ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ (Narendra Modi) ಸಂಪುಟ ಪುನರ್‌ರಚನೆಯಾಗಿದ್ದು (Cabinet) ಸಚಿವರಾದ ರಿಜಿಜು (Kiren Rijiju) ಮತ್ತು ಅರ್ಜುನ್ ರಾಮ್ ಮೇಘವಾಲ್ ಅವರ ಖಾತೆ ಬದಲಾವಣೆಯಾಗಿದೆ.
ಕಾನೂನು ಸಚಿವರಾಗಿದ್ದ ಕಿರಣ್ ರಿಜಿಜುಗೆ ಭೂ ವಿಜ್ಞಾನ ಸಚಿವಾಲಯದ ಖಾತೆಯನ್ನು ನೀಡಲಾಗಿದೆ. ಸಂಸದೀಯ ವ್ಯವಹಾರ ಮತ್ತು ಸಂಸ್ಕೃತಿ ಖಾತೆಯ ರಾಜ್ಯ ಸಚಿವರಾಗಿದ್ದ ಅರ್ಜುನ್ ರಾಮ್ ಮೇಘವಾಲ್ (Arjun Ram Meghwal) ಅವರಿಗೆ ಕಾನೂನು ಸಚಿವ (Law Minister) ಸ್ಥಾನ ನೀಡಲಾಗಿದೆ. ಇದನ್ನೂ ಓದಿ: ಗಾಂಧಿ ಕುಟುಂಬದವರ ಆದೇಶಕ್ಕೆ ನಾವು ತಲೆ ಬಾಗಲೇಬೇಕು: ಡಿಕೆಶಿ
ರಿಜಿಜು 2021ರ ಜು.8 ರಂದು ಕಾನೂನು ಮತ್ತು ನ್ಯಾಯ ಸಚಿವರಾಗಿ ಅಧಿಕಾರ ವಹಿಸಿಕೊಂಡಿದ್ದರು. ಇದಕ್ಕೂ ಮೊದಲು, ಅವರು ಮೇ 2019 ರಿಂದ ಜು. 2021 ರವರೆಗೆ ಯುವ ಸಬಲೀಕರಣ ಮತ್ತು ಕ್ರೀಡೆಗಳ ರಾಜ್ಯ (ಸ್ವತಂತ್ರ ಖಾತೆ)ಯನ್ನು ನೋಡಿಕೊಳ್ಳುತ್ತಿದ್ದರು.
ಈ ವಾರ ನ್ಯಾಯಾಧೀಶರ ನೇಮಕಾತಿ ನಡೆಸುವ ಕೊಲಿಜಿಯಂ ವ್ಯವಸ್ಥೆಯ ಬಗ್ಗೆ ರಿಜಿಜು ನೀಡಿದ್ದ ಹೇಳಿಕೆಗಳ ವಿರುದ್ಧ ಬಾಂಬೆ ವಕೀಲರ ಸಂಘ (ಬಿಎಲ್‍ಎ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿತ್ತು. ಈ ಹೇಳಿಕೆ ಮತ್ತು ನಡವಳಿಕೆಯಿಂದಾಗಿ ಕೇಂದ್ರ ಸಚಿವರಿಗೆ ಸಂವಿಧಾನ ಮೇಲೆ ನಂಬಿಕೆ ಇಲ್ಲ ಎಂಬುದನ್ನು ತೋರಿಸುತ್ತದೆ ಎಂದು ಬಿಎಲ್‍ಎ ಆರೋಪಿಸಿತ್ತು. ಅಷ್ಟೇ ಅಲ್ಲದೇ ಬಿಎಲ್‍ಎ ರಿಜಿಜು ಅವರು ಕಾನೂನು ಖಾತೆಯನ್ನು ನಿರ್ವಹಿಸದಂತೆ ಆದೇಶ ನೀಡಬೇಕೆಂದು ಮನವಿ ಮಾಡಿತ್ತು.
ನ್ಯಾಯಮೂರ್ತಿಗಳ ನೇಮಕದಲ್ಲಿ ಪಾರದರ್ಶಕತೆ ಮತ್ತು ಸಾರ್ವಜನಿಕ ಉತ್ತರದಾಯಿತ್ವವನ್ನು ಕಾಪಾಡಲು ಕೇಂದ್ರ ಸರ್ಕಾರದ ಪ್ರತಿನಿಧಿಗೂ ಕೊಲಿಜಿಯಂನಲ್ಲಿ ಅವಕಾಶ ನೀಡಬೇಕೆಂದು ಕೋರಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾ. ಡಿ.ವೈ. ಚಂದ್ರಚೂಡ್ ಅವರಿಗೆ ಈ ಹಿಂದೆ ರಿಜಿಜು ಪತ್ರ ಬರೆದಿದ್ದರು. ಇದನ್ನೂ ಓದಿ: ಡಿಕೆಶಿಗೆ ಡಿಸಿಎಂ ಸ್ಥಾನ ನೀಡಿರುವುದು ನನಗೆ ಸಂಪೂರ್ಣ ಸಂತೋಷವಿಲ್ಲ: ಡಿ.ಕೆ ಸುರೇಶ್
– ಅಪಘಾತಕ್ಕೂ ಹಿಂದಿನ ದಿನ “ಪ್ರಯಾಣದುದ್ದಕ್ಕೂ ಸುಂದರವಾದ ರಸ್ತೆ ಆನಂದಿಸಬಹುದು” ಎಂದು ಹೊಗಳಿದ್ದ ಸಚಿವ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯ ಬನಿಹಾಲ್ ಪ್ರದೇಶದಲ್ಲಿ ಕಾನೂನು ಸಚಿವ ಕಿರಣ್ ರಿಜಿಜು ಕಾರು ಅಪಘಾತಕ್ಕೀಡಾದ ಘಟನೆ ನಡೆದಿದೆ. ಸಣ್ಣ ಮಟ್ಟದ ಅಪಘಾತವಾಗಿದ್ದು, ಯಾವುದೇ ಅಪಾಯ ಸಂಭವಿಸಿಲ್ಲ.
Today while going from Jammu to Srinagar by road, Union Minister for Law and Justice Kiran Rijiju’s car met with a minor accident. No one was injured in the accident. Kiren Rijiju was driven safely to his destination: Ramban Police pic.twitter.com/6bQcE1X5N7
ಶನಿವಾರ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾಮಬಾನ್‌ನಲ್ಲಿ ಕೇಂದ್ರ ಸಚಿವರ ಕಾರಿಗೆ ಟ್ರಕ್ ಡಿಕ್ಕಿ ಹೊಡೆದಿದೆ. ರಸ್ತೆ ಅಪಘಾತದಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ಎಡಿಜಿ ಮುಖೇಶ್ ಸಿಂಗ್ ತಿಳಿಸಿದ್ದಾರೆ.
Going from Jammu to Udhampur in Jammu & Kashmir to attend Legal Services Camp. Many beneficiaries of the Central Govt Schemes are attending the function along with Judges and NALSA team. Now, one can enjoy the beautiful road throughout the journey. pic.twitter.com/5yg43aJX1C
ಘಟನೆಯ ದೃಶ್ಯಾವಳಿಯ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಭದ್ರತಾ ಸಿಬ್ಬಂದಿ ಸಚಿವರ ಕಪ್ಪು ಸ್ಕಾರ್ಪಿಯೊದ ಬಾಗಿಲು ತೆರೆದು ಒಳಗಿದ್ದವರನ್ನು ಹೊರಗೆ ಕರೆತರಲು ಮುಂದಾಗುತ್ತಿರುವ ದೃಶ್ಯ ವೀಡಿಯೋದಲ್ಲಿದೆ.
ಈ ಪ್ರಯಾಣಕ್ಕೂ ಹಿಂದಿನ ದಿನ ಕಾನೂನು ಸೇವಾ ಶಿಬಿರದಲ್ಲಿ ಪಾಲ್ಗೊಳ್ಳಲು ಜಮ್ಮುವಿನಿಂದ ಉಧಮ್‌ಪುರಕ್ಕೆ ಪ್ರಯಾಣಿಸುತ್ತಿದ್ದಾಗ ಸಚಿವರು, “ಪ್ರಯಾಣದ ಉದ್ದಕ್ಕೂ ಸುಂದರವಾದ ರಸ್ತೆಯನ್ನು ಆನಂದಿಸಬಹುದು” ಎಂದು ಟ್ವೀಟ್ ಮಾಡಿದ್ದರು.
ಲಂಡನ್‌ನಲ್ಲಿ ರಾಹುಲ್‌ಗಾಂಧಿ ಮಾಡಿರುವ ಭಾಷಣಗಳ ವಿರುದ್ಧ ಕಿರಣ್ ರಿಜಿಜು ಕಿಡಿಕಾರಿದ್ದಾರೆ. ತನ್ನನ್ನು ತಾನು ಕಾಂಗ್ರೆಸ್ ರಾಜಕುಮಾರ ಎಂದು ಹೇಳಿಕೊಳ್ಳುವ ವ್ಯಕ್ತಿ ಎಲ್ಲಾ ಮಿತಿಗಳನ್ನು ಮೀರಿದ್ದಾರೆ. ಅವರು ದೇಶದ ಏಕತೆಗೆ ಅತ್ಯಂತ ಅಪಾಯಕಾರಿಯಾಗಿ ಮಾರ್ಪಟ್ಟಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಗೆಳತಿಯನ್ನು ಖುಷಿ ಪಡಿಸಲು ಹೋಗಿ ಯಡವಟ್ಟು ಮಾಡಿಕೊಂಡ 41ರ ಗೆಳೆಯ
ರಾಹುಲ್ ಗಾಂಧಿಗೆ ದೇಶದ ಬಗ್ಗೆ ನಿಯತ್ತು ಇದ್ದಿದ್ರೆ, ವಿದೇಶದಲ್ಲಿ ಭಾರತವನ್ನ ಟೀಕೆ ಮಾಡ್ತಿರಲಿಲ್ಲ ಎಂದು ಸಿಟಿ ರವಿ ವಾಗ್ದಾಳಿ ನಡೆಸಿದ್ದಾರೆ. ರಾಹುಲ್ ದೇಶದ್ರೋಹದ ಕೆಲಸ ಮಾಡಿದ್ದಾರೆ. ಅವರು ಈ ಕೂಡಲೇ ದೇಶದ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.
ನವದೆಹಲಿ: ಸುಪ್ರೀಂ ಕೋರ್ಟ್ (Supreme Court) ಮತ್ತು ಕೇಂದ್ರ ಸರ್ಕಾರದ ನಡುವಿನ ಹಗ್ಗಜಗ್ಗಾಟ ಮತ್ತಷ್ಟು ಮುಂದುವರಿದಿದೆ. ನ್ಯಾಯಮೂರ್ತಿಗಳನ್ನು ನೇಮಿಸುವ ಕೊಲಿಜಿಯಂ (Collegium) ವ್ಯವಸ್ಥೆಯಲ್ಲಿ ಸರ್ಕಾರದ ಪ್ರತಿನಿಧಿಗೂ ಅವಕಾಶ ಕಲ್ಪಿಸಬೇಕೆಂದು ಕೋರಿ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು (Kiren Rijiju) ಪತ್ರ ಬರೆದಿದ್ದಾರೆ.
ನ್ಯಾಯಮೂರ್ತಿಗಳ ನೇಮಕದಲ್ಲಿ ಪಾರದರ್ಶಕತೆ ಮತ್ತು ಸಾರ್ವಜನಿಕ ಉತ್ತರದಾಯಿತ್ವವನ್ನು ಕಾಪಾಡಲು ಕೇಂದ್ರ ಸರ್ಕಾರದ ಪ್ರತಿನಿಧಿಗೂ ಕೊಲಿಜಿಯಂನಲ್ಲಿ ಅವಕಾಶ ನೀಡಬೇಕೆಂದು ಕೋರಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾ. ಡಿ.ವೈ. ಚಂದ್ರಚೂಡ್ (CJI D.Y. Chandrachud) ಅವರಿಗೆ ಪತ್ರ ಬರೆದಿದ್ದಾರೆ.
ತಮ್ಮ ಪತ್ರದಲ್ಲಿ ರಿಜಿಜು ರಾಷ್ಟ್ರೀಯ ನ್ಯಾಯಾಂಗ ನೇಮಕಾತಿ ಆಯೋಗವನ್ನು(NJAC) 2015ರಲ್ಲಿ ರದ್ದು ಮಾಡುವಾಗ ನ್ಯಾಯಾಧೀಶರ ನೇಮಕ ಸಂಬಂಧದ ಪುನರ್ ರಚನೆಯ ಬಗ್ಗೆ ಸುಪ್ರೀಂ ಸಂವಿಧಾನಿಕ ಪೀಠ ಉಲ್ಲೇಖಿಸಿತ್ತು ಎಂದು ಪತ್ರದಲ್ಲಿ ತಿಳಿಸಿದ್ದಾರೆ.
I hope you honour Court's direction! This is precise follow-up action of the direction of Supreme Court Constitution Bench while striking down the National Judicial Appointment Commission Act. The SC Constitution Bench had directed to restructure the MoP of the collegium system. https://t.co/b1l0jVdCkJ
ಈ ಟೀಕೆಗೆ ಪ್ರತಿಕ್ರಿಯಿಸಿದ ಕಿರಣ್ ರಿಜಿಜು, ನ್ಯಾಯಾಲಯದ ನಿರ್ದೇಶನವನ್ನು ನೀವು ಗೌರವಿಸುತ್ತೀರಿ ಎಂದು ಭಾವಿಸುತ್ತೇವೆ. ರಾಷ್ಟ್ರೀಯ ನ್ಯಾಯಾಂಗ ನೇಮಕಾತಿ ಆಯೋಗದ ಕಾಯ್ದೆಯನ್ನು ಹಿಂತೆಗೆದುಕೊಳ್ಳುವ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಸಂವಿಧಾನ ಪೀಠದ ನಿರ್ದೇಶನದಂತೆ ಪತ್ರ ಬರೆಯಲಾಗಿದೆ. ಸಾಂವಿಧಾನಿಕ ಪೀಠವು ಕೊಲಿಜಿಯಂ ವ್ಯವಸ್ಥೆಯ ಕಾರ್ಯವಿಧಾನವನ್ನು ಪುನರ್ ಚಿಸುವಂತೆ ಸೂಚಿಸಿತ್ತು ಎಂದು ತಿರುಗೇಟು ನೀಡಿದ್ದಾರೆ.
ಕೊಲಿಜಿಯಂ ವ್ಯವಸ್ಥೆಯ ಮೂಲಕ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ ನ್ಯಾಯಾಧೀಶರನ್ನು ನೇಮಿಸಲಾಗುತ್ತದೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರ ಜೊತೆ ಐವರು ನ್ಯಾಯಾಧೀಶರು ಕೊಲಿಜಿಯಂ ಸದಸ್ಯರಾಗಿರುತ್ತಾರೆ. ಪ್ರಸ್ತುತ ಸಿಜೆಐ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಎಸ್‌ಕೆ ಕೌಲ್, ಕೆಎಂ ಜೋಸೆಫ್, ಎಂಆರ್ ಶಾ, ಅಜಯ್ ರಸ್ತೋಗಿ ಮತ್ತು ಸಂಜೀವ್ ಖನ್ನಾ ಅವರನ್ನು ಕೊಲಿಜಿಯಂ ಒಳಗೊಂಡಿದೆ. ಇದನ್ನೂ ಓದಿ: ನೋಟು ನಿಷೇಧ – ಸಂಸತ್ತು ಇಲ್ಲದೇ ಪ್ರಜಾಪ್ರಭುತ್ವ ಅಭಿವೃದ್ಧಿ ಹೊಂದಲು ಸಾಧ್ಯವಿಲ್ಲ: ನ್ಯಾ,ನಾಗರತ್ನ
ಧನಕರ್ ಟೀಕೆ:
83ನೇ ಅಖಿಲ ಭಾರತ ಸ್ಪೀಕರ್‌ಗಳ ಸಮ್ಮೇಳನ ಉದ್ದೇಶಿಸಿ ಮಾತನಾಡಿದ್ದ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್, ಪ್ರಜಾಪ್ರಭುತ್ವ ವ್ಯವ್ಯವಸ್ಥೆಯಲ್ಲಿ ಶಾಸನಗಳನ್ನು ರೂಪಿಸುವ ಸಂಸತ್ತೇ ಸಾರ್ವಭೌಮ. ಶಾಸನ ರಚನೆಯಲ್ಲಿ ನ್ಯಾಯಾಂಗವು ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಹೇಳುವ ಮೂಲಕ ನ್ಯಾಯಾಂಗ ವ್ಯವಸ್ಥೆಯ ವಿರುದ್ಧ ಕಿಡಿಕಾರಿದ್ದರು.
ಸಂಸತ್ತು ಸಂವಿಧಾನದ ‘ಮೂಲ ರಚನೆ’ಯನ್ನು ತಿದ್ದುಪಡಿ ಮಾಡಲು ಸಾಧ್ಯವಿಲ್ಲ ಎಂದು ಸುಪ್ರೀಂ ವಿಧಿಸಿರುವ ನಿರ್ಬಂಧವನ್ನು ನಾನು ಒಪ್ಪುವುದಿಲ್ಲ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದರು.
ಈ ಹಿಂದೆ ಸಿಜೆಐ ಡಿ.ವೈ.ಚಂದ್ರಚೂಡ್ ಅವರ ಸಮ್ಮುಖದಲ್ಲೇ ಕೊಲಿಜಿಯಂ ರದ್ದುಗೊಳಿಸಿದ ನಿರ್ಧಾರದ ವಿರುದ್ಧ ಧನಕರ್ ಅಸಮಾಧಾನ ವ್ಯಕ್ತಪಡಿಸಿದ್ದರು. ಸಂಸತ್ ಅಂಗೀಕರಿಸಿದ ಕಾನೂನನ್ನು ಸುಪ್ರೀಂ ಕೋರ್ಟ್ ರದ್ದು ಮಾಡುತ್ತದೆ. ಈ ರೀತಿ ಘಟನೆ ಪ್ರಪಂಚದಲ್ಲಿ ಎಲ್ಲೂ ಈವರೆಗೆ ನಡೆದಿಲ್ಲ ಎಂದು ನೇರವಾಗಿಯೇ ಹೇಳಿದ್ದರು.
ಸಾಂವಿಧಾನಿಕ ತಿದ್ದುಪಡಿ ಕಾಯ್ದೆ ಬಗ್ಗೆ ಚರ್ಚಿಸುವಾಗ ಇಡೀ ಸಂಸತ್ತು ಅವಿರೋಧವಾಗಿ ಎನ್‌ಜೆಎಸಿ ಕಾಯ್ದೆಯ ಪರ ಮತ ಹಾಕಿತ್ತು. ರಾಜ್ಯಸಭೆಯಲ್ಲೂ ಅವಿರೋಧವಾಗಿ ಅಂಗೀಕಾರವಾಗಿತ್ತು. ಒಬ್ಬರು ಮಾತ್ರ ಗೈರಾಗಿದ್ದರು ಎಂದು ತಿಳಿಸಿದ್ದರು.
Live Tv
[brid partner=56869869 player=32851 video=960834 autoplay=true]
ಮುಂಬೈ: ಸುಪ್ರೀಂ ಕೋರ್ಟ್ (Supreme Court) ಮತ್ತು ಹೈಕೋರ್ಟ್ ನ್ಯಾಯಮೂರ್ತಿಗಳ (High Court Judges) ನಿವೃತ್ತಿ ವಯಸ್ಸನ್ನು ಹೆಚ್ಚಿಸುವ ಯಾವುದೇ ಯೋಜನೆ ಕೇಂದ್ರ ಸರ್ಕಾರದ ಮುಂದಿಲ್ಲ ಎಂದು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು (Kiran Rijiju) ಹೇಳಿದ್ದಾರೆ. ನ್ಯಾಯಾಧೀಶರ ನಿವೃತ್ತಿ ವಯಸ್ಸು ಮತ್ತು ನ್ಯಾಯಾಂಗದಲ್ಲಿ ಪ್ರಕರಣಗಳು ಬಾಕಿ ಉಳಿಯಲು ಕಾರಣವಲ್ಲ ಎಂದು ತಿಳಿಸಿದರು.
ಮುಂಬೈನಲ್ಲಿ ನಡೆದ ಖಾಸಗಿ ವಾಹಿನಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾವು ನ್ಯಾಯಾಧೀಶರ ಅಧಿಕಾರವಧಿಯನ್ನು ಹೆಚ್ಚಿಸುತ್ತಿಲ್ಲ. ನಾವು ಸುಪ್ರೀಂ ಕೋರ್ಟ್‌ಗೆ 65 ವರ್ಷ ಮತ್ತು ಹೈಕೋರ್ಟ್‌ಗೆ 62 ವರ್ಷ ನಿವೃತ್ತಿ ವಯಸ್ಸು ಸರಿ ಎಂದು ಭಾವಿಸುತ್ತೇವೆ. ಮುಂದೆ ಇದು ಬದಲಾಗಬಹುದು. ಆದರೆ ಸದ್ಯ ಸರ್ಕಾರದ ಮುಂದೆ ಈ ಬಗ್ಗೆ ಪ್ರಸ್ತಾಪಗಳಿಲ್ಲ ಎಂದರು. ಇದನ್ನೂ ಓದಿ: ಗುಜರಾತ್ ವಿಧಾನಸಭೆ ಚುನಾವಣೆ – BJPಗೆ ಗುಡ್ ಬೈ ಹೇಳಿದ ಹಿರಿಯ ನಾಯಕ
ನ್ಯಾಯಾಂಗದಲ್ಲಿ ಹೆಚ್ಚಿನ ಸಂಖ್ಯೆಯ ಹುದ್ದೆಗಳು ಖಾಲಿ ಇರುವುದರಿಂದ ಪ್ರಕರಣಗಳ ಬಾಕಿ ಹೆಚ್ಚಿದೆ ಎಂಬ ತಪ್ಪು ಕಲ್ಪನೆ ಇದೆ. ಪ್ರಕರಣಗಳ ವಿಲೇವಾರಿಗೆ ನ್ಯಾಯಾಧೀಶರ ವಯಸ್ಸು ಅಥವಾ ಖಾಲಿ ಇರುವ ಹುದ್ದೆಗೆ ಯಾವುದೇ ಸಂಬಂಧವಿಲ್ಲ. ಜನರು ಈ ತಪ್ಪು ಕಲ್ಪನೆಯನ್ನು ಹೊಂದಿದ್ದಾರೆ. ದೊಡ್ಡ ಹುದ್ದೆಗಳ ಖಾಲಿ ಕಾರಣ ಪ್ರಕರಣಗಳು ಬಾಕಿ ಉಳಿದಿವೆ ಎನ್ನುವುದು ನಿಜವಲ್ಲ.
ಈ ನಡುವೆ ಅನರ್ಹ ಪ್ರಕರಣಗಳು ಸುಪ್ರೀಂ ಕೋರ್ಟ್‌ಗೆ ಹೋಗುತ್ತಿವೆ. ಇದು ನ್ಯಾಯಾಂಗದ ಹೊರೆಯನ್ನು ಹೆಚ್ಚಿಸುತ್ತವೆ. ಪ್ರಕರಣಗಳ ಸಂಖ್ಯೆಯನ್ನು ನೋಡಿದರೆ, ಅರ್ಧಕ್ಕಿಂತ ಹೆಚ್ಚು ಪ್ರಕರಣಗಳು ವಾಸ್ತವವಾಗಿ ವಿಚಾರಣೆಗೆ ಪಟ್ಟಿ ಮಾಡಲು ಅರ್ಹವಾಗಿಲ್ಲ. ಸುಪ್ರೀಂ ಕೋರ್ಟ್ ಜಾಮೀನು ಅರ್ಜಿಗಳಲ್ಲಿ ತಮ್ಮನ್ನು ಏಕೆ ತೊಡಗಿಸಿಕೊಳ್ಳಬೇಕು? ಪ್ರತಿ ಜಾಮೀನು ಸುಪ್ರೀಂ ಕೋರ್ಟ್‌ಗೆ ಹೋಗುತ್ತಿದೆ. ಇದನ್ನೂ ಓದಿ: ಒಂದು ಲಕ್ಷ ಸರ್ಕಾರಿ ಉದ್ಯೋಗ, ಉಚಿತ ವಿದ್ಯುತ್ – ಹಿಮಾಚಲ ಪ್ರದೇಶ ಚುನಾವಣೆಗೆ ಕಾಂಗ್ರೆಸ್ ಪ್ರಣಾಳಿಕೆ
ಸುಪ್ರೀಂ ಕೋರ್ಟ್ ಜಾಮೀನು ಅರ್ಜಿಗಳ ವಿಚಾರಣೆಗಾಗಿ ಮಾಡಿದೆಯೇ? ಜಾಮೀನು ಅರ್ಜಿಗಳನ್ನು ಕೆಳ ನ್ಯಾಯಾಲಯಗಳು ವ್ಯವಹರಿಸಬೇಕು, ಸೀಮಿತ ಪ್ರಕರಣಗಳು ಹೈಕೋರ್ಟ್‌ಗೆ ಬರಬೇಕು, ಸುಪ್ರೀಂ ಕೋರ್ಟ್‌ನಲ್ಲಿ ಗಂಭೀರ ಪ್ರಕರಣಗಳ ವಿಚಾರಣೆ ನಡೆಯಬೇಕು, ಮರಣದಂಡನೆ ಅಥವಾ ಕೆಲವು ಗಂಭೀರ ಪ್ರಕರಣಗಳ ಹೊರತು ಸುಪ್ರೀಂ ಕೋರ್ಟ್ ಜಾಮೀನು ಅರ್ಜಿಗಳನ್ನು ಏಕೆ ನಿಭಾಯಿಸಬೇಕು ಎಂದು ಪ್ರಶ್ನಿಸಿದರು.
Live Tv
[brid partner=56869869 player=32851 video=960834 autoplay=true]
ನವದೆಹಲಿ: ಸಿಬಿಐ ಪಂಜರದ ಗಿಳಿಯಲ್ಲ. ಸಿಬಿಐ ತನ್ನ ಕರ್ತವ್ಯವನ್ನು ಉತ್ತಮ ರೀತಿಯಲ್ಲಿ ನಿರ್ವಹಿಸುತ್ತಿದೆ ಎಂದು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ತಿಳಿಸಿದರು.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಈ ಹಿಂದೆ ಕೆಲವು ಅಧಿಕಾರಿಗಳು ಎದುರಿಸಿದ ಸವಾಲುಗಳು ಈಗ ಅಸ್ತಿತ್ವದಲ್ಲಿಲ್ಲ. ಕೆಲವು ಪ್ರಕರಣಗಳಲ್ಲಿ ಸಿಬಿಐನ ಕ್ರಮಗಳಿಂದ ಆರೋಪಗಳು ಕೇಳಿ ಬಂದಿತ್ತು. ಆದರೆ ಕಾಲನಂತರದಲ್ಲಿ ಸಿಬಿಐನ ವಿಶ್ವಾಸರ್ಹತೆ ಗಳಿಸಿದೆ ಎಂದರು.
ಟ್ವೀಟ್‍ನಲ್ಲಿ ಏನಿದೆ?: ಸಿಬಿಐ ಇನ್ನು ಪಂಜರದ ಗಿಳಿ ಅಲ್ಲ. ಭಾರತದ ಉನ್ನತ ಅಪರಾಧ ತನಿಖಾ ಸಂಸ್ಥೆಯಾಗಿ ನಿಜವಾಗಿಯೂ ತನ್ನ ಕರ್ತವ್ಯವನ್ನು ನಿರ್ವಹಿಸುತ್ತಿದೆ. ಒಂದು ಕಾಲವಿತ್ತು, ಸರ್ಕಾರದಲ್ಲಿರುವ ಜನರು ಕೆಲವೊಮ್ಮೆ ತನಿಖೆಗೆ ತೊಂದರೆಯಾಗಿ ಪರಿಣಮಿಸುತ್ತಿದ್ದರು. ಅದಿನ್ನು ನನಗೆ ಚೆನ್ನಾಗಿ ನೆನಪಿದೆ. ಆದರೆ ಇಂದು ಭ್ರಷ್ಟಾಚಾರದ ವಿರುದ್ಧದ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಪ್ರಧಾನಿ ಇದ್ದಾರೆ. ಇದನ್ನೂ ಓದಿ:ಧ್ವನಿವರ್ಧಕ ಬ್ಯಾನ್ ಮಾಡೋದಾದ್ರೆ, ಚರ್ಚ್, ದೇವಾಲಯಗಳಲ್ಲೂ ಬ್ಯಾನ್ ಮಾಡಿ: ಉಮರ್ ಷರೀಫ್
CBI is no more “Caged Parrot” but truly performing its duty as India’s top Criminal Investigating Agency.
Short clip of my address at the first ever conference of the Investigating Officers of CBI. pic.twitter.com/x0mkk2ayBn
ಅಧಿಕಾರದಲ್ಲಿರುವ ಜನರು ಭ್ರಷ್ಟಾಚಾರದಲ್ಲಿ ತೊಡಗಿದಾಗ ಉಂಟಾಗುವ ತೊಂದರೆಗಳೇನು ಎಂಬುದು ನನಗೆ ಗೊತ್ತು. ಇದು ಸಿಬಿಐಗೆ ಕೂಡ ಕಷ್ಟ. ಈ ಸಂಬಂಧ ನ್ಯಾಯಾಂಗದಿಂದಲೂ ನಾವು ಹಿಂದೆ ಟೀಕೆಗಳನ್ನು ಎದುರಿಸಿದ್ದೇವೆ. ಇದೀಗ ಈ ಎಲ್ಲಾ ಅಡೆತಡೆಗಳನ್ನು ದಾಟಿ ನಿಂತಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ:ಎಸ್‌ಎಸ್‌ಎಲ್‌ಸಿ, ಪಿಯಸಿ ಎಕ್ಸಾಂ ಕೆಲಸ ಮಾಡೋ ಶಿಕ್ಷಕರಿಗೆ ಹಿಜಬ್ ನಿಷೇಧ
ಸಿಬಿಐನ ತನಿಖಾ ಅಧಿಕಾರಿಗಳ ಮೊದಲ ಸಮ್ಮೇಳನದ ತಮ್ಮ ಭಾಷಣದ ಕಿರು ವೀಡಿಯೊವನ್ನು ಅವರು ಹಂಚಿಕೊಂಡಿದ್ದಾರೆ. 2013ರ ಕಲ್ಲಿದ್ದಲು ಹಂಚಿಕೆ ಪ್ರಕರಣದ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್, ಸಿಬಿಐ ಪಂಜರದ ಗಿಳಿ ಎಂದು ಹೇಳಿತ್ತು.
ನವದೆಹಲಿ: ಆಧಾರ್ ಹಾಗೂ ಮತದಾರರ ಗುರುತಿನ ಚೀಟಿಗಳ ನಡುವೆ ಲಿಂಕ್ ಮಾಡಲು ಸರ್ಕಾರಿ ಅಧಿಕಾರಿಗಳಿಗೆ ಸಾಧ್ಯವಿಲ್ಲ ಎಂದು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಶುಕ್ರವಾರ ಸಂಸತ್ತಿನಲ್ಲಿ ತಿಳಿಸಿದ್ದಾರೆ.
ಆಧಾರ್ ಬಳಸಿಕೊಂಡು ಪೌರತ್ವ ದೃಢೀಕರಿಸಲು ಸರ್ಕಾರ ಪ್ರೊಟೋಕಾಲ್ ರಚಿಸಿದೆಯೇ? ಎಂಬ ಲಿಖಿತ ಪ್ರಶ್ನೆಗೆ ಸಂಸತ್ತಿನಲ್ಲಿ ಪ್ರತಿಕ್ರಿಯಿಸಿದ ಕಿರಣ್ ರಿಜಿಜು, ಆಧಾರ್ ಹಾಗೂ ಮತದಾರರ ಗುರುತಿನ ಚೀಟಿಗಳ ನಡುವೆ ಯಾವುದೇ ರೀತಿಯ ಜೋಡಣೆ ನಡೆಸಲಾಗುವುದಿಲ್ಲ. ಆಧಾರ್ ಪೌರತ್ವದ ಪುರಾವೆಯಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಇಬ್ಬರು ಉಗ್ರರ ಸಾವು
ಆಧಾರ್ ಅನ್ನು ಕಾನೂನುಬದ್ಧ ಸಾಧನವಾಗಿ ಬಳಸುವ ವಿಚಾರವಾಗಿ ಉತ್ತರಿಸಿದ ಕಿರಣ್ ರಿಜಿಜು, ಆಧಾರ್ ಪೌರತ್ವದ ಪುರಾವೆಯಲ್ಲ. ಹೀಗಾಗಿ ಅದನ್ನು ಮತದಾರರ ಗುರುತಿನ ಚೀಟಿಯೊಂದಿಗೆ ಜೋಡಿಸುವ ಬಗ್ಗೆ ಗೊಂದಲ ಬೇಡ ಎಂದಿದ್ದಾರೆ.
ನವದೆಹಲಿ: ಏಕರೂಪ ನಾಗರಿಕ ಸಂಹಿತೆಗೆ ಸಂಬಂಧಿಸಿದ ಸಮಸ್ಯೆಗಳ ಪರಿಶೀಲನೆಯನ್ನು ಹೊಸ ಕಾನೂನು ಆಯೋಗವು ತನ್ನ ಸುಪರ್ದಿಗೆ ತೆಗೆದುಕೊಂಡಿದೆ ಎಂದು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ತಿಳಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ರಿಜಿಜು ಅವರು, ವಿವಿಧ ಸಮುದಾಯಗಳನ್ನು ನಿಯಂತ್ರಿಸುವ ವಿವಿಧ ವೈಯಕ್ತಿಕ ಕಾನೂನುಗಳ ನಿಬಂಧನೆಗಳ ಆಳವಾದ ಅಧ್ಯಯನದ ಅಗತ್ಯವಿದೆ. ಹೀಗಾಗಿ ಈ ವಿಷಯದ ಸೂಕ್ಷ್ಮತೆಯ ಅಂಶವನ್ನು ಗಮನದಲ್ಲಿಟ್ಟುಕೊಂಡು ಹೊಸ ಕಾನೂನು ಆಯೋಗದ ತೆಕ್ಕೆಗೆ ವಹಿಸಲಾಗಿದೆ ಎಂದು ಹೇಳಿದ್ದಾರೆ.
ಡಿಸೆಂಬರ್ 2020ರಲ್ಲಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಗೋವಾದ ವಿಮೋಚನೆಯ 60ನೇ ವಾರ್ಷಿಕೋತ್ಸವದ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ್ದರು. ಈ ವೇಳೆ ಗೋವಾದ ಸಾಮಾನ್ಯ ನಾಗರಿಕ ಸಂಹಿತೆಯನ್ನು ಶ್ಲಾಘಿಸಿದ್ದರು.
ವಿವಿಧ ಧಾರ್ಮಿಕ ಸಮುದಾಯಗಳನ್ನು ನಿಯಂತ್ರಿಸುವ ವಿವಿಧ ವೈಯಕ್ತಿಕ ಕಾನೂನುಗಳನ್ನು ಬದಲಿಸಲು ಏಕರೂಪ ನಾಗರಿಕ ಸಂಹಿತೆ ಜಾರಿ ವಿಷಯವು ಆಡಳಿತಾರೂಢ ಬಿಜೆಪಿಯ ಪ್ರಮುಖ ರಾಜಕೀಯ ಗುರಿಗಳಲ್ಲಿ ಒಂದಾಗಿದೆ. ಪಕ್ಷದ 2019ರ ಪ್ರಣಾಳಿಕೆಯನ್ನು ಈ ವಿಷಯ ಕಾಣಿಸಿಕೊಂಡಿತ್ತು.
ನವದೆಹಲಿ: ಅರುಣಾಚಲ ಪ್ರದೇಶದ ಮಿರಮ್ ತಾರೋನ್‍ನಿಂದ ಕಾಣೆಯಾಗಿದ್ದ ಯುವಕನನ್ನು ಚೀನಾ ಭಾರತ ಸೇನೆಗೆ ಹಸ್ತಾಂತರಿಸಿದೆ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ದೃಢಪಡಿಸಿದ್ದಾರೆ.
ಘಟನೆ ಕುರಿತು ಚೀನಾದೊಂದಿಗೆ ಪ್ರಕರಣವನ್ನು ಇತ್ಯರ್ಥ ಪಡಿಸಲು ಹಾಗೂ ಯುವಕನನ್ನು ಸುರಕ್ಷಿತವಾಗಿ ಮನೆಗೆ ಮರಳುವಂತೆ ಮಾಡಿದ ಭಾರತೀಯ ಸೇನೆಗೆ ನಾನು ಧನ್ಯವಾದ ಸಲ್ಲಿಸುತ್ತೇನೆ ಎಂದು ಕಿರಣ್ ರಿಜಿಜು ಟ್ವೀಟ್‍ನಲ್ಲಿ ತಿಳಿಸಿದರು.
The Chinese PLA has handed over the young boy from Arunachal Pradesh Shri Miram Taron to Indian Army. Due procedures are being followed including the medical examination. https://t.co/xErrEnix2h
ಘಟನೆಯೇನು?: ಜನವರಿ 18ರಂದು ಅರುಣಾಚಲ ಪ್ರದೇಶದಲ್ಲಿ ತ್ಸಾಂಗ್ಪೋ ನದಿಯು ಭಾರತವನ್ನು ಪ್ರವೇಶಿಸುವ ಸಮೀಪದಲ್ಲಿ ಜೀಡೋ ಗ್ರಾಮದ ಮಿರಾಮ್ ಟ್ಯಾರೋನ್ (17) ಹಾಗೂ ಆತನ ಸ್ನೇಹಿತ ಜಾನಿ ಯಾಯಿಂಗ್ ಬೇಟೆಗಾಗಿ ತೆರಳಿದ್ದರು. ಅಲ್ಲಿ ಮಿರಾಮ್ ಅವರನ್ನು ಚೀನಾ ಅಧಿಕಾರಿಗಳು ಅಪಹರಿಸಿದ್ದರು. ಅವನ ಜೊತೆಯಿದ್ದ ಸ್ನೇಹಿತ ಜಾನಿ ಯಾಯಿಂಗ್ ಚೀನಾ ಅಧಿಕಾರಿಗಳಿಂದ ತಪ್ಪಿಸಿಕೊಂಡು ಬಂದಿದ್ದಾನೆ. ನಂತರ ವಿರಾಮನ್ ಟ್ಯೂರೋನ್‍ನ ಅಪಹರಣದ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದನು. ಇದನ್ನೂ ಓದಿ:ನಾಪತ್ತೆಯಾಗಿದ್ದ ಯುವಕನನ್ನು ಶೀಘ್ರವೇ ಬಿಡುಗಡೆ ಮಾಡಲಿದೆ ಚೀನಾ
ಜನವರಿ 20ರಂದು, ಕಾಣೆಯಾದ ಅರುಣಾಚಲ ಯುವಕನ ಗುರುತನ್ನು ಪತ್ತೆ ಹಚ್ಚಲು ಚೀನಾದ ಕಡೆಯವರು ಭಾರತದ ಕಡೆಯಿಂದ ವಿವರಗಳನ್ನು ಕೇಳಿದ್ದರು. ನಂತರ, ಭಾರತೀಯ ಸೇನೆಯು ಮಿರಾಮ್ ಟ್ಯಾರೋನ್ ಅವರ ಗುರುತನ್ನು ಖಚಿತಪಡಿಸಲು ಅವರ ವೈಯಕ್ತಿಕ ವಿವರಗಳನ್ನು ಹಂಚಿಕೊಂಡಿತು. ಇದನ್ನೂ ಓದಿ: ಚೀನಾದಿಂದ ಅರುಣಾಚಲ ಪ್ರದೇಶದ ಹುಡುಗನ ಅಪಹರಣ – ಪ್ರಧಾನಿ ವಿರುದ್ಧ ರಾಗಾ ಕಿಡಿ
ಮಂಗಳವಾರ, ಹವಾಮಾನ ವೈಪರಿತ್ಯದಿಂದಾಗಿ ಬಿಡುಗಡೆ ವಿಳಂಬವಾಗಿದೆ. ಟ್ಯಾರನ್ ಅವರನ್ನು ಭಾರತಕ್ಕೆ ವಾಪಸ್ಸು ಕಳುಹಿಸಲಾಗುವುದು ಎಂದು ದೃಢಪಡಿಸಿತು. ಈ ಹಿನ್ನೆಲೆಯಲ್ಲಿ ಇಂದು ಯುವಕನನ್ನು ಭಾರತಕ್ಕೆ ಹಿಂದಿರುಗಿಸಿದ್ದಾರೆ. ಇದನ್ನೂ ಓದಿ: ಕಣ್ಮರೆಯಾಗಿದ್ದ ಯುವಕ ಪತ್ತೆ: ಭಾರತೀಯ ಸೇನೆಗೆ ಚೀನಾ ಮಾಹಿತಿ
ನವದೆಹಲಿ: ಜನವರಿ 18ರಂದು ನಾಪತ್ತೆಯಾಗಿದ್ದ ಅರುಣಾಚಲ ಮೂಲದ ಯುವಕನನ್ನು ಕೆಲವು ದಿನಗಳ ಬಳಿಕ ಚೀನಾದಲ್ಲಿ ಪತ್ತೆಹಚ್ಚಲಾಗಿತ್ತು. ಇದೀಗ ಚೀನಾ ಯುವಕನನ್ನು ಬಿಡುಗಡೆ ಮಾಡಲು ಸೂಚನೆ ನೀಡಿದೆ ಎಂದು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ತಿಳಿಸಿದ್ದಾರೆ.
ಅರುಣಾಚಲ ಪ್ರದೇಶದಿಂದ ನಾಪತ್ತೆಯಾಗಿದ್ದ 17 ವರ್ಷದ ಯುವಕನ ಬಿಡುಗಡೆಗೆ ಚೀನಾ ಸೂಚಿಸಿದ್ದು, ಅದರ ದಿನಾಂಕ ಹಾಗೂ ಸಮಯವನ್ನು ಶೀಘ್ರವೇ ಹಂಚಿಕೊಳ್ಳಲಿದೆ ಎಂದು ತಿಳಿಸಿದ್ದಾರೆ. ಚೀನಾ ಯುವಕನ ಬಿಡುಗಡೆಯ ಸ್ಥಳವನ್ನು ಸೂಚಿಸಿದೆ. ಆದರೆ ಹವಾಮಾನ ವೈಪರಿತ್ಯದಿಂದಾಗಿ ಬಿಡುಗಡೆ ವಿಳಂಬವಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕಣ್ಮರೆಯಾಗಿದ್ದ ಯುವಕ ಪತ್ತೆ: ಭಾರತೀಯ ಸೇನೆಗೆ ಚೀನಾ ಮಾಹಿತಿ
ಅಪ್ಪರ್ ಸಿಯಾಂಗ್ ಜಿಲ್ಲೆಯ ಜಿಡೋ ಗ್ರಾಮದ ಯುವಕ ಮಿರಾಮ್ ಟ್ಯಾರೋನ್ 2022ರ ಜನವರಿ 18 ರಂದು ಬಿಶಿಂಗ್ ಪ್ರದೇಶದ ಶಿಯುಂಗ್‌ಲಾದಿಂದ ನಾಪತ್ತೆಯಾಗಿದ್ದ. ಟ್ಯಾರೋನ್‌ನ ಸ್ನೇಹಿತ ಜಾನಿ ಯಾಯಿಂಗ್ ಚೀನಾದ ಪೀಪಲ್ಸ್ ಲಿಬರೇಷನ್ ಆರ್ಮಿ(ಪಿಎಲ್‌ಎ) ಆತನನ್ನು ಅಪಹರಿಸಿದ್ದಾಗಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದ. ಇದನ್ನೂ ಓದಿ: ಚೀನಾದಿಂದ ಅರುಣಾಚಲ ಪ್ರದೇಶದ ಹುಡುಗನ ಅಪಹರಣ – ಪ್ರಧಾನಿ ವಿರುದ್ಧ ರಾಗಾ ಕಿಡಿ
Hotline exchanged on Republic Day by Indian Army with Chinese PLA. PLA responded positively indicating handing over of our national and suggested a place of release. They are likely to intimate date and time soon. Delay attributed to bad weather conditions on their side. https://t.co/CX7pu2jIRV
ಭಾರತೀಯ ಸೇನೆ ಪಿಎಲ್‌ಎಯನ್ನು ಸಂಪರ್ಕಿಸಿ ಯುವಕನನ್ನು ಪತ್ತೆ ಹಚ್ಚಿ ಹಿಂದಿರುಗಿಸುವಂತೆ ಮನವಿ ಮಾಡಿತ್ತು. ಬಳಿಕ ಆತ ಪತ್ತೆಯಾಗಿರುವ ಬಗ್ಗೆ ಪಿಎಲ್‌ಎ ಭಾರತೀಯ ಸೇನೆಗೆ ಮಾಹಿತಿ ನೀಡಿತ್ತು.