Tag: ಕಾರು ಚಾಲಕ

  • ನನ್ನ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಯಾರೆಂದು ಗೊತ್ತಿಲ್ಲ: ಡಾ.ಸುಧಾಕರ್ ರಿಯಾಕ್ಷನ್

    ನನ್ನ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಯಾರೆಂದು ಗೊತ್ತಿಲ್ಲ: ಡಾ.ಸುಧಾಕರ್ ರಿಯಾಕ್ಷನ್

    ನವದೆಹಲಿ: ನನ್ನ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಯಾರೆಂದು ನನಗೆ ಗೊತ್ತಿಲ್ಲ. ನನ್ನ ಹೆಸರು ಯಾಕೆ ಉಲ್ಲೇಖ ಮಾಡಿದ್ದಾರೆ ಎಂಬುದೂ ಗೊತ್ತಿಲ್ಲ ಎಂದು ಸಂಸದ ಡಾ ಕೆ.ಸುಧಾಕರ್ (Dr K Sudhakar) ಹೇಳಿದ್ದಾರೆ.

    ಜಿಲ್ಲಾ ಪಂಚಾಯಿತಿ ಸಿಇಎ ಅವರ ಕಾರು ಚಾಲಕ ಡೆತ್‌ನೋಟ್‌ನಲ್ಲಿ (Death Note) ತಮ್ಮ ಹೆಸರು ಬರೆದಿಟ್ಟು ನೇಣಿಗೆ ಶರಣಾದ ಬಗ್ಗೆ ಅವರು ನವದೆಹಲಿಯಲ್ಲಿ (New Delhi) ಪ್ರತಿಕ್ರಿಯೆ ನೀಡಿದ್ದಾರೆ. ಬಾಬು ಆತ್ಮಹತ್ಯೆ (Suicide) ನನಗೆ ನೋವು ತಂದಿದೆ. ನನಗೆ ಬಾಬು ಎಂಬ ವ್ಯಕ್ತಿ ಗೊತ್ತಿಲ್ಲ. ನಾನು ಆತನ ಮುಖ ಸಹ ನೋಡಿಲ್ಲ. ಈ ವ್ಯಕ್ತಿ ಯಾಕೆ ನನ್ನ ಹೆಸರು ಉಲ್ಲೇಖ ಮಾಡಿದ್ದಾರೋ ಗೊತ್ತಿಲ್ಲ. ನಾಗೇಶ್ ಅವರ ಮಾವ ಚಿಕ್ಕಾಡಗನಹಳ್ಳಿ ಕೃಷ್ಣಮೂರ್ತಿಯ ಪರಿಚಯ ಇದೆ ಎಂದಿದ್ದಾರೆ. ಇದನ್ನೂ ಓದಿ: ಕೆ ಸುಧಾಕರ್‌ ಹೆಸರು ಬರೆದು ಕಾರು ಚಾಲಕ ಆತ್ಮಹತ್ಯೆ

    ಬಾಬು ಕುಟುಂಬದವರು ದೂರು ಕೊಡಲು ಠಾಣೆಗೆ ಹೋದಾಗ ಅಲ್ಲಿನ ಪಿಎಸ್‌ಐ ಡೆತ್‌ನೋಟ್‌ನಲ್ಲಿರುವಂತೆ ದೂರು ಕೊಡಿ ಎಂದಿದ್ದಾರೆ. ಇದರಲ್ಲಿ ಶಾಸಕರ, ಉಸ್ತುವಾರಿ ಸಚಿವರ ರಾಜಕೀಯ ಇದೆ. ನನ್ನನ್ನೂ ಒಳಗೊಂಡಂತೆ ಯಾರೇ ತಪ್ಪಿತಸ್ಥರು ಇದ್ದರೂ ಅವರಿಗೆ ಉಗ್ರ ಶಿಕ್ಷೆಯಾಗಲಿ. ಕಾನೂನು ಏನೇ ಇರಲಿ ತನಿಖೆ ಪಾರದರ್ಶಕವಾಗಿರಲಿ. ಇದು ಮಾಧ್ಯಮದ ಟ್ರಯಲ್ ಆಗೋದು ಬೇಡ. ಸರಿಯಾಗಿ ತನಿಖೆ ಆಗಲಿ ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: 25 ಲಕ್ಷ ವಂಚನೆ, ಸುಧಾಕರ್‌ ಹೆಸರು ಬರೆದಿಟ್ಟು ಚಾಲಕ ಸೂಸೈಡ್‌ – ಡೆತ್‌ನೋಟ್‌ನಲ್ಲಿ ಏನಿದೆ?

    ದೆಹಲಿಯಿಂದ ವಾಪಾಸ್ಸಾದ ಬಳಿಕ ಮೃತನ ಕುಟುಂಬ ಸದಸ್ಯರನ್ನು ನಾನು ಭೇಟಿ ಮಾಡುತ್ತೇನೆ. ಇದರ ಹಿಂದೆ ರಾಜಕೀಯ ಪಿತೂರಿ ಇದೆ. ಇದು ಜಗಜ್ಜಾಹೀರಾಗಿದೆ. ಕಾಂಗ್ರೆಸ್ ಶಾಸಕರ ಹೆಸರು ಬಂದ್ರೆ ಒಂದು ಕಾನೂನು. ಬಿಜೆಪಿ ಶಾಸಕರು, ಸಂಸದರು ಹೆಸರು ಬಂದ್ರೆ ಬೇರೆ ಕಾನೂನು. ಬಾಬು ಸಾವನ್ನು ರಾಜಕೀಯ ಕಾರಣಕ್ಕೆ ಎಳೆದು ತರುವುದು ಸರಿ ಅಲ್ಲ. ಕೊಡಗು ಪ್ರಕರಣದಲ್ಲಿ ಶಾಸಕರ ಹೆಸರು ಯಾಕೆ ಹಾಕಿಲ್ಲ ಎಂದು ಪ್ರಶ್ನಿಸಿದ್ದಾರೆ.

    ಏನಿದು ಪ್ರಕರಣ?
    ಚಿಕ್ಕಬಳ್ಳಾಪುರ (Chikkaballapura) ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿಯ ಗುತ್ತಿಗೆ ನೌಕರ ಕಾರು ಚಾಲಕ ಬಾಬು ಜಿಲ್ಲಾಡಳಿತ ಭವನದ ಆವರಣದಲ್ಲಿನ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಇಂದು ಬೆಳಗ್ಗೆ ಜಿಲ್ಲಾ ಪಂಚಾಯತ್ ಸಭಾಂಗಣದ ಪಕ್ಕದ ಮರದಡಿಯಲ್ಲೇ ಸರ್ಕಾರಿ ಕಾರು ನಿಲ್ಲಿಸಿ ಕಾರಿನ ಮೇಲೆ ಹತ್ತಿ ಹೊಂಗೆ ಮರಕ್ಕೆ ನೇಣು ಹಾಕಿಕೊಂಡಿದ್ದರು. ಆತ್ಮಹತ್ಯೆಗೂ ಮುನ್ನ ಬಾಬು ಅವರು ಡೆತ್‌ನೋಟ್ ಅನ್ನು ಮಹಿಳಾ ಸಿಬ್ಬಂದಿಗೆ ಕಳುಹಿಸಿದ್ದರು. ಡೆತ್‌ನೋಟ್‌ನಲ್ಲಿ 25 ಲಕ್ಷ ರೂ. ವಂಚನೆ ಆರೋಪ ಮಾಡಿ, ನನ್ನ ಸಾವಿಗೆ ಡಾ ಕೆ.ಸುಧಾಕರ್ ಹಾಗೂ ನಾಗೇಶ್ ಕಾರಣ ಎಂದು ಉಲ್ಲೇಖಿಸಿದ್ದಾರೆ.

  • 25 ಲಕ್ಷ ವಂಚನೆ, ಸುಧಾಕರ್‌ ಹೆಸರು ಬರೆದಿಟ್ಟು ಚಾಲಕ ಸೂಸೈಡ್‌ – ಡೆತ್‌ನೋಟ್‌ನಲ್ಲಿ ಏನಿದೆ?

    25 ಲಕ್ಷ ವಂಚನೆ, ಸುಧಾಕರ್‌ ಹೆಸರು ಬರೆದಿಟ್ಟು ಚಾಲಕ ಸೂಸೈಡ್‌ – ಡೆತ್‌ನೋಟ್‌ನಲ್ಲಿ ಏನಿದೆ?

    ಚಿಕ್ಕಬಳ್ಳಾಪುರ: ಜಿಲ್ಲಾ ಪಂಚಾಯತಿ ಸಿಎಇ ಅವರ ಕಾರು ಚಾಲಕ ಬಾಬು ಆತ್ಮಹತ್ಯೆ (Suicide) ಮಾಡಿಕೊಳ್ಳುವ ಮುನ್ನ ಡೆತ್‌ನೋಟ್‌ (Death Note) ಅನ್ನು ಮಹಿಳಾ ಸಿಬ್ಬಂದಿಗೆ ಕಳುಹಿಸಿದ್ದರು.

    ಜಿಲ್ಲಾ ಪಂಚಾಯತ್‌ ಮುಖ್ಯ ಲೆಕ್ಕಾಧಿಕಾರಿಯ ಗುತ್ತಿಗೆ ನೌಕರ ಕಾರು ಚಾಲಕ ಬಾಬು ಜಿಲ್ಲಾಡಳಿತ ಭವನದ ಆವರಣದಲ್ಲಿನ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಬೆಳಿಗ್ಗೆ ಜಿಲ್ಲಾ ಪಂಚಾಯತ್‌ ಸಭಾಂಗಣದ ಪಕ್ಕದ ಮರದಡಿಯಲ್ಲೇ ಸರ್ಕಾರಿ ಕಾರು ನಿಲ್ಲಿಸಿ ಕಾರಿನ ಮೇಲೆ ಹತ್ತಿ ಹೊಂಗೆ ಮರಕ್ಕೆ ನೇಣಿಗೆ ಶರಣಾಗಿದ್ದಾರೆ. ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದ ಚಿಕ್ಕಬಳ್ಳಾಪುರ ಎಸ್‌ಪಿ ಕುಶಾಲ್ ಚೌಕ್ಸಿ ಸೇರಿದಂತೆ ಗ್ರಾಮಾಂತರ ಪೊಲೀಸರು ತನಿಖೆ ನಡೆಸಿದ್ದಾರೆ.

    ಆತ್ಮಹತ್ಯೆ ಮಾಡಿಕೊಂಡ ಕಾರು ಚಾಲಕನ ಸರ್ಕಾರಿ ಕಾರಿನಲ್ಲಿ ಡೆತ್ ನೋಟ್ ಪತ್ತೆಯಾಗಿದೆ. ನನ್ನ ಸಾವಿಗೆ ಡಾ ಕೆ ಸುಧಾಕರ್ (K Sudhakar) ಕಾರಣ ಎಂದು ಉಲ್ಲೇಖಿಸಿದ್ದಾರೆ.

    ಘಟನೆ ಸಂಬಂಧ ತನಿಖೆಗಿಳಿದ ಪೊಲೀಸರು ಮೃತದೇಹವನ್ನ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಿದ್ದು ಇತ್ತ ಡೆತ್ ನೋಟ್ ನಲ್ಲಿ ಉಲ್ಲೇಖಿಸಿರುವ ನಾಗೇಶ್‌ಗಾಗಿ ಹುಡುಕಾಟ ನಡೆಸಿದ್ದಾರೆ. ಇದನ್ನೂ ಓದಿ: ನಾಳೆ ಬೆಂಗ್ಳೂರಿಗೆ ರಾಹುಲ್ ಗಾಂಧಿ ಹಲವೆಡೆ ಸಂಚಾರ ಬಂದ್, ಟ್ರಾಫಿಕ್ ತಪ್ಪಿಸೋಕೆ ಪರ್ಯಾಯ ವ್ಯವಸ್ಥೆ

    ಡೆತ್‌ ನೋಟ್‌ನಲ್ಲಿ ಏನಿದೆ?
    ಮೃತನ ಕಾರಿನಲ್ಲಿ 4 ಪುಟಗಳ ಡೆತ್ ನೋಟ್ ಸಿಕ್ಕಿದೆ. ಮೊದಲ ಪುಟದ ಮೊದಲ ಸಾಲಿನಲ್ಲೇ ನನ್ನ ಸಾವಿಗೆ ಡಾ ಕೆ ಸುಧಾಕರ್, ನಾಗೇಶ್, ಜಿಲ್ಲಾ ಪಂಚಾಯತಿ ಲೆಕ್ಕ ಪರಿಶೋಧಕ ವಿಭಾಗದ ಎಸ್‌ಡಿ ಮಂಜುನಾಥ್ ಹೆಸರನ್ನ ಬರೆಯಲಾಗಿದೆ. ಸುಧಾಕರ್‌ಗೆ ಹೇಳಿ ಸರ್ಕಾರಿ ಕೆಲಸ ಕೊಡಿಸುವುದಾಗಿ ನಾಗೇಶ್ 25 ಲಕ್ಷ ರೂ. ಹಣ ಪಡೆದು ಪಡೆದುಕೊಂಡಿದ್ದಾನೆ. ಆದರೆ ನನಗೆ ಕೆಲಸವೂ ಸಿಕ್ಕಿಲ್ಲ. ಹಣವು ಸಿಕ್ಕಿಲ್ಲ ಎಂದು ಬರೆಯಲಾಗಿದೆ.

    ಈ ಪತ್ರದ ಫೋಟೋವನ್ನು ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಸಿಬ್ಬಂದಿಗೆ ಕಳುಹಿಸಿದ್ದಾರೆ. ಈ ಡೆತ್‌ ನೋಟ್‌ ನೋಡಿ ಅವರು ಕಚೇರಿ ಬಳಿ ಆಗಮಿಸುವಷ್ಟರಲ್ಲೇ ಬಾಬು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

     

    ಸಂಬಂಧಿಕರ ಗೋಳಾಟ
    ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದ ಮೃತನ ಪತ್ನಿ ಶಿಲ್ಪಾ ಹಾಗೂ ಸಹೋದರ ಲೋಕೇಶ್ ಸೇರಿದಂತೆ ತಾಯಿ ಕಾಳಮ್ಮ ಆಕ್ರಂದನ ಮುಗಿಲುಮುಟ್ಟಿದೆ. ಸಭೆಯಿದೆ ಎಂದು ಹೇಳಿ ಬೆಳಗ್ಗೆ 5 ಗಂಟೆಗೆ ಮನೆಯಿಂದ ಹೊರಟ್ಟಿದ್ದರು. ಆದರೆ ಯಾಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವುದು ಗೊತ್ತಿಲ್ಲ ಎಂದು ತಿಳಿಸಿದರು. ಅಣ್ಣ ಸರ್ಕಾರಿ ಕೆಲಸಕ್ಕೆ ಹಣ ನೀಡಿದ್ದು ಹಾಗೂ ಡೆತ್ ನೋಟ್‌ನಲ್ಲಿ ಉಲ್ಲೇಖವಾದ ವಿಚಾರದ ಬಗ್ಗೆ ನಮಗೇನು ಸರಿಯಾಗಿ ತಿಳಿದಿಲ್ಲ ಎಂದು ಹೇಳಿದರು.

    ಕಾಂಗ್ರೆಸ್ ಪ್ರತಿಭಟನೆ
    ಘಟನೆ ನಡೆದ ಬೆನ್ನಲ್ಲೇ ಸಕ್ರೀಯವಾಗಿರುವ ಕಾಂಗ್ರೆಸ್ ಮುಖಂಡರು ಚಿಕ್ಕಬಳ್ಳಾಪುರ ನಗರದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಅಮಾಯಕನ ಸಾವಿಗೆ ಕಾರಣರಾವಾಗಿರುವ ಸಂಸದ ಸುಧಾಕರ್ ಹಾಗೂ ಡೆತ್ ನೋಟ್‌ನಲ್ಲಿ ಉಲ್ಲೇಖಿಸಿರುವ ನಾಗೇಶ್ ಹಾಗೂ ಮಂಜುನಾಥ್ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

  • ಕೆ ಸುಧಾಕರ್‌ ಹೆಸರು ಬರೆದು ಕಾರು ಚಾಲಕ ಆತ್ಮಹತ್ಯೆ

    ಕೆ ಸುಧಾಕರ್‌ ಹೆಸರು ಬರೆದು ಕಾರು ಚಾಲಕ ಆತ್ಮಹತ್ಯೆ

    ಚಿಕ್ಕಬಳ್ಳಾಪುರ: ಮಾಜಿ ಸಚಿವ, ಬಿಜೆಪಿ ಸಂಸದ ಸುಧಾಕರ್‌ (K. Sudhakar) ಹೆಸರನ್ನು ಡೆತ್‌ನೋಟ್‌ನಲ್ಲಿ (Death Note) ಉಲ್ಲೇಖಿಸಿ ಕಾರು ಚಾಲಕರೊಬ್ಬರು (Car Driver) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಚಿಕ್ಕಬಳ್ಳಾಪುರದ ಬಾಪೂಜಿನಗರದ ನಿವಾಸಿ ಬಾಬು (32) ಆತ್ಮಹತ್ಯೆಗೆ ಶರಣಾಗಿದ್ದಾರೆ. ಜಿಲ್ಲಾ ಪಂಚಾಯತಿ ಸಿಇಒ ಕಾರು ಚಾಲಕನಾಗಿದ್ದ ಬಾಬು ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜಿಲ್ಲಾ ಪಂಚಾಯತಿ ಸಭಾಂಗಣದ ಹಿಂಭಾಗದಲ್ಲಿರುವ ಮರದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ನನ್ನ ಸಾವಿಗೆ ಸಂಸದ ಡಾ ಕೆ ಸುಧಾಕರ್ ಕಾರಣ. ಚಿಕ್ಕಕಾಡಿಗಾನಹಳ್ಳಿ ನಾಗೇಶ್ ಸರ್ಕಾರಿ ಕೆಲಸ ಕೊಡಿಸುವುದಾಗಿ ಹೇಳಿ 25 ಲಕ್ಷ ಹಣ ಪಡೆದು ವಂಚನೆ ಮಾಡಿದ್ದಾರೆ. ಅಷ್ಟೇ ಅಲ್ಲದೇ ಜಿಲ್ಲಾ ಪಂಚಾಯತಿ ಲೆಕ್ಕ ಸಹಾಯಕರ ವಿರುದ್ದವೂ ಡೆತ್‌ ನೋಟ್‌ನಲ್ಲಿ ಬಾಬು ಹಲವು ಆರೋಪ ಮಾಡಿದ್ದಾರೆ.

    ಸ್ಥಳಕ್ಕೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.

  • ಭವಾನಿ ರೇವಣ್ಣ ಕಾರು ಚಾಲಕನ ಬಂಧನ

    ಭವಾನಿ ರೇವಣ್ಣ ಕಾರು ಚಾಲಕನ ಬಂಧನ

    ಬೆಂಗಳೂರು: ಮಹಿಳೆ ಕಿಡ್ನಾಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಭವಾನಿ ರೇವಣ್ಣ (Bhavani Revanna) ಕಾರು ಚಾಲಕನನ್ನು ಇದೀಗ ಬಂಧಿಸಲಾಗಿದೆ.

    ಇಂದು ಸಂಜೆ ಎಸ್ಐಟಿಯವರು ಅಜಿತ್‌ನನ್ನು ಚಿಕ್ಕಮಗಳೂರಿನಲ್ಲಿ (Chikkamagaluru) ಬಂಧಿಸಿದ್ದಾರೆ. ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಈ ಹಿಂದೆ ನೋಟಿಸ್‌ ಕೊಟ್ಟರೂ ಅಜಿತ್‌ ಕ್ಯಾರೇ ಎಂದಿರಲಿಲ್ಲ. ಹೀಗಾಗಿ ವಿಶೇಷ ತನಿಖಾ ತಂಡ (SIT) ಪೊಲೀಸರು ಹೊಳೆನರಸೀಪುರದಲ್ಲಿರುವ ಅಜಿತ್ ನಿವಾಸಕ್ಕೆ ತೆರಳಿ ಸಮನ್ಸ್ ಜಾರಿ ಮಾಡಿದ್ದರು.

    ಕೆ.ಆರ್ ನಗರದ ಸಂತ್ರಸ್ತ ಮಹಿಳೆಯನ್ನು ತನ್ನದೇ ಕಾರಿನಲ್ಲಿ ಕರೆದುಕೊಂಡು ಹೋಗಿದ್ದ ಅನ್ನೋ ಮಾಹಿತಿಯ ಜೊತೆಗೆ ರೇವಣ್ಣ ನಿರೀಕ್ಷಣಾ ಜಾಮೀನು ವಿಚಾರಣೆ ದಿನ ಸಂತ್ರಸ್ತ ಮಹಿಳೆಯ ವೀಡಿಯೋ ಚಿತ್ರೀಕರಣ ಮಾಡಿದ್ದು ಇದೇ ಅಜಿತ್ ಅನ್ನೋ ಮಾಹಿತಿ ಇತ್ತು. ಹೀಗಾಗಿಯೇ ಅಜಿತ್ ನನ್ನು ಎಸ್‍ಐಟಿಯವರು ಹುಡುಕಾಟ ನಡೆಸಿದ್ದರು. ಇದನ್ನೂ ಓದಿ: ಭವಾನಿ ರೇವಣ್ಣ ಜಾಮೀನು ಅರ್ಜಿ ವಜಾ – ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ

  • ಬಾಗಲಕೋಟೆಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ – ಸ್ಥಳದಲ್ಲೇ ನಾಲ್ವರ ದುರ್ಮರಣ!

    ಬಾಗಲಕೋಟೆಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ – ಸ್ಥಳದಲ್ಲೇ ನಾಲ್ವರ ದುರ್ಮರಣ!

    ಬಾಗಲಕೋಟೆ: ಜಿಲ್ಲೆಯ ಬೀಳಗಿ ತಾಲ್ಲೂಕಿನ ಅನಗವಾಡಿ ಗ್ರಾಮದಲ್ಲಿ ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ (Road Accident) ಓರ್ವ ಮಹಿಳೆ ಸೇರಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

    ಕಬ್ಬು ತುಂಬಿದ ಟ್ರ್ಯಾಕ್ಟರ್‌ಗೆ ಸ್ವಿಫ್ಟ್ ಕಾರೊಂದು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಜ್ಞಾನವಾಪಿ ಮಸೀದಿ ಜಾಗದಲ್ಲೇ ಹಿಂದೂ ದೇವಾಲಯವಿತ್ತು – ಪುರಾತತ್ವ ಇಲಾಖೆ ವರದಿ ಬಹಿರಂಗ

    ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ಹೊನಗನಳ್ಳಿ ಮೂಲದ ನಾಲ್ವರು ಸವದತ್ತಿ ಯಲ್ಲಮ್ಮ ದರ್ಶನಕ್ಕೆ ಹೋಗಿ ಬರುತ್ತಿದ್ದ ವೇಳೆ ಅನಗವಾಡಿ ಗ್ರಾಮದ ಹುಬ್ಬಳ್ಳಿ-ವಿಜಯಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ (National Highway) ಘಟನೆ ನಡೆದಿದೆ.

    ಕಾರು ಚಾಲಕನನ್ನು ಮಲ್ಲು ಪೂಜಾರಿ ಎಂದು ಗುರುತಿಸಲಾಗಿದೆ. ಕಾರು ನಿಯಂತ್ರಣ ಕಳೆದುಕೊಂಡು ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಸದ್ಯ ಬೀಳಗಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಇದನ್ನೂ ಓದಿ: Padma Awards 2024: ಕರ್ನಾಟಕದ 9 ಮಂದಿ ಸೇರಿ 132 ಜನರಿಗೆ ‘ಪದ್ಮ’ ಪ್ರಶಸ್ತಿ – ಸಂಪೂರ್ಣ ಪಟ್ಟಿ ಇಲ್ಲಿದೆ.. 

  • ಕೆಲಸದಿಂದ ತೆಗೆದು ಹಾಕಿದ್ದಕ್ಕೆ ಪ್ರತಿಮಾ ಕೊಲೆ- ತಪ್ಪೊಪ್ಪಿಕೊಂಡ ಕಿರಣ್

    ಕೆಲಸದಿಂದ ತೆಗೆದು ಹಾಕಿದ್ದಕ್ಕೆ ಪ್ರತಿಮಾ ಕೊಲೆ- ತಪ್ಪೊಪ್ಪಿಕೊಂಡ ಕಿರಣ್

    ಬೆಂಗಳೂರು: ಗಣಿ ಅಧಿಕಾರಿ ಪ್ರತಿಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕಾರು ಚಾಲಕನನ್ನು ಬಂಧಿಸಲಾಗಿದೆ.

    ಪ್ರತಿಮಾ ಮೇಲಿನ ಸೇಡಿನಿಂದ ಪ್ರಾಣ ತೆಗೆದು ಕಿರಣ್ ಎಸ್ಕೇಪ್ ಆಗಿ ಇವಾಗ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾನೆ. ಅಲ್ಲದೆ ವಿಚಾರಣೆಯ ವೇಳೆ ತಪ್ಪೊಪ್ಪಿಕೊಂಡಿದ್ದಾನೆ.

    4 ವರ್ಷದಿಂದ ಕಾರು ಚಾಲಕನಾಗಿದ್ದ ಕಿರಣ್, ಬೇಜವಾಬ್ದಾರಿಯಿಂದ ಕಾರು ಓಡಿಸುತ್ತಿದ್ದನು. ಗುತ್ತಿಗೆ ಆಧಾರದಲ್ಲಿ ಚಾಲಕ ವೃತ್ತಿ ಮಾಡುತ್ತಿದ್ದ ಕಿರಣ್ ಕಳೆದ ತಿಂಗಳು ಹೊಸ ಸರ್ಕಾರಿ ಕಾರು ಅಪಘಾತ ಮಾಡಿದ್ದನು. ಅಪಘಾತದ ನಂತರ ಕಚೇರಿಯಲ್ಲೇ ಕಾರು ಬಿಟ್ಟು ತೆರಳಿದ್ದನು.

    ಕಿರಣ್ ನಡವಳಿಕೆಯಿಂದ ಕೋಪಗೊಂಡಿದ್ದ ಪ್ರತಿಮಾ, 10 ದಿನಗಳ ಹಿಂದೆ ಕೆಲಸದಿಂದ ತೆಗೆದು ಹಾಕಿದ್ದರು. ಈ ವೇಳೆ ಪ್ರತಿಮಾ ಕಾಲಿಗೆ ಬಿದ್ದು ಕೆಲಸಕ್ಕೆ ಸೇರಿಸಿಕೊಳ್ಳುವಂತೆ ಬೇಡಿಕೊಂಡಿದ್ದನು. ಆದರೆ ಪ್ರತಿಮಾ ಅವರು ಕಿರಣ್‍ನನ್ನು ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳಲು ನಿರಾಕರಿಸಿದ್ದರು. ಇದೇ ಕಾರಣಕ್ಕೆ ಪ್ರತಿಮಾ ಮೇಲೆ ದ್ವೇಷಕಾರಿದ್ದನು.

    ಕಿರಣ್‍ಗೆ ವಾರ್ನಿಂಗ್ ಕೊಟ್ಟಿದ್ದ ಪ್ರತಿಮಾ: ಪ್ರತಿಮಾ ರೇಡ್ ಹೋಗುವ ವಿಚಾರ ಲೀಕ್ ಮಾಡುತ್ತಿದ್ದ ಬಗ್ಗೆ ಮಾಹಿತಿ ಇತ್ತು. ಈ ಕಾರಣಕ್ಕೆ ಪ್ರತಿಮಾ ವಾರ್ನ್ ಕೂಡ ಮಾಡಿದ್ದರು. ಈ ವೇಳೆ ಬೈದಾಗ ತಪ್ಪಾಗಿದೆ ಕೆಲಸದಿಂದ ತೆಗೆಯಬೇಡಿ ಎಂದು ಕೇಳಿಕೊಂಡಿದ್ದನು.

    ಕೊಲೆ ದಿನವೂ ಪ್ರತಿಮಾ ಕಾಲಿಗೆ ಬಿದ್ದು ಕೆಲಸಕ್ಕೆ ಸೇರಿಸಿಕೊಳ್ಳುವಂತೆ ದುಂಬಾಲು ಬಿದ್ದಿದ್ದನು. ಆದರೆ ಆಕೆ ಅದನ್ನು ತಿರಸ್ಕರಿಸಿದ್ದರಿಂದ ಶನಿವಾರ ಮನೆ ಬಳಿಯೇ ಕಾದು ಕುಳಿತು ಹೊಂಚು ಹಾಕಿ ಕೊಲೆ ಮಾಡಿ ಕಿರಣ್ ಎಸ್ಕೇಪ್ ಆಗಿದ್ದನು. ಇದೀಗ ಪೊಲೀಸರು ಆತನನ್ನು ಬಂಧಿಸಿದ್ದು, ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

  • ರಾಜ್ಯಪಾಲರ ಕಾರು ಚಾಲಕ ಹೃದಯಾಘಾತದಿಂದ ಸಾವು

    ರಾಜ್ಯಪಾಲರ ಕಾರು ಚಾಲಕ ಹೃದಯಾಘಾತದಿಂದ ಸಾವು

    ಬೆಂಗಳೂರು: ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ (Thawarchand Gehlot) ಅವರ ಮುಖ್ಯ ಚಾಲಕ ರವಿಕುಮಾರ್ ಎಸ್. ಕಾಳೆ ಅವರು ನಿನ್ನೆ ರಾತ್ರಿ ಹೃದಯಘಾತದಿಂದ ಮೃತಪಟ್ಟಿದ್ದಾರೆ.

    ನಿನ್ನೆ ಹುಬ್ಬಳ್ಳಿಯಿಂದ (Hubballi) ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದ ರಾಜ್ಯಪಾಲರನ್ನು ಪಿಕ್ ಮಾಡಲು ತೆರಳಿದ್ದರು. ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ರವಿಕುಮಾರ್‌ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ದೇವನಹಳ್ಳಿ ಆಸ್ಪತ್ರೆಗೆ ದಾಖಲಿಸಲಾಯಿತು. ಅಷ್ಟರಲ್ಲಾಗಲೇ ಅವರು ಕೊನೆಯುಸಿರೆಳೆದಿದ್ದರು. ಇದನ್ನೂ ಓದಿ: ರಾತ್ರಿ 11 ಗಂಟೆ ನಂತ್ರ ಓಡಾಡಿದ್ದಕ್ಕೆ ದಂಪತಿಗೆ ದಂಡ ಹಾಕಿದ್ದ ಪೊಲೀಸರು ಸಸ್ಪೆಂಡ್‌

    ಥಾವರ್‌ಚಂದ್ ಗೆಹ್ಲೋಟ್ ರಾಜ್ಯಕ್ಕೆ ರಾಜ್ಯಪಾಲರಾಗಿ ಬಂದಾಗಿನಿಂದ ರವಿಕುಮಾರ್ ಕಾರ್ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದರು. ರಾಜಭವನದಲ್ಲಿ ರವಿಕುಮಾರ್‌ ಅವರ ಪಾರ್ಥಿವ ಶರೀರಕ್ಕೆ ರಾಜ್ಯಪಾಲರು ಪುಷ್ಪ ನಮನ ಸಲ್ಲಿಸಿದರು.

    ರಾಜಭವನದ ಅಧಿಕಾರಿಗಳು, ಸಿಬ್ಬಂದಿಗಳು ಅಂತಿಮ ನಮನ ಸಲ್ಲಿಸಿದರು. ರವಿಕುಮಾರ್ ಕಾಳೆ ಅವರಿಗೆ 42 ವಯಸ್ಸಾಗಿದ್ದು, ಸುಮಾರು 16 ವರ್ಷ ಸೇವಾ ಅನುಭವ ಹೊಂದಿದ್ದರು. ಅವರ ಅಂತ್ಯಸಂಸ್ಕಾರ ಧಾರವಾಡದ ಸ್ವಗ್ರಾಮದಲ್ಲಿ ನಡೆಯಲಿದೆ. ಇದನ್ನೂ ಓದಿ: ಅಂಬೇಡ್ಕರ್‌ಗೆ ಅಪಮಾನ – ಮಹಾರಾಷ್ಟ್ರ ಸಚಿವ ಚಂದ್ರಕಾಂತ್ ಪಾಟೀಲ ಮುಖಕ್ಕೆ ಮಸಿ ಬಳಿದು ಆಕ್ರೋಶ

    Live Tv
    [brid partner=56869869 player=32851 video=960834 autoplay=true]

  • ಬೈಕ್ ಸವಾರನೊಂದಿಗೆ ಜಗಳ – ಸಿಟ್ಟಿನಿಂದ ಜನರ ಮೇಲೆ ಕಾರು ಹರಿಸಿದ

    ಬೈಕ್ ಸವಾರನೊಂದಿಗೆ ಜಗಳ – ಸಿಟ್ಟಿನಿಂದ ಜನರ ಮೇಲೆ ಕಾರು ಹರಿಸಿದ

    ನವದೆಹಲಿ: ಬೈಕ್ ಸವಾರನೊಂದಿಗೆ (Biker) ಜಗಳವಾಡಿದ ವ್ಯಕ್ತಿಯೊಬ್ಬ ಕೋಪದಲ್ಲಿ ತನ್ನ ಕಾರನ್ನು (Car) ಹಲವು ಜನರ ಮೇಲೆ ಹರಿಸಿರುವ ಘಟನೆ ದೆಹಲಿಯಲ್ಲಿ (Delhi) ನಡೆದಿದೆ. ಘಟನೆಯಲ್ಲಿ ಹಲವರಿಗೆ ಗಾಯಗಳಾಗಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ವರದಿಗಳ ಪ್ರಕಾರ ಅಕ್ಟೋಬರ್ 26 ರಂದು ಘಟನೆ ನಡೆದಿದೆ. ಕಿರಿದಾದ ರಸ್ತೆಯಲ್ಲಿ ಬೈಕ್ ಅನ್ನು ನಿಲ್ಲಿಸಿದ್ದಕ್ಕಾಗಿ ಕಾರು ಚಾಲಕ ತಾನು ಮುಂದೆ ಹೋಗಲು ಸಾಧ್ಯವಾಗದೇ ಮೊದಲಿಗೆ ಬೈಕಿಗೆ ಡಿಕ್ಕಿ ಹೊಡೆದಿದ್ದಾನೆ. ಬಳಿಕ ಇಬ್ಬರ ನಡುವೆ ವಾಗ್ವಾದ ನಡೆದಿದೆ.

    ಈ ವೇಳೆ ಸ್ಥಳೀಯರು ತಕ್ಷಣ ಮಧ್ಯಪ್ರವೇಶಿಸಿ ಇಬ್ಬರ ಜಗಳವನ್ನು ನಿಲ್ಲಿಸಿದ್ದಾರೆ. ಆದರೆ ಕೋಪ ತಣ್ಣಗಾಗದ ಕಾರು ಚಾಲಕ ಆಕ್ಸಲೇಟರ್ ಒತ್ತಿ ಅಲ್ಲಿ ನೆರೆದಿದ್ದ ಜನರ ಮೇಲೆ ಓಡಿಸಿದ್ದಾನೆ. ಈ ದೃಶ್ಯಾವಳಿ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಮಾಧ್ಯಮಗಳಲ್ಲೂ ಹರಿದಾಡಿದೆ. ಇದನ್ನೂ ಓದಿ: ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳಾ ಸಿಬ್ಬಂದಿ ಎಣ್ಣೆ ಪಾರ್ಟಿ

    KILLING CRIME

    ಸಿಸಿಟಿವಿ ದೃಶ್ಯಾವಳಿಯ ಸಹಾಯದಿಂದ ಕಾರಿನ ನಂಬರ್ ಪ್ಲೇಟ್ ಮೂಲಕ ಚಾಲಕನನ್ನು ಪತ್ತೆ ಹಚ್ಚಿದ ಪೊಲೀಸರು ಆತನ ಮನೆಯಿಂದ ಬಂಧಿಸಿದ್ದಾರೆ. ಇದನ್ನೂ ಓದಿ: ದುಷ್ಕರ್ಮಿಗಳಿಂದ 52 ಅಡಿಕೆ ಗಿಡಗಳ ನಾಶ- ಜಮೀನಿನಲ್ಲಿಯೇ ಹೊರಳಾಡಿ ರೈತ ಕಣ್ಣೀರು

    2 ದಿನಗಳ ಹಿಂದೆ ಗಾಜಿಯಾಬಾದ್‌ನಲ್ಲಿಯೂ ವಾಹನ ನಿಲುಗಡೆ ಮಾಡಿದ ವಿಚಾರಕ್ಕೆ ಇಬ್ಬರ ನಡುವೆ ಜಗಳವಾಗಿತ್ತು. ಘಟನೆಯಲ್ಲಿ ಒಬ್ಬ ವ್ಯಕ್ತಿ ಇನ್ನೊಬ್ಬನ ತಲೆಗೆ ಇಟ್ಟಿಗೆಯಿಂದ ಹೊಡೆದು ಹತ್ಯೆ ನಡೆಸಿದ್ದ.

    Live Tv
    [brid partner=56869869 player=32851 video=960834 autoplay=true]

  • ಮೇಲಧಿಕಾರಿ ವಿರುದ್ಧ ತಿರುಗಿಬಿದ್ದ ಕಾನ್ಸ್‌ಟೇಬಲ್‌ – ವಿಧಾನಸೌಧದ ಭದ್ರತಾ DCP ವಿರುದ್ಧ ದೂರು

    ಮೇಲಧಿಕಾರಿ ವಿರುದ್ಧ ತಿರುಗಿಬಿದ್ದ ಕಾನ್ಸ್‌ಟೇಬಲ್‌ – ವಿಧಾನಸೌಧದ ಭದ್ರತಾ DCP ವಿರುದ್ಧ ದೂರು

    ಬೆಂಗಳೂರು: ವಿಧಾನಸೌಧದ ಭದ್ರತಾ ಡಿಸಿಪಿ ವಿರುದ್ಧ ಕಾರು ಚಾಲಕ ತಿರುಗಿ ಬಿದ್ದಿದ್ದಾರೆ. ನಾಲ್ಕು ಪುಟಗಳಲ್ಲಿ ತನಗಾಗುತ್ತಿರೋ ಅನ್ಯಾಯದ ಬಗ್ಗೆ ಪತ್ರದಲ್ಲಿ ಉಲ್ಲೇಖ ಮಾಡಿ ಪೊಲೀಸ್ ಕಾನ್ಸ್‌ಟೇಬಲ್ ದೂರು ನೀಡಿದ್ದಾರೆ.

    ವಿಧಾನಸೌಧ ಭದ್ರತಾ ಡಿಸಿಪಿಯ ಹೆಸರು ಸೂಚಿಸದೇ ವಿಧಾನಸೌದ ಭದ್ರತಾ ಡಿಸಿಪಿ ಎಂದಷ್ಟೇ ದೂರಿನಲ್ಲಿ ಉಲ್ಲೇಖ ಮಾಡಿ ಕಾನ್ಸ್‌ಟೇಬಲ್ (ಚಾಲಕ) ಪವನ್ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ಬಿಎಸ್‌ ಯಡಿಯೂರಪ್ಪ ಇಂಗ್ಲೆಂಡ್‌ ಪ್ರವಾಸ 8 ದಿನ ವಿಸ್ತರಣೆ

    VIDHANASAUDHA

    ಅವಧಿ ಮೀರಿ ಕೆಲಸ‌ ಮಾಡಿಸುತ್ತಾರೆ. ವಾರದ ರಜೆ ಹೊರತುಪಡಿಸಿ ಉಳಿದಂತೆ ರಜೆ ನೀಡುವುದಿಲ್ಲ. ದಿನದಲ್ಲಿ 13 ರಿಂದ ಹದಿನಾಲ್ಕು ಗಂಟೆ ಕೆಲಸ ಮಾಡಿಸಿಕೊಳ್ತಾರೆ. ದಣಿವಿಲ್ಲದೇ ಕೆಲಸ ಮಾಡಿಸಿಕೊಳ್ಳುತ್ತಿರುವ ಬಗ್ಗೆ ಹಲವು ಬಾರಿ ಡಿಸಿಪಿ ಬಳಿ ಮನವಿ ಮಾಡಿಕೊಂಡಿರೂ ಪುರಷ್ಕರಿಸುತ್ತಿಲ್ಲ ಎಂದು ದೂರಿನಲ್ಲಿ ಅಳಲು ತೋಡಿಕೊಂಡಿದ್ದಾರೆ.

    ದಿನದಲ್ಲಿ 14 ಗಂಟೆ ಕೆಲಸ ಮಾಡುತ್ತಿರುವುದರಿಂದ ನನ್ನ ಆರೋಗ್ಯ ಹದಗೆಟ್ಟಿದೆ. ಕೆಲಸದ ವೇಳೆ ಅನಾಹುತ, ಅವಘಡಗಳಾದರೆ ಅದಕ್ಕೆ ಸಂಬಂಧಪಟ್ಟ‌ ಅಧಿಕಾರಿಗಳೇ ಹೊಣೆಗಾರರಾಗಬೇಕು ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಪ್ರತ್ಯೇಕ ರಾಜ್ಯ ಕೇಳುವುದು ಮೂರ್ಖತನದ ಮಾತು: ಕತ್ತಿಗೆ ಹೊರಟ್ಟಿ ತಿರುಗೇಟು

    ಕಳೆದ 5 ತಿಂಗಳಿಂದ ವಿಧಾನಸೌಧ ಭದ್ರತಾ ವಿಭಾಗದ ಡಿಸಿಪಿ ಚಾಲಕನಾಗಿ ಕೆಲಸ‌ ಮಾಡುತ್ತಿದ್ದೇನೆ. 5 ತಿಂಗಳಲ್ಲಿ 50 ದಿನ ಹೊರತು‌ಪಡಿಸಿ ಉಳಿದಂತೆ ಒಬ್ಬನೆ ಚಾಲಕನಾಗಿ‌ ಕೆಲಸ ಮಾಡಿರುತ್ತೇನೆ. ಡಿಸಿಪಿಯವರ ಎರಡು ಕಾರಿಗೆ ಎರಡು‌ ಚಾಲಕರಿದ್ದಾರೆ. ನಾನು ಅಧಿಕೃತವಾಗಿ ಡಿಸಿಪಿ‌ ಚಾಲಕನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಉಳಿದಂತೆ ಇನ್ನೊಬ್ಬ ಚಾಲಕ ಹಾಗೂ ಕಾರನ್ನು ಡಿಸಿಪಿಯವರು ಮಕ್ಕಳನ್ನು ಶಾಲೆಗೆ ಕರೆದುಕೊಂಡು ಹೋಗಿ ಕರೆದುಕೊಂಡು ಬರಲು ಬಳಿಸಿಕೊಳ್ಳೊತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

    ಮಕ್ಕಳಿಗೆ ರಜೆ‌ ಇದ್ದಾಗ ಅವರು ಕರ್ತವ್ಯಕ್ಕೆ ಬಂದರೆ ನನಗೆ ವಿಶ್ರಾಂತಿ ಕೊಡುತ್ತಾರೆಂದು ದೂರಿನಲ್ಲಿ ಕಾನ್ಸ್‌ಟೇಬಲ್ ಪವನ್ ಆರೋಪ ಮಾಡಿದ್ದಾರೆ.‌ ಪೊಲೀಸ್ ಕಾನ್ಸ್‌ಟೇಬಲ್ ಪವನ್ ಡಿಸಿಪಿಗೆ ಬರೆದಿರೋ ಪತ್ರ ಇಲಾಖೆಯಲ್ಲಿ ಬಿಸಿ ಬಿಸಿ ಚರ್ಚೆಗೆ ಗ್ರಾಸವಾಗಿದೆ.‌

    Live Tv

  • ಅಮೆರಿಕಾದಿಂದ ವಾಪಸ್ಸಾದ ದಂಪತಿಯನ್ನು ಕೊಂದೇ ಬಿಟ್ಟ ಕಾರು ಡ್ರೈವರ್!

    ಅಮೆರಿಕಾದಿಂದ ವಾಪಸ್ಸಾದ ದಂಪತಿಯನ್ನು ಕೊಂದೇ ಬಿಟ್ಟ ಕಾರು ಡ್ರೈವರ್!

    ಚೆನ್ನೈ: 10 ತಿಂಗಳ ಬಳಿಕ ಅಮೆರಿಕಾದಿಂದ ವಾಪಸ್ಸಾದ ದಂಪತಿಯನ್ನು ಕಾರು ಡ್ರೈವರ್ ಬರ್ಬರವಾಗಿ ಹತ್ಯೆ ಮಾಡಿದ ಆಘಾತಕಾರಿ ಘಟನೆಯೊಂದು ತಮಿಳುನಾಡಿನ ಚೆನ್ನೈನಲ್ಲಿ ನಡೆದಿದೆ.

    ಮೃತ ದುರ್ದೈವಿ ದಂಪತಿಯನ್ನು ಶ್ರೀಕಾಂತ್(60) ಹಾಗೂ ಅನುರಾಧಾ(53) ಎಂದು ಗುರುತಿಸಲಾಗಿದೆ. ಇವರನ್ನು ಮನೆಯ ಕಾರು ಡ್ರೈವರ್ ಕೃಷ್ಣ ಕೊಲೆ ಮಾಡಿದ್ದಾನೆ. ಈ ದಂಪತಿಯ ಮಗಳು ಅಮೆರಿಕಾದಲ್ಲಿದ್ದು, ಈ ಹಿನ್ನೆಲೆಯಲ್ಲಿ 10 ತಿಂಗಳ ಹಿಂದೆ ಅಲ್ಲಿಗೆ ತೆರಳಿದ್ದು, ಶನಿವಾರ ಬೆಳಗ್ಗೆ ವಾಪಸ್ಸಾಗಿದ್ದಾರೆ.

    ಕೃಷ್ಣ ಕಳೆದ 10 ವರ್ಷಗಳಿಂದ ದಂಪತಿ ಮನೆಯಲ್ಲಿ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದಾನೆ. ಅಂತೆಯೇ ಅಮೆರಿಕಾದಿಂದ ಬರುತ್ತಿರುವ ದಂಪತಿಯನ್ನು ಕರೆ ತರಲೆಂದು ಹೋದವನು ಕೊಲೆ ಮಾಡಿ ಸಿಕ್ಕಿಬಿದ್ದಿದ್ದಾನೆ. ಇದನ್ನೂ ಓದಿ: ಸರ್ಕಾರದ ವಿರುದ್ಧ ಕಾನೂನಾತ್ಮಕ ಹೋರಾಟ: ಪ್ರಮೋದ್ ಮುತಾಲಿಕ್

    ಅಮೆರಿಕಾದಿಂದ ಬರುತ್ತಿರುವ ದಂಪತಿಯನ್ನು ವಿಮಾನ ನಿಲ್ದಾಣದಿಂದ ಕಾರಿನಲ್ಲಿ ಕೃಷ್ಣ ಕರೆದುಕೊಂಡು ಬಂದಿದ್ದ. ದಂಪತಿ ಮನೆಗೆ ಬಂದ ಕೆಲ ಗಂಟೆಗಳ ಬಳಿಕ ಮಗಳು ಕರೆ ಮಾಡಿದ್ದಾರೆ. ಎಷ್ಟು ಬಾರಿ ಕರೆ ಮಾಡಿದರೂ ಅಪ್ಪ-ಅಮ್ಮನ ಮೊಬೈಲ್ ಸ್ವಿಚ್ಛ್ ಆಫ್ ಆಗಿದೆ ಅಂತಾನೇ ಮೆಸೇಜ್ ಬರುತ್ತಿತ್ತು. ಇದರಿಂದ ಗಾಬರಿಗೊಂಡ ಆಕೆ ತಮ್ಮ ಸಂಬಂಧಿಕರಿಗೆ ಕರೆ ಮಾಡಿ ವಿಚಾರಿಸಿದ್ದಾರೆ.

    ಇತ್ತ ಮಾಹಿತಿ ತಿಳಿದ ಕೂಡಲೇ ಸಂಬಂಧಿಕರು ಶ್ರೀಕಾಂತ್ ಮನೆಗೆ ದೌಡಾಯಿಸಿದ್ದಾರೆ. ಆದರೆ ಮನೆಯಲ್ಲಿ ಇಬ್ಬರೂ ಇರಲಿಲ್ಲ. ಇದರಿಂದ ಮತ್ತಷ್ಟು ಗಾಬರಿಗೊಂಡ ಸಂಬಂಧಿಕರು ಹುಡುಕಾಟ ಆರಂಭಿಸಿದ್ದಾರೆ. ಅಲ್ಲದೆ ಪೊಲೀಸರಿಗೂ ದೂರು ನೀಡಿದ್ದಾರೆ. ಪೊಲೀಸರು ಕೂಡ ತಕ್ಷಣವೇ ಸ್ಥಳಕ್ಕೆ ದೌಡಾಯಿಸಿದ್ದಾರೆ. ಈ ವೇಳೆ ಕಾರಿನ ಚಾಲಕನ ಕೂಡ ನಾಪತ್ತೆಯಾಗಿರುವುದು ಹಾಗೂ ಆತನ ಮೊಬೈಲ್ ಕೂಡ ಸ್ವಿಚ್ಛ್ ಆಫ್ ಆಗಿರುವುದು ಬೆಳಕಿಗೆ ಬಂದಿದೆ. ಅಲ್ಲದೆ ಮನೆಯಲ್ಲಿನ ಬೀರು ಒಡೆಯಲಾಗಿತ್ತು. ಇದರಿಂದ ಚಾಲಕನ ಮೇಲೆಯೇ ಪೊಲೀಸರಿಗೆ ಸಂಶಯ ಉಂಟಾಯಿತು. ಇದನ್ನೂ ಓದಿ: 1945 ರಲ್ಲಿದ್ದಂತೆ, ವಿಜಯವು ನಮ್ಮದಾಗಿರುತ್ತದೆ: ಪುಟಿನ್ ಪ್ರತಿಜ್ಞೆ

    police (1)

    ಕೆಲ ಹೊತ್ತು ಹುಡುಕಾಟ ನಡೆಸಿದ ಬಳಿಕ ದಂಪತಿ ಶವವಾಗಿ ಪತ್ತೆಯಾದರು. ಕೃಷ್ಣನೇ ಅವರನ್ನು ಕೊಲೆ ಮಾಡಿದ್ದಾನೆ ಎಮದು ಪೊಲೀಸರು ಶಂಕಿಸಿದ್ದಾರೆ. ಈ ಕುರಿತು ತನಿಖೆ ನಡೆಸಿದಾಗ ಚಾಲಕ ಕೃಷ್ಣ ದಂಪತಿಯನ್ನು ವಿಮಾನ ನಿಲ್ದಾಣದಿಂದ ಕರೆದುಕೊಂಡು ಬರುವಾಗ ಅಪಹರಿಸಿ ಅವರ ಮನೆಯ ಬದಲಾಗಿ ನೆಮಿಲಿಚೇರಿಯಲ್ಲಿರುವ ಅವರ ಫಾರ್ಮ್ ಹೌಸ್‍ಗೆ ಕರೆದುಕೊಂಡು ಹೋಗಿದ್ದಾನೆ. ಅಲ್ಲಿ ಕೇಷ್ಣ ಮತ್ತು ಆತನ ಸಹಚರ ರವಿ ಸೇರಿ ದಂಪತಿಯನ್ನು ಹರಿತವಾದ ವಸ್ತುವಿನಿಂದ ಹೊಡೆದು ಕೊಲೆ ಮಾಡಿದ್ದಾರೆ. ನಂತರ ಇಬ್ಬರೂ ಸೇರಿ ಮನೆಯಲ್ಲಿ ಬಿದ್ದಿರುವ ರಕ್ತದ ಕಲೆಗಳನ್ನು ಒರೆಸಿ ಶವಗಳನ್ನು ಅಲ್ಲೇ ಸಮೀಪದಲ್ಲಿರುವ ಹೊಂಡದಲ್ಲಿ ಹೂತು ಹಾಕಿದ್ದಾರೆ. ನಂತರ ಕಾರಿನಲ್ಲಿದ್ದ ವಸ್ತುಗಳನ್ನು ದೋಚಿ ನೇಪಾಳಕ್ಕೆ ಹಾರಲು ಯತ್ನಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ನೆರೆಮನೆ ಯುವಕನ ಕಿರುಕುಳಕ್ಕೆ ಮನನೊಂದು ಯುವತಿ ಆತ್ಮಹತ್ಯೆ

    ಸದ್ಯ ಪೊಲೀಸರು ಆರೋಪಿ ಕೃಷ್ಣನನ್ನು ಆಂಧ್ರಪ್ರದೇಶದಲ್ಲಿ ಬಂಧಿಸಿದ್ದಾರೆ. ದಂಪತಿಯಿಂದ 5 ಲಕ್ಷ ಹಾಗೂ 5 ಪವನ್ ಚಿನ್ನಾಭರಣವನ್ನು ಕದ್ದಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ದಂಪತಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಕೃಷ್ಣನನ್ನು ವಿಚಾರಣೆ ಒಳಪಡಿಸಲಾಗಿದೆ ಎಂದು ಪೊಲೀಸರು ವಿವರಿಸಿದ್ದಾರೆ.