Tag: ಕಾಶಿನಾಥಯ್ಯ

  • ನ್ಯಾಯಾಲಯದ ಮೇಲೆ ನಂಬಿಕೆಯಿದೆ, ದರ್ಶನ್ ಆರೋಗ್ಯ ಚನ್ನಾಗಿ ಆಗಲಿ: ರೇಣುಕಾಸ್ವಾಮಿ ತಂದೆ ಭಾವುಕ

    ನ್ಯಾಯಾಲಯದ ಮೇಲೆ ನಂಬಿಕೆಯಿದೆ, ದರ್ಶನ್ ಆರೋಗ್ಯ ಚನ್ನಾಗಿ ಆಗಲಿ: ರೇಣುಕಾಸ್ವಾಮಿ ತಂದೆ ಭಾವುಕ

    ಚಿತ್ರದುರ್ಗ: ಅನಾರೋಗ್ಯ ಕಾರಣಕ್ಕೆ ದರ್ಶನ್‌ಗೆ (Darshan) ಮಧ್ಯಂತರ ಜಾಮೀನು ಮಂಜೂರಾಗಿದೆ. ನಟ ದರ್ಶನ್ ಅವರ ಆರೋಗ್ಯ ಚನ್ನಾಗಿ ಆಗಲಿ. ನ್ಯಾಯಾಲಯದ ಬಗ್ಗೆ ನಮಗೆ ಅಪಾರ ಗೌರವ ಇದೆ ಎಂದು ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ ಹಾಗೂ ರೇಣಕಾಸ್ವಾಮಿ ಚಿಕ್ಕಪ್ಪ ಷಡಕ್ಷರಿ ಮಾತನಾಡಿದ್ದಾರೆ.

    ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ (Renukaswamy Murder Case) ಬಂಧನಕ್ಕೆ ಒಳಗಾದ ನಟ ದರ್ಶನ್‌ಗೆ ಹೈಕೋರ್ಟ್‌ (High Court) 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ರೇಣುಕಾಸ್ವಾಮಿ ತಂದೆ ಚಿತ್ರದುರ್ಗದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ: Darshan Case File | ಜೂನ್‌ 8 ರಿಂದ ಅ.30ರ ವರೆಗೆ ಏನೆಲ್ಲಾ ಆಯ್ತು?

    ನ್ಯಾಯಾಲಯದ ಬಗ್ಗೆ ನಮಗೆ ಅಪಾರ ಗೌರವ, ಭರವಸೆ ಇದೆ. ಅನಾರೋಗ್ಯ ಕಾರಣಕ್ಕೆ ಮಧ್ಯಂತರ ಜಾಮೀನು ಮಂಜೂರಾಗಿದೆ. ನಟ ದರ್ಶನ್ ಅವರ ಆರೋಗ್ಯ ಚನ್ನಾಗಿ ಆಗಲಿ, ಚೇತರಿಸಿಕೊಳ್ಳಲಿ. ಎಸ್‌ಪಿಪಿ ಪ್ರಸನ್ನ ಕುಮಾರ್ ಉತ್ತಮವಾಗಿ ವಾದ ಮಂಡಿಸಿದ್ದಾರೆ. ಪಾಸ್‌ಪೋರ್ಟ್ ವಶಕ್ಕೆ ಪಡೆದು ಕೋರ್ಟ್‌ ಮಧ್ಯಂತರ ಜಾಮೀನು ನೀಡಿದೆ. ತಪ್ಪಿತಸ್ಥರಿಗೆ ತಕ್ಕ ಶಿಕ್ಷೆ ಆಗುವ ನಂಬಿಕೆ ನಮಗಿದೆ ಎಂದು ಭಾವುಕರಾಗಿದ್ದಾರೆ. ಇದನ್ನೂ ಓದಿ: ದರ್ಶನ್‌ಗೆ ಜಾಮೀನು – ಹೈಕೋರ್ಟ್‌ ವಿಧಿಸಿದ ಆ 8 ಷರತ್ತುಗಳೇನು?

    ನಮಗೆ ಮೊದಲಿನಿಂದಲೂ ಮನಸ್ಸಿಗೆ ನೋವಾಗಿದೆ. ಜಾಮೀನು ಮಂಜೂರು ಆಗಿರುವುದು ಕಾನೂನು ವ್ಯವಸ್ಥೆಯಲ್ಲಿ. ಕೋರ್ಟ್‌ ತೀರ್ಪಿನ ಬಗ್ಗೆ ಮಾತನಾಡೋದಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: 5 ತಿಂಗಳ ಬಳಿಕ ದರ್ಶನ್ ರಿಲೀಸ್ – ಹೈಕೋರ್ಟ್‌ನಿಂದ 6 ವಾರಗಳ ಜಾಮೀನು ಮಂಜೂರು

  • ದರ್ಶನ್, ಪವಿತ್ರಾಗೌಡ ಜಾಮೀನು ಅರ್ಜಿ ವಜಾ; ನ್ಯಾಯಾಲಯದ ತೀರ್ಪನ್ನು ಗೌರವಿಸ್ತೇವೆ: ರೇಣುಕಾಸ್ವಾಮಿ ತಂದೆ

    ದರ್ಶನ್, ಪವಿತ್ರಾಗೌಡ ಜಾಮೀನು ಅರ್ಜಿ ವಜಾ; ನ್ಯಾಯಾಲಯದ ತೀರ್ಪನ್ನು ಗೌರವಿಸ್ತೇವೆ: ರೇಣುಕಾಸ್ವಾಮಿ ತಂದೆ

    ಚಿತ್ರದುರ್ಗ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ (Renukaswamy Murder Case) ಪವಿತ್ರಾಗೌಡ (Pavithra Gowda) ಹಾಗೂ ದರ್ಶನ್ (Darshan) ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ ಈ ಕುರಿತು ಪ್ರತಿಕ್ರಿಯಿಸಿದ್ದು, ನ್ಯಾಯಾಂಗ, ಪೊಲೀಸ್ ಇಲಾಖೆ ಮೇಲೆ ನಮಗೆ ನಂಬಿಕೆ, ಗೌರವ ಇದೆ. ನ್ಯಾಯಾಲಯದ ತೀರ್ಪನ್ನು ಗೌರವಿಸುತ್ತೇವೆ ಎಂದಿದ್ದಾರೆ.

    ಡಿ ಗ್ಯಾಂಗ್‌ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಪವಿತ್ರಾಗೌಡ ಹಾಗೂ ಎ2 ದರ್ಶನ್ ಜಾಮೀನು ಅರ್ಜಿಯನ್ನು ನ್ಯಾಯಾಲಯ ಸೋಮವಾರ ವಜಾ ಗೊಳಿಸಿದೆ. ಈ ಕುರಿತು ಚಿತ್ರದುರ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕಾಶಿನಾಥಯ್ಯ, ಎಸ್‌ಪಿಪಿ ಪ್ರಸನ್ನ ಅವರಿಂದ ಉತ್ತಮ ವಾದ ಮಂಡನೆ ಆಗಿದೆ. ಆರೋಪಿಗಳ ಜಾಮೀನು ಅರ್ಜಿ ವಜಾ ಆಗಿದೆ. ನ್ಯಾಯಾಂಗದ ಮೇಲೆ ಗೌರವವಿದೆ. ಜಾಮೀನು ಅರ್ಜಿ ವಜಾಗೊಳಿಸಿದ್ದನ್ನು ನಾವು ಸ್ವಾಗತಿಸುತ್ತೇವೆ. ಆರೋಪಿಗಳಿಗೆ ಶಿಕ್ಷೆ ಬಗ್ಗೆ ಕೋರ್ಟ್ ಸೂಕ್ತ ತೀರ್ಮಾನ ಮಾಡಲಿದೆ ಎಂದು ಹೇಳಿದರು. ಇದನ್ನೂ ಓದಿ: ರಾಜ್ಯಪಾಲ ಗೆಹ್ಲೋಟ್‌ಗೆ ಈಗ Z ಶ್ರೇಣಿಯ ಭದ್ರತೆ

    ಇನ್ನು ಈ ಕುರಿತು ರೇಣುಕಾಸ್ವಾಮಿ ಚಿಕ್ಕಪ್ಪ ಷಡಕ್ಷರಯ್ಯ ಮಾತನಾಡಿ, ನ್ಯಾಯಾಂಗ, ಪೊಲೀಸ್ ಇಲಾಖೆ ಮೇಲೆ ವಿಶ್ವಾಸವಿದೆ. ಹತ್ಯೆ ಪ್ರಕರಣದ ಆರೋಪಿಗಳಿಗೆ ತಕ್ಕ ಶಿಕ್ಷೆ ಆಗಲಿ. ಶೀಘ್ರಗತಿ ಕೋರ್ಟ್ ಮೂಲಕ ಪ್ರಕರಣದ ಬಗ್ಗೆ ತನಿಖೆ ಆಗಲಿ. ರೇಣುಕಾಸ್ವಾಮಿ ಪತ್ನಿ ಸಹನಾಗೆ ಮುಂದಿನ ತಿಂಗಳು ಹೆರಿಗೆ ಆಗಲಿದೆ. ಸರ್ಕಾರ ಸಹನಾಳ ಜೀವನೋಪಾಯಕ್ಕೆ ನೆರವು ನೀಡಬೇಕಿದೆ. ಸರ್ಕಾರಿ ನೌಕರಿ ನೀಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಿ ಎಂದರು. ಇದನ್ನೂ ಓದಿ: ಕೆಲವೇ ದಿನಗಳಲ್ಲಿ ಕೆಲವು ರಾಜಕೀಯ ಮುಖಂಡರು ಲೈನ್‌ನಲ್ಲಿ ನಿಲ್ಲುವ ಕಾಲ ಬರುತ್ತೆ – ಸಿಎಂ ವಿರುದ್ಧ ರೇವಣ್ಣ ಕಿಡಿ