Tag: ಕಾಲು

  • ಕಾಲಿನ ಶಸ್ತ್ರ ಚಿಕಿತ್ಸೆಗಾಗಿ ಅಮೆರಿಕಾಗೆ ಹಾರಿದ ಮೆಗಾಸ್ಟಾರ್

    ಕಾಲಿನ ಶಸ್ತ್ರ ಚಿಕಿತ್ಸೆಗಾಗಿ ಅಮೆರಿಕಾಗೆ ಹಾರಿದ ಮೆಗಾಸ್ಟಾರ್

    ತೆಲುಗು ಸಿನಿಮಾ ರಂಗದ ಖ್ಯಾತ ನಟ ಚಿರಂಜೀವಿ (Chiranjeevi) ಮೊನ್ನೆಯಷ್ಟೇ ಪತ್ನಿಯೊಂದಿಗೆ ವಿಮಾನಯಾನ ಬೆಳೆಸಿದ್ದರು. ಆ ಫೋಟೋಗಳನ್ನು ಅವರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಅದೊಂದು ಖಾಸಗಿ ವಿಮಾನವಾಗಿದ್ದರಿಂದ ಅಲ್ಲಿನ ಕೆಲ ದೃಶ್ಯಗಳನ್ನು ಅವರು ಹಂಚಿಕೊಂಡು ಸಂಭ್ರಮಿಸಿದ್ದರು. ವಿರಾಮ ಬಯಸಿ ಅವರು ಪ್ರವಾಸ ಮಾಡುತ್ತಿದ್ದಾರೆ ಎಂದು ಹೇಳಲಾಗಿತ್ತು. ಅಸಲಿ ಸುದ್ದಿ ಈಗ ಹೊರ ಬಂದಿದೆ.

    ಮೆಗಾಸ್ಟಾರ್ ಚಿರಂಜೀವಿ ಪತ್ನಿಯೊಂದಿಗೆ ಪ್ರಯಾಣ ಬೆಳೆಸಿದ್ದು ಅಮೆರಿಕಾಗೆ (America) ಎಂದು ಹೇಳಲಾಗುತ್ತಿದೆ. ಅಮೆರಿಕಾದ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಚಿರಂಜೀವಿ ಅವರ ಕಾಲಿಗೆ ಶಸ್ತ್ರ ಚಿಕಿತ್ಸೆ (Surgery) ಮಾಡಲಾಗಿದೆಯಂತೆ. ಅದಕ್ಕಾಗಿ ಅವರು ಪತ್ನಿಯೊಂದಿಗೆ ಅಮೆರಿಕಾಗೆ ತೆರಳಿದ್ದರು ಎನ್ನುವುದು ಈಗ ಗೊತ್ತಾಗಿದೆ. ಇದನ್ನೂ ಓದಿ:ಸೌತ್‌ನ ಇಬ್ಬರು ಸ್ಟಾರ್ ನಟರ ಚಿತ್ರಕ್ಕೆ ರಶ್ಮಿಕಾ ಮಂದಣ್ಣ ಹೀರೋಯಿನ್

    ಭೋಲಾ ಶಂಕರ್ ಸಿನಿಮಾದ ಶೂಟಿಂಗ್ ಮುಗಿಯುತ್ತಿದ್ದಂತೆಯೇ ಅಮೆರಿಕಾಗೆ ಹಾರಿದ್ದರು ಚಿರಂಜೀವಿ. ಕಾಲಿನಲ್ಲಿ ನೋವು ಕಾಣಿಸಿಕೊಂಡಿದ್ದರಿಂದ  ಸ್ಥಳೀಯ ವೈದ್ಯರಲ್ಲಿ ಚಿಕಿತ್ಸೆ ಪಡೆಯಲಾಗಿತ್ತು. ಸಣ್ಣದೊಂದು ಶಸ್ತ್ರ ಚಿಕಿತ್ಸೆಯ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದರು. ಅದರಂತೆ ಚಿರಂಜೀವಿ ಅಮೆರಿಕಾದಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರಂತೆ.

     

    ಈವರೆಗೂ ಈ ವಿಷಯವನ್ನು ಗೌಪ್ಯವಾಗಿ ಇಡಲಾಗಿತ್ತು. ಆದರೆ, ಆಪ್ತರು ಈ ಮಾಹಿತಿಯನ್ನು ಹಂಚಿಕೊಂಡಿದ್ದರಿಂದ ಅದು ದೊಡ್ಡ ಸುದ್ದಿಯಾಗಿದೆ. ಈಗಾಗಲೇ ಶಸ್ತ್ರ ಚಿಕಿತ್ಸೆ ನಡೆದಿದ್ದು, ಆತಂಕ ಪಡುವಂತಹ ಅಗತ್ಯವಿಲ್ಲ ಎಂದಿದ್ದಾರೆ ಆಪ್ತರು. ಅಲ್ಲಿಂದ ಬಂದು ಮತ್ತೆ ಅವರು ಸಿನಿಮಾ ಸಂಬಂಧಿ ಕಾರ್ಯಗಳಲ್ಲಿ ತೊಡಗಲಿದ್ದಾರಂತೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸೀರೆ ನೆರಿಗೆಯಿಂದಾಗಿ ಬೈಕಿನ ಚಕ್ರದೊಳಗೆ ಕಾಲು ಸಿಲುಕಿ ಮಹಿಳೆ ನರಳಾಟ

    ಸೀರೆ ನೆರಿಗೆಯಿಂದಾಗಿ ಬೈಕಿನ ಚಕ್ರದೊಳಗೆ ಕಾಲು ಸಿಲುಕಿ ಮಹಿಳೆ ನರಳಾಟ

    ಚಿಕ್ಕಮಗಳೂರು: ಬೈಕಿನ ಹಿಂಬದಿಯಲ್ಲಿ ಕೂತಿದ್ದ ಮಹಿಳೆಯ ಸೀರೆ (Saree) ಸೆರಗು ಹಾಗೂ ನೆರಿಗೆ ಬೈಕಿನ ಚಕ್ರಕ್ಕೆ ಸಿಲುಕಿ ಕಾಲು ಕೂಡ ಬೈಕಿನ ಚಕ್ರದೊಳಗೆ ಸಿಲುಕಿಕೊಂಡು ಸುಮಾರು ಒಂದು ಗಂಟೆಗಳ ಕಾಲ ಮಹಿಳೆ ನರಳಾಡಿದ ಘಟನೆ ಜಿಲ್ಲೆಯ ತರೀಕೆರೆ ಪಟ್ಟಣದಲ್ಲಿ ನಡೆದಿದೆ.

    ತರೀಕೆರೆ ಪಟ್ಟಣ ಸಮೀಪದ ಇಟ್ಟಿಗೆ ಗ್ರಾಮದ ಯಶೋದಾ ಬಾಯಿ ಎಂಬ ಮಹಿಳೆ ಬೈಕಿನಲ್ಲಿ ತರೀಕೆರೆ ಪಟ್ಟಣಕ್ಕೆ ಬರುವಾಗ ಈ ದುರ್ಘಟನೆ ಸಂಭವಿಸಿದೆ. ಬೈಕಿನ ಹಿಂದೆ ಕೂತಿದ್ದ ಮಹಿಳೆಯ ಸೀರೆ ಸೆರಗು ಹಾಗೂ ನೆರಿಗೆ ಬೈಕಿನ ಚಕ್ರಕ್ಕೆ ಸಿಲುಕಿ, ಕಾಲು ಕೂಡ ಚಕ್ರದೊಳಗೆ ಸಿಲುಕಿಕೊಂಡಿದೆ. ಕೂಡಲೇ ಬೈಕ್ (Bike) ಸವಾರ ಹಾಗೂ ಮಹಿಳೆ ಕೆಳಕ್ಕೆ ಬಿದ್ದಿದ್ದಾರೆ.

    ಮಹಿಳೆಯ ಕಾಲು ಗೇರ್ ಬಾಕ್ಸ್ ಮೂಲಕ ಚಕ್ರದ ಒಳಗೆ ಸಿಲುಕಿಕೊಂಡಿದೆ. ಬೈಕ್ ಸವಾರ ಹಾಗೂ ಸ್ಥಳೀಯರು ಎಷ್ಟೇ ಪ್ರಯತ್ನಿಸಿದರೂ ಕಾಲನ್ನ ಹೊರಕ್ಕೆ ತೆಗೆಯಲು ಸಾಧ್ಯವಾಗಿಲ್ಲ. ಸುಮಾರು ಒಂದು ಗಂಟೆಗಳ ಕಾಲ ಮಹಿಳೆ ನೋವಿನಿಂದ ನರಳಾಡಿದ್ದಾರೆ. ಬಳಿಕ ಬೈಕಿನ ಚೈನ್ ಕಟ್ ಮಾಡಿ, ಗೇರ್ ಬಾಕ್ಸ್ ಬಿಚ್ಚಿ ಮಹಿಳೆಯ ಕಾಲನ್ನು ಹೊರ ತೆಗೆದಿದ್ದಾರೆ. ಇದನ್ನೂ ಓದಿ: ದೆಹಲಿ ಅಬಕಾರಿ ನೀತಿ ಹಗರಣ- ಕೆಸಿಆರ್ ಪುತ್ರಿಯ ಮಾಜಿ ಆಡಿಟರ್ ಬಂಧನ

    ಕಾಲಿಗೆ ಗಂಭೀರ ಗಾಯವಾಗಿ ತೀವ್ರ ರಕ್ತಸ್ರಾವವಾಗಿದೆ. ಈ ದೃಶ್ಯ ನೋಡುವರಿಗೆ ಮೈರೋಮ ಎದ್ದು ನಿಲ್ಲುವಂತೆ ಮಾಡುತ್ತಿದೆ. ಸೀರೆಯುಟ್ಟ ಮಹಿಳೆಯರು ಹಾಗೂ ಚೂಡಿದಾರ ಧರಿಸಿದ ಯುವತಿಯರು ಬೈಕಿನ ಹಿಂಭಾಗ ಕೂತು ಹೋಗುವಾಗ ತೀವ್ರವಾದ ಎಚ್ಚರಿಕೆಯಿಂದ ಇರಬೇಕಾಗಿದೆ. ಚೂಡಿದಾರ ಧರಿಸಿದ ಮಹಿಳೆಯರ ವೇಲ್ ಕೂಡ ಟೈರ್‍ಗೆ ಸಿಕ್ಕಿ ಬಿದ್ದುವರು ಇದ್ದಾರೆ. ಹಾಗಾಗಿ ಸೀರೆ ಹಾಗೂ ಚೂಡಿದಾರ ಧರಿಸಿ ಬೈಕಿನಲ್ಲಿ ಹೋಗುವ ಮಹಿಳೆಯರು, ಯುವತಿಯರು ಎಚ್ಚರಿಕೆಯಿಂದ ಇರಬೇಕಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಪರೀಕ್ಷೆಗೆ ತೆರಳುತ್ತಿದ್ದಾಗ ಅಪಘಾತ – ವಿದ್ಯಾರ್ಥಿನಿ ಕಾಲನ್ನೇ ತೆಗೆದ ವೈದ್ಯರು

    ಪರೀಕ್ಷೆಗೆ ತೆರಳುತ್ತಿದ್ದಾಗ ಅಪಘಾತ – ವಿದ್ಯಾರ್ಥಿನಿ ಕಾಲನ್ನೇ ತೆಗೆದ ವೈದ್ಯರು

    ಲಕ್ನೋ: ಅಂಬೇಡ್ಕರ್ ನಗರದಲ್ಲಿ (Ambedkar Nagar) ನಡೆಯುತ್ತಿದ್ದ ಪೂರ್ವಭಾವಿ ಅರ್ಹತಾ ಪರೀಕ್ಷೆ (Preliminary Eligibility Test)(ಪಿಇಟಿ)ಗೆ ತೆರಳುತ್ತಿದ್ದ ವೇಳೆ ಸಂಭವಿಸಿದ ಅಪಘಾತದಲ್ಲಿ ವಿದ್ಯಾರ್ಥಿನಿಯೊಬ್ಬರು ಕಾಲು ಕಳೆದುಕೊಂಡಿರುವ ಘಟನೆ ಉತ್ತರ ಪ್ರದೇಶದ (Uttar Pradesh)  ಗೋರಖ್‍ಪುರದಲ್ಲಿ (Gorakhpur) ನಡೆದಿದೆ.

    ಭಾನುವಾರ ಬೆಳಗ್ಗೆ ಕಾಲೇಸರ್ ಪ್ರದೇಶದಲ್ಲಿ (Kaalesar area) ಬೆಳಗ್ಗೆ 9:30ಕ್ಕೆ ಈ ಅಪಘಾತ ಸಂಭವಿಸಿದೆ. ವಿದ್ಯಾರ್ಥಿನಿ ಮತ್ತು ಆಕೆಯ ತಂದೆ ಹೋಗುತ್ತಿದ್ದ ಬೈಕ್‍ಗೆ ಹಿಂದಿನಿಂದ ಬಂದು ಸಿಎನ್‍ಜಿ ಟ್ರಕ್ ಡಿಕ್ಕಿ ಹೊಡೆದಿದೆ. ಇದರಿಂದ ಯುವತಿಯ ಬಲಗಾಲಿಗೆ ಗಂಭೀರವಾಗಿ ಗಾಯವಾಗಿತ್ತು. ಇದನ್ನೂ ಓದಿ: ನಾಪತ್ತೆಯಾಗಿರೋ ಸಂತ್ರಸ್ತೆಯೊಂದಿಗೆ ವರ್ಷದೊಳಗೆ ಮದ್ವೆಯಾಗ್ಬೇಕು- ರೇಪ್ ಆರೋಪಿಗೆ ಬಾಂಬೆ ಹೈಕೋರ್ಟ್ ಆದೇಶ

    ಕೂಡಲೇ ಆಕೆಯನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ದು ಅಲ್ಲಿಂದ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಯಿತು. ಆದರೆ ಯುವತಿಯ ಕಾಲಿಗೆ ತೀವ್ರವಾಗಿ ಹಾನಿಯಾಗಿದ್ದರಿಂದ ವೈದ್ಯರು ಕಾಲನ್ನೇ ಕತ್ತರಿಸಬೇಕಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ದೀಪಾವಳಿಗೆ ಸಿಹಿ ಸುದ್ದಿ- ರೈತರ ಖಾತೆಗೆ 2 ಸಾವಿರ ಹಣ ಬಿಡುಗಡೆ ಮಾಡಿದ ಪ್ರಧಾನಿ

    Live Tv
    [brid partner=56869869 player=32851 video=960834 autoplay=true]

  • ಕಿರಿಕ್ ಹುಡುಗಿ ಸಂಯುಕ್ತ ಹೆಗ್ಡೆ ಕಾಲಿಗೆ ಗಂಭೀರ ಪೆಟ್ಟು: ಯಶಸ್ವಿ ಶಸ್ತ್ರ ಚಿಕಿತ್ಸೆ

    ಕಿರಿಕ್ ಹುಡುಗಿ ಸಂಯುಕ್ತ ಹೆಗ್ಡೆ ಕಾಲಿಗೆ ಗಂಭೀರ ಪೆಟ್ಟು: ಯಶಸ್ವಿ ಶಸ್ತ್ರ ಚಿಕಿತ್ಸೆ

    ವಾರದ ಹಿಂದೆಯಷ್ಟೇ ಕ್ರೀಮ್ ಸಿನಿಮಾದ ಶೂಟಿಂಗ್ ಸಮಯದಲ್ಲಿ ಕಾಲಿಗೆ ಗಂಭೀರ ಪೆಟ್ಟು ಮಾಡಿಕೊಂಡಿದ್ದ ಕಿರಿಕ್ ಪಾರ್ಟಿ ಖ್ಯಾತಿಯ ನಟಿ ಸಂಯುಕ್ತ ಹೆಗ್ಡೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಕಾಲಿಗೆ ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆಯಾಗಿದ್ದು, ಇನ್ನೆರಡು ದಿನಗಳಲ್ಲಿ ಡಿಸ್ ಚಾರ್ಜ್ ಮಾಡುವುದಾಗಿ ವೈದ್ಯರು ತಿಳಿಸಿದ್ದಾರೆ.

    ಸರ್ಜರಿ ನಂತರ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿರುವ ವೈದ್ಯರು, ಕಾಲಿಗೆ ಗಂಭೀರವಾಗಿಯೇ ಪೆಟ್ಟು ಬಿದ್ದಿತ್ತು. ಹಾಗಾಗಿ ಅನಿವಾರ್ಯವಾಗಿ ಶಸ್ತ್ರ ಚಿಕಿತ್ಸೆಯನ್ನು ಮಾಡಬೇಕಾಯಿತು. ಇದೀಗ ಸರ್ಜರಿ ಯಶಸ್ವಿಯಾಗಿ ನಡೆದಿದ್ದು, ಎಂಟು ವಾರಗಳ ಕಾಲ ಅವರು ರೆಸ್ಟ್ ಮಾಡಬೇಕು. ಅಲ್ಲದೇ, ಫಿಸಿಯೋಥೆರಪಿ ಮಾಡಿಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ. ಇದನ್ನೂ ಓದಿ:ಸಿಂಪಲ್ ಸುನಿ `ಗತವೈಭವ’ದಲ್ಲಿ ದೇವಕನ್ಯೆಯಾಗಿ ಆಶಿಕಾ ರಂಗನಾಥ್‌

    ಕ್ರೀಮ್ ಸಿನಿಮಾದ ಸಾಹಸ ಸನ್ನಿವೇಶವನ್ನು ಚಿತ್ರೀಕರಣ ಮಾಡುವ ಸಂದರ್ಭದಲ್ಲಿ ಚಿತ್ರತಂಡವು ಡ್ಯೂಪ್ ಬಳಸುವಂತೆ ಹೇಳಿದರೂ, ಸಂಯುಕ್ತ ಹೆಗ್ಡೆ ಅತ್ಯುತ್ಸಾಹದಿಂದ ಡ್ಯೂಪ್ ಇಲ್ಲದೇ ತಾವೇ ಪಾಲ್ಗೊಂಡಿದ್ದರು, ಆಗ ಕಾಲು ಟ್ವಿಸ್ಟ್ ಆಗಿತ್ತು. ಕೂಡಲೇ ಅವರಿಗೆ ಪ್ರಥಮ ಚಿಕಿತ್ಸೆಯನ್ನೂ ನೀಡಲಾಯಿತು. ಕೆಲ ದಿನಗಳ ಕಾಲ ಮನೆಯಲ್ಲೇ ಇದ್ದುಕೊಂಡು ಟ್ರೀಟ್ಮೆಂಟ್ ಪಡೆದರು. ಆದರೂ, ನೋವು ಕಡಿಮೆ ಆಗಿರಲಿಲ್ಲ. ಕೊನೆಗೂ ಆಸ್ಪತ್ರೆ ಸೇರಿ, ಚಿಕಿತ್ಸೆ ಪಡೆದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಜಮೀನು ವಿವಾದ – ಯುವಕನ ಕಾಲು ಮುರಿದ ದಾಯಾದಿಗಳು

    ಜಮೀನು ವಿವಾದ – ಯುವಕನ ಕಾಲು ಮುರಿದ ದಾಯಾದಿಗಳು

    ರಾಯಚೂರು: ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ದಾಯಾದಿಗಳು ಯುವಕನೋರ್ವನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಗರದ ಮಾನ್ವಿ ತಾಲೂಕಿನ ಕಟಕನೂರು ಗ್ರಾಮದಲ್ಲಿ ನಡೆದಿದೆ.

    ರಾಜೊಳ್ಳಿಯ ನಿವಾಸಿ ಮಂಜುನಾಥ್ ಹಲ್ಲೆಗೊಳಗಾದ ಯುವಕ. ಸಂಬಂಧಿಯನ್ನುದನ್ನು ನೋಡದೆ ನೋವಿನಿಂದ ನರಳಾಡಿದರೂ ಬಿಡದೆ ಬೆನ್ನತ್ತಿ ಹಲ್ಲೆ ಮಾಡಿದ್ದಾರೆ. ದಾಯಾದಿಗಳಾದ ನರಸಣ್ಣ, ತಿಮ್ಮಪ್ಪ, ವಿರೇಶ್ ಎಂಬುವವರಿಂದ ಈ ಹಲ್ಲೆ ನಡೆದಿದೆ. ಇದನ್ನೂ ಓದಿ: ಮುತ್ತಪ್ಪ ರೈ ಆಪ್ತ ಬಳಗದಲ್ಲಿ ಕೋಲ್ಡ್ ವಾರ್ – ನಟಿ ಅನುಷ್ಕಾ ಶೆಟ್ಟಿ ಸಹೋದರನ ಕೊಲೆಗೆ ಸ್ಕೆಚ್

    ಹೊಲದಲ್ಲಿ ಟ್ರ್ಯಾಕ್ಟರ್‌ನಿಂದ ಉಳುಮೆ ಮಾಡಲು ಹೋದಾಗ, ಒಬ್ಬನೆ ಇರುವುದು ತಿಳಿದು ಹಲ್ಲೆ ಮಾಡಿದ್ದಾರೆ. ಪಿತ್ರಾರ್ಜಿತವಾಗಿ ಬಂದ ಐದುವರೆ ಎಕರೆ ಜಮೀನಿನ ವಿವಾದ ಹಿನ್ನೆಲೆ ಹೊಡೆದಾಟ ನಡೆದಿದೆ. ಮಂಜುನಾಥ್‍ನಿಗೆ ದೊಣ್ಣೆಯಿಂದ ಹೊಡೆದು ಒಂದು ಕಾಲು ಮುರಿದಿದ್ದಾರೆ. ಇದನ್ನೂ ಓದಿ: ನೂಪುರ್ ಶರ್ಮಾಗೆ ಮುಂಬೈ ಪೊಲೀಸರಿಂದ ಸಮನ್ಸ್

    ಗಾಯಾಳು ಮಂಜುನಾಥ್‍ನನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಘಟನೆ ಸಂಬಂಧ ಯರಗೇರಾ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಕಾಲಿನಲ್ಲಿ ಪರೀಕ್ಷೆ ಬರೆದು ಶೇ.70 ಅಂಕ ಪಡೆದ ಯುವಕ

    ಕಾಲಿನಲ್ಲಿ ಪರೀಕ್ಷೆ ಬರೆದು ಶೇ.70 ಅಂಕ ಪಡೆದ ಯುವಕ

    ಲಕ್ನೋ: ಹುಟ್ಟುತ್ತಲೇ ಅಂಗವಿಕಲನಾಗಿ ಬೆಳೆದ ಲಕ್ನೋ ಯುವಕ ಕಾಲಿನ ಮೂಲಕ ಪರೀಕ್ಷೆ ಬರೆದು ಶೇ.70 ಪಡೆದು ಪಾಸ್ ಆಗಿದ್ದಾರೆ.

    ತುಷಾರ್ ವಿಶ್ವಕರ್ಮ ಎಂಬವರು ಪೆನ್ನನ್ನು ಕಾಲಿನಲ್ಲಿ ಹಿಡಿದು ಬರೆಯುವುದಕ್ಕೆ ಅಭ್ಯಾಸ ಮಾಡಿಕೊಂಡಿದ್ದರು. ಇದೀಗ 12ನೇ ತರಗತಿ ಪರೀಕ್ಷೆಯನ್ನು ತಮ್ಮ ಕಾಲಿನ ಬೆರಳುಗಳ ಮೂಲಕ ಬರೆದು ಶೇ.70 ಪಡೆದು ಉತ್ತೀರ್ಣರಾಗಿದ್ದಾರೆ.

    ಸೃಜನಶೀಲ ಕಾನ್ವೆಂಟ್ ಕಾಲೇಜಿನ ವಿದ್ಯಾರ್ಥಿಯಾಗಿದ್ದು, ತಾನು ಹುಟ್ಟಿನಿಂದಲೂ ಕೈಗಳನ್ನು ಕಳೆದುಕೊಂಡಿದ್ದೇನೆ. ಆದರೆ ಅದನ್ನು ನನ್ನ ಅಸಹಾಯಕತನ ಎಂದು ಭಾವಿಸಲಿಲ್ಲ. ನನ್ನ ಇಬ್ಬರು ಅಣ್ಣಂದಿರು ಶಾಲೆಗೆ ಹೋಗುವಾಗ, ನಾನು ಕೂಡ ಶಾಲೆಗೆ ಹೋಗಬೇಕೆಂದು ನಿರ್ಧರಿಸಿ ಪೋಷಕರಿಗೆ ಕೇಳಿಕೊಂಡೆ. ನಂತರ ನನ್ನ ಕೈಯಲ್ಲಿ ಬರೆಯಲು ಅಸಾಧ್ಯ ಎಂದು ನನ್ನ ಸಹೋದರರಿಗೆ ನನ್ನ ಬದಲಾಗಿ ಬರೆಯುವಂತೆ ಪೋಷಕರು ಹೇಳುತ್ತಿದ್ದರು. ಆಗ ನಾನು ನನ್ನ ಪಾದಗಳನ್ನು ನನ್ನ ಕೈಗಳಾಗಿ ಮಾಡಿಕೊಂಡು ಬರೆಯಲು ಆರಂಭಿಸಿದೆ ಎಂದು ಹೇಳಿದ್ದಾರೆ.

    ಪರೀಕ್ಷೆ ವೇಳೆ ತುಷಾರ್ ಬರೆಯಲು ಯಾರ ಸಹಾಯವನ್ನು ಪಡೆಯದೇ ಪರೀಕ್ಷೆಯನ್ನು ಪೂರ್ಣಗೊಳಿಸಲು ಕೊಂಚ ಹೆಚ್ಚು ಸಮಯ ನೀಡುವಂತೆ ಶಿಕ್ಷಕಗೆ ಮನವಿ ಮಾಡಿದ್ದಾರೆ. ಅಲ್ಲದೇ ಪರೀಕ್ಷೆ ಬರೆಯಲು ನಾನು ಕಪ್ಪು ಹಾಗೂ ನೀಲಿ ಬಣ್ಣದ ಪೆನ್ನುಗಳನ್ನು ಬಳಸಿರುವುದಾಗಿ ತಿಳಿಸಿದ್ದಾರೆ. ಸದ್ಯ ತುಷಾರ್ ತಂದೆ ಸಣ್ಣ ವ್ಯಾಪಾರವೊಂದನ್ನು ಮಾಡುತ್ತಿದ್ದು ಮಗನ ಸಾಧನೆಗೆ ಬೆಂಬಲವಾಗಿ ನಿಂತಿದ್ದಾರೆ ಹಾಗೂ ತುಷಾರ್ ಮುಂದೆ ಇಂಜಿನಿಯರ್ ಆಗುವ ಇಚ್ಛೆಯನ್ನು ವ್ಯಕ್ತಪಡಿಸಿದ್ದಾರೆ.

    ಸಾಧನೆ ಮಾಡಲು ಅಂಗವೈಕಲ್ಯತೆ ಅಡ್ಡಬರುವುದಿಲ್ಲ. ಕಲಿಕೆಯಲ್ಲಿ ಆಸಕ್ತಿವೊಂದಿದ್ದರೆ ಸಾಕು ಏನನ್ನು ಬೇಕಾದರೂ ಸಾಧಿಸಬಹುದು ಎಂಬುವುದಕ್ಕೆ ಇದೊಂದು ಸ್ಫೂರ್ತಿದಾಯಕ ಕಥೆ ಎಂದೇ ಹೇಳಬಹುದು. ಇದನ್ನೂ ಓದಿ:ಮೊದಲ ಬಾರಿಗೆ ಒಲಿಂಪಿಕ್ಸ್ ಸೆಮಿಫೈನಲ್ ಪ್ರವೇಶಿಸಿದ ಭಾರತೀಯ ಮಹಿಳಾ ಹಾಕಿ ತಂಡ

  • ರಸ್ತೆಯಲ್ಲಿ ಕಾದು ಕುಳಿತ ಅಭಿಮಾನಿಗೆ ಕಿಚ್ಚ ಸುದೀಪ್ ನೆರವು

    ರಸ್ತೆಯಲ್ಲಿ ಕಾದು ಕುಳಿತ ಅಭಿಮಾನಿಗೆ ಕಿಚ್ಚ ಸುದೀಪ್ ನೆರವು

    – ಅಪಘಾತದಲ್ಲಿ ಕಾಲು ಕಳಕೊಂಡಿರೋ ಅಭಿಮಾನಿ

    ಮೈಸೂರು: ನೆರೆ ಪರಿಹಾರ, ಶಾಲಾ ಶುಲ್ಕ, ಮದುವೆ ಹೀಗೆ ಒಂದಲ್ಲ ಒಂದು ರೀತಿಯಲ್ಲಿ ತಮ್ಮ ಅಭಿಮಾನಿಗಳ ಕೈ ಹಿಡಿದಿರುವ ಸ್ಯಾಂಡಲ್‍ವುಡ್ ನಟ, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಇದೀಗ ಮತ್ತೊಮ್ಮೆ ಮಾನವೀಯತೆ ಮೆರೆದಿದ್ದಾರೆ.

    ಹೌದು. ಸುದೀಪ್ ಅವರು ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ನಾಡ ದೇವಿಯ ದರ್ಶನ ಪಡೆದಿದ್ದಾರೆ. ಇದಕ್ಕೂ ಮೊದಲು ದಾರಿ ಮಧ್ಯೆ ತಮ್ಮ ಅಭಿಮಾನಿಯೊಬ್ಬರನ್ನು ಭೇಟಿ ಮಾಡಿ ಸಹಾಯ ಮಾಡುವ ಮೂಲಕ ಆತನ ಕೈಹಿಡಿದಿದ್ದಾರೆ.

    ಅಪಘಾತದಲ್ಲಿ ಕಾಲು ಕಳೆದುಕೊಂಡಿರುವ ಅಭಿಮಾನಿ ರಾಘವ್‍ಗೆ ತನ್ನ ನೆಚ್ಚಿನ ನಟ ಬರುತ್ತಿರುವುದು ಗಮನಕ್ಕೆ ಬಂದಿದೆ. ಹೀಗಾಗಿ ಅವರು ಸುದೀಪ್ ನನ್ನು ಭೇಟಿ ಮಾಡಲು ಮಾರ್ಗ ಮಧ್ಯೆ ಕಾದು ಕುಳಿತಿದ್ದರು. ಅಂತೆಯೇ ಅದೇ ದಾರಿಯಲ್ಲಿ ಬಂದ ಅಭಿನಯ ಚಕ್ರವರ್ತಿ, ಅಭಿಮಾನಿಯನ್ನು ಕಂಡು ಕಾರಿನಿಂದ ಕೆಳಗಿಳಿದು ಬಂದು ಮಾತನಾಡಿಸಿದ್ದಾರೆ.

    ದಾರಿಯಲ್ಲಿ ಕಾರು ನಿಲ್ಲಿಸಿ ರಾಘವ್ ಬಳಿ ಹೋಗಿ ಮಾತನಾಡಿಸಿ ಆರೋಗ್ಯ ವಿಚಾರಿಸಿದ್ದಾರೆ. ಈ ವೇಳೆ ಅಭಿಮಾನಿ ಕೂಡ ಸುದೀಪ್ ಬಳಿ ತನ್ನ ದುಃಖ ತೋಡಿಕೊಂಡಿದ್ದಾರೆ. ಅಭಿಮಾನಿಯ ಕಣ್ಣೀರ ಕಥೆ ಕೇಳಿದ ಮಾಣಿಕ್ಯ, ರಾಘವ್ ಅವರ ಕೃತಕ ಕಾಲು ಜೋಡಣೆಗಾಗಿ ಸ್ಥಳದಲ್ಲೇ ಸಹಾಯ ಹಸ್ತ ಚಾಚುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

    ಸದ್ಯ ಸುದೀಪ್ ಮಾನವೀಯತೆಗೆ ಅವರ ಅಭಿಮಾನಿಗಳು ಮತ್ತೊಮ್ಮೆ ಸಲಾಮ್ ಎಂದಿದ್ದು, ತಮ್ಮ ನೆಚ್ಚಿನ ನಟನ ಘನ ಕಾರ್ಯಕ್ಕೆ ಪ್ರಶಂಸೆ ವ್ಯಕ್ತಪಡಿಸುತ್ತಿದ್ದಾರೆ.

  • ಮನೆಯಲ್ಲಿ ಕಳವುಗೈದು ಮಹಿಳೆಯನ್ನು ಕೊಲೆ ಮಾಡಿದ್ದ ಆರೋಪಿಗಳ ಕಾಲಿಗೆ ಫೈರಿಂಗ್

    ಮನೆಯಲ್ಲಿ ಕಳವುಗೈದು ಮಹಿಳೆಯನ್ನು ಕೊಲೆ ಮಾಡಿದ್ದ ಆರೋಪಿಗಳ ಕಾಲಿಗೆ ಫೈರಿಂಗ್

    ಆನೇಕಲ್: ಇಂದು ಬೆಳಂಬೆಳಗ್ಗೆ ಇಬ್ಬರು ಪೊಲೀಸರು ಕೊಲೆ ಆರೋಪಿಗಳ ಮೇಲೆ ಫೈರಿಂಗ್ ಮಾಡಿದ್ದಾರೆ.

    ಸೈಕೋ ಅಲಿಯಾಸ್ ವೇಲು ಮತ್ತು ಬಾಲ ಅಲಿಯಾಸ್ ಬಾಲಕೃಷ್ಣ ಕೊಲೆ ಆರೋಪಿಗಳು. ಇವರು ಒಂದು ವಾರಗಳ ಹಿಂದೆ ಆನೇಕಲ್ ತಾಲೂಕಿನ ಸಿಂಗೇನ ಅಗ್ರಹಾರ ಬಳಿಯ ಒಂಟಿ ಮನೆಯಲ್ಲಿದ್ದ ಮಹಿಳೆಯನ್ನು ಬರ್ಬರವಾಗಿ ಕೊಲೆ ಮಾಡಿದ್ದರು.

    ಮನೆಯಲ್ಲಿದ್ದ ಶ್ವೇತಾ ಎಂಬವರ ಮಾಂಗಲ್ಯ ಸರ ಕಳ್ಳತನ ಮಾಡಿ ನಂತರ ಕೊಲೆ ಮಾಡಿದ್ದರು. ಇದೀಗ ಇಬ್ಬರ ಕಾಲಿಗೆ ಪೊಲೀಸರು ಗುಂಡೇಟು ನೀಡಿದ್ದಾರೆ.

    ಆನೇಕಲ್ ತಾಲೂಕಿನ ಮುತ್ಯಾಲಮಡುವಿನ ಬಳಿ ರಾತ್ರಿ ಆರೋಪಿಗಳು ಇರುವ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು. ಕೂಡಲೇ ಹೆಬ್ಬಗೋಡಿ ಇನ್ಸ್‍ಪೆಕ್ಟರ್ ಗೌತಮ್ ಮತ್ತು ಬನ್ನೇರುಘಟ್ಟ ಎಸ್‍ಐ ಗೋವಿಂದ್ ಬಂಧಿಸಲು ಹೋದ ಸಂದರ್ಭದಲ್ಲಿ ಪೊಲಿಸರ ಮೇಲೆಯೇ ಆರೋಪಿಗಳು ಹಲ್ಲೆಗೆ ಮುಂದಾಗಿದ್ದರು. ಚೂಪಾದ ಕತ್ತಿಯಿಂದ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದರು. ಈ ವೇಳೆ ಪೊಲೀಸರು ತಮ್ಮ ಆತ್ಮರಕ್ಷಣೆಗಾಗಿ ಇಬ್ಬರು ಆರೋಪಿಗಳ ಕಾಲಿಗೆ ಗುಂಡೇಟು ನೀಡಿದ್ದಾರೆ.

    ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ವೇಲೂ ಅಲಿಯಾಸ್ ಸೈಕೋ ವೇಲೂ ಮತ್ತು ಬಾಲಾಜಿ, ಬೆಂಗಳೂರು ಸುತ್ತಮುತ್ತ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದರು.

  • ಪತ್ನಿಗೆ ಕಿರುಕುಳ ನೀಡಿ, ಹೊಡೆದು ಚೈನ್‍ನಲ್ಲಿ ಕಟ್ಟಿ ಹಾಕಿದ ಪತಿ

    ಪತ್ನಿಗೆ ಕಿರುಕುಳ ನೀಡಿ, ಹೊಡೆದು ಚೈನ್‍ನಲ್ಲಿ ಕಟ್ಟಿ ಹಾಕಿದ ಪತಿ

    – ಶೌಚಾಲಯ ಬಳಕೆಗೂ ಬಿಡದ ಗಂಡ
    – ಕೆಲ ತಿಂಗಳಿನಿಂದ ನರಕ ಅನುಭವಿಸಿದ್ದ ಮಹಿಳೆಯ ರಕ್ಷಣೆ

    ನವದೆಹಲಿ: ಕಳೆದ ಕೆಲವು ತಿಂಗಳಿನಿಂದ ನರಕದ ಜೀವನ ನಡೆಸುತ್ತಿದ್ದ 32 ವರ್ಷದ ಮಹಿಳೆಯನ್ನು ದೆಹಲಿಯ ಮಹಿಳಾ ಆಯೋಗದ ಸದಸ್ಯರು ರಕ್ಷಣೆ ಮಾಡಿದ್ದಾರೆ.

    ದೆಹಲಿಯ ತ್ರಿಲೋಕಪುರಿ ಪ್ರದೇಶದ ಮಹಿಳೆಯನ್ನು ಆಕೆಯ ಪತಿಯೇ ಕಾಲಿಗೆ ಚೈನ್ ಹಾಕುವ ಮೂಲಕ ಕೆಲ ತಿಂಗಳಿನಿಂದ ಕಟ್ಟಿಹಾಕಿ ಬಂಧಿಸಿದ್ದಾನೆ. ಅಲ್ಲದೆ ಆತ ಪ್ರತಿದಿನ ಆಕೆಗೆ ಹಿಂಸೆ ನೀಡುತ್ತಿದ್ದನು. ಆದರೆ ಪತಿ ಯಾಕೆ ಈ ರೀತಿ ಪತ್ನಿಗೆ ಕಿರುಕುಳ ನೀಡಿದ್ದಾನೆ ಎಂಬುದು ತಿಳಿದುಬಂದಿಲ್ಲ.

    ಮಹಿಳೆಗೆ ಆಕೆಯ ಪತಿ ಪ್ರತಿನಿತ್ಯ ಹೊಡೆಯುತ್ತಿರುವುದರಿಂದ ಆಕೆಯ ಆರೋಗ್ಯ ತೀರಾ ಹದಗೆಟ್ಟಿತ್ತು. ಅಲ್ಲದೆ ಮೈಮೇಲಿದ್ದ ಬಟ್ಟೆ ಕೂಡ ಹರಿದು ಹೋಗಿತ್ತು. ಈ ವಿಚಾರ ಮಹಿಳಾ ಆಯೋಗದ ಸದಸ್ಯರ ಗಮನಕ್ಕೆ ಬಂದಿದೆ. ಕೂಡಲೇ ಆಯೋಗದ ಮುಖ್ಯಸ್ಥೆ ಸ್ವಾತಿ ಮೀವಾಲಿ ತನ್ನ ಸದಸ್ಯರೊಂದಿಗೆ ಮಹಿಳೆಯ ಮನೆಗೆ ದೌಡಾಯಿಸಿ ರಕ್ಷಣೆ ಮಾಡಿದ್ದಾರೆ.

    ಮನೆ ಗಬ್ಬು ವಾಸನೆ ಬರುತ್ತಿತ್ತು. ಮಹಿಳೆಯನ್ನು ಆಕೆಯ ಪತಿ ಶೌಚಾಲಯ ಬಳಕೆ ಮಾಡಲೂ ಬಿಡುತ್ತಿರಲಿಲ್ಲ ಎಂದು ಸ್ವಾತಿ ತಿಳಿಸಿದ್ದಾರೆ. ಈ ಸಂಬಂಧ ಮಕ್ಕಳ ಜೊತೆ ಮಾತನಾಡಿದಾಗ, ಅಮ್ಮ ನಮ್ಮ ಅಪ್ಪನಿಂದ ತಪ್ಪಿಸಿಕೊಂಡು ಓಡಿ ಹೋಗಿದ್ದರು. ಆದರೆ ಅಪ್ಪನೇ ಅವರನ್ನು ವಾಪಸ್ ಮನೆಗೆ ಎಳೆದುಕೊಂಡು ಬಂದು ಹೊಡೆದು- ಬಡಿದು, ಸಾಕಷ್ಟು ಹಿಂಸೆ ಕೊಟ್ಟು ಎಲ್ಲೂ ಹೋಗದಂತೆ ಚೈನ್ ನಲ್ಲಿ ಕಟ್ಟಿ ಹಾಕಿದ್ದಾರೆ ಎಂದು ತಿಳಿಸಿದ್ದಾರೆ.

    ಸದ್ಯ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೆ ಮಹಿಳೆಯ ಪತಿ ಹಾಗೂ ಆತನ ಕುಟುಂಬದ ವಿರುದ್ಧ ಎಫ್‍ಐಆರ್ ದಾಖಲಿಸಿರುವುದಾಗಿ ಸ್ವಾತಿ ಹೇಳಿದ್ದಾರೆ.

    ಈ ಘಟನೆ ನಾಗರಿಕ ಸಮಾಜವನ್ನು ತಲೆ ತಗ್ಗಿಸುವಂತಿದೆ. ಇಂತಹ ದೌರ್ಜನ್ಯಗಳಿಂದ ಮಹಿಳೆ ಹಾಗೂ ಹೆಣ್ಣು ಮಕ್ಕಳನ್ನು ರಕ್ಷಿಸಲು ಸಮಾಜದ ಜನರು ಮುಂದೆ ಬರುವ ಅವಶ್ಯಕತೆ ಇದೆ ಎಂದು ಸ್ವಾತಿ ವಿಡಿಯೋ ಮಾಡಿ ಮನವಿ ಮಾಡಿಕೊಂಡಿದ್ದಾರೆ.

  • ಕೇರಳದ ಆನೆ ಸಾವು ಮಾಸುವ ಮುನ್ನವೇ ಯಾದಗಿರಿಯಲ್ಲಿ ಅಮಾನವೀಯ ಘಟನೆ

    ಕೇರಳದ ಆನೆ ಸಾವು ಮಾಸುವ ಮುನ್ನವೇ ಯಾದಗಿರಿಯಲ್ಲಿ ಅಮಾನವೀಯ ಘಟನೆ

    – ಕಾಲು ಕಳ್ಕೊಂಡು ನದಿಯಲ್ಲಿ ನರಳುತ್ತಿರೋ ಎಮ್ಮೆ

    ಯಾದಗಿರಿ: ಇತ್ತೀಚೆಗೆ ಕೇರಳದಲ್ಲಿ ಆನೆಯೊಂದು ದುಷ್ಟರ ಕೃತ್ಯಕ್ಕೆ ನದಿಯಲ್ಲಿ ನರಳಿ ಪ್ರಾಣ ಬಿಟ್ಟಿದೆ. ಈ ಘಟನೆ ಮಾಸುವ ಮುನ್ನವೇ ಮತ್ತೊಂದು ಅಮಾನವೀಯ ಘಟನೆ ಯಾದಗಿರಿಯಲ್ಲಿ ನಡೆಯುತ್ತಿದೆ.

    ಎಮ್ಮೆಯೊಂದು ಜಿಲ್ಲೆಯ ವಡಗೇರಾ ತಾಲೂಕಿನ ಕೊಡಲ ಗ್ರಾಮದ ಸಮೀಪದ ಕೃಷ್ಣಾ ನದಿ ತೀರದಲ್ಲಿ ಮೊಸಳೆ ಹೊಡೆತಕ್ಕೆ ಸಿಕ್ಕು ಕಾಲು ಕಳೆದುಕೊಂಡಿದೆ. ಆದರೆ ಎಮ್ಮೆ ಕಳೆದ ಎರಡು ದಿನಗಳಿಂದ ನರಳುತ್ತಿದೆ. ಈ ವಿಷಯ ಸ್ಥಳೀಯ ಪಶು ಚಿಕಿತ್ಸಾಲಯ ಕ್ಕೆ ಗೊತ್ತಿದ್ದರೂ ಪಶು ವೈದ್ಯರು ಮಾತ್ರ ಎಮ್ಮೆಗೆ ಚಿಕಿತ್ಸೆ ನೀಡಲು ಮುಂದಾಗಿಲ್ಲ. ಇದರಿಂದ ಅತೀವ ನೋವಿನಿಂದ ನರಳುತ್ತಿರುವ ಎಮ್ಮೆ ನೋವು ತಗ್ಗಿಸಿಕೊಳ್ಳಲು ನದಿಯ ನೀರಿನಲ್ಲಿ ಕಾಲ ಕಳೆಯುತ್ತಿದೆ.

    ಕಳೆದ ಎರಡು ದಿನಗಳ ಹಿಂದೆ ನೀರು ಕುಡಿಯಲು ನದಿ ತೀರಕ್ಕೆ ಎಮ್ಮೆ ತೆರಳಿತ್ತು. ಈ ಸಮಯದಲ್ಲಿ ಮೊಸಳೆಯೊಂದು ಎಮ್ಮೆಯ ಮೇಲೆ ಏಕಾಏಕಿ ದಾಳಿ ಮಾಡಿದೆ. ದಾಳಿಯಲ್ಲಿ ಎಮ್ಮೆಯ ಕಾಲು ಕಟ್ ಆಗಿದ್ದು, ಮೊಸಳೆ ಬಾಯಿಂದ ತಪ್ಪಿಸಿಕೊಂಡು ಎಮ್ಮೆ ಜೀವ ಉಳಿಸಿಕೊಂಡಿದೆ. ತೀವ್ರವಾಗಿ ಗಾಯಗೊಂಡಿರುವ ಎಮ್ಮೆಯ ರಕ್ಷಣೆಗೆ ಯಾರೂ ಧಾವಿಸದ ಹಿನ್ನೆಲೆಯಲ್ಲಿ ಕಳೆದ ಎರಡು ದಿನಗಳಿಂದ ನದಿಯ ನೀರಿನಲ್ಲಿ ಎಮ್ಮೆ ಕುಳಿತಿದೆ.

    ಇನ್ನೂ ನದಿಯಲ್ಲಿ ಮೊಸಳೆ ಇರುವುದರಿಂದ ನದಿಗಿಳಿದು ಎಮ್ಮೆ ಕಾಪಾಡಲು ಸ್ಥಳೀಯರು ಹಿಂದೇಟು ಹಾಕುತ್ತಿದ್ದಾರೆ. ಎರಡು ದಿನವಾದರೂ ಎಮ್ಮೆ ಮಾಲಿಕ ಪತ್ತೆಯಾಗಿಲ್ಲ. ವಿಷಯ ತಿಳಿದಿದ್ದರೂ ಇನ್ನೂ ಸ್ಥಳಕ್ಕೆ ಧಾವಿಸಿದ ಪಶು ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.