Tag: ಕಾವ್ಯ ಶಾಸ್ತ್ರಿ

  • ತುಂಬು ಪ್ರೀತಿಯ ಸ್ವಾದವನ್ನು ಹೊತ್ತು ತಂದ ಹೊಸ ಕಥೆ ‘ಜಾನಕಿ ಸಂಸಾರ’

    ತುಂಬು ಪ್ರೀತಿಯ ಸ್ವಾದವನ್ನು ಹೊತ್ತು ತಂದ ಹೊಸ ಕಥೆ ‘ಜಾನಕಿ ಸಂಸಾರ’

    ನ್ನಡ ಕಿರುತೆರೆಯ ಕಡಲಲ್ಲಿ ಸ್ಟಾರ್ ಸುವರ್ಣ ವಾಹಿನಿಯು ಹೊಸ ಯೋಜನೆಗಳ ಜೊತೆ ವಿನೂತನ ಪರಿಕಲ್ಪನೆಗಳೊಂದಿಗೆ ಮನರಂಜನೆಯ ಕ್ರಾಂತಿಯನ್ನೇ ಹುಟ್ಟು ಹಾಕಿದೆ. ಈ ಸಾಲಿಗೆ ಸೇರ್ಪಡೆಯಾಗುತ್ತಿರುವ ಹೊಸ ಧಾರಾವಾಹಿ ‘ಜಾನಕಿ ಸಂಸಾರ’.

    ಇದೊಂದು ತುಂಬು ಕುಟುಂಬದ ಕಥೆ. ಈ ಮನೆಯ ಹಿರಿ ಸೊಸೆ ಜಾನಕಿ, ಇಡೀ ಸಂಸಾರದ ಹೊಣೆ ಹೊತ್ತವಳು. ಎಷ್ಟೇ ಕಷ್ಟ ಬಂದರೂ ಎದುರಿಸುವ ಛಲಗಾರ್ತಿ. ವಿದ್ಯಾವಂತೆಯಾಗಿರುವ ಜಾನಕಿ ತನ್ನ ಸಂಸಾರದ ಜೊತೆ ಉದ್ಯೋಗವನ್ನು ಸರಿ ಸಮಾನಾಗಿ ನಿಭಾಯಿಸುತ್ತಿರುತ್ತಾಳೆ. ಸದಾಕಾಲ ಮನೆ ಮಂದಿಯನ್ನು ಒಗ್ಗಟ್ಟಾಗಿಡಲು ಬಯಸುವ ಜಾನಕಿಯ ಸಂಸಾರಕ್ಕೆ ಮನೆಯೊಡೆಯುವ ವ್ಯಕ್ತಿಯ ಆಗಮನವಾದರೆ, ಮುಂದೆ ಜಾನಕಿ ತನ್ನ ಸಂಸಾರವನ್ನು ಹೇಗೆ ಕಾಪಾಡ್ತಾಳೆ? ಎಂಬುದು ಈ ಧಾರಾವಾಹಿಯ ಮುಖ್ಯ ಕಥಾ ಹಂದರ.

    ‘ಜಾನಕಿ ಸಂಸಾರ’ (Janaki Samsara) ಧಾರಾವಾಹಿಯು ಸುಂದರ ತಾರಾಗಣವನ್ನು ಹೊಂದಿದ್ದು, ಕನ್ನಡಿಗರ ಮನಸು ಕದ್ದ ಕಣ್ಮಣಿ, ‘ಕೃಷ್ಣರುಕ್ಮಿಣಿ’ ಧಾರಾವಾಹಿ ಖ್ಯಾತಿಯ ರುಕ್ಮಿಣಿ ಅಲಿಯಾಸ್ ಅಂಜನಾ ಶ್ರೀನಿವಾಸ್ ರವರು (Anjana Srinivas) 13 ವರ್ಷಗಳ ಬಳಿಕ ಮತ್ತೊಮ್ಮೆ ನಿಮ್ಮನ್ನೆಲ್ಲ ರಂಜಿಸಲು ‘ಜಾನಕಿ’ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

    ಸೂರಜ್ ಹೊಳಲು, ಕಾವ್ಯ ಶಾಸ್ತ್ರಿ(Kavya Shastry), ಬಾಲ ನಟಿ ಶ್ರೀ ದಿಶಾ, ಮರೀನ ತಾರಾ, ರವಿ ಭಟ್, ಚಂದನ್ ಸೇರಿದಂತೆ ಇನ್ನು ಅನೇಕ ಅನುಭವಿ ಕಲಾವಿದರು ಅಭಿನಯಿಸುತ್ತಿದ್ದಾರೆ.

    ಶುರುವಾಗುತ್ತಿದೆ ನೋವು-ನಲಿವನು ತೂಗೋ ಹೊಸ ಧಾರಾವಾಹಿ ‘ಜಾನಕಿ ಸಂಸಾರ’ ಇದೇ ಸೋಮವಾರದಿಂದ ರಾತ್ರಿ 8 ಗಂಟೆಗೆ ತಪ್ಪದೇ ವೀಕ್ಷಿಸಿ.

  • Bigg Boss: ಹೆಣ್ಣು ಮಕ್ಕಳ ಚಾರಿತ್ರ್ಯವಧೆಗೆ ಕಾವ್ಯ ಶಾಸ್ತ್ರಿ ಬೇಸರ

    Bigg Boss: ಹೆಣ್ಣು ಮಕ್ಕಳ ಚಾರಿತ್ರ್ಯವಧೆಗೆ ಕಾವ್ಯ ಶಾಸ್ತ್ರಿ ಬೇಸರ

    ಟಿ, ನಿರೂಪಕಿ ಕಾವ್ಯ ಶಾಸ್ತ್ರಿ (Kavya Shastry) ಇದೀಗ ಕಿರುತೆರೆಯ ಅತೀ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಬಗ್ಗೆ ಬೇಸರ ಹೊರಹಾಕಿದ್ದಾರೆ. ಈ ಶೋ ಮಕ್ಕಳಿಗೆ ತೋರಿಸದಂತೆ ನಟಿ ಮನವಿ ಮಾಡಿದ್ದಾರೆ. ಈ ಕುರಿತ ಅವರ ಸೋಷಿಯಲ್ ಮೀಡಿಯಾ ಪೋಸ್ಟ್ ಸಖತ್ ವೈರಲ್ ಆಗುತ್ತಿದೆ. ಇದನ್ನೂ ಓದಿ:ಬಿಗ್ ಬಾಸ್ ಮನೆಯಲ್ಲಿ ಸುದೀಪ್ ಮಿಮಿಕ್ರಿ ಮಾಡಿದ ತುಕಾಲಿ ಸಂತು

    ಈ ಬಾರಿ ಕನ್ನಡದ ಬಿಗ್ ಬಾಸ್ ಸೀಸನ್ (Bigg Boss Kannada 10) ನಿಜಕ್ಕೂ ಬೇಸರ ತಂದಿದೆ. ಶೋನಲ್ಲಿ ಉಳಿಯೋ ಭರದಲ್ಲಿ ಅವಾಚ್ಯ ಶಬ್ದಗಳಲ್ಲಿ ನಿಂದನೆ, ಚಾರಿತ್ರ‍್ಯವಧೆ, ಹೆಣ್ಣುಮಕ್ಕಳ ಮೇಲೆ ಏಕವಚನದ ಬಳಕೆ, ಮಾನಸಿಕವಾಗಿ ಇತರರನ್ನು ಕುಗ್ಗಿಸುವ ಪ್ರಯತ್ನ, ಜೋರು ಧ್ವನಿಯಲ್ಲಿ ಗದರುವುದು, ಹೆದರಿಸುವುದು, ಇವೆಲ್ಲವೂ ಹೆಚ್ಚಾಗಿದೆ. ಚಿಕ್ಕ ಮಕ್ಕಳಿರುವ ತಂದೆ-ತಾಯಂದಿರು ದಯವಿಟ್ಟು ಇಂತಹ ಕಾರ್ಯಕ್ರಮಗಳನ್ನು ಚಿಕ್ಕ ಮಕ್ಕಳ ಎದುರು ನೋಡದಿರಿ. ಇದು ನಿಮ್ಮ ಮಗುವಿನ ಮನಸ್ಸಿನ ಮೇಲೆ ಪರಿಣಾಮ ಬೀರುತ್ತದೆ. ಅವರು ಇದನ್ನೂ ಅನುಕರಣೆ ಮಾಡುವ ಸಾಧ್ಯತೆ ಹೆಚ್ಚಿರುತ್ತದೆ ಎಂದು ಕಾವ್ಯಾ ಶಾಸ್ತ್ರಿ ಬರೆದುಕೊಂಡಿದ್ದಾರೆ.

     

    View this post on Instagram

     

    A post shared by Kavya Shastry (@kaavya.shastry)

    ನಾನು ಯಾವುದೇ ಕಾರ್ಯಕ್ರಮದ ವಿರುದ್ಧವಾಗಿಲ್ಲ. ಚಿಕ್ಕ ಮಕ್ಕಳನ್ನು ಹೊಂದಿರುವ ಪೋಷಕರಲ್ಲಿ ಜಾಗೃತಿ ಮೂಡಿಸುತ್ತಿದ್ದೇನೆ. ಯಾವ ವಯೋಮಾನದ ಪ್ರೇಕ್ಷಕರಿಗೆ ಇದು ಸೂಕ್ತ ಎಂಬ ಸೂಚನೆಯನ್ನು ಸೀರಿಯಲ್‌ಗಳು ಕೂಡ ನೀಡುತ್ತವೆ. ಆದರೂ ಆ ಸೂಚನೆಯಲ್ಲಿ ನಿರ್ಲಕ್ಷಿಸಿ ನಾವು ಮನೆಯಲ್ಲಿ ಅದನ್ನು ವೀಕ್ಷಿಸುತ್ತೇವೆ. ನಿಮ್ಮ ಮಗು ಉದ್ದೇಶಪೂರ್ವಕವಾಗಿ ಇಂಥ ನೆಗೆಟಿವ್ ಕಂಟೆಂಟ್ ನೋಡದೇ ಇರಬಹುದು. ಕೇವಲ ಆಡಿಯೋ ಕೂಡ ಮಗುವಿನ ಮೇಲೆ ಪರಿಣಾಮ ಬೀರಬಹುದು. ನಿಮ್ಮ ಎನರ್ಜಿಯನ್ನು ಮಕ್ಕಳ ಬಗ್ಗೆ ಕಾಳಜಿ ವಹಿಸಿ ಎಂದು ನಟಿ ಪೋಸ್ಟ್ ಮಾಡಿದ್ದಾರೆ.

    ಶುಭವಿವಾಹ (Shubhavivah), ರಾಧಿಕಾ ಸೇರಿದಂತೆ ಹಲವು ಸೀರಿಯಲ್‌ಗಳಲ್ಲಿ ಮತ್ತು ಸಿನಿಮಾಗಳಲ್ಲಿ ಕಾವ್ಯ ನಟಿಸಿದ್ದಾರೆ. ಬಿಗ್ ಬಾಸ್ ಸೀಸನ್ 4ರಲ್ಲಿ ಕಾವ್ಯ ಶಾಸ್ತ್ರಿ ಸ್ಪರ್ಧಿಯಾಗಿ ಗಮನ ಸೆಳೆದರು. ಭುವನ್, ರೇಖಾ, ಕಾರುಣ್ಯ, ನಿರಂಜನ್ ದೇಶಪಾಂಡೆ, ಶಾಲಿನಿ ಕೂಡ ಈ ಸೀಸನ್‌ನಲ್ಲಿ ಇದ್ದರು.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸ್ಯಾಂಡಲ್ ವುಡ್ ನಲ್ಲಿ ಯಾರೆಲ್ಲ ಹೋಳಿ ಆಡಿದರು ಗೊತ್ತಾ?: ಹ್ಯಾಪಿ ಹೋಳಿ

    ಸ್ಯಾಂಡಲ್ ವುಡ್ ನಲ್ಲಿ ಯಾರೆಲ್ಲ ಹೋಳಿ ಆಡಿದರು ಗೊತ್ತಾ?: ಹ್ಯಾಪಿ ಹೋಳಿ

    ಚಂದನವನ ಮೊದಲೇ ಕಲರ್ ಫುಲ್ ಜಗತ್ತು. ಈ ಜಗತ್ತನ್ನು ಮತ್ತಷ್ಟು ಕಲರ್ ಫುಲ್ ಆಗಿ ಮಾಡಿದೆ ಹೋಳಿ ಹಬ್ಬ. ಸ್ಯಾಂಡಲ್ ವುಡ್ ಮತ್ತು ಕಿರುತೆರೆಯ ಅನೇಕ ತಾರೆಯರು ಇಂದು ಹೋಳಿ ಹಬ್ಬವನ್ನು ಆಚರಿಸಿದ್ದಾರೆ. ಈ ಮೂಲಕ ಎಲ್ಲರ ಬದುಕೂ ಬಣ್ಣವಾಗಿರಲಿ ಎಂದು ಹಾರೈಸಿದ್ದಾರೆ

    ಅವನೇ ಶ್ರೀಮನ್ ನಾರಾಯಣ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿರುವ ಶಾನ್ವಿ ಶ್ರೀವಾತ್ಸ ಅವರ ಕುಟುಂಬದೊಂದಿಗೆ ಹೋಳಿ ಆಚರಿಸಿದ್ದಾರೆ. ತಾಯಿ ಮತ್ತು ಕುಟುಂಬದ ಅನೇಕ ಸದಸ್ಯರಿಗೆ ಬಣ್ಣ ಹಚ್ಚವ ಮೂಲಕ ಹೋಳಿ ಆಚರಿಸಿದ್ದಾರೆ. ಇದನ್ನೂ ಓದಿ : ಪುನೀತ್ ಗೆ ಮರಣೋತ್ತರ ‘ ಸಹಕಾರ ರತ್ನ’ ಪ್ರಶಸ್ತಿ: ಸಚಿವ ಎಸ್.ಟಿ.ಸೋಮಶೇಖರ್ ಘೋಷಣೆ

    ಕನ್ನಡ ಕಿರುತೆರೆ ನಟಿ, ಬಿಗ್ ಬಾಸ್ ಖ್ಯಾತಿಯ ಕಾವ್ಯ ಶಾಸ್ತ್ರೀ ಕೂಡ ಇಂದು ಸಡಗರದಿಂದ ಹೋಳಿ ಹಬ್ಬವನ್ನು ಆಚರಿಸಿದ್ದಾರೆ. ಫ್ರೆಂಡ್ಸ್ ಮತ್ತು ಕುಟುಂಬದ ಇತರ ಸದಸ್ಯರ ಜೊತೆ ಅವರು ಬಣ್ಣವನ್ನು ವಿನಿಮಯ ಮಾಡಿಕೊಂಡಿದ್ದಾರೆ.

    ಕಿರುತೆರೆ ನಟಿ, ಲಕ್ಷ್ಮೀ ಬಾರಮ್ಮ ಧಾರಾವಾಹಿ ಖ್ಯಾತಿಯ ನೇಹಾ ಗೌಡ ಹೋಳಿ ಹಬ್ಬಕ್ಕೆ ಎಲ್ಲರಿಗೂ ಶುಭಾಶಯ ಕೋರಿದ್ದಾರೆ. ವಿದೇಶದಿಂದ ವಾಪಸ್ಸಾಗಿರುವ ಅವರು ಕುಟುಂಬದೊಂದಿಗೆ ಹೋಳಿಯನ್ನು ಆಚರಿಸಿದ್ದಾರೆ. ಇದನ್ನೂ ಓದಿ : ಕೆಜಿಎಫ್ 2.. ಹುಷಾರ್, ಮಾರ್ಚ್ 21ಕ್ಕೆ ತೂಫಾನ್ ಅಪ್ಪಳಿಸಲಿದೆ!

    ಜಾಕಿ, ಭಜರಂಗಿ 2 ಸೇರಿದಂತೆ ಅನೇಕ ಕನ್ನಡ ಸಿನಿಮಾಗಳನ್ನು ಮಾಡಿರುವ, ಮಲಯಾಳಂ ನಟಿ, ಕರ್ನಾಟಕದ ಸೊಸೆ ಭಾವನಾ ಮೆನನ್ ಕೂಡ ಹೋಳಿ ಹಬ್ಬಕ್ಕೆ ಶುಭಾಶಯ ಕೋರಿದ್ದಾರೆ. ಭಜರಂಗಿ 2 ಸಿನಿಮಾದಲ್ಲಿಯ ಹೋಳಿ ದೃಶ್ಯದ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ.

    ಪಾರು ಧಾರಾವಾಹಿಯ ಖ್ಯಾತಿಯ ನಟ ಶರತ್ ಪದ್ಮನಾಭ್ ಕೂಡ ಈ ಬಾರಿ ಹೋಳಿಯನ್ನು ಸಡಗರದಿಂದ ಆಚರಿಸಿದ್ದಾರೆ. ಗೆಳೆಯರು ಮತ್ತು ಆಪ್ತರೊಂದಿಗೆ ಹೋಳಿ ಆಡಿರುವ ಅವರು ಆ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. ಇದನ್ನೂ ಓದಿ : ಪಠಾಣ್ ಚಿತ್ರಕ್ಕಾಗಿ ಬಿಕಿನಿ ತೊಟ್ಟ ದೀಪಿಕಾ ಪಡುಕೋಣೆ: ಫೋಟೋ ಲೀಕ್

    ಬಿಗ್ ಬಾಸ್ ಖ್ಯಾತಿಯ ತೇಜಸ್ವಿನಿ ಪ್ರಕಾಶ್ ಕೂಡ ಹೋಳಿಯನ್ನು ಕುಟುಂಬದೊಂದಿಗೆ ಆಚರಿಸಿದ್ದಾರೆ. ಆ ಫೋಟೋವನ್ನು ಅಭಿಮಾನಿಗಳಿಗಾಗಿ ಶೇರ್ ಮಾಡಿದ್ದು, ಹೋಳಿ ಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ.

    ಕನ್ನಡದ ಖ್ಯಾತ ನಟ ವಸಿಷ್ಠ ಸಿಂಹ ಕೂಡ ಇಂದು ಬೆಂಗಳೂರಿನಲ್ಲಿ ಮಕ್ಕಳೊಂದಿಗೆ ಹೋಳಿ ಆಡಿದ್ದಾರೆ. ಮಕ್ಕಳ ಜತೆ ಮಕ್ಕಳಾಗಿ ಅವರು ಬಣ್ಣ ಹಚ್ಚಿದ್ದಾರೆ. ಆ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಾಕಿ ಶುಭಾಶಯ ಹೇಳಿದ್ದಾರೆ.