Tag: ಕಾವೇರಿ ಜಲಾನಯನ

  • ಹೊಸ ದಾಖಲೆ ಬರೆದ ಕೆಆರ್‌ಎಸ್ ಡ್ಯಾಂ – 118.60 ಅಡಿ ನೀರು ಭರ್ತಿ

    ಹೊಸ ದಾಖಲೆ ಬರೆದ ಕೆಆರ್‌ಎಸ್ ಡ್ಯಾಂ – 118.60 ಅಡಿ ನೀರು ಭರ್ತಿ

    – ಡ್ಯಾಂ ಸಂಪೂರ್ಣ ಭರ್ತಿಗೆ ಕೇವಲ 6 ಅಡಿ ಬಾಕಿ

    ಮಂಡ್ಯ: ಜೂನ್ ತಿಂಗಳಲ್ಲೇ ಕೆಆರ್‌ಎಸ್ ಡ್ಯಾಂನಲ್ಲಿ (KRS Dam) 118.60 ಅಡಿ ನೀರು ಭರ್ತಿ ಆಗಿದ್ದು, ಇದೀಗ ಹಳೇ ಮೈಸೂರು ಭಾಗದ ಜೀವನಾಡಿ ಹೊಸ ದಾಖಲೆ ಬರೆದಿದೆ.

    ಜೂನ್ ತಿಂಗಳಲ್ಲೇ ಅಣೆಕಟ್ಟು ಸಂಪೂರ್ಣ ಭರ್ತಿಯತ್ತ ಸಾಗುತ್ತಿದ್ದು, ಈಗಾಗಲೇ ಹಳೇ ಮೈಸೂರು ಭಾಗದ ಜೀವನಾಡಿ ಕೆಆರ್‌ಎಸ್ ಡ್ಯಾಂ 118.60 ಅಡಿ ತುಂಬಿದೆ. ಇತಿಹಾಸದಲ್ಲೇ ಮೊದಲ ಬಾರಿಗೆ ಜೂನ್‌ನಲ್ಲಿ ಇಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ. ಇದನ್ನೂ ಓದಿ: Yoga Day 2025: ಯೋಗಾಂಧ್ರದಲ್ಲಿ ʻನಮೋʼ ಯೋಗ – 25,000 ವಿದ್ಯಾರ್ಥಿಗಳಿಂದ 108 ನಿಮಿಷ ಸೂರ್ಯ ನಮಸ್ಕಾರ

    ಜಲಾಶಯದ ನಿರ್ಮಾಣವಾದಾಗಿನಿಂದ ಮೊದಲ ಬಾರಿಗೆ ಜೂನ್‌ನಲ್ಲಿ ಇಷ್ಟೊಂದು ನೀರು ಸಂಗ್ರಹವಾಗುವ ಮೂಲಕ ಇತಿಹಾಸ ಸೃಷ್ಟಿಯಾಗಿದೆ. ಸಾಮಾನ್ಯವಾಗಿ ಜುಲೈ ಅಂತ್ಯ ಅಥವಾ ಆಗಸ್ಟ್ನಲ್ಲಿ ಡ್ಯಾಂ ಭರ್ತಿಯಾಗುತ್ತಿತ್ತು. ಆದರೆ ಈ ಬಾರಿ ಕಾವೇರಿ ಜಲಾನಯನ (Cauvery Basin) ಪ್ರದೇಶದಲ್ಲಿ ಭಾರೀ ಮಳೆಯಾದ ಹಿನ್ನೆಲೆ ಕೆಆರ್‌ಎಸ್ ಡ್ಯಾಂ 118.60 ಅಡಿ ಭರ್ತಿಯಾಗಿದೆ. ಇದನ್ನೂ ಓದಿ: ಭಟ್ಕಳದ ಇಸ್ಪೀಟ್‌ ಕ್ಲಬ್ ಮೇಲೆ ದಾಳಿ – 2,000 ರೂ. ವಶಕ್ಕೆ, 25 ಜನರ ಮೇಲೆ ಕೇಸ್‌

    124.80 ಅಡಿ ಗರಿಷ್ಠ ಮಟ್ಟ ಹೊಂದಿರುವ ಕನ್ನಂಬಾಡಿಯ ಸಂಪೂರ್ಣ ಭರ್ತಿಗೆ ಕೇವಲ 6 ಅಡಿ ಮಾತ್ರ ಬಾಕಿಯಿದೆ. ಸದ್ಯ ಡ್ಯಾಂನಲ್ಲಿ 18,387 ಕ್ಯುಸೆಕ್ ಒಳಹರಿವಿದೆ. ಇದೇ ರೀತಿ ಒಳಹರಿವು ಬಂದ್ರೆ ಒಂದು ವಾರದಲ್ಲೇ ಡ್ಯಾಂ ಭರ್ತಿಯಾಗಲಿದ್ದು, ಡ್ಯಾಂಗೆ 8 ಟಿಎಂಸಿ ನೀರು ಹರಿದು ಬಂದರೆ ಸಂಪೂರ್ಣ ಭರ್ತಿಯಾಗಲಿದೆ. ಕೆಆರ್‌ಎಸ್ ಡ್ಯಾಂ 49.452 ಟಿಎಂಸಿ ನೀರು ಸಂಗ್ರಹದ ಸಾಮರ್ಥ್ಯ ಹೊಂದಿದೆ.

  • ಕೆಆರ್‌ಎಸ್ ಡ್ಯಾಂನಲ್ಲಿ ಮೂರೇ ದಿನಕ್ಕೆ 9 ಅಡಿ ನೀರು ಏರಿಕೆ

    ಕೆಆರ್‌ಎಸ್ ಡ್ಯಾಂನಲ್ಲಿ ಮೂರೇ ದಿನಕ್ಕೆ 9 ಅಡಿ ನೀರು ಏರಿಕೆ

    ಮಂಡ್ಯ: ಕಾವೇರಿ ಜಲಾನಯನ (Cavery Basin) ಪ್ರದೇಶದಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಮೂರೇ ದಿನಕ್ಕೆ ಕೆಆರ್‌ಎಸ್ ಡ್ಯಾಂನಲ್ಲಿ (KRS Dam) 9 ಅಡಿ ನೀರು ಏರಿಕೆ ಕಂಡಿದೆ.

    ಹಳೆ ಮೈಸೂರು ಭಾಗದ ಜೀವನಾಡಿಯಾಗಿರುವ ಕೆಆರ್‌ಎಸ್ ಡ್ಯಾಂಗೆ ಮತ್ತೇ ಜೀವಕಳೆ ಬಂದಿದೆ. ಡ್ಯಾಂಗೆ 22 ಸಾವಿರ ಕ್ಯೂಸೆಕ್‌ಗೂ ಅಧಿಕ ನೀರು ಹರಿದು ಬರುತ್ತಿದೆ. 3 ದಿನದ ಹಿಂದೆ 89 ಅಡಿಗೆ ಡ್ಯಾಂ ನೀರಿನ ಮಟ್ಟ ಇಳಿದಿತ್ತು. ಕೊಡಗು ಹಾಗೂ ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆ ಹಿನ್ನಲೆ ಇಂದು ಡ್ಯಾಂನಲ್ಲಿ 98 ಅಡಿಗೆ ನೀರು ಏರಿಕೆ ಕಂಡಿದೆ. ಇದನ್ನೂ ಓದಿ: ಭೀಮಾ ನದಿ ತೀರದಲ್ಲಿ ಪ್ರವಾಹದ ಆತಂಕ – ನದಿಗಿಳಿಯದಂತೆ ಜಿಲ್ಲಾಡಳಿತ ಸೂಚನೆ

    ನಾಳೆ ವೇಳೆಗೆ ಡ್ಯಾಂ ನೀರಿನ ಮಟ್ಟ 100 ಅಡಿ ತಲುಪುವ ಸಾಧ್ಯತೆಗಳಿವೆ. ಇದೀಗ ಡ್ಯಾಂನಲ್ಲಿ 22,788 ಕ್ಯೂಸೆಕ್ ನೀರಿನ ಒಳಹರಿವಿದ್ದು, ಡ್ಯಾಂನಿಂದ 630 ಕ್ಯೂಸೆಕ್ ನೀರಿನ ಹೊರ ಹರಿವಿದೆ. ಈ ಕೆಆರ್‌ಎಸ್ ಡ್ಯಾಂನಲ್ಲಿ 49.452 ಟಿಎಂಸಿ ನೀರಿನ ಸಾಮರ್ಥ್ಯವಿದ್ದು, ಸದ್ಯ ಡ್ಯಾಂನಲ್ಲಿ 21.282 ಟಿಎಂಸಿ ನೀರು ಸಂಗ್ರಹವಾಗಿದೆ. ಇದನ್ನೂ ಓದಿ: ಹಾಸನದಲ್ಲಿ ತಗ್ಗಿದ ಮಳೆ ಅಬ್ಬರ – ಹೇಮಾವತಿ ಒಳಹರಿವಿನಲ್ಲಿ ಇಳಿಕೆ

  • ಮಂಡ್ಯದಲ್ಲಿ ಭಾರೀ ಮಳೆ – ಕೆಆರ್‌ಎಸ್‌ಗೆ ಒಳಹರಿವು ಹೆಚ್ಚಳ

    ಮಂಡ್ಯದಲ್ಲಿ ಭಾರೀ ಮಳೆ – ಕೆಆರ್‌ಎಸ್‌ಗೆ ಒಳಹರಿವು ಹೆಚ್ಚಳ

    ಮಂಡ್ಯ: ಕಾವೇರಿ (Cauvery) ಜಲಾನಯನ ಪ್ರದೇಶದಲ್ಲಿ ಭಾನುವಾರದಿಂದ ಮುಂಗಾರು ಮಳೆ (Mansoon Rain) ಅಬ್ಬರಿಸುತ್ತಿರುವ ಹಿನ್ನೆಲೆ ಹಳೆ ಮೈಸೂರು (Mysuru) ಭಾಗದ ಜೀವನಾಡಿಯಾಗಿರುವ ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಡ್ಯಾಂನ (KRS Dam) ಒಳಹರಿವಿನ ಪ್ರಮಾಣದಲ್ಲಿ ಏರಿಕೆ ಕಂಡಿದೆ.

    ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಬೀಳದ ಪರಿಣಾಮ ಕೆಆರ್‌ಎಸ್ ಡ್ಯಾಂನಲ್ಲಿ ಕೇವಲ 15 ಟಿಎಂಸಿ ನೀರು ಇತ್ತು. ಇದರಿಂದ ಜನರಲ್ಲಿ ಆತಂಕ ಸೃಷ್ಟಿಯಾಗಿತ್ತು. ಆದರೆ ಭಾನುವಾರದಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಬೀಳುತ್ತಿರುವ ಮಳೆಯಿಂದ ಡ್ಯಾಂ ಭರ್ತಿಯಾಗುತ್ತದೆ ಎಂಬ ಆಶಾ ಭಾವನೆ ಜನರಲ್ಲಿ ಮೂಡಿದೆ. ಇದನ್ನೂ ಓದಿ: ಮೆಟ್ರೋ ಕಾಮಗಾರಿ ಸ್ಥಳಗಳಲ್ಲಿ ಸುಗಮ ಸಂಚಾರಕ್ಕೆ ಮುಖ್ಯರಸ್ತೆ, ಸರ್ವಿಸ್ ರಸ್ತೆ ವಿಲೀನ – ಡಿಕೆಶಿ ಸ್ಥಳ ಪರಿಶೀಲನೆ

    ಇದೀಗ ಕೆಆರ್‌ಎಸ್ ಡ್ಯಾಂಗೆ 2,053 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಮಂಗಳವಾರಕ್ಕೆ ನೀರಿನ ಪ್ರಮಾಣವು 5,000 ಕ್ಯೂಸೆಕ್‌ಗೆ ಹೆಚ್ಚುವ ಸಾಧ್ಯತೆ ಇದೆ. 124.80 ಅಡಿ ಗರಿಷ್ಠ ಮಟ್ಟ ಹೊಂದಿರುವ ಕೆಆರ್‌ಎಸ್ ಡ್ಯಾಂನಲ್ಲಿ ಸದ್ಯ 89.35 ಅಡಿ ನೀರು ಇದೆ. ಇನ್ನೂ 49.452 ಟಿಎಂಸಿ ಗರಿಷ್ಠ ಸಾಮರ್ಥ್ಯ ಹೊಂದಿದ್ದು, ಈಗ 15.555 ಟಿಎಂಸಿ ನೀರಿದೆ. ಹೊರ ಹರಿವಿನ ಪ್ರಮಾಣ 347 ಕ್ಯೂಸೆಕ್ ಇದೆ.

  • KRS ನೀರಿನ ಮಟ್ಟ ಭಾರೀ ಕುಸಿತ – ಕುಡಿಯುವ ನೀರಿಗೆ ಶುರುವಾಗಿದೆ ಆತಂಕ

    KRS ನೀರಿನ ಮಟ್ಟ ಭಾರೀ ಕುಸಿತ – ಕುಡಿಯುವ ನೀರಿಗೆ ಶುರುವಾಗಿದೆ ಆತಂಕ

    ಮಂಡ್ಯ: ಹಳೆ ಮೈಸೂರು (Old Mysuru) ಭಾಗದ ಜೀವನಾಡಿಯಾಗಿರುವ ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ KRS ಜಲಾಶಯದ ನೀರಿನ ಮಟ್ಟ ಪ್ರತಿ ದಿನ ಒಂದು ಅಡಿ ಕುಸಿಯುತ್ತಿದೆ. ಇದರಿಂದ ಕೆಲವೇ ದಿನಗಳಲ್ಲಿ ಭಾರೀ ಪ್ರಮಾಣದಲ್ಲಿ ನೀರಿನ ಮಟ್ಟ ಇಳಿಕೆಯಾಗಿದೆ.

    ಶುಕ್ರವಾರ 78 ಅಡಿ ಇದ್ದ ಕೆಆರ್‌ಎಸ್ ಜಲಾಶಯದ (KRS Dam) ನೀರಿನ ಮಟ್ಟ ಶನಿವಾರ 77 ಅಡಿಗೆ ಕುಸಿದಿದೆ. ದಿನೇ-ದಿನೇ ಭಾರೀ ಪ್ರಮಾಣದಲ್ಲಿ ಡ್ಯಾಂ ನೀರಿನ ಮಟ್ಟ ಕುಸಿಯುತ್ತಿದೆ. ಈ ಹಿನ್ನೆಲೆಯಲ್ಲಿ ರೈತರ (Farmers) ಬೆಳೆಗಳಿಗೆ ಬಿಟ್ಟಿದ್ದ ನೀರನ್ನ ನಿಲ್ಲಿಸಲಾಗಿದೆ. ಮುಂದೆ ಮಳೆ ಬಿದ್ದು ಡ್ಯಾಂ ಕೊಂಚ ಪ್ರಮಾಣದಲ್ಲಿ ಭರ್ತಿಯಾಗುವವರೆಗೆ ಬೆಳೆಗಳಿಗೆ ನೀರು ಬಿಡಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಇದನ್ನೂ ಓದಿ: ರಾಜ್ಯ ಸರ್ಕಾರ ಎಲ್ಲಾ ಸಮಸ್ಯೆಗಳನ್ನು ಎದುರಿಸುವಷ್ಟು ಶಕ್ತವಾಗಿದೆ: ಸಿದ್ದರಾಮಯ್ಯ

    ಅಲ್ಲದೇ ಜಲಾಶಯದಲ್ಲಿರುವ ನೀರು ಜುಲೈ 2ನೇ ವಾರದವರೆಗೆ ಕುಡಿಯಲು ಬಳಕೆಯಾಗುತ್ತದೆ. ಒಂದು ವೇಳೆ ಉತ್ತಮ ಮಳೆಯಾಗದಿದ್ದಲ್ಲಿ ಕಾವೇರಿ ನೀರು ಅವಲಂಬಿತ ಜನರಿಗೆ ಕುಡಿಯುವ ನೀರಿಗೂ (Drinking Water) ಸಮಸ್ಯೆ ಎದುರಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: 80 ಅಡಿಗೆ ತಲುಪಿದ ಕೆಆರ್‌ಎಸ್ ನೀರಿನ ಮಟ್ಟ – ಕುಡಿಯುವ ನೀರಿಗೆ ಶುರುವಾಗಿದೆ ಆತಂಕ

    124.80 ಗರಿಷ್ಠ ಮಟ್ಟದ ಡ್ಯಾಂನಲ್ಲಿ 77.005 ಅಡಿಯಷ್ಟೇ ನೀರಿದೆ. ಕೆಆರ್‌ಎಸ್ ಡ್ಯಾಂ 49.452 ಟಿಎಂಸಿ ಗರಿಷ್ಠ ಸಾಮರ್ಥ್ಯ ಹೊಂದಿದ್ದರೂ ಈಗ ಇರೋದು 9.808 ಟಿಎಂಸಿ ನೀರು ಮಾತ್ರ. ಈ ಪೈಕಿ 2.808 ಟಿಎಂಸಿ ಮಾತ್ರ ಬಳಕೆಗೆ ಯೋಗ್ಯವಾಗಿದೆ. ಉಳಿದ 7 ಟಿಎಂಸಿ ನೀರು ಡೆಡ್ ಸ್ಟೋರೇಜ್ ಆಗಿದೆ. ಸದ್ಯ ಜಲಾಶಯಕ್ಕೆ 514 ಕ್ಯೂಸೆಕ್ ನೀರು ಒಳಹರಿವು ಇದ್ದು, 834 ಕ್ಯೂಸೆಕ್ ನೀರು ಡ್ಯಾಂನಿಂದ ಹೊರ ಹೋಗುತ್ತಿದೆ.