಿ ನೀರು ತುಂಬಿಕೊಂಡಿದ್ದರೂ ಸಿಬ್ಬಂದಿ ಯಾವುದೇ ಮುನ್ನೆಚ್ಚರಿಕೆ ವಹಿಸಿರಲಿಲ್ಲ. ಇದನ್ನೂ ಓದಿ: ಮಲೆನಾಡಿನಲ್ಲಿ ಭಾರೀ ಮಳೆ- ರಸ್ತೆಯಲ್ಲಿ ನದಿಯಂತೆ ಹರಿದ ನೀರು

    ಸುಹಾಸ್ ಮನೆ ಮುಂಭಾಗ ಆಟವಾಡುವ ವೇಳೆ ಆಯತಪ್ಪಿ ಗುಂಡಿಯಲ್ಲಿ ಬಿದ್ದು ಸಾವನ್ನಪ್ಪಿದ್ದಾನೆ. ಪ್ರಕರಣದ ಕುರಿತು ಮಿಲ್ಕ್ ಡೈರಿ ಅಧ್ಯಕ್ಷನ ಮೇಲೆ ಎಫ್‌ಐಆರ್ ದಾಖಲಾಗಿದೆ. ಘಟನೆ ಸಂಬಂಧ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ತುಂತುರು ಮಳೆ – ಯಲಹಂಕದಲ್ಲಿ 7 ಕಾರುಗಳು ಡಿಕ್ಕಿ

  • ಪಬ್ಲಿಕ್ ಟಿವಿ ಇಂಪ್ಯಾಕ್ಟ್: ತಾಯಿ-ಮಗು ಸಜೀವ ದಹನಕ್ಕೆ ದೃಶ್ಯಸಾಕ್ಷ್ಯದ ಬೆನ್ನಲ್ಲೇ ಹೆಲ್ಪ್‌ಲೈನ್

    ಪಬ್ಲಿಕ್ ಟಿವಿ ಇಂಪ್ಯಾಕ್ಟ್: ತಾಯಿ-ಮಗು ಸಜೀವ ದಹನಕ್ಕೆ ದೃಶ್ಯಸಾಕ್ಷ್ಯದ ಬೆನ್ನಲ್ಲೇ ಹೆಲ್ಪ್‌ಲೈನ್

    ಬೆಂಗಳೂರು: ಕಾಡುಗೋಡಿ (Kadugodi) ಬಳಿ ವಿದ್ಯುತ್ ತಂತಿ ತುಳಿದು ತಾಯಿ ಮಗು ಪತಿಯ ಕಣ್ಮುಂದೆಯೇ ಸುಟ್ಟು ಕರಕಲಾಗಿದ್ರು. 11 ಕೆವಿ ಸಾಮಥ್ರ್ಯದ ವಿದ್ಯುತ್ ತಂತಿ ತುಂಡಾದ ಎರಡು ಗಂಟೆಗಳ ನಂತರ ಈ ದುರಂತ ನಡೆದಿತ್ತು.

    ಯಾರಾದ್ರೂ ದಾರಿ ಹೋಕರು, ಸ್ಥಳೀಯರು ಎಚ್ಚೆತ್ತು ಬೆಸ್ಕಾಂಗೆ (BESCOM) ದೂರು ಕೊಟ್ಟಿದ್ರೆ. ಬೆಸ್ಕಾಂ ಸಿಬ್ಬಂದಿ ಆ ಹೊತ್ತಲ್ಲಿಯೇ ಸ್ಪಂದಿಸಿದ್ರೆ ಘೋರ ದುರಂತ ತಪ್ಪುತ್ತಿತ್ತು. ಘನಘೋರ ದುರಂತದ ದೃಶ್ಯಾವಳಿ ಹಾಗೂ ದುರಂತಕ್ಕೆ ಮುನ್ನ ಮತ್ತು ನಂತರ ಏನೆಲ್ಲಾ ನಡೆಯಿತು ಎಂಬುದರ ದೃಶ್ಯಾವಳಿ ಪಬ್ಲಿಕ್ ಟಿವಿ ಲಭ್ಯವಾಗಿದೆ.

    ‌ಅಂದು ಏನೇನಾಗಿತ್ತು..?: ನವೆಂಬರ್ 19 ಮುಂಜಾನೆ 3.41ಕ್ಕೆ ವಿದ್ಯುತ್ ತಂತಿ ಕಟ್ ಆಗಿ ಬಿದ್ದು ಹೊತ್ತಿ ಉರಿದಿದೆ. 3.43ಕ್ಕೆ ಅದೇ ದಾರಿಯಲ್ಲಿ ಬರುತ್ತಿದ್ದ ಪಾದಾಚಾರಿಯೊಬ್ಬ ಬೆದರಿ ಓಡಿಹೋಗಿದ್ದಾನೆ. ಇನ್ನು 5.41ಕ್ಕೆ ಅದೇ ದಾರಿಯಲ್ಲಿ ಗಂಡ-ಹೆಂಡತಿ ಹಾಗೂ ಮಗು ಆಗಮಿಸಿದ್ದಾರೆ. 5.42ಕ್ಕೆ ಮಗು ಎತ್ತಿಕೊಂಡಿದ್ದ ತಾಯಿ ವೈರ್ ತುಳಿದಿದ್ದಾರೆ. 5.42ಕ್ಕೆ ಅಸಹಾಯಕನಾಗಿ ತಂದೆ ಪರದಾಡಿದ್ದಾರೆ. 5.42ಕ್ಕೆ ಬೆಸ್ಕಾಂ ವಾಹನ ಸ್ಥಳಕ್ಕೆ ಬಂದಿದೆ. ಇದನ್ನೂ ಓದಿ: ಬೆಸ್ಕಾಂ ನಿರ್ಲಕ್ಷ್ಯಕ್ಕೆ ತಾಯಿ, ಮಗಳು ಬಲಿ- ಐವರು ಅಧಿಕಾರಿಗಳ ಅಮಾನತು

    ಈ ಸುದ್ದಿಯನ್ನು ಪಬ್ಲಿಕ್ ಟಿವಿ ಬಿತ್ತರಿಸಿದ ಕೂಡಲೇ ಎಚ್ಚೆತ್ತ ಬೆಸ್ಕಾಂ, ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಮುಂದಾಗಿದೆ. ಸಾರ್ವಜನಿಕರೇ ಗಮನಿಸಿ, ವಿದ್ಯುತ್ ಮಾರ್ಗದಲ್ಲಿ ವೈರ್ ತುಂಡಾಗಿದೆಯಾ? ವೈರ್‍ನಲ್ಲಿ ಬೆಂಕಿ ಕಾಣಿಸಿಕೊಂಡಿದ್ಯಾ? ಇತರೆ ಅಪಾಯಕಾರಿ ಸನ್ನಿವೇಶ ಕಂಡು ಬಂದಿದ್ಯಾ?. ಈ ಕೂಡಲೇ 1912 ಬೆಸ್ಕಾಂ ಸಹಾಯವಾಣಿ ಕರೆ ಮಾಡಿ ಎಂದು ಪ್ರಕಟಣೆ ಹೊರಡಿಸಿದೆ. ಈ ನಡುವೆ ಚೆಸ್ಕಾಂ ನಿರ್ಲಕ್ಷ್ಯಕ್ಕೆ ಕೆಆರ್ ಪೇಟೆಯ ಬೆಳತೂರು ಗ್ರಾಮದ ಜಮೀನಿನಲ್ಲಿ ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ರೈತ ರವಿಕುಮಾರ್ ಸಾವನ್ನಪ್ಪಿದ್ದಾರೆ.

  • ಬೆಸ್ಕಾಂ ನಿರ್ಲಕ್ಷ್ಯಕ್ಕೆ ತಾಯಿ, ಮಗಳು ಬಲಿ- ಐವರು ಅಧಿಕಾರಿಗಳ ಅಮಾನತು

    ಬೆಸ್ಕಾಂ ನಿರ್ಲಕ್ಷ್ಯಕ್ಕೆ ತಾಯಿ, ಮಗಳು ಬಲಿ- ಐವರು ಅಧಿಕಾರಿಗಳ ಅಮಾನತು

    ಬೆಂಗಳೂರು: ವಿದ್ಯುತ್ ತಂತಿ (Electric Wire) ತುಳಿದು ತಾಯಿ-ಮಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕರ್ತವ್ಯ ಲೋಪ ಪತ್ತೆಯಾದ ಹಿನ್ನೆಲೆ ಐವರು ಬೆಸ್ಕಾಂ (BESCOM) ಅಧಿಕಾರಿಗಳನ್ನು ಅಮಾನತು (Suspend) ಮಾಡಲಾಗಿದೆ.

    ಇಬ್ಬರು ಹಿರಿಯ ಅಧಿಕಾರಿಗಳಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದು, ಇಂಧನ ಇಲಾಖೆಯ ನಿರ್ದೇಶನ ಹಿನ್ನೆಲೆ ಅಮಾನತುಗೊಳಿಸಲಾಗಿದೆ. ನಾಲ್ಕನೇ ಪೂರ್ವ ವಿಭಾಗ ಸಹಾಯಕ ಕಾರ್ಯ ನಿರ್ವಾಹಕ ಎಂಜಿನಿಯರ್ ಸುಬ್ರಮಣ್ಯ.ಟಿ, ಸಹಾಯಕ ಎಂಜಿನಿಯರ್ ಚೇತನ್ ಎಸ್, ಹಿರಿಯ ಎಂಜಿನಿಯರ್ ರಾಜಣ್ಣ, ಕಿರಿಯ ಪವರ್ ಮ್ಯಾನ್ ಮಂಜುನಾಥ್ ರೇವಣ್ಣ, ಲೈನ್‌ಮ್ಯಾನ್ ಬಸವರಾಜು ಎಂಬವರನ್ನು ಅಮಾನತು ಮಾಡಲಾಗಿದೆ. ಪೂರ್ವ ವಿಭಾಗದ ಅಧೀಕ್ಷಕ ಎಂಜಿನಿಯರ್ ಲೋಕೇಶ್ ಬಾಬು ಮತ್ತು ಬೆಸ್ಕಾಂ ವೈಟ್ ವಿಭಾಗದ ಕಾರ್ಯ ನಿರ್ವಾಹಕ ಎಂಜಿನಿಯರ್ ಶ್ರೀರಾಮು ಅವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಇದನ್ನೂ ಓದಿ: ಬೆಸ್ಕಾಂ ನಿರ್ಲಕ್ಷ್ಯಕ್ಕೆ ತಾಯಿ-ಮಗಳು ಬಲಿ

    ಭಾನುವಾರ ಬೆಂಗಳೂರಿನ (Bengaluru) ವೈಟ್ ಫೀಲ್ಡ್‌ನ (Whitefield) ಕಾಡುಗೋಡಿಯಲ್ಲಿ (Kadugodi) ಬೆಸ್ಕಾಂ ನಿರ್ಲಕ್ಷ್ಯಕ್ಕೆ ತಾಯಿ-ಮಗಳು ದಾರುಣವಾಗಿ ಸಾವನ್ನಪ್ಪಿದ್ದಾರೆ. ತಾಯಿ ಸೌಂದರ್ಯ ಹಾಗೂ ಮಗಳು ಲಿಯಾ ಸಾವನ್ನಪ್ಪಿದ ದುರ್ದೈವಿಗಳು. ತಮಿಳುನಾಡು  (Tamil Nadu) ಮೂಲದ ಇವರು ಕಾಡುಗೋಡಿಯ ಗೋಪಾಲ್ ಕಾಲೋನಿಯಲ್ಲಿ ವಾಸವಾಗಿದ್ದರು. ಭಾನುವಾರ ಬೆಳಗ್ಗಿನ ಜಾವ 5 ಗಂಟೆ ಸುಮಾರಿಗೆ ಈ ದುರ್ಘಟನೆ ನಡೆದಿದೆ. ನೆಲದಲ್ಲಿ ಬಿದ್ದಿದ್ದ ವಿದ್ಯುತ್ ತಂತಿ ಕಾಣಿಸದೇ ತುಳಿದ ಕಾರಣ ವಿದ್ಯುತ್ ಪ್ರವಹಿಸಿ ಇಬ್ಬರು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಆಟಿಕೆ ವಸ್ತುಗಳಿದ್ದ ಗೋದಾಮು ಧಗಧಗ – ಕಟ್ಟಡದಲ್ಲಿ ಸಿಲುಕಿದ್ದ ಮಹಿಳೆ ರೆಸ್ಕ್ಯೂ

    ದೀಪಾವಳಿ ಹಬ್ಬಕ್ಕೆ ಚೆನ್ನೈಗೆ ಹೋಗಿದ್ದ ಸೌಂದರ್ಯ, ಪತಿ ಸಂತೋಷ್ ಹಾಗೂ 9 ತಿಂಗಳ ಕಂದಮ್ಮ ಲಿಯಾ ಭಾನುವಾರ ಮುಂಜಾನೆ ಬೆಂಗಳೂರಿಗೆ ವಾಪಸ್ಸಾಗುತ್ತಿದ್ದ ವೇಳೆ ದುರ್ಘಟನೆ ನಡೆದಿದೆ. ದಾರಿಯಲ್ಲಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಗಮನಿಸದೇ ಸೌಂದರ್ಯ ಅದನ್ನು ತುಳಿದಿದ್ದರು. ಈ ವೇಳೆ ಪತಿ ಸಂತೋಷ್ ಕೈಗೆ ವಿದ್ಯುತ್ ಶಾಕ್ ಹೊಡೆದು ಅದೃಷ್ಟವಶಾತ್ ಅವರು ಪಕ್ಕಕ್ಕೆ ಬಿದ್ದಿದ್ದರು. ಆದರೆ ಪತಿ ಎದುರೇ ಪತ್ನಿ ಹಾಗೂ ಕಂದಮ್ಮ ವಿದ್ಯುತ್ ಶಾಕ್‌ಗೆ ಸುಟ್ಟು ಕರಕಲಾಗಿದ್ದಾರೆ. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಭೂಕಂಪ – ಭಯಭೀತರಾದ ಜನ

  • ಬೆಸ್ಕಾಂ ನಿರ್ಲಕ್ಷ್ಯಕ್ಕೆ ತಾಯಿ-ಮಗಳು ಬಲಿ

    ಬೆಸ್ಕಾಂ ನಿರ್ಲಕ್ಷ್ಯಕ್ಕೆ ತಾಯಿ-ಮಗಳು ಬಲಿ

    ಬೆಂಗಳೂರು: ಬೆಸ್ಕಾಂ (BESCOM) ನಿರ್ಲಕ್ಷ್ಯಕ್ಕೆ ತಾಯಿ-ಮಗಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ (Bengaluru) ವೈಟ್ ಫೀಲ್ಡ್‌ನ (Whitefield) ಕಾಡುಗೋಡಿಯಲ್ಲಿ (Kadugodi) ನಡೆದಿದೆ.

    ತಾಯಿ ಸೌಂದರ್ಯ ಹಾಗೂ ಮಗಳು ಲೀಲಾ ಸಾವನ್ನಪ್ಪಿದ ದುರ್ದೈವಿಗಳು. ತಮಿಳುನಾಡು ಮೂಲದ ಇವರು ಕಾಡುಗೋಡಿಯ ಗೋಪಾಲ್ ಕಾಲೋನಿಯಲ್ಲಿ ವಾಸವಾಗಿದ್ದರು. ಇಂದು ಬೆಳಗಿನ ಜಾವ 5 ಗಂಟೆ ವೇಳೆಗೆ ದುರ್ಘಟನೆ ನಡೆದಿದೆ. ನೆಲದಲ್ಲಿ ಬಿದ್ದಿದ್ದ ವಿದ್ಯುತ್ ತಂತಿ ಕಾಣಿಸದೇ ಅದನ್ನು ತುಳಿದ ಕಾರಣ ವಿದ್ಯುತ್ ಪ್ರವಹಿಸಿ ಇಬ್ಬರು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಸಾಂಬಾರ್ ಪಾತ್ರೆಗೆ ಬಿದ್ದು 2ನೇ ಕ್ಲಾಸ್ ವಿದ್ಯಾರ್ಥಿನಿ ದಾರುಣ ಸಾವು

    ದೀಪಾವಳಿ ಹಬ್ಬಕ್ಕೆ ಚೆನ್ನೈಗೆ ಹೋಗಿದ್ದ ಸೌಂದರ್ಯ, ಪತಿ ಸಂತೋಷ್ ಹಾಗೂ 9 ತಿಂಗಳ ಕಂದಮ್ಮ ಲಿಯಾ ಇಂದು ಮುಂಜಾನೆ ಬೆಂಗಳೂರಿಗೆ ವಾಪಸಾಗುತ್ತಿದ್ದ ವೇಳೆ ದುರ್ಘಟನೆ ನಡೆದಿದೆ. ದಾರಿಯಲ್ಲಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಗಮನಿಸದೇ ಅದನ್ನು ಸೌಂದರ್ಯ ತುಳಿದಿದ್ದರು. ಈ ವೇಳೆ ಪತಿ ಸಂತೋಷ್ ಕೈಗೆ ವಿದ್ಯುತ್ ಶಾಕ್ ಹೊಡೆದು ಅದೃಷ್ಟವಶಾತ್ ಅವರು ಪಕ್ಕಕ್ಕೆ ಬಿದ್ದಿದ್ದರು. ಆದರೆ ಪತಿ ಎದುರೇ ಪತ್ನಿ ಹಾಗೂ ಕಂದಮ್ಮ ವಿದ್ಯುತ್ ಶಾಕ್‌ಗೆ ಸುಟ್ಟು ಕರಕಲಾಗಿದ್ದಾರೆ.

    ಈ ಬಗ್ಗೆ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂವರು ಬೆಸ್ಕಾಂ ಅಧಿಕಾರಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಎಇ ಚೇತನ್, ಎಇಇ ಸುಬ್ರಮಣಿ ಹಾಗೂ ಇಇ ಶ್ರೀ ರಾಮನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಕುಟುಂಬ ಬಲಿಪಡೆದು ದೀಪಾವಳಿ ಆಚರಿಸಿದ ಆರೋಪಿ ಪ್ರವೀಣ್

  • ಮೂರು ತಿಂಗಳ ಹಿಂದಷ್ಟೇ ಮದ್ವೆಯಾಗಿದ್ದ ನವವಿವಾಹಿತೆ ಸಾವು

    ಮೂರು ತಿಂಗಳ ಹಿಂದಷ್ಟೇ ಮದ್ವೆಯಾಗಿದ್ದ ನವವಿವಾಹಿತೆ ಸಾವು

    ಬೆಂಗಳೂರು: ಕೇವಲ ಮೂರು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ನವವಿವಾಹಿತೆಯೊಬ್ಬಳು ಅನುಮಾನಾಸ್ಪದವಾಗಿ ಸಾವಿಗೀಡಾದ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ನಡೆದಿದೆ.

    ಕೃಷ್ಣವೇಣಿ (26) ಸಾವನ್ನಪ್ಪಿರುವ ನವವಿವಾಹಿತೆ. ಮೂರು ತಿಂಗಳ ಹಿಂದಷ್ಟೆ ಕೃಷ್ಣವೇಣಿಯನ್ನ ಕೋಲಾರ (Kolar) ಮೂಲದ ಪೃಥ್ವಿರಾಜ್ (30)ಗೆ ವಿವಾಹ ಮಾಡಿಕೊಡಲಾಗಿತ್ತು. ಪೃಥ್ವಿರಾಜ್ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡ್ತಿದ್ದ.

    ಇದೀಗ ಕೃಷ್ಣವೇಣಿ ಕುಟುಂಬದವರು ಕತ್ತು ಹಿಸುಕಿ ಕೊಲೆ ಮಾಡಿ ನೇಣು ಹಾಕಿದ್ದಾರೆ ಅಂತಾ ಆರೋಪಿಸುತ್ತಿದ್ದಾರೆ. ಮದುವೆಯಾದ ಎರಡು ತಿಂಗಳಿಗೆ ಕಿರಿಕ್ ಶುರುಮಾಡಿದ್ದ. ಮದುವೆಯಾದ ಮೂರು ತಿಂಗಳಿಗೆ ನಾಲ್ಕೈದು ಬಾರಿ ಜಗಳ ಮಾಡಿ ತವರಿಗೆ ಕಳುಹಿಸಿದ್ದ. ಗುರುವಾರವೂ ಕುಡಿದು ಬಂದು ಗಲಾಟೆ ಮಾಡಿ ಕೊಲೆ ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ವಿರುದ್ಧ ದೂರು ನೀಡಿದ್ದ ವಕೀಲನ ಮೇಲೆ ಮಾಜಿ ಪತ್ನಿಯಿಂದ ಗಂಭೀರ ಆರೋಪ

    ಮೃತ ಕೃಷ್ಣವೇಣಿ ಎರಡು ತಿಂಗಳ ಗರ್ಭಿಣಿಯಾಗಿದ್ದರು. ಇದೀಗ ಆಕೆಯ ಪತಿ ಪೃಥ್ವಿರಾಜ್‍ನನ್ನು ಬಂಧಿಸುವಂತೆ ಕಾಡುಗೋಡಿ ಠಾಣೆ ಮುಂದೆ ಕೃಷ್ಣವೇಣಿ ಕುಟುಂಬದವರು ಜಮಾಯಿಸಿದ್ದಾರೆ. ಇದನ್ನೂ ಓದಿ: ಮಣಿಪುರದಲ್ಲಿ ಮತ್ತೆ ಗುಂಡಿನ ದಾಳಿ – ಇಬ್ಬರು ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ

    ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಒಂದೇ ಕುಟುಂಬದ ನಾಲ್ವರ ಸಾವು ಪ್ರಕರಣ- ಪತ್ನಿ ಶವದ ಜೊತೆ 24 ಗಂಟೆ ಕಳೆದಿದ್ದ ಟೆಕ್ಕಿ!

    ಒಂದೇ ಕುಟುಂಬದ ನಾಲ್ವರ ಸಾವು ಪ್ರಕರಣ- ಪತ್ನಿ ಶವದ ಜೊತೆ 24 ಗಂಟೆ ಕಳೆದಿದ್ದ ಟೆಕ್ಕಿ!

    ಬೆಂಗಳೂರು: ನಾಲ್ಕು ದಿನದ ಹಿಂದೆಯೇ ಹೆಂಡ್ತಿ ಕೊಲೆ ಮಾಡಿದ್ದ ಟೆಕ್ಕಿ, ಪುಟ್ಟ ಮಕ್ಕಳೊಂದಿಗೆ ಹೆಂಡ್ತಿ ಶವದ ಜೊತೆ ಒಂದು ದಿನ ಕಾಲ ಕಳೆದಿದ್ದ. ಮಕ್ಕಳು ಅಳಲಾರಂಭಿಸದ್ರಿಂದ ಮಕ್ಕಳನ್ನೂ ಉಸಿರುಗಟ್ಟಿಸಿ ಕೊಲೆ ಮಾಡಿದ್ದ. ಬೇರೆ ದಾರಿಯಿಲ್ಲದೆ ಕೊನೆಗೆ ಆತ್ಮಹತ್ಯೆ ದಾರಿ ಹಿಡಿದಿದ್ದ. ಕಾಡುಗೋಡಿ ಟೆಕ್ಕಿ ಫ್ಯಾಮಿಲಿ ಡೆತ್ ಕೇಸ್‍ನಲ್ಲಿ ಡೆವಲಪ್‍ಮೆಂಟ್ ಸ್ಟೋರಿ ಇಲ್ಲಿದೆ.

    ಹೌದು. ಕಾಡುಗೋಡಿಯಲ್ಲಿ (Kadugodi Family Death case) ಇಬ್ಬರು ಮಕ್ಕಳು, ಹೆಂಡತಿಯನ್ನ ಕೊಂದು ಟೆಕ್ಕಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಪೊಲೀಸ್ರು ತನಿಖೆ ಚುರುಕುಗೊಳಿಸಿದ್ದಾರೆ. ಎಫ್ ಎಸ್ ಎಲ್ ಅಧಿಕಾರಿಗಳ ಪ್ರಾಥಮಿಕ ಪರಿಶೀಲನೆ ವೇಳೆ ಭಯಾನಕ ಸತ್ಯ ಹೊರಬಿದ್ದಿದ್ದು, ಟೆಕ್ಕಿ ವಿಜಯ್ ಹೆಂಡ್ತಿ ಹೇಮಾವತಿಯನ್ನ ಜುಲೈ 31ರಂದೇ ಕೊಲೆ ಮಾಡಿದ್ದಾನೆ. ಹೆಂಡತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿರೋದು ಮೇಲ್ನೋಟಕ್ಕೆ ಗೊತ್ತಾಗಿದೆ. ಹೆಂಡ್ತಿ ಕೊಲೆ ಮಾಡಿ 24 ಗಂಟೆಗಳ ಕಾಲ ಮಕ್ಕಳೊಂದಿಗೆ ಹೆಂಡ್ತಿ ಶವದ ಜೊತೆಯೇ ಕಾಲ ಕಳೆದಿದ್ದಾನೆ. ಮಕ್ಕಳು ಅಳೋದನ್ನ ನೋಡಿ ಕೊನೆಗೆ ಇಬ್ಬರು ಮಕ್ಕಳಾದ ಮೋಕ್ಷ ಹಾಗೂ ಸೃಷ್ಠಿಯನ್ನ ಕೊಲೆ ಮಾಡಿರೋ ಶಂಕೆಯಿದೆ. ಆ ಬಳಿಕ ವಿಧಿಯಿಲ್ಲದೆ ಟೆಕ್ಕಿ ವಿಜಯ್ (Techie Vijay) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪೊಲೀಸರು ಕ್ರೈಂ ಸೀನ್‍ಗೆ ಹೋದಾಗ ಮಕ್ಕಳು ಹಾಗೂ ಹೆಂಡತಿ ಶವ ನೆಲದ ಮೇಲೆ ಪತ್ತೆಯಾಗಿದ್ರೆ, ನೇಣು ಬಿಗಿದ ಸ್ಥಿತಿಯಲ್ಲಿ ವೀರಾರ್ಜುನ ವಿಜಯ್ ದೇಹ ಪತ್ತೆಯಾಗಿದೆ. ಹೇಮಾವತಿ ಮೃತದೇಹ ಡಿ ಕಾಂಪೋಸ್ ಸ್ಥಿತಿಯಲ್ಲಿ ಪತ್ತೆಯಾಗಿದ್ರೆ, ಉಳಿದ ಮೂವರ ಮೃತದೇಹಗಳು ಇನ್ನೂ ಡಿಕಾಂಪೋಸ್ ಸ್ಥಿತಿಗೆ ತಲುಪಿರಲಿಲ್ಲ.

    ಟೆಕ್ಕಿ ವಿಜಯ್ ಪತ್ನಿ ಹೇಮಾವತಿ ಮೇಲೆ ಅನುಮಾನ ಪಟ್ಟು ಕೊಲೆ ಮಾಡಿರುವ ಶಂಕೆಯಿದೆ. ಹೇಮಾವತಿ ಕತ್ತಿನ ಭಾಗದಲ್ಲಿ ಕೈ ಗುರುತುಗಳು ಬಿದ್ದಿದ್ದು, ದೇಹದ ಬಣ್ಣ ಬದಲಾಗಿದೆ. ಆಗಸ್ಟ್ 1ರಂದು ಹೆಂಡತಿಗೆ ಬಲವಂತವಾಗಿ ವಿಷ ಕೊಟ್ಟು, ಕತ್ತು ಹಿಸುಕಿ ಕೊಲೆ ಮಾಡಿರೋ ಬಗ್ಗೆ ಪೊಲೀಸರು ಅನುಮಾನ ವ್ಯಕ್ತಪಡಿಸ್ತಿದ್ದಾರೆ. ಮಕ್ಕಳ ಕತ್ತನ್ನು ವೇಲಿನಿಂದ ಬಿಗಿದು ಇಬ್ಬರನ್ನು ಕೊಂದು ಅ ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೊಲೆ ಮಾಡುವ ಮುನ್ನವೇ ಮೊಬೈಲ್‍ಗಳನ್ನ ಸ್ವಿಚ್ ಅಫ್ ಮಾಡಲಾಗಿದ್ದು, ಮೊಬೈಲ್ ಎಫ್‍ಎಸ್‍ಎಲ್‍ಗೆ ರವಾನೆ ಮಾಡಲಾಗಿದೆ. ಅಕ್ಕಪಕ್ಕದವರು ಹಾಗೂ ಕುಟುಂಬಸ್ಥರ ವಿಚಾರಣೆ ವೇಳೆಯೂ ಸಹ ಪೊಲೀಸರಿಗೆ ಸಾವುಗಳ ಹಿಂದಿನ ರಹಸ್ಯ ಗೊತ್ತಾಗಿಲ್ಲ.

    ಒಟ್ಟಿನಲ್ಲಿ ನಾಲ್ವರ ಮೃತದೇಹಗಳ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಒಪ್ಪಿಸಲಾಗಿದೆ. ಎಫ್ ಎಸ್ ಎಲ್ ರಿಪೋರ್ಟ್ ಬಂದ ಬಳಿಕ ಇಡೀ ಕುಟುಂಬದ ಅವಸಾನಕ್ಕೆ ಕಾಆರಣ ಏನು ಅನ್ನೋದು ತಿಳಿಯಲಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]