ಲಕ್ನೋ: ಕಾಶಿ ವಿಶ್ವನಾಥ ಧಾಮದಲ್ಲಿ ಕೆಲಸಮಾಡುವ ಕಾರ್ಮಿಕರು ಕೊರೆಯುವ ಚಳಿಯಲ್ಲಿಯೂ ಬರಿಗಾಲಿನಲ್ಲಿ ಇರುವುದನ್ನು ತಿಳಿದ ಪ್ರಧಾನಿ ನರೇಂದ್ರ ಮೋದಿ ಅವರಿಗಾಗಿ 100 ಜೊತೆ ಸೆಣಬಿನ ಪಾದಕ್ಷೆಗಳನ್ನು ಕಳುಹಿಸಿದ್ದಾರೆ.
ಕಾಶಿ ವಿಶ್ವನಾಥ ಕಾರಿಡಾರ್ ಉದ್ಘಾಟನೆಗೆ ವಾರಣಾಸಿಗೆ ಭೇಟಿ ನೀಡಿದ ಮೋದಿ ದೇವಾಲಯದಲ್ಲಿ ಕೆಲಸ ಮಾಡುವ ಕಾರ್ಮಿಕರಲ್ಲಿ ಹೆಚ್ಚಿನವರು ಬರಿಗಾಲಿನಲ್ಲಿ ಇರುತ್ತಾರೆ ಎಂಬುದನ್ನು ತಿಳಿದುಕೊಂಡಿದ್ದರು. ಹೀಗಾಗಿ ಅವರಿಗಾಗಿ 100 ಜೊತೆ ಪಾದರಕ್ಷೆಗಳನ್ನು ಕಳುಹಿಸಿದ್ದಾರೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಪ್ರಧಾನಿಗೆ ಭದ್ರತಾ ವೈಫಲ್ಯ – 3 ನಿವೃತ್ತ ನ್ಯಾಯಾಧೀಶರ ಸಮಿತಿಯಿಂದ ತನಿಖೆ
ದೇವಸ್ಥಾನದ ಆವಣದಲ್ಲಿ ಚರ್ಮ ಅಥವಾ ರಬ್ಬರ್‌ನಿಂದ ತಯಾರಿಸಿದ ಪಾದರಕ್ಷೆಗಳನ್ನು ಧರಿಸುವುದು ನಿಷೇಧಿಸಲಾಗಿದೆ. ಈ ಕ್ರಮವನ್ನು ದೇವಸ್ಥಾನದ ಅರ್ಚಕರು, ಭದ್ರತಾ ಸಿಬ್ಬಂದಿ, ನೈರ್ಮಲ್ಯ ಕಾರ್ಯಕರ್ತರು ಹಾಗೆಯೇ ಭಕ್ತರು ಚಾಚು ತಪ್ಪದೇ ಪಾಲಿಸುತ್ತಾರೆ. ಹೀಗಾಗಿ ಪ್ರಧಾನಿ ಸೆಣಬಿನಿಂದ ತಯಾರಿಸಿದ ಪಾದರಕ್ಷೆಗಳನ್ನು ಉಡುಗೊರೆಯಾಗಿ ನೀಡಿದ್ದಾರೆ. ಇದನ್ನೂ ಓದಿ: ಮೋದಿ, ಯೋಗಿ ಫೋಟೋಗಳೊಂದಿಗೆ ಉಚಿತ ಆಹಾರ ಪ್ಯಾಕೆಟ್‍ಗಳನ್ನು ವಿತರಿಸುವಂತಿಲ್ಲ
ಕಾಶಿ ವಿಶ್ವನಾಥ ಕಾರಿಡರ್ ಉದ್ಘಾಟನೆಯ ಸಮಯದಲ್ಲಿ ಪ್ರಧಾನಿ ಮೋದಿ ಕಾರ್ಮಿಕರು ಜೊತೆ ಗುಂಪು ಫೋಟೋ ಕ್ಲಿಕ್ಕಿಸಿಕೊಂಡಿದ್ದರು. ಅಷ್ಟೇ ಅಲ್ಲದೇ ಅವರ ಜೊತೆ ಭೋಜನ ವಿದಿದ್ದರು.
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಕನಸು ನನಸಾಗಿದೆ. ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದ ಸಂಸದರಾಗಿರುವ ಮೋದಿ ಕಾಶಿ ವಿಶ್ವನಾಥ ದೇವಾಲಯವನ್ನು ಜೀರ್ಣೋದ್ಧಾರ ಮಾಡಿದ್ದಾರೆ.
2014ರಲ್ಲಿ ಪ್ರಧಾನಿ ನರೇಂದ್ರ ಮೋದಿ ವಾರಣಾಸಿ ನಗರವನ್ನು ಅಭಿವೃದ್ಧಿಗೊಳಿಸಿ, ಸ್ಮಾರ್ಟ್ ಸಿಟಿಯನ್ನಾಗಿ ಮಾಡುವುದಾಗಿ ಹೇಳಿದ್ದರು. ಈ ಹೆಸರಿನಲ್ಲಿ 2016ರಲ್ಲಿ ಯೋಜನೆಯನ್ನು ಅಧಿಕೃತವಾಗಿ ಪ್ರಾರಂಭಿಸಲಾಗಿತ್ತು. ತಮ್ಮ ಕನಸಿನ ವಾರಣಾಸಿಯ ನವೀಕರಣಕ್ಕೆ ಮೋದಿಯವರು ಜಪಾನ್‌ನ ಮೊದಲ ಪ್ರವಾಸದಲ್ಲೆ ಉಲ್ಲೇಖಿಸಿದ್ದರು. ಭಾರತದ ವಾರಣಾಸಿಯನ್ನು ಜಪಾನಿನ ಟೋಕಿಯೋದಂತೆ ಅಭಿವೃದ್ದಿ ಪಡಿಸುವುದಾಗಿ ತಿಳಿಸಿದ್ದರು.
ಕಾಶಿ ವಿಶ್ವನಾಥ ದೇವಾಲಯ:
2019ರಲ್ಲಿ ಕಾಶಿ ವಿಶ್ವನಾಥ ಕಾರಿಡಾರ್ ಯೋಜನೆಗೆ ಪ್ರಧಾನಿ ಶಂಕು ಸ್ಥಾಪನೆ ಮಾಡಿದ್ದರು. ಈ ಯೋಜನೆ ಪ್ರಕಾರ ಮೋದಿಯವರು ಗಂಗಾ ನದಿಯ ದಡದಲ್ಲಿರುವ ವಾರಣಾಸಿಯಲ್ಲಿ ಕಾಶಿ ವಿಶ್ವನಾಥ ಮಂದಿರವನ್ನು ಪ್ರತಿಬಿಂಬಿಸುವ ಗುರಿಯನ್ನು ಹೊಂದಿದ್ದರು.
ಸರ್ಕಾರ ಈ ಯೋಜನೆಗಾಗಿ ಸುಮಾರು 400 ಕಟ್ಟಡಗಳನ್ನು ಅದರ ಮಾಲೀಕರೊಂದಿಗೆ ಮಾತನಾಡಿ ಸ್ವಾಧೀನ ಮಾಡಿದ ಬಳಿಕ ಕೆಡವಲಾಯಿತು. ಈ ಯೋಜನೆಯಿಂದ ಪ್ರಾಚೀನ 40 ದೇವಾಲಯಗಳನ್ನು ಈಗ ಮರುಸ್ಥಾಪಿಸಲಾಗಿದೆ ಎಂದು ಸರ್ಕಾರ ಹೇಳಿದೆ. ಈ ಕಾಶಿ ವಿಶ್ವನಾಥ ಕಾರಿಡಾರ್ ನಿರ್ಮಾಣದಿಂದ ಶಿವ ದೇವಾಲಯಗಳನ್ನು ಗಂಗಾ ನದಿಯೊಂದಿಗೆ ಸಂಪರ್ಕಿಸುವಂತೆ ಮಾಡಿದೆ. ಇದನ್ನೂ ಓದಿ: ಒಳ್ಳೆಯ ಫಲಿತಾಂಶ ಬರುವ ನಿರೀಕ್ಷೆ ಇದೆ: ಬೊಮ್ಮಾಯಿ
ಉತ್ತರಪ್ರದೇಶದ ವಿಧಾನಸಭಾ ಚುನಾವಣೆಗೆ ಕೇವಲ ಎರಡು ತಿಂಗಳು ಮುಂಚಿತವಾಗಿ ಕಾಶಿ ವಿಶ್ವನಾಥ ಕಾರಿಡಾರ್ ಯೋಜನೆಯನ್ನು ಪ್ರಧಾನಿ ಮೋದಿ ಉದ್ಘಾಟಿಸಿದ್ದಾರೆ. 2024ರ ಲೋಕಸಭಾ ಚುನಾವಣೆಯ ಮೇಲೂ ಈ ಯೋಜನೆ ಪರಿಣಾಮ ಬೀರುವ ಸಾಧ್ಯತೆ ಇದೆ.
ಸೋಮನಾಥ ದೇವಾಲಯ:
ಗುಜರಾತ್ ನಲ್ಲಿರುವ ಸೋಮನಾಥ ದೇವಾಲಯ ಅಫ್ಘಾನಿಸ್ತಾನದ ಘಜ್ನಿ ಮೊಹಮ್ಮದ್, ಔರಂಗಜೇಬನಂತಹ ಹಲವು ಸೈನ್ಯಗಳಿಂದ ದಾಳಿಗೊಳಗಾದ ವಿಷಯಗಳನ್ನು ನಾವು ಇತಿಹಾಸದಲ್ಲಿ ನೋಡಬಹುದು. ಈ ದೇವಾಲಯವನ್ನು ಮರಾಠ ಸಾಮ್ರಾಜ್ಞಿ ಅಹಲ್ಯಾ ಬಾಯಿ ಹೋಳ್ಕರ್ ಪುನರ್‌ನಿರ್ಮಾಣ ಮಾಡಿದ್ದರು. ಮೋದಿಯವರು ಈ ವರ್ಷದ ಆಗಸ್ಟ್ನಲ್ಲಿ ಸೋಮನಾಥ ದೇವಾಲಯದ ಹೊಸ ಯೋಜನೆಗಳನ್ನು ಉದ್ಘಾಟಿಸಿದ್ದಾರೆ.
ಕೇದಾರನಾಥ ದೇವಾಲಯ:
ಪ್ರಧಾನಿ ಮೋದಿಯವರು ತಮ್ಮ ಹಾಗೂ ಕೇದಾರನಾಥ ದೇವಾಲಯದೊಂದಿಗಿನ ಸಂಬಂಧವನ್ನು ಯಾವಾಗಲೂ ಹೇಳುತ್ತಲೇ ಬಂದಿದ್ದಾರೆ. ಮೋದಿ ರಾಜಕೀಯಕ್ಕೆ ಪ್ರವೇಶಿಸುವ ಮೊದಲೂ ನನ್ನ ನೆಚ್ಚಿನ ದೇವಾಲಯ ಕೇದಾರನಾಥ ಎಂದು ಹಲವು ಬಾರಿ ಹೇಳಿದ್ದರು.
ಅಯೋಧ್ಯೆಯಲ್ಲಿ ರಾಮ ಮಂದಿರ:
ರಾಮ ಮಂದಿರದ ನಿರ್ಮಾಣದ ಬಗ್ಗೆ ನಡೆದ ಹೋರಾಟ ಇಂದಿನದ್ದಲ್ಲ. ಬಾಬರಿ ಮಸೀದಿ ಇದ್ದ ಜಾಗದಲ್ಲಿ ರಾಮ ಮಂದಿರ ನಿರ್ಮಾಣವಾಗಬೆಕೆಂದಿದ್ದ ಯೋಜನೆ ಅದೆಷ್ಟೋ ವರ್ಷಗಳ ಬಳಿಕ 2020ರಲ್ಲಿ ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಶಂಕುಸ್ಥಾಪನೆ ನೆರವೇರಿದೆ.
ಚಾರ್ ಧಾಮ್ ಯೋಜನೆ:
ಯಮುನೋತ್ರಿ, ಗಂಗೋತ್ರಿ, ಕೇದಾರನಾಥ ಹಾಗೂ ಬದರಿನಾಥ ದೇವಾಲಯಗಳನ್ನು ಸಂಪರ್ಕಿಸುವ ಚಾರ್ ಧಾಮ್ ಯೋಜನೆಯನ್ನು ಮೋದಿ ಸರ್ಕಾರ ಪ್ರಾರಂಭಿಸಿತು. ಚಾರ್ ಧಾಮ್ ಪ್ರವಾಸವನ್ನು ಹಿಂದೂ ಧಾರ್ಮಿಕ ಪ್ರವಾಸ ಎಂದು ಕರೆಯಾಲಾಗುತ್ತದೆ. ಇದನ್ನೂ ಓದಿ: ಪಾಕಿಸ್ತಾನದಲ್ಲಿ ಮೊದಲ ಓಮಿಕ್ರಾನ್ ಪತ್ತೆ
ಕಾಶ್ಮೀರದ ದೇವಾಲಯಗಳ ನವೀಕರಣ:
ಜಮ್ಮು ಹಾಗೂ ಕಾಶ್ಮೀರದಲ್ಲಿ ದೇವಾಲಯಗಳ ನವೀಕರಣದ ಬಗ್ಗೆ ಪ್ರಧಾನಿ ಹೆಚ್ಚು ಬಾರಿ ಮಾತನಾಡಿದ್ದಾರೆ. 2019ರಲ್ಲಿ ಜಮ್ಮು ಹಾಗೂ ಕಾಶ್ಮೀರದಲ್ಲಿ 370ನೇ ವಿಧಿಯನ್ನು ರದ್ದು ಗೊಳಿಸಿದ ಬಳಿಕ ಅಲ್ಲಿನ ದೇವಾಲಯಗಳನ್ನು ನವೀಕರಣಗೊಳಿಸುವ ಕಾರ್ಯವನ್ನು ಪ್ರಾರಂಭಿಸಿದೆ.
ವಿದೇಶದಲ್ಲಿರುವ ದೇವಾಲಯಗಳು:
ಪ್ರಧಾನಿ 2018ರಲ್ಲಿ ಅಬುಧಾಬಿಗೆ ಭೇಟಿ ನೀಡಿದ್ದಾಗ ಅಲ್ಲಿ ಮೊದಲ ಹಿಂದೂ ದೇವಾಲಯಕ್ಕೆ ಅಡಿಪಾಯ ಹಾಕಿದ್ದರು. ಈ ದೇವಾಲಯಕ್ಕೆ 2015ರಲ್ಲಿ ಯುಎಇ ಸರ್ಕಾರ ಭೂಮಿಯನ್ನು ನೀಡಿತ್ತು. 2019ರಲ್ಲಿ ಬಹ್ರೇನ್ ನಲ್ಲಿನ 200 ವರ್ಷಗಳಷ್ಟು ಹಳೆಯದಾದ ಶ್ರೀ ಕೃಷ್ಣ ದೇವಾಲಯದ ನವೀಕರಣ ಯೋಜನೆಯನ್ನು ಕೈಗೊಳ್ಳಲಾಗಿದೆ.
ಲಕ್ನೋ: ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಯೋಜನೆ ಆಗಿರುವ ಕಾಶಿ ವಿಶ್ವನಾಥ ಕಾರಿಡಾರ್‌ನನ್ನು ಇಂದು ಮಧ್ಯಾಹ್ನ 1 ಗಂಟೆಗೆ ಪ್ರಧಾನಿ ಉದ್ಘಾಟಿಸಿ ಸಾರ್ವಜನಿಕ ಸೇವೆಗೆ ಮುಕ್ತಗೊಳಿಸಲಿದ್ದಾರೆ. ಈ ಯೋಜನೆಯಿಂದಾಗಿ ಪ್ರವಾಸೋದ್ಯಮ ಚೇತರಿಕೆ ಕಾಣಲಿದೆ.
ಈಗಾಗಲೇ ಮೋದಿ ಅವರು ಕಾಲಭೈರವೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ವಾರಾಣಿಸಿಯ ಜನರು ಹೂ ಮಳೆ ಸುರಿಸಿ, ಮೋದಿ, ಮೋದಿ, ಹರ್ ಹರ್ ಮಹಾದೇವ್ ಎಂದು ಘೋಷಣೆ ಕೂಗುತ್ತಾ ಅದ್ಧೂರಿಯಾಗಿ ಪ್ರಧಾನಿಯವರನ್ನು ಸ್ವಾಗತಿಸಿದ್ದಾರೆ. ಮೋದಿಯವರು ಕಾವಿ ವಸ್ತ್ರವನ್ನು ಧರಿಸಿ ಗಂಗಾ ನದಿಯಲ್ಲಿ ಮುಳುಗಿ ಪುಣ್ಯ ಸ್ನಾನ ಮಾಡಿ, ಜಪ ಮಾಲೆ ಹಿಡಿದು ಜಪ ಮಾಡಿದ್ದಾರೆ.
ಕಾಶಿ ವಿಶ್ವನಾಥ ಕಾರಿಡಾರ್ ವಿಶೇಷತೆ:
ಕಾಶಿ ವಿಶ್ವನಾಥ ಕಾರಿಡಾರ್ ವಿಶ್ವನಾಥ ದೇಗುಲ ಮತ್ತು ಪವಿತ್ರ ಗಂಗಾ ನದಿಯನ್ನು ನೇರವಾಗಿ ಸಂಪರ್ಕಿಸುತ್ತದೆ. ಈ ಮೊದಲು ದೇಗುಲ ಮತ್ತು ಪವಿತ್ರ ಗಂಗಾ ನದಿಗೆ ನೇರವಾದ ಸಂಪರ್ಕವಿರಲಿಲ್ಲ. ದೇಗುಲದ ಮೂರು ದಿಕ್ಕುಗಳಲ್ಲಿ ಮನೆಗಳು, ಕಟ್ಟಡಗಳು, ಆವರಿಸಿದ್ದವು. ಇದೀಗ ಕಿಕ್ಕಿರಿದ ಪ್ರದೇಶ, ಜನಸಂದಣಿಯಿಂದ ಯಾವುದೇ ಅಡೆತಡೆಗಳಿಲ್ಲದೆ ಗಂಗೆಯ ಲಲಿತಾ ಘಾಟ್‍ಗೆ ಭಕ್ತರು ಮಂದಿರದಿಂದ ಭೇಟಿ ನೀಡಬಹುದು. ದೇಗುಲದಲ್ಲಿ ನಿಂತೇ ಪ್ರಸಿದ್ಧ ಗಂಗಾರತಿಯನ್ನು ಕಣ್ತುಂಬಿಕೊಳ್ಳಬಹುದಾಗಿದೆ.
ಕಾರಿಡಾರ್ ದೇಗುಲ ಮತ್ತು ಲಲಿತಾ ಘಾಟ್‍ಗೆ ಸಂಪರ್ಕ ಕಲ್ಪಿಸುವುದು ಮಾತ್ರವಲ್ಲದೇ ದೇಗುಲ ಚೌಕ, ವಾರಾಣಸಿ ನಗರ ಗ್ಯಾಲರಿ, ಮ್ಯೂಸಿಯಂ, ವಿವಿಧ ಉದ್ದೇಶಿತ ಸಭಾಂಗಣ, ಹಾಲ್, ಭಕ್ತರಿಗೆ ಸೌಲಭ್ಯ ಒದಗಿಸುವ ಕೇಂದ್ರವಾಗಿದೆ. ಸಾರ್ವಜನಿಕ ತಂಗುದಾಣ, ಅರ್ಚಕರಿಗೆ ವಸತಿ ಮತ್ತು ಆಧ್ಯಾತ್ಮ ಗ್ರಂಥಾಲಯ ಮುಂತಾದ ಸೌಕರ್ಯಗಳನ್ನು ಕಾರಿಡಾರ್ ಒಳಗೊಂಡಿದೆ.
ಕಾರಿಡಾರ್‌ನಲ್ಲಿ ಏನಿದೆ?:
* ಯೋಜನೆಯಡಿ 24 ಕಟ್ಟಡ ನಿರ್ಮಾಣ
* ಸುಮಾರು 50 ಅಡಿ ಉದ್ದ ಕಾರಿಡಾರ್ ಗಂಗಾ ಮಣಿಕರ್ಣಿಕಾ, ಲಲಿತಾ ಘಾಟ್ ಮತ್ತು ಕಾಶಿ ವಿಶ್ವನಾಥ ಜ್ಯೋತಿರ್ಲಿಂಗ ದೇಗುಲವನ್ನು ಸಂಪರ್ಕಿಸುತ್ತದೆ. ಯಾತ್ರಾರ್ಥಿಗಳಿಗೆ ವಿಶ್ರಾಂತಿ ಕೊಠಡಿ ವ್ಯವಸ್ಥೆಯನ್ನು ಮಾಡಲಾಗಿದೆ.
* ವಾರಾಣಸಿ ಸಂಸ್ಕ್ರತಿ ಪ್ರತಿಬಿಂಬಿಸುವ ಮ್ಯೂಸಿಯಂ ಮತ್ತು ಸಭಾಂಗಣ ಮತ್ತು ಹೋಮ ಹವನದಂತಹ ಧಾರ್ಮಿಕ ಕಾರ್ಯ ನಡೆಸಲು ಯೋಗಶಾಲೆಗಳು ಇವೆ.
* ಆರ್ಚಕರು, ಸ್ವಯಂ ಸೇವಕರು ಮತ್ತು ಯಾತ್ರಾರ್ಥಿಗಳಿಗೆ ವಿಶೇಷ ವಸತಿಯನ್ನು ಮಾಡಲಾಗಿದೆ.
* ಗಂಗಾ ನದಿ ಕಣ್ತುಂಬಿಕೊಳ್ಳುವ ಗ್ಯಾಲರಿ ಇದ್ದು, ದೇಗುಲದ 7000 ಚದರ ಮೀ. ಪ್ರದೇಸ 10,000 ಜನರಿಗೆ ಧ್ಯಾನಕ್ಕೆ ಮೀಸಲು ಇಡಲಾಗಿದೆ. 7 ದ್ವಾರ ಕೆಫೆಟೇರಿಯಾ, ಆಧ್ಯಾತ್ಮ ಗ್ರಂಥಾಲಯ, ಫುಡ್ ಸ್ಟ್ರೀಟ್ ವ್ಯವಸ್ಥೆ ಇದೆ. ಇದನ್ನೂ ಓದಿ:ಪ್ರಧಾನಿ ಮೋದಿಗೆ ದೃಷ್ಟಿ ನಿವಾರಿಸಿದ ಅರ್ಚಕ
ಕಾಶಿ ದೇಗುಲ 3000 ಚದರಡಿ ವ್ಯಾಪ್ತಿಯಲ್ಲಿತ್ತು. ಮಹತ್ವಾಕಾಂಕ್ಷಿ ಕಾಶಿ ವಿಶ್ವನಾಥ ಕಾರಿಡಾರ್ ಯೋಜನೆಯೇ ಮೊದಲ ಹಂತದ ವೆಚ್ಚ399 ಕೋಟಿ ಆಗಿದ್ದು, 5 ಲಕ್ಷ ಚದರ ಅಡಿ ಪ್ರದೇಶಕ್ಕೆ ದೇಗುಲದ ವ್ಯಾಪ್ತಿ ವಿಸ್ತರಿಸಿದೆ. ಕಾರಿಡಾರ್ 320 ಮೀಟರ್ ಉದ್ದ ಮತ್ತು 20 ಮೀಟರ್ ಅಗಲ ಇದೆ. ಮೊದಲಿನಂತೆ ಕಿಕ್ಕಿರಿದ ರಸ್ತೆಗಳ ಬದಲಾಗಿ ಇದೀಗ ಸರಾಗವಾಗಿ ಕೇವಲ ಒಂದು ನಿಮಿಷದಲ್ಲಿ ದೇಗುಲದಿಂದ ಲಲಿತಾ ಘಾಟ್ ತಲುಪಬಹುದಾಗಿದೆ. ಇದನ್ನೂ ಓದಿ: ಸೂಪರ್ ಸ್ಟಾರ್ ರಜನಿಕಾಂತ್‍ಗೆ 71ನೇ ಹುಟ್ಟುಹಬ್ಬದ ಸಂಭ್ರಮ
ಮೋದಿ ಕಾಶಿ ಪರಿವರ್ತನೆ ಮಾಡಿದ್ದು ಹೇಗೆ?:
ಮೋದಿ ವಾರಾಣಸಿಯಿಂದ ಲೋಕಸಭೆಗೆ ಆಯ್ಕೆಯಾದ ಬೆನ್ನಲ್ಲೇ ಕಾಶಿ ಸ್ವರೂಪವನ್ನೇ ಬದಲಿಸಿದರು. ಈ ಹಿಂದಿನ ಹಳೆಯ ಕಾಶಿಯಲ್ಲಿ ಕಿರಿದಾದ ರಸ್ತೆಗಳಿದ್ದವು. ಅಸ್ವಚ್ಛತೆ ಎಲ್ಲಾ ಕಡೆ ಎದ್ದು ಕಾಣುತ್ತಿತ್ತು. ಇದನ್ನು ಬದಲಿಸಿದ ಅವರು ರಸ್ತೆಗಳ ಅಗಲೀಕರಣ ಮಾಡಿಸಿದರು. ನೈರ್ಮಲೀಕರಣಕ್ಕೆ ಕ್ರಮ ಕೈಗೊಂಡರು. ಮಲಿನವಾಗಿದ್ದ ಗಂಗಾ ನದಿಯನ್ನು “ನಮಾಮಿ ಗಂಗೆ” ಯೋಜನೆ ಅಡಿ ಸ್ವಚ್ಛಗೊಳಿಸಿದಉ. ಈಗ ‘ವಿಶ್ವನಾಥ ಕಾರಿಡಾರ್’ ಯೋಜನೆ ಜಾರಿಗೊಳಿಸಿ ದೇಗುಲದ ಗತವೈಭವ ಮರುಕಳಿಸಿದ್ದಾರೆ.