Tag: ಕಿರ್ಗಿಸ್ತಾನ್

  • ಕಿರ್ಗಿಸ್ತಾನ್‌ನಲ್ಲಿ ಭಾರತ, ಪಾಕಿಸ್ತಾನ ವಿದ್ಯಾರ್ಥಿಗಳ ಟಾರ್ಗೆಟ್‌ ಮಾಡಿ ದಾಳಿ

    ಕಿರ್ಗಿಸ್ತಾನ್‌ನಲ್ಲಿ ಭಾರತ, ಪಾಕಿಸ್ತಾನ ವಿದ್ಯಾರ್ಥಿಗಳ ಟಾರ್ಗೆಟ್‌ ಮಾಡಿ ದಾಳಿ

    – ವಿದ್ಯಾರ್ಥಿಗಳು ಮನೆಯೊಳಗೆ ಇರುವಂತೆ ಭಾರತ ಸಲಹೆ

    ಬಿಷ್ಕೆಕ್: ಕಿರ್ಗಿಸ್ತಾನ್‌ನಲ್ಲಿರುವ (Kyrgyzstan) ವಿದೇಶಿ ವಿದ್ಯಾರ್ಥಿಗಳ ಮೇಲೆ ದಾಳಿ ನಡೆಯುತ್ತಿದೆ. ಅಲ್ಲಿರುವ ಭಾರತೀಯ ನಾಗರಿಕರಿಗೆ ಮನೆಯೊಳಗೆ ಇರುವಂತೆ ಭಾರತ ಒತ್ತಾಯಿಸಿದೆ.

    ಹಲವಾರು ಪಾಕಿಸ್ತಾನಿ ವಿದ್ಯಾರ್ಥಿಗಳು ತಮ್ಮ ಹಾಸ್ಟೆಲ್‌ನಲ್ಲಿ ಗುಂಪು ಹಿಂಸಾಚಾರದಲ್ಲಿ ಗಾಯಗೊಂಡ ನಂತರ ಈ ಸಲಹೆಯನ್ನು ನೀಡಲಾಗಿದೆ. ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರು ರಾಯಭಾರ ಕಚೇರಿಯೊಂದಿಗೆ ನಿಯಮಿತವಾಗಿ ಸಂಪರ್ಕದಲ್ಲಿರಲು ವಿದ್ಯಾರ್ಥಿಗಳಿಗೆ ಸಲಹೆ ನೀಡಿದ್ದಾರೆ. ಇದನ್ನೂ ಓದಿ: ಫಸ್ಟ್‌ ಟೈಂ ಸೌದಿಯಲ್ಲಿ ನಡೆಯಿತು ಸ್ವಿಮ್‌ ಸೂಟ್‌ ಫ್ಯಾಶನ್‌ ಶೋ!

    ‘ನಾವು ನಮ್ಮ ವಿದ್ಯಾರ್ಥಿಗಳೊಂದಿಗೆ (Indian Students) ಸಂಪರ್ಕದಲ್ಲಿದ್ದೇವೆ. ಪ್ರಸ್ತುತ ಪರಿಸ್ಥಿತಿ ಶಾಂತವಾಗಿದೆ. ಆದರೆ ವಿದ್ಯಾರ್ಥಿಗಳು ಸದ್ಯಕ್ಕೆ ಮನೆಯೊಳಗೆ ಇರಲು ಮತ್ತು ಯಾವುದೇ ಸಮಸ್ಯೆಯ ಸಂದರ್ಭದಲ್ಲಿ ರಾಯಭಾರ ಕಚೇರಿಯೊಂದಿಗೆ ಸಂಪರ್ಕದಲ್ಲಿರಲು ಸಲಹೆ ನೀಡಲಾಗಿದೆ. ಸಹಾಯವಾಣಿ ಸಂಖ್ಯೆ 0555710041 ಸಂಪರ್ಕಿಸಬಹುದು’ ಎಂದು ಭಾರತೀಯ ರಾಯಭಾರ ಕಚೇರಿ ತಿಳಿಸಿದೆ.

    ಬಿಷ್ಕೆಕ್‌ನಲ್ಲಿ ಭಾರತೀಯ ವಿದ್ಯಾರ್ಥಿಗಳ ಯೋಗಕ್ಷೇಮವನ್ನು ಮೇಲ್ವಿಚಾರಣೆ ಮಾಡಲಾಗುತ್ತಿದೆ. ಈಗ ಪರಿಸ್ಥಿತಿ ಶಾಂತವಾಗಿದೆ ಎಂದು ವರದಿಯಾಗಿದೆ. ರಾಯಭಾರ ಕಚೇರಿಯೊಂದಿಗೆ ನಿಯಮಿತವಾಗಿ ಸಂಪರ್ಕದಲ್ಲಿರಲು ವಿದ್ಯಾರ್ಥಿಗಳಿಗೆ ಸಲಹೆ ನೀಡಿ ಎಂದು ಜೈಶಂಕರ್‌ ತಿಳಿಸಿದ್ದಾರೆ. ಇದನ್ನೂ ಓದಿ: ಸ್ಟೆಪ್‌ಲ್ಯಾಡರ್ ಎಡವಟ್ಟು- ವಿಮಾನದಿಂದ ಇಳಿಯಲು ಯತ್ನಿಸಿ ಕೆಳಗೆ ಬಿದ್ದ ಸಿಬ್ಬಂದಿ ವೀಡಿಯೋ ವೈರಲ್‌

    ದಾಳಿಯಲ್ಲಿ ಮೂವರು ಪಾಕಿಸ್ತಾನಿ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಕೆಲವು ಪೋಸ್ಟ್‌ಗಳು ಹರಿದಾಡುತ್ತಿವೆ. ಆದರೆ ಅಧಿಕೃತವಾಗಿ ಯಾವುದೇ ಸಾವಿನ ವರದಿ ಇನ್ನೂ ಬಂದಿಲ್ಲ ಎಂದು ಸರ್ಕಾರ ಹೇಳಿದೆ.

    ಮೇ 13 ರಂದು ಕಿರ್ಗಿಜ್ ಮತ್ತು ಈಜಿಪ್ಟ್ ವಿದ್ಯಾರ್ಥಿಗಳ ನಡುವಿನ ಹೊಡೆದಾಟದ ವೀಡಿಯೋಗಳು ಶುಕ್ರವಾರ ಆನ್‌ಲೈನ್‌ನಲ್ಲಿ ವೈರಲ್ ಆದ ನಂತರ ಪರಿಸ್ಥಿತಿ ಮತ್ತಷ್ಟು ಉಲ್ಬಣಗೊಂಡಿದೆ ಎಂದು ಪಾಕಿಸ್ತಾನ ರಾಯಭಾರ ಕಚೇರಿ ತಿಳಿಸಿದೆ.

    ಭಾರತ, ಪಾಕಿಸ್ತಾನ ಮತ್ತು ಬಾಂಗ್ಲಾದೇಶದ ವಿದ್ಯಾರ್ಥಿಗಳು ವಾಸಿಸುವ ಬಿಷ್ಕೆಕ್‌ನಲ್ಲಿರುವ ವೈದ್ಯಕೀಯ ವಿಶ್ವವಿದ್ಯಾಲಯಗಳ ಹಾಸ್ಟೆಲ್‌ಗಳನ್ನು ಗುಂಪು ಗುರಿಯಾಗಿಸಿತ್ತು. ದಾಳಿಯಲ್ಲಿ ಯಾವುದೇ ಭಾರತೀಯ ವಿದ್ಯಾರ್ಥಿಗಳು ಗಾಯಗೊಂಡಿಲ್ಲ.

  • ಅದ್ಧೂರಿ ಬರ್ತ್‌ಡೇ ಸೆಲಬ್ರೇಷನ್‌ಗೆ ನೋ ಅಂದ ಅಪ್ಪ, ಅಮ್ಮ – 21ರ ಯುವಕ ಆತ್ಮಹತ್ಯೆ

    ಅದ್ಧೂರಿ ಬರ್ತ್‌ಡೇ ಸೆಲಬ್ರೇಷನ್‌ಗೆ ನೋ ಅಂದ ಅಪ್ಪ, ಅಮ್ಮ – 21ರ ಯುವಕ ಆತ್ಮಹತ್ಯೆ

    ಚೆನ್ನೈ: ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಣೆ ಮಾಡಲು ಅನುಮತಿ ಕೊಡಲಿಲ್ಲವೆಂದು 21 ವರ್ಷದ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನ ವಿರುದುನಗರದಲ್ಲಿ ನಡೆದಿದೆ.

    ಕಿರ್ಗಿಸ್ತಾನ್‌ನಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿರುವ ಲೋಕೇಶ್ (21) ರಜೆಯನ್ನು ಕಳೆಯಲು ತಮಿಳುನಾಡಿಗೆ ಬಂದಿದ್ದಾನೆ. ಈ ವೇಳೆ ಪೋಷಕರು ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಣೆ ಮಾಡಲು ಅವಕಾಶ ಕೊಡಲಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದನ್ನೂ ಓದಿ: ಬಾಯಿ ಮುಚ್ಚಿಕೊಂಡಿದ್ರೆ ಸರಿ, ನಿನ್ನ ಕಥೆ ಎಲ್ಲ ಹೇಳಬೇಕಾಗುತ್ತೆ: ಸುಧಾಕರ್‌ಗೆ ಸಿದ್ದರಾಮಯ್ಯ ವಾರ್ನಿಂಗ್

    ಕಿರ್ಗಿಸ್ತಾನ್‌ನಲ್ಲಿ 3ನೇ ವರ್ಷದ ವೈದ್ಯಕೀಯ ವ್ಯಾಸಂಗ ಮಾಡುತ್ತಿರುವ ಲೋಕೇಶ್ ರಜೆಯ ಮೇಲೆ ತಮಿಳುನಾಡಿಗೆ ಬಂದಿದ್ದನು. ಈ ವೇಳೆ ಅಪ್ಪ-ಅಮ್ಮನೊಂದಿಗೆ ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸಲು ಕೇಳಿದ್ದಾನೆ. ಅವರು ಅನುಮತಿ ನಿರಾಕರಿಸಿದ್ದರಿಂದ ನಿದ್ರೆ ಮಾತ್ರೆ ಸೇವಿಸಿದ್ದಾನೆ. ನಂತರ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ. ಕೆಲ ಸಮಯದ ಬಳಿಕ ಮಗನನ್ನು ನೋಡಿ ಬಳಿಕ ಅವನನ್ನು ವಿರುದುನಗರದ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಳಿಸಿದ್ದಾರೆ. ಹೆಚ್ಚುವರಿ ಚಿಕಿತ್ಸೆಗಾಗಿ ಮಧುರೈನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಿನ್ನೆ ರಾತ್ರಿ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾನೆ ಎಂದು ಮಧುರೈ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಲಿಪ್‍ಸ್ಟಿಕ್‍ನಿಂದ ವಾಲ್ ಮೇಲೆ ಡೆತ್ ನೋಟ್ – ಗೃಹಿಣಿ ಆತ್ಮಹತ್ಯೆಗೆ ಕಿರುಕುಳವೇ ಕಾರಣವಾಯ್ತಾ? 

    ಲೋಕೇಶ್ ತಂದೆ ವಿರುದುನಗರದಲ್ಲಿ ಆಸ್ಪತ್ರೆ ಹಾಗೂ ಔಷಧಾಲಯ ಹೊಂದಿದ್ದಾರೆ ಎಂದು ವರದಿಯಾಗಿದೆ.

    Live Tv
    [brid partner=56869869 player=32851 video=960834 autoplay=true]