ಕಾರವಾರ: ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಬಾಲಕ ಕೈಯ್ಯಿಂದ ಏರ್ ಗನ್ ಗುಂಡು ಹಾರಿ ಇನ್ನೊಂದು ಬಾಲಕ ಮೃತಪಟ್ಟ ಹೃದಯ ವಿದ್ರಾಹಕ ಘಟನೆ ಶುಕ್ರವಾರ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ.
ಶಿರಸಿಯ ಸೋಮನಳ್ಳಿಯ ರಾಘವೇಂದ್ರ ಕೇಶವ ಹೆಗಡೆ ಎಂಬವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಬಸಪ್ಪ ಉಂಡಿಯರ್ ಎಂಬವರ ಇಬ್ಬರು ಮಕ್ಕಳು (ಅಣ್ಣ-ತಮ್ಮ) ಆಟವಾಡುತ್ತಿದ್ದ ಸಂದರ್ಭದಲ್ಲಿ ದುರ್ಘಟನೆ ನಡೆದಿದ್ದು, ಓರ್ವ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಅಣ್ಣ-ತಮ್ಮ ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದಾಗ 7 ವರ್ಷದ ತಮ್ಮನಿಂದ ಆಕಸ್ಮಿಕವಾಗಿ ಗುಂಡು ಹಾರಿದ್ದು, ಇದರಿಂದ ಅಣ್ಣ ಕರಿಯಪ್ಪ (9) ಸ್ಥಳದಲ್ಲೇ ಮೃತಪಟ್ಟಿದ್ದಾಗಿ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಘಟನೆಗೆ ಸಂಬಂಧಿಸಿ ಸಿಸಿಟಿವಿಯಲ್ಲಿ ವಿಡಿಯೋ ದಾಖಲಾಗಿದೆ.
ಶಿರಸಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸಿಪಿಐ ಶಶಿಕಾಂತ ವರ್ಮಾ, ಪಿಎಸ್ಐ ಸಂತೋಷ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಾರವಾರ: ಊಟ ಮಾಡುತ್ತಿದ್ದ ವೇಳೆ ಅನ್ನದ ಅಗಳು ಗಂಟಲಲ್ಲಿ ಸಿಲುಕಿ ಯುವಕ ಸಾವನ್ನಪಿದ ಘಟನೆ ಉತ್ತರಕನ್ನಡ ಜಿಲ್ಲೆಯ ಕಾರವಾರ (Karwar) ತಾಲೂಕಿನ ಬಿಣಗಾದಲ್ಲಿ ನಡೆದಿದೆ.
ಬಿಣಗಾ ಮಾಳಸವಾಡ ನಿವಾಸಿ ಅಮಿತ್ ಮಾಳಸೇರ್ (38) ಮೃತ ದುರ್ದೈವಿ. ವೃತ್ತಿಯಲ್ಲಿ ಕಾರು ಚಾಲಕನಾಗಿದ್ದ ಅಮಿತ್, ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ವೈದ್ಯರಿಂದ ಚಿಕಿತ್ಸೆಯನ್ನು ಸಹ ಪಡೆಯುತ್ತಿದ್ದರು. ಇದನ್ನೂ ಓದಿ: ಹೃದಯಾಘಾತ – ಸಿನಿಮಾ ರೈಟರ್ ಎಸ್.ಎಸ್ ಡೇವಿಡ್ ನಿಧನ
ಅಮಿತ್ ಭಾನುವಾರ ಮನೆಯಲ್ಲಿ ಊಟ ಮಾಡುತ್ತಿದ್ದಾಗ ಅನ್ನದ ಅಗಳೊಂದು ಗಂಟಲಲ್ಲಿ ಸಿಲುಕಿತ್ತು. ತಕ್ಷಣ ಮನೆಯವರು ಅಮಿತ್‌ಗೆ ನೀರು ಕುಡಿಸಿದ್ದು, ಆತ ಅಲ್ಲೇ ಕುಸಿದು ಬಿದಿದ್ದ. ಕೂಡಲೇ ಆತನನ್ನು ಅಂಬುಲೆನ್ಸ್ ಮೂಲಕ ಕಾರವಾರದ ಕ್ರಿಮ್ಸ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೇ ವೈದ್ಯರು ಪರೀಕ್ಷಿಸಿದಾಗ ಗಂಟಲಲ್ಲಿ ಅನ್ನದ ಅಗಳು ಸಿಲುಕಿ ಅಮಿತ್ ಮೃತಪಟ್ಟಿದ್ದಾನೆಂದು ದೃಢಪಡಿಸಿದ್ದಾರೆ. ಇದನ್ನೂ ಓದಿ: ಸದ್ದಿಲ್ಲದೇ ಹಾಸ್ಯನಟ ಚಿಕ್ಕಣ್ಣ ಮದ್ವೆ ನಿಶ್ಚಯ
ಘಟನೆ ಸಂಬಂಧ ಕಾರವಾರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಯಲ್ಲಿ ಅಬ್ಬರದ ಮಳೆ ಸುರಿಯುತ್ತಿದ್ದು, ಹಲವು ಕಡೆ ಅವಾಂತರ ಸೃಷ್ಟಿ ಮಾಡಿದೆ.
ಕುಮಟಾ ತಾಲೂಕಿನ ಗೋಕರ್ಣ, ಮಾದನಗೇರಿಯಲ್ಲಿ ರಾಜ್ಯ ಹೆದ್ದಾರಿ 143 ರಲ್ಲಿ ಹೆಚ್ಚಿನ ಮಳೆಯಿಂದಾಗಿ ರಸ್ತೆ ಜಲಾವೃತವಾಗಿ ಹಲವು ವಾಣಿಜ್ಯ ಮಳಿಗೆಗಳಿಗೆ ನೀರು ನುಗ್ಗಿದ್ದು, ನಷ್ಟ ತಂದೊಡ್ಡಿದೆ. ಇನ್ನು ಮಾದನಗೇರಿ, ಗೋಕರ್ಣ ಭಾಗದ ಸಂಚಾರದಲ್ಲಿ ವ್ಯತ್ಯಯವಾಗಿದ್ದು, ಸವಾರರು ಪರದಾಡುವಂತಾಗಿದೆ. ಇದನ್ನೂ ಓದಿ: ಉತ್ತರಾಖಂಡದ ರುದ್ರಪ್ರಯಾಗ, ಚಮೋಲಿಯಲ್ಲಿ ಮೇಘಸ್ಫೋಟ – ಹಲವರು ನಾಪತ್ತೆ ಶಂಕೆ
ಹೊನ್ನಾವರದಲ್ಲಿ ಲಿಂಗನಮಕ್ಕಿ ಹಾಗೂ ಗೇರುಸೊಪ್ಪದ ಜಲಾಶಯದಿಂದ ನೀರು ಹೊರಬಿಟ್ಟ ಪರಿಣಾಮ ನದಿಪಾತ್ರದ ತೋಟಗಳಿಗೆ ನೀರು ನುಗ್ಗಿದೆ. ಹೊನ್ನಾವರದ ಕರ್ನಲ್ ಕಂಬದ ಸಮೀಪ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಗುಡ್ಡದಲ್ಲಿ ಸಣ್ಣ ಪ್ರಮಾಣದ ಕುಸಿದು ರಸ್ತೆಗೆ ಬಿದ್ದಿದೆ. ಪರಿಣಾಮ ಕೆಲವು ಕಾಲ ಸಂಚಾರಕ್ಕೆ ಅಡಚಣೆಯಾಗಿತ್ತು.
ಕಾರವಾರ/ಶಿವಮೊಗ್ಗ: ಶಿವಮೊಗ್ಗ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಅಬ್ಬರದ ಮಳೆಯಿಂದಾಗಿ ಶರಾವತಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಲಿಂಗನಮಕ್ಕಿಯಲ್ಲಿ ಇಂದು 36 ಸಾವಿರ ಕ್ಯೂಸೆಕ್ ನೀರನ್ನು ಹೊರಕ್ಕೆ ಬಿಡಲಾಯಿತು. ಇದರಿಂದ ಜೋಗ ಜಲಪಾತಕ್ಕೆ ಹೆಚ್ಚಿನ ನೀರು ಹರಿದುಬಂದಿದ್ದು, ಜೀವ ಕಳೆ ಪಡೆದುಕೊಂಡಿದೆ.
ಶುಕ್ರವಾರವು ಸಹ ನೀರು ಬಿಡುಗಡೆ ಮಾಡುವುದರಿಂದ ಜೋಗ ಜಲಪಾತ ಮತ್ತಷ್ಟು ನಯನ ಮನೋಹರವಾಗಿರಲಿದೆ. ಇಂದು ಸಾವಿರಾರು ಜನ ಪ್ರವಾಸಿಗರು ಜೋಗಕ್ಕೆ ಭೇಟಿ ನೀಡಿ ಜಲಪಾತ ವೀಕ್ಷಿಸಿ ಕಣ್ತುಂಬಿಕೊಂಡರು.
ಗೇರುಸೊಪ್ಪ ಜಲಾಶಯದಿಂದ ನೀರು ಬಿಡುಗಡೆ
ಲಿಂಗನಮಕ್ಕಿಯಲ್ಲಿ ಕಳೆದ ಎರಡು ದಿನದಿಂದ ನೀರು ಬಿಡುಗಡೆ ಮಾಡಿದ್ದು, ಜೋಗ ಮೂಲಕ ಹೊನ್ನಾವರ ತಾಲೂಕಿನ ಗೇರುಸೊಪ್ಪ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದುಬಂದಿದೆ. ಈ ಹಿನ್ನೆಲೆಯಲ್ಲಿ ಗೇರುಸೊಪ್ಪ ಡ್ಯಾಮ್‌ನಿಂದ ಇಂದು ಐದು ಗೇಟ್ ತೆರೆದು ಒಟ್ಟು 75 ಸಾವಿರ ಕ್ಯೂಸೆಕ್ ನೀರನ್ನು ಹೊರಬಿಡಲಾಗಿದೆ. ಇದರಿಂದ ಹೊನ್ನಾವರ ಭಾಗದ ಶರಾವತಿ ನದಿ ಪಾತ್ರದ ಜನರಿಗೆ ಪ್ರವಾಹ ಏರ್ಪಡುವ ಸಾಧ್ಯತೆ ಇದ್ದು, ಜನರಿಗೆ ಬೇರೆಡೆ ಸ್ಥಳಾಂತರಗೊಳ್ಳಲು ಸೂಚಿಸಲಾಗಿದೆ…
– ಮಸೀದಿಯಲ್ಲಿ ನಡೆಯೋ ಅತ್ಯಾಚಾರ ಕೇಸ್ ಬಗ್ಗೆ ಮಾತೆತ್ತದ ಮುಸಲ್ಮಾನ ಇಲ್ಲಿ ಯಾಕೆ ಬಂದ: ವಾಗ್ಮಿ ಪ್ರಶ್ನೆ – ದಸರಾ ಉದ್ಘಾಟನೆಗೆ ಮುಸಲ್ಮಾನರನ್ನು ಕರೆತಂದಿದ್ದಾರೆ: ಸರ್ಕಾರದ ವಿರುದ್ಧ ಟೀಕೆ
ಕಾರವಾರ: ಬುರುಡೆ ಗ್ಯಾಂಗ್ ಸಮೀರ್ (Sameer) ಹಿಂದೆ ಎಡಪಂಥೀಯರು, ಮಾವೋವಾದಿಗಳು, ಜಿಹಾದಿಗಳು ಇದ್ದಾರೆ ಎಂದು ವಾಗ್ಮಿ ಚಕ್ರವರ್ತಿ ಸೂಲಿಬೆಲೆ (Chakravarti Sulibele) ಗಂಭೀರ ಆರೋಪ ಮಾಡಿದ್ದಾರೆ.
ಸಿದ್ದಾಪುರ ತಾಲೂಕಿನ ಮಾವಿನಗುಂಡಿಯಲ್ಲಿ ಮಾತನಾಡಿದ ಅವರು, 2012 ರಲ್ಲಿ ಗಿರೀಶ್ ಮಟ್ಟಣ್ಣನವರ್ ಮೊದಲು ಸೌಜನ್ಯ ಪ್ರರಣದಲ್ಲಿ ಹಿಡಿದುಕೊಂಡು ಬಂದ ಆರೋಪಿಯನ್ನು ನಮಗೆ ಒಪ್ಪಿಸಿ ಎಂದು ಗಲಾಟೆ ಮಾಡಿದ್ದ. ಇದೇ 2013 ರಲ್ಲಿ ಹಿಡಿದುಕೊಂಡ ವ್ಯಕ್ತಿ ಆರೋಪಿ ಅಲ್ಲ ಎಂದು ಹೇಳುತ್ತಾನೆ. ಇದರಲ್ಲಿ ವೀರೇಂದ್ರ ಹೆಗ್ಗಡೆ ಪರಿವಾರದವರ ಹೆಸರು ಸೇರಿಸುತ್ತಾನೆ. ಧರ್ಮಸ್ಥಳವನ್ನು ಕಿತ್ತುಕೊಳ್ಳಬೇಕು ಎಂಬ ಹುಳ ಅವರಲ್ಲಿ ಹೊಕ್ಕಿದೆ. 2023 ಸಂತೋಷ್ ರಾವ್ ಹೊರ ಬರುತ್ತಾನೆ. ಸ್ಟ್ಯಾನ್ಲಿ ಒಡನಾಡಿ ಸಂಸ್ಥೆ ಮೂಲಕ ಎಂಟ್ರಿಯಾಗಿ ಮನೆ ಮನೆಗೂ ಹೋಗಿ ಪ್ರಚಾರ ಮಾಡುತ್ತಾನೆ. ಸೌಜನ್ಯ ಪ್ರಕರಣದಲ್ಲಿ ಔಟ್‌ಪುಟ್ ಹೊರಗೆ ಬರದೇ ಇದ್ದುದರಿಂದ ಮಾವೂ ವಾದಿಗಳ ಮುಖವಾಡ ಕಳಚಿ ಅವರ ಹಿಂದೆ ಬಂದು ಗಿರೀಶ್ ಮಟ್ಟಣ್ಣನವರ್ ಎಂಟ್ರಿಯಾಗುತ್ತದೆ. ಗಿರೀಶ್ ಮಟ್ಟಣ್ಣನವರ್ ಎಂಟ್ರಿ ಆದ್ಮೇಲೆ ಅವರ ಪೊಲೀಸ್ ಬುದ್ದಿ ಬಳಸಿಕೊಂಡು ಇಲ್ಲಿ ನಡೆಯುವ ಪ್ರತಿಯೊಂದು ಸಾವನ್ನೂ ಧರ್ಮಸ್ಥಳಕ್ಕೆ ಟ್ಯಾಗ್ ಮಾಡುವ ಪ್ರಯತ್ನ ಮಾಡುತ್ತಾರೆ. ಸೌಜನ್ಯ ಪ್ರಕರಣದಿಂದ ಹೊರಬಂದ ಸಂತೋಷ್ ರಾವ್ ಮುಂದಿಟ್ಟುಕೊಂಡು ಧರ್ಮಸ್ಥಳವನ್ನು ಮುಗಿಸುವ ಧಾವಂತ ಇತ್ತು. ಆಗ ಸಮೀರ್‌ನನ್ನು ಕರೆತಂದರು. ಅಲ್ಲಿಗೆ ಜಿಹಾದಿ ಎಲಿಮಿನೇಟ್‌ಗಳ ಎಂಟ್ರಿ ಆಗುತ್ತದೆ ಎಂದು ಟಾಂಗ್ ಕೊಟ್ಟಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ಕೇಸ್‌ನಲ್ಲಿ ತಾವೇ ತೋಡಿದ ಹಳ್ಳಕ್ಕೆ ಬಿದ್ದರು, ಡಿಕೆಶಿ ಹೇಳಿಕೆ ವಾಪಸ್ ಪಡೆಯಲಿ: ವಿ.ಸೋಮಣ್ಣ
ಒಬ್ಬ ಮುಸಲ್ಮಾನ ಬಂದ ಎಂದರೇ ಇದರಲ್ಲಿ ಏನೋ ಇರಬೇಕು. ಒಬ್ಬ ಮುಸಲ್ಮಾನ ತನ್ನ ಮಸೀದಿಯಲ್ಲಿ ನಡೆಯುವ ಅತ್ಯಾಚಾರ ಪ್ರಕರಣಗಳ ಬಗ್ಗೆ ಮಾತೆತ್ತದವನು ಸೌಜನ್ಯ ಪ್ರಕರಣ ಹಿಡಿದುಕೊಂಡು ಇಲ್ಲಿಗೆ ಏಕೆ ಬಂದ? ಎಐ ವಿಡಿಯೋ ಮಾಡಲು ದುಡ್ಡು ಎಲ್ಲಿಂದ ಬಂತು? ಧರ್ಮಸ್ಥಳದ ಪರ ಹೋರಾಟಗಾರರು ಎಲ್ಲಿ ಬಂದರೂ, ಬೇರೆ ದಾರಿ ಇಲ್ಲದೇ ಎಸ್‌ಡಿಪಿಐ ಎಂಟ್ರಿ ಆಗಿದೆ. ಮೊದಲು ಎಡಪಂಥೀಯರು ಬಂದರು. ಅದರ ಹಿಂದೆ ಇವಾಂಜಿಲಿಸ್ಟ್‌ಗಳು ಬಂದರು, ಅವರ ಹಿಂದೆ ಜಿಹಾದಿಗಳು ಬಂದರು. ಜಿಹಾದಿ ಎಲಿಮಿನೇಟ್ ಮೂಲಕ ಮೊದಲ ಹೆಜ್ಜೆಯಾಗಿ ಸಮೀರ್ ಮುಂದಕ್ಕೆ ಬಂದಿದ್ದಾನೆ. ಸಮೀರ್‌ನ ಹಿಂದೆ ಪೂರ್ತಿ ಬ್ಯಾಕಪ್ ಎಡಪಂಥೀಯರದ್ದು ಇತ್ತು. ಸಮೀರ್ ವಿಡಿಯೋ ಆದ ನಂತರ ಎಲ್ಲರಿಗೂ ಹಂಚಲಾಗಿದೆ ಎಂದು ಆರೋಪಿಸಿದ್ದಾರೆ.
ಜನರನ್ನು ಬಡಕಾಯಿಸುವುದು ಸಾಮಾನ್ಯ ಯೂಟ್ಯೂಬರ್ ತಲೆಯಲ್ಲ. ಇದರ ಹಿಂದೆ ಯಾರೋ ದೊಡ್ಡದಾಗಿ ಪ್ರಯತ್ನ ಮಾಡುತ್ತಿದ್ದವರು ಇದ್ದಾರೆ. ದಸರಾ ಉದ್ಘಾಟನೆಗೆ ಮುಸಲ್ಮಾನರನ್ನು ಕರೆದುಕೊಂಡು ಬಂದಿದ್ದಾರೆ. ದಸರಾ ಹಿಂದೂಗಳ ಧಾರ್ಮಿಕ ಹಬ್ಬವಾಗಿ ಸೆಲಬ್ರೇಟ್ ಮಾಡುತ್ತೇವೆ. ನಿಸಾರ್ ಅಹ್ಮದ್ ಬಂದಾಗ ಗಲಾಟೆ ಮಾಡಲಿಲ್ಲ. ಏಕೆಂದರೆ ನಿಸಾರ್ ಅಹ್ಮದ್ ಅವರನ್ನು ಬೇರೆಯವರು ಎಂದು ನಾವು ಗಮನಿಸಿಲ್ಲ. ನಮಗೆ ಹಿಂದೂ ಮುಸ್ಮಿಂ ಪ್ರಾಬ್ಲಮ್ ಅಲ್ಲ. ನಮಗೆ ಧರ್ಮ ಶ್ರದ್ಧೆಯನ್ನು ವಿರೋಧಿಸುವವರ ಕುರಿತು ಇರುವ ಪ್ರಾಬ್ಲಂ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಚಾಮುಂಡೇಶ್ವರಿ ದೇವಸ್ಥಾನ ಎಲ್ಲರ ಆಸ್ತಿ ಅನ್ನೋದು ಸರಿ ಅಲ್ಲ, ಡಿಕೆಶಿ ಕ್ಷಮೆ ಕೇಳ್ಬೇಕು: ಆರ್.ಅಶೋಕ್
ಕನ್ನಡ ಭಾಷೆಯನ್ನು ದೇವಿ ರೂಪದಲ್ಲಿ ನೋಡಿದರೆ ಸಹಿಸಲಾಗದವರು, ಚಾಮುಂಡಿ ತಾಯಿ ಪೂಜೆ ಎಂದರೆ ಹೇಗೆ ಸಹಿಸುತ್ತಾರೆ? ಹಿಂದೂಗಳನ್ನು ಅವಮಾನಿಸಬೇಕು, ಕಿರಿಕಿರಿ ಉಂಟು ಮಾಡಬೇಕು. ನೀವು ಕರ್ನಾಟಕದಲ್ಲಿ ಸೆಕೆಂಡರಿ ಸಿಟಿಜನ್ ಎಂದು ಪದೇ ಪದೇ ಹೇಳಬೇಕು. ನಿಮ್ಮ ವೋಟು ಅವಶ್ಯಕತೆ ಇಲ್ಲ ಎಂದು ಹೇಳುವ ಪ್ರಯತ್ನವನ್ನು ಸಿದ್ದರಾಮಯ್ಯ ಹಿಂದೆಯೂ ಮಾಡಿದ್ದಾರೆ. ಇಂದೂ ಸಹ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಅಬ್ಬರದ ಮಳೆ ಸುರಿಯುತ್ತಿದ್ದು, ಆ.28 ರಂದು ಜಿಲ್ಲೆಯಾದ್ಯಾಂತ ರೆಡ್ ಅಲರ್ಟ್ ನೀಡಲಾಗಿದೆ. ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಆ.28 ರಂದು ಹತ್ತು ತಾಲೂಕುಗಳ ಅಂಗನವಾಡಿ, ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಆದೇಶಿಸಿದ್ದಾರೆ.
ಅದರಂತೆ ಕಾರವಾರ, ಅಂಕೋಲ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಜೋಯಿಡಾ, ದಾಂಡೇಲಿ ಭಾಗಗಳಿಗೆ ರಜೆ ನೀಡಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು, ಶರಾವತಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಲಿಂಗನಮಕ್ಕಿ ಜಲಾಶಯದಿಂದ 36,000 ಕ್ಯೂಸೆಕ್ ನೀರು ಹೊರಕ್ಕೆ ಬಿಡಲಾಗಿದೆ.
ಜಲಾಶಯದ ಗರಿಷ್ಟ ಮಟ್ಟ – 1819.00 ಮೀಟರ್ ಇದ್ದು, ಜಲಾಶಯದ ಇಂದಿನ ನೀರಿನ ಮಟ್ಟ- 1819.65, ಜಲಾಶಯದ ಇಂದಿನ ಒಳ ಹರಿವು- 20154.00 ಕ್ಯೂಸೆಕ್ ಇದ್ದು, ಇನ್ನೂ ಮೂರು ದಿನ ಹೆಚ್ಚಿನ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಡಳಿತವು ನದಿಪಾತ್ರ ಹಾಗೂ ಸಮುದ್ರ ತೀರ ಭಾಗಕ್ಕೆ ಪ್ರವಾಸಿಗರು ತೆರಳದಂತೆ ನಿಷೇಧ ಹೇರಿದೆ.
ಕಾರವಾರ: ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಕೆಎಸ್‍ಆರ್‌ಟಿಸಿ ಬಸ್ (KSRTC Bus) ಡಿಕ್ಕಿಯಾಗಿ (Accident) ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಯಲ್ಲಾಪುರದ ಮಾವಳ್ಳಿ ಕ್ರಾಸ್ ಬಳಿ ಶುಕ್ರವಾರ (ಆ.15) ಮಧ್ಯರಾತ್ರಿ ನಡೆದಿದೆ. ಅಪಘಾತದಲ್ಲಿ 7 ಜನ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರನ್ನು ಬಾಗಲಕೋಟೆ (Bagalkote) ಮೂಲದ ನಿಲವ್ವ ಹರದೊಳ್ಳಿ (40), ಜಾಲಿಹಾಳ ಗ್ರಾಮದ ಗಿರಿಜವ್ವಾ ಬೂದನ್ನವರ (30) ಎಂದು ಗುರುತಿಸಲಾಗಿದೆ. ಮತ್ತೊಬ್ಬ 45 ವರ್ಷದ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. 7 ಹಾಗೂ 12 ವರ್ಷದ ಇಬ್ಬರು ಮಕ್ಕಳ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಟ್ರಕ್‌ಗೆ ಬಸ್ ಡಿಕ್ಕಿ – 10 ಮಂದಿ ಯಾತ್ರಿಕರು ಸಾವು
ಬಾಗಲಕೋಟೆಯಿಂದ ಮಂಗಳೂರು ಕಡೆ ಹೊಗುತ್ತಿದ್ದ ಬಸ್, ಮಾವಳ್ಳಿ ಕ್ರಾಸ್ ಬಳಿ ಇಂಡಿಕೇಟರ್ ಹಾಕದೇ ನಿಲ್ಲಿಸಿದ್ದ ಕೇರಳ ಮೂಲದ ಲಾರಿಗೆ ಡಿಕ್ಕಿಯಾಗಿದೆ. ವೇಗವಾಗಿ ಗುದ್ದಿದ ಪರಿಣಾಮ ಬಸ್ ಒಂದು ಬದಿ ಸಂಪೂರ್ಣ ನಜ್ಜು ಗುಜ್ಜಾಗಿದೆ. ಇನ್ನೂ ಓವರ್‌ಟೇಕ್ ಮಾಡುವ ಭರದಲ್ಲಿ ಅಪಘಾತ ಸಂಭವಿಸಿದೆ ಎನ್ನಲಾಗುತ್ತಿದೆ.
ಮೃತರು ಕೆಲಸದ ನಿಮಿತ್ತ ಬಾಗಲಕೊಟೆಯಿಂದ ಮಂಗಳೂರು ಕಡೆಗೆ ಹೊರಟಿದ್ದರು ಎಂದು ತಿಳಿದು ಬಂದಿದೆ. ಗಾಯಾಳುಗಳನ್ನ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೃಷ್ಟವಶಾತ್ ಬಸ್ ಚಾಲಕ ನಿರ್ವಾಹಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸ್ಥಳಕ್ಕೆ ಯಲ್ಲಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ದೇಹಗಳನ್ನು ಯಲ್ಲಾಪುರ ಆಸ್ಪತ್ರೆಯ ಶವಾಗಾರಕ್ಕೆ ಕಳುಹಿಸಲಾಗಿದೆ. ಈ ಸಂಬಂಧ ಬಸ್ ಚಾಲಕ ಯಮನಪ್ಪ ಮಾಗಿ ಮೇಲೆ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಹುಮಾಯೂನ್ ಸಮಾಧಿ ಬಳಿಯ ಮಸೀದಿಯ ಮೇಲ್ಛಾವಣಿ ಕುಸಿದು ಐವರು ಸಾವು
ಅಕ್ರಮ ಅದಿರು ಪ್ರಕರಣದಲ್ಲಿ ಜಾಮೀನಿನ ಮೇಲೆ ಶಾಸಕ ಸತೀಶ್ ಸೈಲ್ ಹೊರಗಿದ್ದಾರೆ. ಆ.13 ಮತ್ತು 14 ರಂದು ಇ.ಡಿ ಅಧಿಕಾರಿಗಳು, ಶಾಸಕರ ಮನೆ ಮೇಲೆ ದಾಳಿ ನಡೆಸಿ ಪರಿಶೀಲಿಸಿದ್ದರು. ಈ ವೇಳೆ ಅಪಾರ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.
ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದ ತನಿಖೆಯನ್ನು ಸತೀಶ್ ಸೈಲ್ ಎದುರಿಸುತ್ತಿದ್ದಾರೆ. ಪ್ರಕರಣ ಹೈಕೋರ್ಟ್‌ನಲ್ಲಿ ವಿಚಾರಣೆ ಹಂತದಲ್ಲಿರುವ ಹೊತ್ತಲ್ಲೇ ಇ.ಡಿ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ. ಕಾರವಾರ (ಉತ್ತರ ಕನ್ನಡ), ಗೋವಾ, ಮುಂಬೈ ಮತ್ತು ನವದೆಹಲಿಯ ಅನೇಕ ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆಗಳನ್ನು ನಡೆಸಲಾಗಿದೆ. ಇದನ್ನೂ ಓದಿ: ಬೇಲೆಕೇರಿ ಅದಿರು ನಾಪತ್ತೆ ಕೇಸ್ – 6 ಪ್ರಕರಣಗಳಲ್ಲೂ ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು
ಕಾರವಾರ: ಕೂಲಿ ಹಣ ನೀಡಿಲ್ಲ ಎಂದು ಸಲಾಕೆಯಿಂದ ಹೊಡೆದು ಕೊಲೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಕಮಾಟಗೇರಿಯಲ್ಲಿ ನಡೆದಿದೆ.
ಕಮಾಟಗೇರಿಯ ರವೀಶ ಗಣಪತಿ ಚನ್ನಯ್ಯ (40) ಕೊಲೆಯಾದ ವ್ಯಕ್ತಿ. ಕಮಾಟಗೇರಿಯ ಮಂಜುನಾಥ ಬಸ್ಯಾ ಚನ್ನಯ್ಯ ಕೊಲೆ ಮಾಡಿದ ಆರೋಪಿಯಾಗಿದ್ದು, ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಿನ್ನೆ ದಿನಗೂಲಿ ಹಣಕ್ಕಾಗಿ ವಾದಿರಾಜ ಮಠದ ಕಮಾನಿನ ಬಳಿ ಇಬ್ಬರ ನಡುವೆ ವಾಗ್ವಾದವಾಗಿತ್ತು. ಸಿಟ್ಟಿನಲ್ಲಿ ರವೀಶ್ ಗಣಪತಿ ಚನ್ನಯ್ಯನಿಗೆ ಮಂಜುನಾಥ ಬಸ್ಯಾ ಕೆಲಸಕ್ಕಾಗಿ ತಂದಿದ್ದ ಗುದ್ದಲಿಯ ಸಲಾಕೆಯಿಂದ ಏಕಾಏಕಿ ತಲೆಗೆ ಹೊಡೆದಿದ್ದಾನೆ. ಗಂಭೀರ ಗಾಯದಿಂದ ರಕ್ತಸ್ರಾವವಾಗಿ ರವೀಶ ಗಣಪತಿ ಚನ್ನಯ್ಯ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಘಟನಾ ಸ್ಥಳಕ್ಕೆ ಡಿವೈಎಸ್‌ಪಿ ಗೀತಾ ಪಾಟಿಲ್, ಸಿಪಿಐ ಶಶಿಕಾಂತ ವರ್ಮಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗೆ ಶಿರಸಿ ಪಂಡಿತ್ ಆಸ್ಪತ್ರೆಗೆ ಶವ ರವಾನೆ ಮಾಡಲಾಗಿದೆ. ಘಟನೆ ಸಂಬಂಧ ಶಿರಸಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಕಾರವಾರ: ಬೆಳಂಬೆಳಗ್ಗೆ ಕಾರವಾರ (Karwar) ತಾಲೂಕಿನ ಚಿತ್ತಾಕುಲದಲ್ಲಿರುವ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ (Satish Sail) ಮನೆಯ ಮೇಲೆ ಇ.ಡಿ (ED Raid) ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಇಡಿ ಅಧಿಕಾರಿ ಕೇಶವ್ ನೇತೃತ್ವದಲ್ಲಿ 12 ಪ್ಯಾರಾ ಮಿಲಿಟರಿ ಶಸಸ್ತ್ರ ತಂಡದೊಂದಿಗೆ ಸುಮಾರು 6 ಅಧಿಕಾರಿಗಳ ತಂಡ ದಾಳಿ ಮಾಡಿದೆ. ಈ ವೇಳೆ ಶಾಸಕರಾಗಲಿ ಅಥವಾ ಅವರ ಕುಟುಂಬದವರಾಗಲಿ ಮನೆಯಲ್ಲಿ ಇರಲಿಲ್ಲ. ಹೀಗಾಗಿ ಮನೆಯಲ್ಲಿ ಇರುವ ಕೆಲಸದವನನ್ನು ವಿಚಾರಣೆ ನಡೆಸುತಿದ್ದು, ಶಾಸಕರಿಗೂ ಬುಲಾವ್ ಹೋಗಿದೆ. ಇದನ್ನೂ ಓದಿ: ಮಾಜಿ ಐಜಿಪಿ ಓಂ ಪ್ರಕಾಶ್ ಹತ್ಯೆಯಲ್ಲಿ ಮಗಳ ಪಾತ್ರವಿಲ್ಲ – ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಕೆ
ಮಲ್ಲಿಕಾರ್ಜುನ ಶಿಪ್ಪಿಂಗ್ ಕಂಪನಿ ಮೂಲಕ ಅದಿರು ಸಾಗಾಟ ನಡೆಸುತ್ತಿದ್ದ ಸತೀಶ್ ಸೈಲ್ ಈ ಹಿಂದೆ ಆಕ್ರಮ ಅದಿರು ಸಾಗಾಟ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸಿದ್ದರು. ಈ ಕುರಿತು ಈ ಹಿಂದೆ ಮಾಜಿ ಲೋಕಾಯುಕ್ತ ಸಂತೋಷ್ ಹೆಗಡೆ ತಂಡದಿಂದ ದೂರು ದಾಖಲಿಸಲಾಗಿತ್ತು. ಜನಪ್ರತಿನಿಧಿಗಳ ನ್ಯಾಯಾಲದಿಂದ ಜೈಲು ಶಿಕ್ಷೆ ವಿಧಿಸಲಾಗಿತ್ತು. ಹೈಕೋರ್ಟ್ ಮೂಲಕ ಜಾಮೀನು ಪಡೆದು ಸತೀಶ್ ಸೈಲ್ ಹೊರಬಂದಿದ್ದರು. ಇದನ್ನೂ ಓದಿ: ರಾಜ್ಯಾದ್ಯಂತ ಮುಂದಿನ ಒಂದು ವಾರ ಭಾರೀ ಮಳೆ – ಎಲ್ಲಾ ಜಿಲ್ಲೆಗೂ ಯೆಲ್ಲೋ ಅಲರ್ಟ್