ಮಂಡ್ಯ: ಮುಂಗಾರು ಮಳೆ ಬಳಿಕ ಕಾವೇರಿ ಜಲಾನಯನ ಪ್ರದೇಶದಲ್ಲಿ ಹಿಂಗಾರು ಮಳೆಯೂ ಚುರುಕುಗೊಂಡಿದೆ. ಈ ಹಿನ್ನೆಲೆ ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಡ್ಯಾಂನ (KRS Dam) ಒಳಹರಿವಿನ ಪ್ರಮಾಣ ಹೆಚ್ಚಾಗಿದೆ.
ಸದ್ಯ ಕೆಆರ್‌ಎಸ್ ಡ್ಯಾಂನ ಒಳಹರಿವಿನ ಪ್ರಮಾಣ 20,797 ಕ್ಯೂಸೆಕ್ ಇದ್ದು, 25 ಸಾವಿರ ಕ್ಯೂಸೆಕ್‌ನ್ನು ಸದ್ಯ ನದಿಗೆ ಬಿಡಲಾಗುತ್ತಿದೆ. 124.80 ಗರಿಷ್ಟ ಮಟ್ಟದ ಕೆಆರ್‌ಎಸ್ ಸಂಪೂರ್ಣ ಭರ್ತಿಯಾಗಿದ್ದು, ಡ್ಯಾಂನಲ್ಲಿ ಗರಿಷ್ಠ ಸಾಮರ್ಥ್ಯವಾದ 49.452 ಟಿಎಂಸಿಯಷ್ಟು ನೀರು ಭರ್ತಿಯಾಗಿದೆ. ಇದನ್ನೂ ಓದಿ: ಏಷ್ಯಾಕಪ್ ವಿವಾದದ ಬೆನ್ನಲ್ಲೇ ನವೆಂಬರ್‌ನಲ್ಲಿ ಪಾಕ್ ವಿರುದ್ಧ ಆಡಲಿದೆ ಭಾರತ
ಮಂಡ್ಯ/ಬೆಂಗಳೂರು: ಐತಿಹಾಸಿಕ ಕಾವೇರಿ ಆರತಿ ಕಾರ್ಯಕ್ರಮ ರಾಜ್ಯ, ದೇಶದಲ್ಲಿ ಮಾತ್ರವಲ್ಲದೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೂಡ ಸಾಕಷ್ಟು ಪ್ರಶಂಸೆಗೆ ಪಾತ್ರವಾಗಿದೆ. ಇದೀಗ ಅಮೆರಿಕದಲ್ಲಿರುವ ಬೆಂಗಳೂರು ದಂಪತಿಗಳು ಕಾವೇರಿ ಆರತಿಗಾಗಿ 5 ಲಕ್ಷ ರೂ. ಸಮರ್ಪಿಸಿದ್ದಾರೆ.
ತಾವು ಬೆಂಗಳೂರಿನವರಾಗಿದ್ದು, ಕಾವೇರಿ ನೀರನ್ನು ಕುಡಿದು ಬಾಲ್ಯ ಜೀವನ ಕಳೆದು, ಇಂಜಿನಿಯರಿಂಗ್ ಪದವಿ ಪೂರೈಸಿ ಅಮೆರಿಕದಲ್ಲಿ ನೆಲೆಸಿದ್ದೇವೆ. ಸೆ.26ರಿಂದ ಕೆಆರ್‌ಎಸ್‌ನ ಬೃಂದಾವನದಲ್ಲಿ ಆರಂಭವಾಗಿರುವ ಐತಿಹಾಸಿಕ “ಕಾವೇರಿ ಆರತಿ” ಕಾರ್ಯಕ್ರಮವನ್ನು ಮಾಧ್ಯಮ ಮತ್ತು ಸಾಮಾಜಿಕ ಮಾಧ್ಯಮದಲ್ಲಿ ವೀಕ್ಷಿಸಿ ಭಾವುಕರಾಗಿದ್ದೇವೆ. ಅಮೆರಿಕದಲ್ಲಿ ನೆಲೆಸಿದ್ದರೂ ನಾವು ಕುಡಿದು ಬೆಳೆದಿರುವುದು ಕಾವೇರಿ ನೀರೇ. ಕಾವೇರಿ ತಾಯಿ ಕೋಟ್ಯಂತರ ಜನರ ದಾಹ ನೀಗಿಸಿದ್ದು, ರೈತರ ಬದುಕಿಗೆ ಆಸರೆಯಾಗಿದ್ದಾಳೆ. ಜೀವನದ ಅವಿಭಾಜ್ಯ ಅಂಗವಾಗಿದ್ದಾಳೆ. ಕನ್ನಡ ನಾಡಿನ ಜನತೆ ಕಾವೇರಿಯನ್ನು ಮರೆಯಲು ಸಾಧ್ಯವಿಲ್ಲ. ಇಂತಹ ಜೀವನದಿಗೆ ವಂದಿಸಿ, ನಮಿಸುವ ಕಾರ್ಯಕ್ಕೆ ಮುನ್ನುಡಿ ಬರೆದಿರುವ ಕರ್ನಾಟಕ ಸರ್ಕಾರದ ಈ ಕಾರ್ಯಕ್ಕೆ ಎಲ್ಲಾ ಅನಿವಾಸಿ ಕನ್ನಡಿಗರ ಪರವಾಗಿ ಅಭಿನಂದನೆಗಳು ಎಂದು ಜ್ಯೋತಿ ವಿಕಾಸ್ ಹೇಳಿದ್ದಾರೆ.
“ಕಾವೇರಿ ಆರತಿ”ಯ ಪೂಜಾ ವಿಧಾನ ಹಾಗೂ ಕಾರ್ಯಕ್ರಮದ ಬಗ್ಗೆ ಸಂತಸಗೊಂಡಿದ್ದೇವೆ. ಕರ್ನಾಟಕ ಸರ್ಕಾರದ ಈ ಕಾರ್ಯ ಪ್ರಶಂಸನೀಯ. ರಾಜ್ಯದ ಇತಿಹಾಸದಲ್ಲಿ ಈ ಕಾರ್ಯ ನಿರಂತರವಾಗಿ ನಡೆಯಬೇಕು. ಕಾವೇರಿ ಮಾತೆಗೆ ವಂದಿಸಿ, ಪೂಜಿಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ ಮತ್ತು ಜವಾಬ್ದಾರಿ. ದೇವರು ಎಂದರೆ ಪ್ರಕೃತಿ. ಆ ಪ್ರಕೃತಿ ರೂಪವೇ ಕಾವೇರಿ. ಕಾವೇರಿಯನ್ನು ಪೂಜಿಸುವುದರಿಂದ ಮಾನವ ಕುಲ ಮಾತ್ರವಲ್ಲದೆ ಸಕಲ ಜೀವಸಂಕುಲಕ್ಕೂ ಸನ್ಮಂಗಳ ಉಂಟಾಗಲಿದೆ. ಆದ್ದರಿಂದ ಕಾವೇರಿ ಆರತಿಯನ್ನು ಕೇವಲ ದಸರಾಗೆ ಮಾತ್ರ ಸೀಮಿತಗೊಳಿಸದೆ ವರ್ಷ ಪೂರ್ತಿ ಆಚರಣೆ ಮಾಡಬೇಕು ಅಂತೇಳಿದ್ದಾರೆ.ಇದನ್ನೂ ಓದಿ: ಡ್ರಗ್ಸ್ ಗ್ಯಾಂಗ್‌ನಿಂದ ಅರ್ಜೆಂಟೀನಾದ 3 ಯುವತಿಯರ ಬರ್ಬರ ಹತ್ಯೆ
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ (Cauvery River’s Catchment Area) ಭಾರೀ ಮಳೆ ಬೀಳುತ್ತಿರುವ ಕಾರಣ ಕೃಷ್ಣರಾಜಸಾಗರ ಜಲಾಶಯದಿಂದ (KRS Dam) 91 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ.
ಭಾರೀ ಪ್ರಮಾಣದಲ್ಲಿ ನೀರು ಹೊರ ಬಿಡುತ್ತಿರುವ ಕಾರಣ ಜಲಾಶಯದ ಕೆಳ ಭಾಗದಲ್ಲಿರುವ ಜನರು ನದಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದ್ದು ಶ್ರೀರಂಗಪಟ್ಟಣದಲ್ಲಿರುವ 221 ವರ್ಷ ಹಳೆಯದಾದ ಬ್ರಿಟಿಷರ ಕಾಲದ ವೆಲ್ಲೆಸ್ಲಿ ಸೇತುವೆ (Wellesley Bridge) ಯಾವುದೇ ಕ್ಷಣದಲ್ಲಿ ಮುಳುಗಡೆಯಾಗುವ ಸಾಧ್ಯತೆಯಿದೆ.
ಸದ್ಯ ಭಾರೀ ಪ್ರಮಾಣ ನೀರು ಬಿಟ್ಟಿರುವ ಕಾರಣ ಸೇತುವೆ ಮೇಲೆ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಈ ಹಿಂದೆ ಈ ಸೇತುವೆ ಮೈಸೂರು- ಬೆಂಗಳೂರು ರಸ್ತೆಗೆ ಸಂಪರ್ಕ ಕಲ್ಪಿಸುತ್ತಿತ್ತು.
ಕ್ಯೂಸೆಕ್ ಮತ್ತು ಟಿಎಂಸಿ ಎಂದರೆ ಎಷ್ಟು?
ಕ್ಯೂಸೆಕ್ ಎಂಬುದು Cubic feet per Secondನ ಹ್ರಸ್ವರೂಪ ಪ್ರತಿ ಸೆಕೆಂಡಿಗೆ ಒಂದು ಘನ ಅಡಿ ನೀರು ಹರಿದರೆ ಅದು ಒಂದು ಕ್ಯೂಸೆಕ್ ನೀರು ಎಂದು ಕರೆಯಲ್ಪಡುತ್ತದೆ. ಒಂದು ಘನ ಅಡಿ ನೀರನ್ನು ಲೀಟರುಗಳಿಗೆ ಪರಿವರ್ತಿಸಿದರೆ ಸುಮಾರು 28.317 ಲೀಟರುಗಳಾಗುತ್ತವೆ. 11,524 ಕ್ಯೂಸೆಕ್ ನೀರು 24 ಗಂಟೆಯ ಕಾಲ ನಿರಂತರ ಹರಿದರೆ ಒಂದು ಟಿಎಂಸಿ ಎಂದು ಕರೆಯಲಾಗುತ್ತದೆ. 10 ಸಾವಿರ ಕ್ಯೂಸೆಕ್ ನೀರು 24 ಗಂಟೆ ನಿರಂತರ ಹರಿದರೆ 0.864 ಟಿಎಂಸಿ ಅಡಿ ಆಗುತ್ತದೆ. 35.87 ಅಡಿ ಅಳದಷ್ಟು ನೀರನ್ನು ಒಂದು ಚದರ ಮೈಲಿ ಪ್ರದೇಶದಲ್ಲಿ ಸಂಗ್ರಹಿಸಿದರೆ ಒಂದು ಟಿಎಂಸಿ ಅಡಿ ಆಗುತ್ತದೆ.
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ಅಬ್ಬರಿಸುತ್ತಿರುವ ಪರಿಣಾಮ ಕಾವೇರಿ ನದಿಯಲ್ಲಿ (Cauvery River) ಪಿಂಡ ಪ್ರದಾನಕ್ಕೆ ಜಿಲ್ಲಾಡಳಿತ ನಿಷೇಧ ಹೇರಿದೆ.
ಮಳೆ (Rain) ಅಬ್ಬರ ಹಿನ್ನೆಲೆ ಹಳೆ ಮೈಸೂರು ಭಾಗದ ಜೀವನಾಡಿ ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಅಣೆಕಟ್ಟೆಯ (KRS Dam) ಒಳಹರಿವು ಹಾಗೂ ಹೊರಹರಿವಿನಲ್ಲಿ ಏರಿಕೆಯಾಗಿದೆ. ಕೆಆರ್‌ಎಸ್ ಡ್ಯಾಂಗೆ 52,856 ಕ್ಯೂಸೆಕ್ ನೀರು ಹರಿದು ಬರುತ್ತಿರುವ ಹಿನ್ನೆಲೆ ಡ್ಯಾನಿಂದ 56,474 ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗಿದೆ. ಇದನ್ನೂ ಓದಿ: ಮೈಸೂರಲ್ಲಿ ಸಿಕ್ಕ ಮಾದಕ ವಸ್ತುಗೆ ಮಹಾರಾಷ್ಟ್ರ ನಂಟು – MDMA ಸೇಫ್ ಜೋನ್ ಆಗ್ತಿದಿಯಾ ಮೈಸೂರು?
124.80 ಅಡಿ ಗರಿಷ್ಠ ಮಟ್ಟದ ಕೆಆರ್‌ಎಸ್ ಡ್ಯಾಂ 123.80 ಅಡಿಯಷ್ಟು ಭರ್ತಿಯಾಗಿದೆ. ಡ್ಯಾಂ 49.452 ಟಿಎಂಸಿ ಗರಿಷ್ಠ ಸಾಮಾರ್ಥ್ಯ ಹೊಂದಿದೆ. ಇಂದು 48.062 ಟಿಎಂಸಿಯಷ್ಟು ನೀರು ಶೇಖರಣೆ ಆಗಿದೆ. ಈಗಾಗಲೇ ಮಂಡ್ಯ ಜಿಲ್ಲಾಡಳಿತ ನದಿ ಪಾತ್ರದ ಜನರಿಗೆ ಸುರಕ್ಷಿತ ಸ್ಥಳದಲ್ಲಿ ಇರುವುದರ ಜೊತೆಗೆ ಆಸ್ತಿ- ಪಾಸ್ತಿ, ಜಾನುವಾರುಗಳ ರಕ್ಷಣೆ ಸಂಬಂಧ ಅಲರ್ಟ್ ಘೋಷಣೆ ಮಾಡಿದೆ. ಇದನ್ನೂ ಓದಿ: ಹಿಂದೂ ವ್ಯಕ್ತಿಯನ್ನು ಮುಸ್ಲಿಂ ಜಾತಿಗೆ ಸೇರಿಸಿದ ಸರ್ಕಾರ; ಅಧಿಕಾರಿಗಳ ಯಡವಟ್ಟಿಗೆ ಕುಟುಂಬ ಕಂಗಾಲು
ಇದಲ್ಲದೇ ಕಾವೇರಿ ನದಿ ಪಾತ್ರದಲ್ಲಿ ಇರುವ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ನಿರ್ಬಂಧ ಹೇರಿದೆ. ಕೆಆರ್‌ಎಸ್ ಅಣೆಕಟ್ಟೆ ಜೂನ್ ತಿಂಗಳಲ್ಲಿಯೇ ಭರ್ತಿಯಾಗಿರುವುದರಿಂದ ಇನ್ನುಮುಂದೆ ಬಂದ ಒಳಹರಿವನ್ನು, ಹೊರಹರಿವನ್ನಾಗಿ ಮಾಡಬೇಕಾಗಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಕಾವೇರಿ ಕೊಳ್ಳದಲ್ಲಿ ಪ್ರವಾಹ ಎದುರಾಗುವ ಸಾಧ್ಯತೆ ಸಹ ಇದೆ. ಇದನ್ನೂ ಓದಿ: ಹರಿದ್ವಾರ ಮಾನಸ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತ – 6 ಭಕ್ತರು ಸಾವು
ಚಾಮರಾಜನಗರ: ಕಾವೇರಿ ನದಿಗೆ (Cauvery River) ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ಗ್ರಾಮ ಲೆಕ್ಕಾಧಿಕಾರಿಯ (VA) ಶವ ಮೂರು ದಿನಗಳ ಬಳಿಕ ಪತ್ತೆಯಾದ ಘಟನೆ ಚಾಮರಾಜನಗರ (Chamarajanagara) ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಯಡಕುರಿಯಾ ಬಳಿ ಪತ್ತೆಯಾಗಿದೆ.
ನಂತರ, ಅಗ್ನಿಶಾಮಕ ದಳ ಮತ್ತು ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದರು. ನಿರಂತರ ಹುಡುಕಾಟದ ಬಳಿಕ ನಿರಂಜನ್ ಮೃತದೇಹ ಯಡಕುರಿಯಾ ಬಳಿ ಪತ್ತೆಯಾಗಿದೆ. ಇದೀಗ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಕೊಳ್ಳೇಗಾಲದ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಕುರಿತು ಕೊಳ್ಳೇಗಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಡ್ಯ: ಯುವತಿಯೋರ್ವಳು ಕಾವೇರಿ ನದಿಗೆ (Cauvery River) ಬಿದ್ದು ಆತ್ಮಹತ್ಯೆಗೆ ಮುಂದಾಗಿರುವ ಘಟನೆ ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣದ ಉತ್ತರ ಕಾವೇರಿ ಸೇತುವೆ ಬಳಿ ಜರುಗಿದೆ.
ಹಾಸನ (Hassan) ಜಿಲ್ಲೆ ಬೇಲೂರು ತಾಲೂಕಿನ ಪ್ರಸಾದಹಳ್ಳಿ ಗ್ರಾಮದ ಮಂಜುನಾಥ್ ಅವರ ಪುತ್ರಿ ಸಿಂಚನಾ (24) ಕಾವೇರಿ ನದಿಗೆ ಹಾರಿರುವ ಯುವತಿ ಆಗಿದ್ದಾಳೆ. ಯುವತಿ ಸಿಂಚನಾ ಎಂಸಿಎ ಪದವೀಧರೆಯಾಗಿದ್ದು, (MCA Graduate) ಕೆಲ ವರ್ಷಗಳಿಂದೀಚೆಗೆ ಪಿಸಿಓಡಿ (PCOD) ಸಮಸ್ಯೆಯಿಂದ ಬಳಲುತ್ತಿದ್ದರು. ಇದೇ ಕಾರಣಕ್ಕೆ ಮಾನಸಿಕ ಖಿನ್ನತೆಗೆ ಒಳಾಗಾಗಿದ್ದರು ಎನ್ನಲಾಗಿದೆ. ಇದನ್ನೂ ಓದಿ: ಎತ್ತಿನಹೊಳೆ ಯೋಜನೆಗೆ ಅಡ್ಡಿ ಎದುರಾಗುತ್ತಾ? – ಕೇಂದ್ರ ನಾಯಕರ ಸಹಕಾರ ಕೇಳಿದ ಡಿಕೆಶಿ
ಮಂಗಳವಾರ ಸಂಜೆ ವೇಳೆಗೆ ಏಕಾಏಕಿ ಮನೆಯಿಂದ ಹೊರಟು ಹಾಸನ ಮೂಲಕ ಚನ್ನರಾಯಪಟ್ಟಣ ಮಾರ್ಗವಾಗಿ ಶ್ರೀರಂಗಪಟ್ಟಣಕ್ಕೆ ಬಸ್ಸಿನಲ್ಲಿ ಆಗಮಿಸಿದ್ದಾರೆ. ನಂತರ ಬಸ್ ನಿಲ್ದಾಣದಿಂದ ಬೆಂಗಳೂರು ದಿಕ್ಕಿಗೆ ನಡೆದು ಹೋದ ಈಕೆ ಉತ್ತರ ಕಾವೇರಿಯ ಸೇತುವೆ ಮೇಲಿಂದ ರಾತ್ರಿ 8ರ ಸಮಯದಲ್ಲಿ ಉಕ್ಕಿ ಹರಿಯುತ್ತಿರುವ ಕಾವೇರಿ ನದಿಗೆ ಹಾರಿದ್ದಾರೆ. ಇದನ್ನು ಗಮನಿಸಿದ ಸ್ಥಳಿಯ ದಾರಿಹೋಕ ವಾಹನ ಸವಾರರು ತಕ್ಷಣ ಶ್ರೀರಂಗಪಟ್ಟಣ ಟೌನ್ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ರಾಷ್ಟ್ರಪತಿ ದ್ರೌಪದಿ ಮುರ್ಮುರನ್ನು `ಮುರ್ಮಾಜೀ’ ಎಂದು ಉಚ್ಛರಿಸಿ ಅಪಮಾನ ಮಾಡಿದ ಖರ್ಗೆ
ವಿಷಯ ತಿಳಿದು ಅಗ್ನಿಶಾಮಕ ದಳ ಸಿಬ್ಬಂದಿ, ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಹಾರೆ. ಘಟನಾ ಸ್ಥಳ ಸೇರಿದಂತೆ ನದಿ ತೀರದ 1 ಕಿಮಿ ಸುತ್ತಮುತ್ತಲಿನ ಪ್ರದೇಶದಲ್ಲಿ ಮೊಬೈಲ್ ಬೆಳಕಿನಲ್ಲೇ ಹುಡುಕಾಟ ನಡೆಸಿದ್ದಾರೆ. ಸ್ಥಳದಲ್ಲಿ ಸಿಕ್ಕ ಬ್ಯಾಗ್, ಆಧಾರ್ ಕಾಡ್೯ ಹಾಗೂ ಚಪ್ಪಲಿಗಳ ಆಧಾರದ ಮೇಲೆ ಈಕೆಯೇ ನದಿಗೆ ಹಾರಿದ್ದಾಳೆ ಎಂದು ಶಂಖೆ ವ್ಯಕ್ತಪಡಿಸಿ ಇದೀಗ ಕುಟುಂಬಸ್ಥರಿಗೆ ಮಾಹಿತಿ ರವಾನಿಸಿದ್ದಾರೆ. ಇದನ್ನೂ ಓದಿ: ದಾವಣಗೆರೆಯಲ್ಲಿ ಅತೃಪ್ತರ ಬಲ ಪ್ರದರ್ಶನ – ಬಿಎಸ್‌ವೈ ವಿರುದ್ಧ ಸಿದ್ದೇಶ್ವರ್, ಲಿಂಬಾವಳಿ ಗುಡುಗು
ಸಂಪೂರ್ಣ ಕತ್ತಲಾಗಿದ್ದ ಕಾರಣ ಹರಿಯುವ ಕಾವೇರಿಯ ಪ್ರವಾಹದ ನೀರಲ್ಲಿ ಸದ್ಯಕ್ಕೆ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ಸ್ಥಗಿತಗೊಳಿಸಿ ಇಂದು (ಬುಧವಾರ) ಮುಂಜಾನೆಯಿಂದಲೇ ಹುಡುಕಾಟ ಆರಂಭಿಸಲು ಶುರು ಮಾಡಿದ್ದಾರೆ. ಈ ಸಂಬಂಧ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಡ್ಯ: ಫೋಟೋ ತೆದುಕೊಳ್ಳಲು ಹೋಗಿ ಕಾವೇರಿ ನದಿಯಲ್ಲಿ (Cauvery Water) ವ್ಯಕ್ತಿಯೊಬ್ಬರು ಕೊಚ್ಚಿ ಹೋದ ಘಟನೆ ಶ್ರೀರಂಗಪಟ್ಟಣ (Srirangapatna) ತಾಲೂಕಿನ ಸರ್ವಧರ್ಮ ಆಶ್ರಮದ ಬಳಿ ನಡೆದಿದೆ.
ಮೈಸೂರಿನಲ್ಲಿ ಆಟೋ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ಮಹೇಶ್ ( 36) ನದಿಯಲ್ಲಿ ಕೊಚ್ಚಿ ಹೋದ ವ್ಯಕ್ತಿ. ಭಾನುವಾರ ಸಂಜೆ ಮಹೇಶ್ ಸ್ನೇಹಿತರೊಂದಿಗೆ ಕೆಆರ್‌ಎಸ್ ಭಾಗಕ್ಕೆ ಪಿಕ್ನಿಕ್ ಬಂದಿದ್ದರು. ಇದನ್ನೂಓದಿ: ರಶ್ಮಿಕಾ ಹೇಳಿದ್ರೆ ಅದು ನಿಜ ಆಗೋಲ್ಲ –ನಿಧಿ ಸುಬ್ಬಯ್ಯ ಕೌಂಟರ್
ಮಡಿಕೇರಿ: ಕೊಡಗು (Kodagu) ಜಿಲ್ಲೆಯಲ್ಲಿ ಕಳೆದ 2-3 ದಿನಗಳಿಂದ ಕೊಂಚಮಟ್ಟಿಗೆ ಮಳೆ ತಗ್ಗಿದ್ರೂ ಮಳೆ ಅವಾಂತರಗಳು ಮಾತ್ರ ನಿಲ್ಲುವ ಲಕ್ಷಣಗಳು ಗೋಚರಿಸುತ್ತಿಲ್ಲ. ಮಡಿಕೇರಿ (Madikeri_ ತಾಲೂಕಿನ ನಾಪೋಕ್ಲು ಬೋಳಿಬಾಣ್ಣೆ ಭಾಗದಲ್ಲಿ ಕಾವೇರಿ ನದಿ ಉಕ್ಕಿ ಹರಿಯುತ್ತಿರುವ ಪರಿಣಾಮದಿಂದ ಕೃಷಿ ಗದ್ದೆಗಳು ಸಂಪೂರ್ಣವಾಗಿ ಜಲಾವೃತವಾಗಿದೆ.
ಅಲ್ಲದೇ ಕಾಫಿ, ಅಡಿಕೆ ತೋಟಗಳಿಗೂ ಕಾವೇರಿ ನದಿ (Cauvery River) ನೀರು ಉಕ್ಕಿ ಹರಿಯುತ್ತಿರುವ ಪರಿಣಾಮ ರೈತರು ಕಂಗಾಲಾಗಿದ್ದಾರೆ. ಅಲ್ಲದೇ ರಸ್ತೆಯ ಮೇಲೂ 2-3 ಅಡಿಯಷ್ಟು ನೀರು ಹರಿಯುತ್ತಿರುವುದರಿಂದ ನಾಪೋಕ್ಲು ಮೂರ್ನಾಡು ರಸ್ತೆ ಸಂಪರ್ಕ ಕಡಿತಗೊಂಡಿದು. ಗ್ರಾಮೀಣ ಭಾಗದ ಜನರು ಸುತ್ತಿಬಳಸಿಕೊಂಡು ತಮ್ಮ ಊರಿನತ್ತ ತೆರಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದನ್ನೂ ಓದಿ: ಬಿಜೆಪಿ ಕುರುಬ ಸಮುದಾಯದ ನಾಯಕರ ಸಭೆ; ವಿಜಯೇಂದ್ರ ಪರ ಬ್ಯಾಟಿಂಗ್ – ಈಶ್ವರಪ್ಪ ಘರ್ ವಾಪ್ಸಿ ಬಗ್ಗೆ ಚರ್ಚೆ
ಮಳೆ ಹಾನಿ ಪ್ರದೇಶಕ್ಕೆ ಸಚಿವ ಬೋಸರಾಜು ಭೇಟಿ
ಇನ್ನೂ ಕೊಡಗು ಜಿಲ್ಲೆಯ ನಾಪೋಕ್ಲು ವ್ಯಾಪ್ತಿಯ ಚೆರಿಯಪರಂಬು ಭಾಗದಲ್ಲಿ ಮಳೆಯಿಂದ ಉಂಟಾಗಿರುವ ಹಾನಿ ಪ್ರದೇಶಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಬೋಸರಾಜು ಹಾಗೂ ವಿರಾಜಪೇಟೆ ಶಾಸಕ ಎಸ್ ಪೊನ್ನಣ್ಣ ಶನಿವಾರ (ನಿನ್ನೆ) ಭೇಟಿ ನೀಡಿ ಪರಿಶೀಲಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಲ್ಲಿ ಭಯಾನಕ ಹತ್ಯೆ – ಮಹಿಳೆಯ ಕೊಲೆ ಮಾಡಿ ಮೂಟೆಕಟ್ಟಿ ಕಸದ ಲಾರಿಯಲ್ಲಿಟ್ಟು ಎಸ್ಕೇಪ್!
ಪ್ರತಿ ವರ್ಷ ಮಳೆಗಾಲದಲ್ಲಿ ಉಕ್ಕಿ ಹರಿಯುವ ಕಾವೇರಿ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆಯ ಹಾಗೂ ಸುತ್ತಮುತ್ತಲಿನ ಪರಿಸರದ ವೀಕ್ಷಿಸಿದ ಮಾಡಿದ ಶಾಸಕರು, ಅಧಿಕಾರಿಗಳೊಂದಿಗೆ ಸುರಕ್ಷತೆ ಕ್ರಮದ ಬಗ್ಗೆ ಚರ್ಚಿಸಿ ಸಲಹೆ ನೀಡಿದರು. ಮುಂದಿನ ದಿನಗಳಲ್ಲಿ ಪ್ರವಾಹದಿಂದ ಸಂಪರ್ಕ ಕಡಿತಗೊಳ್ಳುವ ಈ ಸೇತುವೆಯ ಆಸುಪಾಸಿನಲ್ಲಿ ಮುಂಜಾಗ್ರತೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಚರ್ಚಿಸಿದರು. ಪ್ರವಾಹ ಪೀಡಿತ ಸ್ಥಳಗಳಿಗೆ ಜೀಪ್‌ನಲ್ಲಿ ತೆರಳಿ ಸಚಿವರು ಹಾಗೂ ಶಾಸಕರು ಜನರ ಸಮಸ್ಯೆ ಆಲಿಸಿದರು. ಇದನ್ನೂ ಓದಿ: ನಾರಾಯಣಪುರ ಜಲಾಶಯದಿಂದ ಕೃಷ್ಣಾ ನದಿಗೆ 1 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ
ಮಂಡ್ಯ: ಪ್ರತಿವರ್ಷ ಕಾವೇರಿ ಜಲಾನಯನ ಪ್ರದೇಶದಲ್ಲಿ (Cauvery Basin) ಜುಲೈ ತಿಂಗಳಲ್ಲಿ ಮುಂಗಾರು ಮಳೆ ಈ ಬಾರಿ ಜೂನ್ ತಿಂಗಳ ಮೊದಲ ವಾರದಲ್ಲಿಯೇ ಚುರುಕು ಪಡೆದುಕೊಂಡಿದೆ. ಇದರ ಪರಿಣಾಮ ಹಳೇ ಮೈಸೂರು ಭಾಗದ ಜೀವನಾಡಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯ (KRS Reservoir) 120.90 ಅಡಿಯಷ್ಟು ಭರ್ತಿಯಾಗಿದೆ. ಡ್ಯಾಂ ನಿರ್ಮಾಣವಾಗಿದ್ದಾಗಿನಿಂದ ಕೆಆರ್‌ಎಸ್ ಡ್ಯಾಂನಲ್ಲಿ ಜೂನ್ ತಿಂಗಳಲ್ಲೇ ಇಷ್ಟು ಪ್ರಮಾಣದ ನೀರು ಇರಲಿಲ್ಲ. ಇದೇ ಮೊದಲ ಬಾರಿಗೆ ದಾಖಲೆ ಪ್ರಮಾಣದ ನೀರು ಜೂನ್ ತಿಂಗಳಿನಲ್ಲಿ ಸಂಗ್ರಹವಾಗಿದೆ.
ಇನ್ನೂ ಮತ್ತೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು (Monsoon) ಚುರುಕುಗೊಂಡಿರುವ ಹಿನ್ನೆಲೆ 45 ಸಾವಿರ ಕ್ಯೂಸೆಕ್‌ಗೂ ನೀರು ಕೆಆರ್‌ಎಸ್ ಡ್ಯಾಂ ಬರುತ್ತಿದೆ. ಹೀಗಾಗಿ ಡ್ಯಾಂನಿಂದ 45 ಸಾವಿರ ಕ್ಯೂಸೆಕ್ ನೀರನ್ನು ಹೊರಗೆ ಹರಿಸಲಾಗುತ್ತಿದೆ. ಇಂದು ಸಹ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಹೆಚ್ಚು ಬೀಳುವ ಸಾಧ್ಯತೆ ಇದ್ದು ಕನ್ನಂಬಾಡಿ ಕಟ್ಟೆಗೆ 50 ಸಾವಿರಕ್ಕೂ ಅಧಿಕ ಕ್ಯೂಸೆಕ್‌ಗೂ ಅಧಿಕ ಒಳಹರಿವು ಬರುವ ಸಾಧ್ಯತೆಯಿದೆ. ಆದ್ದರಿಂದ ಇಂದು ಡ್ಯಾಂನಿಂದ 50 ಸಾವಿರ ಕ್ಯೂಸೆಕ್‌ನ್ನು ಬಿಡುವ ಸಾಧ್ಯತೆ ಇದೆ. ಇದನ್ನೂ ಓದಿ: ಕಬಿನಿಯಿಂದ 25 ಸಾವಿರ ಕ್ಯುಸೆಕ್ ನೀರು ಹೊರಕ್ಕೆ – ಯಾವುದೇ ಕ್ಷಣದಲ್ಲಿ ಮತ್ತಷ್ಟು ನೀರು ಬಿಡುಗಡೆ
ಡ್ಯಾಂನಿಂದ ನೀರು ಹೆಚ್ಚಿನ ಪ್ರಮಾಣದಲ್ಲಿ ಹರಿಸಲಾಗುತ್ತಿದ್ದು, ಕಾವೇರಿ ಕೊಳ್ಳದ ಜನರು ಎಚ್ಚಕೆಯಿಂದಿರುವಂತೆ ಕಾವೇರಿ ನೀರಾವರಿ ನಿಗಮ ಸೂಚಿಸಿದೆ. ಅಲ್ಲದೇ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿದ್ದು, ನದಿಯಲ್ಲಿ ಪಿಂಡಪ್ರಧಾನವಕ್ಕೂ ನಿಷೇಧ ಮಾಡಲಾಗಿದೆ. ಇದನ್ನೂ ಓದಿ: ಮೈಸೂರು| ಜಾನುವಾರು ರಕ್ಷಣೆ ಹೆಸರಿನಲ್ಲಿ ಹಣ ವಸೂಲಿ ಮಾಡ್ತಿದ್ದ ಗ್ಯಾಂಗ್ ಅರೆಸ್ಟ್
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮತ್ತೆ ಮಳೆ ಆರ್ಭಟ ಜೋರಾಗಿದೆ. ಕೆಆರ್‌ಎಸ್ ಡ್ಯಾಂ (KRS Dam) ಒಳಹರಿವಿನಲ್ಲಿ ಭಾರೀ ಏರಿಕೆಯಾಗಿದ್ದು, ಕಾವೇರಿ ನದಿಗೆ 29 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ.
ಈಗಾಗಲೇ ಭರ್ತಿಯಂಚಿಗೆ ಕೆಆರ್‌ಎಸ್ ಜಲಾಶಯ ತಲುಪಿದೆ. ಮುಂಜಾಗ್ರತಾ ಕ್ರಮವಾಗಿ ಡ್ಯಾಂನಿಂದ ನೀರು ಬಿಡುಗಡೆ ಮಾಡಲಾಗಿದೆ. ಕಾವೇರಿ ನದಿಗೆ 29 ಸಾವಿರ ಕ್ಯೂಸೆಕ್ ನೀರು ಹರಿಬಿಡಲಾಗಿದೆ. ಒಳ ಹರಿವು ಹೆಚ್ಚಾದಂತೆ ಹೊರ ಹರಿವು ಹೆಚ್ಚಳಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ. ಇದನ್ನೂ ಓದಿ: ಹೊಸ ದಾಖಲೆಗೆ ಸಿದ್ಧವಾಗ್ತಿದೆ ಕೆಆರ್‌ಎಸ್ – ಡ್ಯಾಂ ಸಂಪೂರ್ಣ ಭರ್ತಿಗೆ 5 ಅಡಿ ಬಾಕಿ
ಸದ್ಯ ಕೆಆರ್‌ಎಸ್ ಡ್ಯಾಂ 121 ಅಡಿ ಭರ್ತಿಯಾಗಿದೆ. 124.80 ಅಡಿ ಗರಿಷ್ಠ ಮಟ್ಟ ಹೊಂದಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಹೆಚ್ಚಾಗಿರುವ ಹಿನ್ನೆಲೆ ಗಂಟೆ ಗಂಟೆಗೂ ಡ್ಯಾಂನ ಒಳಹರಿವು ಹೆಚ್ಚಾಗುತ್ತಿದೆ. ಸದ್ಯ ಕೆಆರ್‌ಎಸ್‌ಗೆ 20,315 ಕ್ಯೂಸೆಕ್ ಒಳಹರಿವು ಬರ್ತಿದೆ.
ಸಂಜೆ ಅಥವಾ ನಾಳೆ ಬೆಳಗ್ಗೆ 50 ಕ್ಯೂಸೆಕ್‌ಗೆ ಏರಿಕೆ ಆಗುವ ಸಾದ್ಯತೆ ಇದೆ. ಕಾವೇರಿ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಎದುರಾಗಿದೆ. ಶ್ರೀರಂಗಪಟ್ಟಣ ವ್ಯಾಪ್ತಿಯ ಕಾವೇರಿ ನದಿ ಪಾತ್ರದ ಪ್ರವಾಸಿ ತಾಣಗಳಿಗೆ ನಿರ್ಬಂಧ ಹೇರಲಾಗಿದೆ. ಇದನ್ನೂ ಓದಿ: ಹೊಸ ದಾಖಲೆ ಬರೆದ ಕೆಆರ್‌ಎಸ್ ಡ್ಯಾಂ – 118.60 ಅಡಿ ನೀರು ಭರ್ತಿ