Tag: ಕಾಲ್ ಸೆಂಟರ್

  • ದೇಹ ಮನೆಯವರಿಗೆ ನೀಡಬೇಡಿ ಎಂದು ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ

    ದೇಹ ಮನೆಯವರಿಗೆ ನೀಡಬೇಡಿ ಎಂದು ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ

    ಲಕ್ನೋ: ಕಾಲ್ ಸೆಂಟರ್‌ನಲ್ಲಿ (Call centre) ಕೆಲಸ ಮಾಡುತ್ತಿದ್ದ ಕಾನ್ಪುರದ ವ್ಯಕ್ತಿಯೊಬ್ಬ ಹೋಟೆಲ್‍ನಲ್ಲಿ (Hotel) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಉತ್ತರಪ್ರದೇಶದ ನಾಕಾ ಹಿಂದೋಲಾ ಪ್ರದೇಶದಲ್ಲಿ ನಡೆದಿದೆ.

    ಮೃತರನ್ನು ಆಶಿಶ್ ಕುಮಾರ್ (28) ಎಂದು ಗುರುತಿಸಲಾಗಿದೆ. ಆಶಿಶ್ ಹೋಟೆಲ್‍ವೊಂದರಲ್ಲಿ ತಂಗಿದ್ದ. ಆತ ಒಂದು ದಿನ ಕಳೆದರೂ ರೂಮ್‍ನಿಂದಹೊರಗೆ ಬಾರದಿದ್ದನ್ನು ಗಮನಿಸಿದ ಹೋಟೆಲ್ ಸಿಬ್ಬಂದಿ ತಪಾಸಣೆಗೆಂದು ಹೋಗಿದ್ದಾರೆ. ನಂತರ ರೂಮ್‍ನ ಬಾಗಿಲನ್ನು ತಟ್ಟಿದ್ದಾರೆ. ಆದರೆ ಒಳಗಿನಿಂದ ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ. ಅದಾದ ಬಳಿಕ ಕಿಟಕಿಯಿಂದ ನೋಡಿದಾಗ ಆಶಿಶ್ ನೇಣು ಬಿಗಿದುಕೊಂಡಿರುವುದು ಕಂಡಿದೆ. ಘಟನೆಗೆ ಸಂಬಂಧಿಸಿ ಹೋಟೆಲ್‍ನವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

    crime

    ಸ್ಥಳಕ್ಕಾಗಮಿಸಿದ ಪೊಲೀಸರು, ಆಶೀಶ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಜೊತೆಗೆ ಆಶಿಶ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿದೆ. ಆತ ತನ್ನ ದೇಹವನ್ನು ಸಂಜಯ್ ಗಾಂಧಿ ಪೋಸ್ಟ್ ಗ್ರಾಜುಯೇಟ್ ಇನ್‍ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್‌ಗೆ ಹಸ್ತಾಂತರಿಸಬೇಕೇ ಹೊರತು ತನ್ನ ಕುಟುಂಬಕ್ಕಲ್ಲ (Family) ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದ ಪತ್ನಿಯನ್ನು ಉಳಿಸೋ ಬದ್ಲು ವೀಡಿಯೋ ಮಾಡಿಕೊಂಡ ಪತಿ

    POLICE JEEP

    ಘಟನೆಗೆ ಸಂಬಂಧಿಸಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆಶೀಶ್ ತನ್ನ ಶವವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲು ಬೇಡ ಎನ್ನುವುದಕ್ಕೆ ಕಾರಣ ಏನು ಎನ್ನುವುದರ ಕುರಿತು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ದೀಪಾವಳಿ ಹಬ್ಬಕ್ಕೆ ಹೊಸ ಬಟ್ಟೆ ಕೊಡಿಸದ್ದಕ್ಕೆ ಯುವಕ ಆತ್ಮಹತ್ಯೆ

    Live Tv
    [brid partner=56869869 player=32851 video=960834 autoplay=true]

  • ಕಾಲ್ ಸೆಂಟರ್ ಮೇಲೆ ಪೊಲೀಸ್ ದಾಳಿ- 42 ಮಂದಿ ಅರೆಸ್ಟ್

    ಕಾಲ್ ಸೆಂಟರ್ ಮೇಲೆ ಪೊಲೀಸ್ ದಾಳಿ- 42 ಮಂದಿ ಅರೆಸ್ಟ್

    – ವಿದೇಶಿಗರೇ ಇವರ ಟಾರ್ಗೆಟ್

    ನವದೆಹಲಿ: ವಿದೇಶಿಗರನ್ನು ವಂಚಿಸಿ ಮೋಸ ಮಾಡುತ್ತಿದ್ದ ದೆಹಲಿ ಮೂಲದ ಕಾಲ್ ಸೆಂಟರ್ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಈ ವೇಳೆ 42 ಜನರನ್ನು ಬಂಧಿಸಿರುವ ಘಟನೆ ನಡೆದಿದೆ.

    ಸೈಬರ್ ಕ್ರೈಂ ಪ್ರಕಾರ ಈ ಕಾಲ್ ಸೆಂಟರ್ ನಲ್ಲಿರುವವರು ಫಾರಿನ್‍ನಲ್ಲಿರುವ ವಿದೇಶಿಗರನ್ನು ಟಾರ್ಗೆಟ್ ಮಾಡುತ್ತಿದ್ದರು. ಈಗಾಗಲೇ 3,500 ಜನರಿಗೆ ವಂಚಿಸಿದ್ದಾರೆ. ಸರಿಸುಮಾರು 70 ಕೋಟಿ ರೂಪಾಯಿಗಳಷ್ಟು ವಂಚಿಸಿದ್ದಾರೆ.

    ಈ ವಿಚಾರ ತಿಳಿದ ಪೊಲೀಸ್ ತಂಡ ಸ್ಥಳಕ್ಕೆ ತಲುಪಿದಾಗ, ನಕಲಿ ಕಾಲ್ ಸೆಂಟರ್ ಮಾಲೀಕ ಮತ್ತು 42 ಜನರು ಕಾಲ್ ಸೆಂಟರ್‍ನಲ್ಲಿದ್ದರು. ಅದರಲ್ಲಿ 26 ಪುರುಷರು, 16 ಮಹಿಳೆಯರನ್ನು ಬಂಧಿಸಲಾಗಿದೆ. ಜೊತೆಗೆ 9 ಎಲೆಕ್ಟ್ರಾನಿಕ್ ಡಿವೈಸ್ ಹಾಗೂ 4.5 ಲಕ್ಷ ರೂಪಾಯಿಗಳನ್ನು ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಉಪ ಪೊಲೀಸ್ ಆಯುಕ್ತ ಅನೀಶ್ ರಾಯ್ ಹೇಳಿದ್ದಾರೆ.

    ವಿಚಾರಣೆ ವೇಳೆ, ವಿವಿಧ ಕಾನೂನು ಜಾರಿ ಸಂಸ್ಥೆಗಳು ಮತ್ತು ಸಾಮಾಜಿಕ ಭದ್ರತಾ ಆಡಳಿತ, ಡ್ರಗ್ ಎನ್‍ಫೋರ್ಸ್‍ಮೆಂಟ್ ಅಡ್ಮಿನಿಸ್ಟ್ರೇಷನ್ (ಡಿಇಎ) ಮತ್ತು ಯುಎಸ್ ಮಾರ್ಷಲ್ಸ್ ಸೇವೆಯಂತಹ ಇತರ ಸರ್ಕಾರಿ ಸಂಸ್ಥೆಗಳ ಸಿಬ್ಬಂದಿಯಂತೆ ನಟಿಸಿ ವಿದೇಶಿ ಪ್ರಜೆಗಳನ್ನು ಸಂಪರ್ಕಿಸಿ ಅವರಿಂದ ಹಣದ ರೂಪದಲ್ಲಿ ಬಿಟ್ ಕಾಯಿನ್‍ಗಳನ್ನು ಕೊಡಲು ಒತ್ತಾಯಿಸುತ್ತಿದ್ದರು. ಇಲ್ಲವಾರೆ ಕಾನೂನು ಕ್ರಮ ಕೈ ಗೊಳ್ಳುತ್ತೇವೆ ಎಂದು ಬೆದರಿಕೆ ಒಡ್ಡಿ ಸುಲಭವಾಗಿ ಹಣ ವಸೂಲಿ ಮಾಡುತ್ತಿದ್ದರು ಎಂದು ಆರೋಪಿಗಳು ಬಹಿರಂಗಪಡಿಸಿದ್ದಾರೆ ಎಂದಿದ್ದಾರೆ.

  • ಸ್ನೇಹಿತರಿಂದ್ಲೇ ಕಾಲ್‍ಸೆಂಟರ್ ಯುವತಿಯ ರೇಪ್&ಮರ್ಡರ್- ಸೂಟ್‍ ಕೇಸ್‍ನಲ್ಲಿ ಶವ ಪತ್ತೆ

    ಸ್ನೇಹಿತರಿಂದ್ಲೇ ಕಾಲ್‍ಸೆಂಟರ್ ಯುವತಿಯ ರೇಪ್&ಮರ್ಡರ್- ಸೂಟ್‍ ಕೇಸ್‍ನಲ್ಲಿ ಶವ ಪತ್ತೆ

    ಬೆಳಗಾವಿ: ನಗರದ ಭೂತರಾಮನಹಟ್ಟಿ ಬಳಿಯ ಮ್ಯಾನ್‍ಹೋಲ್‍ನಲ್ಲಿ ಕಾಲ್‍ಸೆಂಟರ್ ಯುವತಿ ಶವವೊಂದು ಸೂಟ್‍ಕೇಸ್‍ನಲ್ಲಿ ಪತ್ತೆಯಾಗಿದೆ.

    ಮುಂಬೈ ಮೂಲದ 23 ವರ್ಷದ ಅಂಕಿತಾ ಕನೋಜಿಯಾ ಕೊಲೆಯಾದ ಯುವತಿ. ಅಂಕಿತಾ ಮೂಲತಃ ಮಾಹಾರಾಷ್ಟ್ರದ ನಾಗಪುರ ನಗರದವರಾಗಿದ್ದು, ಸಹಾಯಕ ಸಬ್ ಇನ್ಸ್ ಪೆಕ್ಟರ್ ಮಗಳು. ಮುಂಬೈನಲ್ಲಿ ಸೆಪ್ಟೆಂಬರ್ 4 ರಂದು ತನ್ನಿಬ್ಬರು ಸ್ನೇಹಿತರೊಂದಿಗೆ ಪಾರ್ಟಿ ಮಾಡಿದ್ದರು. ಇದೇ ವೇಳೆ ಸ್ನೇಹಿತರ ಮಧ್ಯೆ ಜಗಳ ನಡೆದು ಇಬ್ಬರು ಸ್ನೇಹಿತರು ಸೇರಿ ಅಂಕಿತಾ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾರೆ.

    ನಂತರ ಸ್ನೇಹಿತರು ಸೂಟ್ ಕೇಸ್‍ವೊಂದರಲ್ಲಿ ಶವವನ್ನು ತುಂಬಿಕೊಂಡು ಮುಂಬೈನಿಂದ ಗೋವಾ ಮಾರ್ಗವಾಗಿ ಪ್ರಯಾಣ ಆರಂಭಿಸಿದ್ದಾರೆ. ಬೆಳಗಾವಿಯ ಬಳಿಯ ಭೂತರಾಮನಟ್ಟಿ ಬಳಿ ಬರುವ ವೇಳೆಗೆ ಕಾರು ಚಾಲಕನಿಗೆ ನಿದ್ರೆ ಆವರಿಸಿದೆ. ಆತ ಮಲಗಿದ್ದನ್ನು ಗಮಿಸಿದ ಇಬ್ಬರು ಆರೋಪಿಗಳು ರಾಷ್ಟ್ರೀಯ ಹೆದ್ದಾರಿ ಪಕ್ಕದ ಮ್ಯಾನ್ ಹೋಲ್‍ಗೆ ಅಂಕಿತಾ ಶವ ತುಂಬಿದ್ದ ಸೂಟ್ ಕೇಸ್ ಬಿಸಾಡಿದ್ದಾರೆ

     

    ಶವ ಬಿಸಾಡಿದ ನಂತರ ಗೋವಾಕ್ಕೆ ತೆರಳಿದ್ದು ಅಲ್ಲಿ ಸೂಟ್ ಕೇಸ್ ಇಲ್ಲದೇ ಇರೋದು ಗಮನಿಸಿದ ಕಾರು ಚಾಲಕ ಈ ಬಗ್ಗೆ ಪ್ರಯಾಣಿಕರನ್ನು ಪ್ರಶ್ನಿಸಿದ್ದಾನೆ. ಈ ವೇಳೆ ಈ ಭೀಕರ ಅತ್ಯಾಚಾರ, ಕೊಲೆ ಪ್ರಕರಣ ಬಹಿರಂಗವಾಗಿದೆ. ನಂತರ ಕಾರು ಚಾಲಕ ಇಬ್ಬರಿಗೆ ಪೊಲೀಸರ ಮುಂದೆ ಶರಣಾಗುವಂತೆ ಹೇಳಿದ್ದು, ಆರೋಪಿಗಳು ಮುಂಬೈನ ಥಾಣೆ ಪೊಲೀಸರ ಮುಂದೆ ನಡೆದ ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ದೂರು ದಾಖಲಿಸಿಕೊಂಡ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

    ಬೆಳಗಾವಿಯ ಕಾಕತಿ ಪೊಲೀಸರಿಗೆ ಮಾಹಿತಿ ನೀಡಿ ಸೂಟ್ ಕೇಸ್ ಇರುವ ಬಗ್ಗೆ ಥಾಣೆ ಪೊಲೀಸರು ಖಚಿತಪಡಿಸಿಕೊಂಡಿದ್ದಾರೆ. ಸೂಟ್ ಕೇಸ್ ನಿಂದ ತೀವ್ರ ರಕ್ತ ಹೊರಗೆ ಬಂದಿದ್ದು, ದುರ್ವಾಸನೆ ಬೀರುತ್ತಿತ್ತು. ಅಂಕಿತಾ ತಂದೆ ಹಾಗೂ ಕುಟುಂಬಸ್ಥರು ಶವ ಸಿಕ್ಕ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಬುಧವಾರ ತಡರಾತ್ರಿ ಮುಂಬೈನ ಥಾಣೆ ಪೋಲಿಸರು ಆರೋಪಿಗಳಾದ ಅಕ್ಷಯ ತಾಳುದೆ ಮತ್ತು ಅಲ್ಕೇಶ್ ಪಾಟೀಲ್‍ನನ್ನ ಮುಂಬೈನಿಂದ ಬೆಳಗಾವಿಗೆ ಕರೆತಂದಿದ್ದಾರೆ.

    ಪೊಲೀಸರು ಕೊಲೆ ಮಾಡಿ ಎಸೆದ ಸ್ಥಳ ಪರಿಶೀಲನೆ ನಡೆಸಿದ್ದು, ಸೂಟ್ ಕೇಸ್ ನಲ್ಲಿ ತುಂಬಿ ಮ್ಯಾನ ಹೋಲ್ ಗೆ ಎಸೆದಿದ್ದ ಅಂಕಿತ ಮೃತ ದೇಹವನ್ನ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

     

  • ಪರಪ್ಪನ ಅಗ್ರಹಾರದಲ್ಲಿ  ತಿಂಗಳಿಗೆ 20 ಲಕ್ಷ ರೂ. ಕಲೆಕ್ಷನ್ – ಇಡೀ ಜೈಲನ್ನು ಮೇಂಟೇನ್ ಮಾಡೋದು ಪ್ರತಿಭಾ ಹಂತಕ

    ಪರಪ್ಪನ ಅಗ್ರಹಾರದಲ್ಲಿ ತಿಂಗಳಿಗೆ 20 ಲಕ್ಷ ರೂ. ಕಲೆಕ್ಷನ್ – ಇಡೀ ಜೈಲನ್ನು ಮೇಂಟೇನ್ ಮಾಡೋದು ಪ್ರತಿಭಾ ಹಂತಕ

    ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಲ್ಲಿ ತಿಂಗಳಿಗೆ ಬರೋಬ್ಬರಿ 20 ಲಕ್ಷಕ್ಕೂ ಹೆಚ್ಚು ಲಂಚದ ಹಣ ಸಂಗ್ರಹವಾಗುತ್ತೆ ಅನ್ನೋ ಮಾಹಿತಿ ಬಹಿರಂಗವಾಗಿದೆ.

    ಜೈಲಿನ ಅಧಿಕಾರಿಗಳಿಗೆ ಈ ಹಣ ತಲುಪಿಸುವವರು ಕಾಲ್ ಸೆಂಟರ್ ಉದ್ಯೋಗಿ ಪ್ರತಿಭಾ ಹಂತಕ ಶಿವಕುಮಾರ್. ಪ್ರತಿಭಾ ಹತ್ಯೆ ಕೇಸಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಶಿವಕುಮಾರ್‍ಗೆ ಪರಪ್ಪನ ಅಗ್ರಹಾರ ಜೈಲಲ್ಲಿ ವಸೂಲಿ ಮಾಡುವುದೇ ಕಾಯಕ.

    ಶಿವಕುಮಾರ್ ಜೈಲಲ್ಲಿ ಊಟದ ವ್ಯವಸ್ಥೆ ಉಸ್ತುವಾರಿ ಹೊತ್ತಿದ್ದಾನೆ. ಜೈಲು ಅಧಿಕಾರಿಗಳಿಂದ ಹಂತಕ ಶಿವಕುಮಾರ್‍ಗೆ ಈ ಜವಾಬ್ದಾರಿ ನೀಡಲಾಗಿದೆ. ಯಾರನ್ನು ಎಲ್ಲಿ ನೇಮಿಸಬೇಕೆಂದು ನಿರ್ಧರಿಸುವವನೂ ಇವನೇ. ಒಬ್ಬ ಅತ್ಯಾಚಾರಿ ಅಪರಾಧಿಗೆ ಜೈಲಿನ ಸಂಪೂರ್ಣ ಹೊಣೆಯನ್ನ ನೀಡಲಾಗಿದೆ. ದಿನದ ಎಲ್ಲಾ ಲೆಕ್ಕಾಚಾರವನ್ನು ನೋಡಿಕೊಳ್ಳುವ ಶಿವಕುಮಾರ್ ರಾತ್ರಿ ಜೈಲಿನ ಅಧಿಕಾರಿಗಳಿಗೆ ಎಲ್ಲಾ ಮಾಹಿತಿ ನೀಡ್ತಾನೆ ಎನ್ನಲಾಗಿದೆ.

    2005ರಲ್ಲಿ ಕಾಲ್ ಸೆಂಟರ್ ಉದ್ಯೋಗಿ ಪ್ರತಿಭಾ ಅವರನ್ನ ಕ್ಯಾಬ್ ಡ್ರೈವರ್ ಆಗಿದ್ದ ಶ್ರೀಕಾಂತ್ ಮಧ್ಯರಾತ್ರಿ ಪಿಕ್‍ಅಪ್ ಮಾಡಿದ ನಂತರ ಆಕೆಯನ್ನ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ. ನಂತರ ಕೋರ್ಟ್ ಆತನಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.

    ಈ ಮಧ್ಯೆ ಜೈಲಿನ ಅಕ್ರಮಗಳ ಬಗ್ಗೆ ಉಪನಿರೀಕ್ಷಕಿ ರೂಪ ಅರೋಪ ಮಾಡಿದ ಮೇಲೆ ಇದೇ ಪ್ರಥಮ ಬಾರಿಗೆ ಡಿಜಿ ಸತ್ಯನಾರಾಯಣ್ ಜೈಲಿಗೆ ಭೇಟಿ ನೀಡಿದ್ದಾರೆ. ಶುಕ್ರವಾರದಂದು ಡಿಜಿ ಸತ್ಯನಾರಾಯಣ್ ಎಐಜಿ ವೀರಭದ್ರಸ್ವಾಮಿಗೆ ಜೈಲಿನ ಸ್ಥಿತಿಗತಿಯ ಬಗ್ಗೆ ತಿಳಿಯುವಂತೆ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಎಐಜಿ ವೀರಭದ್ರಸ್ವಾಮಿ ಬೆಳಿಗ್ಗೆ 11 ಗಂಟೆಗೆ ಬಂದು ಸಂಜೆ 4:30 ತನಕ ಜೈಲಿನ ಸಂಪೂರ್ಣ ವಿವರ ಪಡೆದಿದ್ದರು. ಇಂದು ಬೆಳ್ಳಂಬೆಳಗ್ಗೆ ಡಿಜಿ ಸತ್ಯನಾರಾಯಣ್ ಜೈಲಿಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ವಿವರ ಪಡೆದಿದ್ದಾರೆ.

    ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಈಗಾಗಲೇ ತನಿಖೆಗೆ ಆದೇಶಿಸಿದ್ದು ನಿವೃತ್ತ ಐಎಎಸ್ ಅಧಿಕಾರಿ ವಿನಯ್ ಕುಮಾರ್ ನೇತೃತ್ವದಲ್ಲಿ ತನಿಖೆ ನಡೆಯಲಿದೆ. ಆದರೆ ತನಿಖಾಧಿಕಾರಿಗಳು ಬರುವ ಮೊದಲೇ ಕಾರಗೃಹ ಡಿಜಿಪಿ ಪರಪ್ಪನ ಅಗ್ರಹಾರಕ್ಕೆ ಭೇಟಿ ನೀಡಿ ಶಶಿಕಲಾ, ತೆಲಗಿ ಅವರ ಸೆಲ್‍ಗಳನ್ನು ತಪಾಸಣೆ ನಡೆಸಿರಬಹುದು ಎಂಬ ಶಂಕೆ ಮುಡುತ್ತಿದೆ. ಸತ್ಯನಾರಾಯಣ್ ರಾವ್ ಹಳೇ ದಾಖಲೆಗಳ ಪರಿಶೀಲನೆ ನಡೆಸಿ ಕೆಳ ಹಂತದ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದಾರೆ ಎಂಬ ಮಾಹಿತಿಯೂ ಸಹ ಲಭ್ಯವಾಗಿದೆ.