Tag: ಕಾಬೂಲ್

  • ಪಾಕಿಸ್ತಾನದ 58 ಸೈನಿಕರ ಹತ್ಯೆ, 30 ಮಂದಿಗೆ ಗಾಯ: ಅಫ್ಘಾನಿಸ್ತಾನ

    ಪಾಕಿಸ್ತಾನದ 58 ಸೈನಿಕರ ಹತ್ಯೆ, 30 ಮಂದಿಗೆ ಗಾಯ: ಅಫ್ಘಾನಿಸ್ತಾನ

    ಕಾಬೂಲ್‌: ಗಡಿಯಲ್ಲಿ ನಡೆದ ಘರ್ಷಣೆಯಲ್ಲಿ ಪಾಕಿಸ್ತಾನದ (Pakistan) 58 ಸೈನಿಕರನ್ನು ಹತ್ಯೆ ಮಾಡಿದ್ದೇವೆ ಎಂದು ಅಫ್ಘಾನಿಸ್ತಾನ (Afgainistan) ಹೇಳಿಕೊಂಡಿದೆ.

    ಇಸ್ಲಾಮಿಕ್ ಎಮಿರೇಟ್ ಪಡೆಗಳು ವಿವಾದಿತ ಡುರಾಂಡ್ ಗಡಿ ರೇಖೆಯ ಉದ್ದಕ್ಕೂ ಪಾಕಿಸ್ತಾನಿ ಭದ್ರತಾ ಪಡೆಗಳ ವಿರುದ್ಧ ಕಾರ್ಯಾಚರಣೆ ನಡೆಸಿವೆ. ಇದರಿಂದಾಗಿ ಗಮನಾರ್ಹ ಸಾವುನೋವುಗಳು ಸಂಭವಿಸಿವೆ ಎಂದು ಅಫ್ಘಾನಿಸ್ತಾನ ತಾಲಿಬಾನ್ (Taliban) ವಕ್ತಾರ ಜಬಿಹುಲ್ಲಾ ಮುಜಾಹಿದ್ ಭಾನುವಾರ ಹೇಳಿದ್ದಾರೆ.

    ಕಾರ್ಯಾಚರಣೆಯ ಸಮಯದಲ್ಲಿ 58 ಪಾಕಿಸ್ತಾನಿ ಸೈನಿಕರು ಸಾವನ್ನಪ್ಪಿದ್ದಾರೆ ಮತ್ತು 30 ಜನರು ಗಾಯಗೊಂಡಿದ್ದಾರೆ. ಹಲವಾರು ಶಸ್ತ್ರಾಸ್ತ್ರಗಳನ್ನು ತಾತ್ಕಾಲಿಕವಾಗಿ ವಶಪಡಿಸಿಕೊಳ್ಳಲಾಗಿದೆ ಮತ್ತು 20 ಪಾಕಿಸ್ತಾನಿ ಭದ್ರತಾ ಠಾಣೆಗಳನ್ನು ನಾಶಪಡಿಸಲಾಗಿದೆ ಎಂದು ಅವರು ತಿಳಿಸಿದರು. ಇದನ್ನೂ ಓದಿ:  12 ಪಾಕ್‌ ಸೈನಿಕರನ್ನು ಹತ್ಯೆ – ಅಫ್ಘಾನ್‌ ಮೇಲೆ ಮತ್ತೆ ಏರ್‌ಸ್ಟ್ರೈಕ್‌

    ಅಫ್ಘಾನ್ ಕಡೆಯಿಂದ ಒಂಬತ್ತು ಸೈನಿಕರು ಸಾವನ್ನಪ್ಪಿದ್ದಾರೆ ಮತ್ತು 16 ಜನರು ಗಾಯಗೊಂಡಿದ್ದಾರೆ. ಕತಾರ್ ಮತ್ತು ಸೌದಿ ಅರೇಬಿಯಾದ ಮನವಿಯ ಮೇರೆಗೆ ಮಧ್ಯರಾತ್ರಿಯಲ್ಲಿ ಕಾರ್ಯಾಚರಣೆಯನ್ನು ನಿಲ್ಲಿಸಲಾಯಿತು ಎಂದು ಅವರು ಹೇಳಿದರು.

    ಪಾಕಿಸ್ತಾನದ ಖೈಬರ್ ಪಖ್ತುನ್ಖ್ವಾ ಪ್ರಾಂತ್ಯವು ಇಸ್ಲಾಮಿಕ್ ಸ್ಟೇಟ್ ಅಂಗಸಂಸ್ಥೆ ಐಸಿಸ್-ಕೆಗಾಗಿ ತರಬೇತಿ ಕೇಂದ್ರಗಳನ್ನು ಹೊಂದಿದೆ ಎಂದು ಮುಜಾಹಿದ್ ಆರೋಪಿಸಿದ್ದಾರೆ.

    ಇರಾನ್ ಮತ್ತು ಮಾಸ್ಕೋದಲ್ಲಿ ದಾಳಿಗಳನ್ನು ಈ ಕೇಂದ್ರಗಳಿಂದಲೇ ನಡೆದಿದೆ ಎಂದು ನಮ್ಮ ತನಿಖೆಯಿಂದ ತಿಳಿದುಬಂದಿದೆ. ಅಫ್ಘಾನಿಸ್ತಾನದಲ್ಲಿ ಇತ್ತೀಚಿನ ದಾಳಿಗಳನ್ನು ಸಹ ಈ ನೆಲೆಗಳಿಂದಲೇ ಯೋಜಿಸಲಾಗಿತ್ತು. ಪ್ರಮುಖ ಐಸಿಸ್-ಕೆ ಸದಸ್ಯರನ್ನು ನಮಗೆ ಹಸ್ತಾಂತರಿಸುವಂತೆ ಪಾಕಿಸ್ತಾನ ಸರ್ಕಾರಕ್ಕೆ ಸೂಚಿಸಿದರು.

    ಪಾಕಿಸ್ತಾನವು ಕಾಬೂಲ್‌ಗೆ ನಿಯೋಗವನ್ನು ಕಳುಹಿಸಲು ಪ್ರಯತ್ನಿಸಿತ್ತು. ಆದರೆ ಗುರುವಾರ ರಾತ್ರಿ ನಡೆಸಿದ ಪಾಕಿಸ್ತಾನಿ ವೈಮಾನಿಕ ದಾಳಿಗಳಿಗೆ ಪ್ರತಿಕ್ರಿಯೆಯಾಗಿ ಇಸ್ಲಾಮಿಕ್ ಎಮಿರೇಟ್ ಈ ಪ್ರಸ್ತಾಪವನ್ನು ತಿರಸ್ಕರಿಸಿದೆ ಎಂದು ತಾಲಿಬಾನ್ ವಕ್ತಾರರು ಹೇಳಿದ್ದಾರೆ.

  • ಕಾಬೂಲ್‌ ಮೇಲೆ ಪಾಕ್‌ ಏರ್‌ಸ್ಟ್ರೈಕ್‌ – ಇಸ್ಲಾಮಾಬಾದ್‌, ರಾವಲ್ಪಿಂಡಿಯಲ್ಲಿ ಇಂಟರ್‌ನೆಟ್‌ ಬಂದ್‌

    ಕಾಬೂಲ್‌ ಮೇಲೆ ಪಾಕ್‌ ಏರ್‌ಸ್ಟ್ರೈಕ್‌ – ಇಸ್ಲಾಮಾಬಾದ್‌, ರಾವಲ್ಪಿಂಡಿಯಲ್ಲಿ ಇಂಟರ್‌ನೆಟ್‌ ಬಂದ್‌

    – ತಾಲಿಬಾನ್‌ ವಿದೇಶಾಂಗ ಸಚಿವ ಭಾರತದಲ್ಲಿರುವಾಗ ದಾಳಿ

    ಕಾಬೂಲ್/ ಇಸ್ಲಾಮಾಬಾದ್‌: ಗುರುವಾರ ರಾತ್ರಿ ಅಫ್ಘಾನಿಸ್ತಾನದ (Afghanistan) ರಾಜಧಾನಿ ಕಾಬೂಲ್‌ (Kabul) ನಗರದ ಮೇಲೆ ಪಾಕಿಸ್ತಾನ (Pakistan) ಯುದ್ಧ ವಿಮಾನಗಳನ್ನು ಬಳಸಿ ವಾಯು ದಾಳಿ (Air Strike) ನಡೆಸಿದೆ.

    ಕಾಬೂಲ್ ನಗರದಲ್ಲಿ ಸ್ಫೋಟದ ಶಬ್ದ ಕೇಳಿಬಂದಿದೆ. ಯಾರೂ ಭಯಪಡುವ ಅಗತ್ಯವಿಲ್ಲ.ಘಟನೆಯ ತನಿಖೆ ನಡೆಯುತ್ತಿದೆ, ಇಲ್ಲಿಯವರೆಗೆ ಯಾವುದೇ ಹಾನಿಯ ವರದಿ ಬಂದಿಲ್ಲ ಎಂದು ಅಫ್ಘಾನ್-ತಾಲಿಬಾನ್ ವಕ್ತಾರರು ತಿಳಿಸಿದ್ದಾರೆ.

    ವರದಿಗಳ ಪ್ರಕಾರ ಕಾಬೂಲ್‌ನ ಪೂರ್ವ ಭಾಗದಲ್ಲಿರುವ ತಾಲಿಬಾನ್‌ ಸರ್ಕಾರದ ಪ್ರಮುಖ ಸರ್ಕಾರಿ ಕಚೇರಿಗಳನ್ನು ಗುರಿಯಾಗಿಸಿ ಈ ದಾಳಿ ನಡೆದಿದೆ.

    ದೇಶದ ಒಳಗಡೆ ನಡೆಯುತ್ತಿರುವ ಭಯೋತ್ಪಾದಕ ದಾಳಿಗೆ ತಾಲಿಬಾನ್‌ನಲ್ಲಿರುವ ತೆಹ್ರೀಕ್-ಇ-ತಾಲಿಬಾನ್(TTP) ಉಗ್ರರೇ ಕಾರಣ ಎಂದು ಪಾಕಿಸ್ತಾನ ದೂರಿದೆ. ಈ ಉಗ್ರರಿಗೆ ಅಫ್ಘಾನಿಸ್ತಾನ ಬೆಂಬಲ ನೀಡುತ್ತಿರುವುದಕ್ಕೆ ತಾಲಿಬಾನ್‌ ಸರ್ಕಾರದ ವಿರುದ್ಧ ಪಾಕ್‌ ಸಿಟ್ಟಾಗಿದೆ..  ಇದನ್ನೂ ಓದಿ:  ಭಾರತಕ್ಕೆ ಆಗಮಿಸಿದ ತಾಲಿಬಾನ್‌ ವಿದೇಶಾಂಗ ಸಚಿವ

    ಅಫ್ಘಾನಿಸ್ತಾನದ ಹಂಗಾಮಿ ವಿದೇಶಾಂಗ ಸಚಿವ ಅಮೀರ್ ಖಾನ್ ಮುತಾಕಿ (Amir Khan Muttaqi) ಭಾರತಕ್ಕೆ ಭೇಟಿ ನೀಡುತ್ತಿರುವ ಸಮಯದಲ್ಲಿ ಮತ್ತು ಇಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರೊಂದಿಗೆ ಪ್ರಮುಖ ಮಾತುಕತೆ ನಡೆಸಲು ಸಿದ್ಧರಾಗಿರುವ ಸಮಯದಲ್ಲಿ ಕಾಬೂಲ್‌ನಲ್ಲಿ ಪಾಕಿಸ್ತಾನ ದಾಳಿ ನಡೆಸಿರುವುದು ಮಹತ್ವ ಪಡೆದಿದೆ.

    ಕಾಬೂಲ್‌ ಮೇಲೆ ಏರ್‌ಸ್ಟ್ರೈಕ್‌ ನಡೆದ ಬೆನ್ನಲ್ಲೇ ಪಾಕಿಸ್ತಾನ ರಾಜಧಾನಿ ಇಸ್ಲಾಮಾಬಾದ್‌ ಮತ್ತು ಸೇನೆಯ ಪ್ರಧಾನ ಕಚೇರಿ ಇರುವ ರಾವಲ್ಪಿಂಡಿಯಲ್ಲಿ ಮುಂದಿನ ಆದೇಶ ಜಾರಿಯಾಗುವವರೆಗೂ ಮೊಬೈಲ್‌ ಇಂಟರ್‌ನೆಟ್‌ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.

  • ಅಫ್ಘಾನಿಸ್ತಾನ | ಬಸ್‌ಗೆ ಬೆಂಕಿ ತಗುಲಿ 17 ಮಕ್ಕಳು ಸೇರಿ 76 ಮಂದಿ ಸುಟ್ಟು ಕರಕಲು

    ಅಫ್ಘಾನಿಸ್ತಾನ | ಬಸ್‌ಗೆ ಬೆಂಕಿ ತಗುಲಿ 17 ಮಕ್ಕಳು ಸೇರಿ 76 ಮಂದಿ ಸುಟ್ಟು ಕರಕಲು

    – ಸಾವಿನ ಸಂಖ್ಯೆ ಏರಿಕೆ ಸಾಧ್ಯತೆ

    ಕಾಬೂಲ್: ಬಸ್ಸೊಂದು ಟ್ರಕ್ ಮತ್ತು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ತಗುಲಿ 76 ಜನರು ಸಾವನ್ನಪ್ಪಿರುವ ಭೀಕರ ಘಟನೆ ಗುಜಾರಾ ಜಿಲ್ಲೆಯ ಹೆರಾತ್ ನಗರದ ಹೊರವಲಯದಲ್ಲಿ ನಡೆದಿದೆ.

    ಮೂಲಗಳ ಪ್ರಕಾರ, ಬಸ್ಸು ಇಸ್ಲಾಂ ಖಲಾ ಪ್ರದೇಶದಿಂದ ಕಾಬೂಲ್‌ಗೆ ಇತ್ತೀಚಿಗೆ ಇರಾನ್‌ನಿಂದ ಗಡೀಪಾರು ಮಾಡಲಾಗಿದ್ದ ನಿರಾಶ್ರಿತರನ್ನು ಕರೆದೊಯ್ಯುತ್ತಿತ್ತು ಎನ್ನಲಾಗಿದೆ. ಜೊತೆಗೆ ಬಸ್ಸಿನ ಅತಿಯಾದ ವೇಗದಿಂದ ಈ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ.ಇದನ್ನೂ ಓದಿ: ಫ್ಯಾನ್ಸ್‌ಗೆ ಗುಡ್‌ನ್ಯೂಸ್ ಕೊಟ್ಟ ಪ್ರಭಾಸ್-ಅನುಷ್ಕಾ

    ಬಸ್ಸು ಟ್ರಕ್ ಹಾಗೂ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಭಾರೀ ಪ್ರಮಾಣದ ಬೆಂಕಿ ಆವರಿಸಿಕೊಂಡಿದ್ದು, ಬಸ್‌ನಲ್ಲಿದ್ದವರು ಸೇರಿದಂತೆ ಕೆಲವರು ಸುಟ್ಟು ಕರಕಲಾಗಿದ್ದಾರೆ. ಅವಘಡದಲ್ಲಿ ಈವರೆಗೂ 17 ಮಕ್ಕಳು ಸೇರಿದಂತೆ 76 ಜನರು ಸಾವನ್ನಪ್ಪಿದ್ದಾರೆ. ಕೆಲವರು ತೀವ್ರವಾಗಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಯಿದೆ.

    ಅದೃಷ್ಟವಶಾತ್ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದು, ಟ್ರಕ್‌ನಲ್ಲಿದ್ದ ಇಬ್ಬರು ಹಾಗೂ ಬೈಕ್‌ನಲ್ಲಿದ್ದ ಇಬ್ಬರು ಕೂಡ ಮೃತಪಟ್ಟಿದ್ದಾರೆ.ಇದನ್ನೂ ಓದಿ: ಚಹಲ್‌ಗೆ ಟಕ್ಕರ್ ಕೊಟ್ಟ ಮಾಜಿ ಪತ್ನಿ ಧನಶ್ರೀ

  • ಅಫ್ಘಾನ್ ಪ್ರಬಲ ಭೂಕಂಪಕ್ಕೆ ಬಲಿಯಾದವರ ಸಂಖ್ಯೆ 2,000ಕ್ಕೆ ಏರಿಕೆ

    ಅಫ್ಘಾನ್ ಪ್ರಬಲ ಭೂಕಂಪಕ್ಕೆ ಬಲಿಯಾದವರ ಸಂಖ್ಯೆ 2,000ಕ್ಕೆ ಏರಿಕೆ

    ಕಾಬೂಲ್: ಅಫ್ಘಾನಿಸ್ತಾನದಲ್ಲಿ (Afghanistan) ಸಂಭವಿಸಿದ ಪ್ರಬಲ ಭೂಕಂಪದಿಂದ (Earthquake) ಸಾವನ್ನಪ್ಪಿದವರ ಸಂಖ್ಯೆ 2060ಕ್ಕೆ ಏರಿಕೆಯಾಗಿದೆ ಎಂದು ಅಲ್ಲಿನ ಸರ್ಕಾರ ತಿಳಿಸಿದೆ.

    ಭೂಕಂಪದಿಂದ ಸುಮಾರು 12 ಗ್ರಾಮಗಳು ನಾಶವಾಗಿವೆ. ಅಲ್ಲಿನ ಸಾವಿರಾರು ಮನೆಗಳು ನೆಲಸಮವಾಗಿವೆ. ನೂರಾರು ಜನ ಅವಶೇಷಗಳಡಿಯಲ್ಲಿ ಸಿಲುಕಿದ್ದಾರೆ. ಅವರ ರಕ್ಷಣೆಗೆ ಸತತ ಪ್ರಯತ್ನ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಭೂಕಂಪದ ಕೇಂದ್ರ ಬಿಂದು ಹೆರಾತ್ ನಗರದ ವಾಯುವ್ಯಕ್ಕೆ ಸುಮಾರು 40 ಕಿಲೋಮೀಟರ್ ದೂರದಲ್ಲಿದೆ ಎಂದು ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೆ (United States Geological Survey) ಹೇಳಿದೆ. ನಗರದಲ್ಲಿ ಕನಿಷ್ಠ ಐದು ಪ್ರಬಲ ಕಂಪನಗಳು ಸಂಭವಿಸಿವೆ ಎಂದು ತಿಳಿದು ಬಂದಿದೆ. ಅಲ್ಲದೇ ಸಾವಿನ ಸಂಖ್ಯೆ ಕ್ಷಣ ಕ್ಷಣಕ್ಕೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಅತ್ತಿಬೆಲೆ ಪಟಾಕಿ ದುರಂತ- ಗೋದಾಮು ಮಾಲೀಕ ಅರೆಸ್ಟ್

    ಹೆರಾತ್‍ನಲ್ಲಿ ದೂರವಾಣಿ ಸಂಪರ್ಕ ಕಡಿತಗೊಂಡಿದ್ದು, ಇದರಿಂದ ಭೂಕಂಪ ಪೀಡಿತ ಪ್ರದೇಶಗಳಿಂದ ವಿವರಗಳನ್ನು ಪಡೆಯುವುದು ಕಷ್ಟವಾಗಿದೆ. ಇದರಿಂದಾಗಿಯೂ ಸಹ ಪರಿಹಾರ ಕಾರ್ಯದಲ್ಲಿ ವಿಳಂಬವಾಗುತ್ತಿದೆ. ಇದರ ನಡುವೆಯೂ ಪರಿಹಾರ ಕಾರ್ಯವನ್ನು ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

    ಅಫ್ಘಾನಿಸ್ತಾನದ ಸರ್ಕಾರ ಅಲ್ಲಿನ ಶ್ರೀಮಂತರು, ಹಾನಿಗೊಳಗಾದ ಜನರ ನೆರವಿಗೆ ಕೈಜೋಡಿಸಬೇಕು ಎಂದು ಕೇಳಿಕೊಂಡಿದೆ. ಇದನ್ನೂ ಓದಿ: ಮನ್‌ಮುಲ್ ಮೆಗಾ ಡೈರಿ ಘಟಕದಲ್ಲಿ ಅಗ್ನಿ ಅವಘಡ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪನ – ಸಾವಿನ ಸಂಖ್ಯೆ 320ಕ್ಕೆ ಏರಿಕೆ

    ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪನ – ಸಾವಿನ ಸಂಖ್ಯೆ 320ಕ್ಕೆ ಏರಿಕೆ

    ಕಾಬೂಲ್: ಪಶ್ಚಿಮ ಅಫ್ಘಾನಿಸ್ತಾನದ (Afghanistan) ಹೆರಾತ್‍ನಲ್ಲಿ ಸಂಭವಿಸಿದ 6.3 ತೀವ್ರತೆಯ ಪ್ರಬಲ ಭೂಕಂಪನದಿಂದ (Earthquake) 320ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಅಲ್ಲದೇ 1,000ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

    ಜಿಂದಾ ಜಾನ್ ಮತ್ತು ಘೋರಿಯನ್ ಜಿಲ್ಲೆಗಳ 12 ಹಳ್ಳಿಗಳು ಸಂಪೂರ್ಣವಾಗಿ ನಾಶವಾಗಿವೆ. ಇದರಿಂದ ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ. ಇದಲ್ಲದೆ ಫರಾಹ್ ಮತ್ತು ಬದ್ಗಿಸ್ ಪ್ರಾಂತ್ಯಗಳಲ್ಲಿನ ಕೆಲವು ಮನೆಗಳು ಸಹ ಭಾಗಶಃ ಹಾನಿಗೊಳಗಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ 6.3 ತೀವ್ರತೆಯ ಪ್ರಬಲ ಭೂಕಂಪ – 120 ಮಂದಿ ಬಲಿ, 1,000ಕ್ಕೂ ಅಧಿಕ ಮಂದಿಗೆ ಗಾಯ

    ಅತಿ ದೊಡ್ಡ ನಗರವಾದ ಹೆರಾತ್‍ನ ವಾಯವ್ಯ ಭಾಗದ 40 ಕಿಮೀ ದೂರದಲ್ಲಿ ಭೂಕಂಪನದ ಕೇಂದ್ರ ಬಿಂದು ಪತ್ತೆಯಾಗಿದೆ ಎಂದು ಅಮೆರಿಕದ ಜಿಯಾಲಾಜಿಕಲ್ ಸಮೀಕ್ಷಾ ಕೇಂದ್ರ (States Geological Survey) ತಿಳಿಸಿದೆ. ರಿಕ್ಟರ್ ಮಾಪನದಲ್ಲಿ ಇದು 6.3 ತೀವ್ರತೆ ದಾಖಲಾಗಿದೆ. ಇದರ ನಂತರವೂ 4.3 ಮತ್ತು 6.3 ತೀವ್ರತೆಯ ಭೂಕಂಪ ಸಂಭವಿಸಿದೆ. ಅವಶೇಷಗಳ ಅಡಿ ಸಿಲುಕಿದವರ ರಕ್ಷಣಾ ಕಾರ್ಯ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    2022ರ ಜೂನ್‍ನಲ್ಲಿ ಪೂರ್ವ ಅಫ್ಘಾನಿಸ್ತಾನದ ಪರ್ವತ ಪ್ರದೇಶದಲ್ಲಿ ಪ್ರಬಲವಾದ ಭೂಕಂಪನದಿಂದ 1,000ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿತ್ತು. ಈ ವೇಳೆ ಸುಮಾರು 1,500 ಜನರು ಗಾಯಗೊಂಡಿದ್ದರು. ಇದನ್ನೂ ಓದಿ: ಇಸ್ರೇಲ್ ಮೇಲೆ ಹಮಾಸ್ ಉಗ್ರರ ದಾಳಿ – 300ಕ್ಕೂ ಹೆಚ್ಚು ಜನ ಸಾವು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅಫ್ಘಾನಿಸ್ತಾನದಲ್ಲಿ 4.3 ತೀವ್ರತೆಯ ಭೂಕಂಪನ

    ಅಫ್ಘಾನಿಸ್ತಾನದಲ್ಲಿ 4.3 ತೀವ್ರತೆಯ ಭೂಕಂಪನ

    ಕಾಬೂಲ್: ಅಫ್ಘಾನಿಸ್ತಾನದ (Afghanistan) ಕಾಬೂಲ್‍ನಲ್ಲಿ (Kabul) ಬುಧವಾರ ಮುಂಜಾನೆ 4:49ರ ವೇಳೆಗೆ ಭೂಕಂಪನ (Earthquake) ಸಂಭವಿಸಿದೆ. ಭೂಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ  (Richter Scale) 4.3 ದಾಖಲಾಗಿದೆ.

    ಕಾಬೂಲ್‍ನ 85 ಕಿ.ಮೀ ಸುತ್ತಳತೆಯಲ್ಲಿ ಭೂಮಿಯ ಮೇಲ್ಮೈಯಿಂದ ಕೇವಲ 10 ಕಿ.ಮೀ ಆಳದಲ್ಲಿ ಭೂಕಂಪನ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪನ ಅಧ್ಯಯನ ಕೇಂದ್ರ (National Centre for Seismology) ತಿಳಿಸಿದೆ. ಇದನ್ನೂ ಓದಿ: ನೀವು ಮಾಡಿದ್ದೆಲ್ಲಾ ಸಹಿಸಿಕೊಂಡು ಬಿರಿಯಾನಿ ಹಾಕುವ 47ರ ಕಾಲವಲ್ಲ- SDPI ಮುಖಂಡನಿಗೆ ಸಿ.ಟಿ ರವಿ ವಾರ್ನಿಂಗ್

    ಘಟನೆಯಲ್ಲಿ ಯಾವುದೇ ಸಾವು ನೋವಿನ ಬಗ್ಗೆ ಮಾಹಿತಿ ತಿಳಿದುಬಂದಿಲ್ಲ. ಈ ಬಗ್ಗೆ ಹೆಚ್ಚಿನ ಪರಿಶೀಲನೆ ನಡೆಯುತ್ತಿದೆ. ಇದೇ ತಿಂಗಳ 21 ರಂದು ಅಘ್ಘಾನಿಸ್ತಾನದಲ್ಲಿ ಭೂಕಂಪನ ಸಂಭವಿಸಿತ್ತು. ಭಾರತದಲ್ಲಿ (India) ದೆಹಲಿ (Delhi) ಹಾಗೂ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಭುಕಂಪನದ ಅನುಭವವಾಗಿತ್ತು. ಇದನ್ನೂ ಓದಿ: ರಾಜ್ಯ ವಿಧಾನಸಭೆ ಚುನಾವಣೆಗೆ ಇಂದೇ ಮುಹೂರ್ತ ಫಿಕ್ಸ್

  • ತಾಲಿಬಾನ್‌ನಿಂದ ISIS ಉಗ್ರನ ಹತ್ಯೆ

    ತಾಲಿಬಾನ್‌ನಿಂದ ISIS ಉಗ್ರನ ಹತ್ಯೆ

    ಕಾಬೂಲ್: ಅಫ್ಘಾನಿಸ್ತಾನದ (Afghanistan) ರಾಜಧಾನಿಯಲ್ಲಿ ರಾಜತಾಂತ್ರಿಕರ ಹತ್ಯೆಗೆ ಮುಂದಾಗಿದ್ದ ಐಸಿಸ್‌ ಉಗ್ರನನ್ನು (ISIS Terrorist) ತಾಲಿಬಾನ್‌ (Taliban) ಪಡೆ ಹತ್ಯೆ ಮಾಡಿದೆ.

    ತಾಲಿಬಾನ್‌ ಪಡೆಗಳು ಕಾರ್ಯಾಚರಣೆ ನಡೆಸಿ ಐಸಿಸ್‌ನ ಗುಪ್ತಚರ ಮತ್ತು ಕಾರ್ಯಾಚರಣೆ ಮುಖ್ಯಸ್ಥ ಕ್ವಾರಿ ಫತೇಹ್‌ನನ್ನು ಹತ್ಯೆ ಮಾಡಿದೆ ಎಂದು ತಾಲಿಬಾನ್‌ ಸರ್ಕಾರದ ವಕ್ತಾರ ಜಬಿವುಲ್ಲಾ ಮುಜಾಹಿದ್‌ ತಿಳಿಸಿದ್ದಾರೆ. ಇದನ್ನೂ ಓದಿ: ಬಸ್ ನಿಲ್ದಾಣಕ್ಕೆ ಕಾರು ಡಿಕ್ಕಿ – ಭಾರತೀಯ ಮೂಲದ ವಿದ್ಯಾರ್ಥಿನಿ ಸಾವು

    ರಾಜತಾಂತ್ರಿಕರು, ಮಸೀದಿಗಳ ಮೇಲಿನ ದಾಳಿಗೆ ಕಾಬೂಲ್‌ನಲ್ಲಿ ಫತೇಹ್ ಸಂಚು ರೂಪಿಸಿದ್ದ. ಈ ಸಂಬಂಧದ ಕಾರ್ಯಾಚರಣೆಗಳ ಮಾಸ್ಟರ್‌ ಮೈಂಡ್‌ ಈತನೇ ಆಗಿದ್ದ ಎಂದು ಮುಜಾಹಿದ್‌ ಹೇಳಿದ್ದಾರೆ.

    ತಾಲಿಬಾನ್ ಆಡಳಿತಕ್ಕೆ ಐಸಿಎಸ್‌ ಅತಿದೊಡ್ಡ ಭದ್ರತಾ ಸವಾಲಾಗಿದೆ. ವಿದೇಶಿಯರು, ಧಾರ್ಮಿಕ ಅಲ್ಪಸಂಖ್ಯಾತರು ಮತ್ತು ಸರ್ಕಾರಿ ಸಂಸ್ಥೆಗಳ ಮೇಲೆ ದಾಳಿ ನಡೆಸುತ್ತಿದೆ. ಎರಡೂ ಗುಂಪುಗಳು ಕಠಿಣವಾದ ಸುನ್ನಿ ಇಸ್ಲಾಮಿಸ್ಟ್ ಸಿದ್ಧಾಂತವನ್ನು ಪ್ರತಿಪಾದಿಸುತ್ತವೆ. ಇದನ್ನೂ ಓದಿ: ಹೆಚ್ಚುತ್ತಿರುವ ತಾಪಮಾನ, ಮಾರ್ಚ್‌ನಿಂದ ಮೇವರೆಗೂ ಹೈ ಅಲರ್ಟ್ 

    ಈ ಹಿಂದೆ ಕಾಬೂಲ್‌ನ ಅನೇಕ ಕಡೆಗಳಲ್ಲಿ ಐಸಿಸ್‌ ದಾಳಿಗಳನ್ನು ನಡೆಸಿದೆ. ದಾಳಿಯಲ್ಲಿ ನೂರಾರು ಮಂದಿ ಸಾವಿಗೀಡಾಗಿದ್ದಾರೆ. ಆತ್ಮಾಹುತಿ ದಾಳಿಗಳ ವಿಚಾರವಾಗಿ ಐಸಿಸ್‌ ವಿರುದ್ಧ ತಾಲಿಬಾನ್‌ ನಿರಂತರವಾಗಿ ಆರೋಪಗಳನ್ನು ಮಾಡುತ್ತಿದೆ.

  • ಕಾಬೂಲ್‌ ಮಿಲಿಟರಿ ವಿಮಾನ ನಿಲ್ದಾಣದಲ್ಲಿ ಸ್ಫೋಟ – 10 ಮಂದಿ ಸಾವು

    ಕಾಬೂಲ್‌ ಮಿಲಿಟರಿ ವಿಮಾನ ನಿಲ್ದಾಣದಲ್ಲಿ ಸ್ಫೋಟ – 10 ಮಂದಿ ಸಾವು

    ಕಾಬೂಲ್: ಅಫ್ಘಾನಿಸ್ತಾನದ (Afghanistan) ರಾಜಧಾನಿ ಕಾಬೂಲ್‌ನ ಮಿಲಿಟರಿ ವಿಮಾನ ನಿಲ್ದಾಣದಲ್ಲಿ (Kabul Military Airport) ಸ್ಫೋಟ ಸಂಭವಿಸಿದ್ದು, 10 ಜನರು ಸಾವನ್ನಪ್ಪಿದ್ದಾರೆ. ಸ್ಫೋಟದಲ್ಲಿ 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

    ಕಾಬೂಲ್‌ನ ಮಿಲಿಟರಿ ವಿಮಾನ ನಿಲ್ದಾಣದ ಮುಖ್ಯ ಗೇಟ್‌ಗೆ ಸಮೀಪದಲ್ಲಿ ಸ್ಫೋಟ ಸಂಭವಿಸಿದ್ದು, ಅನೇಕರು ಗಾಯಗೊಂಡಿದ್ದಾರೆ ಎಂದು ತಾಲಿಬಾನ್ (Taliban) ಆಂತರಿಕ ಸಚಿವಾಲಯದ ವಕ್ತಾರ ಅಬ್ದುಲ್ ನಫೀ ಟಕ್ಕೂರ್ ತಿಳಿಸಿದ್ದಾರೆ. ದಾಳಿ ಜವಾಬ್ದಾರಿಯನ್ನು ಈವರೆಗೂ ಯಾವ ಉಗ್ರ ಸಂಘಟನೆಯೂ ಹೊತ್ತಿಲ್ಲ. ಇದನ್ನೂ ಓದಿ: ಹೊಸ ವರ್ಷ ಆಚರಣೆ ವೇಳೆ ಕಾಲ್ತುಳಿತಕ್ಕೆ ಸಿಲುಕಿ 9 ಮಂದಿ ಸಾವು

    ಈಚೆಗಷ್ಟೇ ಉತ್ತರ ತಖಾರ್ ಪ್ರಾಂತ್ಯದ ರಾಜಧಾನಿ ತಾಲೂಕನ್ ನಗರದಲ್ಲಿ ಸ್ಫೋಟವೊಂದು ಸಂಭವಿಸಿತ್ತು. ಈ ವೇಳೆ ನಾಲ್ವರು ಗಾಯಗೊಂಡಿದ್ದರು. ಇದಾದ ಮೂರು ದಿನಗಳಲ್ಲೇ ಮತ್ತೊಂದು ಸ್ಫೋಟ ಸಂಭವಿಸಿದೆ.

    ತಾಲಿಬಾನ್ ಭದ್ರತಾ ಕಮಾಂಡರ್ ಅಬ್ದುಲ್ ಮುಬಿನ್ ಸಫಿ, ಸ್ಫೋಟ ಕುರಿತು ಅಧಿಕೃತ ಹೇಳಿಕೆ ನೀಡಿದ್ದಾರೆ. ಅಲ್ಲದೇ ಸ್ಥಳೀಯ ಆಡಳಿತ ಸಿಬ್ಬಂದಿಯ ಮೇಜಿನ ಕೆಳಗೆ ಬಾಂಬ್ ಇರಿಸಲಾಗಿದೆ ಎಂದು ಖಾಮಾ ಪ್ರೆಸ್ ವರದಿ ಮಾಡಿದೆ. ಇದನ್ನೂ ಓದಿ: ಪಾಕಿಸ್ತಾನ ವಿರುದ್ಧ ಯುದ್ಧ ಸಾರುವುದಾಗಿ ಬೆದರಿಕೆ ಹಾಕಿದ ತಾಲಿಬಾನ್

    Live Tv
    [brid partner=56869869 player=32851 video=960834 autoplay=true]

  • ಕಾಬೂಲ್ ಗುಂಡಿನ ದಾಳಿಗೆ ಮೂವರು ಗನ್‍ಮ್ಯಾನ್‍ಗಳು ಬಲಿ – ಹೊಣೆಹೊತ್ತ ISIS

    ಕಾಬೂಲ್ ಗುಂಡಿನ ದಾಳಿಗೆ ಮೂವರು ಗನ್‍ಮ್ಯಾನ್‍ಗಳು ಬಲಿ – ಹೊಣೆಹೊತ್ತ ISIS

    ಕಾಬೂಲ್: ಅಫ್ಘಾನಿಸ್ತಾನದ (Afghanistan) ರಾಜಧಾನಿ ಕಾಬೂಲ್‍ನಲ್ಲಿ (Kabul) ಚೀನೀಯರ ವಸತಿ ಗೃಹದ ಮೇಲೆ ದಾಳಿ ನಡೆಸಿ ಮೂವರು ಗನ್‍ಮ್ಯಾನ್‍ಗಳನ್ನು ದಾಳಿಕೋರರು ಬಲಿ ಪಡೆದಿದ್ದಾರೆ. ಈ ಘಟನೆಯ ಬಳಿಕ ದಾಳಿಯ ಹೊಣೆಯನ್ನು ಐಸಿಸ್‌ (ISIS) ಹೊತ್ತುಕೊಂಡಿದೆ.

    ಕಾಬೂಲ್‍ನ ಶಹರ್-ಇ ನಾವ್ ಪ್ರದೇಶದಲ್ಲಿ ಚೀನಾದ ಅತಿಥಿ ಗೃಹದ ಬಳಿ ಭಾರೀ ಸ್ಫೋಟ ಹಾಗೂ ಗುಂಡಿನ ದಾಳಿ ನಿನ್ನೆ ನಡೆದಿತ್ತು. ತಾಲಿಬಾನ್ ಅಪ್ಘಾನಿಸ್ತಾನವನ್ನು ವಶಪಡಿಸಿಕೊಂಡ ಬಳಿಕ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಚೀನಾದ ವ್ಯಾಪಾರಸ್ಥರು ಕಾಬೂಲ್‍ನ ಜನಪ್ರಿಯ ಲಾಂಹನ್ ಹೋಟೆಲ್‍ಗೆ ತೆರಳುತ್ತಾರೆ. ಹಾಗಾಗಿ ಹೋಟೆಲ್‍ಗೆ ದಾಳಿಕೋರರು ನುಗ್ಗಿ ಗುಂಡಿನ ಮಳೆ ಸುರಿಸಿದ್ದರು. ಶಸ್ತ್ರಾಸ್ತ್ರಗಳನ್ನು ಬ್ಯಾಗ್‍ನಲ್ಲಿ ತುಂಬಿ ಹೋಟೆಲ್ ಪ್ರವೇಶಿಸಿದ ದಾಳಿಕೋರರು ಏಕಾಏಕಿ ಗುಂಡಿನ ದಾಳಿ ಆರಂಭಿಸಿ ಮೂವರನ್ನು ಕೊಂದು ಸ್ಥಳದಿಂದ ಪರಾರಿಯಾಗಿದ್ದಾರೆ. ಇದನ್ನೂ ಓದಿ: 6 ಮದುವೆ, 54 ಮಕ್ಕಳಿಗೆ ತಂದೆಯಾದ ಪಾಕಿಸ್ತಾನಿ ವ್ಯಕ್ತಿ ಸಾವು

    ದಾಳಿ ನಡೆಯುತ್ತಿದ್ದಂತೆ ಹೋಟೆಲ್‍ನ ಬಾಲ್ಕನಿಯಿಂದ ಹಾರಿ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ಇಬ್ಬರು ವಿದೇಶಿಗರು ಗಾಯಗೊಂಡಿದ್ದಾರೆ. ಶಾಹರ್-ಎ-ನಾವ್ ಪ್ರದೇಶದಲ್ಲಿ ದಾಳಿಗೊಳಗಾದ ಹೋಟೆಲ್ ಬಳಿ ಇರುವ ಸ್ಥಳೀಯ ಆಸ್ಪತ್ರೆಗೆ 20ಕ್ಕೂ ಹೆಚ್ಚು ಮಂದಿ ಗಾಯಳುಗಳನ್ನು ದಾಖಲಿಸಲಾಗಿದ್ದು, 3 ಮಂದಿ ಮೃತಪಟ್ಟಿರುವುದಾಗಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿದೆ. ಇದನ್ನೂ ಓದಿ: ಕಾಬೂಲ್‌ನಲ್ಲಿ ಚೀನೀಯರ ಅತಿಥಿ ಗೃಹದ ಬಳಿ ಭಾರೀ ಸ್ಫೋಟ, ಗುಂಡಿನ ದಾಳಿ

    ಚೀನಾದ ರಾಯಭಾರಿಯು ಅಫ್ಘಾನಿಸ್ತಾನದ ಉಪ ವಿದೇಶಾಂಗ ಸಚಿವರನ್ನು ಭೇಟಿಯಾಗಿ ಭದ್ರತೆ ಸಂಬಂಧಿತ ವಿಷಯಗಳ ಬಗ್ಗೆ ಒಂದು ದಿನದ ಹಿಂದೆ ಚರ್ಚಿಸಿದ್ದರು. ಅಲ್ಲದೇ ಅಘ್ಘಾನಿಸ್ತಾನದಲ್ಲಿರುವ ಚೀನಾದ ರಾಯಭಾರ ಕಚೇರಿಯ ರಕ್ಷಣೆಯ ಬಗ್ಗೆ ಹೆಚ್ಚಿನ ಗಮನವನ್ನು ಹರಿಸಬೇಕಾಗಿ ಮನವಿ ಮಾಡಿಕೊಂಡಿದ್ದರು. ಈ ಬೆನ್ನಲ್ಲೇ ದಾಳಿ ನಡೆದಿದೆ.

    Live Tv
    [brid partner=56869869 player=32851 video=960834 autoplay=true]

  • ಕಾಬೂಲ್‌ನಲ್ಲಿ ಚೀನೀಯರ ಅತಿಥಿ ಗೃಹದ ಬಳಿ ಭಾರೀ ಸ್ಫೋಟ, ಗುಂಡಿನ ದಾಳಿ

    ಕಾಬೂಲ್‌ನಲ್ಲಿ ಚೀನೀಯರ ಅತಿಥಿ ಗೃಹದ ಬಳಿ ಭಾರೀ ಸ್ಫೋಟ, ಗುಂಡಿನ ದಾಳಿ

    ಕಾಬೂಲ್: ಅಫ್ಘಾನಿಸ್ತಾನದ (Afghanistan) ರಾಜಧಾನಿ ಕಾಬೂಲ್‌ನಲ್ಲಿರುವ (Kabul) ಚೀನೀಯರ ವಸತಿ ಗೃಹದ (China Guest House) ಬಳಿ ಭಾರೀ ಸ್ಫೋಟ (Blast) ಹಾಗೂ ಗುಂಡಿನ ದಾಳಿ (Firing) ನಡೆದಿರುವುದಾಗಿ ವರದಿಯಾಗಿದೆ.

    ಕಾಬೂಲ್‌ನ ಶಹರ್-ಇ ನಾವ್ ಪ್ರದೇಶದಲ್ಲಿ ಚೀನಾದ ಅತಿಥಿ ಗೃಹದ ಬಳಿ ಭಾರೀ ಸ್ಫೋಟ ಹಾಗೂ ಗುಂಡಿನ ದಾಳಿ ನಡೆದಿರುವುದಾಗಿ ನಿವಾಸಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ತಿಳಿಸಿದ್ದಾರೆ. ಆದರೆ ಭದ್ರತಾ ಅಧಿಕಾರಿಗಳು ಈ ಘಟನೆಯ ಬಗ್ಗೆ ಇನ್ನೂ ಪ್ರತಿಕ್ರಿಯೆ ನೀಡಿಲ್ಲ.

    ವರದಿಗಳ ಪ್ರಕಾರ ತಾಲಿಬಾನ್ ಅಪ್ಘಾನಿಸ್ತಾನವನ್ನು ವಶಪಡಿಸಿಕೊಂಡ ಬಳಿಕ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಚೀನಾದ ವ್ಯಾಪಾರಸ್ಥರು ಕಾಬೂಲ್‌ನ ಜನಪ್ರಿಯ ಲಾಂಹನ್ ಹೋಟೆಲ್‌ಗೆ ತೆರಳುತ್ತಾರೆ. ಇಂದು ಹೋಟೆಲ್‌ಗೆ ಹಲವು ದಾಳಿಕೋರರು ನುಗ್ಗಿದ್ದು, ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: 3 ತಿಂಗಳು ಕಾಲೇಜಲ್ಲಿ ವಿದ್ಯಾರ್ಥಿನಿಯಂತೆ ನಟಿಸಿ ರ‍್ಯಾಗಿಂಗ್ ಪ್ರಕರಣವನ್ನು ಭೇದಿಸಿದ ಮಹಿಳಾ ಪೇದೆ

    ಒಂದು ದಿನದ ಹಿಂದೆಯಷ್ಟೇ ಅಫ್ಘಾನಿಸ್ತಾನದ ಸ್ಪಿನ್ ಬೋಲ್ಡಾಕ್‌ನಲ್ಲಿ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದರು. 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಈ ಪ್ರದೇಶ ಅಫ್ಘಾನಿಸ್ತಾನದ ದಕ್ಷಿಣ ಕಂದಹಾರ್ ಪಾಂತ್ಯದಲ್ಲಿರುವ ಪಾಕಿಸ್ತಾನದ ಗಡಿ ಪ್ರದೇಶವಾಗಿದೆ.

    ಕಳೆದ ವರ್ಷ ಆಗಸ್ಟ್‌ನಲ್ಲಿ ಅಧಿಕಾರಕ್ಕೆ ಬಂದ ನಂತರ ತಾಲಿಬಾನ್ ರಾಷ್ಟ್ರೀಯ ಭದ್ರತೆಯನ್ನು ಸುಧಾರಿಸಿದ್ದೇವೆ ಎಂದು ಹೇಳಿಕೊಂಡಿದೆ. ಆದರೆ ಅಫ್ಘಾನಿಸ್ತಾನ ತಾಲಿಬಾನ್ ವಶವಾದ ಬಳಿಕ ಹಲವಾರು ಬಾಂಬ್ ಸ್ಫೋಟಗಳು ಮತ್ತು ದಾಳಿಗಳು ನಡೆದಿರುವುದು ವರದಿಯಾಗಿವೆ. ಇದನ್ನೂ ಓದಿ: ನರ್ಸಿಂಗ್ ಕಾಲೇಜಿನಲ್ಲಿ ಮಾಸ್ ಕಾಪಿ – 10 ಸಾವಿರ ವಸೂಲಿ ಮಾಡಿ ಪರೀಕ್ಷೆಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ

    Live Tv
    [brid partner=56869869 player=32851 video=960834 autoplay=true]