Tag: ಕಾರಟಗಿ

  • Koppal | ಬುರ್ಖಾ ಧರಿಸಿದ ಕಳ್ಳಿಯರಿಂದ ಗೃಹಬಳಕೆಯ ವಸ್ತು ಕಳ್ಳತನ

    Koppal | ಬುರ್ಖಾ ಧರಿಸಿದ ಕಳ್ಳಿಯರಿಂದ ಗೃಹಬಳಕೆಯ ವಸ್ತು ಕಳ್ಳತನ

    – ಕಳ್ಳಿಯರ ಕೈಚಳಕ ಸಿಸಿಟಿವಿಯಲ್ಲಿ ಸೆರೆ

    ಕೊಪ್ಪಳ: ಬುರ್ಖಾ (Burqa) ಹಾಕಿಕೊಂಡು ಬಂದ ಕಳ್ಳಿಯರು ಗೃಹಬಳಕೆಯ ಸಾಮಾಗ್ರಿಗಳನ್ನು ಕ್ಷಣಮಾತ್ರದಲ್ಲಿ ಕಳ್ಳತನ (Theft) ಮಾಡಿದ ಘಟನೆ ಕೊಪ್ಪಳ (Koppal) ಜಿಲ್ಲೆಯ ಕಾರಟಗಿ (Karatagi) ಪಟ್ಟಣದಲ್ಲಿ ನಡೆದಿದೆ.

    ವಿಎ ಬಜಾರ್‌ನಲ್ಲಿ ಜೂನ್ 18ರಂದು ಘಟನೆ ನಡೆದಿದ್ದು, ಕಳ್ಳಿಯರ ಕೈಚಳಕ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬುರ್ಖಾ ಧರಿಸಿಕೊಂಡು ಬಂದ ಇಬ್ಬರು ಮಹಿಳೆಯರು ಆಹಾರ ಸಾಮಾಗ್ರಿಗಳನ್ನು ತಮ್ಮ ಬಟ್ಟೆಯೊಳಗೆ ಸೇರಿಸಿಕೊಂಡು ಕಳ್ಳತನ ಮಾಡಿದ್ದಾರೆ. ಇದನ್ನೂ ಓದಿ: ವೃದ್ಧಾಪ್ಯ ತಡೆಯುವ ಚಿಕಿತ್ಸೆಯೇ ಶೆಫಾಲಿ ಜರಿವಾಲಾಗೆ ಮುಳುವಾಯ್ತಾ ?

    20 ಸಾವಿರ ಮೌಲ್ಯದ ಆಹಾರ ಸಾಮಾಗ್ರಿಗಳನ್ನು ಕಳ್ಳತನ ಮಾಡಿದ್ದಾರೆ. ಕಳ್ಳಿಯರ ಕೈಚಳಕ ಸಿಸಿಟಿವಿಯಲ್ಲಿ ಕಂಡು ಅಂಗಡಿ ಮಾಲೀಕರು ಶಾಕ್ ಆಗಿದ್ದಾರೆ. ಕಾರಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಕಾಲ್ತುಳಿತ – ಮೂವರು ಸಾವು, 10 ಮಂದಿಗೆ ಗಾಯ

     

     

  • ನರೇಗಾ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಟಾಟಾ ಏಸ್ ಪಲ್ಟಿ – 31 ಜನರಿಗೆ ಗಾಯ

    ನರೇಗಾ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಟಾಟಾ ಏಸ್ ಪಲ್ಟಿ – 31 ಜನರಿಗೆ ಗಾಯ

    ಕೊಪ್ಪಳ: ಚಾಲಕನ ನಿಯಂತ್ರಣ ತಪ್ಪಿ ನರೇಗಾ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಟಾಟಾ ಏಸ್ ಪಲ್ಟಿಯಾದ ಪರಿಣಾಮ 31 ಜನ ಗಾಯಗೊಂಡಿರುವ ಘಟನೆ ಕಾರಟಗಿ (Karatagi) ತಾಲೂಕಿನ ಬರಗೂರು ಕ್ರಾಸ್ ಬಳಿ ನಡೆದಿದೆ.

    ಮುಸ್ಟೂರು ಗ್ರಾಮ ಪಂಚಾಯತಿಯ ನರೇಗಾ ಕಾರ್ಮಿಕರು ಕೆಲಸಕ್ಕಾಗಿ ಟಾಟಾ ಏಸ್ ವಾಹನದಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಬರಗೂರು ಕ್ರಾಸ್ ಬಳಿ ವಾಹನ ಪಲ್ಟಿಯಾಗಿದೆ. ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡಿದ್ದು, 28 ಜನರಿಗೆ ಸಣ್ಣಪುಟ್ಟಗಾಯಗಳಾಗಿವೆ.ಇದನ್ನೂ ಓದಿ: ಪ್ಲೀಸ್‌ ನೀರು ಹರಿಸಿ – ಸಿಂಧೂ ಜಲ ಒಪ್ಪಂದವನ್ನು ಪರಿಶೀಲಿಸುವಂತೆ ಪಾಕ್‌ ಪತ್ರ

    ಗಂಭೀರವಾಗಿ ಗಾಯಗೊಂಡವರನ್ನ ಹುಬ್ಬಳ್ಳಿ ಹಾಗೂ ಕೊಪ್ಪಳದ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಇನ್ನುಳಿದವರನ್ನು ಗಂಗಾವತಿ ತಾಲೂಕು ಆಸ್ಪತ್ರೆಗೆ ಕಳುಹಿಸಲಾಗಿದೆ.

    ವಿಷಯ ತಿಳಿದು ಸಚಿವ ಶಿವರಾಜ ತಂಗಡಗಿ ಆಸ್ಪತ್ರೆಗೆ ಭೇಟಿ ನೀಡಿದ್ದು, ಕಾರ್ಮಿಕರ ಆರೋಗ್ಯ ವಿಚಾರಿಸಿದ್ದಾರೆ. ಕಾರಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.ಇದನ್ನೂ ಓದಿ: ಭಾರತದಲ್ಲಿ ಕಾಂಗ್ರೆಸ್ ಉಗ್ರರನ್ನು ಸಾಕುತ್ತಿದೆ: ರವಿಕುಮಾರ್ ಕಿಡಿ

  • ಓವರ್‌ಟೆಕ್ ಮಾಡಲು ಹೋಗಿ ಬೈಕ್‌ಗೆ ಸರ್ಕಾರಿ ಬಸ್ ಡಿಕ್ಕಿ – ಓರ್ವ ಸಾವು

    ಓವರ್‌ಟೆಕ್ ಮಾಡಲು ಹೋಗಿ ಬೈಕ್‌ಗೆ ಸರ್ಕಾರಿ ಬಸ್ ಡಿಕ್ಕಿ – ಓರ್ವ ಸಾವು

    ಕೊಪ್ಪಳ: ಓವರ್‌ಟೆಕ್ ಮಾಡಲು ಹೋಗಿ ಬೈಕ್‌ಗೆ ಸರ್ಕಾರಿ ಬಸ್ ಡಿಕ್ಕಿಯಾದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಇನ್ನೋರ್ವ ಗಾಯಗೊಂಡಿರುವ ಘಟನೆ ಕೊಪ್ಪಳ (Koppal) ಜಿಲ್ಲೆಯ ಕಾರಟಗಿ ತಾಲೂಕಿನ ಮರ್ಲಾನಹಳ್ಳಿ ಗ್ರಾಮದ ಬಳಿ ನಡೆದಿದೆ.

    ಮೃತನನ್ನು ಸಿದ್ದಾಪುರ ನಿವಾಸಿ ಮಂಜುನಾಥ, ಗಾಯಾಳುವನ್ನು ಖಾಸಿಂ ಸಾಬ್ ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಹುಟ್ಟುಹಬ್ಬದ ದಿನವೇ ನಟ ದರ್ಶನ್ ಬ್ಯಾನರ್ ತೆರವು – ಫ್ಯಾನ್ಸ್‌ಗೆ ಶಾಕ್

    ಮರ್ಲಾನಹಳ್ಳಿ ಗ್ರಾಮದ ಬಳಿ ಮೃತ ಸಿದ್ದಾಪುರ ಹಾಗೂ ಖಾಸಿಂ ಸಾಬ್ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಸರ್ಕಾರಿ ಬಸ್ ಚಾಲಕ ಎದುರಿಗಿದ್ದ ಕಾರನ್ನು ಓವರ್‌ಟೆಕ್ ಮಾಡಲು ಹೋಗಿ, ಎದುರಿಗಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಇನ್ನೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಾಯಾಳುವನ್ನು ಕಾರಟಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

    ಸಾರಿಗೆ ಬಸ್ ಚಾಲಕನ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಕಾರಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಇದನ್ನೂ ಓದಿ: ದರ್ಶನ್ ಹುಟ್ಟುಹಬ್ಬದಂದು ಫ್ಯಾನ್ಸ್‌ಗೆ ಗುಡ್ ನ್ಯೂಸ್ – ‘ಡೆವಿಲ್’ ಸಿನಿಮಾದ ಟೀಸರ್ ರಿಲೀಸ್

     

  • ಕನ್ನಡ ಬರೆಯಲು ಪರದಾಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ

    ಕನ್ನಡ ಬರೆಯಲು ಪರದಾಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ

    ಕೊಪ್ಪಳ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ (Shivaraj Thangadagi) ಕನ್ನಡ ಬರೆಯಲು ಪರದಾಡಿದ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.ಇದನ್ನೂ ಓದಿ: ವರ `ಚೋಲಿ ಕೆ ಪೀಚೆ ಕ್ಯಾ ಹೈ’ ಡ್ಯಾನ್ಸ್ ಮಾಡಿದ್ದಕ್ಕೆ ಮದ್ವೆ ನಿಲ್ಲಿಸಿದ ವಧುವಿನ ತಂದೆ

    ಶನಿವಾರ ಕೊಪ್ಪಳ (Koppal) ಜಿಲ್ಲೆಯ ಕಾರಟಗಿ ಜೆಪಿ ನಗರದ ಅಂಗವಾಡಿಗೆ ಶಿವರಾಜ ತಂಗಡಗಿ ಭೇಟಿ ನೀಡಿದ್ದರು. ಈ ವೇಳೆ ಅಂಗನವಾಡಿ ಮಕ್ಕಳಿಗೆ `ಶುಬವಾಗಲಿ’ ಎಂದು ಬರೆದಿದ್ದರು. ಬಳಿಕ ಬೆಂಬಲಿಗರು ತಿಳಿಸಿದ್ದಕ್ಕೆ ಸರಿಯಾಗಿ `ಶುಭವಾಗಲಿ’ ಎಂದು ತಿದ್ದುಪಡಿ ಮಾಡಿದರು.

    ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಕನ್ನಡ ಬರೆಯಲು ಪರದಾಡಿದ ಸಚಿವರು ಎಂದು ವೈರಲ್ ಆಗುತ್ತಿದೆ. ಸಚಿವರ ಕನ್ನಡ ಭಾಷಾ ಜ್ಞಾನದ ಬಗ್ಗೆ ಎಲ್ಲೆಡೆ ಚರ್ಚೆ ಶುರುವಾಗಿದೆ.ಇದನ್ನೂ ಓದಿ: ಚರ್ಚ್‌ನಲ್ಲಿ ಪಾದ್ರಿ ಮೇಲೆ ಭಿನ್ನಮತೀಯ ಗುಂಪಿನಿಂದ ಹಲ್ಲೆ

     

  • ಸಿಎಂ ಸುದ್ದಿಗೋಷ್ಠಿ ನಡೆಸುತ್ತಿರುವಾಗಲೇ ಬಿಜೆಪಿ ಕಚೇರಿ ಮೇಲೆ ದಾಳಿ

    ಸಿಎಂ ಸುದ್ದಿಗೋಷ್ಠಿ ನಡೆಸುತ್ತಿರುವಾಗಲೇ ಬಿಜೆಪಿ ಕಚೇರಿ ಮೇಲೆ ದಾಳಿ

    ಬೆಂಗಳೂರು: ನೀತಿ ಸಂಹಿತೆ ವಿಚಾರವಾಗಿ ರಾಜ್ಯ ಚುನಾವಣಾಧಿಕಾರಿಗಳು (Election Officers) ಬಿಜೆಪಿಗೆ (BJP) ಶಾಕ್ ನೀಡಿದ್ದಾರೆ. ಮಲ್ಲೇಶ್ವರಂನಲ್ಲಿರುವ ಪಕ್ಷದ ಮುಖ್ಯ ಕಚೇರಿಯಲ್ಲಿ ಸೋಮವಾರ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಸುದ್ದಿಗೋಷ್ಠಿ ನಡೆಸುತ್ತಿದ್ದ ಹೊತ್ತಲ್ಲೇ ದಾಳಿ ನಡೆಸಿದ 15 ಅಧಿಕಾರಿಗಳ ತಂಡ ಕೇಸರಿ ತೋರಣಗಳನ್ನು ಕಿತ್ತು ಹಾಕಿದ್ದಾರೆ.

    ಚುನಾವಣೆ (Election) ಹೊತ್ತಲ್ಲಿ ಕೇಸರಿ ತೋರಣ ಕಟ್ಟಿ ಸಂಭ್ರಮಕ್ಕೆ ಮುಂದಾಗಿದ್ದ ಬಿಜೆಪಿ ಮುಖಂಡರಿಗೆ ಅಧಿಕಾರಿಗಳ ದಾಳಿ ಮುಜುಗರ ತಂದಿದೆ. ಮಲ್ಲೇಶ್ವರಂನಲ್ಲಿ (Malleshwaram) ಉದ್ಘಾಟನೆಗೊಂಡಿದ್ದ ಬಿಜೆಪಿಯ ಮಾಧ್ಯಮ ಕೇಂದ್ರದಲ್ಲಿ ಸಚಿವರೊಂದಿಗೆ ಸಿಎಂ ಸುದ್ದಿಗೋಷ್ಠಿಯಲ್ಲಿ ತೊಡಗಿದ್ದ ವೇಳೆಯಲ್ಲೇ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕಚೇರಿಗೆ ಕಟ್ಟಿದ್ದ ಕೇಸರಿ ತೋರಣಗಳನ್ನು ತೆರವುಗೊಳಿಸಿದ್ದಾರೆ. ಇದನ್ನೂ ಓದಿ: ಜಗತ್ತಿಗೆ ಶಾಕ್‌ ಕೊಟ್ಟ OPEC – ಕಚ್ಚಾ ತೈಲ ಬೆಲೆ ದಿಢೀರ್‌ ಭಾರೀ ಏರಿಕೆ

    ಇಷ್ಟೇ ಅಲ್ಲದೇ ಚುನಾವಣಾಧಿಕಾರಿಗಳು ಬಿಜೆಪಿಯ ಕೃಷ್ಣಯ್ಯ ಶೆಟ್ಟಿಯವರ ಮನೆಯಲ್ಲಿ ಸಂಗ್ರಹಿಸಿದ್ದ ಆಹಾರದ ಕಿಟ್‍ಗಳನ್ನು ವಶಕ್ಕೆ ಪಡೆದಿದ್ದಾರೆ. ಭಾನುವಾರ ಅವಧಿ ಮೀರಿ ಸಭೆ ನಡೆಸಿದ್ದ ರೇಣುಕಾಚಾರ್ಯ (Renukacharya) ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಕೊಪ್ಪಳದ ಕಾರಟಗಿಯಲ್ಲಿ (Karatagi) ಬಿಜೆಪಿಯಿಂದ ಆಯೋಜಿಸಿದ್ದ ಬಾಡೂಟಕ್ಕೆ ಅಧಿಕಾರಿಗಳು ದಾಳಿ ನಡೆಸಿ ತಡೆದಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‍ಗೆ ಮೀಸಲಾತಿ ಬಗ್ಗೆ ಮಾತನಾಡೋ ನೈತಿಕತೆ ಇಲ್ಲ – ಕಾರಜೋಳ

  • ಮರ್ಯಾದಾ ಹತ್ಯೆ- ಪ್ರೀತಿಸಿ ಮದ್ವೆಯಾಗಿದಕ್ಕೆ ತಮ್ಮನಿಂದ ಅಕ್ಕನ ಕೊಲೆ

    ಮರ್ಯಾದಾ ಹತ್ಯೆ- ಪ್ರೀತಿಸಿ ಮದ್ವೆಯಾಗಿದಕ್ಕೆ ತಮ್ಮನಿಂದ ಅಕ್ಕನ ಕೊಲೆ

    – ಆರು ತಿಂಗಳ ಹಿಂದೆ ಮದ್ವೆಯಾಗಿದ್ದ ಬ್ಯಾಂಕ್ ಉದ್ಯೋಗಿಗಳು
    – ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಶೇರ್ ಮಾಡಿದ್ದು ತಪ್ಪಾಯ್ತು
    – ಪತ್ನಿ ಸಾವು, ಗಂಭೀರ ಸ್ಥಿತಿಯಲ್ಲಿರೂ ಪತಿಗೆ ಚಿಕಿತ್ಸೆ

    ಕೊಪ್ಪಳ: ಜಿಲ್ಲೆಯ ಕಾರಟಗಿಯಲ್ಲಿ ನಡೆದ ಮಾರಣಾಂತಿಕ ದಾಳಿ ಪ್ರಕರಣಕ್ಕೆ ತಿರುವು ಸಿಕ್ಕಿದ್ದು, ಕೊಲೆಯಾದ ಮಹಿಳೆಯ ಸೋದರನನ್ನು ಪೊಲೀಸರು ಬಂಧಿಸಿದ್ದಾರೆ. ಅಕ್ಕ ಪ್ರೀತಿಸಿ ಮದುವೆಯಾಗಿದ್ದಕ್ಕೆ ಕೋಪಗೊಂಡಿದ್ದ ತಮ್ಮನೇ ಕೊಲೆ ಮಾಡಿದ್ದಾನೆ. ಘಟನೆಯಲ್ಲಿ ಸೋದರಿ ತ್ರಿವೇಣಿ ಸ್ಥಳದಲ್ಲಿ ಸಾವನ್ನಪ್ಪಿದ್ದು, ಗಂಭೀರವಾಗಿ ಗಾಯಗೊಂಡಿರುವ ತ್ರಿವೇಣಿ ಪತಿ ವಿನೋದ್ ಬಳ್ಳಾರಿಯ ವಿಮ್ಸ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

    ಅವಿನಾಶ್ ಸೋದರಿಯನ್ನ ಕೊಲೆಗೈದ ಕ್ರೂರಿ ತಮ್ಮ. ಮುಧೋಳ ತಾಲೂಕಿನ ನಿವಾಸಿಗಳಾಗಿದ್ದ ವಿನೋದ್ (30) ಮತ್ತು ತ್ರಿವೇಣಿ (35) ಒಂದೇ ಕಾಲೇಜಿನಲ್ಲಿ ಓದುತ್ತಿದ್ದರು. ಐದು ವರ್ಷ ಸೀನಿಯರ್ ಆಗಿದ್ದ ತ್ರಿವೇಣಿ ತಮ್ಮ ಜೂನಿಯರ್ ವಿನೋದ್ ಅವರನ್ನ ಪ್ರೀತಿಸುತ್ತಿದ್ದರು. ಇಬ್ಬರ ಪ್ರೀತಿಗೆ ವಯಸ್ಸು ಅಡ್ಡಿಯಾಗಿರಲಿಲ್ಲ. ಆದ್ರೆ ಮದುವೆ ಎರಡೂ ಕುಟುಂಬಗಳು ವಿರೋಧ ವ್ಯಕ್ತಪಡಿಸಿದ್ದವು. ಇದರಿಂದ ಆರು ತಿಂಗಳ ಹಿಂದೆ ವಿನೋದ್ ಮತ್ತು ತ್ರಿವೇಣಿ ಗಂಗಾವತಿಯಲ್ಲಿ ರಿಜಿಸ್ಟರ್ ಮದುವೆ ಆಗಿದ್ದರು.

    ಮದುವೆ ಬಳಿಕ ತ್ರಿವೇಣಿ ವಾಟ್ಸಪ್ ಸೇರಿದಂತೆ ಸೋಶಿಯಲ್ ಮೀಡಿಯಾದಲ್ಲಿ ಪತಿ ಜೊತೆಗಿನ ಫೋಟೋಗಳನ್ನು ಹಂಚಿಕೊಂಡಿದ್ದರು. ಗ್ರಾಮದಲ್ಲಿ ತ್ರಿವೇಣಿ ಮದುವೆ ಫೋಟೋ ನೋಡಿದ್ದ ಜನರು ಮಾತನಾಡಕೊಳ್ಳಲಾರಂಭಿಸಿದ್ದರು. ಇದರಿಂದ ಅವಮಾನಿತನಾದ ಅವಿನಾಶ್, ಅಕ್ಕ ಮತ್ತು ಮಾವನ ಕೊಲೆಗೆ ನಿರ್ಧರಿಸಿ, ಎರಡು ದಿನಗಳ ಹಿಂದೆ ಸ್ನೇಹಿತರ ಜೊತೆ ಕಾರಟಗಿ ಬಂದಿದ್ದನು. ಎರಡು ದಿನ ಅಕ್ಕನ ಚಲನವಲನ ಗಮನಿಸಿ ಶನಿವಾರ ದಾಳಿ ನಡೆಸಿ ಕೊಲೆಗೈದಿದ್ದಾನೆ.

    ಸದ್ಯ ಪೊಲೀಸರು ಆರೋಪಿ ಅವಿನಾಶ್ ನನ್ನು ಬಂಧಿಸಿ, ಇನ್ನಿಬ್ಬರು ಪರಾರಿಯಾಗಿದ್ದಾರೆ. ತಮ್ಮನೇ ಅಕ್ಕನನ್ನು ಕೊಲೆ ಮಾಡಿದ್ದರಿಂದ ತ್ರಿವೇಣಿ ಶವವನ್ನ ವಶಕ್ಕೆ ಪಡೆಯಲು ಯಾರು ಮುಂದಾಗಿಲ್ಲ.

    ಇಬ್ಬರು ಬ್ಯಾಂಕ್ ಉದ್ಯೋಗಿಗಳಾಗಿದ್ದು, ಕಾರಟಗಿಯಲ್ಲಿ ವಾಸವಾಗಿದ್ದರು. ವಿನೋದ್ ಕಾರಟಗಿಯ ಖಾಸಗಿ ಬ್ಯಾಂಕ್ ಮ್ಯಾನೇಜರ್ ಆಗಿದ್ದು, ತ್ರಿವೇಣಿ ಬಳ್ಳಾರಿ ಸಿರಗುಪ್ಪದ ಬಿರೇಶ್ವರ ಪತ್ತಿನ ಬ್ಯಾಂಕ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಶನಿವಾರ ಸಂಜೆ ತಮ್ಮ ಕೆಲಸ ಮುಗಿಸಿಕೊಂಡು ದಂಪತಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಬೈಕಿನಲ್ಲಿ ಬಂದ ಮೂವರು ರಾಡ್ ನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ಹಲ್ಲೆಯ ಪರಿಣಾಮ ತ್ರೀವೇಣಿ ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಗಾಯಾಳು ವಿನೋದ್ ಅವರನ್ನ ಹೆಚ್ಚಿನ ಚಿಕಿತ್ಸೆಗಾಗಿ ಗಂಗಾವತಿಯಿಂದ ಬಳ್ಳಾರಿಗೆ ರವಾನಿಸಲಾಗಿದೆ.

  • ಹಣ ಕೇಳಲು ಬಂದ ವ್ಯಾಪಾರಿಯನ್ನ ಚಪ್ಪಲಿಯಿಂದ ಹೊಡೆದ ಪುರಸಭೆ ಸದಸ್ಯೆ

    ಹಣ ಕೇಳಲು ಬಂದ ವ್ಯಾಪಾರಿಯನ್ನ ಚಪ್ಪಲಿಯಿಂದ ಹೊಡೆದ ಪುರಸಭೆ ಸದಸ್ಯೆ

    ಕೊಪ್ಪಳ: ತನ್ನ ಪಾಲಿನ ಹಣ ಕೇಳಲು ಬಂದ ಭತ್ತದ ವ್ಯಾಪಾರಿಯನ್ನು ಪುರಸಭೆ ಸದಸ್ಯೆ ಹಾಗೂ ಅವರ ಸಂಬಂಧಿಕರು ಚಪ್ಪಲಿಯಿಂದ ಹಿಗ್ಗಾ ಮುಗ್ಗಾ ಥಳಿಸಿದ ಘಟನೆ ಜಿಲ್ಲೆಯ ಕಾರಟಗಿಯಲ್ಲಿ ನಡೆದಿದೆ.

    ಕಾರಟಗಿ ಗ್ರಾಮದ ಅಮರಗುಂಡಪ್ಪ ಹಲ್ಲೆಗೊಳಗಾದ ವ್ಯಾಪಾರಿ. ಪುರಸಭೆ ಸದಸ್ಯೆ ಅನುಷಾ ಹಲ್ಲೆ ಮಾಡಿದವರು. ಅನುಷಾ ಪತಿ ಸುರೇಶ್ ಕುಳಗಿ ಹಾಗೂ ಅಮರಗುಂಡಪ್ಪ ಇಬ್ಬರು ಸೇರಿ ಭತ್ತದ ವ್ಯಾಪಾರ ಮಾಡುತ್ತಿದ್ದರು. ಇಬ್ಬರ ನಡುವೆ ವ್ಯವಹಾರದಲ್ಲಿ ಭಿನ್ನಾಭಿಪ್ರಾಯ ಉಂಟಾಗಿತ್ತು. ತನಗೆ ಕೊಡಬೇಕಾದ ಹಣವನ್ನು ನೀಡಬೇಕು ಎಂದು ಅಮರಗುಂಡಪ್ಪ ಪಟ್ಟು ಹಿಡಿದು ಅನುಷಾ ಅವರ ಮನೆ ಮುಂದೆ ನಿಂತಿದ್ದರು. ಇದರಿಂದ ಅಮರಗುಂಡಪ್ಪ ಹಾಗೂ ಅನುಷಾ ಕುಟುಂಬದವರ ಮಧ್ಯೆ ಮಾತಿನ ಚಕಮಕಿ ಉಂಟಾಗಿದೆ. ಹೀಗಾಗಿ ಅನುಷಾ ಹಾಗೂ ಅವರ ಸಂಬಂಧಿಕರು ಸೇರಿ ಅಮರಗುಂಡಪ್ಪರಿಗೆ ಮನ ಬಂದಂತೆ ಥಳಿಸಿದ್ದಾರೆ.

    ಕಳೆದ ಸುಮಾರು ದಿನಗಳಿಂದ ಅಮರಗುಂಡಪ್ಪ ಹಾಗೂ ಸುರೇಶ್ ನಡುವೆ ಅನೇಕ ಬಾರಿ ಗಲಾಟೆಯಾಗಿತ್ತು. ಆದರೆ ಇಂದು ಪರಿಸ್ಥಿತಿ ವಿಕೋಪಕ್ಕೆ ಹೋಗಿತ್ತು. ಘಟನೆಯ ಕುರಿತು ಮಾಹಿತಿ ಪಡೆಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

  • ಅಬ್ಬರದ ಪ್ರಚಾರದಲ್ಲಿ ಬೊಬ್ಬಿರಿದ ಮಳೆರಾಯ- ಧರೆಗುರುಳಿತು ಶಾಸಕ ಶಿವರಾಜ್ ತಂಗಡಗಿ ಪ್ರಚಾರಕ್ಕಾಗಿ ನಿರ್ಮಿಸಿದ್ದ ಶೆಡ್

    ಅಬ್ಬರದ ಪ್ರಚಾರದಲ್ಲಿ ಬೊಬ್ಬಿರಿದ ಮಳೆರಾಯ- ಧರೆಗುರುಳಿತು ಶಾಸಕ ಶಿವರಾಜ್ ತಂಗಡಗಿ ಪ್ರಚಾರಕ್ಕಾಗಿ ನಿರ್ಮಿಸಿದ್ದ ಶೆಡ್

    ಕೊಪ್ಪಳ: ಜಿಲ್ಲೆಯ ನೂತನ ತಾಲೂಕು ಕಾರಟಗಿಯಲ್ಲಿ ಇಂದು ಬರೋಬ್ಬರಿ 1 ಗಂಟೆಗಳ ಕಾಲ ವರುಣ ಅಬ್ಬರಿಸಿದ್ದಾನೆ. ಕಾರಟಗಿ ನಗರದಲ್ಲಿ ಶಾಸಕ ಶಿವರಾಜ್ ತಂಗಡಿ ಪ್ರಚಾರಕ್ಕಾಗಿ ಮನೆಯ ಮುಂದೆ ಬೃಹತ್ ಶೆಡ್ ನಿರ್ಮಾಣ ಮಾಡಿದ್ದರು. ಮಳೆಯ ಜೊತೆಗೆ ಬಿರುಗಾಳಿ ಬೀಸಿದ್ದರಿಂದ ಶೆಡ್ ಧರೆಗುಳಿದಿದೆ.

    ಶೆಡ್ ಕೆಳಗೆ ನಿಲ್ಲಿಸಿದ್ದ 7 ಕಾರುಗಳು ಸಂಪೂರ್ಣ ಜಖಂಗೊಂಡಿವೆ. ಬಿರುಗಾಳಿ ಸಹಿತ ಮಳೆಯಾಗಿದ್ದರಿಂದ ನಗರದ ಬೃಹತ್ ಮರಗಳು ಅಂಗಡಿ ಮುಂಗಟ್ಟುಗಳ ಮೇಲೆ ಬಿದ್ದು ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ. ಪನ್ನಾಪುರ ಗ್ರಾಮದಲ್ಲಿ ರೈತ ಚನ್ನಬಸಪ್ಪ ನಡವಿ ಎಂಬವರ ಭತ್ತ ತುಂಬಿರುವ ಗೊಡನ್ ಮೇಲೆ ಹಾಕಲಾದ ತಗಡುಗಳು ಬಿರುಗಾಳಿಗೆ ಹಾರಿಹೋಗಿವೆ. ಇದರಿಂದ ಭತ್ತದ ಚೀಲಗಳು ಸಂಪೂರ್ಣ ಮಳೆಗೆ ನೆನೆದು ಕೋಟ್ಯಾಂತರ ರೂಪಾಯಿ ಭತ್ತ ನಷ್ಟವಾಗಿದೆ.

    ಒಂದು ಕಡೆ ಬಿಸಿಲಿನಿಂದ ತತ್ತರಿಸಿದ ಜನರಿಗೆ ಮಳೆರಾಯ ತಂಪೆರೆದ್ರೆ, ಇತ್ತ ವ್ಯಾಪಾರಿಗಳು ಮತ್ತು ರೈತರು ಕಂಗಾಲಾಗಿದ್ದಾರೆ.

  • ಇಂದು ನಿಶ್ಚಿತಾರ್ಥ ಮಾಡಿಕೊಳ್ಳಬೇಕಿದ್ದ ಯುವತಿ ಮನೆಯಿಂದ ನಾಪತ್ತೆ

    ಇಂದು ನಿಶ್ಚಿತಾರ್ಥ ಮಾಡಿಕೊಳ್ಳಬೇಕಿದ್ದ ಯುವತಿ ಮನೆಯಿಂದ ನಾಪತ್ತೆ

    ಕೊಪ್ಪಳ: ಇಂದು ನಿಶ್ಚತಾರ್ಥ ಮಾಡಿಕೊಳ್ಳಬೇಕಿದ್ದ ಯುವತಿ ಮಂಗಳವಾರ ಮಧ್ಯಾಹ್ನ ತನ್ನ ಗೆಳತಿಯರಿಗೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಲು ಮನೆಯಿಂದ ಹೊರ ಹೋದವಳು ನಾಪತ್ತೆಯಾಗಿದ್ದಾಳೆ.

    ಕವಿತಾ(22) ನಾಪತ್ತೆಯಾಗಿರುವ ಯುವತಿ. ಗಂಗಾವತಿ ತಾಲೂಕಿನ ಯರಡೋಣ ಗ್ರಾಮದ ನಿವಾಸಿಯಾಗಿರುವ ಕವಿತಾ ಜೊತೆ ಇಂದು ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲೂಕಿನ ಕಮಲಾಪುರ ಗ್ರಾಮದ ಯುವಕನೊಂದಿಗೆ ಮದುವೆ ನಿಶ್ಚಯ ಕಾರ್ಯಕ್ರಮ ನಡೆಯಬೇಕಿತ್ತು.

    ಶ್ರೀಕಾಂತ್

    ಪ್ರಿಯಕರನ ಜೊತೆ ಪರಾರಿ?: ಕವಿತಾ ಕಳೆದ 2 ವರ್ಷಗಳಿಂದ ಕಾರಟಗಿ ಗ್ರಾಮದ ಶ್ರೀಕಾಂತ್ ಎಂಬ ಯುವಕನ ಜೊತೆ ಪ್ರೇಮಾಂಕುರವಾಗಿತ್ತು. ಕವಿತಾ ಮತ್ತು ಶ್ರೀಕಾಂತ್ ಜಾತಿ ಬೇರೆಯಾಗಿದ್ದರಿಂದ ಕವಿತಾ ಮನೆಯಲ್ಲಿ ಇಬ್ಬರ ಮದುವೆಗೆ ಒಪ್ಪಿಗೆ ನೀಡಿರಲಿಲ್ಲ. ವಿಷಯ ತಿಳಿದ ಕವಿತಾ ಪಾಲಕರು ತರಾತುರಿಯಲ್ಲಿ ಕವಿತಾಗೆ ಮದುವೆ ನಿಶ್ಚಯಕ್ಕೆ ಮುಂದಾಗಿದ್ದರು.

    ಈ ಮದುವೆ ಇಷ್ಟವಿಲ್ಲದ ಹಿನ್ನೆಲೆಯಲ್ಲಿ ನಿಶ್ಚಿತಾರ್ಥಕ್ಕೆ ಮುನ್ನಾ ದಿನ ಯುವತಿ ಪ್ರಿಯಕರ ಶ್ರೀಕಾಂತ್ ಜೊತೆ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ.

    ಕವಿತಾ ಪಾಲಕರ ಅನುಮಾನಕ್ಕೆ ಪುಷ್ಠಿ ಎನ್ನುವಂತೆ ಶ್ರೀಕಾಂತ್ ಕೂಡ ಗ್ರಾಮದಲ್ಲಿ ಕಾಣಿಸುತ್ತಿಲ್ಲ. ಈ ಬಗ್ಗೆ ಕಾರಟಗಿ ಪೊಲೀಸ್ ಠಾಣೆಯಲ್ಲಿ ಶ್ರೀಕಾಂತ್ ಕವಿತಾರನ್ನು ಅಪಹರಿಸಿದ್ದಾರೆ ಎಂದು ಕವಿತಾ ಪಾಲಕರು ದೂರು ನೀಡಲು ಮುಂದಾಗಿದ್ದಾರೆ.