Tag: ಕಾಮಕುಮಾರ ನಂದಿ ಮಹಾರಾಜ

  • ಜೈನಮುನಿ ಹತ್ಯೆ ಕೇಸ್ ತನಿಖೆ ಚುರುಕು- 7 ದಿನ ಹಂತಕರು ಪೊಲೀಸ್ ಕಸ್ಟಡಿಗೆ

    ಜೈನಮುನಿ ಹತ್ಯೆ ಕೇಸ್ ತನಿಖೆ ಚುರುಕು- 7 ದಿನ ಹಂತಕರು ಪೊಲೀಸ್ ಕಸ್ಟಡಿಗೆ

    ಬೆಳಗಾವಿ: ಚಿಕ್ಕೋಡಿ ಹಿರೇಕೋಡಿ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ (Kama Kumara Nandi Maharaj) ಹತ್ಯೆ ಪ್ರಕರಣ ತನಿಖೆ ಚುರುಕುಗೊಂಡಿದೆ. ಇಬ್ಬರು ಆರೋಪಿಗಳನ್ನು ಪೊಲೀಸರು 7 ದಿನ ಕಸ್ಟಡಿಗೆ ಪಡೆದಿದ್ದಾರೆ. ಇದಕ್ಕೂ ಮುನ್ನ ಬೆಳಗಾವಿ ಹಿಂಡಲಗಾ ಜೈಲಿನಲ್ಲಿದ್ದ ಆರೋಪಿ ನಾರಾಯಣ ಮಾಳಿ, ಮತ್ತೊಬ್ಬ ಆರೋಪಿ ಹಸನಸಾಬ್ ದಲಾಯತ್‍ನಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಯ್ತು ಬಳಿಕ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯ್ತು.

    ಇಂದು ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ (Nalin Kumar Kateel) ನೇತೃತ್ವದ ಬಿಜೆಪಿ ಸಮಿತಿ ಹಿರೇಕೋಡಿ ಆಶ್ರಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಬಳಿಕ ರಾಜ್ಯ ಸರ್ಕಾರದ ವಿರುದ್ಧ ಕಟೀಲ್ ವಾಗ್ದಾಳಿ ನಡೆಸಿದ್ರು. ಈ ಪ್ರಕರಣದಲ್ಲಿ ಕೇವಲ ಇಬ್ಬರಲ್ಲ, ಇನ್ನಷ್ಟು ಮಂದಿ ಇರುವ ಶಂಕೆ ಇದೆ ಅಂದ್ರು. ಎಲ್ಲವೂ ಸಂಶಯಾಸ್ಪದವಾಗಿದ್ದಾಗ ಪ್ರಕರಣವನ್ನು ಸಿಬಿಐಗೆ ವಹಿಸೋದ್ರಲ್ಲಿ ತಪ್ಪೇನಿದೆ. ಒಬ್ಬ ಆರೋಪಿ ಹೆಸರನ್ನು ಕೊನೆಯವರೆಗೂ ಮುಚ್ಚಿಟ್ಟಿದ್ದು ಏಕೆ ಎಂದು ಕಟೀಲ್ ಪ್ರಶ್ನಿಸಿದ್ರು.

    ಈ ಪ್ರಕರಣ ಸಂಬಂಧ ಸದನಕ್ಕೆ ಉತ್ತರ ನೀಡಿದ ಗೃಹ ಸಚಿವ ಪರಮೇಶ್ವರ್ (G Parameshwar), ಇದು 6 ಲಕ್ಷ ರೂಪಾಯಿ ವ್ಯವಹಾರ. ಹಣ ವಾಪಸ್ ಕೇಳಿದಾಗ ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಪ್ರಕರಣದ ತನಿಖೆ ಸರಿಯಾಗಿಯೇ ನಡೆಯುತ್ತಿದೆ. ಇದನ್ನು ಸಿಬಿಐಗೆ ಒಪ್ಪಿಸುವ ಉದ್ದೇಶ ಸರ್ಕಾರಕ್ಕೆ ಇಲ್ಲ. ನಮ್ ಪೊಲೀಸ್ರು ದೇಶದಲ್ಲೇ ಬೆಸ್ಟ್ ಎಂದು ಸ್ಪಷ್ಟಪಡಿಸಿದ್ರು. ಇದನ್ನೂ ಓದಿ: ಜೈನ ಮುನಿ ಕೊಲೆ ಕೇಸ್‌ – ಸಿಬಿಐ ತನಿಖೆಗೆ ಆಗ್ರಹಿಸಿ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಪ್ರತಿಭಟನೆ

    ನಮ್ಮ ಕಾಲದಲ್ಲಿ ಮಾತ್ರ ಕೊಲೆ ನಡೆದಿಲ್ಲ. ಎಲ್ಲರ ಕಾಲದಲ್ಲೂ ನಡೆದಿದೆ ಎಂಬ ಗೃಹ ಸಚಿವರ ಮಾತು ಬಿಜೆಪಿಗರನ್ನು ಸಿಟ್ಟಿಗೆಬ್ಬಿಸಿತು. ಈ ವೇಳೆ ಪೊಲೀಸರನ್ನು ಸಿಎಂ ಸಮರ್ಥಿಸಿಕೊಂಡರು. ಸರ್ಕಾರದ ಉತ್ತರಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಬಿಜೆಪಿ ಮತ್ತೆ ಸದನದ ಬಾವಿಗೆ ಇಳಿಯಿತು. ಪರಸ್ಪರ ವಾಕ್ಸಮರ ನಡೆದವು. ಸರಣಿ ಹತ್ಯೆಗಳನ್ನು ಖಂಡಿಸಿ ಬುಧವಾರ ಬಿಜೆಪಿ ಗಾಂಧಿ ಪ್ರತಿಮೆ ಮುಂದೆ ಧರಣಿ ನಡೆಸಲಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಜೈನಮುನಿ ಕೊಲೆ ಖಂಡಿಸಿ ಇಂದು ರಾಜ್ಯದೆಲ್ಲೆಡೆ ಪ್ರತಿಭಟನೆ

    ಜೈನಮುನಿ ಕೊಲೆ ಖಂಡಿಸಿ ಇಂದು ರಾಜ್ಯದೆಲ್ಲೆಡೆ ಪ್ರತಿಭಟನೆ

    ಚಿಕ್ಕೋಡಿ/ಧಾರವಾಡ: ಜೈನಮುನಿ (Jain Muni) ಆಚಾರ್ಯ ಕಾಮಕುಮಾರ ನಂದಿ ಮಹಾರಾಜರ (Kamakumara Nandi Maharaja) ಕೊಲೆ ಖಂಡಿಸಿ ಸೋಮವಾರ ರಾಜ್ಯದೆಲ್ಲೆಡೆ ಪ್ರತಿಭಟನೆ ಮಾಡಲು ನಿರ್ಧಾರ ಮಾಡಲಾಗಿದೆ.

    ಚಿಕ್ಕೋಡಿ (Chikkodi) ಪಟ್ಟಣದ ಆರ್‌ಡಿ ಹೈಸ್ಕೂಲ್ ಹತ್ತಿರವಿರುವ ಮೈದಾನದಲ್ಲಿ ಸೇರುವ ಜೈನಸಮುದಾಯದ ಜನರು ಹಾಗೂ ಸ್ವಾಮೀಜಿಗಳು ಮೌನ ಪ್ರತಿಭಟನೆ ಮಾಡಿ, ಬಳಿಕ ಮೆರವಣಿಗೆ ಮಾಡಿ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಪ್ರಕರಣದ ತನಿಖೆ ಮಾಡಿ ಹಂತಕರಿಗೆ ಶಿಕ್ಷೆ ನೀಡುವಂತೆ ಮನವಿ ಮಾಡಲಿದ್ದಾರೆ.

    ಹುಬ್ಬಳ್ಳಿಯಲ್ಲಿ ಕಾಮಕುಮಾರ ನಂದಿ ಮಹಾರಾಜರ ಕೊಲೆ ಖಂಡಿಸಿ ಸಿಎಂ ಸಿದ್ದರಾಮಯ್ಯ ಸ್ಪಂದಿಸಲಿಲ್ಲವೆಂದು ಹಾಗೂ ಜೈನ ಮುನಿಗಳಿಗೆ ರಕ್ಷಣೆ ನೀಡುವಂತೆ ಆಗ್ರಹಿಸಿ ವರೂರಿನ ಜೈನಮುನಿ ಗುಣಧರನಂದಿ ಮಹಾರಾಜ್ ಸ್ವಾಮೀಜಿ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದರು. ಗೃಹ ಸಚಿವರ ದೂರವಾಣಿ ಕರೆಮಾಡಿ ಬೇಡಿಕೆ ಈಡೇರಿಕೆ ಭರವಸೆ ನೀಡಿದ ಬಳಿಕ ಗುಣಧರನಂದಿ ಸ್ವಾಮೀಜಿ ಉಪವಾಸ ಕೈಬಿಟ್ಟಿದ್ದಾರೆ. ಇದನ್ನೂ ಓದಿ: ಉತ್ತರ ಭಾರತದಲ್ಲಿ ಮಳೆಯಿಂದ ಜಲಪ್ರಳಯ – ಈವರೆಗೆ 19 ಬಲಿ, ಇಂದೂ ಭಾರೀ ಮಳೆ ಸಾಧ್ಯತೆ

    ಹತ್ಯೆ ಖಂಡಿಸಿ ಸಮುದಾಯದಿಂದ ಮೌನ ಪ್ರತಿಭಟನೆ ಮಾಡಲು ಮುಂದಾಗಿದೆ. ಧಾರವಾಡದಲ್ಲಿ ಶ್ರೀ ಅಮಿತಂಜನ ಕೀರ್ತಿ ಮುನಿ ಮಹಾರಾಜರ ಸಾನ್ನಿಧ್ಯದಲ್ಲಿ ಜೈನ ಸಮುದಾಯದ ವಿವಿಧ ಸಂಘಟನೆಗಳು ಜಿಲ್ಲಾಧಿಕಾರಿ ಕಚೇರಿವರೆಗೂ ಮೆರವಣಿಗೆ ಮೂಲಕ ತೆರಳಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ತನಿಖೆಗೆ ಆಗ್ರಹಿಸಲಿದ್ದಾರೆ. ಅಲ್ಲದೆ ಜೈನಮುನಿ ಆಚಾರ್ಯ ಕಾಮಕುಮಾರ ನಂದಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇವಲ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಒಂದು ಸಮುದಾಯದ ಆರೋಪಿಯನ್ನು ಸಂರಕ್ಷಣೆ ಮಾಡುತ್ತಿದ್ದಾರೆ. ಹೀಗಾಗಿ ಪ್ರಕರಣವನ್ನು ಸಿಬಿಐಗೆ ವಹಿಸಿದರೆ ಸತ್ಯ ಬಹಿರಂಗವಾಗಲಿದೆ ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಅನ್ನಭಾಗ್ಯಕ್ಕೆ ಇಂದು ಚಾಲನೆ- ಬಿಪಿಎಲ್ ಕಾರ್ಡ್‍ದಾರರ ಅಕೌಂಟ್‍ಗೆ ರೇಷನ್ ದುಡ್ಡು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]