Tag: ಕಾವೇರಿ ನದಿ

  • ಕರ್ನಾಟಕ ಹರಿಸಿದ ಹೆಚ್ಚುವರಿ ನೀರು ಲೆಕ್ಕಕ್ಕೆ ಪರಿಗಣಿಸಲು ಸಾಧ್ಯವಿಲ್ಲ – ತಮಿಳುನಾಡು

    ಕರ್ನಾಟಕ ಹರಿಸಿದ ಹೆಚ್ಚುವರಿ ನೀರು ಲೆಕ್ಕಕ್ಕೆ ಪರಿಗಣಿಸಲು ಸಾಧ್ಯವಿಲ್ಲ – ತಮಿಳುನಾಡು

    ನವದೆಹಲಿ: ಕಾವೇರಿ ನದಿ (Cauvery) ನೀರು ಹಂಚಿಕೆಗೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಪ್ರಾಧಿಕಾರ ಸಭೆ ನಡೆಸಿದೆ. ವರ್ಚ್ಯುವಲ್ ಮೂಲಕ ಕಾವೇರಿ ಅಣೆಕಟ್ಟು ಪ್ರದೇಶದ ರಾಜ್ಯಗಳ ಜೊತೆಗೆ ಮಾತುಕತೆ ನಡೆಸಿ ಪ್ರಸ್ತುತ ವರದಿಗಳನ್ನು ಪಡೆದುಕೊಂಡಿತು.

    ಸೆಪ್ಟೆಂಬರ್‌ನಲ್ಲಿ ತಮಿಳುನಾಡಿಗೆ (Tamilnadu) 99.86 ಟಿಎಂಸಿ ನೀರು ಹರಿಸಬೇಕಿದ್ದು ಇದರ ಬದಲಾಗಿ ಬಿಳಿಗುಂಡ್ಲುವಿನಲ್ಲಿ 192.371 ಟಿಎಂಸಿ ನೀರು ಹರಿದಿರುತ್ತದೆ. ಬಿಳಿಗುಂಡ್ಲುವಿನಲ್ಲಿ ಹರಿದ ಹೆಚ್ಚುವರಿ ನೀರಿನ ಪ್ರಮಾಣವನ್ನು ಮುಂಬರುವ ತಿಂಗಳುಗಳಲ್ಲಿ ಕರ್ನಾಟಕ ರಾಜ್ಯವು ಹರಿಸಬೇಕಾದ ನೀರಿನ ಪ್ರಮಾಣಕ್ಕೆ ಜಮೆ ಮಾಡಿಕೊಳ್ಳಬೇಕು ಎಂದು ಕರ್ನಾಟಕ ಮನವಿ ಮಾಡಿತು. ಮುಂದಿನ ಮಾನ್ಸೂನ್ ತಿಂಗಳುಗಳಲ್ಲಿಯೂ ಸಹ ಒಳ್ಳೆಯ ಮಳೆಯಾಗಬಹುದು ಎಂದು ಹೇಳಿದೆ. ಇದನ್ನೂ ಓದಿ: ಮಂಡ್ಯ ಜಿಲ್ಲೆಗೆ ಕಾಲಿಟ್ಟ ಬಳಿಕ ಬಿಜೆಪಿಯಿಂದ ಕೋಮು ಗಲಭೆ ಸೃಷ್ಟಿ: ಹರಿಪ್ರಸಾದ್

    ಆದರೆ ಕರ್ನಾಟಕದ (Karnataka) ವಾದಕ್ಕೆ ತಮಿಳುನಾಡು ಆಕ್ಷೇಪ ವ್ಯಕ್ತಪಡಿಸಿದೆ. ಬಿಳಿಗುಂಡ್ಲುವಿನಲ್ಲಿ ಹರಿದ ಹೆಚ್ಚುವರಿ ನೀರಿನ ಪ್ರಮಾಣವು ಕರ್ನಾಟಕದ ಜಲಾಶಯಗಳಲ್ಲಿನ ಹೆಚ್ಚುವರಿ ನೀರಿನ ಪ್ರಮಾಣವಾಗಿರುತ್ತದೆ. ಈ ಬಾರಿಯೂ ಸಹ ಕರ್ನಾಟಕ ರಾಜ್ಯವು ತನ್ನ ಜಲಾಶಯಗಳು ತುಂಬಿದ ನಂತರವಷ್ಟೇ ನೀರನ್ನು ಹರಿಸಿರುತ್ತದೆ. ಆದ್ದರಿಂದ, ಕರ್ನಾಟಕವು ಮುಂಬರುವ ತಿಂಗಳುಗಳಲ್ಲಿಯೂ ಸಹ ಕಾವೇರಿ ನ್ಯಾಯಾಧಿಕರಣದ ಅಂತಿಮ ನಿರ್ಧಾರ ಮತ್ತು ಮಾನ್ಯ ಸರ್ವೋಚ್ಚ ನ್ಯಾಯಾಲಯದ ಮಾರ್ಪಡಿತ ತೀರ್ಪಿನಂತೆ ನಿಗದಿತ ಪ್ರಮಾಣದ ನೀರನ್ನು ಹರಿಸಬೇಕು ಎಂದು ಆಗ್ರಹಿಸಿತು. ಇದನ್ನೂ ಓದಿ: ಹಿಂದೂಗಳ 25 ಅಂಗಡಿ ಸುಟ್ಟದ್ದು ಚಿಕ್ಕ ಘಟನೆಯೇ – ಪರಮೇಶ್ವರ್‌ಗೆ ಶೋಭಾ ಪ್ರಶ್ನೆ

    ಎರಡು ರಾಜ್ಯಗಳ ವಾದ ಆಲಿಸಿದ ಬಳಿಕ ಕಾವೇರಿ ನೀರು ನಿಯಂತ್ರಣ ಪ್ರಾಧಿಕಾರ ಯಾವುದೇ ಮಧ್ಯಂತರ ಆದೇಶ ನೀಡಲಿಲ್ಲ. ಉತ್ತಮ ಮಳೆಯಾಗುತ್ತಿದ್ದು, ಎರಡೂ ರಾಜ್ಯಗಳೂ ಸಹ ನೀರನ್ನು ವಿವೇಚನೆಯಿಂದ ಬಳಸಿ, ಜಲಾಶಯಗಳಲ್ಲಿ ನೀರನ್ನು ಸಂಗ್ರಹಿಸಿಕೊಳ್ಳತಕ್ಕದ್ದು ಎಂದು ಸಲಹೆಯನ್ನು ನೀಡಿದೆ. ಇದನ್ನೂ ಓದಿ: ಆಕಸ್ಮಿಕ ಪದ ಬಳಸಿ ಅನ್ಯಕೋಮಿನವರಿಗೆ ಬೆಂಬಲ – ಬೇಹುಗಾರಿಕೆ ಇಲಾಖೆಯನ್ನು ಮುಚ್ಚಿಬಿಡಿ ಎಂದ ಯತ್ನಾಳ್

  • ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆ – ಹಾರಂಗಿ ಜಲಾಶಯದಿಂದ 11,800 ಕ್ಯುಸೆಕ್ ನೀರು ಹೊರಕ್ಕೆ

    ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆ – ಹಾರಂಗಿ ಜಲಾಶಯದಿಂದ 11,800 ಕ್ಯುಸೆಕ್ ನೀರು ಹೊರಕ್ಕೆ

    ಮಡಿಕೇರಿ: ಕೊಡಗು (Kodagu) ಜಿಲ್ಲೆಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಧಾರಾಕಾರ ಮಳೆ (Rain) ಸುರಿಯುತ್ತಿದೆ. ಕಳೆದ ರಾತ್ರಿಯಿಂದ ಒಂದೇ ಸಮನೇ ಸುರಿಯುತ್ತಿರುವ ಮಳೆಯಿಂದ ಜಿಲ್ಲೆಯ ನದಿ, ತೊರೆಗಳು ಮತ್ತೆ ಉಕ್ಕಿ ಹರಿಯಲಾರಂಭಿಸಿವೆ. ಕ್ಷಣ ಕ್ಷಣಕ್ಕೂ ಒಳಹರಿವಿನ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆ ಹಾರಂಗಿ ಜಲಾಶಯದಿಂದ (Harangi Dam) ಕಾವೇರಿ ನದಿಗೆ (Cauvery River) 11,800 ಕ್ಯುಸೆಕ್ ನೀರನ್ನು ಹೊರಬಿಡಲಾಗುತ್ತಿದೆ.

    ಅಲ್ಲದೇ ಇಂದು (ಸೋಮವಾರ) ಬೆಳಗ್ಗೆ ಕೊಡಗಿನ ಅಲ್ಲಲ್ಲಿ ಸುರಿದ ಭಾರೀ ಮಳೆಯಿಂದ ಹಾರಂಗಿ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣದಲ್ಲಿ ದಿಢೀರ್ ಏರಿಕೆ ಕಂಡು ಬಂದಿದೆ. ಬೆಳಗ್ಗೆ 8 ಗಂಟೆ ಹೊತ್ತಿಗೆ 2,362 ಕ್ಯುಸೆಕ್ ಇದ್ದ ಒಳ ಹರಿವು 11 ಗಂಟೆಯ ವೇಳೆಗೆ 7,800 ಕ್ಯುಸೆಕ್‌ಗೆ ಏರಿಕೆಯಾಗಿದೆ. ಈ ಹಿನ್ನೆಲೆ ಜಲಾಶಯದ ಸುರಕ್ಷಿತ ದೃಷ್ಟಿಯಿಂದ ಮಧ್ಯಾಹ್ನದ ಬಳಿಕ ಕಾವೇರಿ ನದಿಗೆ ನೀರನ್ನು ಹೊರಬಿಡಲಾಗುತ್ತಿದೆ. ಇದನ್ನೂ ಓದಿ: ಗೌರಿ ಹಬ್ಬದ ದಿನ ಸಿಎಂ ಗಂಗೆ ಪೂಜೆ, ಎತ್ತಿನಹೊಳೆ ಯೋಜನೆ ನೀರು ಬಿಡುಗಡೆ: ಡಿಕೆಶಿ

    ನದಿಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಅಲ್ಲದೇ ಜಿಲ್ಲೆಯಾದ್ಯಂತ ಮಳೆ ಅರ್ಭಟ ಮುಂದುವರೆಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಇದನ್ನೂ ಓದಿ: ಜಮ್ಮು ಸೇನಾ ನೆಲೆಯ ಮೇಲೆ ಉಗ್ರರ ದಾಳಿ – ಯೋಧನಿಗೆ ಗಾಯ

  • ಕೆಆರ್‌ಎಸ್ ಡ್ಯಾಂ ಒಳಹರಿವಿನ ಸ್ಥಳದಲ್ಲಿ ತಡೆಗೋಡೆ ಕುಸಿತ

    ಕೆಆರ್‌ಎಸ್ ಡ್ಯಾಂ ಒಳಹರಿವಿನ ಸ್ಥಳದಲ್ಲಿ ತಡೆಗೋಡೆ ಕುಸಿತ

    ಮಂಡ್ಯ: ಕಳೆದ 10 ದಿನಗಳಿಂದ ಕಾವೇರಿ ಜಲಾನಯನ (Cauvery River) ಪ್ರದೇಶದಲ್ಲಿ ಮಳೆರಾಯನ ಅಬ್ಬರ ಹೆಚ್ಚಿದೆ. ಇದರ ಪರಿಣಾಮ ಹಳೆ ಮೈಸೂರು ಭಾಗದ ಜೀವನಾಡಿ ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್‌ನ (KRS Dam) ಕಾವೇರಿ ಒಡಲಾದ ಕೆಆರ್‌ಎಸ್ ಡ್ಯಾಂ ಭರ್ತಿಯ ಅಂಚಿಗೆ ತಲುಪಿದೆ.

    ಡ್ಯಾಂನಿಂದ ಹೆಚ್ಚಿನ ಪ್ರಮಾಣದಲ್ಲಿ ಹೊರಹರಿವು ಬಿಡಲಾಗುತ್ತಿದೆ. ಇದರಿಂದ ಕಾವೇರಿ ನದಿ ಸೌಂದರ್ಯದ ರಾಶಿಯಿಂದ ಕಂಗೊಳಿಸುತ್ತಿದೆ. ಖುಷಿಯ ನಡುವೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಹೊರಹರಿವು ಹರಿವ ಜಾಗದಲ್ಲಿ ತಡೆಗೋಡೆ ಕುಸಿದಿದೆ. ಇದನ್ನೂ ಓದಿ: ಕೆಆರ್‌ಎಸ್ ಡ್ಯಾಂ ಭರ್ತಿಗೆ ಕೇವಲ 2 ಅಡಿಯಷ್ಟೇ ಬಾಕಿ

    ಇತ್ತೀಚೆಗೆ ಕೆಆರ್‌ಎಸ್ ಡ್ಯಾಂನ ನಗುವನ ತೋಟದ ಮುಂದೆ ಇರುವ ಗೇಟ್‌ ಬಳಿಯ ತಡೆಗೋಡೆಯನ್ನು ತೋಟಕ್ಕೆ ತೊಂದರೆಯಾಗದಿರಲಿ ಎಂದು ಲಕ್ಷಾಂತರ ರೂಪಾಯಿ ವೆಚ್ಚ ಮಾಡಿ ನಿರ್ಮಿಸಲಾಗಿತ್ತು. ಇದೀಗ ಅಧಿಕಾರಿಗಳು ಹಿಂದೆ ಮುಂದೆ ನೋಡದೇ ಆ ಗೇಟ್‌ಗಳಿಂದ ಅಧಿಕ ಪ್ರಮಾಣದಲ್ಲಿ ನೀರು ಬಿಟ್ಟ ಕಾರಣ ತಡೆಗೋಡೆ ಕುಸಿದೆ.

    ಪರ್ಯಾಯವಾಗಿ ಬೇರೆ ಬೇರೆ ಗೇಟ್‌ಗಳಲ್ಲಿ ನೀರು ಬಿಟ್ಟಿದ್ದರೆ ಈ ಘಟನೆ ಜರುಗುತ್ತಿರಲಿಲ್ಲ. ಈ ತಡೆಗೋಡೆ ಕುಸಿದಿರುವುದರಿಂದ ಸದ್ಯ ಯಾವುದೇ ತೊಂದರೆಯಾಗುವುದಿಲ್ಲ. ಆದರೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿದ್ದ ಕಾಮಗಾರಿ ನೀರು ಪಾಲಾಗಿದೆ. ಒಂದು ಕಡೆ ಕಾವೇರಿ ಒಡಲು ಭರ್ತಿಯಾಗುತ್ತಿರುವುದು ಸಂತಸ ತಂದರೆ, ಇನ್ನೊಂದೆಡೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ತಡೆಗೋಡೆ ಕುಸಿದಿರುವುದು ಬೇಸರದ ಸಂಗತಿ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಇದನ್ನೂ ಓದಿ: ಭಾನುವಾರ ಸಂಜೆಯೊಳಗೆ KRS ಸಂಪೂರ್ಣ ಭರ್ತಿ ಸಾಧ್ಯತೆ

  • ಕಾವೇರಿ ನದಿಯಲ್ಲಿ ಮುಳುಗಿ ಐವರು ವಿದ್ಯಾರ್ಥಿಗಳ ದುರ್ಮರಣ

    ಕಾವೇರಿ ನದಿಯಲ್ಲಿ ಮುಳುಗಿ ಐವರು ವಿದ್ಯಾರ್ಥಿಗಳ ದುರ್ಮರಣ

    ರಾಮನಗರ: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ ಮೇಕೆದಾಟು (Mekedatu) ಬಳಿಯ ಸಂಗಮದ ಕಾವೇರಿ ನದಿಯಲ್ಲಿ (Cauvery river) ನಡೆದಿದೆ.

    ಮೃತರನ್ನು ಹರ್ಷಿತಾ (20), ಅಭಿಷೇಕ್ (20), ತೇಜಸ್ (21), ವರ್ಷ (20) ಹಾಗೂ ನೇಹಾ (19) ಎಂದು ಗುರುತಿಸಲಾಗಿದೆ. ಇನ್ನುಳಿದ 7ಮಂದಿ ವಿದ್ಯಾರ್ಥಿಗಳು ಪಾರಾಗಿದ್ದಾರೆ‌. ಮೃತರು ಬೆಂಗಳೂರು (Bengaluru) ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ. ಪ್ರವಾಸಕ್ಕೆ ಬಂದಿದ್ದ ಇವರು, ಮಧ್ಯಾಹ್ನ ನೀರಿನಲ್ಲಿ ಆಟವಾಡುತ್ತಿದ್ದರು. ಈ ವೇಳೆ ನದಿಯ ಸುಳಿಯಲ್ಲಿ ಸಿಲುಕಿ ಸಾವಿಗೀಡಾಗಿದ್ದಾರೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಸಹೋದರಿಯ ಮೆಹಂದಿ ಕಾರ್ಯಕ್ರಮದಲ್ಲಿ ಡ್ಯಾನ್ಸ್‌ ಮಾಡುತ್ತಲೇ ಕುಸಿದು ಬಿದ್ಳು!

    ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಸಾತನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಪೊಲೀಸರು ನೀರಿನಿಂದ ಹೊರಗೆ ತೆಗೆದಿದ್ದಾರೆ. ಈ ಸಂಬಂಧ ಸಾತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಬಂಧನ ತಪ್ಪಿಸಿಕೊಳ್ಳಲು ವೇಷ ಬದಲಿಸಿಕೊಂಡಿದ್ದ ನಟ ಸಾಹಿಲ್

  • ಕಳೆದ 50-60 ವರ್ಷಗಳಲ್ಲಿ ಇದೇ ಮೊದಲು – ತವರಿನಲ್ಲೇ ಬರಿದಾಗುತ್ತಿದೆ ಕಾವೇರಿಯ ಒಡಲು!

    ಕಳೆದ 50-60 ವರ್ಷಗಳಲ್ಲಿ ಇದೇ ಮೊದಲು – ತವರಿನಲ್ಲೇ ಬರಿದಾಗುತ್ತಿದೆ ಕಾವೇರಿಯ ಒಡಲು!

    – ಒಂದು ವಾರದಲ್ಲಿ ಮಳೆ ಬಾರದಿದ್ರೆ ಪರಿಸ್ಥಿತಿ ಮತ್ತಷ್ಟು ಭೀಕರತೆಗೆ ತಿರುಗುವ ಸಾಧ್ಯತೆ

    ಮಡಿಕೇರಿ: ರಾಜ್ಯದಲ್ಲಿ ಲೋಕಸಭೆ ಚುನಾವಣೆ ಕಾವು ದಿನದಿಂದ ದಿನಕ್ಕೆ ಹೆಚ್ಚಾಗಿತ್ತಿದೆ. ಈ ನಡುವೆ ಬೇಸಿಗೆಯ (Summer) ಬಿಸಿಯೂ ಹೆಚ್ಚಾಗುತ್ತಿದ್ದು, ಹನಿ ನೀರಿಗಾಗಿ ಪರಿ ತಪ್ಪಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಅದರಲ್ಲೂ ನಾಡಿನ ಜೀವನದಿ ಕಾವೇರಿಯ ಒಡಲೇ ಬತ್ತುತ್ತಿದ್ದು, ಕಾವೇರಿ ನೀರನ್ನೇ (Cauvery Water) ಆಶ್ರಯಿಸಿರುವ ಜಿಲ್ಲೆಗಳು ಕುಡಿಯುವ ನೀರಿಗೆ ಹಾಹಾಕಾರ ಎದುರಿಸುವಂತಾಗಿದೆ. ಇನ್ನೊಂದು ವಾರದಲ್ಲಿ ಮಳೆಯಾಗದೇ ಇದ್ರೆ ಕಾವೇರಿ ತವರು ಜಿಲ್ಲೆಯ ಜನರ ಪರಿಸ್ಥಿತಿ ಊಹಿಸಲು ಅಸಾಧ್ಯವಾಗಲಿದೆ ಎಂದು ಹೇಳಲಾಗುತ್ತಿದೆ.

    ಹೌದು. ಕೊಡಗಿನಲ್ಲಿ (Kodagu) ಹುಟ್ಟಿ 4 ಜಿಲ್ಲೆಗಳಲ್ಲಿ ಹರಿದು ನಾಡಿನ ಹಲವು ಜಿಲ್ಲೆಗಳಿಗೆ ಜೀವನಾಧಾರವಾಗಿರುವ ಕಾವೇರಿಯ ಒಡಲು ಇದೀಗ ಸಂಪೂರ್ಣವಾಗಿ ಬರಿದಾಗುತ್ತಿದೆ. ದಕ್ಷಿಣ ಕಾಶ್ಮೀರ ಎಂದೆನಿಸಿಕೊಂಡಿದ್ದ ಕೊಡಗಿನಲ್ಲಿ ವರ್ಷದ 4-5 ತಿಂಗಳು ನಿರಂತರ ಮಳೆ ಸುರಿಯುತ್ತದೆ. ಹಲವು ವರ್ಷಗಳಿಂದ ಆಗಸ್ಟ್ ತಿಂಗಳಲ್ಲಿ ಕಾವೇರಿ ಉಕ್ಕಿ ಹರಿದು ಪ್ರವಾಹ ಸೃಷ್ಟಿಗುತ್ತಿತ್ತು. ಬೇಸಿಗೆ ಬಂತೆಂದರೆ ನೀರು ಕಡಿಮೆಯಾಗೋದು ಕಾಮನ್ ಆಗಿತ್ತು. ಆದರೆ ಈ ಬಾರಿ ಕಳೆದ 50 ರಿಂದ 60 ವರ್ಷಗಳಲ್ಲೇ ನೋಡಿರದಷ್ಟು ಪ್ರಮಾಣದಲ್ಲಿ ಕಾವೇರಿ ನದಿ ಬತ್ತಿದೆ. ಇದನ್ನೂ ಓದಿ: ಆರು ರಾಜ್ಯಗಳ ಗೃಹ ಕಾರ್ಯದರ್ಶಿಗಳ ಪದಚ್ಯುತಿಗೊಳಿಸಿ ಚುನಾವಣಾ ಆಯೋಗ ಆದೇಶ!

    ಸಾಕಷ್ಟು ಕಡೆಗಳಲ್ಲಿ ಕಾವೇರಿ ನದಿಯಲ್ಲಿ ನೀರು ಅಲ್ಲಲ್ಲೇ ತಗ್ಗು ಪ್ರದೇಶಗಳಲ್ಲಿ ಮಾತ್ರವೇ ಸಣ್ಣ ಪ್ರಮಾಣದಲ್ಲಿ ಹರಿಯುತ್ತಿರುವುದು ಬಿಟ್ಟರೆ ಉಳಿದೆಡೆ ನದಿಯ ಒಡಲು ಬರಿದಾಗಿದ್ದು, ಕಲ್ಲುಬಂಡೆಗಳೇ ಕಾಣುತ್ತಿವೆ. ಹೀಗಾಗಿ ಕುಡಿಯಲು ಮತ್ತು ಕೃಷಿಗೆ ಕಾವೇರಿ ನೀರನ್ನೇ ಅವಲಂಬಿಸಿರುವ ರೈತರು ಸಮಸ್ಯೆಗೆ ಸಿಲುಕುವ ಸ್ಥಿತಿ ಎದುರಾಗಿದೆ. ಇದನ್ನೂ ಓದಿ: ಕೊಡಗಿನಲ್ಲಿ ವರುಣನ ಸಿಂಚನ- ಕಾಫಿ ಬೆಳೆಗಾರರಲ್ಲಿ ಮಂದಹಾಸ

    ಬೆಂಗಳೂರು ಮೈಸೂರು ಸೇರಿದಂತೆ ಬೇರೆ ಜಿಲ್ಲೆಯ ಮಾತಿರಲಿ, ಕಾವೇರಿ ತವರು ಕೊಡಗಿನಲ್ಲೇ ಕುಡಿಯುವ ನೀರಿಗೆ ಹಾಹಾಕಾರ ಎದುರಾಗಿದೆ. ಕೊಡಗಿನ ಕುಶಾಲನಗರ, ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ, ಹುಣುಸೂರು ಸೇರಿದಂತೆ ಹಲವು ಪಟ್ಟಣಗಳಲ್ಲಿ ಈಗಾಗಲೇ ಸ್ಥಳೀಯ ಆಡಳಿತಗಳು ಕಾವೇರಿ ನದಿಗೆ ಮರಳಿನ ಮೂಟೆಗಳಿಂದ ಕಟ್ಟೆಕಟ್ಟಿ ನೀರು ಸಂಗ್ರಹಿಸಿ ಪಟ್ಟಣಗಳಿಗೆ ಪೂರೈಸುವ ಸ್ಥಿತಿ ನಿರ್ಮಾಣವಾಗಿದೆ. ಸಾಮಾನ್ಯವಾಗಿ ಕಾವೇರಿ ನದಿಯಲ್ಲಿ ನೀರು ಕಡಿಮೆಯಾಗುವುದಾದರೂ ಅದು ಏಪ್ರಿಲ್ ಅಂತ್ಯ ಅಥವಾ ಮೇ ತಿಂಗಳಲ್ಲಿ ಕಡಿಮೆಯಾಗುತಿತ್ತು. ಆದರೆ ಈ ಬಾರಿ ಮಾರ್ಚ್‌ ತಿಂಗಳ 2ನೇ ವಾರದಲ್ಲೇ ಕಾವೇರಿ ಒಡಲು ಬಹುತೇಕ ಬರಿದಾಗಿರುವುದರಿಂದ ಲಕ್ಷಾಂತರ ಜನರಲ್ಲಿ ಆತಂಕ ಮೂಡಿಸಿದೆ.

    ಈ ನಡುವೆ ಕುಶಾಲನಗರದ ಪುರಸಭೆ ಖಾಸಗಿ ಬೋರ್‌ವೆಲ್‌ ಇರುವವರ ಬಳಿ ನೀರು ಸಂಗ್ರಹಿಸಿ ಸಾರ್ವಜನಿಕರಿಗೆ ಸರಬರಾಜು ಮಾಡಲು ಮುಂದಾಗಿದೆ‌. ಇದನ್ನೂ ಓದಿ: ಬಿಹಾರದಲ್ಲಿ ಎನ್‌ಡಿಎ ಸೀಟು ಹಂಚಿಕೆ ಫೈನಲ್‌ – ಬಿಜೆಪಿ 17, ಜೆಡಿಯು 16 ಕ್ಷೇತ್ರಗಳಲ್ಲಿ ಸ್ಪರ್ಧೆ ಖಚಿತ

  • ಮಳೆ ಕೊರತೆ – ಮೂರೇ ದಿನಕ್ಕೆ ಕೆಆರ್‌ಎಸ್ ಒಳಹರಿವಿನಲ್ಲಿ ತೀವ್ರ ಕುಸಿತ

    ಮಳೆ ಕೊರತೆ – ಮೂರೇ ದಿನಕ್ಕೆ ಕೆಆರ್‌ಎಸ್ ಒಳಹರಿವಿನಲ್ಲಿ ತೀವ್ರ ಕುಸಿತ

    ಮಂಡ್ಯ: ಮಳೆಯ (Rain) ನಿರೀಕ್ಷೆಯಲ್ಲಿದ್ದ ಹಳೆ ಮೈಸೂರು ಭಾಗದ ಜನರಿಗೆ ಮತ್ತೆ ನಿರಾಸೆ ಉಂಟಾಗಿದೆ. ಕಾವೇರಿ ಜಲಾನಯನ (Cauvery River) ಪ್ರದೇಶದಲ್ಲಿ ಮಳೆ ನಿಂತ ಹಿನ್ನೆಲೆ ಮೂರೇ ದಿನಕ್ಕೆ ಕೆಆರ್‍ಎಸ್ (KRS) ಡ್ಯಾಂಗೆ ಒಳಹರಿವು ತೀವ್ರ ಪ್ರಮಾಣದಲ್ಲಿ ಕಡಿಮೆಯಾಗಿದೆ. ಈ ಮೂಲಕ ಡ್ಯಾಂಗೆ ಹರಿದು ಬರುತ್ತಿದ್ದ ನೀರಿನ ಪ್ರಮಾಣ ಗಣನೀಯ ಇಳಿಕೆ ಕಂಡಿದೆ.

    11,800 ಕ್ಯೂಸೆಕ್‍ನಿಂದ 4,046 ಕ್ಯೂಸೆಕ್‍ಗೆ ಒಳಹರಿವು ಇಳಿಕೆಯಾಗಿದ್ದು, ಇದರಿಂದ ಮತ್ತೆ ಮಂಡ್ಯ ಜಿಲ್ಲೆಯ ಅನ್ನದಾತರು ಸೇರಿದಂತೆ ಕಾವೇರಿ ನೀರು ಆಶ್ರಯಿಸಿದ ಜನರಿಗೆ ತೀವ್ರ ಆಘಾತ ಉಂಟಾಗಿದೆ. ಒಳಹರಿವು ಹೆಚ್ಚಳದಿಂದ ಕೆಆರ್‌ಎಸ್‌ಗೆ 3 ಟಿಎಂಸಿ ನೀರು ಹರಿದು ಬಂದಿತ್ತು. ಸದ್ಯ ಡ್ಯಾಂ 101.80 ಅಡಿ ಭರ್ತಿಯಾಗಿದೆ. ಇದನ್ನೂ ಓದಿ: ನಮ್ಮ ಮೆಟ್ರೋದಲ್ಲಿ ಯೂಟ್ಯೂಬರ್‌ ಹುಚ್ಚಾಟ – ಮೂರ್ಛೆ ಬಂದವನಂತೆ ಪ್ರ್ಯಾಂಕ್‌ ಮಾಡಿ ಪ್ರಯಾಣಿಕರಿಗೆ ಶಾಕ್‌

    ಒಂದು ವೇಳೆ ಮಳೆ ಮುಂದುವರೆದರೆ ಬೆಳೆ ಜೊತೆಗೆ ಕುಡಿಯುವ ನೀರಿನ ಸಮಸ್ಯೆ ದೂರಾಗುವ ನಿರೀಕ್ಷೆ ಜನರಲ್ಲಿತ್ತು. ಆದರೆ ಮೂರೇ ದಿನಕ್ಕೆ ಮಳೆರಾಯ ಕೈಕೊಟ್ಟಿದ್ದಾನೆ. ಇಂದರಿಂದ ಕರ್ನಾಟಕ ಹಾಗೂ ತಮಿಳುನಾಡು ನಡುವಿನ ಕಾವೇರಿ ವಿವಾದ ಮುಂದುವರೆಯುವ ಸಾಧ್ಯತೆ ದಟ್ಟವಾಗಿ ಕಾಣುತ್ತಿದೆ.

    ಮತ್ತೊಂದೆಡೆ ರಾಜ್ಯ ಸರ್ಕಾರ ಹಾಗೂ ಕಾವೇರಿ ಪ್ರಾಧಿಕಾರದ ವಿರುದ್ಧ ಮಂಡ್ಯದಲ್ಲಿ ಪ್ರತಿಭಟನೆಗಳು ಇಂದು ಸಹ ಮುಂದುವರಿದಿವೆ. 32ನೇ ದಿನಕ್ಕೆ ರೈತ ಹಿತರಕ್ಷಣಾ ಸಮಿತಿಯ ಸತ್ಯಾಗ್ರಹ ಕಾಲಿಟ್ಟಿದೆ. ಇಂದಿನ ಧರಣಿಯಲ್ಲಿ ಪತ್ರಕರ್ತರು ಭಾಗಿಯಾಗಿ ಸರ್ಕಾರದ ಮೇಲೆ ಒತ್ತಡ ಹಾಕಲಿದ್ದಾರೆ. ಕನ್ನಡ ಸೇನೆಯಿಂದಲೂ ಸಂಜಯ ಸರ್ಕಲ್‍ನಿಂದ ವಿಶ್ವೇಶ್ವರಯ್ಯ ಪ್ರತಿಮೆವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ಅತ್ತ ಶ್ರೀರಂಗಪಟ್ಟಣದಲ್ಲೂ ಸಹ ಭೂಮಿ ತಾಯಿ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ಇದನ್ನೂ ಓದಿ: ಜಂಬೂ ಸವಾರಿಗೆ ಬರಲಿದ ಗತವೈಭವ – ರಾಜ ಪೋಷಾಕಿನಲ್ಲಿ ಪೊಲೀಸರು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಾವೇರಿ ಜಲಾನಯನ ಪ್ರದೇಶದಲ್ಲಿ ನಿಂತ ಮಳೆ – ಕೆಆರ್‌ಎಸ್ ಒಳಹರಿವಿನಲ್ಲಿ ಕುಸಿತ

    ಕಾವೇರಿ ಜಲಾನಯನ ಪ್ರದೇಶದಲ್ಲಿ ನಿಂತ ಮಳೆ – ಕೆಆರ್‌ಎಸ್ ಒಳಹರಿವಿನಲ್ಲಿ ಕುಸಿತ

    ಮಂಡ್ಯ: ಕಾವೇರಿ (Cauvery River) ಜಲಾನಯನ ಪ್ರದೇಶದಲ್ಲಿ ಮಳೆ (Rain) ಕಡಿಮೆಯಾದ ಪರಿಣಾಮ ಕೆಆರ್‌ಎಸ್ (KRS) ಡ್ಯಾಂಗೆ ಹರಿದು ಬರುತ್ತಿದ್ದ ನೀರಿನ ಒಳಹರಿವಿನ ಪ್ರಮಾಣ ಮತ್ತೆ ಕುಸಿತ ಕಂಡಿದೆ.

    ಇಂದಿನ ಒಳಹರಿವು 5861 ಕ್ಯೂಸೆಕ್ ಆಗಿದ್ದು, ಮಂಗಳವಾರ 11,800 ಕ್ಯೂಸೆಕ್ ಮತ್ತು ಬುಧವಾರ 9,052 ಕ್ಯೂಸೆಕ್ ಒಳ ಹರಿವು ಇತ್ತು. ಕಳೆದ ಮೂರು ದಿನಗಳಿಂದ ಒಳಹರಿವಿನ ಪ್ರಮಾಣ ಹೆಚ್ಚಿದ್ದರಿಂದ ಡ್ಯಾಂ ನೀರಿನ ಮಟ್ಟ 100 ಅಡಿಗಳಷ್ಟು ಏರಿಕೆ ಕಂಡಿತ್ತು. ಅಷ್ಟರಲ್ಲೇ ಈಗ ಮತ್ತೆ ಒಳಹರಿವು ಕುಸಿದಿದೆ. ಇದನ್ನೂ ಓದಿ: ಕಾಂಗ್ರೆಸ್ ಅಂದ್ರೆ ಹಿಂದೂ ವಿರೋಧಿ ಅನ್ನೋದು ಸ್ಪಷ್ಟವಾಗಿದೆ: ಅಶ್ವಥ್ ನಾರಾಯಣ್

    ಕೆಲವು ದಿನಗಳಿಂದ 97 ಅಡಿಗೆ ಕುಸಿದಿದ್ದ ನೀರಿನ ಮಟ್ಟ. 20 ಟಿಎಂಸಿಯಿಂದ 23 ಟಿಎಂಸಿಗೆ ಏರಿಕೆಯಾಗಿದೆ. ಪ್ರಸ್ತುತ ಡ್ಯಾಂನಿಂದ ತಮಿಳುನಾಡಿಗೆ 1489 ಕ್ಯೂಸೆಕ್ ಬಿಡುಗಡೆ ಮಾಡಲಾಗುತ್ತಿದೆ.‌ ಇದನ್ನೂ ಓದಿ: ಸಿಕ್ಕಿಂ ಪ್ರವಾಹ – 102 ಜನ ನಾಪತ್ತೆ, ಸಾವಿನ ಸಂಖ್ಯೆ 14ಕ್ಕೆ ಏರಿಕೆ

    ಕೆಆರ್‌ಎಸ್ ಡ್ಯಾಂ ಇಂದಿನ ನೀರಿನ ಮಟ್ಟ
    ಗರಿಷ್ಠ ಮಟ್ಟ – 124.80 ಅಡಿಗಳು
    ಇಂದಿನ ಮಟ್ಟ – 100.82 ಅಡಿಗಳು
    ಗರಿಷ್ಠ ಸಾಮಥ್ರ್ಯ – 49.452 ಟಿಎಂಸಿ
    ಇಂದು ಸಂಗ್ರಹ ನೀರು – 23.460 ಟಿಎಂಸಿ
    ಒಳ ಹರಿವು – 5861 ಕ್ಯೂಸೆಕ್
    ಹೊರ ಹರಿವು – 1489 ಕ್ಯೂಸೆಕ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ತಮಿಳರ ಮೇಲೆ ಹಲ್ಲೆ ಎಂದು ಫೇಕ್ ವೀಡಿಯೋ ಹಂಚಿಕೆ – ಇಬ್ಬರ ವಿರುದ್ಧ ಎಫ್‍ಐಆರ್

    ತಮಿಳರ ಮೇಲೆ ಹಲ್ಲೆ ಎಂದು ಫೇಕ್ ವೀಡಿಯೋ ಹಂಚಿಕೆ – ಇಬ್ಬರ ವಿರುದ್ಧ ಎಫ್‍ಐಆರ್

    ಚೆನ್ನೈ: ಕಾವೇರಿ ನೀರು (Cauvery water) ಹಂಚಿಕೆ ವಿಚಾರವಾಗಿ ಕರ್ನಾಟಕದಲ್ಲಿ (Karnataka) ತಮಿಳರ ಮೇಲೆ ಹಲ್ಲೆ ನಡೆಸಲಾಗುತ್ತಿದೆ ಎಂಬ ವದಂತಿ ಹಬ್ಬಿಸುವುದರ ವಿರುದ್ಧ ತಮಿಳುನಾಡು (Tamil Nadu) ಪೊಲೀಸರು (Police) ಎಚ್ಚರಿಕೆ ನೀಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಾಕಿದ್ದ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

    ಎರಡೂ ರಾಜ್ಯಗಳ ರೈತರು ಈ ವಿಚಾರವಾಗಿ ಪ್ರತಿಭಟನೆಯಲ್ಲಿ ತೊಡಗಿದ್ದಾರೆ. ಈ ವೇಳೆ ಇಂತಹ ಸುಳ್ಳು ಸುದ್ದಿಯ ವೀಡಿಯೋಗಳನ್ನು ಹರಿಬಿಟ್ಟರೆ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗುವ ಸಾಧ್ಯತೆ ಇದೆ. ಇದರಿಂದಾಗಿ ವದಂತಿಗಳನ್ನು ಹಬ್ಬಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: Karnataka Bandh : ಶಾಲಾ, ಕಾಲೇಜುಗಳಿಗೆ ರಜೆ ನೀಡೋ ಅಧಿಕಾರ ಡಿಸಿಗಳಿಗೆ ಬಿಟ್ಟ ಶಿಕ್ಷಣ ಇಲಾಖೆ

    ಸುಳ್ಳು ವೀಡಿಯೋ ಹಂಚಿರುವ ವಿಚಾರವಾಗಿ ಮಧುರೈ ಮತ್ತು ತಿರುನಲ್ವೇಲಿ ಜಿಲ್ಲೆಗಳಲ್ಲಿ ಎರಡು ಪ್ರಕರಣಗಳು ದಾಖಲಾಗಿವೆ. ಒಬ್ಬ ಆರೋಪಿಯನ್ನು ಸೀಮಾನ್ ಎಂದು ಗುರುತಿಸಲಾಗಿದೆ. ಆತನ ವಿರುದ್ಧ ಐಪಿಸಿ ಸೆಕ್ಷನ್ 53, 153 ಎ, 504, 505 (1) (ಬಿ), 505 (2) ಮತ್ತು 67 ಐಟಿ ಕಾಯ್ದೆ 2008ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸೆಲ್ವನ್ ಎಂಬ ಮತ್ತೊಬ್ಬ ವ್ಯಕ್ತಿಯ ವಿರುದ್ಧ ತಿರುನಲ್ವೇಲಿ ಪೆÇಲೀಸರು ಐಪಿಸಿ ಸೆಕ್ಷನ್ 153, 153ಎ ಮತ್ತು 505(1) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳು ಬೆಂಗಳೂರಿನಲ್ಲಿ ಲಾರಿ ಚಾಲಕನಿಗೆ ಥಳಿಸಿದ ಹಳೆಯ ವೀಡಿಯೋವನ್ನು ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಸುಳ್ಳು ಸುದ್ದಿಗಳು ಮತ್ತು ವೀಡಿಯೋಗಳನ್ನು ಪೋಸ್ಟ್ ಮಾಡುವ ಮೂಲಕ ಆತಂಕ ಸೃಷ್ಟಿಸಲು ಯತ್ನಿಸಿದ್ದಾರೆ. ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು. ಕಾನೂನು ಮತ್ತು ಸುವ್ಯವಸ್ಥೆ ಹದಗೆಡುವ ಇಂತಹ ವದಂತಿಗಳನ್ನು ಹರಡುವುದರ ವಿರುದ್ಧ ನಾವು ಜನರಿಗೆ ಕಠಿಣ ಎಚ್ಚರಿಕೆ ನೀಡುತ್ತಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಕರ್ನಾಟಕ ಬಂದ್ : ಸಿನಿಮಾ ಬಿಡುಗಡೆ ಮುಂದೂಡಲು ಮನವಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಾವೇರಿ ಸಮಸ್ಯೆ ಪರಿಹಾರಕ್ಕೆ ಕೂಡಲೇ ಸರ್ಕಾರ ವಿಶೇಷ ಅಧಿವೇಶನ ಕರೆಯಬೇಕು: ಹೆಚ್‌ಡಿ ರೇವಣ್ಣ

    ಕಾವೇರಿ ಸಮಸ್ಯೆ ಪರಿಹಾರಕ್ಕೆ ಕೂಡಲೇ ಸರ್ಕಾರ ವಿಶೇಷ ಅಧಿವೇಶನ ಕರೆಯಬೇಕು: ಹೆಚ್‌ಡಿ ರೇವಣ್ಣ

    ಬೆಂಗಳೂರು: ಕಾವೇರಿ (Cauvery) ವಿಚಾರ ಚರ್ಚೆ ಮಾಡಲು ಸರ್ಕಾರ ಕೂಡಲೇ ವಿಶೇಷ ಅಧಿವೇಶನ ಕರೆಯಬೇಕು ಎಂದು ಮಾಜಿ ಸಚಿವ ಹೆಚ್‌ಡಿ ರೇವಣ್ಣ (HD Revanna) ಸರ್ಕಾರವನ್ನು ಒತ್ತಾಯಿಸಿದ್ದಾರೆ.

    ಶನಿವಾರ ಮಂಡ್ಯ ಬಂದ್ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಮಂಡ್ಯ ಬಂದ್‌ಗೆ ನಮ್ಮ ಪಕ್ಷದ ಬೆಂಬಲ ಇದೆ. ರಾಜ್ಯದ ಜಲ ಮತ್ತು ನೆಲದ ವಿಷಯದಲ್ಲಿ ರಾಜಕೀಯ ಮಾಡಬಾರದು. ತಪ್ಪು ಯಾರದ್ದೇ ಇರಲಿ ಈಗ ಚರ್ಚೆ ಬೇಡ. ಏನು ಸರಿಪಡಿಸಬೇಕು ಎಂದು ಸರ್ಕಾರ ಯೋಚನೆ ಮಾಡಲಿ. ಕಾವೇರಿ ವಿಷಯಕ್ಕಾಗಿ ವಿಶೇಷ ಅಧಿವೇಶನ ಕರೆದು ಒಂದು ನಿರ್ಣಯ ಮಾಡಬೇಕು ಎಂದು ಒತ್ತಾಯ ಮಾಡಿದರು.

    ಹೇಮಾವತಿ ವಿಚಾರವಾಗಿ ಸಲಹಾ ಸಮಿತಿ ಸಭೆ ಮಾಡಿ ಎಂದು ಅನೇಕ ದಿನಗಳಿಂದ ನಾನು ಹೇಳಿದ್ದೇನೆ. ಒಂದು ಕಡೆ ಬರ, ಮತ್ತೊಂದು ಕಡೆ ಕಾವೇರಿ ವಿಷಯ. ಇದಕ್ಕೆ ಪರಿಹಾರ ಕೊಡಬೇಕು ಅಂದರೆ ಚರ್ಚೆ ಆಗಬೇಕು. ಇದಕ್ಕಾಗಿ ವಿಶೇಷ ಅಧಿವೇಶನ ಕರೆದು ನಿರ್ಣಯ ಮಾಡಬೇಕು. ಅನೇಕ ಜನ ಹಿರಿಯ ಶಾಸಕರು ಇದ್ದಾರೆ. ಸರ್ಕಾರ ಅವರಿಂದ ಸಲಹೆ ಪಡೆಯಬೇಕು. ಬೆಂಗಳೂರಿನ ನಗರಕ್ಕೆ ಕುಡಿಯುವ ನೀರಿಲ್ಲ. ಈಗ ನೀರು ಬಿಟ್ಟು ಆಮೇಲೆ ವಾಪಸ್ ತರೋಕೆ ಆಗಲ್ಲ. ಸಿಎಂ ಕೂಡಲೇ ವಿಶೇಷ ಅಧಿವೇಶನ ಕರೆಯಬೇಕು. 2, 3, 4 ದಿನವೋ ವಿಶೇಷ ಅಧಿವೇಶನ ಮಾಡಬೇಕು ಎಂದು ಒತ್ತಾಯ ಮಾಡಿದರು. ಇದನ್ನೂ ಓದಿ: ಬಂಗಾರಪ್ಪ ಸಿಎಂ ಆಗಿದ್ದಾಗ ಚಿಟಿಕೆ ಹೊಡೆಯುವುದರಲ್ಲಿ ಕಾವೇರಿ ಸಮಸ್ಯೆಗೆ ಉತ್ತರ ಕೊಟ್ಟಿದ್ದರು: ಮಧು ಬಂಗಾರಪ್ಪ

    ಕಾವೇರಿ ವಿಚಾರ ಸೇರಿದಂತೆ ನೀರಾವರಿಯ ಯಾವುದೇ ವಿಷಯಕ್ಕೆ ಜೆಡಿಎಸ್ ಬೆಂಬಲ ಇದೆ. ದೇವೇಗೌಡರು ನೀರಾವರಿ ಬಗ್ಗೆಯೇ ಹೋರಾಟ ಮಾಡಿದ್ದಾರೆ. ಕಾವೇರಿ ಬಗ್ಗೆಯೂ ಹೋರಾಟ ಮಾಡಿದ್ದಾರೆ. ನಮ್ಮ ಪಕ್ಷ ಕೂಡಾ ಬೆಂಬಲ ಕೊಡಲಿದೆ ಎಂದರು.

    ಆದಿ ಚುಂಚನಗಿರಿ ಶ್ರೀಗಳಿಂದ ಪ್ರತಿಭಟನೆಗೆ ಬೆಂಬಲ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಿರ್ಮಲಾನಂದ ಶ್ರೀಗಳು ಇರಬಹುದು, ಬಾಲಗಂಗಾಧರನಾಥ ಶ್ರೀಗಳು ಇರಬಹುದು ರಾಜ್ಯದ ಹಿತ ಕಾಪಾಡೋದ್ರಲ್ಲಿ ಮುಂದೆ ಇದ್ದರು. ಆದಿಚುಂಚನಗಿರಿ ಶ್ರೀಗಳು ನೀರಿಗಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಶ್ರೀಗಳ ನಿರ್ಧಾರವನ್ನು ನಾವು ಸ್ವಾಗತ ಮಾಡುತ್ತೇವೆ ಎಂದರು. ಇದನ್ನೂ ಓದಿ: ಮಹಿಳಾ ಮೀಸಲಾತಿ ಅಂಗೀಕಾರ – ಇದು ಭಾರತದ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡೋ ದಿನ: ಪ್ರಹ್ಲಾದ್ ಜೋಶಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ತಮಿಳುನಾಡಿಗೆ ನೀರು ಬಿಟ್ಟು ಸುಪ್ರೀಂನಲ್ಲಿ ವಾದ ಮಾಡಲು ಏನಿದೆ?: ಬೊಮ್ಮಾಯಿ

    ತಮಿಳುನಾಡಿಗೆ ನೀರು ಬಿಟ್ಟು ಸುಪ್ರೀಂನಲ್ಲಿ ವಾದ ಮಾಡಲು ಏನಿದೆ?: ಬೊಮ್ಮಾಯಿ

    ಬೆಂಗಳೂರು: ಕಾವೇರಿ (Cauvery Water) ವಿಚಾರದಲ್ಲಿ ರಾಜ್ಯ ಸರ್ಕಾರ ಮೇಲಿಂದ ಮೇಲೆ ತಪ್ಪು ಮಾಡುವ ಮೂಲಕ ರಾಜ್ಯದ ಜನತೆಯನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿದೆ. ಸಿಡಬ್ಲುಎಂಎ ಆದೇಶದಂತೆ ನೀರು ಬಿಡುವುದಾದರೆ ಸುಪ್ರೀಂ ಕೋರ್ಟ್‍ನಲ್ಲಿ ವಾದ ಮಾಡಲು ಏನಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಪ್ರಶ್ನಿಸಿದ್ದಾರೆ.

    ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಸೆ.12ರ ನಂತರ ನೀರು ತಮಿಳುನಾಡಿಗೆ (Tamil Nadu) ಬಿಡಲು ಆಗುವುದಿಲ್ಲ ಎಂದು ಸುಪ್ರೀಂ ಕೊರ್ಟ್ ಮುಂದೆ ಅಫಿಡವಿಟ್ ಹಾಕಿದೆ. ಅದಕ್ಕೆ ತಾವು ಬದ್ಧರಾಗಿರಬೇಕು. ಸರ್ಕಾರದ ಅಫಿಡವಿಟ್ ಎಂದರೆ ಸುಮ್ಮನೆ ಆಗುವುದಿಲ್ಲ. ರಾಜ್ಯ ಸರ್ಕಾರ ಸುಪ್ರಿಂ ಕೋರ್ಟ್ ಮುಂದೆ ತಾನೇ ಸುಳ್ಳು ಹೇಳುತ್ತಿದೆ ಎಂದಾಯಿತು ಎಂದಿದ್ದಾರೆ. ಇದನ್ನೂ ಓದಿ: ಹಿಂದೆ ಏನಾಯ್ತು ಅನ್ನೋದು ಮುಖ್ಯವಲ್ಲ, ಇಂದು ಏನಾಯ್ತು ಎಂಬುದು ಮುಖ್ಯ: ದಿನೇಶ್ ಗುಂಡೂರಾವ್

    ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ನಾನು ಅವರನ್ನು ಇಕ್ಕಟ್ಟಿಗೆ ಸಿಲುಕಿಸಿದ್ದೇನೆ ಎಂದು ಹೇಳಿದ್ದಾರೆ. ಅವರನ್ನು ಇಕ್ಕಟ್ಟಿಗೆ ಸಿಲುಕಿಸುವುದರಿಂದ ನನಗೇನು ಆಗುವುದಿಲ್ಲ. ಅದರ ಅಗತ್ಯ ಕೂಡ ನನಗಿಲ್ಲ. ಸರ್ಕಾರದ ನಡೆ ರಾಜ್ಯದ ರೈತರನ್ನು, ಕಾವೇರಿ ಮಕ್ಕಳನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ರಾಜ್ಯದ ಹಿತ ದೃಷ್ಟಿಯಿಂದ ನಾನು ಸಲಹೆ ನೀಡಿದ್ದೇನೆ. ಸರ್ಕಾರ ನಮ್ಮ ಸಲಹೆಯನ್ನು ಸ್ವೀಕರಿಸಲು ತಯಾರಿಲ್ಲ. ಸರ್ಕಾರ ನಡೆಸುವವರಿಗೆ ಜವಾಬ್ದಾರಿ, ಅರಿವು ಇರಬೇಕು. ವಕೀಲರು ಯಾವಾಗಲೂ ನೀರು ಬಿಡುವಂತೆ ಸಲಹೆ ನಿಡುತ್ತಾರೆ. ನಾವು ಅದನ್ನು ಬದಲಾಯಿಸಿದ್ದೆವು. ನಮ್ಮ ಅವಧಿಯಲ್ಲಿ ರಾತ್ರೋರಾತ್ರಿ ನೀರು ಬಿಟ್ಟಿಲ್ಲ. ನೀವು ಸಿಡಬ್ಲುಎಂಎ ಆದೇಶ ಪಾಲನೆ ಮಾಡಿದ ಮೇಲೆ ಸುಪ್ರೀಂ ಕೋರ್ಟ್ ಮುಂದೆ ಹೇಳುವುದೇನಿದೆ ಎಂದು ಪ್ರಶ್ನಿಸಿದ್ದಾರೆ.

    ಈಗ ಪ್ರಧಾನಿ ಬಳಿ ಹೋಗುವುದರಲ್ಲಿ ಅರ್ಥವಿಲ್ಲ. ಮುಂಚೆಯೇ ಈ ವಿಚಾರ ಪ್ರಧಾನಿ ಬಳಿ ಚರ್ಚೆಯಾಗಿದೆ. ಈಗ ಅಲ್ಲಿ ಚರ್ಚೆ ಅಗತ್ಯವಿಲ್ಲ. ಸುಮ್ಮನೆ ರಾಜ್ಯದ ಜನರ ದಾರಿ ತಪ್ಪಿಸಲು ರಾಜ್ಯ ಸರ್ಕಾರ ಪ್ರಧಾನಿ ಬಳಿ ನಿಯೋಗ ತೆಗೆದುಕೊಂಡು ಹೋಗುವುದಾಗಿ ಹೇಳುತ್ತಿದೆ. ನಮ್ಮ ವಕೀಲರು ತಮಿಳುನಾಡಿನ ಅಣೆಕಟ್ಟುಗಳಲ್ಲಿನ ನೀರಿನ ವಸ್ತುಸ್ಥಿತಿ, ಅವರು ಬಳಕೆ ಮಾಡಿರುವ ನೀರಿನ ಪ್ರಮಾಣವನ್ನು ಸುಪ್ರೀಂ ಕೋರ್ಟ್‍ಗೆ ಮನವರಿಕೆ ಮಾಡುವ ಕೆಲಸ ಮಾಡದಿದ್ದರೆ ಸಮಸ್ಯೆಗೆ ಪರಿಹಾರ ಸಿಗುವುದಿಲ್ಲ. ರಾಜ್ಯದ ಪರ ವಕೀಲರು ಮೊದಲಿನಿಂದಲೂ ಇದ್ದಾರೆ. ನಮ್ಮ ಅವಧಿಯಲ್ಲಿಯೂ ಅವರೇ ಕೆಲಸ ಮಾಡಿದ್ದಾರೆ. ರಾಜ್ಯ ಸರ್ಕಾರಕ್ಕೆ ಸೂಕ್ತ ಸಲಹೆ ಕೊಡಲು ನಾವು ತಯಾರಿದ್ದೇವೆ. ಅವರು ಸಲಹೆ ತೆಗೆದುಕೊಳ್ಳಲು ಸಿದ್ಧರಿಲ್ಲದಿದ್ದರೆ ಏನು ಮಾಡುವುದು ಎಂದಿದ್ದಾರೆ.

    ಮಾಜಿ ಪ್ರಧಾನಿ ದೇವೇಗೌಡರು ನ್ಯಾಯಾಲಯದ ಹೊರಗೆ ಈ ವಿಷಯ ಇತ್ಯರ್ಥ ಮಾಡಿಕೊಳ್ಳಬೇಕು ಎಂದು ನೀಡಿರುವ ಸಲಹೆ ಕುರಿತು, ಮಾತುಕತೆಗೆ ತಮಿಳುನಾಡು ಸಹಕಾರ ನೀಡುವುದಿಲ್ಲ. ಮೊದಲಿನಿಂದಲೂ ಅವರು ಅಸಹಕಾರ ತೋರುತ್ತಲೇ ಬಂದಿದ್ದಾರೆ. ತಮಿಳುನಾಡು ಸಂಸದರು ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡುತ್ತಿರುವ ಕುರಿತು, ನಮ್ಮ ಸಂಸತ್ ಸದಸ್ಯರು ಕೇಂದ್ರ ನಿರಾವರಿ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲು ಸೂಚಿಸಿದ್ದೇನೆ ಎಂದಿದ್ದಾರೆ. ಇದನ್ನೂ ಓದಿ: ಮಹಿಳಾ ಮೀಸಲಾತಿಯನ್ನ ಕಾಂಗ್ರೆಸ್ ಸ್ವಾಗತ ಮಾಡುತ್ತದೆ: ದಿನೇಶ್ ಗುಂಡೂರಾವ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]