ತಮ್ಮ ಹುಟ್ಟುಹಬ್ಬದ ದಿನವೇ ತಮಿಳು ನಟ ವಿಶಾಲ್ (Vishal) ಅಭಿಮಾನಿಗಳಿಗೆ ಸರ್‌ಪ್ರೈಸ್ ನ್ಯೂಸ್ ಕೊಟ್ಟಿದ್ದಾರೆ. ನಟಿ ಸಾಯಿ ಧನ್ಸಿಕಾ (Dhanshika) ಜೊತೆ ಚೆನ್ನೈನಲ್ಲಿ ನಡೆದ ಸರಳ ಸಮಾರಂಭದಲ್ಲಿ ನಿಶ್ಚಿತಾರ್ಥ (Engagement) ಮಾಡಿಕೊಂಡು ಫೋಟೋಸ್‌ಗಳನ್ನ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ನಟ ವಿಶಾಲ್ ಹೆಸರು ಹಿಂದೆ ಹಲವು ನಟಿಯರ ಜೊತೆ ಥಳುಕು ಹಾಕಿಕೊಂಡಿದ್ದರೂ ಮದುವೆವರೆಗೆ ಬಂದಿರಲಿಲ್ಲ. ಇದೀಗ ತಮ್ಮ 48ನೇ ವಯಸ್ಸಿನಲ್ಲಿ ಧನ್ಸಿಕಾ ಜೊತೆ ವಿವಾಹಕ್ಕೆ ಸಜ್ಜಾಗಿದ್ದಾರೆ. ಉಂಗುರ ಬದಲಿಸಿಕೊಂಡು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ಅಸಲಿಗೆ ಆಗಸ್ಟ್ 29ಕ್ಕೆ ವಿವಾಹವನ್ನೇ ಘೋಷಿಸಿದ್ದರು ವಿಶಾಲ್. ಹಿಂದೆ ಯೋಗಿಡಾ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸಿದ್ದ ವಿಶಾಲ್ ಧನ್ಸಿಕಾ ಜೊತೆಗಿನ ಪ್ರೀತಿ ಖಚಿತಪಡಿಸಿ ಬಳಿಕ ಮದುವೆ ದಿನಾಂಕ ಘೋಷಿಸಿದ್ದರು. ಆದರೆ ಈ ದಿನ ಸಿನಿ ಜೋಡಿ ನಿಶ್ಚಿತಾರ್ಥ ಮಾಡಿಕೊಂಡಿದೆ. ನಿಶ್ಚಿತಾರ್ಥ ಮಾಡಿಕೊಂಡಿದ್ದರೂ ಮದುವೆ ದಿನವನ್ನು ಜೋಡಿ ಪ್ರಕಟಿಸಿಲ್ಲ. ಇದನ್ನೂಓದಿ: ವಿಷ್ಣು ಸಮಾಧಿ ಇದ್ದ ಅಭಿಮಾನ್ ಸ್ಟುಡಿಯೋ ಮುಟ್ಟುಗೋಲು?
ವಿಶಾಲ್ ಇದುವರೆಗೂ 40ಕ್ಕೂ ಹೆಚ್ಚು ಚಿತ್ರಗಳಲ್ಲಿ ನಾಯಕರಾಗಿ ಅಭಿನಯಿಸಿದ್ದಾರೆ. ಧನ್ಸಿಕಾ 15 ವರ್ಷಗಳಲ್ಲಿ 20ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಕಲಾವಿದರ ಸಂಘ ನಾಡಿಗೇರ್ ಸಂಘದ ಜನರಲ್ ಕಾರ್ಯದರ್ಶಿಯಾಗಿರುವ ವಿಶಾಲ್ ಸಂಘದ ಕಟ್ಟಡ ಸಂಪೂರ್ಣವಾದ ಬಳಿಕ ಮದುವೆಯಾಗುವುದಾಗಿ ಘೋಷಿಸಿದ್ದರು.
ಕಾಲಿವುಡ್ ನಟ ಧನುಷ್ (Dhanush) ಹಾಗೂ ಮೃಣಾಲ್ ಠಾಕೂರ್ (Mrunal Thakur) ಡೇಟಿಂಗ್ ವಿಚಾರ ಜಗಜ್ಜಾಹೀರಾಗುತ್ತಿದೆ. ಇಬ್ಬರೂ ಒಟ್ಟೊಟ್ಟಿಗೆ ಇರುವ ಫೋಟೋ ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗ್ತಿವೆ. ಹೀಗೆ ವೈರಲ್ ಆಗ್ತಿರುವ ಇವರು ಮದುವೆ ಕೂಡಾ ಆಗಲಿದ್ದಾರೆ ಅನ್ನೋ ಗಾಳಿ ಸುದ್ದಿ ಸಿನಿದುನಿಯಾದಲ್ಲಿ ಗಿರ್ಕಿ ಹೊಡೆಯುತ್ತಿದೆ. ಮದುವೆ ಅಂತಾದರೆ ಈ ಇಬ್ಬರ ನಡುವೆ ವಯಸ್ಸಿನ ಅಂತರ ಎಷ್ಟಿದೆ ಅಂತನ್ನೋ ಚರ್ಚೆಗಳು ಕೂಡಾ ಶುರುವಾಗಿವೆ.
`ಸೀತಾ ರಾಮಂ’ ಬೆಡಗಿ ಮೃಣಾಲ್ ಠಾಕೂರ್ ಆಗಸ್ಟ್ 1, 1992ರಲ್ಲಿ ಜನಿಸಿದ್ದಾರೆ, ಅಲ್ಲಿಗೆ ಮೃಣಾಲ್‌ಗೆ 33 ವರ್ಷ. ಇನ್ನು ನಟ ಧನುಷ್ ಜುಲೈ 28, 1983ರಲ್ಲಿ ಜನಿಸಿದ್ದಾರೆ, ಅಲ್ಲಿಗೆ ನಟ ಧನುಷ್‌ಗೆ 42 ವರ್ಷ. ನಟ ಧನುಷ್ ಹಾಗೂ ನಟಿ ಮೃಣಾಲ್ ನಡುವೆ 9 ವರ್ಷಗಳ ಅಂತರವಿದೆ. ಈಗಾಗಲೇ ನಟ ಧನುಷ್ ನಟ ರಜನಿಕಾಂತ್ ಅವರ ಪುತ್ರಿ ಐಶ್ವರ್ಯ ಜೊತೆ ಮದುವೆಯಾಗಿ 18 ವರ್ಷಗಳ ಬಳಿಕ ವಿಚ್ಚೇಧನವನ್ನ ಕೂಡಾ ನೀಡಿದ್ದಾರೆ.
2022ರಲ್ಲಿ ರಜನಿಕಾಂತ್ ಪುತ್ರಿ ಐಶ್ವರ್ಯ ಜೊತೆ ಸಪರೇಷನ್ ಬಗ್ಗೆ ಘೋಷಣೆ ಮಾಡಿದ್ದರು ನಟ ಧನುಷ್. ನಂತರ 2024ರಲ್ಲಿ ವಿಚ್ಚೇಧನ ಪಡೆದುಕೊಂಡಿದ್ದಾರೆ. ಇದೀಗ ನಟ ಧನುಷ್ ಹಾಗೂ ಮೃಣಾಲ್ ನಡುವೆ ಇಲ್ಲ ಸಲ್ಲದ ಸುದ್ದಿಗಳು ಮುನ್ನೆಲೆಗೆ ಬರುತ್ತಿವೆ. ಸನ್ ಆಫ್ ಸರ್ಧಾರ್-2 ಸಿನಿಮಾದ ಪ್ರೀಮಿಯರ್‌ನಲ್ಲಿ ನಟ ಧನುಷ್ ಭಾಗಿಯಾಗಿದ್ದಾರೆ. ಅಲ್ಲದೇ ಆಗಸ್ಟ್ 1ರಂದು ಮೃಣಾಲ್ ಬರ್ತ್ಡೇ ಪಾರ್ಟಿಯಲ್ಲೂ ಧನುಷ್ ಪ್ರತ್ಯಕ್ಷರಾಗಿದ್ದಾರೆ ಎನ್ನಲಾಗ್ತಿದೆ. ಈ ಜೋಡಿ ಒಂದಾದರೆ ಚೆಂದ ಎಂದು ಜಾಲತಾಣದಲ್ಲಿ ಪ್ರತಿಕ್ರಿಯೆ ವ್ಯಕ್ತವಾಗ್ತಿದೆ.
ಟಾಲಿವುಡ್‌ನ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ (Jani Master) ಲೈಂಗಿಕ ದೌರ್ಜನ್ಯದ ಆರೋಪವನ್ನ ಹೊತ್ತು ಜೈಲುವಾಸ ಅನುಭವಿಸಿ ಬಂದಿದ್ದಾರೆ. ಜಾನಿ ಮಾಸ್ಟರ್ ಜೊತೆಗಿನ ಫೋಟೋವನ್ನ ಹಂಚಿಕೊಂಡಿರುವ ವಿಘ್ನೇಶ್ ತೀವ್ರ ಚರ್ಚೆಗೆ ಕಾರಣವಾಗಿದ್ದಾರೆ. ವಿಘ್ನೇಶ್ (Vignesh Shivan) ನಿರ್ದೇಶನ ಮಾಡುತ್ತಿರುವ ಸಿನಿಮಾದಲ್ಲಿ ಜಾನಿ ಮಾಸ್ಟರ್ ಕೆಲಸ ಮಾಡುತ್ತಿದ್ದಾರಂತೆ ಹೀಗಾಗಿ ಈ ಫೋಟೋ ನೋಡಿ ಜಾಲತಾಣದಲ್ಲಿ ಸಾಕಷ್ಟು ಕಮೆಂಟ್ಸ್ ಮಾಡ್ತಿದ್ದಾರೆ.
ಸಹಾಯಕ ನೃತ್ಯ ನಿರ್ದೇಶಕಿಯ ಮೇಲೆ ಅತ್ಯಾಚಾರ ಎಸಗಿದ್ದರು ಎನ್ನಲಾದ ಆರೋಪದ ಮೇಲೆ ಜಾನಿ ಮಾಸ್ಟರ್ ಜೈಲು ಸೇರಿದ್ದರು. ಬಳಿಕ ಜಾಮೀನು ಮೇಲೆ ಹೊರ ಬಂದಿದ್ದಾರೆ. ಅವರ ಜೊತೆಗೆ ಸಿನಿಮಾ ಮಾಡುತ್ತಿರುವ ಬಗ್ಗೆ ಅಪಾರ ಆಕ್ರೋಶ ವ್ಯಕ್ತವಾಗುತ್ತಿದೆ. ಸಿನಿಮಾಗೆ ನಿರ್ದೇಶಕ ವಿಘ್ನೇಶ್ ಆದ್ರೆ, ನಯನತಾರಾ (Nayanthara) ನಿರ್ಮಾಪಕಿಯಾಗಿದ್ದಾರೆ. ಹೀಗಾಗಿ ಇಬ್ಬರಿಗೂ ಜಾಲತಾಣದಲ್ಲಿ ಹಿಗ್ಗಾಮುಗ್ಗಾ ಕ್ಲಾಸ್ ತೆಗೆದುಕೊಂಡಿದ್ದಾರೆ. ಇದನ್ನೂಓದಿ: ಕಾರ್ತಿಕ್ಜೊತೆಮತ್ತೆಸಿಕ್ಕಿಬಿದ್ದಶ್ರೀಲೀಲಾ!
ಜಾನಿ ಮಾಸ್ಟರ್ ಕೇವಲ ತೆಲುಗು ಮಾತ್ರವಲ್ಲದೇ ತಮಿಳು, ಕನ್ನಡ ಹಾಗೂ ಹಿಂದಿ ಭಾಷೆಯ ಸಿನಿಮಾದ ಹಾಡುಗಳಿಗೆ ನೃತ್ಯ ನಿರ್ದೇಶನ ಮಾಡಿದ್ದಾರೆ. ಕನ್ನಡದ ನಟಸಾರ್ವಭೌಮ, ಯುವರತ್ನ, ರಾಜರಥ, ವಿಕ್ರಾಂತ್ ರೋಣ, ಕಬ್ಜ ಸಿನಿಮಾದ ಹಾಡುಗಳಿಗೆ ಅದ್ಭುತ ನೃತ್ಯ ನಿರ್ದೇಶನ ಮಾಡುವ ಮೂಲಕ ಖ್ಯಾತಿ ಪಡೆದಿದ್ದಾರೆ. ಇದನ್ನೂಓದಿ: ಕರ್ಣನಿಗೆಗ್ರೀನ್ಸಿಗ್ನಲ್–ಭವ್ಯಾ, ನಮ್ರತಾ, ಕಿರಣ್ರಾಜ್ತ್ರಿವಳಿಆಟ
ಜಾನಿ ಮಾಸ್ಟರ್ ಎದುರಿಸುತ್ತಿರುವ ಲೈಂಗಿಕ ದೌರ್ಜನ್ಯದ ಆರೋಪ ಅವರ ವೃತ್ತಿ ಬದುಕಿಗೆ ಯಾವ ರೀತಿಯಾಗಿ ಡ್ಯಾಮೇಜ್ ಮಾಡುತ್ತಿದೆ ನೋಡಿ. ಅವರ ಜೊತೆಗೆ ಕೆಲಸ ಮಾಡಲು ಮುಂದಾದವರಿಗೂ ಕೂಡಾ ಟೀಕೆಗಳು ಶುರುವಾಗಿವೆ.
ತಮಿಳಿನಿಂದ ಕನ್ನಡ ಹುಟ್ಟಿದೆ ಎಂದು ಹೇಳಿದ್ದ ನಟ ಕಮಲ್ ಹಾಸನ್ (Kamal Haasan) ವಿಚಾರದ ಬಗ್ಗೆ ಕಾರ್ಯಕ್ರಮವೊಂದರಲ್ಲಿ ಶಿವಣ್ಣರನ್ನು (Shivanna) ಪ್ರಶ್ನಿಸಿದ್ದಕ್ಕೆ ಅವರು ಕೈಮುಗಿದಿದ್ದಾರೆ. ಇದನ್ನೂ ಓದಿ:ಅಪ್ಪನಂತೆ ಕುದುರೆ ಸವಾರಿ ಮಾಡಿದ ವಿನೀಶ್ ದರ್ಶನ್- ಫೋಟೋ ವೈರಲ್
ಇಂದು (ಮೇ 31) ‘ಕಣ್ಣಪ್ಪ’ ಚಿತ್ರದ ಪ್ರಚಾರಕ್ಕಾಗಿ ಮೋಹನ್ ಬಾಬು, ವಿಷ್ಣು ಮಂಚು ಚಿತ್ರತಂಡ ಬೆಂಗಳೂರಿಗೆ ಆಗಮಿಸಿತ್ತು. ಈ ಕಾರ್ಯಕ್ರಮಕ್ಕೆ ಶಿವಣ್ಣ ಅತಿಥಿಯಾಗಿ ಆಗಮಿಸಿದ್ದರು. ಈ ವೇಳೆ, ಕಮಲ್ ಹಾಸನ್ ಕಾಂಟ್ರವರ್ಸಿ ಬಗ್ಗೆ ಕೇಳಿದ್ದಕ್ಕೆ ಕೈಮುಗಿದು ನಮಸ್ಕರಿಸುತ್ತಾ ತೆರಳಿದ್ದಾರೆ. ಇದು ಅಭಿಮಾನಿಗಳಿಗೆ ಬೇಸರ ಮೂಡಿದೆ. ಇದನ್ನೂ ಓದಿ:ಮೋಹನ್ ಬಾಬು ನಿರ್ಮಾಣದ ‘ಕಣ್ಣಪ್ಪ’ ಚಿತ್ರದಲ್ಲಿ ನಟಿಸದಿರಲು ಕಾರಣ ಬಿಚ್ಚಿಟ್ಟ ಶಿವಣ್ಣ
ತಮಿಳು ನಟ ಮಾತಾಡಿರೋದರ ಬಗ್ಗೆ ತಪ್ಪು ಎಂದು ಎಲ್ಲೂ ಶಿವಣ್ಣ ಹೇಳುತ್ತಿಲ್ಲವಲ್ಲ ಎಂದು ಅಭಿಮಾನಿಗಳಲ್ಲಿ ಬೇಸರ ಮೂಡಿದೆ. ಇಷ್ಟೆಲ್ಲಾ ಆದ ಮೇಲೆಯೂ ಶಿವಣ್ಣ ಮೌನವಹಿಸಿರೋದ್ಯಾಕೆ? ಕಮಲ್ ಬಗ್ಗೆ ಕೇಳ್ತಿದ್ದಂತೆ ಕೈಮುಗಿದು ಹೋಗಿದ್ದು ಯಾಕೆ. ಹಾಗಾದ್ರೆ ಕಮಲ್ ಮಾಡಿದ್ದು ಸರಿ ಅಂತನಾ? ತಪ್ಪು ಅಂತನಾ ಎಂದೆಲ್ಲಾ ಪ್ರಶ್ನಿಸುತ್ತಿದ್ದಾರೆ. ಶಿವಣ್ಣ ಉತ್ತರದ ನಿರೀಕ್ಷೆಯಲ್ಲಿದ್ದ ಫ್ಯಾನ್ಸ್‌ಗೆ ನಿರಾಸೆ ಆಗಿದೆ.
ಇದೆಲ್ಲದರ ನಡುವೆ ಹೇಳಿಕೆ ಬಗ್ಗೆ ನಾನು ಬದ್ಧನಾಗಿದ್ದೇನೆ ಎಂದ ಕಮಲ್‌ಗೆ ಕನ್ನಡಪರ ಸಂಘಟನೆ ತಕ್ಕ ಪಾಠ ಕಲಿಸಲು ಮುಂದಾಗಿದ್ದಾರೆ. ಜೂನ್ 5ರಂದು ರಿಲೀಸ್‌ಗೆ ಸಜ್ಜಾಗಿರುವ ‘ಥಗ್ ಲೈಫ್’ ಚಿತ್ರವನ್ನು ರಾಜ್ಯದಲ್ಲಿ ಬ್ಯಾನ್ ಮಾಡಲಾಗುತ್ತಿದೆ.
ನಿನ್ನೆ (ಮೇ 30) ಮತ್ತೆ ಚೆನ್ನೈನಲ್ಲಿ ಕಮಲ್ ಹಾಸನ್ ಮಾತನಾಡಿ, ಇದು ಪ್ರಜಾಪ್ರಭುತ್ವ. ನಾನು ಕಾನೂನು ಮತ್ತು ನ್ಯಾಯವನ್ನು ನಂಬುತ್ತೇನೆ. ಕರ್ನಾಟಕ, ಆಂಧ್ರಪ್ರದೇಶ ಮತ್ತು ಕೇರಳದ ಮೇಲಿನ ನನ್ನ ಪ್ರೀತಿ ನಿಜ. ನಾನು ತಪ್ಪು ಮಾಡಿಲ್ಲ, ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ. ನನ್ನಿಂದ ತಪ್ಪಾಗಿದ್ರೆ ಕ್ಷಮೆ ಕೇಳುವೆ, ನನ್ನಿಂದ ತಪ್ಪು ಆಗಿಲ್ಲ. ನನ್ನ ನಿರ್ಧಾರಕ್ಕೆ ಬದ್ಧವಾಗಿದ್ದೇನೆ ಎಂದು ಸಮರ್ಥಿಸಿಕೊಂಡಿದ್ದರು. ಅಲ್ಲದೇ ಯಾವುದೇ ಬೆದರಿಕೆ, ಎಚ್ಚರಿಕೆಗೆ ನಾನು ಹೆದರುವುದಿಲ್ಲ. ಕಾನೂನು ಹಾಗೂ ನ್ಯಾಯದ ಮೇಲೆ ನಂಬಿಕೆ ಇಟ್ಟಿದ್ದೇನೆ ಎಂದಿದ್ದರು. ಇದು ಕನ್ನಡಿಗರನ್ನು ಮತ್ತಷ್ಟು ಕೆರಳಿಸಿದೆ.
ತಪ್ಪು ಮಾಡಿದ್ಮೇಲೆ ಕ್ಷಮೆ ಕೇಳೋದ್ರಲ್ಲಿ ತಪ್ಪೇನಿದೆ ಎಂದು ಕಮಲ್ ಹಾಸನ್ (Kamal Haasan) ಕನ್ನಡ ಕಾಂಟ್ರವರ್ಸಿಗೆ ರಚಿತಾ ರಾಮ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಮಿಳಿನಿಂದ ಕನ್ನಡ ಎಂದು ಹೇಳಿಕೆ ನೀಡಿದ್ದಲ್ಲದೇ ಕ್ಷಮೆ ಕೇಳಲ್ಲ ಎಂದು ಪಟ್ಟು ಹಿಡಿದ ಕಮಲ್ ಹಾಸನ್‌ಗೆ ರಚಿತಾ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ:ಹೃತಿಕ್ ರೋಷನ್‌ಗೆ ಪೃಥ್ವಿರಾಜ್ ಸುಕುಮಾರನ್ ಆ್ಯಕ್ಷನ್ ಕಟ್?
‘ಎಲ್ಲಾದರೂ ಇರು.. ಎಂತಾದರೂ ಇರು.. ಎಂದೆಂದಿಗೂ ನೀ ಕನ್ನಡವಾಗಿರು’ ಎಂಬ ಕವಿತೆಯ ಸಾಲುಗಳನ್ನು ಉಲ್ಲೇಖಿಸಿ ರಚಿತಾ ರಾಮ್ ಮಾತನಾಡಿ, ಯಾಕೆ ಈ ಹಾಡು ಹೇಳ್ತಿದ್ದೀನಿ ಅಂತ ಎಲ್ಲರಿಗೂ ಅರ್ಥವಾಗಿರುತ್ತದೆ. ಕನ್ನಡ, ಕರ್ನಾಟಕ ಅಂತ ಬಂದಾಗ ಇದು ಪ್ರತಿಯೊಬ್ಬ ಕನ್ನಡಿಗನಿಗೂ ಎಮೋಷನ್. ಹಾಗೆಯೇ ನಮ್ಮ ಕನ್ನಡ ಭಾಷೆಯ ಬಗ್ಗೆ ಯಾರಾದರೂ ಟೀಕೆ ಮಾಡ್ತಿದ್ದಾರೆ ಅಂದಾಗ ಸುಮ್ಮನೆ ಕೂರಲು ಆಗಲ್ಲ ಎಂದಿದ್ದಾರೆ. ಇದನ್ನೂ ಓದಿ:ಕ್ಷಮೆ ಕೇಳಲ್ಲ ಅಂದಾಗ ಬಿಸಿ ಮುಟ್ಟಿಸಬೇಕು- ಕಮಲ್ ಹಾಸನ್ ವಿರುದ್ಧ ವಸಿಷ್ಠ ಸಿಂಹ ಆಕ್ರೋಶ
ನಾವು ಕನ್ನಡದ ಜನ ವಿಶಾಲ ಹೃದಯದವರು. ಪ್ರತಿ ಭಾಷೆ ಸಿನಿಮಾವನ್ನು ನೋಡುತ್ತೇವೆ. ಪ್ರತಿ ಭಾಷೆ ಸಿನಿಮಾ ಹಾಡುಗಳನ್ನು ಕೇಳುತ್ತೇವೆ. ಬೇರೆ ಭಾಷೆಯ ಕಲಾವಿದರನ್ನು ಕೂಡ ನಾವು ಪ್ರೋತ್ಸಾಹಿಸುತ್ತೇವೆ. ಆದರೆ ನಮ್ಮ ಭಾಷೆಯ ಬಗ್ಗೆ ಯಾರಾದರೂ ಮಾತನಾಡ್ತಿದ್ದಾರೆ ಅಂದಾಗ ಯಾಕೆ ಧ್ವನಿಯೆತ್ತಬಾರದು. ನಾವಿಲ್ಲಿ ಯಾವ ಭಾಷೆಯ ಬಗ್ಗೆಯೂ ಕೆಟ್ಟದಾಗಿ ಮಾತನಾಡುತ್ತಿಲ್ಲ. ಎಲ್ಲಾ ಭಾಷೆಯನ್ನು ನಾವು ಗೌರವಿಸುತ್ತೇವೆ. ನಮ್ಮ ಭಾಷೆಯ ಬಗ್ಗೆ ಮಾತನಾಡಿದಾಗ ನಾವು ನಿಲ್ಲಬೇಕು ಎಂದರು.
ದೊಡ್ಡವರೆಲ್ಲ ಜಾಣರಲ್ಲ ಚಿಕ್ಕವರೆಲ್ಲ ಕೋಣರಲ್ಲ ಎಂದು ತಮಿಳು ನಟನಿಗೆ ರಚಿತಾ ಟಾಂಗ್ ಕೊಟ್ಟಿದ್ದಾರೆ. ಚಿಕ್ಕವರು ತಪ್ಪು ಮಾಡಿದಾಕ್ಷಣ ಕ್ಷಮೆ ಕೇಳೋವರೆಗೂ ದೊಡ್ಡವರು ಬಿಡಲ್ಲ. ಅದೇ ದೊಡ್ಡವರು ತಪ್ಪು ಮಾಡಿದ್ರೆ ಏನು ಮಾಡಬೇಕು. ತಪ್ಪು ಮಾಡಿದ್ಮೇಲೆ ಕ್ಷಮೆ ಕೇಳೋದ್ರಲ್ಲಿ ತಪ್ಪೇನಿದೆ. ಕನ್ನಡವನ್ನು ತಪ್ಪು ಮಾತನಾಡುವವರನ್ನು ನಾವು ತಿದ್ದಿ ಕಲಿಸುತ್ತೇವೆ. ಕನ್ನಡ ಭಾಷೆಯ ಬಗ್ಗೆ ತಪ್ಪಾಗಿ ಮಾತನಾಡಿರುವರನ್ನು ಏನು ಅಂತ ಹೇಳೋಣ ಎಂದು ನಟಿ ಪ್ರಶ್ನಿಸಿದ್ದಾರೆ. ಈಗ ನಮ್ಮ ಭಾಷೆಯ ಮೇಲಿರುವಂತಹ ಗೌರವ ಪ್ರೀತಿಯನ್ನು ತಿಳಿಸೋಣ ಏನ್ ಹೇಳ್ತೀರಾ ಎಂದಿದ್ದಾರೆ. ಈ ಮೂಲಕ ಕಮಲ್ ಹಾಸನ್ ಹೇಳಿಕೆ ತಪ್ಪು. ಕ್ಷಮೆಯಾಚಿಸಬೇಕು ಎಂದಿದ್ದಾರೆ ರಚಿತಾ.
ಇಂದು (ಮೇ 30) ಚೆನ್ನೈನಲ್ಲಿ ಕಮಲ್ ಹಾಸನ್ ಮಾತನಾಡಿ, ಕ್ಷಮೆ ಕೇಳಲ್ಲ ಎಂದು ಹೇಳಿ ಮತ್ತೆ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಇದು ಪ್ರಜಾಪ್ರಭುತ್ವ. ನಾನು ಕಾನೂನು ಮತ್ತು ನ್ಯಾಯವನ್ನು ನಂಬುತ್ತೇನೆ. ಕರ್ನಾಟಕ, ಆಂಧ್ರಪ್ರದೇಶ ಮತ್ತು ಕೇರಳದ ಮೇಲಿನ ನನ್ನ ಪ್ರೀತಿ ನಿಜ. ನಾನು ತಪ್ಪು ಮಾಡಿಲ್ಲ, ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ. ನನ್ನಿಂದ ತಪ್ಪಾಗಿದ್ರೆ ಕ್ಷಮೆ ಕೇಳುವೆ, ನನ್ನಿಂದ ತಪ್ಪು ಆಗಿಲ್ಲ. ನನ್ನ ನಿರ್ಧಾರಕ್ಕೆ ಬದ್ಧವಾಗಿದ್ದೇನೆ ಎಂದು ಸಮರ್ಥಿಸಿಕೊಂಡಿದ್ದಾರೆ.
ಯಾವುದೇ ಬೆದರಿಕೆ, ಎಚ್ಚರಿಕೆಗೆ ನಾನು ಹೆದರುವುದಿಲ್ಲ. ಕಾನೂನು ಹಾಗೂ ನ್ಯಾಯದ ಮೇಲೆ ನಂಬಿಕೆ ಇಟ್ಟಿದ್ದೇನೆ ಎಂದು ಹೇಳಿದ್ದಾರೆ.
ತಮಿಳು ಭಾಷೆಯಿಂದ ಕನ್ನಡ ಹುಟ್ಟಿದ್ದು ಎಂಬ ಕಮಲ್ ಹಾಸನ್ ಹೇಳಿಕೆಗೆ ಕರ್ನಾಟಕದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ. ತಮ್ಮ ನಟನೆಯ ಥಗ್ ಲೈಫ್ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಕನ್ನಡದ ಹಿರಿಯ ನಟ ಶಿವರಾಜ್‌ಕುಮಾರ್ ಅವರ ಎದುರೇ ಕಮಲ್ ಹಾಸನ್ ಈ ಹೇಳಿಕೆ ನೀಡಿದ್ದು ಭಾರಿ ಆಕ್ರೋಶಕ್ಕೆ ಕಾರಣವಾಗಿದೆ.
ಕಮಲ್ ಹಾಸನ್ ಹೇಳಿಕೆ ಶುದ್ಧ ಸುಳ್ಳು. ಭಾಷಾ ಪ್ರಾವಿಣ್ಯತೆ ಇಲ್ಲದೇ ಈ ರೀತಿಯ ಉದ್ಧಟತನದ ಹೇಳಿಕೆ ನೀಡುವುದು ಸರಿಯಲ್ಲ ಎಂದು ಭಾಷಾ ವಿಜ್ಞಾನಿಗಳು ಖಂಡಿಸಿದ್ದಾರೆ. ನಟನ ಹೇಳಿಕೆಗೆ ಕನ್ನಡಪರ ಸಂಘಟನೆಗಳು ಆಕ್ರೋಶ ಹೊರಹಾಕಿವೆ. ಕೂಡಲೇ ಕನ್ನಡಿಗರ ಕ್ಷಮೆಯಾಚಿಸಿ, ಇಲ್ಲದಿದ್ದರೆ ನಿಮ್ಮ ಸಿನಿಮಾವನ್ನು ಕರ್ನಾಟಕದಲ್ಲಿ ಬ್ಯಾನ್ ಮಾಡಲಾಗುವುದು ಎಂದು ಹೋರಾಟಗಾರರು ನಟನಿಗೆ ಎಚ್ಚರಿಕೆ ನೀಡಿದ್ದಾರೆ.
ಕನ್ನಡಕ್ಕೆ ಎರಡೂವರೆ ಸಾವಿರ ವರ್ಷಗಳ ಇತಿಹಾಸವಿದ್ದು, ತಮಿಳಿನಿಂದ ಕನ್ನಡ ಹುಟ್ಟಿದೆ ಎಂದ ಕಮಲ್ ಹಾಸನ್ ಮಾತನ್ನು ಒಪ್ಪಲ್ಲ ಎಂದು ಸೋಷಿಯಲ್ ಮೀಡಿಯಾದಲ್ಲಿ ಜಗ್ಗೇಶ್ (Jaggesh) ಖಂಡಿಸಿದ್ದಾರೆ. ಇದನ್ನೂ ಓದಿ:‘ಬಿಗ್ ಬಾಸ್’ ಖ್ಯಾತಿಯ ದೀಪಿಕಾ ಕಕ್ಕರ್‌ಗೆ ಕ್ಯಾನ್ಸರ್
ಕಲೆಗೆ ಜಾತಿ ಇಲ್ಲ. ಎಲ್ಲಾ ಭಾಷೆಯ ಕಲಾವಿದರು ಶಾರದಾಸುತರು ಒಪ್ಪುತ್ತೇವೆ. ಆ ನಿಟ್ಟಿನಲ್ಲಿ ಕಮಲ್ ಹಾಸನ್ (Kamal Haasan) ಅವರನ್ನು ಮೆಚ್ಚಿದ್ದೇವೆ. ಹಾಗಂತ ಕನ್ನಡ ತಮಿಳಿಂದ ಹುಟ್ಟಿದೆ ಎಂದ ಅವರ ಮಾತು ಒಪ್ಪಲ್ಲ. ಕನ್ನಡಕ್ಕೆ ಎರಡೂವರೆ ಸಾವಿರ ವರ್ಷದ ಇತಿಹಾಸವಿದೆ. ಅಷ್ಟೇಕೆ ಹನುಮದೇವರು ಕನ್ನಡ ಕಲಿಪುಂಗವ ಅವನ ಕಾಲ ರಾಮಾಯಣ ಇಷ್ಟು ಅರ್ಥವಾದರೆ ಸಾಕಲ್ಲವೆ ಸಾರ್ ಎಂದು ಜಗ್ಗೇಶ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಕಲೆಗೆ ಜಾತಿ ಇಲ್ಲಾ.ಎಲ್ಲಾಭಾಷೆಯ ಕಲಾವಿದರು ಶಾರದಾಸುತರು ಒಪ್ಪುತ್ತೇವೆ,ಆ ನಿಟ್ಟಿನಲ್ಲಿ ಕಮಲ್ ಹಾಸನ್ ರವರ ಮೆಚ್ಚಿದ್ದೇವೆ.
ಅಂದ ಮಾತ್ರಕ್ಕೆ ಕನ್ನಡ ತಮಿಳಿಂದ ಹುಟ್ಟಿದೆ ಎಂದ ಅವರ ಮಾತು ಒಪ್ಪೋಲ್ಲಾ!
ಕನ್ನಡಕ್ಕೆ 2.5ಸಾವಿರ ವರ್ಷದ ಇತಿಹಾಸವಿದೆ,ಅಷ್ಟೇಕೆ ಹನುಮದೇವರು ಕನ್ನಡ ಕಲಿಪುಂಗವ ಅವನ ಕಾಲ ರಾಮಾಯಣ ಇಷ್ಟು ಅರ್ಥವಾದರೆ ಸಾಕಲ್ಲವೆ ಸಾರ್..! pic.twitter.com/Bj8f59lAiK
ಮೇ 27ರಂದು ಬೆಂಗಳೂರಿನಲ್ಲಿ ನಡೆದ ‘ಥಗ್ ಲೈಫ್’ ಪ್ರಚಾರ ಕಾರ್ಯಕ್ಕೆ ನಟ ಶಿವಣ್ಣ ಅತಿಥಿಯಾಗಿ ಭಾಗವಹಿಸಿದ್ದರು. ಈ ವೇಳೆ, ರಾಜ್‌ಕುಮಾರ್ ಜೊತೆಗಿನ ಒಡನಾಡವನ್ನು ಕಮಲ್ ಹಾಸನ್ ಸ್ಮರಿಸಿದರು. ಬಳಿಕ ಶಿವಣ್ಣ ಎದುರೇ ನಿಮ್ಮ ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂದು ನಟ ಹೇಳಿದ್ದಾರೆ. ಕನ್ನಡಿಗರ ಪ್ರೀತಿ, ಗೌರವಕ್ಕೆ ನಮಿಸುತ್ತಲೇ ನಿಮ್ಮ ಕನ್ನಡ ನಮ್ಮಿಂದ ಬಂದಿದ್ದು ಎಂದ ಕಮಲ್ ಹೇಳಿಕೆಗೆ ಕನ್ನಡಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:ಹೃತಿಕ್ ರೋಷನ್ ಜೊತೆ ಸಿನಿಮಾ- ‘ಹೊಂಬಾಳೆ ಫಿಲಂಸ್’ನಿಂದ ಗುಡ್ ನ್ಯೂಸ್
ಕಮಲ್ ಆಡಿರುವ ಮಾತುಗಳು ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಅದಷ್ಟೇ ಅಲ್ಲ, ಕಮಲ್ ಹಾಸನ್ ಕ್ಷಮೆಯಾಚಿಸಬೇಕು ಇಲ್ಲದಿದ್ರೆ ‘ಥಗ್ ಲೈಫ್’ ಸಿನಿಮಾಗೆ ತಡೆ ನೀಡೋದಾಗಿ ಅವರ ಚಿತ್ರಗಳನ್ನು ಬ್ಯಾನ್ ಮಾಡೋದಾಗಿ ಕರವೇ ಮತ್ತು ಕನ್ನಡಪರ ಸಂಘಟನೆ ಎಚ್ಚರಿಕೆ ನೀಡಿದೆ. ನಾಳೆ ಸಂಜೆಯೊಳಗೆ ನಟ ಕ್ಷಮೆ ಕೋರಬೇಕು ಎಂದು ಎಚ್ಚರಿಸಿದೆ.
‘ಥಗ್ ಲೈಫ್’ ಚಿತ್ರದ (Thug Life) ಪ್ರಚಾರಕ್ಕಾಗಿ ನಿನ್ನೆ (ಮೇ 27) ಬೆಂಗಳೂರಿಗೆ ಆಗಮಿಸಿದ ಸಂದರ್ಭದಲ್ಲಿ ತಮಿಳಿನಿಂದ ಕನ್ನಡ ಹುಟ್ಟಿದ್ದು ಎಂದ ಕಮಲ್ ಹಾಸನ್ ಹೇಳಿಕೆಗೆ ಕರವೇ ಮತ್ತು ಕನ್ನಡಪರ ಸಂಘಟನೆ ಕ್ಷಮೆಯಾಚಿಸುವಂತೆ ಪಟ್ಟುಹಿಡಿದಿವೆ. ಇದನ್ನೂ ಓದಿ:ಗೆಳತಿಯ ಮದ್ವೆಯಲ್ಲಿ ಆಲಿಯಾ ಭಟ್ ಫುಲ್ ಶೈನ್ – ವಿಡಿಯೋ ವೈರಲ್
ತಮಿಳಿನಿಂದ ಕನ್ನಡ ಹುಟ್ಟಿದ್ದು ಎಂದು ಮಾತನಾಡಿದ್ದ ಕಮಲ್ ಹೇಳಿಕೆಗೆ ಕನ್ನಡಪರ ಸಂಘಟನೆಗಳು ಕ್ಷಮೆ ಯಾಚಿಸುವಂತೆ ಫಿಲ್ಮ್ ಚೇಂಬರ್‌ಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಕನ್ನಡ ಭಾಷೆಗೆ 4ರಿಂದ 5 ಸಾವಿರ ವರ್ಷಗಳ ಇತಿಹಾಸವಿದೆ. ಅವರು ಆಡಿದ ಮಾತಿನಿಂದ ದ್ರಾವಿಡ ಭಾಷೆಗಳು ಒಗ್ಗಟ್ಟಿಗೆ ದಕ್ಕೆಯಾಗಿದೆ. ಕಮಲ್ ಅತ್ಯುತ್ತಮ ಕಲಾವಿದ, ಅವರು ಕನ್ನಡ ಚಿತ್ರಗಳಲ್ಲೂ ನಟಿಸಿದ್ದಾರೆ. ನಟನ ಮಾತಿನಿಂದ ಕನ್ನಡಿಗರು, ತಮಿಳರ ನಡುವೆ ದ್ವೇಷ ಹುಟ್ಟುವಂತೆ ಮಾಡಿದ್ದಾರೆ. ತಕ್ಷಣ ತಮ್ಮ ತಪ್ಪನ್ನ ಅವರು ತಿದ್ದುಕೊಂಡು ಕನ್ನಡಿಗರಿಗೆ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ. ಕ್ಷಮೆಯಾಚಿಸದಿದ್ದರೆ ‘ಥಗ್ ಲೈಫ್’ ಚಿತ್ರದ ರಿಲೀಸ್‌ಗೆ ತಡೆ ನೀಡೋದಾಗಿ ಕರವೇ ಮತ್ತು ಕನ್ನಡಪರ ಸಂಘಟನೆ ಎಚ್ಚರಿಸಿದೆ. ಇದನ್ನೂ ಓದಿ:ತಮಿಳಿನಿಂದ ಕನ್ನಡ ಹುಟ್ಟಿದ್ದು- ಕಮಲ್ ಹಾಸನ್ ಹೇಳಿಕೆಗೆ ಕನ್ನಡಿಗರ ಆಕ್ರೋಶ
ಮೇ 27ರಂದು ಬೆಂಗಳೂರಿನಲ್ಲಿ ನಡೆದ ‘ಥಗ್ ಲೈಫ್’ ಪ್ರಚಾರ ಕಾರ್ಯಕ್ಕೆ ನಟ ಶಿವಣ್ಣ ಅತಿಥಿಯಾಗಿ ಭಾಗವಹಿಸಿದ್ದರು. ಈ ವೇಳೆ, ರಾಜ್‌ಕುಮಾರ್ ಜೊತೆಗಿನ ಒಡನಾಡವನ್ನು ಕಮಲ್ ಹಾಸನ್ ಸ್ಮರಿಸಿದರು. ಬಳಿಕ ಶಿವಣ್ಣ ಎದುರೇ ನಿಮ್ಮ ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂದು ನಟ ಹೇಳಿದ್ದಾರೆ. ಕನ್ನಡಿಗರ ಪ್ರೀತಿ, ಗೌರವಕ್ಕೆ ನಮಿಸುತ್ತಲೇ ನಿಮ್ಮ ಕನ್ನಡ ನಮ್ಮಿಂದ ಬಂದಿದ್ದು ಎಂದ ಕಮಲ್ ಹೇಳಿಕೆಗೆ ಕನ್ನಡಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕಮಲ್ ಆಡಿರುವ ಮಾತುಗಳು ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಕನ್ನಡ ತಮಿಳಿನಿಂದ ಬಂದಿಲ್ಲ. ತಮಿಳಿಗಿಂತ ಕನ್ನಡ ಭಾಷೆಯೇ ಪುರಾತನವಾದದ್ದು ಎಂದು ಕನ್ನಡಿಗರು ಕ್ಲಾಸ್ ತೆಗೆದುಕೊಂಡಿದ್ದಾರೆ.
ಸೂಪರ್ ಸ್ಟಾರ್ ರಜನಿಕಾಂತ್ (Rajinikanth) ಅವರು ‘ಕೂಲಿ’ (Coolie) ಸಿನಿಮಾದಲ್ಲಿ ತೊಡಗಿಸಿಕೊಂಡಿದ್ದಾರೆ. ಸಿನಿಮಾಗಿಂತ ಹೆಚ್ಚು ಅವರ ಸಂಭಾವನೆ ವಿಚಾರವಾಗಿ ಸುದ್ದಿಯಾಗ್ತಿದ್ದಾರೆ. ಈ ಚಿತ್ರಕ್ಕೆ ತಲೈವಾ 150 ಕೋಟಿ ರೂ. ಹಾಗೂ ನಿರ್ದೇಶಕ ಲೋಕೇಶ್ 50 ಕೋಟಿ ರೂ. ಸಂಭಾವನೆ ಪಡೆದಿದ್ದಾರೆ ಎನ್ನಲಾದ ಸುದ್ದಿಯೊಂದು ಈಗ ಚರ್ಚೆಗೆ ಗ್ರಾಸವಾಗಿದೆ.
ತಲೈವಾಗೆ ವಯಸ್ಸು 74 ವರ್ಷವಾದ್ರೂ ಅವರಿಗಿರುವ ಚಾರ್ಮ್ ಮತ್ತು ಸಿನಿಮಾ ಮೇಲಿನ ಕ್ರೇಜ್ ಫ್ಯಾನ್ಸ್‌ಗೆ ಕಮ್ಮಿಯಾಗಿಲ್ಲ. ಹೀಗಾಗಿಯೇ ಕೂಲಿ ಸಿನಿಮಾದಲ್ಲಿ ನಟಿಸಲು 150 ಕೋಟಿ ರೂ. ಸಂಭಾವನೆ ಪಡೆದಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಅದಷ್ಟೇ ಅಲ್ಲ, ಈ ಚಿತ್ರದ ನಿರ್ದೇಶಕ ಲೋಕೇಶ್ ಕನಕರಾಜ್ (Lokesh Kanagaraj) ಕೂಡ 50 ಕೋಟಿ ರೂ. ಸಂಭಾವನೆ ಪಡೆದಿದ್ದಾರಂತೆ. ಇದನ್ನೂ ಓದಿ: ವಿದೇಶಕ್ಕೆ ಶೂಟಿಂಗ್ ತೆರಳಲು ಅನುಮತಿ ಕೋರಿ ದರ್ಶನ್ ಅರ್ಜಿ
ಈ ಸಿನಿಮಾದಲ್ಲಿ ತಲೈವಾ ಜೊತೆ ನಾಗಾರ್ಜುನ ಅಕ್ಕಿನೇನಿ, ರಿಯಲ್ ಸ್ಟಾರ್ ಉಪೇಂದ್ರ, ಶ್ರುತಿ ಹಾಸನ್, ರೆಬಾ, ಪೂಜಾ ಹೆಗ್ಡೆ, ಆಮೀರ್ ಖಾನ್ ಸೇರಿದಂತೆ ಅನೇಕರು ನಟಿಸಿದ್ದಾರೆ. ಈ ಚಿತ್ರವನ್ನು ಸನ್ ಪಿಕ್ಚರ್ಸ್ ನಿರ್ಮಾಣ ಮಾಡಿದೆ. ಈ ಚಿತ್ರ ಆ.14ಕ್ಕೆ ರಿಲೀಸ್‌ಗೆ ಸಿದ್ಧವಾಗಿದೆ.
ಕಾಲಿವುಡ್ ನಟ ಕಮಲ್ ಹಾಸನ್ ನಟನೆಯ ‘ಥಗ್ ಲೈಫ್’ ಸಿನಿಮಾ (Thug Life) ಜೂನ್ 5ರಂದು ರಿಲೀಸ್‌ಗೆ ಸಿದ್ಧವಾಗಿದೆ. ಈ ಚಿತ್ರದ ಪ್ರಚಾರಕ್ಕಾಗಿ ಚಿತ್ರತಂಡ ಇಂದು (ಮೇ 27) ಬೆಂಗಳೂರಿಗೆ ಆಗಮಿಸಿದೆ. ಈ ವೇಳೆ, ತಮಿಳಿನಿಂದ ಕನ್ನಡ ಹುಟ್ಟಿದ್ದು ಎಂದ ಕಮಲ್ ಹಾಸನ್ (Kamal Haasan) ಹೇಳಿಕೆಗೆ ಕನ್ನಡಿಗರು ರಾಂಗ್ ಆಗಿದ್ದಾರೆ. ಇದನ್ನೂ ಓದಿ:ಪ್ರಶಾಂತ್ ನೀಲ್, ಜ್ಯೂ.ಎನ್‌ಟಿಆರ್ ಸಿನಿಮಾದಲ್ಲಿ ರಶ್ಮಿಕಾ ಐಟಂ ಡ್ಯಾನ್ಸ್?
ಬೆಂಗಳೂರಿನಲ್ಲಿ ನಡೆದ ‘ಥಗ್ ಲೈಫ್’ ಪ್ರಚಾರ ಕಾರ್ಯಕ್ಕೆ ನಟ ಶಿವಣ್ಣ (Shivarajkumar) ಅತಿಥಿಯಾಗಿ ಭಾಗವಹಿಸಿದ್ದರು. ಈ ವೇಳೆ, ರಾಜ್‌ಕುಮಾರ್ ಜೊತೆಗಿನ ಒಡನಾಡವನ್ನು ಕಮಲ್ ಹಾಸನ್ ಸ್ಮರಿಸಿದ್ದಾರೆ. ಬಳಿಕ ಶಿವಣ್ಣ ಎದುರೇ ನಿಮ್ಮ ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂದು ನಟ ಹೇಳಿದ್ದಾರೆ. ಕನ್ನಡಿಗರ ಪ್ರೀತಿ, ಗೌರವಕ್ಕೆ ನಮಿಸುತ್ತಲೇ ನಿಮ್ಮ ಕನ್ನಡ ನಮ್ಮಿಂದ ಬಂದಿದ್ದು ಎಂದ ಕಮಲ್ ಹೇಳಿಕೆಗೆ ಕನ್ನಡಿಗರು ಕೆಂಡ ಕಾರಿದ್ದಾರೆ. ಇದನ್ನೂ ಓದಿ: ಮತ್ತೆ ಸೂಪರ್ ಹೀರೋ ಆಗಿ ತೇಜ್ ಸಜ್ಜಾ ಎಂಟ್ರಿ; ‘ಮಿರಾಯ್’ ಟೀಸರ್ ರಿಲೀಸ್‌ಗೆ ಡೇಟ್ ಫಿಕ್ಸ್
ಹೀಗಾಗಿ ಕಮಲ್ ಆಡಿರುವ ಮಾತುಗಳು ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಕನ್ನಡ ತಮಿಳಿನಿಂದ ಬಂದಿಲ್ಲ. ತಮಿಳಿಗಿಂತ ಕನ್ನಡ ಭಾಷೆಯೇ ಪುರಾತನವಾದದ್ದು ಎಂದು ಕನ್ನಡಿಗರು ಕ್ಲಾಸ್ ತೆಗೆದುಕೊಂಡಿದ್ದಾರೆ.
ತಮಿಳು ನಟ ಸೂರ್ಯ (Suriya) ನಟನೆಯ 46ನೇ ಚಿತ್ರದಲ್ಲಿ ವಿಜಯ್ ದೇವರಕೊಂಡ (Vijay Devarakonda) ನಟಿಸಲಿದ್ದಾರೆ ಎನ್ನಲಾದ ಸುದ್ದಿಯೊಂದು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಇದನ್ನೂ ಓದಿ:ರಾಧಿಕಾ ಪಂಡಿತ್‌ಗೆ ಸಿನಿಮಾ – ಯಶ್ ತಾಯಿ ಹೇಳೋದೇನು?
ಇತ್ತೀಚೆಗೆ ಸೂರ್ಯ ನಟನೆಯ 46ನೇ ಚಿತ್ರಕ್ಕೆ (Suriya 46) ಅದ್ಧೂರಿಯಾಗಿ ಚಾಲನೆ ನೀಡಲಾಗಿತ್ತು. ಈ ಸಿನಿಮಾದಲ್ಲಿ ನಾಯಕಿಯಾಗಿ ‘ಪ್ರೇಮಲು’ ನಟಿ ಮಮಿತಾ ಬೈಜು ನಟಿಸಲಿದ್ದಾರೆ. ಚಿತ್ರದಲ್ಲಿ ವಿಜಯ್ ದೇವರಕೊಂಡ ಕೂಡ ನಟಿಸಲಿದ್ದಾರೆ ಎನ್ನಲಾಗಿದೆ. ಹೀಗೊಂದು ಸುದ್ದಿಯೊಂದು ಟಾಲಿವುಡ್ ಗಲ್ಲಿಯಲ್ಲಿ ಚರ್ಚೆಗೆ ಗ್ರಾಸವಾಗಿದೆ. ಇದನ್ನೂ ಓದಿ: ಅತ್ಯಾಚಾರ ಕೇಸ್ – ನಾಪತ್ತೆಯಾಗಿದ್ದ ನಟ ಮಡೆನೂರು ಮನು ಅರೆಸ್ಟ್
ಚಿತ್ರದಲ್ಲಿ ತಿರುವು ಕೊಡುವ ಪಾತ್ರದಲ್ಲಿ ವಿಜಯ್ ನಟಿಸಲಿದ್ದಾರೆ ಎನ್ನಲಾಗಿದೆ. ನಟನೊಂದಿಗೆ ಚಿತ್ರತಂಡ ಮಾತುಕತೆ ನಡೆಸಿದೆಯಂತೆ. ಆದರೆ ವಿಜಯ್ ದೇವರಕೊಂಡ ಕಡೆಯಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆಯಾ ಎಂಬುದನ್ನು ಚಿತ್ರತಂಡವೇ ಅಧಿಕೃತವಾಗಿ ತಿಳಿಸಬೇಕಿದೆ.
ವಿಜಯ್ ಸದ್ಯ `ಕಿಂಗ್‌ಡಮ್’ ಚಿತ್ರದ ರಿಲೀಸ್‌ಗಾಗಿ ಎದುರು ನೋಡ್ತಿದ್ದಾರೆ. ಭಾಗ್ಯಶ್ರೀ ಜೊತೆ ನಟ ರೊಮ್ಯಾನ್ಸ್ ಮಾಡಿದ್ದಾರೆ. ಈ ಚಿತ್ರ ಜುಲೈ 4ರಂದು ಬಹುಭಾಷೆಗಳಲ್ಲಿ ರಿಲೀಸ್ ಆಗಲಿದೆ.