Tag: ಕಾವೇರಿ ನೀರು ನಿಯಂತ್ರಣ ಸಮಿತಿ

  • ಬಂದ್ ಬಿಸಿ ನಡುವೆ ಮಂಗಳವಾರ CWRC ಸಭೆ – ಮತ್ತೆ ನೀರು ಹರಿಸಲು ಸೂಚಿಸುತ್ತಾ ನಿಯಂತ್ರಣ ಸಮಿತಿ?

    ಬಂದ್ ಬಿಸಿ ನಡುವೆ ಮಂಗಳವಾರ CWRC ಸಭೆ – ಮತ್ತೆ ನೀರು ಹರಿಸಲು ಸೂಚಿಸುತ್ತಾ ನಿಯಂತ್ರಣ ಸಮಿತಿ?

    ನವದೆಹಲಿ: ಕಾವೇರಿ ನೀರಿಗಾಗಿ (Kaveri Water) ಕರ್ನಾಟಕ ಮತ್ತು ತಮಿಳುನಾಡು ಎರಡೂ ರಾಜ್ಯಗಳಲ್ಲಿ ಪ್ರತಿಭಟನೆ ತೀವ್ರಗೊಳ್ಳುತ್ತಿದೆ. ಕಾವೇರಿ ನೀರು ಹರಿಸುವಂತೆ ತಮಿಳುನಾಡು (Tamil Nadu) ರೈತರು ಪ್ರತಿಭಟನೆ ನಡೆಸುತ್ತಿದ್ದರೇ ಇತ್ತ ಕರ್ನಾಟಕದಲ್ಲಿ (Karnataka) ನೀರು ಹರಿಸದಂತೆ ಒತ್ತಾಯಿಸಿ ಮಂಡ್ಯ ಬಂದ್ ಬಳಿಕ ಬೆಂಗಳೂರು ಬಂದ್‌ಗೂ (Bengaluru Bandh) ಕರೆ ನೀಡಲಾಗಿದೆ. ಎರಡೂ ರಾಜ್ಯಗಳಲ್ಲಿ ರೈತರ ಹೋರಾಟ ತೀವ್ರವಾಗುತ್ತಿರುವ ಹೊತ್ತಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿ ಮಂಗಳವಾರ ಸಭೆ ಕರೆದಿದೆ.

    ಮಂಗಳವಾರ ಬೆಳಗ್ಗೆ 11 ಗಂಟೆಗೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದೆ. ಸೆ.13ರಂದು ಹದಿನೈದು ದಿನ ನಿತ್ಯ 5,000 ಕ್ಯೂಸೆಕ್ ನೀರು ಹರಿಸುವಂತೆ ನೀಡಿದ ಆದೇಶ ಅಂತ್ಯವಾಗುತ್ತಿರುವ ಹಿನ್ನೆಲೆ ಈ ಸಭೆ ಕರೆಯಲಾಗಿದ್ದು, ಸಭೆಯಲ್ಲಿ ತಮಿಳುನಾಡಿಗೆ ನೀರು ಹರಿಸುವ ಬಗ್ಗೆ ಚರ್ಚೆ ನಡೆಯಲಿದೆ. ಇದನ್ನೂ ಓದಿ: ಹೈದರಾಬಾದ್‌ನಲ್ಲಿ ಚುನಾವಣೆಗೆ ನಿಂತು ನನ್ನ ವಿರುದ್ಧ ಹೋರಾಡಿ: ರಾಹುಲ್‌ಗೆ ಓವೈಸಿ ಚಾಲೆಂಜ್

    ಮಂಗಳವಾರದ ಸಭೆಯಲ್ಲಿ ನೀರು ಹರಿಸಲು ಸಾಧ್ಯವಿಲ್ಲ ಎಂದು ಹೇಳಲು ಕರ್ನಾಟಕ ನಿರ್ಧರಿಸಿದೆ. ನೀರಿನ ಕೊರತೆ ನಡುವೆ CWRC, CWMA ನೀಡಿರುವ ಎಲ್ಲಾ ಆದೇಶಗಳನ್ನು ಪಾಲಿಸಿದೆ. ಈಗ ನೀರಿನ ಕೊರತೆ ಹೆಚ್ಚಳವಾಗಿದ್ದು, ಕುಡಿಯುವ ನೀರಿನ ಸಮಸ್ಯೆ ಎದುರಾಗಲಿದೆ. ಸಣ್ಣ ಪ್ರಮಾಣದ ಕೃಷಿಗೂ ಸಮಸ್ಯೆಯಾಗುವ ಸಾಧ್ಯತೆಗಳಿದೆ. ಈಗಾಗಲೇ ರಾಜ್ಯದಲ್ಲಿ ಪ್ರತಿಭಟನೆಗಳು ಶುರುವಾಗಿದ್ದು, ಬೆಂಗಳೂರು ಬಂದ್‌ಗೂ ಕರೆ ನೀಡಲಾಗಿದೆ. ಈ ಹಂತದಲ್ಲಿ ನೀರು ಹರಿಸಲು ಸೂಚಿಸುವುದು ಸೂಚ್ಯವಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಲು ಅಧಿಕಾರಿಗಳು ನಿರ್ಧರಿಸಿದ್ದಾರೆ ಎಂದು ಮೂಲಗಳು ಹೇಳಿವೆ. ಇದನ್ನೂ ಓದಿ: ಬೆಂಗಳೂರು-ಹೈದರಾಬಾದ್‌ ಸೇರಿ 9 ವಂದೇ ಭಾರತ್‌ ರೈಲುಗಳಿಗೆ ಮೋದಿ ಚಾಲನೆ

    ಈ ನಡುವೆ ತಮಿಳುನಾಡು ಕೂಡಾ ಕಾವೇರಿ ನೀರಿಗಾಗಿ ಬೇಡಿಕೆ ಇಡಲಿದೆ. ಈವರೆಗೂ 5,000 ಕ್ಯೂಸೆಕ್ ನೀರು ನಿತ್ಯ ಹರಿಸಲು ಸೂಚಿಸಿದರೂ ಕರ್ನಾಟಕ ಕಡಿಮೆ ಪ್ರಮಾಣದ ನೀರು ಹರಿಸಿ ಅನ್ಯಾಯ ಮಾಡಿದೆ. ಬೆಳೆ ಒಣಗುತ್ತಿರುವ ಹಿನ್ನೆಲೆ ತಮಿಳುನಾಡಿನಲ್ಲೂ ರೈತರು ಪ್ರತಿಭಟನೆ ಆರಂಭಿಸಿದ್ದಾರೆ. ಈ ಹಿನ್ನೆಲೆ ಹೆಚ್ಚುವರಿ ನೀರು ಹರಿಸಲು ನಿರ್ದೇಶನ ನೀಡಬೇಕು ಎಂದು ಒತ್ತಾಯಿಸುವ ಸಾಧ್ಯತೆಯಿದೆ. ಇದನ್ನೂ ಓದಿ: ಕೆಎಸ್‌ಆರ್‌ಟಿಸಿ, ಬಿಎಂಟಿಸಿಗೆ ರಾಷ್ಟ್ರೀಯ ಪ್ರಶಸ್ತಿ

    ಕಾವೇರಿ ನೀರಿಗಾಗಿ ಎರಡು ರಾಜ್ಯಗಳಲ್ಲಿ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆ ಕಾವೇರಿ ನೀರು ನಿಯಂತ್ರಣ ಸಮಿತಿ ಇಕ್ಕಟ್ಟಿನ ಪರಿಸ್ಥಿತಿಯಲ್ಲಿದೆ. ಈ ಹಿನ್ನೆಲೆ ಮಳೆ ಪ್ರಮಾಣ, ಅಣೆಕಟ್ಟುಗಳಿಗೆ ಬರುತ್ತಿರುವ ಒಳ ಹರಿವು ಹಾಗೂ ಜಲಾಶಯಗಳಲ್ಲಿನ ನೀರಿನ ಮಟ್ಟವನ್ನು ಲೆಕ್ಕ ಹಾಕಿ ನೀರು ಬಿಡುವ ಬಗ್ಗೆ ಸೂಕ್ಷ್ಮವಾಗಿ ಪರಿಶೀಲಿಸಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಪ್ರಧಾನಿ ಮೋದಿಗೆ ‘ನಮೋ’ ಜೆರ್ಸಿ ಗಿಫ್ಟ್ ನೀಡಿದ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • CWMA ನೀಡಿರುವ ಆದೇಶ ಪಾಲಿಸಲಾಗದ ಆಜ್ಞೆ: ಬೊಮ್ಮಾಯಿ

    CWMA ನೀಡಿರುವ ಆದೇಶ ಪಾಲಿಸಲಾಗದ ಆಜ್ಞೆ: ಬೊಮ್ಮಾಯಿ

    ಬೆಂಗಳೂರು: ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಶಿಫಾರಸಿನಂತೆ ನಿತ್ಯ 5,000 ಕ್ಯೂಸೆಕ್ ಕಾವೇರಿ ನೀರು ಬಿಡಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ನೀಡಿರುವ ಆದೇಶ ಪಾಲಿಸಲು ಸಾಧ್ಯವಾಗದ ಆಜ್ಞೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅಭಿಪ್ರಾಯ ಪಟ್ಟಿದ್ದಾರೆ.

    ಈ ಸಂಬಂಧ ಟ್ವೀಟ್ (Tweet) ಮಾಡಿರುವ ಬೊಮ್ಮಾಯಿ, ಕಾನೂನು ಹೋರಾಟ ಮಾಡುವಂತೆ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು  ಆದೇಶದಂತೆ ತಮಿಳುನಾಡಿಗೆ (Tamil Nadu) ಪ್ರತಿದಿನ 5,000 ಕ್ಯೂಸೆಕ್ ನೀರು ಬಿಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶ ಮಾಡಿರುವುದು ಪಾಲನೆ ಮಾಡಲು ಸಾಧ್ಯವಿಲ್ಲದ ಒಂದು ಆಜ್ಞೆ ಎಂದಿದ್ದಾರೆ. ಇದನ್ನೂ ಓದಿ: ಕರ್ನಾಟಕ ಸರ್ಕಾರಕ್ಕೆ ಮತ್ತೆ ಕಾವೇರಿ ಶಾಕ್ – ತ.ನಾಡಿಗೆ ಪ್ರತಿದಿನ 5,000 ಕ್ಯೂಸೆಕ್ ನೀರು ಹರಿಸಲು ಆದೇಶ

    ರಾಜ್ಯ ಸರ್ಕಾರ ಕೂಡಲೇ ಸುಪ್ರೀಂ ಕೋರ್ಟ್‌ಗೆ ಹೋಗಿ ನೀರನ್ನು ಬಿಡಲು ಸಾಧ್ಯವಿಲ್ಲದ ಕಾರಣವನ್ನು ಮನವರಿಕೆ ಮಾಡಿಕೊಡಬೇಕು. ಈ ಆಜ್ಞೆ ಬರುವ ಮುಂಚೆ ನೀರು ಬಿಡಲು ಪ್ರಾರಂಭ ಮಾಡಿರುವ ರಾಜ್ಯ ಸರ್ಕಾರ ತನ್ನ ಕೈಯನ್ನು ತಾನೇ ಕಟ್ಟಿಕೊಂಡಿದೆ. ಕೂಡಲೇ ನೀರು ನಿಲ್ಲಿಸಿ ಸುಪ್ರೀಂ ಕೋರ್ಟ್‌ನಲ್ಲಿ (Supreme Court) ರಾಜ್ಯದ ಜನತೆಗೆ ನ್ಯಾಯ ಒದಗಿಸಲು ಕಾನೂನಾತ್ಮಕ ಹೋರಾಟ ಮಾಡಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು. ಇದನ್ನೂ ಓದಿ: ಪ್ರಜ್ವಲ್‌ ರೇವಣ್ಣಗೆ ರಿಲೀಫ್‌ – ಕರ್ನಾಟಕ ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ಮಧ್ಯಂತರ ತಡೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ತಮಿಳುನಾಡಿಗೆ ನೀರು ಬಿಟ್ಟರೆ ಬೆಂಗಳೂರಿಗೆ ಸಂಕಷ್ಟ

    ತಮಿಳುನಾಡಿಗೆ ನೀರು ಬಿಟ್ಟರೆ ಬೆಂಗಳೂರಿಗೆ ಸಂಕಷ್ಟ

    ಮಂಡ್ಯ: ಮುಂದಿನ ಹದಿನೈದು ದಿನ 5 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ (Tamil Nadu) ಬಿಟ್ಟರೆ 7 ಟಿಎಂಸಿ ನೀರು ಕೆಆರ್‍ಎಸ್‍ನಿಂದ (KRS) ಖಾಲಿಯಾಗಲಿದೆ. ಈ ಮೂಲಕ ಕಾವೇರಿ ನೀರು ನಿಯಂತ್ರಣ ಸಮಿತಿ ಸೂಚನೆ ಪಾಲಿಸಿದರೆ ಸಂಕಷ್ಟ ಎದುರಾಗುವ ಭೀತಿ ಶುರುವಾಗಿದೆ.

    ಸದ್ಯ ಡ್ಯಾಂನಲ್ಲಿ 24 ಟಿಎಂಸಿ ನೀರು ಮಾತ್ರ ಶೇಖರಣೆ ಇದೆ. ನೀರು ಬಿಟ್ಟರೆ ಅದು 17 ಟಿಎಂಸಿಗೆ ಇಳಿಯಲಿದೆ. 17 ಟಿಎಂಸಿಯಲ್ಲಿ 5 ಟಿಎಂಸಿ ನೀರು ಡೆಡ್ ಸ್ಟೋರೇಜ್ ಆಗಲಿದೆ. ಈ 5 ಟಿಎಂಸಿ ನೀರನ್ನ ಬಳಿಕೆ ಮಾಡಲು ಸಾಧ್ಯವಾಗುವುದಿಲ್ಲ. ಆಗ ಬಳಕೆಗೆ ಉಳಿಯುವುದು ಕೇವಲ 13 ಟಿಎಂಸಿ ನೀರು ಮಾತ್ರ. ಅಷ್ಟು ನೀರಿನಲ್ಲಿ ಕುಡಿಯಲೂ ಸಹ ನೀರು ಕೊಡುವುದು ಕಷ್ಟವಾಗಲಿದೆ. ಕಾವೇರಿ ನೀರನ್ನೇ ಅವಲಂಬಿಸಿರುವ ಸಿಲಿಕಾನ್ ಸಿಟಿ (Bengaluru) ಜನರಿಗೆ ಡಿಸೆಂಬರ್ ಕೊನೆಯ ವಾರದಲ್ಲೇ ನೀರಿನ ಸಮಸ್ಯೆ ಕಾಡಲಿದೆ.

    ಡ್ಯಾಂನ ಇಂದಿನ ನೀರಿನ ಮಟ್ಟ

    ಗರಿಷ್ಠ ಮಟ್ಟ- 124.80 ಅಡಿ
    ಇಂದಿನ ಮಟ್ಟ- 101.82 ಅಡಿ
    ಒಳ ಹರಿವು – 1891 ಕ್ಯೂಸೆಕ್
    ಹೊರ ಹರಿವು – 2342 ಕ್ಯೂಸೆಕ್
    ಗರಿಷ್ಠ ಸಂಗ್ರಹ ಸಾಮಥ್ರ್ಯ- 49.452 ಟಿಎಂಸಿ
    ಇಂದು ಸಂಗ್ರಹ ಇರುವ ನೀರು- 24.270 ಟಿಎಂಸಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]