Tag: ಕಾರ್ಗಲ್

  • ಗ್ಯಾಸ್ ಸಿಲಿಂಡರ್ ತುಂಬಿದ್ದ ಲಾರಿ ಪಲ್ಟಿ- ಸ್ಫೋಟಕ್ಕೆ ಚಾಲಕ ಸಜೀವ ದಹನ

    ಗ್ಯಾಸ್ ಸಿಲಿಂಡರ್ ತುಂಬಿದ್ದ ಲಾರಿ ಪಲ್ಟಿ- ಸ್ಫೋಟಕ್ಕೆ ಚಾಲಕ ಸಜೀವ ದಹನ

    ಶಿವಮೊಗ್ಗ: ಎಲ್‍ಪಿಜಿ ಗ್ಯಾಸ್ ಸಿಲಿಂಡರ್ ತುಂಬಿದ್ದ ಲಾರಿಯೊಂದು ಗುರುವಾರ ಮುಂಜಾನೆ ಪಲ್ಟಿಯಾಗಿ ಸಿಲಿಂಡರ್ ಗಳು ಸ್ಫೋಟಗೊಂಡು ಚಾಲಕ ಸಜೀವವಾಗಿ ದಹನಗೊಂಡಿರುವ ಘಟನೆ ಶಿವಮೊಗ್ಗದ ಮಂಡಿಗೆಹಳ್ಳದಲ್ಲಿ ನಡೆದಿದೆ.

    ಸಾಗರದಿಂದ ಕಾರ್ಗಲ್ ಕಡೆಗೆ ಸಿಲಿಂಡರ್ ಹೊತ್ತುಕೊಂಡು ಲಾರಿ ಸಂಚರಿಸುತಿತ್ತು. ಈ ಸಮಯದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದೆ. ಬಿದ್ದ ರಭಸಕ್ಕೆ 20ಕ್ಕೂ ಹೆಚ್ಚು ಸಿಲಿಂಡರ್ ಗಳು ಸ್ಫೋಟಗೊಂಡಿದೆ. ಸ್ಫೋಟದಿಂದ ಬೆಂಕಿ ಹತ್ತಿಕೊಂಡು ಚಾಲಕ ಸಜೀವವಾಗಿ ದಹನಗೊಂಡಿದ್ದಾರೆ.

    ಇಂಡಿಯನ್ ಗ್ಯಾಸ್ ಸಂಸ್ಥೆಗೆ ಸೇರಿದ ಲಾರಿ ಇದಾಗಿದ್ದು, ಅಗ್ನಿಶಾಮಕ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಿಯಂತ್ರಿಸಿದ್ದಾರೆ. ಸಾಗರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

    ಈ ಲಾರಿ ಭಸ್ಮವಾಗಿದ್ದು, ಚಾಲಕ ಯಾರು, ಲಾರಿಯಲ್ಲಿ ಎಷ್ಟು ಜನ ಇದ್ದರು ಎನ್ನುವ ಮಾಹಿತಿ ಸಿಕ್ಕಿಲ್ಲ. ಲಾರಿಯ ನಂಬರ್ ಪ್ಲೇಟ್ ಸಹ ಹೊತ್ತಿ ಉರಿದ ಪರಿಣಾಮ ಮಾಲೀಕರು ಯಾರು ಎನ್ನುವುದು ತಿಳಿದು ಬಂದಿಲ್ಲ. ಚಾಲಕನ ಒಂದು ಶವ ಮಾತ್ರ ಪತ್ತೆಯಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews