Tag: ಕಾಲೇಜ್

  • ಲಸಿಕೀಕರಣ ಮುಗಿಯುತ್ತಿದ್ದಂತೆ ಕಾಲೇಜು ಆರಂಭ ಕುರಿತು ನಿರ್ಧಾರ: ಡಿಸಿಎಂ

    ಲಸಿಕೀಕರಣ ಮುಗಿಯುತ್ತಿದ್ದಂತೆ ಕಾಲೇಜು ಆರಂಭ ಕುರಿತು ನಿರ್ಧಾರ: ಡಿಸಿಎಂ

    ಬೆಂಗಳೂರು: ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳ ವ್ಯಾಪ್ತಿಯಲ್ಲಿ ವಿದ್ಯಾರ್ಥಿಗಳು ಮತ್ತು ಶೈಕ್ಷಣಿಕ ಸಿಬ್ಬಂದಿಯ ಲಸಿಕೀಕರಣ ಕಾರ್ಯಕ್ರಮವನ್ನು ಚುರುಕುಗೊಳಿಸಬೇಕು. ಸಾಧ್ಯವಾದಷ್ಟು ಇದೇ 7ರೊಳಗೆ ಮುಗಿಸಲು ಆದ್ಯತೆ ನೀಡಬೇಕು ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಎಲ್ಲ ವಿವಿಗಳ ಕುಲಪತಿಗಳಿಗೆ ನಿರ್ದೇಶನ ನೀಡಿದರು.

    ಕೋವಿಡ್ ಲಸಿಕೆಯನ್ನು ಹೆಚ್ಚು ತ್ವರಿತವಾಗಿ ಕೊಡಿಸುವ ಸಂಬಂಧ ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳ ಕುಲಪತಿಗಳ ಜತೆ ಗುರುವಾರ ವೀಡಿಯೋ ಸಂವಾದ ನಡೆಸಿದ ನಂತರ ಅವರು ಸುದ್ದಿಗಾರರ ಜತೆ ಮಾತನಾಡಿದರು. ರಾಜ್ಯದಲ್ಲಿ ಇನ್ನೆರಡು ತಿಂಗಳ ಒಳಗಾಗಿ ಒಟ್ಟು ಜನಸಂಖ್ಯೆಯಲ್ಲಿ ಶೇ.50ರಷ್ಟು ಜನರಿಗೆ ಲಸಿಕೆ ಲಭ್ಯವಾಗಲಿದೆ. ಈ ನಿಟ್ಟಿನಲ್ಲಿ ಭೌತಿಕ ತರಗತಿಗಳು ಆರಂಭಕ್ಕೆ ಮುನ್ನವೇ ಎಲ್ಲ ವಿದ್ಯಾರ್ಥಿಗಳಿಗೆ ಲಸಿಕೆ ನೀಡಬೇಕು ಹಾಗೂ ನಿತ್ಯವೂ ಪೂರೈಕೆಯಾಗುವ ಲಸಿಕೆಯನ್ನು ಸಂಬಂಧಿಸಿದ ಅಧಿಕಾರಿಗಳ ಜತೆ ಸಮನ್ವಯ ಸಾಧಿಸಿಕೊಂಡು ಪಡೆದುಕೊಳ್ಳಬೇಕು ಎಂದರು.

    ಯಾವುದೇ ಕಾರಣಕ್ಕೂ ಶೈಕ್ಷಣಿಕ ಚಟುವಟಿಕೆ ನಿಲ್ಲಬಾರದು, ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆ ಆಗಬಾರದು. ಈ ಹಿನ್ನೆಲೆಯಲ್ಲಿ ಲಸಿಕೆಯೇ ಪರಿಹಾರ. ಇದನ್ನು ಎಲ್ಲ ಕುಲಪತಿಗಳು ಗಂಭೀರವಾಗಿ ಪರಿಗಣಿಸಬೇಕು ಎಂದು ಡಿಸಿಎಂ ಹೇಳಿದರು. ಎಲ್ಲ ವಿವಿಗಳಲ್ಲಿ ಲಸಿಕೀಕರಣ ಮುಗಿದ ನಂತರ ನೇರ ತರಗತಿಗಳನ್ನು ಆರಂಭ ಮಾಡುವ ಕುರಿತು ನಿರ್ದರಿಸಲಾಗುವುದು., ಈಗ ನಡೆಯುತ್ತಿರುವ ಆನ್‍ಲೈನ್ ತರಗತಿಗಳು ಅಬಾಧಿತ ಎಂದರು.

    ಪದವಿ ವಿದ್ಯಾರ್ಥಿಗಳಿಗೆ ಹೆಲ್ಪ್ ಲೈನ್
    ವಿದ್ಯಾರ್ಥಿಗಳಿಗೆ ಈಗಾಗಲೇ ಡಿಜಿಟಲ್ ವೇದಿಕೆಗಳ ಮೂಲಕ ಎಲ್ಲ ಮಾಹಿತಿ ಸಿಗುತ್ತಿದ್ದಾಗ್ಯೂ ಅವರ ಮತ್ತಷ್ಟು ಅನುಕೂಲಕ್ಕಾಗಿ ಹೆಲ್ಪ್ ಲೈನ್ ವ್ಯವಸ್ಥೆಯನ್ನು ರೂಪಿಸಲಾಗುವುದು ಎಂದು ಈ ಸಂದರ್ಭದಲ್ಲಿ ಡಿಸಿಎಂ ಹೇಳಿದರು. ಇದನ್ನೂ ಓದಿ: ಗಾಜಿಪುರ ಗಡಿಯಲ್ಲಿ ಧರಣಿ ನಿರತ ರೈತರು, ಬಿಜೆಪಿ ಕಾರ್ಯಕರ್ತ ನಡುವೆ ಸಂಘರ್ಷ

    ಹೆಲ್ಪ್‍ಲೈನ್ ವ್ಯವಸ್ಥೆಯನ್ನು ಆಯಾ ವಿವಿ ವ್ಯಾಪ್ತಿಯಲ್ಲಿ ಮಾಡಿಕೊಳ್ಳಬೇಕು. ಅದಕ್ಕೆ ಬೇಕಾದ ಸಂಪೂರ್ಣ ಸಹಕಾರವನ್ನು ಸರ್ಕಾರ ನೀಡುತ್ತದೆ. ಕಾಲ್ ಸೆಂಟರ್ ಮಾಡುವುದರಿಂದ ವಿದ್ಯಾರ್ಥಿಗಳಿಗೆ ಸಾಕಷ್ಟು ಸಹಾಯ ಆಗಲಿದೆ. ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಆಗುತ್ತಿರುವ ಹಿನ್ನೆಲೆಯಲ್ಲಿ ಇದೊಂದು ಅತ್ಯುತ್ತಮ ಉಪಕ್ರಮ ಆಗಲಿದೆ ಎಂದು ಡಾ.ಅಶ್ವತ್ಥನಾರಾಯಣ ತಿಳಿಸಿದರು. ಇದನ್ನೂ ಓದಿ: ಲಸಿಕೆ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡಬಾರದು: ಸುಧಾಕರ್ ಕಿಡಿ

    ಉನ್ನತ ಶಿಕ್ಷಣ ಪರಿಷತ್ ಉಪಾಧ್ಯಕ್ಷ ಡಾ.ತಿಮ್ಮೇಗೌಡ, ಕಾರ್ಯನಿರ್ವಾಹಕ ನಿರ್ದೇಶಕ ಗೋಪಾಲಕೃಷ್ಣ ಜೋಶಿ, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್, ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಕುಲಪತಿ ಪ್ರೊ.ಕರಿಸಿದ್ದಪ್ಪ ಸೇರಿದಂತೆ ಮೈಸೂರು, ಮಂಗಳೂರು, ಬೆಳಗಾವಿ, ಶಿವಮೊಗ್ಗ ಮುಂತಾದ ವಿವಿಗಳ ಕುಲಪತಿಗಳು ಸಭೆಯಲ್ಲಿ ಭಾಗಿಯಾಗಿದ್ದರು. ಇದನ್ನೂ ಓದಿ: ಬಿಸಿಯೂಟ ಆಹಾರ ಧಾನ್ಯಕ್ಕೆ ಕಳ್ಳರ ಕಾಟ – ಶಾಲೆಯಲ್ಲಿಯೇ ವಾಸ್ತವ್ಯ ಮಾಡಿ ರೇಷನ್ ಕಾಪಾಡಿದ ಹೆಡ್ ಮಾಸ್ಟರ್

  • ಕ್ಯಾಂಪಸ್‍ನಲ್ಲಿ ಯುವತಿಯ ಪ್ರಪೋಸ್- ಕಾಲೇಜಿನಿಂದ ವಿದ್ಯಾರ್ಥಿಗಳು ಅಮಾನತು

    ಕ್ಯಾಂಪಸ್‍ನಲ್ಲಿ ಯುವತಿಯ ಪ್ರಪೋಸ್- ಕಾಲೇಜಿನಿಂದ ವಿದ್ಯಾರ್ಥಿಗಳು ಅಮಾನತು

    – ಪ್ರಪೋಸ್ ಒಪ್ಪಿ ಗೆಳತಿಯನ್ನ ತಬ್ಬಿಕೊಂಡ ಯುವಕ

    ಇಸ್ಲಾಮಾಬಾದ್: ಕಾಲೇಜು ಆವರಣದಲ್ಲಿ ಪ್ರಪೋಸ್ ಮಾಡಿ ತಬ್ಬಿಕೊಂಡ ಇಬ್ಬರು ವಿದ್ಯಾರ್ಥಿಗಳನ್ನು ಪಾಕಿಸ್ತಾನದ ಲಾಹೋರ್ ವಿಶ್ವವಿದ್ಯಾನಿಲಯವು ಹೊರಹಾಕಿದೆ. ಈ ದೃಶ್ಯವು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ಬಳಿಕ ಲಾಹೋರ್ ವಿಶ್ವವಿದ್ಯಾಲಯದ ವಿಶೇಷ ಶಿಸ್ತು ಸಮಿತಿಯು ಇಬ್ಬರನ್ನು ಶುಕ್ರವಾರ ಸಭೆ ನಡೆಸಲು ಕರೆದಿತ್ತು. ಆದರೆ ಸಭೆಗೆ ಹಾಜರಾಗದ ಯುವಕ ಯುವತಿಯನ್ನು ಕಾಲೇಜಿನಿಂದ ಉಚ್ಛಾಟಿಸಲಾಗಿದೆ.

    ಕಾಲೇಜಿನ ಆವರಣದಲ್ಲಿ ಸಾಮಾನ್ಯ ಶಿಸ್ತು, ನೀತಿ, ನಿಯಮ, ನಿಬಂಧನೆಗಳನ್ನು ಉಲ್ಲಂಘಿಸಿದ್ದಕ್ಕಾಗಿ ಮತ್ತು ನೀತಿ ಸಂಹಿತೆಯ ಗಂಭೀರ ಉಲ್ಲಂಘನೆಗಾಗಿ ಇಬ್ಬರು ವಿದ್ಯಾರ್ಥಿಗಳನ್ನು ಹೊರಹಾಕಲು ಸಮಿತಿ ನಿರ್ಧರಿಸಿದೆ. ಅಲ್ಲದೆ ಸೆಕ್ಷನ್ 16ರ ಪ್ರಕಾರ ಲಾಹೋರ್ ವಿಶ್ವವಿದ್ಯಾಲಯ ಮತ್ತು ಅದರ ಎಲ್ಲಾ ಉಪ ಕ್ಯಾಂಪಸ್‍ಗಳಿಗೂ ವಿದ್ಯಾರ್ಥಿಗಳ ಪ್ರವೇಶವನ್ನು ನಿಷೇಧಿಸಿದೆ.

    ಕಳೆದ ಗುರುವಾರ ಟ್ವಿಟ್ಟರ್‍ನಲ್ಲಿ ಶೇರ್ ಆದ ಈ ಪ್ರಪೋಸ್ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಟಾಪ್ ಟ್ರೆಂಡ್‍ಗಳ ವೀಡಿಯೋ ಮಧ್ಯೆ ಧೂಳ್ ಎಬ್ಬಿಸುತ್ತಿದ್ದು, ವೀಡಿಯೋದಲ್ಲಿ ಯುವತಿ ಹೂಗುಚ್ಛವನ್ನು ಕೈನಲ್ಲಿ ಹಿಡಿದು ಮಂಡಿಯೂರಿ ತನ್ನ ಗೆಳಯಬಿಗೆ ನೀಡಿ ಪ್ರಪೋಸ್ ಮಾಡುತ್ತಾಳೆ. ಹೂ ಗುಚ್ಛವನ್ನು ಸ್ವೀಕರಿಸಿದ ಯುವಕ ಯುವತಿಯನ್ನು ಗಟ್ಟಿಯಾಗಿ ತಬ್ಬಿಕೊಳ್ಳುತ್ತಾನೆ. ಈ ವೇಳೆ ಸ್ಥಳದಲ್ಲಿದ್ದ ಇತರೆ ವಿದ್ಯಾರ್ಥಿಗಳು ಜೋಡಿಯನ್ನು ಹುರಿದಂಬಿಸುವುದನ್ನು ಕಾಣಬಹುದಾಗಿದೆ.

    ಸದ್ಯ ಈ ಪ್ರೇಮಿಗಳನ್ನು ಕಾಲೇಜಿನಿಂದ ಅಮಾನತುಗೊಳಿಸಿದಕ್ಕೆ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರೊಬ್ಬರು, ದಿ ಗ್ರೇಟ್ ಲೆಜೆಂಡ್ ಅಮಿತಾಬ್ ಬಚ್ಚನ್ ಮೊಹಬ್ಬತೇನ್ ಸಿನಿಮಾದಲ್ಲಿ ಪ್ರೀತಿಗೆ ವಿರೋಧ ವ್ಯಕ್ತಪಡಿಸುವ ಪ್ರಾಂಶುಪಾಲರಾಗಿ ಅಭಿನಯಿಸಿದ್ದರು. ಅದೇ ಮಾದರಿ ಲಾಹೋರ್ ವಿಶ್ವವಿದ್ಯಾನಿಲಯದ ಪ್ರಾಂಶುಪಾಲರು ಕೂಡ ತಮ್ಮನ್ನು ಪ್ರಸ್ತುತ ಪಡಿಸಿಕೊಳ್ಳುತ್ತಿದ್ದಾರೆ ಎಂದು ಕಮೆಂಟ್ ಮಾಡಿದ್ದಾರೆ. ಮತ್ತೊಬ್ಬರು ಬಾಲಿವುಡ್‍ನ 3 ಈಡಿಯಟ್ಸ್ ಸಿನಿಮಾದಲ್ಲಿ ಕಟ್ಟು ನಿಟ್ಟಿನ ಪ್ರಿನ್ಸಿಪಾಲ್ ಆಗಿ ಅಭಿನಯಿಸಿದ್ದ ಬೊಮನ್ ಇರಾನಿ ರೀತಿ ವರ್ತಿಸುತ್ತಿದ್ದಾರೆಂದು ಕಿಡಿಕಾರಿದ್ದಾರೆ.

    ಪಾಕಿಸ್ತಾನದ ಪ್ರಧಾನಮಂತ್ರಿ ಬೆನಜೀರ್ ಭುಟ್ಟೋ ಅವರ ಪುತ್ರಿ ಬಕ್ತಾವರ್ ಭುಟ್ಟೋ-ಜರ್ದಾರಿ ವಿಶ್ವವಿದ್ಯಾಲಯದ ಕ್ರಮ ಕುರಿತಂತೆ ವ್ಯಂಗ್ಯ ಮಾಡಿದ್ದಾರೆ. ಅಲ್ಲದೆ ಮಾಜಿ ಕ್ರಿಕೆಟಿಗ ವಾಸಿಮ್ ಅಕ್ರಂರವರ ಪತ್ನಿ ಶನಿಯೇರಾ ಅಕ್ರಂ, ನಿಮಗೆ ಬೇಕಾದ ನಿಯಮಗಳನ್ನು ಜಾರಿಗೊಳಿಸಿ, ಆದರೆ ನೀವು ಪ್ರೀತಿಯನ್ನು ಹೊರಹಾಕಲು ಸಾಧ್ಯವಿಲ್ಲ. ಪ್ರೀತಿ ನಮ್ಮ ಹೃದಯದೊಳಗಿರುತ್ತದೆ. ಯುವಕರಾಗಿದ್ದ ಬರುವ ಒಂದು ಭಾಗವಾಗಿದ್ದು ಜೀವನದ ಮೌಲ್ಯವನ್ನು ತಿಳಿಸುತ್ತದೆ. ನೀವು ಕಾಲೇಜಿನಲ್ಲಿ ಕಲಿಯದೇ ಇರುವ ವಿಚಾರವನ್ನು ಪ್ರೀತಿ ಕಲಿಸುತ್ತದೆ ಎಂದು ಕಮೆಂಟ್ ಮಾಡಿದ್ದಾರೆ.

    ಒಟ್ಟಾರೆ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಟ್ರೋಲ್ ಆಗುತ್ತಿದ್ದು, ಕಾಲೇಜಿನ ನಿಯಮದ ವಿರುದ್ಧ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

  • ಮೆಡಿಕಲ್ ಕಾಲೇಜಿನ ಆವರಣದಲ್ಲಿ ಓಡಾಡಿದ ಗಜರಾಜ – ಅರಣ್ಯಾಧಿಕಾರಿಗಳಿಂದ ಆನೆಯ ರಕ್ಷಣೆ

    ಮೆಡಿಕಲ್ ಕಾಲೇಜಿನ ಆವರಣದಲ್ಲಿ ಓಡಾಡಿದ ಗಜರಾಜ – ಅರಣ್ಯಾಧಿಕಾರಿಗಳಿಂದ ಆನೆಯ ರಕ್ಷಣೆ

    ಕೋಲ್ಕತ್ತಾ: ಮೇಡಿಕಲ್ ಕಾಲೇಜಿನ ಆವರಣದಲ್ಲಿ ಓಡಾಡುತ್ತಿದ್ದ ಆನೆಯನ್ನು ಅರಣ್ಯಾಧಿಕಾರಿಗಳು ರಕ್ಷಣೆ ಮಾಡುತ್ತಿರುವ ವೀಡಿಯೋ ವೈರಲ್ ಆಗಿದೆ.

    ಪಶ್ಚಿಮ ಬಂಗಾಳದ ಮಿಡ್ನಾಪುರದ ಮೆಡಿಕಲ್ ಕಾಲೇಜು ಮತ್ತು ಹಾಸ್ಟೆಲ್ ಆವರಣದಲ್ಲಿ ರಾತ್ರಿ ಕಾಡಾನೆ ಆವರಣದ ತುಂಬಾ ಓಡಾಡಿದೆ. ವಿದ್ಯಾರ್ಥಿಗಳು ಪೊಲೀಸರಿಗೆ ಮತ್ತು ಅರಣ್ಯ ಇಲಾಖೆಗೆ ಮಾಹಿತಿಯನ್ನೂ ನೀಡಿದ್ದರು. ಈ ವಿಚಾರ ತಿಳಿದ ಹಲವರು ಆನೆಯನ್ನು ನೋಡಲು ಸಾಕಷ್ಟು ಸಂಖ್ಯೆಯಲ್ಲಿ ಜನ ಕೂಡಾ ಕಾಲೇಜು ಆವರಣದಲ್ಲಿ ಜಮಾಯಿಸಿದ್ದರು. ಆನೆಯನ್ನು ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಸದ್ಯ ಈ ಕಾರ್ಯಾಚರಣೆಯ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

    ಆನೆಯನ್ನು ಕ್ರೇನ್ ಮೂಲಕ ಟ್ರಕ್‍ಗೆ ತರುವ ದೃಶ್ಯವಿದೆ. ಹೀಗೆ ಅತ್ಯಂತ ಸುರಕ್ಷಿತವಾಗಿ ಆನೆಯನ್ನು ಹಿಡಿದ ಅರಣ್ಯ ಸಿಬ್ಬಂದಿ ಆನೆಯನ್ನು ಅರಣ್ಯಕ್ಕೆ ಕರೆತಂದಿದ್ದಾರೆ. ಇಲ್ಲಿ ಆನೆಗೆ ಸೂಕ್ತ ಆರೈಕೆ ಮಾಡಿ ಬಳಿಕ ಕಾಡಿಗೆ ಬಿಡಲು ನಿರ್ಧರಿಸಲಾಗಿದೆ ಎಂದು ಬರೆದು ಕೊಂಡು ಅರಣ್ಯ ಇಲಾಖೆ ಸಿಬ್ಬಂದಿಯ ಕಾರ್ಯಾಚರಣೆಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. ಅರಣ್ಯ ಅಧಿಕಾರಿ ರಮೇಶ್ ಪಾಂಡೆ ಅವರು ಈ ವಿಡಿಯೋವನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

    ನಗರ ಪ್ರದೇಶಗಳಲ್ಲಿ ಆನೆಗಳನ್ನು ರಕ್ಷಿಸುವುದು ನಿಜವಾಗಿಯೂ ಕಷ್ಟ ಮತ್ತು ಸವಾಲಿನ ಕೆಲಸ. ಪಶ್ಚಿಮ ಬಂಗಾಳದ ಮಿಡ್ನಾಪುರದ ಅರಣ್ಯ ಅಧಿಕಾರಿಗಳು ಉತ್ತಮ ಕೆಲಸ ಮಾಡಿದ್ದಾರೆ. ಆನೆಯನ್ನು ಮರಳಿ ಕಾಡಿಗೆ ಬಿಡುಗಡೆ ಮಾಡಿದ ನಂತರ ಅದರ ಮೇಲ್ವಿಚಾರಣೆ ನಡೆಸಲಾಗುತ್ತಿದೆ ಎಂದು ರಮೇಶ್ ಪಾಂಡೆ ಹೇಳಿದ್ದಾರೆ.

  • ಸಂಕ್ರಾಂತಿ ನಂತರ ಮೊದಲ, ದ್ವಿತೀಯ ವರ್ಷದ ಪದವಿ ಕಾಲೇಜು ಆರಂಭ

    ಸಂಕ್ರಾಂತಿ ನಂತರ ಮೊದಲ, ದ್ವಿತೀಯ ವರ್ಷದ ಪದವಿ ಕಾಲೇಜು ಆರಂಭ

    – ಎಲ್ಲ ವಿವಿ ಕುಲಪತಿಗಳ ಜತೆ ಡಿಸಿಎಂ ಸಮಾಲೋಚನೆ
    – ಸ್ನಾತಕೋತ್ತರ, ಡಿಪ್ಲೊಮೋ, ಎಂಜಿನಿಯರಿಂಗ್ ಕ್ಲಾಸ್ ಸ್ಟಾರ್ಟ್

    ಬೆಂಗಳೂರು: ಈಗಾಗಲೇ ಪದವಿ, ಸ್ನಾತಕೋತ್ತರ, ಡಿಪ್ಲೊಮೋ ಮತ್ತು ಎಂಜಿನಿಯರಿಂಗ್ ತರಗತಿಗಳ ಅಂತಿಮ ವರ್ಷದ/ಸೆಮಿಸ್ಟರ್ ನ ಆಫ್‍ಲೈನ್ ತರಗತಿಗಳು ಯಶಸ್ವಿಯಾಗಿ ನಡೆಯುತ್ತಿರುವ ಬೆನ್ನಲ್ಲೇ ಇದೇ ತರಗತಿಗಳ ಪ್ರಥಮ- ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಆಫ್‍ಲೈನ್ ತರಗತಿಗಳನ್ನು ಸಂಕ್ರಾಂತಿ ಹಬ್ಬದ ನಂತರ ಆರಂಭಿಸಲಾಗುವುದು. ಈ ಸಂಬಂಧ ವರದಿ ನೀಡುವಂತೆ ಕುಲಪತಿಗಳಿಗೆ ಸೂಚಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ್ ಪ್ರಕಟಿಸಿದರು.

    ಬೆಂಗಳೂರಿನಲ್ಲಿ ಶುಕ್ರವಾರ ಸರ್ಕಾರಿ- ಖಾಸಗಿ ವಲಯದ ಎಲ್ಲ ವಿಶ್ವವಿದ್ಯಾಲಯಗಳ ಕುಲಪತಿಗಳು, ಉನ್ನತ ಶಿಕ್ಷಣ ಸೇರಿ ಸಂಬಂಧಿತ ಎಲ್ಲ ಇಲಾಖೆಗಳ ಅಧಿಕಾರಿಗಳ ಜತೆ ವಿಡಿಯೋ ಸಂವಾದ ನಡೆಸಿದ ಉಪ ಮುಖ್ಯಮಂತ್ರಿಗಳು ಈ ಮಾಹಿತಿ ನೀಡಿದರು. ಸಭೆಯಲ್ಲಿ ಪಾಲ್ಗೊಂಡಿದ್ದ ಎಲ್ಲ ಕುಲಪತಿಗಳು ನೇರ ತರಗತಿಗಳನ್ನು ಆರಂಭಿಸುವಂತೆ ಸರ್ಕಾರಕ್ಕೆ ಸಲಹೆ ನೀಡಿದರು. ಹೀಗಾಗಿ ಅದಕ್ಕೆ ಸಂಬಂಧಿಸಿದ ವರದಿಯನ್ನು ಕೂಡಲೇ ಕಳಿಸುವಂತೆ ಕೋರಲಾಗಿದೆ. ನಂತರ ಮೊದಲ ಮತ್ತು ದ್ವಿತೀಯ ವರ್ಷದ ನೇರ ತರಗತಿಗಳನ್ನು ಸಂಕ್ರಾಂತಿ ಹಬ್ಬದ ನಂತರ ಯಾವ ದಿನದಿಂದ ಆರಂಭಿಸಬೇಕು ಎಂಬ ಬಗ್ಗೆ ಸ್ಪಷ್ಟ ನಿರ್ಧಾರ ಕೈಗೊಳ್ಳಲಾಗುವುದು ಎಂದು ಡಾ.ಅಶ್ವತ್ಥನಾರಾಯಣ ಹೇಳಿದರು. ಈಗಾಗಲೇ ಅಂತಿಮ ವರ್ಷದ ವಿದ್ಯಾರ್ಥಿಗಳ ನೇರ ತರಗತಿಗಳು ಯಶಸ್ವಿಯಾಗಿ ನಡೆಯುತ್ತಿವೆ. ಆ ಯಶಸ್ಸಿನ ಹಿನ್ನೆಲೆಯಲ್ಲಿ ಉಳಿದ ತರಗತಿಗಳನ್ನು ಶುರು ಮಾಡಲಾಗುವುದು. ಯುಜಿಸಿ ಮತ್ತು ಕೋವಿಡ್ ಮಾರ್ಗಸೂಚಿ ಪ್ರಕಾರ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅವರು ಮಾಹಿತಿ ನೀಡಿದರು.

    ಪರೀಕ್ಷೆ ಮತ್ತು ಮುಂದಿನ ಶೈಕ್ಷಣಿಕ ವರ್ಷ: ಮುಖ್ಯವಾಗಿ ಈ ಸಭೆಯಲ್ಲಿ 2021-22ರ ಶೈಕ್ಷಣಿಕ ವರ್ಷವನ್ನು ಯಾವಾಗಿನಿಂದ ಆರಂಭಿಸಬೇಕು ಎಂಬ ಬಗ್ಗೆ ಮಹತ್ವದ ಚರ್ಚೆ ನಡೆಯಿತು. ಮೇ ತಿಂಗಳ ಎರಡನೇ ವಾರದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆಯನ್ನು ಈಗಾಗಲೇ ಘೋಷಣೆ ಮಾಡಲಾಗಿದೆ. ಇದನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಉನ್ನತ ಶಿಕ್ಷಣದ ಶೈಕ್ಷಣಿಕ ವೇಳಾಪಟ್ಟಿಯನ್ನು ರೂಪಿಸಲಾಗುವುದು ಎಂದು ಡಿಸಿಎಂ ತಿಳಿಸಿದರು.

    ಹಾಗೆಯೇ, ಆನ್‍ಲೈನ್ ಪರೀಕ್ಷೆಗಳಿಗಿಂತ ಪೆನ್ ಮತ್ತು ಪೇಪರ್ ಆಧಾರಿತ ಆಫ್‍ಲೈನ್ ಪರೀಕ್ಷೆಯೇ ಉತ್ತಮ ಎಂದು ವಿಟಿಸಿಯು ಕುಲಪತಿ ಪ್ರೊ.ಕರಿಸಿದ್ದಪ್ಪ ಸೇರಿದಂತೆ ಎಲ್ಲ ಕುಲಪತಿ, ಕುಲ ಸಚಿವರು ಸಲಹೆ ಮಾಡಿದರು. ಇದನ್ನು ಸರ್ಕಾರ ಗಂಭೀರವಾಗಿ ಪರಿಶೀಲಿಸಲಿದೆ. ಯುಜಿಸಿ ನಿಯಮದಂತೆ ಮಾರ್ಚ್ ನಲ್ಲಿ ಪರೀಕ್ಷೆ ಮುಗಿಯಬೇಕಾಗುತ್ತದೆ. ಆದರೆ ಇನ್ನು ಹಲವಾರು ವಿವಿಗಳ ವ್ಯಾಪ್ತಿಯಲ್ಲಿ ಪಾಠಗಳು ಮುಗಿಯದ ಕಾರಣ ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ಪರೀಕ್ಷೆ ನಡೆಸುವ ಬಗ್ಗೆ ಚಿಂತಿಸಲಾಗುತ್ತಿದೆ, ಶೀಘ್ರವೇ ಈ ಬಗ್ಗೆ ಅಂತಿಮ ಮಾಹಿತಿ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿಗಳು ಹೇಳಿದರು.

    ಬಸ್ ಪಾಸ್ ಮತ್ತು ಹಾಸ್ಟೆಲ್ ಸೌಲಭ್ಯ: ವಿದ್ಯಾರ್ಥಿಗಳ ಬಸ್ ಪಾಸ್ ಬಗ್ಗೆ ಇರುವ ಗೊಂದಲದ ಬಗ್ಗೆ ಶೀಘ್ರದಲ್ಲಿಯೇ ಸಾರಿಗೆ ಸಚಿವರೂ ಆದ ಡಿಸಿಎಂ ಲಕ್ಷ್ಮಣ ಸವದಿ ಅವರ ಜತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು. ಹಳೆಯ ಪಾಸ್ ಇಟ್ಟುಕೊಂಡೇ ಓಡಾಡಬಹುದಾ? ಇಲ್ಲವಾ? ಎಂಬ ಬಗ್ಗೆ ಮಾಹಿತಿ ನೀಡಲಾಗುವುದು ಎಂದ ಡಿಸಿಎಂ, ಉಳಿದಂತೆ ತರಗತಿಗಳು ಆರಂಭವಾದ ಮೇಲೆ ಪರಿಶಿಷ್ಟ ಜಾತಿ ಮತ್ತು ವರ್ಗದ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ಒದಗಿಸಲಾಗುವುದು. ಈ ಬಗ್ಗೆ ಸಮಾಜ ಕಲ್ಯಾಣ ಇಲಾಖೆ ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದರು.

    ಈ ಆನ್‍ಲೈನ್ ಸಭೆಯಲ್ಲಿ ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕುಮಾರ್ ನಾಯಕ್, ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತ ಪ್ರದೀಪ್, ಉನ್ನತ ಶಿಕ್ಷಣ ಪರಿಷತ್ ಉಪಾಧ್ಯಕ್ಷ ಪ್ರೊ.ತಿಮ್ಮೇಗೌಡ ಸೇರಿದಂತೆ ರಾಜ್ಯದ ಎಲ್ಲ ವಿವಿಗಳ ಕುಲಪತಿ, ಕುಲ ಸಚಿವರು ಪಾಲ್ಗೊಂಡಿದ್ದರು.

  • ಹೊಸ ವರ್ಷದ ಜೊತೆ ಶೈಕ್ಷಣಿಕ ಚಟುವಟಿಕೆ ಪ್ರಾರಂಭ

    ಹೊಸ ವರ್ಷದ ಜೊತೆ ಶೈಕ್ಷಣಿಕ ಚಟುವಟಿಕೆ ಪ್ರಾರಂಭ

    ಬೆಂಗಳೂರು: ಹೊಸ ವರ್ಷದ ಜೊತೆ ಜೊತೆ ರಾಜ್ಯದಲ್ಲಿ ಶೈಕ್ಷಣಿಕ ಚಟುವಟಿಕೆ ಪ್ರಾರಂಭ ಆಗ್ತಿದೆ. ಬರೋಬ್ಬರಿ 8 ತಿಂಗಳ ಬಳಿಕ ನಾಳೆಯಿಂದ ಶಾಲೆ ಶುರುವಾಗಲಿದೆ. ನಾಳೆ 10ನೇ ತರಗತಿ ಹಾಗೂ ದ್ವಿತೀಯ ಪಿಯು ತರಗತಿಗಳು ಆರಂಭವಾಗಲಿವೆ. ಇದರ ಜೊತೆಗೆ 6ರಿಂದ 9ನೇ ತರಗತಿವರೆಗೆ ವಿದ್ಯಾಗಮ ಕ್ಲಾಸ್ ಕೂಡ ನಡೆಯಲಿದೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್, ತಜ್ಞರ ಸಮ್ಮತಿ ಮೇರೆಗೆ ಶಿಕ್ಷಣ ಇಲಾಖೆ ಸರ್ವ ಸನ್ನದ್ಧವಾಗಿದೆ. ಭಯ ಬೇಡ, ಬ್ರಿಟನ್ ಔಷಧಕ್ಕೂ ಕೋವಿಡ್ ಲಸಿಕೆಯೇ ಸಾಕು. ಶೀಘ್ರವೇ ಲಸಿಕೆಯೂ ಸಿಗಲಿದೆ. ಪೋಷಕರು ನಿರಾತಂಕವಾಗಿ ಮಕ್ಕಳನ್ನ ಶಾಲೆಗೆ ಕಳುಹಿಸಿ. 15 ದಿನಗಳ ನಂತರ ಉಳಿದ ತರಗತಿ ಪ್ರಾರಂಭಕ್ಕೆ ನಿರ್ಧಾರ ಮಾಡ್ತೀವಿ ಅಂತ ತಿಳಿಸಿದ್ರು. ಅಲ್ಲದೆ, ನಾಳೆ ಪಾಠ ಮಾಡಬೇಡಿ. 6 ತಿಂಗಳ ಭಾವನೆ ವ್ಯಕ್ತಪಡಿಸಲು ಮಕ್ಕಳಿಗೆ ಅವಕಾಶ ಕೊಡಿ, ಕೊರೊನಾ ವೈರಸ್ ಬಗ್ಗೆ ಮಕ್ಕಳಿಗೆ ಮಾರ್ಗದರ್ಶನ ನೀಡಿ ಅಂತ ಶಿಕ್ಷಕರಿಗೆ ಕಿವಿಮಾತು ಹೇಳಿದ್ದಾರೆ.

    ತರಗತಿಗೆ ಹಾಜರಾಗೋದು ಕಡ್ಡಾಯ ಅಲ್ಲ. ಪೋಷಕರ ಅನುಮತಿ ಪತ್ರವನ್ನು ವಿದ್ಯಾರ್ಥಿಗಳು ತರಲೇಬೇಕಿದೆ. ರಾಜ್ಯಾದ್ಯಂತ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲಾಗಿದೆ. ಕ್ಲಾಸ್ ಅಟೆಂಡ್ ಆಗೋ ಮಕ್ಕಳು ಮನೆಯಿಂದಲೇ ಊಟ, ನೀರಿನ ವ್ಯವಸ್ಥೆ ಮಾಡಿಕೊಳ್ಳಬೇಕಿದೆ. ಈ ಮಧ್ಯೆ ಮೇ 4ರಿಂದ ಜೂನ್ 10ರವರೆಗೆ ಸಿಬಿಎಸ್‍ಇ ಪರೀಕ್ಷೆ ನಡೆಯಲಿದೆ. ಜುಲೈ 15ಕ್ಕೆ ಫಲಿತಾಂಶ ಪ್ರಕಟವಾಗಲಿದೆ.

  • ವೈದ್ಯಕೀಯ ಅಧ್ಯಯನ ಪ್ರವೇಶಕ್ಕೆ 50 ಲಕ್ಷ ಲಂಚ ಪಡೆದಿದ್ದ ಡೀನ್ ಅರೆಸ್ಟ್

    ವೈದ್ಯಕೀಯ ಅಧ್ಯಯನ ಪ್ರವೇಶಕ್ಕೆ 50 ಲಕ್ಷ ಲಂಚ ಪಡೆದಿದ್ದ ಡೀನ್ ಅರೆಸ್ಟ್

    ಮುಂಬೈ: ಸ್ನಾತಕೋತ್ತರ ಕೋರ್ಸ್(ಡಾಕ್ಟರ್ ಆಫ್ ಮೆಡಿಸಿನ್) ಪ್ರವೇಶಕ್ಕಾಗಿ 50 ಲಕ್ಷ ರೂಪಾಯಿ ತೆಗೆದುಕೊಂಡಿದ್ದಕ್ಕಾಗಿ ಮುಂಬೈನ ಲೋಕಮಾನ್ಯ ತಿಲಕ್ ಮುನ್ಸಿಪಲ್ ಜನರಲ್ ಆಸ್ಪತ್ರೆಯ ಸಹಾಯಕ ಡೀನ್‍ನನ್ನು ಪೊಲೀಸರು ಬಂಧಿಸಿದ್ದಾರೆ.

    ಲಂಚ ಪಡೆದಿರುವ ಆರೋಪಿ ಸಿಯಾನ್ ಆಸ್ಪತ್ರೆಯ ಡೀನ್ ರಾಕೇಶ್ ವರ್ಮಾ( 54) ಎಂದು ಗುರುತಿಸಲಾಗಿದೆ. ಇವರ ವಿರುದ್ಧ ಆಲಿಶಾ ಅಬ್ದುಲ್ಲಾ ಶೇಖ್(28) ದೂರು ನೀಡಿದ್ದಾರೆ.

     

    ಆಲಿಶಾ ಅಬ್ದುಲ್ಲಾ ಶೇಖ್ ಅವರು 50 ಲಕ್ಷ ಮೊತ್ತದ ಹಣವನ್ನು ನೀಡಿದರೆ ಮಾತ್ರ ವೈದ್ಯಕೀಯ ಕೋರ್ಸ್‍ಗೆ ಪ್ರವೇಶ ಕೋಡುತ್ತೇನೆ ಎಂದು ರಾಕೇಶ್ ಹೇಳಿದ್ದರು. ಹೀಗಾಗಿ ಆಲಿಶಾ ಅವರ ತಂದೆ ವರ್ಮಾ ಅವರ ಬ್ಯಾಂಕ್ ಖಾತೆಗೆ 21 ಲಕ್ಷ ರೂಪಾಯಿ ಹಾಕಿದ್ದಾರೆ. ಆದರೆ ಆಲಿಶಾ ಅವರಿಗೆ ಕೋರ್ಸ್‍ಗೆ ಪ್ರವೇಶವನ್ನು ಮಾತ್ರ ನೀಡಿರಲಿಲ್ಲ. ಆಲಿಶಾ ಅವರ ತಂದೆ ಈ ಕುರಿತಾಗಿ ಕೇಳಿದಾಗಲೆಲ್ಲಾ ವರ್ಮಾ ತಪ್ಪಿಸಿಕೊಳ್ಳುತ್ತಿದ್ದರು. ಪ್ರವೇಶ ನೀಡುತ್ತೇನೆ ಎಂದು ಹಾರಿಕೆಯ ಉತ್ತರಗಳನ್ನು ನೀಡುತ್ತಿದ್ದರು.

    ಇದರಿಂದ ಬೇಸರಗೋಂಡ ಆಲಿಶಾ ಕುಟುಂಬಸ್ಥರು ಪೊಲೀಸ್ ಠಾಣೆಯಲ್ಲಿ ವರ್ಮಾ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ವರ್ಮಾ ತನ್ನ ಅಪರಾಧವನ್ನು ಪೊಲೀಸರ ಮುಂದೆ ಒಪ್ಪಿಕೊಂಡಿದ್ದಾರೆ. ನಿನ್ನೆ ಪೊಲೀಸರು ರಾಕೇಶ್ ವರ್ಮಾನನ್ನು ಬಂಧಿಸಿದ್ದಾರೆ.

  • ಜನವರಿ 1ರಿಂದ ಎಸ್‍ಎಸ್‍ಎಲ್‍ಸಿ, ದ್ವಿತೀಯ ಪಿಯು ಆರಂಭ: ಬಿಎಸ್‍ವೈ

    ಜನವರಿ 1ರಿಂದ ಎಸ್‍ಎಸ್‍ಎಲ್‍ಸಿ, ದ್ವಿತೀಯ ಪಿಯು ಆರಂಭ: ಬಿಎಸ್‍ವೈ

    – 6 ರಿಂದ 9ನೇ ತರಗತಿಯ ಮಕ್ಕಳಿಗೆ ವಿದ್ಯಾಗಮ

    ಬೆಂಗಳೂರು: ತಜ್ಞರ ವರದಿ ಮೇರೆಗೆ ಜನವರಿ ಒಂದರಿಂದ ವಿದ್ಯಾಗಮ ಆರಂಭವಾಗಲಿದೆ. ಮೊದಲು ಎಸ್‍ಎಸ್‍ಎಲ್‍ಸಿ ಮತ್ತು ದ್ವಿತೀಯ ಪಿಯು ತರಗತಿಗಳು ಆರಂಭಗೊಳ್ಳಲಿವೆ. ತದನಂತರ 6 ರಿಂದ 9ನೇ ಕ್ಲಾಸ್ ಗಳ ವಿದ್ಯಾಗಮ ಆರಂಭಿಸಲಾಗುವುದು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

    ಸಿಎಂ ಜೊತೆಗಿನ ಸಭೆ ಬಳಿಕ ಮಾತನಾಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್, ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಸಮಿತಿ ವರದಿ ಕೊಟ್ಟಿತ್ತು. ನವೆಂಬರ್ ನಲ್ಲಿ ಡಿಸೆಂಬರ್ ವರೆಗೂ ಬೇಡ ಅಂತ ಸಮಿತಿ ಹೇಳಿತ್ತು. ಈಗ ಪ್ರಾರಂಭ ಮಾಡಿ ಅಂತ ಸಲಹೆ ಕೊಟ್ಟಿತ್ತು. ಸಿಎಂ ಸಹ ತಜ್ಞರ ವರದಿಗೆ ಸಮ್ಮತಿ ನೀಡಿದ್ದು, ಜನವರಿ 1 ರಿಂದ ಮೊದಲು 10-12 ನೇ ತರಗತಿ ಪ್ರಾರಂಭಕ್ಕೆ ಸಲಹೆ ಕೊಟ್ಟಿತ್ತು. ತರಗತಿ ಪ್ರಾರಂಭಕ್ಕೆ ಎಸ್‍ಒಪಿ ರೆಡಿ ಮಾಡಲಾಗಿದ್ದು, ಎಷ್ಟು ಸಮಯ ಪಾಠ ಮಾಡಬೇಕು ಅಂತ ಸಿದ್ದತೆ ಮಾಡಿದ್ದೇವೆ. ವಿದ್ಯಾಗಮ ಕೂಡಾ ಪ್ರಾರಂಭ ಮಾಡಲಾಗ್ತಿದೆ. 6 ರಿಂದ 9ನೇ ತರಗತಿಗೆ ವಿದ್ಯಾಗಮ ಪ್ರಾರಂಭ ಆಗಲಿದೆ ಎಂದು ತಿಳಿಸಿದರು.

    ಶಾಲಾ ಆವರಣದಲ್ಲಿ ವಿದ್ಯಾಗಮ ನಡೆಯಲಿದ್ದು, ವಾರಕ್ಕೆ 3 ದಿನ ಒಂದು ವಿದ್ಯಾರ್ಥಿ ಶಾಲೆಗೆ ಬರೋ ರೀತಿ ಸಿದ್ಧತೆ ಮಾಡಲಾಗಿದೆ. ವಿದ್ಯಾಗಮಕ್ಕೆ ಬರೋ ಮಕ್ಕಳು ಪೋಷಕರ ಒಪ್ಪಿಗೆ ಪತ್ರ ತರಬೇಕು. ಗ್ರಾಮೀಣಾಭಿವೃದ್ಧಿ ಮತ್ತು ನಗರಾಭಿವೃದ್ಧಿ ಇಲಾಖೆಯಿಂದ ಸರ್ಕಾರ ಶಾಲೆಗಳಿಗೆ ಸ್ಯಾನಿಟೈಸ್ ಜವಾಬ್ದಾರಿ ನೀಡಲಾಗಿದೆ. ಖಾಸಗಿ ಶಾಲೆಗಳು ಆರರಿಂದ ಒಂಬತ್ತನೇ ತರಗತಿಯವರೆಗಿನ ಮಕ್ಕಳಿಗೆ ವಿದ್ಯಾಗಮ ಮಾಡಬಹುದು. ಹಾಸ್ಟೆಲ್ ಗಳು, ವಸತಿ ಶಾಲೆಗಳು ಕೂಡಾ ಪ್ರಾರಂಭ ಆಗಲಿದ್ದು, ಇಲ್ಲಿಗೆ ಬರುವ ಮಕ್ಕಳು ಮತ್ತು ಶಿಕ್ಷಕರು ಕಡ್ಡಾಯವಾಗಿ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕು.

    ವಿದ್ಯಾರ್ಥಿಗಳು ಶಾಲೆಗೆ ಬರೋದು ಕಡ್ಡಾಯ ಅಲ್ಲ. ಆನ್ ಲೈನ್ ಮೂಲಕ ಪಾಠ ಕಲಿಯಬಹುದು. ಭಾನುವಾರ ಯಾವುದೇ ವಿಶೇಷ ಕ್ಲಾಸ್ ಗಳು ನಡೆಯಲ್ಲ. ಮುಂದಿನ ದಿನಗಳಲ್ಲಿ ಪಠ್ಯಕ್ರಮದ ಬಗ್ಗೆ ತೀರ್ಮಾನ ಮಾಡಲಾಗುವುದು. 15 ದಿನ ಪರಿಸ್ಥಿತಿ ನೋಡಿ ಪ್ರಥಮ ಪಿಯು ಪ್ರಾರಂಭದ ಬಗ್ಗೆ ನಿರ್ಧಾರ ಮಾಡಲಾಗುವುದು. ಶಾಲೆ ಆರಂಭವಾದ್ರೂ ಚಂದನ ವಾಹಿನಿಯಲ್ಲಿ ಆನ್‍ಲೈನ್ ಕ್ಲಾಸ್ ಮುಂದುವರಿಯಲಿದೆ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.

     

     

     

  • ಕೊರೊನಾ ಎರಡನೇ ಅಲೆ ವಿಶ್ವದಲ್ಲಿ ಎಲ್ಲ ಕಡೆ ಬರುತ್ತೆ: ಸುಧಾಕರ್

    ಕೊರೊನಾ ಎರಡನೇ ಅಲೆ ವಿಶ್ವದಲ್ಲಿ ಎಲ್ಲ ಕಡೆ ಬರುತ್ತೆ: ಸುಧಾಕರ್

    – ಸೋಂಕು ಹೆಚ್ಚಳ ಆದ್ರೆ ಮತ್ತೆ ಕಾಲೇಜ್ ಬಂದ್ ಮಾಡುತ್ತೇವೆ

    ಧಾರವಾಡ: ಕೊರೊನಾ ಎರಡನೇ ಅಲೆ ವಿಶ್ವದಲ್ಲಿ ಎಲ್ಲ ಕಡೆ ಬರುತ್ತೆ ಮತ್ತು ಬಂದಿದೆ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ.

    ಧಾರವಾಡದಲ್ಲಿ ಡಿಮಾನ್ಸ್ ನೂತನ ಕಟ್ಟಡ ಉದ್ಘಾಟನೆ ಮಾಡಿ ಮಾತನಾಡಿದ ಅವರು, ನಮ್ಮ ದೇಶದಲ್ಲಿ ದೆಹಲಿ, ಅಹಮದಬಾದ್‍ನಲ್ಲಿ ಕೊರೊನಾ ಎರಡನೇ ಅಲೆ ಬಂದಿದೆ. ಕೊರೊನಾ ಎರಡನೇ ಅಲೆ ಬಂದೇ ಬರುತ್ತೇ ಎನ್ನುವುದೇನಿಲ್ಲ. ಅದು ನಮ್ಮ ಜನರ ನಡವಳಿಕೆ ಮೇಲೆ ಆಧಾರವಾಗಿದೆ ಎಂದರು.

    ಮಾರ್ಗಸೂಚಿ ಅನ್ವಯ ನಡೆದುಕೊಂಡರೆ ಎರಡನೇ ಅಲೆ ಬರುವುದು ಕಡಿಮೆ. ಗಂಭೀರವಾಗಿ ತೆಗೆದುಕೊಂಡು ನಿಯಮ ಅನುಷ್ಠಾನಕ್ಕೆ ತರಬೇಕಿದೆ. ಜನ ಕೊರೊನಾ ಹೋಗಿದೆ ಎಂಬ ಭಾವನೆಯಲ್ಲಿದ್ದಾರೆ. ಲಸಿಕೆ ಸಿಗುವವರೆಗೂ ಕೊರೊನಾ ನಡವಳಿಕೆ ಸ್ವಾಭಾವಿಕವಾಗಿ ಬರಬೇಕು ಎಂದು ಹೇಳಿದರು. ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಮಾತನಾಡಿ, ಸಿಎಂ ಹಾಗೂ ದೆಹಲಿಯ ನಾಯಕರು ಈ ಬಗ್ಗೆ ತೀರ್ಮಾನ ಕೈಗೊಳ್ಳುತ್ತಾರೆ. ಪದೇ ಪದೇ ಆ ಬಗ್ಗೆ ವ್ಯಾಖ್ಯಾನ ಮಾಡುವುದು ಸರಿಯಲ್ಲ ಎಂದರು.

    ಇದೇ ವೇಳೆ ಕಾಲೇಜ್ ಆರಂಭದ ಬಳಿಕ ಸೋಂಕು ಹೆಚ್ಚಳ ವಿಚಾರವಾಗಿ ಮಾತನಾಡಿದ ಸುಧಾಕರ್, ರಾಜದಲ್ಲಿ 120 ರಿಂದ 130 ವಿದ್ಯಾರ್ಥಿಗಳಿಗೆ ಮಾತ್ರ ಕೊರೊನಾ ಬಂದಿದೆ ಎಂದು ಮಾಹಿತಿ ಇದೆ. ಯುವಕರಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿದೆ, ಅವರ ಶೈಕ್ಷಣಿಕ ಭವಿಷ್ಯ ರೂಪಿಸುವುದು ಸರ್ಕಾರದ ಜವಾಬ್ದಾರಿ ಆಗಿದೆ. ಈ ಜವಾಬ್ದಾರಿ ಹಿನ್ನೆಲೆ ಕಾಲೇಜ್ ಆರಂಭ ಮಾಡಿದ್ದೇವೆ. ಸೋಂಕು ಹೆಚ್ಚಳ ಆದರೆ ಮತ್ತೆ ಕಾಲೇಜ್ ಬಂದ್ ಮಾಡುತ್ತೇವೆ ಎಂದರು.

  • 2ನೇ ದಿನವೂ ಕಾಲೇಜ್ ಆರಂಭಕ್ಕೆ ನೀರಸ ಪ್ರತಿಕ್ರಿಯೆ

    2ನೇ ದಿನವೂ ಕಾಲೇಜ್ ಆರಂಭಕ್ಕೆ ನೀರಸ ಪ್ರತಿಕ್ರಿಯೆ

    ಬೆಂಗಳೂರು: ಪದವಿ ಕಾಲೇಜು ಪ್ರಾರಂಭದ ಎರಡನೇ ದಿನವೂ ನೀರಸ ಪ್ರತಿಕ್ರಿಯೆ ಸಿಕ್ಕಿದೆ. ಎರಡನೇ ದಿನವಾದ ಇಂದು ಕೂಡಾ ವಿದ್ಯಾರ್ಥಿಗಳು ಕಾಲೇಜಿಗೆ ಬರೋದಕ್ಕೆ ಹಿಂದೇಟು ಹಾಕಿದ್ದಾರೆ. ಮೊದಲ ದಿನಕ್ಕೆ ಹೋಲಿಸಿದ್ರೆ ಸ್ವಲ್ಪ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಳವಾಗಿದೆ.

    ಕೊರೊನಾ ನಡುವೆಯೂ ಎರಡನೇ ದಿನ ಕಡಿಮೆ ವಿದ್ಯಾರ್ಥಿಗಳಿಗೆ ಬಹುತೇಕ ಕಾಲೇಜುಗಳಲ್ಲಿ ತರಗತಿ ನಡೀತು. ಮಹಾರಾಣಿ ಕಾಲೇಜಿನ ವಾಣಿಜ್ಯ ವಿಭಾಗದಲ್ಲಿ ನಿನ್ನೆಗಿಂತ ಇಂದು ಹೆಚ್ಚು ವಿದ್ಯಾರ್ಥಿನಿಯರು ಆಗಮಿಸಿದ್ದರು. ಸರ್ಕಾರದ ಮಾರ್ಗಸೂಚಿಯಂತೆ ಕಾಲೇಜಿನಲ್ಲಿ ಥರ್ಮಲ್ ಸ್ಕ್ಯಾನಿಂಗ್, ಸ್ಯಾನಿಟೈಸ್ ವ್ಯವಸ್ಥೆ, ಸಾಮಾಜಿಕ ಅಂತರಕ್ಕೆ ಕ್ರಮ ಕೈಗೊಳ್ಳಲಾಗಿತ್ತು. ವಿದ್ಯಾರ್ಥಿಗಳು ಖುಷಿಯಿಂದಲೇ ಪಾಠ ಕೇಳಿದರು.

    ಇವತ್ತೂ ಕೂಡ ಅನೇಕ ವಿದ್ಯಾರ್ಥಿಗಳು ಕೊರೋನಾ ಟೆಸ್ಟ್ ಮಾಡಿಸದೇ ಕಾಲೇಜಿಗೆ ಬಂದಿದ್ದರು. ಹೀಗಾಗಿ ಮಹಾರಾಣಿ ಕಾಲೇಜಿನಲ್ಲಿ ಬಿಬಿಎಂಪಿ ವತಿಯಿಂದ ಉಚಿತ ಆಂಟಿಜೆನ್ ಟೆಸ್ಟ್ ಹಾಗೂ ಆರ್ ಟಿ ಪಿಸಿಆರ್ ಟೆಸ್ಟ್ ಮಾಡಿಸಲಾಯಿತು. ರಾಜಾಜಿನಗರದ ವಿವೇಕಾನಂದ ಕಾಲೇಜಿನಲ್ಲಿ ನಿನ್ನೆ ಕೇವಲ 8 ರಿಂದ 10 ಜನ ಬಂದಿದ್ದರು. ಇಂದು 25 ರಿಂದ 30 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರಾಗಿದ್ದರು. ಎರಡನೇ ದಿನಕ್ಕೆ ವಿದ್ಯಾರ್ಥಿ ಸಂಖ್ಯೆಯಲ್ಲಿ ಏರಿಕೆಯಾಗಿದ್ದನ್ನು ಕಂಡು ಉಪನ್ಯಾಸಕರು ಸಂತೋಷಗೊಂಡರು.

    ಶೇಷಾದ್ರಿಪುರಂ ಕಾಲೇಜಿನಲ್ಲಿ ಇಂದೂ ಕೂಡಾ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಇತ್ತು. ಒಟ್ಟಾರೆ ಎರಡನೇ ದಿನದ ಕಾಲೇಜ್ ಪ್ರಾರಂಭಕ್ಕೆ ನೀರಸ ಪ್ರತಿಕ್ರಿಯೆ ಅನ್ನಿಸಿದ್ರು, ಮೊದಲ ದಿನಕ್ಕಿಂತ ಉತ್ತಮ ಪ್ರತಿಕ್ರಿಯೆ ಸಿಕ್ತು. ದಿನ ಕಳೆದಂತೆ ಮತ್ತಷ್ಟು ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಳ ಆಗೋ ಸಾಧ್ಯತೆಯೂ ಇದೆ.

  • ನ.17 ರಿಂದ ಡಿಗ್ರಿ ಕಾಲೇಜು ಆರಂಭ – ಶನಿವಾರ, ಭಾನುವಾರ ಕ್ಲಾಸ್ : ಮಾರ್ಗಸೂಚಿಯಲ್ಲಿ ಏನಿದೆ?

    ನ.17 ರಿಂದ ಡಿಗ್ರಿ ಕಾಲೇಜು ಆರಂಭ – ಶನಿವಾರ, ಭಾನುವಾರ ಕ್ಲಾಸ್ : ಮಾರ್ಗಸೂಚಿಯಲ್ಲಿ ಏನಿದೆ?

    – ಹೈಬ್ರಿಡ್‌ ಶಿಕ್ಷಣ ಪದ್ದತಿ ಜಾರಿ
    – ಕಾಲೇಜಿಗೆ ಬರುವಂತೆ ವಿದ್ಯಾರ್ಥಿಗಳಿಗೆ ಒತ್ತಾಯ ಮಾಡುವಂತಿಲ್ಲ

    ಬೆಂಗಳೂರು: ಕೊರೊನಾ ಇಳಿಮುಖವಾಗುತ್ತಿರುವ ಹೊತ್ತಲ್ಲಿ ರಾಜ್ಯ ಸರ್ಕಾರ, ಕಾಲೇಜು ಓಪನ್ ಮಾಡುವ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಸರಿ ಸುಮಾರು ಏಳು ತಿಂಗಳ ಬಳಿಕ ರಾಜ್ಯದಲ್ಲಿ ಡಿಗ್ರಿ ಕಾಲೇಜುಗಳನ್ನು ತೆರೆಯುವ ಸಾಹಸವನ್ನು ಮಾಡಿದೆ.

    ನವೆಂಬರ್ 17ಕ್ಕೆ ಪದವಿ ಕಾಲೇಜುಗಳು ಆರಂಭ ಆಗಲಿವೆ. ಮುಂಜಾಗ್ರತಾ ಕ್ರಮವಾಗಿ ಆರಂಭದಲ್ಲಿ ಹೈಬ್ರಿಡ್ ಶಿಕ್ಷಣ ಪದ್ದತಿಯನ್ನು ಸರ್ಕಾರ ಜಾರಿ ಮಾಡುತ್ತಿದೆ ವಿದ್ಯಾರ್ಥಿಗಳು ಆಫ್‍ಲೈನ್ ಅಥವಾ ಆನ್‍ಲೈನ್ ಮೂಲಕವೂ ತರಗತಿಗೆ ಹಾಜರಾಗುವ ಅವಕಾಶವನ್ನು ಈ ಹೈಬ್ರಿಡ್‌ ಶಿಕ್ಷಣ ಪದ್ದತಿ ನೀಡಲಿದೆ.

    ಎಂಜಿನಿಯರಿಂಗ್, ಮೆಡಿಕಲ್, ಪದವಿ, ಡಿಪ್ಲೊಮೋ ಕ್ಲಾಸ್ ಆರಂಭಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ಸರ್ಕಾರ ಒಪ್ಪಿಗೆ ಸೂಚಿಸಿದೆ. ಸಭೆ ಬಳಿಕ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಮತ್ತು ಡಿಸಿಎಂ ಅಶ್ವಥ್ ನಾರಾಯಣ್, ನವೆಂಬರ್ 17ಕ್ಕೂ ಮೊದಲು ವಿದ್ಯಾರ್ಥಿಗಳು ಆನ್‍ಲೈನ್ ಕ್ಲಾಸ್‍ಗೆ ಹಾಜರಾಗುವ ಬಗ್ಗೆ ರಿಜಿಸ್ಟರ್ ಮಾಡಿಕೊಳ್ಳಬೇಕು. ಬಳಿಕ ಕಾಲೇಜಿಗೆ ಬರುವ ವಿದ್ಯಾರ್ಥಿಗಳ ಸಂಖ್ಯೆ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

    ಕೇಂದ್ರ ಸರ್ಕಾರ ಹಾಗೂ ಆರೋಗ್ಯ ಇಲಾಖೆ ಮಾರ್ಗಸೂಚಿಗಳನ್ನ ಅಳವಡಿಸಿಕೊಂಡು ಕಾಲೇಜು ಪ್ರಾರಂಭಕ್ಕೆ ರಾಜ್ಯ ಸರ್ಕಾರ ಮಾರ್ಗಸೂಚಿ ಸಿದ್ದಪಡಿಸಿದೆ. ಪ್ರಮುಖವಾಗಿ ಕಾಲೇಜು ಪ್ರಾರಂಭವಾದರೂ ಕಾಲೇಜಿಗೆ ಬರಬೇಕಾ ಬೇಡವಾ ಅಂತ ವಿದ್ಯಾರ್ಥಿಗಳು ನಿರ್ಧಾರ ಮಾಡಬಹುದಾಗಿದೆ. ಕಾಲೇಜಿಗೆ ಬರಲು ಒಪ್ಪದೇ ಇದ್ದರೆ ಆನ್ ಲೈನ್ ಮೂಲಕ ತರಗತಿ ತೆಗೆದುಕೊಳ್ಳುವ ಅವಕಾಶ ವಿದ್ಯಾರ್ಥಿಗಳಿಗೆ ನೀಡಲಾಗಿದೆ. ಯಾರಿಗೂ ಕಾಲೇಜಿಗೆ ಬರಲು ಒತ್ತಾಯ ಮಾಡುವಂತಿಲ್ಲ. ಇದರ ಜೊತೆ ಕಾಲೇಜಿಗೆ ಬರುವಾಗ ವಿದ್ಯಾರ್ಥಿಗಳು ಕಡ್ಡಾಯವಾಗಿ ಪೋಷಕರಿಂದ ಒಪ್ಪಿಗೆ ಪತ್ರ ತರುವ ಷರತ್ತು ವಿಧಿಸಿದೆ. ಕಾಲೇಜಿಗೆ ಬರಲು ಇಚ್ಚಿಸುವ ವಿದ್ಯಾರ್ಥಿ ನವೆಂಬರ್ 17ರ ಒಳಗೆ ಕಾಲೇಜಿಗೆ ಹೋಗಿ ನೋಂದಣಿ ಮಾಡಿಕೊಳ್ಳಬೇಕಾಗಿದೆ.

    ನವೆಂಬರ್ 17ರಿಂದಲೇ ಹಾಸ್ಟೆಲ್‍ಗಳು ಆರಂಭ ಆಗಲಿವೆ. ಆದರೆ 1 ರಿಂದ 10ನೇ ತರಗತಿ ಮತ್ತು ಪಿಯು ಕಾಲೇಜು ಆರಂಭಕ್ಕೆ ಸರ್ಕಾರ ಅನುಮತಿ ನೀಡಿಲ್ಲ.

    ಮಾರ್ಗಸೂಚಿ ಏನಿದೆ?
    * ನಿತ್ಯ ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕ್ಯಾನಿಂಗ್ ಮಾಡುವುದು ಕಡ್ಡಾಯ
    * ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು
    * ವಿದ್ಯಾರ್ಥಿಗಳಿಗೆ ಸ್ಯಾನಿಟೈಸ್ ವ್ಯವಸ್ಥೆ ಮಾಡಬೇಕು
    * ತರಗತಿ ಮುಗಿದ ಬಳಿಕ ಕೊಠಡಿಗಳನ್ನು ಸ್ಯಾನಿಟೈಸ್ ಮಾಡಬೇಕು
    * ಪ್ರತಿ ಕ್ಯಾಂಪಸ್‍ಗಳಲ್ಲಿ ಆರೋಗ್ಯ ಸಹಾಯವಾಣಿ ಪ್ರಾರಂಭಿಸಬೇಕು

    * ಬೋಧಕ-ಬೋಧಕೇತರ ಸಿಬ್ಬಂದಿ ಕಡ್ಡಾಯವಾಗಿ ಮಾಸ್ಕ್, ಗ್ಲೌಸ್ ಧರಿಸಬೇಕು
    * ವಿದ್ಯಾರ್ಥಿಗಳಿಗೆ ಸಾಮಾಜಿಕ ಅಂತರದ ಬಗ್ಗೆ ಅಗತ್ಯ ಜಾಗೃತಿ ಮೂಡಿಸಬೇಕು
    * ಕನಿಷ್ಠ ಸಾಮಾಜಿಕ ಅಂತರದಲ್ಲಿ ಕುಳಿತುಕೊಳ್ಳುವ ವ್ಯವಸ್ಥೆ ಮಾಡಬೇಕು
    * ಶುದ್ದ ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯದ ಶುಚಿತ್ವ ಕಾಪಾಡಬೇಕು
    * ವಾಹನ ವ್ಯವಸ್ಥೆ ಇರೋ ಕಾಲೇಜುಗಳು ನಿತ್ಯ ವಾಹನಗಳನ್ನು ಸ್ಯಾನಿಟೈಸ್ ಮಾಡಬೇಕು

    * ಶೈಕ್ಷಣಿಕ ವರ್ಷ ತಡವಾಗಿರೋದ್ರಿಂದ ಶನಿವಾರ ಪೂರ್ತಿ ತರಗತಿ, ರಜೆಗಳಿಗೆ ಬ್ರೇಕ್ ಹಾಕಲು ನಿರ್ಧಾರ
    * ಶನಿವಾರ-ಭಾನುವಾರ ಆನ್‍ಲೈನ್ ತರಗತಿಗೆ ಹೆಚ್ಚು ಒತ್ತು ನೀಡುವುದು
    * ಶಿಫ್ಟ್ ಪ್ರಕಾರ ತರಗತಿ ನಡೆಸಲು ನಿರ್ಧಾರ
    * ಒಂದು ತರಗತಿಯಲ್ಲಿ 30 ವಿದ್ಯಾರ್ಥಿಗಳಿಗೆ ಮಾತ್ರ ಪಾಠ ಮಾಡಲು ಅವಕಾಶ
    * ಮಾರ್ಗಸೂಚಿ ಅನುಷ್ಠಾನಕ್ಕೆ ಪ್ರಾಂಶುಪಾಲರ ನೇತೃತ್ವದಲ್ಲಿ ಟಾಸ್ಕ್‌ಫೋರ್ಸ್‌ ರಚನೆ

    * ಜಿಲ್ಲಾ ಹಂತದಲ್ಲಿ ಡಿಸಿಗಳ ನೇತೃತ್ವದಲ್ಲಿ ವಿಶೇಷ ತಂಡ ರಚನೆ
    * ಕಾಲೇಜಿಗೆ ಬಾರದ ವಿದ್ಯಾರ್ಥಿಗಳನ್ನು ತರಗತಿಗೆ ಕರೆತರಲು ಮೆಂಟರ್ ಸಿಸ್ಟಮ್ ಜಾರಿ
    * ಪ್ರತಿ ಉಪನ್ಯಾಸಕರಿಗೆ 30 ವಿದ್ಯಾರ್ಥಿಗಳ ಜವಾಬ್ದಾರಿ ನೀಡಲು ತೀರ್ಮಾನ