Tag: ಕಾಲೇಜು ಶಿಕ್ಷಣ ಇಲಾಖೆ

  • ಅತಿಥಿ ಉಪನ್ಯಾಸಕ ಹುದ್ದೆಗೆ ಅರ್ಜಿಗಳ ಮಹಾಪೂರ

    ಅತಿಥಿ ಉಪನ್ಯಾಸಕ ಹುದ್ದೆಗೆ ಅರ್ಜಿಗಳ ಮಹಾಪೂರ

    ಬೆಂಗಳೂರು: 2021-22ನೇ ಶೈಕ್ಷಣಿಕ ಸಾಲಿಗೆ ಅನ್ವಯವಾಗುವಂತೆ ರಾಜ್ಯದಲ್ಲಿ ಆರಂಭಿಸಿರುವ ಅತಿಥಿ ಉಪನ್ಯಾಸಕರ ನೇಮಕ ಪ್ರಕ್ರಿಯೆಗೆ ಭಾರೀ ಸ್ಪಂದನ ವ್ಯಕ್ತವಾಗಿದೆ.

    ಗುರುವಾರದವರೆಗೆ 30 ಸಾವಿರಕ್ಕೂ ಹೆಚ್ಚು ಅರ್ಹ ಅಭ್ಯರ್ಥಿಗಳು ಆನ್-ಲೈನ್ ಮೂಲಕ ಅರ್ಜಿ ಹಾಕಿಕೊಂಡಿದ್ದಾರೆ ಎಂದು ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್ ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ರಾಜ್ಯ ಸರ್ಕಾರವು ಇತ್ತೀಚೆಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಬಳವನ್ನು ಎರಡೂವರೆ ಪಟ್ಟಿಗಿಂತ ಹೆಚ್ಚು ಏರಿಸಿದೆ. ಇದು ಅರ್ಹ ಅಭ್ಯರ್ಥಿಗಳಲ್ಲಿ ಸಕಾರಾತ್ಮಕ ಪರಿಣಾಮವನ್ನು ಉಂಟುಮಾಡಿದೆ ಎನ್ನುವುದಕ್ಕೆ ಇಷ್ಟೊಂದು ಪ್ರಮಾಣದಲ್ಲಿ ಅರ್ಜಿಗಳು ಬಂದಿರುವುದೇ ಸಾಕ್ಷಿ ಎಂದಿದ್ದಾರೆ. ಇದನ್ನೂ ಓದಿ: ಅತಿಥಿ ಉಪನ್ಯಾಸಕರಿಗೆ ಸಿಹಿ ಸುದ್ದಿ- ವೇತನ 11 ಸಾವಿರದಿಂದ 28 ಸಾವಿರಕ್ಕೆ ಹೆಚ್ಚಳ

    ಅಲ್ಲದೆ, ಅರ್ಜಿ ಹಾಕಿಕೊಳ್ಳಲು ಶುಕ್ರವಾರ ಮಧ್ಯರಾತ್ರಿ 12 ಗಂಟೆಯವರೆಗೂ ಅವಕಾಶವಿದೆ. ಇದುವರೆಗೂ ಅರ್ಜಿ ಹಾಕದೆ ಇರುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಇಂಥವರು https://dec.karnataka/gov.in ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: 1200 ಕೋಟಿ ರೂ. ವೆಚ್ಚದ ಶಿರಾಡಿ ಘಾಟ್ ಚತುಷ್ಪಥ ರಸ್ತೆಗೆ ಕೇಂದ್ರ ಅನುಮೋದನೆ

    ಸರ್ಕಾರವು ಕಳೆದ ವಾರ ಅತಿಥಿ ಉಪನ್ಯಾಸಕರ ವೇತನವನ್ನು ಗರಿಷ್ಠ 32 ಸಾವಿರ ರೂ.ವರೆಗೂ ಹೆಚ್ಚಳ ಮಾಡಿ ಆದೇಶ ಹೊರಡಿಸಿರುವುದನ್ನು ಇಲ್ಲಿ ನೆನೆಯಬಹುದು.

  • ಡಿಗ್ರಿ ಕಾಲೇಜ್ ಪ್ರಾರಂಭ ಸಮಯ ಬದಲಾವಣೆ ಮಾಡಿದ ಇಲಾಖೆ

    ಡಿಗ್ರಿ ಕಾಲೇಜ್ ಪ್ರಾರಂಭ ಸಮಯ ಬದಲಾವಣೆ ಮಾಡಿದ ಇಲಾಖೆ

    ಬೆಂಗಳೂರು: ಪದವಿ ತರಗತಿಗಳು 8 ಗಂಟೆಯ ಬದಲು 9 ಗಂಟೆಯಿಂದ ಪ್ರಾರಂಭವಾಗಬೇಕು ಎಂದು ಇದೀಗ ಕಾಲೇಜು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಈ ನಿಯಮ ಆಗಸ್ಟ್ 1 ರಿಂದ ಜಾರಿಗೆ ಬರಲಿದೆ.

    ಕಳೆದ ಕೆಲವು ದಿನಗಳ ಹಿಂದೆ ಪದವಿ ತರಗತಿಗಳು ಬೆಳಗ್ಗೆ 8 ಗಂಟೆಯಿಂದ ಪ್ರಾರಂಭವಾಗಬೇಕು ಎಂದು ಇಲಾಖೆ ಅದೇಶ ಹೊರಡಿಸಿತ್ತು. ಆದ್ರೆ ಇಲಾಖೆಯ ಆದೇಶಕ್ಕೆ ವಿದ್ಯಾರ್ಥಿಗಳ ಹಾಗೂ ಉಪನ್ಯಾಸಕರ ತೀವ್ರ ವಿರೋಧ ವ್ಯಕ್ತವಾಗಿತ್ತು.

    ವಿರೋಧ ಹೆಚ್ಚಾದ ಹಿನ್ನೆಲೆಯಲ್ಲಿ ಬೆಳಗ್ಗೆ 8 ಗಂಟೆಯ ಬದಲಾಗಿ ಒಂದು ಗಂಟೆ ತಡವಾಗಿ ಅಂದರೆ ಬೆಳಗ್ಗೆ 9 ಗಂಟೆಗೆ ಕಾಲೇಜ್ ಓಪನ್ ಮಾಡಲು ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಅಜಯ್ ನಾಗ್ ಭೂಷಣ್ ಆದೇಶ ಹೊರಡಿಸಿದ್ದಾರೆ. ಅಲ್ಲದೇ ಈ ಆದೇಶವನ್ನು ಆಗಸ್ಟ್ 1 ರಿಂದ ಹೊಸ ಆದೇಶ ಪಾಲನೆ ಮಾಡಲು ಸೂಚಿಸಿದ್ದಾರೆ.