ವಿಶ್ವದ ಪ್ರತಿಷ್ಠಿತ ಚಿತ್ರೋತ್ಸವಗಳಲ್ಲಿ ಒಂದಾದ ಕಾನ್ ಫಿಲ್ಮ್ ಫೆಸ್ಟಿವೆಲ್ ಗೆ ಮೈಸೂರಿನ ಹುಡುಗ ಚಿದಾನಂದ ನಾಯಕ್ ನಿರ್ದೇಶನದಲ್ಲಿ ಮೂಡಿ ಬಂದಿರುವ ‘ಸನ್ ಫ್ಲವರ್ಸ್ ವರ್ ದ ಫಸ್ಟ್ ಒನ್ಸ್ ಟು ನೋ’ (sunflowers were the first ones to know) ಕಿರುಚಿತ್ರ ಆಯ್ಕೆಯಾಗಿದೆ. ಇಂಥದ್ದೊಂದು ಫೆಸ್ಟಿವೆಲ್ ಗೆ ಆಯ್ಕೆಯಾದ ಮೊದಲ ಕನ್ನಡಿಗರ ಕಿರುಚಿತ್ರ ಇದಾಗಿದೆ.
ರಚನೆ ಮತ್ತು ನಿರ್ದೇಶನದ ಜವಾಬ್ದಾರಿಯನ್ನು ಚಿದಾನಂದ (Chidananda Nayak) ಹೊತ್ತಿದ್ದರೆ, ವಿ. ಮನೋಜ್ ಅವರ ಸಂಕಲನವಿದೆ. ಪುಣೆಯ ಫಿಲ್ಮ್ ಅಂಡ್ ಟೆಲಿವಿಷನ್ ಇನ್ ಸ್ಟಿಟ್ಯೂಟ್ ಈ ಚಿತ್ರವನ್ನು ನಿರ್ಮಾಣ ಮಾಡಿದೆ. ಅಲ್ಲದೇ ಕನ್ನಡದ ಅನೇಕ ಕಲಾವಿದರು ಈ ಕಿರುಚಿತ್ರದಲ್ಲಿ ನಟಿಸಿದ್ದಾರೆ.
ಕಾನ್ ಚಿತ್ರೋತ್ಸವಕ್ಕೆ ತಮ್ಮ ಕಿರುಚಿತ್ರ ಆಯ್ಕೆಯಾಗಿರುವುದು ಸಹಜವಾಗಿಯೇ ಚಿದಾನಂದ್ ಅವರಿಗೆ ಸಂಭ್ರಮ ತಂದಿದೆ. ಕಾನ್ ನೋಡುಗರು ಈ ಕಿರುಚಿತ್ರವನ್ನು ಹೇಗೆ ಸ್ವೀಕರಿಸುತ್ತಾರೆ ಎನ್ನುವ ಕುತೂಹಲ ಎಲ್ಲರದ್ದು.
ಹೆಸರಾಂತ ಸಾಹಿತಿ ಹಾಗೂ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ (Nagatihalli Chandrasekhar) ಅವರ ಟೆಂಟ್ ಸ್ಕೂಲ್ ಆಫ್ ಸಿನಿಮಾದಲ್ಲಿ ಕಾರ್ಯಗಾರ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿರುವ ಮನ್ ಚಂಗಪ್ಪ ನಿರ್ದೇಶಿಸಿರುವ ಮೊದಲ ಕಿರುಚಿತ್ರ ‘ದ್ವಂದ್ವಂ ದ್ವಯಂ’ (Dvandvam Dwayam). ಇತ್ತೀಚಿಗೆ ಈ ಕಿರುಚಿತ್ರದ ಪ್ರದರ್ಶನ ಹಾಗೂ ಸಂವಾದ ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದಲ್ಲಿ ನೆರವೇರಿತು. ನಾಗತಿಹಳ್ಳಿ ಚಂದ್ರಶೇಖರ್, ಡಾ.ನಾದ ಶೆಟ್ಟಿ, ಅಶೋಕ್ ಕಶ್ಯಪ್, ಅನೂಪ್ ಭಂಡಾರಿ ಹಾಗೂ ಚಂಪಾ ಶೆಟ್ಟಿ ಮುಖ್ಯ ಅತಿಥಿಗಳಾಗಿ ಆಗಮಿಸಿ, ಕಿರುಚಿತ್ರವನ್ನು ವೀಕ್ಷಿಸಿ ತಮ್ಮ ಪ್ರೋತ್ಸಾಹಭರಿತ ಮಾತುಗಳೊಂದಿಗೆ ಕಿರುಚಿತ್ರ (Short Film) ತಂಡದವರಿಗೆ ಶುಭ ಕೋರಿದರು.
ಮರಣದಂಡನೆಗೆ ಮುನ್ನ ಜೈಲು ಕೈದಿಯೊಬ್ಬನ ಕೊನೆಯ ರಾತ್ರಿಯ ಕ್ಯಾನ್ವಾಸ್ ನಲ್ಲಿ ತೆರೆದುಕೊಳ್ಳುವ ಚಿತ್ರವಿದು. ಪ್ರತಿಯೊಬ್ಬ ವ್ಯಕ್ತಿಯ ಅಸ್ತಿತ್ವದಲ್ಲಿ ಅಂತರ್ಗತವಾಗಿರುವ ಸಂಕೀರ್ಣವಾಗಿ ಪರಿಶೀಲಿಸುವ ಚಿತ್ರವಿದು. 17 ನಿಮಿಷಗಳ ಅವಧಿಯಲ್ಲಿ ಮಾನವ ಬದುಕಿನ ಸಂಕೀರ್ಣತೆಗಳನ್ನು ಆಳವಾಗಿ ಪರಿಶೋಧಿಸುವ ಪ್ರಯತ್ನವನ್ನು ಈ ಕಿರುಚಿತ್ರ ಮಾಡುತ್ತದೆ. ನಮ್ಮೆಲ್ಲರೊಳಗಿನ ಜೀವನ ಹಾಗೂ ಆಯ್ಕೆಗಳ ಅನ್ವೇಷಣೆಯೇ ಈ ದ್ವಂದ್ವಂ ದ್ವಯಂ ಎಂದು ಕಿರುಚಿತ್ರದ ಬಗ್ಗೆ ಕಿರು ಪರಿಚಯ ಮಾಡಿಕೊಟ್ಟ ನಿರ್ದೇಶಕ ಮನ್ ಚಂಗಪ್ಪ, ನನ್ನ ಮೊದಲ ಕಿರುಚಿತ್ರದ ಪ್ರದರ್ಶನ, ನನ್ನ ಇಬ್ಬರು ಗುರುಗಳಾದ ನಾಗತಿಹಳ್ಳಿ ಚಂದ್ರಶೇಖರ್ ಹಾಗೂ ನಾದ ಶೆಟ್ಟಿ ಅವರ ಮುಂದೆ ಆಗಿರುವುದು ಬಹಳ ಖುಷಿಯಾಗಿದೆ. ಮುಖ್ಯ ಅತಿಥಿಗಳಾಗಿ ಆಗಮಿಸಿರುವ ಛಾಯಾಗ್ರಾಹಕ ಹಾಗೂ ನಿರ್ದೇಶಕ ಅಶೋಕ್ ಕಶ್ಯಪ್, ನಿರ್ದೇಶಕಿ ಚಂಪಾ ಶೆಟ್ಟಿ ಹಾಗೂ ನಿರ್ದೇಶಕ ಅನೂಪ್ ಭಂಡಾರಿ ಅವರಿಗೆ ಮತ್ತು ನನ್ನ ಇಡೀ ತಂಡಕ್ಕೆ ಧನ್ಯವಾದ ತಿಳಿಸುತ್ತೇನೆ. ನನ್ನ ಮೊದಲ ಪ್ರಯತ್ನಕ್ಕೆ ನಿಮ್ಮೆಲ್ಲರ ಬೆಂಬಲವಿರಲಿ ಎಂದರು.
ಯಲೋ ಡೈರೀಸ್ ಮೂಲಕ ಹರ್ಷಿಕಾ ವಸಂತ್ ಈ ಕಿರುಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಈಗಾಗಲೇ ಕೆಲವು ಚಿತ್ರಗಳಲ್ಲಿ ನಟಿಸಿರುವ ವಿಕಾಶ್ ಉತ್ತಯ್ಯ “ಸೂರ್ಯ” ಎಂಬ ಪ್ರಮುಖಪಾತ್ರದಲ್ಲಿ ಅಭಿನಯಿಸಿದ್ದಾರೆ. ಸೂರ್ಯ ಹಾಗೂ ಸುಮೋಕ್ಷ ತಾರಾಬಳಗದಲ್ಲಿದ್ದಾರೆ.
ಮನ್ ಚಂಗಪ್ಪ ಅವರೆ ಕಥೆ, ಚಿತ್ರಕಥೆ ಬರೆದಿದ್ದು, ಸಂಭಾಷಣೆ ನಾದ ಶೆಟ್ಟಿ ಅವರದು. ರಿತ್ವಿಕ್ ಮುರಳಿಧರ್ ಸಂಗೀತ ನಿರ್ದೇಶನ, ರಾಜಾರಾವ್ ಅಂಚಲ್ಕರ್ ಛಾಯಾಗ್ರಹಣ ಹಾಗೂ ಉದಯ್ ಕುಮಾರ್ ಅವರ ಸಂಕಲನ ದ್ವಂದ್ವಂ ದ್ವಯಂ ಕಿರುಚಿತ್ರಕ್ಕಿದೆ.
ಚಂದನವನದಲ್ಲಿ ಯುವ ಪ್ರತಿಭೆಗಳ ಅದೃಷ್ಟ ಪರೀಕ್ಷೆಗೆ ‘ಸತ್ಯ ಹೆಗಡೆ (Satya Hegde) ಸ್ಟುಡಿಯೋಸ್’ ವರದಾನವಾಗುತ್ತಿದೆ. ಹೌದು ಛಾಯಾಗ್ರಾಹಕನಾಗಿ ಹೆಸರು ಮಾಡಿರುವ ಸತ್ಯ ಹೆಗಡೆ ‘ಸತ್ಯ ಹೆಗಡೆ ಸ್ಟುಡಿಯೋ’ ಹುಟ್ಟುಹಾಕಿ ಹೊಸ ಪ್ರತಿಭೆಗಳಿಗೆ ಬೆನ್ನೆಲುಬಾಗಿ ನಿಂತಿದ್ದು, ಈ ಸಂಸ್ಥೆಯ ಮುಖೇನ ಶಾರ್ಟ್ ಫಿಲ್ಮಗಳನ್ನು ನಿರ್ಮಾಣ ಮಾಡುವ ಜೊತೆಗೆ ಸತ್ಯ ಹೆಗಡೆ ಸ್ಟುಡಿಯೋಸ್ ಯೂಟ್ಯೂಬ್ ಚಾನೆಲ್ ನಲ್ಲಿ ಅವುಗಳನ್ನು ಬಿಡುಗಡೆ ಮಾಡುತ್ತಿದ್ದಾರೆ. ಈ ಮೂಲಕ ಯುವಕರು ತಮ್ಮ ನಿರ್ದೇಶಕನಾಗುವ ಕನಸನ್ನು ನನಸು ಮಾಡಿಕೊಳ್ಳುತ್ತಿದ್ದು, ಈಗಾಗಲೇ ಈ ಯೂಟ್ಯೂಬ್ ಚಾನಲ್ ಮೂಲಕ 11 ಕಿರು ಚಿತ್ರಗಳು ಬಿಡುಗಡೆ ಆಗಿವೆ.
ಇದೀಗ ಮೂರು ಫಿಲ್ಮ್ ಗಳು ಈ ಚಾನಲ್ ನಲ್ಲಿ ಬಿಡುಗಡೆಗೆ ಸಿದ್ದವಾಗಿದ್ದು, ಆ ಪೈಕಿ ಕಳೆದ ಶನಿವಾರ ‘ಗ್ರಾಚಾರ’ ಎಂಬ ಕಿರುಚಿತ್ರ ರಿಲೀಸ್ ಆಗಿದ್ದು ಮುಂದಿನ ದಿನಗಳಲ್ಲಿ ‘ಕಥೆಗಾರನ ಕತೆ’ ಹಾಗೂ ‘ಅಹಂ ಪರಂ’ ಶಾರ್ಟ್ ಫಿಲಂ ಗಳು ಈ ಸತ್ಯ ಹೆಗಡೆ ಸ್ಟುಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಲಿವೆ. ಹಾಗಾಗಿ ಇತ್ತೀಚಿಗಷ್ಟೇ ಸತ್ಯ ಹೆಗಡೆ ಹಾಗೂ ಅವರ ತಂಡ ಆ ಮೂರು ಕಿರು ಚಿತ್ರಗಳ ಪ್ರದರ್ಶನ ಹಾಗೂ ಪತ್ರಿಕಾಗೋಷ್ಠಿ ಆಯೋಜಿಸಿತ್ತು. ಇದನ್ನೂ ಓದಿ: ಭಾರತದ ದಿ ಎಲಿಫೆಂಟ್ ವಿಸ್ಪರರ್ಸ್ ಕಿರುಚಿತ್ರಕ್ಕೆ ಆಸ್ಕರ್ ಪ್ರಶಸ್ತಿ
ಒಂಬತ್ತು ನಿಮಿಷಗಳ ‘ಕತೆಗಾರನ ಕಥೆ’ ಕಿರು ಚಿತ್ರವನ್ನು ಯುವ ಬರಹಗಾರ ಹಾಗೂ ನಿರ್ದೇಶಕ ಕೌಶಿಕ ಕೂಡುರಸ್ತೆ ನಿರ್ದೇಶನ ಮಾಡಿದ್ದಾರೆ. ಹಾಸನ ಮೂಲದವರಾದ ಕೌಶಿಕ ‘ಹೃದಯದ ಮಾತು’ ಸೇರಿದಂತೆ ೮ ಕಾದಂಬರಿಗಳನ್ನು ಬರೆದಿದ್ದು ಕೆಲವೊಂದು ಸಿನಿಮಾಗಳಿಗೆ ಸಹಾಯಕ ನಿರ್ದೇಶಕನಾಗಿ ಕೆಲಸ ಕೂಡ ಮಾಡಿದ್ದಾರೆ. ಇಂಜಿನಿಯರಿಂಗ್ ಓದಿಕೊಂಡಿರುವ ಕೌಶಿಕಗೆ ಇದು ಮೊದಲ ಪ್ರಯತ್ನ. ಈಗಷ್ಟೇ ಬಿಡುಗಡೆ ಆಗಿರುವ ‘ಗ್ರಾಚಾರ’ ಕಿರು ಚಿತ್ರವನ್ನು ಅಜಯ್ ಪಂಡಿತ್ ನಿರ್ದೇಶನ ಮಾಡಿದ್ದು, ಇವರು ಮೂಲತಃ ಸಾಗರನವರು. ಇವರು ಕೂಡ ಸಾಫ್ಟವೇರ್ ಇಂಜಿನಿಯರಿಂಗ್ ಓದಿಕೊಂಡಿದ್ದಾರೆ. ಇನ್ನು ವಿಭಿನ್ನ ಪ್ರಯತ್ನದಂತೆ ‘ಅಹಂ ಪರಂ’ ಕಿರುಚಿತ್ರ ಸಿದ್ಧವಾಗಿದ್ದು ಇದನ್ನು ವಿನಯ್ ಚಂದ್ರಹಾಸ ನಿರ್ದೇಶನ ಮಾಡಿದ್ದಾರೆ.
ಈ ಕಿರುಚಿತ್ರಗಳ ವೀಕ್ಷಣೆಗೆ ಅಥಿತಿಗಳಾಗಿ ಆಗಮಿಸಿದ್ದರು ನಿದರ್ಶಕರಾದ ಗಿರಿರಾಜ್, ಚೇತನ ಕುಮಾರ್, ನಟ ‘ಗುಲ್ಟು’ ನವೀನ ಮುಂತಾದವರು. ಆ ಪೈಕಿ ನಿರ್ದೇಶಕ ಗಿರಿರಾಜ್ ಮಾತನಾಡಿ, ‘ಇಂದಿನ ಯುವಕರಿಗೆ ಶಾರ್ಟ್ ಫಿಲಂಗಳು ಒಂದು ಒಳ್ಳೆ ಅವಕಾಶ ಆಗುತ್ತಿವೆ. ಯುವಕರ ಪ್ರಯತ್ನಗಳಿಗೆ ಸತ್ಯ ಹೆಗಡೆ ಸ್ಟುಡಿಯೋಸ್ ಸಾಕಷ್ಟು ಸಹಾಯ ಮಾಡುತ್ತಿದೆ. ನಮ್ಮಗಳ ಕಾಲದಲ್ಲಿ ಇಂತಹ ಅವಕಾಶ ಇರಲಿಲ್ಲ. ಈಗಿನ ಯುವಕರಿಗೆ ಒಳ್ಳೆಯ ಅವಕಾಶವನ್ನು ಸತ್ಯ ಹೆಗಡೆ ಮಾಡಿಕೊಡುತ್ತಿದ್ದಾರೆ. ಮೂರು ಚಿತ್ರಗಳು ಚೆನ್ನಾಗಿ ಬಂದಿದ್ದು, ಒಳ್ಳೆಯ ಕೆಲಸ ಮಾಡಿದ್ದಾರೆ. ಈ ಯುವ ಪ್ರತಿಭೆಗಳಿಗೆ ಒಳ್ಳೆಯದಾಗಲಿ’ ಎಂದು ಶುಭ ಹಾರೈಸಿದರು.
ನಟ ನವೀನ್ ಮಾತನಾಡಿ, ‘ನಾನು ಕೂಡ ಶಾರ್ಟ್ ಫಿಲಂಗಳಲ್ಲಿ ಅಭಿನಯಿಸುತ್ತಾ ಬಂದವನು. ನಾವು ಶಾರ್ಟ್ ಫಿಲಂ ತಯಾರಿಸುವಾಗ ಸತ್ಯ ಹೆಗಡೆಯಂತವರು ನಮಗೆ ಯಾರು ಸಾಥ್ ನೀಡಿರಲಿಲ್ಲ. ಈಗಿನವರೆಗೆ ಒಳ್ಳೆಯ ಅವಕಾಶ ಸಿಗುತ್ತದೆ ಕಿರುಚಿತ್ರಗಳನ್ನು ಬಿಡುಗಡೆ ಮಾಡಲು. ಇಂತಹ ಅವಕಾಶವನ್ನು ಇನ್ನಷ್ಟು ಯುವ ಜನರಿಗೆ ಸಿಕ್ಕು ಒಳ್ಳೆಯ ಚಿತ್ರಗಳನ್ನು ತರಬೇಕು. ಈ ಶಾರ್ಟ್ ಫಿಲಂ ವೇದಿಕೆ ಯುವ ಪ್ರತಿಭೆಗಳಿಗೆ ತುಂಬಾ ಅನುಕೂಲವಾಗುತ್ತದೆ’ ಎಂದರು.
ಕಾರ್ತಿಕಿ ಗೊನ್ಸಾಲ್ವೆಸ್ ನಿರ್ದೇಶಿಸಿರುವ ಹಾಗೂ ಗುನೀತ್ ಮೊಂಗಾ ನಿರ್ಮಾಣದ ಭಾರತದ ಕಿರುಚಿತ್ರ ದಿ ಎಲಿಫೆಂಟ್ ವಿಸ್ಪರರ್ಸ್‌ಗೆ (The Elephant Whisperers) ಬೆಸ್ಟ್ ಡಾಕ್ಯುಮೆಂಟ್ ಶಾರ್ಟ್ ಫಿಲಂ ಕೆಟಗರಿಯಲ್ಲಿ ಆಸ್ಕರ್ (Oscar) ಪ್ರಶಸ್ತಿ ಲಭಿಸಿದೆ. ಈ ಮೂಲಕ ಸಿನಿಮಾ ರಂಗದಲ್ಲಿ ಅತ್ಯುತ್ತಮ ಗೌರವಕ್ಕೆ ಈ ಕಿರುಚಿತ್ರ ಪಾತ್ರವಾಗಿದೆ.
ಎಲಿಫೆಂಟ್ ವಿಸ್ಪರರ್ಸ್ ಕಿರುಚಿತ್ರ ಕಳೆದ ವರ್ಷ ಡಿಸೆಂಬರ್‌ನಲ್ಲಿ ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾಯಿತು. ಮುದುಮಲೈ ರಾಷ್ಟ್ರೀಯ ಉದ್ಯಾನವನದಲ್ಲಿ ಈ ಸಿನಿಮಾವನ್ನು ನಿರ್ಮಿಸಲಾಗಿದೆ. ಸಿನಿಮಾ ಅನಾಥ ಆನೆ ಮರಿಯ ಕಥೆಯಾಗಿದೆ. ಸ್ಥಳೀಯ ದಂಪತಿ ಬೆಳ್ಳಿ ಹಾಗೂ ಬೊಮ್ಮನ್ ಆರೈಕೆಯಲ್ಲಿ ಆನೆ ಮರಿ ಬೆಳೆಯುವ, ಬಾಂಧವ್ಯವನ್ನು ಸೂಚಿಸುವ ಹಾಗೂ ನೈಸರ್ಗಿಕ ಸೌಂದರ್ಯವನ್ನು ಅನುಭವಿಸುವ ವಿಷಯಗಳು ಸಿನಿಮಾದಲ್ಲಿದೆ. ಇದನ್ನೂ ಓದಿ: Breaking- ನಾಟು ನಾಟು ಹಾಡಿಗೆ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿ : ಸಂಭ್ರಮದಲ್ಲಿ ಭಾರತ
ಟಿಕ್ ಟಾಕ್ ಮೂಲಕ ಖ್ಯಾತಿ ಗಳಿಸಿರುವ ಅಲ್ಲು ರಘು ಹೊಸದೊಂದು ಹೆಜ್ಜೆ ಇಟ್ಟಿದ್ದಾರೆ. ಟಿಕ್ ಟಾಕ್ ರೀಲ್ಸ್ ಮೂಲಕ ಸೋಶಿಯಲ್ ಮೀಡಿಯಾ ಸ್ಟಾರ್ ಆಗಿರುವ ಅಲ್ಲು ರಘು ನಿರ್ದೇಶನದತ್ತ ಮುಖ ಮಾಡಿದ್ದಾರೆ. ಅದರ ಚೊಚ್ಚಲ ಪ್ರಯತ್ನ ಎಂಬಂತೆ ಕಿರುಚಿತ್ರವೊಂದನ್ನು ನಿರ್ದೇಶಿಸಿದ್ದು, ‘ಸಾವಿರುಪಾಯಿಗೆ ಸ್ವರ್ಗ’ ಶೀರ್ಷಿಕೆಯ ಕಿರುಚಿತ್ರ ಬಿಡುಗಡೆಯಾಗಿದೆ. ಕಿರುಚಿತ್ರ ಬಿಡುಗಡೆಯ ಜೊತೆಗೆ ಒಂದಿಷ್ಟು ಮಾಹಿತಿಯನ್ನು ಚಿತ್ರತಂಡ ಹಂಚಿಕೊಂಡಿದೆ. ‘ಸಾವಿರುಪಾಯಿಗೆ ಸ್ವರ್ಗ’ ಚಿತ್ರಕ್ಕೆ ಅಲ್ಲು ರಘು ಕಥೆ ಬರೆದು ನಿರ್ದೇಶನ ಮಾಡಿದ್ದು, ಶಿವಪುತ್ರ ಯಶಾರಾದ, ವರುಣ್ ಆರಾಧ್ಯ, ರಶ್ಮಿತ ಗೌಡ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ಡಿಂಡಿಮ ಸಂಭಾಷಣೆ, ರಾಘವ್ ಹಾಗೂ ಅಭಿನಂದನ್ ಸಂಗೀತ ನಿರ್ದೇಶನ, ನವೀನ್ ಕುಮಾರ್ ಚಲ್ಲ ಛಾಯಾಗ್ರಾಹಣ, ಕೃಷ್ಣ ಸುಜನ್ ಸಂಕಲನ ಚಿತ್ರಕ್ಕಿದೆ.
‘ಅಲ್ಲು ರಘು ಮಾತನಾಡಿ ಇದು ನನ್ನ ನಿರ್ದೇಶನದ ಮೊದಲ ಕಿರುಚಿತ್ರ. ಈ ಚಿತ್ರಕ್ಕೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಹಲವಾರು ಜನ ಸಹಾಯ ಮಾಡಿದ್ದಾರೆ. ಅವರೆಲ್ಲರ ಪ್ರೋತ್ಸಾಹದಿಂದಲೇ ಈ ಕಿರುಚಿತ್ರ ಮಾಡಲು ಸಾಧ್ಯವಾಯ್ತು ಎಲ್ಲರಿಗೂ ನನ್ನ ಧನ್ಯವಾದಗಳು. ನನಗೆ ಚಿಕ್ಕ ವಯಸ್ಸಿನಿಂದಲೂ ಸಿನಿಮಾಗಳು ತುಂಬಾ ಇಷ್ಟ. ಉಪೇಂದ್ರ, ಕಾಶಿನಾಥ್ ನನಗೆ ಸ್ಪೂರ್ತಿ. ಒಂದು ಪ್ರಯತ್ನ ಮಾಡಿದ್ದೇನೆ. ಏನೇ ತಪ್ಪಿದ್ದರು ತಿಳಿಸಿ. ಎಲ್ಲರೂ ಈ ಕಿರುಚಿತ್ರ ನೋಡಿ ಅಭಿಪ್ರಾಯ ತಿಳಿಸಿ ಎಂದು ಕೇಳಿಕೊಂಡ್ರು. ಇದನ್ನೂ ಓದಿ: ದಿವ್ಯಾಳ ಆಸೆಯಂತೆ ದೊಡ್ಮನೆಗೆ ಎಂಟ್ರಿ ಕೊಟ್ಟ ಅರವಿಂದ್ ಕೆ.ಪಿ
ಚಿತ್ರದ ಸಂಕಲನಕಾರ ಕೃಷ್ಣ ಸುಜನ್ ಮಾತನಾಡಿ ನಾವೆಲ್ಲ ತುಂಬಾ ಹಳೆಯ ಸ್ನೇಹಿತರು. ಅಲ್ಲುಗೆ ಸಿನಿಮಾ ಮಾಡಬೇಕು ಎಂದು ಬಹಳ ಆಸೆ ಇತ್ತು. ಆದ್ರೆ ನಾನು ಫ್ಯೂಚರ್ ಫಿಲ್ಮಂ ಮಾಡೋದು ಅಷ್ಟು ಸುಲಭವಲ್ಲ. ಮೊದಲು ಕಿರುಚಿತ್ರ ಮಾಡು ಮತ್ತೊಂದಿಷ್ಟು ನಿರ್ದೇಶನದ ಬಗ್ಗೆ, ಕ್ಯಾಮೆರಾ ವರ್ಕ್ ಎಲ್ಲದರ ಬಗ್ಗೆ ತಿಳಿದುಕೋ ಆಮೇಲೆ ಸಿನಿಮಾ ಮಾಡುವಂತೆ ಎಂದು ಹೇಳಿದ್ದೆ. ಆ ಚರ್ಚೆ ನಂತರ ಆರಂಭವಾದ ಕಿರುಚಿತ್ರ ‘ಸಾವಿರುಪಾಯಿಗೆ ಸ್ವರ್ಗ’. ಫೈನಲ್ ಔಟ್ ಪುಟ್ ನೋಡಿ ಖುಷಿ ಆಯ್ತು. ಇಷ್ಟರಮಟ್ಟಿಗೆ ಬಂದಿದೆ ಅಂದ್ರೆ ನಮಗೆ ತುಂಬಾ ಖುಷಿ ಎನಿಸುತ್ತೆ ಎಂದು ಸಂತಸ ಹಂಚಿಕೊಂಡ್ರು.
ಒಳ್ಳೆ ಅವಕಾಶ ಕೊಟ್ಟಿದ್ದಕ್ಕೆ ಅಲ್ಲು ರಘುಗೆ ತುಂಬಾ ಧನ್ಯವಾದಗಳು, ನನಗೆ ಹೀರೋ ಆಗಬೇಕು ಎಂದು ಬಹಳ ಆಸೆ ಇತ್ತು ಈ ಚಿತ್ರದ ಮೂಲಕ ಮೊದಲ ಹೆಜ್ಜೆ ಇಟ್ಟಿದ್ದೇನೆ. ಇನ್ನು ಹೆಚ್ಚು ಸಿನಿಮಾಗಳನ್ನು ಮಾಡುತ್ತೇವೆ. ಎಲ್ಲರ ಸಪೋರ್ಟ್ ನಮ್ಮ ತಂಡದ ಮೇಲೆ ಹೀಗೆ ಇರಲಿ. ಅಲ್ಲು ರಘು ಅವರ ಬಳಿ ಹಲವಾರು ಕಥೆಗಳಿವೆ ಅವರಿಗೂ ನಿಮ್ಮ ಸಹಕಾರ ಹೀಗೆ ಇರಲಿ ಎಂದು ಕಿರುಚಿತ್ರದಲ್ಲಿ ನಟಿಸಿರುವ ವರುಣ್ ಆರಾಧ್ಯ ಸಂತಸ ಹಂಚಿಕೊಂಡ್ರು.
ನಟಿ ರಶ್ಮಿತ ಗೌಡ ಮಾತನಾಡಿ ಇದು ನನ್ನ ನಟನೆಯ ಮೊದಲ ಕಿರುಚಿತ್ರ. ನಾನು ಭರತನಾಟ್ಯ ಡಾನ್ಸರ್, ಆಯ್ಕೆ ಮಾಡಿಕೊಂಡಿದ್ದು ಮಾಡೆಲಿಂಗ್. ಇದರ ಜೊತೆಗೆ ನಟನೆ ಅಂದ್ರೆ ನನಗೆ ತುಂಬಾ ಇಷ್ಟ. ಈ ಚಿತ್ರದಲ್ಲಿ ನಟಿಸಿದ್ದು ತುಂಬಾ ಖುಷಿ ಇದೆ. ಅವಕಾಶ ನೀಡಿದ್ದಕ್ಕೆ ನಿರ್ದೇಶಕರಿಗೆ ತುಂಬಾ ಧನ್ಯವಾದಗಳು. ಎಲ್ಲರೂ ಕಿರುಚಿತ್ರ ನೋಡಿ ನಮ್ಮ ಪ್ರಯತ್ನವನ್ನು ಪ್ರೋತ್ಸಾಹಿಸಿ ಎಂದು ಕೇಳಿಕೊಂಡ್ರು.
Live Tv
[brid partner=56869869 player=32851 video=960834 autoplay=true]
ತಂತ್ರಜ್ಞಾನ ಮುಂದುವರೆದ ಹಾಗೆ ಜನರ ಆಲೋಚನೆ ಶಕ್ತಿಯು ಬೆಳೆಯುತ್ತಾ ಹೋಗುತ್ತಿದೆ. ಎರಡು, ಮೂರು ಗಂಟೆಗಳಲ್ಲಿ ಹೇಳ ಬೇಕಾದ ವಿಷಯವನ್ನು ಇಪ್ಪತ್ತು, ಮೂವತ್ತು ನಿಮಿಷಗಳ ಕಿರುಚಿತ್ರಗಳಲ್ಲಿ ಮನತಟ್ಟುವಂತೆ ಹೇಳುವ ನಿರ್ದೇಶಕರು ಈಗ ಹೆಚ್ಚಾಗುತ್ತಿದ್ದಾರೆ. ಅಂತಹ ಉತ್ತಮ ಕಿರುಚಿತ್ರಗಳು ಕನ್ನಡದಲ್ಲಿ ಹೆಚ್ಚು ಬರುತ್ತಿದೆ.
ಸತ್ಯ ಹೆಗಡೆ (Satya Hegde) ಸ್ಟುಡಿಯೋಸ್ ಅರ್ಪಿಸುವ, ಸೌಮ್ಯ ಚಂದ್ರಶೇಖರ್ ನಿರ್ಮಿಸಿರುವ ಹಾಗೂ ಪ್ರದೀಪ್ ಕೃಷ್ಣಮೂರ್ತಿ ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿರುವ ” ದಿ ಲಾಸ್ಟ್ ಕೇಸ್” ಕಿರುಚಿತ್ರದ ಪ್ರದರ್ಶನ ಹಾಗು ಪತ್ರಿಕಾಗೋಷ್ಠಿ ಇತ್ತೀಚೆಗೆ ನಡೆಯಿತು. ಎಲ್ಲಾ ಸಾಕ್ಷಿಗಿಂತ ಮನಸಾಕ್ಷಿಯೇ ದೊಡ್ಡದು ಎಂಬ ಅಂಶವನ್ನು ನಿರ್ದೇಶಕರು ಈ ಕಿರುಚಿತ್ರದಲ್ಲಿ ಮನಮುಟ್ಟುವಂತೆ ತೋರಿದ್ದಾರೆ. ಇದನ್ನೂ ಓದಿ:ಸೋಮಣ್ಣ – ಗುರೂಜಿ ಗೆಲುವು ನೋಡಿ, ಗಳಗಳನೆ ಅತ್ತ ಸಾನ್ಯ ಅಯ್ಯರ್
ನನಗೆ ಈ ಕಿರುಚಿತ್ರದ ಕಥೆ ಬಹಳ ಮೆಚ್ಚುಗೆಯಾಯಿತು. ಅಪರಾಧಿಯೊಬ್ಬ ನಾನೇ ಕೊಲೆಗಾರ ಎಂದು ಹೇಳಿ ಪೊಲೀಸರ ಬಳಿ ಶರಣಾಗುವ ವಿಷಯ ಬಹಳ ಮನಸ್ಸಿಗೆ ಹತ್ತಿರವಾಯಿತು. ಉತ್ತಮ ಕಿರುಚಿತ್ರ ನಿರ್ಮಿಸಿರುವ ಇಡೀ ತಂಡಕ್ಕೆ ಧನ್ಯವಾದ ಎಂದರು ಈ ಕಿರುಚಿತ್ರದಲ್ಲಿ ಅಭಿನಯಿಸಿರುವ ನಟ ರಮೇಶ್ ಪಂಡಿತ್. ಈ ಕಿರುಚಿತ್ರ ಚೆನ್ನಾಗಿ ಮೂಡಿಬರಲು ಸಹಕಾರ ನೀಡಿದ ತಮ್ಮ ತಂಡಕ್ಕೆ ನಿರ್ದೇಶಕ ಪ್ರದೀಪ್ ಕೃಷ್ಣಮೂರ್ತಿ ಧನ್ಯವಾದ ತಿಳಿಸಿದರು.
“ದಿ ಲಾಸ್ಟ್ ಕೇಸ್” ಕಿರುಚಿತ್ರ ಚೆನ್ನಾಗಿದೆ. ಈ ತಂಡದಿಂದ ಆದಷ್ಟು ಬೇಗ ಹಿರಿತೆರೆಯಲ್ಲಿ ನಾನು ಚಿತ್ರವನ್ನು ನಿರೀಕ್ಷಿಸುತ್ತೇನೆ ಎಂದರು ಸತ್ಯ ಹೆಗಡೆ. ಕಿರುಚಿತ್ರ ತಂಡದ ಸದಸ್ಯರು ತಮ್ಮ ಅನುಭವಗಳನ್ನು ಹಂಚಿಕೊಂಡರು. ಹಿರಿಯ ನಿರ್ದೇಶಕ ಚಿಂದೋಡಿ ಬಂಗಾರೇಶ್, ಸಾಹಿತಿ ಕವಿರಾಜ್ ಹಾಗೂ ಸಂಭಾಷಣೆಕಾರ ಮಾಸ್ತಿ ಮುಂತಾದ ಗಣ್ಯರು ಕಿರುಚಿತ್ರವನ್ನು ಮುಕ್ತಕಂಠದಿಂದ ಶ್ಲಾಘಿಸಿದರು. ವಾಸುದೇವ ಮೂರ್ತಿ ಕಥೆ ಬರೆದಿದ್ದು, ಗಿರೀಶ್ ಸಂಗೀತ ನೀಡಿದ್ದಾರೆ. ರಂಗನಾಥ್ ಛಾಯಾಗ್ರಹಣ ಹಾಗೂ ಉಜ್ವಲ್ ಸಂಕಲನ ಈ ಕಿರುಚಿತ್ರಕ್ಕಿದೆ. ರಮೇಶ್ ಪಂಡಿತ್, ಶಂಕರ್ ಅಶ್ವತ್ಥ್, ಪುನೀತ್ ಬಾಬು, ಪ್ರದೀಪ್ ಅಂಚೆ “ದಿ ಲಾಸ್ಟ್ ಕೇಸ್” ನಲ್ಲಿ ನಟಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
ಮಲಯಾಳಂ ಮತ್ತು ಕನ್ನಡದ ಖ್ಯಾತ ನಟಿ ಭಾವನಾ ಮೆನನ್ ಜೀವನದಲ್ಲಿ ನಡೆದ ಕಹಿ ಘಟನೆಯಿಂದ ಆಚೆ ಬರಲು ಅವರು ಇನ್ನೂ ಹೋರಾಟ ಮಾಡುತ್ತಿದ್ದಾರೆ. ಅವರ ಮೇಲಿನ ದೌರ್ಜನ್ಯ ಕೇಸ್ ಇನ್ನೂ ಕೋರ್ಟಿನಲ್ಲಿದೆ. ಈ ನಡುವೆ ಅವರು ಕಹಿ ಘಟನೆಯಿಂದ ಆಚೆ ಬರಲು ಸಿನಿಮಾಗಳನ್ನು ಒಪ್ಪಿದ್ದಾರೆ. ಸ್ಯ ಕನ್ನಡದಲ್ಲಿ ಒಂದು ಮತ್ತು ಮಲಯಾಳಂನಲ್ಲಿ ಮತ್ತೊಂದು ಚಿತ್ರ ಒಪ್ಪಿಕೊಂಡಿದ್ದಾರೆ. ಇದನ್ನೂ ಓದಿ : ಶಾರುಖ್ ಖಾನ್ ಮನೆ ‘ಮನ್ನತ್’ ನೇಮ್ ಪ್ಲೇಟ್ ನಾಪತ್ತೆ: ಇದರ ಹಿಂದಿದೆ ಭಾರೀ ರಹಸ್ಯ
ಕನ್ನಡದ ಪಿಂಕ್ ನೋಟು ಸಿನಿಮಾದ ಮುಹೂರ್ತ ಮೊನ್ನೆಯಷ್ಟೇ ನಡೆದಿದೆ. ಮಲಯಾಳಂನ ‘ದಿ ಸರ್ವೈವಲ್’ ಚಿತ್ರದ ಟ್ರೈಲರ್ ಇದೀಗ ಬಿಡುಗಡೆ ಆಗಿದೆ. ಇದೊಂದು ಕಿರುಚಿತ್ರವಾಗಿದ್ದು, ಮಹಿಳೆಯರಿಗೆ ಜಾಗೃತಿ ಮೂಡಿಸಲೆಂದು ನಿರ್ಮಾಣ ಮಾಡಿರುವ ಕಿರುಚಿತ್ರ ಎನ್ನಲಾಗುತ್ತಿದೆ. ಆದರೆ, ಈ ಚಿತ್ರದ ಬಗ್ಗೆ ಮಲಯಾಳಂನಲ್ಲಿ ಬೇರೆಯ ಮಾತೇ ಕೇಳಿ ಬರುತ್ತಿದೆ. ಇದನ್ನೂ ಓದಿ : ನಯನತಾರಾ ಮದುವೆ ದಿನಾಂಕ ಬದಲು, ರೆಸಾರ್ಟ್ ನಲ್ಲಿ ಸಪ್ತಪದಿ ತುಳಿಯಲಿದೆ ಜೋಡಿ
ಭಾವನಾ ಮೆನನ್ ಜೀವನದಲ್ಲಿ ನಡೆದ ಕಹಿ ಘಟನೆಯನ್ನೇ ಆಧರಿಸಿದ ಈ ಕಿರುಚಿತ್ರ ಮಾಡಲಾಗಿದೆ ಎನ್ನುವ ಚರ್ಚೆ ಮಲಯಾಳಂ ಸಿನಿಮಾ ರಂಗದಲ್ಲಿ ಶುರುವಾಗಿದೆ. ಇಂಥದ್ದೊಂದು ಚರ್ಚೆ ಆಗಲು ಕಾರಣ ಚಿತ್ರಕ್ಕಿಟ್ಟಿರುವ ಟೈಟಲ್. ‘ದಿ ಸರ್ವೈವಲ್’ ಶೀರ್ಷಿಕೆಯೇ ಅಂಥದ್ದೊಂದು ಅನುಮಾನವನ್ನು ಹುಟ್ಟು ಹಾಕಿದೆ. ಆದರೆ, ಅದಕ್ಕೂ ಈ ಸಿನಿಮಾಗೂ ಯಾವುದೇ ಸಂಬಂಧವಿಲ್ಲ ಎನ್ನುತ್ತಿವೆ ಮೂಲಗಳು. ಇದನ್ನೂ ಓದಿ : ರಜನಿಕಾಂತ್ ನನ್ನ ವೈರಿಯಲ್ಲ ಎಂದ ಕಮಲ್ ಹಾಸನ್
ಮಹಿಳೆಯ ಸ್ತನ ಕ್ಯಾನ್ಸರ್ ಜಾಗೃತಿಗಾಗಿ ಈ ಕಿರುಚಿತ್ರವನ್ನು ನಿರ್ಮಾಣ ಮಾಡಲಾಗಿದೆಯಂತೆ. ಸ್ತನ ಕ್ಯಾನ್ಸರ್ ಇರುವ ಮಹಿಳೆಯರ ಆರೋಗ್ಯದ ಕುರಿತಾಗಿ ಇಲ್ಲಿ ಬೆಳಕು ಚೆಲ್ಲುವ ಪ್ರಯತ್ನ ಮಾಡಲಾಗಿದೆಯಂತೆ. ಈ ಕಿರುಚಿತ್ರದಲ್ಲಿ ಭಾವನಾ ಮೆನನ್, ಬಾಕ್ಸರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಎಸ್.ಎನ್. ರಾಜೇಶ್ ಅವರ ಕಲ್ಪನೆಯಲ್ಲಿ ಈ ಚಿತ್ರ ಮೂಡಿ ಬಂದಿದೆ. ಈಗಾಗಲೇ ಟ್ರೈಲರ್ ರಿಲೀಸ್ ಆಗಿದ್ದು, ಭಾರೀ ಮೆಚ್ಚುಗೆ ಕೂಡ ವ್ಯಕ್ತವಾಗಿದೆ.
ಮಂಗಳೂರು: ಗ್ಲಾಮರ್ ವ್ಯೂವ್ ಪ್ರೊಡಕ್ಷನ್ಸ್ ಮತ್ತು ಐನ್ ಕ್ರಿಯೇಷನ್ಸ್ ಸಹಭಾಗಿತ್ವದಲ್ಲಿ ನಿರ್ಮಾಣಗೊಂಡಿರುವ ಬಹು ನಿರೀಕ್ಷಿತ ‘ಸತ್ತಕೊನೆ’ ಕಿರುಚಿತ್ರ ಮಂಗಳೂರು ಮಿರರ್ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಗೊಂಡಿದೆ.
ಫಾರ್ಚೂನ್ ಸೇಫ್ಟೀ ಗ್ಲಾಸ್ ಸಂಸ್ಥೆಯ ಸುರೇಶ್ ನಾಯ್ಕ್ ಚಿತ್ರವನ್ನು ಬಿಡುಗಡೆಗೊಳಿಸಿದರು. ಪಡುಬಿದ್ರೆಯಲ್ಲಿರುವ ಸಂಸ್ಥೆಯ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ‘ಸತ್ತಕೊನೆ’ ಕಿರುಚಿತ್ರದ ತಂಡವೂ ಉಪಸ್ಥಿತಿಯಿತ್ತು.
ಚಿತ್ರದ ಕುರಿತು ಅನಿಸಿಕೆ ವ್ಯಕ್ತಪಡಿಸಿದ ಸುರೇಶ್ ನಾಯ್ಕ್ ಕನ್ನಡದ ಬಗ್ಗೆ ಅಭಿಮಾನ ಮೂಡಿಸುವ ಕೆಲಸ ಈ ಕಿರುಚಿತ್ರದ ಮೂಲಕ ನಡೆದಿದೆ. ಹಲವು ಚಿತ್ರ ದಿಗ್ಗಜರ ಹಾಗೂ ನಿರ್ಮಾಪಕರ ಮೆಚ್ಚುಗೆಗೆ ಪಾತ್ರವಾಗಿರುವ ಈ ಕಿರುಚಿತ್ರ ಕ್ಲಬ್ಬಿ ಆನ್ ಲೈನ್ ಮಿನಿ ಮೂವಿ ಫೆಸ್ಟಿವಲ್, ಕೋಲ್ಹಾಪುರ್ ಫಿಲ್ಮ್ ಫೆಸ್ಟಿವಲ್ ಹಾಗೂ ಡಿ.ಡಿ. ಚಂದನದಲ್ಲಿ ಪ್ರದರ್ಶನ ಕಂಡಿದೆ. ಕರ್ನಾಟಕ ರಾಜ್ಯ ಸರ್ಕಾರದ ಕಿರುಚಿತ್ರ ಪ್ರಶಸ್ತಿಯಲ್ಲಿ ಭಾಗವಹಿಸಲು ಆಯ್ಕೆಯಾಗಿರುವುದು ಸಂತಸದ ವಿಚಾರ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು.
ಸಮಾರಂಭದಲ್ಲಿ ಕಿರುಚಿತ್ರದ ನಾಯಕಿ, ಒಂದು ಮೊಟ್ಟೆ ಕಥೆ ಖ್ಯಾತಿಯ ಶೈಲಶ್ರೀ ಮುಲ್ಕಿ, ಚಿತ್ರ ನಿರ್ದೇಶಕ ಯಶ್ ರಾಜ್, ಡಿ.ಒ.ಪಿ ಹಾಗೂ ಸಂಕಲನಕಾರ ಹರ್ಷಿತ್ ಬಲ್ಲಾಳ್, ಕಥೆ, ಸಂಭಾಷಣೆ, ಸಾಹಿತ್ಯ ಬರೆದಿರುವ ಸಂದೇಶ್ ಬಿಜೈ, ಸಮನಾ ಸುರೇಶ್, ಧನುಷ, ದಿಶಾ, ಉಡುಪಿ ಅಮಿನ್ ಬೇರಿಂಗ್ ಕಂಪನಿಯ ಲಕ್ಷ್ಮಣ್. ಬಿ. ಅಮಿನ್, ಗಣೇಶ್ ರೇಡಿಯೇಟರ್ಸ್ ಮಾಲಕ ಕರುಣಾಕರ್, ಪ್ರಿನ್ಸ್ ಹೇರ್ ಆರ್ಟ್ ನ ರಮೇಶ್ ಸುವರ್ಣ, ಅಶೋಕ್ ಬೈಲೂರು ಮೊದಲಾದವರು ಉಪಸ್ಥಿತರಿದ್ದರು.
– ಮದ್ವೆಯಾದ 3 ದಿನಕ್ಕೆ ಯುವತಿ ಸೂಸೈಡ್ – ಕಿರುಚಿತ್ರದಲ್ಲಿ ನಟಿಸಿದ್ದ ಯುವತಿ
ಭೋಪಾಲ್: ಮದುವೆ ಆದ ಮೂರು ದಿನಕ್ಕೆ ನವ ವಧು ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿರುವ ಘಟನೆ ಮಧ್ಯ ಪ್ರದೇಶದಲ್ಲಿ ನಡೆದಿದೆ.
ಶುಕ್ರವಾರ ಸೀತಾನಗರದಲ್ಲಿ ಈ ಘಟನೆ ನಡೆದಿದ್ದು, ರಮ್ಯಾಶ್ರೀ (20) ಆತ್ಮಹತ್ಯೆ ಮಾಡಿಕೊಂಡು ನವ ವಧು. ಮದುವೆಯ ಸಂಭ್ರಮದಲ್ಲಿದ್ದ ಕುಟುಂಬದಲ್ಲಿ ಈಗ ದುಃಖದ ವಾತಾವರಣ ನಿರ್ಮಾಣವಾಗಿದೆ.
ಸೀತಾನಗರದ ಮಹಾದಾಸು ಶ್ರೀನು ಅವರಿಗೆ ಇಬ್ಬರು ಪುತ್ರಿಯರು ಮತ್ತು ಒಬ್ಬ ಮಗನಿದ್ದಾನೆ. ಹಿರಿಯ ಮಗಳು ರಮ್ಯಾಶ್ರೀ (20) ಪದವಿ ವ್ಯಾಸಂಗ ಮಾಡುತ್ತಿದ್ದಳು. ಆದರೆ ಇಷ್ಟವಿಲ್ಲದಿದ್ದರು ಪಶ್ಚಿಮ ಗೋದಾವರಿ ಜಿಲ್ಲೆಯ ಲಕ್ಷ್ಮಣ ಈಶ್ವರಂ ಗ್ರಾಮದ ಸಂಬಂಧಿಯೊಂದಿಗೆ ಪೋಷಕರು ಬುಧವಾರ ವಿವಾಹ ಮಾಡಿಸಿದ್ದರು ಎಂದು ಗ್ರಾಮೀಣ ಪೊಲೀಸರು ತಿಳಿಸಿದ್ದಾರೆ.
ನವ ವಧು ರಮ್ಯಾಶ್ರೀಯನ್ನು ಇಂದು ಆಕೆಯ ಅತ್ತೆಯ ಮನೆಗೆ ಕಳುಹಿಸಬೇಕಿತ್ತು. ಆದರೆ ಶುಕ್ರವಾರ ರಮ್ಯಾಶ್ರೀ ವಿಷ ಸೇವಿಸಿದ್ದಾಳೆ. ಇದನ್ನು ನೋಡಿದ ಪೋಷಕರು ತಕ್ಷಣ ಅವಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ರಮ್ಯಾಶ್ರೀ ಮೃತಪಟ್ಟಿದ್ದಾಳೆ. ಮಾಹಿತಿ ತಿಳಿದು ತಹಶೀಲ್ದಾರ್ ಸಿ.ಎಚ್.ನಾಗಲಕ್ಷ್ಮಿ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಇತ್ತ ಗಂಡನ ಮನೆಗೆ ಕಳುಹಿಸುವ ಸಂತಸದಲ್ಲಿದ್ದ ಪೋಷಕರು ತಮ್ಮ ಮಗಳನ್ನು ಕಳೆದುಕೊಂಡು ಕಣ್ಣೀರು ಹಾಕುತ್ತಿದ್ದಾರೆ.
ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಮೃತ ರಮ್ಯಾಶ್ರೀಗೆ ಈ ಮದುವೆ ಇಷ್ಟವಿರಲಿಲ್ಲ. ಜೊತೆಗೆ ವ್ಯಾಸಂಗ ಮಾಡುವುದನ್ನು ನಿಲ್ಲಿಸಬೇಕಾಗುತ್ತದೆ ಎಂಬ ನೋವಿನಿಂದಲೂ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬ ಮಾಹಿತಿ ತಿಳಿದು ಬಂದಿದೆ. ಹೀಗಾಗಿ ಈ ಕುರಿತು ಸೂಕ್ತ ತನಿಖೆ ನಡೆಯುತ್ತಿದೆ. ಸದ್ಯಕ್ಕೆ ಮೃತಳ ಫೋನ್ ಮತ್ತು ಕಾಲ್ ವಿವರಗಳನ್ನು ಪರಿಶೀಲನೆ ಮಾಡಲಾಗುತ್ತಿದೆ ಎಂದು ಎಸ್‍ಐ ಶಿವಪ್ರಸಾದ್ ತಿಳಿಸಿದ್ದಾರೆ.
ಮೃತ ರಮ್ಯಾ ಇತ್ತೀಚೆಗೆ ಕಿರುಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದಾರೆ ಎಂದು ತಿಳಿದುಬಂದಿದೆ. ಆದರೆ ಕಿರುಚಿತ್ರ ರಿಲೀಸ್ ಆಗುವ ಮುನ್ನವೇ ರಮ್ಯಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಬೆಂಗಳೂರು ನಗರ ಸೇರಿದಂತೆ ಕೆಲವೊಂದು ಸಿಟಿಗಳಲ್ಲಿ ಸ್ವಚ್ಚತೆ ಅನ್ನೋದು ಮರಿಚಿಕೆಯಾಗಿದೆ. ಅದರಲ್ಲೂ ಕನ್ನಡದಲ್ಲಿ, ಇಂಗ್ಲಿಷ್ ನಲ್ಲಿ ಎಲ್ಲರಿಗೂ ಅರ್ಥವಾಗುವ ಭಾಷೆಯಲ್ಲಿ ಸ್ವಚ್ಛತೆ ಕಾಪಾಡಿ ಅಂತ ದೊಡ್ಡದಾಗಿ ಬರೆದ್ರೂ ಓದಿದವರಿಗೂ ಅದು ಕಾಣಿಸಲ್ಲ. ಕಾಪಾಡಬೇಕಾದವರೇ ಗಲೀಜು ಮಾಡಿ, ವಾತಾವರಣವನ್ನು ಕಲುಷಿತಗೊಳಿಸಿಬಿಡ್ತಾರೆ. ಈ ಬಗ್ಗೆ ಜಾಗೃತಿ ಮೂಡಿಸೋದು ತುಂಬಾ ಮುಖ್ಯವಾಗಿದೆ. ಆ ಜವಾಬ್ದಾರಿಯನ್ನು ಹೊತ್ತಿದ್ದಾರೆ ಶರತ್.
ಎಸ್, ಕಥೆ ಚಿತ್ರಕಥೆ ಬರೆದು ತಾವೇ ನಿರ್ದೇಶನ ಮಾಡಿ ನಟನೆಯಲ್ಲೂ ಮೊದಲ ಪ್ರಯೋಗದಲ್ಲೇ ಸೈ ಎನಿಸಿಕೊಂಡಿದ್ದಾರೆ ಶರತ್. G-Studios Media ಯೂಟ್ಯೂಬ್ ಚಾನೆಲ್ ನಲ್ಲಿ ‘ವೇಷ’ ಕಿರುಚಿತ್ರ ಇಂದು ರಿಲೀಸ್ ಆಗಿದೆ. ರಿಲೀಸ್ ಆದ ಕೆಲವೆ ಗಂಟೆಗಳಲ್ಲಿ ಸಖತ್ ವ್ಯೂವ್ ಪಡೆದಿದೆ.
ಈ ಕಿರುಚಿತ್ರದಲ್ಲಿರುವ ವಿಷಯ ತುಂಬಾ ಸಿಂಪಲ್. ನಮ್ಮ ಸುತ್ತಮುತ್ತಲಿನಲ್ಲಿರುವ ಸಮಸ್ಯೆಯನ್ನೇ ಕಥೆಯನ್ನಾಗಿ ಎಣೆದಿದ್ದಾರೆ. ನೋಡಿದವರಿಗೆ ವಾವ್ ಈ ಸಮಸ್ಯೆಯನ್ನ ಈ ರೀತಿಯೂ ಸಾಲ್ವ್ ಮಾಡಬಹುದಾ ಎಂಬ ಆಶ್ಚರ್ಯ ಉಂಟಾಗುವುದರಲ್ಲಿ ಅನುಮಾನವೇ ಇಲ್ಲ. ಕೇವಲ ಭಿಕ್ಷೆಗೆ ಮತ್ತೊಂದಕ್ಕೆ ಮಾತ್ರ ಸೀಮಿತರಾಗಿರುವ, ಸಮಾಜದಲ್ಲಿ ಎಲ್ಲರಿಂದ ದೂರ ನಿಂತಿರುವ ಮಂಗಳ ಮುಖಿಯರಿಂದ ಇಂಥ ಕೆಲಸವೂ ಸಾಧ್ಯ ಎಂಬುದನ್ನು ಈ ಕಿರು ಚಿತ್ರದಲ್ಲಿ ತೋರಿಸಿಕೊಟ್ಟಿದ್ದಾರೆ. ಅವರು ಹಾಕುವ ಒಂದೇ ಶಾಪಕ್ಕೆ ಹೆದರಿ ಹಣ ಕೊಡುವವರು ಅವರ ಮಾತಿಗೆ ಹೇಗೆ ಸ್ವಚ್ಛತೆಗೆ ಇಳಿಯುತ್ತಾರೆ ಎಂಬುದನ್ನು ಶರತ್ ಪ್ರೂವ್ ಮಾಡಿದ್ದಾರೆ. ಆ ಅದ್ಭುತ ನಿರೂಪಣೆಯನ್ನ ಕಿರುಚಿತ್ರದಲ್ಲೇ ನೋಡಿದರೆ ಖುಷಿ ಕೊಡುತ್ತೆ.
ನಟನಾಗಿ ಅನುಭವ ಇರುವ ಶರತ್, ಕಿರುಚಿತ್ರದ ಮೂಲಕ ನಿರ್ದೇಶಕನ ಪಟ್ಟಕ್ಕೇರಿದ್ದಾರೆ. ಮೊದಲ ಕಿರುಚಿತ್ರದಲ್ಲೇ ಒಬ್ಬ ಒಳ್ಳೆ ಡೈರೆಕ್ಟರ್ ಸಾಮಾಥ್ರ್ಯವಿರುವುದನ್ನು ತೋರಿಸಿಕೊಟ್ಟಿದ್ದಾರೆ ಎಂದರೆ ಅತಿಶಯೋಕ್ತಿ ಎನಿಸಲ್ಲ. ಸಮಾಜದಲ್ಲಿ ಇರುವ ಕೆಲವೊಂದು ಸಮಸ್ಯೆಗಳನ್ನು ಇಟ್ಟುಕೊಂಡು ಜನರಿಗೆ ಇಷ್ಟವಾಗುವ ರೀತಿಯಲ್ಲಿ ನಿರೂಪಣೆ ಮಾಡಿದ್ದಾರೆ. 10 ನಿಮಿಷ 40 ಸೆಕೆಂಡ್ ಈ ಕಿರುಚಿತ್ರ ಇದೆ. ಶರತ್ ಮುಖ್ಯ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಗೋಪಿ ಸ್ನೇಹಿತ ಪಾತ್ರದಲ್ಲಿ ಅಭಿನಯಿಸಿದ್ದು, ಸರಳ ಸೇರಿದಂತೆ ಅನೇಕ ಮಂಗಳಮುಖಿಯರು ಪಾತ್ರ ನಿರ್ವಹಿಸಿದ್ದಾರೆ. ಸಿನಿಮಾದಲ್ಲಿರುವಂತೆ ಕ್ವಾಲಿಟಿ ಇದ್ದು ಎಲ್ಲೂ ಕಾಂಪ್ರೊಮೈಸ್ ಆಗಿಲ್ಲ ಅಂತಾರೆ ನಿರ್ದೇಶಕ ಕಂ ನಟ ಶರತ್.
ಒಟ್ಟಾರೆ ಸಮಸಾಜಕ್ಕೆ ಬೇಕಾದ ಒಂದೊಳ್ಳೆ ಮೆಸೇಜ್ ಈ ಕಿರುಚಿತ್ರದಲ್ಲಿದ್ದು, ಆ ಸಣ್ಣ ತಪ್ಪನ್ನ ಮಾಡುವಾಗ ಮನದ ಮೂಲೆಯಲ್ಲಿ ಅರಿವು ಮೂಡಿಸುವಂತ ಕೆಲಸ ಮಾಡುತ್ತೆ ‘ವೇಷ’ ಸಿನಿಮಾ. ಜೊತೆಗೆ ಕೊನೆಯಲ್ಲಿ ಬರುವ ದೇಶಕ್ಕಾಗಿ ಯಾವ ‘ವೇಷ’ ಬೇಕಾದ್ರೂ ಹಾಕ್ತಿನೋ ಅನ್ನೋ ಮಾತು ಎಲ್ಲರನ್ನು ಎಚ್ಚರಗೊಳಿಸುವಂತೆ ಮಾಡಿದೆ.