Tag: ಕಿಮ್ಸ್

  • ಹುಬ್ಬಳ್ಳಿ | 5 ವರ್ಷದ ಬಾಲಕಿ ಹತ್ಯೆ – ಕುರುಬ ಸಂಪ್ರದಾಯದಂತೆ ನೆರವೇರಿದ ಅಂತ್ಯಕ್ರಿಯೆ

    ಹುಬ್ಬಳ್ಳಿ | 5 ವರ್ಷದ ಬಾಲಕಿ ಹತ್ಯೆ – ಕುರುಬ ಸಂಪ್ರದಾಯದಂತೆ ನೆರವೇರಿದ ಅಂತ್ಯಕ್ರಿಯೆ

    ಹುಬ್ಬಳ್ಳಿ: ಬಿಹಾರ (Bihar) ಮೂಲದ ಸೈಕೋಪಾತ್‌ನಿಂದ ಕೊಲೆಯಾದ 5 ವರ್ಷದ ಬಾಲಕಿಯ ಅಂತ್ಯಕ್ರಿಯೆ ಇಂದು ಹುಬ್ಬಳ್ಳಿಯ (Hubballi) ದೇವಾಂಗ ಪೇಟ ರುದ್ರಭೂಮಿಯಲ್ಲಿ ನೇರವೇರಿತು. ಕುಟುಂಬಸ್ಥರು ವಿಧಿವಿಧಾನಗಳೊಂದಿಗೆ ಕುರುಬ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿಸಿದರು.

    ಕಿಮ್ಸ್ (KIMS) ಆಸ್ಪತ್ರೆಯಲ್ಲಿ ನಡೆದ ಮರಣೋತ್ತರ ಪರೀಕ್ಷೆಯ ಬಳಿಕ ಬಾಲಕಿಯ ಶವವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು. ಮಗಳ ಶವವನ್ನು ಕೈಯಲ್ಲಿ ಹೊತ್ತು ತಂದ ತಂದೆ, ದೇವಾಂಗ ಪೇಟ ಸ್ಮಶಾನಕ್ಕೆ ತೆರಳಿ ಕುರುಬ ಸಂಪ್ರದಾಯದಂತೆ ಪೂಜೆ ಮಾಡಿದರು. ಬಳಿಕ ಅಗ್ನಿಸ್ಪರ್ಶ ಮಾಡುವ ಮೂಲಕ ಅಂತ್ಯಕ್ರಿಯೆ ನೆರವೇರಿಸಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.ಇದನ್ನೂ ಓದಿ: ಹುಬ್ಬಳ್ಳಿ | ಬಾಲಕಿ ಕೊಲೆ ಕೇಸ್ – ಆರೋಪಿಗೆ ಗುಂಡಿಟ್ಟ `ಲೇಡಿ ಸಿಂಗಂ’ಗೆ ಮುಂದಿನ ತಿಂಗಳಲ್ಲೇ ಮದುವೆ!

    ಘಟನೆ ಏನು?
    ಸೈಕೋಪಾತ್ ಒಬ್ಬ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿಯ ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿತ್ತು. ಬಿಹಾರ ಮೂಲದ ಸೈಕೋಪಾತ್ ಬಾಲಕಿಯನ್ನ ಶೆಡ್‌ಗೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದನು. ಬಾಲಕಿ ಚೀರಾಟ ಕೇಳಿ ಅಲ್ಲೇ ಇದ್ದ ಸ್ಥಳೀಯರು ಶೆಡ್‌ನತ್ತ ಬಂದಿದ್ದರು. ಜನ ಬರುತ್ತಿರುವುದನ್ನು ಕಂಡ ಸೈಕೋಪಾತ್ ಭಯದಿಂದ ಬಾಲಕಿಯ ಕತ್ತು ಹಿಸುಕಿ ಕೊಲೆ ಮಾಡಿ, ಎಸ್ಕೇಪ್ ಆಗಿದ್ದನು.

    ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆಯಲೆಂದು ಹೋಗಿದ್ದರು. ಈ ವೇಳೆ ಪೊಲೀಸರ ಮೇಲೆ ಕಲ್ಲು ತೂರಿ, ಎಸ್ಕೇಪ್ ಆಗಲು ಯತ್ನಿಸಿದ್ದ. ಒಮ್ಮೆ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ರೂ ಕೇಳದೇ ಪೊಲೀಸರ ಮೇಲೆ ಕಲ್ಲು ತೂರಿದ್ದ. ಈ ವೇಳೆ ಹುಬ್ಬಳ್ಳಿ ಪೊಲೀಸರು ಆತ್ಮರಕ್ಷಣೆಗಾಗಿ ಫೈರಿಂಗ್ ಮಾಡಿದ್ದರು. ಅಶೋಕನಗರ ಪೊಲೀಸ್ ಠಾಣೆಯ ಮಹಿಳಾ ಪಿಎಸ್‌ಐ ಅನ್ನಪೂರ್ಣ (PSI Annapurna) ಅವರು ಹಾರಿಸಿದ ಗುಂಡು ಬೆನ್ನಿಗೆ ತಾಗಿ ಗಾಯಗೊಂಡಿದ್ದ ಆರೋಪಿಯನ್ನ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದ್ರೆ, ಚಿಕಿತ್ಸೆ ಫಲಿಸದಿದೇ ಆರೋಪಿ ರಿತೇಶ್ ಸಾವನ್ನಪ್ಪಿದ್ದ.ಇದನ್ನೂ ಓದಿ: ಹುಬ್ಬಳ್ಳಿ ಕೊಲೆ ಪ್ರಕರಣ – ಮೃತ ಬಾಲಕಿ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ 10 ಲಕ್ಷ ಪರಿಹಾರ

  • Haveri | ಸತ್ತು ಬದುಕಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಸಾವು

    Haveri | ಸತ್ತು ಬದುಕಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಸಾವು

    ಹಾವೇರಿ: ಸತ್ತನೆಂದು ಆಸ್ಪತ್ರೆಯಿಂದ ಊರಿಗೆ ಕರೆತರುವಾಗ ಬದುಕಿದ್ದ ವ್ಯಕ್ತಿ, ವಾರದ ನಂತರ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಹಾವೇರಿ (Haveri) ಜಿಲ್ಲೆ ಶಿಗ್ಗಾಂವಿ (Shiggaon) ತಾಲೂಕಿನ ಬಂಕಾಪುರ (Bankapura) ಗ್ರಾಮದಲ್ಲಿ ನಡೆದಿದೆ.

    ಬಿಷ್ಟಪ್ಪ ಅಶೋಕ್ ಗುಡಿಮನಿ (45) ಮೃತ ವ್ಯಕ್ತಿ. ಕಳೆದ 15 ದಿನಗಳ ಹಿಂದೆ ಕಾಮಾಲೆ ರೋಗದಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ನೀಡಿದ ವೈದ್ಯರು ಸಾವನ್ನಪ್ಪಿದ್ದಾರೆ, ಊರಿಗೆ ತೆಗೆದುಕೊಂಡು ಹೋಗಿ ಎಂದು ತಿಳಿಸಿದ್ದರು. ಊರಿಗೆ ವಾಪಸ್ ಬರುತ್ತಿದ್ದ ವೇಳೆ, ಅವರ ಇಷ್ಟವಾದ ಡಾಬಾದ ಬಳಿ, ಡಾಬಾ ಬಂತು ನೋಡು ಊಟ ಮಾಡುತ್ತೀಯಾ ಎಂದು ಗೋಳಾಡಿ ಪತ್ನಿ ಕಣ್ಣೀರಿಟ್ಟಾಗ ಮೃತಪಟ್ಟ ವ್ಯಕ್ತಿ ಉಸಿರು ಬಿಟ್ಟಿದ್ದರು. ಇದನ್ನೂ ಓದಿ: ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆಗೆ ರಾಜ್ಯ ಸರ್ಕಾರವೇ ಹೊಣೆ: ಅಶ್ವಿನಿ ವೈಷ್ಣವ್‌

    ಕೂಡಲೇ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ನಂತರ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದರು. ನಿರಂತರವಾಗಿ ಒಂದು ವಾರ ಕಿಮ್ಸ್ನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು (ಶನಿವಾರ) ನಿಧನರಾಗಿದ್ದಾರೆ. ಸ್ವಗ್ರಾಮ ಬಂಕಾಪುರದಲ್ಲಿ ಮೃತರ ಅಂತ್ಯಕ್ರಿಯೆ ನಡೆಯಲಿದೆ. ಇದನ್ನೂ ಓದಿ: ಸ್ವಗ್ರಾಮದ ರೇಷ್ಮೆ ಬೆಳೆಗಾರರ ಸಹಕಾರ ಸಂಘ ಚುನಾವಣೆಯಲ್ಲಿ ಡಿಕೆಶಿ ಮತದಾನ

  • ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಆಗ್ರಹಿಸಿ ಹೋರಾಟ – ಸರ್ಕಾರದಿಂದ ವರ್ಷದ ನಂತರ ಕೈಗೊಂಡ ಕ್ರಮದ ಬಗ್ಗೆ ವಿವರ ನೀಡಲು KIMSಗೆ ಪತ್ರ

    ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಆಗ್ರಹಿಸಿ ಹೋರಾಟ – ಸರ್ಕಾರದಿಂದ ವರ್ಷದ ನಂತರ ಕೈಗೊಂಡ ಕ್ರಮದ ಬಗ್ಗೆ ವಿವರ ನೀಡಲು KIMSಗೆ ಪತ್ರ

    ಕಾರವಾರ: ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಆಗಬೇಕು ಎನ್ನುವುದು ಉತ್ತರ ಕನ್ನಡ ಜಿಲ್ಲೆಯ ಜನರ ದಶಕದ ಬೇಡಿಕೆ. ಆದರೆ, ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗಾಗಿ ಹೋರಾಟ ಮಾಡಿ ನೀಡಿದ ಮನವಿ ಅರ್ಜಿಗೆ ಬರೋಬ್ಬರಿ ಒಂದು ವರ್ಷದ ನಂತರ ಇದೀಗ ಕಾರವಾರದ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಸರ್ಕಾರ ಪತ್ರ ಬರೆದು ಮಾಹಿತಿ ಕೇಳಿದೆ.

    ಹೌದು, ಜಿಲ್ಲೆಯಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಆಗಬೇಕು ಎಂದು ಹೋರಾಟಗಾರ ಅನಂತಮೂರ್ತಿಯವರು 2023ರ ನವೆಂಬರ್‌ ತಿಂಗಳಲ್ಲಿ ಪಾದಯಾತ್ರೆ ನಡೆಸಿ ಕಾರವಾರದಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಲವು ಸಂಘಟನೆಗಳೊಂದಿಗೆ ಮನವಿ ನೀಡಿದ್ದರು.

    ಈ ಮನವಿ ಅಂದೇ ಜಿಲ್ಲಾಧಿಕಾರಿ ಮೂಲಕ ಸ್ವೀಕೃತವಾಗಿ ಸಂಬಂಧಪಟ್ಟ ಇಲಾಖೆಗೆ ತಲುಪಿತ್ತು. ಆದರೆ, ಈ ಬಗ್ಗೆ ರಾಜ್ಯ ಸರ್ಕಾರದ ನಿರ್ಲಕ್ಷ ಎಷ್ಟಿದೆ ಎಂದರೆ, ಒಂದು ವರ್ಷದ ನಂತರ ಇದೀಗ 2025 ಜ.6 ರಂದು ಕಾರವಾರದ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಪತ್ರ ಬರೆದು 15 ದಿನದೊಳಗೆ ಅರ್ಜಿದಾರರಿಗೆ ಹಾಗೂ ಸಂಬಂಧಪಟ್ಟ ನಿರ್ದೇಶನಾಲಯಕ್ಕೆ ಮಾಹಿತಿ ನೀಡಲು ಸೂಚಿಸಿದೆ.

    ಹಿಂದೆ ಏನಾಗಿತ್ತು?
    ಉತ್ತರ ಕನ್ನಡ ಜಿಲ್ಲೆಯಲ್ಲಿ ಸುಸಜ್ಜಿತ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಇಲ್ಲದ ಪರಿಣಾಮ ಪ್ರತಿನಿತ್ಯ ಚಿಕಿತ್ಸೆಗಾಗಿ ಹೊರ ಜಿಲ್ಲೆ, ಹೊರ ರಾಜ್ಯದ ಆಸ್ಪತ್ರೆಗಳಿಗೆ ಓಡಾಡುವ ಪರಿಸ್ಥಿತಿ ಇದ್ದು, ಜಿಲ್ಲೆಯಲ್ಲಿಯೇ ಸುಸಜ್ಜಿತ ಆಸ್ಪತ್ರೆ ನಿರ್ಮಾಣ ಮಾಡಬೇಕು ಎಂದು ಈ ಹಿಂದೆ ಅನೇಕ ಹೋರಾಟಗಳು ನಡೆದಿತ್ತು.

    ಅದರಲ್ಲಿ ಮುಖ್ಯವಾಗಿ, ಸಾಮಾಜಿಕ ಜಾಲತಾಣದ ಹ್ಯಾಷ್ ಟ್ಯಾಗ್ ಹೋರಾಟ, ರಕ್ತದಲ್ಲಿ ಪತ್ರ ಬರೆದು ಹೋರಾಟ, ಪಾದಯಾತ್ರೆ ಹಾಗೂ ಉಪವಾಸ ಕುಳಿತು ಜಿಲ್ಲೆಯ ಹಲವು ಸಂಘಟನೆಗಳು ಹೋರಾಟ ನಡೆಸಿದ್ದವು. ಕಳೆದ ಬಿಜೆಪಿ ಸರ್ಕಾರ ಅವಧಿಯಲ್ಲಿ ಈ ಸಂಬಂಧ ದೊಡ್ಡ ಅಭಿಯಾನವೇ ನಡೆದಿತ್ತು. ಅಂದು ವಿರೋಧ ಪಕ್ಷವಾಗಿದ್ದ ಕಾಂಗ್ರೆಸ್ ಈ ವಿಚಾರವನ್ನ ರಾಜಕೀಯವಾಗಿ ಬಳಸಿಕೊಂಡಿತ್ತು.

    ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ಹೋರಾಟದ ಪರಿಣಾಮವಾಗಿ ಸ್ವತಃ ಆರೋಗ್ಯ ಸಚಿವರೇ ಜಿಲ್ಲೆಗೆ ಬಂದು ಆಸ್ಪತ್ರೆ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ ಮಾಡಿ ತೆರಳಿದ್ದರು. ಆದರೆ, ಇದು ಕೇವಲ ನೋಡಿ ಪರಿಶೀಲನೆ ಮಾಡುವ ಹಂತದಲ್ಲೇ ಮುಗಿಯಿತೇ ವಿನಾ ಆಸ್ಪತ್ರೆ ನಿರ್ಮಾಣದ ಕಾರ್ಯವಾಗಿರಲಿಲ್ಲ. ಅಂದು ವಿರೋಧ ಪಕ್ಷವಾಗಿದ್ದ ಕಾಂಗ್ರೆಸ್ ಈ ವಿಚಾರವನ್ನ ರಾಜಕೀಯವಾಗಿ ಬಳಸಿಕೊಂಡು, ತಮ್ಮ ಸರ್ಕಾರ ಆಡಳಿತಕ್ಕೆ ಬಂದ ಕೆಲವೇ ದಿನದಲ್ಲಿ ಶಂಕುಸ್ಥಾಪನೆ ಮಾಡುವುದಾಗಿ ಹೇಳಿತ್ತು.

    ಹೋರಾಟದ ತೀವ್ರತೆಗೆ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಿಲ್ಲೆಯ ಕುಮಟಾದಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ ಮಾಡಿ ಜಾಗ ನಿಗದಿ ಮಾಡಿದ್ದರು. ಅಂದಿನ ಮುಖ್ಯಮಂತ್ರಿ ಬೊಮ್ಮಾಯಿ ಅವರು ತಕ್ಷಣ ಶಂಕುಸ್ಥಾಪನೆ ಮಾಡುವ ಹೇಳಿಕೆ ನೀಡಿದ್ದರು‌. ಆದರೆ, ಮಂಡನೆಯಾದ ಬಜೆಟ್‌ನಲ್ಲಿ ಸಹ ಇದಕ್ಕಾಗಿ ಹಣ ಮೀಸಲಿಡಲಿಲ್ಲ. ಇನ್ನು, ಆಸ್ಪತ್ರೆ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡದೇ ಇರುವುದು ವಿಧಾನಸಭಾ ಚುನಾವಣೆಯ ಸೋಲಿಗೂ ಕಾರಣವಾಗಿತ್ತು.

    ಜನಪ್ರತಿನಿಧಿಗಳ ಕಿತ್ತಾಟ! ಕೊನೆಗೂ ಮರೀಚಿಕೆಯಾಯ್ತು ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ
    ಬಿಜೆಪಿ-ಕಾಂಗ್ರೆಸ್ ಎರಡು ಪಕ್ಷಗಳೂ ಅಂದಿನ ವಿಧಾನಸಭಾ ಚುನಾವಣೆಯಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವಿಷಯವನ್ನು ಬಳಸಿಕೊಂಡರು. ಗ್ಯಾರಂಟಿ ಆಶ್ವಾಸನೆ ಕಾರಣದಿಂದಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬಂತು. ಕಾರವಾರದ ಶಾಸಕ ಸತೀಶ್ ಸೈಲ್, ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗಾಗಿ ತಮ್ಮ ಭೂಮಿಯನ್ನು ಕೊಡಲು ಸಿದ್ಧವಾಗಿದ್ದು, ಹೂಡಿಕೆಗಾಗಿ ಉದ್ಯಮಿ ಬಿ.ಆರ್.ಶಟ್ಟಿ ಅವರು ಸಹ ಕಾರವಾರಕ್ಕೆ ಆಗಮಿಸಿ ಮಾತುಕತೆ ನಡೆಸಿದ್ದರು. ಶಾಸಕ ಆರ್.ವಿ ದೇಶಪಾಂಡೆ ಸಹ ಹಳಿಯಾಳದಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಇಲ್ಲವೇ, ಇರುವ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸುವುದಾಗಿ ಹೇಳಿದ್ದರು.

    ಕೆಲವು ಜನಪ್ರತಿನಿಧಿಗಳು ಕಾರವಾರದಲ್ಲಿ ಆಗಲಿ ಎಂದರೆ, ಇನ್ನು ಕೆಲವರು ಶಿರಸಿ, ಕುಮಟಾ, ಹೊನ್ನಾವರ ಎಂದು ಗೊಂದಲ ಸೃಷ್ಟಿಸಿದ್ದರು. ಕುದ್ದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಸಹ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆಯನ್ನು ಕುಮಟಾ ಅಥವಾ ಹೊನ್ನಾವರದಲ್ಲಿ ಮಾಡ್ಬೇಕು ಎಂದು ಗಲಾಟೆ ಮಾಡ್ತಿದ್ದಾರೆ. ಅಲ್ಲಿ ನಾವು ಮಾಡ್ತೇವೆ ಎಂದು ಅವರಿಗೆ ಆಶ್ವಾಸನೆ ಕೊಟ್ಟಿದ್ದೇವೆ. ಶೀಘ್ರದಲ್ಲೇ ಶಂಕುಸ್ಥಾಪನೆ ಮಾಡುತ್ತೇವೆ ಎಂದು ಆಶ್ವಾಸನೆ ನೀಡಿದ್ದರು. ಹೀಗೆ ಗೊಂದಲದಲ್ಲಿ ಜಿಲ್ಲೆಯ ಜನರಿಗೆ ಸರ್ಕಾರ ಹಾಗೂ ಜನಪ್ರತಿನಿಧಿಗಳು ಮೂಗಿಗೆ ತುಪ್ಪ ಸವರಿ ಜನರನ್ನು ತ್ರಿಶಂಕು ಸ್ಥಿತಿಗೆ ತಳ್ಳಿದರೇ ವಿನಃ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಕನಸು ಮಾತ್ರ ಗಗನ ಕುಸುಮವಾಗಿದೆ. ಸದ್ಯ ರಾಜ್ಯ ಸರ್ಕಾರ ಬಜೆಟ್ ಮಂಡನೆ ಮಾಡಲಿದ್ದು, ಈ ಬಜೆಟ್‌ನಲ್ಲಿಯಾದರೂ ನಿಗದಿ ಮಾಡಿದ ಸ್ಥಳದಲ್ಲಿ ಮಂಜೂರಾರಿ ನೀಡಿ ಹಣ ಬಿಡುಗಡೆ ಮಾಡುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

  • ಅಂಗನವಾಡಿಗೆ ತೆರಳಿದ್ದ 3ರ ಬಾಲಕಿಗೆ ಹಾವು ಕಚ್ಚಿ ಸಾವು

    ಅಂಗನವಾಡಿಗೆ ತೆರಳಿದ್ದ 3ರ ಬಾಲಕಿಗೆ ಹಾವು ಕಚ್ಚಿ ಸಾವು

    ಹುಬ್ಬಳ್ಳಿ: ಅಂಗನವಾಡಿಗೆ ತೆರಳಿದ್ದ ಮೂರು ವರ್ಷದ ಬಾಲಕಿ ಹಾವು ಕಚ್ಚಿ ಸಾವನ್ನಪ್ಪಿರುವ ಘಟನೆ ಕಾರವಾರ (Karwar) ಜಿಲ್ಲೆಯ ಮುಂಡಗೋಡು (Mundagodu) ಅಳೂರು ಓಣಿಯಲ್ಲಿ ನಡೆದಿದೆ.ಇದನ್ನೂ ಓದಿ: ಹೊಸ ವರ್ಷ ಆಚರಣೆಗೆ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭಕ್ತರ ದಂಡು

    ಮೃತ ಬಾಲಕಿಯನ್ನು ಮಯೂರಿ(3) ಎಂದು ಗುರುತಿಸಲಾಗಿದೆ.

    ಸ್ಥಳೀಯ ಮಾರಿಕಾಂಬ ಅಂಗನವಾಡಿಗೆ ಬಾಲಕಿ ತೆರಳಿದ್ದಳು. ಹೊರಬದಿಯ ಶೌಚಾಲಯಕ್ಕೆ ತೆರಳಿದ್ದ ವೇಳೆ ಕಾಲಿಗೆ ಹಾವು ಕಚ್ಚಿದೆ. ಬಳಿಕ ಆಕೆಯನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ಮೃತಪಟ್ಟಿದ್ದಾಳೆ.ಇದನ್ನೂ ಓದಿ: ಅಮಿತ್ ಶಾ ವಿರುದ್ಧ ರಾಷ್ಟ್ರದ್ರೋಹ ಪ್ರಕರಣ ದಾಖಲಿಸಿ.. ಸಚಿವ ಸಂಪುಟದಿಂದ ಕೈಬಿಡಿ: ಜ್ಞಾನಪ್ರಕಾಶ್ ಸ್ವಾಮೀಜಿ ಆಗ್ರಹ

  • ಮೃತ ಅಯ್ಯಪ್ಪ ಮಾಲಾಧಾರಿಗಳ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

    ಮೃತ ಅಯ್ಯಪ್ಪ ಮಾಲಾಧಾರಿಗಳ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

    – ಕಿಮ್ಸ್‌ಗೆ ಸಚಿವ ಸಂತೋಷ್‌ ಲಾಡ್ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ

    ಹುಬ್ಬಳ್ಳಿ: ಸಿಲಿಂಡರ್ ಸ್ಫೋಟದಿಂದ (Cylinder Blast) ಗಂಭೀರ ಗಾಯಗೊಂಡಿದ್ದ 9 ಮಾಲಾಧಾರಿಗಳ ಪೈಕಿ ಇಬ್ಬರು ಮೃತಪಟ್ಟಿದ್ದು, ಮೃತರ ಕುಟುಂಬಕ್ಕೆ ಸರ್ಕಾರ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದೆ.

    ಹುಬ್ಬಳ್ಳಿಯ ಕಿಮ್ಸ್ (KIMS) ಆಸ್ಪತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ (Santosh Lad) ಭೇಟಿ ನೀಡಿ ಮೃತರ ಕುಟುಂಬಸ್ಥರನ್ನು ಸಂತೈಸಿದರು. ಈ ವೇಳೆ ಸಚಿವರ ಮುಂದೆ ಕುಟುಂಬಸ್ಥರು ಕಣ್ಣೀರು ಹಾಕಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಲಾಡ್, ಸಿಲಿಂಡರ್ ಸ್ಫೋಟದಲ್ಲಿ ನಿಜಲಿಂಗಪ್ಪ, ಸಂಜಯ್ ನಿಧನ ಹೊಂದಿದ್ದಾರೆ. ಈಗ ಏನು ಮಾತನಾಡಬೇಕು ಅಂತ ತೋಚುತ್ತಿಲ್ಲ. ಸರ್ಕಾರ, ಜಿಲ್ಲಾಡಳಿತ, ಕಿಮ್ಸ್ ಅವರನ್ನ ಬದುಕಿಸಲು ಪ್ರಯತ್ನ ಮಾಡಿದೆವು. 4 ನುರಿತ ವೈದ್ಯರನ್ನು ಕರೆಸಿ ಬದುಕಿಸಲು ಸಕಲ ಪ್ರಯತ್ನ ಮಾಡಲಾಗಿತ್ತು. ಆದರೆ ಇದನ್ನು ಮೀರಿ ಸುಟ್ಟ ಪ್ರಮಾಣ ಹೆಚ್ಚಾಗಿದ್ದರಿಂದ ಉಳಿಸಿಕೊಳ್ಳಲಾಗಲ್ಲಿಲ್ಲ. ಅವರ ಕುಟುಂಬಕ್ಕೆ ಸಾಂತ್ವನ ಹೇಳುವ ಜೊತೆಗೆ ನಷ್ಟ ಎದುರಿಸುವ ಶಕ್ತಿ ಆ ಕುಟುಂಬಕ್ಕೆ ನೀಡಲಿ. ಮುಖ್ಯಮಂತ್ರಿಗಳು ಸಹ ಆ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: INDIA ಒಕ್ಕೂಟದಿಂದ ಕಾಂಗ್ರೆಸ್‌ ಉಚ್ಚಾಟಿಸಿ – ಆಪ್‌ ಬಂಡಾಯ!

     

    ಮೃತಪಟ್ಟ ಕುಟುಂಬಕ್ಕೆ ಮುಖ್ಯಮಂತ್ರಿ ನಿರ್ದೇಶನದ ಮೇಲೆ ಸರ್ಕಾರದಿಂದ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ. ಇದನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಲಾಗಿದೆ. ಇನ್ನುಳಿದವರಿಗೆ ಚಿಕಿತ್ಸೆ ಮುಂದುವರೆದಿದೆ. ಓರ್ವ ಬಾಲಕನ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ಉಳಿದವರ ಕುಟುಂಬದ ಜೊತೆ ಸಮಾಲೋಚನೆ ಮಾಡಿ ಇನ್ನೂ ಹೆಚ್ಚಿನ ಚಿಕಿತ್ಸೆ ನೀಡುತ್ತೇವೆ ಎಂದರು. ಇದನ್ನೂ ಓದಿ: 2.5 ಕೋಟಿ ಚಿನ್ನಾಭರಣ ವಂಚನೆ ಕೇಸ್‌ – ನನಗೂ ಶ್ವೇತಾಗೂ ಸಂಬಂಧವಿಲ್ಲ: ಪವಿತ್ರಾಗೌಡ ಸ್ನೇಹಿತೆ ಸಮತಾ ಸ್ಪಷ್ಟನೆ

    ಸದ್ಯ ಕಿಮ್ಸ್ ಶವಾಗಾರದಿಂದ ಇಬ್ಬರು ಅಯ್ಯಪ್ಪ ಮಾಲಾಧಾರಿಗಳ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಎರಡು ಅಂಬುಲೆನ್ಸ್ ಮೂಲಕ ಮೃತದೇಹವನ್ನು ಮನೆಗೆ ರವಾನಿಸಲಾಗಿದೆ. ಸಂಜಯ್ ಸವದತ್ತಿ ಅಂತ್ಯಕ್ರಿಯೆ ವಿದ್ಯಾನಗರದ ರುದ್ರಭೂಮಿಯಲ್ಲಿ ನಡೆಯಲಿದ್ದು, ನಿಜಲಿಂಗಪ್ಪ ಅವರ ಅಂತ್ಯಸಂಸ್ಕಾರ ಹುಬ್ಬಳ್ಳಿ ತಾಲೂಕಿನ ಇಂಗಳಹಳ್ಳಿ ಗ್ರಾಮದಲ್ಲಿ ನಡೆಯಲಿದೆ. ಇದನ್ನೂ ಓದಿ: ಬಸ್ಸಿನಲ್ಲಿ ಸಿಕ್ಕಿದ್ದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ವಾಪಸ್, ವ್ಯಕ್ತಿಗೆ ಸನ್ಮಾನ

  • Hubballi| ಸಿಲಿಂಡರ್ ಬ್ಲಾಸ್ಟ್ ಪ್ರಕರಣ – ಚಿಕಿತ್ಸೆ ಫಲಕಾರಿಯಾಗದೇ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ಸಾವು

    Hubballi| ಸಿಲಿಂಡರ್ ಬ್ಲಾಸ್ಟ್ ಪ್ರಕರಣ – ಚಿಕಿತ್ಸೆ ಫಲಕಾರಿಯಾಗದೇ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ಸಾವು

    ಹುಬ್ಬಳ್ಳಿ: ಮಲಗಿದ್ದ ವೇಳೆ ಸಿಲಿಂಡರ್ ಸ್ಫೋಟಗೊಂಡು (Cylinder Blast) 9 ಅಯ್ಯಪ್ಪ ಮಾಲಾಧಾರಿಗಳು (Ayyappa Devotees) ತೀವ್ರ ಗಾಯಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕಿತ್ಸೆ ಫಲಕಾರಿಯಾಗದೇ ಇಬ್ಬರು ಮಾಲಾಧಾರಿಗಳು ಮೃತಪಟ್ಟಿದ್ದಾರೆ.

    ನಿಜಲಿಂಗಪ್ಪ ಮಲ್ಲಪ್ಪ ಬೇಪೂರು (58), ಸಂಜಯ್ ಪ್ರಕಾಶ್ ಸವದತ್ತಿ (17) ಮೃತ ಅಯ್ಯಪ್ಪ ಮಾಲಾಧಾರಿಗಳು. ಹುಬ್ಬಳ್ಳಿಯ (Hubballi) ಅಚ್ಚವನ ಕಾಲೋನಿಯ ಈಶ್ವರ ದೇವಾಲಯದಲ್ಲಿ ಮೂರು ದಿನಗಳ ಹಿಂದೆ ಸಿಲಿಂಡರ್‌ನಿಂದ ಗ್ಯಾಸ್ ಸೋರಿಕೆಯಾಗಿ ಬೆಂಕಿ ಅವಘಡ ಸಂಭವಿಸಿತ್ತು. ಘಟನೆಯಲ್ಲಿ ಒಂಬತ್ತು ಜನ ಮಾಲಾಧಾರಿಗಳು ತೀವ್ರವಾಗಿ ಗಾಯಗೊಂಡಿದ್ದರು. ಗಾಯಾಳುಗಳಿಗೆ ಕಳೆದ ಮೂರು ದಿನಗಳಿಂದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ 9 ಮಾಲಾಧಾರಿಗಳ ಪೈಕಿ ಇಬ್ಬರು ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ಉಡುಪಿಗೆ ಆಗಮಿಸಿದ ಯೋಧ ಅನೂಪ್ ಪಾರ್ಥಿವ ಶರೀರ – ಅಂತಿಮ ನಮನ ಸಲ್ಲಿಸಿದ ಚೌಟ, ಕೋಟ

    ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ಮುಂಭಾಗದಲ್ಲಿ ಮೃತರ ಕುಟುಂಬಸ್ಥರು ಮತ್ತು ಅಯ್ಯಪ್ಪ ಮಾಲಾಧಾರಿಗಳು ಸೇರಿದ್ದು, ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದೆ. ಮನೆ ಮಕ್ಕಳನ್ನ ಕಳೆದುಕೊಂಡು ಕುಟುಂಬಸ್ಥರು ಕಣ್ಣೀರು ಹಾಕುತ್ತಿದ್ದಾರೆ. ಇದನ್ನೂ ಓದಿ: ದೇಶ ಸೇವೆ ಕನಸು ಹೊತ್ತು ಸೇನೆಗೆ ಸೇರ್ಪಡೆ – 7 ವರ್ಷಗಳ ಸೇವೆ ವೀರ ಮರಣದಲ್ಲಿ ಅಂತ್ಯ

  • ಮೇ ತಿಂಗಳಿನಲ್ಲಿ 65 ಸಾವು – ಮೃತ್ಯು ಕೂಪವಾಗಿದೆ ಕೊಪ್ಪಳ ಜಿಲ್ಲಾಸ್ಪತ್ರೆ

    ಮೇ ತಿಂಗಳಿನಲ್ಲಿ 65 ಸಾವು – ಮೃತ್ಯು ಕೂಪವಾಗಿದೆ ಕೊಪ್ಪಳ ಜಿಲ್ಲಾಸ್ಪತ್ರೆ

    ಕೊಪ್ಪಳ: ಜೀವ ಉಳಿಸಬೇಕಾದ ಸರ್ಕಾರಿ ಆಸ್ಪತ್ರೆ ಈಗ ಜೀವ ತೆಗೆಯುವ ಆಸ್ಪತ್ರೆಯಾಗಿ ಬದಲಾಗಿದೆ. ಕೊಪ್ಪಳ ಜಿಲ್ಲಾ ಆಸ್ಪತ್ರೆಯಲ್ಲಿ (Koppal District Hospital) ಮೇ ಒಂದೇ ತಿಂಗಳಿನಲ್ಲಿ 65 ಮಂದಿ ಮೃತಪಟ್ಟಿದ್ದಾರೆ.

    ಈ ವರ್ಷದ ಜನವರಿಯಿಂದ ಇಲ್ಲಿಯವರೆಗೂ ಈ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ರೋಗಿಗಳ ಸಂಖ್ಯೆ 354. ಕೊಪ್ಪಳದ ಕಿಮ್ಸ್ ಆಡಳಿತ ಮಂಡಳಿಯೇ ಈ ಅಂಕಿ ಅಂಶಗಳನ್ನು ನೀಡಿದೆ. ಇಲ್ಲಿಗೆ ಬರುವ ರೋಗಿಗಳಿಗೆ ಸರಿಯಾಗಿ ಚಿಕಿತ್ಸೆ ಸಿಗುತ್ತಿಲ್ಲ. ಐಸಿಯು ಬೆಡ್‌ ಇಲ್ಲ. ಸರಿಯಾದ ವೈದ್ಯರಿಲ್ಲ ಎಂಬ ಹಲವು ದೂರುಗಳು ಈ ಆಸ್ಪತ್ರೆಯ ಮೇಲಿದೆ. ಇದನ್ನೂ ಓದಿ:  ಟೀಂ ಇಂಡಿಯಾದ ಉಪನಾಯಕ ಹಾರ್ದಿಕ್‌ ಪಾಂಡ್ಯ ಈಗ ಎಲ್ಲಿದ್ದಾರೆ?

    ಸದ್ಯ ಈ ಆಸ್ಪತ್ರೆಯಲ್ಲಿಸಾವು ಹೆಚ್ಚಾಗುತ್ತಿದ್ದರೂ ಕಿಮ್ಸ್ ಆಡಳಿತ ಮಂಡಳಿ ಇಲ್ಲಿ ಏನು ನಡೆದಿಲ್ಲ ಎಂಬಂತೆ ವರ್ತನೆ ಮಾಡುತ್ತಿದೆ. ಸಾವಿನ ಸಂಖ್ಯೆಯ ಬಗ್ಗೆ ಕಿಮ್ಸ್ ನಿರ್ದೇಶಕ ವಿಜಯ ಇಟಗಿ ಅವರನ್ನ ಕೇಳಿದರೆ ಅವರು ಬೇರೆಯೇ ಉತ್ತರ ನೀಡುತ್ತಾರೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳು ನಮ್ಮಲ್ಲಿ ಬಂದು ಒಂದೇ ದಿನದಲ್ಲಿ ಸಾವನ್ನಪ್ಪುತ್ತಾರೆ. ಹೀಗಾಗಿ ನಮ್ಮಲ್ಲಿ ಸಾವಿನ ಸಂಖ್ಯೆ ಹೆಚ್ಚಾಗ್ತಿದೆ ಎಂದು ಹೇಳುವ ಮೂಲಕ ಜಾರಿಕೊಂಡಿದ್ದಾರೆ.

    ಕೂಡಲೇ ಸರ್ಕಾರ ಹಾಗೂ ಆಡಳಿತ ಮಂಡಳಿ ಜನರಿಗೆ ಉತ್ತಮ ಸೇವೆ ನೀಡುವತ್ತ ಗಮನ ಹರಿಸಬೇಕಿದೆ.

     

  • ಕಿಮ್ಸ್‌ನ  ಜೂನಿಯರ್ ವೈದ್ಯನಿಂದ ಹೆಚ್‍ಓಡಿಗೆ ಲೈಂಗಿಕ ಕಿರುಕುಳ ಆರೋಪ

    ಕಿಮ್ಸ್‌ನ  ಜೂನಿಯರ್ ವೈದ್ಯನಿಂದ ಹೆಚ್‍ಓಡಿಗೆ ಲೈಂಗಿಕ ಕಿರುಕುಳ ಆರೋಪ

    ಬೆಂಗಳೂರು: ಕಿಮ್ಸ್ ಆಸ್ಪತ್ರೆಯಲ್ಲಿ (KIMS) ಮಹಿಳಾ ವೈದ್ಯೆಯೊಬ್ಬರಿಗೆ ಜೂನಿಯರ್ ವೈದ್ಯ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

    ಜೂನಿಯರ್ ವೈದ್ಯ ಡಾ.ರಾಜು ಎಂಬವರ ವಿರುದ್ಧ ನನ್ನನ್ನು ಹಿಂಬಾಲಿಸುತ್ತಾರೆ, ಮೈ ಕೈ ಮುಟ್ಟುತ್ತಾರೆ. ಕಾಲೇಜಿನಲ್ಲಿ ನನ್ನ ಬಗ್ಗೆ ಕೆಟ್ಟದಾಗಿ ಹೇಳಿಕೊಂಡು ಬರುತ್ತಿದ್ದಾರೆ. ಅಲ್ಲದೇ ಎದೆಯ ಮೇಲಿನ ಬಟ್ಟೆ ಎಳೆದಿದ್ದಾರೆ ಎಂದು ವೈದ್ಯೆ ಆರೋಪಿಸಿದ್ದಾರೆ. ಇದನ್ನೂ ಓದಿ: ಅಟ್ರಾಸಿಟಿ ಪ್ರಕರಣ : ಬೆಂಕಿ ತನಿಷಾಗೆ ಬಿಗ್ ರಿಲೀಫ್

    ಈ ಸಂಬಂಧ ಬನಶಂಕರಿ ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಡ್ರೋಣ್ ಪ್ರತಾಪ್ ವಿರುದ್ಧ ಡಿಜಿಸಿಎಗೆ ದೂರು ರವಾನೆ

  • ಚಲಿಸುತ್ತಿದ್ದ ಸ್ಕೂಟಿಗೆ ಹಿಂಬದಿಯಿಂದ ಬಸ್ ಡಿಕ್ಕಿ – 13ರ ಬಾಲಕಿ ಸಾವು

    ಚಲಿಸುತ್ತಿದ್ದ ಸ್ಕೂಟಿಗೆ ಹಿಂಬದಿಯಿಂದ ಬಸ್ ಡಿಕ್ಕಿ – 13ರ ಬಾಲಕಿ ಸಾವು

    ಕಾರವಾರ: ಸ್ಕೂಟಿಯಲ್ಲಿ ಸಂಚರಿಸುತಿದ್ದ ತಂದೆ-ಮಗಳಿಗೆ ಹಿಂಬದಿಯಿಂದ ಸೀಬರ್ಡ್ ಬಸ್ ಡಿಕ್ಕಿ (Road Accident) ಹೊಡೆದು ಸ್ಥಳದಲ್ಲೇ ಬಾಲಕಿ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ (Karwar) ನಗರದ ಬಿಣಗಾದ ರಾಷ್ಟ್ರೀಯ ಹೆದ್ದಾರಿ-66 (National Highway) ರಲ್ಲಿ ನಡೆದಿದೆ.

    ಲವಿತಾ ಜಾರ್ಜ ಫರ್ನಾಂಡಿಸ್ (13) ಸಾವನ್ನಪ್ಪಿದ ಬಾಲಕಿ. ಆಕೆಯ ತಂದೆ ಜಾರ್ಜ್ ಫರ್ನಾಂಡಿಸ್ ಗಾಯಗೊಂಡಿದ್ದು ಕಾರವಾರದ ಕ್ರಿಮ್ಸ್ ವೈದ್ಯಕೀಯ ಕಾಲೇಜಿನ ಆಸ್ಪತ್ರೆಗೆ (KIMS Medical College Hospital) ದಾಖಲಿಸಲಾಗಿದೆ. ಇದನ್ನೂ ಓದಿ: ಹೊಸ ವರ್ಷದ ಸಂಭ್ರಮಕ್ಕೆ ಕೌಂಟ್‍ಡೌನ್- ರೂಪಾಂತರಿ ಆತಂಕ ಹಿನ್ನೆಲೆ ಸ್ಟ್ರಿಕ್ಟ್ ರೂಲ್ಸ್

    ಬೆಂಗಳೂರಿನಿಂದ (Bengaluru) ಕಾರವಾರಕ್ಕೆ ಬರುತಿದ್ದ ಸೀ ಬರ್ಡ್ ಕಂಪನಿಯ ಬಸ್, ಬಿಣಗಾದಿಂದ ಕಾರವಾರಕ್ಕೆ ಹೋಗುತಿದ್ದ ಸ್ಕೂಟಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಕಾರವಾರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಸ್ ಚಾಲಕನನ್ನು ಬಂಧಿಸಿದ್ದಾರೆ. ಇದನ್ನೂ ಓದಿ: BREAKING: ಕೊನೆಗೂ ಗುಡ್ ನ್ಯೂಸ್ ಕೊಟ್ರು ನರೇಶ್, ಪವಿತ್ರಾ: ಮದುವೆ ಡೇಟ್ ಫಿಕ್ಸ್

    Live Tv
    [brid partner=56869869 player=32851 video=960834 autoplay=true]

  • ಉತ್ತರ ಕರ್ನಾಟಕದಲ್ಲಿ ತಾಯಿ, ನವಜಾತ ಶಿಶುಗಳ ಮರಣ ಮೃದಂಗ

    ಉತ್ತರ ಕರ್ನಾಟಕದಲ್ಲಿ ತಾಯಿ, ನವಜಾತ ಶಿಶುಗಳ ಮರಣ ಮೃದಂಗ

    -ಕೇರಳ, ಮಹಾರಾಷ್ಟ್ರ, ತಮಿಳುನಾಡನ್ನು ಹಿಂದಿಕ್ಕಿದ ಉತ್ತರ ಕರ್ನಾಟಕ
    -7 ತಿಂಗಳಲ್ಲಿ 200ರ ಗಡಿ ದಾಟಿದ ನವಜಾತ ಶಿಶುಗಳ ಸಾವು

    ಹುಬ್ಬಳ್ಳಿ: ಆರೋಗ್ಯಕರ ಸಮಾಜ ಸೃಷ್ಟಿ ಮಾಡುವ ನಿಟ್ಟಿನಲ್ಲಿ ತಾಯಿ ಮತ್ತು ನವಜಾತ ಶಿಶುಗಳ ಆರೋಗ್ಯಕ್ಕಾಗಿ ನಮ್ಮ ರಾಜ್ಯ ಸರ್ಕಾರ ನೂರಾರು ಕೋಟಿ ಅನುದಾನವನ್ನು ಖರ್ಚು ಮಾಡುತ್ತಿದೆ. ತಾಯಿ ಮತ್ತು ಶಿಶು ಮರಣ ಪ್ರಮಾಣ ನಿಯಂತ್ರಿಸಲು ಸರ್ಕಾರ ಎಷ್ಟೇ ಪ್ರಯತ್ನಿಸಿದರೂ ಸಹ ಪ್ರಯೋಜನವಾಗುತ್ತಿಲ್ಲ. ಅದರಲ್ಲೂ ಉತ್ತರ ಕರ್ನಾಟಕ (Uttarkarnataka) ಭಾಗದಲ್ಲಿ ತಾಯಿ ಮತ್ತು ಮಗುವಿನ ಮರಣ ದೇಶದಲ್ಲಿ ಹೆಚ್ಚಾಗುತ್ತಿರುವುದು ದುರಾದೃಷ್ಟಕರ ಸಂಗತಿ. ಈ ಭಾಗದ ಸಂಜೀವಿನಿ ಎಂದು ಕರೆಯಲ್ಪಡುವ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ(ಕಿಮ್ಸ್) (KIMS) ದಾಖಲಾದ ಅಂಕಿ ಅಂಶಗಳು ಬಾಣಂತಿ ಮತ್ತು ಶಿಶುಗಳಿಗೆ ಸುರಕ್ಷತೆಯಿಲ್ಲ ಎಂಬುವುದನ್ನು ಸಾಬೀತು ಪಡಿಸಿದೆ.

    ಕಿಮ್ಸ್ ಅಂಕಿ ಅಂಶಗಳ ಪ್ರಕಾರ ಈ ವರ್ಷದ ಏಪ್ರಿಲ್‍ನಿಂದ ಇಲ್ಲಿಯವರೆಗೆ 206 ಶಿಶುಗಳು ಹಾಗೂ 41 ಮೃತಪಟ್ಟಿದ್ದಾರೆ. ಈ ಪೈಕಿ ಧಾರವಾಡ (Dharwad) ಜಿಲ್ಲೆ ಒಂದರಲ್ಲಿಯೇ 17 ತಾಯಂದಿರು ಹಾಗೂ 122 ಶಿಶುಗಳು ಸಾವನ್ನಪ್ಪಿರುವುದು ನಿಜಕ್ಕೂ ಶೋಚನಿಯ. ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಯ ಅಂದರೆ ಗದಗ, ಹಾವೇರಿ, ಕೊಪ್ಪಳ, ಕಾರವಾರ, ಬಾಗಲಕೋಟೆ, ಬೆಳಗಾವಿ (Belgavi) ಜಿಲ್ಲೆಯಿಂದ ರೇಫರ್ ಆದ ಕೇಸ್‍ಗಳು ಸಹ ಈ ಅಂಕಿ ಅಂಶಗಳಲ್ಲಿ ಸೇರಿದೆ. ಈ ಸಾವಿನ ಪ್ರಮಾಣ ನಮ್ಮ ರಾಜ್ಯದ ಅಕ್ಕ-ಪಕ್ಕದ ಕೇರಳ (Kerala), ಮಹಾರಾಷ್ಟ್ರ (Maharashtra), ತಮಿಳುನಾಡನ್ನು (Tamilnadu) ಸಹ ಹಿಂದೆ ಹಾಕಿದ್ದು, ವೈದ್ಯಕೀಯ ಲೋಕದಲ್ಲಿ ಕಳವಳ ಶುರುವಾಗಿದೆ. ಇದನ್ನೂ ಓದಿ: ಭಾರತವನ್ನ ಸೋಲಿಸಿದ್ರೆ ಜಿಂಬಾಬ್ವೆ ಹುಡುಗನನ್ನ ಮದ್ವೆ ಆಗ್ತೀನಿ – ಪಾಕ್ ನಟಿ ಬಂಪರ್ ಆಫರ್

    ಈ ಪ್ರಮಾಣದ ಸಾವಿಗೆ ಗ್ರಾಮೀಣ ಭಾಗದ ಗರ್ಭಿಣಿ ಮಹಿಳೆಯರ ಮತ್ತು ಕುಟುಂಬಸ್ಥರ ನಿರ್ಲಕ್ಷ್ಯ, ಅನಕ್ಷರಸ್ಥೆ ಮತ್ತು ಮೂಢನಂಬಿಕೆ ಮೂಲಕಾರಣ. ಇದರ ಜೊತೆಗೆ ಅಪೌಷ್ಟಿಕತೆ ಆಹಾರ ಪದ್ಧತಿ ಹಿನ್ನೆಲೆ, ಬಿಪಿ, ಮೂರ್ಚೆರೋಗ, ಡೆಂಗ್ಯೂ ಜ್ವರ, ರಕ್ತದ ಕಣಗಳು ಕಡಿಮೆಯಾಗಿ ಇತ್ತೀಚೆಗೆ ಗರ್ಭಿಣಿಯರಲ್ಲಿ ಹೆಚ್ಚು ಕಾಣಿಸುತ್ತಿದ್ದು, ಇದರಿಂದ ಶಿಶು ಮತ್ತು ತಾಯಿಯರ ಸಾವಿನ ಪ್ರಮಾಣ ಜಾಸ್ತಿಯಾಗುತ್ತಿದೆ. ಇದಲ್ಲದೇ ಶಿಶುವಿಗೆ ತಾಯಿಯ ಎದೆಯ ಹಾಲು ಅಮೃತವಾಗಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಎದೆ ಹಾಲು ಬಿಟ್ಟು ಬೇರೆ ಆಹಾರ ನೀಡುವುದರಿಂದ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬಿರುತ್ತದೆ. ಇದು ಸಹ ಸಾವಿನ ಪ್ರಮಾಣ ಜಾಸ್ತಿಯಾಗಲು ಪ್ರಮುಖ ಕಾರಣ. ಇದರ ಜೊತೆಗೆ ಹೆರಿಗೆ ಸಮಯದಲ್ಲಿ ಗಂಭೀರ ಸ್ವರೂಪದ ಸಮಯದಲ್ಲಿ ಬೇರೆ, ಬೇರೆ ಜಿಲ್ಲೆಗಳ ವೈದ್ಯರು ಚಿಕಿತ್ಸೆ ನೀಡಲು ಹೆದರಿ, ಅಂತಹ ಕೇಸ್‍ಗಳನ್ನು ಕಿಮ್ಸ್‌ಗೆ ರೇಫರ್ ಮಾಡುತ್ತಿದ್ದಾರೆ. ಇದರಿಂದಾಗಿ ಮಾರ್ಗಮಧ್ಯದಲ್ಲಿ ಎಷ್ಟೋ ಜನ ಮೃತಪಟ್ಟಿರುವ ಘಟನೆ ಸಹ ನಡೆದಿವೆ. ಇದನ್ನೂ ಓದಿ: ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಎಣಿಕೆ – 2.50 ಕೋಟಿ ರೂ. ಸಂಗ್ರಹ

    Live Tv
    [brid partner=56869869 player=32851 video=960834 autoplay=true]