Tag: ಕಾವೇರಿ ನದಿ

  • CWRC ಆದೇಶ ಪಾಲನೆ ಅಸಾಧ್ಯ, ತಮಿಳುನಾಡಿಗೆ ನೀರು ಬಿಡಲ್ಲ: ಕೇಂದ್ರಕ್ಕೆ ಸಿಎಂ ಪತ್ರ

    CWRC ಆದೇಶ ಪಾಲನೆ ಅಸಾಧ್ಯ, ತಮಿಳುನಾಡಿಗೆ ನೀರು ಬಿಡಲ್ಲ: ಕೇಂದ್ರಕ್ಕೆ ಸಿಎಂ ಪತ್ರ

    ಬೆಂಗಳೂರು: ತಮಿಳುನಾಡಿಗೆ (Tamil Nadu) ನಿತ್ಯ 5 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಶಿಫಾರಸು ಮಾಡಿರುವುದು ಸರ್ಕಾರಕ್ಕೆ ಇಕ್ಕಟ್ಟಿಗೆ ಸಿಲುಕಿಸಿದೆ. ಕಾವೇರಿ ಕೊಳ್ಳದ ಜಲಾಶಯಗಳಲ್ಲಿ ನೀರಿನ ಕೊರತೆ ಹಿನ್ನೆಲೆಯಲ್ಲಿ ತಮಿಳುನಾಡಿಗೆ ನೀರು ಬಿಡುವ ಪರಿಸ್ಥಿತಿ ಇಲ್ಲ. ಈ ಹಿನ್ನೆಲೆಯಲ್ಲಿ ಕೇಂದ್ರದ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್‌ಗೆ ಸಿಎಂ ಸಿದ್ದರಾಮಯ್ಯ (Siddaramaiah) ಪತ್ರ ಬರೆದು, ನೀರು ಹರಿಸುವುದು ಸಾಧ್ಯವಿಲ್ಲವೆಂದು ಸ್ಪಷ್ಟಪಡಿಸಿದ್ದಾರೆ.

    ಕಾವೇರಿ ನೀರಿನ (Cauvery River) ಮೇಲೆ ಅವಲಂಬಿತರಾಗಿರುವ ರೈತರು, ಕುಡಿಯುವ ನೀರಿಗಾಗಿ ಅವಲಂಬಿತರಾಗಿರುವ ಜಾನುವಾರು ಹಾಗೂ ರಾಜ್ಯದ ಜನರ ಹಿತಾಸಕ್ತಿಯನ್ನು ಸಂಕಷ್ಟಕ್ಕೆ ದೂಡಿ ಕಾವೇರಿ ನೀರು ನಿಯಂತ್ರಣ ಸಮಿತಿಯ ತೀರ್ಪನ್ನು ಅನುಷ್ಠಾನ ಮಾಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.

    ಕಾವೇರಿ ನೀರು ನಿಯಂತ್ರಣ ಸಮಿತಿ ನಿರ್ಧರಿಸಿರುವಂತೆ 15 ದಿನಗಳ ಕಾಲ ಕೆಆರ್‌ಎಸ್ ಹಾಗೂ ಕಬಿನಿಯಿಂದ 5,000 ಕ್ಯೂಸೆಕ್ ನೀರನ್ನು ಬಿಳಿಗುಂಡ್ಲುವಿಗೆ ಹರಿಸುವುದು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿರುವ ಮುಖ್ಯಮಂತ್ರಿಗಳು, ಕರ್ನಾಟಕದ ಮನವಿಯನ್ನು ಪರಿಗಣಿಸಿ ಕಾವೇರಿ ನೀರು ನಿಯಂತ್ರಣ ಸಮಿತಿಯ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕೋರಿದ್ದಾರೆ. ಬರಪೀಡಿತವಾಗಿರುವ ರಾಜ್ಯದ ಜನತೆ ಹಾಗೂ ಜಾನುವಾರುಗಳ ಹಿತಾಸಕ್ತಿಯನ್ನು ಕಾಪಾಡಲು ಮನವಿ ಮಾಡಿದ್ದಾರೆ.

    ಕರ್ನಾಟಕ ರಾಜ್ಯ ಸಮಿತಿಯ ಹಿಂದಿನ ನಿರ್ದೇಶನವನ್ನು ಪಾಲಿಸಿದ್ದು, ಕಾವೇರಿ ಜಲಾನಯನ ಪ್ರದೇಶದಲ್ಲಿರುವ ಬಹುತೇಕ ತಾಲೂಕುಗಳು ಮುಂಗಾರು ವೈಫಲ್ಯದಿಂದ ತೀವ್ರ ಬರಕ್ಕೆ ತುತ್ತಾಗಿವೆ ಎಂದು ವಿವರಿಸಿದ್ದಾರೆ. ಇದನ್ನೂ ಓದಿ: ಜಿ20 ಯಶಸ್ಸಿಗೆ ಭಾರತ, ಪ್ರಧಾನಿ ಮೋದಿ ಹೊಗಳಿದ ಪಾಕಿಸ್ತಾನ ಜನ

    ಜೂನ್ ತಿಂಗಳಿನಿಂದ ಸೆಪ್ಟೆಂಬರ್ ಮಧ್ಯದವರೆಗೂ 92 ದಿನಗಳ ಕಾಲ 100 ಟಿಎಂಸಿ ನೀರನ್ನು ತಮಿಳುನಾಡು ಬಳಸಿಕೊಂಡಿದ್ದು, ಇದು ಹಿಂದೆ 1987-88, 2002-03, 2012-13, 2016-17 ಹಾಗೂ 2017-18 ರ ಬರಪರಿಸ್ಥಿತಿಯಲ್ಲಿ ಬಳಕೆಯಾದ ನೀರಿಗಿಂತಲೂ ಹೆಚ್ಚಾಗಿದೆ. ಕರ್ನಾಟಕದ ಜಲಾಶಯಗಳಲ್ಲಿ ಸಂಕಷ್ಟದ ಸ್ಥಿತಿಯಿದ್ದರೂ ತಮಿಳುನಾಡು ಭತ್ತವನ್ನು ವ್ಯಾಪಕವಾಗಿ ಬೆಳೆಯುತ್ತಿದೆ ಎಂದು ಪಾತ್ರದಲ್ಲಿ ಮುಖ್ಯಮಂತ್ರಿಗಳು ವಿವರಿಸಿದ್ದಾರೆ.

    ಸೆಪ್ಟೆಂಬರ್ 12 ಹಾಗೂ 24 ರವರೆಗೆ ಐಎಂಡಿ ಹವಾಮಾನ ಮುನ್ಸೂಚನೆಯಂತೆ ಮಳೆಯಾಗುವ ಲಕ್ಷಣಗಳಿಲ್ಲ. ಮೆಟ್ಟೂರು ಜಲಾಶಯದಲ್ಲಿ ಸೆಪ್ಟೆಂಬರ್ 12 ರಂದು 24.233 ಟಿಎಂಸಿ ಸಂಗ್ರಹವಿದ್ದು (Live Storage) ಪ್ರಸ್ತುತ ಬಿಡುಗಡೆಯಾಗಿರುವ ನೀರನ್ನು ಪರಿಗಣಿಸಿದರೆ, ತಮಿಳುನಾಡಿನ ಅವಶ್ಯಕತೆಯನ್ನು ಪೂರೈಸಲು ಸಾಕಾಗುವಷ್ಟು ನೀರು ಲಭ್ಯವಿದೆ.

    ಕರ್ನಾಟಕದ ಬೆಳೆಗಳ ರಕ್ಷಣೆಗೆ 70 ಟಿಎಂಸಿ, ಕುಡಿಯುವ ನೀರಿಗೆ 33 ಹಾಗೂ ಕೈಗಾರಿಕೆಗಳಿಗೆ 3 ಟಿಎಂಸಿ ನೀರು ಅಗತ್ಯವಿದೆ. ನಮ್ಮ ಸಂಗ್ರಹ 53 ಟಿಎಂಸಿ ಮಾತ್ರವಿದ್ದು, ನಮ್ಮ ಅವಶ್ಯಕತೆಗಳನ್ನು ಪೂರೈಸಿಕೊಳ್ಳಲು ಈ ಸಂಗ್ರಹ ಸಾಕಾಗುವುದಿಲ್ಲ ಎಂದು ಮುಖ್ಯಮಂತ್ರಿಗಳು ಪತ್ರದಲ್ಲಿ ವಿವರಿಸಿದ್ದಾರೆ. ಇದನ್ನೂ ಓದಿ: ಕೇರಳದಲ್ಲಿ ನಿಫಾ ವೈರಸ್ ಸೋಂಕಿತರ ಸಂಖ್ಯೆ 5ಕ್ಕೆ ಏರಿಕೆ – ಸಂಪರ್ಕ ಪಟ್ಟಿಯಲ್ಲಿ 706 ಜನ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಾವೇರಿ ನೀರು ತಮಿಳುನಾಡಿಗೆ ಬಿಟ್ಟು ರಾಜ್ಯದ ಜನರ ಮೇಲೆ ಸರ್ಕಾರ ದಬ್ಬಾಳಿಕೆ ಮಾಡ್ತಿದೆ: ಕುಮಾರಸ್ವಾಮಿ

    ಕಾವೇರಿ ನೀರು ತಮಿಳುನಾಡಿಗೆ ಬಿಟ್ಟು ರಾಜ್ಯದ ಜನರ ಮೇಲೆ ಸರ್ಕಾರ ದಬ್ಬಾಳಿಕೆ ಮಾಡ್ತಿದೆ: ಕುಮಾರಸ್ವಾಮಿ

    ಬೆಂಗಳೂರು: ತಮಿಳುನಾಡಿಗೆ (Tamil Nadu) ಕಾವೇರಿ ಬಿಟ್ಟು ಕರ್ನಾಟಕದ (Karnataka) ಜನರು, ರೈತರ ಮೇಲೆ ರಾಜ್ಯ ಸರ್ಕಾರ ದಬ್ಬಾಳಿಕೆ ಮಾಡುತ್ತಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy) ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಕಾವೇರಿ (Cauvery) ವಿಚಾರವಾಗಿ ನಡೆದ ಸರ್ವ ಪಕ್ಷ ಸಭೆಗೆ ಕುಮಾರಸ್ವಾಮಿ ಗೈರಾಗಿದ್ದರು. ಪೂರ್ವ ನಿಯೋಜಿತ ಕಾರ್ಯಕ್ರಮ ಇದ್ದುದರಿಂದ ನಾನು ಸಭೆಗೆ ಹಾಜರಾಗುತ್ತಿಲ್ಲ ಎಂದು ಸ್ಪಷ್ಟನೆ ನೀಡಿದರು. ಇದೇ ವೇಳೆ ಸರ್ಕಾರದ ನಡೆ ವಿರುದ್ಧ ವಾಗ್ದಾಳಿ ನಡೆಸಿದರು.

    ಈ ಸರ್ಕಾರಕ್ಕೆ ರಾಜ್ಯದ ಜನರ ಹಿತ ಕಾಪಾಡಬೇಕು ಅನ್ನೋ ಕನಿಷ್ಠ ತಾಕತ್ತು ಇಲ್ಲ, ಧಮ್ಮು ಇಲ್ಲ. ಬಾಯಲ್ಲಿ ತಾಕತ್ತು ಧಮ್ಮಿನ ಬಗ್ಗೆ ಹೇಳ್ತಾರೆ. ರಾಜ್ಯದ ಜನರ ಬಗ್ಗೆ ಕನಿಷ್ಠ ಕಮಿಟ್‌ಮೆಂಟ್ ಇಲ್ಲ ಈ ಸರ್ಕಾರಕ್ಕೆ ಎಂದು ಕಿಡಿಕಾರಿದರು.

    ಮುಂದಿನ ದಿನ ಕುಡಿಯೋಕೆ ನೀರು ಬೆಂಗಳೂರಿಗೆ ಎಲ್ಲಿಂದ ತಂದು ಕೊಡ್ತಾರೆ? ತಮಿಳುನಾಡಿನಲ್ಲಿ ಟ್ರಿಬ್ಯುನಲ್‌ನಲ್ಲಿ ಎಷ್ಟು ಎಕರೆ ಬೆಳೆ ಬೆಳೆಯಲು ಅನುಮತಿ ಕೊಟ್ಟಿದೆ? ಆದರೆ ಅವರು ಎಷ್ಟು ಹೆಚ್ಚುವರಿ ಮಾಡಿದ್ದಾರೆ? ನಮಗೆ ತಮಿಳುನಾಡಿನವರು ತೊಂದರೆ ಕೊಡ್ತಿದ್ದಾರೆ. ಇದನ್ನು ಟ್ರಿಬ್ಯುನಲ್ ಮುಂದೆ ಮನದಟ್ಟು ಮಾಡಿಕೊಡಬೇಕು ಎಂದರು. ಇದನ್ನೂ ಓದಿ: ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಸರ್ಕಾರ ಅವಕಾಶ ಕೊಡ್ತಿಲ್ಲ: ಅರವಿಂದ ಬೆಲ್ಲದ್

    ನಾನು 2018 ರಲ್ಲಿ ಸಿಎಂ ಆಗಿದ್ದಾಗ ಬೋರ್ಡ್‌ಗೆ ವಿರೋಧ ಮಾಡಿದ್ದೆ. ಪ್ರೊಟೆಸ್ಟ್ ಮಾಡಿದ್ವಿ. ನಮ್ಮ ಪ್ರತಿಭಟನೆ ಧಿಕ್ಕರಿಸಿ ನಮ್ಮ ರಾಜ್ಯದ ಪ್ರತಿನಿಧಿ ನೇಮಕ ಮಾಡಿದ್ರು. ಬಳಿಕ ನಮ್ಮನ್ನು ಸೇರಿಸಿದ್ರು. ಇವತ್ತು ಸುಪ್ರೀಂಕೋರ್ಟ್ ಸಂಕಷ್ಟ ಪರಿಸ್ಥಿತಿಯಲ್ಲಿ ನೀರು ಹಂಚಿಕೆ ಮಾಡಿಕೊಳ್ಳಬೇಕು ಅಂತ ಇದೆ. ಇದರ ಬಗ್ಗೆ ತೀರ್ಮಾನ ಮಾಡದೇ ಕರ್ನಾಟಕದ ರೈತರು ಜನರ ಮೇಲೆ ದಬ್ಬಾಳಿಕೆ ಮಾಡ್ತಿದ್ದಾರೆ. ರಾಷ್ಟ್ರೀಯ ಪಕ್ಷವಾಗಿ ನೀವೇನು ಮಾಡ್ತಿದ್ದೀರಾ ಅಂತ ಸರ್ಕಾರದ ವಿರುದ್ಧ ಕುಮಾರಸ್ವಾಮಿ ಕಿಡಿಕಾರಿದರು.

    ಇದೇ ವೇಳೆ ಮಾಜಿ ಸಿಎಂ ವೀರಪ್ಪ ಮೊಯ್ಲಿ ವಿರುದ್ಧ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ, ಕಾವೇರಿ ನೀರಿನ ಸಮಸ್ಯೆಗೆ ಮಣ್ಣಿನ ಮಕ್ಕಳು ಕಾರಣ ಅಂತ ವೀರಪ್ಪ ಮೊಯ್ಲಿ ಹೇಳಿದ್ದಾರೆ. ಇವತ್ತು ಕಾವೇರಿ ಸ್ಥಿತಿಗೆ ವೀರಪ್ಪ ಮೊಯ್ಲಿ ಕಾರಣ ಅಂತ ವಾಗ್ದಾಳಿ ನಡೆಸಿದರು. ಸರ್ಕಾರದವರು ವೀರಪ್ಪ ಮೊಯ್ಲಿಯಿಂದಾನೇ ಸಲಹೆ ಪಡೆಯಲಿ ಅಂತ ಕಿಡಿಕಾರಿದರು. ಇದನ್ನೂ ಓದಿ: ತಮಿಳುನಾಡಿಗೆ ಕಾವೇರಿ ನೀರು ಬಿಡಲ್ಲ: ಸರ್ವಪಕ್ಷ ಸಭೆಯಲ್ಲಿ ಒಮ್ಮತದ ನಿರ್ಣಯ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ತಮಿಳುನಾಡಿಗೆ ನೀರು ನಿಲ್ಲಿಸದಿದ್ದರೆ ಕಾವೇರಿ ರಕ್ಷಣಾ ಯಾತ್ರೆ: ಬೊಮ್ಮಾಯಿ

    ತಮಿಳುನಾಡಿಗೆ ನೀರು ನಿಲ್ಲಿಸದಿದ್ದರೆ ಕಾವೇರಿ ರಕ್ಷಣಾ ಯಾತ್ರೆ: ಬೊಮ್ಮಾಯಿ

    ಮಂಡ್ಯ: ರಾಜ್ಯ ಸರ್ಕಾರ ತಮಿಳುನಾಡಿಗೆ (Tamil Nadu) ನೀರು (Cauvery water) ಬಿಡುವುದನ್ನು ನಿಲ್ಲಿಸದಿದ್ದರೆ ಸೆ.12ರ ನಂತರ ಕಾವೇರಿ ಕೊಳ್ಳದ ಜಿಲ್ಲೆಗಳ ಜನರೊಂದಿಗೆ ಕಾವೇರಿ ರಕ್ಷಣಾ ಯಾತ್ರೆ ನಡೆಸಲಾಗುವುದು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಎಚ್ಚರಿಸಿದ್ದಾರೆ.

    ಮಂಡ್ಯ ಜಿಲ್ಲೆಯ ಕೆಆರ್‍ಎಸ್ (KRS) ಡ್ಯಾಂಗೆ ಭೇಟಿ ನೀಡಿ ನೀರಿನ ಮಟ್ಟ ಹಾಗೂ ವಾಸ್ತವ ಸ್ಥಿತಿ ಪರಿಶೀಲನೆಯ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಮೇ ಹಾಗೂ ಜೂನ್ ತಿಂಗಳ ಪ್ರಾರಂಭದಲ್ಲಿಯೇ ಈ ವರ್ಷ ಮಳೆ ಕೊರತೆಯಾಗಿರುವುದು ಗೊತ್ತಾಗಿದೆ. ಆದರೂ ಸರ್ಕಾರ ಸಂಪೂರ್ಣವಾಗಿ ಕಾವೇರಿ ವ್ಯಾಪ್ತಿಯ ನಾಲ್ಕು ಡ್ಯಾಮ್‍ಗಳ ನಿರ್ವಹಣೆಯಲ್ಲಿ ವಿಫಲವಾಗಿದೆ. ಕುಡಿಯುವ ನೀರಿಗೆ ಅನುಕೂಲವಾಗಲು ಕೆರೆಗಳಿಗೆ ರೈತರ ಹೊಲಗಳಿಗೆ ಜೂನ್ ತಿಂಗಳಲ್ಲಿ ನೀರು ಬಿಡಬೇಕಿತ್ತು. ಐಸಿಸಿ ಮೀಟಿಂಗ್ ಜೂನ್‍ನಲ್ಲಿ ಕರೆಯುವ ಬದಲು ಆಗಸ್ಟ್‌ನಲ್ಲಿ ಕರೆದಿದ್ದಾರೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ನಮ್ಮದು ಆಪರೇಷನ್ ಅಲ್ಲ ಕೋ ಅಪರೇಷನ್ ಸ್ನೇಹದ ಹಸ್ತ: ಡಿಕೆಶಿ

    ತಮಿಳುನಾಡಿನವರು 15,000 ಕ್ಯೂಸೆಕ್ ನೀರು ಕೇಳಿದ ಮೇಲೆ ರಾಜ್ಯ ಸರ್ಕಾರ ಎಚ್ಚೆತ್ತುಕೊಳ್ಳದೇ ಕಾಲಹರಣ ಮಾಡಿದೆ. ಅವರು ಕುರುವೈ ಬೆಳೆಗೆ ಈಗಾಗಲೇ 32 ಟಿಎಂಸಿ ಬದಲು 60 ಟಿಎಂಸಿ ನೀರು ಬಳಕೆ ಮಾಡಿಕೊಂಡಿದ್ದಾರೆ. ಆದರೂ ಅವರ ಬೇಡಿಕೆಯಂತೆ ಪ್ರತಿದಿನ ನೀರು ಹರಿಸುತ್ತಿದ್ದಾರೆ. ಈ ಬಗ್ಗೆ ಸರ್ವ ಪಕ್ಷ ಸಭೆಯಲ್ಲಿ ಕೇಳಿದಾಗ ಇನ್ನು ಮುಂದೆ ನೀರು ಬಿಡುವುದಿಲ್ಲ ಎಂದಿದ್ದರು. ಆದರೂ ನಿರಂತರ ನೀರು ಹರಿಸುತ್ತಿದ್ದಾರೆ. ಸಿಡಬ್ಲುಎಂಎ ಎದುರು ಸರಿಯಾಗಿ ವಾದ ಮಾಡಿದ್ದರೆ ಸುಮಾರು 15 ಟಿಎಂಸಿ ನೀರು ಉಳಿಯುತ್ತಿತ್ತು ಎಂದಿದ್ದಾರೆ.

    ರಾಜ್ಯ ಸರ್ಕಾರ ಸೆ.12ರ ನಂತರ ನೀರು ಬಿಡುವ ಸಾಧ್ಯತೆ ಇದೆ. ಸುಪ್ರೀಂಕೋರ್ಟ್ ವಿಚಾರಣೆ ನಡೆಯುವವರೆಗೂ ನೀರು ಹರಿಯುವುದನ್ನು ನಿಲ್ಲಿಸಬೇಕು. ಇಲ್ಲದಿದ್ದರೆ ಕಾವೇರಿ ಮಕ್ಕಳಿಗೆ ಅನ್ಯಾಯ ಮಾಡಿದಂತಾಗುತ್ತದೆ. ಮಂಡ್ಯ ಜಿಲ್ಲೆಯೊಂದರಲ್ಲೇ ಸುಮಾರು 4 ಲಕ್ಷ ಎಕರೆ ಬೆಳೆ ಒಣಗುತ್ತಿದೆ. ಕೃಷಿ ಅಧಿಕಾರಿಗಳು ಒಣ ಬೇಸಾಯದ ಬೆಳೆ ಬೆಳೆಯುವಂತೆ ಸೂಚನೆ ನೀಡುತ್ತಿದ್ದಾರೆ. ಆದರೂ ತಮಿಳುನಾಡಿನ ಬೆಳೆಗೆ ನೀರು ಹರಿಸುತ್ತಿದ್ದಾರೆ.

    ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಈ ಕಡೆಗೆ ಗಮನ ಹರಿಸಿಲ್ಲ. ಸಿಎಂ ನೀರು ಬಿಡುವುದಿಲ್ಲ ಎಂದು ಹೇಳಿದ 24 ಗಂಟೆಯಲ್ಲಿ ಆದೇಶ ಇದೆ ನೀರು ಬಿಟ್ಟಿದ್ದೇವೆ ಎಂದು ಡಿಸಿಎಂ ಹೇಳುತ್ತಾರೆ. ಕೆಆರ್‍ಎಸ್ ಡ್ಯಾಮ್‍ನಲ್ಲಿ ಕೇವಲ 13 ಟಿಎಂಸಿ ನೀರು ಮಾತ್ರ ಬಳಕೆಗೆ ಇದೆ. ಮುಂದಿನ ಮೇ ವರೆಗೂ ಇನ್ನೂ ಎರಡು ಟಿಎಂಸಿ ನೀರು ಆವಿಯಾಗಿ ಹೋಗುತ್ತದೆ. ಇದರಿಂದ ಕುಡಿಯುವ ನೀರಿನ ಸಮಸ್ಯೆ ಎದುರಾಗಲಿದೆ. ರಾಜ್ಯದ ಜನರು ಇದನ್ನು ಕ್ಷಮಿಸುವುದಿಲ್ಲ ಎಂದಿದ್ದಾರೆ.

    ರಾಜ್ಯ ಸರ್ಕಾರ ಇದುವರೆಗೂ ನಮ್ಮ ರೈತರಿಗೆ 33 ಟಿಎಂಸಿ ನೀರು ಬಿಡಬೇಕಿತ್ತು. ಕೇವಲ 7 ಟಿಎಂಸಿ ನೀರು ಬಿಟ್ಟಿದ್ದಾರೆ. ನಮ್ಮ ರೈತರು ಎಲ್ಲಿಗೆ ಹೋಗಬೇಕು? ಕಾವೇರಿ ಭಾಗದ ಜನರು ನಿಮಗೆ ಬಹುಮತ ನೀಡಿದ್ದಾರೆ. ಅವರಿಗೆ ಇದೇ ಬಹುಮಾನಾನಾ ಎಂದು ಪ್ರಶ್ನಿಸಿದ್ದಾರೆ.

    ಡಿ.ಕೆ ಶಿವಕುಮಾರ್ ಅವರು ಮೇಕೆದಾಟು ಬಗ್ಗೆ ಹೇಳಿದ್ದಾರೆ. ನ್ಯಾಷನಲ್ ಹೈಡ್ರೊ ಎಲೆಕ್ಟ್ರಿಕ್ ಕಾರ್ಪೋರೇಷನ್‌ನವರು ವಿದ್ಯುತ್ ಉತ್ಪಾದನೆಗೆ ನಾಲ್ಕು ಡ್ಯಾಮ್‍ಗಳಿಗೆ ಅನುಮತಿ ನೀಡಿದ್ದರು. ಆದರೆ ತಮಿಳುನಾಡು ವಿರೋಧ ಮಾಡಿದೆ. ನಾನು 2012 ರಲ್ಲಿ ನೀರಾವರಿ ಸಚಿವನಾಗಿದ್ದಾಗ ಮೇಕೆದಾಟು ಯೋಜನೆ ಮಾಡಲು ತೀರ್ಮಾನಿಸಿ ಫಿಜಿಬಿಲಿಟಿ ರಿಪೋರ್ಟ್ ಸಿದ್ಧ ಪಡಿಸಿದ್ದೆವು. ಡಿಪಿಆರ್ ತಯಾರಿಸುವ ಸಂದರ್ಭದಲ್ಲಿ ಕಾಂಗ್ರೆಸ್‍ನವರು ಮೇಕೆದಾಟು ಪಾದಯಾತ್ರೆ ಮಾಡಿದರು. ಪ್ರಕರಣ ಕೊರ್ಟ್‍ನಲ್ಲಿದೆ ಎಂದು ಹೇಳಿದಾಗ ಒಪ್ಪಲಿಲ್ಲ. ಈಗ ಅವರೇ ಸತ್ಯ ಒಪ್ಪಿಕೊಂಡಿದ್ದಾರೆ ಎಂದಿದ್ದಾರೆ.

    ರೈತ ಸಂಘದವರು ಕಾವೇರಿ ರಕ್ಷಣೆಗೆ ಪ್ರಾಮಾಣಿಕವಾಗಿ ಹೋರಾಟ ಮಾಡುತ್ತಿದ್ದಾರೆ. ನಾವು ರಾಜಕಾರಣ ಮಾಡಬಾರದು ಎಂದು ಕಾದು ನೋಡಿದೆವು. ಸಿಡಬ್ಲುಸಿ ಸಭೆ ಕರೆಯುವ ಮೊದಲು ನಾನು ಸಿಎಂಗೆ ಪತ್ರ ಬರೆದಿದ್ದೆ. ಸರ್ವಪಕ್ಷ ಸಭೆ ಕರೆಯುವಂತೆ ಒತ್ತಡ ಹೇರಿದ್ದೇವೆ. ಸರ್ಕಾರ ಈಗಲೂ ನೀರು ಹರಿಸುವುದನ್ನು ತಡೆಯುವಂತೆ ಒತ್ತಡ ಹೇರಲು ವಸ್ತುಸ್ಥಿತಿ ಅರಿಯಲು ಬಂದಿದ್ದೇನೆ. ಕಾಂಗ್ರೆಸ್ ನಾಯಕರ ಹೇಳಿಕೆಗಳನ್ನು ನೋಡಿದರೆ ತಮಿಳುನಾಡಿನ ಓಲೈಕೆಗೆ ರಾಜಕಾರಣದಲ್ಲಿ ತೊಡಗಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

    ಈ ವೇಳೆ ಮಾಜಿ ಸಚಿವ ಗೋವಿಂದ ಕಾರಜೋಳ, ಆರ್. ಅಶೋಕ್, ಡಾ.ಅಶ್ವಥ್ ನಾರಾಯಣ್, ಕೆ. ಗೋಪಾಲಯ್ಯ, ಸಂಸದೆ ಸುಮಲತಾ ಅಂಬರೀಶ್, ಪ್ರತಾಪ್ ಸಿಂಹ ಇದ್ದರು. ಇದನ್ನೂ ಓದಿ: ಶಿವಾನಂದ ಪಾಟೀಲ್‍ಗೆ ಒಂದು ಕೋಟಿ ರೂ. ಕೊಟ್ಟರೆ ಆತ್ಮಹತ್ಯೆ ಮಾಡಿಕೊಳ್ತಾರಾ?: ಬಿ.ಸಿ ಪಾಟೀಲ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • KRS ಡ್ಯಾಂನಿಂದ ಮತ್ತೆ ತಮಿಳುನಾಡಿಗೆ ನೀರು

    KRS ಡ್ಯಾಂನಿಂದ ಮತ್ತೆ ತಮಿಳುನಾಡಿಗೆ ನೀರು

    ಮಂಡ್ಯ: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದ ಬೆನ್ನಲ್ಲೇ ಕೆಆರ್‌ಎಸ್ ಅಣೆಕಟ್ಟೆಯಿಂದ (KRS Dam) ಕಾವೇರಿ ನದಿ (Kaveri River) ಮೂಲಕ ತಮಿಳುನಾಡಿಗೆ (Tamil Nadu) ಮಂಗಳವಾರ ರಾತ್ರಿಯಿಂದಲೇ 5000 ಕ್ಯೂಸೆಕ್‌ಗೂ ಅಧಿಕ ಪ್ರಮಾಣದಲ್ಲಿ ನೀರು ಬಿಡಲಾಗುತ್ತಿದೆ.

    ಕೆಆರ್‌ಎಸ್ ಡ್ಯಾಂನ +80ರ ಗೇಟ್ ಮೂಲಕ ನೀರನ್ನು ಹರಿಸಲಾಗುತ್ತಿದೆ. ರೈತರ ಆಕ್ರೋಶದ ನಡುವೆ ರಾತ್ರಿಯಿಂದಲೇ 7,380 ಕ್ಯೂಸೆಕ್ ನೀರನ್ನು ಬಿಡಲಾಗುತ್ತಿದೆ. ನೀರು ಬಿಡುಗಡೆಯಿಂದ ಕೆಆರ್‌ಎಸ್ ಡ್ಯಾಂನ ನೀರಿನ ಮಟ್ಟ ಕುಸಿಯಲಿದೆ. ತಮಿಳುನಾಡಿಗೆ ನೀರು ಬಿಡುತ್ತಿರುವುದನ್ನು ವಿರೋಧಿಸಿ ಮಂಡ್ಯದಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಯ ಕಾವು ಹೆಚ್ಚಾಗುವ ಸಾಧ್ಯತೆ ಇದೆ. ಇದನ್ನೂ ಓದಿ: ಇಂದು ಮೈಸೂರಿನಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ

    ಕೆಆರ್‌ಎಸ್ ಡ್ಯಾಂನ ಇಂದಿನ ನೀರಿನ ಮಟ್ಟ:
    ಗರಿಷ್ಠ ಮಟ್ಟ – 124.80 ಅಡಿಗಳು
    ಇಂದಿನ ಮಟ್ಟ – 101.58 ಅಡಿಗಳು
    ಗರಿಷ್ಠ ಸಾಮರ್ಥ್ಯ – 49.452 ಟಿಎಂಸಿ
    ಇಂದಿನ ಸಾಮರ್ಥ್ಯ – 24.075 ಟಿಎಂಸಿ
    ಒಳ ಹರಿವು – 2,300 ಕ್ಯೂಸೆಕ್
    ಹೊರ ಹರಿವು – 7,380 ಕ್ಯೂಸೆಕ್ ಇದನ್ನೂ ಓದಿ: ಸರ್ಕಾರಿ ಭೂಮಿ ಒತ್ತುವರಿ – ಪ್ರಕಾಶ್ ರಾಜ್‌ಗೆ ನೋಟಿಸ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • CWRC ಶಿಫಾರಸ್ಸು ಎತ್ತಿ ಹಿಡಿದ CWMA – ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ ಕುಡಿಯುವ ನೀರಿಗೆ ಸಂಕಷ್ಟ ಸಾಧ್ಯತೆ

    CWRC ಶಿಫಾರಸ್ಸು ಎತ್ತಿ ಹಿಡಿದ CWMA – ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ ಕುಡಿಯುವ ನೀರಿಗೆ ಸಂಕಷ್ಟ ಸಾಧ್ಯತೆ

    ನವದೆಹಲಿ: ನಿತ್ಯ 5 ಸಾವಿರ ಕ್ಯೂಸೆಕ್ ನಂತೆ 15 ದಿನಗಳ ಕಾಲ ನೀರು ಹರಿಸಲು ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಮಾಡಿದ ಶಿಫಾರಸ್ಸನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಎತ್ತಿ ಹಿಡಿದಿದ್ದು ಭವಿಷ್ಯದಲ್ಲಿ ರಾಜ್ಯದ ಕಾವೇರಿ (Kaveri River) ಅಚ್ಚುಕಟ್ಟು ಪ್ರದೇಶದಲ್ಲಿ ಕುಡಿಯುವ ನೀರಿನ ಸಂಕಷ್ಟ ಎದುರಿಸುವ ಸನ್ನಿವೇಶ ನಿರ್ಮಾಣವಾಗಿದೆ.

    ತಮಿಳುನಾಡಿಗೆ (Tamil Nadu) ನೀರು ಹರಿಸುವ ಸಂಬಂಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮಂಗಳವಾರ ದೆಹಲಿಯಲ್ಲಿ ಸಭೆ ನಡೆಸಿತು. ಸಭೆಯಲ್ಲಿ ತಮಿಳುನಾಡು ಪರ ಹಾಜರಾಗಿದ್ದ ಎಸಿಎಸ್ ಸಂದೀಪ್ ಸಕ್ಸೇನಾ ಕರ್ನಾಟಕ ಕೂಡಲೇ 50.10 ಟಿಎಂಸಿ ನೀರು ಹರಿಸಬೇಕು ಎಂದು ಹೇಳಿದರು. 80.37 ಟಿಎಂಸಿ ನೀರು ಕರ್ನಾಟಕ (Karnataka) ಹರಿಸಬೇಕಿತ್ತು. ಆದರೆ ಜೂನ್ 1 ರಿಂದ ಅಗಸ್ಟ್ 27 ವರೆಗೂ 30.17 ಟಿಎಂಸಿ ನೀರು ಹರಿಸಿದ್ದು ಕೂಡಲೇ ಬಾಕಿ ನೀರು ಬಿಡಬೇಕು ಎಂದು ಒತ್ತಡ ಹೇರಿತು.

    ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಕರ್ನಾಟಕ ಪರ ಭಾಗಿಯಾಗಿದ್ದ ಎಸಿಎಸ್ ರಾಕೇಶ್ ಸಿಂಗ್, 47% ಮಳೆಯ ಕೊರತೆ ಇದೆ, ಜಲಾಶಯಗಳಲ್ಲಿ ನೀರಿನ ಸಂಗ್ರಹ ಇಲ್ಲ, ಕರ್ನಾಟಕದ ಗೇಟುಗಳನ್ನು ತೆರೆಯಲು ಸಾಧ್ಯವೇ ಇಲ್ಲ. ಒಂದು ವೇಳೆ ಕರ್ನಾಟಕ ನೀರು ನೀಡಿದರೆ ಕುಡಿಯುವ ನೀರಿಗೂ ಕ್ಷಾಮ ಎದುರಾಗಲಿದೆ. ಕರ್ನಾಟಕ ನಿತ್ಯ 3,000 ಕ್ಯೂಸೆಕ್ ನೀರು ಹರಿಸಲು ಮಾತ್ರ ಸಮರ್ಥವಾಗಿದೆ ಎಂದು ಹೇಳಿದರು. ಇದನ್ನೂ ಓದಿ: ದ್ರವರೂಪದ ಚಿನ್ನ, ಬಾಹ್ಯಾಕಾಶದಲ್ಲಿ ವಾಸ್ತವ್ಯ, ಮಾನವ ಸಾಹಸಗಳಿಗೆ ಹಾದಿ ಮಾಡಿಕೊಡಲಿದೆ ಚಂದ್ರಯಾನ-3ರ ಯಶಸ್ಸು

    ಕರ್ನಾಟಕದ ವಾದಕ್ಕೆ ತಮಿಳುನಾಡು ತೀವ್ರ ಆಕ್ಷೇಪ ವ್ಯಕ್ತಪಡಿಸಿತು. ನಿತ್ಯ 24,000 ಕ್ಯೂಸೆಕ್‌ನಂತೆ 10 ದಿನಗಳ ಕಾಲ ಬಿಡಬೇಕು ಎಂದು ಒತ್ತಾಯಿಸಿತು. ಇದಕ್ಕೆ ಮಧ್ಯಪ್ರವೇಶ ಮಾಡಿದ ಪ್ರಾಧಿಕಾರದ ಅಧಿಕಾರಿಗಳು ನೀರು ಬಿಡಲು ಸಾಧ್ಯವಿಲ್ಲ ಎನ್ನಲಾಗದು ಈ ಹಿನ್ನೆಲೆ ಕಾವೇರಿ ನೀರು ನಿಯಂತ್ರಣ ಸಮಿತಿ ನೀಡಿದ ಆದೇಶದನ್ವಯ ನೀರು ಹರಿಸಿ ಎಂದು ಆದೇಶಿಸಿತು.

    ಪ್ರಾಧಿಕಾರ ಈ ಆದೇಶಕ್ಕೆ ಕರ್ನಾಟಕ, ತಮಿಳುನಾಡು ಎರಡು ರಾಜ್ಯಗಳು ಆಕ್ಷೇಪ ವ್ಯಕ್ತಪಡಿಸಿವೆ. ಈ ಬಗ್ಗೆ ಸುಪ್ರೀಂಕೋರ್ಟ್‌ನಲ್ಲಿ ಶುಕ್ರವಾರ ನಡೆಯಲಿರುವ ವಿಚಾರಣೆ ವೇಳೆ ತಮ್ಮ ವಾದವನ್ನು ಮತ್ತೊಮ್ಮೆ ಪ್ರತಿಪಾದಿಸುವ ನಿರೀಕ್ಷೆಗಳಿದೆ. ಈ ನಡುವೆ ಪ್ರಾಧಿಕಾರ ಇದೇ ಆದೇಶವನ್ನು ಅಂಕಿ ಅಂಶಗಳ ಸಮೇತ ಸುಪ್ರೀಂಕೋರ್ಟ್‌ಗೆ ವರದಿ ನೀಡಲಿದೆ. ಇದನ್ನೂ ಓದಿ: ನವೆಂಬರ್ 5 ಕೆ-ಸೆಟ್ ಪರೀಕ್ಷೆ: ಕೆಇಎ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ತಮಿಳುನಾಡಿಗೆ ನೀರು ಬಿಟ್ಟರೆ ಬೆಂಗಳೂರಿಗೆ ಸಂಕಷ್ಟ

    ತಮಿಳುನಾಡಿಗೆ ನೀರು ಬಿಟ್ಟರೆ ಬೆಂಗಳೂರಿಗೆ ಸಂಕಷ್ಟ

    ಮಂಡ್ಯ: ಮುಂದಿನ ಹದಿನೈದು ದಿನ 5 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ (Tamil Nadu) ಬಿಟ್ಟರೆ 7 ಟಿಎಂಸಿ ನೀರು ಕೆಆರ್‍ಎಸ್‍ನಿಂದ (KRS) ಖಾಲಿಯಾಗಲಿದೆ. ಈ ಮೂಲಕ ಕಾವೇರಿ ನೀರು ನಿಯಂತ್ರಣ ಸಮಿತಿ ಸೂಚನೆ ಪಾಲಿಸಿದರೆ ಸಂಕಷ್ಟ ಎದುರಾಗುವ ಭೀತಿ ಶುರುವಾಗಿದೆ.

    ಸದ್ಯ ಡ್ಯಾಂನಲ್ಲಿ 24 ಟಿಎಂಸಿ ನೀರು ಮಾತ್ರ ಶೇಖರಣೆ ಇದೆ. ನೀರು ಬಿಟ್ಟರೆ ಅದು 17 ಟಿಎಂಸಿಗೆ ಇಳಿಯಲಿದೆ. 17 ಟಿಎಂಸಿಯಲ್ಲಿ 5 ಟಿಎಂಸಿ ನೀರು ಡೆಡ್ ಸ್ಟೋರೇಜ್ ಆಗಲಿದೆ. ಈ 5 ಟಿಎಂಸಿ ನೀರನ್ನ ಬಳಿಕೆ ಮಾಡಲು ಸಾಧ್ಯವಾಗುವುದಿಲ್ಲ. ಆಗ ಬಳಕೆಗೆ ಉಳಿಯುವುದು ಕೇವಲ 13 ಟಿಎಂಸಿ ನೀರು ಮಾತ್ರ. ಅಷ್ಟು ನೀರಿನಲ್ಲಿ ಕುಡಿಯಲೂ ಸಹ ನೀರು ಕೊಡುವುದು ಕಷ್ಟವಾಗಲಿದೆ. ಕಾವೇರಿ ನೀರನ್ನೇ ಅವಲಂಬಿಸಿರುವ ಸಿಲಿಕಾನ್ ಸಿಟಿ (Bengaluru) ಜನರಿಗೆ ಡಿಸೆಂಬರ್ ಕೊನೆಯ ವಾರದಲ್ಲೇ ನೀರಿನ ಸಮಸ್ಯೆ ಕಾಡಲಿದೆ.

    ಡ್ಯಾಂನ ಇಂದಿನ ನೀರಿನ ಮಟ್ಟ

    ಗರಿಷ್ಠ ಮಟ್ಟ- 124.80 ಅಡಿ
    ಇಂದಿನ ಮಟ್ಟ- 101.82 ಅಡಿ
    ಒಳ ಹರಿವು – 1891 ಕ್ಯೂಸೆಕ್
    ಹೊರ ಹರಿವು – 2342 ಕ್ಯೂಸೆಕ್
    ಗರಿಷ್ಠ ಸಂಗ್ರಹ ಸಾಮಥ್ರ್ಯ- 49.452 ಟಿಎಂಸಿ
    ಇಂದು ಸಂಗ್ರಹ ಇರುವ ನೀರು- 24.270 ಟಿಎಂಸಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • KRSನಲ್ಲಿ ಕುಸಿದ ನೀರಿನ ಮಟ್ಟ – ಮಳೆ ಬಾರದಿದ್ರೆ ವರ್ಷಾಂತ್ಯಕ್ಕೆ ಕುಡಿಯುವ ನೀರಿಗೂ ತತ್ವಾರ

    KRSನಲ್ಲಿ ಕುಸಿದ ನೀರಿನ ಮಟ್ಟ – ಮಳೆ ಬಾರದಿದ್ರೆ ವರ್ಷಾಂತ್ಯಕ್ಕೆ ಕುಡಿಯುವ ನೀರಿಗೂ ತತ್ವಾರ

    ಮಂಡ್ಯ: ಕೆಆರ್‍ಎಸ್‍ನಲ್ಲಿ (KRS) 10 ಟಿಎಂಸಿ ನೀರು ಖಾಲಿಯಾದ ಬಳಿಕ ರಾಜ್ಯ ಸರ್ಕಾರ ತಮಿಳುನಾಡಿಗೆ (Tamil Nadu) ನೀರು ಹರಿಸುವುದನ್ನು ಗುರುವಾರ ಸಂಜೆಯಿಂದ ಬಂದ್ ಮಾಡಿದೆ. ಈಗ ಜಲಾಶಯದಲ್ಲಿ 25 ಟಿಎಂಸಿಯಷ್ಟು ನೀರು ಮಾತ್ರ ಸಂಗ್ರಹವಾಗಿದೆ. ಮತ್ತೆ ಮಳೆಯಾಗದಿದ್ದರೆ ಡಿಸೆಂಬರ್ ವೇಳೆಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಲಿದೆ.

    ಕೆಆರ್‍ಎಸ್ ಡ್ಯಾಂನಿಂದ ತಮಿಳುನಾಡಿಗೆ ನೀರು ಬಿಡುಗಡೆ ವಿಚಾರಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು. ಆದರೂ ತಮಿಳುನಾಡಿಗೆ ನೀರು ಹರಿಸಲಾಗಿತ್ತು. ಇದರಿಂದ ಕೆಆರ್‍ಎಸ್ ಡ್ಯಾಂ ನೀರಿನ ಮಟ್ಟ ಕುಸಿತವಾಗಿದೆ. 15 ದಿನಗಳ ಹಿಂದೆ 113 ಅಡಿ ನೀರು ಸಂಗ್ರಹವಾಗಿತ್ತು. ಈಗ 102 ಅಡಿಗೆ ಕುಸಿತ ಕಂಡಿದೆ. ಈಗ ನೀರು ಹರಿಸುವುದನ್ನು ನಿಲ್ಲಿಸಲಾಗಿದೆ. ಇದನ್ನೂ ಓದಿ: `ಆಲಮಟ್ಟಿ’ ಭರ್ತಿಯಾದ್ರೂ ಬಾಗಿನ ಅರ್ಪಿಸದ ಸಿಎಂ – ಮೈಸೂರಿಗೊಂದು, ಉತ್ತರ ಕರ್ನಾಟಕ ಭಾಗಕ್ಕೊಂದು ನೀತಿ ಎಂದು ಜನಾಕ್ರೋಶ

    ಮಳೆಯಾಗದೆ ಇದ್ದರೆ ಡಿಸೆಂಬರ್‌ನಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಆತಂಕವಿದೆ. ಇನ್ನೂ ಬೇಸಿಗೆಯಲ್ಲಂತೂ ಹನಿ ನೀರಿಗೂ ಪರದಾಡಬೇಕಾದ ಸ್ಥಿತಿ ಎದುರಾಗಲಿದೆ. ಡ್ಯಾಂನಿಂದ ನಾಲೆಗಳ ಮೂಲಕ ಕುಡಿಯುವ ಉದ್ದೇಶಕ್ಕಾಗಿ ನೀರು ಬಿಡುಗಡೆ ಮುಂದುವರೆಸಲಾಗಿದೆ. ಕಾವೇರಿ ನೀರಾವರಿ ನಿಗಮ 5,743 ಕ್ಯೂಸೆಕ್ ನೀರನ್ನು ಇದಕ್ಕಾಗಿ ಬಿಡುಗಡೆ ಮಾಡುತ್ತಿದೆ. ಇದನ್ನೂ ಓದಿ: ಸ್ನೇಹಿತರಿಂದಲೇ ಚಿನ್ನ ಕಳವು ಮಾಡಿಸಿ ನಾಟಕ – ಗಂಡನಿಗೆ ಬುದ್ಧಿ ಕಲಿಸಲು ಹೋಗಿ ಸಿಕ್ಕಿಬಿದ್ದ ಪತ್ನಿ

    ಕೆಆರ್‍ಎಸ್ ಡ್ಯಾಂನ ಇಂದಿನ ನೀರಿನ ಮಟ್ಟ
    ಗರಿಷ್ಠ ಮಟ್ಟ – 124.80 ಅಡಿಗಳು
    ಇಂದಿನ ಮಟ್ಟ – 102.74 ಅಡಿಗಳು
    ಗರಿಷ್ಠ ಸಾಂದ್ರತೆ – 49.452 ಟಿಎಂಸಿ
    ಇಂದಿನ ಸಾಂದ್ರತೆ – 25.035 ಟಿಎಂಸಿ
    ಒಳ ಹರಿವು – 3,276 ಕ್ಯೂಸೆಕ್
    ಹೊರ ಹರಿವು – 5,743 ಕ್ಯೂಸೆಕ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಾವೇರಿ ಸರ್ವಪಕ್ಷ ಸಭೆ – ನೀರು ಹಂಚಿಕೆಗೆ ಸಂಕಷ್ಟ ಸೂತ್ರಕ್ಕೆ ಸರ್ವರ ಒತ್ತಾಯ

    ಕಾವೇರಿ ಸರ್ವಪಕ್ಷ ಸಭೆ – ನೀರು ಹಂಚಿಕೆಗೆ ಸಂಕಷ್ಟ ಸೂತ್ರಕ್ಕೆ ಸರ್ವರ ಒತ್ತಾಯ

    – ಪ್ರಧಾನಿ ಬಳಿ ಸರ್ವಪಕ್ಷ ನಿಯೋಗ
    – ಕೋರ್ಟ್‌ನಲ್ಲಿ ಸಮರ್ಥ ವಾದ ಮಂಡನೆ

    ಬೆಂಗಳೂರು: ಮೇಕೆದಾಟು, ಕಾವೇರಿ, ಮಹಾದಾಯಿ, ಕೃಷ್ಣಾ ಸಮಸ್ಯೆಗಳ ಕುರಿತು ಪ್ರಧಾನ ಮಂತ್ರಿಗಳ ಬಳಿ ಸರ್ಕಾರಕ್ಕೆ ಸರ್ವಪಕ್ಷ ನಿಯೋಗ ತೆರಳೋಣ, ಇದಕ್ಕೆ ಎಲ್ಲರ ಸಹಕಾರ ಬಯಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

    ಅವರು ಬುಧವಾರ ಕಾವೇರಿ, ಮೇಕೆದಾಟು ಮತ್ತು ಮಹಾದಾಯಿ ಜಲ ವಿವಾದಗಳ ಕುರಿತಂತೆ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸರ್ವಪಕ್ಷ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ರಾಜ್ಯದ ಹಿತ ಕಾಪಾಡಲು ನಾವು ಎಂದಿಗೂ ಬದ್ಧರಾಗಿರುತ್ತೇವೆ. 5-6 ವರ್ಷಗಳಿಗೊಮ್ಮೆ ಮಳೆಯ ಕೊರತೆಯಿಂದಾಗಿ ತಮಿಳುನಾಡಿಗೆ ಕಾವೇರಿ ನೀರು ಬಿಡಲು ಸಂಕಷ್ಟ ಎದುರಾಗುತ್ತದೆ. ಈ ಕುರಿತು ಸಂಕಷ್ಟ ಹಂಚಿಕೆ ಸೂತ್ರ ನಿರ್ದಿಷ್ಟಪಡಿಸಿಲ್ಲ. ಈ ಬಗ್ಗೆ ಸುಪ್ರೀಂ ಕೋರ್ಟ್‌ನಲ್ಲಿ ವಕೀಲರು ಸಮರ್ಥವಾಗಿ ವಾದ ಮಂಡಿಸಬೇಕು. ಇದಕ್ಕೆ ಸರ್ಕಾರ ಎಲ್ಲ ಅಗತ್ಯ ಬೆಂಬಲ ನೀಡಲಿದೆ ಎಂದು ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ತಿಳಿಸಿದರು.

    ಮೇಕೆದಾಟು ಯೋಜನೆ – ತಮಿಳುನಾಡಿಗೆ ಅನುಕೂಲ:
    ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದಲ್ಲಿ ಸಂಕಷ್ಟ ಹಂಚಿಕೆ ಸೂತ್ರದ ಕುರಿತು ತೀರ್ಮಾನ ಆಗಲೇ ಬೇಕು. ಇಂತಹ ಸಂಕಷ್ಟದ ಸಮಯದಲ್ಲಿ 67 ಟಿಎಂಸಿ ನೀರು ಸಂಗ್ರಹಿಸುವ ಸಾಮರ್ಥ್ಯದ ಮೇಕೆದಾಟು ಸಮತೋಲನಾ ಜಲಾಶಯ ನಿರ್ಮಿಸಿದರೆ, ಅವರಿಗೆ ನೀರು ಬಿಡಲು ಅನುಕೂಲವಾಗುತ್ತದೆ. ಈ ಯೋಜನೆಗೆ ತಮಿಳುನಾಡು ವಿನಾಕಾರಣ ವಿರೋಧಿಸುತ್ತಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

    ಅಧಿಕಾರಿಗಳಿಂದ ಸಮರ್ಥ ವಾದ ಮಂಡನೆ:
    ಕಾವೇರಿ ವಿವಾದ ಹಳೆಯದು. ಸರ್ವೋಚ್ಛ ನ್ಯಾಯಾಲಯ ನಮಗೆ ತೀರ್ಪು ಕೊಟ್ಟ ನಂತರ 2018 ರಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರಚನೆಯಾಗಿದೆ. ಕಾವೇರಿ ನೀರು ನಿಯಂತ್ರಣಾ ಸಮಿತಿ ಸ್ಥಾಪನೆಯಾಗಿದೆ. ಅನೇಕ ಸಭೆಗಳನ್ನು ಮಾಡಿದ್ದಾರೆ. ಕಾವೇರಿ ಪ್ರಾಧಿಕಾರ 22 ಸಭೆ ಹಾಗೂ ನಿಯಂತ್ರಣ ಸಮಿತಿ 84 ಸಭೆ ನಡೆಸಿದೆ. ಈ ಸಮಿತಿಗಳಾದ ಮೇಲೆ, ರಾಜ್ಯದಲ್ಲಿ ಸಂಕಷ್ಟದ ದಿನಗಳು ಎದುರಾಗಿದೆ. ಆಗ ನಾವು ನಿಯಂತ್ರಣ ಸಮಿತಿ, ಪ್ರಾಧಿಕಾರದಲ್ಲಿ ಚರ್ಚಿಸಿ, ಅದರ ತೀರ್ಮಾನದಂತೆ ನಡೆದುಕೊಂಡ ಅನೇಕ ನಿದರ್ಶನಗಳಿವೆ.

    ಕಾವೇರಿ ನಿಯಂತ್ರಣ ಸಮಿತಿ ಮತ್ತು ಪ್ರಾಧಿಕಾರದಲ್ಲಿ ಕರ್ನಾಟಕವನ್ನು ಪ್ರತಿನಿಧಿಸುವ ಅಧಿಕಾರಿಗಳು ಸಂಕಷ್ಟದ ಬಗ್ಗೆ ಪ್ರತಿಪಾದನೆ ಮಾಡಿದ್ದಾರೆ. ವಸ್ತುಸ್ಥಿತಿಯನ್ನು ಮನವರಿಕೆ ಮಾಡಿಕೊಟ್ಟಿದ್ದಾರೆ. ಈ ವರ್ಷ ಮಳೆ ಕಡಿಮೆ ಆಯಿತು. ಜೂನ್ ಹಾಗೂ ಆಗಸ್ಟ್‌ನಲ್ಲಿ ಮಳೆ ಕೊರತೆಯಾಗಿದೆ. ಇಲ್ಲಿಯವರೆಗೆ ನೀರು ಬಿಡಬೇಕಾಗಿದ್ದಿದ್ದು 86.38 ಟಿಎಂಸಿ. ಆದರೆ 20ನೇ ತಾರೀಖಿನವರೆಗೆ ನೀರು ಬಿಟ್ಟಿರುವುದು 24 ಟಿಎಂಸಿ. ಅಂದರೆ ನಾವು ವಿರೋಧ ಮಾಡಿದ್ದೇವೆ. ವಾಸ್ತವವನ್ನು ಪ್ರಾಧಿಕಾರದ ಮುಂದೆ ಬಿಡಿಸಿಡುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ. ಮಳೆ ಕೊರತೆಯಿಂದಾಗಿ ಬೆಳೆಗಳಿಗೆ ನೀರು ಬಿಟ್ಟಿಲ್ಲ. ಕುಡಿಯುವ ನೀರಿಗೆ ನೀರು ಬೇಕಾಗುತ್ತದೆ ಎಂದು ವಿವರಿಸಲಾಗಿದೆ.

    ನಾವು ವಾದ ಮಾಡಿದ್ದರಿಂದಲೇ 15,000 ಕ್ಯೂಸೆಕ್ ನೀರಿನಿಂದ 10,000 ಕ್ಯೂಸೆಕ್ ನೀರಿಗೆ ಇಳಿಕೆ ಮಾಡಲಾಯಿತು. ಅದನ್ನೂ ಮರು ಪರಿಶೀಲನೆ ಮಾಡುವಂತೆ ಅರ್ಜಿ ಸಲ್ಲಿಸಿದ್ದೆವು. 15,000 ಕ್ಯುಸೆಕ್ ನೀರು ಕೊಡಲಾಗದು ಎಂದು ರಾಜ್ಯದ ಅಧಿಕಾರಿಗಳು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ವಾದ ಮಂಡಿಸುತ್ತಿರುವಾಗಲೇ ತಮಿಳುನಾಡಿದ ಅಧಿಕಾರಿಗಳು ಸಭಾತ್ಯಾಗ ಮಾಡಿದರು. ನಂತರ ಸುಪ್ರೀಂ ಕೋರ್ಟ್ನಲ್ಲಿ ಮನವಿ ಸಲ್ಲಿಸಿದ್ದಾರೆ. 25ರಂದು ಈ ಪ್ರಕರಣ ವಿಚಾರಣೆಗೆ ಬರಲಿದ್ದು, ಈ ವಿಷಯದಲ್ಲಿ ವಕೀಲರು ಸಮರ್ಥವಾಗಿ ವಾದ ಮಾಡುತ್ತಾರೆ ಎಂದು ವಿಶ್ವಾಸದಿಂದ ನುಡಿದರು.

    ರಾಜಕೀಯ ಇಲ್ಲ:
    ಕರ್ನಾಟಕದ ನೆಲ, ಜಲ, ಗಡಿ, ಭಾಷೆಗಳ ಬಗ್ಗೆ ಮೊದಲಿನಿಂದಲೂ ಎಲ್ಲ ರಾಜಕೀಯ ಪಕ್ಷಗಳೂ ಒಕ್ಕೊರಲಿನಿಂದ ಮಾತನಾಡಿವೆ. ಈ ವಿಷಯಗಳಲ್ಲಿ ರಾಜಕೀಯ ಮಾಡುವ ಪ್ರಯತ್ನವನ್ನು ಯಾರೂ ಮಾಡಿಲ್ಲ, ಮಾಡಲೂ ಬಾರದು. ಯಾಕೆಂದರೆ ನಾವೆಲ್ಲರೂ ರಾಜ್ಯದ 7 ಕೋಟಿ ಜನರ ಹಿತ ಕಾಪಾಡಬೇಕಾಗಿದೆ. ನಾವು ಆಡಳಿತ ಪಪಕ್ಷದವರಾಗಲಿ, ರಾಜ್ಯದ ಹಿತ ಕಾಪಾಡುವುದು ಎಲ್ಲರ ಜವಾಬ್ದಾರಿ. ಹಾಗಾಗಿಯೇ ರಾಜಕೀಯ ಮಾಡಿಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಇದನ್ನೂ ಓದಿ: 146 ಪ್ರಯತ್ನಗಳ ಪೈಕಿ 69 ಚಂದ್ರಯಾನಗಳು ಯಶಸ್ವಿ – ಸಾವಿರಾರು ಕೋಟಿ ಖರ್ಚು ಮಾಡುವ ಯೋಜನೆಯ ಪ್ರಮುಖ ಉದ್ದೇಶವೇನು?

    ಸಭೆಯ ಪ್ರಾರಂಭದಲ್ಲಿ ಮಾತನಾಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನೀರಾವರಿ ವಿಷಯದಲ್ಲಿ ರಾಜ್ಯದ ಹಿತರಕ್ಷಣೆಯಲ್ಲಿ ಯಾವುದೇ ರಾಜಿ ಇಲ್ಲ ಎಂದು ಸ್ಪಷ್ಟಪಡಿಸಿ, ಸರ್ಕಾರದ ಕಾನೂನು ಹೋರಾಟ ಮುಂದುವರೆಯಲಿದ್ದು, ಈ ನಿಟ್ಟಿನಲ್ಲಿ ಎಲ್ಲ ಪಕ್ಷಗಳ ಮುಖಂಡರ ಸಹಕಾರ ಕೋರಿದರು.

    ಕರ್ನಾಟಕ ಮತ್ತು ಕೇರಳದ ಕಾವೇರಿ ಕಣಿವೆಯ ಪ್ರದೇಶದಲ್ಲಿ ನೈಋತ್ಯ ಮಾನ್ಸೂನ್ ವೈಫಲ್ಯದಿಂದಾಗಿ 2023-24ರ ಜಲ ವರ್ಷವು ಸಂಕಷ್ಟದ ವರ್ಷವಾಗಿದೆ. ಕಾವೇರಿ ನೀರು ನಿಯಂತ್ರಣ ಸಮಿತಿಯು ತನ್ನ ಸಭೆಯಲ್ಲಿ ಜೂನ್ ವರೆಗಿನ ಮಳೆಯ ಕೊರತೆಯನ್ನು ಗಮನಿಸಿದೆ. ಆಗಸ್ಟ್ 10 ರಂದು 15,000 ಕ್ಯೂಸೆಕ್ ನೀರು ಬಿಡಲು ಸೂಚಿಸಿತು. ಇದನ್ನು ರಾಜ್ಯ ಬಲವಾಗಿ ವಿರೋಧಿಸಿದ್ದು, ನೀರಿನ ಪ್ರಮಾಣ 10,000 ಕ್ಯೂಸೆಕ್‌ಗೆ ಇಳಿಕೆ ಮಾಡಿದೆ. ಇದರಿಂದ ಅಸಮಾಧಾನಗೊಂಡ ತಮಿಳುನಾಡು ಸುಪ್ರೀಂ ಕೋರ್ಟ್‌ನಲ್ಲಿ ನೀರು ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಿದ್ದು, ಶುಕ್ರವಾರ ಮೂರು ನ್ಯಾಯಾಧೀಶರ ಪೀಠದ ಮುಂದೆ ವಿಚಾರಣೆಗೆ ಬರಲಿದೆ.

    ಸಂಪೂರ್ಣ ಸಹಕಾರ – ಸರ್ವಪಕ್ಷಗಳ ಬೆಂಬಲ:
    ಸಭೆಯಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ, ಡಿವಿ ಸದಾನಂದ ಗೌಡ, ವೀರಪ್ಪ ಮೊಯಿಲಿ, ಜಗದೀಶ್ ಶೆಟ್ಟರ್, ಹೆಚ್‌ಡಿ ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ, ಸಂಸದರಾದ ಸುಮಲತಾ, ಜಗ್ಗೇಶ್, ಡಾ. ಹನುಮಂತಯ್ಯ, ಮುನಿಸ್ವಾಮಿ, ಜಿಎಂ ಸಿದ್ದೇಶ್ವರ, ಜಿಸಿ ಚಂದ್ರಶೇಖರ್, ಶಾಸಕ ದರ್ಶನ್ ಪುಟ್ಟಣ್ಣಯ್ಯ ಮೊದಲಾದವರು ರಾಜ್ಯದ ಕಾನೂನು ಹೋರಾಟಕ್ಕೆ ಬೆಂಬಲ ಸೂಚಿಸಿದರು. ರೈತರ ಹಿತರಕ್ಷಣೆಗೆ ಸರ್ಕಾರದೊಂದಿಗೆ ಇರುವುದಾಗಿ ಬೆಂಬಲ ವ್ಯಕ್ತಪಡಿಸಿದರು. ಹಾಗೂ ಸಂಕಷ್ಟ ಹಂಚಿಕೆ ಸೂತ್ರವನ್ನು ಇನ್ನಷ್ಟು ನಿರ್ದಿಷ್ಟಪಡಿಸುವ ಅಗತ್ಯವಿದೆ ಎಂಬ ಅಭಿಪ್ರಾಯ ವ್ಯಕ್ತವಾಯಿತು.

    ಮಹಾದಾಯಿ ವಿವಾದ:
    ಮಹಾದಾಯಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಕಳಸಾ ಮತ್ತು ಬಂಡೂರಾ ಯೋಜನೆಗೆ ಅರಣ್ಯ ಮತ್ತು ಪರಿಸರ ಇಲಾಖೆಗಳ ತೀರುವಳಿ ಹಾಗೂ ರಾಷ್ಟ್ರೀಯ ವನ್ಯಜೀವಿ ಮಂಡಳಿಯ ತೀರುವಳಿ ಪಡೆಯಲೂ ಸಹ ಅರ್ಜಿ ಸಲ್ಲಿಸಲಾಗಿದೆ. ಆದರೆ ಗೋವಾ ಸರ್ಕಾರ ಈ ಕುರಿತು ಸರ್ವೋಚ್ಛ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದು, ಈ ಕುರಿತು ಹೆಚ್ಚಿನ ಗಮನ ಹರಿಸುವಂತೆ ಸಲಹೆ ನೀಡಿದರು.

    ವಕೀಲರ ತಂಡ ಹಿಂದಿನ ಅನುಭವಗಳನ್ನು ಬಳಸಿ ರಾಜ್ಯದ ಹಿತದೃಷ್ಟಿಯಿಂದ ಸಮರ್ಥವಾಗಿ ವಾದ ಮಂಡಿಸುವ ಕುರಿತು ಸಲಹೆ ನೀಡಿದರು. ಇದನ್ನೂ ಓದಿ: ಚಂದ್ರಯಾನ ಯಶಸ್ಸಿಗಾಗಿ ರುದ್ರಾಭಿಷೇಕ, ಮಹಾಮೃತ್ಯುಂಜಯ ಹೋಮ – ಶ್ರೀಶೈಲ ಜಗದ್ಗುರುಗಳಿಂದಲೂ ಶುಭಹಾರೈಕೆ

    ಸಭೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಬಿಎಸ್ ಯಡಿಯೂರಪ್ಪ, ಹೆಚ್‌ಡಿ ಕುಮಾರಸ್ವಾಮಿ, ಜಗದೀಶ್ ಶೆಟ್ಟರ್, ಡಿವಿ ಸದಾನಂದಗೌಡ, ವೀರಪ್ಪ ಮೊಯಿಲಿ, ಸಚಿವರಾದ ಹೆಚ್‌ಕೆ ಪಾಟೀಲ, ಚಲುವರಾಯಸ್ವಾಮಿ, ಡಾ.ಜಿ ಪರಮೇಶ್ವರ್, ಕೆಜೆ ಜಾರ್ಜ್, ಕೃಷ್ಣ ಬೈರೇಗೌಡ, ನವದೆಹಲಿಯಲ್ಲಿ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಟಿಬಿ ಜಯಚಂದ್ರ, ಎಲ್ಲ ಪಕ್ಷಗಳ ಶಾಸಕರು ಸಂಸದರು, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಜಲ ಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಹಿರಿಯ ವಕೀಲರಾದ ಮೋಹನ್ ಕಾತರಕಿ ಮತ್ತು ಇತರ ಕಾನೂನು ತಜ್ಞರು, ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮೇಕೆನೂ ಇಲ್ಲ, ದಾಟು ಇಲ್ಲ: ಡಿಕೆಶಿ ವಿರುದ್ಧ ಅಶೋಕ್ ಲೇವಡಿ

    ಮೇಕೆನೂ ಇಲ್ಲ, ದಾಟು ಇಲ್ಲ: ಡಿಕೆಶಿ ವಿರುದ್ಧ ಅಶೋಕ್ ಲೇವಡಿ

    ಬೆಂಗಳೂರು: ಮೇಕೆದಾಟು (Makedatu) ಅಂದ್ರು, ಈಗ ಮೇಕೆನೂ ಇಲ್ಲ, ದಾಟು ಇಲ್ಲ. ಅಧಿಕಾರ ಬಂದ ಮೇಲೆ ಕಾವೇರಿನೂ (Kaveri) ಇಲ್ಲ, ಮೇಕೆದಾಟು ಇಲ್ಲ ಎಂದು ಮಾಜಿ ಸಚಿವ ಆರ್. ಅಶೋಕ್ (R Ashok) ಲೇವಡಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಮಾತನಾಡಿದ ಅವರು, ನೀರು ಬಿಟ್ಟು ಕರ್ನಾಟಕದ ರೈತರಿಗೆ ಸರ್ಕಾರ ಅನ್ಯಾಯ ಮಾಡಿದೆ. ಈಗ ನೀರು ಬಿಟ್ಟ ಮೇಲೆ ಕೊನೆಗೂ ಸರ್ವಪಕ್ಷ ಸಭೆ ಕರೆದಿದ್ದಾರೆ. ಸ್ಟಾಲಿನ್ ಜೊತೆಗೆ ಒಳ ಒಪ್ಪಂದ ಇದು ಎಂದು ಆರೋಪಿಸಿದರು. ಇದನ್ನೂ ಓದಿ: ನಟ ಪ್ರಕಾಶ್ ರೈ ವಿರುದ್ಧ ಸಚಿವ ಪರಮೇಶ್ವರ್, ಮಾಜಿ ಸಚಿವ ಅಶೋಕ್ ಗರಂ

    ಇದೇ ವೇಳೆ ಎಸ್‌ಟಿ ಸೋಮಶೇಖರ್ ಜೊತೆ ಸಭೆ ಕರೆದಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಆರ್ ಅಶೋಕ್, ಸೋಮಶೇಖರ್ ಜೊತೆಗೆ ಮೊನ್ನೆಯಿಂದ ಮಾತನಾಡುತ್ತಿದ್ದೇನೆ. ಮಂತ್ರಿಯಾಗಿ ಅಧಿಕಾರ ಅನುಭವಿಸಿದ್ದಾರೆ. ಹೆಬ್ಬಾರ್ ಹಾಗೂ ಸೋಮಶೇಖರ್ ಹೋಗಲ್ಲ ಎಂದು ಹೇಳಿದ್ದಾರೆ. ಯಾರು ಸಹ ಕಾಂಗ್ರೆಸ್‌ಗೆ ಹೋಗಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಡಿಕೆ ಶಿವಕುಮಾರ್ ಲೂಟಿ ಹೊಡೆಯೋದು ಬಿಟ್ಟರೆ ತಮ್ಮನಾಗಿ ಸ್ವೀಕಾರ ಮಾಡ್ತೀನಿ: ಕುಮಾರಸ್ವಾಮಿ ಷರತ್ತು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸ್ಟಾಲಿನ್ ಸ್ನೇಹಕ್ಕೆ ಕರ್ನಾಟಕ ಬಲಿ, ಮಂಡ್ಯ ಜನತೆಗೆ ಕಾಂಗ್ರೆಸ್ ಶಾಪ: ಸಿಟಿ ರವಿ ಕಿಡಿ

    ಸ್ಟಾಲಿನ್ ಸ್ನೇಹಕ್ಕೆ ಕರ್ನಾಟಕ ಬಲಿ, ಮಂಡ್ಯ ಜನತೆಗೆ ಕಾಂಗ್ರೆಸ್ ಶಾಪ: ಸಿಟಿ ರವಿ ಕಿಡಿ

    – ಚುನಾವಣೆಗೂ ಮುನ್ನ ನೀರಿಗಾಗಿ ಪಾದಯಾತ್ರೆ ಮಾಡಿದ್ದರು
    – ಮಗು ಅಳುವುದಕ್ಕೂ ಮೊದಲೇ ಹಾಲು ಕೊಡ್ತಿದ್ದಾರೆ

    ಮಂಡ್ಯ: ಕರ್ನಾಟಕ ಕಾಂಗ್ರೆಸ್ (Karnataka Congress) ಐಎನ್‌ಡಿಐಎ (INDIA) ಮೈತ್ರಿಗಾಗಿ ನೀರು ಬಿಟ್ಟಿದೆ. ಸ್ಟಾಲಿನ್ ಸ್ನೇಹಕ್ಕೆ (MK Stalin) ಕರ್ನಾಟಕ ಬಲಿಯಾಗುತ್ತಿದೆ. ಕಾಂಗ್ರೆಸ್ ಮಂಡ್ಯ (Mandya) ಜನರಿಗೆ ಶಾಪವಾಗುತ್ತಿದ್ದು, ತಮಿಳುನಾಡಿಗೆ (Tamil Nadu) ವರವಾಗುತ್ತಿದೆ. ನಿಮ್ಮ ಲಾಭಕ್ಕೆ ರಾಜ್ಯದ ಜನತೆಗೆ ನೀವು ಶಾಪ ಆಗಿದ್ದೀರಿ ಎಂದು ಮಾಜಿ ಸಚಿವ ಸಿಟಿ ರವಿ (CT Rvai) ಕಿಡಿಕಾರಿದ್ದಾರೆ.

    ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಕೆಆರ್‌ಎಸ್ ಡ್ಯಾಂನಿಂದ (KRS Dam) ತಮಿಳುನಾಡಿಗೆ ನೀರು ಹರಿಸುತ್ತಿರುವ ವಿಚಾರವಾಗಿ ಮಾತನಾಡಿದ ಅವರು, ಕಾವೇರಿ (Kaveri River) ಕರ್ನಾಟಕದ ಸ್ವಾಭಿಮಾನದ ಪ್ರತೀಕ ಮಾತ್ರವಲ್ಲ ಜೀವನಾಡಿ. ಮಂಡ್ಯ, ಮೈಸೂರು ಭಾಗದ ರೈತರ ಬದುಕನ್ನು ಹಸನು ಮಾಡಿದೆ. ಕಾವೇರಿ ಇಲ್ಲದೇ ಬೆಂಗಳೂರು ಉಳಿಯೋಕು ಆಗಲ್ಲ ಎಂದಿದ್ದಾರೆ.

    ಕಾವೇರಿ ವಿವಾದ ಇವತ್ತು ನಿನ್ನೆಯದಲ್ಲ. ಅದಕ್ಕೆ ಶತಮಾನದ ಇತಿಹಾಸ ಇದೆ. ಚುನಾವಣೆಗೂ ಮುನ್ನ ಕಾಂಗ್ರೆಸ್ ಮುಖಂಡರು, ಡಿಕೆಶಿ ಸೇರಿ ಎಲ್ಲರೂ ಪಾದಯಾತ್ರೆ ಮಾಡಿದ್ರು. ನಮ್ಮ ನೀರು, ನಮ್ಮ ಹಕ್ಕು ಅಂತ ಪಾದಯಾತ್ರೆ ಮಾಡಿದ್ರು. ರೈತರು ಎಂದರೆ ಎಲ್ಲರೂ ಒಂದೇ. ಕರ್ನಾಟಕ-ತಮಿಳುನಾಡು ಎನ್ನುವ ಬೇಧಭಾವ ಇಲ್ಲ. ಆದರೆ ಸಂಕಷ್ಟ ಇದ್ದಾಗ ಸೂತ್ರದ ಅನುಗುಣವಾಗಿ ನೀರಿನ ವಿಚಾರದಲ್ಲಿ ವ್ಯವಹಾರ ಮಾಡಬೇಕು. ಈಗ ಮಳೆ ಇಲ್ಲ, ಸಂಕಷ್ಟ ಇದೆ. ಇಂತಹ ಪರಿಸ್ಥಿತಿಯಲ್ಲಿ ತಮಿಳುನಾಡು ಅಳುವುದಕ್ಕೂ ಮೊದಲೇ ನೀರು ಕೊಟ್ಟಿದ್ದೀರಿ. ಮಕ್ಕಳು ಅತ್ತಾಗ ಮಾತ್ರ ತಾಯಿ ಹಾಲು ಕೊಡೋದು. ಆದರೆ ತಮಿಳುನಾಡು ಕೇಳೋದಕ್ಕೂ ಮೊದಲೇ ನೀರು ಬಿಟ್ಟಿದ್ದೀರಿ ಎಂದು ವಾಗ್ದಾಳಿ ನಡೆಸಿದರು.

    ಸರ್ಕಾರ ಐಎನ್‌ಡಿಐಎ ಮೈತ್ರಿಗೋಸ್ಕರ ನೀರು ಬಿಡುತ್ತಿದೆ. ಸ್ಟಾಲಿನ್ ಸ್ನೇಹಕ್ಕೆ ಕರ್ನಾಟಕ ಬಲಿಯಾಗುತ್ತಿದೆ. ಕಾಂಗ್ರೆಸ್ ಮಂಡ್ಯ ಜನರಿಗೆ ಶಾಪವಾಗಿದ್ದು ತಮಿಳುನಾಡಿಗೆ ವರವಾಗುತ್ತಿದೆ. ನಿಮ್ಮ ಲಾಭಕ್ಕೆ ರಾಜ್ಯದ ಜನತೆಗೆ ನೀವು ಶಾಪ ಆಗಿದ್ದೀರಿ. ಸಂಕಷ್ಟದ ಸೂತ್ರ ಮರೆತು ನೀರು ಬಿಟ್ಟಿದ್ದೀರಿ. ಸಂಕಷ್ಟದ ಸೂತ್ರ ಬದಿಗೊತ್ತಿ ರಾಜಕೀಯ ಮಾಡುತ್ತಿದ್ದೀರಿ. ನಾಳೆ ಸರ್ವಪಕ್ಷಗಳ ಸಭೆ ಮಾಡುತ್ತಿದ್ದೀರಿ. ನಿಮ್ಮ ಪಾಪಕ್ಕೆ ಸೀಲ್ ಹಾಕಿಸಿಕೊಳ್ಳಲು. ಹೇಗೂ ಒಂದಷ್ಟು ಜನ ಹೊಗಳು ಭಟ್ಟರನ್ನು ಇಟ್ಟುಕೊಂಡಿದ್ದೀರಿ. ಅವರ ಬಳಿ ಸೀಲ್ ಹಾಕೊಸಿಕೊಳ್ಳೊಕೆ ಸಭೆ ಮಾಡುತ್ತಿದ್ದೀರಿ. ತಮಿಳುನಾಡಿಗೆ ಮೊದಲೇ ನೀರು ಬಿಟ್ಟು ಈಗ ಸಭೆ ಮಾಡಿದರೆ ಏನು ಪ್ರಯೋಜನ? ನೀರು ಬಿಡುವ ಮೊದಲೇ ಸಭೆ ಮಾಡಬೇಕಿತ್ತು. ಇದು ಕಾಂಗ್ರೆಸ್ ಕರ್ನಾಟಕಕ್ಕೆ ಮಾಡಿರುವ ಅನ್ಯಾಯ ಎಂದರು. ಇದನ್ನೂ ಓದಿ: ಆಪರೇಷನ್ ಹಸ್ತ ಬೆನ್ನಲ್ಲೇ ಯಶವಂತಪುರ ಕ್ಷೇತ್ರಕ್ಕೆ ಬಂಪರ್

    ರಾಜ್ಯದಲ್ಲಿ ಉತ್ತಮ ಮಳೆ ಆಗಿದ್ದರೆ ನೀರು ಬಿಡಿ. ಆದರೆ ಬರಗಾಲದಲ್ಲೂ ನೀರು ಬಿಡುವ ಅವಶ್ಯಕತೆ ಏನಿತ್ತು? ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೀರಿ. ಶಕ್ತಿ ಯೋಜನೆ, ಗೃಹಜ್ಯೋತಿಗಳನ್ನು ತಂದಿದ್ದೀರಿ. ವಾಸ್ತವವಾಗಿ ರಾಜ್ಯದಲ್ಲಿ ವಿದ್ಯುತ್ ಪೂರೈಕೆ ಆಗುತ್ತಿಲ್ಲ. ಕಾಂಗ್ರೆಸ್ ಸರ್ಕಾರ ಬಂದಮೇಲೆ ರಾಜ್ಯ ಕತ್ತಲಲ್ಲಿ ಮುಳುಗಿದೆ. ರಾಜ್ಯಕ್ಕೆ 15-16 ಸಾವಿರ ಮೆಗಾ ವ್ಯಾಟ್ ಪವರ್ ಬೇಕು. ಆದರೆ ಇಲ್ಲಿ ಉತ್ಪಾದನೆಯೇ ಆಗುತ್ತಿಲ್ಲ. ಕೇವಲ 8-9 ಸಾವಿರ ಮೆಗಾವ್ಯಾಟ್ ಉತ್ಪಾದನೆ ಆಗುತ್ತಿದೆ. ರಾಜ್ಯ ಕತ್ತಲಲ್ಲಿ ಮುಳುಗಿದೆ. ಆದರೆ ಉಚಿತ ಕರೆಂಟ್ ಹಾಸ್ಯಾಸ್ಪದ. ಮೊದಲು ಉತ್ಪಾದನೆ ಮಾಡಿ, ಬಳಿಕ ಉಚಿತ ವಿದ್ಯುತ್ ಕೊಡಿ ಎಂದು ಹೇಳಿದರು.

    ಕಾಂಗ್ರೆಸ್ ಕಾಲ್ಗುಣ ರಾಜ್ಯದಲ್ಲಿ ಮಳೆ ಆಗುತ್ತಿಲ್ಲ. ಅದು ಕಾಕತಾಳೀಯವೋ ಅಥವಾ ಪ್ರಕೃತಿಯೋ ಗೊತ್ತಿಲ್ಲ. ಮೊದಲೇ ಇವಕ್ಕೆ ದೇವರ ಮೇಲೆ ನಂಬಿಕೆ ಇಲ್ಲ. ಮತ್ತೆ ದೇವರು ಹೇಗೆ ಮಳೆಬೆಳೆ ಕೊಡ್ತಾನೆ? ಅದು ನಂಬಿಕೆಯೋ ಅಥವಾ ಮೂಢನಂಬಿಕೆಯೋ ಗೊತ್ತಿಲ್ಲ. ದೇವರ ಮೇಲೆ ಭಯಭಕ್ತಿ ಇಲ್ಲದ ಇವರ ಕಾಲ್ಗುಣ ಇದು. ಕಾಂಗ್ರೆಸ್ ಸರ್ಕಾರಕ್ಕೆ ಶ್ವೇತ ಪತ್ರದ ಅವ್ಯಶ್ಯಕತೆ ಇಲ್ಲ. ಜಿಲ್ಲಾಧಿಕಾರಿ ಕಾರಿಗೆ ಡೀಸೆಲ್ ಇಲ್ಲ, ಮಕ್ಕಳಿಗೆ ಮೊಟ್ಟೆ ಇಲ್ಲ. ಕೆಎಸ್‌ಆರ್‌ಟಿಸಿ ಸಿಬ್ಬಂದಿಗೆ ಸಂಬಳವೇ ಇಲ್ಲ. ಇನ್ನೂ ಎಣ್ಣೆ ರೇಟ್ ಹೇಗಿದೆ ಅಂತ ಕುಡಿಯುವವರಿಗೆ ಗೊತ್ತು, ನನಗೆ ಗೊತ್ತಿಲ್ಲ. ಮಧ್ಯಮವರ್ಗದವರಿಗೆ ಈ ಸರ್ಕಾರ ಬರೆ ಮೇಲೆ ಬರೆ ಹಾಕ್ತಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ:  ಮಹಿಳಾ ಪ್ರಯಾಣಿಕರಿಂದ ಕೆಕೆಆರ್‌ಟಿಸಿ ಆದಾಯ ಭಾರೀ ಏರಿಕೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]