Tag: ಕಾಶ್ಮೀರ್ ಫೈಲ್ಸ್

  • `ಕಾಶ್ಮೀರ್ ಫೈಲ್ಸ್’ ಅಶ್ಲೀಲ ಚಿತ್ರ ಎಂದ ನಿರ್ದೇಶಕನ ವಿರುದ್ಧ ಕಿಡಿಕಾರಿದ ಇಸ್ರೇಲ್ ರಾಯಭಾರಿ

    `ಕಾಶ್ಮೀರ್ ಫೈಲ್ಸ್’ ಅಶ್ಲೀಲ ಚಿತ್ರ ಎಂದ ನಿರ್ದೇಶಕನ ವಿರುದ್ಧ ಕಿಡಿಕಾರಿದ ಇಸ್ರೇಲ್ ರಾಯಭಾರಿ

    `ಕಾಶ್ಮೀರ್ ಫೈಲ್ಸ್’ (The Kashmir Files) ತೆರೆಕಂಡ ದಿನದಿಂದಲೂ ಸಖತ್ ಸುದ್ದಿಯಲ್ಲಿದೆ. ಇತ್ತೀಚೆಗಷ್ಟೇ ನಡೆದ ಪ್ರತಿಷ್ಠಿತ ಚಲನಚಿತ್ರೋತ್ಸವದಲ್ಲಿ ಕಲಾತ್ಮಕ ಸ್ಪರ್ಧಾ ವಿಭಾಗಕ್ಕೆ ಈ ಸಿನಿಮಾ ಸೂಕ್ತವಲ್ಲ ಎಂದು ಭಾಸವಾಯಿತು ಎಂದು ನದಾವ್‌ ಹೇಳಿಕೆ ನೀಡಿದ್ದರು. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪರ ವಿರೋಧ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಇಸ್ರೇಲ್ ರಾಯಭಾರಿ ನಾರ್ ಗಿಲೋನ್ (naor gilon ನದಾವ್ ತರಾಟೆಗೆ ತೆಗೆದುಕೊಂಡಿದ್ದಾರೆ.

    kashmir

    ಗೋವಾದಲ್ಲಿ ನಡೆದ 53ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಸೋಮವಾರ (ನವೆಂಬರ್ 28) ಅದ್ದೂರಿಯಾಗಿ ನಡೆದಿತ್ತು. ಮುಕ್ತಾಯ ಸಮಾರಂಭದಲ್ಲಿ ತೀರ್ಪುಗಾರರ ಮುಖ್ಯಸ್ಥರಾಗಿದ್ದ ಇಸ್ರೇಲ್‌ನ ಖ್ಯಾತ ನಿರ್ದೇಶಕ ನದಾವ್ ಲಾಪಿಡ್ ದಿ ಕಾಶ್ಮಿರ್ ಫೈಲ್ಸ್ ಸಿನಿಮಾ ವಿರುದ್ಧ ಅಸಮಾಧಾನ ಹೊರಹಾಕಿದರು. `ಕಾಶ್ಮೀರ ಫೈಲ್ಸ್’ ಸಿನಿಮಾ ವೀಕ್ಷಿಸಿ ತುಂಬಾ ಡಿಸ್ಟರ್ಬ್ ಆಗಿದ್ದೀವಿ. ಇದೊಂದು ಅಶ್ಲೀಲ ಪ್ರಚಾರದ ಸಿನಿಮಾ. ಇಂಥ ಪ್ರತಿಷ್ಠಿತ ಚಲನಚಿತ್ರೋತ್ಸವದ ಕಲಾತ್ಮಕ ಸ್ಪರ್ಧಾ ವಿಭಾಗಕ್ಕೆ ಈ ಸಿನಿಮಾ ಸೂಕ್ತವಲ್ಲ ಎಂದು ಭಾಸವಾಯಿತು ಎಂದು ಹೇಳುವ ಮೂಲಕ ಅನೇಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಇದನ್ನೂ ಓದಿ: ಮಾಜಿ ಸಿಎಂ ಸಿದ್ದರಾಮಯ್ಯ ಬಯೋಪಿಕ್‌ನಲ್ಲಿ ತಮಿಳು ನಟ ವಿಜಯ್ ಸೇತುಪತಿ

    ವಿವಾದದ ಬೆನ್ನಲ್ಲೇ ಭಾರತದಲ್ಲಿರುವ ಇಸ್ರೇಲ್ ರಾಯಭಾರಿ ನಾರ್ ಗಿಲೋನ್, ನಿರ್ದೇಶಕ ನದಾವ್ ಅವರನ್ನು ತರಾಟೆ ತೆಗೆದುಕೊಂಡಿದ್ದಾರೆ. ಇಂಥ ಹೇಳಿಕೆಗೆ ನಾಚಿಕೆಯಾಗಬೇಕು ಎಂದು ಕಿಡಿಕಾರಿದ್ದಾರೆ.

    ನಾನು ನದಾವ್ ಹೇಳಿಕೆಗಳನ್ನು ಖಂಡಿಸುತ್ತೇನೆ. ಇದರಲ್ಲಿ ಯಾವುದೇ ಸಮರ್ಥನೆ ಇಲ್ಲ. ಇಲ್ಲಿ ಕಾಶ್ಮೀರ ಸಮಸ್ಯೆಯ ಸೂಕ್ಷ್ಮತೆಯನ್ನು ತೋರಿಸುತ್ತದೆ ಎಂದು ಹೇಳಿದರು. ಭಾರತೀಯ ಸಂಸ್ಕೃತಿಯಲ್ಲಿ ಅತಿಥಿಯನ್ನು ದೇವರಂತೆ ಕಾಣುತ್ತಾರೆ. ಜ್ಯೂರಿ ಮುಖ್ಯಸ್ಥರಾಗಿ ಎಂದು ಭಾರತ ನೀಡಿದ ಆಹ್ವಾನ ಮತ್ತು ನಂಬಿಕೆ, ಗೌರವ, ಆತ್ಮೀಯ ಆತಿಥ್ಯವನ್ನು ದುರುಪಯೋಗ ಪಡಿಸಿಕೊಂಡಿದ್ದೀರಿ ಎಂದು ನದಾವ್ ಅವರನ್ನು ತರಾಟೆ ತೆಗೆದುಕೊಂಡರು ಇಸ್ರೇಲ್ ರಾಯಭಾರಿ ನಾರ್ ಗಿಲೋನ್.

    Live Tv
    [brid partner=56869869 player=32851 video=960834 autoplay=true]

  • ಮುಸಲ್ಮಾನರ ಹತ್ಯೆಯ ಬಗ್ಗೆ ಸಿನಿಮಾ ಮಾಡಬೇಕು: ಐಎಎಸ್ ಅಧಿಕಾರಿ

    ಮುಸಲ್ಮಾನರ ಹತ್ಯೆಯ ಬಗ್ಗೆ ಸಿನಿಮಾ ಮಾಡಬೇಕು: ಐಎಎಸ್ ಅಧಿಕಾರಿ

    ಭೋಪಾಲ್: ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಕುರಿತಾಗಿ ಪರವಿರೋಧ ಚರ್ಚೆ ನಡೆಯುತ್ತಿದೆ. ಈ ಮಧ್ಯೆ ಮಧ್ಯಪ್ರದೇಶದ ಐಎಎಸ್ ಅಧಿಕಾರಿಯೊಬ್ಬರು ತಮ್ಮ ಅಭಿಪ್ರಾಯವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಇಕ್ಕಟ್ಟಿಗೆ ಸಿಲುಕಿಕೊಂಡಿದ್ದಾರೆ.

    ಪ್ರಸ್ತುತ ರಾಜ್ಯ ಲೋಕೋಪಯೋಗಿ ಇಲಾಖೆನಲ್ಲಿ ಉಪ ಕಾರ್ಯದರ್ಶಿಯಾಗಿರುವ ನಿಯಾಜ್ ಖಾನ್ ಕಳೆದ ವಾರ ಟ್ವೀಟ್ ಮಾಡಿದ್ದಾರೆ.

    ಟ್ವೀಟ್‍ನಲ್ಲಿ ಏನಿದೆ?: ಕಾಶ್ಮೀರ್ ಫೈಲ್ಸ್ ಬ್ರಾಹ್ಮಣರ ನೋವನ್ನು ತೋರಿಸುತ್ತದೆ. ಕಾಶ್ಮೀರದಲ್ಲಿ ಎಲ್ಲ ಗೌರವಗಳೊಂದಿಗೆ ಸುರಕ್ಷಿತವಾಗಿ ಬದುಕಲು ಅವರಿಗೆ ಅವಕಾಶ ನೀಡಬೇಕು. ಹಲವಾರು ರಾಜ್ಯಗಳಾದ್ಯಂತ ಹೆಚ್ಚಿನ ಸಂಖ್ಯೆಯ ಮುಸ್ಲಿಮರ ಹತ್ಯೆಗಳನ್ನು ತೋರಿಸಲು ನಿರ್ಮಾಪಕರು ಸಿನಿಮಾವೊಂದನ್ನು ಮಾಡಬೇಕು. ಚಿತ್ರವು 150 ಕೋಟಿ ರೂಪಾಯಿಗಳ ಆದಾಯದ ಗಡಿಯನ್ನು ಮುಟ್ಟಿದ್ದಕ್ಕಾಗಿ ಚಿತ್ರದ ನಿರ್ಮಾಪಕರನ್ನು ಅಭಿನಂದಿಸಿದ್ದಾರೆ.

    ಜನರು ಕಾಶ್ಮೀರಿ ಬ್ರಾಹ್ಮಣರ ಭಾವನೆಗಳಿಗೆ ಹೆಚ್ಚಿನ ಗೌರವವನ್ನು ನೀಡಿರುವುದರಿಂದ ಚಲನಚಿತ್ರ ನಿರ್ಮಾಪಕರು ಎಲ್ಲಾಗಳಿಕೆಯನ್ನು ಬ್ರಾಹ್ಮಣ ಮಕ್ಕಳ ಶಿಕ್ಷಣಕ್ಕೆ ವರ್ಗಾಯಿಸಬೇಕು. ಕಾಶ್ಮೀರದಲ್ಲಿ ಅವರಿಗೆ ಮನೆಗಳನ್ನು ನಿರ್ಮಿಸಬೇಕು. ಪ್ರತಿಕ್ರಿಯೆಯಾಗಿ ಕಾಶ್ಮೀರ್ ಫೈಲ್ಸ್ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರು ಮಾರ್ಚ್ 25 ರಂದು ಭೋಪಾಲ್‍ನಲ್ಲಿ ಭೇಟಿಯಾಗುವಂತೆ ಖಾನ್ ಅವರಿಗೆ ಹೇಳಿದ್ದಾರೆ.

    ಏಳು ಪುಸ್ತಕಗಳ ಲೇಖಕರಾಗಿರುವ ಖಾನ್ ಅವರು ವಿವಿಧ ಸಂದರ್ಭಗಳಲ್ಲಿ ಮುಸ್ಲಿಮರ ಹತ್ಯಾಕಾಂಡ ಕುರಿತು ಪುಸ್ತಕವನ್ನು ಬರೆಯುವ ಬಗ್ಗೆ ಯೋಚಿಸುತ್ತಿರುವುದಾಗಿ ಹೇಳಿದ್ದಾರೆ. ಇದರಿಂದಾಗಿ ಅಲ್ಪಸಂಖ್ಯಾತರ ನೋವನ್ನು ಭಾರತೀಯರ ಮುಂದೆ ತರಬಹುದು ಎಂದಿದ್ದಾರೆ. ಈ ಹೇಳಿಕೆ ನೀಡುವ ಮೂಲಕ ಖಾನ್ ಅವರು ಐಎಎಸ್ ಸೇವಾ ನೀತಿ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ನೆಟ್ಟಿಗರು ಕಾಮೆಂಟ್ ಮಾಡುವ ಮೂಲಕವಾಗಿ ತಿಳಿಸಿದ್ದಾರೆ. ಇದನ್ನೂ ಓದಿ:  2ನೇ ಬಾರಿಗೆ ಗೋವಾ ಸಿಎಂ ಆಗಿ ಪ್ರಮೋದ್ ಸಾವಂತ್ ಆಯ್ಕೆ

  • ಸಿದ್ದರಾಮಯ್ಯಗೆ ಹಿಂದಿ ಬರುವುದಿಲ್ಲ, ಸಿನಿಮಾ ನೋಡುವುದಿಲ್ಲ: ಪ್ರಹ್ಲಾದ್‌ ಜೋಶಿ

    ಸಿದ್ದರಾಮಯ್ಯಗೆ ಹಿಂದಿ ಬರುವುದಿಲ್ಲ, ಸಿನಿಮಾ ನೋಡುವುದಿಲ್ಲ: ಪ್ರಹ್ಲಾದ್‌ ಜೋಶಿ

    ಧಾರವಾಡ: ಸಿದ್ದರಾಮಯ್ಯ ಅವರು ದಿ ಕಾಶ್ಮೀರ್‌ ಫೈಲ್ಸ್ ಸಿನಿಮಾ ನೋಡುವುದಿಲ್ಲ ಎಂದಿದ್ದಾರೆ. ಅವರಿಗೆ ಹಿಂದಿ ಬರುವುದಿಲ್ಲ, ಹೀಗಾಗಿ ಸಿನಿಮಾ ನೋಡುವುದಿಲ್ಲ ಅಂತಾರೆ. ಬೇರೆ ಸಿನಿಮಾ ನೋಡೋಕೆ ಹೋಗುತ್ತಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ವಾಗ್ದಾಳಿ ಮಾಡಿದ್ದಾರೆ.

    ಧಾರವಾಡದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ವಿರೋಧದಿಂದಲೇ ಸಿನಿಮಾ ಜನಪ್ರಿಯ ಆಗಿದೆ. ಸಿದ್ದರಾಮಯ್ಯ ಸಿನಿಮಾ ನೋಡುವುದಿಲ್ಲ ಎಂದಿದ್ದಾರೆ. ಅವರಿಗೆ ಹಿಂದಿ ಬರುವುದಿಲ್ಲ ಹೀಗಾಗಿ ಸಿನಿಮಾ ನೋಡಲ್ಲ ಎನ್ನುತ್ತಿದ್ದಾರೆ. ಬೇರೆ ಸಿನಿಮಾ ನೋಡಲು ಹೋಗುತ್ತಾರೆ. ಈ ಸಿನಿಮಾಗೆ ಇಂಗ್ಲೀಷ್ ಸಬ್ ಟೈಟಲ್ ಇದೆ. ಇಂಗ್ಲೀಷ್ ಬರೋಲ್ವಾ? ನಿಮಗೆ ಪಕ್ಕದಲ್ಲಿ ಓರ್ವ ಅನುವಾದಕರನ್ನು ಕುಳ್ಳಿರಿಸಿಕೊಂಡು ನೋಡಿ ಎಂದು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ಪಬ್ಲಿಕ್ ಪ್ಲೇಸ್‍ನಲ್ಲಿ ಪೊಲೀಸ್‍ಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ

    ಬೆಂಗಳೂರಿನಲ್ಲಿ ಕಾಶ್ಮೀರಿ ಪಂಡಿತರ ಸರ್ವೆ ಈಗ ಆಗಿದೆ ಅಂತಾ ಮಾಹಿತಿ ಬಂದಿದೆ. ಅವರು ಬಯಸಿದಲ್ಲಿ ವಸತಿ ಕಲ್ಪಸಿ ಕೊಡುವುದು ಸರ್ಕಾರದ ಕರ್ತವ್ಯವಾಗಿದೆ. ಕಾಂಗ್ರೆಸ್ ಪಕ್ಷ ತುಷ್ಟೀಕರಣದ ರಾಜಕಾರಣ ಮಾಡುತ್ತ ಬಂದಿದೆ. ಕಾಶ್ಮೀರ ಫೈಲ್ಸ್‌ಗೆ ವಿರೋಧ ಮಾಡೋದಕ್ಕೆ ಇದೇ ಕಾರಣ. 70 ವರ್ಷದಲ್ಲಿ 58 ವರ್ಷ ಕಾಂಗ್ರೆಸ್ ಆಡಳಿತ ಮಾಡಿತ್ತು. ಆಗ ತುಷ್ಟೀಕರಣ ರಾಜಕಾರಣ, ಆರ್ಟಿಕಲ್ 370, ಕಾಶ್ಮೀರಕ್ಕೆ 35ಎ ಕೊಟ್ಟಿದ್ದರು, ಇದನ್ನೆಲ್ಲ ಕೊಟ್ಟು ಭಾರತದ ಕಾನೂನು ನಡೆಯದಂತೆ ಮಾಡಿದ್ದರು. ಇದನ್ನೆಲ್ಲ ಮುಚ್ಚಿ ಹಾಕಲು ಕಾಶ್ಮೀರ ಫೈಲ್ಸ್ ಸಿನಿಮಾ ವಿರೋಧಿಸುತ್ತಿದ್ದಾರೆ. ಸಮಾಜ ಈಗ ಜಾಗೃತ ಆಗಿದೆ. ಆದರೂ ತುಷ್ಟೀಕರಣ ರಾಜಕಾರಣ ಬಿಡುತ್ತಿಲ್ಲ. ಹಿಂದುಗಳು, ಪಂಡಿತರ ಸರ್ವನಾಶ  ಆದರೂ ಇವರಿಗೆ ಚಿಂತೆ ಇಲ್ಲ. ಅವರನ್ನು ಕೊಯ್ದು ಎರಡು ಭಾಗ ಮಾಡಿದರೂ ಅದನ್ನು ಮರಿಯಬೇಕು. ಆದರೆ ನಮಗೆ ಓಟ್ ಸಿಗಬೇಕು. ಇದೇ ಕಾಂಗ್ರೆಸ್ ನೀತಿ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಅಶ್ವತ್ಥನಾರಾಯಣ ನಾನು ಅಣ್ಣ-ತಮ್ಮಂದಿರಂತೆ : ಆರ್.ಅಶೋಕ್

    ನೀವು ಮೊದಲು ಸಿನಿಮಾ ನೋಡಿ, ನೋಡಿದ ಬಳಿಕ ತಪ್ಪಾಗಿದೆ ಅಂತಾ ಹೇಳಿ. ಆಗ ಜನ ಕ್ಷಮಿಸುತ್ತಾರೆ. ಕಾಶ್ಮೀರ ದೌರ್ಜನ್ಯ ವೇಳೆ ಬಿಜೆಪಿ ಸರ್ಕಾರ ಇರಲಿಲ್ಲ. ವಿ.ಪಿ. ಸಿಂಗ್ ಸರ್ಕಾರ ಇತ್ತು ಅಲ್ಲಿ. ಮುಫ್ತಿ ಮಹಮ್ಮದ ಸಯೀದ್ ಗೃಹ ಮಂತ್ರಿಯಾಗಿದ್ದರು. ಆಗ ಯಾವುದೇ ಸಂಗತಿ ಹೊರ ಬರುತ್ತಿರಲಿಲ್ಲ. ಆಗ ನಾವು ಸರ್ಕಾರದ ಭಾಗ ಆಗಿರಲಿಲ್ಲ, ಹೊರಗಿನಿಂದ ಬೆಂಬಲ ಕೊಟ್ಟಿದ್ದು. ಆ ಸರ್ಕಾರ ಹಿಂದೂ ವಿರೋಧಿ ಅಂತಾ ಪರಿವರ್ತನೆ ಆಯ್ತು. ಹೀಗಾಗಿ ನಾವು ಬೆಂಬಲ ವಾಪಸ್ ಪಡೆದುಕೊಂಡಿದ್ದು ಎಂದರು. ಇದನ್ನೂ ಓದಿ: ಭಗವದ್ಗೀತೆ ಹೊಟ್ಟೆ ತುಂಬಿಸುವುದಿಲ್ಲ, ತಲೆಯನ್ನು ತುಂಬಿಸುತ್ತದೆ: ಪ್ರತಾಪ್‍ಸಿಂಹ

  • ನಾನು ಭಗವದ್ಗೀತೆ ವಿರೋಧಿಯಲ್ಲ: ಸಿದ್ದರಾಮಯ್ಯ

    ನಾನು ಭಗವದ್ಗೀತೆ ವಿರೋಧಿಯಲ್ಲ: ಸಿದ್ದರಾಮಯ್ಯ

    ಮಂಗಳೂರು: ನಾನು ಭಗವದ್ಗೀತೆ, ಬೈಬಲ್, ಕುರಾನ್ ಯಾವುದರ ವಿರೋಧಿಯೂ ಅಲ್ಲ. ನಮ್ಮದು ಬಹುಸಂಸ್ಕೃತಿ ಇರುವ ರಾಷ್ಟ್ರ, ನಮ್ಮಲ್ಲಿ ಸಹಬಾಳ್ವೆ ಇರಬೇಕು. ಸಹಿಷ್ಣುತೆ ಮತ್ತು ಸಹಬಾಳ್ವೆಯಲ್ಲಿ ನಂಬಿಕೆ ಇರೋನು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‍ನದ್ದು ಸಾಫ್ಟ್ ಮತ್ತು ಹಾರ್ಡ್ ಹಿಂದುತ್ವ ಅಂತ ಇಲ್ಲ. ನಾವು ಹಿಂದೂ ಧರ್ಮದ ಮೇಲೆ ನಂಬಿಕೆ ಇಟ್ಟವರು. ಎಲ್ಲಾ ಧರ್ಮಗಳಿಗೂ ಸಮಾನ ಗೌರವ ಕೊಡುತ್ತೇವೆ ಎಂದರು.

    ಶಾಲೆಗಳಲ್ಲಿ ಭಗವದ್ಗೀತೆ ಕಲಿಸೋ ಬಗ್ಗೆ ಚಿಂತನೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನೈತಿಕ ಶಿಕ್ಷಣ ಕಲಿಸಲು ನಮ್ಮ ಯಾವುದೇ ತಕರಾರು ಇಲ್ಲ. ನಾವು ಸಂವಿಧಾನದ ಜಾತ್ಯಾತೀತ ತತ್ವಗಳನ್ನು ನಂಬುತ್ತೇವೆ. ಭಗವದ್ಗೀತೆ, ಕುರಾನ್, ಬೈಬಲ್ ಯಾವುದನ್ನು ಹೇಳಿಕೊಟ್ಟರೂ ನಮ್ಮ ವಿರೋಧ ಇಲ್ಲ. ಆದರೆ ಮಕ್ಕಳಿಗೆ ಅಗತ್ಯವಾಗಿ ಗುಣಮಟ್ಟದ ಶಿಕ್ಷಣ ನೀಡಬೇಕು ಎಂದರು. ಇದನ್ನೂ ಓದಿ: ಖಾಲಿ ಸ್ಟ್ರಾಲರ್ಸ್ ಸಾಲಾಗಿಟ್ಟು ಯುದ್ಧದಲ್ಲಿ ಕೊಲ್ಲಲ್ಪಟ್ಟ ಮಕ್ಕಳನ್ನು ಸ್ಮರಿಸಿದ ಉಕ್ರೇನ್

    ಭಗವದ್ಗೀತೆ ಬಗ್ಗೆ ಸರ್ಕಾರ ತೀರ್ಮಾನ ಮಾಡಿಲ್ಲ, ಗುಜರಾತ್‍ನಲ್ಲಿ ಮಾಡಿದ್ದಾರೆ ಅಷ್ಟೇ. ಭಗವದ್ಗೀತೆ ಮನೆಯಲ್ಲಿ ಹೇಳಿಕೊಡ್ತಾರೆ, ದೇವರ ಬಗ್ಗೆ ಹೇಳ್ತಾರೆ. ರಾಮಾಯಣ, ಮಹಾಭಾರತ ಎಲ್ಲಾನೂ ಮನೆಯಲ್ಲಿ ಹೇಳಿ ಕೊಡ್ತಾರೆ. ನೈತಿಕ ಶಿಕ್ಷಣ ಬೇಕು, ಆದರೆ ಸಂವಿಧಾನಕ್ಕೆ ವಿರುದ್ಧವಾಗಿ ಯಾವುದೂ ನಡೆಯಬಾರದು ಎಂದು ತಿಳಿಸಿದರು.

    ಹಿಜಬ್ ವಿರೋಧಿಸಿ ಮುಸ್ಲಿಂ ಸಂಘಟನೆಗಳ ಬಂದ್ ವಿಚಾರಕ್ಕೆ ಪ್ರತಿಕ್ರಿಯಿಸಿ, ಅಸಮಾಧಾನ ಇರೋರು ಬಂದ್ ಮಾಡಿದ್ದಾರೆ. ಕೋರ್ಟ್ ನಿರ್ಧಾರ ವಿರೋಧಿಸಬಾರದು. ಯಾವ ಧರ್ಮದವರೂ ಕೋಮುವಾದ ಮಾಡಬಾರದು. ಎಲ್ಲಾ ಧರ್ಮಗಳನ್ನು ಸಮಾನವಾಗಿ ಕಾಣುವ ಕೆಲಸ ಆಗಲಿ ಎಂದು ಸಲಹೆ ನೀಡಿದರು.

    ಕಾಶ್ಮೀರ್ ಫೈಲ್ ಚಿತ್ರ ಕನ್ನಡಕ್ಕೆ ಡಬ್ ಮಾಡುವ ವಿಚಾರವಾಗಿ ಮಾತನಾಡಿದ ಅವರು, ಸಿನಿಮಾ ಮಾಡಿ ತೋರಿಸೋದನ್ನ ಬೇಡ ಅನ್ನಲ್ಲ, ಆದರೆ ಸತ್ಯ ತೋರಿಸಲಿ. ಕಾಶ್ಮೀರದ ಉಗ್ರರ ಕೃತ್ಯ, ಪಂಡಿತರ ಜೊತೆಗೆ ಬೇರೆ ಯಾರಿಗೆ ಸಮಸ್ಯೆ ಆಗಿತ್ತು ಹೇಳಬೇಕು. ಆಗ ಯಾರ ಸರ್ಕಾರ ಇತ್ತು, ಏನ್ ಮಾಡಿತ್ತು ಸರ್ಕಾರ ಎಂದು ತೋರಿಸಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಭಗವದ್ಗೀತೆ ಯಾವುದೇ ಧಾರ್ಮಿಕ ಗ್ರಂಥವಲ್ಲ: ಪ್ರತಾಪ್ ಸಿಂಹ

    ಕಾಶ್ಮೀರ್ ಫೈಲ್ಸ್ ರೀತಿಯೇ ಗುಜರಾತ್ ಘಟನೆ, ಲಖಿನ್ ಪುರ್ ಘಟನೆ ಎಲ್ಲಾನೂ ತೋರಿಸಬೇಕು. ನಾನು ಸಿನಿಮಾಗೆ ಹೋಗಲ್ಲ, ಥಿಯೇಟರ್ ಹೋಗಿ ಸಿನಿಮಾ ನೋಡಲ್ಲ. ಬಹಳ ಸಿನಿಮಾ ನೋಡಲ್ಲ, ಹಾಗೇನೇ ಕಾಶ್ಮೀರ್ ಫೈಲ್ ಕೂಡ ನೋಡಲ್ಲ ಎಂದರು.