Tag: ಕಾವೇರಿ ನದಿ

  • ರಾಜ್ಯ ಸರ್ಕಾರ ಕರ್ನಾಟಕದ ಜನತೆಯನ್ನ ಬಲಿ ಕೊಡ್ತಿದೆ – ಶೋಭಾ ಕರಂದ್ಲಾಜೆ ಆಕ್ರೋಶ

    ರಾಜ್ಯ ಸರ್ಕಾರ ಕರ್ನಾಟಕದ ಜನತೆಯನ್ನ ಬಲಿ ಕೊಡ್ತಿದೆ – ಶೋಭಾ ಕರಂದ್ಲಾಜೆ ಆಕ್ರೋಶ

    – ತಮಿಳುನಾಡಿಗೆ ನೀರು ಹರಿಸೋದಕ್ಕೆ ಕೇಂದ್ರ ಸಚಿವೆ ವಿರೋಧ

    ಚಿಕ್ಕಮಗಳೂರು: ರಾಜ್ಯ ಸರ್ಕಾರ (Government Of Karnataka) ತನ್ನೊಳಗಿನ ಗೊಂದಲಗಳಿಂದಾಗಿ ರಾಜ್ಯದ ಜನರನ್ನ ಬಲಿ ಕೊಡುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಆಕ್ರೋಶ ಹೊರಹಾಕಿದ್ದಾರೆ.

    ಚಿಕ್ಕಮಗಳೂರಿನಲ್ಲಿಂದು (Chikkamagaluru) ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ತಮಿಳುನಾಡಿಗೆ ನೀರು ಬಿಡುವ ವಿಚಾರಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಡ್ಯಾಂನಲ್ಲಿ ತುಂಬಿ ಹಿಡಿದಿಟ್ಟುಕೊಳ್ಳಲು ಆಗದೇ ಇದ್ದಾಗ ತಮಿಳುನಾಡಿಗೆ ನೀರು ಬಿಟ್ಟಿದ್ವಿ: ಹೆಚ್‍ಡಿಕೆ

    ದೇಶದಲ್ಲಿ ಇದ್ದಾರೆಂಬ ಕಾರಣಕ್ಕೆ ಒತ್ತಡದಿಂದ ನೀರು ಬಿಟ್ಟಿದ್ದಾರೆ. ಆದ್ರೆ ರಾಜ್ಯದಲ್ಲಿ ಮಳೆ ಕಡಿಮೆ ಇದ್ದು, ಬಹಳ ಜಿಲ್ಲೆಗಳಲ್ಲಿ ಬರದ ವಾತಾವರಣವಿದೆ. ತಮಿಳುನಾಡು ಸರ್ಕಾರ ಹಾಗೂ ವ್ಯವಸ್ಥೆಗೆ ಈ ಬಗ್ಗೆ ಮನವರಿಕೆ ಮಾಡಬೇಕಿತ್ತು. ನಮ್ಮ ರೈತರು, ಬೆಂಗಳೂರಿನ ಜನಕ್ಕೆ ಕುಡಿಯೋಕು ನೀರಿಲ್ಲದಂತಹ ಸ್ಥಿತಿ ನಿರ್ಮಾಣವಾಗುತ್ತೆ. ಈಗಾಗಲೇ ಬೆಂಗಳೂರು ನಗರಕ್ಕೆ (Bengaluru City) ಅಗತ್ಯಕ್ಕೆ ತಕ್ಕಷ್ಟು ನೀರು ಬಿಡುತ್ತಿಲ್ಲ. ಸರಿಯಾಗಿ ವಿದ್ಯುತ್ ಇಲ್ಲ, ನೀರಿಲ್ಲ, ಮಳೆ ಇಲ್ಲ ಎಲ್ಲಾ ಕಾರಣದಿಂದ ಸಮಸ್ಯೆ ಎದುರಿಸುತ್ತಿದ್ದಾರೆ. ಬೆಂಗಳೂರು, ಮೈಸೂರು, ಮಂಡ್ಯ (Mandya) ಜನರಿಗೆ ಕುಡಿಯುವ ನೀರಿಗೂ ತತ್ವಾರ ಸ್ಥಿತಿ ನಿರ್ಮಾಣವಾಗಿದೆ. ಸರ್ಕಾರ ಜನರ ಬಗ್ಗೆ ಯೋಚಿಸ್ತಿಲ್ಲ, ಅವರವರ ಒಳ ರಾಜಕೀಯದ ಬಗ್ಗೆ ಯೋಚಿಸ್ತಿದೆ. ಸರ್ಕಾರ ತನ್ನೊಳಗಿನ ಗೊಂದಲಗಳಿಂದಾಗಿ ಕರ್ನಾಟಕದ ಜನರನ್ನ ಬಲಿ ಕೊಡ್ತಿದೆ ಎಂದು ಕಿಡಿ ಕಾರಿದ್ದಾರೆ.

    ದೇಶಕ್ಕೆ ಮೋದಿ ಬೇಕು:
    ಪಕ್ಷ ಬಿಟ್ಟು ಹೋದವರನ್ನ ಮತ್ತೆ ಸೇರಿಸಿಕೊಂಡು ಬಿಜೆಪಿಯನ್ನ ಗಟ್ಟಿ ಮಾಡಬೇಕು. ಮೋದಿಯನ್ನ ಮತ್ತೆ ಪ್ರಧಾನಿ ಮಾಡುವ ನಿಟ್ಟಿನಲ್ಲಿ ಎಲ್ಲರೂ ಶ್ರಮ ವಹಿಸಬೇಕು. ದೇಶಕ್ಕೆ ಮೋದಿ ಬೇಕಾಗಿದೆ, ವಿಶ್ವಕ್ಕೆ ಮೋದಿ ಬೇಕಾಗಿದೆ. ವಿಶ್ವದ ಹಲವು ದೇಶ ಭಾರತ, ಮೋದಿಯನ್ನ ನೋಡ್ತಿವೆ. ಭಾರತವನ್ನು ಮತ್ತಷ್ಟು ಗಟ್ಟಿ ಮಾಡಲು ಎಲ್ಲರ ಸಹಕಾರ ಬೇಕು ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: KRSನಿಂದ ತಮಿಳುನಾಡಿಗೆ ಗುರುವಾರವೂ ಭಾರೀ ಪ್ರಮಾಣದ ನೀರು – ಇಂದು ರೈತಸಂಘ ಪ್ರತಿಭಟನೆ

    ಬಿಜೆಪಿ (BJP) ಸರ್ಕಾರ ರಚನೆ ಮಾಡಲು ಶಾಸಕರು, ಮುಖಂಡರು ಬಿಜೆಪಿ ಸೇರಿದ್ದರು. ಅವರಿಗೆ ಬಿಜೆಪಿ ಅತ್ಯಂತ ಗೌರವದಿಂದ ನಡೆದುಕೊಂಡಿದೆ. ನಮ್ಮ ಸರ್ಕಾರದ ಅವಧಿಯಲ್ಲಿ ಅವರಿಗೆ ದೊಡ್ಡ ಖಾತೆಗಳನ್ನೇ ಕೊಟ್ಟಿದೆ. ಅವರನ್ನ ದೊಡ್ಡ-ದೊಡ್ಡ ಜಿಲ್ಲೆಗೆ ಉಸ್ತುವಾರಿ ಸಚಿವರನ್ನಾಗಿ ಮಾಡಿದೆ. ಪಕ್ಷದ ಎಲ್ಲಾ ಚಟುವಟಿಕೆಯಲ್ಲಿ ಅವರನ್ನ ತೊಡಗಿಸಿಕೊಳ್ಳಲಾಗಿತ್ತು. ಇವತ್ತು ಸರ್ಕಾರ ಇಲ್ಲ, ಬಿಜೆಪಿ ಸೋತಿದೆ. ಆ ಸೋಲಿನಲ್ಲೂ ಎಲ್ಲರ ಪಾಲು ಇದೆ. ಮತ್ತೆ ಬಿಜೆಪಿಯನ್ನ ಕಟ್ಟಬೇಕು ಅನ್ನೋದು ನಮ್ಮ ಅಪೇಕ್ಷೆ. ಅಂದು ನಮ್ಮ ಪಕ್ಷದ ತತ್ವ-ಸಿದ್ಧಾಂತಗಳನ್ನ ಒಪ್ಪಿಕೊಂಡು ಪಕ್ಷ ಸೇರಿದ್ದರು. ಅವರು ಖಂಡಿತವಾಗಿಯೂ ಪಕ್ಷದಲ್ಲೇ ಇರ್ತಾರೆ ಅನ್ನೋ ವಿಶ್ವಾಸವಿದೆ. ಅಧಿಕಾರಕ್ಕಾಗಿ ಬಂದ್ರು, ಅಧಿಕಾರ ಇಲ್ಲದಾಗ ಹೋದ್ರು ಎಂಬ ಕೆಟ್ಟ ಹೆಸರನ್ನ ಯಾರೂ ತೆಗೆದುಕೊಳ್ಳಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಇದೇ ವೇಳೆ ಜಗದೀಶ್ ಶೆಟ್ಟರ್, ಲಕ್ಷ್ಮಣ್ ಸವದಿಗೆ ಪರೋಕ್ಷವಾಗಿ ಆಹ್ವಾನ ಕೊಟ್ಟ ಸಚಿವೆ, ಮೋದಿಗಾಗಿ ಪಕ್ಷ ಬಿಟ್ಟು ಹೋದವರಿಗೂ ಆಹ್ವಾನವಿದೆ. ಪಕ್ಷ ಬಿಟ್ಟೋದವರ ಜೊತೆ ಸದ್ಯಕ್ಕೆ ಯಾವುದೇ ಮಾತುಕತೆ ನಡೆದಿಲ್ಲ. ಮೋದಿಯಂತ ನಾಯಕ ಈ ದೇಶಕ್ಕೆ ಮತ್ತೆ ಸಿಗಲ್ಲ. ದೇಶದ ಇಂದಿನ ರಾಜಕೀಯ ಪರಿಸ್ಥಿತಿಯಲ್ಲಿ ಮೋದಿಯಂತಹ ನಾಯಕ ಯಾವ ಪಕ್ಷದಲ್ಲೂ ಸಿಗೋದಿಲ್ಲ. ಇಡೀ ವಿಶ್ವವೇ ಅವರನ್ನ ಒಪ್ಪುತ್ತಿದೆ. ಅವರನ್ನ ಪಿಎಂ ಮಾಡಬೇಕು ಅದಕ್ಕಾಗಿ ಯಾರೇ ಪಾರ್ಟಿ ಬಿಟ್ಟಿದರೂ ವಾಪಸ್ ಬರಲು ವಿನಂತಿ. ಮೋದಿಗಾಗಿ, ದೇಶಕ್ಕಾಗಿ, ಮುಂದಿನ ಪೀಳಿಗೆಗಾಗಿ ಬರಬೇಕಿದೆ. ಪಕ್ಷಕ್ಕೆ ವಾಪಸ್ ಬನ್ನಿ. ವಿಶ್ವದ ಶಾಂತಿಗಾಗಿ ನಾವೆಲ್ಲರೂ ಒಗ್ಗೂಡಿ ಕೆಲಸ ಮಾಡೋಣ ಬಿಜೆಪಿಯನ್ನು ದೇಶದಲ್ಲಿ ಇನ್ನಷ್ಟು ಬಲಿಷ್ಠಗೊಳಿಸೋಣ ಎಂದು ಕರೆ ನೀಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • KRSನಿಂದ ತಮಿಳುನಾಡಿಗೆ ಗುರುವಾರವೂ ಭಾರೀ ಪ್ರಮಾಣದ ನೀರು – ಇಂದು ರೈತಸಂಘ ಪ್ರತಿಭಟನೆ

    KRSನಿಂದ ತಮಿಳುನಾಡಿಗೆ ಗುರುವಾರವೂ ಭಾರೀ ಪ್ರಮಾಣದ ನೀರು – ಇಂದು ರೈತಸಂಘ ಪ್ರತಿಭಟನೆ

    ಮಂಡ್ಯ: ಕೆಆರ್‌ಎಸ್ ಡ್ಯಾಂನಿಂದ (KRS Dam) ತಮಿಳುನಾಡಿಗೆ ಬಿಡುಗಡೆಯಾಗುವ ನೀರಿನ ಪ್ರಮಾಣ ದಿನೇ ದಿನೇ ಹೆಚ್ಚಿಸಲಾಗುತ್ತಿದೆ. ಸುಪ್ರೀಂ ಕೋರ್ಟ್ ಆದೇಶಕ್ಕೂ ಮುನ್ನವೇ ಕಾವೇರಿ ನೀರಾವರಿ ನಿಗಮದ (Cauvery Irrigation Corporation) ಅಧಿಕಾರಿಗಳು ತಮಿಳುನಾಡಿಗೆ ಹೆಚ್ಚಿನ ಪ್ರಮಾಣದ ನೀರು ಹರಿಸುತ್ತಿದ್ದಾರೆ.

    ಕೆಆರ್‌ಎಸ್ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾದ ಹಿನ್ನೆಲೆಯಲ್ಲಿ ತಮಿಳುನಾಡಿಗೆ ಹೆಚ್ಚಿನ ಪ್ರಮಾಣದ ನೀರು ಬಿಡುಗಡೆ ಮಾಡಲಾಗುತ್ತಿದೆ. ಬುಧವಾರ ಕೆಆರ್‌ಎಸ್‌ನಿಂದ 9,136 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ (TamilNadu) ಹರಿಸಲಾಗಿತ್ತು, ಗುರುವಾರ (ಆ.17) 13,473 ಕ್ಯೂಸೆಕ್‌ ಹರಿಸಲಾಗುತ್ತಿದೆ. ಒಂದೇ ದಿನಕ್ಕೆ 4,337 ಕ್ಯೂಸೆಕ್ ನೀರು ಹೆಚ್ಚುವರಿ ಹರಿಸಲಾಗಿದೆ. ಇದನ್ನೂ ಓದಿ: KRSನಿಂದ ತಮಿಳುನಾಡಿಗೆ ಹೆಚ್ಚಿನ ನೀರು ಬಿಡುಗಡೆ

    ಭಾನುವಾರ ಕೆಆರ್‌ಎಸ್ ಡ್ಯಾಂನಿಂದ ತಮಿಳುನಾಡಿಗೆ 5,238 ಕ್ಯೂಸೆಕ್ ನೀರು ಬಿಡುಗಡೆಯಾದರೆ, ಸೋಮವಾರ 5,243 ಕ್ಯೂಸೆಕ್ ನೀರು ಬಿಡುಗಡೆಯಾಗಿದೆ. ಮಂಗಳವಾರ 8,590 ಕ್ಯೂಸೆಕ್ ನೀರು, ಬುಧವಾರ ಕೆಆರ್‌ಎಸ್ ಡ್ಯಾಂನಿಂದ ತಮಿಳುನಾಡಿಗೆ 9,136 ಕ್ಯೂಸೆಕ್ ನೀರು ಬಿಡುಗಡೆಯಾಗಿತ್ತು . ಗುರುವಾರವಾದ ಇಂದು 13,473 ಕ್ಯೂಸೆಕ್‌ ನೀರು ಹರಿಸಲಾಗುತ್ತಿದೆ. ಇದನ್ನೂ ಓದಿ: ಸಿನಿಮೀಯ ಸ್ಟೈಲ್‌ನಲ್ಲಿ ದೇವಸ್ಥಾನದಲ್ಲಿ ಜೆಡಿಎಸ್‌ ಮುಖಂಡನ ಹತ್ಯೆಗೆ ಯತ್ನ – ಕೊಲೆಗೆ ಸ್ನೇಹಿತನಿಂದಲೇ ಸ್ಕೆಚ್‌

    ಕೆಆರ್‌ಎಸ್‌ನಿಂದ ರಾಜ್ಯಕ್ಕೆ ನೀರು ಬಿಡುಗಡೆಗಾಗಿ ತಮಿಳುನಾಡು ಸುಪ್ರೀಂ ಕೋರ್ಟ್ ಮೊರೆ ಹೋಗಿದೆ. ಆದರೆ ಸುಪ್ರೀಂ ಕೋರ್ಟ್ ಆದೇಶಕ್ಕೂ ಮುನ್ನವೇ ಕೆಆರ್‌ಎಸ್ ಡ್ಯಾಂನಿಂದ ತಮಿಳುನಾಡಿಗೆ ದಿನೇ ದಿನೇ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಲಾಗುತ್ತಿದೆ. ತಮಿಳುನಾಡಿಗೆ ಹೆಚ್ಚಿನ ನೀರು ಹರಿಸುತ್ತಿರುವ ಹಿನ್ನೆಲೆಯಲ್ಲಿ ಗುರುವಾರ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳ ನಿರ್ಧಾರದ ವಿರುದ್ಧ ರೈತ ಸಂಘ ಪ್ರತಿಭಟನೆಗೆ ಮುಂದಾಗಿದೆ. ಕೆಆರ್‌ಎಸ್ ಮುಖ್ಯದ್ವಾರದ ಬಳಿಯೇ ಪ್ರತಿಭಟನೆ ಹಮ್ಮಿಕೊಂಡಿದ್ದು, ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಟಿಕ್‌ಟಾಕ್ ಸುಂದರಿಗೆ ಕಂಟಕವಾಯ್ತು ಮೊಬೈಲ್ ಗೀಳು – ಪ್ರೀತಿಸಿ ಮದ್ವೆಯಾಗಿದ್ದ ಮಡದಿಯನ್ನೇ ಕೊಂದ ಪತಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸುಪ್ರೀಂ ಕೋರ್ಟ್ ಆದೇಶಕ್ಕೂ ಮುನ್ನ ಕೆಆರ್‌ಎಸ್‌ನಿಂದ ತಮಿಳುನಾಡಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು

    ಸುಪ್ರೀಂ ಕೋರ್ಟ್ ಆದೇಶಕ್ಕೂ ಮುನ್ನ ಕೆಆರ್‌ಎಸ್‌ನಿಂದ ತಮಿಳುನಾಡಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು

    ಮಂಡ್ಯ: ಕೆಆರ್‌ಎಸ್ ಡ್ಯಾಂನಿಂದ (KRS Dam) ತಮಿಳುನಾಡಿಗೆ (Tamil Nadu) ಬಿಡುಗಡೆಯಾಗುವ ನೀರಿನ ಪ್ರಮಾಣ ದಿನೇ ದಿನೇ ಹೆಚ್ಚಿಸಲಾಗುತ್ತಿದೆ. ಸುಪ್ರೀಂ ಕೋರ್ಟ್ (Supreme Court) ಆದೇಶಕ್ಕೂ ಮುನ್ನ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ತಮಿಳುನಾಡಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡುತ್ತಿದ್ದಾರೆ.

    ಭಾನುವಾರ ಕೆಆರ್‌ಎಸ್ ಡ್ಯಾಂನಿಂದ ತಮಿಳುನಾಡಿಗೆ 5,238 ಕ್ಯೂಸೆಕ್ ನೀರು ಬಿಡುಗಡೆಯಾದರೆ, ಸೋಮವಾರ 5,243 ಕ್ಯೂಸೆಕ್ ನೀರು ಬಿಡುಗಡೆಯಾಗಿದೆ. ಮಂಗಳವಾರ 8,590 ಕ್ಯೂಸೆಕ್ ನೀರು ಹಾಗೂ ಇಂದು ಕೆಆರ್‌ಎಸ್ ಡ್ಯಾಂನಿಂದ ತಮಿಳುನಾಡಿಗೆ 9,136 ಕ್ಯೂಸೆಕ್ ನೀರು ಬಿಡುಗಡೆಯಾಗುತ್ತಿದೆ.

    ಕೆಆರ್‌ಎಸ್‌ನಿಂದ ರಾಜ್ಯಕ್ಕೆ ನೀರು ಬಿಡುಗಡೆಗಾಗಿ ತಮಿಳುನಾಡು ಸುಪ್ರೀಂ ಕೋರ್ಟ್ ಮೊರೆ ಹೋಗಿದೆ. ಆದರೆ ಸುಪ್ರೀಂ ಕೋರ್ಟ್ ಆದೇಶಕ್ಕೂ ಮುನ್ನವೇ ಕೆಆರ್‌ಎಸ್ ಡ್ಯಾಂನಿಂದ ತಮಿಳುನಾಡಿಗೆ ದಿನೇ ದಿನೇ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಲಾಗುತ್ತಿದೆ. ಇದನ್ನೂ ಓದಿ: ಸಚಿವ ಸಂಪುಟದ ದೋಸ್ತಿಗಳ ನಡುವೆ ಮಹಾ ಬಿರುಕಿದೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಮಾಜಿ ಶಾಸಕ

    ಕೆಆರ್‌ಎಸ್ ಡ್ಯಾಂನ ಇಂದಿನ ನೀರಿನ ಮಟ್ಟ:
    ಗರಿಷ್ಠ ಮಟ್ಟ – 124.80 ಅಡಿ
    ಇಂದಿನ ಮಟ್ಟ – 111.08 ಅಡಿ
    ಗರಿಷ್ಠ ಸಾಂದ್ರತೆ – 49.452 ಟಿಎಂಸಿ
    ಇAದಿನ ಸಾಂದ್ರತೆ – 32.820 ಟಿಎಂಸಿ
    ಒಳಹರಿವು – 3,078 ಕ್ಯೂಸೆಕ್
    ಹೊರಹರಿವು – 11,602 ಕ್ಯೂಸೆಕ್ ಇದನ್ನೂ ಓದಿ: ಸೇತುವೆ ನಿರ್ಮಿಸಿಕೊಡಿ ಪ್ಲೀಸ್: ಪ್ರಧಾನಿ ಮೋದಿಗೆ ಮಕ್ಕಳ ಪತ್ರ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ತಮಿಳುನಾಡಿಗೆ ನೀರು ಬಿಡಲು ಸಾಧ್ಯವೇ ಇಲ್ಲ: ಸಚಿವ ಭೋಸರಾಜ್

    ತಮಿಳುನಾಡಿಗೆ ನೀರು ಬಿಡಲು ಸಾಧ್ಯವೇ ಇಲ್ಲ: ಸಚಿವ ಭೋಸರಾಜ್

    ಮಡಿಕೇರಿ: ಸದ್ಯದ ಪರಿಸ್ಥಿತಿಯಲ್ಲಿ ಕಾವೇರಿ ನೀರನ್ನು (Cauvery River Water) ತಮಿಳುನಾಡಿಗೆ (Tamil Nadu) ಬಿಡಲು ಸಾಧ್ಯವೇ ಇಲ್ಲ ಎಂದು ಸಣ್ಣ ನೀರಾವರಿ ಮತ್ತು ಕೊಡಗು ಉಸ್ತುವಾರಿ ಸಚಿವ ಭೋಸರಾಜ್ (Boseraju) ಹೇಳಿದ್ದಾರೆ.

    ಮಡಿಕೇರಿಯಲ್ಲಿ (Madikeri) ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ತಮಿಳುನಾಡಿನವರು ನೀರು ಬಿಡುವಂತೆ ಕೋರ್ಟ್‍ಗೆ ಮನವಿ ಮಾಡಿದ್ದಾರೆ. ಆದರೆ ಮೊದಲು ನಮಗೆ ರಾಜ್ಯದ ರೈತರ ಮತ್ತು ಜನರ ಹಿತಾಸಕ್ತಿಯೇ ಮುಖ್ಯ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಸ್ಪಷ್ಟ ಸಂದೇಶ ನೀಡಿದ್ದಾರೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಇನ್ನೆರಡು ದಿನಗಳಲ್ಲಿ ಬಿಬಿಎಂಪಿ ಪೇಪರ್‌ಗಳನ್ನು ಮುಂದೆ ಇಡ್ತೀವಿ: ಹೆಚ್‌ಡಿಕೆ

    ರಾಜ್ಯದ ರೈತರ ಹಿತ ಬಲಿಕೊಡಲು ಸಾಧ್ಯವಿಲ್ಲ, ನೀರು ಬಿಡಬೇಕೋ ಬೇಡವೋ ಎಂಬುದು ಪ್ರಕೃತಿಯ ಮೇಲೆ ಆಧಾರಿತವಾಗಿರುತ್ತದೆ. ಈಗಾಗಲೇ ಕಾವೇರಿ ಜಲಾಶಯದ ಪ್ರದೇಶದಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಅಲ್ಲದೇ ಈಗಾಗಲೇ ಐಸಿಸಿ ಸಭೆ ನಡೆಸಲಾಗಿದೆ. ಸಭೆಯಲ್ಲಿಯೂ ರೈತರಿಗಾಗಿ ನಾಲೆಗಳಿಗೆ ನೀರು ಯಾವಾಗ ಹರಿಸಬೇಕೆಂದು ನಿರ್ಧರಿಸಲಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಬೀಡಲು ಸಾಧ್ಯವಿಲ್ಲ ಎಂದಿದ್ದಾರೆ.

    ಮುಂದುವರೆದು ಭಗವಾನ್ ಕೂಬಾ ಅವರ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕೂಬಾ ಅವರ ನಡೆ ಪಕ್ಷದ ಸಂಸ್ಕೃತಿಯನ್ನು ಬಿಂಬಿಸುತ್ತದೆ. ಮುಖ್ಯಮಂತ್ರಿಯಾಗಲು ಎಷ್ಟು ಕೊಡಬೇಕು, ಮಂತ್ರಿಗಳಾಗಲು ಎಷ್ಟು ಕೊಡಬೇಕು ಎಂದು ಅವರ ಸದಸ್ಯರೇ ಓಪನ್ ಆಗಿ ಮಾತಾಡಿದ್ದಾರೆ. ನಮ್ಮದು ಶಿಸ್ತಿನ ಪಕ್ಷ ಮತ್ತು ದೇಶ ರಕ್ಷಣೆಯ ಪಕ್ಷ ಎಂದು ಹೇಳುತ್ತಾರೆ. ಆದರೆ ಬಿಜೆಪಿ ಅಧಿಕಾರಕ್ಕೆ ಕಚ್ಚಾಡುವ ಪಕ್ಷ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಚಿಕ್ಕಮಗಳೂರು ಹೈವೆಯಲ್ಲಿ ಹಿಟ್ & ರನ್ – 100 ಅಡಿ ದೂರ ಎಳೆದೊಯ್ದ ಕಾರು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಇಂದು ಮಹತ್ವದ ಕಾವೇರಿ ನೀರಾವರಿ ಸಲಹಾ ಸಭೆ

    ಇಂದು ಮಹತ್ವದ ಕಾವೇರಿ ನೀರಾವರಿ ಸಲಹಾ ಸಭೆ

    ಮಂಡ್ಯ: ಈ ಬಾರಿ ಮುಂಗಾರು ನಿರೀಕ್ಷಿತ ಪ್ರಮಾಣದಲ್ಲಿ ಬೀಳದ ಹಿನ್ನೆಲೆ ಹಳೆ ಮೈಸೂರು ಭಾಗದ ಜೀವನಾಡಿ ಕೆಆರ್‌ಎಸ್ ಡ್ಯಾಂ (KRS Dam) ಭರ್ತಿಯಾಗಿಲ್ಲ. ಇದರ ನಡುವೆ ತಮಿಳುನಾಡಿಗೆ (Tamil Nadu) ಡ್ಯಾಂನಿಂದ ನೀರು ಬಿಡಲಾಗುತ್ತಿದೆ. ಇತ್ತ ರೈತರ ಬೆಳೆಗೆ ನೀರು ಬಿಡಬೇಕಾ ಬಿಡಬಾರದಾ ಎಂಬುದರ ಕುರಿತು ಸೋಮವಾರ ಮಹತ್ವದ ಸಭೆ ನಡೆಯಲಿದೆ.

    ರೈತನ ಬದುಕು ಮಾನ್ಸೂನ್‌ನೊಂದಿಗಿನ ಜೂಜಾಟ ಎಂಬ ಮಾತು ಇದೆ. ಈ ಮಾತಿನಂತೆ ಮಂಡ್ಯ ಜಿಲ್ಲೆಯ ರೈತರ ಕೃಷಿಯ ಬದುಕು ಸದ್ಯ ಜೂಜಾಟದ ರೀತಿಯೇ ಇದೆ. ಈ ಬಾರಿ ಮುಂಗಾರು ನಿರೀಕ್ಷಿತ ಪ್ರಮಾಣದಲ್ಲಿ ಬೀಳದ ಕಾರಣ ಹಳೆ ಮೈಸೂರು ಭಾಗದ ಜೀವನಾಡಿ ಎಂದೇ ಕರೆಯಲ್ಪಡುವ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಡ್ಯಾಂ ಒಡಲು ಇನ್ನೂ ಭರ್ತಿಯಾಗಿಲ್ಲ.

    ಕಳೆದ ವರ್ಷ ಇಷ್ಟೋತ್ತಿಗೆ ಉತ್ತಮ ಮಳೆ ಬಿದ್ದು ಕೆಆರ್‌ಎಸ್ ಡ್ಯಾಂ ಭರ್ತಿಯಾಗುವ ಮೂಲಕ ರೈತರ ಮುಖದಲ್ಲಿ ಮಂದಹಾಸ ಮೂಡುವುದರ ಜೊತೆಗೆ ತಮಿಳುನಾಡಿನ ನೀರಿನ ವ್ಯಾಜ್ಯವು ತಲೆದೋರಿರಲಿಲ್ಲ. ಆದರೆ ಈ ಬಾರಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಬೀಳದ ಕಾರಣ ಕೆಆರ್‌ಎಸ್ ಡ್ಯಾಂನಲ್ಲಿ ಸದ್ಯ 35 ಟಿಎಂಸಿ ನೀರು ಮಾತ್ರ ಇದೆ. ಈ ಹೊತ್ತಿನಲ್ಲಿಯೇ ತಮಿಳುನಾಡು ನಮಗೆ ಬಿಡಬೇಕಾದ ನೀರನ್ನು ಬಿಡಿ ಎಂದು ಕೇಂದ್ರದ ಮೊರೆ ಹೋಗಿದೆ. ಈ ಬೆನ್ನಲ್ಲೇ ಕಳೆದ 3 ದಿನಗಳಿಂದ ತಮಿಳುನಾಡಿಗೆ ನಿತ್ಯ 5 ಸಾವಿರಕ್ಕೂ ಅಧಿಕ ಟಿಎಂಸಿ ನೀರು ಹೋಗ್ತಾ ಇದೆ. ಇತ್ತ ನಾಲೆಗಳಿಗೆ ಬಿಟ್ಟಿದ್ದ ನೀರನ್ನು ನಿಲ್ಲಿಸಲಾಗಿದೆ. ಹೀಗಾಗಿ ಮಂಡ್ಯದ ರೈತರು ಆಕ್ರೋಶಿತರಾಗಿದ್ದು, ಬೆಳೆಗಳಿಗೆ ನೀರಿಗಾಗಿ ಆಗ್ರಹ ಮಾಡುತ್ತಾ ಇದ್ದಾರೆ.

    ಮಂಡ್ಯದ (Mandya) ರೈತರ ಎಚ್ಚರಿಕೆಯ ಬೆನ್ನಲ್ಲೇ ಸರ್ಕಾರ ಇದೀಗ ಅಲರ್ಟ್ ಆದ ಹಾಗೆ ಕಾಣುತ್ತಿದೆ. ಇಂದು ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಕೆಆರ್‌ಎಸ್‌ನಲ್ಲಿ ಮಹತ್ವದ ಸಭೆಯೊಂದು ನಡೆಯಲಿದೆ. ಸಭೆಯಲ್ಲಿ ಶಾಸಕರು, ಜಿಲ್ಲಾಧಿಕಾರಿ, ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು, ಇತರ ಅಧಿಕಾರಿಗಳು ಹಾಗೂ ರೈತ ಮುಖಂಡರೊಂದಿಗೆ ನೀರಾವರಿ ಸಲಹಾ ಸಭೆ ನಡೆಯಲಿದೆ. ಈ ಸಭೆಯಲ್ಲಿ ರೈತರ ಬೆಳೆಗಳಿಗೆ ನೀರನ್ನು ಬಿಡಬೇಕಾ ಇಲ್ಲವಾ ಎಂಬುದರ ಬಗ್ಗೆ ಚರ್ಚೆ ಮಾಡಲಾಗುತ್ತದೆ. ಇದನ್ನೂ ಓದಿ: ಟೊಮೆಟೋ ಬೆಲೆಯಲ್ಲಿ ಕೊಂಚ ಇಳಿಕೆ- ನಿಟ್ಟುಸಿರು ಬಿಟ್ಟ ಗ್ರಾಹಕರು

    ಒಂದು ವೇಳೆ ಬೆಳೆಗಳಿಗೆ ನೀರು ಕೊಟ್ಟರೆ ಎಷ್ಟು ಹಂತದಲ್ಲಿ ಎಷ್ಟು ಪ್ರಮಾಣದ ನೀರನ್ನು ಬಿಡಬೇಕು ಎಂಬುದನ್ನು ಚರ್ಚೆ ಮಾಡಲಾಗುತ್ತದೆ. ಸದ್ಯ ತಮಿಳುನಾಡಿಗೆ ಸಂದಿಗ್ಧ ಪರಿಸ್ಥಿತಿಯಲ್ಲಿ ಸಂಕಷ್ಟದ ಸೂತ್ರದ ಅಡಿ ತಮಿಳುನಾಡಿಗೆ ನೀರು ಬಿಡಬೇಕಾಗಿರುವುದು ಅನಿವಾರ್ಯ. ಅಲ್ಲದೇ ಈ ತಿಂಗಳು ಮಳೆ ಬೀಳದೆ ಇದ್ದರೆ ಕುಡಿಯುವ ನೀರನ್ನು ಶೇಖರಣೆ ಮಾಡಿಕೊಳ್ಳಬೇಕಾಗಿರುವುದು ಸರ್ಕಾರದ ಜವಾಬ್ದಾರಿ ಇದೆ. ಇದೆಲ್ಲವನ್ನು ನೋಡಿಕೊಂಡು ಬೆಳೆಗಳಿಗೆ ನೀರು ಕೊಡಬೇಕಾ ಕೊಡಬಾರದ ಎಂದು ಸಭೆಯಲ್ಲಿ ನಿರ್ಧಾರ ಮಾಡಲಾಗುತ್ತದೆ.

    ಒಟ್ಟಾರೆ ಒಂದು ಕಡೆ ಮಳೆ ಬೀಳದೆ ರೈತರು ಕಂಗಾಲಾಗಿದ್ದರೆ ಇನ್ನೊಂದೆಡೆ ಕೆಆರ್‌ಎಸ್ ಅಣೆಕಟ್ಟೆಯಿಂದ ನೀರು ಬಿಡುತ್ತಾರೋ ಇಲ್ಲವೋ ಎಂಬ ಆತಂಕದಲ್ಲಿ ಮಂಡ್ಯ ರೈತರು ಇದ್ದಾರೆ. ಒಂದು ವೇಳೆ ನಾಲೆಗಳಿಗೆ ನೀರು ಬಿಡುವುದಿಲ್ಲ ಎಂದರೆ ರೈತರು ಆಕ್ರೋಶ ವ್ಯಕ್ತಪಡಿಸುವುದು ಕಟ್ಟಿಟ್ಟ ಬುತ್ತಿಯಾಗಿದೆ. ಇದನ್ನೂ ಓದಿ: ವಿರೋಧದ ನಡುವೆ ಅಂತರ್ಜಾತಿ ವಿವಾಹ- ಠಾಣೆ ಮೆಟ್ಟಿಲೇರಿದ ಜೋಡಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಳೆದ 24 ಗಂಟೆಯಲ್ಲಿ ಕೆಆರ್‌ಎಸ್ ಡ್ಯಾಂಗೆ ಹರಿದು ಬಂದ 4 ಟಿಎಂಸಿ ನೀರು – 104 ಅಡಿಗೆ ಏರಿಕೆ

    ಕಳೆದ 24 ಗಂಟೆಯಲ್ಲಿ ಕೆಆರ್‌ಎಸ್ ಡ್ಯಾಂಗೆ ಹರಿದು ಬಂದ 4 ಟಿಎಂಸಿ ನೀರು – 104 ಅಡಿಗೆ ಏರಿಕೆ

    ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಕೆಆರ್‌ಎಸ್ ಡ್ಯಾಂಗೆ (KRS Dam) ಒಳಹರಿವಿನ ಪ್ರಮಾಣ ಮತ್ತಷ್ಟು ಹೆಚ್ಚಳವಾಗಿದೆ.

    ಕಳೆದ ಕೇವಲ 24 ಗಂಟೆಗಳಲ್ಲಿ ಕೆಆರ್‌ಎಸ್ ಡ್ಯಾಂಗೆ 4 ಟಿಎಂಸಿ ನೀರು ಹರಿದು ಬಂದಿದೆ. ಡ್ಯಾಂನಲ್ಲಿ ಸದ್ಯ 26.811 ಟಿಎಂಸಿ ನೀರು ಸಂಗ್ರಹವಾಗಿದೆ. ಇದನ್ನೂ ಓದಿ: ಕದ್ದು ತಂದಿದ್ದ ಜೆಸಿಬಿ ಬಳಸಿ ATM ಕಳ್ಳತನಕ್ಕೆ ಯತ್ನ

    ಮಂಗಳವಾರ ಕೆಆರ್‌ಎಸ್ ಡ್ಯಾಂನಲ್ಲಿ 22.809 ಟಿಎಂಸಿ ನೀರು ಸಂಗ್ರಹವಿತ್ತು. ಇದೀಗ ಕೆಆರ್‌ಎಸ್‌ನ ನೀರಿನ ಮಟ್ಟ 104.80 ಅಡಿಗೆ ಹೆಚ್ಚಳವಾಗಿದೆ. ಡ್ಯಾಂಗೆ 51,508 ಕ್ಯೂಸೆಕ್ ಒಳ ಹರಿವು ಇದ್ದು, ಡ್ಯಾಂನಿAದ 5,156 ಕ್ಯೂಸೆಕ್‌ನಷ್ಟು ಹೊರಹರಿವು ಇದೆ. ಇದನ್ನೂ ಓದಿ: ವಾಹನ ತೆರಿಗೆ ಪರಿಷ್ಕರಣೆ – ಯಾವುದು ಎಷ್ಟು ಏರಿಕೆ?

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • KRS ಡ್ಯಾಂ ಬರೋಬ್ಬರಿ 100 ಅಡಿ ಭರ್ತಿ – 48 ಗಂಟೆಯಲ್ಲಿ 5 ಟಿಎಂಸಿ ನೀರು ಒಳಹರಿವು

    KRS ಡ್ಯಾಂ ಬರೋಬ್ಬರಿ 100 ಅಡಿ ಭರ್ತಿ – 48 ಗಂಟೆಯಲ್ಲಿ 5 ಟಿಎಂಸಿ ನೀರು ಒಳಹರಿವು

    ಮಂಡ್ಯ: ರಾಜ್ಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಹಳೆ ಮೈಸೂರು ಭಾಗದ ಜೀವನಾಡಿಯಾಗಿರುವ ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಡ್ಯಾಂಗೆ (KRS Dam) ಹೆಚ್ಚಿನ ಪ್ರಮಾಣದ ನೀರು ಹರಿದುಬರುತ್ತಿದೆ. ಇದರಿಂದ ಕಳೆದ 48 ಗಂಟೆಯಲ್ಲಿ 5 ಟಿಎಂಸಿಯಷ್ಟು ನೀರು ಹರಿದುಬಂದಿದ್ದು, ಬರೋಬ್ಬರಿ 100 ಅಡಿ ನೀರು ಭರ್ತಿಯಾಗಿದೆ.

    ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮವಾಗಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಡ್ಯಾಂ ಒಳಹರಿವಿನ ಪ್ರಮಾಣದಲ್ಲಿ ಏರಿಕೆ ಕಂಡಿದೆ. ಹೀಗಾಗಿ 48 ಗಂಟೆಯ ಅವಧಿಯಲ್ಲಿ ಕೆಆರ್‌ಎಸ್ ಡ್ಯಾಂಗೆ 5 TMC ನೀರು ಹರಿದುಬಂದಿದೆ. ಕೇವಲ 2 ದಿನಗಳ ಅವಧಿಯಲ್ಲಿ 8 ಅಡಿ ಡ್ಯಾಂ ನೀರು ಭರ್ತಿಯಾಗಿದೆ.

    124.80 ಅಡಿ ಗರಿಷ್ಠ ಮಟ್ಟ ಹೊಂದಿರುವ ಕೆಆರ್‌ಎಸ್ ಜಲಾಶಯ 100 ಅಡಿ ನೀರು ತುಂಬಿದ್ದು, ಡ್ಯಾಂ ಭರ್ತಿಯತ್ತ ಸಾಗಿದೆ. ಇದರಿಂದ ರೈತರು ಹರ್ಷಗೊಂಡಿದ್ದಾರೆ. ಕಳೆದ ಒಂದೂವರೆ ತಿಂಗಳಿನಿಂದ ಮಳೆಯಿಲ್ಲದೇ ಕಂಗಾಲಾಗಿದ್ದ ಸಕ್ಕರೆ ನಾಡಿನ ರೈತರು, ಇದೀಗ ಕೃಷಿ ಚಟುವಟಿಕೆಗಳತ್ತ ಮುಖ ಮಾಡಿದ್ದಾರೆ. ಇದನ್ನೂ ಓದಿ: ಭಾರೀ ಮಳೆಗೆ ಮನೆಗಳ ಗೋಡೆ ಕುಸಿತ – ಪ್ರತ್ಯೇಕ ಘಟನೆಯಲ್ಲಿ 2 ಕಂದಮ್ಮಗಳ ದಾರುಣ ಸಾವು

    ಸದ್ಯ ಡ್ಯಾಂಗೆ 48,025 ಕ್ಯೂಸೆಕ್ ಒಳ ಹರಿವಿದ್ದು, ಇಂದು ಇನ್ನಷ್ಟು ನೀರಿನ ಪ್ರಮಾಣ ಏರಿಕೆಯಾಗುವ ಸಾಧ್ಯತೆಯಿದೆ. 49.452 ಟಿಎಂಸಿ ಗರಿಷ್ಠ ಸಂಗ್ರಹ ಸಾಮರ್ಥ್ಯ ಹೊಂದಿರುವ ಕೆಆರ್‌ಎಸ್ ಕಳೆದ 48 ಗಂಟೆಗಳಲ್ಲಿ 5 ಟಿಎಂಸಿ ನೀರು ಹರಿದುಬಂದಿದ್ದು, ಒಟ್ಟು 22.809 ಟಿಎಂಸಿ ನೀರು ಡ್ಯಾಂನಲ್ಲಿ ಶೇಖರಣೆಯಾಗಿದೆ. ನೀರಿನ ಒಳಹರಿವು ಇದೇ ರೀತಿ ಮುಂದುವರಿದಲ್ಲಿ ಇನ್ನೂ 10 ದಿನಗಳಲ್ಲಿ ಡ್ಯಾಂ ಪೂರ್ಣ ಭರ್ತಿಯಾಗುವ ಸಾಧ್ಯತೆಯಿದೆ.

    ಹಾರಂಗಿಯಿಂದ 30,000 ಕ್ಯೂಸೆಕ್ ನೀರು ಬಿಡುಗಡೆ:
    ಕೊಡಗೂ ಜಿಲ್ಲೆಯಲ್ಲೂ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿಯಲ್ಲಿ (Cauvery River) ನೀರಿನ ಪ್ರಮಾಣ ಗಣನೀಯ ಏರಿಕೆ ಕಂಡಿದೆ. ಹಾರಂಗಿ ಜಲಾಶಯದಿಂದ 30,000 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಇದರಿಂದ ಕುಶಾಲನಗರ ಸುತ್ತಮುತ್ತಲಿನ ಬಡಾವಣೆಗಳತ್ತ ಹರಿದ ನೀರು ಹರಿದು ಬಂದಿದ್ದು, ಪ್ರವಾಹ ಪರಿಸ್ಥಿತಿ ಎದುರಾಗಿದೆ. ಇದನ್ನೂ ಓದಿ: ವ್ಯಕ್ತಿಯ ತಲೆ ಮೇಲೆ ಒದ್ದು, ಮೂತ್ರ ವಿಸರ್ಜನೆ ಮಾಡಿ ದರ್ಪ – ಉತ್ತರ ಪ್ರದೇಶದಲ್ಲಿ ಮತ್ತೊಂದು ಅಮಾನವೀಯ ಘಟನೆ

     

    ಗರಿಷ್ಠ ಮಟ್ಟ – 124.80 ಅಡಿಗಳು
    ಇಂದಿನ ಮಟ್ಟ – 100 ಅಡಿಗಳು
    ಗರಿಷ್ಠ ಸಾಂದ್ರತೆ – 49.452 ಟಿಎಂಸಿ
    ಇಂದಿನ ಸಾಂದ್ರತೆ – 22.809 ಟಿಎಂಸಿ
    ಒಳ ಹರಿವು – 48,025 ಕ್ಯೂಸೆಕ್
    ಹೊರ ಹರಿವು – 5,449 ಕ್ಯೂಸೆಕ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೊಡಗು ಜಿಲ್ಲೆಯಲ್ಲಿ ವರುಣಾರ್ಭಟ – ಉಕ್ಕಿ ಹರಿದ ಕಾವೇರಿ ನದಿ; ಬಡಾವಣೆ ಜಲಾವೃತ

    ಕೊಡಗು ಜಿಲ್ಲೆಯಲ್ಲಿ ವರುಣಾರ್ಭಟ – ಉಕ್ಕಿ ಹರಿದ ಕಾವೇರಿ ನದಿ; ಬಡಾವಣೆ ಜಲಾವೃತ

    ಕೊಡಗು: ಮಡಿಕೇರಿ (Madikeri) ಜಿಲ್ಲೆಯಲ್ಲಿ ಮುಂಗಾರಿನ ವರುಣಾರ್ಭಟ ಜೋರಾಗಿದೆ. ಭಾರೀ ಮಳೆಯಿಂದಾಗಿ ಕಾವೇರಿ ನದಿ (Cauvery River) ಉಕ್ಕಿ ಹರಿಯುತ್ತಿದೆ. ನದಿ ನೀರಿನ ಪ್ರಮಾಣ ಹೆಚ್ಚಾಗಿದ್ದರಿಂದ ಹಲವೆಡೆ ಮನೆಗಳಿಗೆ ನೀರು ನುಗ್ಗಿದೆ.

    ಕುಶಾಲನಗರದ ಸಾಯಿ ಬಡಾವಣೆಗೆ ಕಾವೇರಿ ನದಿ ನೀರು ನುಗ್ಗಿದೆ. ಸಾಯಿ ಬಡಾವಣೆ ಜಲಾವೃತಗೊಳ್ಳುವ ಆತಂಕ ಎದುರಾಗಿದೆ. ಬಡಾವಣೆ ನಿವಾಸಿಗಳು ರಾತ್ರೋರಾತ್ರಿ ಮನೆಗಳನ್ನು ಖಾಲಿ ಮಾಡುತ್ತಿದ್ದಾರೆ. ಮನೆಯ ಎಲ್ಲಾ ವಸ್ತುಗಳನ್ನ ತುಂಬಿಕೊಂಡು ಬೇರೆಡೆಗೆ ಸ್ಥಳಾಂತರವಾಗುತ್ತಿದ್ದಾರೆ. ಇದನ್ನೂ ಓದಿ: ಮಡಿಕೇರಿ-ಮಂಗಳೂರು ಹೈವೇಯಲ್ಲಿ ಗುಡ್ಡ ಕುಸಿತ

    ಸ್ಥಳೀಯರು ಮನೆಗಳ ಖಾಲಿ ಮಾಡಲು ಸೇವಾ ಭಾರತಿ ಸ್ವಯಂ ಸೇವಕರು ಸಹಾಯಹಸ್ತ ಚಾಚಿದ್ದಾರೆ. ಕ್ಷಣ ಕ್ಷಣಕ್ಕೂ ನೀರಿನ ಮಟ್ಟ ಏರಿಕೆ ಆಗುತ್ತಿದ್ದು, ಜನರು ಆತಂಕಗೊಂಡು ಮನೆಗಳನ್ನ ಖಾಲಿ ಮಾಡುತ್ತಿದ್ದಾರೆ.

    ಇನ್ನೂ ಜಿಲ್ಲೆಯ ಬಹುತೇಕ ಗ್ರಾಮೀಣ ಪ್ರದೇಶದಲ್ಲಿ ಕಾವೇರಿ ನೀರಿನ ಮಟ್ಟ ಏರಿಕೆಗೊಂಡ ಪರಿಣಾಮ ಹಲವು ಗ್ರಾಮಗಳ ಸಂಪರ್ಕ ಕಡಿತಗೊಂಡು ಜನಜೀವನ ಅಸ್ತವ್ಯಸ್ತವಾಗಿದೆ. ಇಂದು ಕೊಡಗು ಜಿಲ್ಲೆಗೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಹಾಗೂ ಉಸ್ತುವಾರಿ ಸಚಿವ ಬೋಸರಾಜು ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ. ಮಳೆಹಾನಿಗೆ ಸಂಬಂಧಿಸಿದಂತೆ ವಿವಿಧ ಇಲಾಖೆಯ ಆದಿಕಾರಿಗಳ ಜೊತೆ ಚರ್ಚೆ ನಡೆಸಲಿದ್ದಾರೆ. ಇದನ್ನೂ ಓದಿ: ಮಂಗಳವಾರ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಲಾ, ಕಾಲೇಜುಗಳಿಗೆ ರಜೆ

    ಗರಿಷ್ಠ ಮಟ್ಟ – 124.80 ಅಡಿಗಳು
    ಇಂದಿನ ಮಟ್ಟ – 100 ಅಡಿಗಳು
    ಗರಿಷ್ಠ ಸಾಂದ್ರತೆ – 49.452 ಟಿಎಂಸಿ
    ಇಂದಿನ ಸಾಂದ್ರತೆ – 22.809 ಟಿಎಂಸಿ
    ಒಳ ಹರಿವು – 48,025 ಕ್ಯೂಸೆಕ್
    ಹೊರ ಹರಿವು – 5,449 ಕ್ಯೂಸೆಕ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆ – ಶಾಲೆಗಳಿಗೆ ರಜೆ ಘೋಷಣೆ

    ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆ – ಶಾಲೆಗಳಿಗೆ ರಜೆ ಘೋಷಣೆ

    – ದಕ್ಷಿಣ ಕನ್ನಡದಲ್ಲೂ ಅಬ್ಬರಿಸುತ್ತಿರುವ ವರುಣ

    ಮಡಿಕೇರಿ/ಮಂಗಳೂರು: ಮುಂಜಾನೆಯಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ (Rain) ಕೊಡಗು (Kodagu) ಜಿಲ್ಲಾಡಳಿತ ಶಾಲಾ ಕಾಲೇಜುಗಳಿಗೆ ಶುಕ್ರವಾರ ರಜೆ ಘೋಷಿಸಿದೆ.

    ಕರಿಕೆ, ಚೆಂಬು, ಸಂಪಾಜೆ, ನಾಪೋಕ್ಲು ಮತ್ತು ಭಾಗಮಂಡಲ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಮಳೆಯ ಪರಿಣಾಮ ಕಾವೇರಿ ನದಿ ಉಕ್ಕಿ ಹರಿಯುತ್ತಿದ್ದು ಭಾಗಮಂಡಲ ಹಾಗೂ ನಾಪೋಕ್ಲು ರಸ್ತೆ ಸಂಪರ್ಕ ಕಡಿತಗೊಂಡಿದೆ. ಕ್ಷಣಕ್ಕೂ ಕ್ಷಣಕ್ಕೂ ಕಾವೇರಿ ನದಿಯ ನೀರಿನ ಮಟ್ಟ ಏರಿಕೆಯಾಗುತ್ತಿದ್ದು ಈ ರಸ್ತೆಯ ಮೇಲೆ 3 ಅಡಿಗಳಷ್ಟು ನೀರು ಹರಿಯುತ್ತಿದೆ. ಇದರಿಂದಾಗಿ ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಸುರಿಯುತ್ತಿರುವ ಮಳೆಯಿಂದಾಗಿ ಕೆಆರ್‍ಎಸ್‍ಗೆ ಅಪಾರ ಪ್ರಮಾಣದ ನೀರು ಹರಿದು ಬರುವ ನಿರೀಕ್ಷೆ ಇದೆ. ಇದನ್ನೂ ಓದಿ: ಉತ್ತರಕನ್ನಡ ಜಿಲ್ಲೆಯಲ್ಲಿ ಮಳೆಯ ಅವಾಂತರ – ಕಾಳಜಿ ಕೇಂದ್ರ ತೆರೆದ ಜಿಲ್ಲಾಡಳಿತ

     

     

    ಭಾಗಮಂಡಲ ನಾಪೋಕ್ಲು ರಸ್ತೆಯಲ್ಲಿ ನೀರು ಹರಿಯುತ್ತಿರುವ ಹಿನ್ನೆಲೆ ಮಡಿಕೇರಿ ತಹಶಿಲ್ದಾರ್ ಕಿರಣ್ ಗೋರಯ್ಯ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ರಸ್ತೆ ದಾಟಲು ಬೋಟ್ ವ್ಯವಸ್ಥೆ ಮಾಡುವ ಭರವಸೆ ಕೋಡ ನೀಡಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ರಸ್ತೆಗೆ ಹೋಂ ಗಾಡ್ರ್ಸ್ ನಿಯೋಜನೆ ಮಾಡಲು ಸೂಚನೆ ನೀಡಿದ್ದಾರೆ.

    ಭಾರೀ ಗಾಳಿ ಮಳೆಗೆ ಮನೆ ಮೇಲೆ ಮರ ಹಾಗೂ ಬೃಹತ್ ವಿದ್ಯುತ್ ಕಂಬ ಮುರಿದು ಬಿದ್ದಿರುವ ಘಟನೆ ಕುಶಾಲನಗರದಲ್ಲಿ ನಡೆದಿದೆ. ಮರಿಯ, ಲಲಿತ ಮತ್ತು ಐಸಮ್ಮ ಎಂಬುವರ ಮನೆಗಳಿಗೆ ಇದರಿಂದ ಹಾನಿಯಾಗಿದೆ. ವಿದ್ಯುತ್ ಸಂಪರ್ಕ ಕಡಿತವಾಗಿದ್ದರಿಂದ ಭಾರೀ ಅನಾಹುತ ತಪ್ಪಿದೆ. ಅಲ್ಲದೇ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಮರವೊಂದು ಉರುಳಿ ಬಿದ್ದಿದೆ. ಎನ್‍ಡಿಆರ್‍ಎಫ್ ಸಿಬ್ಬಂದಿಗಳು ಮರ ತೆರವುಗೊಳಿಸಿ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ.

    ದಕ್ಷಿಣಕನ್ನಡ (Dakshina Kannada) ಜಿಲ್ಲೆಯಲ್ಲೂ ಭಾರೀ ಮಳೆಯಾಗುತ್ತಿದ್ದು ಶಾಂಭವಿ ನದಿ ತುಂಬಿ ಹರಿಯುತ್ತಿದೆ. ಇದರಿಂದಾಗಿ ಮುಲ್ಕಿ ತಾಲೂಕಿನ ಅತಿಕಾರಿಬೆಟ್ಟು ಗ್ರಾಮದ ಮಟ್ಟು ಪ್ರದೇಶದಲ್ಲಿ ನೂರಕ್ಕೂ ಹೆಚ್ಚು ಮನೆಗಳ ಸುತ್ತ ನೀರು ನಿಂತಿದೆ. ಮಳೆ ಮುಂದುವರೆದರೆ ಜನರನ್ನೂ ಸ್ಥಳಾಂತರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

    ಇತಿಹಾಸ ಪ್ರಸಿದ್ದ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೂ ನೀರು ನುಗ್ಗಿದೆ. ದೇವಸ್ಥಾನದ ಬಳಿಯ ಶಾಂಭವಿ ನದಿಯ ನೀರು ಗರ್ಭಗುಡಿಯ ಮೆಟ್ಟಿಲಿನವರೆಗೂ ಬಂದಿದೆ. ಜಲದುರ್ಗಿ ಎಂದು ಹೆಸರು ಪಡೆದಿರುವ ದೇವಿ ಅಕ್ಷರಶಃ ಜಲದುರ್ಗಿಯಾಗಿ ಕಾಣುತ್ತಿದ್ದಾಳೆ. ಇದನ್ನೂ ಓದಿ: ಭಾರೀ ಮಳೆಗೆ ತುಂಗಾ ಜಲಾಶಯ ಭರ್ತಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 80 ಅಡಿಗೆ ತಲುಪಿದ ಕೆಆರ್‌ಎಸ್ ನೀರಿನ ಮಟ್ಟ – ಕುಡಿಯುವ ನೀರಿಗೆ ಶುರುವಾಗಿದೆ ಆತಂಕ

    80 ಅಡಿಗೆ ತಲುಪಿದ ಕೆಆರ್‌ಎಸ್ ನೀರಿನ ಮಟ್ಟ – ಕುಡಿಯುವ ನೀರಿಗೆ ಶುರುವಾಗಿದೆ ಆತಂಕ

    ಮಂಡ್ಯ: ಜೂನ್ 3ನೇ ವಾರಕ್ಕೆ ಬಂದರೂ ಸಹ ಕಾವೇರಿ ಜಲಾನಯನ (Kaveri River) ಪ್ರದೇಶದಲ್ಲಿ ಇನ್ನೂ ಮಳೆಯಾಗಿಲ್ಲ. ಇದರ ಪರಿಣಾಮ ಹಳೆ ಮೈಸೂರು ಭಾಗದ ಜೀವನಾಡಿ ಕೆಆರ್‌ಎಸ್ ಡ್ಯಾಂನ (KRS) ನೀರಿನ ಮಟ್ಟ 80 ಅಡಿಗೆ ಕುಸಿದಿದೆ. ಇದರಿಂದ ಮುಂದಿನ ದಿನಗಳಲ್ಲಿ ಮಳೆಯಾಗದೇ (Rain) ಇದ್ದರೆ ಕಾವೇರಿ ನೀರನ್ನು ಅವಲಂಬಿಸಿರುವ ಜನರು ಕುಡಿಯುವ ನೀರಿಗೂ ಸಮಸ್ಯೆ ಎದುರಿಸಬೇಕಾದ ದಿನಗಳು ಬರಲಿವೆ.

    ಈಗಾಗಲೇ ಡ್ಯಾಂನ ಗೇಟ್‍ನ ಬಳಿ ನೀರಿಲ್ಲ. ಇಂತಹ ಪರಿಸ್ಥಿತಿ ಬಂದರೆ ಇರುವ ನೀರನ್ನು ಬಳಕೆ ಮಾಡಿಕೊಳ್ಳಲು, ಮುನ್ನೆಚ್ಚರಿಕೆಯಾಗಿ ಡ್ಯಾಂ ನಿರ್ಮಾಣದ ವೇಳೆಯೇ ಮಾಡಿರುವ ಒಳಭಾಗದ ನಾಲೆಯಿಂದ ಈಗ ಕುಡಿಯಲು ನೀರು ಬಿಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಮಳೆಯಾಗದೇ ಇದ್ದರೆ ಈ ನಾಲೆಯಿಂದಲೂ ನೀರು ಬಿಡಲು ಸಾಧ್ಯವಿಲ್ಲ. ಇದನ್ನೂ ಓದಿ: ಮಾವಿನ ಹಣ್ಣಿಗಾಗಿ ನಡೆದ ಗಲಾಟೆ- ಸಹೋದರರನ್ನು ಬಡಿದು ಕೊಂದ ದುಷ್ಕರ್ಮಿಗಳು

    ಈಗ ಡ್ಯಾಂನಲ್ಲಿ 10.811 ಟಿಎಂಸಿ ನೀರಿದೆ. ಈ ಪೈಕಿ 3.811 ಟಿಎಂಸಿ ನೀರನ್ನು ಬಳಕೆ ಮಾಡಿಕೊಳ್ಳಬಹುದು. ಉಳಿದ 7 ಟಿಎಂಸಿ ನೀರು ಡೆಡ್ ಸ್ಟೋರೇಜ್ ಆಗಿದೆ. ಇದನ್ನು ಬಳಕೆ ಮಾಡಿಕೊಳ್ಳಲು ಸಾಧ್ಯವಿಲ್ಲ. ಬರುವ ದಿನಗಳಲ್ಲಿ ಉತ್ತಮ ಮಳೆಯಾದರೆ ಮಾತ್ರ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಭಾಗದ ಜನರಿಗೆ ಕುಡಿಯುವ ನೀರಿಗೆ ಅನುಕೂಲವಾಗಲಿದೆ. ಇದನ್ನೂ ಓದಿ: ಭಾರೀ ಮಳೆಯಿಂದ ಭೂಕುಸಿತ – ಸಿಕ್ಕಿಂನಲ್ಲಿ ಸಿಲುಕಿದ್ದ 300 ಪ್ರವಾಸಿಗರನ್ನು ರಕ್ಷಿಸಿದ ಸೇನೆ

    ಕೆಆರ್‌ಎಸ್ ಇಂದಿನ ನೀರಿನ ಮಟ್ಟ
    ಗರಿಷ್ಠ ಮಟ್ಟ – 124.80 ಅಡಿಗಳು
    ಇಂದಿನ ಮಟ್ಟ – 80.06 ಅಡಿಗಳು
    ಗರಿಷ್ಠ ಸಾಂದ್ರತೆ – 49.452 ಟಿಎಂಸಿ
    ಇಂದಿನ ಸಾಂದ್ರತೆ -10.811 ಟಿಎಂಸಿ
    ಒಳ ಹರಿವು – 289 ಕ್ಯೂಸೆಕ್
    ಹೊರ ಹರಿವು – 3,109