Tag: ಕಾವೇರಿ ನದಿ

  • ಕೆಆರ್‌ಎಸ್‌ನಲ್ಲಿ ನೀರಿನ ಮಟ್ಟ ಕುಸಿತ – 5 ವರ್ಷದ ಬಳಿಕ ಶತಮಾನದ ಹಿಂದಿನ ದೇವಾಲಯ ಗೋಚರ

    ಕೆಆರ್‌ಎಸ್‌ನಲ್ಲಿ ನೀರಿನ ಮಟ್ಟ ಕುಸಿತ – 5 ವರ್ಷದ ಬಳಿಕ ಶತಮಾನದ ಹಿಂದಿನ ದೇವಾಲಯ ಗೋಚರ

    ಮಂಡ್ಯ: ಕೆಆರ್‌ಎಸ್ (KRS Dam) ಆಣೆಕಟ್ಟಿನಲ್ಲಿ ನೀರು ದಾಖಲೆ ಪ್ರಮಾಣದಲ್ಲಿ ಕುಸಿದಿದ್ದು, ಮುಳುಗಡೆಯಾಗಿದ್ದ ಶತಮಾನದ ಹಿಂದಿನ ನಾರಾಯಣಸ್ವಾಮಿ ದೇವಾಲಯ (Narayanaswami Temple) ಐದು ವರ್ಷಗಳ ಬಳಿಕ ಗೋಚರವಾಗುತ್ತಿದೆ.

    ಕಾವೇರಿ ಜಲಾನಯನ (Kaveri River) ಪ್ರದೇಶದಲ್ಲಿ ಇನ್ನೂ ಮುಂಗಾರು ಮಳೆ ಆರಂಭವಾಗದ ಹಿನ್ನೆಲೆ ಕೆಆರ್‌ಎಸ್ ಡ್ಯಾಂನಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದೆ. ಒಂದೆಡೆ ನೀರಿನ ಕೊರತೆ ಎದುರಾಗುವ ಆತಂಕವಿದೆ. ಮತ್ತೊಂದೆಡೆ ಐದು ವರ್ಷಗಳ ಬಳಿಕ ಅಣೆಕಟ್ಟೆಯಲ್ಲಿ ಮುಳುಡೆಯಾದ ವೈಶಿಷ್ಟ್ಯಗಳು ಬೆಳಿಕಿಗೆ ಬರುತ್ತಿವೆ. ಇದನ್ನೂ ಓದಿ: ಜೆಡಿಎಸ್ ಯುವ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ರಾಜೀನಾಮೆ

    ಡ್ಯಾಂನಲ್ಲಿ 110 ಅಡಿಗೂ ಹೆಚ್ಚು ನೀರು ಸಂಗ್ರಹವಾದರೆ ದೇವಾಲಯ ಸಂಪೂರ್ಣ ಮುಳುಗಡೆಯಾಗುತ್ತದೆ. ಈಗ ಡ್ಯಾಂನಲ್ಲಿ 81 ಅಡಿ ನೀರು ಸಂಗ್ರಹವಾಗಿದೆ. ಇದರಿಂದಾಗಿ ದೇವಾಲಯ ಹಾಗೂ ಶತಮಾನದ ವೀರಗಲ್ಲುಗಳು ಕಾಣಲು ಸಿಗುತ್ತಿವೆ.

    ಕೆಆರ್‌ಎಸ್ ಹಿನ್ನೀರಿನ ಬೋರೆ ಆನಂದೂರು ಗ್ರಾಮದ ಬಳಿಯ ಹಿನ್ನೀರಿನಲ್ಲಿ ಈ ಪುರಾತನ ಕಾಲದ ದೇವಸ್ಥಾನವಿದೆ. ಡ್ಯಾಂ ನಿರ್ಮಾಣ ಆಗುವುದಕ್ಕೂ ಮುನ್ನ ಇಲ್ಲಿನ ಸುತ್ತಮುತ್ತಲಿನ ಗ್ರಾಮಸ್ಥರಿಂದ ಪೂಜೆ ಮಾಡಲಾಗುತ್ತಿತ್ತು. ಡ್ಯಾಂ ನಿರ್ಮಾಣದ ಬಳಿಕ ದೇವಾಲಯ ಹಾಗೂ ಹಲವು ಹಳ್ಳಿಗಳು ನೀರಿನಲ್ಲಿ ಮುಳುಗಡೆಯಾದವು. ಈಗ ಮೂಲ ವಿಗ್ರಹವನ್ನು ಮಜ್ಜಿಗೆಪುರ ಗ್ರಾಮದ ದೇವಾಲಯದಲ್ಲಿ ಪ್ರತಿಷ್ಠಾಪಿಸಲಾಗಿದೆ. ಇದನ್ನೂ ಓದಿ: ಬೈಕ್ ಅಪಘಾತದಲ್ಲಿ ಕಾಫಿನಾಡಿನ ಎನ್‌ಎಸ್‌ಜಿ ಬ್ಲ್ಯಾಕ್ ಕ್ಯಾಟ್ ಕಮಾಂಡೋ ಸಾವು 

  • ಕಾವೇರಿ, ಕಬಿನಿ, ಕಾಳಿ ಸೇರಿ ರಾಜ್ಯದ 17 ನದಿಗಳ ನೀರು ನೇರವಾಗಿ ಕುಡಿಯೋಕೆ ಯೋಗ್ಯವಲ್ಲ- ವರದಿ ಸ್ಫೋಟ

    ಕಾವೇರಿ, ಕಬಿನಿ, ಕಾಳಿ ಸೇರಿ ರಾಜ್ಯದ 17 ನದಿಗಳ ನೀರು ನೇರವಾಗಿ ಕುಡಿಯೋಕೆ ಯೋಗ್ಯವಲ್ಲ- ವರದಿ ಸ್ಫೋಟ

    – ನದಿ ಹರಿವಿನ ನೀರಿನ ಪರೀಕ್ಷೇಯಲ್ಲಿ ಕಲುಷಿತ
    – ಮಾಲಿನ್ಯ ನಿಯಂತ್ರಣ ಮಂಡಳಿ ವರದಿ ಬಹಿರಂಗ

    ಬೆಂಗಳೂರು: ಆಧುನಿಕತೆ ಬೆಳೆದಂತೆ ಪರಿಸರದಲ್ಲಿ ಮಾಲಿನ್ಯ (Pollution) ಪ್ರಮಾಣ ಕೂಡ ಹೆಚ್ಚಾಗ್ತಾ ಇದೆ. ಅದರಲ್ಲೂ ಕುಡಿಯುವ ನೀರು ಹಾಗೂ ಗಾಳಿಯಲ್ಲಿ ಕಲುಷಿತ ಪ್ರಮಾಣ ಹೆಚ್ಚುತ್ತಲೇ ಇದೆ. ಇದಕ್ಕೆ ನಿದರ್ಶನ ಎನ್ನುವಂತೆ ಮಾಲಿನ್ಯ ನಿಯಂತ್ರಣ ಮಂಡಳಿ (Pollution Control Board) ವರದಿಯೊಂದನ್ನ ಬಿಡುಗಡೆ ಮಾಡಿದೆ.

    ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಬಿಡುಗಡೆ ಮಾಡಿರುವ ವರದಿಯಲ್ಲಿ ರಾಜ್ಯದ ಪ್ರಮುಖ 17 ನದಿಗಳು ಕಲುಷಿತ ಆಗಿರೋದು ಬಯಲಾಗಿದೆ. ಈ ವರ್ಷ ಮಾಲಿನ್ಯ ನಿಯಂತ್ರಣ ಮಂಡಳಿ ನದಿಗಳ (Rivers) ಹರಿವಿನಲ್ಲಿ ನೀರನ್ನ ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಿದೆ. ಅದರಲ್ಲಿ 15 ನದಿಗಳ ನೀರು ನೇರವಾಗಿ ಕುಡಿಯೋಕೆ ಯೋಗ್ಯವಲ್ಲ ಅಂತಾ ವರದಿಯಾಗಿದೆ. ಇದನ್ನೂ ಓದಿ: ಕಾಂಗ್ರೆಸ್‌ನಿಂದ ಎಂಪಿ ಟಿಕೆಟ್ ಏಕೆ ನಿರೀಕ್ಷಿಸಬಾರದು- ಕಮಲ್ ಹಾಸನ್ ಪ್ರಶ್ನೆ

    ಯಾವೆಲ್ಲಾ ನದಿ ನೀರು ಯೋಗ್ಯವಲ್ಲ?: ಅರ್ಕಾವತಿ ನದಿ, ಲಕ್ಷ್ಮಣ ತೀರ್ಥ ನದಿ, ಮಲಪ್ರಭಾ ನದಿ, ತುಂಗಭದ್ರಾ ನದಿ, ಭದ್ರಾ ನದಿ, ಕಾವೇರಿ ನದಿ (Cauvery), ಕಬಿನಿ ನದಿ (Kabini), ಕಗಿನಿ ನದಿ, ಕಾಳಿ ನದಿ, ಕೃಷ್ಣ ನದಿ, ಅಸಂಗಿ ಕೃಷ್ಣ ನದಿ, ಶಿಂಷಾ ನದಿ, ಭೀಮಾ ನದಿ, ನೇತಾವತಿ ನದಿ, ಕುಮಾರಧಾರ ನದಿ, ತುಂಗಾ ನದಿ, ಯಗಚಿ ನದಿಗಳ ನೀರು ನೇರವಾಗಿ ಕುಡಿಯಲು ಯೋಗ್ಯವಲ್ಲ ಎಂದು ವರದಿಯಲ್ಲಿ ಬಹಿರಂಗವಾಗಿದೆ.

    ಮಹಾನಗರಗಳು ಹಾಗೂ ನಗರಗಳಲ್ಲಿನ ಕಂಪನಿಗಳು, ಕಾರ್ಖಾನೆಗಳು (Chemical Factory) ಹೊರಸೂಸುವ ಕೆಮಿಕಲ್ ಹಾಗೂ ತ್ಯಾಜ್ಯದಿಂದಳೇ ನೀರು ಕಲುಷಿತ ಆಗ್ತಿದೆ ಎಂದು ಹೇಳಲಾಗ್ತಿದೆ. ಮಾಲಿನ್ಯ ನಿಯಂತ್ರಣ ಮಂಡಳಿಯವರು ಮಾಲಿನ್ಯ ಉಂಟಾಗುವ ಜಾಗದಲ್ಲಿ ಪ್ಲಾಂಟ್‌ಗಳನ್ನ ರಚನೆ ಮಾಡಿ ನಿಯಂತ್ರಣ ಮಾಡದೇ ಇರೋದು ಮಾಲಿನ್ಯಕ್ಕೆ ಕಾರಣವಾಗಿದೆ. ಸರ್ಕಾರ ಕೂಡಲೇ ಎಚ್ಚೆತ್ತು ನಿಯಂತ್ರಣ ಮಾಡಬೇಕು. ಮಾನಿಟರ್‌ಗೆ ಹೆಚ್ಚು ಸಿಬ್ಬಂದಿ ನೇಮಕ ಮಾಡಿ ಮಾನಿಟರ್ ಮೂಲಕ ಮಾಲಿನ್ಯ ತಡೆಗಟ್ಟಬೇಕು ಎಂದು ತಜ್ಞರು ಒತ್ತಾಯಿಸಿದ್ದಾರೆ.

    ಒಟ್ಟಾರೆ 17 ನದಿಗಳು ಕಲುಷಿತ ಆಗಿರೋದು ಮಾಲಿನ್ಯ ನಿಯಂತ್ರಣ ಮಂಡಳಿ ಪರೀಕ್ಷೆಯಲ್ಲಿ ಬಯಲಾಗಿದೆ. ಮಾಲಿನ್ಯ ನಿಯಂತ್ರಣಕ್ಕೆ ಸರ್ಕಾರ ಏನು ಕ್ರಮ ಕೈಗೊಳ್ಳುತ್ತದೆ ಎಂಬುದನ್ನ ಕಾದು ನೋಡಬೇಕಿದೆ. ಇದನ್ನೂ ಓದಿ: ಡಾರ್ಕ್‌ನೆಟ್‌ ಬಳಸಿ ಮೋದಿ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಯತ್ನ- ರಣಾಂಗಣವಾದ ವಿವಿ ಕ್ಯಾಂಪಸ್

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • KRS ಜಲಾಶಯಕ್ಕೆ ಹೆಚ್ಚಿದ ಒಳಹರಿವು – ಕಾವೇರಿಕೊಳ್ಳದ ಜನರಿಗೆ ಪ್ರವಾಹ ಭೀತಿ

    KRS ಜಲಾಶಯಕ್ಕೆ ಹೆಚ್ಚಿದ ಒಳಹರಿವು – ಕಾವೇರಿಕೊಳ್ಳದ ಜನರಿಗೆ ಪ್ರವಾಹ ಭೀತಿ

    ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಅಧಿಕ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಕಾರಣ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದ್ದು, ಕಾವೇರಿ ಕೊಳ್ಳದ ಜನರಿಗೆ ಪ್ರವಾಹದ ಭೀತಿ ಎದುರಾಗಿದೆ.

    ಕೆಆರ್‌ಎಸ್ ಜಲಾಶಯದ ನೀರಿನ ಗರಿಷ್ಠ ಮಟ್ಟ 124.80 ಅಡಿಗಳಿದ್ದು, ಇಂದಿನ ನೀರಿನ ಮಟ್ಟ 124.76 ಅಡಿಗಳಷ್ಟಿದೆ. ಇಂದಿನ ಒಳಹರಿವಿನ ಪ್ರಮಾಣ 67,712 ಕ್ಯೂಸೆಕ್ ಹಾಗೂ ಹೊರ ಹರಿವಿನ ಪ್ರಮಾಣ 81,112 ಕ್ಯೂಸೆಕ್‌ನಷ್ಟಿದೆ. ಜಲಾಶಯದ ಒಟ್ಟು ಸಂಗ್ರಹ ಸಾಮರ್ಥ್ಯ 49.452 ಟಿಎಂಸಿ ಅಷ್ಟಿದ್ದು, ಇಂದಿನ ಸಂಗ್ರಹ 49.396 ಟಿಎಂಸಿ ಗಳಷ್ಟಿದೆ. ಇದನ್ನೂ ಓದಿ: ಕಿರಿಕ್ ಹುಡುಗಿ ಸಂಯುಕ್ತ ಹೆಗ್ಡೆ ಕಾಲಿಗೆ ಗಂಭೀರ ಪೆಟ್ಟು: ಯಶಸ್ವಿ ಶಸ್ತ್ರ ಚಿಕಿತ್ಸೆ

    ಕೆಆರ್‌ಎಸ್ ಜಲಾಶಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿರುವುದರಿಂದ 81 ಸಾವಿರ ಕ್ಯೂಸೆಕ್ ನೀರನ್ನು ಹೊರ ಬಿಡಲಾಗಿದ್ದು, ನಿಮಿಷಾಂಭ ದೇವಸ್ಥಾನದ ಸ್ನಾನ ಘಟ್ಟ ಹಾಗೂ ಅಕ್ಕ-ಪಕ್ಕದ ತೋಟಗಳು, ಮನೆಗಳು ಮುಳುಗಡೆಯಾಗಿವೆ. ಕಾವೇರಿ ನದಿಗೆ ಇಳಿಯದಂತೆ ಜಿಲ್ಲಾಡಳಿತದಿಂದ ಸಾರ್ವಜನಿಕರಿಗೆ ಎಚ್ಚರಿಕೆ.

    Live Tv
    [brid partner=56869869 player=32851 video=960834 autoplay=true]

  • ನಿರ್ಬಂಧದ ನಡುವೆ ಭರಚುಕ್ಕಿ ನೋಡಲು ಬಂದವರಿಗೆ ಬಸ್ಕಿ ಹೊಡೆಸಿದ ಪೊಲೀಸರು

    ನಿರ್ಬಂಧದ ನಡುವೆ ಭರಚುಕ್ಕಿ ನೋಡಲು ಬಂದವರಿಗೆ ಬಸ್ಕಿ ಹೊಡೆಸಿದ ಪೊಲೀಸರು

    ಚಾಮರಾಜನಗರ: ಕಾವೇರಿ ಹೊರಹರಿವು ಹೆಚ್ಚಾಗುತ್ತಿದ್ದಂತೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಭರಚುಕ್ಕಿ ಜಲಪಾತ ಭೋರ್ಗರೆಯುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ.

    ಕಾವೇರಿ ರುದ್ರ ರಮಣೀಯತೆ ಕಾಣಲು ನಿರ್ಬಂಧದ ನಡುವೆಯೂ ಜನರು ಕಳ್ಳದಾರಿ ಹಿಡಿದಿದ್ದಾರೆ. ಮಹಿಳೆಯರು ಸೇರಿದಂತೆ ಸೆಲ್ಫಿ ಹುಚ್ಚಾಟದಲ್ಲಿ ತೊಡಗಿದ್ದವರಿಗೆ ಕೊಳ್ಳೇಗಾಲ ಗ್ರಾಮಾಂತರ ಪೊಲೀಸರು ಕ್ಲಾಸ್ ತೆಗೆದುಕೊಂಡಿದ್ದಾರೆ. 30ಕ್ಕೂ ಹೆಚ್ಚು ಮಂದಿಗೆ ಬುದ್ಧಿವಾದ ಹೇಳಿ ವಾಪಸ್ ಕಳುಹಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಸಾವಿರ ಗಡಿದಾಟಿದ ಕೊರೊನಾ – ಬೆಂಗ್ಳೂರಲ್ಲಿ 1,013 ಕೇಸ್, 1,104 ಮಂದಿ ಡಿಸ್ಚಾರ್ಜ್

    ಕಳ್ಳದಾರಿ ಹಿಡಿದು ನಿರ್ಬಂಧವನ್ನು ಉಲ್ಲಂಘಿಸಿದವರ ಪೈಕಿ ಪುಂಡರಂತೆ ಕಂಡ 7-8 ಮಂದಿಗೆ ಪೊಲೀಸರು ಬಸ್ಕಿ ಹೊಡೆಸಿದ್ದಾರೆ. ಕಾನೂನು ಉಲ್ಲಂಘಿಸದಂತೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಭರಚುಕ್ಕಿಯಲ್ಲಿ ಸೆಲ್ಫಿ ತೆಗೆಯಲು ಬಂದವರು ಬಸ್ಕಿ ಹೊಡೆದು ವಾಪಸ್ ಆಗಿದ್ದಾರೆ. ಇದನ್ನೂ ಓದಿ: ಹಳೆ ಮೈಸೂರು ಜೀವನಾಡಿ KRS ಭರ್ತಿ- ನಾಳೆ ಸಿಎಂ ಬಾಗಿನ ಅರ್ಪಣೆ

    Live Tv
    [brid partner=56869869 player=32851 video=960834 autoplay=true]

  • ಕಾವೇರಿ ನದಿಯಲ್ಲಿ ಬಿಎಂಡಬ್ಲ್ಯೂ ಕಾರು ಮುಳುಗಿಸಿ ನಾಪತ್ತೆಯಾದ!

    ಕಾವೇರಿ ನದಿಯಲ್ಲಿ ಬಿಎಂಡಬ್ಲ್ಯೂ ಕಾರು ಮುಳುಗಿಸಿ ನಾಪತ್ತೆಯಾದ!

    ಮಂಡ್ಯ: ವ್ಯಕ್ತಿಯೊಬ್ಬ ದುಬಾರಿ ಬೆಲೆಯ ಬಿಎಂಡಬ್ಲ್ಯೂ ಕಾರನ್ನು ಕಾವೇರಿ ನದಿಯಲ್ಲಿ ಮುಳುಗಿಸಿ ನಾಪತ್ತೆಯಾಗಿದ್ದ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣದ ನಿಮಿಷಾಂಭ ದೇವಸ್ಥಾನದ ಕಾವೇರಿ ನದಿ ಬಳಿ ನಡೆದಿದೆ.

    ಶ್ರೀರಂಗಪಟ್ಟಣದ ಗಂಜಾಂನ ನಿಮಿಷಾಂಭ ದೇವಸ್ಥಾನದ ಕಾವೇರಿ ನದಿಯಲ್ಲಿ ಕಾರು ಇರುವುದನ್ನು ಕಂಡು ಆಶ್ಚರ್ಯಗೊಂಡ ಸ್ಥಳೀಯರು ಶ್ರೀರಂಗಪಟ್ಟಣ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ನದಿಯಲ್ಲಿ ಇದ್ದ ಕಾರನ್ನು ಹೊರಕ್ಕೆ ತೆಗೆದಿದ್ದಾರೆ. ಕಾರು ಹೊರಗೆ ತೆಗೆದ ನಂತರ ಅದು ಬಿಎಂಡಬ್ಲ್ಯೂ ಕಾರು ಆದ್ದರಿಂದ ಇಷ್ಟೊಂದು ದುಬಾರಿ ಬೆಲೆಯ ಕಾರನ್ನು ಯಾರು ನೀರಿನಲ್ಲಿ ಮುಳುಗಿಸಿ ಹೋಗಿದ್ದಾರೆ ಎಂದು ಪೊಲೀಸರಿಗೆ ಆಶ್ಚರ್ಯವಾಗಿದೆ. ಇದನ್ನೂ ಓದಿ: ವಿಷಕಾರಿದ್ದ ಅಫ್ರಿದಿ ವಿರುದ್ಧ ಅಮಿತ್ ಮಿಶ್ರಾ ಕಿಡಿ

    ನಂತರ ಶ್ರೀರಂಗಪಟ್ಟಣದ ಪಟ್ಟಣ ಪೊಲೀಸ್ ಠಾಣೆಗೆ ಕಾರನ್ನು ತೆಗೆದುಕೊಂಡು ಹೋದ ಪೊಲೀಸರು ಅಲ್ಲಿ ಕಾರಿನ ಬಾಗಿಲು ತೆಗೆದು ಈ ಕಾರು ಯಾರದ್ದು ಎಂದು ತಿಳಿಯಲು ಡಾಕ್ಯುಮೆಂಟ್ ಹುಡುಕಾಡಿದ್ದಾರೆ. ನಂತರ ಡಾಕ್ಯುಮೆಂಟ್‍ವೊಂದು ಸಿಕ್ಕಿದ್ದು ಅದರಲ್ಲಿ ಈ ಕಾರು ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್‍ನ ರೂಪೇಶ್ ಅವರದೆಂದು ಎಂದು ತಿಳಿದುಬಂದಿದೆ. ಇದನ್ನೂ ಓದಿ: ಪುಟಿನ್‌ನೊಂದಿಗೆ ನೇರ ಮಾತುಕತೆಗೆ ನಾನು ಸಿದ್ಧ: ಝೆಲೆನ್ಸ್ಕಿ

    ನಂತರ ರೂಪೇಶ್‍ಗೆ ಈ ಬಗ್ಗೆ ಮಾಹಿತಿ ಮುಟ್ಟಿಸಿ ಆತನನ್ನು ಪೊಲೀಸರು ವಿಚಾರಣೆ ನಡೆಸಿದ ವೇಳೆ, ಆತನೇ ಕಾರನ್ನು ನೀರಿನಲ್ಲಿ ಮುಳುಗಿಸಿದ್ದರ ಬಗ್ಗೆ ಒಪ್ಪಿಕೊಂಡಿದ್ದಾನೆ. ರೂಪೇಶ್ ತಾಯಿ ಕೆಲ ದಿನಗಳ ಹಿಂದೆ ಸಾವನ್ನಪ್ಪಿದ್ದರು, ಅಂದಿನಿಂದ ಇಂದಿನವರೆಗೆ ಆತನ ವರ್ತನೆ ಸರಿ ಇಲ್ಲ, ಮಾನಸಿಕ ಖಿನ್ನತೆಗೆ ಒಳಗಾಗಿದ್ದಾನೆ ಎಂದು ರೂಪೇಶ್ ಸಂಬಂಧಿಕರು, ಸ್ನೇಹಿತರು ಹೇಳಿದ್ದಾರೆ. ಅಲ್ಲದೇ ಆತ ಪೊಲೀಸ್ ಠಾಣೆಗೆ ಬಂದಾಗಿನಿಂದಲೂ ಸರಿಯಾಗಿ ವರ್ತನೆ ಮಾಡುತ್ತಿರಲಿಲ್ಲ. ಆತನಿಗೆ ಮಾನಸಿಕ ಖಿನ್ನತೆ ಇರುವ ಕಾರಣ ಹೀಗೆ ಮಾಡಿರಬಹುದು ಎಂದು ಹೇಳುತ್ತಿದ್ದಾರೆ.

  • ಕೊಡಗಿನ ದುಬಾರೆಯಲ್ಲಿ ಪ್ರವಾಸಿ ಬಾಲಕ ಸಾವು

    ಕೊಡಗಿನ ದುಬಾರೆಯಲ್ಲಿ ಪ್ರವಾಸಿ ಬಾಲಕ ಸಾವು

    ಮಡಿಕೇರಿ: ಪ್ರವಾಸಕ್ಕೆಂದು ಕುಟುಂಬ ಸದಸ್ಯರೊಂದಿಗೆ ಬಂದ ಬಾಲಕನೋರ್ವ ಕಾವೇರಿ ನದಿಯಲ್ಲಿ ಕಾಲು ಜಾರಿ ಬಿದ್ದು ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ದುಬಾರೆ ಪ್ರವಾಸಿತಾಣದಲ್ಲಿ ಇಂದು ನಡೆದಿದೆ.

    ನಿಖಿತ್ ಮಹಾಜನ್ (17) ಮೃತ ಬಾಲಕ. ಮಹಾರಾಷ್ಟ್ರದ ನಾಸಿಕ್‍ನಿಂದ ಕೊಡಗಿಗೆ 6 ಕುಟುಂಬಗಳ ಒಟ್ಟು 22 ಮಂದಿಯ ತಂಡ ಆಗಮಿಸಿತ್ತು. ಮಧ್ಯಾಹ್ನ ದುಬಾರೆಗೆ ಬಂದಿದ್ದ ಎಲ್ಲರೂ ನೀರಿಗಿಳಿದು ಆಟವಾಡುತ್ತಿದ್ದರು. ಈ ವೇಳೆ ಬಾಲಕ ನದಿಯಲ್ಲಿ ಸ್ನಾನ ಮಾಡಿ ಕಲ್ಲಿನ ಮೇಲೆ ಕುಳಿತುಕೊಳ್ಳುವಾಗ ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟಿದ್ದಾನೆ.

    ಸ್ಥಳದಲ್ಲಿದ್ದ ದುಬಾರೆ ಬೋಟಿಂಗ್ ಸಿಬ್ಬಂದಿ ಮೃತದೇಹವನ್ನು ಹೊರತೆಗೆದಿದ್ದು, ಕುಶಾಲನಗರ ಶವಾಗಾರಕ್ಕೆ ರವಾನಿಸಲಾಗಿದೆ. ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಕೊಡಗಿನಲ್ಲೇ ಬರಿದಾಗುತ್ತಿದೆ ಕಾವೇರಿ ನೀರು – ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಆತಂಕ

    ಕೊಡಗಿನಲ್ಲೇ ಬರಿದಾಗುತ್ತಿದೆ ಕಾವೇರಿ ನೀರು – ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಆತಂಕ

    ಮಡಿಕೇರಿ: ಮಳೆಗಾಲದಲ್ಲಿ ತುಂಬಿ ಹರಿದು ಪ್ರವಾಹ ಉಂಟುಮಾಡುತ್ತಿದ್ದ ಜೀವನದಿ ಕಾವೇರಿಯಲ್ಲಿ ಇದೀಗ ಮಾರ್ಚ್ ಆರಂಭದಲ್ಲೇ ನೀರಿನ ಹರಿವಿನ ಪ್ರಮಾಣ ಬಹುತೇಕ ಕ್ಷೀಣಗೊಳ್ಳುತ್ತಿರುವುದು ಕಂಡುಬಂದಿದೆ. ಇದೇ ರೀತಿ ಮುಂದುವರಿದಲ್ಲಿ ಒಂದು ವಾರದ ಅವಧಿಯಲ್ಲಿ ಕುಶಾಲನಗರ ಸೇರಿದಂತೆ ಸುತ್ತಮುತ್ತ ವ್ಯಾಪ್ತಿಯಲ್ಲಿ ನೀರಿನ ಹಾಹಾಕಾರ ಉಂಟಾಗುವ ಸಾಧ್ಯತೆ ಅಧಿಕವಾಗಿದೆ ಎಂದು ಸ್ಥಳೀಯರಲ್ಲಿ ಅತಂಕ ಮನೆ ಮಾಡಿದೆ.

    ಕೊಡಗಿನಲ್ಲಿ ಹುಟ್ಟಿ ನಾಡಿನ ಉದ್ದಗಲಕ್ಕೂ ಜೀವನದಿಯಾಗಿ ಹರಿದು ರೈತರಿಗೆ ವರದಾನವಾಗಿರುವ ಕಾವೇರಿಯ ಒಡಲು ಇದೀಗ ಕೊಡಗಿನಲ್ಲೇ ಬರಿದಾಗುತ್ತಿದೆ. ವರ್ಷದ 4 ತಿಂಗಳು ತುಂಬಿ ಹರಿಯುವ ಕಾವೇರಿಯಲ್ಲಿ ಇದೀಗ ನೀರಿನ ಹರಿವಿನ ಕೊರತೆ ಎದ್ದು ಕಾಣುತ್ತಿದೆ. ಈ ಸಾಲಿನಲ್ಲಿ ನಿರಂತರವಾಗಿ ಮಳೆ ಸುರಿದರೂ ಕಾವೇರಿ ನದಿ ಜಲಮೂಲಗಳು ಅಲ್ಲಲ್ಲಿ ಬತ್ತಿಹೋಗಿರುವ ದೃಶ್ಯ ಗೋಚರಿಸುತ್ತಿದೆ. ಇದನ್ನೂ ಓದಿ: ಬಾಂಗ್ಲಾ ಹಿಂದೂಗಳ ವಲಸೆ ಬಗ್ಗೆ ಸಿನಿಮಾ ಯಾಕಾಗಿಲ್ಲ: ಕಾಶ್ಮೀರ್‌ ಫೈಲ್ಸ್‌ಗೆ ಲೇಖಕಿ ತಸ್ಲೀಮಾ ನಸ್ರಿನ್ ಪ್ರತಿಕ್ರಿಯೆ

    ಕಳೆದ ಕೆಲವು ದಿನಗಳಿಂದ ಮೂಲ ಕಾವೇರಿಯಿಂದ ಕುಶಾಲನಗರ ವರೆಗಿನ ಕೃಷಿ ಮತ್ತು ವಾಣಿಜ್ಯ ಚಟುವಟಿಕೆಗಳಿಗೆ ಅವಶ್ಯವಿರುವ ನೀರಿಗಾಗಿ ಸಾವಿರಾರು ಸಂಖ್ಯೆಯಲ್ಲಿ ಮೋಟಾರ್ ಪಂಪುಗಳನ್ನು ಅಳವಡಿಸಲಾಗಿತ್ತು. ಈ ಮೂಲಕ ಸಾವಿರಾರು ಹೆಚ್‌ಪಿ ಸಾಮರ್ಥ್ಯದ ಮೋಟಾರ್‌ಗಳು ನದಿಯಿಂದ ನೀರನ್ನು ಹಾಯಿಸುತ್ತಿದ್ದು, ಇದರಿಂದ ನದಿಯಲ್ಲಿ ನೀರಿನ ಹರಿವು ಅಲ್ಲಲ್ಲಿ ಸ್ಥಗಿತಗೊಂಡಿದೆ. ನದಿ ತಟದಲ್ಲಿರುವ ಕೃಷಿಕರು ವಾಣಿಜ್ಯ ಬೆಳೆಗಳಿಗೆ ಹಾಗೂ ವಾಣಿಜ್ಯ ಕಟ್ಟಡಗಳಿಗೆ ನೀರು ಪಂಪ್ ಮಾಡುತ್ತಿದ್ದು, ಇದರಿಂದ ನದಿಯಲ್ಲಿ ನೀರಿನ ಕೊರತೆ ಉಂಟಾಗಿದೆ ಎಂದು ಜನರು ಅಭಿಪ್ರಾಯಪಟ್ಟಿದ್ದಾರೆ.

    ಕುಶಾಲನಗರ ಮತ್ತು ಮುಳ್ಳುಸೋಗೆ ವ್ಯಾಪ್ತಿಯ ಪಟ್ಟಣಕ್ಕೆ ದಿನನಿತ್ಯ 35 ಲಕ್ಷ ಲೀಟರ್ ನೀರಿನ ಅಗತ್ಯವಿದ್ದು, ಜಲಮಂಡಳಿ ಮೂಲಕ ಕೇವಲ 28 ಲಕ್ಷ ಲೀಟರ್ ನೀರನ್ನು ಒದಗಿಸಲಾಗುತ್ತಿದೆ. ಪ್ರತಿಯೊಬ್ಬ ನಾಗರಿಕನಿಗೆ ದಿನನಿತ್ಯ 135 ಲೀಟರ್ ನೀರು ಅವಶ್ಯಕತೆಯಿದ್ದು, ಇದನ್ನು ಪೂರೈಸಲು ಪ್ರಸಕ್ತ ಸ್ಥಿತಿಯಲ್ಲಿ ಸಾಧ್ಯವಾಗುತ್ತಿಲ್ಲ. ಇದನ್ನೂ ಓದಿ: ದಿ ಕಾಶ್ಮೀರ್ ಫೈಲ್ಸ್ ಮಾದರಿಯಲ್ಲಿ ಯಾವೆಲ್ಲ ಚಿತ್ರಗಳು ಬರಬೇಕು : ಪ್ರಕಾಶ್ ರೈ ಲಿಸ್ಟ್ ನೋಡಿ

    ಪಟ್ಟಣ ಪಂಚಾಯಿತಿಯಿಂದ ನೀರು ಸರಬರಾಜು ಮಾಡುತ್ತಿರುವ ಸಂದರ್ಭದಲ್ಲಿ ನೀರು ಪೋಲಾಗದಂತೆ ಪ್ರತಿಯೊಬ್ಬರೂ ಎಚ್ಚರವಹಿಸಬೇಕಾಗಿದೆ ಎಂದು ಅಧಿಕಾರಿಗಳು ತಿಳಿವಳಿಕೆ ನೀಡುತ್ತಿರುವುದು ಇತ್ತೀಚಿನ ದಿನಗಳಲ್ಲಿ ಸರ್ವೆ ಸಾಮಾನ್ಯವಾಗಿದೆ. ಕಳೆದ ನಾಲ್ಕು ವರ್ಷಗಳಲ್ಲಿ ಪ್ರವಾಹ ಬಂದು ಭೂಕುಸಿತವಾದ ಪರಿಣಾಮ ಸಾಕಷ್ಟು ಹೂಳು ಕಾವೇರಿ ನದಿಯ ಒಡಲು ಸೇರುವುದರಿಂದ ನೀರಿನ ಶೇಖರಣೆ ಸಾಕಷ್ಟು ಕುಂಠಿತವಾಗಿದೆ ಎನ್ನುವುದು ಈ ಭಾಗದ ಜನರ ಅಭಿಪ್ರಾಯ.

    ಒಟ್ಟಿನಲ್ಲಿ ಕಾವೇರಿ ನದಿಯ ನೀರಿನ ಪ್ರಮಾಣ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ಇದೇ ರೀತಿಯಲ್ಲಿ ನೀರಿನ ಹರಿವು ಅಲ್ಲಲ್ಲಿ ಸ್ಥಗಿತಗೊಂಡರೆ ಮುಂದಿನ ದಿನಗಳಲ್ಲಿ ಪ್ರಾಣಿ ಪಕ್ಷಿಗಳು ಸೇರಿದಂತೆ ಕುಶಾಲನಗರದ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶದಲ್ಲಿಯೂ ನೀರಿನ ಕೊರತೆ ಉಂಟಾಗುವುದರಲ್ಲಿ ಸಂಶಯವಿಲ್ಲ ಎನ್ನುವುದು ಗ್ರಾಮಸ್ಥರ ಅತಂಕಕ್ಕೆ ಕಾರಣವಾಗಿದೆ.

  • ಕಾವೇರಿ ನೀರಿಗಾಗಿ ದಂಡಿ ಸತ್ಯಾಗ್ರಹದಂತೆ ಹೋರಾಟ ಮಾಡುತ್ತೇನೆ: ಡಿ.ಕೆ.ಶಿವಕುಮಾರ್

    ಕಾವೇರಿ ನೀರಿಗಾಗಿ ದಂಡಿ ಸತ್ಯಾಗ್ರಹದಂತೆ ಹೋರಾಟ ಮಾಡುತ್ತೇನೆ: ಡಿ.ಕೆ.ಶಿವಕುಮಾರ್

    ಹಾಸನ: ಕಾವೇರಿ ನೀರಿಗಾಗಿ ಗಾಂಧೀಜಿ ಅವರ ದಂಡಿ ಸತ್ಯಾಗ್ರಹದ ರೀತಿ ಈ ಹೋರಾಟ ಮಾಡುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದರು.

    ಹಾಸನದ ಆರ್‌ಸಿ ರಸ್ತೆಯಲ್ಲಿರುವ ವೆಸ್ಲಿ ಚರ್ಚ್‍ಗೆ ಭೇಟಿ ನೀಡಿ ಎಲ್ಲರ ಪರವಾಗಿ ಶುಭಾಶಯ ತಿಳಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅವರವರ ಧರ್ಮ ಅವರು ಉಳಿಸಿಕೊಳ್ಳಬೇಕು. ಇದು ಮೂಲಭೂತವಾಗಿ ನಮಗೆ ಸಂವಿಧಾನದಲ್ಲಿ ಬಂದ ಹಕ್ಕು. ಪ್ರತಿಯೊಬ್ಬ ವ್ಯಕ್ತಿಯೂ ಪ್ರೀತಿ ವಿಶ್ವಾಸದಿಂದ ಬದುಕಲು ಎಲ್ಲ ಧರ್ಮದಲ್ಲೂ ಅವಕಾಶ ಕೊಟ್ಟಿದೆ ಎಂದರು. ಇದನ್ನೂ ಓದಿ: ಮಹಿಳೆಯಿಂದ ವಂಚನೆ – ಪೊಲೀಸ್ ಠಾಣೆ ಮೆಟ್ಟಿಲೇರಿದ ನಿರ್ದೇಶಕ ನಾಗಶೇಖರ್

    ಮೇಕೆದಾಟು ಯೋಜನೆ ಹೋರಾಟವನ್ನು ಡಿಕೆಶಿ ಹೈಜಾಕ್ ಮಾಡಿದ್ದಾರೆ ಎಂಬ ಎಚ್.ಡಿ.ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಕುಮಾರಸ್ವಾಮಿ ಅವರು ಬಹಳ ದೊಡ್ಡವರು. ಕುಮಾರಸ್ವಾಮಿ ಯಾವಾಗ ಹೋರಾಟ ಮಾಡಿದ್ದಾರೋ ಗೊತ್ತಿಲ್ಲ. ಆದರೆ ಕಾಂಗ್ರೆಸ್ ಹೋರಾಟ ಮಾಡಿದ ನಂತರ ಹೋರಾಟ ಮಾಡುವುದು ಅವರ ಮನಸ್ಸಿನಲ್ಲಿತ್ತು ಅಂತ ಅಧಿವೇಶನದಲ್ಲಿ ಹೇಳುತ್ತಾರೆ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ: ನಳಿನ್ ಕುಮಾರ್ ಕಟೀಲ್

    ವಿಧಾನ ಪರಿಷತ್‍ನಲ್ಲಿ ನಡೆದ ಗಲಾಟೆ ಬಗ್ಗೆ ಸ್ಪೀಕರ್ ಬಸವರಾಜ ಹೊರಟ್ಟಿ ಅಸಮಾಧಾನ ವ್ಯಕ್ತಪಡಿಸಿದರ ಬಗ್ಗೆ ಮಾತನಾಡಿದ ಅವರು, ಬಸವರಾಜ ಹೊರಟ್ಟಿ ಅವರು ರಾಜಕೀಯಕ್ಕೋಸ್ಕರ ಏನು ಮಾಡಿದರು ಸ್ವಾಗತಿಸುತ್ತೇವೆ ಎಂದರು. ಇದನ್ನೂ ಓದಿ: ಮೋದಿ ಫೋಬಿಯಾ ಎನ್ನುವಂತೆ ಕಾಂಗ್ರೆಸ್‍ನವರು ನಡೆದುಕೊಳ್ಳುತ್ತಿದ್ದಾರೆ: ಪ್ರಹ್ಲಾದ್ ಜೋಶಿ

    ಮಾಜಿ ಸಚಿವ ಎ.ಮಂಜು ಕಾಂಗ್ರೆಸ್ ಸೇರ್ಪಡೆ ವಿಚಾರ ಕುರಿತಂತೆ ಪ್ರತಿಕ್ರಿಯಿಸಿ, ನಮಗೆ ಯಾವುದೇ ಅರ್ಜಿ ಬಂದಿಲ್ಲ. ಅರ್ಜಿ ಬಂದರೆ ಅಲ್ಲಂ ವೀರಭದ್ರಪ್ಪ ಸಮಿತಿಗೆ ಹೋಗುತ್ತದೆ. ಅವರ ಮಗನಿಗೆ ನಾವು ಟಿಕೆಟ್ ಕೊಟ್ಟಿದ್ದೇವೆ. ನಾವೇ ಅವರನ್ನು ಮಂತ್ರಿ ಮಾಡಿದ್ದೇವೆ, ಎ.ಮಂಜು ನನ್ನ ಒಳ್ಳೆಯ ಸ್ನೇಹಿತ. ರಾಜಕೀಯದಲ್ಲಿ ಭಿನ್ನಾಭಿಪ್ರಾಯಗಳಿಲ್ಲ.

    2013ರಲ್ಲಿ ನಾವು ಅಧಿಕಾರಕ್ಕೆ ಬಂದ ಮೇಲೆ ಮೇಕೆದಾಟು ಯೋಜನೆಗೆ ಡಿಪಿಆರ್ ಸಿದ್ಧಪಡಿಸಿದ್ದೆವು. ಆಗ ಇದಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಿತ್ತು. ಕಾಂಗ್ರೆಸ್-ಜೆಡಿಎಸ್ ಸರ್ಕಾರ ಇದ್ದುದರಿಂದ ಎನ್ವಿರಾನ್ಮೆಂಟ್ ಕ್ಲಿಯರೆನ್ಸ್ ಕೊಡಲಿಲ್ಲ. ಇದು ಡಬಲ್ ಇಂಜಿನ್ ಸರ್ಕಾರ ಎಂದು ಬಿಜೆಪಿ ಆರೋಪಿಸಿತ್ತು ಎಂದು ತಿಳಿಸಿದರು.

    ರೈತರಿಗೆ ನ್ಯಾಯಯುತವಾದ ನೀರು ಸಿಗಬೇಕು, ಬೆಂಗಳೂರಿಗೆ ನಿಗದಿತ ನೀರು ಪೂರೈಕೆಯಾಗಬೇಕು. ನಮ್ಮ ನೀರು ನಮ್ಮ ಹಕ್ಕು, ಕಾವೇರಿ ನಮ್ಮದು. ತಮಿಳುನಾಡಿಗೆ ಏನು ಶೇರ್ ಹೋಗಬೇಕು ಅದಕ್ಕೆ ನಮ್ಮ ತಕರಾರಿಲ್ಲ. ಇಲ್ಲಿನ ಮುಖ್ಯಮಂತ್ರಿಗಳೊಂದಿಗೆ ಕೇಂದ್ರ ಸರ್ಕಾರ ಸಭೆ ನಡೆಸಿ ಒಂದೇ ದಿನದಲ್ಲಿ ಸಮಸ್ಯೆ ಬಗೆಹರಿಸಬಹುದಿತ್ತು. ಆದರೆ ಮಾಡಲಿಲ್ಲ. ಹೀಗಾಗಿ ಪಕ್ಷಭೇದ ಮರೆತು ಜನವರಿ 9 ರಿಂದ ಪಾದಯಾತ್ರೆ ಮೂಲಕ ಹೋರಾಟ ಮಾಡುತ್ತಿದ್ದೇವೆ. ರೈತ ಸಂಘಟನೆಗಳು, ಕಲಾವಿದರಿಗೆ, ಚಿತ್ರರಂಗದ ಎಲ್ಲಾ ಸ್ನೇಹಿತರಿಗೂ ಆಹ್ವಾನ ನೀಡಿದ್ದೇವೆ. ನೆಲ-ಜಲ ವಿಚಾರದಲ್ಲಿ ಎಲ್ಲರೂ ಪಕ್ಷಭೇದ ಮರೆತು ಹೋರಾಟ ಮಾಡಬೇಕು. ಈ ಹೋರಾಟ ಇತಿಹಾಸದ ಪುಟ ಸೇರಬೇಕು. ಗಾಂಧೀಜಿ ಅವರ ದಂಡಿ ಸತ್ಯಾಗ್ರಹದ ರೀತಿ ಈ ಹೋರಾಟ ಮಾಡುತ್ತಿದ್ದೇನೆ. ಒಂದು ದಿನ 18 ರಿಂದ 20 ಕಿಲೋಮೀಟರ್ ಪಾದಯಾತ್ರೆ ಮಾಡಲಿದ್ದೇನೆ.

  • ಮಳೆ ಅವಾಂತರ – ಕಾವೇರಿ ನದಿ ಪಾತ್ರ ಜನರಿಗೆ ಎಚ್ಚರಿಕೆ, ಕೆಆರ್‌ಪೇಟೆ ಬಸ್ ನಿಲ್ದಾಣ ಜಲಾವೃತ

    ಮಳೆ ಅವಾಂತರ – ಕಾವೇರಿ ನದಿ ಪಾತ್ರ ಜನರಿಗೆ ಎಚ್ಚರಿಕೆ, ಕೆಆರ್‌ಪೇಟೆ ಬಸ್ ನಿಲ್ದಾಣ ಜಲಾವೃತ

    ಮಂಡ್ಯ: ಕಳೆದ ಒಂದು ವಾರದಿಂದ ಸುರಿಯುತ್ತಿರುವ ಭಾರೀ ಮಳೆಗೆ ಹಳೆ ಮೈಸೂರು ಭಾಗದ ಜೀವನಾಡಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್‌ ಜಲಾಶಯ ಸಂಪೂರ್ಣವಾಗಿ ಭರ್ತಿಯಾಗಿದ್ದು, ಜಲಾಶಯದಿಂದ ಅಪಾರ ಪ್ರಮಾಣದಲ್ಲಿ ನೀರು ಬಿಡುವ ಸಾಧ್ಯತೆ ಇರುವ ಕಾರಣ ಕಾವೇರಿ ನದಿ ಪಾತ್ರದ ಜನರು ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಆದೇಶಿಸಲಾಗಿದೆ.

    ನವೆಂಬರ್ 2 ರಂದು ಕೆಆರ್‌ಎಸ್‌ ಭರ್ತಿಯಾಗಿದ್ದ ಹಿನ್ನೆಲೆ ಕೆಆರ್‌ಎಸ್‌ಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಬಾಗಿನ ಅರ್ಪಿಸಿದ್ದರು. ಇದಾದ ಬಳಿಕವೂ ಕಾವೇರಿ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯಿಂದ ಕೆಆರ್‌ಎಸ್‌ ಭರ್ತಿಯಾಗಿಯೇ ಉಳಿದಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಅಪಾರ ಪ್ರಮಾಣದ ಮಳೆ ಬಿದ್ದರೆ ಡ್ಯಾಂನಿಂದ ನದಿಗೆ ಅಧಿಕ ಪ್ರಮಾಣದಲ್ಲಿ ನೀರು ಹರಿಸುವ ಸಾಧ್ಯತೆ ಇದೆ. ಹೀಗಾಗಿ ನದಿ ಪಾತ್ರದ ಜನರು ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಬೇಕೆಂದು ಆದೇಶಿಸಲಾಗಿದೆ. ಅಲ್ಲದೇ ಶ್ರೀರಂಗಪಟ್ಟಣದ ನಿಮಿಷಾಂಭ ದೇವಸ್ಥಾನದ ಬಳಿ ಸ್ನಾನ ಮಾಡಲು ಭಕ್ತರು ಕಾವೇರಿ ನದಿಗೆ ಇಳಿಯದಂತೆ ಸೂಚಿಸಲಾಗಿದೆ. 124.80 ಅಡಿ ಗರಿಷ್ಠ ಸಾಮರ್ಥ್ಯವಿರುವ ಕೆಆರ್‌ಎಸ್‌ ಸಂಪೂರ್ಣ ಭರ್ತಿಯಾಗಿದ್ದು, ಡ್ಯಾಂಗೆ 17,135 ಕ್ಯೂಸೆಕ್ ನೀರು ಒಳಹರಿವಿದ್ದು, 18,469 ಕ್ಯೂಸೆಕ್ ನೀರನ್ನು ನದಿಗೆ ಹರಿಬಿಡಲಾಗುತ್ತಿದೆ.

    KRS

    ಮತ್ತೊಂದೆಡೆ ಒಂದು ವಾರದಿಂದ ಎಡಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಮಂಡ್ಯ ಜಿಲ್ಲೆಯಲ್ಲಿ ಹಲವು ಅವಘಡಗಳು ಸಂಭವಿಸಿದ್ದು, ಕಳೆದ ರಾತ್ರಿ ಬಿದ್ದ ಮಳೆಗೆ ಕೆಆರ್‌ಪೇಟೆಯಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಸಂಪೂರ್ಣವಾಗಿ ಜಲಾವೃತಗೊಂಡಿದೆ. ಇದನ್ನೂ ಓದಿ: ಸ್ವಂತ ಮಕ್ಕಳನ್ನು 50,000 ರೂ.ಗೆ ಮಾರಾಟ ಮಾಡಿದ ಪೊಲೀಸ್ – ವೀಡಿಯೋ ವೈರಲ್

    mandya rain

    ಕೆಆರ್‌ಪೇಟೆ ತಾಲೂಕು ವ್ಯಾಪ್ತಿಯಲ್ಲಿ ಬುಧವಾರ ರಾತ್ರಿ ಅಪಾರ ಪ್ರಮಾಣದ ಮಳೆ ಸುರಿದಿದೆ. ಇದರಿಂದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಸಂಪೂರ್ಣ ಜಲಾವೃತಗೊಂಡಿದೆ. ಹಳ್ಳದ ಪ್ರದೇಶದಲ್ಲಿ ಬಸ್ ನಿಲ್ದಾಣ ಇರುವ ಕಾರಣ ಏಕಾಏಕಿ ನೀರು ಹರಿದು ಬಂದ ಕಾರಣ ಬಸ್ ನಿಲ್ದಾಣ ಕೆರೆಯಂತಾಗಿದೆ.  ಇದನ್ನೂ ಓದಿ: ನನಗೆ ಸಲ್ಮಾನ್ ಜೊತೆ ನಟಿಸಲು ಇಷ್ಟವಿರಲಿಲ್ಲ ಎಂದ ಆಯುಷ್ ಶರ್ಮಾ

    mandya rain

    ಇದರಿಂದ ಬಸ್ ನಿಲ್ದಾಣದಲ್ಲಿರುವ ಬೇಕರಿ, ಹೋಟೆಲ್, ಅಂಗಡಿ ಮಳಿಗೆಗಳಿಗೆ ನೀರು ನುಗ್ಗಿದೆ. ಈ ಅವಘಡದಿಂದ ಪ್ರಯಾಣಿಕರು ಪರದಾಡವಂತಹ ಸ್ಥಿತಿ ನಿರ್ಮಾಣವಾಗಿದೆ. ಕಳೆದ ತಿಂಗಳು ಸಹ ಈ ಬಸ್ ನಿಲ್ದಾಣ ಸಂಪೂರ್ಣವಾಗಿ ಜಲಾವೃತಗೊಂಡಿತ್ತು. ಹೀಗಾಗಿ ಈ ಬಗ್ಗೆ ಶ್ರೀಘ್ರವೇ ಮುನ್ನೆಚ್ಚರಿಕಾ ಕ್ರಮವನ್ನು ತೆಗೆದುಕೊಳ್ಳಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಮತ್ತಷ್ಟು ಅವಘಡಗಳು ಸಂಭವಿಸುವ ಸಾಧ್ಯತೆ ಇದೆ.

  • KRS ನಿಂದ ನದಿಗೆ ನೀರು- ಕಾವೇರಿ ನದಿ ತೀರದ ಜನರಿಗೆ ಎಚ್ಚರಿಕೆ

    KRS ನಿಂದ ನದಿಗೆ ನೀರು- ಕಾವೇರಿ ನದಿ ತೀರದ ಜನರಿಗೆ ಎಚ್ಚರಿಕೆ

    ಮೈಸೂರು: ಕೃಷ್ಣರಾಜಸಾಗರ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ, ಜಲಾಶಯಕ್ಕೆ ಹೆಚ್ಚಿನ ನೀರು ಹರಿದು ಬರುತ್ತಿದೆ. ಕೃಷ್ಣರಾಜಸಾಗರ ಜಲಾಶಯದಿಂದ ಹೆಚ್ಚುವರಿ ನೀರನ್ನು ಕಾವೇರಿ ನದಿಗೆ ಬಿಡಲಾಗುವುದು ಎಂದು ನದಿ ತೀರದ ಜನರಿಗೆ ನೀರಾವರಿ ನಿಗಮ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ಬೆಂಗಳೂರು ನಗರ ಸೇರಿ 15 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

    KRS NOTICE

    ಕೃಷ್ಣರಾಜಸಾಗರ ಜಲಾಶಯದಿಂದ ಸುಮಾರು 10,000ದಿಂದ 20,000 ಕ್ಯೂಸೆಕ್ ನೀರನ್ನು ಕಾವೇರಿ ನದಿಗೆ ಬಿಡಲಾಗುವುದು. ಈ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇರುತ್ತದೆ ಎಂದು ತಿಳಿಸಿದೆ. ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ಮಳೆ ಅವಾಂತರ- ಹೂ ತೋಟಗಳು ಜಲಾವೃತ

    KRS

    ಕಾವೇರಿ ನದಿಯ ತಗ್ಗು ಪ್ರದೇಶದಲ್ಲಿ ಇರುವ ಮತ್ತು ನದಿಯ ಎರಡೂ ದಂಡೆಗಳಲ್ಲಿ ಇರುವ ಸಾರ್ವಜನಿಕರು ತಮ್ಮ ಆಸ್ತಿ ಪಾಸ್ತಿ ಹಾಗೂ ಜಾನುವಾರುಗಳ ರಕ್ಷಣೆಗೆ ಎಚ್ಚರಿಕೆ ವಹಿಸಿ ಸೂಕ್ತ ಮುಂಜಾಗ್ರತೆ ಕೈಗೊಂಡು ಸುರಕ್ಷಿತ ಸ್ಥಳಗಳಿಗೆ ಹೋಗಲು ಸೂಚನೆ ನೀಡಿದೆ.