Tag: ಕಿರಣ್ ಮಜುಂದಾರ್ ಷಾ

  • ರಾಜ್ಯದ ನಾಲ್ಕು ಕಡೆ ಮಹಿಳೆಯರಿಗಾಗಿ ಪ್ರತ್ಯೇಕ ಉದ್ಯಮ ಪಾರ್ಕ್ ಪ್ರಾರಂಭ

    ರಾಜ್ಯದ ನಾಲ್ಕು ಕಡೆ ಮಹಿಳೆಯರಿಗಾಗಿ ಪ್ರತ್ಯೇಕ ಉದ್ಯಮ ಪಾರ್ಕ್ ಪ್ರಾರಂಭ

    -ಮಹಿಳಾ ಉದ್ಯಮಿಗಳಿಗೆ ಸರ್ಕಾರದಿಂದ ಪ್ರೋತ್ಸಾಹ

    ಬೆಂಗಳೂರು: ಮಹಿಳೆಯರನ್ನು ಉದ್ಯಮದತ್ತ ಇನ್ನಷ್ಟು ಆಕರ್ಷಿಸಲು ಮೈಸೂರು, ಧಾರವಾಡ, ಹಾರೋಹಳ್ಳಿ ಮತ್ತು ಕಲಬುರಗಿಯಲ್ಲಿ ಮಹಿಳೆಯರಿಗಾಗಿಯೇ ಪ್ರತ್ಯೇಕ ಮಹಿಳಾ ಉದ್ಯಮ ಪಾರ್ಕ್‍ಗಳು ಶೀಘ್ರದಲ್ಲೇ ಪ್ರಾರಂಭವಾಗಲಿವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ಅವರು ಹೇಳಿದ್ದಾರೆ.

    ಗುರುವಾರ ನಗರದ ಖಾಸಗಿ ಹೊಟೇಲ್‍ನಲ್ಲಿ ಅಂತಾರಾಷ್ಟ್ರೀಯ ಮಹಿಳಾ ಉದ್ಯಮ ಶೀಲತಾ ಪ್ರಯುಕ್ತ ಉಬುಂಟು ಸಂಸ್ಥೆ ಹಮ್ಮಿಕೊಂಡಿದ್ದ ‘ಟುಗೆದರ್ ವಿ ಗ್ರೋ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಉಬಂಟು, (UNUNTU-consortium of women entrepreneur’s associations) ಇದೊಂದು ಮಹಿಳಾ ವಾಣಿಜ್ಯೋದಮ ಒಕ್ಕೂಟಗಳ ಸಂಘಟನೆಯಾಗಿದೆ. ಇದರಡಿ ಸುಮಾರು 30 ಮಹಿಳಾ ಉದ್ಯಮಿಗಳ ಸಂಘಟನೆಗಳು ಹಾಗೂ 1500 ಸದಸ್ಯರ ಒಂದೇ ವೇದಿಕೆಯಡಿ ಕೆಲಸ ಮಾಡುತ್ತಾರೆ. ದೇಶದಲ್ಲೇ ಮೊದಲ ಬಾರಿಗೆ ಮಹಿಳಾ ಉದ್ಯಮಿಗಳಿಗಾಗಿಯೇ ನಿರ್ದಿಷ್ಟ ಕೈಗಾರಿಕಾ ಪಾರ್ಕ್ ಸ್ಥಾಪಿಸುತ್ತಿರುವ ಮೊದಲ ರಾಜ್ಯ ನಮ್ಮ ಕರ್ನಾಟಕ. ಇದರ ಸದುಪಯೋಗವನ್ನು ಪಡೆದುಕೊಂಡರೆ ಇದರ ಉದ್ದೇಶ ಸಾರ್ಥಕವಾಗುತ್ತದೆ ಎಂದು ತಿಳಿಸಿದರು.

    ಮಹಿಳೆಯರು ಸ್ವಯಂ ಉದ್ಯಮಿಗಳಾಗಿ ಇನ್ನೊಬ್ಬರಿಗೆ, ಉದ್ಯೋಗ ನೀಡುವ ಹಂತಕ್ಕೆ ಬೆಳೆಯುವ ಮೂಲಕ ರಾಜ್ಯದ ಕೈಗಾರಿಕಾ ಪ್ರಗತಿಯಲ್ಲಿ ಕೈ ಜೋಡಿಸಬೇಕು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮಹಿಳೆಯರು ಎಲ್ಲಾ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿದ್ದಾರೆ. ನೀವು ಉದ್ಯೋಗ ಪಡೆದರಷ್ಟೇ ಸಾಲದು. ಉದ್ಯಮಿಯಾಗುವುದರ ಜೊತೆಗೆ ನೂರಾರು ಜನರಿಗೆ ಕೆಲಸ ಕೊಡುವ ಮಟ್ಟಕ್ಕೆ ಬೆಳೆದಾಗ ಮಹಿಳಾ ಸಬಲೀಕರಣಕ್ಕೆ ನಿಜವಾದ ಅರ್ಥ ಬರುತ್ತದೆ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಬಿಟ್‍ಕಾಯಿನ್ ಹಗರಣ – ರಾಕೇಶ್ ಸಿದ್ದರಾಮಯ್ಯ ಹೆಸರು ಎಳೆದು ತಂದ ಬಿಜೆಪಿ

    ಇನ್ಫೋಸಿಸ್‍ನ ಸುಧಾ ನಾರಾಯಣ ಮೂರ್ತಿ, ಕಿರಣ್ ಮಜುಂದಾರ್ ಷಾ, ಸೇರಿದಂತೆ ಅನೇಕ ಯಶಸ್ವಿ ಮಹಿಳಾ ಉದ್ಯಮಿಗಳು ನಮಗೆಲ್ಲರಿಗೂ ಆದರ್ಶಪ್ರಾಯವಾಗಿದ್ದಾರೆ. ಅವರ ಜೀವನದ ಯಶೋಗಾಧೆ ಇಂದಿನ ಯುವ ಮಹಿಳಾ ಉದ್ಯಮಿಗಳಿಗೆ ಪ್ರೇರಣೆಯಾಗಬೇಕು. ಮಹಿಳೆಯರನ್ನು ಉದ್ಯಮದತ್ತ ಆಕರ್ಷಿಸಲು ನಮ್ಮ ಸರ್ಕಾರ ರಾಜ್ಯದಲ್ಲಿ ಅನೇಕ ಯೋಜನೆಗಳನ್ನು ಜಾರಿ ಮಾಡಿದೆ. ಉದ್ಯಮ ಶೀಲತೆಯ ಅವಕಾಶಗಳನ್ನು ಸಮರ್ಥವಾಗಿ ಬಳಸಿಕೊಳ್ಳುವ ಮೂಲಕ ಉದ್ಯೋಗದಾತರಾಗಿ ಎಂದು ಸಲಹೆ ನೀಡಿದರು.

    ಸ್ವಂತ ಉದ್ಯಮ ಸ್ಥಾಪಿಸಿ, ಉದ್ಯೋಗದಾತರಾಗುವುದರ ಜೊತಗೆ ಇತರರೂ ನಿಮ್ಮಂತೆ ಉದ್ಯಮಿಗಳಾಗಬೇಕು ಎಂಬುದು ನನ್ನ ಅಭಿಲಾಷೆಯಾಗಿದೆ. ಈ ನಿಟ್ಟಿನಲ್ಲಿ ನಮ್ಮಇಲಾಖೆ ‘ ಉದ್ಯಮಿಯಾಗು, ಉದ್ಯೋಗ ನೀಡು’ ಕಾರ್ಯಕ್ರಮ ಹಮ್ಮಿಕೊಂಡಿದ್ದೇವು. ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿದ್ದು, ಮುಂಬರುವ ದಿನಗಳಲ್ಲಿ ಬೇರೆಬೇರೆ ಜಿಲ್ಲೆಗಳಲ್ಲೂ ಈ ಕಾರ್ಯಕ್ರಮನಡೆಯಲಿದೆ. ಮಹಿಳಾ ಉದ್ಯಮಿಗಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಹೆಚ್ಚಿನ ಅರಿವಿರುವ “ಉಬುಂಟು” ದಂತಹ ಸಂಸ್ಥೆಗಳು ಈಗ ಬೆಂಬಲ ನೀಡುವ ವ್ಯವಸ್ಥೆಯಾಗಿ ಮಾರ್ಪಟ್ಟಿವೆ. ನಿಮ್ಮ ಇಂಥ ಪ್ರಯತ್ನಗಳಲ್ಲಿ ಸರ್ಕಾರ ನಿಮ್ಮ ಜೊತೆ ಇರುತ್ತದೆ. ದೇಶದಲ್ಲಿಂದು ಮಹಿಳೆಯರೇ ನಡೆಸುವಂಥಹ ಉದ್ಯಮಗಳ ಸಂಖ್ಯೆ 13.5 ರಿಂದ 15.7 ದಶಲಕ್ಷವಿದ್ದು, ಒಟ್ಟು ಉದ್ಯಮಗಳಲ್ಲಿ ಇದರ ಪಾಲು ಶೇ.20ರಷ್ಟಿದೆ ಎಂಬುದು ನಮ್ಮೆಲ್ಲರಿಗೂ ಹೆಮ್ಮೆಯ ವಿಷಯವಾಗಿದೆ. ಉದ್ಯಮಶೀಲತೆಯ ಗುಣಮಟ್ಟ ಮತ್ತು ಉತ್ಪಾದನಾ ಪ್ರಮಾಣವನ್ನು ಹೆಚ್ಚಿಸುವ ಮೂಲಕ ಮಹಿಳಾ ಸ್ವಾಮ್ಯದ ಉದ್ಯಮಗಳನ್ನು 30 ದಶಲಕ್ಷಕ್ಕೆ ಹೆಚ್ಚಿಸಬಹುದು. ಮಹಿಳೆಯರು ಮನಸ್ಸು ಮಾಡಿದರೆ ಈ ಗುರಿ ತಲುಪುವುದು ಕಷ್ಟವೇನಲ್ಲ ಎಂದು ಕಿವಿಮಾತು ಹೇಳಿದರು. ಇದನ್ನೂ ಓದಿ: ಬಿಟ್‌ಕಾಯಿನ್‌ ಹಗರಣದಲ್ಲಿ ಸಿಎಂ ತಲೆದಂಡ ಪಡೆಯಲಿದೆ: ಪ್ರಿಯಾಂಕ್ ಖರ್ಗೆ

    1948ರ ಫ್ಯಾಕ್ಟರಿ ತಿದ್ದುಪಡಿ ಕಾಯಿದೆಯಡಿ ಕಾರ್ಖಾನೆಗಳಲ್ಲಿ ರಾತ್ರಿ 7 ರಿಂದ ಬೆಳಿಗ್ಗೆ 6 ರವರೆಗೆ ಕೆಲಸ ಮಾಡಲು ಸರ್ಕಾರ ಮಹಿಳೆಯರಿಗೆ ಅನುಮತಿ ನೀಡಿದೆ. ನೂತನ ಕೈಗಾರಿಕಾ ನೀತಿಯಡಿ SC/ST, ಮಹಿಳೆಯರು ಸೇರಿದಂತೆ ವಿಶೇಷ ವರ್ಗದ ಉದ್ಯಮಿಗಳಿಗೆ ಹೆಚ್ಚುವರಿ ಪ್ರೋತ್ಸಾಹವನ್ನು ಪ್ರಸ್ತಾಪಿಸಲಾಗಿದೆ. ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ ನೇತೃತ್ವದ ಉಬುಂಟು ಮಹಿಳೆಯರಲ್ಲಿ ಉದ್ಯಮ ಶೀಲತೆಯ ಮನೋಭಾವವನ್ನು ಪ್ರೋತ್ಸಾಹಿಸಿ ಅವರು ಯಶಸ್ಸನ್ನು ಸಾಧಿಸಲು ನೆರವಾಗಿದೆ. ಇಂಥ ಸಂಘಟನೆಯ ಸಾರಥ್ಯ ವಹಿಸಿರುವ ಅವರ ಪರಿಶ್ರಮಕ್ಕೆ ಮೆಚ್ಚುಗೆ ಸೂಚಿಸಿದರು. ಇದನ್ನೂ ಓದಿ: ಬಿಜೆಪಿಯವ್ರಿಗೆ ಮಾನ-ಮರ್ಯಾದೆ ಇಲ್ಲ, ರಾಕೇಶ್ ಈಗ ಬದುಕಿದ್ದಾರಾ?- ಸಿದ್ದು ಗರಂ

  • ಚೈನಾದಿಂದ ಹೊರ ಬರುತ್ತಿರುವ ಕಂಪನಿಗಳನ್ನ ಸೆಳೆಯಲು ರಾಜ್ಯ ಸರ್ಕಾರದಿಂದ ಪ್ಲಾನ್

    ಚೈನಾದಿಂದ ಹೊರ ಬರುತ್ತಿರುವ ಕಂಪನಿಗಳನ್ನ ಸೆಳೆಯಲು ರಾಜ್ಯ ಸರ್ಕಾರದಿಂದ ಪ್ಲಾನ್

    – ಕೈಗಾರಿಕೋದ್ಯಮಿಗಳೊಂದಿಗೆ ಸಚಿವ ಜಗದೀಶ್ ಶೆಟ್ಟರ್ ಸಮಾಲೋಚನೆ

    ಬೆಂಗಳೂರು: ಕೋವಿಡ್-19 ಲಾಕ್‍ಡೌನ್ ನಂತರ ರಾಜ್ಯದ ಆರ್ಥಿಕತೆಗೆ ಉತ್ತೇಜನ ನೀಡಲು ಹಾಗೂ ಚೈನಾ ದೇಶದಿಂದ ಹೊರ ಬರುತ್ತಿರುವ ಕಂಪನಿಗಳನ್ನು ರಾಜ್ಯಕ್ಕೆ ಸೆಳೆಯುವ ಬಗ್ಗೆ ಇಂದು ವಿಧಾನಸೌಧದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಜಗದೀಶ್ ಶೆಟ್ಟರ್ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಯಿತು.

    ರಾಜ್ಯದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತಾ ಜೊತೆಯಲ್ಲಿ ರಾಜ್ಯದ ಪ್ರಮುಖ ಕೈಗಾರಿಕೋದ್ಯಮಿಗಳಾದ ಇನ್ಫೋಸಿಸ್‍ನ ನಾನ್ ಎಕ್ಸಿಕ್ಯೂಟಿವ್ ಚೇರ್ಮನ್ ನಂದನ್ ನೀಲೇಕಣಿ, ಬಯೋಕಾನ್ ಚೇರ್ ಪರ್ಸನ್ ಕಿರಣ್ ಮಜುಂದಾರ್ ಷಾ ಹಾಗೂ ಇನ್ಫೋಸಿಸ್‍ನ ಸಿಇಓ ಕ್ರಿಸ್ ಗೋಪಾಕೃಷ್ಣನ್ ಅವರ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಮಾಲೋಚನೆಯನ್ನು ನಡೆಸಲಾಯಿತು.

    ವಿಡಿಯೋ ಕನ್ಫರೆನ್ಸ್ ನಲ್ಲಿ ಮಾತನಾಡಿದ ಕೈಗಾರಿಕ ಸಚಿವ ಜಗದೀಶ್ ಶೆಟ್ಟರ್, ಲಾಕ್‍ಡೌನ್ ಸಮಯದಲ್ಲಿ ಕೈಗಾರಿಕೆಗಳ ಪ್ರಾರಂಭಕ್ಕೆ ರಾಜ್ಯ ಸರ್ಕಾರ ಕೈಗೊಂಡ ಕ್ರಮಗಳು ಹಾಗೂ ಮುತುವರ್ಜಿಯ ಬಗ್ಗೆ ಮಾಹಿತಿಯನ್ನು ನೀಡಿದರು. ಇದೇ ವೇಳೆ ರಾಜ್ಯ ಸರ್ಕಾರ ರಾಜ್ಯಕ್ಕೆ ಕೈಗಾರಿಕೆಗಳನ್ನು ಸೆಳೆಯುವ ನಿಟ್ಟಿನಲ್ಲಿ ಹೂಡಿಕೆ ಸ್ನೇಹಿ ಕ್ರಮಗಳನ್ನು ಕೈಗೊಳ್ಳುತ್ತಿರುವ ಬಗ್ಗೆ ತಿಳಿಸಿದರು.

    ಕೈಗಾರಿಕೋದ್ಯಮಿಗಳಾದ ನಂದನ್ ನೀಲೇಕಣಿ, ಕಿರಣ್ ಮಜುಂದಾರ್ ಷಾ ಹಾಗೂ ಕ್ರಿಸ್ ಗೋಪಾಕೃಷ್ಣನ್ ಕೊರೊನಾ ಮಹಾಮಾರಿಯನ್ನು ನಿಯಂತ್ರಣದಲ್ಲಿಡಲು ರಾಜ್ಯ ಸರ್ಕಾರ ಕೈಗೊಂಡ ಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ರಾಜ್ಯದ ಕೈಗಾರಿಕಾ ಕ್ಷೇತ್ರದ ಸಕಾರಾತ್ಮಕ ಮನೋಭಾವನೆಯನ್ನು ಬೆಳೆಸುವ ನಿಟ್ಟಿನಲ್ಲಿ ಹಲವಾರು ಸಲಹೆಗಳನ್ನು ನೀಡಿದರು. ಏಕಗವಾಕ್ಷಿ ಅರ್ಜಿಗಳ ವಿಲೇವಾರಿಯನ್ನು ಮತ್ತಷ್ಟು ಪರಿಣಾಮಕಾರಿಯಾಗಿಸುವುದು, ಭೂಮಿಯನ್ನು ಕೊಳ್ಳುವ ಹಾಗೂ ಪರಭಾರೆ ಮಾಡಿಕೊಳ್ಳುವ ನಿಯಮಗಳ ಸಡಲಿಕೆ, ರಾಜ್ಯದಲ್ಲಿ ನೂತನ ಕಾರ್ಖಾನೆಯನ್ನು ಪ್ರಾರಂಭಿಸಲು ಇರುವ ನಿಯಮಗಳಲ್ಲಿ ಸ್ಪಷ್ಟತೆ ತರುವುದು ಹೀಗೆ ಹತ್ತು ಹಲವು ಸಲಹೆಗಳನ್ನು ನೀಡಿದರು.

    ಕೊರೊನಾ ಮಹಮಾರಿಯ ನಂತರ ಹಲವಾರು ಕಂಪನಿಗಳು ಚೈನಾ ದೇಶದಿಂದ ತಮ್ಮ ಉತ್ಪಾದನಾ ಕಾರ್ಖಾನೆಗಳನ್ನು ಹೊರ ಬರಲು ಯೋಚನೆ ನಡೆಸುತ್ತಿವೆ. ಈ ಸನ್ನಿವೇಶದ ಸದುಪಯೋಗವನ್ನು ಪಡೆದುಕೊಳ್ಳವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮುಂದಾಗಬೇಕು. ಹೊರ ಬರುತ್ತಿರುವ ನೂರು ಕಂಪನಿಗಳ ಲಿಸ್ಟ್ ಅನ್ನು ತಯಾರಿಸಿ ಆ ಕಂಪನಿಗಳ ಜೊತೆ ಚರ್ಚೆ ಮಾಡಬೇಕು. ಈ ಹಂತದಲ್ಲಿ ಆ ಕೈಗಾರಿಕೆಗಳ ಸಿಇಓಗಳ ಜೊತೆ ಸಭೆ ನಡೆಸಲು ಕೈಗಾರಿಕೋದ್ಯಮಿಗಳು ಅಗತ್ಯ ಸಹಾಯ ನೀಡುವ ಭರವಸೆಯನ್ನು ನೀಡಿದರು.

    ಕೈಗಾರಿಕೋದ್ಯಮಿಗಳು ನೀಡಿದ ಸಲಹೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಸಚಿವರು, ಮುಂದಿನ ಕ್ರಮಗಳನ್ನು ಕೈಗೊಳ್ಳುವುದಾಗಿ ಭರವಸೆ ನೀಡಿದರು. ಜೊತೆಗೆ ನೂತನ ಕೈಗಾರಿಕಾ ನೀತಿ ಸದ್ಯದಲ್ಲೇ ಹೊರ ಬೀಳಲಿದ್ದು, ಎಂಎಸ್‍ಎಂಇ ಕೈಗಾರಿಕೆಗಳಿಗೆ ಪರಿಹಾರ ನೀಡುವ ಪ್ಯಾಕೇಜ್ ತರುವ ಬಗ್ಗೆ ಸರ್ಕಾರದ ಜೊತೆ ಚರ್ಚೆ ನಡೆಯುತ್ತಿದೆ ಎಂದು ಹೇಳಿದರು.

    ಸಭೆಯಲ್ಲಿ ರಾಜ್ಯದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ವಾಣಿಜ್ಯ ಹಾಗೂ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಗೌರವ್ ಗುಪ್ತಾ, ಕೈಗಾರಿಕಾ ಇಲಾಖೆಯ ಆಯುಕ್ತೆ ಶ್ರಿಮತಿ ಗುಂಜನ್ ಕೃಷ್ಣ ಪಾಲ್ಗೊಂಡಿದ್ದರು.

  • ಕನ್ನಡಿಗರ ಕ್ಷಮೆ ಕೇಳುವಂತೆ ಕಿರಣ್ ಮಜುಂದಾರ್ ಭಾವಚಿತ್ರಕ್ಕೆ ಪೊರಕೆ ಏಟು!

    ಕನ್ನಡಿಗರ ಕ್ಷಮೆ ಕೇಳುವಂತೆ ಕಿರಣ್ ಮಜುಂದಾರ್ ಭಾವಚಿತ್ರಕ್ಕೆ ಪೊರಕೆ ಏಟು!

    ರಾಮನಗರ: ಕನ್ನಡ ಹಾಗೂ ಕನ್ನಡ ಪರ ಹೋರಾಟಗಾರರ ಬಗ್ಗೆ ಲಘುವಾಗಿ ಮಾತನಾಡಿದ್ದ ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಷಾ ಹೇಳಿಕೆ ಖಂಡಿಸಿ ಚನ್ನಪಟ್ಟಣದಲ್ಲಿ ಇಂದು ಕನ್ನಡ ಪರ ಹೋರಾಟಗಾರರು ಪ್ರತಿಭಟನೆ ನಡೆಸಿದರು.

    ನಗರದ ಚರ್ಚ್ ಸ್ಟ್ರೀಟ್‍ನಲ್ಲಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರು ಕಿರಣ್ ಮಜುಂದಾರ್ ಷಾ ಭಾವಚಿತ್ರಕ್ಕೆ ಪೊರಕೆಯಿಂದ ಹೊಡೆಯುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಅಷ್ಟೇ ಅಲ್ಲದೇ ಕಿರಣ್ ಮಜುಂದಾರ್ ವಿರುದ್ಧ ಧಿಕ್ಕಾರ ಕೂಗಿದರು. ಕನ್ನಡಿಗರ ವಿರುದ್ಧ ಮಾತನಾಡಿರುವ ಕಿರಣ್ ಮಜುಂದಾರ್ ಷಾ ಕೂಡಲೇ ತಮ್ಮ ಹೇಳಿಕೆಯನ್ನ ವಾಪಸ್ ಪಡೆಯಬೇಕು. ಅಲ್ಲದೇ ಕನ್ನಡಿಗರ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ರಾಜ್ಯದಾದ್ಯಂತ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

    ಕಿರಣ್ ಶಾ ಹೇಳಿಕೆ ಏನು?
    ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮದಲ್ಲಿ ಪಾಠ-ಪ್ರವಚನ ನಡೆಸುವ ರಾಜ್ಯ ಸರ್ಕಾರದ ಪ್ರಸ್ತಾಪಕ್ಕೆ ವಿರೋಧ ವ್ಯಕ್ತಪಡಿಸುವ ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಅದರ ಅಧ್ಯಕ್ಷರು, ಕನ್ನಡಪರ ಹೋರಾಟಗಾರರು ಹಾಗೂ ಸಾಹಿತಿಗಳು ಕಿಡಿಗೇಡಿಗಳು ಎಂದು ಟೀಕೆ ಮಾಡಿದ್ದರು.